Tag: ಎಟಿಎಮ್

  • ಪೆಟ್ರೋಲ್ ಸಿಗುತ್ತಿಲ್ಲ, ಎಟಿಎಮ್‍ನಲ್ಲಿ ಹಣವಿಲ್ಲ – ಪಾಕ್ ದುಸ್ಥಿತಿ ಬಿಚ್ಚಿಟ್ಟ ಹಫೀಜ್

    ಪೆಟ್ರೋಲ್ ಸಿಗುತ್ತಿಲ್ಲ, ಎಟಿಎಮ್‍ನಲ್ಲಿ ಹಣವಿಲ್ಲ – ಪಾಕ್ ದುಸ್ಥಿತಿ ಬಿಚ್ಚಿಟ್ಟ ಹಫೀಜ್

    ಇಸ್ಲಾಮಾಬಾದ್: ಲಾಹೋರ್‌ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಮ್‍ನಲ್ಲಿ ಹಣವಿಲ್ಲ ಎಂದು ಪಾಕಿಸ್ತಾನದಲ್ಲಿರುವ ಸ್ಥಿತಿಗತಿಗಳ ಬಗ್ಗೆ ಮಾಜಿ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಟ್ವಿಟ್ಟರ್ ಮೂಲಕ ಕಿಡಿಕಾರಿದ್ದಾರೆ.

    PAK

    ಲಾಹೋರ್‌ನ ಯಾವುದೇ ಪೆಟ್ರೋಲ್ ಬಂಕ್‍ನಲ್ಲಿ ಪೆಟ್ರೋಲ್ ಲಭ್ಯವಿಲ್ಲವೇ? ಎಟಿಎಂ ಯಂತ್ರಗಳಲ್ಲಿ ನಗದು ಲಭ್ಯವಿಲ್ಲವೇ? ರಾಜಕೀಯ ಬಿಕ್ಕಟ್ಟಿನಿಂದಾಗಿ ಜನಸಾಮಾನ್ಯರೇಕೆ ನರಳಬೇಕು ಎಂದು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಪ್ರಸ್ತುತ ಪ್ರಧಾನಿ ಶಹಾಬಾಜ್‌ ಷರೀಫ್ ಸೇರಿದಂತೆ ಕೆಲ ರಾಜಕೀಯ ನಾಯಕರಿಗೆ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಗುಜರಾತ್‌ನ್ನು ಫೈನಲ್‍ಗೇರಿಸಿ ರಾಜಸ್ಥಾನ್ ಫ್ರಾಂಚೈಸ್‍ಗೆ Sorry ಕೇಳಿದ ಮಿಲ್ಲರ್

    ಹಫೀಜ್ ಈ ಹಿಂದೆ ಪಾಕಿಸ್ತಾನ ಕ್ರಿಕೆಟ್ ನಿಯಂತ್ರಣ ಮಂಡಳಿಯ ನಿರ್ಧಾರಗಳ ಬಗ್ಗೆ ಕೂಡ ಚಕಾರ ಎತ್ತಿದ್ದರು. ಇದೀಗ ಸರ್ಕಾರದಿಂದ ಜನಸಾಮಾನ್ಯರಿಗೆ ಆಗುತ್ತಿರುವ ಸಮಸ್ಯೆಯ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಆರ್‌ಸಿಬಿ ಏಕೆ ಕಪ್ ಗೆದ್ದಿಲ್ಲ? – ಕೊಹ್ಲಿ ವಿರುದ್ಧ ಸೆಹ್ವಾಗ್ ಮಹತ್ವದ ಹೇಳಿಕೆ

    ಹಫೀಜ್ 2020ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದರು. ಮೂರು ಮಾದರಿ ಕ್ರಿಕೆಟ್‍ನಲ್ಲಿ ಹಫೀಜ್, ಪಾಕ್ ಪರ 12,000ಕ್ಕೂ ಅಧಿಕ ರನ್ ಮತ್ತು 250ಕ್ಕೂ ಹೆಚ್ಚು ವಿಕೆಟ್ ಪಡೆದು ಯಶಸ್ವಿ ಆಲ್‍ರೌಂಡರ್ ಎನಿಸಿಕೊಂಡಿದ್ದರು.

  • ಎಟಿಎಂ ಒಳಗೆ ಮಹಿಳೆಯ ಮೇಲೆ ಗ್ಯಾಂಗ್‍ರೇಪ್

    ಎಟಿಎಂ ಒಳಗೆ ಮಹಿಳೆಯ ಮೇಲೆ ಗ್ಯಾಂಗ್‍ರೇಪ್

    ಭುವನೇಶ್ವರ: ಇಬ್ಬರು ಕಾಮುಕರು ಎಟಿಎಂ ಒಳಗೆ ಮಹಿಳೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಒಡಿಶಾದ ಕಟಕ್ ನಲ್ಲಿ ನಡೆದಿದೆ.

    ಕಟಕ್ ನಗರದ ಪಿಲ್‍ಗ್ರೀಮ್ ರಸ್ತೆಯ ಎಟಿಎಂ ನಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತೆಯನ್ನು ಎಟಿಎಂ ಕೌಂಟರ್ ಒಳಗೆ ಆರೋಪಿಗಳಿಬ್ಬರು ಅಪಹರಿಸಿ ಬಳಿಕ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಅತ್ಯಾಚಾರ ಬಳಿಕ ಹೊರಗೆ ತಳ್ಳಿ ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

    ಸ್ಥಳೀಯರು ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯನ್ನು ನೋಡಿ ತಕ್ಷಣ ಮಾಲ್ಗೋಡೌನ್ ಪೊಲೀಸರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಸಂತ್ರಸ್ತೆಯನ್ನು ರಕ್ಷಣೆ ಮಾಡಿದ್ದು, ವೈದ್ಯಕೀಯ ಪರೀಕ್ಷೆ ಮತ್ತು ಚಿಕಿತ್ಸೆಗಾಗಿ ಸಮೀಪದ ಎಸ್‍ಸಿಬಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಸಂತ್ರಸ್ತೆ ಹೇಳಿಕೆಯ ಮೇರೆಗೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಈ ಘಟನೆ ಸಂಬಂಧಿಸಿದಂತೆ ಎಟಿಎಂನ ಭದ್ರತಾ ಸಿಬ್ಬಂದಿ ಮತ್ತು ಆರೋಪಿಗಳ ಸ್ನೇಹಿತರಲ್ಲಿ ಒಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ರಾಡ್ ನಿಂದ ATM ಲಾಕರ್ ಒಡೆದು 14.96 ಲಕ್ಷ ರೂ. ದರೋಡೆ

    ರಾಡ್ ನಿಂದ ATM ಲಾಕರ್ ಒಡೆದು 14.96 ಲಕ್ಷ ರೂ. ದರೋಡೆ

    ಕಲಬುರಗಿ: ಎಟಿಎಂ ಲಾಕರ್ ಒಡೆದು 14.96 ಲಕ್ಷ ರೂ. ದರೋಡೆ ಮಾಡಿದ ಘಟನೆ ಜಿಲ್ಲೆಯ ಚಿತ್ತಾಪುರದ ಕುಂಬಾರಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಇಂಡಿಯಾ ಓನ್ ಸಂಸ್ಥೆಗೆ ಸೇರಿದ ಎಟಿಎಂನಲ್ಲಿ ಕಳ್ಳರು ದರೋಡೆ ಮಾಡಿದ್ದಾರೆ. ಈ ಘಟನೆ ಭಾನುವಾರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಳ್ಳರು ರಾಡ್ ನಿಂದ ಲಾಕರ್ ಒಡೆದು ಕಳ್ಳತನ ನಡೆಸಿದ್ದಾರೆ.

    ನಾಲ್ಕು ಜನರ ತಂಡದ ಈ ದುಷ್ಕೃತ್ಯ ಎಸಗಿದ್ದು, ಸಿಸಿಟಿವಿ ಕ್ಯಾಮರದಲ್ಲಿ ಕಳ್ಳತನದ ದೃಶ್ಯ ರೆಕಾರ್ಡ್ ಆಗಿದೆ. ಸದ್ಯ ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

  • ಎಂಜಿನಿಯರ್ ವೇಷದಲ್ಲಿ ಬಂದು ಎಟಿಎಂ ನಲ್ಲಿ 18 ಲಕ್ಷ ರೂ. ಕದ್ದ

    ಎಂಜಿನಿಯರ್ ವೇಷದಲ್ಲಿ ಬಂದು ಎಟಿಎಂ ನಲ್ಲಿ 18 ಲಕ್ಷ ರೂ. ಕದ್ದ

    ಲಕ್ನೋ: ಖದೀಮನೊಬ್ಬ ತಾನು ಎಂಜಿನಿಯರ್ ಎಂದು ಹೇಳಿಕೊಂಡು ಎಟಿಎಂ ನಲ್ಲಿ 18 ಲಕ್ಷ ರೂ. ಗಿಂತ ಹೆಚ್ಚು ಹಣವನ್ನು ಕಳ್ಳತನ ಮಾಡಿರುವ ಘಟನೆ ಉತ್ತರಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿನ ಇಂಡಿಯನ್ ಓವರ್‍ಸೀಸ್ ಬ್ಯಾಂಕ್ ಶಾಖೆಯ ಎಟಿಎಂ ನಲ್ಲಿ ನಡೆದಿದೆ.

    ಸಾದರ ಪೊಲೀಸ್ ಠಾಣೆಯ ಎಸ್‍ಎಚ್‍ಒ ಅವನಿತ್ ಗೌತಮ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, ಎಟಿಎಂ ರಿಪೇರಿಗೆಂದು ಮಂಗಳವಾರದಂದು ಬ್ಯಾಂಕ್ ಗೆ ಎಂಜಿನಿಯರ್ ವೇಷದಲ್ಲಿ ವ್ಯಕ್ತಿಯೊಬ್ಬ ಬಂದಿದ್ದ. ಅವನು ಬ್ಯಾಂಕ್ ನ ಸ್ಟ್ರಾಂಗ್ ರೂಮ್ ಗೆ ಹೋಗಿ ಎಟಿಎಮ್ ನ ಸೀಕ್ರೆಟ್ ಪಾಸ್‍ವರ್ಡ್ ಬಳಸಿ ಅಲ್ಲಿದ್ದ 18.37 ಲಕ್ಷ ರೂ. ತೆಗೆದುಕೊಂಡು ಹೋಗಿದ್ದಾನೆ. ಬಳಿಕ ಗ್ರಾಹಕರು ಎಟಿಎಮ್ ನಲ್ಲಿ ಹಣವಿಲ್ಲವೆಂದು ಹೇಳಿದಾಗ ಹಣ ಕಳ್ಳತನವಾಗಿರೋದು ಬೆಳಕಿಗೆ ಬಂದಿದೆ ಎಂದು ಬ್ಯಾಂಕ್ ಸಿಬ್ಬಂದಿ ಹೇಳಿದ್ದಾರೆಂದು ತಿಳಿಸಿದರು.

     

    ಈ ಬಗ್ಗೆ ವಿಷಯ ತಿಳಿದ ಪೊಲೀಸರು ಸಿಸಿಟಿವಿ ದೃಶ್ಯಗಳನ್ನ ಪರಿಶೀಲಿಸಿದ್ದು, ಬ್ಯಾಂಕ್ ಸಿಬ್ಬಂದಿಗಳನ್ನು ವಿಚಾರಣೆ ನಡೆಸಿದ್ದಾರೆ. ಕಳ್ಳನ ಪತ್ತೆಗಾಗಿ ಬಲೆ ಬೀಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.