Tag: ಎಎಪಿ

  • ಭಾರತ-ಪಾಕ್‌ ಪಂದ್ಯ ಬಾಯ್ಕಾಟ್‌ಗೆ ಕರೆ – ಪಾಕ್‌ ಜೆರ್ಸಿ ಇರುವ ಪ್ರತಿಕೃತಿ ದಹಿಸಿ ಎಎಪಿ ಪ್ರತಿಭಟನೆ

    ಭಾರತ-ಪಾಕ್‌ ಪಂದ್ಯ ಬಾಯ್ಕಾಟ್‌ಗೆ ಕರೆ – ಪಾಕ್‌ ಜೆರ್ಸಿ ಇರುವ ಪ್ರತಿಕೃತಿ ದಹಿಸಿ ಎಎಪಿ ಪ್ರತಿಭಟನೆ

    ನವದೆಹಲಿ: ಏಷ್ಯಾ ಕಪ್‌ನಲ್ಲಿ ನಾಳೆ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ತೀವ್ರ ಟೀಕೆ ವ್ಯಕ್ತವಾಗಿದ್ದು, ಪ್ರತಿಭಟನೆಗಳು ರಾಜಕೀಯ ತಿರುವು ಪಡೆದುಕೊಂಡಿವೆ.

    ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ 26 ಜನರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯು ಉಭಯ ದೇಶಗಳ ನಡುವಿನ ಬಿಕ್ಕಟ್ಟಿಗೆ ಕಾರಣವಾಗಿದೆ. ಘಟನೆಯಾದ ಬಳಿಕ ಭಾರತ ಮತ್ತು ಪಾಕಿಸ್ತಾನ ತಂಡಗಳು ಇದೇ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿದ್ದು, ತೀವ್ರ ಟೀಕೆಗೆ ಗುರಿಯಾಗಿದೆ. ದಾಳಿಯಲ್ಲಿ ಮೃತಪಟ್ಟ ತಮ್ಮ ಪುತ್ರರ ಬಗ್ಗೆ ಕುಟುಂಬಗಳು ಇನ್ನೂ ಶೋಕದಲ್ಲಿದ್ದಾವೆ. ಹಲವಾರು ರಾಜಕೀಯ ನಾಯಕರು ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನಿ ಕ್ರಿಕೆಟಿಗರೊಂದಿಗೆ ಆಟವಾಡುವುದು ತಪ್ಪು ಎಂದು ಹೇಳಿದ್ದಾರೆ. ಈ ಹೊತ್ತಲ್ಲಿ ಏಷ್ಯಾ ಕಪ್‌ನಲ್ಲಿ ಎರಡೂ ತಂಡಗಳು ಆಡಲು ಮುಂದಾಗಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.‌ ಇದನ್ನೂ ಓದಿ: ಭಾರತ ತಂಡವನ್ನೂ ಸೋಲಿಸುವಷ್ಟು ಸಮರ್ಥರಿದ್ದೇವೆ – ಪಂದ್ಯಕ್ಕೂ ಮುನ್ನ ಪಾಕ್‌ ಕ್ಯಾಪ್ಟನ್‌ ವಾರ್ನಿಂಗ್‌

    ಭಾರತ-ಪಾಕ್‌ ಆಟಕ್ಕೆ ವಿರೋಧ ವ್ಯಕ್ತವಾಗಿರುವುದು ರಾಜಕೀಯ ತಿರುವು ಪಡೆದುಕೊಂಡಿದೆ. ರಾಜಕೀಯ ನಾಯಕರು ಮತ್ತೊಮ್ಮೆ ಪಂದ್ಯವನ್ನು ಬಹಿಷ್ಕರಿಸುವಂತೆ ಕರೆ ಒತ್ತಾಯಿಸಿದ್ದಾರೆ. ಟೀಕೆಗಳು ಹೆಚ್ಚಾಗಿ ವಿರೋಧ ಪಕ್ಷಗಳಿಂದಲೇ ಕೇಳಿಬರುತ್ತಿವೆ. ಕಾಂಗ್ರೆಸ್, ಶಿವಸೇನೆ (ಯುಬಿಟಿ) ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಪಂದ್ಯವನ್ನು ವಿರೋಧಿಸಿವೆ.

    ಎಎಪಿ ನಾಯಕರು ಮತ್ತು ಕಾರ್ಯಕರ್ತರು ತಮ್ಮ ಕಚೇರಿಯ ಹೊರಗೆ ಪಾಕಿಸ್ತಾನ ಲೇಬಲ್ ಹೊಂದಿರುವ ಪ್ರತಿಕೃತಿಯನ್ನು ದಹಿಸಿದ್ದಾರೆ. ಮಾಜಿ ಸಚಿವ ಸೌರಭ್ ಭಾರದ್ವಾಜ್ ಪಂದ್ಯದ ನೇರ ಪ್ರಸಾರ ಮಾಡುವ ಕ್ಲಬ್‌ಗಳು ಮತ್ತು ರೆಸ್ಟೋರೆಂಟ್‌ಗಳನ್ನು ಬಹಿಷ್ಕರಿಸುವಂತೆ ಸಾರ್ವಜನಿಕವಾಗಿ ಮನವಿ ಮಾಡಿದ್ದಾರೆ. ‘ನಮ್ಮ ಸಹೋದರಿಯರ ಸಿಂಧೂರವನ್ನು ಅಳಿಸುವ ಇಂತಹ ಅಸಹ್ಯಕರ ಜನರೊಂದಿಗೆ ಭಾರತ ಸರ್ಕಾರ ಕ್ರಿಕೆಟಿಗರನ್ನು ಆಡುವಂತೆ ಮಾಡುತ್ತಿದೆ. ಭಾರತ-ಪಾಕಿಸ್ತಾನ ಪಂದ್ಯಗಳನ್ನು ಪ್ರಸಾರ ಮಾಡುವ ದೆಹಲಿಯಲ್ಲಿರುವ ಎಲ್ಲಾ ಕ್ಲಬ್‌ಗಳು ಮತ್ತು ರೆಸ್ಟೋರೆಂಟ್‌ಗಳನ್ನು ನಾವು ಬಹಿರಂಗಪಡಿಸುತ್ತೇವೆ’ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇದು ಮ್ಯಾಚ್‌ ಅಷ್ಟೇ; ಭಾರತ – ಪಾಕ್ ಪಂದ್ಯ ಬೇಡ ಎಂದ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

    ಸಿಂಧೂ ನದಿ ನೀರು ಒಪ್ಪಂದವನ್ನು ಸ್ಥಗಿತಗೊಳಿಸಿದ ಬಗ್ಗೆ ಪ್ರಧಾನಿಯವರ ‘ನೀರು ಮತ್ತು ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ’ ಎಂಬ ಹೇಳಿಕೆಯನ್ನು ಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ನೆನಪಿಸಿಕೊಂಡು ಟ್ವೀಟ್‌ ಮಾಡಿದ್ದಾರೆ. ‘ರಕ್ತ ಮತ್ತು ಕ್ರಿಕೆಟ್’ ಹೇಗೆ ಒಟ್ಟಿಗೆ ಹೋಗುತ್ತದೆ ಎಂದು ಪ್ರಶ್ನಿಸಿದ್ದಾರೆ. ‘ಯುದ್ಧ ಮತ್ತು ಕ್ರಿಕೆಟ್ ಒಂದೇ ಸಮಯದಲ್ಲಿ ಹೇಗೆ ಇರಲು ಸಾಧ್ಯ? ಅವರು ದೇಶಭಕ್ತಿಯ ವ್ಯವಹಾರವನ್ನು ಮಾಡಿದ್ದಾರೆ. ಅವರಿಗೆ ಕೇವಲ ಹಣ ಬೇಕು’ ಎಂದು ಠಾಕ್ರೆ ಟೀಕಿಸಿದ್ದಾರೆ.

    ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್, ತಮ್ಮ ಗಂಡಂದಿರನ್ನು ಕಳೆದುಕೊಂಡ ಸಹೋದರಿಯರನ್ನು ನೋಡಿಕೊಳ್ಳದೆ ಕೆಲ ಜನರು ಹಣ ಸಂಪಾದಿಸುವುದರಲ್ಲಿ ನಿರತರಾಗಿದ್ದಾರೆ. ಇದು ವ್ಯವಹಾರ. ಭಾರತ-ಪಾಕಿಸ್ತಾನ ಪಂದ್ಯಗಳಲ್ಲಿ ಉತ್ಸಾಹವಿದೆ. ಟಿಕೆಟ್‌ಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ನಮ್ಮ ಸಹೋದರಿಯರ ಸಿಂಧೂರ ಅಳಿಸಿದ್ದಾರೆಂದು ಅವರು ಬೇಸರಗೊಂಡಿಲ್ಲ. ಈ ಜನರು ಕ್ರಿಕೆಟ್ ಹೆಸರಿನಲ್ಲಿ ಹಣ ಸಂಪಾದಿಸುವಲ್ಲಿ ನಿರತರಾಗಿದ್ದಾರೆ. ನಮ್ಮ ಸಹೋದರಿಯರ ಕುಟುಂಬಗಳು ನಾಶವಾದವು. ಆದರೆ, ಇವರು ಪಾಕಿಸ್ತಾನಿಗಳೊಂದಿಗೆ ಕ್ರಿಕೆಟ್ ಆಡಲು ಹೊರಟಿದ್ದಾರೆ. ಸರ್ಕಾರ ನಾಚಿಕೆಪಡಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

  • ಇಂಡಿಯಾ ಒಕ್ಕೂಟದಿಂದ ಹೊರಬಂದ ಆಪ್‌ – ಎಎಪಿ ನಾಯಕ ಸಂಜಯ್‌ ಸಿಂಗ್‌ ಹೇಳಿಕೆ

    ಇಂಡಿಯಾ ಒಕ್ಕೂಟದಿಂದ ಹೊರಬಂದ ಆಪ್‌ – ಎಎಪಿ ನಾಯಕ ಸಂಜಯ್‌ ಸಿಂಗ್‌ ಹೇಳಿಕೆ

    ನವದೆಹಲಿ: ಇಂಡಿಯಾ ಒಕ್ಕೂಟದಿಂದ ಆಮ್‌ ಆದ್ಮಿ ಪಕ್ಷ (Aam Admi Party) ಹೊರ ಬಂದಿದೆ ಎಂದು ಎಎಪಿ ನಾಯಕ ಸಂಜಯ್‌ ಸಿಂಗ್‌ (Sanjay Singh) ತಿಳಿಸಿದ್ದಾರೆ.

    ಆಪ್ ಇಂಡಿಯಾ ಒಕ್ಕೂಟದ ಭಾಗವಾಗಿಲ್ಲ. ಇದನ್ನು ನಮ್ಮ ನಾಯಕ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ ಎಂದು ಒಕ್ಕೂಟದಿಂದ ಎಎಪಿ ಹೊರ ಬಂದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಕೇಸ್‌ – ಮಾಜಿ ಸಿಎಂ ಭೂಪೇಶ್‌ ಬಘೇಲ್‌ ಪುತ್ರ ಬಂಧನ

    ಈ ಹಿಂದೆ 2024 ರ ಲೋಕಸಭಾ ಚುನಾವಣೆಯಲ್ಲಿ ದೆಹಲಿಯಲ್ಲಿ ಎಎಪಿ ಮತ್ತು ಕಾಂಗ್ರೆಸ್ ಭಾರತ ಮೈತ್ರಿಕೂಟದ ಭಾಗವಾಗಿ ಸ್ಪರ್ಧಿಸಿವೆ. ಆದರೆ, ಹರಿಯಾಣ ಮತ್ತು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಿದವು.

    ಇಂದು ಮುಂಗಾರು ಅಧಿವೇಶನ ಹಿನ್ನೆಲೆ ಸಂಜೆ ಏಳು ಗಂಟೆಗೆ ಇಂಡಿಯಾ ಒಕ್ಕೂಟದ (INDIA Bloc) ಸಭೆ ಕರೆಯಲಾಗಿತ್ತು. ಸಭೆಗೂ ಮುನ್ನ ಇಂಡಿಯಾ ಒಕ್ಕೂಟಕ್ಕೆ ಆಪ್‌ ಶಾಕ್‌ ಕೊಟ್ಟಿದೆ. ಇದನ್ನೂ ಓದಿ: ದೆಹಲಿಯ 50, ಬೆಂಗ್ಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ

  • ವಕ್ಫ್‌ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಎಎಪಿ

    ವಕ್ಫ್‌ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಎಎಪಿ

    ನವದೆಹಲಿ: ಸಂಸತ್‌ನ ಉಭಯ ಸದನಗಳಲ್ಲಿ ಅನುಮೋದನೆಗೊಂಡ ವಕ್ಫ್‌ ತಿದ್ದುಪಡಿ ಮಸೂದೆ (Waqf Amendment Bill) ವಿರುದ್ಧ ಆಮ್‌ ಆದ್ಮಿ ಪಕ್ಷ (AAP) ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

    ಆಪ್ ಶಾಸಕ, ದೆಹಲಿ ವಕ್ಫ್ ಮಂಡಳಿಯ ಅಧ್ಯಕ್ಷ ಅಮಾನತ್‌-ಉಲ್ಲಾ-ಖಾನ್‌ ಅವರು ಸುಪ್ರೀಂ ಕೋರ್ಟ್‌ಗೆ (Supreme Court) ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಕೋಲ್ಕತ್ತಾ, ಅಹಮದಾಬಾದಲ್ಲಿ ವಕ್ಫ್ ಮಸೂದೆ ವಿರುದ್ಧ ಭಾರೀ ಪ್ರತಿಭಟನೆ – ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ

    ಮಸೂದೆಯು ಮುಸ್ಲಿಮರ ಧಾರ್ಮಿಕ ಮತ್ತು ಸಾಂಸ್ಕೃತಿಕ ಸ್ವಾಯತ್ತತೆಯನ್ನು ಮೊಟಕುಗೊಳಿಸುತ್ತದೆ. ಅನಿಯಂತ್ರಿತ ಕಾರ್ಯಾಂಗ ಹಸ್ತಕ್ಷೇಪಕ್ಕೆ ಅನುವು ಮಾಡಿಕೊಡುತ್ತದೆ. ಧಾರ್ಮಿಕ ಮತ್ತು ದತ್ತಿ ಸಂಸ್ಥೆಗಳನ್ನು ನಿರ್ವಹಿಸಲು ಅಲ್ಪಸಂಖ್ಯಾತರ ಹಕ್ಕುಗಳನ್ನು ದುರ್ಬಲಗೊಳಿಸುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

    ವಕ್ಫ್‌ ತಿದ್ದುಪಡಿ ಮಸೂದೆಯು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿತು. ಉಭಯ ಸದನಗಳಲ್ಲಿ ಸುದೀರ್ಘ ಚರ್ಚೆ ಮೂಲಕ ಮಸೂದೆ ಪಾಸ್‌ ಆಯಿತು. ಮಸೂದೆಯನ್ನು ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ. ಆದರೆ, ಇದು ಸಂವಿಧಾನಬಾಹಿರ ಎಂದು ವಿಪಕ್ಷಗಳು ಬಿಲ್‌ಗೆ ವಿರೋಧ ವ್ಯಕ್ತಪಡಿಸಿವೆ. ಇದನ್ನೂ ಓದಿ: ʻವಕ್ಫ್‌ ವಾರ್‌ʼ – ಸೋನಿಯಾ ಗಾಂಧಿ ಕ್ಷಮೆ ಯಾಚಿಸಲಿ: ಬಿಜೆಪಿ ಪಟ್ಟು

  • ರಾಜ್ಯಸಭಾ ಸಂಸದನಿಗೆ ವಿಧಾನಸಭೆ ಉಪ ಚುನಾವಣೆಗೆ ಟಿಕೆಟ್ – ಪಂಜಾಬ್‌ನಿಂದ ಸಂಸತ್‌ಗೆ ಕೇಜ್ರಿವಾಲ್?

    ರಾಜ್ಯಸಭಾ ಸಂಸದನಿಗೆ ವಿಧಾನಸಭೆ ಉಪ ಚುನಾವಣೆಗೆ ಟಿಕೆಟ್ – ಪಂಜಾಬ್‌ನಿಂದ ಸಂಸತ್‌ಗೆ ಕೇಜ್ರಿವಾಲ್?

    ಲುಧಿಯಾನ: ಆಮ್ ಆದ್ಮಿ ಪಕ್ಷ ಪಂಜಾಬ್‌ನ ಲುಧಿಯಾನ ಪಶ್ಚಿಮ ವಿಧಾನಸಭಾ ಉಪಚುನಾವಣೆಗೆ ತನ್ನ ರಾಜ್ಯಸಭಾ ಸಂಸದ ಸಂಜೀವ್ ಅರೋರಾ (Sanjeev Arora) ಅವರನ್ನು ಕಣಕ್ಕಿಳಿಸಿದೆ. ಈ ಬೆಳವಣಿಗೆ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ರಾಜ್ಯಸಭೆ ಪ್ರವೇಶದ ವದಂತಿಗೆ ಇನ್ನಷ್ಟು ಪುಷ್ಠಿ ನೀಡಿದೆ.

    ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಅರವಿಂದ್ ಕೇಜ್ರಿವಾಲ್ ರಾಜ್ಯಸಭೆ ಪ್ರವೇಶ ಮಾಡಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಈ ವದಂತಿಯನ್ನು ಪಕ್ಷ ತಳ್ಳಿ ಹಾಕಿತ್ತು. ಆದರೀಗ ರಾಜ್ಯಸಭಾ ಸಂಸದ ಸಂಜೀವ್ ಅರೋರಾ ಅವರನ್ನು ಉಪ ಚುನಾವಣೆಗೆ ಕಣಕ್ಕಿಳಿಸಿರುವುದು ಹೊಸ ಚರ್ಚೆಗೆ ಕಾರಣವಾಗಿದೆ. ಇದನ್ನೂ ಓದಿ: ಪಾಕಿಸ್ತಾನದ ನುಸುಳುಕೋರನನ್ನು ಹೊಡೆದುರುಳಿಸಿದ ಬಿಎಸ್‌ಎಫ್

    ಚುನಾವಣಾ ಆಯೋಗವು ಲುಧಿಯಾನ ಪಶ್ಚಿಮ (Ludhiana West) ಉಪಚುನಾವಣೆಯ ದಿನಾಂಕಗಳನ್ನು ಇನ್ನೂ ಘೋಷಿಸಿಲ್ಲ. ನವೆಂಬರ್‌ನಲ್ಲಿ ನಡೆಯುವ ಬಿಹಾರ ವಿಧಾನಸಭಾ ಚುನಾವಣೆಯ ಜೊತೆಗೆ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗುವ ನಿರೀಕ್ಷೆಯಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ – ಸಚಿವ ಜಮೀರ್ ಬ್ಯಾಟಿಂಗ್‌

    ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಎಪಿ ನಾಯಕ ನೀಲ್ ಗರ್ಗ್, ಸಂಜೀವ್ ಅರೋರಾ ಅವರ ಉತ್ತಮ ಕೆಲಸಗಳನ್ನು ಪರಿಗಣಿಸಿ ಲುಧಿಯಾನ ಪಶ್ಚಿಮ ಉಪಚುನಾವಣೆಗೆ ಟಿಕೆಟ್ ನೀಡಲಾಗಿದೆ. ಕೇಜ್ರಿವಾಲ್ ರಾಜ್ಯಸಭೆಗೆ ಹೋಗುತ್ತಾರೆ ಎಂಬ ಊಹಾಪೋಹಗಳು ಸುಳ್ಳು ಮತ್ತು ಬಿಜೆಪಿ ಕಾರ್ಖಾನೆಯಿಂದ ಬಂದಿವೆ.

    ನಾವು ಮೊದಲು ಉಪಚುನಾವಣೆ ಗಮನ ಹರಿಸುತ್ತೇವೆ. ಬಳಿಕ ಮತ್ತು ನಂತರ ರಾಜ್ಯಸಭೆಯತ್ತ ಕೇಂದ್ರೀಕರಿಸುತ್ತೇವೆ ಎಂದಿದ್ದಾರೆ. ಅಲ್ಲದೇ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳು ಇಂತಹ ವದಂತಿಗಳನ್ನು ಹರಡುತ್ತಿವೆ. ಇಂತಹ ವದಂತಿಗಳಾಗಿ ನಾನು ತಿರಸ್ಕರಿಸುತ್ತೇನೆ ಎಂದು ನೀಲ್ ಗರ್ಗ್ ಹೇಳಿದರು. ಇದನ್ನೂ ಓದಿ: ಪತ್ನಿ ಕೊಲೆ ಮಾಡಿ ಅಂತ್ಯಕ್ರಿಯೆ – ಕೊನೆ ಕ್ಷಣದಲ್ಲಿ ಎಂಟ್ರಿ ಕೊಟ್ಟ ಪೊಲೀಸರು, ಅರೆಸ್ಟ್ ಆದ ಗಂಡ

  • ದೆಹಲಿ ವಿಧಾನಸಭೆಯಲ್ಲಿ ಗದ್ದಲ – 15 ಎಎಪಿ ಶಾಸಕರ ಅಮಾನತು

    ದೆಹಲಿ ವಿಧಾನಸಭೆಯಲ್ಲಿ ಗದ್ದಲ – 15 ಎಎಪಿ ಶಾಸಕರ ಅಮಾನತು

    ನವದೆಹಲಿ: ಮದ್ಯ ನೀತಿ ಹಗರಣದ ಕುರಿತು ಲೆಕ್ಕಪರಿಶೋಧಕರ ವರದಿಗೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ ಜೊತೆಗೆ ಗದ್ದಲದ ವೇಳೆ ಮಾಜಿ ಮುಖ್ಯಮಂತ್ರಿ ಅತಿಶಿ (ಈಗ ವಿರೋಧ ಪಕ್ಷದ ನಾಯಕಿ) ಸೇರಿದಂತೆ 15 ಮಂದಿ ಎಎಪಿ ಶಾಸಕರನ್ನು ದೆಹಲಿ ವಿಧಾನಸಭೆಯಿಂದ ಮಂಗಳವಾರ ಅಮಾನತುಗೊಳಿಸಲಾಗಿದೆ.

    ಫೆ.5 ರ ಚುನಾವಣೆಯಲ್ಲಿ ಸೋಲನ್ನು ತಪ್ಪಿಸಿಕೊಂಡ ಕೆಲವೇ ಕೆಲವು ಉನ್ನತ ವ್ಯಕ್ತಿಗಳಲ್ಲಿ ಒಬ್ಬರಾದ ಹಿರಿಯ ಎಎಪಿ ನಾಯಕ ಗೋಪಾಲ್ ರೈ ಅವರನ್ನು ಸಹ ವಿಧಾನಸಭೆಯಿಂದ ಅಮಾನತು ಮಾಡಲಾಯಿತು. ಇದನ್ನೂ ಓದಿ: AAP ಸರ್ಕಾರದಲ್ಲಿ ಹಗರಣ – ದೆಹಲಿ ವಿಧಾನಸಭೆಯಲ್ಲಿ ಇಂದು ಸರ್ಕಾರದಿಂದ ಸಿಎಜಿ ವರದಿ ಮಂಡನೆ

    ವಿಧಾನಸಭೆಯನ್ನುದ್ದೇಶಿಸಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರ ಆರಂಭಿಕ ಭಾಷಣದ ವೇಳೆ ಗದ್ದಲ ಪ್ರಾರಂಭವಾಯಿತು. ನೂತನ ಸಿಎಂ ರೇಖಾ ಗುಪ್ತಾ ಅವರ ಕಚೇರಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಭಗತ್‌ಸಿಂಗ್ ಅವರ ಛಾಯಾಚಿತ್ರಗಳನ್ನು ತೆಗೆದುಹಾಕಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಎಎಪಿ ಶಾಸಕರು ‘ಜೈ ಭೀಮ್’ ಘೋಷಣೆಗಳನ್ನು ಕೂಗಿದರು. ಅಂಬೇಡ್ಕರ್‌ ಮತ್ತು ಭಗತ್‌ಸಿಂಗ್ ಅವರ ಛಾಯಾಚಿತ್ರಗಳನ್ನು ಹಿಡಿದು ಪ್ರತಿಭಟಿಸಿದರು. ಈ ಛಾಯಾಚಿತ್ರಗಳನ್ನು ಪ್ರಧಾನಿ ನರೇಂದ್ರ ಮೋದಿಯವರ ಛಾಯಾಚಿತ್ರಗಳೊಂದಿಗೆ ಬದಲಾಯಿಸಲಾಗಿದೆ ಎಂದು ಎಎಪಿ ಆರೋಪಿಸಿದೆ.

    ಸಿಎಂ ರೇಖಾ ಗುಪ್ತ ಅವರು ಇಂದು ಕಂಟ್ರೋಲರ್ ಮತ್ತು ಆಡಿಟರ್-ಜನರಲ್ (ಸಿಎಜಿ) ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಿದರು. ಎಎಪಿ ಅವಧಿಯಲ್ಲಿ ಹಲವು ಭ್ರಷ್ಟಾಚಾರಗಳು ನಡೆದಿವೆ ಎಂದು ವರದಿಯಲ್ಲಿ ಆರೋಪಿಸಲಾಗಿದೆ. ಇದನ್ನೂ ಓದಿ: Maha Kumbh Mela: ಮಹಾಶಿವರಾತ್ರಿಯಂದು ಕಡೆಯ ಅಮೃತಸ್ನಾನಕ್ಕೆ ಜಿಲ್ಲಾಡಳಿತ ಸಜ್ಜು

    ಈ ಹೇಳಿಕೆಯನ್ನು ಬಿಜೆಪಿ ತಳ್ಳಿಹಾಕಿದ್ದು, ಎಎಪಿ ಸುಳ್ಳು ಹೇಳುತ್ತಿದೆ ಎಂದು ಆರೋಪಿಸಿದೆ. ಬಿಜೆಪಿ ಬಿಡುಗಡೆ ಮಾಡಿದ ಗುಪ್ತಾ ಅವರ ಕಚೇರಿಯ ವೀಡಿಯೊಗಳು, ಎಎಪಿ ಆಡಳಿತದಲ್ಲಿ ಮುಖ್ಯಮಂತ್ರಿಗಳ ಮೇಜಿನ ಹಿಂದೆ ನೇತುಹಾಕಲಾಗಿದ್ದ ಡಾ. ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಫೋಟೋಗಳನ್ನು ಪಕ್ಕದ ಗೋಡೆಗಳಿಗೆ ಸ್ಥಳಾಂತರಿಸಿ, ಮಹಾತ್ಮ ಗಾಂಧಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ಮೋದಿಯವರ ಫೋಟೋಗಳನ್ನು ಅಳವಡಿಸಿರುವುದನ್ನು ತೋರಿಸಿವೆ.

    ಎಎಪಿ, ಹಲವಾರು ತಿಂಗಳುಗಳ ಕಾಲ ಜೈಲಿನಲ್ಲಿದ್ದ ಕೇಜ್ರಿವಾಲ್ ಮತ್ತು ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರು ಈ ಆರೋಪಗಳನ್ನು ಎದುರಿಸಿದ್ದಾರೆ. ಹಲವು ಹಗರಣಗಳ ಆರೋಪಗಳ ಮಧ್ಯೆ ನಡೆದ ಚುನಾವಣೆಯಲ್ಲಿ ಎಎಪಿ ಸೋತಿತು. ಬಿಜೆಪಿ ದೆಹಲಿಯ 70 ಸ್ಥಾನಗಳಲ್ಲಿ 48 ಸ್ಥಾನಗಳನ್ನು ಗೆದ್ದುಕೊಂಡಿತು. ಕಳೆದ ಎರಡು ಚುನಾವಣೆಗಳಲ್ಲಿ ಗೆದ್ದಿದ್ದಕ್ಕಿಂತ 37 ಹೆಚ್ಚು ಸ್ಥಾನಗಳನ್ನು ಗೆದ್ದಿದೆ.

  • AAP ಸರ್ಕಾರದಲ್ಲಿ ಹಗರಣ – ದೆಹಲಿ ವಿಧಾನಸಭೆಯಲ್ಲಿ ಇಂದು ಸರ್ಕಾರದಿಂದ ಸಿಎಜಿ ವರದಿ ಮಂಡನೆ

    AAP ಸರ್ಕಾರದಲ್ಲಿ ಹಗರಣ – ದೆಹಲಿ ವಿಧಾನಸಭೆಯಲ್ಲಿ ಇಂದು ಸರ್ಕಾರದಿಂದ ಸಿಎಜಿ ವರದಿ ಮಂಡನೆ

    * 14 ವರದಿಗಳನ್ನು ಮಂಡಿಸಲಿರುವ ಬಿಜೆಪಿ ಸರ್ಕಾರ

    ನವದೆಹಲಿ: ದೆಹಲಿಯ ಬಿಜೆಪಿ ಸರ್ಕಾರವು ಹಿಂದಿನ ಎಎಪಿ ಆಡಳಿತದ ಕಾರ್ಯಕ್ಷಮತೆಗೆ ಸಂಬಂಧಿಸಿದ 14 ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವರದಿಗಳನ್ನು ಮಂಗಳವಾರ ವಿಧಾನಸಭೆಯಲ್ಲಿ ಮಂಡಿಸಲಿದೆ.

    ಆಪ್ ಸರ್ಕಾರದ ಹಗರಣಗಳು, ಶೀಷ್‌ ಮಹಲ್, ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ಆಗಿರುವ ಅಕ್ರಮಗಳ ಬಗ್ಗೆ ಸರ್ಕಾರ ವರದಿ ಮಂಡನೆ ಮಾಡಲಿದೆ.

    ಶೀಷ್‌ ಮಹಲ್ ನವೀಕರಣಕ್ಕೆ 8.62 ಕೋಟಿಗೆ ಮಂಜೂರು ಮಾಡಲಾಗಿದ್ದರೂ, ಅಂತಿಮವಾಗಿ 33.66 ಕೋಟಿ ರೂ. ಖರ್ಚು ಮಾಡಲಾಗಿತ್ತು. ಮೊಹಲ್ಲಾ‌ ಕ್ಲಿನಿಕ್ ಯೋಜನೆಗಳಲ್ಲಿ ಅಕ್ರಮದ ಶಂಕೆ ಇದೆ. ಈ ಬಗ್ಗೆ ಆಡಳಿತಾರೂಢ ಬಿಜೆಪಿ ಸರ್ಕಾರ ವರದಿ ಮಂಡಿಸಲಿದೆ.

    ಎಎಪಿ ‘ತಡೆಹಿಡಿದ’ ಸಿಎಜಿ ವರದಿಗಳಲ್ಲಿ ವಿವಿಧ ಸರ್ಕಾರಿ ಕಾರ್ಯಕ್ರಮಗಳು ಮತ್ತು ಉಪಕ್ರಮಗಳ ನಿರ್ಣಾಯಕ ಲೆಕ್ಕಪರಿಶೋಧನೆಗಳು ಮತ್ತು ಮೌಲ್ಯಮಾಪನಗಳು ಸೇರಿವೆ ಎನ್ನಲಾಗಿದೆ.

    * ರಾಜ್ಯ ಹಣಕಾಸು ಲೆಕ್ಕಪರಿಶೋಧನಾ ವರದಿ (2021ರ ಮಾರ್ಚ್‌ಗೆ ಕೊನೆಗೊಂಡ ವರ್ಷಕ್ಕೆ)
    * ಆದಾಯ, ಆರ್ಥಿಕ, ಸಾಮಾಜಿಕ ಮತ್ತು ಸಾಮಾನ್ಯ ವಲಯಗಳು ಮತ್ತು ಸಾರ್ವಜನಿಕ ಉದ್ದಿಮೆಗಳು (2020ರ ಮಾರ್ಚ್ 31, ಮತ್ತು 2021 ಕ್ಕೆ ಕೊನೆಗೊಂಡ ವರ್ಷಗಳಿಗೆ)
    * ವಾಹನ ವಾಯು ಮಾಲಿನ್ಯ ತಡೆಗಟ್ಟುವಿಕೆ ಮತ್ತು ತಗ್ಗಿಸುವಿಕೆಯ ಕಾರ್ಯಕ್ಷಮತೆಯ ಲೆಕ್ಕಪರಿಶೋಧನೆ (2021ರ ಮಾರ್ಚ್ 31ಕ್ಕೆ ಕೊನೆಗೊಂಡ ವರ್ಷಕ್ಕೆ)
    * ಆರೈಕೆ ಮತ್ತು ರಕ್ಷಣೆಯ ಅಗತ್ಯವಿರುವ ಮಕ್ಕಳ ಕಾರ್ಯಕ್ಷಮತೆ ಲೆಕ್ಕಪರಿಶೋಧನೆ (2021ರ ಮಾರ್ಚ್ 31ಕ್ಕೆ ಕೊನೆಗೊಂಡ ವರ್ಷಕ್ಕೆ)
    * ರಾಜ್ಯ ಹಣಕಾಸು ಲೆಕ್ಕಪರಿಶೋಧನಾ ವರದಿ (2022ರ ಮಾರ್ಚ್‌ಗೆ ಕೊನೆಗೊಂಡ ವರ್ಷಕ್ಕೆ)
    * ಮದ್ಯ ಪೂರೈಕೆಯ ಕಾರ್ಯಕ್ಷಮತೆ ಲೆಕ್ಕಪರಿಶೋಧನೆ
    * ರಾಜ್ಯ ಹಣಕಾಸು ಲೆಕ್ಕಪರಿಶೋಧನಾ ವರದಿ (2023ರ ಮಾರ್ಚ್‌ಗೆ ಕೊನೆಗೊಂಡ ವರ್ಷಕ್ಕೆ)
    * ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಮತ್ತು ಆರೋಗ್ಯ ಸೇವೆಗಳ ನಿರ್ವಹಣೆಯ ಕಾರ್ಯಕ್ಷಮತೆ ಲೆಕ್ಕಪರಿಶೋಧನೆ
    * ದೆಹಲಿ ಸಾರಿಗೆ ನಿಗಮದ ಕಾರ್ಯನಿರ್ವಹಣೆಯ ಕುರಿತು ಕಾರ್ಯಕ್ಷಮತೆ ಲೆಕ್ಕಪರಿಶೋಧನಾ ವರದಿ

  • ಕೇಜ್ರಿವಾಲ್ ಸಮ್ಮುಖದಲ್ಲಿ ಎಎಪಿ ಸೇರಿದ ಪಂಜಾಬ್ ನಟಿ

    ಕೇಜ್ರಿವಾಲ್ ಸಮ್ಮುಖದಲ್ಲಿ ಎಎಪಿ ಸೇರಿದ ಪಂಜಾಬ್ ನಟಿ

    ನವದೆಹಲಿ: ಕೀರ್ತಿ ಕಿಶನ್‌ನ ಯೂನಿಯನ್ ನಾಯಕ ಬಲದೇವ್ ಸಿಂಗ್ (Baldev Singh) ಅವರ ಪುತ್ರಿ ಪಂಜಾಬ್‌ನ ಬಹುಭಾಷಾ ನಟಿ ಸೋನಿಯಾ ಮನ್ (Sonia Mann), ಎಎಪಿ ಮುಖ್ಯಸ್ಥರಾದ ಅರವಿಂದ್ ಕೇಜ್ರಿವಾಲ್ (Arvind Kejriwal) ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

    ಎಎಪಿಯ ಪಂಜಾಬ್ ಘಟಕವು ಎಕ್ಸ್‌ನಲ್ಲಿ ‘ಕೀರ್ತಿ ಕಿಸಾನ್ ಯೂನಿಯನ್ ನಾಯಕ ಎಸ್ ಬಲದೇವ್ ಸಿಂಗ್ ಅವರ ಪುತ್ರಿ ಹಾಗೂ ಪಂಜಾಬಿ ನಟಿ ಸೋನಿಯಾ ಮಾನ್ ಅವರು ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷವನ್ನು ಸೇರಿದ್ದಾರೆ. ಅವರನ್ನು ಆಮ್ ಆದ್ಮಿ ಪಕ್ಷದ ಕುಟುಂಬಕ್ಕೆ ಸ್ವಾಗತಿಸುತ್ತಿದ್ದೇವೆ’ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ದೆಹಲಿ ವಿಧಾನಸಭಾ ವಿರೋಧ ಪಕ್ಷದ ನಾಯಕಿಯಾಗಿ ಅತಿಶಿ ಆಯ್ಕೆ

    ಸೋನಿಯಾ ಮಾನ್ ವಿವಿಧ ಭಾಷಾ ಚಿತ್ರಗಳಲ್ಲಿ ನಟಿಸಿದ್ದಾರೆ. ಮಲೆಯಾಳಂ, ಹಿಂದಿ, ತೆಲುಗು ಹಾಗೂ ಮರಾಠಿ ಸಿನಿಮಾಗಳಲ್ಲೂ ನಟಿಸಿದ್ದಾರೆ. ಹೈಡ್ ಆ್ಯಂಡ್ ಸೀಕ್ ಎಂಬ ಮಲೆಯಾಳಂ ಸಿನಿಮಾದಲ್ಲೂ ನಟಿಸಿದ್ದು, 2014ರಲ್ಲಿ ಹಿಂದಿಯಲ್ಲಿ ತೆರೆಕಂಡ ಕಹಿನ್ ಹೈ ಮೇರಾ ಪ್ಯಾರ್ ಚಿತ್ರದಲ್ಲೂ ಅಭಿನಯಿಸಿದ್ದಾರೆ. 2020ರಲ್ಲಿ ಹ್ಯಾಪಿ ಹಾರ್ಡಿ ಮತ್ತು ಹೀರ್ ಚಿತ್ರಗಳಲ್ಲೂ ನಟಿಸಿದ್ದಾರೆ. ಇದನ್ನೂ ಓದಿ: ಬಿಸಿಸಿಐ, ದುಬೈ ಕಾನ್ಸುಲೇಟ್‌ನಿಂದ ಸಮುದಾಯ ಜಾಗೃತಿ ಕಾರ್ಯಕ್ರಮ: ಕಾನ್ಸುಲ್ ಜನರಲ್ ಸತೀಶ್ ಶಿವನ್ ಸಲಹೆ

    ಸೋನಿಯಾ ತಂದೆ ಬಲದೇವ್ ಸಿಂಗ್ ಮಾಜಿ ನಾಯಕ ಮತ್ತು ಕಾರ್ಯಕರ್ತರಾಗಿದ್ದರು. ಅವರನ್ನು 1980 ರಲ್ಲಿ ಖಲಿಸ್ತಾನಿ ಉಗ್ರಗಾಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಇದನ್ನೂ ಓದಿ: ರೇಸ್‌ ವೇಳೆ ಮತ್ತೊಂದು ಕಾರಿಗೆ ಡಿಕ್ಕಿ – ಎರಡು ಪಲ್ಟಿಯಾಗಿ ನಿಂತ ನಟ ಅಜಿತ್‌ ಕಾರು

    ಫೆಬ್ರವರಿ 8ರಂದು ನಡೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಪ್ ಪಕ್ಷದ ಹೀನಾಯ ಸೋಲಿನ ನಂತರ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯತ್ತ ಗಮನ ಹರಿಸಿದ್ದಾರೆ. ಇದನ್ನೂ ಓದಿ: Champions Trophy 2025 | ಟಾಸ್‌ಗೆದ್ದ ಪಾಕ್‌ ಬ್ಯಾಟಿಂಗ್‌ ಆಯ್ಕೆ

  • ದೆಹಲಿ ವಿಧಾನಸಭಾ ವಿರೋಧ ಪಕ್ಷದ ನಾಯಕಿಯಾಗಿ ಅತಿಶಿ ಆಯ್ಕೆ

    ದೆಹಲಿ ವಿಧಾನಸಭಾ ವಿರೋಧ ಪಕ್ಷದ ನಾಯಕಿಯಾಗಿ ಅತಿಶಿ ಆಯ್ಕೆ

    – ಅಧಿವೇಶನದಲ್ಲಿ ಮಹಿಳಾ ಸಿಎಂ vs ಮಹಿಳಾ ವಿಪಕ್ಷ ನಾಯಕಿ

    ನವದೆಹಲಿ: ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕಿಯಾಗಿ ದೆಹಲಿ ಮಾಜಿ ಸಿಎಂ ಅತಿಶಿ ಅವರನ್ನು ಆಯ್ಕೆ ಮಾಡಲಾಗಿದೆ.

    ಈ ಹುದ್ದೆಗೆ ಮಹಿಳೆಯೊಬ್ಬರು ಆಯ್ಕೆಯಾಗಿರುವುದು ಇದೇ ಮೊದಲು. ಅಷ್ಟೇ ಅಲ್ಲ, ಮುಂಬರುವ ವಿಧಾನಸಭಾ ಅಧಿವೇಶನದ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳಾ ವಿರೋಧ ಪಕ್ಷದ ನಾಯಕಿಯೊಬ್ಬರು ದೆಹಲಿ ಮುಖ್ಯಮಂತ್ರಿಯನ್ನು ಎದುರಿಸಲಿದ್ದಾರೆ.

    ಭಾನುವಾರ ನಡೆದ ಎಎಪಿ ಶಾಸಕಾಂಗ ಸಭೆಯಲ್ಲಿ ಅತಿಶಿ ಅವರನ್ನು ವಿರೋಧ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಲಾಯಿತು. ಶಾಸಕ ಸಂಜೀವ್ ಝಾ ಅವರು ಪ್ರಮುಖ ಹುದ್ದೆಗೆ ಅತಿಶಿ ಅವರ ಹೆಸರನ್ನು ಪ್ರಸ್ತಾಪಿಸಿದರು.

    ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಶಾಸಕಾಂಗ ಪಕ್ಷಕ್ಕೆ ಧನ್ಯವಾದಗಳು. ಬಲವಾದ ವಿರೋಧ ಪಕ್ಷವು ಜನರ ಪರವಾಗಿ ಧ್ವನಿಯನ್ನು ಎತ್ತುತ್ತದೆ. ಬಿಜೆಪಿ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುವಂತೆ ಆಮ್ ಆದ್ಮಿ ಪಕ್ಷ ನೋಡಿಕೊಳ್ಳುತ್ತದೆ ಎಂದು ಅತಿಶಿ ತಿಳಿಸಿದ್ದಾರೆ.

    ದೆಹಲಿ ವಿಧಾನಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭವಾಗಲಿದೆ. ಮೂರು ದಿನಗಳ ಈ ಅಧಿವೇಶನದಲ್ಲಿ ಹಿಂದಿನ ಎಎಪಿ ಸರ್ಕಾರದ ಕಾರ್ಯಕ್ಷಮತೆಯ ವಿರುದ್ಧ ಬಾಕಿ ಇರುವ ಸಿಎಜಿ ವರದಿಗಳನ್ನು ಸದನದಲ್ಲಿ ಮಂಡಿಸಲಾಗುವುದು ಎಂದು ಆಡಳಿತಾರೂಢ ಬಿಜೆಪಿ ಸರ್ಕಾರ ಹೇಳಿದೆ.

  • ಪಂಜಾಬ್‌ನಲ್ಲಿ ಅಸ್ತಿತ್ವದಲ್ಲೇ ಇಲ್ಲದ ಇಲಾಖೆಗೆ 20 ತಿಂಗಳು ಸಚಿವರಾಗಿದ್ದ ಕುಲ್ದೀಪ್‌ ಸಿಂಗ್‌

    ಪಂಜಾಬ್‌ನಲ್ಲಿ ಅಸ್ತಿತ್ವದಲ್ಲೇ ಇಲ್ಲದ ಇಲಾಖೆಗೆ 20 ತಿಂಗಳು ಸಚಿವರಾಗಿದ್ದ ಕುಲ್ದೀಪ್‌ ಸಿಂಗ್‌

    ಚಂಡೀಗಢ: ಪಂಜಾಬ್‌ನಲ್ಲಿ (Punjab) ಅಸ್ತಿತ್ವದಲ್ಲೇ ಇಲ್ಲದ ಇಲಾಖೆಗೆ ಕುಲ್ದೀಪ್ ಸಿಂಗ್‌ ಧಲಿವಾಲ್‌ (Kuldeep Singh Dhaliwal) ಅವರು 20 ತಿಂಗಳು ಸಚಿವರಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

    ಧಲಿವಾಲ್ ಅವರು ಸುಮಾರು 20 ತಿಂಗಳಿನಿಂದ ಸಚಿವಾಲಯದಲ್ಲಿ ಅಸ್ತಿತ್ವದಲ್ಲಿಲ್ಲದ ಇಲಾಖೆಯನ್ನು ನಿರ್ವಹಿಸಿರುವುದು ಕಂಡುಬಂದಿದೆ ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ಹೊರಡಿಸಿದ ಗೆಜೆಟ್ ಅಧಿಸೂಚನೆಯನ್ನು ಉಲ್ಲೇಖಿಸಿ ವರದಿಯೊಂದು ಪ್ರಕಟವಾಗಿದೆ.

    Bhagwant Mann

    ಮಂತ್ರಿಗಳಿಗೆ ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಪಂಜಾಬ್ ಸರ್ಕಾರದ ಹಿಂದಿನ ಅಧಿಸೂಚನೆಯ ಭಾಗಶಃ ಮಾರ್ಪಾಡಿನಲ್ಲಿ, ಧಲಿವಾಲ್‌ಗೆ ಮೊದಲು ಹಂಚಿಕೆಯಾಗಿದ್ದ ಆಡಳಿತ ಸುಧಾರಣಾ ಇಲಾಖೆಯು ಇಲ್ಲಿಯವರೆಗೆ ಅಸ್ತಿತ್ವದಲ್ಲಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಆಮ್ ಆದ್ಮಿ ಪಕ್ಷದ ನಾಯಕ ಕುಲದೀಪ್ ಸಿಂಗ್ ಧಲಿವಾಲ್ ಈಗ ಪಂಜಾಬ್ ಸಂಪುಟದಲ್ಲಿ ಎನ್‌ಆರ್‌ಐ ವ್ಯವಹಾರಗಳ ಖಾತೆಯನ್ನು ಮಾತ್ರ ಹೊಂದಿರುತ್ತಾರೆ.

    ಪಂಜಾಬ್ ಮುಖ್ಯಮಂತ್ರಿ ಭಗವತ್ ಮಾನ್ ಅವರ ಆದೇಶದ ಮೇರೆಗೆ ಧಲಿವಾಲ್ ಅವರ ಖಾತೆಯನ್ನು ತಿದ್ದುಪಡಿ ಮಾಡುವ ನಿರ್ಧಾರವು ಫೆ.7 ರಿಂದ ಜಾರಿಗೆ ಬಂದಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಧಲಿವಾಲ್ ಅವರು ಕೃಷಿ ಮತ್ತು ರೈತರ ಕಲ್ಯಾಣ ಖಾತೆಯನ್ನು ಹೊಂದಿದ್ದರು. 2023 ರ ಮೇ ತಿಂಗಳಲ್ಲಿ ನಡೆದ ಸಚಿವ ಸಂಪುಟ ಪುನಾರಚನೆಯ ಸಮಯದಲ್ಲಿ ಅವರನ್ನು ಅಲ್ಲಿಂದ ವರ್ಗಾಯಿಸಲಾಯಿತು. ಇದಾದ ನಂತರ, ಅವರಿಗೆ ಆಡಳಿತ ಸುಧಾರಣಾ ಖಾತೆಯನ್ನು ನೀಡಲಾಗಿತ್ತು.

    2024 ರ ಸೆಪ್ಟೆಂಬರ್‌ನಲ್ಲಿ ಮತ್ತೊಂದು ಸಚಿವ ಸಂಪುಟ ಪುನಾರಚನೆಯ ನಂತರವೂ, ಧಲಿವಾಲ್ ಅವರು ಕಾಗದದ ಮೇಲೆ ಮಾತ್ರ ಅಸ್ತಿತ್ವದಲ್ಲಿದ್ದ ಇಲಾಖೆಯನ್ನು ತಮ್ಮದಾಗಿಸಿಕೊಂಡರು.

    ಆಡಳಿತ ಸುಧಾರಣಾ ಇಲಾಖೆಗೆ ಯಾವುದೇ ಸಿಬ್ಬಂದಿಯನ್ನು ನಿಯೋಜಿಸಲಾಗಿಲ್ಲ. ಅವರು ಯಾವುದೇ ಸಭೆಗಳನ್ನು ನಡೆಸಿಲ್ಲ ಎಂದು ಹೆಸರು ಬಹಿರಂಗಪಡಿಸದ ಮೂಲಗಳು ತಿಳಿಸಿವೆ.

  • ಪಂಜಾಬ್ ಸಿಎಂ, ಎಲ್ಲ ಆಪ್ ಶಾಸಕರನ್ನು ಭೇಟಿಯಾದ ಕೇಜ್ರಿವಾಲ್ – ಪಂಜಾಬ್ ಸಿಎಂ ಮಾನ್ ಬದಲಾಗ್ತಾರಾ?

    ಪಂಜಾಬ್ ಸಿಎಂ, ಎಲ್ಲ ಆಪ್ ಶಾಸಕರನ್ನು ಭೇಟಿಯಾದ ಕೇಜ್ರಿವಾಲ್ – ಪಂಜಾಬ್ ಸಿಎಂ ಮಾನ್ ಬದಲಾಗ್ತಾರಾ?

    ಚಂಡೀಗಢ: ದೆಹಲಿಯಲ್ಲಿ ಎಎಪಿ (AAP) ಹೀನಾಯ ಸೋಲಿನ ಬಳಿಕ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರು ಪಂಜಾಬ್‌ನಲ್ಲಿ (Punjab) ಸಿಎಂ ಹಾಗೂ ಆಪ್‌ ಶಾಸಕರನ್ನು ಭೇಟಿಯಾಗಿದ್ದಾರೆ. ಈ ಬೆನ್ನಲ್ಲೇ, ಪಂಜಾಬ್‌ ಸಿಎಂ ಬದಲಾಗ್ತಾರಾ ಎಂಬ ಚರ್ಚೆ ಶುರುವಾಗಿದೆ.

    ದೆಹಲಿಯಲ್ಲಿ ನಡೆದ ಎಎಪಿ ಸಭೆಯಲ್ಲಿ ಕೇಜ್ರಿವಾಲ್, ಹಿರಿಯ ನಾಯಕ ಮನೀಶ್ ಸಿಸೋಡಿಯಾ ಮತ್ತು ಎಲ್ಲಾ ಪಂಜಾಬ್ ಶಾಸಕರು ಮತ್ತು ಪಕ್ಷದ ಇತರ ಪ್ರಮುಖ ಕಾರ್ಯಕರ್ತರು ಭಾಗವಹಿಸಿದ್ದರು. ಇದನ್ನೂ ಓದಿ: ರಣವೀರ್ ಅಲಹಾಬಾದಿಯಾ ವಿರುದ್ಧ ಮುಂಬೈ ನ್ಯಾಯಾಲಯದಲ್ಲಿ ದೂರು

    ರಾಷ್ಟ್ರ ರಾಜಧಾನಿಯ ಕಪುರ್ತಲಾ ಹೌಸ್‌ನಲ್ಲಿ ನಡೆದ ಪಂಜಾಬ್ ಶಾಸಕರ ಸಭೆ ಗಮನ ಸೆಳೆದಿತ್ತು. ಬಿಜೆಪಿಯ ಹಿರಿಯ ನಾಯಕರೊಬ್ಬರು ಮಾನ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಬದಲಾಯಿಸಲು ಕೇಜ್ರಿವಾಲ್ ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದರು. ರಾಜೌರಿ ಗಾರ್ಡನ್‌ನಿಂದ ಹೊಸದಾಗಿ ಆಯ್ಕೆಯಾದ ಶಾಸಕ ಮಂಜಿಂದರ್ ಸಿಂಗ್ ಸಿರ್ಸಾ, ಭಗವಂತ್‌ ಮಾನ್ ಅವರಿಗೆ ‘ಅಸಮರ್ಥ’ ಎಂದು ಹಣೆಪಟ್ಟಿ ಕಟ್ಟುವ ಮೂಲಕ ಅವರನ್ನು ತೆಗೆದುಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ವೀಡಿಯೊದಲ್ಲಿ ಹೇಳಿಕೊಂಡಿದ್ದಾರೆ.

    ದೆಹಲಿ ಚುನಾವಣೆಯಲ್ಲಿ ಸೋತ ನಂತರ, ಅರವಿಂದ್ ಕೇಜ್ರಿವಾಲ್ ದೆಹಲಿಯಲ್ಲಿ ಪಂಜಾಬ್ ಶಾಸಕರ ಸಭೆ ಕರೆದಿದ್ದಾರೆ. ಭಗವಂತ್‌ ಮಾನ್ ಅವರನ್ನು ಅಸಮರ್ಥ ಎಂದು ಹಣೆಪಟ್ಟಿ ಕಟ್ಟಿ ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕಲು ಅವರು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಗಳು ಸೂಚಿಸುತ್ತವೆ. ಮಹಿಳೆಯರಿಗೆ 1,000 ರೂ. ನೀಡುವ ಭರವಸೆಯನ್ನು ಅವರು ಈಡೇರಿಸಲು, ಮಾದಕ ದ್ರವ್ಯ ಸೇವನೆಯನ್ನು ತಡೆಯುವಲ್ಲಿ ವಿಫಲರಾಗಿದ್ದಾರೆ. ಪಂಜಾಬ್‌ನ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿದ್ದಾರೆ. ಈಗ, ಅವರು ಎಲ್ಲಾ ವೈಫಲ್ಯವನ್ನು ಭಗವಂತ್ ಮಾನ್ ಅವರ ಮೇಲೆ ಹಾಕಲು ಬಯಸುತ್ತಾರೆ. ಕೇಜ್ರಿವಾಲ್ ಒಳ್ಳೆಯ ವ್ಯಕ್ತಿ. ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಅವರು AAP ಪಂಜಾಬ್ ಶಾಸಕರನ್ನು ಒತ್ತಾಯಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯಧ್ಯಕ್ಷರ ಬದಲಾವಣೆ ಚರ್ಚೆ – ಅಮಿತ್ ಶಾ ಭೇಟಿಯಾದ ಸೋಮಣ್ಣ

    ಈ ಹೇಳಿಕೆಯ ಬಗ್ಗೆ ಮಾನ್‌ ಅವರು ನಗುಬೀರಿದ್ದಾರೆ. ‘ಅವರು ಹೇಗೆ ಬೇಕಾದರೂ ಮಾತನಾಡಲಿ ಎಂದು ಪ್ರತಿಕ್ರಿಯಿಸಿದ್ದಾರೆ. ಪಂಜಾಬ್ ಸರ್ಕಾರ ಮಹಿಳೆಯರಿಗೆ ಪ್ರತಿ ತಿಂಗಳು 1,000 ರೂ. ನೀಡುವ ಭರವಸೆಯನ್ನು ಈಡೇರಿಸುತ್ತದೆ ಎಂದು ಸಿಎಂ ತಿಳಿಸಿದ್ದಾರೆ.