Tag: ಎಚ್ ಡಿ ಕುಮಾರಸ್ವಾಮಿ

  • ರೈತರಿಗೆ ನೀಡಿದ ಭರವಸೆ ಈಡೇರಿಸಲು ಹೊಸ ಬಜೆಟ್ ಅನಿವಾರ್ಯ: ಎಚ್‍ಡಿಕೆ

    ರೈತರಿಗೆ ನೀಡಿದ ಭರವಸೆ ಈಡೇರಿಸಲು ಹೊಸ ಬಜೆಟ್ ಅನಿವಾರ್ಯ: ಎಚ್‍ಡಿಕೆ

    ಬೆಂಗಳೂರು: ರೈತರಿಗೆ ನೀಡಿದ ಭರವಸೆ ಈಡೇರಿಸಲು ಹೊಸ ಬಜೆಟ್ ಅನಿವಾರ್ಯವಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.

    ಹೊಸ ಬಜೆಟ್ ಬೇಡ ಎನ್ನುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿಚಾರಕ್ಕೆ ಉತ್ತರ ನೀಡಿರುವ ಕುಮಾರಸ್ವಾಮಿ ಅವರು, ಹೊಸ ಬಜೆಟ್‍ನಲ್ಲಿ ಯಾವುದೇ ದೊಡ್ಡ ಬದಲಾವಣೆಗಳಿಲ್ಲ. ಅಲ್ಲದೇ ಹಳೆಯ ಯೋಜನೆಗಳನ್ನು ಮುಂದುವರಿಸುವ ಯೋಜನೆ ಇದೆ. ಈ ಕುರಿತು ಅವರಿಗೂ ಜೊತೆಗೂ ಚರ್ಚೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

    ಹಿಂದಿನ ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸುವುದಿಲ್ಲ. ಅವುಗಳನ್ನು ಮುಂದುವರಿಸಲು ಒಪ್ಪಿಕೊಂಡಿದ್ದು, ಇದರೊಂದಿಗೆ ನಾವು ರೈತರಿಗೆ ನೀಡಿದ್ದ ಸಾಲಮನ್ನಾ ಮಾಡುವ ಭರವಸೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೊಸ ಬಜೆಟ್ ಮಂಡಿಸಲಾಗುತ್ತಿದೆ ಎಂದು ಹೇಳಿದರು.

  • ಸಿಎಂ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ ಕಾಗಿನೆಲೆ ಶ್ರೀ

    ಸಿಎಂ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ ಕಾಗಿನೆಲೆ ಶ್ರೀ

    ಬೆಂಗಳೂರು: ಸಮ್ಮಿಶ್ರ ಸರ್ಕಾರದ ಪರ ಹಾಗೂ ವಿರೋಧ ಹೇಳಿಕೆ ನೀಡುವ ಮೂಲಕ ಸ್ವಾಮೀಜಿಗಳು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗುತ್ತಿದ್ದಾರೆ. ನಂಜಾವಧೂತ ಸ್ವಾಮೀಜಿ ಎಚ್‍ಡಿಕೆಯನ್ನು ಬೆಂಬಲಿಸಿದ ಬೆನ್ನಲ್ಲೇ ಕಾಗಿನೆಲೆ ಪೀಠಾಧ್ಯಕ್ಷ ನಿರಂಜನಾನಂದಪುರಿ ಸ್ವಾಮೀಜಿ ವಿರೋಧ ವ್ಯಕ್ತಪಡಿಸಿದ್ದಾರೆ.

    ಮಾಧ್ಯಮದೊಂದಿಗೆ ಮಾತನಾಡಿದ ನಿರಂಜನಾನಂದಪುರಿ ಸ್ವಾಮೀಜಿ, ಸಮ್ಮಿಶ್ರ ಸರ್ಕಾರ ಸಂಪುಟದಲ್ಲಿ ಕುರುಬ ಸಮುದಾಯಕ್ಕೆ ಹೆಚ್ಚಿನ ಸ್ಥಾನಮಾನ ನೀಡಿಲ್ಲ. ಅಷ್ಟೇ ಅಲ್ಲದೇ ಈಗ ಕುರುಬ ಸಮುದಾಯದ ಅಧಿಕಾರಿಗಳನ್ನು ಹತ್ತಿಕ್ಕಲು ಮುಖ್ಯಮಂತ್ರಿ ಸಮ್ಮಿಶ್ರ ಸರ್ಕಾರ ಮಾಡುತ್ತಿದೆ ಎಂದು ಅವರು ಕಿಡಿಕಾರಿದರು.

    ಸಮ್ಮಿಶ್ರ ಸರ್ಕಾರವು ಒಂದು ಜಾತಿ, ಸಮುದಾಯದ ಅಧಿಕಾರಿಗಳ ವಿರುದ್ಧ ದ್ವೇಷ ಸಾಧಿಸುತ್ತಿದೆ. ಇಂತಹ ಬೆಳವಣಿಗೆಯನ್ನು ಕೂಡಲೇ ಕುಮಾರಸ್ವಾಮಿಯವರು ನಿಲ್ಲಿಸಬೇಕು. ಇಲ್ಲವೇ ಪರಿಣಾಮ ಎದುರಿಸಲು ಸಜ್ಜಾಗಬೇಕು ಎಂದು ಎಚ್ಚರಿಕೆ ನೀಡಿದರು.

    ಸರ್ಕಾರ ಸಮುದಾಯದ ದ್ವೇಷ ಸಾಧನೆ ಮಾಡುತ್ತಿದೆಯೇ ಹೊರತು, ರೈತರ ಆತ್ಮಹತ್ಯೆ ತಡೆಯುವ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಶ್ರೀಗಳು ಸಮ್ಮಿಶ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದರು.

    ಸರ್ಕಾರಕ್ಕೆ ಎಚ್ಚರಿಕೆ: ಆರಂಭದಲ್ಲಿ ಕುರುಬ ಸಮಾಜದ ಮುಖಂಡರಾದ ಸಿದ್ದರಾಮಯ್ಯರನ್ನು ಸರ್ಕಾರ ಕಡೆಗಣಿಸಿದ್ದ ಸರ್ಕಾರ ಈಗ ಕುರುಬ ಜನಾಂಗದ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿದೆ. ಈ ಸರ್ಕಾರ ಅಸ್ತಿತ್ವಕ್ಕೆ ಬರಲು ಕುರುಬ ಸಮಾಜ ಬಹಳ ಮಹತ್ವದ ಪಾತ್ರ ವಹಿಸಿದೆ. ನಮ್ಮ ಸಮಾಜ ಕಡೆಗಣಿಸಿದರೆ ಹೋರಾಟ ಮಾಡಬೇಕಾದೀತು ಎಂದು ಕುರುಬ ಸಮಾಜದ ಮುಖಂಡ ಸಣ್ಣಕ್ಕಿ ಮೈತ್ರಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

    ಬೆಂಗಳೂರಿನಲ್ಲಿ ಬುಧವಾರ ನಡೆದಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶ್ರೀ ಗುರುಗುಂಡಾ ಬ್ರಹ್ಮೇಶ್ವರ ಸ್ವಾಮಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಅವರು ಸಮ್ಮಿಶ್ರ ಸರ್ಕಾರದ ಪರವಾಗಿ ಮಾತನಾಡಿದ್ದರು. ಅಲ್ಲದೇ ಸರ್ಕಾರ ಉಳಿಸಿಕೊಂಡು ಹೋಗುವಂತೆ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಸಲಹೆ ನೀಡಿರುವುದಾಗಿ ಹೇಳಿಕೆ ನೀಡಿದ್ದರು. ಆದರೆ ಈಗ ಸಮ್ಮಿಶ್ರ ಸರ್ಕಾರ ಎರಡು ಸಮುದಾಯಗಳ ನಡುವೆ ದ್ವೇಷಕ್ಕೆ ಕಾರಣವಾಯಿತೇ ಎನ್ನುವ ಪ್ರಶ್ನೆ ರಾಜಕೀಯ ವಲಯದಲ್ಲಿ ಸದ್ದು ಮಾಡುತ್ತಿದೆ.

  • ಪ್ರಧಾನಿ ಮೋದಿಗೆ ಎಚ್ಚರಿಕೆ, ಮುಖ್ಯಮಂತ್ರಿ ಪರ ನಂಜಾವಧೂತ ಶ್ರೀ ಬ್ಯಾಟಿಂಗ್

    ಪ್ರಧಾನಿ ಮೋದಿಗೆ ಎಚ್ಚರಿಕೆ, ಮುಖ್ಯಮಂತ್ರಿ ಪರ ನಂಜಾವಧೂತ ಶ್ರೀ ಬ್ಯಾಟಿಂಗ್

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸಮ್ಮಿಶ್ರ ಸರ್ಕಾರಕ್ಕೆ ಸಹಕಾರ ನೀಡಬೇಕು. ಇಲ್ಲದಿದ್ದರೇ ಒಕ್ಕಲಿಗ ಸಮುದಾಯ ಪ್ರಧಾನಿಗಳ ವಿರುದ್ಧ ನಿಲ್ಲುತ್ತದೆ ಎಂದು ಶ್ರೀ ಗುರುಗುಂಡಾ ಬ್ರಹ್ಮೇಶ್ವರ ಸ್ವಾಮಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಹೇಳಿದ್ದಾರೆ.

    ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ಮುಖ್ಯಮಂತ್ರಿ ಸ್ಥಾನದಿಂದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಇಳಿಸುವುದಕ್ಕೆ ಪ್ರಯತ್ನ ಸಲ್ಲದು. ಸಿಎಂ ಕುಮಾರಸ್ವಾಮಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಹಕಾರ ನೀಡಬೇಕು ಎಂದು ಸ್ವಾಮೀಜಿ ಹೇಳಿದರು.

    ಮಾಜಿ ಸಿಎಂ ಸದಾನಂದ ಗೌಡ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದ್ದಕ್ಕೆ ನಂತರದ ಚುನಾವಣೆಯಲ್ಲಿ ಬಿಜೆಪಿ ಸೋಲಬೇಕಾಯಿತು. ಅತಂತ್ರ ಪರಿಸ್ಥಿತಿ ನಿರ್ಮಾಣವಾದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯಾಗಿ ಸರ್ಕಾರ ರಚಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದ್ದರು. ಕೊಟ್ಟ ಭರವಸೆಯಂತೆ ಡಿ.ಕೆ.ಶಿವಕುಮಾರ್ ಅವರು ನಡೆದುಕೊಂಡಿದ್ದಾರೆ ಎಂದು ಶ್ರೀಗಳು ಹೇಳಿದರು.

    ನಂಜಾವಧೂತ ಸ್ವಾಮೀಜಿ ಅಷ್ಟೇ ಅಲ್ಲದೇ ಕಾರ್ಯಕ್ರಮದಲ್ಲಿ ಹಾಜರಿದ್ದ ಚಂದ್ರಶೇಖರ ಸ್ವಾಮೀಜಿ ಕೂಡ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರ ಪರ ಬ್ಯಾಟ್ ಬೀಸಿದರು.

    https://youtu.be/40QtfNpVLEY

  • ಮಾಜಿ ಸಿಎಂ ತಂತ್ರಕ್ಕೆ ಎಚ್‍ಡಿಡಿ ಸಲಹೆಯಂತೆ ಎಚ್‍ಡಿಕೆಯಿಂದ ಹೊಸ ಬಾಣ!

    ಮಾಜಿ ಸಿಎಂ ತಂತ್ರಕ್ಕೆ ಎಚ್‍ಡಿಡಿ ಸಲಹೆಯಂತೆ ಎಚ್‍ಡಿಕೆಯಿಂದ ಹೊಸ ಬಾಣ!

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಂತ್ರಕ್ಕೆ ಪ್ರತಿಯಾಗಿ ಮಾಜಿ ಪ್ರಧಾನಿ ದೇವೇಗೌಡರ ಸಲಹೆಯಂತೆ ಹೊಸ ಬಾಣ ಬಿಡಲು ಕುಮಾರಸ್ವಾಮಿ ಪ್ಲಾನ್ ಮಾಡಿದ್ದಾರೆ.

    ಸಿದ್ದರಾಮಯ್ಯಗೆ ಕ್ಯಾಬಿನೆಟ್ ಸ್ಥಾನಮಾನ ನೀಡುವ ಕುರಿತ ಆದೇಶ ಮುಂದೆ ಹೋಗಿದೆ. ಸೋಮವಾರವೇ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯಗೆ ಕ್ಯಾಬಿನೆಟ್ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಬೇಕಿತ್ತು. ಆದ್ರೆ ಇವತ್ತಿನ ತನಕ ಆ ಫೈಲ್ ಮೂವ್ ಆಗದೇ ಪೆಂಡಿಂಗ್ ಉಳಿದಿದೆ. ಹೀಗಾಗಿ ಸಿದ್ದರಾಮಯ್ಯಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ಸಿಗುತ್ತಾ? ಇಲ್ವಾ? ಅನ್ನೋ ಚರ್ಚೆ ರಾಜ್ಯ ರಾಜಕಾರಣದಲ್ಲಿ ಜೋರಾಗಿದೆ. ಇದನ್ನೂ ಓದಿ: ಸರ್ಕಾರದ ವಿರುದ್ಧ ಮಾತಾಡಿರೋ ಸಿದ್ದರಾಮಯ್ಯರಿಗೆ ಎದುರಾಯ್ತು ಕಂಟಕ!

    ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರ ಶಾಂತಿವನದಲ್ಲಿದ್ದುಕೊಂಡು ದೋಸ್ತಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಬಾಂಬ್ ಸಿಡಿಸ್ತಿದ್ದು, ಇದರಿಂದ ಸಿಎಂ ಕುಮಾರಸ್ವಾಮಿ ಮತ್ತು ಡಿಸಿಎಂ ಪರಮೇಶ್ವರ್ ತತ್ತರಿಸಿದಂತೆ ಕಂಡು ಬಂದಿದೆ. ಹೀಗಾಗಿ ಈ ಇಬ್ಬರಿಗೂ ಟೆನ್ಶನ್ ಮೇಲೆ ಟೆನ್ಶನ್ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಕಟ್ಟಿಹಾಕಲು ದೇವೇಗೌಡರು ಸಿಎಂ ಎಚ್ ಡಿಕೆಗೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಆಪ್ತ ಅಧಿಕಾರಿಗಳ ವರ್ಗಾವಣೆ ಮಾಡಿದ ಸರ್ಕಾರ

  • ಸರ್ಕಾರದ ವಿರುದ್ಧ ಮಾತಾಡಿರೋ ಸಿದ್ದರಾಮಯ್ಯರಿಗೆ ಎದುರಾಯ್ತು ಕಂಟಕ!

    ಸರ್ಕಾರದ ವಿರುದ್ಧ ಮಾತಾಡಿರೋ ಸಿದ್ದರಾಮಯ್ಯರಿಗೆ ಎದುರಾಯ್ತು ಕಂಟಕ!

    ಬೆಂಗಳೂರು: ದೋಸ್ತಿ ಸರ್ಕಾರದ ವಿಚಾರದಲ್ಲಿ ಹೆಜ್ಜೆ ಹೆಜ್ಜೆಗೂ ಅಡ್ಡಿಯಾಗ್ತಿರೋ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಹೆಣೆಯಲು ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಹಾಗೂ ಡಿಸಿಎಂ ಪರಮೇಶ್ವರ್ ಒದ್ದಾಡ್ತಿದ್ದಾರೆ.

    ಕಾಂಗ್ರೆಸ್ ಹೈಕಮಾಂಡ್ ಕೂಡಾ ಸಿದ್ದರಾಮಯ್ಯ ಅವರ ಮಾತುಗಳಿಗೆ ಬ್ರೇಕ್ ಹಾಕಲು ಮುಂದಾಗಿದೆ. ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರ ತರುತ್ತಿರುವ ಸಿದ್ದರಾಮಯ್ಯ ವಿರುದ್ಧ ಹೈಕಮಾಂಡ್ ದಾಖಲೆ ಸಂಗ್ರಹಿಸ್ತಿದೆ. ಇದನ್ನೂ ಓದಿ: ಪಾರ್ಲಿಮೆಂಟ್ ಎಲೆಕ್ಷನ್‍ವರೆಗೂ ಅಷ್ಟೇ ಆಟ – ಶಾಂತಿವನದಲ್ಲಿ ಮಾಜಿ ಸಿಎಂ ಸಿದ್ದು ಸಿಡಿಗುಂಡು ?

    ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್‍ಗೆ ಕರೆ ಮಾಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್, ಸಿದ್ದರಾಮಯ್ಯ ಮಾತನಾಡಿರುವ ವಿಡಿಯೋ ದಾಖಲೆ ಕೇಳಿದ್ದಾರೆ. ಇದಕ್ಕೆ ಅಷ್ಟೇ ಫಾಸ್ಟ್ ಆಗಿ ರಿಯಾಕ್ಟ್ ಮಾಡಿರೋ ಸಿದ್ದರಾಮಯ್ಯ ವಿರೋಧಿ ಬಣ, ಕೇವಲ ಹತ್ತೇ ನಿಮಿಷಗಳಲ್ಲಿ ವೇಣುಗೋಪಾಲ್‍ಗೆ ವಿಡಿಯೋ ದಾಖಲೆ ನೀಡಿದೆ. ಇದನ್ನೂ ಓದಿ: ಮೈತ್ರಿ ಸರ್ಕಾರ 5 ವರ್ಷ ಪೂರೈಸುತ್ತೆ ಅಂತಾ ಅಷ್ಟೇ ಹೇಳುತ್ತೇನೆ-ಪರಮೇಶ್ವರ್

    ಈ ದಾಖಲೆ ಮುಂದಿಟ್ಟುಕೊಂಡು ಹೈಕಮಾಂಡ್ ಸಿದ್ದರಾಮಯ್ಯಗೆ ಕ್ಲಾಸ್ ತೆಗೆದುಕೊಳ್ಳುತ್ತಾ..? ಅಥವಾ ಇದು ಜೆಡಿಎಸ್ ನಾಯಕರ ಕಣ್ಣೊರೆಸೋ ತಂತ್ರನಾ..? ಗೊತ್ತಿಲ್ಲ.. ಒಟ್ಟಿನಲ್ಲಿ ಈ ಬೆಳವಣಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಾಳಯದಲ್ಲಿ ಹೊಸ ಲೆಕ್ಕಾಚಾರಗಳಿಗೆ ನಾಂದಿ ಹಾಡಿದೆ.

  • ಸಿದ್ದರಾಮಯ್ಯ ಆಪ್ತ ಅಧಿಕಾರಿಗಳ ವರ್ಗಾವಣೆ ಮಾಡಿದ ಸರ್ಕಾರ

    ಸಿದ್ದರಾಮಯ್ಯ ಆಪ್ತ ಅಧಿಕಾರಿಗಳ ವರ್ಗಾವಣೆ ಮಾಡಿದ ಸರ್ಕಾರ

    – ಸಿದ್ದರಾಮಯ್ಯಗೆ ಬಿಸಿ ಮುಟ್ಟಿಸಿದ್ರಾ ಎಚ್.ಡಿ.ಕೆ

    ಬೆಂಗಳೂರು: ಅತ್ತ ಧರ್ಮಸ್ಥಳದ ಶಾಂತಿವನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರದ ಅವಧಿ, ಉಳಿವಿನ ಬಗ್ಗೆ ಮಾತನಾಡುತ್ತಿದ್ದರೆ, ಇತ್ತ ಬೆಂಗಳೂರಿನಲ್ಲಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಆಪ್ತ ಅಧಿಕಾರಿಗಳ ವರ್ಗಾವಣೆ ಮಾಡಿ ಎತ್ತಂಗಡಿ ಭಾಗ್ಯ ಕರುಣಿಸಿದ್ದಾರೆ.

    ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ, ಬೆಂಗಳೂರು ಡಿಸಿ ದಯಾನಂದ್ ಅವರನ್ನು ವರ್ಗಾವಣೆ ಮಾಡಲಾಗಿದೆ. ದಯಾನಂದ್ ಅವರ ಸ್ಥಾನಕ್ಕೆ ಬಿಎಂ ವಿಜಯಶಂಕರ್ ಅವರನ್ನು ನೇಮಕ ಮಾಡಿದ್ದಾರೆ. ಆದರೆ ದಯಾನಂದ್ ಅವರಿಗೆ ಮಾತ್ರ ರಾಜ್ಯ ಸರ್ಕಾರ ಯಾವುದೇ ಹುದ್ದೆಯನ್ನೇ ತೋರಿಸಿಲ್ಲ. ಸಿದ್ದರಾಮಯ್ಯ ಅವರ ಆಪ್ತ ವಲಯದ ಮತ್ತೊಬ್ಬ ಅಧಿಕಾರಿ ಶಂಕರಪ್ಪ ಅವರನ್ನು ಸಹ ವರ್ಗಾವಣೆ ಮಾಡಲಾಗಿದ್ದು, ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಮುಖ್ಯಮಂತ್ರಿಗಳ ಹೆಚ್ಚುವರಿ ಕಾರ್ಯದರ್ಶಿಯಾಗಿದ್ದ ಶಂಕರಪ್ಪ ಅವರನ್ನು ಸಿಎಡಿಎ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ಇನ್ನು ಇತರೇ 8 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದ್ದು, ಅಂತಿಮ ಪಟ್ಟಿ ಇಂತಿದೆ.

    ಎಂ.ಲಕ್ಷ್ಮೀನಾರಾಯಣ್- ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ
    ಇವಿ ರಮಣರೆಡ್ಡಿ – ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಹಾಗೂ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ
    ಅನಿಲ್ ಕುಮಾರ್- ಕಾರ್ಯದರ್ಶಿ, ವಸತಿ ಇಲಾಖೆ
    ನಿತೇಶ್ ಪಾಟೀಲ್ – ಹೆಚ್ಚುವರಿ ಆಯುಕ್ತ, ವಾಣಿಜ್ಯ ತೆರಿಗೆ ಇಲಾಖೆ
    ಕಪಿಲ್ ಮೋಹನ್ – ಡಿಜಿ, ಆಡಳಿತ ಮತ್ತು ತರಬೇತಿ ಕೇಂದ್ರ
    ಮುನೀಷ್ ಮೌದ್ಗಿಲ್ – ಆಯುಕ್ತರು, ಸರ್ವೆ ಇಲಾಖೆ
    ಬಿಎಸ್ ಶಂಕರಪ್ಪ – ನಿರ್ದೇಶಕರು, ಸಿಎಡಿಎ
    ನಳಿನಿ ಅತುಲ್ – ಜಂಟಿ ವ್ಯವಸ್ಥಾಪಕ ನಿರ್ದೇಶಕರು, ಕೆಯುಐಡಿಎಫ್‍ಸಿ

    ಈ ವರ್ಗಾವಣೆ ಪಟ್ಟಿ ಹೊರಬಿದ್ದ ಬಳಿಕ ಮೈತ್ರಿ ಸರ್ಕಾರದಲ್ಲಿ ಇನ್ನೇನೆಲ್ಲಾ ಬೆಳವಣಿಗೆಗಳಾಗುತ್ತೋ ಕಾದುನೋಡಬೇಕಿದೆ.

  • ಸಿದ್ದರಾಮಯ್ಯ ಮೇಲೆ ಕುಮಾರಸ್ವಾಮಿ ಸಿಟ್ಟಾಗಲು ದೇವೇಗೌಡರು ಕಾರಣ?

    ಸಿದ್ದರಾಮಯ್ಯ ಮೇಲೆ ಕುಮಾರಸ್ವಾಮಿ ಸಿಟ್ಟಾಗಲು ದೇವೇಗೌಡರು ಕಾರಣ?

    ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಲು ಜೆಡಿಎಸ್ ವರಿಷ್ಠ ದೇವೇಗೌಡ ಕಾರಣವಂತೆ.

    ಹೌದು. ಇಂದು ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ವಿಧಾನಸೌಧದಲ್ಲಿ ರೈತರ ಸಾಲಮನ್ನಾ ಸಂಬಂಧ ಸಹಕಾರಿ ಬ್ಯಾಂಕುಗಳ ವ್ಯವಸ್ಥಾಪಕ ನಿರ್ದೇಶಕರ ಸಭೆಯಲ್ಲಿ ಮಾತನಾಡಿದ ಸಿಎಂ, ಬಜೆಟ್ ಮಂಡನೆ ಮಾಡಬೇಕೋ ಬೇಡವೋ ಚರ್ಚೆ ನಡಿಯುತ್ತಿದೆ. ಲೋಕಸಭಾ ಚುನಾವಣೆ ನಂತರ ಹೊಸ ಬಜೆಟ್ ಮಂಡಿಸಿ ಅಂತಾ ಹೇಳುತ್ತಿದ್ದಾರೆ. ಅಲ್ಲದೆ ನಾನು ಯಾರ ಹಂಗಲ್ಲೂ ಇಲ್ಲ, ಯಾರೂ ಭಿಕ್ಷೆ ಕೊಟ್ಟಿಲ್ಲ. ಈ ಸರ್ಕಾರ ಎಷ್ಟು ದಿನ ಇರುತ್ತೋ ಇಲ್ಲವೋ ಗೊತ್ತಿಲ್ಲ ಎಂದು ಹೇಳುವ ಮೂಲಕ ಸಿದ್ದರಾಮಯ್ಯನವರ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.  ಇದನ್ನು ಓದಿ: ಸರ್ಕಾರ ಎಷ್ಟು ದಿನ ಇರುತ್ತೋ ಇಲ್ಲವೋ ಗೊತ್ತಿಲ್ಲ: ಸಿದ್ದರಾಮಯ್ಯ ವಿರುದ್ಧ ಎಚ್‍ಡಿಕೆ ಅಸಮಾಧಾನ

    ಸರ್ಕಾರದ ವಿರುದ್ಧ ಮಾತನಾಡುತ್ತಿರುವುದು ನನ್ನ ಗಮನಕ್ಕೆ ಬಂದಿದ್ದು, ಜನರ ಬಳಿ ಹೇಳಿಕೊಳ್ಳವ ಪರಿಸ್ಥಿತಿಯಲ್ಲಿಲ್ಲ. ಬೇರೆಯವರ ಹಾಗೆ ದುರಹಂಕಾರದಿಂದ ಕೆಲಸ ಮಾಡಿಸಿಕೊಳ್ಳುವ ಸ್ವಭಾವ ನನ್ನದಲ್ಲ ಎಂದು ಎಚ್‍ಡಿಕೆ ಹೇಳಿದ್ದರು. ಎಚ್‍ಡಿಕೆ ಈ ರೀತಿ ಹೇಳಲು ಮುಖ್ಯಮಂತ್ರಿಗಳ ತಂದೆ ಹಾಗೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡರೇ ಕಾರಣ ಎಂದು ಪಕ್ಷದ ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

    ಸಿದ್ದರಾಮಯ್ಯ ಅವರನ್ನು ಮೈತ್ರಿಕೂಟದ ಸಮನ್ವಯ ಸಮಿತಿ ಅಧ್ಯಕ್ಷರಾಗಿ ಮಾಡಿದ್ದೇ ತಪ್ಪಾಯಿತು ಎಂದು ದೇವೇಗೌಡರು ಭಾವಿಸುತ್ತಿದ್ದಾರಂತೆ. ಅಲ್ಲದೇ ಎಲ್ಲದ್ದಕ್ಕೂ ಅವರ ಅಪ್ಪಣೆ ಪಡಿಯಲೇ ಬೇಕಾ? ಬೇಷರತ್ ಬೆಂಬಲ ಅಂದ್ರೆ ಇದೇನಾ ಅಂತಾ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸುವಂತೆ ಸಿಎಂ ಕುಮಾರಸ್ವಾಮಿ ಅವರಿಗೆ ದೇವೇಗೌಡರು ಒತ್ತಾಯಿಸಿದ್ದರಂತೆ. ಇದರಿಂದಾಗಿ ಇವತ್ತು ಸುದ್ದಿಗೋಷ್ಠಿಯಲ್ಲಿ ಮಾಜಿ ಸಿಎಂ ವಿರುದ್ಧ ಹಾಲಿ ಮುಖ್ಯಮಂತ್ರಿ ವಾಗ್ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

    https://youtu.be/7RwqI9XYbGE

  • ಜಿ.ಟಿ ದೇವೇಗೌಡರಿಗೆ ಯಾವ ಖಾತೆ ಅನ್ನೋದು ಇನ್ನೆರಡು ದಿನಗಳಲ್ಲಿ ನಿರ್ಧಾರ: ಸಚಿವ ಸಾರಾ ಮಹೇಶ್

    ಜಿ.ಟಿ ದೇವೇಗೌಡರಿಗೆ ಯಾವ ಖಾತೆ ಅನ್ನೋದು ಇನ್ನೆರಡು ದಿನಗಳಲ್ಲಿ ನಿರ್ಧಾರ: ಸಚಿವ ಸಾರಾ ಮಹೇಶ್

    ಮೈಸೂರು: ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಖಾತೆ ಬದಲಾವಣೆಗೆ ಒತ್ತಾಯಿಸುತ್ತಿದು, ಇನ್ನೆರಡು ದಿನಗಳಲ್ಲಿ ತಮ್ಮ ನಿರ್ಧಾರವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಿಳಿಸಲಿದ್ದಾರೆ ಎಂದು ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್ ಹೇಳಿದ್ದಾರೆ.

    ಮೈಸೂರಿನಲ್ಲಿ ಗುರುವಾರ ವಿಶ್ವ ಯೋಗ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಆರೋಗ್ಯ ಸಮಸ್ಯೆಯಿಂದಾಗಿ ಇಂದಿನ ವಿಶ್ವ ಯೋಗ ದಿನ ಕಾರ್ಯಕ್ರಮದಲ್ಲಿ ಸಚಿವ ಜಿ.ಟಿ.ದೇವೇಗೌಡ ಅವರು ಭಾಗವಹಿಸಿಲ್ಲ. ಇನ್ನೆರಡು ದಿನಗಳಲ್ಲಿ ಎಲ್ಲ ಸರ್ಕಾರಿ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಇದನ್ನು ಓದಿ: ಜಿಟಿಡಿಗೆ ಖಾತೆ ಬದಲಾವಣೆ?- ಎಚ್‍ಡಿಡಿ ಜೊತೆ ಸಿಎಂ ಮಾತುಕತೆ

    ಉನ್ನತ ಶಿಕ್ಷಣ ಖಾತೆ ನನಗೆ ಬೇಡ, ಸಹಕಾರ ಇಲ್ಲವೇ, ಅಬಕಾರಿ ಖಾತೆ ನೀಡುವಂತೆ ಸಚಿವ ಜಿ.ಟಿ.ದೇವೇಗೌಡ ಅವರು ಪಟ್ಟು ಹಿಡಿದಿದ್ದರು. ಇದಕ್ಕೆ ಕಾರಣ ಉನ್ನತ ಶಿಕ್ಷಣ ಸಲಹೆಗಾರರಾಗಿ ಪ್ರೊ. ಕೆ.ಎಸ್.ರಂಗಪ್ಪ ಅವರನ್ನು ನೇಮಕ ಮಾಡಲಾಗುತ್ತಿದೆ ಎನ್ನಲಾಗುತ್ತಿತ್ತು. ಅಷ್ಟೇ ಅಲ್ಲದೆ ಕೆಲವು ದಿನಗಳಿಂದ ಯಾವುದೇ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸದೇ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿತ್ತು. ಇದನ್ನು ಓದಿ: ನಾನು ದೇವೇಗೌಡರ ಸಂಬಂಧಿ ಅಂತಾ ಉನ್ನತ ಹುದ್ದೆ ಸಿಗುತ್ತಿಲ್ಲ: ಪ್ರೊ. ರಂಗಪ್ಪ

  • ನೀರಾವರಿ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸಿಎಂ ಖಡಕ್ ಸೂಚನೆ!

    ನೀರಾವರಿ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸಿಎಂ ಖಡಕ್ ಸೂಚನೆ!

    ಬೆಂಗಳೂರು: ಕಾವೇರಿ ಜಲಾನಯನ ಪ್ರದೇಶ ರೈತರಿಗೆ ನೀರಿನ ಕೊರತೆ ಮಾಡಲ್ಲ. ರೈತರ ಅಗತ್ಯಕ್ಕೆ ಅನುಗುಣವಾಗಿ ನೀರು ಬಿಡಬೇಕು ಅಂತ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸಿಎಂ ಎಚ್ ಡಿ ಕುಮಾರಸ್ವಾಮಿ ಖಡಕ್ ಸೂಚನೆ ನೀಡಿದ್ದಾರೆ.

    ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳ ರೈತರ ಬೆಳೆಗೆ ನೀರು ಬಿಡಬೇಕು. ರೈತರ ವ್ಯವಸಾಯಕ್ಕೆ ಬೇಕಾದಂತೆ ನೀರು ಬಿಡುವ ಮೂಲಕ ನೀರು ಬಿಡುಗಡೆಗೆ ಕೊರತೆ ಮಾಡಬಾರದು ಅಂತ ಹೇಳಿದ್ದಾರೆ. ಇದನ್ನೂ ಓದಿ:

    ತಮಿಳುನಾಡಿನ ಕೋಟಾದ ನೀರು ಈಗಾಗ್ಲೇ ಹರಿದು ಹೋಗಿದೆ. ಮತ್ತೆ ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ, ಅಗತ್ಯವೂ ಇಲ್ಲ. ನಮ್ಮ ರೈತರ ಹಿತ ಕಾಪಾಡಲು ಬೆಳೆಗಳಿಗೆ ನೀರು ಕೊಡಿ ಅಂತ ನೀರಾವರಿ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್‍ಗೆ ಸಿಎಂ ಸೂಚಿಸಿದ್ದಾರೆ.

    ರಾಮನಗರ ತಾಲೂಕಿನ ಪೇಟೆಕುರುಬರಹಳ್ಳಿ ಗ್ರಾಮದಲ್ಲಿ ಕಾವೇರಿ ನದಿಯಿಂದ ಮಂಡ್ಯಭಾಗಕ್ಕೆ ನೀರು ಬಿಡುವ ವಿಚಾರದ ಕುರಿತು ಮಾತನಾಡಿದ ಎಚ್‍ಡಿಕೆ, ಮೊದಲು ನೀರು ಬಿಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಇಂದು ಬೆಳಗ್ಗೆ ಮಾಧ್ಯಮಗಳ ಮೂಲಕ ಸುದ್ದಿ ನೋಡಿದೆ. ಬೆಳೆ ಒಣಗುವ ವಿಚಾರ ನೋಡಿದ್ದೇನೆ. ತಕ್ಷಣ ನಮ್ಮ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ತಮಿಳುನಾಡಿಗೆ ಈ ತಿಂಗಳು ಹರಿಸಬೇಕಾದ ನೀರು ಹರಿಸಲಾಗಿದೆ. ನಮ್ಮ ರೈತರನ್ನ ಉಳಿಸಬೇಕು ನಾನು. ಕಾವೇರಿ ನೀರು ನಿರ್ವಹಣಾ ಮಂಡಳಿಯ ಆದೇಶದಂತೆ ನೀರು ಹರಿಸಲಾಗಿದೆ. ಏನೇ ತಾಂತ್ರಿಕ ಹಾಗೂ ಕಾನೂನಾತ್ಮಕ ಸಮಸ್ಯೆ ಬಂದರೂ ನಾನು ಜವಬ್ದಾರಿ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದು, ಮೊದಲು ನೀರು ಬಿಡಲು ಸೂಚಿಸಿದ್ದೇನೆ. ಹೀಗಾಗಿ ಮಂಡ್ಯ ಭಾಗದಲ್ಲಿ ಕಬ್ಬು ಬೆಳೆಗಾರರಿಗೆ ತಕ್ಷಣ ನೀರು ಬಿಡಲಿದ್ದಾರೆ ಅಂತ ಸ್ಪಷ್ಟಪಡಿಸಿದ್ದಾರೆ.

  • ಒಂದು ವರ್ಷ ಏಕೆ 5 ವರ್ಷವೂ ಕುಮಾರಸ್ವಾಮಿಯೇ ಸಿಎಂ ಆಗಿರಲಿ: ಬಿಎಸ್‍ವೈ

    ಒಂದು ವರ್ಷ ಏಕೆ 5 ವರ್ಷವೂ ಕುಮಾರಸ್ವಾಮಿಯೇ ಸಿಎಂ ಆಗಿರಲಿ: ಬಿಎಸ್‍ವೈ

    ಬೆಂಗಳೂರು: ಒಂದು ವರ್ಷ ಏಕೆ, 5 ವರ್ಷವೂ ಕುಮಾರಸ್ವಾಮಿಯೇ ಮುಖ್ಯಮಂತ್ರಿಯಾಗಿರಲಿ ಎಂದು ಕುಮಾರಸ್ವಾಮಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

    ಒಂದು ವರ್ಷ ಮೈತ್ರಿ ಸರ್ಕಾರವನ್ನು ಯಾರು ಅಲುಗಾಡಿಸಲು ಆಗಲ್ಲ ಎಂದು ಈ ಹಿಂದೆ ಕುಮಾರಸ್ವಾಮಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಬಿಎಸ್‍ವೈ, ಮೈತ್ರಿ ಸರ್ಕಾರ ಅವರದ್ದೇ ಇದೆಯಲ್ವಾ. ಒಂದು ವರ್ಷ ಏಕೆ, 5 ವರ್ಷವೂ ಅವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ. ವಿರೋಧ ಪಕ್ಷದಲ್ಲಿದ್ದು ನಮ್ಮ ಕೆಲಸವನ್ನು ನಾವು ಪ್ರಾಮಾಣಿಕವಾಗಿ ಮಾಡುತ್ತೇವೆ ಎಂದು ಟಾಂಗ್ ನೀಡಿದರು. ಇದನ್ನು ಓದಿ: ಇನ್ನು ಒಂದು ವರ್ಷ ಯಾರೂ ನನ್ನ ಟಚ್ ಮಾಡೋಕೆ ಆಗಲ್ಲ: ಸಿಎಂ ಎಚ್‍ಡಿಕೆ

    ಗೌರಿ ಲಂಕೇಶ್ ಹತ್ಯೆ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಪ್ರಕರಣದಲ್ಲಿ ಯಾವುದೇ ಸಂಘಟನೆ ಭಾಗಿಯಾಗಿದ್ದರೂ ಕಾನೂನು ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಇದಕ್ಕೆ ನಮ್ಮದೇನೂ ಅಭ್ಯಂತರವಿಲ್ಲ ಎಂದು ಹೇಳಿದರು.