ಕಾರವಾರ: ಶಂಕಿತ ಉಗ್ರನ ಪತ್ತೆಗಾಗಿ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ (ATS) ದಳದ ಅಧಿಕಾರಿಗಳು ಆತನ ಮನೆಗೆ ನೋಟಿಸ್ ಅಂಟಿಸಿ ಶೋಧ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ (Bhatkal) ನಡೆದಿದೆ.
ಪುಣೆಯಲ್ಲಿ ನಡೆದ ಉಗ್ರ ಕೃತ್ಯ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದಾನೆ. ಕಳೆದ ಒಂದು ವರ್ಷದಿಂದ ನಾಪತ್ತೆಯಾಗಿರುವ ಈತ ಸಿರಿಯಾ (Syria) ಅಥವಾ ಅಫ್ಘಾನಿಸ್ತಾನದಲ್ಲಿ ಅಮೆರಿಕ (USA) ಬಾಂಬ್ ಸ್ಫೋಟದಲ್ಲಿ ಮೃತನಾಗಿರುವ ಬಗ್ಗೆ ಅಮೇರಿಕದ ಮಾಧ್ಯಮದಲ್ಲಿ ಸುದ್ದಿ ಪ್ರಕಟವಾಗಿತ್ತು. ಆದರೆ ಈತನ ಸಾವಿಗೆ ಯಾವುದೇ ಪುರಾವೆಗಳು ಭಾರತಕ್ಕೆ ಸಿಕ್ಕಿರಲಿಲ್ಲ.
ಈಗ ಮಹಾರಾಷ್ಟ್ರ ಕೋರ್ಟ್‌ನಿಂದ ಬಂಧಿಸಲು ಅನುಮತಿ ಸಿಕ್ಕಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಪೊಲೀಸರ ಸಹಾಯ ಕೇಳಿದ್ದಾರೆ. ಒಂದು ವೇಳೆ ಮೃತಪಟ್ಟಿದ್ದರೆ ಕುಟುಂಬದವರು ಮಾಹಿತಿ ನೀಡುವ ಸಲವಾಗಿ ನೋಟಿಸ್ ಅಂಟಿಸಿದ್ದಾರೆ.
ಈತನ ಬಗ್ಗೆ ಕುಟುಂಬದವರು ಸಹ ಯಾವುದೇ ಮಾಹಿತಿ ನೀಡಿಲ್ಲ ಎಂಬ ವಿಚಾರ ಪೊಲೀಸರಿಂದ ತಿಳಿದುಬಂದಿದೆ.
ಮುಂಬೈ: 2008ರ ಮುಂಬೈ ದಾಳಿಯ (Mumbai Attack) ಸಂದರ್ಭದಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳದ (ATS) ಮಾಜಿ ಮುಖ್ಯಸ್ಥ ಹೇಮಂತ್ ಕರ್ಕರೆ (Hemant Karkare) ಅವರನ್ನು ಪಾಕಿಸ್ತಾನಿ ಭಯೋತ್ಪಾದಕರು ಹತ್ಯೆ ಮಾಡಿಲ್ಲ ಎಂದು ಮಹಾರಾಷ್ಟ್ರ ವಿಧಾನಸಭೆಯ ಪ್ರತಿಪಕ್ಷದ ನಾಯಕ ವಿಜಯ್ ವಾಡೆತ್ತಿವಾರ್ (Vijay Wadettiwar) ಹೊಸ ಬಾಂಬ್ ಸಿಡಿಸಿದ್ದಾರೆ.
ಆರ್‌ಎಸ್‌ಎಸ್‌ಗೆ ಹತ್ತಿರ ಇರುವ ಪೊಲೀಸ್ ಅಧಿಕಾರಿಯೊಬ್ಬರು ಹಾರಿಸಿದ ಗುಂಡಿಗೆ ಕರ್ಕರೆ ಬಲಿಯಾಗಿದ್ದಾರೆ. ಪ್ರಸ್ತುತ ಮುಂಬೈ ಉತ್ತರ ಕೇಂದ್ರ ಕ್ಷೇತ್ರದ ಬಿಜೆಪಿ ಲೋಕಸಭಾ ಅಭ್ಯರ್ಥಿಯಾಗಿರುವ ವಕೀಲ ಉಜ್ವಲ್ ನಿಕಮ್ ಅವರು ಆರೋಪಿಗಳನ್ನು ರಕ್ಷಿಸಲು ಸಾಕ್ಷ್ಯವನ್ನು ಮುಚ್ಚಿಟ್ಟಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ.
Like the Batla House encounter, Congress leader and LoP in Maharashtra Assembly, Vijay Namdevrao Wadettiwar says, “Hemant Karkare was not killed by bullets of terrorists, like Ajmal Kasab, but by a cop close to the RSS.” This is shocking and demeaning those who laid down their… pic.twitter.com/v8QjxsRXW2
26/11 ದಾಳಿಯಲ್ಲಿ ಮಡಿದ ಐಪಿಎಸ್ ಅಧಿಕಾರಿ ಹೇಮಂತ್ ಕರ್ಕರೆ ಅವರಿಗೆ ಮರಣೋತ್ತರವಾಗಿ 2009 ರಲ್ಲಿ ಭಾರತದ ಅತ್ಯುನ್ನತ ಶೌರ್ಯ ಪ್ರಶಸ್ತಿಯಾದ ಅಶೋಕ ಚಕ್ರವನ್ನು ನೀಡಲಾಯಿತು.
ಬಿಜೆಪಿ ಟೀಕೆ:
ಇದು ಆಘಾತಕಾರಿ. ಕೇವಲ ಒಂದು ಸಮುದಾಯವನ್ನು ಓಲೈಸಲು, ಮತಕ್ಕಾಗಿ ಭಾರತದ ಮೇಲೆ ಅತ್ಯಂತ ಭೀಕರವಾದ ಭಯೋತ್ಪಾದಕ ದಾಳಿ ಮಾಡಿದವರ ವಿರುದ್ಧ ಹೋರಾಡಿ ತಮ್ಮ ಪ್ರಾಣವನ್ನು ಅರ್ಪಿಸಿದವರಿಗೆ ಮಾಡುವ ಅವಮಾನ. ಈ ವಾದವನ್ನೇ ಪಾಕಿಸ್ತಾನ ಮುಂದಿಡಲಿದೆ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರು: ವೈಟ್ ಫೀಲ್ಡ್ ಬಳಿ ಬ್ರೂಕ್ ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿದ್ದು, (Rameshwaram Cafe Blast) ಘಟನಾ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar), ಗೃಹಸಚಿವ ಜಿ.ಪರಮೇಶ್ವರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಲ್ಲದೇ ಅಧಿಕಾರಿಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಸಿಸಿಬಿ ಪೊಲೀಸರು (CCB Police) ಬಾಂಬ್ ಇಟ್ಟ ಆರೋಪಿ ಬಗ್ಗೆ ಮಾಹಿತಿ ಕಲೆ ಹಾಕೋದಕ್ಕೆ ಶುರು ಮಾಡಿದ್ದಾರೆ. ಆರೋಪಿ ಯಾರು ಏನು ಎಂಬುದು ಬಹುತೇಕ ಗೊತ್ತಾಗಿದೆ. ಆರೋಪಿ ಬಸ್‌ನಲ್ಲಿ ಬಂದು, ಹೋಟೆಲ್‌ನಲ್ಲಿ ರವೆ ಇಡ್ಲಿ ತಿಂದು ಆಮೇಲೆ ಬಾಂಬ್ ಇಟ್ಟು ಹೋಗಿದ್ದಾನೆ. ಬರುವಾಗ ಮಾಸ್ಕ್ ಧರಿಸಿ ಬಂದಿದ್ದಾನೆ ಎಂದು ತಿಳಿಸಿದ್ದಾರೆ. ಅಲ್ಲದೇ ಆರೋಪಿಗೆ ಸುಮಾರು 35 ವರ್ಷ ವಯಸ್ಸಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ.
ಬಾಂಬ್ ಬ್ಲಾಸ್ಟ್ ಟೈಮಿಂಗ್
11:35 – ಹೋಟೆಲ್‌ಗೆ ಬಾಂಬರ್ ಆಗಮನ
11:35 – ಕ್ಯಾಶ್ ಕೌಂಟರ್ ಅಲ್ಲಿ ರವೆ ಇಡ್ಲಿ ಟೋಕನ್ ಖರೀದಿ
11:42 – ಇಡ್ಲಿ ತಿಂದು ಕೈ ತೊಳೆಯುವ ಜಾಗಕ್ಕೆ ಬಂದ ವ್ಯಕ್ತಿ
11:44 – ಕೈತೊಳೆಯುವ ಜಾಗದಲ್ಲೇ ಬ್ಯಾಗ್ ಇರಿಸಿ ಪರಾರಿ
12:55 – ಬಾಂಬ್ ಸ್ಫೋಟ
ಹೋಟೆಲ್‌ನಲ್ಲಿ ಬ್ಯಾಗ್ ಇಟ್ಟು ಹೋದ 1 ಗಂಟೆ ಬಳಿಕ ಬಾಂಬ್ ಬ್ಲಾಸ್ಟ್ ಆಗಿದೆ. ಘಟನಾ ಸ್ಥಳದಲ್ಲಿ ಟೈಮರ್ ಸಹ ಪತ್ತೆಯಾಗಿದೆ. ವ್ಯಕ್ತಿಯ ಎಲ್ಲಾ ಚಟುವಟಿಕೆಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಶೀಘ್ರದಲ್ಲೇ ಸಿಕ್ಕಿಬಿಳುತ್ತಾನೆ ಎಂದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಐದನೇ ಬಾರಿಗೆ ಬೆಂಗಳೂರಿನಲ್ಲಿ ಬಾಂಬ್ ಸ್ಟೋಟ: ಹಿಂದೆ ಎಲ್ಲೆಲ್ಲಿ ಸಂಭವಿಸಿತ್ತು?
ಘಟನೆ ಕುರಿತು ಮಾಹಿತಿ ಪಡೆದಿದ್ದೇನೆ. ಸಮಗ್ರ ತನಿಖೆ ನಡೆಸಲು 8 ಪೊಲೀಸ್ ಅಧಿಕಾರಿಗಳ ವಿಶೇಷ ತಂಡ ರಚಿಸಲಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯ ತಂಡ, ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸುತ್ತಿದೆ. ಶೀಘ್ರದಲ್ಲೇ ಪೊಲೀಸರು ಆರೋಪಿಗೆ ಹೆಡೆಮುರಿ ಕಟ್ಟುತ್ತಾರೆ ಎಂದು ಹೇಳಿದ್ದಾರೆ.
– ಟೋಕನ್ ಪಡೆದು ತಿಂಡಿ ತಿಂದ ವ್ಯಕ್ತಿ ಬ್ಯಾಗ್ ಇಟ್ಟು ಬಂದಿದ್ದಾನೆ – ಸಿದ್ದರಾಮಯ್ಯ
ಬೆಂಗಳೂರು: ವೈಟ್ ಫೀಲ್ಡ್ ಬಳಿ ಬ್ರೂಕ್ ಫೀಲ್ಡ್‌ನ ರಾಮೇಶ್ವರ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ (Rameshwaram Cafe Blast) ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಸ್ಪೋಟದ ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಖಚಿತವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು.
ಪ್ರಾಥಮಿಕ ತನಿಖೆಯಲ್ಲಿ ಸಣ್ಣ ಪ್ರಮಾಣದ ಸುಧಾರಿತ ಸ್ಪೋಟಕವಾಗಿದೆ ಎಂದು ತಿಳಿದುಬಂದಿದೆ, ಪೂರ್ಣ ವರದಿ ಬಂದ ನಂತರ ಇನ್ನಷ್ಟು ಮಾಹಿತಿ ಸಿಗಲಿದೆ.
ಈ ಕುರಿತು ಸೋಷಿಯಲ್ ಮೀಡಿಯಾ X ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಸ್ಪೋಟದ ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಖಚಿತವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪ್ರಾಥಮಿಕ ತನಿಖೆಯಲ್ಲಿ ಸಣ್ಣ ಪ್ರಮಾಣದ ಸುಧಾರಿತ ಸ್ಫೋಟಕವಾಗಿದೆ ಎಂದು ತಿಳಿದುಬಂದಿದೆ, ಪೂರ್ಣ ವರದಿ ಬಂದ ನಂತರ ಇನ್ನಷ್ಟು ಮಾಹಿತಿ ಸಿಗಲಿದೆ.
ಕ್ಯಾಶಿಯರ್ ಬಳಿ ಟೋಕನ್ ಪಡೆದು ಅಲ್ಲಿ ತಿಂಡಿ ತಿಂದಿರುವ ವ್ಯಕ್ತಿ, ಬ್ಯಾಗ್ ಇಟ್ಟು ಬಂದಿದ್ದಾನೆ ಎಂಬ ಮಾಹಿತಿ ದೊರೆತಿದೆ. ಘಟನೆಯಲ್ಲಿ ಸುಮಾರು ಎಂಟು ಜನರಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಸಿಟಿವಿ ಕ್ಯಾಮರಾ ಪರೀಕ್ಷಿಸಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು ಗೃಹ ಸಚಿವರಿಗೆ ಸ್ಥಳಕ್ಕೆ ಭೇಟಿ ನೀಡುವಂತೆ ತಿಳಿಸಲಾಗಿದೆ. ಇನ್ನು ಸ್ವಲ್ಪ ಹೊತ್ತಿನಲ್ಲಿಯೇ ಸ್ಪಷ್ಟ ಮಾಹಿತಿ ದೊರೆಯಲಿದೆ.
ರಾಜ್ಯದಲ್ಲಿ ಇಂಥ ಘಟನೆ ನಡೆಯಬಾರದಿತ್ತು. ಮಂಗಳೂರಿನಲ್ಲಿ ಆಗಿದ್ದು ಬಿಟ್ಟರೆ ಪುನಃ ಅಂತಹ ಘಟನೆ ಸಂಭವಿಸಿದೆ. ಯಾರು ಇದನ್ನು ಮಾಡಿದ್ದಾರೆ ಎಂದು ಪತ್ತೆ ಹಚ್ಚಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ವಿರೋಧ ಪಕ್ಷಗಳು ಇಂತಹ ವಿಷಯದಲ್ಲಿ ರಾಜಕಾರಣ ಮಾಡಬಾರದು. ಎಲ್ಲರೂ ಈಗ ಸರ್ಕಾರದ ಜೊತೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಡಿಜಿಪಿ ಅಲೋಕ್ ಮೋಹನ್ ಹೇಳಿದ್ದೇನು?
ವೈಟ್‌ಫೀಲ್ಡ್ ಬಳಿಯ ಬ್ರೂಕ್‌ಫೀಲ್ಡ್ ಕುಂದಲನಹಳ್ಳಿ ಮುಖ್ಯರಸ್ತೆಯಲ್ಲಿರುವ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟವಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಕೆಲ ಅನುಮಾನಾಸ್ಪದ ವಸ್ತುಗಳು ಸ್ಥಳದಲ್ಲಿ ಪತ್ತೆಯಾಗಿವೆ. ಶುಕ್ರವಾರ ಮಧ್ಯಾಹ್ನ ಸುಮಾರು 1 ಗಂಟೆಗೆ ಬಾಂಬ್ ಸ್ಫೋಟಗೊಂಡಿದೆ. ವಿಧಿ ವಿಜ್ಞಾನ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್ ಅವರು ಮಾಹಿತಿ ಪಡೆದಿದ್ದಾರೆ. ಎಫ್‌ಎಸ್‌ಎಲ್ ತಂಡದ ಪರಿಶೀಲನೆ ಬಳಿಕಪೂರ್ಣ ಮಾಹಿತಿ ನೀಡುತ್ತೇವೆ ಎಂದು ಡಿಜಿಪಿ ಅಲೋಕ್ ಮೋಹನ್ ಹೇಳಿದ್ದಾರೆ.
ರಾಮೇಶ್ವರ ಕೆಫೆ ಎಂ.ಡಿ. ಸ್ಫೋಟಕ ಮಾಹಿತಿ:
ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದ ಸಿಸಿಟಿವಿ ದೃಶ್ಯಗಳನ್ನು ಗಮನಿಸಿದ್ದೇನೆ. 10 ಸೆಕೆಂಡುಗಳಲ್ಲಿ ಎರಡು ಬಾರಿ ಸ್ಫೋಟ ಸಂಭವಿಸಿದೆ. ಕೈತೊಳೆಯುವ ಜಾಗದಲ್ಲಿ ಸ್ಫೋಟ ಸಂಭವಿಸಿದೆ. ಅಲ್ಲಿ ಯಾವುದೇ ಸಿಲಿಂಡರ್ ಇಟ್ಟಿರಲಿಲ್ಲ. ಅಲ್ಲದೇ ಕೆಫೆಯಲ್ಲಿಟ್ಟಿದ್ದ ಸಿಲಿಂಡರ್‌ಗಳು ಸೇಫ್ ಆಗಿದೆ. ಸ್ಫೋಟ ಸಂಭವಿಸಿದ ಜಾಗದಲ್ಲಿ ಉದ್ಯೋಗಿಯೊಬ್ಬರ ಐಡಿ ಕಾರ್ಡ್ ಪತ್ತೆಯಾಗಿದೆ. ಬ್ಯಾಟರಿ ಬೋಲ್ಟ್‌ಗಳು ಸಿಕ್ಕಿರೋದನ್ನ ಗಮನಿಸಿದ್ದೇನೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯುತ್ತಿದ್ದೇನೆ ಎಂದು ರಾಮೇಶ್ವರ ಕೆಫೆ ವ್ಯವಸ್ಥಾಪಕ ನಿರ್ದೇಶಕಿ ದಿವ್ಯಾ ಹೇಳಿದ್ದಾರೆ.
ಬೆಂಗಳೂರು: ವೈಟ್ ಫೀಲ್ಡ್ ಬಳಿ ಬ್ರೂಕ್ ಫೀಲ್ಡ್‌ನ ರಾಮೇಶ್ವರ ಕೆಫೆಯಲ್ಲಿ ಬಾಂಬ್ ಸ್ಫೋಟ (Rameshwaram Cafe Blast) ಸಂಭವಿಸಿದ್ದು, ಎದೆ ಝಲ್ ಎನಿಸುವ ಸಿಸಿಟಿವಿ ದೃಶ್ಯಗಳು ಬೆಳಕಿಗೆ ಬಂದಿದೆ.
ಬ್ಲಾಸ್ಟ್ ಸಂಭವಿಸೋದಕ್ಕೆ ಕೆಲವೇ ಕ್ಷಣಗಳಿಗೂ ಮುನ್ನ ಹೋಟೆಲಿನಲ್ಲಿ ಕೆಲವರು ಕ್ಯಾಶ್ ಕೌಂಟರ್ ಬಳಿ ಇದ್ದರೆ, ಇನ್ನು ಕೆಲವರು ಉಪಾಹಾರ ತೆಗೆದುಕೊಳ್ಳಲು ನಿಂತಿದ್ದರು. ಒಂದಷ್ಟು ಮಂದಿ ಊಟ ಮುಗಿಸಿ ಕೈತೊಳೆಯುವ ಜಾಗಕ್ಕೆ ತೆರಳುತ್ತಿದ್ದರು. ಈವೇಳೆ ಯಾರ ಊಹೆಗೂ ಮೀರಿದಂತೆ ಬಾಂಬ್ ಸ್ಫೋಟ ಸಂಭವಿಸಿದೆ. ಮಧ್ಯಾಹ್ನ 12:55ಕ್ಕೆ ಬಾಂಬ್ ಸ್ಫೋಟ ಸಂಭವಿಸಿದ್ದು, ಸ್ಫೋಟವಾಗುತ್ತಿದ್ದಂತೆ ದಟ್ಟ ಹೊಗೆ ಆವರಿಸಿದೆ. ಗ್ರಾಹಕರು ಮತ್ತು ಸಿಬ್ಬಂದಿ ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ.
ಸ್ಟೋಟದ ಭಯಾನಕ ದೃಶ್ಯಗಳು ಹೋಟೇಲ್ ಒಳಗಡೆ ಅಳವಡಿಸಿದ್ದ ಎರಡು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ದೃಶ್ಯಗಳನ್ನು `ಪಬ್ಲಿಕ್ ಟಿವಿ’ ಹಂಚಿಕೊಂಡಿದೆ. 10 ಸೆಕೆಂಡುಗಳಲ್ಲಿ ಎರಡು ಸ್ಫೋಟ ಸಂಭವಿಸಿದೆ. ಈ ವೇಳೆ ಕೆಲವರಿಗೆ ಕಣ್ಣು-ತಲೆಯ ಭಾಗಕ್ಕೆ ಪೆಟ್ಟಾಗಿದೆ. ಯುವತಿಯೊಬ್ಬಳ ಬಟ್ಟೆ ಸುಟ್ಟುಹೋಗಿದೆ. ಸ್ಫೋಟದ ತೀವ್ರತೆಗೆ ನಡುಗಿದ ಗ್ರಾಹಕರು ಗಾಯಾಳುಗಳನ್ನು ಎತ್ತಿಕೊಂಡು ಆಸ್ಪತ್ರೆಗೆ ದೌಡಾಯಿಸಿದ್ದಾರೆ.
ರಾಮೇಶ್ವರ ಕೆಫೆ ಎಂ.ಡಿ. ಸ್ಫೋಟಕ ಮಾಹಿತಿ:
ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದ ಸಿಸಿಟಿವಿ ದೃಶ್ಯಗಳನ್ನು ಗಮನಿಸಿದ್ದೇನೆ. 10 ಸೆಕೆಂಡುಗಳಲ್ಲಿ ಎರಡು ಬಾರಿ ಸ್ಫೋಟ ಸಂಭವಿಸಿದೆ. ಕೈತೊಳೆಯುವ ಜಾಗದಲ್ಲಿ ಸ್ಫೋಟ ಸಂಭವಿಸಿದೆ. ಅಲ್ಲಿ ಯಾವುದೇ ಸಿಲಿಂಡರ್ ಇಟ್ಟಿರಲಿಲ್ಲ. ಅಲ್ಲದೇ ಕೆಫೆಯಲ್ಲಿಟ್ಟಿದ್ದ ಸಿಲಿಂಡರ್‌ಗಳು ಸೇಫ್ ಆಗಿದೆ. ಸ್ಫೋಟ ಸಂಭವಿಸಿದ ಜಾಗದಲ್ಲಿ ಉದ್ಯೋಗಿಯೊಬ್ಬರ ಐಡಿ ಕಾರ್ಡ್ ಪತ್ತೆಯಾಗಿದೆ. ಬ್ಯಾಟರಿ ಬೋಲ್ಟ್‌ಗಳು ಸಿಕ್ಕಿರೋದನ್ನ ಗಮನಿಸಿದ್ದೇನೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯುತ್ತಿದ್ದೇನೆ ಎಂದು ರಾಮೇಶ್ವರ ಕೆಫೆ ವ್ಯವಸ್ಥಾಪಕ ನಿರ್ದೇಶಕಿ ದಿವ್ಯಾ ಹೇಳಿದ್ದಾರೆ.
ನಮಗೆ ಸಿಕ್ಕ ಮಾಹಿತಿ ಪ್ರಕಾರ, ಯಾರೋ ಗ್ರಾಹಕರ ರೀತಿ ಬಂದು ಬ್ಯಾಗ್ ಇಟ್ಟು ಹೋಗಿದ್ದಾರೆ. ಆ ಬ್ಯಾಗ್‌ನಿಂದ ಬ್ಲಾಸ್ಟ್ ಆಗಿದೆ. ಆತ ಬಂದು ಹೋಗಿರುವ ನಿಖರವಾದ ಸಮಯದ ಬಗ್ಗೆ ಮಾಹಿತಿ ಇಲ್ಲ. ಸಿಸಿಟಿವಿ ದೃಶ್ಯಗಳನ್ನು ಪೊಲೀಸರಿಗೆ ಕೊಟ್ಟಿದ್ದೇವೆ ಎಂದು ತಿಳಿಸಿದ್ದಾರೆ.
ಒಟ್ಟು 150ಕ್ಕೂ ಹೆಚ್ಚು ಸಿಬ್ಬಂದಿ ಕೆಲಸ ಮಾಡ್ತಿದ್ದಾರೆ. ಘಟನೆಯಲ್ಲಿ ಮೂವರು ಸಿಬ್ಬಂದಿ ಹಾಗೂ ಓರ್ವ ಗ್ರಾಹಕರು ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸುವ ಕೆಲಸ ಮಾಡಿದ್ದೇವೆ. ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ. ಒಟ್ಟಿನಲ್ಲಿ ಇದು ಸಿಲಿಂಡರ್‌ನಿಂದ ಸಂಭವಿಸಿರುವ ಬ್ಲಾಸ್ಟ್ ಅಲ್ಲ. ನಮ್ಮ ಸಿಲಿಂಡರ್‌ಗಳೆಲ್ಲವೂ ಸೇಫ್ ಆಗಿವೆ ಎಂದು ಹೇಳಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮುಂದೆ ಏನಾಗುತ್ತೆ ಅನ್ನೋದನ್ನು ಕಾದು ನೋಡಬೇಕು ಎಂದು ಹೇಳಿದ್ದಾರೆ.
ಬೆಂಗಳೂರು: ವೈಟ್ ಫೀಲ್ಡ್ ಬಳಿ ಬ್ರೂಕ್ ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿರುವ ನಿಗೂಢ ಸ್ಫೋಟಕ್ಕೆ (Rameshwaram Cafe Blast) ಸಂಬಂಧಿಸಿದಂತೆ ರಾಮೇಶ್ವರಂ ಕೆಫೆ ವ್ಯವಸ್ಥಾಪಕ ನಿರ್ದೇಶಕಿ ದಿವ್ಯಾ ಸ್ಫೋಟಕ ಮಾಹಿತಿ ನೀಡಿದ್ದಾರೆ.
ʻಪಬ್ಲಿಕ್ ಟಿವಿʼಯೊಂದಿಗೆ ಮಾತನಾಡಿದ ದಿವ್ಯಾ ಅವರು, ಸಿಸಿಟಿವಿ (CCTV) ದೃಶ್ಯಗಳನ್ನು ಗಮನಿಸಿದ್ದೇನೆ. 10 ಸೆಕೆಂಡುಗಳಲ್ಲಿ ಎರಡು ಬಾರಿ ಸ್ಫೋಟ ಸಂಭವಿಸಿದೆ. ಕೈತೊಳೆಯುವ ಜಾಗದಲ್ಲಿ ಸ್ಫೋಟ ಸಂಭವಿಸಿದೆ. ಅಲ್ಲಿ ಯಾವುದೇ ಸಿಲಿಂಡರ್ ಇಟ್ಟಿರಲಿಲ್ಲ. ಅಲ್ಲದೇ ಕೆಫೆಯಲ್ಲಿಟ್ಟಿದ್ದ ಸಿಲಿಂಡರ್‌ಗಳು (LPG Cylinder) ಸೇಫ್ ಆಗಿದೆ. ಸ್ಫೋಟ ಸಂಭವಿಸಿದ ಜಾಗದಲ್ಲಿ ಉದ್ಯೋಗಿಯೊಬ್ಬರ ಐಡಿ ಕಾರ್ಡ್ ಪತ್ತೆಯಾಗಿದೆ. ಬ್ಯಾಟರಿ ಬೋಲ್ಟ್‌ಗಳು ಸಿಕ್ಕಿರೋದನ್ನ ಗಮನಿಸಿದ್ದೇನೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ.
ನಮಗೆ ಸಿಕ್ಕ ಮಾಹಿತಿ ಪ್ರಕಾರ, ಯಾರೋ ಗ್ರಾಹಕರ ರೀತಿ ಬಂದು ಬ್ಯಾಗ್ ಇಟ್ಟು ಹೋಗಿದ್ದಾರೆ. ಆ ಬ್ಯಾಗ್‌ನಿಂದ ಬ್ಲಾಸ್ಟ್ ಆಗಿದೆ. ಆತ ಬಂದು ಹೋಗಿರುವ ನಿಖರವಾದ ಸಮಯದ ಬಗ್ಗೆ ಮಾಹಿತಿ ಇಲ್ಲ. ಸಿಸಿಟಿವಿ ದೃಶ್ಯಗಳನ್ನು ಪೊಲೀಸರಿಗೆ ಕೊಟ್ಟಿದ್ದೇವೆ ಎಂದು ತಿಳಿಸಿದ್ದಾರೆ.
ಒಟ್ಟು 150ಕ್ಕೂ ಹೆಚ್ಚು ಸಿಬ್ಬಂದಿ ಕೆಲಸ ಮಾಡ್ತಿದ್ದಾರೆ. ಘಟನೆಯಲ್ಲಿ ಮೂವರು ಸಿಬ್ಬಂದಿ ಹಾಗೂ ಓರ್ವ ಗ್ರಾಹಕರು ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸುವ ಕೆಲಸ ಮಾಡಿದ್ದೇವೆ. ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ. ಒಟ್ಟಿನಲ್ಲಿ ಇದು ಸಿಲಿಂಡರ್‌ನಿಂದ ಸಂಭವಿಸಿರುವ ಬ್ಲಾಸ್ಟ್ ಅಲ್ಲ. ನಮ್ಮ ಸಿಲಿಂಡರ್‌ಗಳೆಲ್ಲವೂ ಸೇಫ್ ಆಗಿವೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮುಂದೆ ಏನಾಗುತ್ತೆ ಅನ್ನೋದನ್ನು ಕಾದು ನೋಡಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಮೇಶ್ವರ ಕೆಫೆಯಲ್ಲಿ ಸ್ಫೋಟ – ಸ್ಥಳಕ್ಕೆ ಭಯೋತ್ಪಾದನಾ ನಿಗ್ರಹ ದಳ ಎಂಟ್ರಿ
ಈಗಾಗಲೇ ವಿಧಿ ವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳ ತಂಡ, ಶ್ವಾನದಳ ಸ್ಥಳಕ್ಕೆ ಭೇಟಿ ನೀಡಿದೆ. ಡಿಜಿಪಿ ಅಲೋಕ್ ಮೋಹನ್ ಸಹ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಕೆಫೆಯಲ್ಲಿ ಭೀಕರ ಸ್ಫೋಟ – Photos
ಲಕ್ನೋ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ISI ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮಾಸ್ಕೋದಲ್ಲಿರುವ ಭಾರತೀಯ ರಾಜಭಾರಿ ಕಚೇರಿಯ ಉದ್ಯೋಗಿಯೊಬ್ಬನನ್ನ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ATS) ಬಂಧಿಸಿದೆ.
ಐಎಸ್‌ಐ ಹ್ಯಾಂಡ್ಲರ್‌ಗಳು ಭಾರತೀಯ ವಿದೇಶಾಂಗ ಸಚಿವಾಲಯದ ಉದ್ಯೋಗಿಗಳನ್ನ ತಮ್ಮತ್ತ ಸೆಳೆಯುತ್ತಿದ್ದು, ಅದಕ್ಕಾಗಿ ಹಣದ ಆಮಿಷ ತೋರಿಸುತ್ತಿದ್ದಾರೆ ಎಂಬ ಸೂಕ್ಷ್ಮ ಮಾಹಿತಿ ಭಾರತೀಯ ಸೇನೆ ಹಾಗೂ ಗುಪ್ತಚರ ಇಲಾಖೆಗೆ ಲಭ್ಯವಾಗಿತ್ತು. ಈ ಬಗ್ಗೆ ಮಾಹಿತಿ ಪಡೆದಿದ್ದ ಭಯೋತ್ಪಾದನಾ ನಿಗ್ರಹ ದಳ ರಹಸ್ಯವಾಗಿಯೇ ತನ್ನ ಕಾರ್ಯಾಚರಣೆ ಮುಂದುವರಿಸಿತ್ತು.
ಉತ್ತರ ಪ್ರದೇಶ (Uttar Pradesh) ಹಾಪುರ್‌ನ ಶಹಮಹಿಯುದ್ದೀನ್‌ಪುರ ಗ್ರಾಮದ ನಿವಾಸಿಯಾಗಿದ್ದ ಸತೇಂದ್ರ ಸಿವಾಲ್, ಬೇಹುಗಾರಿಕೆ ಜಾಲದ ಪ್ರಮುಖ ರುವಾರಿಯಾಗಿದ್ದ. ಮಾಸ್ಕೋದಲ್ಲಿರುವ ತನ್ನ ಭಾರತೀಯ ರಾಯಭಾರಿ ಕಚೇರಿಯಲ್ಲಿ ತನ್ನ ಸ್ಥಾನವನ್ನು ದುರ್ಬಕೆ ಮಾಡಿಕೊಂಡು ಗೌಪ್ಯ ದಾಖಲೆಗಳನ್ನ ಹೊರ ತೆಗೆಯುತ್ತಿದ್ದ. ಹಣದ ಆಸೆಗಾಗಿ ರಕ್ಷಣಾ ಸಚಿವಾಲಯ, ವಿದೇಶಾಂಗ ಸಚಿವಾಲಯ ಮತ್ತು ಭಾರತೀಯ ಸೇನೆಯ ಆಂತರಿಕೆ ಮತ್ತು ಬಾಹ್ಯ ಕಾರ್ಯಾಚರಣೆ ಚಟುವಟಿಕೆಗಳ ಬಗ್ಗೆ ಮಾಹಿತಿ ಹೊರತೆಗೆದು ಅದನ್ನು ಐಎಸ್‌ಐ ಹ್ಯಾಂಡ್ಲರ್‌ಗಳಿಗೆ ರವಾನಿಸುತ್ತಿದ್ದ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸಾಮೂಹಿಕ ವಿವಾಹದಲ್ಲಿ ಗೋಲ್ಮಾಲ್ – ಹಣಕ್ಕೆ ದಂಪತಿಯಾದ ಜೋಡಿಗಳು, 15 ಮಂದಿ ಸೇರಿ ಇಬ್ಬರು ಅಧಿಕಾರಿಗಳ ಬಂಧನ
ಇತ್ತೀಚಿನ ದಿನಗಳಲ್ಲಿ ಐಎಸ್‌ಐ ಉಗ್ರರು ಭಾರತೀಯ ಸೇನೆಗೆ ಸಂಬಂಧಿಸಿದ ಪ್ರಮುಖ ಮಾಹಿತಿಯನ್ನು ಪಡೆಯಲು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಉದ್ಯೋಗಿಗಳಿಗೆ ಹಣದ ಆಮಿಷ ಒಡ್ಡುತ್ತಿದ್ದಾರೆ. ಇದರಿಂದ ಭಾರತದ ಆಂತರಿಕ ಮತ್ತು ಬಾಹ್ಯ ಭದ್ರತೆಗೆ ದೊಡ್ಡ ಅಪಾಯ ಉಂಟುಮಾಡುವ ಆತಂಕ ಎದುರಾಗುತ್ತಿದೆ ಎಂದು ಕೆಲ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: 1 ಕಿ.ಮಿಗೆ 1.59 ಲಕ್ಷ, ದಿನಕ್ಕೆ 50 ಲಕ್ಷ – ಭಾರತ್ ಜೋಡೋ ಯಾತ್ರೆಗೆ ಬರೋಬ್ಬರಿ 71 ಕೋಟಿ ಖರ್ಚು
ಚಿಕ್ಕೋಡಿ: ಕರ್ನಾಟಕದಿಂದ (Karnataka) 70 ಕಿಲೋಮೀಟರ್ ದೂರದಲ್ಲಿರುವ ಮಹಾರಾಷ್ಟ್ರದ (Maharashtra) ಅರಣ್ಯದಲ್ಲಿ ಟ್ರಯಲ್ ಬ್ಲಾಸ್ಟ್ (Trial Blast) ನಡೆಸಿದ ಶಂಕೆಯ ಮೇರೆಗೆ ಇಬ್ಬರು ಶಂಕಿತ ಉಗ್ರರನ್ನು (Suspected Terrorists) ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ATS) ಬಂಧಿಸಿದೆ.
ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಅಂಬೋಲಿ (Amboli) ಅರಣ್ಯ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಿದ್ದ ಮಾಹಿತಿ ದೊರೆತಿದ್ದು, ಶಂಕಿತ ಉಗ್ರರು ಬೆಳಗಾವಿ (Belagavi) ಜಿಲ್ಲೆಯ ನಿಪ್ಪಾಣಿ, ಸಂಕೇಶ್ವರ ಮಾರ್ಗವಾಗಿ ಅಂಬೋಲಿಗೆ ಪ್ರಯಾಣ ಬೆಳೆಸಿದ್ದರು ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಈ ಹಿನ್ನೆಲೆ ಬೆಳಗಾವಿಯ ನಿಪ್ಪಾಣಿ, ಸಂಕೇಶ್ವರಕ್ಕೆ ಆಗಮಿಸಿ ಎಟಿಎಸ್ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಇದನ್ನೂ ಓದಿ: ಇನ್‌ಸ್ಟಾ ಸ್ನೇಹಿತನ ಭೇಟಿಗಾಗಿ ಪಾಕಿಸ್ತಾನಕ್ಕೆ ಹೊರಟಿದ್ದ ಅಪ್ರಾಪ್ತೆ ಪೊಲೀಸರ ವಶಕ್ಕೆ
ಕಳೆದ ವಾರ ಪಟ್ರೋಲಿಂಗ್ (Patrolling) ಮಾಡುತ್ತಿದ್ದ ವೇಳೆ ಬೈಕ್ ಕಳ್ಳತನ ಪ್ರಕರಣದಲ್ಲಿ ಇಬ್ಬರನ್ನು ಪುಣೆ ಕೊಥ್‌ರೂಡ್ ಪೊಲೀಸರು ವಶಕ್ಕೆ ಪಡೆದಿದ್ದರು. ಬೈಕ್ ಕಳ್ಳತನ ಶಂಕೆಯಡಿಯಲ್ಲಿ ಮೊಹಮ್ಮದ್ ಇಮ್ರಾನ್ ಅಲಿಯಾಸ್ ಅಮಿರ್ ಅಬ್ದುಲ್ ಹಮೀದ್ ಖಾನ್ ಮತ್ತು ಮೊಹಮ್ಮದ್ ಯೂನಿಸ್ ಮೊಹಮ್ಮದ್ ಯಾಕೂಬ್ ಸಾಕಿ ಎಂಬವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಈ ವೇಳೆ ಇಬ್ಬರು ಆರೋಪಿಗಳಿಗೆ ಐಸಿಸ್ ಉಗ್ರ ಸಂಘಟನೆ ಜೊತೆ ನಂಟಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಕೇಸ್ – ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ CBI
ಬಳಿಕ ಇಬ್ಬರು ಶಂಕಿತ ಉಗ್ರರನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ವಿಚಾರಣೆ ವೇಳೆ ಅಂಬೋಲಿ ಅರಣ್ಯ ಪ್ರದೇಶದಲ್ಲಿ ಟ್ರಯಲ್ ಬಾಂಬ್ ಬ್ಲಾಸ್ಟ್ ನಡೆಸಿದ್ದ ಮಾಹಿತಿ ಬಹಿರಂಗವಾಗಿದೆ. ಕೊಲ್ಲಾಪುರ ನಿಪ್ಪಾಣಿ ಆಜರಾ ಮಾರ್ಗವಾಗಿ ಅಂಬೋಲಿಗೆ ಪ್ರಯಾಣಿಸಿದ ಮಾಹಿತಿ ದೊರೆತ ಹಿನ್ನೆಲೆ ಶಂಕಿತ ಉಗ್ರರು ಪ್ರಯಾಣಿಸಿದ ಮಾರ್ಗವನ್ನು ಮಹಾರಾಷ್ಟ್ರ ಎಟಿಎಸ್ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಜುಲೈ 27ರಂದು ಮಹಾರಾಷ್ಟ್ರ ಎಟಿಎಸ್ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ ಮಾಹಿತಿ ದೊರೆತಿದ್ದು, ಈ ಬಗ್ಗೆ ಬೆಳಗಾವಿ ಪೊಲೀಸರು ಯಾವುದೇ ಮಾಹಿತಿಯನ್ನು ಖಚಿತಪಡಿಸಿಲ್ಲ. ಇದನ್ನೂ ಓದಿ: ಸರ್ಕಾರಿ ಉದ್ಯೋಗಕ್ಕೆ ತರಬೇತಿ ನಡೆಸಿದ್ದ ಯುವತಿ - ಕೊಲೆಗೆ 3 ದಿನಗಳ ಹಿಂದೆಯೇ ಸ್ಕೆಚ್ ಹಾಕಿದ್ದ ಪಾಪಿ ಪ್ರೇಮಿ!
ಲಕ್ನೋ: ಪಾಕಿಸ್ತಾನದಲ್ಲಿರುವ (Pakistan) ತನ್ನ ಹ್ಯಾಂಡ್ಲರ್‌ಗಳಿಗೆ ಭಾರತೀಯ ಸೇನೆಯ ಬಗ್ಗೆ ಪ್ರಮುಖ ಮಾಹಿತಿಗಳನ್ನ ರಹಸ್ಯವಾಗಿ ತಲುಪಿಸುತ್ತಿದ್ದ ಆರೋಪದ ಮೇಲೆ ಭಾನುವಾರ ಉತ್ತರಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ATS) ಶಂಕಿತ ಐಎಸ್‌ಐ ಏಜೆಂಟ್‌ನನ್ನ ಬಂಧಿಸಿದೆ.
ಶಂಕಿತ ISI ಏಜೆಂಟ್‌ನನ್ನ ಮೊಹಮ್ಮದ್ ರಯೀಸ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಗೊಂಡಾದ ತರಬ್‌ಗಂಜ್ ಪ್ರದೇಶದ ನಿವಾಸ ಮೊಹಮ್ಮದ್ ರಯೀಸ್ ಮುಂಬೈನಲ್ಲಿ ಕೆಲಸ ಮಾಡುತ್ತಿದ್ದಾಗ ಅರ್ಮಾನ್ ಎಂಬಾತನ ಸಂಪರ್ಕಕ್ಕೆ ಬಂದಿದ್ದಾನೆ. ನಂತರ ಭಾರತದಲ್ಲಿ ಮುಸ್ಲಿಂ (Muslims) ಸಮುದಾಯದ ಸದಸ್ಯರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಅರ್ಮಾನ್ ತನ್ನನ್ನ ಪ್ರಚೋದಿಸಲು ಪ್ರತ್ನಿಸಿರುವುದಾಗಿ ರಯೀಸ್ ಎಂದು ತಿಳಿಸಿದ್ದಾರೆ.
ವಿಚಾರಣೆಯಲ್ಲಿ ರಯೀಸ್ ಹೇಳಿದ್ದೇನು?
ತಾನು ಕೆಲಸಕ್ಕೆ ಸೌದಿ ಅರೇಬಿಯಾಕ್ಕೆ (Saudi Arabia) ಹೋಗಬೇಕೆಂದು ಅರ್ಮಾನ್‌ಗೆ ಹೇಳಿಕೊಂಡಿದ್ದೆ. ನಂತರ ಅರ್ಮಾನ್ ಪಾಕಿಸ್ತಾನ ವ್ಯಕ್ತಿಯೊಬ್ಬನಿಗೆ ತನ್ನ ಸಂಪರ್ಕ ಸಂಖ್ಯೆ ನೀಡುವುದಾಗಿ ತಿಳಿಸಿದ. ನಂತರ ನನ್ನನ್ನು ಭಾರತದ ವಿರುದ್ಧ ಗೂಢಚಾರಿಕೆ ಮಾಡುವಂತೆ ಮನವೊಲಿಸಿದ. ಈ ಕೆಲಸ ಮಾಡಿದ್ರೆ ಕೈತುಂಬ ಹಣ ನೀಡುವುದಾಗಿಯೂ ಹೇಳಿದ್ದ. ಅದಾದ ಮೇಲೆ ಕಳೆದ ವರ್ಷ ನನಗೆ ವಿದೇಶ ಸಂಖ್ಯೆಯಿಂದ ದೂರವಾಣಿ ಕರೆ ಬಂದಿತು. ಆ ವ್ಯಕ್ತಿ ತನ್ನನ್ನ ಹುಸೇನ್ ಎಂದು ಪರಿಚಯಿಸಿಕೊಂಡಿದ್ದ. ನನ್ನನ್ನು ಪಾಕಿಸ್ತಾನಕ್ಕೆ ಗೂಢಚಾರಿಕೆ ಮಾಡುವಂತೆ ಹೇಳಿದ್ದ. ಇದನ್ನೂ ಓದಿ: ಪಾಕಿಸ್ತಾನದಲ್ಲಿ 150 ವರ್ಷದಷ್ಟು ಹಳೆಯ ಹಿಂದೂ ದೇವಾಲಯ ನೆಲಸಮ – ಬೆಳಗ್ಗೆ ಎದ್ದು ನೋಡಿದ ಹಿಂದೂಗಳಿಗೆ ಶಾಕ್!
ನನ್ನೊಂದಿಗೆ ಮಾತನಾಡುತ್ತಾ, ಮಿಲಿಟರಿ ಕಂಟೋನ್ಮೆಂಟ್ ಮತ್ತು ಸ್ಥಾಪನೆಗಳ ಬಗ್ಗೆ ಮಾಹಿತಿ ಕಳುಹಿಸುವ ಕೆಲಸವನ್ನು ವಹಿಸಿದ. ಈ ಕೆಲಸಕ್ಕಾಗಿ ನಾನು ನನ್ನ ಸ್ನೇಹಿತರನ್ನೂ ಜೊತೆಗೆ ಸೇರಿಸಿಕೊಂಡಿದ್ದೆ. ನಾನು ಮಾಹಿತಿ ಕೊಟ್ಟರೆ ಪ್ರತಿಯಾಗಿ ನನಗೆ 15 ಸಾವಿರ ರೂ. ಕೊಡುತ್ತಿದ್ದ ಎಂದು ರಯೀಸ್ ಹೇಳಿದ್ದಾನೆ. ಇದನ್ನೂ ಓದಿ: ಅವಳಿನ್ನೂ ಮುಸಲ್ಮಾನಳಲ್ಲ, ಪಾಕಿಸ್ತಾನಕ್ಕೆ ಬರೋದು ಬೇಡ – ಪಾಕ್ ಮಹಿಳೆ ಪೋಷಕರ ಫಸ್ಟ್ ರಿಯಾಕ್ಷನ್
ಈ ಬಗ್ಗೆ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳಕ್ಕೆ ಮಾಹಿತಿ ಬರುತ್ತಿದ್ದಂತೆ ಕಾರ್ಯಾಚರಣೆ ಕೈಗೊಂಡಿದ್ದು, ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಸದ್ಯ ಆರೋಪಿ ವಿರುದ್ಧ ಲಕ್ನೋ ಎಟಿಎಸ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 121ಎ ಮತ್ತು 123 ಮತ್ತು ಅಧಿಕಾರಿಗಳ ರಹಸ್ಯ ಕಾಯ್ದೆ-1923ರ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ. ಈ ಬಗ್ಗೆ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಮತ್ತೊಂದು ಕೇಸ್ – ಪಬ್ಜಿ ಪ್ರೇಮಿಗಾಗಿ ಭಾರತಕ್ಕೆ ಹಾರಿ ಬಂದ ಬಾಂಗ್ಲಾದೇಶದ ಯುವತಿ!
ಮುಂಬೈ: ಪಾಕಿಸ್ತಾನಿ (Pakistan) ಏಜೆಂಟ್‍ಗೆ ಗೌಪ್ಯ ಮಾಹಿತಿ ನೀಡಿದ ಆರೋಪದ ಮೇಲೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (Defence Research and Development Organisation) ಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿಜ್ಞಾನಿಯೊಬ್ಬನನ್ನು (Scientist) ಮಹಾರಾಷ್ಟ್ರ (Maharastra) ಭಯೋತ್ಪಾದನಾ ನಿಗ್ರಹ ದಳ (Anti Terrorism Squad) ಬಂಧಿಸಿದೆ.
ಉನ್ನತ ಹುದ್ದೆಯಲ್ಲಿದ್ದ ಆರೋಪಿಯು ವಾಟ್ಸಾಪ್ (WhatsApp) ಮತ್ತು ವೀಡಿಯೊ ಕರೆಗಳ ಮೂಲಕ ಪಾಕಿಸ್ತಾನ ಗುಪ್ತಚರ ಏಜೆಂಟ್‍ನೊಂದಿಗೆ ಸಂಪರ್ಕದಲ್ಲಿದ್ದ. ಆರೋಪಿಯನ್ನು ಹನಿಟ್ರ್ಯಾಪ್ ( Honey Trap) ಮೂಲಕ ಬೆದರಿಸಿ ಕೃತ್ಯಕ್ಕೆ ಬಳಸಿಕೊಳ್ಳುತ್ತಿದ್ದರು. ಹೆಚ್ಚಿನ ಮಾಹಿತಿ ತನಿಖೆ ನಂತರ ತಿಳಿಯಲಿದೆ ಎಂದು ಎಟಿಎಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಹಿಂಸಾಚಾರ ಹಿನ್ನೆಲೆ – ಕರ್ನಾಟಕದಲ್ಲಿ ಅಮಿತ್ ಶಾ ಕಾರ್ಯಕ್ರಮಗಳು ರದ್ದು
ಶತ್ರು ದೇಶಗಳಿಗೆ ತನ್ನ ಬಳಿಯಿರುವ ರಹಸ್ಯ ಮಾಹಿತಿಗಳನ್ನು ಒದಗಿಸಿದರೆ ದೇಶದ ಭದ್ರತೆಗೆ ಅಪಾಯವನ್ನುಂಟುಮಾಡಬಹುದು ಎಂದು ತಿಳಿದಿದ್ದರೂ ಆರೋಪಿ ಮಾಹಿತಿ ನೀಡಿದ್ದಾನೆ. ಈ ಮೂಲಕ ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.