ದಾವಣಗೆರೆ: ಶಾಸಕ ಎಂ.ಪಿ. ರೇಣುಕಾಚಾರ್ಯ ಜೊತೆ ಸೆಲ್ಫಿ ತೆಗೆದುಕೊಳ್ಳಲು ವಿದ್ಯಾರ್ಥಿನಿಯರು ಮುಗಿಬಿದ್ದ ಪ್ರಸಂಗ ಇಂದು ನಡೆದಿದೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟ ಗ್ರಾಮದ ಸರ್ಕಾರಿ ಹೈಸ್ಕೂಲ್ ಹಾಗೂ ಪಿಯು ಕಾಲೇಜ್‍ಗೆ ಶಾಸಕರು ಭೇಟಿ ನೀಡಿದ್ದರು. ಈ ವೇಳೆ ವಿದ್ಯಾರ್ಥಿನಿಯರು ಶಾಸಕರ ಜೊತೆ ಸೆಲ್ಫಿ ತೆಗೆಸಿಕೊಳ್ಳಲು ನಾ-ಮುಂದು ತಾ-ಮುಂದು ಎಂದು ಮುಗಿಬಿದ್ದರು.
ಹಾವೇರಿ: ರಷ್ಯಾ ಮತ್ತು ಉಕ್ರೇನ್ ಯುದ್ಧ ಪ್ರಾರಂಭವಾಗಿ 11 ದಿನಗಳು ಕಳೆದಿದೆ. ಯುದ್ಧ ನಿಲ್ಲುವ ಯಾವ ಲಕ್ಷಗಳು ಕೂಡ ಕಾಣುತ್ತಿಲ್ಲ. ಇಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ಉಕ್ರೇನ್‍ನಲ್ಲಿ ಶೆಲ್ ದಾಳಿಗೆ ತುತ್ತಾದ ನವೀನ್ ನಿವಾಸಕ್ಕೆ ಭೇಟಿ ಸಾಂತ್ವನ ಹೇಳಿದರು.
ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನಿವಾಸಕ್ಕೆ ಭೇಟಿ ನೀಡಿ ನವೀನ್ ಭಾವಚಿತ್ರಕ್ಕೆ ಪುಷ್ಪ ಹಾಕಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ರೇಣುಕಾಚಾರ್ಯ ಅವರು ವೈಯಕ್ತಿಕವಾಗಿ ಒಂದು ಲಕ್ಷ ರುಪಾಯಿ ವಿತರಿಸಿದರು. ಇದನ್ನೂ ಓದಿ: ನವೀನ್ ಕುಟುಂಬಸ್ಥರಿಗೆ 1 ಲಕ್ಷ ರೂ. ಚೆಕ್ ವಿತರಿಸಿದ ಸಲೀಂ ಅಹಮದ್
ಬಳಿಕ ಮಾತನಾಡಿದ ಅವರು, ನವೀನ್ ವಿದ್ಯಾಭ್ಯಾಸ ಮಾಡುವ ಸಮಯದಲ್ಲಿ ಮನೆಯವರು ಹಾಗೂ ಸ್ಥಳೀಯ ಶಾಸಕರ ಜೊತೆಗೂ ನಿರಂತರ ಸಂಪರ್ಕದಲ್ಲಿದ್ದರು. ಕೊನೆಯ ಬಾರಿ ನವೀನ್ ಮುಖ ನೋಡಬೇಕು ಎಂಬುದು ಮನೆಯವರ ಆಸೆಯಾಗಿದೆ. ಅವರ ಪಾರ್ಥಿವ ಶರೀರ ತರುವ ಸಲುವಾಗಿ ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ಸರ್ಕಾರ ಕೂಡ ಪಾರ್ಥಿವ ಶರೀರ ತರುವ ಸಲುವಾಗಿ ಪ್ರಯತ್ನ ನಡೆಸಿದೆ ಎಂದರು.
ಉಕ್ರೇನ್‍ನಲ್ಲಿರುವ ಇನ್ನೂ ಹಲವು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಸಿವಿನಿಂದ ಬಳಲುವ ಸಂದರ್ಭದಲ್ಲಿ ಉಪಹಾರ ತರಲು ಹೋಗಿ ನವೀನ್ ಮೃತಪಟ್ಟಿದ್ದಾರೆ. ಆ ದೇಶದ ಆಂತರಿಕ ವಿಚಾರಗಳಿಂದ ಒಬ್ಬ ವಿದ್ಯಾರ್ಥಿಯನ್ನು ಕಳೆದುಕೊಂಡಿದ್ದೇವೆ. ಇದು ಅತ್ಯಂತ ನೋವಿನ ಸಂಗತಿ. ನವೀನ ಕುಟುಂಬ ಸಾಕಷ್ಟು ನೋವಿನಲ್ಲಿ ನರಳುತ್ತಿದೆ ಎಂದರು. ಇದನ್ನೂ ಓದಿ: ಹರ್ಷ ಕುಟುಂಬಕ್ಕೆ 25 ಲಕ್ಷ ರೂ. ನೆರವು ನೀಡಿದ ಬಿಎಸ್‍ವೈ
ಕೇಂದ್ರ ಮತ್ತು ರಾಜ್ಯ ಸರ್ಕಾರ ನಾವೆಲ್ಲರೂ ಸೇರಿ ನವೀನ್ ಕುಟುಂಬದ ಓರ್ವ ಸದಸ್ಯರಾಗಿ ಪಾರ್ಥಿವ ಶರೀರ ತರುವ ಕೆಲಸ ಮಾಡುತ್ತಿದ್ದೇವೆ. ನವೀನ್ ಕಳೆದುಕೊಂಡ ದುಃಖ ಭರಿಸುವ ಶಕ್ತಿಯನ್ನ ದೇವರು ಅವರ ತಂದೆ-ತಾಯಿಗೆ ನೀಡಲಿ ಎಂದು ರೇಣುಕಾಚಾರ್ಯ ಅವರು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಪ್ರಬಲ ಸಚಿವ ಸ್ಥಾನಾಕಾಂಕ್ಷಿಗಳಾಗಿರುವ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹಾಗೂ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು ವಿಕಾಸಸೌಧದಲ್ಲಿ ಭೇಟಿಯಾದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಶಾಸಕ ರೇಣುಕಾಚಾರ್ಯ ಅವರ ಕೊಠಡಿಯಲ್ಲಿ ಇಬ್ಬರು ನಾಯಕರು ಭೇಟಿಯಾಗಿ ಪರಸ್ಪರ ಚರ್ಚೆ ನಡೆಸಿದರು.
ಚರ್ಚೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ರೇಣುಕಾಚಾರ್ಯ, ಇದು ನಮ್ಮ ಆಕಸ್ಮಿಕ ಸೌಜನ್ಯದ ಭೇಟಿ. ಯತ್ನಾಳ್ ಅತ್ಯಂತ ಅನುಭವಿ ರಾಜಕಾರಣಿಗಳು. ಅವರು ಹಿರಿಯರು ಹಾಗೂ ಕೇಂದ್ರ ಸಚಿವರಾಗಿದ್ದರು. ಮುಂದೆ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂದು ಚರ್ಚೆ ಮಾಡಿದೆವು. ಮೇಕೆದಾಟು ಪಾದಯಾತ್ರೆಯ ಮೂಲಕ ಅಧಿಕಾರಕ್ಕೆ ಬಂದ್ವಿ ಎಂಬಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇದ್ದಾರೆ. ಡಿ.ಕೆ.ಶಿವಕುಮಾರ್ ವೇಗ ತಡೆಯಲು ಚರ್ಚೆ ನಡೆಸಿದೆವು ಎಂದರು. ಇದನ್ನೂ ಓದಿ: ಚೀನಾದಿಂದ ಅರುಣಾಚಲ ಪ್ರದೇಶದ ಹುಡುಗನ ಅಪಹರಣ – ಪ್ರಧಾನಿ ವಿರುದ್ಧ ರಾಗಾ ಕಿಡಿ
ಕಾಲ ಬಂದ್ರೆ ಹೈಕಮಾಂಡ್ ಭೇಟಿ: ಕಾಲ ಬಂದ್ರೆ ಬಿಜೆಪಿ ಹೈಕಮಾಂಡ್ ನಾಯಕರನ್ನ ಭೇಟಿ ಮಾಡುತ್ತೇವೆ. ಯತ್ನಾಳ್ ಹಿರಿಯರಿದ್ದಾರೆ. ಅವರು ಮಂತ್ರಿಯಾಗಲಿ ಎಂದು ಶುಭ ಕೋರುತ್ತೇನೆ ಎಂದರು.
ಇದೇ ವೇಳೆ ಸಂಪುಟ ಪುನರ್ ರಚನೆ ವಿಚಾರದ ಬಗ್ಗೆ ಮಾತನಾಡಿದ ರೇಣುಕಾಚಾರ್ಯ, ಯಾವ ಸಚಿವರ ವಿರುದ್ಧವೂ ಆಕ್ರೋಶ ಇಲ್ಲ. ಸಂಘಟನೆ ಹಾಗೂ ಸರ್ಕಾರಕ್ಕೆ ಒಳ್ಳೆಯ ಕೆಲಸ ಮಾಡಿದವರನ್ನು ಮುಂದುವರೆಸುವುದು ಒಳ್ಳೆಯದು. ಅಧಿಕಾರಕ್ಕೋಸ್ಕರ ಇದ್ದವರು, ಸ್ವಾರ್ಥಕೊಸ್ಕರ ಇದ್ದವರನ್ನು ಕೈಬಿಡಬೇಕು. ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡುತ್ತೇವೆ, ಸಿಎಂ ಜೊತೆಗೆ ಈ ಬಗ್ಗೆ ಚರ್ಚೆ ನಡೆಸುತ್ತೇವೆ. ಮುಂದಿನ ದಿನದಲ್ಲಿ ಬಿಜೆಪಿ ದೇಶದಲ್ಲಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದರು. ಇದನ್ನೂ ಓದಿ: ಅಮೆರಿಕದಿಂದಲೇ ಕಾನ್ಪುರದಲ್ಲಿ ನಡೆಯುತ್ತಿದ್ದ ಕಳ್ಳತನವನ್ನು ತಡೆದ ಮನೆಯವರು
ಎಲ್ಲಾ ಶಾಸಕರು ಮಾತನಾಡೋಕೆ ಆಗ್ತಿಲ್ಲ ಎಂದು ಬಹಳಷ್ಟು ಶಾಸಕರು ನಮಗೆ ಹೇಳಿದ್ದಾರೆ. ಹೀಗಾಗಿ ನಾವಿಬ್ಬರು ಸಚಿವ ಸಂಪುಟದ ಬಗ್ಗೆ ಮಾತನಾಡಿದ್ದೇವೆ. ಆದರೆ ಬಿಜೆಪಿಯಲ್ಲಿ ಸಹಿ ತೆಗೆದುಕೊಳ್ಳುವ ಸಂಸ್ಕೃತಿ ಇಲ್ಲ ಎಂದರು.
ರೇಣುಕಾಚಾರ್ಯಗೆ ಆಶೀರ್ವಾದ!: ಸಚಿವ ಸಂಪುಟ ರಚನೆಯಲ್ಲಿ ಅವಕಾಶ ಸಿಗುವ ವಿಚಾರದ ಬಗ್ಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾನು ಈಗ ಏನೂ ಹೇಳಲು ಆಗಲ್ಲ. ಪಂಚರಾಜ್ಯ ಮುಗಿದ ಮೇಲೆ ಆಗುತ್ತೋ ಅಥವಾ ಅದಕ್ಕಿಂತ ಮೊದಲೇ ಆಗುತ್ತೋ ನೋಡೋಣ. ಆದ್ರೆ ಒಳ್ಳೆಯ ಬೆಳವಣಿಗೆ ಆಗುತ್ತೆ. ರೇಣುಕಾಚಾರ್ಯ ಮಂತ್ರಿಯಾಗ್ಲಿ ಅಂತ ಆಶೀರ್ವಾದ ಮಾಡುತ್ತೇನೆ. ರೇಣುಕಾಚಾರ್ಯ ಯಾರಾದರೂ ನಾಯಕತ್ವ ಒಪ್ಪಿಕೊಂಡ್ರೆ ಅವರ ನಾಯತ್ವದಲ್ಲೇ ಇರ್ತಾರೆ ಎಂದರು.
ಬಿಎಸ್ವೈ ನಾಯಕತ್ವ ಅಥವಾ ಬೊಮ್ಮಾಯಿ ನಾಯಕತ್ವ ರೇಣುಕಾಚಾಯ್ ಒಪ್ಪಿಕೊಂಡಿದ್ದಾರಾ ಎಂಬ ಪ್ರಶ್ನೆಗೆ, ಅವರು ಬಿಜೆಪಿ ನಾಯಕತ್ವ ಒಪ್ಪಿಕೊಂಡಿದ್ದಾರೆ ಎಂದರು. ಪಕ್ಷದ ಹೈಕಮಾಂಡ್ ಯಾವ ರೀತಿ ಬದಲಾವಣೆ ಮಾಡುತ್ತೆ ನೋಡೋಣ. ಗುಜರಾತ್ ಮಾದರಿಯಲ್ಲಿ ಮಾಡುತ್ತೋ ಅಥವಾ ಕರ್ನಾಟಕಕ್ಕೆ ಬೇರೆ ಮಾದರಿ ಮಾಡುತ್ತೋ ನೋಡೋಣ ಎಂದರು.
ಸಚಿವ ಪುನರ್ ರಚನೆ ಇನ್ನು 15 ದಿವಸದಲ್ಲಿ ಆದ್ರೆ ಒಳ್ಳೆಯದು. ಮಾರ್ಚ್ ನಂತ್ರ ಸಚಿವ ಸಂಪುಟ ರಚನೆ ಆದ್ರೆ ಏನೂ ಉಪಯೋಗ ಇಲ್ಲ, ಮಾಡುವುದಿದ್ರೆ ಈಗಲೇ ಮಾಡಿ. ಇಲ್ಲ ಅಂದರೆ ಶಾಸಕರಾಗಿ ಕೊನೆ ಪಕ್ಷ ಒಂದು ವರ್ಷ ಇದ್ದಾಗ ಮಾಡಿದ್ರೆ ಪರಿಣಾಮಕಾರಿಯಾಗಿ ಅಭಿವೃದ್ಧಿ ಮಾಡಬಹುದು ಎಂದರು. ಇದರ ಜೊತೆಗೆ ಮೊದಲು ಕೊರೊನಾವನ್ನು ಸಮರ್ಥವಾಗಿ ಎದುರಿಸಬೇಕು ಎಂದು ಹೇಳಿದರು.
ಹುಬ್ಬಳ್ಳಿ: ಈ ಹಿಂದೆ ಸರ್ಕಾರದಲ್ಲಿ ಎರಡ್ಮೂರು ಬಾರಿ ಸಚಿವರಾಗಿ, ಈಗಲೂ ಸಚಿವರಾಗಿ ಇರುವವರು ತಮ್ಮ ಸ್ಥಾನ ಬಿಟ್ಟುಕೊಡಲಿ. ಹೊಸಬರಿಗೆ ಅವಕಾಶ ಕೊಡಲಿ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದರು.
ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಂತರ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ ಕೊಡಿ ಎಂದು ಕೇಳುವುದಿಲ್ಲ. ಆ ರೀತಿಯ ಆಸೆಯೂ ನನಗಿಲ್ಲ. ಹೊಸ ಶಾಸಕರಿಗೆ ಸಚಿವ ಸ್ಥಾನ ಕೊಟ್ಟು, ಅನುಭವಿ ನಾಯಕರು ಪಕ್ಷ ಸಂಘಟನೆ ಕೆಲಸದಲ್ಲಿ ತೊಡಗಿಕೊಳ್ಳಬೇಕು. ಇದನ್ನು ಪಕ್ಷದ ಹಿರಿಯರಿಗೂ ತಿಳಿಸಿದ್ದೇನೆ ಎಂದರು.
ಹುಬ್ಬಳ್ಳಿಯಲ್ಲಿ ಕಾರ್ಯಕಾರಿಣಿ ಸಭೆಯು ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಕಾಂಗ್ರೆಸ್ ಬಿಟ್ಟಿಲ್ಲ. ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಅಡ್ಡಗಾಲು ಹಾಕಿತು ಎಂದು ಟೀಕಿಸಿದರು. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಯಾರಿಗೆ ಬೇಕು?: ಹೆಚ್.ಡಿ.ದೇವೇಗೌಡ
ಮತಾಂತರ ನಿಷೇಧ ಕಾಯ್ದೆ ಜಾರಿ ವಿಚಾರದಲ್ಲಿ ಕಾಂಗ್ರೆಸ್ ದ್ವಿಮುಖ ನೀತಿ ಅನುಸರಿಸುತ್ತಿದೆ. ಕಾಯ್ದೆ ಜಾರಿಗೆ ತರುವಂತೆ ಸಾಧು ಸಂತರು, ಧಾರ್ಮಿಕ ಮುಖಂಡರು ನಮ್ಮ ಸರ್ಕಾರಕ್ಕೆ ಮನವಿ ಮಾಡಿದ್ದರು. ಆಸೆ, ಆಮಿಷಕ್ಕೆ ಮತಾಂತರ ಆಗುತ್ತಿದೆ ಅಂತ ಹೇಳಿದ್ದರು ಎಂದರು.
ಇಟಲಿಯ ಸೋನಿಯಾ ಗಾಂಧಿ ಮಾತು ಕೇಳುವ ಕಾಂಗ್ರೆಸ್ಸಿಗರಿಗೆ ತಾಕತ್ತಿದ್ದರೆ, ಒಂದೇ ಒಂದು ಸಾರಿ ಬಹಿರಂಗವಾಗಿ ನಾವು ಹಿಂದೂ ಎಂದು ಹೇಳಿಕೊಳ್ಳಲಿ ನೋಡೋಣ ಎಂದು ಸವಾಲು ಹಾಕಿದರು. ಗುಜರಾತ್ ಮಾದರಿಯಲ್ಲಿ ರಾಜ್ಯದಲ್ಲಿಯೂ ಸಂಪುಟ ವಿಸ್ತರಣೆ ಮಾಡಬೇಕು. ನನಗೆ ಸಚಿವ ಸ್ಥಾನಕ್ಕಿಂತ ಕ್ಷೇತ್ರದ ಅಭಿವೃದ್ಧಿ ಮುಖ್ಯ ಎಂದರು. ಇದನ್ನೂ ಓದಿ: ಅಪ್ಪು ಸಿನಿಮಾಗಳು ಈಗ ಲೆಕ್ಕಕ್ಕೆ ಬರೋದಿಲ್ಲ, ಅವನ ಸಮಾಜಸೇವೆ ಎಲ್ಲವನ್ನೂ ಪಕ್ಕಕ್ಕಿಟ್ಟಿದೆ: ರಾಘಣ್ಣ
ಕಾಂಗ್ರೆಸ್ ಪಕ್ಷಕ್ಕೆ ಈಗಾಗಲೇ ಗರ್ಭಪಾತ ಆಗಿದೆ. ಅದು ಹೆಣ್ಣೋ, ಗಂಡೋ ಗೊತ್ತಿಲ್ಲ. ಮುಂಬರುವ ಚುನಾವಣೆಯಲ್ಲಿ ನಿಮಗೆ ಹಿಂದೂಗಳು ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ಕೊಟ್ಟರು.
ದಾವಣಗೆರೆ: ಕಾಂಗ್ರೆಸ್‍ನಿಂದ ಬಿಜೆಪಿಗೆ ಬರಲು ಹಲವಾರು ಜನ ಸರತಿಯಲ್ಲಿ ನಿಂತಿದ್ದಾರೆ. ಕಾಂಗ್ರೆಸ್ ಪಕ್ಷದವರು ಬಿಜೆಪಿ ತತ್ವ, ಸಿದ್ಧಾಂತ ಒಪ್ಪಿಕೊಂಡು ಬರಲು ತುದಿಗಾಲಲ್ಲಿ ನಿಂತಿದ್ದಾರೆ, ಕಾದು ನೋಡಿ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಗುಡುಗಿದ್ದಾರೆ.
ನಗರದಲ್ಲಿ ರಾಜ್ಯ ಕಾರ್ಯಕಾರಣಿ ಸಭೆ ನಿಮಿತ್ತ ಕಾರ್ಯನಿರ್ವಹಿಸಿದ ಪ್ರಭಂಧಕರಿಗೆ ಅಭಿನಂಧನಾ ಸಮಾರಂಭಕ್ಕೆ ಅಗಮಿಸುವ ಮುನ್ನ ಮಾತನಾಡಿದರು. 2023ಕ್ಕೆ ಕಾಂಗ್ರೆಸ್ ಧೂಳಿಪಟವಾಗುತ್ತೆ, ಕಾಂಗ್ರೆಸ್‍ನಲ್ಲಿರುವ ಸಮಾನ ಮನಸ್ಕರು ಬಿಜೆಪಿಗೆ ಬರುತ್ತಾರೆ, ಕಾದು ನೋಡಿ ಎಂದು ಹೇಳಿದರು. ಇದನ್ನೂ ಓದಿ: ದೆಹಲಿಯಲ್ಲಿ ಅಮಿತ್ ಶಾರನ್ನು ಭೇಟಿಯಾದ ಸೋಮಶೇಖರ್ – ರಾಜ್ಯಕ್ಕೆ ಬರುವಂತೆ ಆಹ್ವಾನ
ಯಾವ ಪುರುಷಾರ್ಥಕ್ಕಾಗಿ ಭಾರತ್ ಬಂದ್ ಮಾಡುತ್ತಿದ್ದಾರೆ? ನಕಲಿ ರೈತ ಹೋರಾಟಗಾರರನ್ನು ಜನ ಬೆಂಬಲಿಸುವುದಿಲ್ಲ. ಈ ಭಾರತ್ ಬಂದ್ ಹೋರಾಟಕ್ಕೆ ನಕಲಿ ಕಾಂಗ್ರೆಸ್ ಹೋರಾಟಗಾರರು ಬೆಂಬಲವಾಗಿ ನಿಂತಿದ್ದಾರೆ. ಬಿಜೆಪಿ ಕೇಂದ್ರ ಹಾಗೂ ರಾಜ್ಯದಲ್ಲಿ ಉತ್ತಮ ಆಡಳಿತ ನೀಡಿದೆ, ರೈತರು ಸೇರಿ ಎಲ್ಲ ವರ್ಗಗಳ ಅಭಿವೃದ್ಧಿಗೆ ಕಾರ್ಯಕ್ರಮ ನೀಡಿದೆ. ನೊಂದವರಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಬಿಜೆಪಿ ಹಾಗೂ ಮೋದಿಯವರವ ವರ್ಚಸ್ಸು ಹೆಚ್ಚುತ್ತಿರುವುದನ್ನು ಕಂಡು ಕಾಂಗ್ರೆಸ್ ಹೋರಾಟದ ಹುನ್ನಾರ ನಡೆಸಿದೆ. ಈ ಹೋರಾಟವನ್ನು ಯಾವ ಜನರೂ ಬೆಂಬಲಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಾವಣಗೆರೆ: ಮೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನದಲ್ಲಿ ಬಂದಿದೆ, ಮೈತ್ರಿ ಬಗ್ಗೆ ಹೇಳುವಷ್ಟು ದೊಡ್ಡವನು ನಾನಲ್ಲ, ಪಕ್ಷದ ರಾಜ್ಯಾಧ್ಯಕ್ಷರು, ಸಿಎಂ ಹಾಗೂ ಜಿಲ್ಲಾ ಉಸ್ತುವಾರಿಗಳು ನಿರ್ಣಯ ಮಾಡುತ್ತಾರೆ. ಕಲಬುರಗಿಯ ಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ಯಾವುದೇ ಕಾರಣಕ್ಕೂ ಮಾತನಾಡುವುದಿಲ್ಲ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಮುರುಗೇಶ್ ನಿರಾಣಿಯವರು ಬಿಜೆಪಿಯವರೇ ಮೇಯರ್ ಆಗುತ್ತಾರೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಯಾರ ಜೊತೆ ಮೈತ್ರಿ ಮಾಡಿಕೊಂಡರೂ ನಾನು ಮಾತನಾಡುವುದಿಲ್ಲ, ರಾಜ್ಯ, ಕೇಂದ್ರದಲ್ಲಿ ನಮ್ಮದೇ ಸರ್ಕಾರ ಇದೆ. ಮೈತ್ರಿ ಬಗ್ಗೆ ಮಾತನಾಡುವುದಿಲ್ಲ ಎಂದರು.
ಬಿಜೆಪಿ ಸೇರಲು ಹಣದ ಅಫರ್ ಕೊಟ್ಟಿದ್ದರು ಎಂಬ ಶ್ರೀಮಂತ್ ಪಾಟೀಲ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಅದರ ಬಗ್ಗೆ ನನಗೆ ಗೊತ್ತಿಲ್ಲ, ಕಾಂಗ್ರೆಸ್, ಜೆಡಿಎಸ್ ಶಾಸಕರು ಯಡಿಯೂರಪ್ಪನವರ ನಾಯಕತ್ವ ನಂಬಿ ಬಂದಿದ್ದು. ಅಮಿತ್ ಶಾ ಬಂದಾಗ ನಾವೆಲ್ಲರೂ ಸ್ವಾಗತ ಮಾಡಿದ್ದೆವು, ಆ ಸಂದರ್ಭದಲ್ಲಿ ಸಚಿವ ಸ್ಥಾನದ ಬಗ್ಗೆ ಚರ್ಚೆ ಆಗಿಲ್ಲ. ಐದು ಜನ ಶಾಸಕರು ಇದ್ದಾರೆ, ಒಬ್ಬರಿಗೆ ಸಚಿವ ಸ್ಥಾನ ನೀಡುವಂತೆ ಮೊದಲಿನಿಂದಲೂ ಕೇಳಿದ್ದೇವೆ ಎಂದರು. ಇದನ್ನೂ ಓದಿ: ಅಭಯ್ ಪಾಟೀಲ್ ಡ್ರೈವಿಂಗಲ್ಲಿ ಗೋವಿಂದ ಕಾರಜೋಳ ಹೋಗಿದ್ದೆಲ್ಲಿಗೆ..?
ಗಣೇಶ ಹಬ್ಬದ ನಂತರ ಯಡಿಯೂರಪ್ಪನವರ ರಾಜ್ಯ ಪ್ರವಾಸದ ಬಗ್ಗೆ ಮಾತನಾಡಿದ ರೇಣುಕಾಚಾರ್ಯ, ಯಡಿಯೂರಪ್ಪ ಒಬ್ಬ ಮೇರು ನಾಯಕ, ಪಕ್ಷವನ್ನು ಕಟ್ಟಿ ಬೆಳೆಸಿದವರು. ರಾಜ್ಯ ಪ್ರವಾಸ ಮಾಡಿದರೆ ರಾಜ್ಯ, ರಾಷ್ಟ್ರೀಯ ನಾಯಕರು ಸ್ವಾಗತ ಮಾಡುತ್ತಾರೆ. ಯಡಿಯೂರಪ್ಪನವರು ರಾಜ್ಯ ಪ್ರವಾಸ ಮಾಡಿದರೆ ಪಕ್ಷಕ್ಕೆ ಲಾಭ, ಕರ್ನಾಟಕದಲ್ಲಿ 150 ಸ್ಥಾನ ಬರಬೇಕು ಎನ್ನುವುದು ಯಡಿಯೂರಪ್ಪನವರ ಸಂಕಲ್ಪವಾಗಿದೆ. ಹೀಗಾಗಿ ಪಕ್ಷದ ಪರವಾಗಿ ರಾಜ್ಯ ಪ್ರವಾಸ ಮಾಡುತ್ತಾರೆ, ಯಡಿಯೂರಪ್ಪನವರು ರಾಜ್ಯ ಪ್ರವಾಸ ಮಾಡಿದರೆ ಬಿಜೆಪಿಗೇ ಲಾಭ, ಕುಟುಂಬಕ್ಕೆ ಅಲ್ಲ ಎಂದರು.
ಸಿ.ಪಿ.ಯೋಗೇಶ್ವರ್ ದೆಹಲಿ ಪ್ರವಾಸದ ಬಗ್ಗೆ ರೇಣುಕಾಚಾರ್ಯ ಟಾಂಗ್ ನೀಡಿದ್ದು, ನಾನು ಪಕ್ಷದ ಶಿಸ್ತಿನ ಸಿಪಾಯಿ, ಕ್ಷೇತ್ರ ಹಾಗೂ ಜನರ ಬಗ್ಗೆ ಮಾತ್ರ ಯೋಚಿಸುತ್ತೇನೆ. ಅದನ್ನು ಬಿಟ್ಟು ಬೇರೆಯವರ ಬಗ್ಗೆ ಯೋಚಿಸೋದಿಲ್ಲ. ಯೋಗೇಶ್ವರ್ ಗೆ ಸಚಿವ ಸ್ಥಾನ ಸಿಗೋದು ಬಿಡೋದು ಪಕ್ಷದ ವಿಚಾರ ಎಂದರು.
ದಾವಣಗೆರೆ: ನಾನು ಈಗ ಹಳೆಯ ರೇಣುಕಾಚಾರ್ಯ ಅಲ್ಲ. ಸದ್ಯ ಎಲ್ಲವನ್ನೂ ನಾನು ಸಮಾನವಾಗಿ ಸ್ವೀಕರಿಸುತ್ತೇನೆ ಎಂದು ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಚಿವ ಸಂಪುಟ ಸಮರ್ಥವಾಗಿದೆಯಾ ಎಂಬ ಪ್ರಶ್ನೆಗೆ ಉತ್ತರಸಿದ ಅವರು, ಸಚಿವ ಸಂಪುಟ ರಚನೆ ಸಿಎಂ ಅವರ ವಿವೇಚನೆ ಬಿಟ್ಟ ವಿಚಾರ. ನಾನು ಅದನ್ನು ತೀರ್ಮಾನ ಮಾಡುವ ಜಡ್ಜ್ ಅಲ್ಲ. ಫೀಲ್ಡ್‍ಗೆ ಇಳಿಯುವಾಗ ಎಲ್ಲದಕ್ಕೂ ಸಜ್ಜಾಗಿರಬೇಕು. ನಾನು ಸನ್ಯಾಸಿ ಅಲ್ಲ, ರಾಜಕಾರಣಿ. ಸಚಿವ ಸ್ಥಾನ ಸಿಕ್ಕರೆ ಸಮರ್ಥವಾಗಿ ಕೆಲಸ ಮಾಡುತ್ತೇನೆ. ಸಿಗದಿದ್ರೆ ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿಗೆ ಪ್ರಯತ್ನಿಸುತ್ತೇನೆ ಎಂದರು.
ಇದೇ ವೇಳೆ ಕೇಂದ್ರ ಸರ್ಕಾರ ತಾಲಿಬಾನಿಗಳೊಂದಿಗೆ ಚರ್ಚಿಸಬೇಕು ಎಂಬ ಓವೈಸಿ ಹೇಳಿಕೆಗೆ ಪ್ರತಿಕ್ರಿಯಿಸಿದ ರೇಣುಕಾಚಾರ್ಯ, ಓವೈಸಿ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ದೇಶದ್ರೋಹಿಗಳು ವಿರೋಧಿ ಹೇಳಿಕೆ ನೀಡುತ್ತಾರೆ. ತಾಲಿಬಾನ್‍ಗಳ ಜತೆ ಮಾತನಾಡುವ ಅಗತ್ಯವೇನಿದೆ. ಪಾಕಿಸ್ತಾನಕ್ಕೆ ಯಾವ ರೀತಿ ಪ್ರಧಾನಿ ಉತ್ತರ ನೀಡಿದ್ರೋ, ಅದೇ ರೀತಿ ತಾಲಿಬಾನ್‍ಗಳಿಗೆ ಉತ್ತರ ನೀಡುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಪೊಲೀಸ್ ಕೇಸ್‍ಗೆ ಹೆದರಿ ಮಗ ಆತ್ಮಹತ್ಯೆ – ವಿಚಾರ ತಿಳಿದ ತಾಯಿಯೂ ಸೂಸೈಡ್
ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ದೆಹಲಿಗೆ ಭೇಟಿ ನೀಡಿದ್ದೆ. ಮಗು ಅಳದಿದ್ದರೆ, ತಾಯಿಯೂ ಹಾಲು ಕುಡಿಸಲ್ಲ. ದಾವಣಗೆರೆ ಜಿಲ್ಲೆ ಸಚಿವ ಸ್ಥಾನ ನೀಡಲು ವರಿಷ್ಠರಿಗೆ ಮನವಿ ಮಾಡಿದ್ದೇನೆ. ನಾನು ಆಶಾವಾದಿಯಾಗಿದ್ದೇನೆ. ಆತ್ಮವಿಶ್ವಾಸ ಕಳೆದುಕೊಂಡಿಲ್ಲ, ರಾಜಕಾರಣದಲ್ಲಿ ಮುಜಗರ ಇರಬಾರದು. ಜಿಲ್ಲೆಗೊಂದು ಸಚಿವ ಸ್ಥಾನದ ಭರವಸೆ ಇದೆ. ಜಿಲ್ಲೆಯ ಐದೂ ಜನರು ಒಗ್ಗಟ್ಟಾಗಿದ್ದೇವೆ. ಜಿಲ್ಲೆಯಲ್ಲಿ ಹಿರಿಯರು ಎಸ್.ಎ. ರವೀಂದ್ರನಾಥ್, ನಾನು ಮೂರು ಬಾರಿ ಶಾಸಕನಾಗಿದ್ದೇನೆ. ಅವಕಾಶ ಸಿಕ್ಕಾಗ ನಾವೆಲ್ಲರೂ ಪ್ರತ್ಯೇಕವಾಗಿ ಮಂತ್ರಿ ಸ್ಥಾನಕ್ಕೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ರಸ್ತೆ ಬಿಟ್ಟು ಮನೆ ಛಾವಣಿ ಹತ್ತಿ ನಿಂತ ಆಟೋ!
ಪಕ್ಷ, ಸಂಘಟನೆ ತಾಯಿ ಇದ್ದಂತೆ. ಮಾಜಿ ಸಿಎಂ ಬಿಎಸ್‍ವೈ ತಂದೆ ಸಮಾನ. ಸಿಎಂ ಬೊಮ್ಮಾಯಿ ಸಹೋದರರಿದ್ದಂತೆ ಎಂದು ಶಾಸಕರು ವ್ಯಾಖ್ಯಾನಿಸಿದರು. ಸಚಿವ ಸಂಪುಟ ರಚನೆಗೆ ಮುನ್ನ ಮಾಧ್ಯಮಗಳಲ್ಲಿ ನನ್ನ ಹೆಸರೂ ಓಡುತ್ತಿತ್ತು. ಸಚಿವರ ಅಂತಿಮ ಪಟ್ಟಿಯಲ್ಲಿ ನನ್ನ ಹೆಸರಿತ್ತು ಎಂದು ಕೇಳಿದ್ದೆ. ಕೊನೆಯಲ್ಲಿ ಘಳಿಗೆಯಲ್ಲಿ ಸಚಿವ ಸ್ಥಾನ ಕೈತಪ್ಪಿತು. ಅವಕಾಶ ಸಿಕ್ಕಿಲ್ಲ ಅಂತಾ ಮನಸ್ಥಿತಿ ಕುಗ್ಗಿಲ್ಲ, ಕುಗ್ಗಬಾರದು. ನಾಲ್ಕು ಸಚಿವ ಸ್ಥಾನ ಖಾಲಿ ಇದೆ. ಅದರಲ್ಲಿ ನಮ್ಮ ಜಿಲ್ಲೆಗೊಂದು ಸಿಗುತ್ತೆ ಎನ್ನುವ ಭರವಸೆ ಇದೆ. ನಮ್ಮಲ್ಲಿ ಅಸಮಧಾನವೂ ಇಲ್ಲ, ಸಮಾಧಾನವೂ ಇಲ್ಲ. ಸಚಿವನಾಗಿಲ್ಲ ಎಂದು ನಿರಾಶನಾಗಿಲ್ಲ, ಆಶಾವಾದಿಯಾಗಿದ್ದೇನೆ ಕಾಯುತ್ತೇನೆ ಎಂದರು. ಇದನ್ನೂ ಓದಿ: 60 ವರ್ಷದಲ್ಲಿ ಆಗದ ಅಭಿವೃದ್ಧಿ ಕಾರ್ಯಗಳು ಮೋದಿ ಅವಧಿಯಲ್ಲಿ ನಡೆದಿದೆ: ರಾಜೀವ್ ಚಂದ್ರಶೇಖರ್
ನವದೆಹಲಿ: ಒಂದೆಡೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ನಡೆಯುತ್ತಿದ್ದರೆ, ಇನ್ನೊಂದೆಡೆ ಸಿಡಿ ವಿಚಾರಗಳು ಮತ್ತೊಮ್ಮೆ ಮುನ್ನೆಲೆಗೆ ಬರುತ್ತಿವೆ. ನಿನ್ನೆಯಷ್ಟೇ ಸಚಿವ ಮುರುಗೇಶ್ ನಿರಾಣಿ ಮೇಲೆ ಸಾಮಾಜಿಕ ಕಾರ್ಯಕರ್ತ ಅಲಂ ಪಾಷ ಅವರು 500 ಸಿಡಿಗಳಿವೆ ಎಂದು ಗಂಭೀರ ಆರೋಪ ಮಾಡಿದ್ದರು. ಈ ಬೆನ್ನಲ್ಲೇ ಶಾಸಕ ರೇಣುಕಾಚಾರ್ಯ ದೆಹಲಿಗೆ ದೌಡಾಯಿಸಿದ್ದಾರೆ.
ಹೌದು. ರೇಣುಕಾಚಾರ್ಯ ಅವರು ದಿಢೀರ್ ಆಗಿ ನಿನ್ನೆ ರಾತ್ರಿ ದೆಹಲಿಗೆ ತೆರಳಿದ್ದು, ಇದೀಗ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಇಂದು ಉಸ್ತುವಾರಿ ಅರುಣ್ ಸಿಂಗ್ ಭೇಟಿ ಸಾಧ್ಯತೆ ಇದ್ದು, ಈ ಮೂಲಕ ಸಿ.ಡಿ ಭೀತಿಯಲ್ಲಿ ದೆಹಲಿಗೆ ದೌಡಾಯಿಸಿದ್ರಾ ಎಂ.ಪಿ ರೇಣುಕಾಚಾರ್ಯ ಎಂಬ ಪ್ರಶ್ನೆ ಮೂಡಿದೆ.
ಇದೇ ವೇಳೆ ಸಿಡಿ ಸಂಬಂಧ ಪಬ್ಲಿಕ್ ಟಿವಿ ಪ್ರಶ್ನಿಸಿದಾಗ, ಸಿಡಿ ಬಗ್ಗೆ ನಂಗೇನೂ ಗೊತ್ತಿಲ್ಲ. ಈ ಬಗ್ಗೆ ಹೈಕಮಾಂಡ್ ಭೇಟಿ ಮಾಡುವಷ್ಟು ದೊಡ್ಡವನಲ್ಲ. ಕ್ಷೇತ್ರದ ಕಾರ್ಯಕ್ಕೆ ದೆಹಲಿಗೆ ಬಂದಿದ್ದೇನೆ. ನಂಗೇ ಯಾವುದೇ ಮಾಹಿತಿ ಇಲ್ಲ ಎಂದು ಹೇಳುವ ಮೂಲಕ ಪ್ರತಿಕ್ರಿಯಿಸಲು ನಿರಾಕರಿಸಿದರು. ಇದನ್ನೂ ಓದಿ: ಸಚಿವ ಮುರುಗೇಶ್ ನಿರಾಣಿ ಬಳಿ ಸುಮಾರು 500 ಸಿ.ಡಿಗಳು ಇವೆ: ಅಲಂ ಪಾಷಾ
ಆದರೆ ರೇಣುಕಾಚಾರ್ಯ ಅವರು ಹೈಕಮಾಂಡ್ ನಾಯಕರಿಂದ ಸಿಡಿ ಬಿಡುಗಡೆ ತಡೆ ತರಲು ಪ್ಲ್ಯಾನ್ ಮಾಡಿಕೊಂಡು ದೆಹಲಿಗೆ ಬಂದಿದ್ದಾರೆ. ಬಿಜೆಪಿ ನಾಯಕರ ಬಳಿಯೇ ಸಿ.ಡಿ ಇರುವ ಬಗ್ಗೆ ಮಾಹಿತಿ ಇದ್ದು, ಹೈಕಮಾಂಡ್ ಮೂಲಕ ಒತ್ತಡ ಹಾಕಿ ಸಿ.ಡಿ ವಿಚಾರಕ್ಕೆ ಬ್ರೇಕ್ ಹಾಕಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ.
ಇನ್ನು ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುವಷ್ಟು ನಾನು ದೊಡ್ಡವನಲ್ಲ. ನಾನು ನನ್ನ ಕ್ಷೇತ್ರದ ಕಾರ್ಯಗಳಿಗಾಗಿ ದೆಹಲಿಗೆ ಬಂದಿದ್ದೇನೆ. ಕೇಂದ್ರ ಸಚಿವರನ್ನು ಭೇಟಿ ಮಾಡುತ್ತೇನೆ. ಉಸ್ತುವಾರಿಯನ್ನು ಸಾಧ್ಯವಾದರೆ ಭೇಟಿ ಮಾಡುತ್ತೇನೆ ಎಂದು ಶಾಸಕರು ಇದೇ ವೇಳೆ ಹೇಳಿದ್ದಾರೆ. ಇದನ್ನೂ ಓದಿ: ನಿರಾಣಿ ಬೆನ್ನಲ್ಲೇ ಅರವಿಂದ ಬೆಲ್ಲದ್ ವಾರಾಣಸಿ ಭೇಟಿ
ನಾಯಕತ್ವದ ಬದಲಾವಣೆ ಬಗ್ಗೆ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಈವರೆಗೂ ಹೈಕಮಾಂಡ್ ನಾಯಕರು ಏನೂ ಹೇಳಿಲ್ಲ. ಹೈಕಮಾಂಡ್ ನಾಯಕರು ಸೂಕ್ತ ನಿರ್ಧಾರ ತೆಗೆದುಕೊಳ್ತಾರೆ. ಸಿಎಂ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ನಕಲಿಯಾಗಿದ್ದು, ಇದರ ಹಿಂದೆ ಕಾಂಗ್ರೆಸ್ ಷಡ್ಯಂತ್ರ ರೂಪಿಸಿದೆ ಎಂದು ಶಾಸಕ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷರಿಗೆ ನಾನು ಬೆಳಗ್ಗೆ ಕರೆ ಮಾಡಿ ಮಾತನಾಡಿದ್ದೇನೆ. ಕಟೀಲ್ ಅವರೇ ಸ್ಪಷ್ಟವಾಗಿ ಹೇಳಿದ್ದಾರೆ, ಇದು ನನ್ನ ಧ್ವನಿ ಅಲ್ಲ. ನನ್ನ ಹೆಸರಿಗೆ ಕಳಂಕ ತರಲು ಈ ರೀತಿ ಷ್ಯಡ್ಯಂತ್ರ ರೂಪಿಸಿದ್ದಾರೆ ಎಂದಿದ್ದಾರೆ. ಅಲ್ಲದೆ ಕಟೀಲ್ ಅವರೇ ಪತ್ರ ಬರೆದು ತನಿಖೆಗೆ ಆಗ್ರಹಿಸಿದ್ದಾರೆ ಎಂದು ತಿಳಿಸಿದರು.
ಮುಖ್ಯಮಂತ್ರಿಗಳು ಕೇಂದ್ರದ ವರಿಷ್ಠರನ್ನು ಭೇಟಿ ಮಾಡಿದ್ದಾರೆ. ನೀವೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೀರಿ ಎಂದು ಹೇಳಿದ್ದಾರೆ. ಆದರೆ ಅಧ್ಯಕ್ಷರು ಮಾತನಾಡಿದ್ದಾರೆ ಎನ್ನುವ ಅಡಿಯೋ ನಕಲಿ ಅಡಿಯೋ. ಅವರ ವಿರುದ್ಧ ಕಾಂಗ್ರೆಸ್ ಷ್ಯಡ್ಯಂತ್ರ ರೂಪಿಸಿದೆ ಎಂದು ಶಾಸಕರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: Exclusive ಸಿಎಂ ಬದಲಾವಣೆ ಫಿಕ್ಸ್ – ಕಟೀಲ್ ಆಡಿಯೋ ವೈರಲ್
ನಾನು ಕೂಡ ಆಡಿಯೋವನ್ನು ಕೇಳಿದ್ದೇನೆ. ಆ ಧ್ವನಿ ಅವರದ್ದಲ್ಲ. ಎಲ್ಲೋ ಒಂದು ಕಡೆ ಮಿಕ್ಸಿಂಗ್ ಮಾಡಿ, ಅವರ ಹೆಸರಿಗೆ ಕಳಂಕ ತರುವ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಒಡೆದ ಮನೆಯಾಗಿದೆ, ಪಕ್ಷ ಅಧಿಕಾರಕ್ಕೆ ಬರೋದಿಲ್ಲ ಎನ್ನುವ ಮನವರಿಕೆಯಾಗಿದೆ. ಅದ್ದರಿಂದ ಕಾಂಗ್ರೆಸ್ಸಿನವರ ಕುತಂತ್ರದಿಂದ ಈ ಆಡಿಯೋ ಬಂದಿದೆ. ಆಡಿಯೋ ಕಾಂಗ್ರೆಸ್ ನವರ ಕುತಂತ್ರ. ತನಿಖೆ ನಡೆಸಲು ನಾವು ಕೂಡ ಒತ್ತಾಯ ಮಾಡುತ್ತೇವೆ ಎಂದರು. ಇದನ್ನೂ ಓದಿ: Exclusive: ಜುಲೈ 26ಕ್ಕೆ ಸಿಎಂ ಯಡಿಯೂರಪ್ಪ ರಾಜೀನಾಮೆ ಸಾಧ್ಯತೆ – ರಾಜಾಹುಲಿಗೆ ಹೈಕಮಾಂಡ್ ಸೂಚನೆ!
ಮುಖ್ಯಮಂತ್ರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲು ಸೂಚಿಸುತ್ತಾರೆ. ಯಡಿಯೂರಪ್ಪನವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಎಂದು ಅವರೇ ಸೂಚಿಸಿದ್ದರು. ರಾಜ್ಯದಲ್ಲಿ ಅವರ ವರ್ಚಸ್ಸು ಚೆನ್ನಾಗಿದೆ ಎಂದು ಕಟೀಲ್ ಅವರೇ ಹೇಳಿದ್ರು. ಯಡಿಯೂರಪ್ಪ ನೇತೃತ್ವದಲ್ಲಿ ಚುನಾವಣೆ ನಡೆಯಿತು, ಸಿಎಂ ಆಗಿ ಯಡಿಯೂರಪ್ಪ, ಅಧ್ಯಕ್ಷರಾಗಿ ಕಟೀಲ್ ಅವರನ್ನು ಸೂಚಿಸಿದರು ಎಂದರು.
ಸೌಜನ್ಯದ ವ್ಯಕ್ತಿ, ಸಂಘಟನೆಗೆ ಸಾಕಷ್ಟು ಆಸಕ್ತಿ ವಹಿಸಿದ್ದಾರೆ. ಪಕ್ಷದ ವಿರುದ್ಧ ಮಾತನಾಡಿದವರಿಗೆ ಅಧ್ಯಕ್ಷರೇ ನೋಟೀಸ್ ನೀಡಿದ್ದಾರೆ.
ದಾವಣಗೆರೆ: ಈಗ ಕೆಲವರು ಸೂಟು ಹೊಲಿಸಿ ಸಿಎಂ ಆಗುವ ತಿರುಕನ ಕನಸು ಕಾಣುತ್ತಿದ್ದಾರೆ. ಅವರ ಸೂಟು ಬೂಟು ಅವರ ಕ್ಷೇತ್ರದ ಜಾತ್ರೆಗಳಲ್ಲಿ ಹಾಕಿಕೊಳ್ಳಲಿ ಎಂದು ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟ ಕೋವಿಡ್ ಕೇರ್ ಸೆಂಟರ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಿಎಂ ವಿರೋಧಿಗಳಿಗೆ ತಿರುಗೇಟು ನಿಡಿದ ಶಾಸಕರು, ಯಡಿಯೂರಪ್ಪ ಅವರ ಪರವಾಗಿ 65 ಶಾಸಕರ ಸಹಿ ಸಂಗ್ರಹಿಸಿದ್ದು ಸತ್ಯ. ಸಿಎಂ ಹಾಗೂ ಪಕ್ಷದ ವರಿಷ್ಠರು ಹೇಳಿದ್ದಕ್ಕೆ ಸುಮ್ನನಾಗಿದ್ದೇವೆ. ಈಗ ಕೆಲವರು ಸೂಟು ಹೊಲಿಸಿ ಸಿಎಂ ಆಗುವ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಬಿಎಸ್‍ವೈಯ ಸಿಎಂ ಸ್ಥಾನಕ್ಕೆ ಕಂಟಕ ಬರಬಾರದೆಂದು ಮಂಡ್ಯದಲ್ಲಿ ಈಡುಗಾಯಿ ಸೇವೆ
ಧಾರವಾಡ ಹಾಗೂ ವಿಜಯಪುರ ಶಾಸಕರು ಇಂತಹ ಇಂತಹ ಕನಸು ಕಾಣುತ್ತಿದ್ದಾರೆ. ಈಗಾಗಲೇ ನನಗೆ ಪಕ್ಷದ ರಾಜ್ಯ ಉಸ್ತುವಾರಿ ಸಮಯ ನೀಡಿದ್ದಾರೆ. ಮೇಲಾಗಿ ನಮ್ಮ ಎಲ್ಲ ಶಾಸಕರು ಒಟ್ಟಾಗಿ ಉಸ್ತುವಾರಿಗೆ ಮನವರಿಕೆ ಮಾಡಿ ಕೊಡುತ್ತೇವೆ. ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಸಾಧ್ಯವೇ ಇಲ್ಲ ಎಂದರು.
ಯಾರೋ ಇಬ್ಬರು ಮೂರು ಜನ ದೆಹಲಿಗೆ ಹೋಗಿ ವರಿಷ್ಠರ ಮನೆ ಗೇಟ್ ಮುಟ್ಟಿ ಬಂದರೆ ಬದಲಾವಣೆ ಅಸಾಧ್ಯ. ಬದಲಾವಣೆ ಪ್ರಶ್ನೆಯೇ ತಿರುಕನ ಕನಸು ಕಾಣುತ್ತಿರುವುದು ವಿಚಿತ್ರವಾಗಿದೆ ಎಂದು ರೇಣುಕಾಚಾರ್ಯ ಟಾಂಗ್ ಕೊಟ್ಟರು. ಇದನ್ನೂ ಓದಿ: ಆರೋಗ್ಯ ತಪಾಸಣೆಗಾಗಿ ಅಮೆರಿಕಾಗೆ ತೆರಳಿದ ತಲೈವಾ
ಇಂದು ಅರುಣ್ ಸಿಂಗ್ ಆಗಮನ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿಯಾಗುತ್ತಿದ್ದಾರೆ. ಶಾಸಕ ರಾಜುಗೌಡ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಹಲವು ಶಾಸಕರು ಇಂದು ಸಿಎಂ ಅವರ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸುತ್ತಿದ್ದಾರೆ.