Tag: ಎಚ್ ಡಿ ಕುಮಾರಸ್ವಾಮಿ

  • ಸಚಿವ ಸಂಪುಟ, ಖಾತೆ ಸಂಪುಟ ವಿಸ್ತರಣೆ- ದೆಹಲಿಯಲ್ಲಿ ಮಹತ್ವದ ಮಾತುಕತೆ

    ಸಚಿವ ಸಂಪುಟ, ಖಾತೆ ಸಂಪುಟ ವಿಸ್ತರಣೆ- ದೆಹಲಿಯಲ್ಲಿ ಮಹತ್ವದ ಮಾತುಕತೆ

    ನವದೆಹಲಿ: ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮತ್ತು ಖಾತೆ ಹಂಚಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮತ್ತು ರಾಜ್ಯ ಕಾಂಗ್ರೆಸ್ ನಾಯಕರ ನಡುವೆ ಇಂದು ದೆಹಲಿಯಲ್ಲಿ ಮಹತ್ವದ ಮಾತುಕತೆ ನಡೆಯಲಿದೆ.

    ಇತ್ತೀಚೆಗಷ್ಟೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆಗೆ ರಾಜ್ಯ ಕಾಂಗ್ರೆಸ್ ನಾಯಕರು ನಡೆಸಿದ ಸಭೆಯಲ್ಲಿ ಒಮ್ಮತದ ನಿರ್ಧಾರ ಬಾರದ ಹಿನ್ನೆಲೆಯಲ್ಲಿ ಇಂದು ಮತ್ತೊಂದು ಹಂತದ ಚರ್ಚೆ ನಡೆಯಲಿದೆ. ಸಚಿವ ಸ್ಥಾನ, ಖಾತೆ ಹಂಚಿಕೆ ರಾಜ್ಯ ಉಸ್ತುವಾರಿ ನೀಡುವ ಬಗ್ಗೆ ಹಾಗೂ ಪೂರ್ಣಾವಧಿಗೆ ಕುಮಾರಸ್ವಾಮಿ ಸಿಎಂ ಆಗುವ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಮಹತ್ವದ ಸಭೆ ನಡೆಯುವ ಸಾಧ್ಯತೆ ಇದೆ.

    ಇತ್ತೀಚೆಗೆ ನಡೆದ ಸಭೆಯಲ್ಲಿ ಕೆಲ ಗೊಂದಲಗಳು ಉಂಟಾದ ಹಿನ್ನೆಲೆ ಕುಮಾರಸ್ವಾಮಿ ಜೊತೆಗೆ ಮತ್ತೊಂದು ಹಂತದ ಸಭೆ ನಡೆಸಿ ಒಮ್ಮತದ ನಿರ್ಧಾರಕ್ಕೆ ಬರುವಂತೆ ರಾಹುಲ್ ಗಾಂಧಿ ಸೂಚಿಸಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಜಿ ಪರಮೇಶ್ವರ್, ರಾಜ್ಯ ಚುನಾವಣಾ ಉಸ್ತುವಾರಿ ಕೆ ವೇಣುಗೋಪಾಲ್ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಹಲವು ನಾಯಕರು ಈಗಾಗಲೇ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.

    ಇತ್ತ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿಗಾಗಿ ಎಚ್‍ಡಿಕೆ ದೆಹಲಿಗೆ ತೆರಳಲಿದ್ದು, ಈ ವೇಳೆ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ಈ ವೇಳೆ ಗೊಂದಲಗಳನ್ನು ಬಗೆಹರಿಸಿಕೊಂಡು ಬಳಿಕ ರಾಹುಲ್ ಗಾಂಧಿಯೊಂದಿಗೆ ಅಂತಿಮವಾಗಿ ಚರ್ಚಿಸಲು ತೀರ್ಮಾನಿಸಲಾಗಿದೆ. ಸದ್ಯ ರಾಹುಲ್ ಗಾಂಧಿ ವಿದೇಶ ಪ್ರವಾಸದ ಹಿನ್ನೆಲೆಯಲ್ಲಿ ಸಚಿವ ಸಂಪುಟದ ಸರ್ಕಸ್ ಇನ್ನೂ ಒಂದು ವಾರಗಳ ಕಾಲ ಮುಂದುವರೆಯಲಿದ್ದು, ರಾಹುಲ್ ಪ್ರವಾಸದ ಬಳಿಕ ಸಚಿವರ ಪಟ್ಟಿ ಅಂತಿಮವಾಗಲಿದೆ.

    ಕಾಂಗ್ರೆಸ್ ಮೂಲಗಳ ಪ್ರಕಾರ 16ರಿಂದ 18 ಹಾಗೂ 10 ಜನ ಜೆಡಿಎಸ್ ಶಾಸಕರು ಮಂತ್ರಿಗಳಾಗಿ ಶುಕ್ರವಾರ ಅಥವಾ ಸೋಮವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

  • ನಾಡಿನ ಜನತೆ ಮುಲಾಜಿನಲ್ಲಿ ನಾನಿಲ್ಲ, ಕಾಂಗ್ರೆಸ್ ಮುಲಾಜಿನಲ್ಲಿ ಇದ್ದೇನೆ: ಸಿಎಂ ಎಚ್‍ಡಿಕೆ

    ನಾಡಿನ ಜನತೆ ಮುಲಾಜಿನಲ್ಲಿ ನಾನಿಲ್ಲ, ಕಾಂಗ್ರೆಸ್ ಮುಲಾಜಿನಲ್ಲಿ ಇದ್ದೇನೆ: ಸಿಎಂ ಎಚ್‍ಡಿಕೆ

    ಬೆಂಗಳೂರು: ನಾನು ನಾಡಿನ ಆರು ಕೋಟಿ ಜನತೆಯ ಮುಲಾಜಿನಲ್ಲಿಲ್ಲ, ಕಾಂಗ್ರೆಸ್ ಮುಲಾಜಿನಲ್ಲಿ ಇದ್ದೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರ ಜೊತೆ ಮಾತನಾಡಿ ಅವರು, ಇದು ನನ್ನ ಸ್ವತಂತ್ರ ಸರ್ಕಾರ ಅಲ್ಲ, ನಾನು ನಿಮ್ಮ ಮುಲಾಜಿನಲ್ಲಿಯೇ ಕೆಲಸ ಮಾಡಲು ಅವಕಾಶ ಮಾಡಿಕೊಡಿ ಎಂದು ಜನತೆಗೆ ಕೇಳಿಗೆ ಕೊಂಡಿದ್ದೆ. ಆದರೆ ಜನತೆ ತಿರಸ್ಕಾರ ಮಾಡಿದ್ದರು ಎಂದು ಹೇಳಿದ್ದಾರೆ

    ರೈತರ ಸಾಲಮನ್ನಾ ಮಾಡಿ, ಇಲ್ಲದಿದ್ದರೇ ರಾಜೀನಾಮೆ ನೀಡಿ ಎಂದು ಯಾರು ಒತ್ತಾಯ ಮಾಡುವ ಅಗತ್ಯವಿಲ್ಲ. ಮಾತಿಗೆ ತಪ್ಪಿನಡೆದರೆ ನಾನೇ ರಾಜೀನಾಮೆ ನೀಡುತ್ತೇನೆ. ನನಗೆ ಸ್ವತಂತ್ರ ಬೆಂಬಲವಿಲ್ಲ, ಹೀಗಾಗಿ ಕಾಂಗ್ರೆಸ್ ಪಕ್ಷದ ಮುಲಾಜಿನಲ್ಲಿ ಇರುವೆ, ಸಾಲಮನ್ನಾ ಕುರಿತು ಚರ್ಚೆ ಮಾಡಲಾಗುತ್ತಿದೆ. ಒಂದು ವಾರ ಕಾಲಾವಕಾಶ ನೀಡಿ, ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.

    ಬಿ.ಎಸ್.ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಹುಮತ ಸಿಗದಿದ್ದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಹಾಗೂ ಯಾವುದೇ ಪಕ್ಷಕ್ಕೆ ಬೆಂಬಲ ನೀಡುವುದಿಲ್ಲ ಎಂದು ಹೇಳಿದ್ದರು. ಮಾತಿಗೆ ತಕ್ಕಂತೆ ನಡೆದುಕೊಳ್ಳಲಿ, ರೈತರ ಸಾಲಮನ್ನಾ ವಿಷಯಕ್ಕೆ ರಾಜೀನಾಮೆ ನೀಡುವಂತೆ ಹೇಳಬೇಕಾಗಿಲ್ಲ ಎಂದು ಹೇಳಿದ್ದಾರೆ.

    ಸಂಘಟನೆಗಳ ಉದ್ದೇಶ ನಾಡಿನ ಅಭಿವೃದ್ಧಿಗೆ ಪೂರಕವಾಗಿರಬೇಕು. ಯಾವುದೇ ಜಾತಿಯ ವ್ಯಾವೋಹಕ್ಕೆ ಒಳಗಾಗಿ ನನ್ನ ಹಾಗೂ ಸಮ್ಮಿಶ್ರ ಸರ್ಕಾರದ ವಿರುದ್ಧ ಕೆಟ್ಟ ಭಾವನೆ ಮೂಡಿಸುವ ಕೆಲಸ ಮಾಡಬೇಡಿ. ಚುನಾವಣೆ ಸಂದರ್ಭದಲ್ಲಿ ಹಲವಾರು ರೈತ ಮುಖಂಡರ ಹೇಳಿಕೆಗಳನ್ನು ಕೇಳಿರುವೆ ಎಂದು ತಿಳಿಸಿದರು.

  • ನಾಳೆ ಕರ್ನಾಟಕ ಬಂದ್- ಬೆಂಗ್ಳೂರು ನಗರ ಪೊಲೀಸ್ ಆಯುಕ್ತರಿಂದ ಖಡಕ್ ಎಚ್ಚರಿಕೆ

    ನಾಳೆ ಕರ್ನಾಟಕ ಬಂದ್- ಬೆಂಗ್ಳೂರು ನಗರ ಪೊಲೀಸ್ ಆಯುಕ್ತರಿಂದ ಖಡಕ್ ಎಚ್ಚರಿಕೆ

    ಬೆಂಗಳೂರು: ರೈತರ ಸಾಲಮನ್ನಾ ಕುರಿತಂತೆ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

    ನಾಳೆ ಯಾವುದೇ ಬಂದ್ ಗೆ ಅವಕಾಶವಿಲ್ಲ. ಒಂದು ವೇಳೆ ಬಂದ್ ಗೆ ಮುಂದಾದರೆ, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಅಂತ ಬಂದ್ ಮಾಡುವವರಿಗೆ ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಇಂದು ಸಂಜೆಯೊಳಗಡೆ ಸಾಲಮನ್ನಾ ಆಗದಿದ್ರೆ ಬಿಜೆಪಿಯಿಂದ ಸೋಮವಾರ ಕರ್ನಾಟಕ ಬಂದ್

    ಬಿಜೆಪಿ ಮುಖಂಡರು, ಕಾರ್ಯಕರ್ತರಿಗೆ ಬಂದ್ ಮಾಡದಂತೆ ಮನವಿ ಮಾಡಲಾಗಿದ್ದು, ನಗರದ ಎಲ್ಲಾ ಡಿಸಿಪಿಗಳಿಗೆ ಬಂದ್ ಮಾಡುವವರ ವಿರುದ್ಧ ಸೂಕ್ತ ಕ್ರಮ ವಹಿಸಲು ಪೊಲೀಸರಿಗೆ ಸೂಚನೆ ನೀಡಿದ್ದಾರೆ.

    ಫಿಲಂ ಚೇಂಬರ್ ನಿಂದ ಬೆಂಬಲವಿಲ್ಲ: ನಾಳೆ ನಡೆಯಲಿರುವ ಬಂದ್ ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸಹಕಾರ ಇಲ್ಲ. ಎಂದಿನಂತೆ ಚಲನಚಿತ್ರ ಪ್ರದರ್ಶನ ಹಾಗೂ ಚಿತ್ರೀಕರಣಕ್ಕೆ ಯಾವುದೇ ರೀತಿಯಲ್ಲಿ ಅಡ್ಡಿ ಇಲ್ಲ. ಸ್ವಯಂ ಪ್ರೇರಿತರಾಗಿ ಯಾರಾದರೂ ಬೆಂಬಲ ಸೂಚಿಸಿದರೆ ಅದಕ್ಕೆ ನಮ್ಮದೇನೂ ಅಭ್ಯಂತರವಿಲ್ಲ ಅಂತ ಫಿಲ್ಮ್ ಚೇಂಬರ್ ಅಧ್ಯಕ್ಷ ಸಾ.ರಾ ಗೋವಿಂದು ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಬಂದ್ ಎನ್ನುವುದಕ್ಕಿಂತ ರೈತರೇ ಬಂದ್ ಮಾಡ್ತಾರೆ- ಬಿಎಸ್‍ವೈ

    ಎಚ್‍ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಶುಕ್ರವಾರ ಬಹುಮತ ಸಾಬೀತುಪಡಿಸಿದ್ದು, ಈ ಮೊದಲು ನಡೆದ ವಿಧಾನಸಭಾ ಕಲಾಪದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕಾಂಗ್ರೆಸ್ ಹಾಗೂ ಜೆಡಿಎಸ್ ವಿರುದ್ಧ ಕಿಡಿಕಾರಿದ್ದರು. ಅಲ್ಲದೇ ಅಂದೇ ಸಂಜೆಯೊಳಗೆ ರೈತರ ಸಾಲಮನ್ನಾ ಮಾಡುವಂತೆ ಆಗ್ರಹಿಸಿದ್ರು. ಒಂದು ವೇಳೆ ರೈತರ ಸಾಲಮನ್ನಾ ಮಾಡದಿದ್ದಲ್ಲಿ ಸೋಮವಾರ ಕರ್ನಾಟಕ ಬಂದ್ ಮಾಡುವುದಾಗಿ ಹೇಳಿ ತಮ್ಮ ಮುಖಂಡರೊಂದಿಗೆ ಸಭಾತ್ಯಾಗ ಮಾಡಿದ್ದರು. ಇದನ್ನೂ ಓದಿ: ಸಾಲ ಮನ್ನಾ ಮಾಡುತ್ತೇವೆ ಅಂತಾ ಹೇಳಲಿ ಬಂದ್ ಹಿಂಪಡೆಯುತ್ತೇವೆ: ಕೆ.ಎಸ್.ಈಶ್ವರಪ್ಪ

  • ಸಿಎಂ ಕುಮಾರಸ್ವಾಮಿಯನ್ನು ಭೇಟಿ ಮಾಡಿದ್ರು ಹ್ಯಾಟ್ರಿಕ್ ಹೀರೋ ದಂಪತಿ!

    ಸಿಎಂ ಕುಮಾರಸ್ವಾಮಿಯನ್ನು ಭೇಟಿ ಮಾಡಿದ್ರು ಹ್ಯಾಟ್ರಿಕ್ ಹೀರೋ ದಂಪತಿ!

    ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಇಂದು ಭೇಟಿ ಮಾಡಿದ್ದಾರೆ.

    ಎಚ್ ಡಿಕೆ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಜ್ ಕುಮಾರ್, ಸಿಎಂ ಆದ ನಂತರ ಮೊದಲ ಬಾರಿಗೆ ಭೇಟಿ ಮಾಡುತ್ತಿದ್ದೇವೆ. ಸಿನಿಮಾ ಹಾಗೂ ಪ್ರೊಡಕ್ಷನ್ ಇಂಡಸ್ಟ್ರಿಯಿಂದ ಬಂದು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದಾರೆ. ನಾವು ಹಾಗೂ ದೇವೆಗೌಡರ ಕುಟುಂಬದವರು ಹೆಚ್ಚು ಆತ್ಮೀಯರು ಎಂದು ಹೇಳಿದರು.

    ಮುಂದಿನ ಲೋಕಸಭೆಗೆ ಗೀತಾ ಶಿವರಾಜ್ ಕುಮಾರ್ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಚುನಾವಣೆಗೆ ಇನ್ನೂ ಸಮಯವಿದೆ. ಪತ್ನಿ ಗೀತಾ ಈ ಬಾರಿ ಜೆಡಿಎಸ್ ಪರ ಪ್ರಚಾರ ಮಾಡಿದ್ದಾರೆ ಅಂದ್ರು. ಇನ್ನು ವಿಷ್ಣುವರ್ಧನ್ ಸಮಾಧಿ ಮೈಸೂರಿಗೆ ಸ್ಥಳಾಂತರ ಮಾಡುವ ವಿಚಾರದ ಬಗ್ಗೆ ಮಾತನಾಡಿಲ್ಲ, ಹಿರಿಯ ನಟ ಅಂಬರೀಶ್ ಅವರು ಬಂದು ಮಾತನಾಡುತ್ತಾರೆ. ನಾನು ಈಗಲೇ ಏನೂ ಹೇಳಕ್ಕೆ ಆಗೊಲ್ಲ ಅಂತ ತಿಳಿಸಿದ್ರು.

    ಶಿವರಾಜ್ ಕುಮಾರ್ ಭೇಟಿ ಬಳಿಕ ಮಾತನಾಡಿದ ಸಿಎಂ, ಇದು ಸೌಜನ್ಯದ ಭೇಟಿ ಅಷ್ಟೇ, ಅನುಮಾನ ಬೇಡ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರಿಂದ ಬಂದು ಶುಭಕೋರಿದ್ದಾರೆ ಎಂದು ಸ್ಪಷ್ಟಪಡಿಸಿದ್ರು.

    ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಲ್ಲಿ ಸಾಮರಸ್ಯ, ಪರಸ್ಪರ ವಿಶ್ವಾಸ ಅಗತ್ಯವಾಗಿದ್ದು, ನಾಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಗೆ ನಿರ್ಧಾರ ಕೈಗೊಂಡಿರುವೆ. ಇದು ಸೌಜನ್ಯದ ಭೇಟಿ ಅಷ್ಟೇ ಎಂದು ಅವರು ತಿಳಿಸಿದ್ದಾರೆ.

    ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಂದ ನನಗೆ ಯಾವುದೇ ಬುಲಾವ್ ಬಂದಿಲ್ಲ. ಯಾರೂ ಅಪಾರ್ಥ ಮಾಡಕ್ಕೋಬಾರದು. ರಾಹುಲ್ ಗಾಂಧಿ ಕರೆದ್ರೂ ಕುಮಾರಸ್ವಾಮಿ ಹೋಗಲಿಲ್ಲ ಎಂದು ರಾಜಕೀಯ ಬಣ್ಣ ಕಟ್ಟಿಬಿಡ್ತಾರೆ. ಶನಿವಾರ ರಾತ್ರಿ ದೂರವಾಣಿ ಕರೆ ಮಾಡಿ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರೊಂದಿಗೆ ಮಾತನಾಡಿದ್ದೇನೆ. ರಾಹುಲ್ ವಿದೇಶಕ್ಕೆ ಹೊರಟಿದ್ದಾರೆ ಎಂದು ಗೊತ್ತಾಗಿ ಶುಭಕೋರಿದ್ದೇನೆ ಎಂದು ಅವರು ಹೇಳಿದ್ದಾರೆ.

    ಬಹುಮತ ಇಲ್ಲದಿದ್ದರೂ ಸಾಲಮನ್ನಾ ನಿರ್ಧಾರದಿಂದ ಹಿಂದೆ ಸರಿಯಲ್ಲ. ಶನಿವಾರ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು ಗಮನಕ್ಕೆ ಬಂದಿದೆ. ದಯವಿಟ್ಟು ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.

  • ಬಹುಮತ ಸಾಬೀತು ಬಳಿಕ ಸಾಲಮನ್ನಾ ಸಂಕಟ- ಅಧಿಕಾರಿಗಳೊಂದಿಗೆ ಸಿಎಂ ಎಚ್‍ಡಿಕೆ ಸಭೆ

    ಬಹುಮತ ಸಾಬೀತು ಬಳಿಕ ಸಾಲಮನ್ನಾ ಸಂಕಟ- ಅಧಿಕಾರಿಗಳೊಂದಿಗೆ ಸಿಎಂ ಎಚ್‍ಡಿಕೆ ಸಭೆ

    – ಇತ್ತ ಬಿಜೆಪಿ ಪ್ರತಿಭಟನೆಗೆ ನಿರ್ಧಾರ

    ಬೆಂಗಳೂರು: ಈಗಾಗಲೇ ವಿಶ್ವಾಸಮತ ಯಾಚಿಸಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಸಿಎಂ ಕುಮಾರಸ್ವಾಮಿಗೆ ಸಾಲಮನ್ನಾ ಸಂಕಟ ಎದುರಾಗಿದೆ. ಈ ಬಗ್ಗೆ ಶುಕ್ರವಾರ ಗೃಹಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸಿದ್ರು.

    ಈ ವೇಳೆ ಅಧಿಕಾರಿಗಳು ಸಾಲಮನ್ನಾಗೆ ಇರುವ ಎಲ್ಲಾ ಅವಕಾಶಗಳ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಅಲ್ಲದೆ ರಾಜ್ಯದ ಆರ್ಥಿಕ ಸ್ಥಿತಿ ಹೀನಾಯವಾಗಿಲ್ಲ. ಹಾಗಾಗಿ ಸಾಲಮನ್ನಾ ಘೋಷಣೆ ಕುರಿತು ಕಾಂಗ್ರೆಸ್ ನಾಯಕರ ಜೊತೆ ಚರ್ಚಿಸಿ ಸದ್ಯದಲ್ಲೇ ಎಚ್‍ಡಿಕೆ ನಿರ್ಧಾರ ಕೈಗೊಳ್ಳವ ಸಾಧ್ಯತೆ ಇದೆ ಅಂತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಯಡಿಯೂರಪ್ಪರ ಮಾನಸಿಕ ಅಸ್ಥಿರತೆಯ ಭಾಷಣ ನೋಡಿ ಅಯ್ಯೋ ಅನ್ನಿಸಿತು: ಹೆಚ್‍ಡಿಕೆ

    ರೈತರ ಸಾಲಮನ್ನಾ ವಿಚಾರವಾಗಿ ಬಿಜೆಪಿಯೂ ಹೋರಾಟಕ್ಕೆ ಮುಂದಾಗಿದೆ. ನಿನ್ನೆ ಸದನದಲ್ಲಿ ಗುಡುಗಿದ್ದ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಸೋಮವಾರದಿಂದ ಹೋರಾಟದ ಅಖಾಡಕ್ಕೆ ಇಳಿಯಲಿದ್ದಾರೆ. ರೈತರ ಸಾಲಮನ್ನಾಗೆ ಆಗ್ರಹಿಸಿ, ಪ್ರತಿಭಟನೆ ತೀವ್ರಗೊಳಿಸಲು ಬಿಜೆಪಿ ನಿರ್ಧರಿಸಿದೆ.

    ರಾಜರಾಜೇಶ್ವರಿನಗರ ಕ್ಷೇತ್ರದ ಚುನಾವಣೆ ಇರೋದ್ರಿಂದ ಬೆಂಗಳೂರು ನಗರ ಹೊರತುಪಡಿಸಿ, ಸೋಮವಾರ ಕರ್ನಾಟಕದ ಉಳಿದೆಡೆಗಳಲ್ಲಿ ಬಿಜೆಪಿ ಸ್ವಯಂಪ್ರೇರಿತ ಬಂದ್‍ಗೆ ಕರೆ ನೀಡಲಿದೆ. ಈ ನಡುವೆ ಬಿಎಸ್ ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ನಿರ್ಧರಿಸಿದ್ದು, ಲೋಕಸಭಾ ಚುನಾವಣೆಗೆ ತಯಾರಿ ನಡೆಸಲು ಮುಂದಾಗಿದ್ದಾರೆ. ಇದನ್ನೂ ಓದಿ: ಜನರ ಸ್ವಯಂ ಪ್ರೇರಿತ ಬಂದ್‍ಗೆ ಬಿಜೆಪಿ ಬೆಂಬಲ ನೀಡುತ್ತಿದೆ : ಸಿಟಿ ರವಿ

  • ನಾಳೆ ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆ- ಇಂದು ಕಾಂಗ್ರೆಸ್, ಜೆಡಿಎಸ್ ಸಭೆ

    ನಾಳೆ ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆ- ಇಂದು ಕಾಂಗ್ರೆಸ್, ಜೆಡಿಎಸ್ ಸಭೆ

    ಬೆಂಗಳೂರು: ಅಂತೂ ಇಂತೂ ರಾಜ್ಯದಲ್ಲಿ ಕುಮಾರಪರ್ವ ಆರಂಭ ಆಗಿದೆ. ಈ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಮುಂದಿರೋ ಸವಾಲು ಶುಕ್ರವಾರ ಸದನದಲ್ಲಿ ವಿಶ್ವಾಸಮತ ಗೆಲ್ಲೋದು.

    ಈ ಹಿನ್ನೆಲೆಯಲ್ಲಿ ಉಭಯ ಪಕ್ಷಗಳು ತಮ್ಮ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಕಸರತ್ತು ಮುಂದುವರೆಸಿದ್ದಾರೆ. ಜೆಡಿಎಸ್ ಶಾಸಕರು ಇರೋ ರೆಸಾರ್ಟ್‍ಗೆ ತೆರಳಿದ ಕುಮಾರಸ್ವಾಮಿ ಅಲ್ಲೇ ರಾತ್ರಿ ಕಳೆದಿದ್ದಾರೆ. ಇದನ್ನೂ ಓದಿ: ಮೇ 25 ರಂದು ದೆಹಲಿಗೆ ಬನ್ನಿ -ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೋನಿಯಾ ಬುಲಾವ್

    ಯಾವುದೇ ಆಮಿಷಗಳಿಗೆ ಬಲಿಯಾಗಬೇಡಿ ಅಂತಾ ಕಿವಿ ಮಾತು ಹೇಳಿದ್ದಾರೆ. ಅತ್ತ ಕಾಂಗ್ರೆಸ್ ಶಾಸಕರಿಗೂ ಇದೇ ರೀತಿಯ ಕಿವಿ ಮಾತನ್ನು ನಾಯಕರು ಹೇಳ್ತಿದ್ದಾರೆ. ನಿನ್ನೆ ಸೋನಿಯಾ ಮತ್ತು ರಾಹುಲ್ ಖುದ್ದು ಶಾಸಕರನ್ನು ಭೇಟಿ ನಮ್ಮೊಂದಿಗೆ ಇರಿ ಎಂದಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರಮುಖ ನಾಯಕರು ಸಂಜೆ ನಗರದ ಖಾಸಗಿ ಹೋಟೆಲ್‍ನಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ಇದನ್ನೂ ಓದಿ: ಡಿಕೆಶಿ ಜೊತೆ ರಾಹುಲ್, ಸೋನಿಯಾ ಗಾಂಧಿ ಪ್ರತ್ಯೇಕ ಚರ್ಚೆ

    ವಿಶ್ವಾಸಮತಯಾಚನೆ ಹಿನ್ನೆಲೆಯಲ್ಲಿ ಅನುರಿಸಬೇಕಾದ ತಂತ್ರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಮಧ್ಯಾಹ್ನ ಡಿಸಿಎಂ ಪರಮೇಶ್ವರ್, ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಇನ್ನು ಸ್ಪೀಕರ್ ಆಯ್ಕೆಗೆ ವಿಧಾನಸಭೆ ಸಚಿವಾಲಯದಿಂದ ಅಧಿಸೂಚನೆ ಪ್ರಕಟವಾಗಿದೆ. ಮಧ್ಯಾಹ್ನ 12 ಗಂಟೆಯೊಳಗೆ ನಾಮಪತ್ರ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ನಾಳೆ ಸ್ಪೀಕರ್ ಆಯ್ಕೆಗೆ ಚುನಾವಣೆ ನಡೆಯಲಿದೆ. ಇದನ್ನೂ ಓದಿ: ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಸಿದ್ದರಾಮಯ್ಯ ಸೈಡ್ ಲೈನ್?

  • ಕಾಂಗ್ರೆಸ್ಸಿಗೆ ಎಚ್ಚರಿಕೆ ನೀಡಿ, ಎಚ್‍ಡಿಕೆಗೆ ಸಲಹೆ ಕೊಟ್ಟ ದಿಂಗಾಲೇಶ್ವರ ಶ್ರೀ

    ಕಾಂಗ್ರೆಸ್ಸಿಗೆ ಎಚ್ಚರಿಕೆ ನೀಡಿ, ಎಚ್‍ಡಿಕೆಗೆ ಸಲಹೆ ಕೊಟ್ಟ ದಿಂಗಾಲೇಶ್ವರ ಶ್ರೀ

    ಗದಗ: ರೈತರು ತೊಂದರೆಯಲ್ಲಿದ್ದಾರೆ ರೈತರ ಬೆಳೆಗೆ ಸೂಕ್ತ ಬೆಲೆ ಸಿಗಬೇಕು. ರೈತರ ಸಾಲ ಮನ್ನಾ ಮಾಡುವ ಮೂಲಕ ರೈತ ಪರ ಮುಖ್ಯಮಂತ್ರಿ ಆಗುವಂತೆ ದಿಂಗಾಲೇಶ್ವರ ಶ್ರೀಗಳು ಎಚ್ ಡಿ ಕುಮಾರಸ್ವಾಮಿ ಅವರಿಗೆ ಸಲಹೆ ನೀಡಿದ್ದಾರೆ.

    ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತ್ಯೇಕ ಧರ್ಮ ಆಗಬಾರದೆಂಬ ಕೂಗಿಗೆ ಎಚ್.ಡಿ.ಕುಮಾರಸ್ವಾಮಿ ಬೆಲೆ ಕೊಡಬಾರದು. ಭವಿಷ್ಯದಲ್ಲಿ ಪ್ರತ್ಯೇಕತೆಯ ಬಗ್ಗೆ ಕೇಂದ್ರ ಸರ್ಕಾರ ಕೈ ಹಾಕಿದ್ರು ನಮ್ಮ ವಿರೋಧವಿದೆ. ನಮ್ಮ ಹೋರಾಟ ಯಾವುದೇ ಪಕ್ಷದ ವಿರುದ್ಧ ಅಲ್ಲ. ನಮ್ಮ ಸಮಾಜದ ಅಖಂಡತೆಗಾಗಿ ನಮ್ಮ ಹೋರಾಟವಾಗಿದೆ ಅಂದ್ರು.

    ಕಾಂಗ್ರೆಸ್ ಗೆ ಎಚ್ಚರಿಕೆ: ವೀರಶೈವ ಲಿಂಗಾಯತ ಸಮಾಜಕ್ಕೆ ಡಿಸಿಎಂ ನೀಡದಿದ್ರೆ ಇನ್ನೂ ಹೆಚ್ಚಿನ ಕಹಿ ಅನುಭವಿಸ್ತೀರಿ ಅಂತ ಕಾಂಗ್ರೆಸ್ ಪಕ್ಷಕ್ಕೆ ದಿಂಗಾಲೇಶ್ವರ ಶ್ರೀಗಳ ಎಚ್ಚರಿಕೆ ನೀಡಿದ್ದಾರೆ. ಕಾಂಗ್ರೆಸ್ ಮುಖಂಡ, ವೀರಶೈವ ಲಿಂಗಾಯತ ಮಹಾಸಭೆಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರಿಗೆ ಡಿಸಿಎಂ ಸ್ಥಾನ ನೀಡಿ. ಇಲ್ಲದಿದ್ರೆ ಬರುವ ದಿನಗಳಲ್ಲಿ ಇನ್ನೂ ಕಹಿ ಅನುಭವಿಸ್ತೀರಿ ಅಂತ ಭವಿಷ್ಯ ನುಡಿದಿದ್ದಾರೆ.

    ಈಗಾಗಲೇ ವೀರಶೈವ ಲಿಂಗಾಯತ ಸಮಾಜ ಒಡೆದು, ಸಮಾಜ ಅಲಕ್ಷ್ಯ ಮಾಡಿದ್ದಕ್ಕೆ ಸಾಕಷ್ಟು ಕಹಿ ಉಂಡಿದ್ದೀರಿ. ಒಂದು ವೇಳೆ ಒಳ್ಳೆಯ ತೀರ್ಮಾನ ತೆಗೆದುಕೊಳ್ಳದಿದ್ರೆ ಬರುವ ದಿನದ ಇನ್ನೂ ಕಹಿ ಅನುಭವಿಸ್ತೀರಿ. ಈಗ ಶಾಮನೂರು ಅವರಿಗೆ ಡಿಸಿಎಂ ಮಾಡಿದ್ರೆ, ಮುನಿಸಿಕೊಂಡ ಸಮಾಜ ಶಾಂತ ಮಾಡಿದ ಭಾವನೆ ಬರುತ್ತೆ. ಶಾಮನೂರು ಅವರ ಹಿರಿತನ, ಅನುಭವ ಪರಿಗಣಿಸಿ ಡಿಸಿಎಂ ಸ್ಥಾನ ನೀಡಿ ಅಂತ ಕಾಂಗ್ರೆಸ್ ಪಕ್ಷದ ರಾಜ್ಯ, ರಾಷ್ಟ್ರೀಯ ನಾಯಕರಿಗೆ ರಾಷ್ಟ್ರೀಯ ವೀರಶೈವ ಮಠಾಧೀಶರ ಪರ ಶ್ರೀಗಳು ಒತ್ತಾಯ ಮಾಡಿದ್ದಾರೆ.

  • ರೋಷನ್ ಬೇಗ್‍ರನ್ನು ಡಿಸಿಎಂ ಮಾಡಿ: ಮುಸ್ಲಿಂ ಸಂಘಟನೆಗಳಿಂದ ಬೇಡಿಕೆ

    ರೋಷನ್ ಬೇಗ್‍ರನ್ನು ಡಿಸಿಎಂ ಮಾಡಿ: ಮುಸ್ಲಿಂ ಸಂಘಟನೆಗಳಿಂದ ಬೇಡಿಕೆ

    ಬೆಂಗಳೂರು: ನಮ್ಮ ಸಮುದಾಯದ ನಾಯಕರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಮುಸ್ಲಿಂ ಸಂಘಟನೆಗಳ ಒಕ್ಕೂಟವು ಒತ್ತಾಯಿಸಿದೆ.

    ಈ ಹಿಂದೆ ವೀರಶೈವ ಸಮಾಜದ ಮುಖಂಡರು ತಮ್ಮ ಸಮಾಜದವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಮತ್ತು 5 ಮಂದಿ ಶಾಸಕರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದರು. ಈ ಬೆನ್ನಲ್ಲೆ, ಶಿವಾಜಿನಗರದ ಶಾಸಕ ಆರ್.ರೋಷನ್ ಬೇಗ್ ಅವರನ್ನು ಉಪಮುಖ್ಯಮಂತ್ರಿ ಮಾಡಬೇಕು ಎಂದು ಮುಸ್ಲಿಂ ಸಂಘಟನೆಗಳ ಒಕ್ಕೂಟದ ಪ್ರಧಾನ ಸಂಚಾಲಕ ಸಮಿಉಲ್ಲಾ ಖಾನ್ ಒತ್ತಾಯಿಸಿದ್ದಾರೆ.

    ರಾಜಕೀಯದಲ್ಲಿ ಮುಸ್ಲಿಮರಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ, ಕಾಂಗ್ರೆಸ್‍ನಿಂದ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ರೋಷನ್ ಬೇಗ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

  • ಬುಧವಾರ ಸಂಜೆ 4.30ಕ್ಕೆ ಎಚ್‍ಡಿಕೆ ಪ್ರಮಾಣವಚನ: ಈ ಸಮಯದಲ್ಲೇ ಯಾಕೆ?

    ಬುಧವಾರ ಸಂಜೆ 4.30ಕ್ಕೆ ಎಚ್‍ಡಿಕೆ ಪ್ರಮಾಣವಚನ: ಈ ಸಮಯದಲ್ಲೇ ಯಾಕೆ?

    ಬೆಂಗಳೂರು: ಕೈಯಲ್ಲಿ ನಿಂಬೆಹಣ್ಣು ಇಲ್ಲದೇ ಮನೆಯಿಂದ ಹೊರನಡೆಯದ ಹೆಚ್‍ಡಿ ರೇವಣ್ಣ, ಕೊಂಚ ಮೂಡ್ ಔಟ್ ಆದ್ರೂ ರಾಜ್ಯದ ಹೊರ ರಾಜ್ಯದ ಜ್ಯೋತಿಷಿಗಳ ಕೈಯಲ್ಲಿ ಜಾತಕ ಓದಿಸೋ ದೊಡ್ಡ ಗೌಡ್ರು. ಹೀಗಿರುವಾಗ ದೊಡ್ಡ ಗೌಡ್ರ ಮನೆ ಮಗ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸುವ ಮುಹೂರ್ತ ಎಂತದ್ದು ಇರಬಹುದು ಅನ್ನೋ ಕುತೂಹಲ ಹಲವರಲ್ಲಿದೆ.

    ಹೆಚ್‍ಡಿಕೆ ಪ್ರಮಾಣ ವಚನ ಸಮಾರಂಭ ಬುಧವಾರ ಸಂಜೆ ನಾಲ್ಕು ಗಂಟೆಯ ಬಳಿಕ ನಡೆಯಲಿದ್ದು ಅದು ಅಮೃತ ಸಿದ್ಧಿ ಯೋಗದ ಮುಹೂರ್ತವಂತೆ. ಬುಧವಾರ ಬೆಳಗ್ಗೆ 9 ಗಂಟೆಯಿಂದ 10 ಗಂಟೆಗೆ ಸಮಯ ಚೆನ್ನಾಗಿದ್ದರೂ ಸಂಜೆಯ ವೇಳೆ ನವಮಿ ಪೂರ್ವ ಫಲ್ಗುಣಿ ಅಮೃತ ಸಿದ್ಧಿ ಯೋಗದಲ್ಲಿಯೇ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

    ಸಾಮಾನ್ಯವಾಗಿ ಅಮೃತ ಸಿದ್ಧಿ ಯೋಗ ಎಂದರೆ ಸ್ಥಿರ, ಚಂಚಲತೆ ಇರುವುದಿಲ್ಲ. ಇದಕ್ಕಾಗಿಯೇ ಈ ಸಮಯದಲ್ಲಿಯೇ ಋಷಿ ಮುನಿಗಳು ಯೋಗ ಸಿದ್ಧಿಗಾಗಿ ತಪಸ್ಸಿಗಾಗಿ ಕುಳಿತುಕೊಂಡ ಐತಿಹ್ಯ ಇದೆ. ಚಂಚಲತೆ ಇಲ್ಲದೇ, ಸ್ಥಿರತೆ ಇರಲಿ, ಮೈತ್ರಿ ಸರ್ಕಾರದಲ್ಲಿ ತೊಡಕಾಗದಿರಲಿ ಎಂದು ಈ ಸಮಯದಲ್ಲಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹಿರಿಯ ಜ್ಯೋತಿಷಿಗಳು ಅಭಿಪ್ರಾಯಪಟ್ಟಿದ್ದಾರೆ.

    ಆರಂಭದಲ್ಲಿ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎನ್ನುವ ಸುದ್ದಿ ಸಿಕ್ಕಿತ್ತು. ಆದರೆ ಈಗ ಸ್ಥಳ ಬದಲಾಗಿದ್ದು, ಬುಧವಾರ ಸಂಜೆ 4.30ಕ್ಕೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದನ್ನೂ ಓದಿ: 11.30ಕ್ಕೆ ಸರಿಯಾಗಿ ಎಚ್‍ಡಿಕೆಯನ್ನು ಆಯ್ಕೆ ಮಾಡಿದ್ದು ಯಾಕೆ: ರೇವಣ್ಣ ಹೇಳ್ತಾರೆ ಓದಿ

    ಒಬ್ಬಂಟಿಯಾಗಿ ರೇವಣ್ಣ ಪ್ರಮಾಣವಚನ:
    ಗ್ರಹ, ಕಾಲ ನೋಡಿಯೇ ಮುಂದುವರಿಯುವ ಜೆಡಿಎಸ್‍ನ ಎಚ್.ಡಿ.ರೇವಣ್ಣ ಶನಿವಾರ ತಮಗೆ ಶುಭಕಾಲದಲ್ಲೇ ಪ್ರಮಾಣವಚನ ನೀಡಲು ಸ್ಪೀಕರ್ ಬೋಪಯ್ಯ ಅವರಿಗೆ ಚೀಟಿ ನೀಡಿದ್ದರು. ಈ ವೇಳೆ ಕುಳಿತುಕೊಳ್ಳಿ ಸಂಜೆ 4 ಗಂಟೆ ಯವರೆಗೆ ಸಮಯಾವಕಾಶವಿದೆ. ನಿಗದಿತ ಪಟ್ಟಿಯಂತೆ ಪ್ರಮಾಣವಚನ ನಡೆಯುತ್ತದೆ ಎಂದು ತಿಳಿಸಿದರು. ಈ ವೇಳೆ ರೇವಣ್ಣ ಪತ್ರಕರ್ತರ ಗ್ಯಾಲರಿಗೆ ಬಂದಾಗ ಮಾಧ್ಯಮದವರು ಉತ್ತಮ ಗಳಿಗೆಯನ್ನು ನೋಡಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿರಾ ಎಂದು ಕೆಣಕಿದರು. ನನ್ನದು ಸ್ವಾತಿ ನಕ್ಷತ್ರ ಯಾವುದೇ ಗಳಿಗೆ ಇಲ್ಲ. ಯಾವಾಗ ಬೇಕಾದರೂ ಪ್ರಮಾಣವಚನ ಸ್ವೀಕರಿಸಬಹುದು ಎಂದು ಹೇಳಿ ರೇವಣ್ಣ ಹೊರ ನಡೆದಿದ್ದರು. ಆರಂಭದಲ್ಲಿ 5 ಮಂದಿ ನಂತರ 10 ಮಂದಿ ಬಳಿಕ ಇಬ್ಬರಂತೆ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ ರೇವಣ್ಣ ಒಬ್ಬಂಟಿಯಾಗಿ ಮಧ್ಯಾಹ್ನ 12.50ಕ್ಕೆ ಪ್ರಮಾಣವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು.

  • ಭಾವನಾತ್ಮಕ ಭರವಸೆ ಈಡೇರಿಸಲು ಅಸಾಧ್ಯ – ಎಚ್‍ಡಿಕೆ ಸಾಲ ಮನ್ನಾ ಭರವಸೆಗೆ ಡಿಕೆಶಿ ಪರೋಕ್ಷ ಟಾಂಗ್!

    ಭಾವನಾತ್ಮಕ ಭರವಸೆ ಈಡೇರಿಸಲು ಅಸಾಧ್ಯ – ಎಚ್‍ಡಿಕೆ ಸಾಲ ಮನ್ನಾ ಭರವಸೆಗೆ ಡಿಕೆಶಿ ಪರೋಕ್ಷ ಟಾಂಗ್!

    ಬೆಂಗಳೂರು: ಯಾವುದೋ ಎಮೋಷನಲ್‍ನಲ್ಲಿ ಮಾತನಾಡಿ ಭರವಸೆ ನೀಡಿದ್ರೆ ಎಲ್ಲವನ್ನೂ ಈಡೇರಿಸೋಕೆ ಆಗಲ್ಲ. ಸರ್ಕಾರಿ ಉದ್ಯೋಗಿಗಳಿಗೆ ಸಂಬಳ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರು ಎಚ್.ಡಿ.ಕುಮಾರಸ್ವಾಮಿ ಅವರ ಸಾಲಮನ್ನಾ ಭರವಸೆಗೆ ಟಾಂಗ್ ನೀಡಿದ್ದಾರೆ.

    ಪಬ್ಲಿಕ್ ಟಿವಿ ಪ್ರತಿನಿಧಿ ಸುಖೇಶ್ ಜೊತೆ ಬೆಂಗಳೂರಿನಲ್ಲಿ ಮಾತನಾಡಿದ ಡಿಕೆಶಿ ಅವರು, ದೇವೇಗೌಡರು, ಕುಮಾರಸ್ವಾಮಿ ಹಾಗೂ ನನ್ನ ನಡುವೆ ಸಾಕಷ್ಟು ವ್ಯತ್ಯಾಸಗಳಿವೆ. ಅವರು ಅಧಿಕಾರದಲ್ಲಿ ಇದ್ದಾಗ ನನ್ನ ಮೇಲೆ ಕೇಸು ಸಹಾ ಹಾಕಿಸಿದ್ರು. ಆದರೆ ನಾನು ಪಕ್ಷದ ಮುಖ್ಯಸ್ಥ ರಾಹುಲ್ ಗಾಂಧಿ ಅವರ ಪ್ಲಾನ್ ಆಫ್ ಆಕ್ಷನ್ ಪ್ರಕಾರ ಕೆಲಸ ಮಾಡಿದ್ದೇನೆ. ಫಲಿತಾಂಶಕ್ಕೆ ಮುನ್ನವೇ ನಾನು ಮತ್ತು ರಾಹುಲ್ ಗಾಂಧಿ ಕುಳಿತು ಮಾತನಾಡಿದ್ದೆವು. ನಮ್ಮ ಅಂಕಿ ಸಂಖ್ಯೆ ಎಷ್ಟು ಬಂದ್ರೆ ಏನು ಮಾಡಬೇಕು ಎಂದು ನಿರ್ಧರಿಸಿದ್ದೆವೋ ಹಾಗೆಯೇ ಮಾಡಿದ್ದೇವೆ ಎಂದರು.

    ನನ್ನ ಪಕ್ಷ ನೀಡುವ ಜವಾಬ್ದಾರಿ ನಾನು ನಿರ್ವಹಿಸುತ್ತೇನೆ. ನನ್ನ ಮನಸ್ಸಲ್ಲಿ ಏನಿದೆ ಎಂಬುದನ್ನು ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ. ಅವರು ಸರ್ಕಾರದ ಜವಾಬ್ದಾರಿ ಕೊಡ್ತಾರಾ ಪಕ್ಷದ ಜವಾಬ್ದಾರಿ ಕೊಡ್ತಾರಾ ಗೊತ್ತಿಲ್ಲ ಎಂದು ಹೇಳಿದರು.

    ಯಡಿಯೂರಪ್ಪ ಅವರಂತೆ, ನನಗೆ ಅರ್ಜೆಂಟ್ ಇಲ್ಲ. ಕಲ್ಲು ಪ್ರಕೃತಿ, ಕೆತ್ತಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ತಾಳ್ಮೆಯಿಂದ ಯೋಚಿಸಿ ಯಾವುದೇ ಜವಾಬ್ದಾರಿ ತೆಗೆದುಕೊಳ್ಳುತ್ತೇನೆ ಎನ್ನುವ ಮೂಲಕ ಕೆಪಿಸಿಸಿ ಅಧ್ಯಕ್ಷ ಜವಾಬ್ದಾರಿ ಈಗಲೇ ಸಿದ್ಧನಿಲ್ಲ ಎಂಬ ಸಂದೇಶವನ್ನು ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಮುಖಂಡರಿಗೆ ರವಾನಿಸಿದ್ದಾರೆ.