Tag: ಎಚ್ ವಿಶ್ವನಾಥ್

  • ಒಮ್ಮೆ ಪಕ್ಷ, ಮತ್ತೊಮ್ಮೆ ಸಿದ್ದರಾಮಯ್ಯ – ವಿಶ್ವನಾಥ್ ಹೇಳಿಕೆ ಹಿಂದೆ ಯಾರಿದ್ದಾರೆ?

    ಒಮ್ಮೆ ಪಕ್ಷ, ಮತ್ತೊಮ್ಮೆ ಸಿದ್ದರಾಮಯ್ಯ – ವಿಶ್ವನಾಥ್ ಹೇಳಿಕೆ ಹಿಂದೆ ಯಾರಿದ್ದಾರೆ?

    ಬೆಂಗಳೂರು: ಜೆಡಿಎಸ್ ನಾಯಕರಿಗೆ ಹಣ ಬಲವೇ ಮುಖ್ಯ ಎಂಬ ಹೆಚ್ ವಿಶ್ವನಾಥ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಚಲುವರಾಯಸ್ವಾಮಿ ಅವರು, ವಿಶ್ವನಾಥ್ ಒಮ್ಮೆ ಸಿದ್ದರಾಮಯ್ಯ ಬಗ್ಗೆ ಮಾತನಾಡುತ್ತಾರೆ. ಮತ್ತೊಮ್ಮೆ ಅವರ ಪಕ್ಷದ ಬಗ್ಗೆಯೇ ಮಾತನಾಡುತ್ತಾರೆ. ಅವರ ಹೇಳಿಕೆ ಹಿಂದೆ ಯಾರಿದ್ದಾರೆ? ಎಂದು ಸ್ಪಷ್ಟಡಿಸಬೇಕು ಎಂದು ಹೇಳಿದರು.

    ತಮ್ಮ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಸಂಭ್ರಮ ಆಚರಿಸಿದ ಮಾಜಿ ಸಚಿವ ಚಲುವರಾಯಸ್ವಾಮಿ ಅವರು, ಮೈತ್ರಿ ಸರ್ಕಾರದಿಂದಲೇ ಪಕ್ಷಕ್ಕೆ ಚುನಾವಣೆಯಲ್ಲಿ ಹಿನ್ನಡೆಯಾಗಿದೆ. ಸದ್ಯ ಇರುವ ವಾಸ್ತವತೆಯನ್ನು ಈಗ ನಮ್ಮ ನಾಯಕರು ಒಪ್ಪಿಕೊಂಡಿದ್ದಾರೆ. ಜನರ ಅಭಿಪ್ರಾಯ ಇದನ್ನು ಸ್ಪಷ್ಟಪಡಿಸಿದೆ. ಸರ್ಕಾರದ ನಡವಳಿಕೆಗಳು ಬದಲಾವಣೆ ಆಗದೆ ಇದ್ದರೆ ಸಮಿಶ್ರ ಸರ್ಕಾರ ನಡೆಸುವುದು ಕಷ್ಟಸಾಧ್ಯವಾಗಲಿದೆ. ನಮ್ಮ ನಾಯಕರು ಆತ್ಮಾವಲೋಕನ ಮಾಡಿಕೊಂಡು ಪಕ್ಷವನ್ನು ಉಳಿಸಿಕೊಳ್ಳುವ ಅಗತ್ಯವಿದೆ ಎಂದರು.

    ಇದೇ ವೇಳೆ ಪಕ್ಷದ ಅಧ್ಯಕ್ಷರಾಗಿ ವಿಶ್ವನಾಥ್ ಅವರ ಹೇಳಿಕೆ ನಡೆಯಲಿಲ್ಲ ಅಂದರೆ ಅಧ್ಯಕ್ಷರಾಗಿ ಯಾಕಿದ್ದಾರೆ? ಬೇಡ ಎಂದು ಹೇಳಿದರೆ ತಮ್ಮ ಸ್ಥಾನವನ್ನು ವಾಪಸ್ ತೆಗೆದುಕೊಳ್ಳಬೇಕು. ಅದು ಬಿಟ್ಟು ಒಮ್ಮೆ ಸಿದ್ದರಾಮಯ್ಯ, ಮತ್ತೊಮ್ಮೆ ಪಕ್ಷದ ಬಗ್ಗೆಯೇ ಮಾತನಾಡುವುದರ ಹಿಂದೇ ಯಾರಿದ್ದಾರೆ ಎಂದು ಪ್ರಶ್ನೆ ಮಾಡಿದರು.

    ಇಂದು ಮೈಸೂರಿನಲ್ಲಿ ಮಾತನಾಡಿದ್ದ ಎಚ್.ವಿಶ್ವನಾಥ್ ಅವರು, ಕೆ.ಆರ್.ನಗರ ಪುರಸಭೆ ಚುನಾವಣೆಯ ಸೋಲಿಗೆ ಸಚಿವ ಸಾ.ರಾ.ಮಹೇಶ್ ಅವರ ನಡೆಯೇ ಕಾರಣ. ಕುರುಬ ಸಮುದಾಯದವರಿಗೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಪಕ್ಷಕ್ಕೆ ಸೋಲಾಯ್ತು. ರಾಜ್ಯಧ್ಯಕ್ಷನಾಗಿದ್ದರೂ ಪಕ್ಷದ ನಾಯಕರು, ಸಚಿವರು ನಾನು ಹೇಳಿದವರಿಗೆ ಟಿಕೆಟ್ ನೀಡಲಿಲ್ಲ. ಕೆ.ಆರ್. ನಗರದಲ್ಲಿ ಕುರುಬ ಸಮುದಾಯಕ್ಕೆ ಟಿಕೆಟ್ ನೀಡದಿದ್ದರೂ ನಾಲ್ಕು ವಾರ್ಡ್ ಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಕಂಡಿದ್ದಾರೆ. ಆ ಗೆಲುವಿನ ರೂವಾರಿಯಲ್ಲಿ ನನ್ನ ಜೊತೆ ಜೆಡಿಎಸ್ ಗೆ ಬಂದ ಕಾರ್ಯಕರ್ತರ ಪರಿಶ್ರಮವಿದೆ. ಜನರನ್ನು ದುಡ್ಡಿನಿಂದ ಅಳೆಯಬಾರದು. ದುಡ್ಡಿನಿಂದ ಕೇವಲ ತಾತ್ಕಾಲಿಗೆ ಗೆಲುವು ನಮ್ಮದಾಗಿರುತ್ತದೆ ಎಂಬುದನ್ನು ಅರಿತು ಕೆಲಸ ಮಾಡಬೇಕಿದೆ. ದುಡ್ಡಿನಿಂದ ಎಲ್ಲವನ್ನು ಅಳೆದು, ಗೆಲ್ಲುತ್ತೇವೆ ಎಂಬ ದುರಂಹಕಾರ ಒಳ್ಳೆಯದಲ್ಲ ಎಂಬುದನ್ನು ಕೆಲವರು ಅರ್ಥ ಮಾಡಿಕೊಳ್ಳಬೇಕಿದೆ ಎಂದು ಪಕ್ಷದ ಸಚಿವ ಸಾರಾ ಮಹೇಶ್ ಅವರ ಮೇಲೆ ಪರೋಕ್ಷವಾಗಿ ಗುಡುಗಿದ್ದರು.

  • ಮೋದಿ ಭವಿಷ್ಯದ ಬಲಭೀಮ ಎಂದು ಹಾಡಿ ಹೊಗಳಿದ ವಿಶ್ವನಾಥ್

    ಮೋದಿ ಭವಿಷ್ಯದ ಬಲಭೀಮ ಎಂದು ಹಾಡಿ ಹೊಗಳಿದ ವಿಶ್ವನಾಥ್

    ಬೆಂಗಳೂರು: ಲೋಕಸಮರದಲ್ಲಿ ಸ್ಪಷ್ಟ ಬಹುಮತಗಳೊಂದಿದೆ ಗೆದ್ದು ಮತ್ತೆ ಪ್ರಧಾನಿ ಪಟ್ಟ ಏರುತ್ತಿರುವ ನರೇಂದ್ರ ಮೋದಿ ಅವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಹಾಡಿ ಹೊಗಳಿ ಶುಭಾಶಯ ಕೋರಿದ್ದಾರೆ.

    ಇಂದು ಮೋದಿ ಅವರು ಎರಡನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಾರೆ. ಈ ಹಿನ್ನೆಲೆ ಎಚ್. ವಿಶ್ವನಾಥ್ ಅವರು ಟ್ವೀಟ್ ಮೂಲಕ ಮೋದಿ ಅವರಿಗೆ ಶುಭಕೋರಿದ್ದಾರೆ. ಭಾರತದ ಎಲ್ಲಾ ಜಾತಿ ಜನಾಂಗ ಧರ್ಮ ಭಾಷಿಕರಣ ಆಶಯಗಳಂತೆ ಒಂದಾಗಿ ಎಲ್ಲರ ಭವಿಷ್ಯದ ಬಲ ಭೀಮನಾಗಿ ಪ್ರಧಾನಿ ಮೋದಿಯವರು ಹೆಜ್ಜೆ ಹಾಕಲಿ ಎಂದು ಆಶಿಸುತ್ತೇನೆ. ಎರಡನೇ ಬಾರಿಗೆ ಅಧಿಕಾರ ಸ್ವೀಕಾರ ಮಾಡುತ್ತಿರುವ ನಿಮಗೆ ಶುಭಾಶಯಗಳು ಎಂದು ಹೊಗಳಿ ಟ್ವೀಟ್ ಮಾಡಿ ಶುಭಹಾರೈಸಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ಭಾರತದ ಎಲ್ಲಾ ಜಾತಿ ಜನಾಂಗ ಧರ್ಮ ಭಾಷಿಕರಣ ಆಶಯಗಳಂತೆ ಒಂದಾಗಿ ಎಲ್ಲರ ಭವಿಷ್ಯದ ಬಲ ಭೀಮನಾಗಿ ಪ್ರಧಾನಿ ಮೋದಿಯವರು ಹೆಜ್ಜೆ ಹಾಕಲಿ ಎಂದು ಆಶಿಸುತ್ತೇನೆ.

    ಜಾಗತಿಕ ಜಗತ್ತಿನ ಅತ್ಯಂತ ಎತ್ತರದ ಜನತಂತ್ರ ವ್ಯವಸ್ಥೆಯನ್ನ ಒಪ್ಪಿ ಅಪ್ಪಿ ಆಡಳಿತ ನಡಿಸುತ್ತಿರುವ 71 ವರ್ಷಗಳ ಕಾಲದಿಂದಲೂ ಸ್ವಂತಂತ್ರವನ್ನು ಸಂರಕ್ಷಿಸಿ ಮುನ್ನುಗುತ್ತಿರುವ ಭಾರತದ ಪ್ರಧಾನಮಂತ್ರಿಯಾಗಿ 2ನೇ ಬಾರಿಗೆ ಅಧಿಕಾರ ಸ್ವೀಕಾರ ಮಾಡುತ್ತಿರುವ ನಿಮಗೆ ಭಾರತದ ಸಮಸ್ತ ಜನಕೋಟಿಯ ಶುಭಾಶಯದ ಶುಭಕಾಮನೆಗಳು ಎಂದು ಬರೆದು ಟ್ವೀಟ್ ಮಾಡಿದ್ದಾರೆ.

    ಇಂದು ರಾಷ್ಟ್ರಪತಿ ಭವನದಲ್ಲಿ ಮೋದಿ ಅವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಸಂಜೆ 7 ಗಂಟೆಗೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸುಮಾರು 8 ಸಾವಿರ ಮಂದಿ ಭಾಗಿಯಾಗುವ ನಿರೀಕ್ಷೆಗಳಿದ್ದು, ಕಾರ್ಯಕ್ರಮಕ್ಕೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ರಾಪ್ಟ್ರಪತಿ ಹಾಗೂ ಪ್ರಧಾನಿ ತೀರ್ಮಾನದ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.

    ಪ್ರಮುಖವಾಗಿ ಕಾರ್ಯಕ್ರಮಕ್ಕೆ ಬಂಗಾಳ ಇನಿಷಿಯೇಟಿವ್ ಫಾರ್ ಮಲ್ಟಿ ಸೆಕ್ಟರಲ್ ಟೆಕ್ನಿಕಲ್ ಅಂಡ್ ಎಕನಾಮಿಕ್ ಕೋ ಆಪರೇಷನ್ (ಬಿಮ್‍ಸ್ಟಿಕ್) ಸದಸ್ಯ ರಾಷ್ಟ್ರಗಳಿಗೆ ಆಹ್ವಾನ ನೀಡಲಾಗಿದೆ. ಬಾಂಗ್ಲಾದೇಶ, ಶ್ರೀಲಂಕಾ, ಮಾಯನ್ಮಾರ, ನೇಪಾಳ, ಭೂತಾನ್, ಥೈಲ್ಯಾಂಡ್ ರಾಷ್ಟ್ರಗಳ ಗಣ್ಯರು ಸೇರಿದಂತೆ ಶಾಂಘೈ ಕೋ ಆಪರೇಷನ್ ರಾಷ್ಟ್ರಗಳ ಸದಸ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

  • ಎಚ್‍ಡಿಡಿ ಒತ್ತಾಯದ ಮೇರೆಗೆ ರಾಜೀನಾಮೆ ನಿರ್ಧಾರ ವಾಪಸ್: ಎಚ್.ವಿಶ್ವನಾಥ್

    ಎಚ್‍ಡಿಡಿ ಒತ್ತಾಯದ ಮೇರೆಗೆ ರಾಜೀನಾಮೆ ನಿರ್ಧಾರ ವಾಪಸ್: ಎಚ್.ವಿಶ್ವನಾಥ್

    ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೆ. ಆದರೆ ವರಿಷ್ಠರಾದ ಎಚ್‍ಡಿ ದೇವೇಗೌಡರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಇಂತಹ ಸಂದರ್ಭದಲ್ಲಿ ರಾಜೀನಾಮೆ ನೀಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ಪರಿಣಾಮ ರಾಜೀನಾಮೆ ನಿರ್ಧಾರ ವಾಪಸ್ ಪಡೆದಿದ್ದೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್. ವಿಶ್ವನಾಥ್ ತಿಳಿಸಿದ್ದಾರೆ.

    ಲೋಕ ಫಲಿತಾಂಶದ ಬಳಿಕ ಮೊದಲ ಬಾರಿಗೆ ಜೆಡಿಎಸ್ ಶಾಸಕಾಂಗ ಸಭೆಯನ್ನ ಇಂದು ನಡೆಸಲಾಯಿತು. ಸತತ ಮೂರು ಗಂಟೆಗಳ ಕಾಲ ನಡೆದ ಸಭೆ ಬಳಿಕ ಎಚ್ ವಿಶ್ವನಾಥ್ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಚುನಾವಣೆ ಸೋಲಿಗೆ ನಾನು ನೈತಿಕತೆ ಹೊತ್ತು ರಾಜೀನಾಮೆಗೆ ನಿರ್ಧಾರ ಮಾಡಿದ್ದೆ. ದೇವೇಗೌಡರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಪಕ್ಷ ಕಟ್ಟುವ ಅವಶ್ಯಕತೆ ಇರುವುದರಿಂದ ರಾಜೀನಾಮೆ ಬೇಡ ಎಂದು ಮನವರಿಕೆ ಮಾಡಿದ್ದಾರೆ. ಸಭೆಯಲ್ಲಿ ಯಾವುದೇ ಅಪಪ್ರಚಾರಕ್ಕೆ ತಲೆಕಡೆಸಿಕೊಳ್ಳದೆ, ಎಲ್ಲರೂ ಒಗ್ಗಟ್ಟಾಗಿ ನಡೆಯುವ ನಿರ್ಧಾರ ಮಾಡಿದ್ದು, ಬಿಜೆಪಿಯ ಆಮಿಷಕ್ಕೆ ಬಲಿಯಾಗಬಾರದು ಹಾಗೂ ಕುಮಾರಸ್ವಾಮಿ ಅವರಿಗೆ ಸಂಪೂರ್ಣ ಬೆಂಬಲ ನೀಡಲು ತೀರ್ಮಾನ ಮಾಡಲಾಗಿದೆ ಎಂದರು.

    ಸಿಎಂ ರಾಜೀನಾಮೆ?
    ಇದೇ ವೇಳೆ ಸೋಲಿನ ಹೊಣೆ ಹೊತ್ತು ಸಿಎಂ ಕುಮಾರಸ್ವಾಮಿ ಅವರು ರಾಜೀನಾಮೆ ನೀಡುತ್ತರಾ ಎಂಬ ಮಾಧ್ಯಮ ಪ್ರಶ್ನೆಗೆ ಉತ್ತರಿಸಿದ ಅವರು, ಸಿಎಂ ರಾಜೀನಾಮೆ ಬಗ್ಗೆ ಇವತ್ತಿನ ಸಭೆಯಲ್ಲಿ ಯಾವುದೇ ಚರ್ಚೆ ಆಗಿಲ್ಲ. ಅಂತಹ ಯಾವುದೇ ಚರ್ಚೆಯ ಅವಶ್ಯಕತೆ ಇಲ್ಲ. ಅಲ್ಲದೇ ಪ್ರಜ್ವಲ್ ರೇವಣ್ಣ ರಾಜೀನಾಮೆ ಬಗ್ಗೆಯೂ ನಡೆದಿಲ್ಲ. ಸದ್ಯ ಯಾರು ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸಿಲ್ಲ ಎಂದರು.

    ಮಾಧ್ಯಮಗಳಿಂದ ಜೆಡಿಎಸ್ ದೂರ?
    ಮಾಧ್ಯಮಗಳಲ್ಲಿ ನಡೆಯುವ ಚರ್ಚೆಗೆ ಜೆಡಿಎಸ್ ನಾಯಕರು ಬರುವುದಿಲ್ಲ. ಈ ಬಗ್ಗೆ ನಮ್ಮ ನಾಯಕರು ಮಾಹಿತಿ ನೀಡಿದ್ದಾರೆ. ಮಾಧ್ಯಮದಲ್ಲಿ ಚರ್ಚೆಗೆ ಹೋಗುವ ಮುಖಂಡರ ಬಗ್ಗೆ ಪಕ್ಷದ ವಕ್ತಾರರೇ ಪಟ್ಟಿ ಸಿದ್ಧ ಪಡಿಸುತ್ತಾರೆ. ಅಲ್ಲಿವರೆಗೆ ಜೆಡಿಎಸ್ ನಿಂದ ಯಾವ ಮುಖಂಡರು ಮಾಧ್ಯಮಗಳ ಚರ್ಚೆಗಳಲ್ಲಿ ಭಾಗವಹಿಸುವುದಿಲ್ಲ. ಪಟ್ಟಿ ಸಿದ್ಧವಾದ ಬಳಿಕ ಮಾಧ್ಯಮಕ್ಕೆ ನೀಡುತ್ತೇವೆ. ಅಲ್ಲದೇ ಎರಡೂ ಪಕ್ಷದ ಅಧ್ಯಕ್ಷರು ಸಮನ್ವಯ ಸಮಿತಿಯಲ್ಲಿ ಇರಬೇಕು. ಈಗಲೂ ನನ್ನ ಒತ್ತಾಯ ಇದೆ ಎಂದು ವಿಶ್ವನಾಥ್ ಸ್ಪಷ್ಟಪಡಿಸಿದರು.

    ಬಳಿಕ ಮಾತನಾಡಿದ ಬಸವರಾಜ್ ಹೊರಟ್ಟಿ ಅವರು, ಸೋಲಿನ ಬಗ್ಗೆ ಸದ್ಯ ಏನು ಮಾತನಾಡುವುದಿಲ್ಲ. ಅದೆಲ್ಲ ಮರೆತು ಮುಂದಿನ ಕೆಲಸದ ಬಗ್ಗೆ ಚಿಂತನೆ ಮಾಡುತ್ತೇವೆ. ಈ ಸಂದರ್ಭದಲ್ಲಿ ಸೋಲಿನ ಬಗ್ಗೆ ಚರ್ಚೆ ಅನಗತ್ಯ. ಬಿಜೆಪಿ ಪರ ಜೆಡಿಎಸ್ ನವರು ಮತ ಹಾಕಿದ್ದಾರೆ ಎಂಬ ಜೆಡಿಎಸ್ ಸಚಿವರ ಹೇಳಿಕೆ ವಿಚಾರವೂ ಇಂದಿಗೆ ಮುಕ್ತಾಯವಾಗಿದ್ದು, ಈ ಬಗ್ಗೆ ಯಾವುದೇ ಚರ್ಚೆ, ಕ್ರಮ ಇಲ್ಲ ಎಂದರು. ಸಿಎಂ ಕುಮಾರಸ್ವಾಮಿ, ಜೆಡಿಎಸ್ ವರಿಷ್ಠರಾದ ದೇವೇಗೌಡರ ನೇತ್ರತ್ವದಲ್ಲಿ ಸಭೆಯಲ್ಲಿ ಜೆಡಿಎಸ್ ಸಚಿವರು, ಶಾಸಕರು, ಪರಿಷತ್ ಸದಸ್ಯರು, ಪ್ರಮುಖ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದರು.

  • ನನ್ನದು ಹಳ್ಳಿ ಭಾಷೆ, ವಿಶ್ವನಾಥ್ ನಮ್ಮ ಪಕ್ಷದವರಲ್ಲ, ಜೆಡಿಎಸ್‍ನವರು: ಸಿದ್ದರಾಮಯ್ಯ ತಿರುಗೇಟು

    ನನ್ನದು ಹಳ್ಳಿ ಭಾಷೆ, ವಿಶ್ವನಾಥ್ ನಮ್ಮ ಪಕ್ಷದವರಲ್ಲ, ಜೆಡಿಎಸ್‍ನವರು: ಸಿದ್ದರಾಮಯ್ಯ ತಿರುಗೇಟು

    ಬೆಂಗಳೂರು: ಎಚ್.ವಿಶ್ವನಾಥ್ ನಮ್ಮ ಪಕ್ಷದವರಲ್ಲ, ಜೆಡಿಎಸ್‍ನವರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.

    ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರ ವಿರುದ್ಧ ಟ್ವೀಟ್ ಮೂಲಕ ಗುಡುಗಿರುವ ಮಾಜಿ ಸಿಎಂ, ಅವರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಸಮನವ್ಯ ಸಮಿತಿ ಸಭೆಯಲ್ಲಿ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದಾರೆ.

    ನನ್ನದು ಹಳ್ಳಿ ಭಾಷೆ ಮತ್ತು ನೇರ ನುಡಿ. ಸ್ವಾಭಿಮಾನಿಯಾದವರು ಮತ್ತು ಪ್ರಾಮಾಣಿಕರು ಮಾತ್ರ ನೇರ ನಿಷ್ಠುರ ವ್ಯಕ್ತಿತ್ವ ಹೊಂದಿರುತ್ತಾರೆ. ಆದರೆ ಇದು ಕೆಲವು ಸೋಗಲಾಡಿ ವ್ಯಕ್ತಿತ್ವದವರಿಗೆ ಅಹಂಕಾರದಂತೆ ಕಾಣುತ್ತದೆ. ನಾವು ಜನಪರ ಮತ್ತು ಬಡವರ ಪರವಾಗಿರುವುದರಿಂದ ಅಂಥವರ ಮಾತಿಗೆ ಹೆಚ್ಚು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.

    ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರಿನ ನೃಪತುಂಗ ವಾಣಿಜ್ಯ-ಕಲಾ ಪದವಿ ಪೂರ್ವ ಕಾಲೇಜಿನ ಕಟ್ಟಡ ಉದ್ಘಾಟನೆ ಮಾಡಿದರು. ಈ ವೇಳೆ ಮಾಧ್ಯಮಗಳು ಹತ್ತಿರಕ್ಕೆ ಹೋಗುತ್ತಿದ್ದಂತೆ ‘ನೋ ಪ್ರೆಸ್ ಮೀಟ್’ ಎಂದು ತೆರಳಿದರು. ಹೀಗಾಗಿ ಟ್ವೀಟ್ ಮೂಲಕ ವಿಶ್ವನಾಥ್ ಅವರಿಗೆ ತಿರುಗೇಟು ಕೊಟ್ಟಿದ್ದಾರೆ.

    ಎಚ್.ವಿಶ್ವನಾಥ್ ಹೇಳಿದ್ದೇನು?:
    ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೋಳೂರು ಬಳಿ ಇರುವ ಗಟ್ಟಹಳ್ಳಿ ಆಂಜನಪ್ಪ ಆಶ್ರಮಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಎಚ್.ವಿಶ್ವನಾಥ್ ಅವರು, ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್‍ನ ಕಿರುಕುಳ ತಡೆದುಕೊಳ್ಳುವ ಶಕ್ತಿ ಸಿಎಂ ಕುಮಾರಸ್ವಾಮಿ ಅವರಲ್ಲಿ ಇದೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಚಿರಾಯುವಾಗಿದ್ದು, ಲೋಕಸಭಾ ಚುನಾವಣೆ ಫಲಿತಾಂಶ ಬಂದ ನಂತರವೂ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

    ನಾನು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷನಾಗಿ, ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷದ ಅಧ್ಯಕ್ಷನಾಗಿ, ನನ್ನ ಇತಿಮಿತಿಯೊಳಗೆ ಸರ್ಕಾರದ ಜವಾಬ್ದಾರಿಯನ್ನ ನೆನಪು ಮಾಡುತ್ತಿದ್ದೆನೆಯೇ ಹೊರತು ನನಗೂ ಸಿದ್ದರಾಮಯ್ಯ ಅವರಿಗೆ ವೈಯುಕ್ತಿಕವಾಗಿ ಏನೂ ಇಲ್ಲ ಎಂದು ಹೇಳಿದ್ದರು.

  • ಸಿಎಂಗೆ ಕಾಂಗ್ರೆಸ್‍ನ ಕಿರುಕುಳ ತಡೆದುಕೊಳ್ಳುವ ಶಕ್ತಿಯಿದೆ – ಎಚ್ ವಿಶ್ವನಾಥ್

    ಸಿಎಂಗೆ ಕಾಂಗ್ರೆಸ್‍ನ ಕಿರುಕುಳ ತಡೆದುಕೊಳ್ಳುವ ಶಕ್ತಿಯಿದೆ – ಎಚ್ ವಿಶ್ವನಾಥ್

    ಕೋಲಾರ: ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್‍ನ ಕಿರುಕುಳ ತಡೆದುಕೊಳ್ಳುವ ಶಕ್ತಿ ಸಿಎಂ ಕುಮಾರಸ್ವಾಮಿ ಅವರಲ್ಲಿ ಇದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿದ್ದಾರೆ.

    ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೋಳೂರು ಬಳಿ ಇರುವ ಗಟ್ಟಹಳ್ಳಿ ಆಂಜನಪ್ಪ ಆಶ್ರಮಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೈತ್ರಿ ಸರ್ಕಾರ ಚಿರಾಯುವಾಗಿದ್ದು, ಲೋಕಸಭಾ ಚುನಾವಣೆ ಫಲಿತಾಂಶ ಬಂದ ನಂತರವೂ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಒಂದು ವರ್ಷದಲ್ಲಿ ಸಾಕಷ್ಟು ಚುನಾವಣೆಗಳಾಗಿದ್ದು, ಪದೇ ಪದೆ ಚುನಾವಣೆಗೆ ಹೋಗುವುದರಿಂದ ಜನರಿಗೆ ಹೊರೆಯಾಗುತ್ತದೆ ಎಂದು ಸಲಹೆ ನೀಡಿದ ಅವರು, ಸಮನ್ವಯ ಸಮಿತಿಯ ಅಧ್ಯಕ್ಷರಾಗಿ ಎರಡು ಪಾಲುದಾರ ಪಕ್ಷಗಳನ್ನ ಸಮನ್ವಯ ಮಾಡಬೇಕು. ಆದರೆ ಸಿದ್ದರಾಮಯ್ಯ ಅವರು ನಿರ್ವಹಣೆ ಮಾಡುವುದರಲ್ಲಿ ಜೊತೆಗೆ ಸರಿಯಾಗಿ ಕಾರ್ಯಸೂಚಿಗಳನ್ನ ದಾಖಲಿಸುವಲ್ಲಿ ವಿಫಲರಾಗಿದ್ದಾರೆಂದು ಮತ್ತೊಮ್ಮೆ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ರು.

    ನಾನು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷನಾಗಿ, ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷದ ಅಧ್ಯಕ್ಷನಾಗಿ, ನನ್ನ ಇತಿಮಿತಿಯೊಳಗೆ ಸರ್ಕಾರದ ಜವಾಬ್ದಾರಿಯನ್ನ ನೆನಪು ಮಾಡುತ್ತಿದ್ದೆನೆಯೇ ಹೊರತು ನನಗೂ ಸಿದ್ದರಾಮಯ್ಯ ಅವರಿಗೆ ವೈಯುಕ್ತಿಕವಾಗಿ ಏನೂ ಇಲ್ಲ ಎಂದು ಹೇಳಿದರು.

  • ಮತ್ತೆ ಎಲೆಕ್ಷನ್: ಬಸವರಾಜ್ ಹೊರಟ್ಟಿ ಹೇಳಿಕೆಗೆ ವಿಶ್ವನಾಥ್ ಪ್ರತಿಕ್ರಿಯೆ

    ಮತ್ತೆ ಎಲೆಕ್ಷನ್: ಬಸವರಾಜ್ ಹೊರಟ್ಟಿ ಹೇಳಿಕೆಗೆ ವಿಶ್ವನಾಥ್ ಪ್ರತಿಕ್ರಿಯೆ

    – ಸಿದ್ದರಾಮಯ್ಯ ವಿರುದ್ಧ ನೇರ ಆರೋಪ

    ಬೆಂಗಳೂರು: ಗೊಂದಲಗಳ ಮಧ್ಯೆ ಹೋಗುವುದಕ್ಕಿಂತ ಸರ್ಕಾರ ವಿಸರ್ಜನೆ ಮಾಡಬೇಕು ಎಂಬ ಬಸವರಾಜ ಹೊರಟ್ಟಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು, ಹೊರಟ್ಟಿ ಅವರ ಹೇಳಿಕೆ ವೈಯಕ್ತಿಕವಾಗಿದ್ದು. ಸರ್ಕಾರ ವಿಸರ್ಜನೆ ಎಂಬುವುದು ಅನ್ನೋದು ಬಹಳ ದೊಡ್ಡ ಮಾತು. ಇದನ್ನು ತೀರ್ಮಾನ ತೆಗೆದುಕೊಳ್ಳೋಕೆ ದೊಡ್ಡವರು ಇದ್ದಾರೆ ಎಂದು ಹೇಳಿದ್ದಾರೆ.

    ಎಚ್‍ಡಿಡಿ ನಿವಾಸಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಯಾವ ದಿಕ್ಕಿನಲ್ಲಿ ಹೋಗಬೇಕು. ಸರ್ಕಾರದ ನಡವಳಿಕೆಗಳು ಏನು? ಯಾವ ದಿಕ್ಕಿನಲ್ಲಿ ಸಾಗಬೇಕು ಎಂಬುವುದರ ಬಗ್ಗೆ ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯನವರು ಯಾವುದೇ ಕ್ರಮಕೈಗೊಂಡಿಲ್ಲ. ಆದ್ದರಿಂದ ಸಮನ್ವಯ ಸುಧಾರಿಸುವಲ್ಲಿ ಅವರ ಸಾಧನೆ ಏನಿದೆ ಎಂದರು. ಅಲ್ಲದೇ ಕಾಂಗ್ರೆಸ್ ಪಕ್ಷದ ನಾಯಕರೇ ಶೇ. 70 ರಷ್ಟು ಇದ್ದು, ಈಗ ಸಮಾಧಾನ ಏಕೆ ಉಂಟಾಗುತ್ತದೆ ಎಂದು ಪ್ರಶ್ನಿಸಿದರು. ಜೆಡಿಎಸ್ ನಾಯಕರದಲ್ಲಿ ಯಾವುದೇ ಅಸಮಾಧಾನ ಇಲ್ಲ. ಸರ್ಕಾರ ವಿಸರ್ಜನೆ ಮಾಡುವ ಹಂತಕ್ಕೆ ಕರ್ನಾಟಕದಲ್ಲಿ ಪರಿಸ್ಥಿತಿ ನಿರ್ಮಾಣ ಆಗಿಲ್ಲ ಎಂದರು.

    ಹೊರಟ್ಟಿ ಅವರು ವಿಧಾನಸಭೆಗೆ ಚುನಾವಣೆ ಎದುರಿಸಿ ಬಂದಿಲ್ಲ. ವಿಧಾನ ಪರಿಷತ್ ನಿಂದ ಆಯ್ಕೆಯಾಗಿ ಬಂದಿದ್ದಾರೆ. ಆದರೆ ಅವರಿಗೆ ನಮ್ಮ ಸಂಕಷ್ಟವೂ ಗೊತ್ತಿದೆ. ಮತ್ತೆ ಚುನಾವಣೆಗೆ ಹೋಗೋದು ಅಷ್ಟು ಸುಲಭ ಕಾರ್ಯವಲ್ಲ. ಮೈತ್ರಿ ಸರ್ಕಾರದಲ್ಲಿ ಗೊಂದಲ ಇರುವುದು ನಿಜ. ಅದನ್ನು ಕುಮಾರಸ್ವಾಮಿ ಎಲ್ಲಾ ಗೊಂದಲ ಪರಿಹರಿಸಿಕೊಂಡು ಸರ್ಕಾರ ನಡೆಸಿಕೊಂಡು ಹೋಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಸಮನ್ವಯ ಸಮಿತಿಗೆ ನನ್ನ ಸೇರ್ಪಡೆ ಹಾಗೂ ದಿನೇಶ್ ಗುಂಡೂರಾವ್ ಸೇರ್ಪಡೆಗೂ ವಿರೋಧ ಮಾಡುತ್ತಿದ್ದಾರೆ. ಆದರೆ ಕಾಮನ್ ಮಿನಿಮಮ್ ಕಾರ್ಯಕ್ರಮ ರಚನೆ ಮಾಡುತ್ತಿಲ್ಲ. ಏಕೆ ಈ ರೀತಿ ಅಡ್ಡಿ ಮಾಡುತ್ತಿದ್ದಾರೆ ಎಂದು ಅವರಿಗೆ ಕೇಳಬೇಕು. ಸದ್ಯ ಮೇ 23 ರ ನಂತರ ಸಮತಿಗೆ ಸೇರ್ಪಡೆ ಸಂಬಂಧ ಏನಾಗುತ್ತದೆ ಎಂದು ಕಾದು ನೋಡುತ್ತೇವೆ ಎಂದು ಸ್ಪಷ್ಟನೆ ನೀಡಿದರು. ಅಲ್ಲದೇ ಈ ಹಿಂದೆ ಸಿದ್ದರಾಮಯ್ಯ ಅವರ ಸಾಧನೆ ಏನು ಎಂದು ಪ್ರಶ್ನೆ ಮಾಡಿದ್ದ ತಮ್ಮ ಹೇಳಿಕೆ ಉಲ್ಟಾ ಹೊಡೆದ ಅವರು, ನಾನು ಸಿದ್ದರಾಮಯ್ಯ ಅವರು ಏನು ಸಾಧನೆ ಮಾಡಿದ್ದಾರೆ ಎಂದು ಕೇಳಲಿಲ್ಲ. ಸಿದ್ದರಾಮಯ್ಯ ಅವರು ಇತರೆ ಸಿಎಂಗಳಿಗಿಂತ ಹೆಚ್ಚು ಕೆಲಸ ಮಾಡಿದೀನಿ ಎಂದಿರುವ ಬಗ್ಗೆ ಪ್ರಶ್ನೆ ಮಾಡಿ, 79 ಸೀಟ್ ಮಾತ್ರ ಗೆದ್ದಿದ್ದು ಏಕೆ ಎಂದು ಮಾತ್ರ ಪ್ರಶ್ನಿಸಿದ್ದಾಗಿ ಸ್ಪಷ್ಟನೆ ನೀಡಿದರು.

  • ಖರ್ಗೆಗೆ ಸಿಎಂ ಹುದ್ದೆ ತಪ್ಪಿದ್ಯಾಕೆ ಎಂದು ಸಿದ್ದರಾಮಯ್ಯಗೆ ಕೇಳಿ: ವಿಶ್ವನಾಥ್

    ಖರ್ಗೆಗೆ ಸಿಎಂ ಹುದ್ದೆ ತಪ್ಪಿದ್ಯಾಕೆ ಎಂದು ಸಿದ್ದರಾಮಯ್ಯಗೆ ಕೇಳಿ: ವಿಶ್ವನಾಥ್

    ಬೆಂಗಳೂರು: ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಮುಖ್ಯಮಂತ್ರಿ ಹುದ್ದೆ ಯಾಕೆ ತಪ್ಪಿಸಲಾಯಿತು ಎನ್ನುವ ಪ್ರಶ್ನೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬಳಿಯೇ ಕೇಳಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿ ಮತ್ತೊಮ್ಮೆ ಕಾಲೆಳೆದಿದ್ದಾರೆ.

    ಎಚ್.ವಿಶ್ವನಾಥ್ ಅವರು ಇಂದು ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದರು. ಬಳಿಕ ಮಾತನಾಡಿದ ಅವರು, ಸಚಿವ ಎಚ್.ಡಿ.ರೇವಣ್ಣ ಸೇರಿ ಹಲವು ಜೆಡಿಎಸ್‍ನಲ್ಲಿ ಸಿಎಂ ಅರ್ಹತೆಯ ನಾಯಕರಿದ್ದಾರೆ ಎಂದು ಮಾಜಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಆದರೆ ಅವರ ಟ್ವೀಟ್ ಬಗ್ಗೆ ನನ್ನನ್ನು ಯಾಕೆ ಕೇಳುತ್ತೀರಿ? ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಸ್ಥಾನ ತಪ್ಪಿದ್ದು ಯಾಕೆ ಅಂತ ಅವರನ್ನೇ ವಿಚಾರಿಸಿ ಎಂದು ಹೇಳಿದರು.

    ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಯಾರನ್ನೂ ಹೋಲಿಸಬೇಡಿ. ಈ ರಾಜ್ಯಕ್ಕೆ ಅವರ ಕೊಡುಗೆ ಅಪಾರ. ಮಲ್ಲಿಕಾರ್ಜುನ ಖರ್ಗೆಯವರದ್ದು ಮುಖ್ಯಮಂತ್ರಿ ಸ್ಥಾನಕ್ಕಿಂತಲೂ ಮಿಗಿಲಾದ ವ್ಯಕ್ತಿತ್ವ. ಅವರ ಹೆಸರಿಗೆ ಬೇರೆ ಯಾರದ್ದೇ ಹೆಸರನ್ನು ಥಳುಕು ಹಾಕಬೇಡಿ ಎಂದು ತಿಳಿಸಿದರು.

  • ಒಳ್ಳೆಯ ಆಡಳಿತ ನೀಡಿದ್ರೆ ಯಾಕೆ 78ಕ್ಕೆ ಇಳಿಯಿತು – ಸಿದ್ದು ವಿರುದ್ಧ ಮತ್ತೆ ವಿಶ್ವನಾಥ್ ಗರಂ

    ಒಳ್ಳೆಯ ಆಡಳಿತ ನೀಡಿದ್ರೆ ಯಾಕೆ 78ಕ್ಕೆ ಇಳಿಯಿತು – ಸಿದ್ದು ವಿರುದ್ಧ ಮತ್ತೆ ವಿಶ್ವನಾಥ್ ಗರಂ

    ಮೈಸೂರು: ಕಾಂಗ್ರೆಸ್ ತನ್ನ ಅವಧಿಯಲ್ಲಿ ಒಳ್ಳೆಯ ಆಡಳಿತ ಕೊಟ್ಟಿದ್ದರೆ ಈ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ 120 ಇದ್ದ ಸಂಖ್ಯಾಬಲ ಈ ಬಾರಿಯ ಚುನಾವಣೆಯಲ್ಲಿ ಏಕೆ 78ಕ್ಕೆ ಇಳಿಯಿತು ಎಂದು ಪ್ರಶ್ನೆ ಮಾಡುವ ಮೂಲಕ ಮತ್ತೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

    ನಗರದಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎನ್ನುವ ಕಾಂಗ್ರೆಸ್ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

    ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿ ಎಂದು ಕೆಲ ಕಾಂಗ್ರೆಸ್ ನಾಯಕರು ಚಮಚಾ ಗಿರಿ ಮಾಡುತ್ತಿದ್ದಾರೆ ಅಷ್ಟೇ. ಸಿದ್ದರಾಮಯ್ಯ 5 ವರ್ಷ ತನ್ನ ಆಡಳಿತದಲ್ಲಿ ಏನ್ ಮಾಡಿದ್ದಾರೆ? ಒಳ್ಳೆಯ ಆಡಳಿತ ನೀಡಿದ ದೇವರಾಜ ಅರಸು ಅವರನ್ನು ಜನರು ಈಗಲೂ ನೆನಪಿಸಿಕೊಳ್ಳುತ್ತಾರೆ. ಸಿದ್ದರಾಮಯ್ಯ ಏನು ದೇವರಾಜ ಅರಸು ಅವರ ರೀತಿಯಲ್ಲಿ ಆಡಳಿತ ನಡೆಸಿದ್ದಾರ ಎಂದು ವಿಶ್ವನಾಥ್ ಪ್ರಶ್ನಿಸಿದ್ದಾರೆ.

    ಸಿದ್ದರಾಮಯ್ಯ ತನ್ನ ಅವಧಿಯಲ್ಲಿ ಆಡಳಿತ ಚೆನ್ನಾಗಿತ್ತು, ಐದು ವರ್ಷ ಪೂರೈಸಿದ ಸಿಎಂ ನಾನು ಎಂದು ಹೇಳುತ್ತಾರೆ. ಆಗದರೆ 130 ಇದ್ದ ಸಂಖ್ಯಾಬಲ 78ಕ್ಕೆ ಏಕೆ ಇಳಿಯಿತು? ಒಳ್ಳೆಯ ಅಡಳಿತ ನೀಡಿದ ಕಾಂಗ್ರೆಸ್ ಪಕ್ಷ ಏಕೆ ಅಧಿಕಾರ ಕಳೆದುಕೊಂಡಿತು. ಸಿದ್ದರಾಮಯ್ಯ ಬಾಯಿ ಚಪಲಕ್ಕೆ ಮತ್ತೆ ಸಿಎಂ ಆಗುತ್ತೇನೆ ಎಂದು ಹೇಳುತ್ತಾರೆ ಎಂದರು.

    ಇದೇ ವೇಳೆ ಸ್ಥಳೀಯ ಚುನಾವಣೆಯ ಬಗ್ಗೆ ಮಾತನಾಡಿದ ವಿಶ್ವನಾಥ್ ಅವರು, ಸ್ಥಳೀಯ ಚುನಾವಣೆಯಲ್ಲಿ ನಾವು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಈ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡರೆ ಸ್ಥಳೀಯ ಜೆಡಿಎಸ್ ನಾಯಕರಿಗೆ ಅವಕಾಶ ಸಿಗುವುದಿಲ್ಲ. ಹಾಗಾಗಿ ಸ್ಥಳೀಯ ಚುನಾವಣೆಯಲ್ಲಿ ಜೆಡಿಎಸ್ ಪ್ರತ್ಯೇಕವಾಗಿ ಸ್ಪರ್ಧೆ ಮಾಡಲಿದೆ ಎಂದು ಸ್ಪಷ್ಟಪಡಿಸಿದರು.

    ಸಿಎಂ ಕುಮಾರಸ್ವಾಮಿ ಅವರ ರೆಸಾರ್ಟ್ ವಾಸ್ತವ್ಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಅವರು ವಿಧಾನಸೌದದ ಬಾಗಿಲು ಹಾಕಿಕೊಂಡು ಬಂದಿದ್ದಾರಾ?. ಮಂತ್ರಿಗಳಿದ್ದಾರೆ, ಅಧಿಕಾರಿಗಳಿದ್ದಾರೆ ಕಾಲ ಕಾಲಕ್ಕೆ ಸಿಎಂ ಸಲಹೆ ಸೂಚನೆ ಸಭೆ ಮಾಡುತ್ತಿದ್ದಾರೆ. ಆಡಳಿತ ಚೆನ್ನಾಗಿ ನಡೆಯುತ್ತಿದೆ. ಆಡಳಿತ ವ್ಯವಸ್ಥೆಯಲ್ಲಿ ಎಲ್ಲೂ ಶೂನ್ಯ ವಾತಾವರಣ ಕ್ರಿಯೇಟ್ ಆಗಿಲ್ಲ. ಅವರಿಗೆ ಎಲ್ಲಿ ಮನಸ್ಸಿಗೆ ಸಮಾಧಾನ ಸಿಗುತ್ತದೆಯೋ ಅಲ್ಲಿಗೆ ಹೋಗೋದು ಕಾಮನ್ ಎಂದು ಸಮರ್ಥಿಸಿಕೊಂಡರು.

  • ಸರ್ಕಾರ ಬಿದ್ದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲ್ಲ: ಎಚ್.ವಿಶ್ವನಾಥ್

    ಸರ್ಕಾರ ಬಿದ್ದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲ್ಲ: ಎಚ್.ವಿಶ್ವನಾಥ್

    – ಜೆಡಿಎಸ್ ಬಿಜೆಪಿಯ ಬಿ ಟೀಂ ಅಂತ ಹೇಳಿದ್ದೇ ಸಿದ್ದರಾಮಯ್ಯ
    – ಸರ್ಕಾರ ಬಿದ್ದು ಹೋದರೂ ಏನು ಸಮಸ್ಯೆಯಿಲ್ಲ
    – ಸ್ಥಳೀಯ ಸಂಸ್ಥೆ ಚುನಾವಣೆ ಮೈತ್ರಿ ಇಲ್ಲ

    ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಬಿದ್ದರೆ, ಮಾಜಿ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ 79 ಸ್ಥಾನ ಹೊಂದಿದೆ. ಇದರಿಂದ ಏನು ಬದಲಾವಣೆ ಆಗುವುದಿಲ್ಲ. ಹೀಗಾಗಿ ಸರ್ಕಾರ ಬೀಳಿಸಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವುದು ಅಸಾಧ್ಯ. ಒಂದು ವೇಳೆ ಸರ್ಕಾರ ಬಿದ್ದು ಹೋದರೂ ಏನು ಸಮಸ್ಯೆ ಇಲ್ಲ. ಆಕಾಶ ಏನು ಬಿದ್ದು ಹೋಗುವುದಿಲ್ಲ. ಮೇ 23 ನಂತರ ಎಲ್ಲ ಬೆಳವಣಿಗೆಯೂ ತಿಳಿಯಲಿದೆ. ಮೈತ್ರಿ ಸರ್ಕಾರಕ್ಕೆ ಯಾವುದೇ ಸಮಸ್ಯೆ ಇಲ್ಲ. ಕುಮಾರಸ್ವಾಮಿ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ತಿಳಿಸಿದರು.

    ಸಿದ್ದರಾಮಯ್ಯ ಸಿಎಂ ಆಗಲು ಸದ್ಯ ಯಾವ ಮಾರ್ಗವೂ ಇಲ್ಲ. ಎಲ್ಲ ಸಮಾನ ಮನಸ್ಕರು ಸೇರಿದರೂ ಕಾಂಗ್ರೆಸ್‍ಗೆ 113 ಸೀಟು ಸಿಗಲ್ಲ. ಹೀಗಾಗಿ ತಕ್ಷಣಕ್ಕೆ ಸಿದ್ದರಾಮಯ್ಯ ಸಿಎಂ ಆಗಲು ಅವಕಾಶವಿಲ್ಲ ಎಂದರು.

    ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂಬ ಕೈ ಶಾಸಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯನವರಿಗೆ ಅನೇಕ ಮಾರ್ಗಗಳಿವೆ. ಈಗ ಎಚ್.ಡಿ.ಕುಮಾರಸ್ವಾಮಿಯವರು ಸಿಎಂ ಹುದ್ದೆಯಲ್ಲಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿ ಅಂತ ಕಾಂಗ್ರೆಸ್ ನಾಯಕರು ಹೇಳುವುದು ಸರಿಯಲ್ಲ ಎಂದು ಕಿಡಿಕಾರಿದರು.

    ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದೆ ಎಂಬ ಮಾಜಿ ಸಿಎಂ ಹೇಳಿಕೆ ಕಿಡಿಕಾರಿ ವಿಶ್ವನಾಥ್ ಅವರು, ಆ ಮಾತು ಸಿದ್ದರಾಮಯ್ಯನವರಿಗೆ ಅನ್ವಯಿಸುತ್ತದೆ. ಜೆಡಿಎಸ್ ಬಿಜೆಪಿಯ ಬಿ ಟೀಂ ಅಂತ ಹೇಳಿದ್ದು ಅವರೇ. ಜೆಡಿಎಸ್‍ಗೆ ವೋಟ್ ಹಾಕಿದರೆ ಅದು ಬಿಜೆಪಿಗೆ ಹಾಕಿದಂತೆ ಎಂದು ಪ್ರಚಾರ ಮಾಡಿದ್ದರು. ಈ ಹೇಳಿಕೆಯಿಂದಲೇ ಬಿಜೆಪಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತು. ಹೀಗಾಗಿ ಬಿಜೆಪಿಗೆ 104 ಸೀಟು ಬರಲು ಸಿದ್ದರಾಮಯ್ಯನವರೇ ಕಾರಣ ಎಂದು ತಿರುಗೇಟು ಕೊಟ್ಟರು.

    ಶ್ರೀನಿವಾಸ್ ಪ್ರಸಾದ್ ಭೇಟಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಉಭಯ ಕುಶಲೋಪರಿ ಮಾತನಾಡಲು ಸೇರಿದ್ದೇವು. ಯಾವುದೇ ಪಕ್ಷದಲ್ಲಿ ಇದ್ದರು ನಾವು 40 ವರ್ಷದ ಸ್ನೇಹಿತರು. ಹೀಗಾಗಿ ಭೇಟಿಯಾಗಿದ್ದೇವು. ಪರಸ್ಪರ ಆರೋಗ್ಯ ವಿಚಾರಣೆ ಮಾಡಿಕೊಳ್ಳಲು ಅವರ ಮನೆಗೆ ಹೋಗಿದ್ದೆ ಅಷ್ಟೇ. ಭೇಟಿಯಾದಾಗ ರಾಜಕೀಯ ಚರ್ಚೆ ಇರುತ್ತದೆ ಅದು ಸಹಜ. ಚಾಮರಾಜನಗರ ಲೋಕಸಭಾ ಕ್ಷೇತ್ರದ ಲೆಕ್ಕ ಹೇಗಿದೆ ಅಂತ ಕೇಳಿದೆ. ಅದಕ್ಕೆ ಉತ್ತರಿಸಿದ ಅವರು, ಈ ಬಾರಿ ಬದಲಾವಣೆ ಆಗುತ್ತದೆ ಅಂತ ಹೇಳಿದ್ದಾರೆ. ಈ ವಿಷಯ ಬಿಟ್ಟು ಬೇರೆ ಯಾವುದನ್ನೂ ಚರ್ಚೆ ಮಾಡಿಲ್ಲ ಎಂದು ಹೇಳಿದರು.

    ಮೈಸೂರಿನಲ್ಲಿ ಜೆಡಿಎಸ್‍ನವರು ಬಿಜೆಪಿಗೆ ಮತ ಹಾಕಿದ್ದಾರೆ ಎಂಬ ಸಚಿವ ಜಿ.ಟಿ.ದೇವೇಗೌಡ ಹೇಳಿಕೆ ಕುರಿತು ಮಾತನಾಡಿದ ಅವರು, ಈ ಬಾರಿ ಯಾರು ಯಾರಿಗೆ ಮತ ಹಾಕಿದರು ಅಂತ ಹೇಳುವುದಕ್ಕೆ ಆಗುತ್ತಿಲ್ಲ. ಈ ಬಾರಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗಿದೆ. ಮೇ 23ರ ನಂತರ ಎಲ್ಲಾ ಉತ್ತರ ಸಿಗುತ್ತದೆ. ಈಗ ಬರುತ್ತಿರುವ ಚರ್ಚೆಗಳು ಸುಮ್ಮನೆ ಎಂದರು.

    ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಮೈತ್ರಿ ಏನಿದ್ದರೂ ಲೋಕಸಭೆಗೆ ಮಾತ್ರ ಸೀಮಿತ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಹೋರಾಟ ಮಾಡಲಿದೆ. ಯಾರ ಜೊತೆಗೂ ದೋಸ್ತಿ ಇಲ್ಲ ಎಂದು ಸ್ಪಷ್ಟನೆ ನೀಡಿದರು.

    ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ರೆಸಾರ್ಟ್ ವಾಸದ ಬಗ್ಗೆ ಪ್ರತಿಕ್ರಿಯಿಸಿದ ಅವರು, ರೆಸಾರ್ಟ್ ನಲ್ಲಿಯೂ ದೇವಸ್ಥಾನಗಳಿವೆ. ಹಿರಣ್ಯಕಶಿಪು ಪ್ರಹ್ಲಾದನಿಗೆ ಈ ಕಂಬದಲ್ಲಿ ನಾರಾಯಣನಿದ್ದಾನೋ ಎಂದು ಕೇಳುತ್ತಾನೆ. ಎಲ್ಲೆಲ್ಲೂ ಇದ್ದಾನೆ ಎಂದು ಪ್ರಹ್ಲಾದ ಹೇಳುತ್ತಾನೆ. ಹಾಗೆಯೇ ರೆಸಾರ್ಟಿನ ಕಂಬ ಕಂಬದಲ್ಲೂ ದೇವರಿದ್ದಾನೆ ಎಂದು ಹೇಳಿ ನಗೆ ಬೀರಿದರು.

    ಬಿಜೆಪಿಯವರು ದೇವಸ್ಥಾನದ ಗಿರಾಕಿಗಳು. ಅವರು ಬೆಳಗ್ಗೆ, ಸಂಜೆ ದೇವಸ್ಥಾನಕ್ಕೆ ಹೋಗುತ್ತಾರೆ. ಸಿಎಂ ಕುಮಾರಸ್ವಾಮಿ ಅವರು ಆಗೊಮ್ಮೆ, ಇಗೊಮ್ಮೆ ಹೋಗುತ್ತಾರೆ ಅಷ್ಟೇ. ದೇವಸ್ಥಾನಕ್ಕೆ ಹೋಗುವುದು ತಪ್ಪಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಅವರ ಟೆಂಪಲ್ ರನ್ ಸಮರ್ಥನೆ ನೀಡಿದರು.

     

  • ದರ್ಶನ್ ಅಜ್ಞಾನಕ್ಕೆ ಏನು ಹೇಳಬೇಕೋ ಗೊತ್ತಿಲ್ಲ: ವಿಶ್ವನಾಥ್ ಟಾಂಗ್

    ದರ್ಶನ್ ಅಜ್ಞಾನಕ್ಕೆ ಏನು ಹೇಳಬೇಕೋ ಗೊತ್ತಿಲ್ಲ: ವಿಶ್ವನಾಥ್ ಟಾಂಗ್

    ಬೆಂಗಳೂರು: ನಟ ದರ್ಶನ್ ಅವರ ಅಜ್ಞಾನಕ್ಕೆ ಏನು ಹೇಳಬೇಕೋ ಗೊತ್ತಿಲ್ಲ. ಈಗಾಗಲೇ ಬೆಂಬಲ ಬೆಲೆ ಜಾರಿಯಲ್ಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಟಾಂಗ್ ಕೊಟ್ಟಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಬೆಂಬಲ ಬೆಲೆಯನ್ನು ಜಾರಿಗೊಳಿಸಲಾಗಿದೆ. ಅದನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂದು ದರ್ಶನ್ ಅವರು ಹೇಳಬೇಕು. ಅದನ್ನು ಬಿಟ್ಟು ಬೆಂಬಲ ಬೆಲೆ ಕೊಡಿ ಎನ್ನುವುದು ಸರಿಯಲ್ಲ ಎಂದು ಕಿಡಿಕಾರಿದರು. ಇದನ್ನು ಓದಿ: ಸಾಲಮನ್ನಾ ಆಗದೇ ಇದ್ರೆ ಬೆಂಬಲ ಬೆಲೆ ನೀಡಿ – ಸರ್ಕಾರಕ್ಕೆ ನಟ ದರ್ಶನ್ ಸವಾಲು

    ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ವಿಶ್ವನಾಥ್ ಅವರು, ಮೋಜು, ಮಸ್ತಿ ಮಾಡಲು ಯಾರೂ ಹೋಗಿಲ್ಲ. ಲೋಕಸಭಾ ಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿ ಅವರು ಮೂರು ತಿಂಗಳು ಸುತ್ತಾಡಿದ್ದಾರೆ. ಹೀಗಾಗಿ ಮೂರ್ನಾಲ್ಕು ದಿನ ವಿಶ್ರಾಂತಿ ಪಡೆಯುತ್ತಿದ್ದಾರೆ. ಇದಕ್ಕೆ ಏನೋನೋ ಅರ್ಥ ಕಲ್ಪಿಸುವುದು ಬೇಡ ಎಂದರು.

    ಕಾಂಗ್ರೆಸ್ ಶಾಸಕ ಎಸ್.ಟಿ.ಸೋಮಶೇಖರ್ ಅವರು ಬೇಕಾದ್ರೆ ಈಜಾಡ್ಲಿ. ಯಾರು ಬೇಡ ಅಂದೋರು. ಸುಮ್ಮನೆ ಕಮೆಂಟ್ ಮಾಡೋಕೆ ಅಂತ ಏನೇನೋ ಹೇಳಬಾರದು ಎಂದು ತಿರುಗೇಟು ನೀಡಿದರು.

    ಮಾಜಿ ಸಚಿವರ ರಮೇಶ್ ಜಾರಕಿಹೊಳಿ ಅವರಿಗೆ ಜೆಡಿಎಸ್‍ನಿಂದ ಸಚಿವ ಸ್ಥಾನ ಆಫರ್ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ಲೋಕಸಭಾ ಚುನಾವಣೆ ಫಲಿತಾಂಶ ಮೇ 23 ರಂದು ಬರುತ್ತದೆ. ಬಳಿಕ ಎಲ್ಲವೂ ಚರ್ಚೆಗೆ ಬರುತ್ತೆ ಹಾಗೂ ಸಂಪುಟ ವಿಸ್ತರಣೆಯೂ ಆಗಬಹುದು ಎಂದು ತಿಳಿಸಿದರು.

    ಮೈತ್ರಿ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ. ಗೊಂದಲ ಇರುವುದು ಜಾರಕಿಹೊಳಿ ಫ್ಯಾಮಿಲಿಯಲ್ಲಿ. ಅವರ ಮನೆಯಲ್ಲಿರುವ ಗೊಂದಲವನ್ನು ರಾಜ್ಯಕ್ಕೆ ಹಂಚುತ್ತಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಅವರ ನಡೆ ವಿರುದ್ಧ ಅಸಮಾಧಾನ ಹೊರಹಾಕಿದರು.