Tag: ಎಂ. ಲಕ್ಷ್ಮಣ್

  • ಮುಂದೆ ಕೇಂದ್ರದಲ್ಲಿ ಕಾಂಗ್ರೆಸ್‌ ಬಂದ್ರೆ 100% ಆರ್‌ಎಸ್‌ಎಸ್‌ ಬ್ಯಾನ್‌: ಎಂ. ಲಕ್ಷ್ಮಣ್‌

    ಮುಂದೆ ಕೇಂದ್ರದಲ್ಲಿ ಕಾಂಗ್ರೆಸ್‌ ಬಂದ್ರೆ 100% ಆರ್‌ಎಸ್‌ಎಸ್‌ ಬ್ಯಾನ್‌: ಎಂ. ಲಕ್ಷ್ಮಣ್‌

    – ವೋಟ್‌ ಚೋರಿ ಮೂಲಕ ಚುನಾವಣೆ ಗೆಲ್ಲಿಸ್ತಿರೋದೇ ಆರ್‌ಎಸ್‌ಎಸ್‌
    – ಇಡೀ ದೇಶವನ್ನೇ ಹಾಳು ಮಾಡ್ತಿರೋದೇ ಆರ್‌ಎಸ್‌ಎಸ್‌ ಅಂತ ಲೇವಡಿ

    ಮಡಿಕೇರಿ: ಮುಂದೆ ಕೇಂದ್ರದಲ್ಲಿ ಕಾಂಗ್ರೆಸ್‌ (Congress) ಅಧಿಕಾರಕ್ಕೆ ಬಂದ್ರೆ 100% ಆರ್‌ಎಸ್‌ಎಸ್‌ ಬ್ಯಾನ್‌ ಮಾಡಲಾಗುವುದು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ (M Lakshman) ಹೇಳಿದರು.

    ಮಡಿಕೇರಿ ನಗರದಲ್ಲಿ (Madikeri City) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್‌ ಅವರು ಕರಿ ಟೋಪಿ ಎಂದು ಕರೆದಿದ್ದಕ್ಕೆ ನಾನು ಮೆಚ್ಚುಗೆ ವ್ಯಕ್ತಪಡಿಸುತ್ತೇನೆ ಎಂದರು. ಇದನ್ನೂ ಓದಿ: ಸರ್ಕಾರಿ ಸ್ಥಳಗಳು, ಮುಜರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ ಎಲ್ಲಾ ಚಟುವಟಿಕೆ ಬ್ಯಾನ್‌?

    ಆರ್‌ಎಸ್‌ಎಸ್‌ ಏನು ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿರುವ ಸಂಘನಾ? ಮಹಾತ್ಮಗಾಂಧಿಯನ್ನು ಕೊಂದ ಸಂಘ ಅದು. ಇಡೀ ದೇಶದಲ್ಲಿ ಕೋಮುಗಲಭೆ ಹರಿಸುತ್ತಿರುವ ಒಂದು ಸಂಸ್ಥೆ. ಆ ಸಂಸ್ಥೆಯನ್ನು ಬ್ಯಾನ್‌ ಮಾಡುವ ಕೆಲಸವನ್ನು ಕಾಂಗ್ರೆಸ್‌ ಪಕ್ಷ ಮಾಡಬೇಕಿತ್ತು. ಆದ್ರೆ ಆಗಲಿಲ್ಲ. ಮುಂದೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ್ರೆ ನೂರಕ್ಕೆ ನೂರರಷ್ಟು ಬ್ಯಾನ್‌ ಆಗುತ್ತೆ. ಬ್ಯಾನ್‌ ಮಾಡಿದ್ರೆ ನಮ್ಮ ದೇಶದಲ್ಲಿ ಶಾಂತಿಯುತ ಬಾಳ್ವೆ ಮಾಡುವ ಅವಕಾಶ ಸಿಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಈ ಪ್ರತಾಪ್ ಸಿಂಹ ಯಾರ್ರೀ, ಅವರ ಆರೋಪ ಗಂಭೀರವಾಗಿ ತೆಗೆದುಕೊಳ್ಳಬೇಕಿಲ್ಲ: ಯತೀಂದ್ರ ಸಿದ್ದರಾಮಯ್ಯ

    ಚುನಾವಣೆಗಳನ್ನ ವೋಟ್‌ ಚೋರಿ ಮೂಲಕ ಗೆಲ್ಲುವಂತಹ ಕೆಲಸ ಮಾಡುತ್ತಿರುವುದೇ ಆರ್‌ಎಸ್‌ಎಸ್‌. ಅಂಥವರನ್ನ ಚಡ್ಡಿ, ಟೋಪಿ ಹಾಕಿರುವಂತಹ ವ್ಯಕ್ತಿಯನ್ನ ಕರಿಟೋಪಿ, ಕಳ್ಳ ಅಂತ ಕರೆದರೂ ಒಪ್ಪಿಕೊಳ್ತೇನೆ. ಇಡೀ ದೇಶವನ್ನ ಹಾಳು ಮಾಡ್ತಿರೋದೇ ಆರ್‌ಎಸ್‌ಎಸ್‌. ಇದು ತೊಲಗಬೇಕು ಅಂತ ರಾಹುಲ್‌ ಗಾಂಧಿ ಅವರು ದಿನನಿತ್ಯ ಹೋರಾಟ ಮಾಡ್ತಿದ್ದಾರೆ. ಅದೆಲ್ಲದಕ್ಕೂ ನಮ್ಮ ಬೆಂಬಲ ಇದೆ ಎಂದು ಹೇಳಿದರು. ಇದನ್ನೂ ಓದಿ: ಶಾಸಕರಿಗೆ ತಾಳ್ಮೆ ಇಲ್ಲ, ಕಾರ್ಯಕ್ರಮ ಹಾಳು ಮಾಡಲು ಬಂದಿದ್ದಾರೆ: ಮುನಿರತ್ನ ವಿರುದ್ಧ ಡಿಕೆಶಿ ಕಿಡಿ

  • ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲೂ ಮತಗಳ್ಳತನ ಮಾಡಿಯೇ ಬಿಜೆಪಿ ಗೆದ್ದಿದೆ – ಎಂ.ಲಕ್ಷ್ಮಣ್‌ ಆರೋಪ

    ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲೂ ಮತಗಳ್ಳತನ ಮಾಡಿಯೇ ಬಿಜೆಪಿ ಗೆದ್ದಿದೆ – ಎಂ.ಲಕ್ಷ್ಮಣ್‌ ಆರೋಪ

    – ಧರ್ಮಸ್ಥಳ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗೇ ಆಗುತ್ತೆ ಎಂದ ಕೆಪಿಸಿಸಿ ವಕ್ತಾರ

    ಮಡಿಕೇರಿ: ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಲ್ಲೂ ಮತಗಳ್ಳತನ (Vote Rigging) ನಡೆದಿದೆ ಎಂದು ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ (M Lakshman) ಆರೋಪಿಸಿದ್ದಾರೆ.

    ಮಡಿಕೇರಿಯಲ್ಲಿಂದು ಮಾತನಾಡಿದ ಅವರು, ಬೆಂಗಳೂರಿನಲ್ಲಿ (Bengaluru) ರಾಹುಲ್‌ ಗಾಂಧಿ ಅವರು ನಡೆಸಿದ ಪ್ರತಿಭಟನಾ ಸಭೆಯಲ್ಲಿ ಮೈಸೂರು-ಕೊಡಗು (Mysuru Kodagu) ಕ್ಷೇತ್ರದಲ್ಲೂ ಮತಗಳ್ಳತನ ಆಗಿರುವ ಬಗ್ಗೆ ಪ್ರಸ್ತಾಪಿಸಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಬರುವ ಮತಗಳು ಬಹುತೇಕ ಕಳವಾಗಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಚುನಾವಣಾ ಆಯೋಗಕ್ಕೆ ದೂರು ನೀಡಲಿದ್ದೇನೆಂದು ತಿಳಿಸಿದ್ದೇನೆ. ಇದನ್ನೂ ಓದಿ: ಪ್ರತಾಪ್‌ ಸಿಂಹ ಮೊಬೈಲ್‌ SITಗೆ ಕೊಟ್ರೆ ಪ್ರಜ್ವಲ್‌ ರೇವಣ್ಣನಂತೆ ಜೈಲು ಶಿಕ್ಷೆ ಆಗುತ್ತೆ – ಎಂ.ಲಕ್ಷ್ಮಣ್ ಬಾಂಬ್‌

    ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 23 ಲಕ್ಷ ಮತದಾರರಿದ್ದು, 8 ವಿಧಾನಸಭಾ ಕ್ಷೇತ್ರಗಳಲ್ಲಿ 2,202 ಮತಗಟ್ಟೆಗಳಿವೆ. ಬೂತ್‌ ವಾರು ವಿಶ್ಲೇಷಣೆ ಮಾಡಿ ಪಟ್ಟಿ ಮಾಡಲಾಗಿದ್ದು, 292 ಮತಗಟ್ಟೆಗಳಲ್ಲಿ ಇವಿಎಂ ರಿಗ್ಗಿಂಗ್ ನಡೆದಿರುವ ಬಗ್ಗೆ ದಾಖಲೆ ಸಂಗ್ರಹಿಸಲಾಗಿದೆ. ಮೈಸೂರಿನ ಚಾಮರಾಜ, ಕೃಷ್ಣರಾಜ, ಮಡಿಕೇರಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ 1,45,616 ಮತ ಚಲಾವಣೆಯಾಗಿದ್ದು, ಕಾಂಗ್ರೆಸ್‌ 27,522 ಹಾಗೂ ಬಿಜೆಪಿಗೆ 1,18,094 ಮತ ಬಂದಿವೆ. 2018, 2023ರ ವಿಧಾನಸಭಾ ಚುನಾವಣೆ ಹಾಗೂ 2019ರ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆ ಶೇ 40ಕ್ಕಿಂತ ಹೆಚ್ಚು ಮತಗಳು ಬಂದಿದ್ದವು. ಆದರೆ, 2024ರ ಚುನಾವಣೆಯಲ್ಲಿ ಶೇ 10ಕ್ಕಿಂತಲೂ ಕಡಿಮೆ ಮತಗಳು ಮಾತ್ರ ಬಂದಿರುವುದು ಮತಗಳವು ಆಗಿರೋದಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದ್ದಾರೆ.

    ಗ್ರಾಮವೊಂದರ ಬೂತ್‌ ನಲ್ಲಿ 750 ಮತ ಚಲಾವಣೆಯಾಗಿದ್ದು, 15 ಮನೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರಿದ್ದಾರೆ. ಕನಿಷ್ಠ 50 ಮತಗಳಾದರೂ ಬರಬೇಕಿತ್ತು. ಆದ್ರೆ ಬಂದಿದ್ದು 7 ಮತ ಮಾತ್ರ. ನರಸಿಂಹರಾಜ ಕ್ಷೇತ್ರದ ಶಾಂತಿನಗರದಲ್ಲಿ ಒಂದೇ ಸಮುದಾಯ ಮಾತ್ರವೇ ಇದೆ. 700 ಮತಗಳಲ್ಲಿ 500 ಕಾಂಗ್ರೆಸ್‌ಗೆ ಮತ್ತು ಬಿಜೆಪಿಗೆ 200 ಮತ ಸಿಕ್ಕಿವೆ. ಇಲ್ಲಿ ಬಿಜೆಪಿಗೆ ಒಂದೇ ಒಂದೂ ವೋಟು ಸಿಗುವ ಅವಕಾಶ ಇಲ್ಲ. ಜೊತೆಗೆ 700 ಮತದಾರರಿದ್ದರೂ 750 ಮತಗಳು ಚಲಾವಣೆಯಾಗಿವೆ. ಈವೆಲ್ಲವೂ ಮತ ಕಳವು ಆಗಿರುವುದಕ್ಕೆ ಸ್ಪಷ್ಟ ನಿದರ್ಶನ ಎಂದು ಅರೋಪಿಸಿದ್ರು. ಇದನ್ನೂ ಓದಿ: ಬೆಂಗಳೂರು-ಬೆಳಗಾವಿ ವಂದೇಭಾರತ್‌ ರೈಲಿಗೆ ಮೋದಿ ಹಸಿರು ನಿಶಾನೆ

    ಧರ್ಮಸ್ಥಳ ಕೇಸ್‌; ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತೆ
    ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಲಕ್ಞ್ಮಣ್‌, ದೂರುದಾರ ಕೋರ್ಟ್‌ನಲ್ಲಿ ನೇರವಾಗಿ ಹೇಳಿಕೆ ನೀಡಿದ್ದಾರೆ. ಅದರ ಆಧಾರದ ಮೇಲೆ ಎಸ್‌ಐಟಿ ರಚನೆ ಮಾಡಿ ತನಿಖೆ ನಡೆಸುತ್ತಿದೆ. ತನಿಖೆಯೇ ಮಾಡಬಾರದು ಅಂದ್ರೆ ಹೇಗೆ? ಇಲ್ಲಿ ಧರ್ಮಸ್ಥಳ ದೇವಸ್ಥಾನದ ಬಗ್ಗೆಯಾಗಲಿ, ವೀರೇಂದ್ರ ಹೆಗ್ಗಡೆಯವರ ಬಗ್ಗೆಯಾಗಲಿ ತನಿಖೆ ಮಾಡುತ್ತಿಲ್ಲ. ದೂರುದಾರ 164 ಅಡಿಯಲ್ಲಿ ಹೇಳಿಕೆ ನೀಡಿದ್ದರಿಂದ ಎಸ್‌ಐಟಿ ತನಿಖೆ ನಡೆಯುತ್ತಿದೆ. ಆದಷ್ಟು ಬೇಗ ತನಿಖೆ ಪೂರ್ಣಗೊಳ್ಳಲಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ಕೊಡುವ ಕೆಲಸವನ್ನು ಸರ್ಕಾರ ಮಾಡೇ ಮಾಡುತ್ತೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರಿಗೆ ಬಿಜೆಪಿಯ ಯಾವೊಬ್ಬ ನಾಯಕ 10 ರೂ. ಅನುದಾನ ತಂದಿಲ್ಲ: ಡಿಕೆಶಿ ಆಕ್ರೋಶ

  • ಪ್ರತಾಪ್‌ ಸಿಂಹ ಮೊಬೈಲ್‌ SITಗೆ ಕೊಟ್ರೆ ಪ್ರಜ್ವಲ್‌ ರೇವಣ್ಣನಂತೆ ಜೈಲು ಶಿಕ್ಷೆ ಆಗುತ್ತೆ – ಎಂ.ಲಕ್ಷ್ಮಣ್ ಬಾಂಬ್‌

    ಪ್ರತಾಪ್‌ ಸಿಂಹ ಮೊಬೈಲ್‌ SITಗೆ ಕೊಟ್ರೆ ಪ್ರಜ್ವಲ್‌ ರೇವಣ್ಣನಂತೆ ಜೈಲು ಶಿಕ್ಷೆ ಆಗುತ್ತೆ – ಎಂ.ಲಕ್ಷ್ಮಣ್ ಬಾಂಬ್‌

    – ಪ್ರತಾಪ್‌ ಸಿಂಹ ಮೊಬೈಲ್‌ ನೋಡಿ ಅಮಿತ್‌ ಶಾ ದಿಗ್ಭ್ರಮೆಗೊಂಡಿದ್ದರು

    ಮಡಿಕೇರಿ: ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಮೊಬೈಲ್ ಫೋನ್‌ನಲ್ಲಿ (Mobile Phone) ಸಂಗ್ರಹವಾಗಿರುವ ಫೋಟೋಗಳು ಮತ್ತು ವೀಡಿಯೊಗಳ ಬಗ್ಗೆ ತನಿಖೆ ನಡೆಸಿದರೆ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಂತೆ ಅವರಿಗೂ ಜೈಲು ಶಿಕ್ಷೆಯಾಗಲಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ (M Lakshman) ಅವರು ಹೊಸ ಬಾಂಬ್ ಸಿಡಿಸಿದ್ದಾರೆ.

    ಮಡಿಕೇರಿಯಲ್ಲಿ (Madikeri) ಮಾತಾನಾಡಿದ ಅವರು, 2023 ರಲ್ಲಿ ಸಂಸತ್ತಿನ ಭದ್ರತಾ ಉಲ್ಲಂಘನೆ ಘಟನೆ ಬಳಿಕ ಪ್ರತಾಪ್ ಸಿಂಹ ಅವರ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಈ ವೇಳೆ ಪ್ರತಾಪ್ ಸಿಂಹ (Pratap Simha) ಮೊಬೈಲ್‌ನಲ್ಲಿ ನಗ್ನ ಚಿತ್ರಗಳು, ನಗ್ನ ವೀಡಿಯೋಗಳು ಕಂಡು ಬಂದಿದ್ದವು. ಇದನ್ನು ನೋಡಿದ ಅಮಿತ್ ಶಾ ಅವರೇ ದಿಗ್ಭ್ರಮೆಗೊಂಡಿದ್ದರು. ಈ ಬಗ್ಗೆ ನನ್ನ ಬಳಿ ಆಧಾರಗಳಿವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಬ್ಬಕ್ಕೆ ಡಿಸ್ಕೌಂಟ್‌ – ರೈಲ್ವೇ ಟಿಕೆಟ್‌ ದರ 20% ಕಡಿತ, ಷರತ್ತುಗಳು ಏನು?

    ಪ್ರಜ್ವಲ್ ರೇವಣ್ಣ ರೀತಿಯಲ್ಲಿಯೇ ಪ್ರತಾಪ್ ಸಿಂಹ ಅವರ ಮೊಬೈಲ್‌ನಲ್ಲಿ ವೀಡಿಯೋಗಳಿವೆ. ಅಂತಹ ವಿಡಿಯೋ ಇರುವುದಕ್ಕೆ ಗೃಹ ಸಚಿವರು ಪ್ರತಾಪ್ ಸಿಂಹ ಮೊಬೈಲ್ ಸೀಜ್‌ ಮಾಡಿಸಿದ್ದರು. ಪ್ರತಾಪ್ ಸಿಂಹ ಅಶ್ಲೀಲ ವಿಡಿಯೋಗಳು ನನ್ನ ಮೊಬೈಲ್‌ನಲ್ಲೇ ಇವೆ, ಮೊಬೈಲ್‌ನಲ್ಲಿರುವ ವಿಡಿಯೋಗಳನ್ನು ನೋಡಿದ ನಂತರವೇ ಬಿಜೆಪಿ ನಾಯಕರು ಪ್ರತಾಪ್ ಸಿಂಹಗೆ ಲೋಕಸಭಾ ಟಿಕೆಟ್ ನೀಡಬಾರದು ಎಂಬ ನಿರ್ಧಾರ ಕೈಗೊಂಡರು. ಇಂತಹ ಪ್ರತಾಪ್ ಸಿಂಹಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಲ್ಲಿಕಾರ್ಜುನ ಖರ್ಗೆ ಪ್ರದೀಪ್ ಈಶ್ವರ್ ಸೇರಿದಂತೆ ಹಲವಾರು ನಾಯಕರಿಗೆ ಬೈಯೋದೆ ಇವನ ಕೆಲಸವಾಗಿದೆ‌. ದೆಹಲಿಯಲ್ಲಿ ಇವರಿಗೆ ಬ್ಲೂ ಬಾಯ್‌ ಎನ್ನುತ್ತಾರೆಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರು-ಬೆಳಗಾವಿ ವಂದೇಭಾರತ್‌ ರೈಲಿಗೆ ಮೋದಿ ಹಸಿರು ನಿಶಾನೆ

    ಪ್ರತಾಪ್‌ ಸಿಂಹಗೆ ಕಾಂಗ್ರೆಸ್ ಪಕ್ಷ ಹಾಗೂ ತನ್ನ ಕುಟುಂಬದ ಬಗ್ಗೆ ಟೀಕಿಸುವ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದರು. 2024ರ ಚುನಾವಣೆಯಲ್ಲಿ ಪ್ರತಾಪ್ ಸಿಂಹಗೆ ಟಿಕೆಟ್ ಕೊಟ್ಟಿದ್ದರೆ ನಾನು 3 ಲಕ್ಷ ಅಂತರದಲ್ಲಿ ಗೆಲುವು ಸಾಧಿಸುತ್ತಿದ್ದೆ. ಇನ್ಮುಂದೆ ಪ್ರತಾಪ್‌ ಸಿಂಹ ಎಲ್ಲಿ ನಿಂತರೂ ನಾನು ಅದೇ ಕ್ಷೇತ್ರದಲ್ಲಿ ನಿಲ್ಲುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಭಾರತೀಯ ವಿಮಾನಗಳಿಗೆ ನಿರ್ಬಂಧ – ಪಾಕಿಗೆ 1,240 ಕೋಟಿ ನಷ್ಟ

  • ನಾಲ್ಕು ಮರಕ್ಕೆ ಗುಂಡು ಹಾರಿಸಿ, ಸರ್ಜಿಕಲ್ ಸ್ಟ್ರೈಕ್‌ ಅಂತಾ ಬಿಜೆಪಿ ಬಿಂಬಿಸಿತ್ತು: ಎಂ.ಲಕ್ಷ್ಮಣ್‌

    ನಾಲ್ಕು ಮರಕ್ಕೆ ಗುಂಡು ಹಾರಿಸಿ, ಸರ್ಜಿಕಲ್ ಸ್ಟ್ರೈಕ್‌ ಅಂತಾ ಬಿಜೆಪಿ ಬಿಂಬಿಸಿತ್ತು: ಎಂ.ಲಕ್ಷ್ಮಣ್‌

    – ಪಹಲ್ಗಾಮ್‌ನಲ್ಲಿ ಧರ್ಮ ಕೇಳಿ ಯಾರನ್ನೂ ಕೊಂದಿಲ್ಲ; `ಕೈ’ ವಕ್ತಾರ

    ಮೈಸೂರು: ನಾಲ್ಕು ಮರಕ್ಕೆ ಗುಂಡು ಹಾರಿಸಿ, ಅದನ್ನೇ ಸರ್ಜಿಕಲ್ ಸ್ಟ್ರೈಕ್‌ ಅಂತಾ ಬಿಜೆಪಿ ಬಿಂಬಿಸಿತ್ತು ಎಂದು ಕಾಂಗ್ರೆಸ್ (Congress) ವಕ್ತಾರ ಎಂ.ಲಕ್ಷ್ಮಣ್‌ ಹೇಳಿದರು.

    ಮೈಸೂರಿನಲ್ಲಿ (Mysuru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದ ಜನರ ರಕ್ತದ ಮೇಲೆ ಅಧಿಕಾರ ಹಿಡಿಯುವುದು ಬಿಜೆಪಿಯ ಚಟವಾಗಿದೆ. ಪಹಲ್ಗಾಮ್‌ನಲ್ಲಿ (Pahalgam) ಮುಸ್ಲಿಮರೇ ಬಹಳಷ್ಟು ಜನರನ್ನು ಕಾಪಾಡಿದ್ದಾರೆ. ಧರ್ಮದ ಹೆಸರು ಕೇಳಿ ಯಾರನ್ನೂ ಅಲ್ಲಿ ಕೊಂದಿಲ್ಲ. ಸುಮ್ಮನೆ ಮುಸ್ಲಿಮರು, ಮುಸ್ಲಿಮರು (Muslims) ಎಂದು ಬಿಜೆಪಿ ಅಪಪ್ರಚಾರ ಮಾಡುತ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದರು. ಇದನ್ನೂ ಓದಿ: ಭಟ್ಕಳದಲ್ಲಿ 14 ಜನ ಪಾಕಿಸ್ತಾನಿ ಪ್ರಜೆಗಳು – ಸದ್ಯಕ್ಕಿಲ್ಲ ಗಡಿಪಾರು

    ಘಟನೆ ನಡೆದ ದಿನ ಅಲ್ಲಿ ಸೇನೆ ಮತ್ತು ಪೊಲೀಸ್ ಯಾಕೆ ಇರಲಿಲ್ಲ. ಇದರ ಹಿಂದೆ ಬೇರೆ ಏನೋ ಉದ್ದೇಶವಿದೆ. ಈ ಬಗ್ಗೆ ಅಂತಾರಾಷ್ಟ್ರೀಯ ಏಜೆನ್ಸಿ ಮೂಲಕ ತನಿಖೆ ಆಗಬೇಕು. ಹಿಂದೂ, ಮುಸ್ಲಿಮರ ನಡುವೆ ಕಂದಕ ಉಂಟು ಮಾಡಿ ಚುನಾವಣೆ ಗೆಲ್ಲುವುದೇ ಬಿಜೆಪಿಯ ಉದ್ದೇಶ. ಮುಸ್ಲಿಮರೆಲ್ಲಾ ಭಯೋತ್ಪಾದಕರು ಎಂದು ಬಿಂಬಿಸುವ ಕೆಲಸ ಶುರುವಾಗಿದೆ ಎಂದರು.

  • ʻಕೇಂದ್ರದಿಂದ ರಾಜ್ಯಕ್ಕೆ ಮತ್ತೆ ಚೊಂಬು, ಚಿಪ್ಪು.. ಗೋವಿಂದ ಗೋವಿಂದ..ʼ – ಎಂ. ಲಕ್ಷ್ಮಣ್‌ ಲೇವಡಿ

    ʻಕೇಂದ್ರದಿಂದ ರಾಜ್ಯಕ್ಕೆ ಮತ್ತೆ ಚೊಂಬು, ಚಿಪ್ಪು.. ಗೋವಿಂದ ಗೋವಿಂದ..ʼ – ಎಂ. ಲಕ್ಷ್ಮಣ್‌ ಲೇವಡಿ

    ಮಡಿಕೇರಿ: ಕೇಂದ್ರ ಬಿಜೆಪಿ ಸರ್ಕಾರವು (BJP Union Government) ಈ ಸಾಲಿನ ಬಜೆಟ್‌ನಲ್ಲೂ (Budget 2025) ಕರ್ನಾಟಕಕ್ಕೆ ಖಾಲಿ ಚೊಂಬು ಹಾಗೂ ತೆಂಗಿನಕಾಯಿ ಚಿಪ್ಪು ಕೊಟ್ಟಿದೆ. ಈ ಮೂಲಕ ಯಾವುದೇ ಹೊಸ ಯೋಜನೆ ನೀಡದೇ ರಾಜ್ಯಕ್ಕೆ ಅನ್ಯಾಯ ಮಾಡುವುದನ್ನು ಮುಂದುವರಿಸಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್‌ (M Laxman) ಲೇವಡಿ ಮಾಡಿದ್ದಾರೆ.

    ಖಾಲಿ ಚೊಂಬು ಹಾಗೂ ಮೂರುನಾಮ ಬಳಿದ ತೆಂಗಿನಕಾಯಿ ಚಿಪ್ಪುಗಳನ್ನು ಮುಂದಿಟ್ಟುಕೊಂಡು ಮಡಿಕೇರಿಯಲ್ಲಿ ‌ಪತ್ರಿಕಾಗೋಷ್ಠಿ ನಡೆಸಿದ ಅವರು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ಬಾಣ ಪ್ರಯೋಗಿಸಿದರು. ಗೋವಿಂದ.. ಗೋವಿಂದ.. ಎಂದು ಕೂಗುತ್ತಲೇ ಖಾಲಿ ಚೊಂಬು, ತೆಂಗಿನಕಾಯಿ ಚಿಪ್ಪು ಪ್ರದರ್ಶಿಸಿದರು.

    ಅಲ್ಲದೇ ಕೇಂದ್ರದಲ್ಲಿ ಸಚಿವರಾಗಿರುವ ಪ್ರಹ್ಲಾದ್‌ ಜೋಶಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ, ಹೆಚ್‌.ಡಿ ಕುಮಾರಸ್ವಾಮಿ ಅವರು ಕರ್ನಾಟಕಕ್ಕೆ ಒಂದೇ ಒಂದು ಯೋಜನೆಯನ್ನೂ ತರಲು ಸಾಧ್ಯವಾಗಿಲ್ಲ. ಇವರು ದಿನ ಬೆಳಗಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಂದಿಸುತ್ತಾ ಕಾಲಹರಣ ಮಾಡುತ್ತಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿಲ್ಲ ಎಂದು ಟೀಕಿಸಿದರು.

    ಕೇಂದ್ರ ಸರ್ಕಾರವು ರೈತರು, ಯುವಕರು, ಪರಿಶಿಷ್ಟರು ಹಾಗೂ ಅಲ್ಪಸಂಖ್ಯಾತರ ವಿರೋಧಿಯಾಗಿದೆ. ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳನ್ನು ಸಂಪೂರ್ಣ ಕಡೆಗಣಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಬೇಡಿಕೆಗಳನ್ನು ಮಂಡಿಸಿದ್ದರು. ಆದರೆ, ಅದಕ್ಕೆ ಸ್ಪಂದನೆ ದೊರೆತಿಲ್ಲ. ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಇದ್ದಾಗ ಬಜೆಟ್ ಗಾತ್ರ 14 ಲಕ್ಷ ಕೋಟಿ ಇತ್ತು. ಈ ಬಾರಿಯ ಬಜೆಟ್ ಗಾತ್ರ 50 ಲಕ್ಷ ಕೋಟಿ ದಾಟಿದೆ. 16 ಲಕ್ಷ ಕೋಟಿ ಸಾಲ ತೆಗೆದುಕೊಂಡಿದ್ದಾರೆ. 1947 ರಿಂದ 2014ರ ವರೆಗೆ ನಮ್ಮ ದೇಶ ಮಾಡಿದ್ದ ಸಾಲ 53 ಲಕ್ಷ ಕೋಟಿ ಇತ್ತು. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ 10 ವರ್ಷಗಳಲ್ಲಿ ಸಾಲದ ಪ್ರಮಾಣ 205 ಲಕ್ಷ ಕೋಟಿಯಾಗಿದೆ ಎಂದು ದೂರಿದರು.

    ದೇಶವನ್ನು ಅಭಿವೃದ್ಧಿ ಪಥದತ್ತ ನಡೆಸುವ ಬದಲಿಗೆ ಸಾಲದ ಕೂಪಕ್ಕೆ ತಳ್ಳಿರುವಂತಹ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ. ನರೇಗಾ ಅನುದಾನವನ್ನೂ ಕಡಿಮೆ ಮಾಡಿದ್ದಾರೆ. ಕೃಷಿ ಕ್ಷೇತ್ರಕ್ಕೆ ಅನುದಾನ ಹಂಚಿಕೆಯಲ್ಲೂ ದೊಡ್ಡ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇಡೀ ದೇಶದಲ್ಲಿ ಟ್ಯಾಕ್ಸ್ ಕಟ್ಟುವುದಲ್ಲಿ ಕರ್ನಾಟಕದ 2ನೇ ಸ್ಥಾನದಲ್ಲಿ ಇದೆ. ಆದರೆ ನಮ್ಮ ಹಣವನ್ನು ನಮಗೆ ಕೊಡದೇ ನಮ್ಮಿಂದ ಸಂಗ್ರಹ ಮಾಡಿರುವ ಹಣವನ್ನು ಬೇರೆ ಬೇರೆ ರಾಜ್ಯಗಳಿಗೆ ಕೊಡುವ ಕೆಲಸ ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ರು.

    ಇದೇ ವೇಳೆ ಕರ್ನಾಟಕದಲ್ಲಿ ಜಾತಿ ಜನಗಣತಿಯ ವರದಿ ಸದ್ಯದಲ್ಲೇ ಬಿಡುಗಡೆಯಾಗಲ್ಲಿದೆ ಕಾಂಗ್ರೆಸ್ ಪಕ್ಷದ ನಾಯಕರು ಯಾವುದೇ ರೀತಿಯಲ್ಲಿ ಇದಕ್ಕೆ ವಿರೋಧ ವ್ಯಕ್ತ ಪಡಿಸುತ್ತಿಲ್ಲ ಎಂದು ತಿಳಿಸಿದ್ರು.

  • ಸಿ.ಟಿ.ರವಿ ಒಬ್ಬ ಡ್ರಗ್ ಅಡಿಕ್ಟ್, ದೇಶದ ರಾಜಕಾರಣಿಗಳಲ್ಲಿ ನಂ.1 ಸುಳ್ಳುಗಾರ: ಎಂ.ಲಕ್ಷ್ಮಣ್‌ ವಾಗ್ದಾಳಿ

    ಸಿ.ಟಿ.ರವಿ ಒಬ್ಬ ಡ್ರಗ್ ಅಡಿಕ್ಟ್, ದೇಶದ ರಾಜಕಾರಣಿಗಳಲ್ಲಿ ನಂ.1 ಸುಳ್ಳುಗಾರ: ಎಂ.ಲಕ್ಷ್ಮಣ್‌ ವಾಗ್ದಾಳಿ

    ಮಡಿಕೇರಿ: ಸಿ.ಟಿ.ರವಿ (C.T.Ravi) ಒಬ್ಬ ಡ್ರಗ್ ಅಡಿಕ್ಟ್, ಇಡೀ ದೇಶದ ರಾಜಕಾರಣಿಗಳಲ್ಲಿ ಎಲ್ಲೂ ನೋಡುವ ಹಾಗೆ ಇಲ್ಲ, ಟಾಪ್ 10 ನಲ್ಲಿ ನಂ.1 ಸುಳ್ಳುಗಾರ ಅವರೇ ಬರುತ್ತಾರೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ (M.Lakshman) ವಾಗ್ದಾಳಿ ನಡೆಸಿದ್ದಾರೆ.

    ಮಡಿಕೇರಿಯಲ್ಲಿ ಮಾತಾನಾಡಿದ ಅವರು, ಸಿಟಿ ರವಿ ಅವರು ಸದನದಲ್ಲಿ ಒಬ್ಬ ಹೆಣ್ಣುಮಗಳಿಗೆ ಆಕ್ಷೇಪಾರ್ಹ ಸಂಭಾಷಣೆ ಮಾಡಿ, ನಾನು ಹಾಗೆ ಅಂದಿಲ್ಲ ಎಂದು ಹೇಳಿಕೊಳ್ಳುತ್ತಾರೆ. ಅಲ್ಲದೇ, ಕಾನೂನಾತ್ಮಕವಾಗಿ ಅರೆಸ್ಟ್ ಮಾಡಿದ್ದರೆ, ಅರೆಸ್ಟ್ ಮಾಡಿರುವುದನ್ನೇ ವಿಚಿತ್ರವಾಗಿ ಬಿಂಬಿಸಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಹಾಗೂ ಸಿಟಿ ರವಿ ಅವರಿಗೆ ನಾಚಿಕೆಯಾಗಬೇಕು. ಅದರಲ್ಲೂ ಚಿಕ್ಕಮಗಳೂರಿನಲ್ಲಿ ಬಿಜೆಪಿ ಅವರು ಸಿಟಿ ರವಿ ಅವರನ್ನು ಸ್ವಾತಂತ್ರ‍್ಯ ಹೋರಾಟಗಾರ ಅನ್ನೋ ರೀತಿಯಲ್ಲಿ ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ. ಯಾವ ದೇಶಕ್ಕಾಗಿ ಹೋರಾಟ ಮಾಡಿದ್ದಾರೆ ಎಂದು ಬಿಂಬಿಸುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸಿ.ಟಿ.ರವಿ ಪ್ರಕರಣದಲ್ಲಿ ಸರ್ಕಾರದ ನಡೆ ಖಂಡನೀಯ – ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಬಿಜೆಪಿ ಮನವಿ

    ಸಭಾಪತಿ ಬಸವರಾಜ ಹೊರಟ್ಟಿ ಅವರು ಆರಂಭದಲ್ಲಿ ಚಂದ ಇದ್ರು. ಆಮೇಲೆ ಅವರನ್ನು ಬಿಜೆಪಿ ಅವರೇ ಅವರನ್ನು ಎದುರಿಸಿ ಅವರ ಕೈಯಲ್ಲಿ ಬೇರೆ ರೀತಿಯಲ್ಲಿ ಹೇಳಿಕೆ ಕೊಡಿಸುವ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಮಹಜರು ಮಾಡಲು ಅವಕಾಶ ಕೊಡುತ್ತಿಲ್ಲ. ಇದು ಯಾಕೆ ಹೀಗೆ ಮಾಡುತ್ತಿದ್ದಾರೆ. ನಮ್ಮ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೇಸ್ ಹಾಕಿ ಅವರನ್ನು ಎದುರಿಸುವ ಕೆಲಸ ಮಾಡಿಸುತ್ತ ಇದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಈ ಹಿಂದೆ ಸಿಟಿ ರವಿ ಅವರು ಸಿದ್ದರಾಮುಲ್ಲಾ ಖಾನ್, ರಾಹುಲ್ ಗಾಂಧಿ ಅವರನ್ನು ಡ್ರಗ್ ಅಡಿಕ್ಟ್ ಎಂದು ಹೇಳಿಕೊಂಡು ಇರುತ್ತಿದ್ರು. ಅದ್ರೆ ಈಗ ಸಿಟಿ ರವಿ ಅವರೇ ಒಬ್ಬ ಡ್ರಗ್ ಅಡಿಕ್ಟ್‌ಗೆ ಒಳಗಾಗಿರಬೇಕು. ಇಂತಹ ಮನಸ್ಥಿತಿ ವ್ಯಕ್ತಿಯೇ ಡ್ರಗ್ ಅಡಿಕ್ಟ್ ಒಬ್ಬರಾಗಿದ್ದಾರೆ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಆ ರೀತಿ ಹೇಳಿಲ್ಲ ಅನ್ನೋದಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ – ಸಿ.ಟಿ ರವಿಗೆ ಲಕ್ಷ್ಮಿ ಹೆಬ್ಬಾಳ್ಕರ್‌ ಸವಾಲ್‌

    ಸದನದಲ್ಲಿ ಹೊರಟ್ಟಿ ಮೇಲೆ ಬಿಜೆಪಿ ನಾಯಕರು ಪ್ರಭಾವ ಬೀರಿ ಪ್ರಕರಣವನ್ನು ತಿರುಚುವ ಕೆಲಸಕ್ಕೆ ಮುಂದಾಗಿದ್ದಾರೆ. ಹೊರಟ್ಟಿ ಅವರು ಮುಗಿದ ಅಧ್ಯಾಯ ಅನ್ನುತ್ತೀರಿ. ಅದರೆ, ಕಾಂಗ್ರೆಸ್ ಈ ಪ್ರಕರಣದಲ್ಲಿ ಕಾನೂನು ರೀತಿಯಲ್ಲಿ ಹೋರಾಟ ಮಾಡಲು ಮುಂದಾಗಿದೆ ಎಂದು ತಿಳಿಸಿದ್ದಾರೆ.

  • ಗ್ಯಾರಂಟಿಗಳನ್ನು ಮತ ಪಡೆಯಲು ನೀಡಿಲ್ಲ, ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ನಿಲ್ಲಿಸಲ್ಲ: ರಾಮಲಿಂಗಾ ರೆಡ್ಡಿ

    ಗ್ಯಾರಂಟಿಗಳನ್ನು ಮತ ಪಡೆಯಲು ನೀಡಿಲ್ಲ, ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ನಿಲ್ಲಿಸಲ್ಲ: ರಾಮಲಿಂಗಾ ರೆಡ್ಡಿ

    – ಗ್ಯಾರಂಟಿ ಯೋಜನೆ ನಿಲ್ಲಿಸಬೇಕು ಎಂದಿದ್ದ ಕಾಂಗ್ರೆಸ್‌ನ ಲಕ್ಷ್ಮಣ್‌ ಹೇಳಿಕೆಗೆ ಸಚಿವರ ಪ್ರತಿಕ್ರಿಯೆ

    ಬೆಂಗಳೂರು: ಗ್ಯಾರಂಟಿಗಳನ್ನು (Guarantee Scheme) ಮತ ಪಡೆಯಲು ನೀಡಿಲ್ಲ. ಶಕ್ತಿ ಯೋಜನೆಯನ್ನು (Shakti Scheme) ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಸ್ಪಷ್ಟಪಡಿಸಿದರು.

    ಮೈಸೂರು-ಕೊಡಗು ಲೋಕಸಭಾ ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ ಲಕ್ಷ್ಮಣ್‌ ಅವರು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕು ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ, ಸಾಮೂಹಿಕವಾಗಿ ಗ್ಯಾರಂಟಿ ಯೋಜನೆ ಕೊಡುವುದನ್ನು ನಿಲ್ಲಿಸೋದೆ ಒಳಿತು: ಎಂ.ಲಕ್ಷ್ಮಣ್

    ಗ್ಯಾರಂಟಿಗಳನ್ನು ಮತ ಪಡೆಯಲು ನೀಡಿಲ್ಲ. ಮೋದಿಯವರ ಬೆಲೆ ಏರಿಕೆಯಿಂದ ಕಂಗೆಟ್ಟ ಜನರಿಗೆ ಸಹಾಯವಾಗಲು, ಬಡ ಹಾಗೂ ಮಧ್ಯಮ ವರ್ಗದವರಿಗೆ ಸಹಾಯವಾಗಲು ಗ್ಯಾರಂಟಿ ತಂದಿದ್ದೇವೆ. ಗ್ಯಾರಂಟಿಗೂ ಮತಕ್ಕೂ ಸಂಬಂಧವಿಲ್ಲ. ಶಕ್ತಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

    ಬಜೆಟ್‌ನಲ್ಲಿ‌ 5,500 ಕೋಟಿಯನ್ನು ಸಿಎಂ ಸಿದ್ದರಾಮಯ್ಯ ಮೀಸಲಿಟ್ಟಿದ್ದಾರೆ. ಯಾವುದೇ ಸಮಸ್ಯೆ ಇಲ್ಲ. ನಮ್ಮ ಸರ್ಕಾರ ಇರೋವರೆಗೂ ಶಕ್ತಿ ಯೋಜನೆ ಇರುತ್ತದೆ. ಮುಂದೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, ಆಗಲೂ ಶಕ್ತಿ ಯೋಜನೆ ಇರುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಜೆಪಿಯ ಸಂವಿಧಾನ ವಿರೋಧಿ ನೀತಿಗಳಿಗೆ ಜನ ಎಚ್ಚರಿಕೆ ನೀಡಿದ್ದಾರೆ: ಹೆಚ್.ಸಿ.ಮಹದೇವಪ್ಪ

    ರಾಜ್ಯದಲ್ಲಿ ಬಸ್‌ ದರ ಏರಿಕೆ ವಿಚಾರದ ಬಗ್ಗೆ ಮಾತನಾಡಿ, ಮಾದರಿ ನೀತಿ ಸಂಹಿತೆ ಇರುವುದರಿಂದ ಈ ಬಗ್ಗೆ ಚರ್ಚೆಯಾಗಿಲ್ಲ. ಬಸ್ ನಿಗಮಗಳಿಂದ ಇದುವರೆಗೂ ಸರ್ಕಾರಕ್ಕೆ ಪ್ರಸ್ತಾವನೆ ಬಂದಿಲ್ಲ. ಇಂಧನ ಮತ್ತು ಬಿಡಿಭಾಗಗಳ ಬೆಲೆ ಹೆಚ್ಚಾಗಿದೆ. ಮೊದಲು ಸಾರಿಗೆ ಸಂಸ್ಥೆಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿ. ನಂತರದಲ್ಲಿ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ನಿರ್ಧರಿಸತ್ತೇವೆ ಎಂದು ಹೇಳಿದರು.

  • ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ, ಸಾಮೂಹಿಕವಾಗಿ ಗ್ಯಾರಂಟಿ ಯೋಜನೆ ಕೊಡುವುದನ್ನು ನಿಲ್ಲಿಸೋದೆ ಒಳಿತು: ಎಂ.ಲಕ್ಷ್ಮಣ್

    ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ, ಸಾಮೂಹಿಕವಾಗಿ ಗ್ಯಾರಂಟಿ ಯೋಜನೆ ಕೊಡುವುದನ್ನು ನಿಲ್ಲಿಸೋದೆ ಒಳಿತು: ಎಂ.ಲಕ್ಷ್ಮಣ್

    ಮೈಸೂರು: ಸಾಮೂಹಿಕವಾಗಿ ಗ್ಯಾರಂಟಿ ಯೋಜನೆ (Guarantee Scheme) ಕೊಡುವುದನ್ನು ನಿಲ್ಲಿಸೋದೆ ಒಳಿತು. ಜನರಿಗೆ ಕಾಂಗ್ರೆಸ್ (Congress) ಗ್ಯಾರಂಟಿ ಇಷ್ಟ ಆಗಿಲ್ಲ. ಅದನ್ನು ಅವರು ಫಲಿತಾಂಶದ ಮೂಲಕ ತೋರಿಸಿದ್ದಾರೆ ಎಂದು ಮೈಸೂರು-ಕೊಡಗು ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ (M Lakshman) ಅಸಮಾಧಾನ ಹೊರಹಾಕಿದ್ದಾರೆ.

    ಈ ಕುರಿತು ಮೈಸೂರಿನಲ್ಲಿ (Mysuru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಮ್ಮ ಗ್ಯಾರಂಟಿ ವಿರುದ್ಧ ಮಾತಾನಾಡುತ್ತಿತ್ತು. ಜನ ಅವರನ್ನು ಬೆಂಬಲಿಸಿದ್ದಾರೆ. ಹಾಗಾಗಿ ಜನರಿಗೆ ನಮ್ಮ ಗ್ಯಾರಂಟಿ ಇಷ್ಟ ಆಗಿಲ್ಲ ಅಂತಲೇ ಅಲ್ವಾ? ಗ್ಯಾರಂಟಿ ಯೋಜನೆ ಬಗ್ಗೆ ಮುಖ್ಯಮಂತ್ರಿಗಳು ಈಗ ಮರು ಪರಿಶೀಲನೆ ಮಾಡಬೇಕು. ಈ ಬಗ್ಗೆ ಸಿಎಂ ಗಮನಹರಿಸಬೇಕು. 70% ರಷ್ಟು ಮೇಲ್ವರ್ಗದವರು ಈ ಯೋಜನೆ ಫಲಾನುಭವಿಗಳಾಗಿದ್ದಾರೆ. ಆದರೆ ಅದನ್ನು ಜನರು ತಿರಸ್ಕಾರ ಮಾಡಿದ್ದಾರೆ ಎಂದರು. ಇದನ್ನೂ ಓದಿ: ವೈದ್ಯಕೀಯ ಶಿಕ್ಷಣ ಸಚಿವರ ಕಚೇರಿ ಅಂದಿದ್ದಾರೆ, ನನ್ನ ಹೆಸರು ಹೇಳಿಲ್ಲ- ಶರಣ ಪ್ರಕಾಶ್ ಪಾಟೀಲ್ ಫಸ್ಟ್ ರಿಯಾಕ್ಷನ್

    ಬೆಂಜ್ ಕಾರ್ ಹೊಂದಿರುವವನು, 25,000 ಸಂಬಳ ಪಡೆಯುವ ವ್ಯಕ್ತಿಗೆ ಪುಕ್ಕಟೆ ಕರೆಂಟ್ ಕೊಟ್ಟರೆ ಹೇಗೆ? ಈಗಲೂ ಗ್ಯಾರಂಟಿ ಹಣದಿಂದಲೇ ಜೀವನ ನಡೆಸುವ ಜನ ಇದ್ದಾರೆ. ಅಂತಹವರನ್ನು ನೋಡಿ ಗ್ಯಾರಂಟಿ ರೀ ಲುಕ್ ಮಾಡುವ ಅಗತ್ಯ ಇದೆ. ಇದಕ್ಕೆ ಉದಾಹರಣೆ ಎಂದರೆ ಹುಣಸೂರಿನ ಹಲವು ಹಳ್ಳಿಗಳಲ್ಲಿ ಕೇವಲ ಒಂದೇ ಸಮುದಾಯದವರು ಇದ್ದಾರೆ. ಅಲ್ಲಿ ಬಿಜೆಪಿಗೆ 600ಕ್ಕೂ ಹೆಚ್ಚು ಮತ ನೀಡಿದ್ರೆ ನನಗೆ ಕೇವಲ ಮೂರು, ಏಳು ಮತಗಳನ್ನ ನೀಡಿದ್ದಾರೆ. ಒಕ್ಕಲಿಗರು ನನಗೆ ಮತ ಹಾಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹಾವೇರಿಯಲ್ಲಿ ಆಕಸ್ಮಿಕ ಬೆಂಕಿಗೆ 5 ಅಂಗಡಿಗಳು ಭಸ್ಮ- 30 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಹಾನಿ

    ಸಿದ್ದರಾಮಯ್ಯ (Siddaramaiah) ಅವರಂತಹ ಸಿಎಂ ಈ ದೇಶದಲ್ಲಿ ಮತ್ತೆ ಹುಟ್ಟಲು ಸಾಧ್ಯನಾ? ಸಿಎಂ ಸಿದ್ದರಾಮಯ್ಯರಿಗೆ ತವರಿನಲ್ಲಿ ಎಷ್ಟು ಬಾರಿ ಮುಖಭಂಗ ಮಾಡ್ತಿರಾ? ಇದು ಸ್ಯಾಡಿಸ್ಟ್ ನೇಚರ್ ಅಲ್ವಾ? ಸಿದ್ದರಾಮಯ್ಯಗೆ ಯಾಕೆ ಇಷ್ಟು ನೋವು ಕೊಟ್ಟು ತವರಿನಲ್ಲಿ ಮುಖಭಂಗ ಮಾಡ್ತಿರಾ ಎಂದು ಪ್ರಶ್ನಿಸಿದರು. ಇನ್ನು ಜೆಡಿಎಸ್‌ನಲ್ಲಿ ಸ್ಪರ್ಧಿಸಿದರೆ ಮಾತ್ರ ಒಕ್ಕಲಿಗರಾ? ಬಿಜೆಪಿಯಲ್ಲಿ ಸ್ಪರ್ಧಿಸಿದರೆ ಮಾತ್ರ ಒಕ್ಕಲಿಗರಾ? ನಾವು ಕಾಂಗ್ರೆಸ್‌ನಲ್ಲಿರುವ ಒಕ್ಕಲಿಗರು ಏನೂ ಮಾಡಬೇಕು ಹೇಳಿ ಎಂದು ಕೇಳಿದ್ದಾರೆ. ಇದನ್ನೂ ಓದಿ: ನಾವು ಶಿಸ್ತುಬದ್ಧವಾಗಿ, ಒಗ್ಗಟ್ಟಿನಿಂದ ಇರಬೇಕು- CWC ಸಭೆಯಲ್ಲಿ ಖರ್ಗೆ ಮಾತು

  • ಸಿದ್ದರಾಮಯ್ಯರಿಗೆ ಈಗಲೂ ಬಿಜೆಪಿಯಿಂದ ಜೀವ ಬೆದರಿಕೆ ಇದೆ: ಎಂ.ಲಕ್ಷ್ಮಣ್ ಆರೋಪ

    ಸಿದ್ದರಾಮಯ್ಯರಿಗೆ ಈಗಲೂ ಬಿಜೆಪಿಯಿಂದ ಜೀವ ಬೆದರಿಕೆ ಇದೆ: ಎಂ.ಲಕ್ಷ್ಮಣ್ ಆರೋಪ

    ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗಲೂ ಬಿಜೆಪಿ (BJP)ಯಿಂದ ಜೀವ ಬೆದರಿಕೆ ಇದೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ (M Laxman) ನೇರ ಆರೋಪ ಮಾಡಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅದೇ ಕಾರಣಕ್ಕೆ ಅಶ್ವಥ್ ನಾರಾಯಣ್ (Ashwath Narayan) ವಿರುದ್ಧ ನೀಡಿದ್ದ ದೂರಿನ ಕ್ರಮಕ್ಕೆ ಒತ್ತಾಯಿಸುತ್ತಿದ್ದೇವೆ. ಉರಿಗೌಡ, ನಂಜೇಗೌಡ ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನ ಹೊಡೆದು ಹಾಕಿ ಎಂದಿದ್ದ ಅಶ್ವಥ್ ನಾರಾಯಣ್ ಹೇಳಿಕೆಯ ವೀಡಿಯೋ ಈಗಲೂ ವೈರಲ್ ಆಗುತ್ತಿದೆ. ಇದರಿಂದ ಸಿದ್ದರಾಮಯ್ಯರ ಮೇಲೆ ಮತ್ತೆ ದಾಳಿಯಾಗುವ ಸಾಧ್ಯತೆ ಇದೆ ಎಂದರು.

    ಸಿಎಂ ಸಿದ್ದರಾಮಯ್ಯ (Siddaramaiah) ರಿಗೆ ಏನೇ ಆದರೂ ಅದಕ್ಕೆ ಬಿಜೆಪಿ, ಅಶ್ವಥ್ ನಾರಾಯಣ್ ಹೊಣೆ. ಈ ಕೂಡಲೇ ಅಶ್ವಥ್ ನಾರಾಯಣ್‍ರನ್ನ ಪೊಲೀಸರು ಬಂಧಿಸಬೇಕು. ನಾವು ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಈ ಬಗ್ಗೆ ಸ್ಪೀಕರ್ ಗೆ ಮಾಹಿತಿ ನೀಡಿದ್ದಾರೆ. ರಾಜ್ಯಾದ್ಯಂತ ಹಿಂದೆ ಬಿಜೆಪಿ ವಿರುದ್ಧ ನೀಡಿದ್ದ ದೂರಿನ ಕ್ರಮಕ್ಕೆ ಒತ್ತಾಯಿಸುತ್ತೇವೆ. ಹಿಂದೆ ಪೆÇಲೀಸರು ಬಿಜೆಪಿ ಏಜೆಂಟರಂತೆ ವರ್ತಿಸಿದ್ರು. ಹೀಗಾಗಿ ದೂರಿನ ಕ್ರಮ ಕೈಗೊಂಡಿರಲಿಲ್ಲ ಎಂದು ತಿಳಿಸಿದರು.

    ಈಗ ಸಮಗ್ರವಾದ ತನಿಖೆಯಾಗಬೇಕು. ಅಶ್ವಥ್ ನಾರಾಯಣ್ ಯಾವ ಉದ್ದೇಶದಿಂದ ಈ ಹೇಳಿಕೆ ಕೊಟ್ಟಿದ್ರು ಎಂಬುದು ತಿಳಿಯಬೇಕಿದೆ. ಅವರ ಮೇಲೆ ಕಠಿಣ ಕ್ರಮವೂ ಆಗಬೇಕು ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ಮೇಲೆ ಬಿಜೆಪಿ ಕಾರ್ಯಕರ್ತರು ಅಪಾಯದಲ್ಲಿದ್ದಾರೆ – ಪ್ರತಾಪ್‌ ಸಿಂಹ

  • ರಾಜ್ಯದಲ್ಲಿ ಬೆಂಕಿ ಹಚ್ಚಿಸಲೆಂದೇ ಬಿಜೆಪಿ ಕೆಲವರನ್ನು ಇಟ್ಟುಕೊಂಡಿದೆ: ಲಕ್ಷ್ಮಣ್ ವಾಗ್ದಾಳಿ

    ರಾಜ್ಯದಲ್ಲಿ ಬೆಂಕಿ ಹಚ್ಚಿಸಲೆಂದೇ ಬಿಜೆಪಿ ಕೆಲವರನ್ನು ಇಟ್ಟುಕೊಂಡಿದೆ: ಲಕ್ಷ್ಮಣ್ ವಾಗ್ದಾಳಿ

    ಮಡಿಕೇರಿ: ಸಿ.ಟಿ ರವಿ, ಈಶ್ವರಪ್ಪ, ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ ರಾಜ್ಯದಲ್ಲಿ ಬೆಂಕಿ ಹಚ್ಚುವವರು. ಇವರೆಲ್ಲರನ್ನೂ ಬೆಂಕಿ ಹಚ್ಚಿಸಲೆಂದೇ ಬಿಜೆಪಿ(BJP) ಇಟ್ಟುಕೊಂಡಿದೆ ಎಂದು ಕಾಂಗ್ರೆಸ್(Congress) ವಕ್ತಾರ ಎಂ ಲಕ್ಷ್ಮಣ್(M Lakshman) ವಾಗ್ದಾಳಿ ನಡೆಸಿದ್ದಾರೆ.

    ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಿದ್ದರಾಮಯ್ಯನವರಿಗೆ ಕಚ್ಚೆಹರುಕ ಎಂದು ಹೇಳಿಕೆ ನೀಡಿದ್ದ ಹಿನ್ನೆಲೆ ಕಿಡಿ ಕಾರಿದ ಲಕ್ಷ್ಮಣ್, ಸಿ.ಟಿ ರವಿ ಮಾತಾಡುವಾಗ ಹಲ್ಲು ಹಿಡಿದು ಮಾತನಾಡಬೇಕು ಎಂದು ಆಕ್ರೋಶ ಹೋರ ಹಾಕಿದರು. ಇದನ್ನೂ ಓದಿ: ಕೇಂದ್ರ, ರಾಜ್ಯ ಸರ್ಕಾರಗಳು ಕನ್ನಡದ ಕತ್ತು ಹಿಸುಕುವ ಕೆಲಸ ಮಾಡುತ್ತಿವೆ: ಕುಮಾರಸ್ವಾಮಿ

    ಚಿಕ್ಕಮಗಳೂರಿನಲ್ಲಿ ಸುಮಾರು 4-5 ಬಾರಿ ಆಯ್ಕೆಯಾಗಿ ಸಿ.ಟಿ ರವಿ ಅವರು ತಮ್ಮ ಭಾವ ಸುಂದರೇಶನ್ ಅವರ ಹೆಸರಿನಲ್ಲಿ 800 ಕೋಟಿ ರೂ. ಆಸ್ತಿ ಮಾಡಿದ್ದೀರಿ. ಚಿಕ್ಕಮಗಳೂರಿನಲ್ಲಿ ಒಂದು ಸಣ್ಣ ಚರಂಡಿ ಮಾಡುವುದಾದರೂ ನಿಮ್ಮ ಭಾವನ ಹೆಸರಿನಲ್ಲಿ ಗುತ್ತಿಗೆ ಮಾಡುತ್ತಿದ್ದೀರಿ. 800 ಕೋಟಿ ರೂ. ಆಸ್ತಿ ಮಾಡಿರುವ ಬಗ್ಗೆ ನನ್ನ ಬಳಿ ದಾಖಲೆ ಇವೆ. ನಾನು ಮುಂದಿನ ದಿನಗಳಲ್ಲಿ ನಿಮ್ಮ ಬಂಡವಾಳ ಬಿಚ್ಚಿಡುತ್ತೇನೆ ಎಂದು ಲಕ್ಷಣ್ ಟಾಂಗ್ ನೀಡಿದರು. ಇದನ್ನೂ ಓದಿ: ಇಷ್ಟೊತ್ತಿಗೆ ಹಗ್ಗ ಹಾಕಿ ನಮ್ಮನ್ನು ಗಲ್ಲಿಗೇರಿಸಬಹುದಿತ್ತಲ್ಲ: ನಳಿನ್‍ಗೆ ಡಿಕೆಶಿ ತಿರುಗೇಟು

    Live Tv
    [brid partner=56869869 player=32851 video=960834 autoplay=true]