Tag: ಎಂ.ಡಿ.ಲಕ್ಷ್ಮಿನಾರಾಯಣ್

  • ಕಾಂಗ್ರೆಸ್‍ನಲ್ಲಿ ಶಿಸ್ತು ಮೀರಿದವರ ವಿರುದ್ಧ ಶಿಸ್ತುಕ್ರಮಕ್ಕೆ ಸಿದ್ಧತೆ

    ಕಾಂಗ್ರೆಸ್‍ನಲ್ಲಿ ಶಿಸ್ತು ಮೀರಿದವರ ವಿರುದ್ಧ ಶಿಸ್ತುಕ್ರಮಕ್ಕೆ ಸಿದ್ಧತೆ

    ಬೆಂಗಳೂರು: ಕಾಂಗ್ರೆಸ್‍ನಲ್ಲಿ ಶಿಸ್ತು ಮೀರಿದವರ ವಿರುದ್ಧ ಶಿಸ್ತುಕ್ರಮದ ಬಿಸಿ ಮುಟ್ಟಿಸಲು ವೇದಿಕೆ ಸಿದ್ಧವಾಗತೊಡಗಿದೆ ಎನ್ನಲಾಗುತ್ತಿದೆ. ನಾಳೆ ಕಾಂಗ್ರೆಸ್ ಶಿಸ್ತು ಪಾಲನ ಸಮಿತಿ ಸಭೆ ನಡೆಯುವ ಸಾಧ್ಯತೆ ಇದೆ.

    ಮಾಜಿ ಕೇಂದ್ರ ಸಚಿವ ರೆಹಮಾನ್ ಖಾನ್ ನೇತೃತ್ವದ ಶಿಸ್ತುಪಾಲನ ಸಮಿತಿ ಸಭೆ ನಡೆಸುವ ಸಾಧ್ಯತೆ ಇದೆ. ಊಟಿಯಲ್ಲಿರುವ ಶಿಸ್ತುಪಾಲನ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಬೆಂಗಳೂರಿಗೆ ಬರುತ್ತಿದಂತೆ ಸಭೆ ನಡೆಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರೆಹಮಾನ್ ಖಾನ್ ಅವರಿಗೆ ಕರೆ ಮಾಡಿ ಸೂಚನೆ ನೀಡಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಹಾಂಕಾಂಗ್ ತೇಲುವ ಜಂಬೋ ರೆಸ್ಟೋರೆಂಟ್ ಮಗುಚಿದೆ, ಮುಳುಗಿಲ್ಲ: ಸ್ಪಷ್ಟನೆ ಕೊಟ್ಟ ಮಾಲೀಕ

    ಮಾಜಿ ಸಚಿವ ಸೀತಾರಾಂ ಹಾಗೂ ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ್‍ಗೆ ಶೋಕಾಸ್ ನೋಟಿಸ್ ಜಾರಿ ಸಾಧ್ಯತೆಯಿದೆ. ತಮ್ಮ ಬೆಂಬಲಿಗರ ಸಭೆ ನಡೆಸಿ ಕಾಂಗ್ರೆಸ್ ಪಕ್ಷದ ವಿರುದ್ಧ ಹಾಗೂ ಪಕ್ಷದ ನಾಯಕರ ವಿರುದ್ಧ ಮಾತನಾಡಿದ್ದ ಎಂ.ಆರ್.ಸೀತಾರಾಂ, ಅದೇ ಸಭೆಯಲ್ಲಿ ಎಂ.ಡಿ.ಲಕ್ಷ್ಮೀನಾರಾಯಣ್ ಭಾಗವಹಿಸಿದ್ದರು.

    Congress leader Shivakumar tears copy of anti conversion bill in Karnataka assembly latest news | India News – India TV

    ಲಕ್ಷ್ಮಿ ನಾರಾಯಣ್ ಅವರು ಪದೇ ಪದೇ ಪಕ್ಷದ ನಾಯಕರ ವಿರುದ್ಧ ಹೇಳಿಕೆ ನೀಡುತ್ತಿದ್ದು, ದಲಿತ ಸಿಎಂ ಘೋಷಣೆ ಮಾಡುವಂತೆ ಬಹಿರಂಗ ಪತ್ರ ಬರೆದಿದ್ದರು. ಇಬ್ಬರಿಗೂ ನೋಟಿಸ್ ನೀಡಲು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸೂಚನೆ ನೀಡಿದ್ದು, ನಾಳೆ ಸಭೆ ನಡೆಸಿ ನೋಟಿಸ್ ಜಾರಿಯಾಗುವ ಸಾಧ್ಯತೆ ಇದೆ.

    Live Tv