Tag: ಎಟಿಎಸ್

  • ನೂಪುರ್ ಶರ್ಮಾ ಹತ್ಯೆಗೆ ಪಾಕ್‌ ಸಂಘಟನೆಗ‌ಳಿಂದ ಸುಪಾರಿ ಪಡೆದಿದ್ದ ಉಗ್ರ ಅರೆಸ್ಟ್

    ನೂಪುರ್ ಶರ್ಮಾ ಹತ್ಯೆಗೆ ಪಾಕ್‌ ಸಂಘಟನೆಗ‌ಳಿಂದ ಸುಪಾರಿ ಪಡೆದಿದ್ದ ಉಗ್ರ ಅರೆಸ್ಟ್

    ಲಕ್ನೋ: ನೂಪುರ್ ಶರ್ಮಾರನ್ನ ಹತ್ಯೆ ಮಾಡಲು ಪಾಕಿಸ್ತಾನದ ಜೈಶ್-ಎ-ಮೊಹಮ್ಮದ್ ಹಾಗೂ ತಹ್ರಿಖ್-ಎ-ತಾಲಿಬಾನ್ ಸಂಘಟನೆಗಳಿಂದ ಸುಪಾರಿ ಪಡೆದಿದ್ದ ಭಯೋತ್ಪಾದಕ ಮೊಹಮ್ಮದ್ ನದೀಮ್‌ನನ್ನು ಉತ್ತರಪ್ರದೇಶದ ಭಯೋತ್ಪಾದಕ ನಿಗ್ರಹ ದಳವು ಬಂಧಿಸಿದೆ.

    ಪಾಕಿಸ್ತಾನ ಮೂಲದ ಜೆಎಂಇ ಹಾಗೂ ಟಿಟಿಪಿ ಭಯೋತ್ಪಾದನಾ ಸಂಘಟನೆಗಳೊಂದಿಗೆ ನೇರ ಸಂಪರ್ಕ ಹೊಂದಿದ್ದ ನದೀಮ್ ನೂಪರ್ ಶರ್ಮಾರನ್ನು ಕೊಲ್ಲುವ ಕೆಲಸ ವಹಿಸಿಕೊಂಡಿದ್ದ. ಅವನನ್ನು ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಬಂಧಿಸಲಾಗಿದೆ ಎಂದು ಎಟಿಎಸ್ ಹೇಳಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಏನ್ ಬಿಚ್ಚಿಡುತ್ತಾರೋ ಬಿಚ್ಚಿಡಲಿ: ಸುಧಾಕರ್ ತಿರುಗೇಟು

    ಕೆಲ ದಿನಗಳ ಹಿಂದೆಯಷ್ಟೇ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದರಿಂದ ಮುಸ್ಲಿಂ ರಾಷ್ಟ್ರಗಳಿಂದಲೂ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಕೆಲ ಪಾಕಿಸ್ತಾನಿ ಸಂಘಟನೆಗಳು ನೂಪುರ್ ಶರ್ಮಾರನ್ನ ಕೊಲ್ಲುವುದಕ್ಕೆ ಬಹಿರಂಗವಾಗಿ ಆಫರ್‌ಗಳನ್ನು ಘೋಷಣೆ ಮಾಡಿದ್ದವು. ದೇಶದ ವಿವಿಧ ರಾಜ್ಯಗಳಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದ್ದವು. ಇದೀಗ ಸುಪ್ರೀಂ ಕೋರ್ಟ್ ಅವರ ವಿರುದ್ಧದ ಎಲ್ಲ ಕೇಸ್‌ಗಳನ್ನು ದೆಹಲಿಗೆ ವರ್ಗಾಯಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಭಯೋತ್ಪಾದಕರಿಗೆ ಧನಸಹಾಯ ಮಾಡುತ್ತಿದ್ದ 4ನೇ ಶಂಕಿತ ಅರೆಸ್ಟ್

    ಭಯೋತ್ಪಾದಕರಿಗೆ ಧನಸಹಾಯ ಮಾಡುತ್ತಿದ್ದ 4ನೇ ಶಂಕಿತ ಅರೆಸ್ಟ್

    ಪುಣೆ: ಭಯೋತ್ಪಾದಕರಿಗೆ ಧನಸಹಾಯ ಮಾಡುತ್ತಿದ್ದ 4ನೇ ಶಂಕಿತನನ್ನು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್) ಬಂಧಿಸಿದೆ.

    ಎಟಿಎಸ್ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದ್ದು, ಭಯೋತ್ಪಾದಕ ಸಂಘಟನೆಗೆ ಕಾರ್ಯಕರ್ತರ ನೇಮಕಾತಿ ಮತ್ತು ಧನಸಹಾಯ ಪ್ರಕರಣದಲ್ಲಿ ಭಾಗಿಯಾಗಿದ್ದ 4ನೇ ಶಂಕಿತನನ್ನು ಬಂಧಿಸಲಾಗಿದೆ. ಈತ ಜಮ್ಮು-ಕಾಶ್ಮೀರಾದವನು ಎಂದು ತಿಳಿಸಿದ್ದಾರೆ.

    ಭಯೋತ್ಪಾದಕ ಸಂಘಟನೆಗೆ ಕಾರ್ಯಕರ್ತರ ನೇಮಕಾತಿ ಮತ್ತು ಧನಸಹಾಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ ತಿಂಗಳಲ್ಲಿ ಎಟಿಎಸ್ ಅಧಿಕಾರಿಗಳು ಮೂರು ಆರೋಪಿಗಳನ್ನು ಬಂಧಿಸಿದ್ದರು. ಈಗ ಮತ್ತೊಬ್ಬ ಸಿಕ್ಕಿದ್ದು, ಉಳಿದವರಿಗಾಗಿ ಹುಡುಕಾಟ ಮುಂದುವರಿಸಿದ್ದಾರೆ. ಇದನ್ನೂ ಓದಿ: ಅಮರನಾಥ ಯಾತ್ರೆ ಮೇಲೆ ದಾಳಿಗೆ ಯೋಜಿಸಿದ್ದ ಮೂವರು ಉಗ್ರರ ಹತ್ಯೆ

    ಈ ಕುರಿತು ಅಧಿಕಾರಿಗಳು ಮಾತನಾಡಿದ್ದು, ಈತ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯವನಾಗಿದ್ದು, ಪುಣೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ಆರೋಪಿಯನ್ನು ಮಂಗಳವಾರ ಕೋರ್ಟ್ ಮುಂದೆ ಹಾಜರು ಪಡಿಸುತ್ತೇವೆ. ಪ್ರಸ್ತುತ ಬಂಧಿತನು ಜುವಾನಿದ್ ಮೊಹಮ್ಮದ್ ಖಾತೆಗೆ ಹಣ ಕಳುಹಿಸುತ್ತಿರುವುದು ಪತ್ತೆಯಾಗಿದೆ. ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೇ 24 ರಂದು ಒಬ್ಬನನ್ನು ಅರೆಸ್ಟ್ ಮಾಡಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

  • ಭಯೋತ್ಪಾದಕ ಸಂಘಟನೆ ಜೊತೆಗೆ ನಂಟು – ವ್ಯಕ್ತಿ ಅರೆಸ್ಟ್

    ಭಯೋತ್ಪಾದಕ ಸಂಘಟನೆ ಜೊತೆಗೆ ನಂಟು – ವ್ಯಕ್ತಿ ಅರೆಸ್ಟ್

    ಮುಂಬೈ: ಭಯೋತ್ಪಾದಕ ಸಂಘಟನೆ ಜೊತೆಗೆ ನಂಟು ಹೊಂದಿದ್ದ ವ್ಯಕ್ತಿಯೋರ್ವನನ್ನು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಅಧಿಕಾರಿಗಳು ಬಂಧಿಸಿದ್ದು, ಆರೋಪಿಯನ್ನು ಇಂದು ಪುಣೆಯ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.

    ಬಂಧಿತ ಆರೋಪಿಯನ್ನು ಜುನೈದ್ ಎಂದು ಗುರುತಿಸಲಾಗಿದ್ದು, ಈತ ಬಹಳ ದಿನಗಳಿಂದ ಪುಣೆಯಲ್ಲಿ ನೆಲೆಸಿದ್ದನು. ಆರೋಪಿ ಲಷ್ಕರ್-ಎ-ತೈಬಾ (ಎಲ್‍ಇಟಿ) ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದನು ಮತ್ತು ಎಲ್‍ಇಟಿಗೆ ಭಯೋತ್ಪಾದಕರನ್ನು ಸೇರಿಸಿಕೊಳ್ಳುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದನು. ಇದನ್ನೂ ಓದಿ: ಮನಿ ಡಬಲ್‌ ಮಾಡುತ್ತೇವೆ ಎಂದು ನಂಬಿಸಿ ಮೋಸ ಮಾಡುತ್ತಿದ್ದ ಖದೀಮರ ಬಂಧನ

    ನಿಷೇಧಿತ ಲಷ್ಕರ್-ಎ-ತೊಯ್ಬಾ (ಎಲ್‍ಇಟಿ) ಸಂಘಟನೆಯ ಐವರು ‘ಹೈಬ್ರಿಡ್’ ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ. ಈ ಐವರು ಭಯೋತ್ಪಾದಕರಲ್ಲಿ ಮೂವರು ಕೆಲವು ದಿನಗಳ ಹಿಂದೆ ನಡೆದ ಬಾರಾಮುಲ್ಲಾ ಜಿಲ್ಲೆಯಲ್ಲಿನ ಸರಪಂಚ್ ಹತ್ಯೆಯಲ್ಲಿ ಶಾಮೀಲಾಗಿದ್ದಾರೆ. ಇವರಲ್ಲಿ ಇಬ್ಬರನ್ನು ಸೋಮವಾರ ಶ್ರೀನಗರದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳೊಂದಿಗೆ ಪೊಲೀಸರು ಬಂಧಿಸಿದ್ದರೆ, ಉಳಿದ ಮೂವರನ್ನು ಬಾರಾಮುಲ್ಲಾದಲ್ಲಿ ಬಂಧಿಸಿದ್ದಾರೆ. ಇದನ್ನೂ ಓದಿ: ಕುತುಬ್ ಮಿನಾರ್ ಬಳಿ ಪೂಜೆ ಮಾಡುವ ಹಕ್ಕು ಯಾರಿಗೂ ಇಲ್ಲ – ASI ಖಡಕ್ ಉತ್ತರ

  • ಪ್ರಧಾನಿ ಮೋದಿ ತವರಿನಲ್ಲಿ 1,300 ಕೋಟಿ ಮೌಲ್ಯದ ಹೆರಾಯಿನ್ ವಶ

    ಪ್ರಧಾನಿ ಮೋದಿ ತವರಿನಲ್ಲಿ 1,300 ಕೋಟಿ ಮೌಲ್ಯದ ಹೆರಾಯಿನ್ ವಶ

    ಗಾಂಧಿನಗರ: ಗುಜರಾತಿನ ಕಚ್‌ ಜಿಲ್ಲೆಯ ಕಾಂಡ್ಲಾಪೋರ್ಟ್‌ನಲ್ಲಿ ಗುಜರಾತ್ ಭಯೋತ್ಪಾದನ ನಿಗ್ರಹದಳ (ATS) ಹಾಗೂ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 1,300 ಕೋಟಿ ರೂ. ಮೌಲ್ಯದ ಹೆರಾಯಿನ್ ಪತ್ತೆಯಾಗಿದೆ.

    ಒಟ್ಟು 260 ಕೆಜಿ ಹೆರಾಯಿನ್ ಇದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಬೆಲೆ 1,300 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ: ಲಾರಿಯಡಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ!

    DRUGS 2
    ಸಾಂದರ್ಭಿಕ ಚಿತ್ರ

    ಕಂಟೈನರ್‌ಗಳಲ್ಲಿ ಭಾರತಕ್ಕೆ ಡ್ರಗ್ಸ್ ಸಾಗಣೆಯಾಗುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಗುಜರಾತ್ ಭಯೋತ್ಪಾದನ ನಿಗ್ರಹ ದಳವು ಡಿಆರ್‌ಐನೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಕಂಟೈನರ್‌ನಲ್ಲಿದ್ದ ಔಷಧಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

  • ಪಾಕ್‍ಗೆ ಯುದ್ಧ ವಿಮಾನಗಳ ವಿವರ ಕಳುಹಿಸುತ್ತಿದ್ದ ಹೆಚ್‍ಎಎಲ್ ಉದ್ಯೋಗಿ ಅರೆಸ್ಟ್

    ಪಾಕ್‍ಗೆ ಯುದ್ಧ ವಿಮಾನಗಳ ವಿವರ ಕಳುಹಿಸುತ್ತಿದ್ದ ಹೆಚ್‍ಎಎಲ್ ಉದ್ಯೋಗಿ ಅರೆಸ್ಟ್

    ಮುಂಬೈ: ಪಾಕಿಸ್ತಾನ ಗುಪ್ತಚರ ಇಲಾಖೆ (ಐಎಸ್‍ಐ)ಗೆ ಯುದ್ಧ ವಿಮಾನಗಳ ವಿವರಗಳನ್ನು ಕದ್ದು ಕಳುಹಿಸುತ್ತಿದ್ದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‍ಎಎಲ್)ನ ಉದ್ಯೋಗಿಯನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ ಇಂದು ಬಂಧಿಸಿದೆ.

    ಬಂಧಿತ ಹೆಚ್‍ಎಎಲ್ ಉದ್ಯೋಗಿಯನ್ನು 41 ವರ್ಷದ ದೀಪಕ್ ಶಿರ್ಸತ್ ಎಂದು ಗುರುತಿಸಲಾಗಿದೆ. ಈತ ಮುಂಬೈ ನಾಸಿಕ್ ಬಳಿಯ ಓಜರ್ ವಿಮಾನ ಘಟಕದಲ್ಲಿ ಕೆಲಸ ಮಾಡುತ್ತಿದ್ದ. ಬಂಧಿತನಿಂದ ಮೂರು ಮೊಬೈಲ್ ಫೋನುಗಳು ಮತ್ತು ಐದು ಸಿಮ್‍ಗಳು ಮತ್ತು ಎರಡು ಮೆಮೊರಿ ಕಾರ್ಡ್ ಗಳನ್ನು ವಶಕ್ಕೆ ಪಡೆಯಲಾಗಿದೆ.

    ಈ ವಿಚಾರವಾಗಿ ಮಾತನಾಡಿರುವ ಡಿಸಿಪಿ ವಿನಯ್ ರಾಥೋಡ್, ರಾಜ್ಯ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್)ಯ ನಾಸಿಕ್ ಘಟಕವು, ಐಎಸ್‍ಐ ಜೊತೆ ನಿರಂತರ ಸಂಪರ್ಕದಲ್ಲಿದ್ದ ವ್ಯಕ್ತಿಯನ್ನು ಇಂದು ಬಂಧಿಸಿದೆ. ದೀಪಕ್ ಶಿರ್ಸತ್ ಎಂದು ಗುರುತಿಸಲ್ಪಟ್ಟ ಈ ವ್ಯಕ್ತಿ ಭಾರತೀಯ ಯುದ್ಧ ವಿಮಾನ ಮತ್ತು ಅವುಗಳ ಉತ್ಪಾದನಾ ಘಟಕದ ಬಗ್ಗೆ ಗೌಪ್ಯ ಮಾಹಿತಿಯನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆ (ಐಎಸ್‍ಐ)ಗೆ ವಾಟ್ಸಪ್ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಒದಗಿಸುತ್ತಿದ್ದ ಎಂದು ತಿಳಿಸಿದ್ದಾರೆ.

    ಈತ ಓಜರ್ ವಿಮಾನ ಘಟಕದಲ್ಲಿ ನಿಷೇಧಿತ ಜಾಗದಲ್ಲಿ ಓಡಾಡಿ ಅಲ್ಲಿನ ಫೋಟೋಗಳನ್ನು ತೆಗೆದು ಪಾಕಿಸ್ತಾನಕ್ಕೆ ಕಳುಹಿಸುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಓಜರ್ ಘಟಕ ಮಿಗ್-21 ಎಫ್‍ಎಲ್ ವಿಮಾನ ಮತ್ತು ಕೆ-13 ಕ್ಷಿಪಣಿಗಳ ತಯಾರಿಕೆಗಾಗಿ 1964ರಲ್ಲಿ ಸ್ಥಾಪನೆಯಾಗಿತ್ತು. ಈ ವಿಭಾಗವು ಮಿಗ್-21 ಎಂ, ಮಿಗ್-21 ಬೈಸನ್ ಮಿಗ್-27 ಎಂ ಮತ್ತು ಅತ್ಯಾಧುನಿಕ ಸುಕೋಯ್-30 ಎಂಕೆಐ ಫೈಟರ್ ಜೆಟ್‍ಗಳ ರಿಪೇರಿ ಸಹ ಮಾಡುತ್ತಿದೆ.

  • ಸಿಲಿಕಾನ್ ಸಿಟಿಯಲ್ಲಿ ಉಗ್ರರ ಜಾಡು ಪತ್ತೆ –  ಆರ್‌ಎಸ್‌ಎಸ್ ನಾಯಕರೇ ಟಾರ್ಗೆಟ್

    ಸಿಲಿಕಾನ್ ಸಿಟಿಯಲ್ಲಿ ಉಗ್ರರ ಜಾಡು ಪತ್ತೆ – ಆರ್‌ಎಸ್‌ಎಸ್ ನಾಯಕರೇ ಟಾರ್ಗೆಟ್

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಉಗ್ರರ ಜಾಡು ಪತ್ತೆಯಾಗಿದ್ದು, ಆರ್‌ಎಸ್‌ಎಸ್ ನಾಯಕರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ಹೇಳಿದೆ.

    ಬೆಂಗಳೂರಿನಲ್ಲಿ ಐಸಿಸ್ ಹಾಗೂ ಜೆಎಂಬಿ(ಜಮಾತ್ ಉಲ್ ಮುಜಾಹಿದ್ದೀನ್) ಉಗ್ರರು ಬೀಡು ಬಿಟ್ಟಿದ್ದಾರೆ. ಕರ್ನಾಟಕ, ಕೇರಳದಲ್ಲಿ ಜೆಎಂಬಿ ಉಗ್ರರು ಸಕ್ರಿಯರಾಗಿದ್ದಾರೆ. ಆರ್‌ಎಸ್‌ಎಸ್ ನಾಯಕರನ್ನು ಟಾರ್ಗೆಟ್ ಮಾಡುತ್ತಿದ್ದಿದ್ದಾರೆ ಎಂದು ಎನ್‍ಐಎ ಮೂಲಗಳಿಂದ ತಿಳಿದು ಬಂದಿದೆ.

    ರಾಜ್ಯ ರಾಜಧಾನಿಯಲ್ಲೇ ಉಗ್ರರ ಬಗ್ಗೆ ಮಾಹಿತಿ ಪತ್ತೆಯಾಗಿದ್ದು, 125 ಶಂಕಿತ ಉಗ್ರರ ಬಗ್ಗೆ ಎನ್‍ಐಎ ಮಾಹಿತಿ ಸಂಗ್ರಹಿಸಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರಗಳಿಗೆ ರಾಷ್ಟ್ರೀಯ ತನಿಖಾ ದಳ ಹೈ ಅಲರ್ಟ್ ನೀಡಿದ್ದು, ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್) ಮುಖ್ಯಸ್ಥರ ಸಭೆಯಲ್ಲಿ ಎನ್‍ಐಎ ಮುಖ್ಯಸ್ಥ ಅಲೋಕ್ ಮಿತ್ತಲ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.

    ಬೆಂಗಳೂರು ಮತ್ತು ಸುತ್ತಮುತ್ತ 20, 22 ಅಡಗುದಾಣಗಳನ್ನು ಪತ್ತೆ ಹಚ್ಚಲಾಗಿದ್ದು, ಮಹಾರಾಷ್ಟ್ರ ಹಾಗೂ ಬಿಹಾರದಲ್ಲಿಯೂ ಜೆಎಂಬಿ ಉಗ್ರರು ಸಕ್ರಿಯರಾಗಿರಾಗಿದ್ದಾರೆ ಎಂದು ತಿಳಿದು ಬಂದಿದೆ.

  • ಬಿಜೆಪಿ ಮಂತ್ರಿಯ ಹತ್ಯೆಗೈದಿದ್ದ ಮೋಸ್ಟ್ ವಾಂಟೆಡ್ ಉಗ್ರ ಯುಎಇಯಿಂದ ಪಾಕಿಸ್ತಾನಕ್ಕೆ ಗಡೀಪಾರು

    ಬಿಜೆಪಿ ಮಂತ್ರಿಯ ಹತ್ಯೆಗೈದಿದ್ದ ಮೋಸ್ಟ್ ವಾಂಟೆಡ್ ಉಗ್ರ ಯುಎಇಯಿಂದ ಪಾಕಿಸ್ತಾನಕ್ಕೆ ಗಡೀಪಾರು

    ಅಬುಧಾಬಿ: ದಾವುದ್ ಗ್ಯಾಂಗ್ ಸದಸ್ಯ, ಗುಜರಾತ್ ಬಿಜೆಪಿ ಮುಖಂಡ ಹರೇನ್ ಪಾಂಡ್ಯ ಕೊಲೆ, ಸೇರಿದಂತೆ ಅನೇಕ ಪ್ರಕರಣಗಳಿಗೆ ಬೇಕಾಗಿದ್ದ ಆರೋಪಿ ಫಾರೂಖ್ ದೆವ್ದಿವಾಲಾ ನನ್ನು ಯುನೈಟೆಡ್ ಅರಬ್ ಎಮಿರೇಟ್ಸ್ ಸರ್ಕಾರ ಪಾಕಿಸ್ತಾನಕ್ಕೆ ಗಡೀಪಾರು ಮಾಡಿದ್ದು, ಭಾರತದ ಅಧಿಕಾರಿಗಳಿಗೆ ಭಾರೀ ಹಿನ್ನಡೆಯಾಗಿದೆ.

    ಫಾರೂಖ್ ದುಬೈನಲ್ಲಿ ಅಡಗಿದ್ದಾನೆ ಎನ್ನುವ ಮಾಹಿತಿಯನ್ನು ಗುಜರಾತ್ ಪೊಲೀಸರು ಕೇಂದ್ರ ಭದ್ರತಾ ಸಂಸ್ಥೆಗೆ ತಿಳಿಸಿದ್ದರು. ಭಾರತದ ಅಧಿಕಾರಿಗಳು ನೀಡಿದ ಮಾಹಿತಿಯ ಮೇರೆಗೆ ಈ ವರ್ಷದ ಮೇ 12 ರಂದು ಯುಎಇ ಪೊಲೀಸರು ಫಾರೂಖ್‍ನನ್ನು ಬಂಧಿಸಿದ್ದರು.

    ಫಾರೂಖ್ ಬಂಧನದ ಬಳಿಕ ಭಾರತದ ಸರ್ಕಾರ ಆತನ ಮೂಲದ ಬಗ್ಗೆ ಗುಜರಾತ್ ಮತ್ತು ಮುಂಬೈನಲ್ಲಿ ಮಾಹಿತಿ ಕಲೆ ಹಾಕುತಿತ್ತು. ಈ ವೇಳೆ ದುಬೈ ಕಾಲೇಜ್ ಒಂದರಲ್ಲಿ ಪಾಕಿಸ್ತಾನದ ಪಾಸ್‍ಪೋರ್ಟ್ ಬಳಸಿ ಅಧ್ಯಯನ ಮಾಡುತ್ತಿದ್ದ ವಿಚಾರ ತಿಳಿದು ಬಂದಿದೆ. ಈ ವಿಚಾರವನ್ನು ಬಲವಾಗಿ ಪ್ರತಿಪಾದಿಸಿದ್ದ ಪಾಕಿಸ್ತಾನ ಅಧಿಕಾರಿಗಳು ಫಾರೂಖ್ ನಮ್ಮ ದೇಶದ ಪ್ರಜೆ, ಭಾರತದ ಪ್ರಜೆ ಅಲ್ಲ ಎಂದು ಹೇಳಿ ತಮ್ಮ ದೇಶಕ್ಕೆ ಆತನನ್ನು ಕರೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

    ಯಾರು ಈ ಫಾರೂಖ್?
    ಫಾರೂಖ್ 17 ವರ್ಷಗಳಿಂದ ಭಾರತ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ. ಇತನು ಐಎಸ್‍ಐ ಸೇರಿದಂತೆ ಪಾಕಿಸ್ತಾನದ ಕೆಲವು ಭಯೋತ್ಪಾಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾನೆ. ಇತ್ತೀಚೆಗೆ ಫಾರೂಖ್ ಗುಜರಾತ್‍ನಲ್ಲಿ ಡಿ-ಗ್ಯಾಂಗ್ ಆಪ್ರೇಷನ್‍ನಲ್ಲಿ ಗುರುತಿಸಿಕೊಂಡಿದ್ದನು. ಇದರೊಂದಿಗೆ ಫಾರೂಖ್ ಭೂಗತ ಪಾತಕಿಗಳಾದ ದಾವುದ್ ಹಾಗೂ ಛೋಟಾ ಶಕೀಲ್ ಜೊತೆಗೆ ಸಂಪರ್ಕ ಹೊಂದಿದ್ದಾನೆ.

    2003 ಮಾರ್ಚ್ ತಿಂಗಳಿನಲ್ಲಿ ಗುಜರಾತಿನ ಮಾಜಿ ಸಚಿವ ಹರೇನ್ ಪಾಂಡ್ಯ (43) ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿತ್ತು. ಈ ವೇಳೆ ಪಾಂಡ್ಯ ಅವರ ದೇಹದೊಳಗೆ 5 ಗುಂಡು ಸೇರಿದ್ದವು. ಬಿಜೆಪಿ ಮುಖಂಡ ಹರೇನ್ ಪಾಂಡ್ಯ ಹತ್ಯೆ ಪ್ರಕರಣದಲ್ಲಿ ಫಾರುಕ್ ಆರೋಪಿಯಾಗಿದ್ದಾನೆ. ಅಷ್ಟೇ ಅಲ್ಲದೆ ಪಾಕಿಸ್ತಾದಲ್ಲಿ ತನ್ನ ಸಂಬಂಧಿ ಫೈಜಲ್ ಮಿರ್ಜಾ ಹಾಗೂ ಅಲ್ಲಾಹರಖಾನ್ ಮುನ್ಸುರಿ ಜೊತೆ ಸೇರಿ ಭಯೋತ್ಪಾನಾ ತರಬೇತಿ ಕೇಂದ್ರ ಪಾರಂಭಿಸಿದ್ದನು. ಸದ್ಯ ಫೈಜಲ್ ಹಾಗೂ ಮುನ್ಸುರಿಯನ್ನು ಮಹಾರಾಷ್ಟ್ರ ಎಟಿಎಸ್ ಬಂಧಿಸಿದೆ.

  • ಪಾಕ್‍ನಲ್ಲಿ ಅಡುಗೆ ಕೆಲಸ ಮಾಡಿ ಭಾರತದ ರಹಸ್ಯವನ್ನು ಐಎಸ್‍ಐಗೆ ತಿಳಿಸಿದ!

    ಪಾಕ್‍ನಲ್ಲಿ ಅಡುಗೆ ಕೆಲಸ ಮಾಡಿ ಭಾರತದ ರಹಸ್ಯವನ್ನು ಐಎಸ್‍ಐಗೆ ತಿಳಿಸಿದ!

    ಡೆಹ್ರಾಡೂನ್: ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಉತ್ತರಪ್ರದೇಶದ ಭಯೋತ್ಪಾದನ ನಿಗ್ರಹ ದಳ(ಎಟಿಎಸ್) ಬಂಧಿಸಿದೆ.

    ಆರೋಪಿಯನ್ನು ಉತ್ತರಾಖಂಡದ ಪಿತ್ತೋರ್‍ಗಢ ಜಿಲ್ಲೆಯ ಕಿರೊಲಾ ಗ್ರಾಮದ ರಮೇಶ್ ಸಿಂಗ್ ಕನ್ಯಾಲ್ (43) ಎಂದು ಗುರುತಿಸಲಾಗಿದೆ. ಅವನು ಪಾಕಿಸ್ತಾನದ ಇಂಟರ್ ಸರ್ವೀಸ್ ಇಂಟೆಲಿಜೆನ್ಸ್‍ಗೆ (ಐಎಸ್‍ಐ)ಗೆ ರಾಷ್ಟ್ರೀಯ ಭದ್ರತಾ ಮಾಹಿತಿಯನ್ನು ನೀಡುತ್ತಿದ್ದ ಎಂದು ವರದಿಯಾಗಿದೆ.

    ಉತ್ತರ ಪ್ರದೇಶದ ಎಟಿಎಸ್‍ನ ಐದು ಜನರ ತಂಡವು ಆರೋಪಿಯನ್ನು ಆತನ ಮನೆಗೆ ತೆರಳಿ ಬಂಧಿಸಿದೆ. ಆತನನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಕೋರ್ಟ್ ಹೆಚ್ಚಿನ ವಿಚಾರಣೆಗೆ ಎಟಿಎಸ್ ಕಸ್ಟಡಿಗೆ ನೀಡಿದೆ.

    ಬೇಹುಗಾರಿಕೆ ನಡೆಸುತ್ತಿದ್ದ ಅನುಮಾನದ ಮೇಲೆ ಆತನನ್ನು ಬಂಧಿಸಲಾಗಿದೆ ಎಂದು ಎಟಿಎಸ್‍ನ ಜನರಲ್ ಇನ್ಸ್ ಪೆಕ್ಟರ್ ಆಸೀಂ ಅರುಣ್ ತಿಳಿಸಿದ್ದಾರೆ. ಈ ಹಿಂದೆ ಪಾಕಿಸ್ತಾನದಲ್ಲಿ ಕೆಲಸ ಮಾಡುತ್ತಿದ್ದ ಭಾರತದ ರಾಯಭಾರಿಯ ನಿವಾಸದಲ್ಲಿ ಅಡುಗೆ ಕೆಲಸಕ್ಕಾಗಿ ಆರೋಪಿಯನ್ನು ನಿಯೋಜಿಸಲಾಗಿತ್ತು. 2015 ರಿಂದ 2017ರ ವರೆಗೆ ಅಲ್ಲಿ ಕೆಲಸ ಮಾಡುತ್ತಿದ್ದಾಗ ಐಎಸ್‍ಐ ಈತನನ್ನು ಸಂಪರ್ಕಿಸಿ ಹಣದ ಆಸೆ ತೋರಿಸಿದೆ. ಈ ಆಸೆಗೆ ಬಲಿಯಾದ ಈತ ಭಾರತದ ಭದ್ರತೆಗೆ ಸಂಬಂಧಿಸಿದ ಮಾಹಿತಿಯನ್ನು ಐಎಸ್‍ಐಗೆ ನೀಡುತ್ತಿದ್ದಾನೆ ಎನ್ನುವ ಖಚಿತ ಮಾಹಿತಿ ಪಿತ್ತೋರ್‍ಗಢ ಜಿಲ್ಲಾ ಪೊಲೀಸರಿಗೆ ಸಿಕ್ಕಿತ್ತು.

    ಸೇನೆಯ ಗುಪ್ತಚರ ಇಲಾಖೆ ಈತನ ಚಟುವಟಿಕೆಯ ಮೇಲೆ ಕಣ್ಣಿಟ್ಟ ಬಳಿಕ ಎಟಿಎಸ್‍ಗೆ ತಿಳಿಸಿತ್ತು. ಈಗ ಎಟಿಎಸ್ ರಮೇಶ್ ಸಿಂಗ್ ಕನ್ಯಾಲ್ ಬಳಿಯಿದ್ದ ಪಾಕಿಸ್ತಾನದ ಸಿಮ್ ಕಾರ್ಡ್ ಹಾಗೂ ಮೊಬೈಲ್‍ನ್ನು ವಶಪಡಿಸಿಕೊಂಡಿದೆ.

    ಆರೋಪಿ ಸಹೋದರ ಕೂಡ ಭಾರತೀಯ ಸೇನೆಯಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಕನ್ಯಾಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣ ಬಯಲಿಗೆಳೆದಿದ್ದ ಪೊಲೀಸ್ ಅಧಿಕಾರಿ ಆತ್ಮಹತ್ಯೆ

    ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣ ಬಯಲಿಗೆಳೆದಿದ್ದ ಪೊಲೀಸ್ ಅಧಿಕಾರಿ ಆತ್ಮಹತ್ಯೆ

     

    ಮುಂಬೈ: ಮಹಾರಾಷ್ಟ್ರದಲ್ಲಿ ಹಲವು ಅಕ್ರಮಗಳನ್ನು ಮಟ್ಟ ಹಾಕಿ ಹೆಸರು ಗಳಿಸಿದ್ದ ದಕ್ಷ ಪೊಲೀಸ್ ಅಧಿಕಾರಿ ಹಿಮಾಂಶ್ ರಾಯ್ ಶುಕ್ರವಾರ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ನಗರದ ಮಲಬಾರ್ ಹಿಲ್ಸ್‍ನಲ್ಲಿರುವ ತಮ್ಮ ನಿವಾಸದಲ್ಲಿ ಮಧ್ಯಾಹ್ನ ಸರ್ವಿಸ್ ರಿವಾಲ್ವಾರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

    ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಅವರನ್ನು ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ದಾರಿಯ ಮಧ್ಯದಲ್ಲಿಯೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ, ಶವವನ್ನು ಅಲ್ಲಿಯೇ ಇರಿಸಲಾಗಿದ್ದು, ಆಸ್ಪತ್ರೆಯ ಹೊರಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ.

    ರಾಯ್ ಅವರು 1988ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದು, ಮಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳದ (ಎಟಿಎಸ್) ಮಾಜಿ ಮುಖ್ಯಸ್ಥರಾಗಿದ್ದರು. 2013ರ ಇಂಡಿಯನ್ ಪ್ರೀಮಿಯರ್ ಲೀಗ್ ಸ್ಪಾಟ್ ಫಿಕ್ಸಿಂಗ್ ಹಗರಣ, 2012ರಲ್ಲಿ ನಡೆದ ವಕೀಲೆ ಪಲ್ಲವಿ ಪುಕರ್ಯಾಸ್ತ ಮತ್ತು ಪತ್ರಕರ್ತ ಜ್ಯೋತಿರ್ಮಯಿ ಡೇ ಹತ್ಯೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳ ತನಿಖೆಗಳನ್ನು ನಡೆಸಿದ್ದರು.

    ಕಳೆದ 2 ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಕೆಲ ತಿಂಗಳಿನಿಂದ ದೀರ್ಘ ರಜೆಯನ್ನು ಪಡೆದಿದ್ದರು. ಅವರ ಕೊಠಡಿಯಲ್ಲಿ 1 ಪುಟದ ಸೂಸೈಡ್ ನೋಟ್ ಪತ್ತೆಯಾಗಿದ್ದು ಕ್ಯಾನ್ಸರ್ ಕಾರಣಕ್ಕಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಅಷ್ಟೇ ಅಲ್ಲದೇ ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದುಕೊಂಡಿದ್ದಾರೆ.

  • ಶಂಕಿತ ಐಸಿಸ್ ಉಗ್ರನ ಬಂಧನ-ಸಹಚರರ ಮೊಬೈಲ್ ರೆಕಾರ್ಡ್ ನಿಂದಾಗಿ ಸಿಕ್ಕಿಬಿದ್ದ!

    ಶಂಕಿತ ಐಸಿಸ್ ಉಗ್ರನ ಬಂಧನ-ಸಹಚರರ ಮೊಬೈಲ್ ರೆಕಾರ್ಡ್ ನಿಂದಾಗಿ ಸಿಕ್ಕಿಬಿದ್ದ!

    ಮುಂಬೈ: ಶಂಕಿತ ಐಸಿಸ್ ಉಗ್ರನೊಬ್ಬನನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಭಯತ್ಪೋದನಾ ನಿಗ್ರಹ ದಳ (ಎಟಿಎಸ್)ದ ಅಧಿಕಾರಿಗಳು ಶನಿವಾರ ಬಂಧಿಸಿದ್ದು, ಇಂದು ಅಧಿಕಾರಿಗಳು ಈ ವಿಷಯವನ್ನು ತಿಳಿಸಿದ್ದಾರೆ.

    ಅಬು ಜಯೀದ್ ಬಂಧಿತ ಶಂಕಿಯ ಐಸಿಸ್ ಉಗ್ರ. ಜಯೀಸ್ ಮೂಲತಃ ಉತ್ತರ ಪ್ರದೇಶ ರಾಜ್ಯದ ಅಜಮ್‍ಘಡ್ ನಿವಾಸಿಯಾಗಿದ್ದಾನೆ. ಸೌದಿ ಅರೇಬಿಯಾದಿಂದ ಶನಿವಾರ ಮುಂಬೈಗೆ ಬಂದಿಳಿದ ಜಯೀದ್ ನನ್ನು ಮುಂಬೈನ ಎಟಿಎಸ್ ಅಧಿಕಾರಿಗಳು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿ ಆನಂದ್ ಕುಮಾರ್ ಇಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

    ಸೋಶಿಯಲ್ ನೆಟ್‍ವರ್ಕ್: ಅಬು ಜಯೀದ್ ರಿಯಾದ್ ನಲ್ಲಿ ವಾಸವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಗ್ರೂಪ್ ಕ್ರಿಯೇಟ್ ಮಾಡಿ, ಅದರ ಮೂಲಕ ಭಾರತದಲ್ಲಿರುವ ಯುವಕರನ್ನು ಉಗ್ರ ಚಟುವಟಿಕೆಗಳಲ್ಲಿ ಭಾಗಿಯುವಂತೆ ಪ್ರಚೋದನೆ ನೀಡುತ್ತಿದ್ದನು. ಈ ಸಂಬಂಧ ಅಬು ಜಯೀದ್ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಕೆಲವು ಶಂಕಿತರಾದ ಉಮರ್ ಅಲಿಯಾಸ್ ನಜೀಮ್, ಘಾಜೀ ಬಾಬಾ ಅಲಿಯಾಸ್ ಮುಜುಮ್ಮಿ, ಮುಫ್ತಿ ಅಲಿಯಾಸ್ ಫಯಾಜ್ ಮತ್ತು ಜ್ಯಾಕ್‍ವಾನ್ ಅಲಿಯಾಸ್ ಈಥಿಶೆಮ್ ಎಂಬವರು ಮೊಬೈಲ್ ರೆಕಾರ್ಡ್ ಗಳಿಂದ ಅಬು ಜಯೀದ್ ಕುರಿತು ಮಾಹಿತಿಗಳು ಲಭ್ಯವಾಗಿದ್ದವು. ಇವರೆಲ್ಲರೂ ಒಂದು ಆನ್‍ಲೈನ್ ನೆಟ್‍ವರ್ಕ್ ಒಂದು ಒಂದು ನಿರ್ಧಿಷ್ಟ ಗ್ರೂಪ್ ಒಂದರ ಮೂಲಕ ಮಾತುಕತೆಯನ್ನು ನಡೆಸುತ್ತಿದ್ದರು. ಈ ಎಲ್ಲರು ದೇಶದ ಕೆಲವು ನಗರಗಳ ಮೇಲೆ ಭಯತ್ಪೋದಾಯಕ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

    ಸದ್ಯ ಅಬು ಜಯೀದ್ ನನ್ನು ಮುಂಬೈನಿಂದ ಲಕ್ನೋ ನಗರಕ್ಕೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗೆ ಸಂಬಂಧಿಸಿದಂತೆ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗುತ್ತದೆ ಎಂದು ಆನಂದ್ ಕುಮಾರ್ ತಿಳಿಸಿದ್ದಾರೆ.