Tag: ಎಕ್ಸ್‌ಪ್ರೆಸ್‌ ವೇ

  • ಎಕ್ಸ್‌ಪ್ರೆಸ್ ವೇಯಲ್ಲಿ ಕಾರುಗಳ ನಡುವೆ ಅಪಘಾತ – ಇಬ್ಬರು ಸಾವು, ನಾಲ್ವರು ಗಂಭೀರ

    ಎಕ್ಸ್‌ಪ್ರೆಸ್ ವೇಯಲ್ಲಿ ಕಾರುಗಳ ನಡುವೆ ಅಪಘಾತ – ಇಬ್ಬರು ಸಾವು, ನಾಲ್ವರು ಗಂಭೀರ

    ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ (Bengaluru-Mysuru Expressway) ಕಾರುಗಳ ನಡುವೆ ಭೀಕರ ಅಪಘಾತ ಉಂಟಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಂಡ್ಯ (Mandya) ಜಿಲ್ಲೆ ಮದ್ದೂರಿನ ನಿಡಘಟ್ಟ ಬಳಿ ನಡೆದಿದೆ.

    ಅಪಘಾತದಲ್ಲಿ ಮಸೂದ್ ಹಾಗೂ ಅಯಾನ್ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಖುಷಿ, ಚಿಕ್ಕು, ಮುಜಾಯಿದ್ ಪಾಷ, ಬಸವರಾಜು, ಪಾರ್ವತಿ ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರಿನ ಕಡೆಯಿಂದ ಬರುತ್ತಿದ್ದ ಕಾರು ಡಿವೈಡರ್ ದಾಟಿ ಮಂಡ್ಯದ ಕಡೆಯಿಂದ ಬರುತ್ತಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಹಾಸನ| ನಿಲ್ಲಿಸಿದ್ದ ಕಾರಿನ ಡೋರ್‌ ತೆಗೆದು 6.30 ಲಕ್ಷ ಹಣ ಎಗರಿಸಿದ ಕಳ್ಳ

    ಅತಿವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಭಾನುವಾರ ತಡರಾತ್ರಿ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಹೈವೇ ರಸ್ತೆಯನ್ನು ಬಂದ್ ಮಾಡಿ ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಘಟನೆಯಲ್ಲಿ ಗಾಯಗೊಂಡ ಕೆಲವರಿಗೆ ಬೆಂಗಳೂರು ಹಾಗೂ ಇನ್ನೂ ಕೆಲವರಿಗೆ ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಕಾಲ್ತುಳಿತದಲ್ಲಿ ಗಾಯಗೊಂಡವರಿಗೆ ಡಿಸಿ ನೋಟಿಸ್ – ತನಿಖೆಗೆ ಹಾಜರಾಗುವಂತೆ 45 ಮಂದಿಗೆ ಸೂಚನೆ

  • ಎಕ್ಸ್‌ಪ್ರೆಸ್‌ ವೇಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಸರ್ವಿಸ್ ರಸ್ತೆಗೆ ಉರುಳಿದ ಕಾರು

    ಎಕ್ಸ್‌ಪ್ರೆಸ್‌ ವೇಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಸರ್ವಿಸ್ ರಸ್ತೆಗೆ ಉರುಳಿದ ಕಾರು

    – ಕೇರಳ ಮೂಲದ ಕುಟುಂಬಕ್ಕೆ ಸಣ್ಣಪುಟ್ಟ ಗಾಯ

    ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ (Expressway) ನಿಯಂತ್ರಣ ತಪ್ಪಿದ ಕಾರೊಂದು (Car) ಡಿವೈಡರ್‌ಗೆ ಡಿಕ್ಕಿ ಹೊಡೆದು ಸರ್ವಿಸ್ ರಸ್ತೆಗೆ (Service Road) ಉರುಳಿ ಬಿದ್ದ ಘಟನೆ ಚನ್ನಪಟ್ಟಣ (Channapatna) ತಾಲೂಕಿನ ಚೋಳಮಾರನಹಳ್ಳಿ ಗ್ರಾಮದ ಬಳಿ ನಡೆದಿದೆ.

    ಮೈಸೂರು (Mysuru) ಕಡೆಯಿಂದ ಬೆಂಗಳೂರು (Bengaluru) ಕಡೆಗೆ ಹೊರಟಿದ್ದ ಕಾರು ವೇಗವಾಗಿ ಬಂದ ಪರಿಣಾಮ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಸರ್ವಿಸ್ ರಸ್ತೆಗೆ ಉರುಳಿಬಿದ್ದ ಕಾರು, ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದ ಕೇರಳ ಮೂಲದ ಕುಟುಂಬಕ್ಕೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಇಬ್ಬರು ಮಕ್ಕಳು ಸೇರಿ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಕೋಟಿ ಕೋಟಿ ಮೌಲ್ಯದ 5,13,400 ಸಿಗರೇಟ್‌ ಸೀಜ್‌

    ಇನ್ನು ಅದೇ ಮಾರ್ಗದಲ್ಲಿ ಬರುತ್ತಿದ್ದ ಮೈಸೂರಿನ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ (MK Somashekar) ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ. ಅಂಬುಲೆನ್ಸ್ ಕರೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಈ ಸಂಬಂಧ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್

  • ಸಾಲುಸಾಲು ರಜೆ ಮುಗಿಸಿ ಬೆಂಗಳೂರಿನತ್ತ ಜನ – ಕಿಲೋ ಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್

    ಸಾಲುಸಾಲು ರಜೆ ಮುಗಿಸಿ ಬೆಂಗಳೂರಿನತ್ತ ಜನ – ಕಿಲೋ ಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್

    – ನಗರ ಪ್ರವೇಶಿಸಲು ಪ್ರಯಾಣಿಕರ ಪರದಾಟ

    ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ (Independence Day) ಹಾಗೂ ವರಮಹಾಲಕ್ಷ್ಮಿ ಹಬ್ಬ (Varamahalakshmi Festival)  ಹೀಗೆ ಸಾಲು ಸಾಲು ರಜೆ (Holiday) ಹಿನ್ನೆಲೆ ತಮ್ಮ ತಮ್ಮ ಊರಿಗೆ ತೆರಳಿದ್ದ ಜನ ಇಂದು (ಭಾನುವಾರ) ಬೆಂಗಳೂರಿಗೆ (Bengaluru) ವಾಪಸ್ ಆಗಿದ್ದಾರೆ. ಈ ಹಿನ್ನೆಲೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಸೇರಿದಂತೆ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಕಿಲೋ ಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ.

    ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ, ಆ.16ರಂದು ವರಮಹಾಲಕ್ಷ್ಮಿ ಹಬ್ಬ ಮತ್ತು 2 ದಿನ ವೀಕೆಂಡ್ ಇದ್ದ ಹಿನ್ನೆಲೆ ಜನರು ತಮ್ಮ ಊರಿನತ್ತ ಮುಖ ಮಾಡಿದ್ದರು. ಇದೀಗ ಕೆಲಸದ ಸಲುವಾಗಿ ಮತ್ತೆ ಬೆಂಗಳೂರಿಗೆ ಜನರು ಆಗಮಿಸುತ್ತಿದ್ದಾರೆ. ಈ ಸಂದರ್ಭ ಟ್ರಾಫಿಕ್ ಜಾಮ್ (Traffic Jam) ಉಂಟಾಗಿದ್ದು, ಬೆಂಗಳೂರು ನಗರ ಪ್ರವೇಶಿಸಲು ಪ್ರಯಾಣಿಕರು ಹರಸಾಹಸ ಪಡುತ್ತಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವ ವಿ.ಸೋಮಣ್ಣರ ಕಾರ್ಯಾಲಯ ವಿವಾದ ಸುಖಾಂತ್ಯ

    ಇಷ್ಟು ಮಾತ್ರವಲ್ಲದೇ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳು ಸಹ ಪುಲ್ ರಶ್ ಆಗಿದ್ದು, ಕೆಂಗೇರಿ ಚೆಕ್ ಪೋಸ್ಟ್ ಬಳಿ ಜಾಮ್ ಉಂಟಾಗಿದೆ. ಇದನ್ನೂ ಓದಿ: Bengaluru | ಹಣಕ್ಕಾಗಿ ತಾಯಿ-ಮಗನ ಕಿಡ್ನ್ಯಾಪ್‌ ಮಾಡಿ ಲೈಂಗಿಕ ಕಿರುಕುಳ – ರೌಡಿ ಶೀಟರ್ಸ್‌ ಗ್ಯಾಂಗ್ ಅರೆಸ್ಟ್

  • ಎಕ್ಸ್‌ಪ್ರೆಸ್ ವೇಯಲ್ಲಿ ತಡೆಗೋಡೆಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಚಾಲಕ ಗಂಭೀರ

    ಎಕ್ಸ್‌ಪ್ರೆಸ್ ವೇಯಲ್ಲಿ ತಡೆಗೋಡೆಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಚಾಲಕ ಗಂಭೀರ

    ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ (Expressway) ವೇಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು (Car) ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮಂಡ್ಯದ (Mandya) ಕೋಣನಹಳ್ಳಿ (Konanahalli) ಬಳಿ ನಡೆದಿದೆ.

    ಘಟನೆಯಲ್ಲಿ ಕಾರು ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಕಾರು ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿತ್ತು. ಕಾರಿನಲ್ಲಿ ಚಾಲಕ ಮಾತ್ರ ತೆರಳುತ್ತಿದ್ದ. ವೇಗವಾಗಿ ಬರುತ್ತಿದ್ದ ಹಿನ್ನೆಲೆ ಎಕ್ಸ್‌ಪ್ರೆಸ್ ವೇಯ ಎಡ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರು ಜಖಂಗೊಂಡಿದೆ. ಇದನ್ನೂ ಓದಿ: ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ – 42 ಮಂದಿಗೆ ಗಾಯ, 19 ಜನ ಆಸ್ಪತ್ರೆಗೆ

    ಕಾರಿನಲ್ಲಿದ್ದ ಚಾಲಕನ ತಲೆ ಹಾಗೂ ಕೈಗೆ ಗಂಭೀರ ಪೆಟ್ಟು ಬಿದ್ದಿದ್ದು, ರಕ್ತದ ಮಡುವಿನಲ್ಲಿ ಚಾಲಕ ನರಳಾಡಿದ್ದಾರೆ. ಬಳಿಕ ಸ್ಥಳೀಯರು ಚಾಲಕನನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಸೆಂಟ್ರಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬೇಬಿ ಬೆಟ್ಟದ ಟ್ರಯಲ್ ಬ್ಲಾಸ್ಟ್‌ಗೆ ತಾತ್ಕಾಲಿಕ ಬ್ರೇಕ್

  • ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ – ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ

    ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ – ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ

    – ಕಾರು ಚಾಲಕ ಗಂಭೀರ

    ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ (Bengaluru-Mysuru Expressway) ತಡರಾತ್ರಿ ಭೀಕರ ಅಪಘಾತ (Accident) ಸಂಭವಿಸಿದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು (Engineering Students) ಸಾವನ್ನಪ್ಪಿರುವ ಘಟನೆ ರಾಮನಗರ (Ramanagara) ತಾಲೂಕಿನ ಕಪನಯ್ಯನದೊಡ್ಡಿ ಬಳಿ ನಡೆದಿದೆ.

    ಮೈಸೂರಿನಿಂದ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಫಾರ್ಚುನರ್ ಕಾರು ಓವರ್ ಟೇಕ್ ಮಾಡಲು ಹೋಗಿ ಲಾರಿಗೆ (Lorry) ಹಿಂಭಾಗದಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ವಿಶ್ವ (21) ಮತ್ತು ಸೂರ್ಯ (21) ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಸುಹಾಸ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ನಾನು ಶೆಡ್‌ನಿಂದ ಬಂದ ಮೇಲೆ ಇವ್ರೆಲ್ಲಾ ಸೇರಿ ಹಿಂಗೆ ಮಾಡಿ ನನ್‌ ತಲೆಗೆ ತಂದಿದ್ದಾರೆ: ದರ್ಶನ್‌ ಅಳಲು

    ಆಂಧ್ರ ಮೂಲದ ವಿದ್ಯಾರ್ಥಿಗಳು ಬೆಂಗಳೂರಿನ ವಿದ್ಯಾರಣ್ಯಪುರದ ಖಾಸಗಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ. ಕಾರ್ಯನಿಮಿತ್ತ ಮೈಸೂರಿಗೆ ಹೋಗಿ ಬೆಂಗಳೂರಿಗೆ ವಾಪಸ್ಸಾಗುವ ಸಂದರ್ಭ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಹತ್ಯೆಯಾದ ರೇಣುಕಾಸ್ವಾಮಿ ಮನೆಗೆ ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ಭೇಟಿ

  • ಎಕ್ಸ್‌ಪ್ರೆಸ್‌ ವೇಯಲ್ಲಿ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು- ನಾಲ್ವರು ಗಂಭೀರ

    ಎಕ್ಸ್‌ಪ್ರೆಸ್‌ ವೇಯಲ್ಲಿ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು- ನಾಲ್ವರು ಗಂಭೀರ

    ರಾಮನಗರ: ನಿಯಂತ್ರಣ ತಪ್ಪಿ ಕಾರೊಂದು (Car) ಹೆದ್ದಾರಿ ಪಕ್ಕದ ಕೆರೆಗೆ ಬಿದ್ದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬೆಂಗಳೂರು-ಮೈಸೂರು ದಶಪಥ (Express Way) ಹೆದ್ದಾರಿಯಲ್ಲಿ ನಡೆದಿದೆ.

    ಬೆಂಗಳೂರಿನಿಂದ (Bengaluru) ಸ್ಕೋಡಾ ಕಾರು ಮೈಸೂರು ಕಡೆಗೆ ಹೋಗುತ್ತಿತ್ತು. ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗೇಟ್ ಬಳಿ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಬರುವ ವೇಳೆ ಘಟನೆ ನಡೆದಿದೆ. ಫಿಲ್ಮೀ ಸ್ಟೈಲ್‌ನಲ್ಲಿ ಕಾರು ಕೆರೆಗೆ ಬಿದ್ದಿದ್ದು, ಓವರ್ ಸ್ಪೀಡ್‌ನಿಂದಾಗಿ (Over Speed) ಸರ್ವಿಸ್ ರಸ್ತೆಗೆ ಬರುವ ವೇಳೆ ಕಾರು ಕೆರೆಗೆ ಹಾರಿದೆ. ಘಟನೆಯಲ್ಲಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಕುಮಾರ್ ಬಂಗಾರಪ್ಪ ನಿವಾಸಕ್ಕೆ ಶಿವಣ್ಣ ಅಭಿಮಾನಿಗಳಿಂದ ಮುತ್ತಿಗೆ

    ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಇಂದಿನಿಂದ ಜೂನ್ 12 ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯ ಎಚ್ಚರಿಕೆ

  • ದಶಪಥ ಹೆದ್ದಾರಿಯಲ್ಲಿ ನಿರ್ಮಾಣವಾಗದ ಸ್ಕೈವಾಕ್ – ಜೀವ ಭಯದಲ್ಲಿ ರಸ್ತೆ ದಾಟುವ ಸಾರ್ವಜನಿಕರು

    ದಶಪಥ ಹೆದ್ದಾರಿಯಲ್ಲಿ ನಿರ್ಮಾಣವಾಗದ ಸ್ಕೈವಾಕ್ – ಜೀವ ಭಯದಲ್ಲಿ ರಸ್ತೆ ದಾಟುವ ಸಾರ್ವಜನಿಕರು

    ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ (Expressway) ನಿರ್ಮಾಣ ಆಗಿ ವರ್ಷ ಆಗುತ್ತಾ ಬಂದರೂ ಅವ್ಯವಸ್ಥೆ ಸರಿಪಡಿಸದೇ ಹೆದ್ದಾರಿ ಪ್ರಾಧಿಕಾರ ಕಣ್ಮುಚ್ಚಿ ಕುಳಿತಿದೆ. ದಶಪಥ ಹೆದ್ದಾರಿಯಲ್ಲಿ ಮೂಲಭೂತ ಸೌಕರ್ಯಗಳಿಲ್ಲದೇ ವಾಹನ ಸವಾರರು ಹಾಗೂ ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ.

    ಗ್ರಾಮೀಣ ಭಾಗಗಳಲ್ಲಿ ಸ್ಕೈವಾಕ್ (Skywalk) ನಿರ್ಮಾಣವಾಗದೇ ಜೀವಭಯದಲ್ಲಿ ಹೈವೇ ದಾಟುವ ಪರಿಸ್ಥಿತಿ ನಿರ್ಮಾಣವಾಗಿದೆ. ನಿತ್ಯ ಸ್ಥಳೀಯ ಗ್ರಾಮಸ್ಥರು, ವಿದ್ಯಾರ್ಥಿಗಳು ರಸ್ತೆ ದಾಟುವಾಗ ಸಣ್ಣಪುಟ್ಟ ಅಪಘಾತಗಳಿಗೆ ತುತ್ತಾಗುತ್ತಿದ್ದಾರೆ. ಅಲ್ಲದೇ ಸರ್ವಿಸ್ ರಸ್ತೆಯಲ್ಲಿ ಬಸ್ ನಿಲ್ದಾಣ, ಬೀದಿ ದೀಪಗಳಿಲ್ಲದೇ ವಾಹನ ಸಂಚಾರಿಗೆ ತೊಂದರೆ ಉಂಟಾಗುತ್ತಿದೆ. ಇದನ್ನೂ ಓದಿ: ಜಾತಿ ಗಣತಿಗೆ ನನ್ನ ವಿರೋಧವಿಲ್ಲ, ಸಮೀಕ್ಷೆ ವೈಜ್ಞಾನಿಕವಾಗಿರಬೇಕು: ಡಿಕೆಶಿ

    ಅತ್ತ ಪೊಲೀಸ್ ಇಲಾಖೆ ಕೇವಲ ದಂಡಾಸ್ತ್ರಕ್ಕೆ ಮಾತ್ರ ಸೀಮಿತವಾಗಿದ್ದರೆ ಇತ್ತ ದುಬಾರಿ ಟೋಲ್ ವಸೂಲಿ ಮಾಡುತ್ತಿರುವ ಹೆದ್ದಾರಿ ಪ್ರಾಧಿಕಾರ ಸಮಸ್ಯೆಗಳ ಬಗ್ಗೆ ಜಾಣ ಕುರುಡುತನ ಪ್ರದರ್ಶನ ಮಾಡುತ್ತಿದೆ. ಇನ್ನಾದರೂ ಹೆದ್ದಾರಿ ಪ್ರಾಧಿಕಾರ ಇತ್ತ ಗಮನಹರಿಸುವಂತೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ದೀಪ ಆರುವಾಗ ಜೋರಾಗಿ ಉರಿಯುತ್ತೆ, ಈಗ ಜೋರಾಗಿ ಉರಿಯುತ್ತಿದೆ ಅಷ್ಟೇ: ಯತ್ನಾಳ್‌ಗೆ ನಿರಾಣಿ ಟಾಂಗ್‌

  • ಎಕ್ಸ್‌ಪ್ರೆಸ್ ವೇಯಲ್ಲಿ ಸರಣಿ ಅಪಘಾತ – ಹಲವರಿಗೆ ಗಾಯ

    ಎಕ್ಸ್‌ಪ್ರೆಸ್ ವೇಯಲ್ಲಿ ಸರಣಿ ಅಪಘಾತ – ಹಲವರಿಗೆ ಗಾಯ

    ಮಂಡ್ಯ: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ (Expressway) ಮೂರು ಕಾರುಗಳ ನಡುವೆ ಸರಣಿ ಅಪಘಾತ (Accident) ಸಂಭವಿಸಿದ ಪರಿಣಾಮ ಹಲವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

    ಶ್ರೀರಂಗಪಟ್ಟಣ (Srirangapatna) ಬಳಿಯ ಗೌರಿಪುರದ (Gouripura) ಬಳಿ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಪಘಾತ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ (Traffic Jam) ಉಂಟಾಗಿದ್ದು, ಸುಮಾರು ಒಂದು ಕಿಲೋಮೀಟರ್ ಉದ್ದಕ್ಕೂ ವಾಹನಗಳು ನಿಂತಿದ್ದವು. ಸರಣಿ ಅಪಘಾತದಿಂದ ರಸ್ತೆ ಸಂಪೂರ್ಣ ಬಂದ್ ಆಗಿದ್ದು, ಹಲವು ನಿಮಿಷಗಳ ಬಳಿಕ ಮತ್ತೆ ರಸ್ತೆ ಸಂಚಾರ ಪ್ರಾರಂಭವಾಗಿದೆ. ಇದನ್ನೂ ಓದಿ: ಕೊಡಲಿಯಿಂದ ಹಲ್ಲೆಗೈದು ಹೊರಹಾಕಿ ಮನೆಯೊಳಗೆ ಮಲಗಿದ- ಬೆಳಗೆದ್ದು ನೋಡಿದಾಗ ಪತ್ನಿ ಸಾವು

    ಸರಣಿ ಅಪಘಾತದ ವೇಳೆ ಒಂದು ಕಾರು ಹೊತ್ತಿ ಉರಿದಿದೆ. ಈ ವೇಳೆ ಕಾರಿನಲ್ಲಿ ಇದ್ದವರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಕಿಟಕಿ ಗಾಜು ಹೊಡೆದು ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಲಾಗಿದೆ. ಅಪಘಾತದ ವೇಳೆ ಮಂಡ್ಯ ಎಸ್‌ಪಿ ವಾಹನಕ್ಕೂ ಕಾರು ಡಿಕ್ಕಿಯಾಗಿದೆ. ಎಸ್‌ಪಿ ಯತೀಶ್ ಶ್ರೀರಂಗಪಟ್ಟಣ ಕಡೆಗೆ ಹೋಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಈ ಕುರಿತು ಮಂಡ್ಯ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ – ಬಸ್‌ಗೆ ಸಿಲುಕಿ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಕ್ರಮ ಸಾಗಾಣಿಕೆ ಮಾಡ್ತಿದ್ದ 11 ಗೋವುಗಳ ರಕ್ಷಿಸಿದ ಶ್ರೀರಾಮ ಸೇನೆ ಕಾರ್ಯಕರ್ತರು

    ಅಕ್ರಮ ಸಾಗಾಣಿಕೆ ಮಾಡ್ತಿದ್ದ 11 ಗೋವುಗಳ ರಕ್ಷಿಸಿದ ಶ್ರೀರಾಮ ಸೇನೆ ಕಾರ್ಯಕರ್ತರು

    ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ (Expressway) ವೇಯಲ್ಲಿ ಅಕ್ರಮ ಗೋ ಸಾಗಾಟ (Cow Trafficking) ಮಾಡುತ್ತಿದ್ದ 11 ಗೋವುಗಳನ್ನು ಶ್ರೀರಾಮ ಸೇನೆ (Sri Ram Sena) ಕಾರ್ಯಕರ್ತರು ರಕ್ಷಣೆ ಮಾಡಿದ್ದಾರೆ.

    ಆರೋಪಿಗಳು 11 ಹಸುಗಳನ್ನು ಕ್ಯಾಂಟರ್ ಮೂಲಕ ಕಸಾಯಿಖಾನೆಗೆ ಸಾಗಿಸುತ್ತಿದ್ದ ವೇಳೆ ರಾಮನಗರ (Ramanagara) ತಾಲೂಕಿನ ಜಯಪುರ ಗೇಟ್ ಬಳಿ ಶ್ರೀರಾಮ ಸೇನೆ ಹಸುಗಳ ರಕ್ಷಣೆ ಮಾಡಿದೆ. ಖಚಿತ ಮಾಹಿತಿಯ ಮೇರೆಗೆ ವಾಹನ ಅಡ್ಡಗಟ್ಟಿದ್ದು, ಬಳಿಕ ರಾಮನಗರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಇದನ್ನೂ ಓದಿ: ಸಾಕು ನಾಯಿ, ಬೀದಿ ನಾಯಿ ಕಚ್ಚಾಟಕ್ಕೆ ಪೊಲೀಸ್ ಠಾಣೆ ಮೆಟ್ಟಿಲೇರಿದ 2 ಕುಟುಂಬಗಳು

    ಕೆಎಂ ದೊಡ್ಡಿಯಿಂದ ಚಿಂತಾಮಣಿಗೆ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಸಂದರ್ಭ ಸ್ಥಳಕ್ಕೆ ಬಂದ ಪೊಲೀಸರು ಕ್ಯಾಂಟರ್ ವಾಹನವನ್ನು ಸೀಜ್ ಮಾಡಿ ಅದರಲ್ಲಿದ್ದ 11 ಹಸುಗಳ ರಕ್ಷಣೆ ಮಾಡಿದ್ದಾರೆ. ಅಲ್ಲದೇ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಲಗಿದ್ದಲ್ಲೇ ಅಸುನೀಗಿದ ಲಾರಿ ಚಾಲಕ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ – ಮಾಜಿ ಸೈನಿಕ ಸಾವು, ನಾಲ್ವರಿಗೆ ಗಂಭೀರ ಗಾಯ

    ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ – ಮಾಜಿ ಸೈನಿಕ ಸಾವು, ನಾಲ್ವರಿಗೆ ಗಂಭೀರ ಗಾಯ

    ಮಂಡ್ಯ: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ (Expressway) ಭೀಕರ ಅಪಘಾತ ಸಂಭವಿಸಿದ ಪರಿಣಾಮ ಅಪಘಾತದಿಂದ ಸ್ಥಳದಲ್ಲಿ ಮಾಜಿ ಸೈನಿಕರೊಬ್ಬರು ಸಾವನ್ನಪ್ಪಿದ್ದು, ನಾಲ್ಕು ಮಂದಿಗೆ ಗಂಭೀರ ಗಾಯಗಳಾಗಿದೆ.

    ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ (Srirangapatna) ತಾಲೂಕಿನ ನಗುವಿನಹಳ್ಳಿ ಬಳಿಯ ಎಕ್ಸ್‌ಪ್ರೆಸ್ ವೇಯಲ್ಲಿ ಭಾನುವಾರ ಬೆಳಗ್ಗೆ 6:30ರ ವೇಳೆಯಲ್ಲಿ ಈ ಘಟನೆ ಜರುಗಿದೆ. ಆನೇಕಲ್ (Anekal) ಮೂಲದ ಮಾಜಿ ಸೈನಿಕ ಕಿಶೋರ್ ಬಾಬು (45) ಸಾವನ್ನಪ್ಪಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಆನೇಕಲ್‌ನಿಂದ ತಮಿಳುನಾಡಿಗೆ ಎಕ್ಸ್‌ಯುವಿ (XUV) ಮಹೇಂದ್ರ ಕಾರಿನಲ್ಲಿ ಕಿಶೋರ್ ಹಾಗೂ ನಾಲ್ವರು ಹೋಗುತ್ತಿದ್ದರು. ಈ ವೇಳೆ ನಗುವಿನಹಳ್ಳಿ ಬಳಿ ಭೀಕರ ಅಪಘಾತ (Accident) ನಡೆದಿದೆ. ಇದನ್ನೂ ಓದಿ: ಪಿಎಸ್‍ಐ ಪುತ್ರನ ವ್ಹೀಲಿಂಗ್ ಪುಂಡಾಟಕ್ಕೆ ವೃದ್ಧ ಬಲಿ

    ಅತಿ ವೇಗವಾಗಿ ಬರುತ್ತಿದ್ದ  ಮಹೇಂದ್ರ ಕಾರು ನಿಯಂತ್ರಣ ತಪ್ಪಿ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಪಲ್ಟಿ ಹೊಡೆದಿದ್ದು, ಸ್ಥಳದಲ್ಲಿಯೇ ಕಿಶೋರ್ ಸಾವನ್ನಪ್ಪಿದ್ದಾರೆ. ನಂತರ ಇದ್ದಕ್ಕಿದ್ದಂತೆ ಕಾರು ಹೊತ್ತಿ ಉರಿದಿದ್ದು, ಬಳಿಕ ಅಗ್ನಿಶಾಮಕ ದಳದ (Fire Brigade) ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಅಪಘಾತದಲ್ಲಿ ಕಾರಿನಲ್ಲಿದ್ದ ಉಳಿದ ನಾಲ್ಕು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಮೈಸೂರಿನ (Mysuru) ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು, ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ಈ ಸಂಬಂಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೋಳಿ ಫಾರಂ ಶೆಡ್‌ನಲ್ಲಿ ನಾಲ್ವರು ಮಲಗಿದ್ದಲ್ಲೇ ಅನುಮಾನಾಸ್ಪದ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]