Tag: ಎಂ.ಜಿ ರಸ್ತೆ

  • Welcome 2025 | ಸಂಭ್ರಮಾಚರಣೆ ವೇಳೆ ಮಹಿಳೆಯೊಂದಿಗೆ ಅಸಭ್ಯ ವರ್ತನೆ – ಯುವಕನಿಗೆ ಬಿತ್ತು ಗೂಸಾ

    Welcome 2025 | ಸಂಭ್ರಮಾಚರಣೆ ವೇಳೆ ಮಹಿಳೆಯೊಂದಿಗೆ ಅಸಭ್ಯ ವರ್ತನೆ – ಯುವಕನಿಗೆ ಬಿತ್ತು ಗೂಸಾ

    ಬೆಂಗಳೂರು: ಕ್ಷಣ ಕಳೆಯುವಷ್ಟರಲ್ಲಿ 2025ರ ಹೊಸ ವರ್ಷ ಬಂದೇ ಬಿಟ್ಟಿದೆ. ಅದರಲ್ಲೂ ಬೆಂಗಳೂರಿನ ಜನ ಅದ್ಧೂರಿಯಾಗಿ ಹೊಸ ವರ್ಷವನ್ನ ವೆಲ್‌ಕಮ್‌ ಮಾಡಿಕೊಂಡಿದ್ದಾರೆ. ಕೋರಮಂಗಲದ ಸ್ಟ್ರೀಟ್‌ನಲ್ಲಿ ಸಂಭ್ರಮಾಚರಣೆ ಜೋಶ್‌ನಲ್ಲಿ ಯುವಕನೊಬ್ಬ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದೆ.

    ಯುವಕನ ವರ್ತನೆಯಿಂದ ರೊಚ್ಚಿಗೆದ್ದ ಮಹಿಳೆ ಕಪಾಳಕ್ಕೆ ಬಾರಿಸಿದ್ದಾರೆ, ಅಲ್ಲದೇ ಯುವಕನನ್ನ ಹಿಡಿದು ದಬ್ಬಿದ್ದಾರೆ. ಪೊಲೀಸರು ಸ್ಥಳಕ್ಕೆ ಬರುತ್ತಿದ್ದಂತೆ ಯುವಕ ಜಾಗ ಖಾಲಿ ಮಾಡಿದ್ದಾನೆ.

    ಹೊಸ ವರ್ಷಕ್ಕೆ (New Year) ಭಾರತ ಕಾಲಿಟ್ಟಿದ್ದು, ಕರ್ನಾಟಕ ಜನತೆ 2025ನ್ನು ಕುಣಿದು ಕುಪ್ಪಳಿಸಿ ಚಿಯರ್ಸ್ ಹೇಳಿ ಸ್ವಾಗತಿಸಿದ್ದಾರೆ. ಬೆಂಗಳೂರಿನಲ್ಲೂ ಯುವಕ, ಯುವತಿಯರು ರಸ್ತೆಗಳಲ್ಲಿ ಕುಣಿದು ಕುಪ್ಪಳಿಸಿದರು. ಪರಸ್ಪರ ಹೊಸ ವರ್ಷದ ಶುಭಾಶಯ ಕೋರಿದರು. ಹೊಸ ವರ್ಷದ ಸೆಂಟರ್ ಆಫ್ ಅಟ್ರ್ಯಾಕ್ಷನ್ ಕೇಂದ್ರಗಳಾದ ಬೆಂಗಳೂರಿನ (Bengaluru) ಎಂ.ಜಿ ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್‍, ಇಂದಿರಾ ನಗರ, ಕೋರಮಂಗಲ ವರ್ಣರಂಜಿತವಾಗಿ ಮಿರಿ ಮಿರಿ ಮಿಂಚುತ್ತಿದ್ದವು.

    ಮೊಬೈಲ್‌ಗಳಂತೂ (Mobile) ಫುಲ್‌ ಬ್ಯೂಸಿಯಾಗಿದ್ದವು. ತಮ್ಮ ಆತ್ಮೀಯರಿಗೆ, ಸ್ನೇಹಿತರಿಗೆ, ಹಿರಿಯರಿಗೆ, ಕಿರಿಯರಿಗೆ ಹೊಸ ವರ್ಷದ ಶುಭಾಶಯದ ಸಂದೇಶಗಳನ್ನು ಕಳುಹಿಸುವುದರಲ್ಲಿ ಜನರು ತಲ್ಲಿನರಾಗಿದ್ದರು. ಪರಿಣಾಮ ಹಲವು ಸ್ಥಳಗಳಲ್ಲಿ ನೆಟ್‌ವರ್ಕ್‌ ಜಾಮ್‌ ಆಗಿತ್ತು. ನೆಟ್‌ವರ್ಕ್ ಒತ್ತಡದಿಂದ ಮೆಸೇಜ್‌ ತಡವಾಗಿ ತಲುಪುತ್ತಿದ್ದವು.

  • ಸರ್ಕಾರ ನಡೀತಿರೋದೆ ಮದ್ಯಪ್ರಿಯರಿಂದ, ಆದ್ರೂ ಏನ್‌ ಅನ್ಯಾಯ ಗುರು? – ಯುವಕನ ಮಾತು

    ಸರ್ಕಾರ ನಡೀತಿರೋದೆ ಮದ್ಯಪ್ರಿಯರಿಂದ, ಆದ್ರೂ ಏನ್‌ ಅನ್ಯಾಯ ಗುರು? – ಯುವಕನ ಮಾತು

    ಬೆಂಗಳೂರು: 2025ರ ಹೊಸ ವರ್ಷ (New Year 2025) ಸ್ವಾಗತಕ್ಕೆ ಕೆಲವೇ ನಿಮಿಷಗಳು ಬಾಕಿಯಿದೆ. ರಾಜಧಾನಿ ಬೆಂಗಳೂರಿನಲ್ಲಿ ಸಂಭ್ರಮಾಚರಣೆಗೆ ನೆರೆದಿರುವ ಜನಸಮೂಹ 2024ಕ್ಕೆ ಗುಡ್‌ಬೈ ಹೇಳಿ 2025ಕ್ಕೆ ಹಾಯ್ ಹೇಳಲು ತುದಿಗಾಲಲ್ಲಿ ನಿಂತಿದ್ದಾರೆ. ಕೆಲವರು ಆಗಲೇ ಎಣ್ಣೆ ಹೊಡೆದು ಜೋಶ್‌ನಲ್ಲಿ ತೇಲಾಡುತ್ತಿದ್ದಾರೆ.

    ಈ ನೆಡುವೆ ಯುವ ಸಮೂಹ ʻಪಬ್ಲಿಕ್‌ ಟಿವಿʼ ಜೊತೆಗೆ ಮಾತನಾಡಿದ್ದು, ಮದ್ಯದ ದರ ಏರಿಕೆ ಮಾಡಿರುವುದಕ್ಕೆ ಆಕ್ರೋಶ ಹೊರಹಾಕಿದೆ. ಒಂದೆಡೆ ಅಭಿಮಾನಿಗಳು ಆರ್‌ಸಿಬಿ… ಆರ್‌ಸಿಬಿ… ಈ ಸಲ ಕಪ್‌ ನಮ್ದೇ ಅಂತ ಜೈಕಾರ ಹಾಕುತ್ತಿದ್ದರೆ, ಮತ್ತೊಂದೆಡೆ, ಮದ್ಯದ ದರ ಏರಿಕೆಯಾಗಿದೆ ಎಂದು ಬೇಸರ ಹೊರಹಾಕಿದ್ದಾರೆ.

    ಇದೇ ವೇಳೆ ಯುವಕನೊಬ್ಬ ಮಾತನಾಡುತ್ತಾ, ಮದ್ಯಪ್ರಿಯರಿಗೆ ಬಂದಿರುವ ಕಷ್ಟ ಏನಂದ್ರೆ? ಗುರು… ಅಲ್ಲಿ ಮಾರೋದು 500 ರೂಪಾಯಿ, ಇಲ್ಲಿ ಮಾರೋದು 300 ರೂಪಾಯಿ, ಆಚೆ ಹೋದ್ರೆ 150 ರೂಪಾಯಿ… ಏನ್‌ ಅನ್ಯಾಯ ಗುರು..? ಸರ್ಕಾರ ನಡೀತಿರೋದೇ ಮದ್ಯಪ್ರಿಯರಿಂದ ಆದ್ರೆ, ಎಣ್ಣೆ ರೇಟ್‌ ಜಾಸ್ತಿ ಮಾಡಿದ್ದಾರೆ, ನಾವೇನ್‌ ಹೊರದೇಶದಿಂದ ಬಂದವರಾ ಎಂದೆಲ್ಲಾ ಅಲವತ್ತುಕೊಂಡಿದ್ದಾರೆ.

  • ಕೆಲವೇ ಕ್ಷಣಗಳಲ್ಲಿ ಬಂದೇ ಬಿಡ್ತು ಹೊಸ ವರ್ಷ – ಹೇಗಿದೆ ಯುವಜನರ ಜೋಶ್‌?

    ಕೆಲವೇ ಕ್ಷಣಗಳಲ್ಲಿ ಬಂದೇ ಬಿಡ್ತು ಹೊಸ ವರ್ಷ – ಹೇಗಿದೆ ಯುವಜನರ ಜೋಶ್‌?

    ಬೆಂಗಳೂರು: 2025ರ ಹೊಸ ವರ್ಷ (New Year 2025) ಸ್ವಾಗತಕ್ಕೆ ಇಡೀ ಜಗತ್ತೇ ಸಜ್ಜಾಗಿದೆ. ಹೊಸ ಹುರುಪಿನೊಂದಿಗೆ ಹೊಸ ವರ್ಷವನ್ನು ಸ್ವಾಗತಿಸಲು ರಾಜ್ಯ ರಾಜಧಾನಿಯೂ ಸಜ್ಜಾಗಿದೆ. 2024ಕ್ಕೆ ಗುಡ್‌ಬೈ ಹೇಳಿ 2025ಕ್ಕೆ ಹಾಯ್ ಹೇಳಲು ಸಿಲಿಕಾನ್ ಸಿಟಿ ಮಂದಿ ಕಾತರರಾಗಿದ್ದಾರೆ.

    ಈಗಾಗಲೇ ಬೆಂಗಳೂರು ಸಂಭ್ರಮಾಚರಣೆಯ ಮೂಡ್‌ನಲ್ಲಿದೆ.. ಹೊಸ ವರ್ಷದ ಹಾಟ್‌ಸ್ಪಾಟ್‌ಗಳಾದ ಎಂ.ಜಿ ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್‌, ಕೋರಮಂಗಲ, ಇಂದಿರಾ ನಗರ ಕಲರ್‌ಫುಲ್ ಆಗಿವೆ.. ಝಗಮಗ ಎನ್ನುತ್ತಿವೆ.. ಸಹಸ್ರ ಸಹಸ್ರ ಮಂದಿ ಕುಣಿದು ಕುಪ್ಪಳಿಸಲು.. ಗೆಳೆಯ ಗೆಳೆತಿಯರ ಜೊತೆ ಸಂಭ್ರಮಿಸಲು ಸೆಲೆಬ್ರೆಷನ್ ಸ್ಟಾಟ್‌ಗಳಿಗೆ ಬರ್ತಿದ್ದಾರೆ.

    ರಾತ್ರಿ 12 ಗಂಟೆ ಹೊತ್ತಿಗೆ ಎಂ.ಜಿ ರೋಡ್, ಬ್ರಿಗೇಡ್ ರೋಡ್‌ನಲ್ಲಿ 2 ಲಕ್ಷ ಮಂದಿ ಸೇರುವ ನಿರೀಕ್ಷೆ ಇದೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಮಹಿಳೆಯರಿಗಾಗಿ 40 ಸೇಫ್ಟಿ ಐಲ್ಯಾಂಡ್, ವಾಚ್ ಟವರ್ ನಿರ್ಮಿಸಲಾಗಿದೆ. ಮಧ್ಯರಾತ್ರಿ 1 ಗಂಟೆ ವರೆಗೆ ಮಾತ್ರ ಸಂಭ್ರಮಾಚರಣೆಗೆ ಅವಕಾಶ ನೀಡಲಾಗಿದೆ.

    ಮಹಿಳೆಯರ ಸುರಕ್ಷತೆಗಾಗಿ ಪ್ರತಿ ಮೆಟ್ರೋ ಕೋಚ್‌ನಲ್ಲೂ ಭದ್ರತಾ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ. ಫ್ಲೈಓವರ್‌ಗಳನ್ನು ಮುಂಜಾಗ್ರತಾ ಕ್ರಮವಾಗಿ ಬಂದ್ ಮಾಡಲಾಗಿದೆ.

  • New Year 2025: ಹೊಸ ವರ್ಷಾಚರಣೆಗೆ ಕ್ಷಣಗಣನೆ – ನ್ಯೂ ಇಯರ್ ಸ್ವಾಗತಕ್ಕೆ ಸಜ್ಜಾದ ಬೆಂಗಳೂರು

    New Year 2025: ಹೊಸ ವರ್ಷಾಚರಣೆಗೆ ಕ್ಷಣಗಣನೆ – ನ್ಯೂ ಇಯರ್ ಸ್ವಾಗತಕ್ಕೆ ಸಜ್ಜಾದ ಬೆಂಗಳೂರು

    – ಎಂ.ಜಿ. ರೋಡ್, ಬ್ರಿಗೇಡ್ ರೋಡ್ ಕಲರ್‌ಫುಲ್

    ಬೆಂಗಳೂರು: ನ್ಯೂ ಇಯರ್ ಸೆಲೆಬ್ರೇಷನ್‌ಗೆ ಕ್ಷಣಗಣನೆ ಶುರುವಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈಗಾಗಲೇ ನ್ಯೂಇಯರ್ ಜೋಶ್ ಹೆಚ್ಚಾಗಿದೆ. ಜನರು ಪಾರ್ಟಿ ಮೂಡ್‌ನಲ್ಲಿದ್ರೆ, ಎಂಜಿ ರೋಡ್ ಮತ್ತು ಬ್ರಿಗೇಡ್ ರೋಡ್ ಕಲರ್ ಕಲರ್ ಲೈಟಿಂಗ್‌ನೊಂದಿಗೆ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ.

    ಸಿಲಿಕಾನ್ ಸಿಟಿಯಲ್ಲಿ ನ್ಯೂಇಯರ್ ಸಂಭ್ರಮಾಚರಣೆಯ ಹಾಟ್ ಸ್ಪಾಟ್‌ಗಳಾದ ಬ್ರಿಗೇಡ್ ರೋಡ್, ಎಂ.ಜಿ. ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲದಲ್ಲಿ ಸಿದ್ಧತೆ ನಡೆದಿದೆ.

    ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸ್ ಕಣ್ಗಾವಲು ಹಾಕಲಾಗಿದೆ. ಕುಡಿದು ಟೈಟ್ ಆಗೋರಿಗೆ ಬೆಡ್ ವ್ಯವಸ್ಥೆ ಮಾಡಲಾಗಿದೆ. ಹೆಣ್ಣುಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ರಾಣಿ ಚೆನ್ನಮ್ಮ ಪಡೆ ಕೂಡ ಕಾರ್ಯ ನಿರ್ವಸಲಿದೆ. 12 ಮಹಿಳಾ ಸೇಫ್ಟಿ ಐಲ್ಯಾಂಡ್, ಹೆಲ್ತ್ ಕೇರ್, ವಾಚ್ ಟವರ್ ನಿಯೋಜನೆ ಮಾಡಲಾಗಿದೆ. ಜೊತೆಗೆ ಭದ್ರತೆಗೆ ಅಂತ ಎಂಜಿ ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್ ಸುತ್ತಮುತ್ತ ಎರಡು ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ. ಅದೇ ರೀತಿ ಕೋರಮಂಗಲದಲ್ಲಿಯೂ ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ನಿಯೋಜನೆಗೆ ನೀಲಿ ನಕ್ಷೆ ಹಾಕಿಕೊಂಡಿದ್ದಾರೆ. ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ. 180 ಕ್ಯಾಮೆರಾಗಳನ್ನ ಹೆಚ್ಚುವರಿಯಾಗಿ ಅಳವಡಿಸಲಾಗಿದೆ. ಸಿಸಿಟಿವಿ ಮಾನಿಟರಿಂಗ್‌ಗೆ ಮಿನಿ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ.

    ಬೆಂಗಳೂರಿನ ಎಲ್ಲಾ ಫ್ಲೈಓವರ್‌ಗಳು ರಾತ್ರಿ 10 ಗಂಟೆಯ ನಂತರ ಬಂದ್ ಆಗಲಿವೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸಬಾರದೆಂದು ಫ್ಲೈಓವರ್‌ಗಳು ಬಂದ್ ಆಗಲಿವೆ. ಏರ್‌ಪೋರ್ಟ್ ರೋಡ್ ಹೊರತುಪಡಿಸಿ ಆನಂದ್‌ರಾವ್ ವೃತ್ತ, ಮೈಸೂರು ರಸ್ತೆ, ಎಲೆಕ್ಟ್ರಾನಿಕ್ ಸಿಟಿ, ಯಶವಂತಪುರ ಫ್ಲೈಓವರ್‌ ಸೇರಿ ಎಲ್ಲಾ ಫ್ಲೈಓವರ್‌ಗಳು ಕ್ಲೋಸ್ ಮಾಡಲಾಗುತ್ತದೆ. ಡ್ರಂಕ್ & ಡ್ರೈವ್‌ ಕಾರ್ಯಾಚರಣೆಯನ್ನು ಕೈಗೊಳ್ಳಲಾಗುತ್ತದೆ.

    ಜನರು ನ್ಯೂಇಯರ್ ಸೆಲೆಬ್ರೆಷನ್‌ನಲ್ಲಿ ಭಾಗಿ ಆಗಿ ಮತ್ತೆ ವಾಪಸ್ ತೆರಳಲು ಮೆಟ್ರೋ, ಬಿಎಂಟಿಸಿ ಬಸ್‌ಗಳ ವ್ಯವಸ್ಥೆ ಇರಲಿದೆ. ರಾತ್ರಿ 2 ಗಂಟೆಯವರೆಗೆ ಮೆಟ್ರೋ ರೈಲು ಸಂಚರಿಸಲಿದೆ. ಎಂಜಿ ರೋಡ್‌ನ ಮೆಟ್ರೋ ಸ್ಟೇಷನ್ ಬಂದ್ ಆಗಲಿದೆ. ಟ್ರಿನಿಟಿ ಹಾಗೂ ಕಬ್ಬನ್‌ಪಾರ್ಕ್ ಮೆಟ್ರೋ ಸ್ಟೇಷನ್‌ಗಳು ಓಪನ್ ಇರಲಿವೆ. ಇತ್ತ ಎಂ.ಜಿ. ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚಿನ ಸಾರಿಗೆ ಸೌಲಭ್ಯ ಒದಗಿಸಲಾಗಿದೆ. ನಗರದ ಕೆಲ ಏರಿಯಾಗಳಿಗೆ ಎಂಜಿ ರೋಡ್‌ನಿಂದ ಬಸ್ ಸೌಲಭ್ಯ ಇರಲಿದೆ.

  • ನ್ಯೂ ಇಯರ್ ಸೆಲೆಬ್ರೇಷನ್‌ಗೆ ಬಿತ್ತು ಕಂಡೀಷನ್‌ – ಡ್ರಂಕ್‌ & ಡ್ರೈವ್‌ ಮಾಡಿ ತಗ್ಲಾಕೊಂಡ್ರೆ ಲೈಸೆನ್ಸ್‌ ರದ್ದು!

    ನ್ಯೂ ಇಯರ್ ಸೆಲೆಬ್ರೇಷನ್‌ಗೆ ಬಿತ್ತು ಕಂಡೀಷನ್‌ – ಡ್ರಂಕ್‌ & ಡ್ರೈವ್‌ ಮಾಡಿ ತಗ್ಲಾಕೊಂಡ್ರೆ ಲೈಸೆನ್ಸ್‌ ರದ್ದು!

    – ಮಧ್ಯರಾತ್ರಿ 1 ಗಂಟೆ ತನಕ ಹೊಸ ವರ್ಷಾಚರಣೆಗೆ ಅವಕಾಶ
    – ಡಿ.31ರ ರಾತ್ರಿ ನಗರ ಫ್ಲೈಓವರ್‌ಗಳು ಬಂದ್‌

    ಬೆಂಗಳೂರು: ಹೊಸವರ್ಷದ ಸಂಭ್ರಮದ (New Year Celebration) ನಡುವೆ ಯಾವುದೇ ಅವಘಢ ಸಂಭವಿಸಿದಂತೆ ಎಚ್ಚರ ವಹಿಸುವ ನಿಟ್ಟಿನಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ಪೊಲೀಸರು ಆಯಾ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಅಂತ ನಗರ ಪೊಲೀಸ್ ಆಯುಕ್ತ (Bengaluru Police Commissioner) ದಯಾನಂದ್‌ ತಿಳಿಸಿದ್ದಾರೆ.

    ಬೆಂಗಳೂರಿನಲ್ಲಿಂದು (Bengaluru) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗಾಗಲೇ ಸಂಬಂಧಪಟ್ಟ ಬಿಬಿಎಂಪಿ, ಅಗ್ನಿಶಾಮಕ ದಳ, ಬೆಸ್ಕಾಂ, ಬಿಎಂಟಿಸಿ, ನಮ್ಮ ಮೆಟ್ರೋ ಇಲಾಖೆಗಳೊಂದಿಗೆ 2-3 ಸುತ್ತಿನ ಸಭೆ ಮಾಡಲಾಗಿದೆ. ಇಂದಿರಾನಗರ, ಕೋರಮಂಗಲ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ, ಅತಿಹೆಚ್ಚು ಜನ ಸೇರುವ ಎಮ್‌.ಜಿ ರಸ್ತೆ, ಬಿಗ್ರೇಡ್ ರಸ್ತೆಯಲ್ಲಿ ಹೆಚ್ಚಿನ ಭದ್ರತೆ, ಮಹಿಳೆಯರಿಗೆ ಮಹಿಳಾ ಸೇಫ್ಟಿ, ಹೈ ಲ್ಯಾಂಡ್, ವಾಚ್ ಟವರ್, ಶ್ವಾನ ದಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಡಿ.ಕೆ ಸುರೇಶ್ ತಂಗಿ ಅಂತ ಹೇಳ್ಕೊಂಡು ವಂಚನೆ ಕೇಸ್ -ಆರೋಪಿ ಐಶ್ವರ್ಯ ಗೌಡ, ಪತಿ ಹರೀಶ್‌ ಅರೆಸ್ಟ್

    ಅಲ್ಲದೇ ಡ್ರೋನ್‌ ಕ್ಯಾಮೆರಾ ನಿಯೋಜಿಸಿದ್ದು, ಹೆಚ್ಚಿನ ಸಂಖ್ಯೆಯ ಸಿಸಿಟಿವಿ ಕ್ಯಾಮೆರಾಗಳನ್ನೂ ಅಳವಡಿಸಲಾಗಿದೆ. ಬ್ರಿಗೇಡ್‌ ರೋಡ್‌ಗೆ ಕಾವೇರಿ ಎಪೋರಿಯಂನಿಂದ ಮಾತ್ರ ಎಂಟ್ರಿ ಇರಲಿದೆ. ಜೊತೆಗೆ ಬಾರ್‌ ಅಂಡ್ ರೆಸ್ಟೋರೆಂಟ್ ಮಾಲೀಕರ ಜೊತೆ ಸಭೆ ಮಾಡಿದ್ದು, ಮಧ್ಯರಾತ್ರಿ 1 ಗಂಟೆ ತನಕ ಹೊಸ ವರ್ಷ ಆಚರಣೆಗೆ ಸಮಯ ನಿಗದಿ ಮಾಡಲಾಗಿದೆ. ಇನ್ನೂ ನಗರದ ಹೊರವಲಯದ ರೇವ್ ಪಾರ್ಟಿಗಳ ಮೇಲೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ಅನಧಿಕೃತ ವಾಗಿ ಪಾರ್ಟಿ ಆಯೋಜನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

    ಇತ್ತ 11 ಗಂಟೆ ನಂತರ ಎಮ್‌.ಜಿ ರಸ್ತೆ ಮೆಟ್ರೋ ಸ್ಟೇಷನ್ ಅನ್ನೂ ಮುಚ್ಚಲಾಗುವುದು ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಹಿನ್ನಲೆ ಕೇವಲ ಬಂದು ಇಳಿಯುವುದಕ್ಕೆ ಮಾತ್ರ ಅವಕಾಶ ಇದ್ದು, ವಾಪಸ್ಸು ಹೋಗಲು ಟ್ರಿನಿಟಿ ಸರ್ಕಲ್ ಅಥವಾ ಕಬ್ಬನ್ ಪಾರ್ಕ್‌ಗೆ ಹೋಗಿಯೇ ಮೆಟ್ರೋ ಹತ್ತಬೇಕು. ಇನ್ನೂ ಅನುಚಿತ ವರ್ತನೆ ತೋರುವವರ ಬಗ್ಗೆ ಕೂಡ ಹೆಚ್ಚು ಗಮನ ಹರಿಸೋದಾಗಿ ಕಮಿಷನರ್ ಹೇಳಿದ್ದಾರೆ. ಬೈಕ್‌ಗಳಲ್ಲಿ ಪದೇ ಪದೇ ಓಡಾಟ.. ಹೊಸ ವರ್ಷ ವಿಶ್ ಮಾಡುವ ಬರದಲ್ಲಿ ಕೂಗಾಟ.. ಪೀಪಿಗಳನ್ನ ಊದುವುದು, ವಿಚಿತ್ರ ರೀತಿಯ ಮಾಸ್ಕ್ ಹಾಕಿಕೊಂಡು ತೊಂದರೆ ಮಾಡುವವರ ವಿರುದ್ಧ ಕ್ರಮದ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಶಿವಣ್ಣನ ಮನೆ ನಾಯಿ ʻನೀಮೋʼ ನಿಧನ – ಕರುಳು ಹಿಂಡುವ ಪತ್ರ ಬರೆದ ಗೀತಾ ಶಿವರಾಜ್‌ಕುಮಾರ್

    ಟ್ರಾಫಿಕ್‌ ನಿಯಂತ್ರಣಕ್ಕೆ ಮಾರ್ಗ ಬದಲಾವಣೆ:
    ಹೊಸವರ್ಷದ ದಿನ ಟ್ರಾಫಿಕ್ ನಿಯಂತ್ರಣಕ್ಕಾಗಿ ಕೆಲ ಮಾರ್ಗಗಳ ಬದಲಾವಣೆ ಕೂಡ ಮಾಡಲಾಗಿದೆ. ಎಮ್‌ಜಿ ರೋಡ್ ಬ್ರಿಗೆಡ್ ರೋಡ್ ಬಳಿ ಯಾವುದೇ ಪಾರ್ಕಿಂಗ್ ಇರೋದಿಲ್ಲ. ಎಮ್‌.ಜಿ ರಸ್ತೆ, ಬ್ರಿಗೇಡ್, ಇಂದಿರಾನಗರ, ಕೋರಮಂಗಲ ಬಳಿ ಪಾರ್ಕಿಂಗ್‌ಗೆ ಪ್ರತ್ಯೇಕವಾಗಿ ಸೂಚನೆ ನೀಡಲಾಗಿದೆ. ಎಲ್ಲಾ ರೀತಿಯ ಫ್ಲೈ ಓವರ್‌ಗಳು ಕ್ಲೋಸ್ ಇರಲಿವೆ. ನೋ ಪಾರ್ಕಿಂಗ್‌ಗಳಲ್ಲಿ ಪಾರ್ಕ್ ಮಾಡಿದ್ರೆ ಗಾಡಿಗಳನ್ನ ಟೋ ಮಾಡಲಾಗುತ್ತೆ. ಆ ದಿನ ರಾತ್ರಿಯಿಡೀ ಟೋಯಿಂಗ್ ವಾಹನಗಳು ಆಕ್ಟೀವ್ ಆಗಿ ಇರಲಿವೆ. ಅಲ್ಲಲ್ಲಿ ಡ್ರಾಪ್ ಪಿಕಪ್ ಬಗ್ಗೆ ಸೂಚನಾಫಲಕ ಹಾಕಲಾಗುತ್ತೆ.

    ಪೊಲೀಸ್ ಸಿಬ್ಬಂದಿ ಕೂಡ ಸ್ಥಳದಲ್ಲಿ ಮಾಹಿತಿ ನೀಡಲಿದ್ದಾರೆ. ಓಲಾ, ಉಬರ್‌ ಸಂಸ್ಥೆಗಳೊಂದಿಗೆ ಸಭೆ ನಡೆಸಿ ಅವರಿಗೂ ಡ್ರಾಪ್, ಪಿಕಪ್ ಪಾಯಿಂಟ್‌ಗಳ ಬಗ್ಗೆ ಮಾಹಿತಿ ನೀಡಲಾಗಿದೆ. ಇದರ ಮಧ್ಯೆ ಹೆಚ್ಚಿನ ಹಣ ಕೇಳುವ ಓಲಾ, ಉಬರ್‌ ಮೇಲೆ ಕ್ರಮ ಕೈಗೊಳ್ಳಲಾಗುತ್ತೆ. ಯಾರೂ ಕೂಡ ಕುಡಿದು ವಾಹನಗಳನ್ನ ಓಡಿಸಬಾರದು ಅಂತ ಸಂಚಾರಿ ಜಂಟಿ ಪೊಲೀಸ್ ಆಯುಕ್ತ ಎಮ್.ಎನ್ ಅನುಚೇತ್ ಎಚ್ಚರಿಕೆ ನೀಡಿದ್ದಾರೆ. ಒಂದು ವೇಳೆ ಕುಡಿದು ವಾಹನ ಚಲಾಯಿಸಿದ್ರೆ, ವಾಹನ ಪರವಾನಗಿಯನ್ನೇ ರದ್ದುಗೊಳಿಸಲಾಗುತ್ತದೆ ಎಂದೂ ಸಹ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಮುಂಬೈ | ಮರಾಠಿ ನಟಿ ಉರ್ಮಿಳಾ ಕಾರು ಹರಿದು ಓರ್ವ ಕಾರ್ಮಿಕ ಸಾವು

  • ಶಾಂತಿ, ಪ್ರೀತಿಯ ಸಂದೇಶ ಸಾರುವ ಕ್ರಿಸ್ಮಸ್‌ ಹಬ್ಬ – ಬೆಂಗ್ಳೂರಿನಲ್ಲಿದೆ ದೇಶದ ಅತಿದೊಡ್ಡ ಕ್ರಿಸ್ಮಸ್‌ ಟ್ರೀ

    ಶಾಂತಿ, ಪ್ರೀತಿಯ ಸಂದೇಶ ಸಾರುವ ಕ್ರಿಸ್ಮಸ್‌ ಹಬ್ಬ – ಬೆಂಗ್ಳೂರಿನಲ್ಲಿದೆ ದೇಶದ ಅತಿದೊಡ್ಡ ಕ್ರಿಸ್ಮಸ್‌ ಟ್ರೀ

    – ಕ್ರಿಸ್ಮಸ್‌ ಹಬ್ಬದ ಮಹತ್ವವೇನು

    ಜಗತ್ತಿಗೆ ಶಾಂತಿ, ಪ್ರೀತಿಯ ಸಂದೇಶ ಸಾರಿದ ದೇವಪುತ್ರ ಯೇಸುವಿನ ಜನ್ಮದಿನದ ಆಚರಣೆಯೇ ಕ್ರಿಸ್ಮಸ್ (Christmas). ಮನುಷ್ಯ ಎಲ್ಲರಿಗೂ ಉಪಯುಕ್ತನಾಗಬೇಕು, ಎಲ್ಲರಲ್ಲಿಯೂ ಒಂದಾಗಿ ಬಾಳಬೇಕು ಮತ್ತು ಒಳ್ಳೆಯದನ್ನ ಕೇಳುವಂತವನಾಗಿರಬೇಕು ಎನ್ನುವುದೇ ಹಬ್ಬದ ಮುಖ್ಯ ಧ್ಯೇಯ.

    ಪ್ರತಿ ವರ್ಷ ಡಿಸೆಂಬರ್‌ 25ರಂದು ದೇಶಾದ್ಯಂತ ಕ್ರೈಸ್ತ ಬಾಂಧವರು ಕ್ರಿಸ್ಮಸ್‌ ಹಬ್ಬವನ್ನು (Christmas Festival) ಆಚರಿಸುತ್ತಾರೆ. ವಿವಿಧ ಚರ್ಚ್‌ಗಳಲ್ಲಿ ಯೇಸುವಿಗೆ ವಿಶೇಷ ಪೂಜೆ ಸಲ್ಲಿಸುವ ಜೊತೆ ಭಾರೀ ಗಾತ್ರದ ಕೇಕ್‌ಗಳನ್ನು ಕತ್ತರಿಸುತ್ತಾರೆ. ಪ್ರಮುಖ ನಗರದ ಮಾಲ್‌ಗಳಲ್ಲಿಯೂ ವಿಶೇಷ ಕ್ರಿಸ್ಮಸ್‌ ದೀಪಾಲಂಕಾರ, ಕ್ರಿಸ್ಮಸ್‌ ಟ್ರೀ (Christmas Tree) ಸ್ಥಾಪಿಸಿ ಹಬ್ಬದ ಸಂಭ್ರಮವನ್ನು ಇಮ್ಮಡಿಗೊಳಿಸುತ್ತಾರೆ. ಇದನ್ನೂ ಓದಿ: ಹೊಸವರ್ಷ ಆಚರಣೆ – ಮಹಿಳೆಯರ ರಕ್ಷಣೆಗೆ ಮುಂದಿನ ವಾರದಲ್ಲಿ ಗೈಡ್‌ಲೈನ್ಸ್‌: ಬೆಂಗ್ಳೂರು ಪೊಲೀಸ್‌

    ಈ ಬಾರಿ ಏನು ವಿಶೇಷ?
    ಈ ಬಾರಿಯ ಕ್ರಿಸ್ಮಸ್‌ ಹಬ್ಬಕ್ಕೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿರುವ ಫೀನಿಕ್ಸ್‌ ಮಾಲ್‌ ಆಫ್‌ ಏಷ್ಯಾದಲ್ಲಿ ದೇಶದಲ್ಲೇ ಅತಿದೊಡ್ಡ 100 ಅಡಿ ಎತ್ತರದ ಕ್ರಿಸ್ಮಸ್‌ ಟ್ರೀಯನ್ನು ಅನಾವರಣಗೊಳಿಸಲಾಗಿದೆ. ಇದರೊಂದಿಗೆ ನೀರು ಹಾಗೂ ಸಂಗೀತ ಕಾರಂಜಿಯನ್ನೂ ಆಯೋಜಿಸಲಾಗಿದೆ. ಇದರ ಪಕ್ಕದಲ್ಲೇ ಸಾಂತಾಕ್ರೂಸ್‌ ವೇಶದಲ್ಲಿರುವ ವ್ಯಕ್ತಿಗೆ ಕ್ರಿಸ್ಮಸ್‌ ವಿಶ್‌ ಮಾಡುವ ಮೂಲಕ ಜನರು ಸಂತಸ ಹಂಚಿಕೊಳ್ಳುತ್ತಿದ್ದಾರೆ. ಇದರೊಂದಿಗೆ ಬೆಂಗಳೂರಿನ ವಿವಿಧೆಡೆ ಕೇಸ್‌ ಉತ್ಸವಗಳನ್ನೂ ಹಮ್ಮಿಕೊಳ್ಳಲಾಗಿದೆ.

    ಹೊಸ ವರ್ಷಕ್ಕೆ ಕೆಲವೇ ದಿನಗಳ ಮುನ್ನ ಬರುವ ಈ ಹಬ್ಬದಲ್ಲಿ ಸ್ಥಳೀಯರು ಹಾಗೂ ಯುವಸಮೂಹದ ಸಂಭ್ರಮಕ್ಕೆ ಪಾರವೇ ಇರುವುದಿಲ್ಲ. ಕೋವಿಡ್ ಮೊದಲ ಅಲೆ ಅಪ್ಪಳಿಸಿದಾಗ, ಕರೋಲ್ ಸಂಗೀತ ಕಛೇರಿಗಳಿಗೂ ಬ್ರೇಕ್‌ ಹಾಕಲಾಗಿತ್ತು. ಸೀಮಿತ ಪೂಜೆ ಪ್ರಾರ್ಥನೆಗಳಿಗೆ ಮಾತ್ರ ಸೀಮಿತಗೊಳಿಸಲಾಗಿತ್ತು. ಆದ್ರೆ ಕಳೆದ 2 ವರ್ಷಗಳಿಂದ ಅದ್ಧೂರಿಯಾಗಿ ಈ ಉತ್ಸವಗಳು ಸಾಗುತ್ತಿವೆ. ಇದನ್ನೂ ಓದಿ: ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಾಫಿಕ್‌ ಜಾಮ್‌ – 3 ಕಿಮೀ ವರೆಗೆ ನಿಂತ ವಾಹನಗಳು; 2 ಗಂಟೆ ಪ್ರಯಾಣಿಕರ ಪರದಾಟ

    ಕ್ರಿಸ್ಮಸ್‌ ಹಬ್ಬದ ಪ್ರಾಮುಖ್ಯತೆ:
    ಒಂದು ಕಾಲದಲ್ಲಿ ಕ್ರಿಸ್ಮಸ್‌ ಹಬ್ಬವನ್ನು ಪಾಶ್ಚಿಮಾತ್ಯ ದೇಶಗಳಲ್ಲಿ ಮತ್ತು ಕ್ರೈಸ್ತರ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಮಾತ್ರ ಆಚರಿಸಲಾಗುತ್ತಿತ್ತು. ಆದರಿಂದು ಪ್ರಪಂಚದಾದ್ಯಂತ ಆಚರಿಸುವ ಹಬ್ಬವಾಗಿ ಇದು ಮಾರ್ಪಟ್ಟಿದೆ. ಜನರನ್ನು ಪಾಪದಿಂದ ಮುಕ್ತಗೊಳಿಸಲು ಮತ್ತು ಜನರಿಗೆ ಒಳಿತನ್ನು ಮಾಡಲು ದೇವರು ತನ್ನ ಮಗನನ್ನು ಭೂಮಿಗೆ ಕಳುಹಿಸಿದನು ಮತ್ತು ಜನರನ್ನು ಪಾಪದಿಂದ ಮುಕ್ತಗೊಳಿಸುವ ಹೋರಾಟದಲ್ಲಿ ಯೇಸು ಕ್ರಿಸ್ತನು ತನ್ನ ಪ್ರಾಣ ತ್ಯಾಗ ಮಾಡಿದನು ಎಂಬ ನಂಬಿಕೆ ಇದೆ. ಈ ಎಲ್ಲ ನೆನಪಿನೊಂದಿಗೆ ಕ್ರಿಸ್ಮಸ್‌ ಹಬ್ಬವನ್ನು ಆಚರಿಸಲಾಗುತ್ತದೆ ಎನ್ನುತ್ತಾರೆ ಮೈಸೂರು ಸೇಂಟ್‌ ಫಿಲೋಮಿನಾ ಚರ್ಚ್‌ನ ಪಾದ್ರಿ ಸ್ಟ್ಯಾನಿ ಡಿ. ಅಲ್ಮೆಡಾ.

    ಕರೋಲ್‌ ಕಂಪು:
    ಪ್ರತಿವರ್ಷ ಡಿಸೆಂಬರ್‌ 24ರಂದು ರಾತ್ರಿ 12 ಗಂಟೆಯಿಂದ ಬಲಿಪೂಜೆಯೊಂದಿಗೆ ಕ್ರಿಸ್ಮಸ್‌ ಹಬ್ಬ ಆರಂಭವಾಗುತ್ತದೆ. ಬಲಿಪೂಜೆಯ ನಂತರ ಯೇಸುವಿನ ಭಕ್ತರು ಪ್ರಾರ್ಥನೆ ಸಲ್ಲಿಸುತ್ತಾರೆ. ನಂತರ ರಾತ್ರಿಯಿಡೀ ಕರೋಲ್ ಗೀತಗಾಯನವಿರುತ್ತದೆ. ಹಬ್ಬಕ್ಕಿಂತ ಮೊದಲೇ ಆರಂಭವಾಗುವ ಈ ಸಂಪ್ರದಾಯದಲ್ಲಿ ಯುವಕರ ಗುಂಪುಗಳು ರಾತ್ರಿ ತಮ್ಮ ಸನಿಹದ ಪ್ರದೇಶದ ಮನೆ ಮನೆಗಳಿಗೆ ತೆರಳಿ ಕರೋಲ್ ಗಳನ್ನು (ಭಜನೆ ಅಥವಾ ಸೌಹಾರ್ದತೆಯ ಸಂದೇಶ ಸಾರುವ ಕ್ರಿಸ್ಮಸ್ ಹಾಡುಗಳು) ಹಾಡುತ್ತಾರೆ. ಆ ಮೂಲಕ ಯೇಸುಕ್ರಿಸ್ತನು ಈ ಮನೆಯಲ್ಲಿ ಹುಟ್ಟಿದ್ದಾನೆ ಮತ್ತು ಈ ಮನೆಯಲ್ಲಿ ಜೀವಿಸುತ್ತಾನೆ ಎಂದು ಪವಿತ್ರ ಭಾವನೆ ಮೂಡಿಸುವ ಸಂದೇಶ ಸಾರಲಾಗುತ್ತದೆ ಎನ್ನುತ್ತಾರೆ ಅಲ್ಮೆಡಾ. ಇದನ್ನೂ ಓದಿ: ಹೊಸ ವರ್ಷಾಚರಣೆ – ಬ್ರಿಗೇಡ್‌ ರಸ್ತೆಯಲ್ಲಿ ಜೋಡಿಗಳಿಗೆ ಪ್ರತ್ಯೇಕ ಮಾರ್ಗ

    ಕ್ರಿಸ್ಮಸ್‌ ಹಿನ್ನೆಲೆ ಏನು?
    ಕ್ರಿಸ್ಮಸ್‌ ಆಚರಣೆಯು ಹಲವು ಶತಮಾನಗಳ ಹಿಂದಿನದ್ದು. ಕ್ರಿಸ್ಮಸ್‌ ಅನ್ನು ಮೊದಲು ರೋಮ್‌ ದೇಶದಲ್ಲಿ ಆಚರಿಸಲಾಯಿತು ಎಂದು ಹೇಳಲಾಗುತ್ತದೆ. ಆದರೆ ಕ್ರಿಸ್‌ಮಸ್‌ಗೆ ಮುನ್ನ ರೋಮ್‌ನಲ್ಲಿ ಡಿಸೆಂಬರ್ 25ರ ದಿನವನ್ನು ಸೂರ್ಯ ದೇವರ ಜನ್ಮದಿನವಾಗಿ ಆಚರಿಸಲಾಯಿತು. ಆ ಸಮಯದಲ್ಲಿ, ರೋಮ್‌ನ ಚಕ್ರವರ್ತಿಗಳು ಸೂರ್ಯದೇವನನ್ನು ತಮ್ಮ ಮುಖ್ಯ ದೇವರಾಗಿ ಪರಿಗಣಿಸುತ್ತಿದ್ದರು ಮತ್ತು ಸೂರ್ಯದೇವನನ್ನು ಪೂಜಿಸುತ್ತಿದ್ದರು. ನಂತರ ಕಾಲಘಟ್ಟದಲ್ಲಿ ರೋಮ್‌ನಲ್ಲಿ ಕ್ರಿಶ್ಚಿಯನ್ ಧರ್ಮದ ಪ್ರಚಾರವು ವೇಗವಾಗಿ ಬೆಳೆಯಲು ಪ್ರಾರಂಭಿಸಿತು. ರೋಮ್‌ನಲ್ಲಿ ಕ್ರೈಸ್ತ ಧರ್ಮದ ಅನುಯಾಯಿಗಳ ಸಂಖ್ಯೆ ಹೆಚ್ಚಾಯಿತು. ಇದಾದ ನಂತರ ಕ್ರಿ.ಶ.336ರಲ್ಲಿ ಕ್ರೈಸ್ತ ಧರ್ಮದ ಅನುಯಾಯಿಗಳು ಯೇಸುಕ್ರಿಸ್ತನನ್ನು ಸೂರ್ಯದೇವನ ಅವತಾರವೆಂದು ಒಪ್ಪಿಕೊಂಡರು. ಅಂದಿನಿಂದ ಕ್ರಿಸ್ಮಸ್‌ ಹಬ್ಬವನ್ನು ಯೇಸುಕ್ರಿಸ್ತನ ಜನ್ಮದಿನವಾಗಿ ಆಚರಿಸುವ ಸಂಪ್ರದಾಯವು ಬೆಳೆದುಬಂದಿತು ಎನ್ನುತ್ತಾರೆ ಹಿರಿಯ ಪಾದ್ರಿಗಳು.