Tag: ಎಂ.ಎಂ.ಕೀರವಾಣಿ

  • ರಂಗಸಮುದ್ರ ಚಿತ್ರಕ್ಕೆ ಎಂ.ಎಂ. ಕೀರವಾಣಿ ಸಾಥ್

    ರಂಗಸಮುದ್ರ ಚಿತ್ರಕ್ಕೆ ಎಂ.ಎಂ. ಕೀರವಾಣಿ ಸಾಥ್

    ಹೊಸ ವರ್ಷದ ಮೊದಲ ಮಾಸದಂದು ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ರೆಟ್ರೋ ಮೂವಿ ರಂಗಸಮುದ್ರ  (Rangasamudra) ಬಿಡುಗಡೆಗೆ ಸಿದ್ದವಾಗಿದೆ. ಈಗಾಗಲೆ ಚಿತ್ರದ ಮೂರು ಹಾಡುಗಳು ಜಂಕಾರ್ ಮ್ಯೂಸಿಕ್ ಯುಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಗೊಂಡು ಸಂಗೀತ ಪ್ರಿಯರ ಮನಸ್ಸು ಗೆದ್ದಿವೆ. ಈಗ ಭಾರತದ ಮುಂಚೂಣಿಯಲ್ಲಿರುವ ಮ್ಯೂಸಿಕ್ ಡೈರೆಕ್ಟರ್, ಪದ್ಮಶ್ರೀ, ರಾಷ್ಟ್ರ ಪ್ರಶಸ್ತಿ ಹಾಗೂ ವಿಶ್ವದ ಅತ್ಯಂತ ಪ್ರಮುಖ ಪ್ರಶಸ್ತಿಯಾದ ಆಸ್ಕರ್ ವಿಜೇತ ಬಾಹುಬಲಿ ಹಾಗೂ ಆರ್.ಆರ್.ಆರ್ ಚಿತ್ರಗಳ ಸಂಗೀತ ಮಾಂತ್ರಿಕ ನಿರ್ದೇಶಕ ಎಮ್.ಎಮ್ ಕೀರವಾಣಿ (MM Keeravani) ಅವರಿಂದ ಚಿತ್ರದಲ್ಲಿ ತಿರುವು ಪಡೆಯುವ ಅದ್ಭುತ ಗೀತೆಯೊಂದನ್ನು ಹಾಡಿಸಿ ಗೀತೆಯನ್ನು ಬಿಡುಗಡೆಗೆಗೊಳಿಸಿದೆ.

    ಹೌದು ಭಾರತದ ಎಮ್.ಎಮ್ ಕೀರವಾಣಿಯವರು ಹಲವು ದಶಕಗಳ‌ ನಂತರ “ರಂಗಸಮುದ್ರ” ಚಿತ್ರದ ಮೂಲಕ ಕನ್ನಡಕ್ಕೆ ಮರಳಿ ಗೀತೆಯೊಂದಕ್ಕೆ ದನಿಯಾಗಿರುವುದು  ಚಿತ್ರತಂಡಕ್ಕೆ ಆತ್ಮವಿಶ್ವಾಸ ಹೆಚ್ಚಿಸಿದಂತಾಗಿದೆ.  ಅರ್ಥಾತ್ ಬಾಹುಬಲಿ ಸಂಗೀತ ಮಾಂತ್ರಿಕನ ಬಲ ಸಿಕ್ಕಾಂತಾಗಿದೆ ಎನ್ನುವುದು ಈಗಾಗಲೆ ಗಾಂಧಿನಗರದಲ್ಲಿ ಪ್ರಸ್ತುತ ಪರಸ್ಪರ ಪಿಸುಮಾತಗುತ್ತಿರುವ ಸುದ್ದಿ. ರಂಗಸಮುದ್ರ ಚಿತ್ರದ ನಿರ್ದೇಶಕ ರಾಜ್ ಕುಮಾರ್ ಅಸ್ಕಿ , ಸಾಹಿತಿ ವಾಗೀಶ್ ಚನ್ನಗಿರಿ ಹಾಗೂ ಸಂಗೀತ ನಿರ್ದೇಶಕ ದೇಸಿ ಮೋಹನ್ ರವರು ಈ ಒಂದು ಗೀತೆಗೆ ಎಮ್ ಎಮ್ ಕೀರಾವಣಿಯವರೆ ದನಿಯಾಗಬೇಕು ಎಂದು ಚಿತ್ರದ ನಿರ್ಮಾಪಕ ಹೊಯ್ಸಳ ಕೊಣನೂರು ಅವರ ಬಳಿ  ಹೇಳಿಕೊಂಡಿದ್ದರಂತೆ. ಚಿತ್ರತಂಡದ ಆಸೆಯಂತೆ ನಿರ್ಮಾಪಕರು ಕೀರವಾಣಿ ಅವರನ್ನು ಸಂಪರ್ಕಿಸಿದಾಗ ಪ್ರೀತಿಯಿಂದ ಹೈದಾರಬಾದ್ ಗೆ ಆಹ್ವಾನಿಸಿದರು ಎಂದಿದ್ದಾರೆ.

    ಸಾಂಗ್ ಅನ್ನು ಒಮ್ಮೆ ಕೇಳಿದ ನಂತರ, ನಾನು ಸೀನಿಯರ್ ಎಂಬುದನ್ನು ಬದಿಗಿಟ್ಟು , ಚಿತ್ರದ ಕಥೆ ಹೇಳಿ ಎಂದು ನಗುತ್ತ ಡೈರೆಕ್ಟರ್ ಗೆ ಹೇಳಿದ್ದಾರೆ ಕಥೆ ಕೇಳಿದ 5 ನಿಮಿಷಕ್ಕೆ ಹಾಡಲು ಒಪ್ಪಿದರು ಎನ್ನುತ್ತಾರೆ ನಿರ್ದೇಶಕ ರಾಜಕುಮಾರ್ ಅಸ್ಕಿ. ಇನ್ನು ಹಾಡಲು ಸಿದ್ದರಾಗುವಾಗ ಗೀತೆಯನ್ನು ಕನ್ನಡದಲ್ಲೆ ಬರೆದುಕೊಂಡು, ಬಹಳ‌ ಸುಮಧುರ ವಾಗಿ ಹಾಡಿ ಕನ್ನಡ ಭಾಷೆ ಮೇಲಿರುವ ಅಭಿಮಾನವನ್ನು ಸಾಬೀತುಪಡಿಸಿರುವುದು ಹೆಮ್ಮೆಯ ಸಂಗತಿ. ಸರಿಸುಮಾರು ಅರ್ಧ ದಿನ ಚಿತ್ರತಂಡದೊಂದಿಗೆ ಮಾತನಾಡುತ್ತ ಕುಳಿತ ಎಮ್ ಎಮ್ ಕೀರವಾಣಿಯವರು, ಅವರ ಮತ್ತು ಕನ್ನಡ ನಂಟು ಹಾಗೂ ಬೆಂಗಳೂರಿನಲ್ಲಿ ಒಂದು ಚಿಕ್ಕ ರೂಮಿನಲ್ಲಿ ವಾಸ ಮಾಡುತ್ತಿದ್ದದ್ದು, ಚಾಮುಂಡೇಶ್ವರಿ ಸ್ಟುಡಿಯೋ ಇಂದ ತನ್ನ ಸಿನಿಪಯಣ ಶುರುವಾಗಿದ್ದು. ನನ್ನ ಆಪ್ತ ಸ್ನೇಹಿತ ದೊಡ್ಡಣ್ಣ ಎನ್ನುತ್ತಾ ಹಲವಾರು ವಿಷಯಗಳನ್ನು ಹಂಚಿಕೊಂಡಿದ್ದಾರೆ.

    ಚಿತ್ರದ ಶೂಟಿಂಗ್ ಬಗ್ಗೆ ಮಾತನಾಡುತ್ತಾ ಅಪ್ಪುರವರು ನಟಿಸಬೇಕಿದ್ದ ಸಿನಿಮಾ ರಂಗಸಮುದ್ರ ಎಂದು ತಿಳಿದಾಗ ಭಾವುಕರಾಗಿ, ಅಪ್ಪು ಒಬ್ಬ ಅಜಾತಶತ್ರು ಈಗ ನಕ್ಷತ್ರವಾಗಿ ಮಿನುಗುತ್ತಿದ್ದಾರೆ, ಒಬ್ಬರು ಸತ್ತರೆ ಶತ್ರುಗು ಕೂಡ ಕಣ್ಣಿರು ಬರಬೇಕು ಅದರಂತೆಯೆ ಈ ಸಾಂಗ್ ನೋಡಿದ ಮೇಲೆ ಎಂತಹ ಕಲ್ಲು ಮನಸ್ಸು ಕೂಡ ಕರಗುತ್ತೆ ಎಂದಿದ್ದಾರೆ. ಚಿತ್ರವನ್ನು ನಿರ್ಮಾಣ ಮಾಡಿದ ಹೊಯ್ಸಳರವರ ಹೆಗಲ ಮೇಲೆ ಕೈ ಹಾಕಿ ಆಭಯ ನೀಡುವುದರ ಜೊತೆಗೆ, ಕಥೆ ರಚಿಸಿದ ಡೈರೆಕ್ಟರ್ ರಾಜ್ ಕುಮಾರ್ ಅಸ್ಕಿ ಮತ್ತು ಅತ್ಯುತ್ತಮ ಸಾಹಿತ್ಯ ನೀಡಿರುವ ವಾಗೀಶ್ ಚನ್ನಗಿರಿ ಅವರ ಬೆನ್ನು ತಟ್ಟಿ ರಾಜಮೌಳಿಯೊಂದಿಗೆ ನಿಮ್ಮ ಸಿನಿಮಾ ನೋಡುತ್ತೇನೆ ಎಂದು, ಅತಿಥಿಗಳಿಗೆ ಅವರೇ ಎಲ್ಲಾ ರೀತಿಯಲ್ಲೂ ಸತ್ಕರಿಸಿ ಬೀಳ್ಕೊಟ್ಟರು ಎನ್ನುತ್ತಾರೆ ಚಿತ್ರತಂಡದವರು…

    ರಂಗಸಮುದ್ರ ರಾಘವೇಂದ್ರ ರಾಜ್ ಕುಮಾರ್, ರಂಗಾಯಣ ರಘು, ಸಂಪತ್ ರಾಜ್,ದಿವಂಗತ ಮೋಹನ್ ಜುನೇಜಾ, ಮೂಗು ಸುರೇಶ್, ಗುರುರಾಜ್ ಹೊಸಕೋಟೆ,,ಉಗ್ರಂ ಮಂಜು,, ಕಾರ್ತಿಕ್ ರಾವ್, ದಿವ್ಯ ಗೌಡ,,ಮಹೇಂದ್ರ, ಸ್ಕಂದ ಅವರ ತಾರಾ ಬಳಗವನ್ನು ಹೊಂದಿದೆ. ಚಿತ್ರದಲ್ಲಿ‌ರುವ 4 ಗೀತೆಗಳಿಗೆ ಖ್ಯಾತ ಗಾಯಕರಾದ ಕೈಲಾಶ್ ಖೇರ್,  ವಿಜಯ್ ಪ್ರಕಾಶ್, ಸಂಜಿತ್ ಹೆಗ್ಡೆ,ದೇಸಿ ಮೋಹನ್ ಅವರು ದನಿಯಾಗಿದ್ದರೆ, ಚಿತ್ರದಲ್ಲಿ ಎರಡು ಬಿಟ್ ಗಳಿಗೆ ನವೀನ್ ಸಜ್ಜು ರವರು ದನಿಯಾಗಿದ್ದಾರೆ.

  • ‘ಜಂಟಲ್ ಮ್ಯಾನ್ 2’ ಚಿತ್ರಕ್ಕೆ  ಚೆನ್ನೈನಲ್ಲಿ ಅದ್ದೂರಿ ಮುಹೂರ್ತ

    ‘ಜಂಟಲ್ ಮ್ಯಾನ್ 2’ ಚಿತ್ರಕ್ಕೆ ಚೆನ್ನೈನಲ್ಲಿ ಅದ್ದೂರಿ ಮುಹೂರ್ತ

    ಮಿಳಿನಲ್ಲಿ ‘ಜಂಟಲ್ ಮ್ಯಾನ್’, ‘ಕಾದಲನ್’, ‘ಕಾದಲ್ ದೇಶಂ’ ಸೇರಿದಂತೆ ದೊಡ್ಡ ಬಜೆಟ್‌ ನ ಮತ್ತು ಯಶಸ್ವಿ ಚಿತ್ರಗಳನ್ನು ನಿರ್ಮಿಸಿದ್ದ ಹಿರಿಯ ನಿರ್ಮಾಪಕ ಕೆ.ಟಿ. ಕುಂಜುಮೋನ್ (K.T. Kunjumon) ನಿರ್ಮಿಸುತ್ತಿರುವ ‘ಜಂಟಲ್ ಮ್ಯಾನ್ 2’ (Gentleman 2) ಚಿತ್ರವು ಶನಿವಾರ, ಚೆನ್ನೈನಲ್ಲಿ ಅದ್ದೂರಿಯಾಗಿ ಪ್ರಾರಂಭವಾಗಿದೆ. ಚೆನ್ನೈನ ರಾಜ ಮುತ್ತಯ್ಯ ಸಭಾಂಗಣದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ನಿರ್ದೇಶಕ ಗೋಕುಲ್ ಕೃಷ್ಣ ಅವರಿಗೆ ನಿರ್ಮಾಪಕ ಕುಂಜುಮೋನ್, ಚಿತ್ರದ ಸ್ಕ್ರಿಪ್ಟ್ ಹಸ್ತಾಂತರಿಸುವ ಮೂಲಕ ಈ ಪ್ಯಾನ್ ಇಂಡಿಯಾ ಚಿತ್ರಕ್ಕೆ ಚಾಲನೆ ಸಿಕ್ಕಿದೆ.

    RRR ಚಿತ್ರದ ‘ನಾಟ್ಟು ನಾಟ್ಟು’ ಗೀತೆಗೆ ಆಸ್ಕರ್ ಪ್ರಶಸ್ತಿ ಪಡೆದ ಪದ್ಮಶ್ರೀ ಎಂ.ಎಂ. ಕೀರವಾಣಿ ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದು, ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಈ ಸಮಾರಂಭದಲ್ಲಿ ಚಿತ್ರಸಾಹಿತಿ ವೈರಮುತ್ತು ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

    ಈ ಸಂದರ್ಭದಲ್ಲಿ ಮಾತನಾಡಿದ ನಿರ್ಮಾಪಕ ಕೆ.ಟಿ. ಕುಂಜುಮೋನ್, ‘ಪ್ರತಿಯೊಬ್ಬರೂ ತಮ್ಮ  ಜೀವನದಲ್ಲಿ ಜೆಂಟಲ್ ಮ್ಯಾನ್ ಗಳಾಗಿರಬೇಕು ಎಂಬುದು ಈ ಚಿತ್ರದ ಆಶಯ. ನಾನು ಇದುವರೆಗೂ ಹಲವು ಚಿತ್ರಗಳನ್ನು ನಿರ್ಮಾಣ ಮಾಡಿದ್ದೇನೆ. 200ಕ್ಕೂ ಹೆಚ್ಚು ಚಿತ್ರಗಳನ್ನು ವಿತರಿಸಿದ್ದೇನೆ. ನನಗೆ ಪ್ರೇಕ್ಷಕರ ನಾಡಿಮಿಡಿತ ಗೊತ್ತಿದೆ. ಅದಕ್ಕೆ ತಕ್ಕ ಹಾಗೆ ಸಿನಿಮಾ ಮಾಡುತ್ತಿದ್ದೇವೆ. ನನಗೆ ಪ್ರೇಕ್ಷಕರು ಗುರುಸಮಾನರು. ಅವರು ಚಿತ್ರ ನೋಡಿ ಆಶೀರ್ವಾದ ಮಾಡಿದರಷ್ಟೇ ನಾವು ಗೆಲ್ಲುವುದಕ್ಕೆ ಸಾಧ್ಯ. ಹಾಗಾಗಿ, ಅವರಿಗೆ ಇಷ್ಟವಾಗುವಂತಹ ಚಿತ್ರ ಮಾಡುವುದು ನನ್ನ ಮೊದಲ ಆದ್ಯತೆ’ ಎಂದರು. ಇದನ್ನೂ ಓದಿ:ತೆಲುಗು ನಟ ಬ್ರಹ್ಮಾನಂದಂ ಪುತ್ರನ ಮದುವೆಗೆ ಬಂದ ಸೆಲೆಬ್ರಿಟಿಗಳು

    ಈ ಚಿತ್ರ ಮಾಡುವುದಕ್ಕೆ ಎಂ.ಎಂ. ಕೀರವಾಣಿ (MM Keeravani) ಅವರು ಮುಖ್ಯ ಕಾರಣ ಎಂದ ಕುಂಜುಮೋನ್, ‘ಈ ಚಿತ್ರಕ್ಕೆ ಸಂಗೀತ ಸಂಯೋಜಿಸಬೇಕು ಎಂದು ನಾನು ಅವರ ಬಳಿ ಕೇಳಿಕೊಂಡಾಗ, ಹೈದರಾಬಾದ್ ಗೆ ಬರುವುದಕ್ಕೆ ಹೇಳಿದರು. ನಾನು ಹೈದರಾಬಾದ್ ಗೆ ಹೋಗಿ ಅವರನ್ನು ಭೇಟಿ ಮಾಡಿದೆ. ಅವರು ಚಿತ್ರದ ತಾರಾಗಣದ ಬಗ್ಗೆಯಾಗಲೀ, ತಂತ್ರಜ್ಞರ ಬಗ್ಗೆಯಾಗಲೀ ಒಂದೇ ಒಂದು ಮಾತನ್ನೂ ಕೇಳಲಿಲ್ಲ. ಅಡ್ವಾನ್ಸ್ ಸಹ ಪಡೆಯಲಿಲ್ಲ. ಈ ಚಿತ್ರವನ್ನು ನಿಮಗಾಗಿ ಮಾಡುತ್ತಿದ್ದೇನೆ ಎಂದರು. ಅದೇ ರೀತಿ ಹಿರಿಯ ಚಿತ್ರಸಾಹಿತಿ ವೈರಮುತ್ತು ಸಹ ಅಡ್ವಾನ್ಸ್ ಪಡೆಯಲಿಲ್ಲ. ತಮಗೆ ಅವಶ್ಯಕತೆ ಇದ್ದಾಗ ಕೇಳುವುದಾಗಿ ಹೇಳಿದರು. ಅಷ್ಟೇ ಅಲ್ಲ, ಕೊಚ್ಚಿಯಲ್ಲಿ ನಡೆದ ಸಂಗೀತ ಸಂಯೋಜನೆಗೂ ಅವರು ತಮ್ಮ ದುಡ್ಡಿನಲ್ಲೇ ಬರುವುದಾಗಿ ಹೇಳಿದರು. ಅವರ ಗುಣ ನೋಡಿ ಹೃದಯ ತುಂಬಿ ಬಂತು’ ಎಂದು ಹೇಳಿದರು.

     

    ‘ಜಂಟಲ್ ಮ್ಯಾನ್ 2’ ಚಿತ್ರದಲ್ಲಿ ನಾಯಕನಾಗಿ ಚೇತನ್ ಚೀನು ಅಭಿನಯಿಸುತ್ತಿದ್ದು, ಅವರಿಗೆ ನಾಯಕಿಯರಾಗಿ ನಯನತಾರಾ ಚಕ್ರವರ್ತಿ ಹಾಗೂ ಪ್ರಿಯಾ ಲಾಲ್ ಅಭಿನಯಿಸುತ್ತಿದ್ದಾರೆ. ಮಿಕ್ಕಂತೆ ಕನ್ನಡ ನಟಿ ಸುಧಾರಾಣಿ, ಸಿತಾರಾ, ಸುಮನ್, ಸತ್ಯಪ್ರಿಯಾ ಸೇರಿದಂತೆ ಬೇರೆಬೇರೆ ಭಾಷೆಗಳ ಪ್ರತಿಭಾವಂತ ಕಲಾವಿದರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ಅಜಯನ್ ವಿನ್ಸೆಂಟ್ ಅವರ ಛಾಯಾಗ್ರಹಣ, ತೋಟ ತಾರಿಣಿ ಅವರ ಕಲಾ ನಿರ್ದೇಶನವಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಚಂದ್ರಮುಖಿ 2’ ಚಿತ್ರಕ್ಕೆ 10 ಹಾಡುಗಳ ಕಂಪೋಸ್ ಮಾಡಿದ್ದಾರೆ ಕೀರವಾಣಿ

    ‘ಚಂದ್ರಮುಖಿ 2’ ಚಿತ್ರಕ್ಕೆ 10 ಹಾಡುಗಳ ಕಂಪೋಸ್ ಮಾಡಿದ್ದಾರೆ ಕೀರವಾಣಿ

    ರ್.ಆರ್.ಆರ್ ಸಿನಿಮಾದ ಹಾಡಿಗಾಗಿ ಆಸ್ಕರ್ ಪ್ರಶಸ್ತಿ ಪಡೆದಿರುವ ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ (MM Keeravani) ಇದೀಗ ಚಂದ್ರಮುಖಿ 2 ಚಿತ್ರಕ್ಕೂ ಮ್ಯೂಸಿಕ್ ಮಾಡುತ್ತಿದ್ದಾರೆ. ಇದೊಂದೇ ಸಿನಿಮಾಗಾಗಿ ಅವರು ಬರೋಬ್ಬರಿ 10 ಹಾಡುಗಳನ್ನು ಕಂಪೋಸ್ ಮಾಡಿದ್ದಾರಂತೆ. ಹತ್ತೂ ಹಾಡುಗಳು ಸಿನಿಮಾದ ಪ್ರಮುಖ ಘಟ್ಟಗಳಲ್ಲಿ ಬರುತ್ತವೆ ಎನ್ನುವುದು ವಿಶೇಷ.

    ಅತೀ ನಿರೀಕ್ಷೆ ಮೂಡಿಸಿರುವ ‘ಚಂದ್ರಮುಖಿ 2’ (Chandramukhi 2) ಸಿನಿಮಾದ ಒಂದೊಂದೇ ಮೊದಲ ನೋಟಗಳು (First Look) ಅನಾವರಣಗೊಳ್ಳುತ್ತಿವೆ. ಮೊನ್ನೆಯಷ್ಟೇ ರಾಘವ್ ಲಾರೆನ್ಸ್ ಫಸ್ಟ್ ಲುಕ್ ರಿಲೀಸ್ ಮಾಡಿತ್ತು ಚಿತ್ರತಂಡ. ಇದೀಗ ಕಂಗನಾ ರಣಾವತ್ ಅವರ ಮೊದಲ ನೋಟವನ್ನು ಬಿಡುಗಡೆ ಮಾಡಿ, ಕುತೂಹಲ ಮೂಡಿಸಿದ್ದಾರೆ ನಿರ್ದೇಶಕರು. ಈ ಸಿನಿಮಾದಲ್ಲಿ ಕಂಗನಾ ಯಾವ ರೀತಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ಮದುವೆ ಮುನ್ನ ಅಭಿಮಾನಿಗಳಿಗೆ ಹರ್ಷಿಕಾ-ಭುವನ್ ಕೊಟ್ಟರು ಗುಡ್ ನ್ಯೂಸ್

    ಕಂಗನಾ ರಣಾವತ್ (Kangana Ranaut) ಅವರು ಇತ್ತೀಚಿಗೆ ‘ಎಮರ್ಜೆನ್ಸಿ’ (Emergency) ಚಿತ್ರದ ಮೂಲಕ ಹೈಪ್ ಕ್ರಿಯೇಟ್ ಮಾಡಿದ್ದರು. ಈ ಬೆನ್ನಲ್ಲೇ ತಮ್ಮ ಫ್ಯಾನ್ಸ್‌ಗೆ ಕಂಗನಾ ಸಿಹಿಸುದ್ದಿ ನೀಡಿದ್ದಾರೆ. ಚಂದ್ರಮುಖಿಯಾಗಿ ನಟಿ ಅಭಿಮಾನಿಗಳ ಮುಂದೆ ಬರೋದ್ದಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ಫಸ್ಟ್ ಲುಕ್ ಮತ್ತಷ್ಟು ನಿರೀಕ್ಷೆಯನ್ನು ಹೆಚ್ಚಿಸಿದೆ.

    ಸೌತ್ ಸಿನಿ ದುನಿಯಾದ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಭತ್ತಳಿಕೆ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ‘ಚಂದ್ರಮುಖಿ-2’ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಖ್ಯಾತ ನಿರ್ದೇಶಕ, ನಟ ಹಾಗೂ ಸ್ಟಾರ್ ಕೊರಿಯೋಗ್ರಾಫರ್ ರಾಘವ್ ಲಾರೆನ್ಸ್ (Raghav Lawrence), ಬಾಲಿವುಡ್ ಬ್ಯೂಟಿ ಕಂಗನಾ ನಟನೆಯ ಈ ಚಿತ್ರ ಸೆಪ್ಟಂಬರ್ 19ರ ಗಣೇಶ್ ಚತುರ್ಥಿಗೆ ಸ್ಪೆಷಲ್ ಆಗಿ ವಿಶ್ವಾದ್ಯಂತ ತೆರೆಗಪ್ಪಳಿಸಲಿದೆ. ಖ್ಯಾತ ಹಿರಿಯ ನಿರ್ದೇಶಕ ಪಿ.ವಾಸು ನಿರ್ದೇಶನದ 65ನೇ ಚಿತ್ರ ಚಂದ್ರಮುಖ-2 ಚಿತ್ರವಾಗಿದೆ.

     

    2015ರಲ್ಲಿ ಬಿಡುಗಡೆಯಾಗಿದ್ದ ಕ್ಲಾಸಿಕ್ ಸಿನಿಮಾ ‘ಚಂದ್ರಮುಖಿ’ ಬಾಕ್ಸಾಫೀಸ್‌ನಲ್ಲಿ ಹೊಸ ದಾಖಲೆ ಸೃಷ್ಟಿಸಿತ್ತು. ನಟ ರಜನಿಕಾಂತ್ ನಾಯಕನಾಗಿ ನಟಿಸಿದ್ದ ಹಿಟ್ ಲೀಸ್ಟ್ ಸೇರಿತ್ತು. 18 ವರ್ಷದ ಬಳಿಕ ಚಂದ್ರಮುಖಿ ಸೀಕ್ವೆಲ್ ಬರುತ್ತಿದೆ. ನಿರೀಕ್ಷೆಯನ್ನು ಹೆಚ್ಚಿಸಿದೆ. ಲೈಕಾ ಸಂಸ್ಥೆಯ ಒಡೆಯ ಸುಭಾಷ್ ಕರಣ್ ಬಹಳ ಅದ್ಧೂರಿಯಾಗಿ ಚಿತ್ರ ನಿರ್ಮಿಸಿದ್ದು, ಆಸ್ಕರ್ ಅವಾರ್ಡ್ ವಿನ್ನರ್ ಎಂ.ಎಂ ಕೀರವಾಣಿ ಸಂಗೀತ ನಿರ್ದೇಶನ, ಆರ್ ಡಿ ರಾಜಶೇಖರ್ ಛಾಯಾಗ್ರಹಣ, ಅಂಥೋನಿ ಸಂಕಲನ ಚಿತ್ರಕ್ಕಿದೆ. ವಡಿವೇಲು, ಲಕ್ಷ್ಮೀ ಮೆನನ್, ಮಹಿಮಾ ನಂಬಿಯಾರ್, ರಾಧಿಕಾ ಶರತ್ ಕುಮಾರ್, ಸುರೇಶ್ ಮೆನನ್ ತಾರಾಬಳಗದಲ್ಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಜಂಟಲ್  ಮ್ಯಾನ್ 2’ ಸಿನಿಮಾಗೆ ಸಂಗೀತ ಶುರು ಮಾಡಿದ ಕೀರವಾಣಿ

    ‘ಜಂಟಲ್ ಮ್ಯಾನ್ 2’ ಸಿನಿಮಾಗೆ ಸಂಗೀತ ಶುರು ಮಾಡಿದ ಕೀರವಾಣಿ

    ಹಿಂದೆ ‘ಜಂಟಲ್ ಮ್ಯಾನ್’, ‘ಕಾದಲ್ ದೇಶಂ’ ಸೇರಿದಂತೆ ಹಲವು ಸೂಪರ್ ಹಿಟ್ ತಮಿಳು ಚಿತ್ರಗಳನ್ನು ನಿರ್ಮಿಸಿರುವ ಕೆ.ಟಿ. ಕುಂಜುಮೋನ್ (K.T Kunjumon), ಈಗ ಬಹಳ ದಿನಗಳ ನಂತರ ‘ಜಂಟಲ್ ಮ್ಯಾನ್ 2’ (Gentleman 2) ಚಿತ್ರದ ಮೂಲಕ ನಿರ್ಮಾಣಕ್ಕೆ ವಾಪಸ್ಸಾಗಿದ್ದಾರೆ. ಈ ಚಿತ್ರದ ಮುಹೂರ್ತ ಸದ್ಯದಲ್ಲೇ ನಡೆಯಲಿದ್ದು, ಅದಕ್ಕೂ ಮುನ್ನ, ಸಂಗೀತ ಸಂಯೋಜನೆಯ ಕೆಲಸಗಳು ಪ್ರಾರಂಭವಾಗಿವೆ.

    RRR ಚಿತ್ರದ ‘ನಾಟ್ಟು ನಾಟ್ಟು’ ಹಾಡಿಗೆ ಆಸ್ಕರ್ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದ ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ (MM Keeravani), ‘ಜಂಟಲ್ ಮ್ಯಾನ್ 2’ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ. ಕೀರವಾಣಿ ಸಂಗೀತಕ್ಕೆ ಖ್ಯಾತ ಗೀತರಚನೆಕಾರ ವೈರಮುತ್ತು(Vairamuthu) ಸಾಹಿತ್ಯ ರಚಿಸುತ್ತಿದ್ದಾರೆ. ಇದನ್ನೂ ಓದಿ:ಸಮನ್ವಿ ಕುಟುಂಬದಲ್ಲಿ ಸಂತಸ- ಮಗನ ಜೊತೆಗಿನ ಫೋಟೋ ಹಂಚಿಕೊಂಡ ಅಮೃತಾ

    ಈಗಾಗಲೇ ಸೋಮವಾರದಿಂದ ಕೇರಳದ ಬೋಲ್ ಗಟ್ಟಿ ಪ್ಯಾಲೇಸ್ ಐಲೆಂಡ್‌ನಲ್ಲಿ ಟ್ಯೂನ್ ಹಾಕುವ ಕೆಲಸ ಪ್ರಾರಂಭವಾಗಿದೆ. ಈ ಸೆಷನ್ನಲ್ಲಿ ಕೀರವಾಣಿ, ವೈರಮುತ್ತು, ಕುಂಜುಮೋನ್, ಗೋಕುಲ್ ಕೃಷ್ಣ ಮುಂತಾದವರು ಭಾಗವಹಿಸಿದ್ದಾರೆ.

     

    ‘ಜಂಟಲ್ ಮ್ಯಾನ್ 2’ ಚಿತ್ರಕ್ಕೆ ಎ. ಗೋಕುಲ್ ಕೃಷ್ಣ ಕಥೆ-ಚಿತ್ರಕಥೆ ರಚಿಸುವುದರ ಜೊತೆಗೆ ನಿರ್ದೇಶನವನ್ನೂ ಮಾಡುತ್ತಿದ್ದಾರೆ. ಚಿತ್ರವು ಸದ್ಯ ಪ್ರೀ-ಪ್ರೊಡಕ್ಷನ್ ಹಂತದಲ್ಲಿದ್ದು, ಸದ್ಯದಲ್ಲೇ ಕಲಾವಿದರು ಮತ್ತು ತಂತ್ರಜ್ಞರ ಪಟ್ಟಿ ಹೊರಬೀಳಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಮಿಳು ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ ಆಸ್ಕರ್ ಪ್ರಶಸ್ತಿ ವಿಜೇತ ಕೀರವಾಣಿ

    ತಮಿಳು ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ ಆಸ್ಕರ್ ಪ್ರಶಸ್ತಿ ವಿಜೇತ ಕೀರವಾಣಿ

    ಆರ್.ಆರ್.ಆರ್ ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ತಮ್ಮದಾಗಿಸಿಕೊಂಡಿರುವ ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ (MM Keeravani) ಮತ್ತೆ ತಮಿಳು ಸಿನಿಮಾ ರಂಗಕ್ಕೆ ಹಾರಿದ್ದಾರೆ. ಈಗಾಗಲೇ ಕೆಲವು ತಮಿಳು ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಕೀರವಾಣಿ, ಈಗ ಮತ್ತೆ ಕಾಲಿವುಡ್ ನತ್ತ ಪ್ರಯಾಣ ಬೆಳೆಸಿದ್ದಾರೆ.

    ಈ ಹಿಂದೆ ‘ಜಂಟಲ್ ಮ್ಯಾನ್’ (Gentleman), ‘ಕಾದಲ್ ದೇಶಂ’ ಸೇರಿದಂತೆ ಹಲವು ಸೂಪರ್ ಹಿಟ್ ತಮಿಳು ಚಿತ್ರಗಳನ್ನು ನಿರ್ಮಿಸಿರುವ ಕೆ.ಟಿ. ಕುಂಜುಮೋನ್, ಈಗ ಬಹಳ ದಿನಗಳ ನಂತರ ‘ಜಂಟಲ್ ಮ್ಯಾನ್ 2’ ಚಿತ್ರದ ಮೂಲಕ ನಿರ್ಮಾಣಕ್ಕೆ ವಾಪಸ್ಸಾಗಿದ್ದಾರೆ. ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಿದ್ದು, ಈ ಚಿತ್ರಕ್ಕೆ ಸಂಗೀತ ಸಂಯೋಜಿಸುವುದಕ್ಕೆ ಕೀರವಾಣಿ ಒಪ್ಪಿದ್ದಾರೆ. ಇದನ್ನೂ ಓದಿ:ಶಕುನಿ ಪಾತ್ರಧಾರಿ ಗೂಫಿ ಆರೋಗ್ಯ ಸ್ಥಿತಿ ಗಂಭೀರ

    ಎರಡು ತಿಂಗಳ ಹಿಂದೆಯಷ್ಟೇ ಅಮೆರಿಕಾದಲ್ಲಿ ನಡೆದ ಸಮಾರಂಭದಲ್ಲಿ ಕೀರವಾಣಿ ಅವರಿಗೆ ಆಸ್ಕರ್ ಪ್ರಶಸ್ತಿ ಲಭಿಸಿತ್ತು. ಅವರು ಅಲ್ಲಿಂದ ಭಾರತಕ್ಕೆ ಬಂದ ಮೇಲೆ, ಅವರನ್ನು ಹೈದರಾಬಾದ್ ನಲ್ಲಿ  ಚಿತ್ರದ ನಿರ್ದೇಶಕ ಎ. ಗೋಕುಲ್ ಕೃಷ್ಣ (Gokula Krishna) ಭೇಟಿಯಾಗಿದ್ದಾರೆ. ಗೋಕುಲ್ ಹೇಳಿದ ಕಥೆ ಕೇಳಿ ಖುಷಿಯಾದ ಕೀರವಾಣಿ, ತಕ್ಷಣವೇ ಚಿತ್ರಕ್ಕೆ ಸಂಗೀತ ಸಂಯೋಜಿಸುವುದಾಗಿ ಹೇಳಿದ್ದಾರೆ. ಅಷ್ಟೇ ಅಲ್ಲ, ತಕ್ಷಣವೇ ನಿರ್ಮಾಪಕ ಕುಂಜುಮೋನ್ (Kunjumon) ಅವರಿಗೆ ಕರೆ ಮಾಡಿ, ಮುಂದಿನ ತಿಂಗಳಿನಿಂದ ಸಂಗೀತ ಸಂಯೋಜನೆ ಕೆಲಸ ಪ್ರಾರಂಭಿಸುವುದಾಗಿ ಹೇಳಿದ್ದಾರೆ. ಚಿತ್ರವು ಸದ್ಯ ಪ್ರೀ-ಪ್ರೊಡಕ್ಷನ್ ಹಂತದಲ್ಲಿದ್ದು, ಸದ್ಯದಲ್ಲೇ ಕಲಾವಿದರು ಮತ್ತು ತಂತ್ರಜ್ಞರ ಪಟ್ಟಿ ಹೊರಬೀಳಲಿದೆ.

  • 27 ವರ್ಷಗಳ ಬಳಿಕ ಮಲಯಾಳಂ ಸಿನಿಮಾ ರಂಗಕ್ಕೆ ಕೀರವಾಣಿ ಎಂಟ್ರಿ

    27 ವರ್ಷಗಳ ಬಳಿಕ ಮಲಯಾಳಂ ಸಿನಿಮಾ ರಂಗಕ್ಕೆ ಕೀರವಾಣಿ ಎಂಟ್ರಿ

    ಬಾಹುಬಲಿ, ಆರ್.ಆರ್.ಆರ್ ಸೇರಿದಂತೆ ಸಾಕಷ್ಟು ಸಿನಿಮಾಗಳಿಗೆ ಸಂಗೀತ ಸಂಯೋಜನೆ (Music Director) ಮಾಡಿರುವ ಎಂ.ಎಂ.ಕೀರವಾಣಿ (MM Keeravani) ಬರೋಬ್ಬರಿ 27 ವರ್ಷಗಳ ನಂತರ ಮಲಯಾಳಂ ಸಿನಿಮಾ ರಂಗಕ್ಕೆ ಮರು ಪ್ರವೇಶ ಮಾಡುತ್ತಿದ್ದಾರೆ. ಎರಡೂವರೆ ದಶಕದ ನಂತರ ಮಲಯಾಳಂ (Malayalam) ಸಿನಿಮಾ ರಂಗಕ್ಕೆ ಕೀರವಾಣಿ ಬರುತ್ತಿರುವುದು ಸಹಜವಾಗಿಯೇ ಆ ಚಿತ್ರೋದ್ಯಮಕ್ಕೆ ಸಂಭ್ರಮ ತಂದಿದೆ.

    1996ರಲ್ಲಿ ಬಿಡುಗಡೆಯಾದ ದೇವರಾಗಂ ಹೆಸರಿನ ಮಲಯಾಳಂ ಸಿನಿಮಾಗೆ ಕೊನೆಯದಾಗಿ ಕೀರವಾಣಿ ಸಂಗೀತ ಸಂಯೋಜನೆ ಮಾಡಿದ್ದರು. ಈ ಸಿನಿಮಾದ ಹಾಡುಗಳು ಸಖತ್ ಹಿಟ್ ಕೂಡ ಆಗಿದ್ದವು. ಆದರೂ, ನಂತರ ಅವರು ಮಲಯಾಳಂ ಸಿನಿಮಾಗಳಿಗೆ ಸಂಗೀತ ಮಾಡಲು ಒಪ್ಪಿಕೊಳ್ಳಲಿಲ್ಲ. 27 ವರ್ಷಗಳ ನಂತರ ಮತ್ತೆ ಅವರು ಮಲಯಾಳಂ ಚಿತ್ರೋದ್ಯಮಕ್ಕೆ ಕಾಲಿಡುತ್ತಿದ್ದಾರೆ.

    ಸದ್ಯ ಅವರು ಮಲಯಾಳಂನಲ್ಲಿ ನಿರ್ಮಾಣವಾಗುತ್ತಿರುವ ಮ್ಯಾಜಿಷಿಯನ್ (Magician) ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ. ಭಾನುವಾರವಷ್ಟೇ ಈ ಸಿನಿಮಾದ ಮುಹೂರ್ತ ನಡೆದಿದೆ. ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದ ಕೀರಾವಣಿ, ತುಂಬಾ ವರ್ಷಗಳ ನಂತರ ಮತ್ತೆ ಈ ಚಿತ್ರೋದ್ಯಮಕ್ಕೆ ಬರುತ್ತಿರುವದು ಸಂತಸ ತಂದಿದೆ ಎಂದು ಹೇಳಿಕೊಂಡಿದ್ದಾರೆ.

    ಆರ್.ಆರ್.ಆರ್ ಸಿನಿಮಾದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಬಂದ ನಂತರ ಕೀರವಾಣಿ ಅವರಿಗೆ ಬೇಡಿಕೆ ಹೆಚ್ಚಾಗಿದೆ. ಅಲ್ಲದೇ, ಇವರು ದುಬಾರಿ ಸಂಗೀತ ನಿರ್ದೇಶಕರಾಗಿದ್ದಾರೆ. ಹೀಗಿದ್ದಾಗಲೂ ಮಲಯಾಳಂ ಚಿತ್ರವನ್ನು ಒಪ್ಪಿಕೊಂಡಿದ್ದು ಸಹಜವಾಗಿಯೇ ಕುತೂಹಲ ಹೆಚ್ಚಿಸಿದೆ.

  • Oscar Winner List:ಆಸ್ಕರ್ 2023 ಪ್ರಶಸ್ತಿ ಗೆದ್ದವರ ಸಂಪೂರ್ಣ ಪಟ್ಟಿ ಇಲ್ಲಿದೆ

    Oscar Winner List:ಆಸ್ಕರ್ 2023 ಪ್ರಶಸ್ತಿ ಗೆದ್ದವರ ಸಂಪೂರ್ಣ ಪಟ್ಟಿ ಇಲ್ಲಿದೆ

    ಸ್ಕರ್ 2023 (Oscars 2023) ಅವಾರ್ಡ್ ಸಮಾರಂಭವು ಪೂರ್ಣಗೊಂಡಿದೆ. ಈ ಅದ್ದೂರಿ ಕಾರ್ಯಕ್ರಮಕ್ಕೆ ಅನೇಕ ಸಿನಿ ತಾರೆಯರು ಭಾಗಿಯಾಗಿದ್ದರು. ಭಾರತಕ್ಕೆ ಎರಡು ಆಸ್ಕರ್ ಪ್ರಶಸ್ತಿಯನ್ನ ಬಾಚಿಕೊಂಡಿದೆ. `ಆರ್‌ಆರ್‌ಆರ್’ (RRR) ಸಿನಿಮಾದ `ನಾಟು ನಾಟು’ (Naatu Naatu Song) ಸಾಂಗ್ ಮತ್ತು `ದಿ ಎಲಿಫೆಂಟ್ ವಿಸ್ಪರರ್ಸ್’ ಡಾಕ್ಯುಮೆಂಟರಿ ಪ್ರತಿಷ್ಠಿತ ಆಸ್ಕರ್ ಗೆದ್ದು (Winner) ಬೀಗಿದೆ. ಆಸ್ಕರ್ ಗೆದ್ದವರ ಸಂಪೂರ್ಣ ಮಾಹಿತಿ ಇಲ್ಲಿದೆ. ಇದನ್ನೂ ಓದಿ: ಭಾರತದ ದಿ ಎಲಿಫೆಂಟ್ ವಿಸ್ಪರರ್ಸ್ ಕಿರುಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

    ಭಾರತಕ್ಕೆ ಒಲಿದ ಎರಡು ಪ್ರಶಸ್ತಿ

    ರಾಜಮೌಳಿ (Rajamouli) ನಿರ್ದೇಶನದ `ಆರ್‌ಆರ್‌ಆರ್’ ಚಿತ್ರದ ನಾಟು ನಾಟು ಹಾಡಿಗೆ ಅತ್ಯುತ್ತಮ ಒರಿಜಿನಲ್ ಸಾಂಗ್ ಪ್ರಶಸ್ತಿ ಪಡೆಯಿತು. ಹಾಗೂ ಬೆಸ್ಟ್ ಡಾಕ್ಯುಮೆಂಟರಿ ಶಾರ್ಟ್ ವಿಬಾಗದಲ್ಲಿ `ದಿ ಎಲಿಫೆಂಟ್ ವಿಸ್ಪರರ್ಸ್’ ಚಿತ್ರಕ್ಕೆ ಪ್ರಶಸ್ತಿ ದಕ್ಕಿದೆ.

    ಅತ್ಯುತ್ತಮ ಚಿತ್ರ

    ಡ್ಯಾನಿಯಲ್ ಕ್ವಾನ್ ಹಾಗೂ ಡ್ಯಾನಿಯಲ್ ಶೈನರ್ಟ್ ನಿರ್ದೇಶನದ `ಎವ್ರಿಥಿಂಗ್ ಎವ್ರಿವೇರ್ ಆಲ್ ಎಟ್ ಒನ್ಸ್’

    ಅತ್ಯುತ್ತಮ ನಿರ್ದೇಶನ

    ಡ್ಯಾನಿಯಲ್ ಕ್ವಾನ್ ಹಾಗೂ ಡ್ಯಾನಿಯಲ್ ಶೈನರ್ಟ್ – ಎವ್ರಿಥಿಂಗ್ ಎವ್ರಿವೇರ್ ಆಲ್ ಎಟ್ ಒನ್ಸ್

    ಅತ್ಯುತ್ತಮ ನಟ

    ಬ್ರೆಂಡನ್ ಫ್ರೆಸರ್- ದಿ ವೇಲ್

    ಅತ್ಯುತ್ತಮ ನಟಿ

    ಮಿಶೆಲ್ ಯೋ- ಎವ್ರಿಥಿಂಗ್ ಎವ್ರಿವೇರ್ ಆಲ್ ಎಟ್ ಒನ್ಸ್ ಸಿನಿಮಾ

    ಅತ್ಯುತ್ತಮ ಪೋಷಕ ನಟ

    ಕಿ ಹು ಕ್ವಾನ್- ಎವ್ರಿಥಿಂಗ್ ಎವ್ರಿವೇರ್ ಆಲ್ ಎಟ್ ಒನ್ಸ್

    ಅತ್ಯುತ್ತಮ ಪೋಷಕ ನಟಿ

    ಜೇಮಿ ಲೀ ಕರ್ಟಿಸ್- ಎವ್ರಿಥಿಂಗ್ ಎವ್ರಿವೇರ್ ಆಲ್ ಎಟ್ ಒನ್ಸ್

    ಅತ್ಯುತ್ತಮ ಛಾಯಾಗ್ರಹಣ

    ಜೇಮ್ಸ್ ಫ್ರೆಂಡ್- ಆಲ್ ಕ್ವಾಯ್ಟ್ ಆನ್ ದಿ ವೆಸ್ಟರ್ನ್ ಫ್ರಂಟ್

    ಅತ್ಯುತ್ತಮ ಅಂತಾರಾಷ್ಟ್ರೀಯ ಫೀಚರ್ ಸಿನಿಮಾ

    ಆಲ್ ಕ್ವಾಯ್ಟ್ ಆನ್ ದಿ ವೆಸ್ಟರ್ನ್ ಫ್ರಂಟ್

    ಬೆಸ್ಟ್ ಡಾಕ್ಯುಮೆಂಟರಿ ಫೀಚರ್

    ನವಾಲ್ನಿ

    ಅತ್ಯುತ್ತಮ ಸಂಕಲನ

    ಪೌಲ್ ರೋಜರ್ಸ್- ಎವ್ರಿಥಿಂಗ್ ಎವ್ರಿವೇರ್ ಆಲ್ ಎಟ್ ಒನ್ಸ್

    ಬೆಸ್ಟ್ ವಿಶ್ಯುವಲ್ ಎಫೆಕ್ಟ್ಸ್

    ಅವತಾರ್: ದಿ ವೇ ಆಫ್ ವಾಟರ್

    ಅತ್ಯುತ್ತಮ ವಸ್ತ್ರವಿನ್ಯಾಸ

    ರುತ್ ಕಾರ್ಟರ್- ಬ್ಲ್ಯಾಕ್ ಪ್ಯಾಂಥರ್: ವಕಾಂಡಾ ಫಾರೆವರ್

  • Oscar-ಆಸ್ಕರ್ ಪ್ರಶಸ್ತಿ ಪಡೆದ ನಾಟು ನಾಟು ‘ಲಹರಿ’ಯ ಹಾಡು ನೀವಿನ್ನೂ ನೋಡಿಲ್ವಾ?

    Oscar-ಆಸ್ಕರ್ ಪ್ರಶಸ್ತಿ ಪಡೆದ ನಾಟು ನಾಟು ‘ಲಹರಿ’ಯ ಹಾಡು ನೀವಿನ್ನೂ ನೋಡಿಲ್ವಾ?

    ನಾಟು ನಾಟು (Natu Natu) ಹಾಡು ಆಸ್ಕರ್ (Oscar) ಪ್ರಶಸ್ತಿ ಪಡೆಯುವ ಮೂಲಕ ಜಗತ್ತಿನಾದ್ಯಂತ ಸುದ್ದಿ ಮಾಡಿದೆ. ಸೋಷಿಯಲ್ ಮೀಡಿಯಾದಲ್ಲೂ ಅದು ಟ್ರೆಂಡ್ ಸೃಷ್ಟಿಸಿದೆ. ರಾಜಮೌಳಿ (Rajamouli) ನಿರ್ದೇಶನದಲ್ಲಿ ಮೂಡಿ ಬಂದ ಆರ್.ಆರ್.ಆರ್ ಸಿನಿಮಾದ ಗೀತೆ ಇದಾಗಿದ್ದು,  ಎಂ.ಎಂ.ಕೀರವಾಣಿ (MM Keeravani) ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿದೆ. ಜ್ಯೂನಿಯರ್ ಎನ್.ಟಿ.ಆರ್ ಹಾಗೂ ರಾಮ್ ಚರಣ್ ಈ ಹಾಡಿಗೆ ಸಖತ್ ಸ್ಟೆಪ್ ಹಾಕಿದ್ದರೆ, ಈ ಹಾಡಿನ ಮ್ಯೂಸಿಕ್ ಹಕ್ಕನ್ನು ಕನ್ನಡದ ಹೆಮ್ಮೆಯ ಲಹರಿ (Lahari Music) ಸಂಸ್ಥೆ ಪಡೆದುಕೊಂಡಿದೆ.

    ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಹಾಡು ರಿಲೀಸ್ ಆಗಿದ್ದು, ಮೂಲ ಚಿತ್ರಸಾಹಿತ್ಯವನ್ನು ಚಂದ್ರಬೋಸ್ ಬರೆದಿದ್ದಾರೆ. ಕಲಾಭೈರವ ಹಾಗೂ ಸಿಪ್ಲಿಗಂಜ ಹಾಡಿದ್ದಾರೆ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಹಾಡು ಮೂಡಿ ಬಂದಿದೆ. ಇಂತಹ ಹಾಡಿಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯು ಸಂದಿದೆ. ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದ ಆರ್.ಆರ್.ಆರ್ ಚಿತ್ರದ ಈ ಹಾಡು ಆಸ್ಕರ್ ತರುವ ಭರವಸೆಯನ್ನೂ ಮೂಡಿಸಿತ್ತು. ಆಸ್ಕರ್ ವೇದಿಕೆಯ ಮೇಲೆ ಈ ಹಾಡನ್ನು ಗಾಯಕರಾದ ಸಿಪ್ಲಿಗಂಜ (Sipliganja) ಹಾಗೂ ಕಾಲಭೈರವ (Kalabhairava) ಹಾಡಿದ್ದರು. ಅಮೆರಿಕಾದ ನಟ, ಡಾನ್ಸರ್ ಲಾರೆನ್ ಗೋತ್ಲಿಬ್ ನೃತ್ಯ ಮಾಡಿದ್ದರು.

    ನಾಟು ನಾಟು ಹಾಡಿಗೆ ಪ್ರಶಸ್ತಿ ಘೋಷಣೆ ಆಗುತ್ತಿದ್ದಂತೆಯೇ ಸಭಾಂಗಣದ ತುಂಬಾ ಚೆಪ್ಪಾಳೆಯದ್ದೇ ಸದ್ದು. ಭಾರತದಲ್ಲೂ ರಾಮ್ ಚರಣ್ ಮತ್ತು ಜ್ಯೂನಿಯರ್ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಭಾರತೀಯ ಸಿನಿಮಾ ರಂಗದ ಅನೇಕರು ಸೋಷಿಯಲ್ ಮೀಡಿಯಾ ಮೂಲಕ ಶುಭಾಶಯ ಕೋರಿದ್ದಾರೆ. ಅದರಲ್ಲೂ ತೆಲುಗು ಸಿನಿಮಾ ರಂಗದಲ್ಲಿ ಹಬ್ಬದ ವಾತಾವರಣವೇ ಕಂಡು ಬಂದಿದೆ.

    ಅಮೆರಿಕಾದ ಲಾಸ್ ಏಂಜಲೀಸ್ ಡಾಲ್ಬಿ ಥಿಯೇಟರ್ ನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಜಗತ್ತಿನ ಹೆಸರಾಂತ ಕಲಾವಿದರು ಹಾಗೂ ತಂತ್ರಜ್ಞರು ಭಾಗಿಯಾಗಿದ್ದಾರೆ. ಅಲ್ಲದೇ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಸೇರಿದಂತೆ ಆರ್.ಆರ್.ಆರ್ ಚಿತ್ರತಂಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದೆ. ಭಾರತದಿಂದ ಒಂದು ಸಿನಿಮಾ ಮತ್ತು ಎರಡು ಡಾಕ್ಯುಮೆಂಟರಿಗಳು ಪ್ರಶಸ್ತಿಯ ಕಣದಲ್ಲಿದ್ದವು. ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಈ ಕಾರ್ಯಕ್ರಮದ ನಿರೂಪಣೆ ಮಾಡುತ್ತಿರುವುದು ಹೆಮ್ಮೆ ತಂದಿದೆ.

    ಆಸ್ಕರ್ ಪ್ರಶಸ್ತಿಯ ಟ್ರೋಫಿ ಜೊತೆ ನಗದು ಬಹುಮಾನ ಕೊಡದೇ ಇದ್ದರೂ, ಉಡುಗೊರೆಯ ರೂಪದಲ್ಲಿ ಅನೇಕ ವಸ್ತುಗಳು, ಪ್ರವಾಸ ಪ್ಯಾಕೇಜ್ ಗಳು ವಿಜೇತರಿಗೆ ಸಿಗುತ್ತವೆ. ಕೇವಲ ಪ್ರಶಸ್ತಿ ಗೆದ್ದವರಿಗೆ ಮಾತ್ರವಲ್ಲ, ನಾಮ ನಿರ್ದೇಶನಗೊಂಡವರಿಗೆ ಉಡುಗೊರೆ ಇರಲಿದೆ. ಈ ಬಾರಿ ಗಿಫ್ಟ್ ಬಾಕ್ಸ್ ನಲ್ಲಿ 1 ಲಕ್ಷ ಡಾಲರ್ ಮೌಲ್ಯದ ಉಡುಗೊರೆಗಳು ಇವೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಪೀಸೆಸ್ ಆಫ್ ಆಸ್ಟ್ರೇಲಿಯಾ ಹೆಸರಿನ ಕಂಪೆನಿಯೊಂದು ನಾಮ ನಿರ್ದೇಶನಗೊಂಡವರಿಗೆ ಆಸ್ಟ್ರೇಲಿಯಾದಲ್ಲಿ ಒಂದು ಚದರ ಮೀಟರ್ ಭೂಮಿ ಕೊಡಲು ಮುಂದಾಗಿದೆಯಂತೆ.

  • ಆಸ್ಕರ್ ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿದೆ : ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ

    ಆಸ್ಕರ್ ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿದೆ : ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ

    ರಾಜಮೌಳಿ ನಿರ್ದೇಶನದ ‘ಆರ್.ಆರ್.ಆರ್’ (R.R.R) ಸಿನಿಮಾದ ‘ನಾಟು ನಾಟು’ ಹಾಡು (Natu Natu Song) ಈಗಾಗಲೇ ಗೋಲ್ಡನ್ ಗ್ಲೋಬ್ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಇದೀಗ ಆಸ್ಕರ್ (Oscar) ಪ್ರಶಸ್ತಿಯ ಮೇಲೆ ಕಣ್ಣಿಟ್ಟು ಕೂತಿದೆ. ಆಸ್ಕರ್ ರೇಸ್ ನಲ್ಲಿ ನಾಟು ನಾಟು ಸಾಂಗ್ ಸ್ಪರ್ಧೆಗಿದ್ದು ಈ ಬಾರಿ ತಮಗೆ ಆಸ್ಕರ್ ಪ್ರಶಸ್ತಿ ಬರುವ ವಿಶ್ವಾಸವಿದೆ ಎಂದಿದ್ದಾರೆ ಸಿನಿಮಾದ ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ.

    ಈ ಬಾರಿಯ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಂ.ಎಂ.ಕೀರವಾಣಿ (MM Keeravani) ಅವರಿಗೆ ಸಂಗೀತ ಕಾರ್ಯಕ್ರಮ ನೀಡುವಂತಹ ಅವಕಾಶ ಸಿಕ್ಕಿದೆ. ಹಾಗಾಗಿ ಕೀರವಾಣಿ ಮತ್ತು ಟೀಮ್ ತಾಲೀಮು ಕೂಡ ನಡೆಸುತ್ತಿದೆ. ಅದೊಂದು ಜಾಗತಿಕ ಕಾರ್ಯಕ್ರಮ ಆಗಿರುವುದರಿಂದ ಹೆಸರಾಂತ ಸಂಗೀತ ಕಲಾವಿದರೇ ಕೀರವಾಣಿ ಜೊತೆ ಪ್ರಯಾಣ ಬೆಳೆಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಭಾರತದ ಸಂಗೀತ ನಿರ್ದೇಶಕರೊಬ್ಬರಿಗೆ ಇಂಥದ್ದೊಂದು ಅವಕಾಶ ಸಿಕ್ಕಿರುವುದು ವಿಶೇಷ. ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

    ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಲು ಆರ್.ಆರ್.ಆರ್ ಚಿತ್ರತಂಡ  ಈಗಾಗಲೇ ಸಿದ್ಧತೆ ಮಾಡಿಕೊಂಡಿದೆ. ನಿರ್ದೇಶಕ ರಾಜಮೌಳಿ (Rajamouli), ನಟರಾದ ಜ್ಯೂನಿಯರ್ ಎನ್.ಟಿ.ಆರ್, ರಾಮಚರಣ್ ಕುಟುಂಬಗಳು ಭಾಗಿಯಾಗಲಿವೆ ಎಂದು ಹೇಳಲಾಗುತ್ತಿದೆ. ಗೋಲ್ಡನ್ ಗ್ಲೋಬ್ ಪ್ರಶಸ್ತಿ ಪ್ರದಾನ ಸಮಾರಂಭಕ್ಕೂ ತಮ್ಮ ಕುಟುಂಬದೊಂದಿಗೆ ತೆರಳಿತ್ತು ಸಿನಿಮಾ ಟೀಮ್.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಗೋಲ್ಡನ್ ಗ್ಲೋಬ್’ ಪ್ರಶಸ್ತಿ ಎತ್ತಿ ಹಿಡಿದು ಅರ್ಜುನ್ ಸರ್ಜಾ ನೆನೆದ ಕೀರವಾಣಿ

    ‘ಗೋಲ್ಡನ್ ಗ್ಲೋಬ್’ ಪ್ರಶಸ್ತಿ ಎತ್ತಿ ಹಿಡಿದು ಅರ್ಜುನ್ ಸರ್ಜಾ ನೆನೆದ ಕೀರವಾಣಿ

    ರಾಜಮೌಳಿ ನಿರ್ದೇಶನದ ‘ಆರ್ ಆರ್ ಆರ್’ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ರೆಕಾರ್ಡ್ ಕ್ರಿಯೇಟ್ ಮಾಡಿದ್ದಾಗಿದೆ. ಈಗ ಪ್ರತಿಷ್ಠಿತ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಮುಡಿಗೇರಿಸಿಕೊಂಡು ಅಂತರಾಷ್ಟ್ರೀಯ ಮಟ್ಟದಲ್ಲೂ ಕೀರ್ತಿ ಪತಾಕೆ ಹಾರಿಸಿ ಇತಿಹಾಸ ಸೃಷ್ಟಿಸಿದೆ. ‘ನಾಟು ನಾಟು’ ಹಾಡಿಗೆ ಬೆಸ್ಟ್ ಒರಿಜಿನಲ್ ಸಾಂಗ್ ಕೆಟಗರಿಯಲ್ಲಿ ಸಂಗೀತ ನಿರ್ದೇಶಕ ಎಂ ಎಂ ಕೀರವಾಣಿ ಗೋಲ್ಡನ್ ಗ್ಲೋಬ್ ಅವಾರ್ಡ್ ಗೆ ಮುತ್ತಿಟ್ಟಿದ್ದಾರೆ.

    ಗೋಲ್ಡನ್ ಗ್ಲೋಬ್ ಅವಾರ್ಡ್ ಮೂಲಕ ಇತಿಹಾಸ ಸೃಷ್ಟಿಸಿರುವ ‘ಆರ್ ಆರ್ ಆರ್’ ಚಿತ್ರದ ಸಂಗೀತ ನಿರ್ದೇಶಕ ಎಂ. ಎಂ. ಕೀರವಾಣಿ ಇಲ್ಲಿವರೆಗಿನ ಜರ್ನಿಗೆ ಕಾರಣರಾದ ಎಲ್ಲರಿಗೂ ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ್ದಾರೆ. ಈ ವೇಳೆ ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಅವರನ್ನು ಎಂ. ಎಂ. ಕೀರವಾಣಿ ಸ್ಮರಿಸಿದ್ದಾರೆ. ಅರ್ಜುನ್ ಸರ್ಜಾ ಮೊಟ್ಟ ಮೊದಲ ನಿರ್ದೇಶನದಲ್ಲಿ ಬಂದ ‘ಸೇವಗನ್’ ಹಾಗೂ ‘ಪ್ರತಾಪ್’ ಚಿತ್ರಕ್ಕೆ ಎಂ. ಎಂ ಕೀರವಾಣಿ ಅವರಿಗೆ ಅವಕಾಶ ನೀಡಿದ್ದರು. ಅರ್ಜುನ್ ಸರ್ಜಾ ನಟನೆಯ ‘ಅಳಿಮಯ್ಯ’, ತಮಿಳಿನ ‘ಕೊಂಡಟ್ಟಂ’ ಸಿನಿಮಾಗಳಿಗೂ ಎಂ.ಎಂ ಕೀರವಾಣಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ಪುತ್ರಿ ಐಶ್ವರ್ಯ ಅರ್ಜುನ್ ನಟಿಸಿರುವ ‘ಪ್ರೇಮಬರಹ’ ಚಿತ್ರದ ಹಾಡೊಂದಕ್ಕೂ ಎಂ. ಎಂ ಕೀರವಾಣಿ ದನಿಯಾಗಿದ್ದಾರೆ. ಇದನ್ನೂ ಓದಿ: ಕೆ.ಎಲ್ ರಾಹುಲ್- ಅಥಿಯಾ ಶೆಟ್ಟಿ ಮನೆಯಲ್ಲಿ ಮದುವೆ ಸಂಭ್ರಮ

    ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಕೀರವಾಣಿ ತಮ್ಮ ಆರಂಭಿಕ ದಿನಗಳಲ್ಲಿ ಸಂಗೀತ ನಿರ್ದೇಶನಕ್ಕೆ ಅವಕಾಶ ನೀಡಿದ ಖ್ಯಾತ ನಟ ಹಾಗೂ ನಿರ್ದೇಶಕ ಅರ್ಜುನ್ ಸರ್ಜಾ ನೆನೆದು ಕೃತಘ್ನತೆ ತಿಳಿಸಿದ್ದಾರೆ. ಅವಕಾಶ ಕೊಟ್ಟವರನ್ನು ಸ್ಮರಿಸಿ ಸರಳತೆ ಮೆರೆದ ಕೀರವಾಣಿ ಈ ನಡೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಇದೇ ವೇಳೆ ಬಾಲಚಂದರ್, ಭರತನ್, ಭಟ್ ಸಾಬ್ ಅವರಿಗೂ ಧನ್ಯವಾದ ತಿಳಿಸಿದ್ದಾರೆ ಎಂ.ಎಂ ಕೀರವಾಣಿ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k