ಬೆಂಗಳೂರು: ಮುಡಾ (MUDA) ಕೇಸ್‌ನಲ್ಲಿ ಹೈಕಮಾಂಡ್ ಸಿದ್ದರಾಮಯ್ಯ (CM Siddarmaiah) ಪರ ಇದೆ. ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯ ಅವರಿಗೆ ನ್ಯಾಯ ಸಿಕ್ಕೇ ಸಿಗುತ್ತದೆ ಎಂದು ಸಚಿವ ಎಂ.ಬಿ ಪಾಟೀಲ್ (M B Patil) ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ನ್ಯಾಯಾಲಯದಲ್ಲಿ ಮುಡಾ ಕೇಸ್ ವಿಚಾರದಲ್ಲಿ ನಿಶ್ಚಿತವಾಗಿ ಗೆಲುವು ಸಿಗಲಿದೆ. ಮುಡಾ ಕೇಸ್ ನಲ್ಲಿ ಏನು ಇಲ್ಲ. ಇದರಲ್ಲಿ ತಪ್ಪು ಆಗಿರೋದು ಮುಡಾದಿಂದ. ಮುಡಾ ಜಮೀನು ಪಡೆದು ಸೈಟ್ ಮಾಡಿದೆ. ಇದೊಂದು ಫಾಲ್ಸ್ ಕೇಸ್, ಕೋರ್ಟ್‌ನಲ್ಲಿ ವಜಾ ಆಗುತ್ತದೆ. ಆದಾದ ಮೇಲೆ ಬಿಜೆಪಿ (BJP) ಅವರಿಗೆ ಅಪಮಾನ ಆಗುತ್ತದೆ ಎಂದಿದ್ದಾರೆ.
ಈ ಕೇಸ್‌ನಲ್ಲಿ ಗೆದ್ದು ಸಿದ್ದರಾಮಯ್ಯ ಅವರು ಮತ್ತಷ್ಟು ಬಲಿಷ್ಟರಾಗುತ್ತಾರೆ. ಕುಮಾರಸ್ವಾಮಿ, ನಿರಾಣಿ, ಜೊಲ್ಲೆ, ಎಲ್ಲರಿಗೂ ಅನುಮತಿ ಕೇಳಿದ್ದಾರೆ. ಕುಮಾರಸ್ವಾಮಿ ಮೇಲೂ ರಾಜಕೀಯವಾಗಿ ನಾವು ಅಟ್ಯಾಕ್ ಮಾಡಬೇಕು. ಸ್ವಲ್ಪ ದಿನ ಕಾಯಿರಿ. ಕೊರೊನಾ, ಪಿಎಸ್‌ಐ ಕೇಸ್ ಎಲ್ಲಾ ಹಗರಣ ಹೊರಗೆ ಬರಲಿದೆ. ಕೋರ್ಟ್‌ನಲ್ಲಿ ಸಿದ್ದರಾಮಯ್ಯಗೆ ನ್ಯಾಯ ಸಿಕ್ಕೇ ಸಿಗುತ್ತದೆ. ಅದರಲ್ಲಿ ಅನುಮಾನ ಇಲ್ಲ. ಹೈಕಮಾಂಡ್, ನಮ್ಮ ಶಾಸಕರು, ಸಚಿವರು, ಪಕ್ಷದ ಕಾರ್ಯಕರ್ತರು, ಸಿದ್ದರಾಮಯ್ಯ ಪರ ಇದ್ದಾರೆ. ಇಡೀ ಕಾಂಗ್ರೆಸ್ ಸಿದ್ದರಾಮಯ್ಯ ಪರ ಇದೆ. ಯಾರು ಸಿಎಂ ಸ್ಥಾನಕ್ಕೆ ಟವಲ್ ಹಾಕಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಮುಂದೆಯೂ ಸಿಎಂ ಆಗಿ ಇರುತ್ತಾರೆ ಎಂದು ಖಡಕ್ ಆಗಿ ಉತ್ತರಿಸಿದ್ದಾರೆ.
ಬಳಿಕ ಬಿಜೆಪಿಯವರ ಆಪರೇಷನ್ ಕಮಲ ಪ್ರಯತ್ನ ಮಾಡ್ತಿರೋ ವಿಚಾರವಾಗಿ ಮಾತನಾಡಿದ ಅವರು 100 ಕೋಟಿ ರೂ. ಅಲ್ಲ 500 ಕೋಟಿ ರೂ. ಕೊಟ್ಟರೂ ನಮ್ಮ ಶಾಸಕರು ಮಾರಾಟ ಆಗೋದಿಲ್ಲ. ಆಪರೇಷನ್ ಕಮಲ ಸಾಧ್ಯವೇ ಇಲ್ಲ ಅಂತ ಬಿಜೆಪಿ ನಾಯಕರಿಗೆ ಸಚಿವ ಎಂಬಿ ಪಾಟೀಲ್ ಸವಾಲ್ ಹಾಕಿದ್ದಾರೆ.
ನಮ್ಮ ಯಾವ ಶಾಸಕರು ಆಮಿಷಕ್ಕೆ ಬಲಿಯಾಗಲ್ಲ. 136 ಸ್ಥಾನ ಪಡೆದು ಬಾರಿ ಬಹುಮತದಿಂದ ಸರ್ಕಾರ ಮಾಡಿದ್ದೇವೆ. ಸರ್ಕಾರ ಬೀಳಬೇಕಾದ್ರೆ 2/3 ಶಾಸಕರನ್ನು ಕರೆದುಕೊಂಡು ಹೋಗಬೇಕು. ಅದು ಆಗದ ಮಾತು. ಬಿಜೆಪಿ-ಜೆಡಿಎಸ್‌ನಿಂದಲೂ 10-12 ಜನ ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿದ್ದಾರೆ. ಈ ಸರ್ಕಾರ ಕೆಡವಲು ಆಗೋದಿಲ್ಲ. ಆಪರೇಷನ್ ಕಮಲ ವರ್ಕೌಟ್ ಆಗೊಲ್ಲ. 100 ಕೋಟಿ ರೂ. ಅಲ್ಲ. 500 ಕೋಟಿ ರೂ. ಕೊಟ್ಟರೂ ನಮ್ಮ ಶಾಸಕರನ್ನು ಕರೆದುಕೊಂಡು ಹೋಗಲು ಆಗೋದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು: ನಗರದ ಹೊರವಲಯದಲ್ಲಿ ಸುಮಾರು 2,000 ಎಕರೆ ಪ್ರದೇಶದಲ್ಲಿ ‘ನಾಲೆಡ್ಜ್ -ಹೆಲ್ತ್- ಇನ್ನೋವೇಶನ್ ಆ್ಯಂಡ್ ರೀಸರ್ಚ್’ ಸಿಟಿ ಸ್ಥಾಪಿಸುವ ಉದ್ದೇಶವಿದ್ದು, ಯೋಜನೆಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ (M.B.Patil) ಹೇಳಿದರು.
ಬೆಂಗಳೂರು ಹೊರವಲಯದಲ್ಲಿ ಸುಮಾರು 2,000 ಎಕರೆ ಪ್ರದೇಶದಲ್ಲಿ ‘ನಾಲೆಡ್ಜ್ -ಹೆಲ್ತ್-ಇನ್ನೋವೇಶನ್ ಆ್ಯಂಡ್ ರೀಸರ್ಚ್’ ಸಿಟಿ ಸ್ಥಾಪಿಸಲು ಯೋಜಿಸಲಾಗಿದೆ. ಮೊದಲ ಹಂತದಲ್ಲಿ 1,000 ಎಕರೆ ಪ್ರದೇಶವನ್ನು ಅಭಿವೃದ್ಧಿ ಪಡಿಸಲಾಗುವುದು. ಈ ಸಿಟಿಯಲ್ಲಿ ವಿಶ್ವದರ್ಜೆಯ ವಿಶ್ವವಿದ್ಯಾಲಯ, ಆಸ್ಪತ್ರೆ, ಆವಿಷ್ಕಾರ-ಸಂಶೋಧನಾ ಕೇಂದ್ರಗಳಿರಲಿವೆ. ಈ ಯೋಜನೆ ಜಾಗತಿಕ ವಲಯದಲ್ಲಿ ಬೆಂಗಳೂರಿನ ಹೆಸರನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವುದರಲ್ಲಿ ಸಂದೇಹವಿಲ್ಲ ಎಂದು ತಿಳಿಸಿದರು.
ಕೈಗಾರಿಕಾ ಪ್ರದೇಶಗಳ ಮೂಲಸೌಕರ್ಯಗಳ ಸುಧಾರಣೆಗಾಗಿ ನಾವು ಮತ್ತೊಂದು ದಿಟ್ಟ ಹೆಜ್ಜೆ ಇಡುತ್ತಿದ್ದೇವೆ. ಸ್ಥಳೀಯ ಕೈಗಾರಿಕಾ ಅಸೋಸಿಯೇಷನ್‌ಗಳಿಗೆ ಪ್ರದೇಶದ ನಿರ್ವಹಣೆಯ ಜವಾಬ್ದಾರಿ ವಹಿಸಲಾಗುವುದು. ಇದರಿಂದ ಮೂಲಸೌಕರ್ಯದ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಲಿದೆ ಎಂಬ ವಿಶ್ವಾಸವಿದೆ ಎಂದರು.
ಸರ್ಕಾರ ಮತ್ತು ಉದ್ಯಮಗಳ ನಡುವಿನ ಅಂತರವನ್ನು ನೀಗಿಸುವ ನಿಟ್ಟಿನಲ್ಲಿ ಕೈಗಾರಿಕಾ ಪ್ರತಿನಿಧಿಗಳೊಂದಿಗೆ ಸಂವಾದ ಪ್ರಾರಂಭಿಸಿದ್ದೇನೆ. ಸ್ಟಾರ್ಟ್‌ಆ್ಯಪ್‌ಗಳಿಂದ ಆರಂಭಿಸಿ ಸಂಘಟಿತ ಸಂಸ್ಥೆಗಳವರೆಗೆ, ಏರೋಸ್ಪೇಸ್‌ನಿಂದ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕರ ಜತೆ ಮಾತುಕತೆ ಸಾಗಿದೆ. ಇದಲ್ಲದೇ ನೆದರ್‌ಲ್ಯಾಂಡ್ಸ್, ಜರ್ಮನಿ, ತೈವಾನ್ ಮತ್ತು ಇಸ್ರೇಲ್‌ನ ರಾಜತಾಂತ್ರಿಕರೊಂದಿಗೂ ಸಂವಾದ ನಡೆಯುತ್ತಿದ್ದು, ಈ ಮೂಲಕ ಕೈಗಾರಿಕಾ ಪರಿಸರಕ್ಕೆ ಪೂರಕ ವಾತಾವರಣ ಸೃಷ್ಟಿಸುವ ಕೆಲಸ ಆಗುತ್ತಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಕೆಲಸಕ್ಕೆ ಬಾರದವರು ಬಿಜೆಪಿ ಕಚೇರಿ ನಡೆಸುತ್ತಿದ್ದಾರೆ: ರೇಣುಕಾಚಾರ್ಯ ವಾಗ್ದಾಳಿ
‘ಇನ್ವೆಸ್ಟ್ ಕರ್ನಾಟಕ’ ವೇದಿಕೆ ಪುನಾರಚನೆ
ರಾಜ್ಯದಲ್ಲಿ ಸದೃಢ ಕೈಗಾರಿಕಾ ಪರಿಸರ ಸೃಷ್ಟಿ ಜತೆಗೆ ಬಂಡವಾಳ ಆಕರ್ಷಣೆಗೆ ‘ಇನ್ವೆಸ್ಟ್ ಕರ್ನಾಟಕ’ ವೇದಿಕೆಯನ್ನು ಪುನಾರಚಿಸಲಾಗುತ್ತಿದೆ. ಉದ್ಯಮದ ದಿಗ್ಗಜರು ಈ ಮಂಡಳಿಯ ಭಾಗವಾಗಿದ್ದಾರೆ. ವೆಂಚರ್ ಕ್ಯಾಪಿಟಲ್, ಪ್ರೈವೇಟ್ ಇಕ್ವಿಟಿ ಮತ್ತು ಮೂಲಸೌಕರ್ಯ ಅಭಿವೃದ್ಧಿಯಂತಹ ವಿವಿಧ ವಲಯಗಳ ಅನುಭವಿಗಳನ್ನು ಒಳಗೊಂಡ ‘ಕಾರ್ಯತಂತ್ರ ಹೂಡಿಕೆ ಸಮಿತಿ’ ರಚಿಸಲಾಗಿದೆ. ಇದಲ್ಲದೇ, ಸುಲಲಿತ ವ್ಯವಹಾರಕ್ಕೆ ಅನುವು ಮಾಡಲು ಅತ್ಯಾಧುನಿಕ ಏಕಗವಾಕ್ಷಿ ವ್ಯವಸ್ಥೆಯನ್ನು ರೂಪಿಸುವ ಕೆಲಸ ಆಗುತ್ತಿದೆ. ಈ ಸಂಬಂಧ ಹಲವಾರು ಸುತ್ತಿನ ಚರ್ಚೆಗಳು ನಡೆದಿದ್ದು, ಶೀಘ್ರದಲ್ಲೇ ಕ್ರಮ ವಹಿಸಲಾಗುತ್ತದೆ ಎಂದು ಇಲಾಖೆಯಲ್ಲಿ ಕೈಗೊಂಡಿರುವ ಹೊಸ ಕ್ರಮಗಳನ್ನು ವಿವರಿಸಿದರು.
ಹೊಸ ಕೈಗಾರಿಕಾ ನೀತಿ ರಚಿಸಲು ನಮ್ಮ ಸರ್ಕಾರ ಮುಂದಾಗಿದ್ದು, ಇದರಲ್ಲಿ ರಫ್ತಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಎಲೆಕ್ಟ್ರಿಕ್ ವೆಹಿಕಲ್ ಮತ್ತು ವೇರ್‌ಹೌಸಿಂಗ್ ಮತ್ತು ಲಾಜಿಸ್ಟಿಕ್ಸ್ ವಲಯಗಳಿಗೆ ಈಗಾಗಲೇ ಕರಡು ರೂಪುಗೊಂಡಿವೆ. ಸದ್ಯ ಇತರ ರಾಜ್ಯಗಳ ಕೈಗಾರಿಕಾ ನೀತಿಯ ಅಧ್ಯಯನ ನಡೆಯುತ್ತಿದ್ದು, ಶೀಘ್ರದಲ್ಲೇ ಪ್ರಗತಿಪರ ನೀತಿಯನ್ನು ಹೊರತರಲಿದ್ದೇವೆ. ಜತೆಗೆ ಆಕರ್ಷಕ ಪ್ರೋತ್ಸಾಹಕ ಪ್ಯಾಕೇಜ್‌ಗಳನ್ನು ಘೋಷಿಸಲಿದ್ದೇವೆ ಎಂದು ತಿಳಿಸಿದರು.
ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಬೆಳವಣಿಗೆಗೆ ಉತ್ತೇಜಿಸಲು 10 ಆದ್ಯತಾ ವಲಯಗಳಲ್ಲಿ ‘ವಿಷನ್ ಗ್ರೂಪ್’ ರಚಿಸುತ್ತೇವೆ. ಏರೋಸ್ಪೇಸ್ ಮತ್ತು ಡಿಫೆನ್ಸ್, ಮೆಷಿನ್ ಟೂಲ್ಸ್, ಇಎಸ್‌ಡಿಎಂ, ಫಾರ್ಮಾಸ್ಯುಟಿಕಲ್ಸ್, ಕೋರ್ ಮ್ಯಾನುಫ್ಯಾಕ್ಚರಿಂಗ್, ಆಟೋಮೋಟಿವ್/ಎಲೆಕ್ಟ್ರಿಕ್ ವೆಹಿಕಲ್ಸ್, ಇಂಡಸ್ಟ್ರಿ 5.0, ಟೆಕ್ಸ್‌ಟೈಲ್ಸ್ ಮತ್ತು ಗ್ರೀನ್ ಮತ್ತು ಉದಯೋನ್ಮುಖ ತಂತ್ರಜ್ಞಾನ ಒಳಗೊಂಡಿದೆ ಎಂದರು
60,000 ಕೋಟಿ ರೂ. ಹೂಡಿಕೆ ಒಪ್ಪಂದ
ಹೂಡಿಕೆದಾರರ ನೆಚ್ಚಿನ ತಾಣ ಕರ್ನಾಟಕ ಎನ್ನುವುದರಲ್ಲಿ ಎರಡು ಮಾತಿಲ್ಲ. ಅದಕ್ಕೆ ಸಾಕ್ಷಿಯಾಗಿ, ನೂರು ದಿನಗಳಲ್ಲಿ ಕರ್ನಾಟಕದಲ್ಲಿ ಬರೋಬ್ಬರಿ 60,000 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದ ಆಗಿದೆ. ಮುಖ್ಯವಾಗಿ ಇದರಿಂದ 30,000 ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಹೇಳಲು ಬಹಳ ಖುಷಿಯಾಗುತ್ತದೆ ಎಂದು ಸಚಿವರು ಹೇಳಿದರು. ಇದನ್ನೂ ಓದಿ: ಆದಿತ್ಯ ಎಲ್ 1 ಉಡಾವಣೆಗೂ ಮುನ್ನ ತಿರುಪತಿಗೆ ಭೇಟಿ ನೀಡಿದ ಇಸ್ರೋ ಮುಖ್ಯಸ್ಥ
ಫಾಕ್ಸ್‌ಕಾನ್, ಜೆಎಸ್‌ಡಬ್ಲ್ಯೂ ಎನರ್ಜಿ, ಟಾಟಾ ಎಲೆಕ್ಟ್ರಾನಿಕ್ಸ್ ಮತ್ತು ಐಬಿಸಿ ಮುಂತಾದ ಕಂಪನಿಗಳೊಂದಿಗಿನ ಫಲಪ್ರದ ಮಾತುಕತೆ ನಡೆಸಲಾಗಿದೆ. ಈ ಕಂಪನಿಗಳು ದೊಡ್ಡ ಮೊತ್ತದ ಹೂಡಿಕೆ ಒಪ್ಪಂದಗಳಿಗೆ ಸಹಿ ಮಾಡಿವೆ. ಈ ವಿವರಗಳನ್ನು ಈಗಾಗಲೇ ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ ಎಂದು ತಿಳಿಸಿದರು.
20ಕ್ಕೂ ಹೆಚ್ಚು ಸಾಂಭಾವ್ಯ ಹೂಡಿಕೆದಾರರ ಜತೆ ಮಾತುಕತೆ ನಡೆಯುತ್ತಿದ್ದು, ಇದು ಸಫಲವಾದರೆ ರಾಜ್ಯಕ್ಕೆ 1,00,000 ಕೋಟಿ ರೂಪಾಯಿ ಬಂಡವಾಳ ಹರಿದು ಬರಲಿದೆ. ಸಂಭಾವ್ಯ ಹೂಡಿಕೆದಾರರ ಪೈಕಿ ತೈವಾನ್, ಕೊರಿಯಾ ಮೂಲದ ಬಹುರಾಷ್ಟ್ರೀಯ ಕಂಪನಿಗಳು, ಸಾರ್ವಜನಿಕ ಮತ್ತು ಖಾಸಗಿ ವಲಯದ ಪ್ರಮುಖ ಕಂಪನಿಗಳು ಸೇರಿವೆ ಎಂದು ವಿವರ ನೀಡಿದರು.
2024 ಏಪ್ರಿಲ್‌ಗೆ ವಿಜಯಪುರ ವಿಮಾನ ನಿಲ್ದಾಣ
ವಿಜಯಪುರ ವಿಮಾನ ನಿಲ್ದಾಣದ ಕಾಮಗಾರಿಗಳು ಭರದಿಂದ ಸಾಗಿದ್ದು, 2024ರ ಏಪ್ರಿಲ್ ವೇಳೆಗೆ ಉದ್ಘಾಟನೆ ಮಾಡಲು ಎಲ್ಲ ಕ್ರಮಗಳನ್ನೂ ಕೈಗೊಳ್ಳಲಾಗುತ್ತಿದೆ. ಇದರಿಂದ ವಿಜಯಪುರ, ಬಾಗಲಕೋಟೆ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಆರ್ಥಿಕ ಬೆಳವಣಿಗೆಗೆ ಚೈತನ್ಯ ಬರಲಿದೆ. ಜತೆಗೆ ಹಾಸನ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ಕೆಎಸ್‌ಐಐಡಿಸಿ ವತಿಯಿಂದ ಉತ್ತರ ಕನ್ನಡದ ತದಡಿಯಲ್ಲಿ 1,819 ಎಕರೆ ವಿಸ್ತಾರದಲ್ಲಿ ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಇಕೋ ಟೂರಿಸಂ ಪಾರ್ಕ್ ಸ್ಥಾಪಿಸಲು ಅಗತ್ಯ ಕ್ರಮ ವಹಿಸಲಾಗುತ್ತಿದೆ. ಅಲ್ಲದೇ, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ 407 ಎಕರೆ ವಿಸ್ತೀರ್ಣದಲ್ಲಿ ದೆಹಲಿಯ ಏರೋ ಸಿಟಿ ಮಾದರಿಯಲ್ಲಿ ‘ಬಿಸಿನೆಸ್ ಪಾರ್ಕ್’ ಸ್ಥಾಪಿಸಲು ಯೋಜಿಸಲಾಗುತ್ತದೆ ಎಂದರು. ಇದನ್ನೂ ಓದಿ: ಪ್ರಜ್ವಲ್ ಜೊತೆ ರೇವಣ್ಣ, ಎ ಮಂಜು ಅನರ್ಹರಾಗುತ್ತಾರೆ: ಪ್ರಮೀಳಾ ನೇಸರ್ಗಿ
ಬೆಂಗಳೂರು ಸಬ್ಅರ್ಬನ್ ಯೋಜನೆಯ ಮೊದಲನೆಯ ಹಂತವು 149 ಕಿ.ಮೀ. ಇದ್ದು, 2ನೇ ಹಂತದಲ್ಲಿ 452 ಕಿ.ಮೀ.ಗಳಿಗೆ ವಿಸ್ತರಿಸಲು ಈಗಾಗಲೇ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಈ ಸಂಬಂಧ ಕೆ-ಆರ್‌ಐಡಿಇ ಸಂಸ್ಥೆಯು ಕೇಂದ್ರ ರೈಲ್ವೆ ಸಚಿವಾಲಯದ ಅನುಮತಿಯನ್ನು ನಿರೀಕ್ಷಿಸುತ್ತಿದೆ ಎಂದು ತಿಳಿಸಿದರು.
ಕರ್ನಾಟಕ ಮಾಡೆಲ್
ಚುನಾವಣೆ ಸಂದರ್ಭದಲ್ಲಿ ನೀಡಿದ್ದ 5 ಪ್ರಮುಖ ಭರವಸೆಗಳ ಪೈಕಿ ನಾಲ್ಕನ್ನು ಮೊದಲ 100 ದಿನಗಳಲ್ಲೇ ಈಡೇರಿಸಿದ್ದು ನಮ್ಮ ನೆಚ್ಚಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ಸಾಧನೆ. ಐದು ಗ್ಯಾರಂಟಿಗಳ ಪೈಕಿ ನಾಲ್ಕು- ಮಹಿಳಾ ಸಬಲೀಕರಣಕ್ಕಾಗಿಯೇ ರೂಪಿಸಿದ್ದೇವೆ. ಈ ಮೂಲಕ ಇಡೀ ದೇಶಕ್ಕೆ ನಾವು ‘ಕರ್ನಾಟಕ ಮಾಡೆಲ್’ ಏನೆಂದು ಸಾಬೀತು ಪಡಿಸಿದ್ದೇವೆ. ಯಾವುದೇ ಸರ್ಕಾರದ ಮೊದಲ 100 ದಿನಗಳನ್ನು ಸಾಮಾನ್ಯವಾಗಿ ಅದರ ಭವಿಷ್ಯದ ದಿಕ್ಸೂಚಿ ಎಂದೇ ಪರಿಗಣಿಸಲಾಗುತ್ತದೆ. ಮುಂದಿನ ಪ್ರಯತ್ನಗಳಿಗೆ ಇದು ನೀಲನಕ್ಷೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಎಸ್.ಸೆಲ್ವಕುಮಾರ್, ಕೈಗಾರಿಕಾಭಿವೃದ್ಧಿ ಆಯುಕ್ತ ಗುಂಜನ್ ಕೃಷ್ಣ, ಕೆಎಸ್ಐಐಡಿಸಿ ವ್ಯವಸ್ಥಾಪಕ ನಿರ್ದೇಶಕ ಡಾ.ಎಂ.ಆರ್.ರವಿ, ಎಂಎಸ್ ಐಎಲ್ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್, ಕೆಎಸ್‌ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯದ ಎಲ್ಲಾ ಹಳೇ ಕೈಗಾರಿಕಾ ಪ್ರದೇಶಗಳಲ್ಲಿ ಒಂದು ಬಾರಿ ಪೂರ್ಣ ಪ್ರಮಾಣದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ದಿಪಡಿಸಿದ ನಂತರ ಆಯಾ ಕೈಗಾರಿಕಾ ಸಂಘಗಳ ಸುಪರ್ದಿಗೇ ಅವುಗಳ ನಿರ್ವಹಣೆಯನ್ನು ಒಪ್ಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ದಿ ಸಚಿವ ಎಂ.ಬಿ. ಪಾಟೀಲ ಭರವಸೆ ನೀಡಿದರು.
ಮಂಗಳವಾರ ಬೆಂಗಳೂರಿನ ಉದ್ಯೋಗ ಮಿತ್ರ ಸಭಾಂಗಣದಲ್ಲಿ ರಾಯಚೂರು ಜಿಲ್ಲೆಯ ಕೈಗಾರಿಕಾ ಕ್ಷೇತ್ರದ ಅಭಿವೃದ್ದಿಗೆ ಸಂಬಂಧಿಸಿಂತೆ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಭೆಯಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ದಿ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶರಣ ಪ್ರಕಾಶ್ ಪಾಟೀಲ್, ರಾಯಚೂರು ಜಿಲ್ಲೆಯ ಶಾಸಕರು ಹಾಗೂ ರಾಯಚೂರು ಕೈಗಾರಿಕೋದ್ಯಮಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಮಾತನಾಡಿ, ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಹಲವಾರು ಅವಕಾಶಗಳಿವೆ. ಹಿಂದುಳಿದ ಪ್ರದೇಶವಾಗಿರುವ ಕಲ್ಯಾಣ ಕರ್ನಾಟಕದ ಪ್ರಮುಖ ವಾಣಿಜ್ಯ ಕೇಂದ್ರವಾಗಿ ರಾಯಚೂರು ಹೊರಹೊಮ್ಮುತ್ತಿದೆ. ಕೈಗಾರಿಕೆಗಳ ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿತರಾಗುವಂತೆ ಮಾಡುವ ನಿಟ್ಟಿನಲ್ಲಿ ನಾವುಗಳು ಅಗತ್ಯ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಕೈಗಾರಿಕೋದ್ಯಮಿಗಳು ಹಾಗೂ ಜನಪ್ರತಿನಿಧಿಗಳ ಸಮಸ್ಯೆಗಳನ್ನು ಆಲಿಸಿದ ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಮಾತನಾಡಿ, ರಾಜ್ಯದ ಕೈಗಾರಿಕಾ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿರುವುದು ನಮ್ಮ ಗಮನಕ್ಕೆ ಬಂದಿದೆ. ಇದನ್ನ ಸರಿಪಡಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಕೈಗಾರಿಕಾ ಪ್ರದೇಶಗಳಲ್ಲಿರುವ ಸಮಸ್ಯೆಗಳನ್ನು ಒಂದು ಬಾರಿ ಅಭಿವೃದ್ದಿ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ. ಮೂಲಭೂತ ಸೌಕರ್ಯಗಳ ಅಭಿವೃದ್ದಿ ಮತ್ತು ಸಮಸ್ಯೆಗಳ ನಿವಾರಣೆಯ ನಂತರ ಕೈಗಾರಿಕಾ ಪ್ರದೇಶಗಳನ್ನು ಕೈಗಾರಿಕಾ ಸಂಘಗಳಿಗೆ ವಹಿಸಿಕೊಡಲಾಗುವುದು. ಕೈಗಾರಿಕಾ ಪ್ರದೇಶದಿಂದ ಸಂಗ್ರಹವಾಗುವ ಕರದಲ್ಲಿ ಶೇಕಡಾ 70 ರಷ್ಟು ಕೈಗಾರಿಕಾ ಸಂಘಕ್ಕೆ ಮತ್ತು ಶೇಕಡಾ 30 ರಷ್ಟು ಆಯಾ ನಗರಸಭೆಗಳಿಗೆ ನೀಡಲಾಗುವುದು. ಇದರಿಂದ ಬಹಳಷ್ಟು ಸಮಸ್ಯೆಗಳು ನಿವಾರಣೆಯಾಗಲಿವೆ ಎಂದು ಹೇಳಿದರು.
ರೈಸ್ ಮಿಲ್‌ಗಳಿಗೆ ಮೀಸಲಾದ ನೀರಿನ ಪೈಪ್‌ಲೈನ್:
ರಾಯಚೂರು ನಗರದಲ್ಲಿ 90 ಕ್ಕೂ ಹೆಚ್ಚು ರೈಸ್‌ಮಿಲ್‌ಗಳಿವೆ. ಈ ರೈಸ್‌ಮಿಲ್‌ಗಳ ನಿರ್ವಹಣೆಗಾಗಿ ನೀರಿನ ಅಗತ್ಯವಿದೆ. ಕೈಗಾರಿಕಾ ಪ್ರದೇಶಗಳಿಗೆ ಮೀಸಲಾದ ನೀರಿನ ಸಂಪರ್ಕ ಇಲ್ಲದೆ ಇರುವ ಕಾರಣ ರೈಸ್ ಮಿಲ್‌ಗಳು ತುಂಬ ಸಮಸ್ಯೆಗೆ ಸಿಲುಕಿವೆ. ಅಲ್ಲದೇ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ರೈಸ್ ಮಿಲ್‌ಗಳನ್ನು ಸ್ಥಾಪಿಸಲು ನೀರಿನ ಅಗತ್ಯತೆ ಹೆಚ್ಚಾಗಿದೆ. ಈ ಸಮಸ್ಯೆಗೆ ಪರಿಹಾರ ಕಂಡು ಹಿಡಿಯುವ ನಿಟ್ಟಿನಲ್ಲಿ ರೈಸ್ ಮಿಲ್‌ಗಳಿಗೆ ಮೀಸಲಾದ ಪೈಪ್ ಲೈನ್ ನಿರ್ಮಾಣದ ವರದಿಯನ್ನ ಸಲ್ಲಿಸುವಂತೆ ಸಚಿವ ಎಂ.ಬಿ ಪಾಟೀಲ ಕೆಐಡಿಬಿ ಅಧಿಕಾರಿಗಳಿಗೆ ಸೂಚಿಸಿದರು.
ಔಷಧ ಕಂಪನಿಗಳ ತ್ಯಾಜ್ಯ ವಿಲೇವಾರಿ ಸೌಲಭ್ಯ ನಿರ್ಮಾಣಕ್ಕೆ ಆದ್ಯತೆ:
ಔಷಧ ಕಂಪನಿಗಳ ಹಬ್ ಆಗಿ ಹೊರಹೊಮ್ಮಿರುವ ರಾಯಚೂರು ಕೈಗಾರಿಕಾ ಪ್ರದೇಶದಲ್ಲಿ ಸಿಇಟಿಪಿಯ ಕೊರತೆಯಿದೆ. ಇದರಿಂದಾಗಿ ತ್ಯಾಜ್ಯವು ಅಂತರ್ಜಲ ಸೇರ್ಪಡೆಯಾಗುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ತ್ಯಾಜ್ಯ ವಿಲೇವಾರಿ ಸೌಲಭ್ಯವನ್ನು ಅಳವಡಿಸುವ ಕಾರ್ಯ ವಿಳಂಬವಾಗಿರುವುದನ್ನ ಕೈಗಾರಿಕೋದ್ಯಮಿಗಳು ಸಭೆಯ ಗಮನಕ್ಕೆ ತಂದರು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಸಚಿವರು, ಕೂಡಲೇ ತ್ಯಾಜ್ಯ ವಿಲೇವಾರಿ ಕೇಂದ್ರವನ್ನು ನಿರ್ಮಿಸಬೇಕು. ಇದಕ್ಕೆ ಈಗಾಗಲೇ ಅನುಮತಿ ನೀಡಿರುವ ಮದರ್ ಅರ್ಥ್ ಕಂಪನಿಯ ಜೊತೆಯಲ್ಲಿ ಚರ್ಚಿಸಿ ಕೈಗಾರಿಕೋದ್ಯಮಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಸೂಚಿಸಿದರು.
ರಾಯಚೂರಿನಲ್ಲಿ ಟೆಕ್ಸ್‌ಟೈಲ್ ಪಾರ್ಕ್ ನಿರ್ಮಾಣಕ್ಕೆ ಕೇಂದ್ರಕ್ಕೆ ಪ್ರಸ್ತಾಪ:
ರಾಯಚೂರು ಜಿಲ್ಲೆಯಲ್ಲಿ 120 ಕ್ಕೂ ಹೆಚ್ಚು ಜಿನ್ನಿಂಗ್ ಘಟಕಗಳಿವೆ. ಏಷಿಯಾದ 2 ನೇ ಅತಿದೊಡ್ಡ ಕಾಟನ್ ಮಾರ್ಕೆಟ್ ಆಗಿರುವ ಈ ಜಿಲ್ಲೆಯಲ್ಲಿ ಟೆಕ್ಸ್‌ಟೈಲ್ ಪಾರ್ಕ್ ನಿರ್ಮಾಣದ ಅವಶ್ಯಕತೆಯಿದೆ. ಈಗಾಗಲೇ ಕೇಂದ್ರ ಸರ್ಕಾರ ಯಾದಗಿರಿ ಜಿಲ್ಲೆಯಲ್ಲಿ ಟೆಕ್ಸ್‌ಟೈಲ್ ಪಾರ್ಕನ್ನು ನೀಡಲು ಅನುಮತಿ ನೀಡಿದೆ. ಈ ಹಿನ್ನಲೆಯಲ್ಲಿ ರಾಯಚೂರಿನಲ್ಲೂ ಇನ್ನೊಂದು ಟೆಕ್ಸ್‌ಟೈಲ್ ಪಾರ್ಕ್ ನಿರ್ಮಾಣಕ್ಕೆ ಅನುಮತಿ ನೀಡುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಈ ನಿಟ್ಟಿನಲ್ಲಿ ಅಗತ್ಯ ಮಾಹಿತಿಯನ್ನು ಸಂಗ್ರಹಿಸಿ ವರದಿ ತಯಾರಿಸುವಂತೆ ಕೈಗಾರಿಕಾ ಆಯುಕ್ತರಿಗೆ ಸಚಿವ ಎಂ.ಬಿ ಪಾಟೀಲ ಸೂಚಿಸಿದರು.
ರಾಯಚೂರಿನಲ್ಲಿ ವಂದೇ ಭಾರತ್ ರೈಲು ನಿಲುಗಡೆಗೆ ಕೇಂದ್ರಕ್ಕೆ ಮನವಿ ಸಲ್ಲಿಕೆ:
ಬೆಂಗಳೂರು- ಹೈದರಾಬಾದ್ ನಡುವೆ ಸಂಚರಿಸಲಿರುವ ವಂದೇ ಭಾರತ್ ರೈಲು ರಾಯಚೂರು ಮೂಲಕ ಸಂಚರಿಸುವ ಹಾಗೆ ಮಾಡಬೇಕು. ಹಾಗೆಯೇ ಅಲ್ಲಿ ನಿಲುಗಡೆಗೆ ಅವಕಾಶ ನೀಡುವಂತೆ ಕೇಂದ್ರ ರೈಲ್ವೇ ಇಲಾಖೆಗೆ ಪತ್ರ ಬರೆಯುವಂತೆ ಕೈಗಾರಿಕೋದ್ಯಮಿಗಳು ಸಚಿವರಿಗೆ ಮನವಿ ಮಾಡಿದರು. ಈ ನಿಟ್ಟಿನಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಕೈಗಾರಿಕಾ ಸಂಘಗಳ ಮನವಿಯ ಆಧಾರದ ಮೇಲೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವ ಭರವಸೆ ನೀಡಿದರು.
ಲಾಜಿಸ್ಟಿಕ್ ಪಾರ್ಕ್ ನಿರ್ಮಾಣ:
ರಾಯಚೂರು ನಗರ ಲಾಜಿಸ್ಟಿಕ್ ಹಬ್ ಆಗುವ ಎಲ್ಲಾ ರೀತಿಯ ಸೌಲಭ್ಯಗಳನ್ನ ಹೊಂದಿದೆ. ಹತ್ತಿರದಲ್ಲೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ರೈಲು ಮತ್ತು ರಾಷ್ಟ್ರೀಯ ಹೆದ್ದಾರಿಗಳ ನೆಟ್‌ವರ್ಕ್ ಇದ್ದು, ಈ ಬಗ್ಗೆಯೂ ಹೆಚ್ಚಿನ ಆಸಕ್ತಿ ವಹಿಸುವಂತೆ ಕೈಗಾರಿಕೋದ್ಯಮಿಗಳ ಮನವಿಗೆ ಸ್ಪಂದಿಸಿದ ಕೈಗಾರಿಕಾ ಸಚಿವರು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ದಿ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶರಣ ಪ್ರಕಾಶ್ ಪಾಟೀಲ್ ಸೇರಿದಂತೆ ಜಿಲ್ಲೆಯ ಶಾಸಕರು, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಸೆಲ್ವಕುಮಾರ್, ಕೈಗಾರಿಕಾ ಅಭಿವೃದ್ದಿ ಆಯುಕ್ತ ಗುಂಜನ್ ಕೃಷ್ಣ, ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಗಳು ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ವಿಜಯಪುರ: ಯುಗಾದಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಿದೆ ಎಂದು ಕೆಪಿಸಿಸಿ (KPCC) ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ (M.B. Patil) ವಿಜಯಪುರದಲ್ಲಿ (Vijayapura) ಹೇಳಿದ್ದಾರೆ.
ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ (Mallikarjun Kharge) ನೇತೃತ್ವದಲ್ಲಿ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಈಚೆಗೆ ಸಭೆ ನಡೆಸಲಾಗಿತ್ತು. ಈ ವೇಳೆ 125 ಅಭ್ಯರ್ಥಿಗಳ ಪಟ್ಟಿಯನ್ನು ಅಖೈರುಗೊಳಿಸಲಾಗಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಎಂ.ಬಿ.ಪಾಟೀಲ, ಯುಗಾದಿಗೆ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಯುಗಾದಿ ಒಳಗೆ ಕೆಆರ್‌ಪಿಪಿ ಪಕ್ಷದ ಚಿನ್ಹೆ ಗೊಂದಲ ಪರಿಹಾರ: ಜನಾರ್ದನ ರೆಡ್ಡಿ
ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ (Rahul Gandhi) ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ನಡುವೆ ನಡೆದ ಮಾತುಕತೆ ಬಗ್ಗೆ ಗೊತ್ತಿಲ್ಲ. ಸಿದ್ದರಾಮಯ್ಯ, ಬಾದಾಮಿ, ಕೋಲಾರ ಹಾಗೂ ವರುಣ ಕ್ಷೇತ್ರ ಎಲ್ಲಿ ನಿಂತರೂ ಚುನಾವಣೆಯಲ್ಲಿ ಗೆಲ್ಲುತ್ತಾರೆ. 40 ಸಾವಿರ ಮತಗಳ ಅಂತರದಲ್ಲಿ ಗೆಲ್ಲಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸರ್ಕಾರಕ್ಕೆ ಪತ್ರ ಬರೆದ ವಿಚಾರವಾಗಿ, ವಿರೋಧಿಗಳು ಚುನಾವಣೆ ಸಂದರ್ಭದಲ್ಲಿ ಖಾಸಗಿ ಮಾಹಿತಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ನನ್ನ ಫೋನ್ ಸಿಡಿಆರ್ (CDR) ತೆಗೆಯುವ ಕೆಲಸ ಮಾಡುತ್ತಿದ್ದಾರೆ. ಖಾಸಗಿ ಸಿಡಿಆರ್ ತೆಗೆದುಕೊಳ್ಳುವ ಅಧಿಕಾರ ಯಾರಿಗೂ ಇಲ್ಲ. ಅಧಿಕಾರಿಗಳು ಆಮಿಷಕ್ಕೊಳಗಾಗಿ ಫೋನ್ ಸಿಡಿಆರ್ ಕೊಡುವವರು ಇರುತ್ತಾರೆ. ಹಾಗೇನಾದರೂ ಆದರೆ ಸರ್ಕಾರವೇ ಜವಾಬ್ದಾರಿ ಎಂದು ಪತ್ರ ಬರೆದಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಡಿಕೆಶಿ ಕರ್ನಾಟಕದ ಇತಿಹಾಸದ ಕಥೆ ಬರೆಯಲು ತಿಹಾರ್ ಜೈಲಿಗೆ ಹೋದ್ರಾ? – ಕಟೀಲ್ ಟೀಕೆ
ಬಾಗಲಕೋಟೆ: ಸದ್ಯ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಪರ್ಸೆಂಟೇಜ್ ಪ್ರಕರಣ ಕಾವು ಪಡೆದುಕೊಂಡಿರುವ ಹೊತ್ತಿನಲ್ಲೇ ಶಿರಹಟ್ಟಿ ಜಗದ್ಗುರು ದಿಂಗಾಲೇಶ್ವರ ಸ್ವಾಮೀಜಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಗುಡುಗಿದ್ದಾರೆ.
ಈ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿರುವ ಅವರು, ಈಚೆಗೆ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಕೆಲಸ ಮಾಡುವುದಿಲ್ಲ. ಅವು ಏನಾಗ್ತಿವೆ ಎಂದು ಎಲ್ಲರಿಗೂ ಗೊತ್ತಿದೆ. ಒಬ್ಬ ಸ್ವಾಮೀಜಿಗೆ ಅನುದಾನ ಬಿಡುಗಡೆ ಮಾಡಬೇಕಿದ್ರೆ 30 ಪರ್ಸೆಂಟ್ ಕಮಿಷನ್ ಕೊಡಬೇಕು. ಆಗಲೇ ಮಠಗಳಳಲ್ಲಿ ಕಟ್ಟಡ ಕೆಲಸ ಶುರುವಾಗುತ್ತದೆ. ನೀವು ಇಷ್ಟು ದುಡ್ಡು ಕಟ್ಟದಿದ್ರೆ ನಿಮ್ಮ ಕೆಲಸ ಆಗಲ್ಲ ಎಂದು ಅಧಿಕಾರಿಗಳೇ ಹೇಳುವ ಪರಿಸ್ಥಿತಿ ಬಂದಿದೆ ಅಂದರೆ, ಭ್ರಷ್ಟಾಚಾರ ಎಲ್ಲಿಗೆ ಬಂದಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಇಬ್ಬರು, ಮೂವರು ಸಚಿವರನ್ನು ಬಿಟ್ಟು ಎಲ್ರೂ 40% ಕಮಿಷನ್ ಪಡೆಯುತ್ತಿದ್ದಾರೆ: ಎಂ.ಬಿ ಪಾಟೀಲ್
ಈಗ ಕಿಡಿಗೇಡಿಗಳ ಸರ್ಕಾರವೇ ಬರುತ್ತಿದೆ. ಉತ್ತರ ಕರ್ನಾಟಕಕ್ಕಾಗಿ ಕಾಕಾಗಳು (ಖಾದಿ -ಖಾವಿ) ಒಂದಾಗಿವೆ. ಆದರೆ, ಎಂದಿಗೂ ನಮ್ಮ ಹಕ್ಕು, ಸ್ವತ್ತನ್ನು ಕಳೆದುಕೊಳ್ಳಬಾರದು, ಅನ್ನೋದು ಎಸ್.ಆರ್.ಪಾಟೀಲ್ ಅವ್ರ ತಂಡದ ಮಾತಾಗಿದೆ. ಇನ್ನೇನು ಕೃಷ್ಣಾ ಮಹದಾಯಿ, ನವಲಿ ಯೋಜನೆಗಳು ಕಾರ್ಯರೂಪಕ್ಕೆ ಬಂದ್ರೆ ನಿಮ್ಮ ಭಾಗದ ಜನರ ಬಾಳು ಹಸನಾಗುತ್ತದೆ. ಒಂದು ವೇಳೆ ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ಜನರೇ ತಕ್ಕಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ:ಹೆಣ್ಣುಮಕ್ಕಳು ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು: ಡಾ.ನಾರಾಯಣ ಗೌಡ
ಕೆಲಸ ಮಾಡದಿದ್ರೆ ಏನ್ ಉಪಯೋಗ?: ಈ ಭಾಗದ ಮಂತ್ರಿಯೊಬ್ಬ ಸದಾ ಪ್ರಧಾನಮಂತ್ರಿ ಅವರೊಂದಿಗೆ ಇರ್ತಾನೆ. ಆದರೆ, ಕೇಂದ್ರದಿಂದ ರಾಜ್ಯಕ್ಕೆ ಏನೂ ಕೊಡುಗೆ ನೀಡ್ತಿಲ್ಲ. ಪ್ರಧಾನಿ ಹಿಂದೆ ಓಡಾಡೋದೆ ದೊಡ್ಡ ಕೆಲಸ ಅನ್ಕೊಂಡಿದ್ದಾನೆ. ನೀನು ಪಿಎಂ ಜೊತೆ ಅಡ್ಡಾಡಿದ್ರೂ, ಈ ಭಾಗಕ್ಕೆ ಏನು ಮಾಡದೇ ಇದ್ರೆ, ಪ್ರಯೋಜನ ಇಲ್ಲ ಎಂದು ಪರೋಕ್ಷವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ವಿರುದ್ಧ ಏಕವಚನದಲ್ಲೇ ಸ್ವಾಮೀಜಿ ಲೇವಡಿ ಮಾಡಿದರು.
ದೆಹಲಿ ಸರ್ಕಾರಕ್ಕೆ ಟಾಂಗ್: ನಮ್ಮ ಉತ್ತರ ಕರ್ನಾಟಕದವರು ಸ್ವಲ್ಪ ಜಾಗೃತರಾಗಿ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕು. ಕೆಲ ಭಾಗಗಳಲ್ಲಿ ಸ್ವಾಮೀಜಿಗಳಲ್ಲೇ ಇರುವ ತಾರತಮ್ಯ ನಿಲ್ಲಬೇಕು. ಈ ಹೋರಾಟ ಇಲ್ಲಿಗೆ ನಿಲ್ಲೋದು ಬೇಡ. ಇದು ಮುಂದುವರಿಯಬೇಕು. ಎಲ್ಲಿಯ ತನಕ ಈ ಭಾಗ ಅಭಿವೃದ್ಧಿ ಆಗುವವರೆಗೆ ನಿಮ್ಮ ಹೋರಾಟ ನಿಲ್ಲಬಾರದು. ನಾವೆಲ್ಲ ನಿಮ್ಮ ಜೊತೆಗಿರುತ್ತೇವೆ ಎಂದು ಹೋರಾಟಕ್ಕೆ ಬೆಂಬಲ ಘೋಷಿಸಿದರು.
ವಿಜಯಪುರ: ಒಂದಾದ ಮೇಲೆ ಒಂದು ವಿಷಯಗಳನ್ನು ವಿವಾದ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮೀತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಬಿಜೆಪಿ ವಿರುದ್ಧ ಕಿಡಿಕಾರಿದರು.
ಚಂದ್ರು ಹತ್ಯೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಗೃಹ ಸಚಿವರ ಆರಗ ಜ್ಞಾನೇಂದ್ರ ನೀಡಿದ್ದ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದರು. ಈ ವೇಳೆ ಅವರು, ಎಲ್ಲವೂ ಅತಿರೇಕವಾಗಿದೆ. ಮತಗಳ ಆಸೆ, ಮತಗಳ ಕ್ರೋಡೀಕರಣಕ್ಕಾಗಿ ಇದನ್ನೆಲ್ಲ ಮಾಡಲಾಗುತ್ತಿದೆ. ಒಂದಾದ ಮೇಲೆ ಒಂದು ವಿಷಯಗಳನ್ನು ವಿವಾದ ಮಾಡುತ್ತಿದ್ದಾರೆ ಎಂದು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ವಿಎಲ್‍ಸಿ ಮೀಡಿಯಾ ಪ್ಲೇಯರ್ ಬಳಸಿ ಚೀನಾ ಸೈಬರ್ ದಾಳಿ
ಹಿಜಬ್, ಕಾಶ್ಮೀರಿ ಫೈಲ್ಸ್ ವಿಚಾರ, ದೇವಸ್ಥಾನ ಜಾತ್ರೆ ನಿರ್ಬಂಧ ವಿಚಾರ, ಹಲಾಲ್, ಅಜಾನ್ ವಿವಾದ ಮಾಡಲಾಗುತ್ತಿದೆ. ಇದು ತಿರುಗುಬಾಣವಾಗಲಿದೆ. ಇದು ರಾಜ್ಯಕ್ಕೆ ಪರಿಣಾಮವಾಗಲಿದೆ. ಕೈಗಾರಿಕೆಗಳು, ಕೈಗಾರಿಕಾ ಉದ್ಯಮಿಗಳು ಇಲ್ಲಿ ಬರಲು ಹಿಂಜರಿಯುತ್ತಾರೆ. ಈ ಕಾರಣದಿಂದ ಇಂಡಸ್ಟ್ರಿಗಳು ಬೆಳೆಯಲ್ಲ. ಇಂಥ ವಿವಾದಗಳ ಕಾರಣದಿಂದಲೇ ಹೈದರಾಬಾದ್ ಬೆಳಗಾವಿಗೆ ಕೈಗಾರಿಕೆಗಳು ಹಾಗೂ ಕೈಗಾರಿಕಾ ಉದ್ಯಮಿಗಳು ಹೋಗುತ್ತಿರಲಿಲ್ಲ ಎಂದು ತಿಳಿಸಿದರು.
ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಇಂಥ ವಿವಾದಗಳನ್ನು ಸಾಮರಸ್ಯದಿಂದ ಬಗೆ ಹರಿಸಬೇಕು. ಬಿಜೆಪಿ ರಾಜಕೀಯ ಅತಿಯಾಗಿದೆ. ಬೆಂಗಳೂರಿನಲ್ಲಿ ಯುವಕನ ಕೊಲೆ ವಿಚಾರವಾಗಿ ಗೃಹ ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಯಾರೋ ನೀಡಿದ ಹೇಳಿಕೆಯನ್ನು ಹೇಳಿದ್ದಾರೆ. ನಮ್ಮ ನಾಡಿನಲ್ಲಿ ಸಂತರು ಮಹಾತ್ಮರು ನಡೆದಾಡಿದ್ದಾರೆ. ಇವೆಲ್ಲ ವಿವಾದಗಳ ಕುರಿತು ವಿಚಾರ ಮಾಡಬೇಕು ಎಂದು ಸಲಹೆ ಕೊಟ್ಟರು. ಇದನ್ನೂ ಓದಿ: ಕಾರ್ಯಕಾರಿಣಿ ಸಭೆ ಬಳಿಕ ಸಂಪುಟ ಸರ್ಜರಿ ಫೈನಲ್: ಸಿಎಂ
ಕೋಮು ಸೌಹಾರ್ಧತೆಯನ್ನು ಕೆಡಿಸುವ ಕೆಲಸ ಮಾಡಲಾಗುತ್ತಿದೆ. ಬದುಕನ್ನು ಕಟ್ಟೋ ಕೆಲಸವಾಗಬೇಕು. ರಾಜ್ಯ ಸರ್ಕಾರದಲ್ಲಿ ಅಭಿವೃದ್ಧಿ ಇಲ್ಲ. ಸರ್ಕಾರದಲ್ಲಿ ಹಣವಿಲ್ಲ, ಹಸಿದವರಿಗೆ ಅನ್ನವಿಲ್ಲ. ಇವೆಲ್ಲ ಸಮಸ್ಯೆಗಳನ್ನು ಮುಚ್ಚೋಕೆ ಇವೆಲ್ಲಾ ಮಾಡುತ್ತಿದ್ದಾರೆ. ಭಾರತ ಶ್ರೀಲಂಕಾ ಆಗಬಾರದು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಹಾವೇರಿ: ಕೊರೊನಾ ಸಂಕಷ್ಟದ ಸಮಯದಲ್ಲಿ ಕೊರೊನಾ ನಿರ್ವಹಣೆ ಬಿಟ್ಟು ಅಧಿಕಾರ ದಾಹ ಪ್ರದರ್ಶನ ಮಾಡುತ್ತಿದ್ದಾರೆ. ಕುರ್ಚಿ ದಾಹ ಬಿಡ್ರಿ, ಸರಿಯಾಗಿ ಕೆಲಸ ಮಾಡಿ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಒಬ್ಬರಿಗೊಬ್ಬರು ತಾಳ ಮೇಳ ಇಲ್ಲ. ಸಿಎಂ ಬದಲಾವಣೆ ಮಾಡಬೇಕು ಅಂತಾರೆ. ಪರಸ್ಪರ ಸಹಕಾರವಿಲ್ಲ. ಕೊರೊನಾ ಸಂದರ್ಭದಲ್ಲಿ ಜನರ ಜೀವ ಉಳಿಸೋ ಕೆಲಸ ಮಾಡಬೇಕು ಎಂದು ಎಂ.ಬಿ.ಪಾಟೀಲ್ ಅವರು ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಕೋವಿಡ್‍ನಲ್ಲಿ ಸುರೇಶ್ ಅಂಗಡಿಯವರನ್ನ ಕಳೆದುಕೊಂಡಿದ್ದೇವೆ. ಡಿಸಿಎಂ ಲಕ್ಷ್ಮಣ ಸವದಿಯವರ ಮನೆಯಲ್ಲಿ ಅವರ ಸಹೋದರರನ್ನ ಕಳೆದುಕೊಂಡಿದ್ದೇವೆ. ಕುರ್ಚಿ ಬಿಡ್ರಿ, ನಿಮ್ಮ ಮನೆ, ನಮ್ಮ ಮನೆಯಲ್ಲೂ ನೋವಾಗಿವೆ. ಸರಿಯಾಗಿ ಕೆಲಸ ಮಾಡಿ ಎಂದರು.
ನರ್ಸ್, ವೈದ್ಯರು ಗಂಟೆಗಟ್ಟಲೆ ಪಿಪಿಇ ಕಿಟ್ ಹಾಕೊಕೊಂಡು ನಮಗಾಗಿ ಕೆಲಸ ಮಾಡಿದ್ದಾರೆ. ಕೊರೊನಾದಲ್ಲಿ ವೈಫಲ್ಯ, ಬೆಲೆ ಏರಿಕೆ ನಿಯಂತ್ರಣ ಮಾಡಲು ಸಾಧ್ಯವಾಗಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರ ಅಧಿಕಾರದ ಮದದಲ್ಲಿವೆ. ಇವರು ಜನರ ಒಳಿತು ಬಯಸಿಲ್ಲ. ಈ ಸರ್ಕಾರಗಳು ತೊಲಗಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯೋ ನೈತಿಕ ಹಕ್ಕಿಲ್ಲ. ಲಕ್ಷಾಂತರ ಜನರ ಜೀವ ಕಳೆದಿದ್ದೀರಿ, ಲಕ್ಷಾಂತರ ಮಕ್ಕಳನ್ನ ಅನಾಥರನ್ನಾಗಿ ಮಾಡಿದ್ದೀರಿ, ಲಕ್ಷಾಂತರ ಕುಟುಂಬಗಳನ್ನ ಮುರಿದಿದ್ದೀರಿ. ಇದೆಲ್ಲದರ ಜೊತೆಗೆ ಜನರ ಮೇಲೆ ಭಾರ ಹಾಕಿದ್ದೀರಿ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯರಿಗೆ ವರುಣಾ ಕ್ಷೇತ್ರ ಬಿಟ್ಟು ಹೋಗ್ಬೇಡಿ ಅಂದಿದ್ದೆ: ಸುಧಾಕರ್
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಸರಕಾರ ಮೌಖಿಕ ಆದೇಶದ ಮೂಲಕ ತಪಾಸಣೆಗಳನ್ನು ಕಡಿಮೆಗೊಳಿಸಲಾಗಿದೆ. ಕರ್ನಾಟಕದಲ್ಲಿ ರೋಗಿಗಳ ಸಂಖ್ಯೆ ಇಳಿಮುಖವಾಗಿದೆ ಎಂದು ಅಂಕಿ ಅಂಶಗಳ ತೋರಿಸುವ ಮೂಲಕ ರಾಜ್ಯದ ಜನತೆಯ ಆರೋಗ್ಯದ ಸ್ಥಿತಿಯನ್ನು ತೀರ ಗಂಭೀರವಾಗಿಸುವತ್ತ ಸರ್ಕಾರ ಮುನ್ನಡೆದಿದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಆರೋಪಿಸಿದ್ದಾರೆ.
ಬಿ.ಎಲ್.ಡಿ.ಇ ವಿಶ್ವವಿದ್ಯಾಲಯದಲ್ಲಿ ಬಸವ ಜಯಂತಿ ಆಚರಣೆಯ ನಂತರ ವೈದ್ಯರನ್ನು ಉದ್ದೇಶಿಸಿ ಮಾತನಾಡಿ ಬಸವ ಜಯಂತಿಯ ಈ ಶುಭ ಸಂದರ್ಭದಲ್ಲಿ ನಾವೆಲ್ಲರೂ ಕೆರೊನಾ ವಿರುದ್ಧ ಇನ್ನೂ ಹೆಚ್ಚುಹೋರಾಟ ನಡೆಸಬೇಕಿದೆ, ಡಾ ಎಂ ಎಸ್ ಬಿರಾದಾರ ಅವರ ಆಕಸ್ಮಿಕ ಅಗಲಿಕೆಯಿಂದ ದೃತಿಗೆಡದೆ ನೀವೆಲ್ಲ ನನ್ನೊಂದಿಗೆ ಕೈಜೋಡಿಸಿ ರೋಗಿಗಳ ಸೇವೆ ಮಾಡೋಣ ಎಂದು ಕರೆ ನೀಡಿದೆ. pic.twitter.com/tDvlWXQxaQ
ಈ ಕುರಿತು ಹೇಳಿಕೆ ನೀಡಿರುವ ಅವರು ಕರ್ನಾಟಕದಲ್ಲಿ ರಾಜಧಾನಿ ಬೆಂಗಳೂರು ನಗರದಲ್ಲಿ ಅತೀ ಹೆಚ್ಚು ಪ್ರಕರಣಗಳು ದಾಖಲಾಗುತ್ತಿರುವುದರಿಂದ ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ ಕಳೆದ ವಾರದಿಂದ ತಪಾಸಣೆಗಳನ್ನು ಅತೀ ಕನಿಷ್ಠಗೊಳಿಸಲಾಗಿದೆ. ಇದರಿಂದ ಪಾಸಿಟಿವ್ ರೋಗಿಗಳ ಸಂಖ್ಯೆ ಸ್ವಾಬಾವಿಕವಾಗಿ ಇಳಿಮುಖವಾಗುತ್ತದೆ. ಇದೇ ಪ್ರಯೋಗವನ್ನು ರಾಜ್ಯಾದ್ಯಂತ ಮಾಡಲು ಹೊರಟಿರುವ ರಾಜ್ಯ ಸರಕಾರ, ಇಂದಿನಿಂದ ರಾಜ್ಯದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಕೇವಲ 10 ಆರ್.ಟಿ.ಪಿ.ಸಿ.ಆರ್ ತಪಾಸಣೆಗೆ ಸೀಮಿತಗೊಳಿಸಿ ಮಾತ್ರ ಮೌಖಿಕ ಆದೇಶ ಹೊರಡಿಸಿದೆ.
ಉದಾಹರಣೆಗೆ ವಿಜಯಪುರ ಜಿಲ್ಲೆಯಲ್ಲಿ ಪೆಭ್ರುವರಿಯಿಂದ ಇಲ್ಲಿಯವರಗೆ ಪ್ರತಿನಿತ್ಯ 4000 ತಪಾಸಣೆಗಳನ್ನು ಮಾಡಲಾಗುತ್ತಿತ್ತು, ಇದೀಗ ಜಿಲ್ಲೆಯಲ್ಲಿ 1660 ಆರ್.ಟಿ.ಪಿ.ಸಿ.ಆರ್ ಟೆಸ್ಟ್ ಗಳಿಗೆ ಗರಿಷ್ಠ ಅವಕಾಶ ನೀಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೂಡಾ ಪ್ರತಿನಿತ್ಯ 6000 ಆರ್.ಟಿ.ಪಿ.ಸಿ.ಆರ್ ಟೆಸ್ಟ್‌ಗಳನ್ನು 2500ಕ್ಕೆ ಇಳಿಸಲಾಗಿದೆ. ಇದರಿಂದ ರೋಗಿಗಳ ಸಂಖ್ಯೆ ಇಳಿಮುಖವಾಗಿದೆ ಎಂದು ತೋರಿಸುವ ಸರ್ಕಾರ ನಿಜವಾದ ರೋಗಿಗಳ ಸಂಖ್ಯೆಯನ್ನು ಮುಚ್ಚಿಟ್ಟು ರೋಗಿಗಳಿಗೆ ಚಿಕಿತ್ಸೆ ಸೌಲಭ್ಯವನ್ನು ಒದಗಿಸದೇ ವಂಚನೆ ಮಾಡುತ್ತಿರುವುದು ಅತ್ಯಂತ ಅಮಾನವೀಯ ಕೃತ್ಯ ಎಂದು ಎಂ.ಬಿ.ಪಾಟೀಲ ತಿಳಿಸಿದ್ದಾರೆ.
ಮಹಾನಗರ, ನಗರ, ಪಟ್ಟಣಗಳಲ್ಲಿ ಹೆಚ್ಚಾಗಿದ್ದ ಕೊರೊನಾ ಗ್ರಾಮಾಂತರ ಪ್ರದೇಶಕ್ಕೂ ವ್ಯಾಪಿಸಿದ್ದು, ಅತೀ ಕಡಿಮೆ ಜನಸಾಂದ್ರತೆ ಹೊಂದಿರುವ ಮಲೆನಾಡಿನ ಹಳ್ಳಿಗಳಲ್ಲಿಯೂ ಇದು ವ್ಯಾಪಕವಾಗಿ ಹಬ್ಬುತ್ತಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಇದರ ಹರಡುವಿಕೆಯನ್ನು ಗಮನಿಸಿದರೆ ಈ ರೋಗದ ಭೀಕರತೆ ತಿಳಿಯುತ್ತದೆ.
ಇಂತಹ ಸ್ಥಿತಿಯಲ್ಲಿ ಸರಕಾರ ಹೆಚ್ಚೆಚ್ಚು ಆರ್.ಟಿ.ಪಿ.ಸಿ.ಆರ್. ಟೆಸ್ಟ್‌ಗಳನ್ನು ಮಾಡಿ, ಅಗತ್ಯವಿರುವ ರೋಗಿಗಳಿಗೆ ಚಿಕಿತ್ಸೆ ಸೌಲಭ್ಯ, ಔಷಧಿ ಒದಗಿಸಲು ಮುಂದಾಗಬೇಕು ಅದನ್ನು ಬಿಟ್ಟು ವಾಮ ಮಾರ್ಗದ ಮೂಲಕ ರೋಗಿಗಳ ಸಂಖ್ಯೆ ಇಳಿಕೆಯಗಿದೆ ಎಂದು ತೋರಿಸುವ ಮೂಲಕ ಮಾಡಿದೆ ಎಂದು ರಾಜ್ಯದ ಜನತೆಯನ್ನು ಮತ್ತಷ್ಟು ಪ್ರಪಾತಕ್ಕೆ ದೂಡುವ ಕಾರ್ಯ ಇದಾಗಿದೆ ಎಂದು ಎಂ.ಬಿ.ಪಾಟೀಲ ತಿಳಿಸಿದ್ದಾರೆ.