Tag: ಎಂ.ಚಿನ್ನಸ್ವಾಮಿ ಕ್ರೀಡಾಂಗಣ

  • ಬೆಂಗಳೂರಲ್ಲಿ ಆರ್‌ಸಿಬಿಗೆ ಸತತ 4ನೇ ಸೋಲು – ಡೆಲ್ಲಿ ಪ್ಲೇ ಆಫ್‌ಗೆ

    ಬೆಂಗಳೂರಲ್ಲಿ ಆರ್‌ಸಿಬಿಗೆ ಸತತ 4ನೇ ಸೋಲು – ಡೆಲ್ಲಿ ಪ್ಲೇ ಆಫ್‌ಗೆ

    – ಡೆಲ್ಲಿಗೆ 9 ವಿಕೆಟ್‌ಗಳ ಗೆಲುವು
    – ಶೆಫಾಲಿ ವರ್ಮಾ, ಜೆಸ್‌ 132 ರನ್‌ಗಳ ಜೊತೆಯಾಟಕ್ಕೆ ಒಲಿದ ಜಯ 

    ಬೆಂಗಳೂರು: ಬೆಂಗಳೂರಲ್ಲಿ ಆರ್‌ಸಿಬಿಗೆ ಸತತ 4ನೇ ಸೋಲಿನ ಅನುಭವವಾಗಿದೆ. ಶೆಫಾಲಿ ವರ್ಮಾ, ಜೆಸ್‌ 132 ರನ್‌ಗಳ ಜೊತೆಯಾಟದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ 9 ವಿಕೆಟ್‌ಗಳ ಜಯದೊಂದಿಗೆ ಪ್ಲೇ ಆಫ್‌ಗೆ ಲಗ್ಗೆ ಇಟ್ಟಿದೆ.

    ಇಂದು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ನಡುವಿನ ಪಂದ್ಯದಲ್ಲಿ ಟಾಸ್‌ ಸೋತು ಮೊದಲ ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 147 ರನ್‌ ಗಳಿಸಿ, ಡೆಲ್ಲಿಗೆ 148 ರನ್‌ ಗಳ ಗುರಿಯನ್ನು ನೀಡಿತ್ತು. ಗೆಲುವಿನ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ತಂಡ 15.3 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 151 ರನ್‌ ಗಳಿಸುವ ಮೂಲಕ ಗೆಲುವು ತನ್ನದಾಗಿಸಿಕೊಂಡಿದೆ.ಇದನ್ನೂ ಓದಿ: ಪೆರ್ರಿ ಫಿಫ್ಟಿ ಆಟ – ಡೆಲ್ಲಿಗೆ 148ರನ್‌ಗಳ ಟಾರ್ಗೆಟ್‌

    ಆರಂಭಿಕ ಆಟಗಾರ್ತಿಯಾಗಿ ಬಂದ ಮೆಗ್‌ ಲ್ಯಾನಿಂಗ್‌ 12 ಎಸೆತಗಳಲ್ಲಿ 2 ರನ್‌ಗೆ ಔಟಾದರು. ಎರಡನೇ ಕ್ರಮಾಂಕದಲ್ಲಿ ಬಂದ ಜೆಸ್‌ ಜೊನಾಸ್ಸೆನ್‌ ಹಾಗೂ ಶೆಫಾಲಿ ವರ್ಮಾ ಜೊತೆಗೂಡಿ 132 ರನ್‌ ನೀಡುವ ಮೂಲಕ ಗೆಲುವಿಗೆ ನೆರವಾದರು. ಜೆಸ್‌ ಜೊನಾಸ್ಸೆನ್‌ 38 ಎಸೆಗಳಲ್ಲಿ 9 ಬೌಂಡರಿ, 1 ಸಿಕ್ಸ್‌ ಬಾರಿಸಿ 61 ರನ್‌ ಹಾಗೂ ಶೆಫಾಲಿ ವರ್ಮಾ 43 ಎಸೆತಗಳಲ್ಲಿ 8 ಬೌಂಡರಿ, 4 ಸಿಕ್ಸ್‌ ಬಾರಿಸುವ ಮೂಲಕ 80 ರನ್‌ ಗಳಿಸಿದರು.

    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ತಂಡದ ಸ್ಮೃತಿ ಮಂಧಾನ 8 ರನ್‌ ಗಳಿಗೆ ಔಟ್‌ ಆಗಿ ಆರಂಭದಲ್ಲಿ ನಿರಾಸೆ ಮೂಡಿಸಿದರು. ಎರಡನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಡ್ಯಾನಿ ವ್ಯಾಟ್‌ 18 ಎಸೆತಗಳಲ್ಲಿ 21 ರನ್‌ ಗಳಿಸಿ ಔಟಾದರು. ಮೊದಲ 2 ಪಂದ್ಯಗಳಲ್ಲಿ ಭರ್ಜರಿ ಬ್ಯಾಟಿಂಗ್‌ ಮಾಡಿದ್ದ ಪೆರ್ರಿ, ಗುಜರಾತ್‌ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಇಂದು ಮತ್ತೆ ಫಾರ್ಮ್‌ಗೆ ಬಂದ ಪೆರ್ರಿ ಭರ್ಜರಿ 3 ಸಿಕ್ಸ್, 3 ಬೌಂಡರಿ ಬಾರಿಸಿ 47 ಎಸೆತಗಳಲ್ಲಿ 60 ರನ್‌ಗಳಿಸಿದರು. ಪೆರ್ರಿಗೆ ಜೊತೆಯಾದ ರಾಘ್ವಿ ಬಿಸ್ಟ್‌ 32 ಎಸೆತಗಳಲ್ಲಿ 33 ರನ್‌ ಗಳಿಸಿದರು. ಇನ್ನುಳಿದಂತೆ ರಿಚಾ ಘೋಷ್‌ 5, ಕನಿಕಾ ಅಹುಜಾ 2 ಹಾಗೂ ಜಾರ್ಜಿಯಾ 12 ರನ್‌ ಗಳಿಸಿದರು.

    ಆರ್‌ಸಿಬಿ ಪರ ಬೌಲಿಂಗ್‌ ಮಾಡಿದ ರೇಣುಕಾ ಸಿಂಗ್‌ 1 ವಿಕೆಟ್‌ ಪಡೆದರು. ಇನ್ನೂ ಡೆಲ್ಲಿ ಪರ ಬೌಲಿಂಗ್‌ ಮಾಡಿದ ಶಿಖಾ ಹಾಗೂ ಚರಣಿ ತಲಾ 2 ವಿಕೆಟ್‌ ಪಡೆದುಕೊಂಡರೆ. ಕಪ್ಪ್‌ 1 ವಿಕೆಟ್‌ ಪಡೆದುಕೊಂಡರು.ಇದನ್ನೂ ಓದಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಬೆಲೆ 6 ರೂ. ಏರಿಕೆ

  • ಚಲಿಸುತ್ತಿದ್ದ ಕಾರುಗಳ ಮೇಲೆ ಧರೆಗೆ ಉರುಳಿದ ಮರ: ಇಬ್ಬರಿಗೆ ಗಾಯ

    ಚಲಿಸುತ್ತಿದ್ದ ಕಾರುಗಳ ಮೇಲೆ ಧರೆಗೆ ಉರುಳಿದ ಮರ: ಇಬ್ಬರಿಗೆ ಗಾಯ

    ಬೆಂಗಳೂರು: ಒಣಗಿದ ಮರವೊಂದು ಧರೆಗೆ ಉರುಳಿ ಇಬ್ಬರು ಗಾಯಗೊಂಡಿರುವ ಘಟನೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ (M.Chinnaswamy Stadium) ಹತ್ತಿರ ನಡೆದಿದೆ.ಇದನ್ನೂ ಓದಿ: ಇಂದು ಕಿಚ್ಚನ ಹುಟ್ಟುಹಬ್ಬ: ಸೆಲೆಬ್ರೆಷನ್‌ಗೆ ಜಯನಗರದಲ್ಲಿ ಭರ್ಜರಿ ತಯಾರಿ

    ನಿನ್ನೆ (ಸೆ.1) ಸಂಜೆ ಒಣಗಿದ ಬೃಹತ್ ಮರವೊಂದು ನಡುರಸ್ತೆಯಲ್ಲಿ ಉರುಳಿ ಬಿದ್ದಿದೆ. ಮೂರು ಕಾರುಗಳು ಅಡಿಗೆ ಸಿಲುಕಿದ್ದು, ಇಬ್ಬರು ಗಾಯಗೊಂಡಿದ್ದಾರೆ.

    ಚಲಿಸುತ್ತಿದ್ದ ಕಾರುಗಳ ಮೇಲೆ ಮರ ಧರೆಗೆ ಉರುಳಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬಿಬಿಎಂಪಿ ಅರಣ್ಯ ಸಿಬ್ಬಂದಿಗಳು ಮರವನ್ನು ತೆರವುಗೊಳಿಸಿದ್ದು, ಸ್ಥಳಕ್ಕೆ ಕಬ್ಬನ್ ಪಾರ್ಕ್ (Cubbon Park) ಸಂಚಾರಿ ಪೊಲೀಸರು (Traffic Police) ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ನನ್ನ ಬಂಧನಕ್ಕೆ ಇಡಿ ಬಂದಿದೆ – ದೆಹಲಿ ಆಪ್ ಶಾಸಕ ಕಿಡಿ

  • ಟೀಂ ಇಂಡಿಯಾ vs ಅಫ್ಘಾನಿಸ್ತಾನ ಮೂರನೇ ಟಿ20 – ಧೋನಿ ದಾಖಲೆ ಮುರಿತಾರಾ ರೋಹಿತ್?

    ಟೀಂ ಇಂಡಿಯಾ vs ಅಫ್ಘಾನಿಸ್ತಾನ ಮೂರನೇ ಟಿ20 – ಧೋನಿ ದಾಖಲೆ ಮುರಿತಾರಾ ರೋಹಿತ್?

    ಬೆಂಗಳೂರು: ಸತತ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಟೀಂ ಇಂಡಿಯಾವು (Team India) ಅಫ್ಘಾನಿಸ್ತಾನ (Afghanistan) ವಿರುದ್ಧದ ಸರಣಿಯ ಮೂರನೇ ಟಿ20 ಪಂದ್ಯಕ್ಕೆ ತಯಾರಾಗಿದೆ. ಬುಧವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (M Chinnaswamy Stadium) ಅಂತಿಮ ಪಂದ್ಯದಲ್ಲಿ ಅಫ್ಘನ್ ತಂಡದ ವಿರುದ್ಧ ಟೀಂ ಇಂಡಿಯಾ ಸೆಣಸಲಿದೆ.

    2019ರಿಂದ ಭಾರತದಲ್ಲಿ ಆಡಿದ ಟಿ20 ಸರಣಿಯಲ್ಲಿ ಒಂದರಲ್ಲೂ ಭಾರತ ಸರಣಿಯನ್ನು ಸೋತಿಲ್ಲ. ಆಡಿದ 15 ಸರಣಿಗಳಲ್ಲಿ 13 ಸರಣಿ ವಶಪಡಿಸಿಕೊಂಡಿದೆ. ಉಳಿದ ಎರಡು ಸರಣಿ ಡ್ರಾದಲ್ಲಿ ಅಂತ್ಯಗೊಂಡಿದೆ. ಇನ್ನೂ ಮೂರನೇ ಟಿ20ಯಲ್ಲಿ ಭಾರತ ಗೆದ್ದರೆ, ಟೀಮ್ ಇಂಡಿಯಾ ಪರ ನಾಯಕನಾಗಿ 41 ಟಿ20 ಪಂದ್ಯಗಳನ್ನು ಗೆದ್ದ ಧೋನಿಯವರ ದಾಖಲೆಯನ್ನು ರೋಹಿತ್ ಮುರಿಯಲಿದ್ದಾರೆ. ಇದನ್ನೂ ಓದಿ: ಕೂಚ್ ಬೆಹಾರ್ ಟ್ರೋಫಿ ಫೈನಲ್‍ನಲ್ಲಿ ಯುವಿ ದಾಖಲೆ ಮುರಿದ ಕರ್ನಾಟಕದ ಓಪನರ್ ಪ್ರಖರ್ ಚತುರ್ವೇದಿ

    ಈ ಹಿಂದೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತವು ಆಸ್ಟ್ರೇಲಿಯಾ ವಿರುದ್ಧ 160 ರನ್‍ಗಳ ಮೊತ್ತವನ್ನು ಯಶಸ್ವಿಯಾಗಿ ರಕ್ಷಿಸಿಕೊಂಡಿತ್ತು. ಅಲ್ಲದೇ 6 ರನ್‍ಗಳಿಂದ ಗೆದ್ದಿತ್ತು.

    ಪಂದ್ಯವು ಸಂಜೆ 7 ಗಂಟೆಗೆ ಆರಂಭವಾಗಲಿದ್ದು, ಆ ಸಮಯದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಮತ್ತು ಮುಕ್ತಾಯದ ಹಂತದಲ್ಲಿ 22 ಡಿಗ್ರಿಗೆ ಇಳಿಯುವ ಸಾಧ್ಯತೆ ಇದೆ. ಇನ್ನೂ ನಗರದಲ್ಲಿ ಬೆಳಗ್ಗೆ ಹಾಗೂ ಮಧ್ಯಾಹ್ನದ ವೇಳೆಗೆ ಮೋಡಕವಿದ ವಾತಾವರಣ ಇರಲಿದ್ದು, ಮಳೆ ಬರುವ ಲಕ್ಷಣ ಇಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಯಶಸ್ಸಿನ ಶ್ರೇಯಸ್ಸು ಮಹಿ ಅಣ್ಣನಿಗೆ, CSKಗೆ ಸಲ್ಲಬೇಕು – ಚೆನ್ನೈಗೆ ಕ್ರೆಡಿಟ್‌ ಕೊಟ್ಟ ಶಿವಂ ದುಬೆ

  • ಬೆಂಗ್ಳೂರಲ್ಲಿ ಆಸ್ಟ್ರೇಲಿಯಾ-ಪಾಕಿಸ್ತಾನ ಪಂದ್ಯದ ವೇಳೆ ಹಮಾಸ್‌ ಬಾವುಟ ಪ್ರದರ್ಶನ

    ಬೆಂಗ್ಳೂರಲ್ಲಿ ಆಸ್ಟ್ರೇಲಿಯಾ-ಪಾಕಿಸ್ತಾನ ಪಂದ್ಯದ ವೇಳೆ ಹಮಾಸ್‌ ಬಾವುಟ ಪ್ರದರ್ಶನ

    ಬೆಂಗಳೂರು: ರಾಜಧಾನಿಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಇಂದು (ಶುಕ್ರವಾರ) ವಿಶ್ವಕಪ್‌ ಟೂರ್ನಿಯ ಆಸ್ಟ್ರೇಲಿಯಾ-ಪಾಕಿಸ್ತಾನ ತಂಡಗಳ ನಡುವಿನ ಪಂದ್ಯ ನಡೆಯುತ್ತಿದೆ. ಪಂದ್ಯದ ವೇಳೆ ವ್ಯಕ್ತಿಯೊಬ್ಬ ಹಮಾಸ್‌ ಬಾವುಟ (Hamas Flag) ಪ್ರದರ್ಶಿಸಿರುವ ಘಟನೆ ನಡೆದಿದೆ.

    ವ್ಯಕ್ತಿಯೊಬ್ಬ ಕ್ರೀಡಾಂಗಣದ ಒಳಭಾಗದಲ್ಲಿ ಹಮಾಸ್‌ ಬಾವುಟ ಪ್ರದರ್ಶನ ಮಾಡಿದ್ದಾನೆ. ತಕ್ಷಣ ಕಬ್ಬನ್‌ ಪಾರ್ಕ್‌ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇದನ್ನೂ ಓದಿ: ಗೋ ಬ್ಯಾಕ್ ರಿಜ್ವಾನ್; ಬೆಂಗ್ಳೂರಲ್ಲಿ ಪಾಕ್ ಕ್ರಿಕೆಟಿಗರ ವಿರುದ್ಧ ಹಿಂದೂ ಕಾರ್ಯಕರ್ತರ ಪ್ರತಿಭಟನೆ

    14 ದಿನಗಳ ಹಿಂದೆ ಹಮಾಸ್‌ ಬಂಡುಕೋರರು ಇಸ್ರೇಲ್‌ ಮೇಲೆ ದಾಳಿ ನಡೆಸಿದ್ದರು. ಅದರ ಬೆನ್ನಲ್ಲೇ ಹಮಾಸ್‌ ವಿರುದ್ಧ ಇಸ್ರೇಲ್‌ ಪ್ರಧಾನಿ ಯುದ್ಧ ಘೋಷಿಸಿದರು. ಪರಿಣಾಮ ಇಸ್ರೇಲ್‌ ಮತ್ತು ಹಮಾಸ್‌ ಬಂಡುಕೋರರ ನಡುವೆ ನಡೆಯುತ್ತಿರುವ ಯುದ್ಧ ಇನ್ನೂ ನಿಂತಿಲ್ಲ. ಈ ಸಂಘರ್ಷದಿಂದಾಗಿ ನೂರಾರು ಮಂದಿ ಸಾವಿಗೀಡಾಗಿದ್ದಾರೆ.

    ಪ್ಯಾಲೆಸ್ತೀನ್‌ನ ಗಾಜಾಪಟ್ಟಿಯಲ್ಲಿ ಪರಿಸ್ಥಿತಿ ಡೋಲಾಯಮಾನವಾಗಿದೆ. ಅಲ್ಲಿನ ಜನ ಅನ್ನ, ನೀರಿಗಾಗಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ಗಾಜಾದ ಆಸ್ಪತ್ರೆ ಮೇಲೆ ದಾಳಿ ನಡೆದಿತ್ತು. ಇಲ್ಲಿ ಕೂಡ ಹಲವಾರು ಮಂದಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: World Cup 2023: ದಾಖಲೆ ಸೃಷ್ಟಿಸಿದ ವಾರ್ನರ್‌, ಮಿಚೆಲ್‌ ಮಾರ್ಷ್‌ ಶತಕಗಳ ಜೊತೆಯಾಟ – ಪಾಕ್‌ಗೆ 368 ರನ್‌ಗಳ ಗುರಿ

    ಇಸ್ರೇಲ್-ಹಮಾಸ್‌ ಸಂಘರ್ಷ ಕುರಿತು ಜಾಗತಿಕ ನಾಯಕರು ಪ್ರತಿಕ್ರಿಯಿಸಿದ್ದಾರೆ. ಭಾರತ ಸೇರಿ ಹಲವು ದೇಶಗಳ ನಾಯಕರು ಇಸ್ರೇಲ್‌ಗೆ ಬೆಂಬಲ ಸೂಚಿಸಿದ್ದಾರೆ. ಅಮೆರಿಕ ಪ್ರಧಾನಿ ಇಸ್ರೇಲ್‌ಗೆ ರಕ್ಷಣಾ ವ್ಯವಸ್ಥೆಯ ಸಹಾಯಹಸ್ತ ಚಾಚಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾಳೆ ಬೆಂಗ್ಳೂರಿನ ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆಗಿಲ್ಲ ಅವಕಾಶ – ಯಾವೆಲ್ಲ ರಸ್ತೆಗಳು?

    ನಾಳೆ ಬೆಂಗ್ಳೂರಿನ ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆಗಿಲ್ಲ ಅವಕಾಶ – ಯಾವೆಲ್ಲ ರಸ್ತೆಗಳು?

    ಬೆಂಗಳೂರು: ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯ ನಡೆಯಲಿರುವ ಕಾರಣ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಮಾರ್ಪಾಡು ಮಾಡಲಾಗಿದೆ.

    ಈ ಬಗ್ಗೆ ಪ್ರಕಟನೆ ಹೊರಡಿಸಿರುವ ಪೊಲೀಸ್ ಇಲಾಖೆ, ಜೂನ್ 19 ರಂದು ಮದ್ಯಾಹ್ನ 2 ಗಂಟೆಯಿಂದ ರಾತ್ರಿ 12.30ರವರೆಗೆ ಈ ಎಲ್ಲಾ ರಸ್ತೆಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ. ಕ್ವೀನ್ ರಸ್ತೆಯಲ್ಲಿ, ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆಗಳಲ್ಲಿ, ಎಂ.ಜಿ ರಸ್ತೆಯಲ್ಲಿ ಕ್ವೀನ್ಸ್ ವೃತ್ತದಿಂದ ಕಾವೇರಿ ಎಂಪೋರಿಯಂ ಜಂಕ್ಷನ್ ವರೆಗೆ ರಸ್ತೆಯ ಎರಡೂ ಕಡೆಗಳಲ್ಲಿ, ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ, ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದ ವರೆಗೆ ರಸ್ತೆಯ ಎರಡೂ ಕಡೆಗಳಲ್ಲಿ, ಕಬ್ಬನ್ ರಸ್ತೆಯಲ್ಲಿ, ಸಿ.ಟಿ.ಓ ವೃತ್ತದಿಂದ ಕಾಮರಾಜ ರಸ್ತೆ ವರೆಗೆ ರಸ್ತೆಯ ಎರಡು ಕಡೆಗಳಲ್ಲಿ. ಇದನ್ನೂ ಓದಿ: ನಾಳೆ IND Vs SA ಹೈ ಓಲ್ಟೇಜ್ ಮ್ಯಾಚ್ – ಬೆಂಗ್ಳೂರಿನತ್ತ ಎಲ್ಲರ ಚಿತ್ತ

    ಕಬ್ಬನ್ ರಸ್ತೆಯಲ್ಲಿ ಕಾಮರಾಜ ರಸ್ತೆ ಜಂಕ್ಷನ್‍ನಿಂದ ಡಿಕೆನ್ಸ್ ರಸ್ತೆ ಜಂಕ್ಷನ್ ವರೆಗೆ ಬಿ.ಎಂ.ಟಿ.ಸಿ ಬಸ್‍ಗಳನ್ನು ಹೊರತುಪಡಿಸಿ ಇತರೆ ಎಲ್ಲಾ ತರಹದ ವಾಹನಗಳ ನಿಲುಗಡೆಯನ್ನು ನಿಷೇಧಿಸಿದೆ. ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ, ಕ್ಯಾಶ್ ಫಾರ್ಮಸಿ ಜಂಕ್ಷನ್‍ನಿಂದ ಅನಿಲ್ ಕುಂಬ್ಳೆ ವೃತ್ತದ ವರೆಗೆ, ಮ್ಯೂಸಿಯಂ ರಸ್ತೆಯಲ್ಲಿ, ಎಂ.ಜಿ ರಸ್ತೆಯಿಂದ ಸೆಂಟ್ ಮಾರ್ಕ್ಸ್ ರಸ್ತೆವರೆಗೆ ಹಾಗೂ ರೆಸಿಡೆನ್ಸಿ ರಸ್ತೆ ವರೆಗೆ., ಕಸ್ತೂರಬಾ ರಸ್ತೆಯಲ್ಲಿ, ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್ ವೃತ್ತದವರೆಗೆ, ಕಬ್ಬನ್‍ಪಾರ್ಕ್ ಒಳಭಾಗದ ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಫೌಟೇನ್ ರಸ್ತೆ. ಲ್ಯಾವೆಲ್ಲಿ ರಸ್ತೆಯಲ್ಲಿ ಕ್ವೀನ್ಸ್ ವೃತ್ತದಿಂದ ವಿಠಲ್ ಮಲ್ಯ ಜಂಕ್ಷನ್ ವರೆಗೆ, ವಿಠಲ್ ಮಲ್ಯ ರಸ್ತೆ, ಸಿದ್ದಲಿಂಗಯ್ಯ ವೃತ್ತದಿಂದ ಬಿಷಪ್ ಕಾಟನ್ ಬಾಲಕಿಯರ ಶಾಲೆಯವರೆಗೆ ವಾಹನ ನಿಲುಗಡೆ ನಿಷೇಧವಿದೆ. ಇದನ್ನೂ ಓದಿ:  ಏಕದಿನ ಕ್ರಿಕೆಟ್‍ನಲ್ಲಿ ದಾಖಲೆಯ 498 ರನ್ ಸಿಡಿಸಿದ ಇಂಗ್ಲೆಂಡ್ – ಮೈದಾನದೆಲ್ಲೆಡೆ ಸಿಕ್ಸರ್, ಬೌಂಡರಿಗಳ ಅಬ್ಬರ

    ಜೊತೆಗೆ ಪಂದ್ಯ ವೀಕ್ಷಣೆ ಮಾಡಲು ಬರುವ ಸಾರ್ವಜನಿಕರ ವಾಹನಗಳಿಗೆ ಬದಲಿ ವ್ಯವಸ್ಥೆ ಮಾಡಿಕೊಡಲಾಗಿದೆ. ಈಗಾಗಲೇ ಮೆಟ್ರೋ ಸಮಯವನ್ನೂ ವಿಸ್ತರಿಸಲಾಗಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ 5ನೇ ಟಿ20 ಪಂದ್ಯ ಅತ್ಯಂತ ರೋಚಕತೆಯಿಂದ ಕೂಡಿದ್ದು, 5ನೇ ಪಂದ್ಯ ಗೆದ್ದವರು ಸರಣಿ ಜಯಿಸಲಿದ್ದಾರೆ.

    Live Tv