ಚಂಡೀಗಢ: ಹಿರಿಯ ಐಪಿಎಸ್ ಅಧಿಕಾರಿ ವೈ. ಪೂರ್ಣ್ ಕುಮಾರ್ (Y. Poorn Kumar) ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಂಡೀಗಢದ ಸೆಕ್ಟರ್ -11 ರಲ್ಲಿರುವ ತಮ್ಮ ಸರ್ಕಾರಿ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಂಡೀಗಢ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಕುಮಾರ್ ಅವರು ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇದನ್ನೂ ಓದಿ: ಬಿಹಾರ ವಿಧಾನಸಭೆ ಚುನಾವಣೆ; ಎನ್‌ಡಿಎ-ಇಂಡಿಯಾ ಒಕ್ಕೂಟದ ನಡುವೆ ಸೀಟು ಹಂಚಿಕೆ ಲೆಕ್ಕಾಚಾರ
ವೈ. ಪೂರ್ಣ್ ಕುಮಾರ್ ಎಡಿಜಿಪಿ ಶ್ರೇಣಿಯ ಅಧಿಕಾರಿಯಾಗಿದ್ದರು. ಅವರನ್ನು ಸೆ.29 ರಂದು ರೋಹ್ಟಕ್‌ನ ಸುನಾರಿಯಾ ಜೈಲಿಗೆ ವರ್ಗಾಯಿಸಲಾಗಿತ್ತು. ಸಾಧ್ವಿಗಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ರಾಮ್ ರಹೀಮ್ ಶಿಕ್ಷೆ ಅನುಭವಿಸುತ್ತಿರುವುದು ಇದೇ ಜೈಲಿನಲ್ಲಿ.
ವೈ. ಪೂರ್ಣ್ ಕುಮಾರ್ ಅವರ ಪತ್ನಿ ಅಮನ್ ಪಿ. ಕುಮಾರ್ ಕೂಡ ಐಪಿಎಸ್ ಅಧಿಕಾರಿ. ಅ.5 ರಂದು ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಮತ್ತು ಇತರ ಅಧಿಕಾರಿಗಳೊಂದಿಗೆ ಜಪಾನ್ ಪ್ರವಾಸಕ್ಕೆ ಹೋಗಿದ್ದರು. ಅವರು ನಾಳೆ ಸಂಜೆ ಭಾರತಕ್ಕೆ ಮರಳಲಿದ್ದಾರೆ. ಇದನ್ನೂ ಓದಿ: ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸಾವು ಪ್ರಕರಣ – ಸುಪ್ರೀಂಕೋರ್ಟ್‌ಗೆ ಪಿಐಎಲ್
ಕಳೆದ ವರ್ಷ ವೈ. ಪೂರ್ಣ್ ಕುಮಾರ್ ಅವರು ಕೆಲವು ಐಪಿಎಸ್ ಅಧಿಕಾರಿಗಳ ಬಡ್ತಿ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು. ಈ ಅಧಿಕಾರಿಗಳು 1991, 1996, 1997 ಮತ್ತು 2005 ರ ಬ್ಯಾಚ್‌ಗಳಿಗೆ ಸೇರಿದವರಾಗಿದ್ದರು. ಈ ಬಡ್ತಿಗಳನ್ನು ಅನುಚಿತವಾಗಿ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿಗೆ ಪತ್ರ ಬರೆದಿದ್ದರು. ಹಣಕಾಸು ಇಲಾಖೆಯು ಗೃಹ ಸಚಿವಾಲಯದ ನಿಯಮಗಳನ್ನು ನಿರ್ಲಕ್ಷಿಸಿ ಬಡ್ತಿಗಳನ್ನು ಸ್ವಂತವಾಗಿ ಅನುಮೋದಿಸಿದೆ ಎಂದು ಆಪಾದಿಸಿದ್ದರು.
ಮಂಡ್ಯ: ಬೆಂಗಳೂರು- ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿ (Bengaluru- Mysuru Expressway) ಯಲ್ಲಿ ಅಪಘಾತ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ರಾಮನಗರದ ನಂತರ ಇದೀಗ ಮಂಡ್ಯ ವ್ಯಾಪ್ತಿಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಪರಿಶೀಲನೆ ನಡೆಸುತ್ತಿದ್ದಾರೆ. ಈ ವೇಳೆ ವೃದ್ಧೆಯೊಬ್ಬರು ಎಡಿಜಿಪಿ ಮುಂದೆ ತಮ್ಮ ಅಳಲುತೋಡಿಕೊಂಡಿದ್ದಾರೆ.
ವೃದ್ಧೆ ಹೇಳಿದ್ದೇನು..?: ಸ್ವಾಮಿ ಇವರು ಮಾಡಿರೋ ಕೆಲಸಕ್ಕೆ ನನ್ನ ಗುಡಿಸಲಿಗೆ ನೀರು ಬರುತ್ತಿದೆ. ಇವರು ಸರ್ವಿಸ್ ರಸ್ತೆಯ ಚರಂಡಿಯನ್ನು ಸರಿಯಾಗಿ ಮಾಡಿಲ್ಲ. ಮಳೆ ನೀರು ಎಲ್ಲಾ ನನ್ನ ಗುಡಿಸಲಿಗೆ ಬರುತ್ತಿದೆ. ನೋಡಿ ಸ್ವಾಮಿ ನೆಮ್ಮದಿಯಾಗಿ ಬದುಕೋಕೆ ಆಗುತ್ತಿಲ್ಲ. ಅವರಿಗೆ ಹೇಳಿ ಸರಿ ಮಾಡಿಸಿ ಸ್ವಾಮಿ ಎಂದು ವೃದ್ಧೆ ಮನವಿ ಮಾಡಿಕೊಂಡಿದ್ದಾರೆ. ವೃದ್ಧೆಯ ಮಾತು ಕೇಳಿರುವ ಎಡಿಜಿಪಿ ಸರಿ ಮಾಡಿಸುವ ಭರವಸೆ ನೀಡಿದರು.
ಇತ್ತ ಜನರು ಕೂಡ ಎಡಿಜಿಪಿ ಅಲೋಕ್ ಕುಮಾರ್ ಗೆ ದೂರು ನೀಡಿದ್ದಾರೆ. ಸರ್ವಿಸ್ ರಸ್ತೆಯನ್ನು ಸಹ ಇವರು ಸರಿಯಾಗಿ ಮಾಡಿಲ್ಲ. ಸರ್ವಿಸ್ ರಸ್ತೆಯಲ್ಲಿ ಚರಂಡಿಗಳು ಆಗಿಲ್ಲ. ಬೇಡದ ಸ್ಥಳದಲ್ಲಿ ರಸ್ತೆ ಹಂಪ್ಸ್ ಹಾಕಿದ್ದಾರೆ. ಬೇಕಾಗಿರುವ ಸ್ಥಳದಲ್ಲಿ ರಸ್ತೆ ಹಮ್ಸ್ ಹಾಕಿಲ್ಲ. ಇದರಿಂದ ಹೆಚ್ಚು ಅಪಘಾತಗಳು ಆಗುತ್ತಿವೆ ಎಂದು ದೂರಿದ್ದಾರೆ.
ಜನರ ದೂರು ಸ್ವೀಕರಿಸಿರುವ ಅಲೋಕ್ ಕುಮಾರ್, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೆಲ ತಪ್ಪುಗಳಿಂದ ಅಪಘಾತಗಳು ಹೆಚ್ಚಾಗುತ್ತಿವೆ. ಜನರು ನಿಮ್ಮ ಜೊತೆಗೆ ಪೊಲೀಸ್ ಇಲಾಖೆಗೆ ಬೈಯ್ಯುತ್ತಾರೆ. ಆಗಿರುವ ತಪ್ಪುಗಳನ್ನು ಸರಿಪಡಿಸಬೇಕು. ತಿರುವು ಇರುವ ಕಡೆ ನಾಮ ಫಲಕ ಹಾಕಬೇಕು. ಸರ್ವಿಸ್ ರಸ್ತೆಯಲ್ಲಿ ಲೋಪಗಳನ್ನು ಸರಿಪಡಿಸಿ. ಅಪಘಾತ ಪ್ರಕರಣಗಳನ್ನು ತಡೆಯುವುದು ಹೆದ್ದಾರಿ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆಯ ಕರ್ತವ್ಯ ಎಂದಿದ್ದಾರೆ.
ಅಪಘಾತ ಪ್ರಕರಣಗಳ ಅಂಕಿ-ಅಂಶ: 2023 ರ ಜನವರಿಯಿಂದ ಜೂನ್ 26 ರ ರಾತ್ರಿ 9 ಗಂಟೆಗೆವರೆಗೆ ಮೈ-ಬೆಂ ದಶಪಥ ಹೆದ್ದಾರಿಯಲ್ಲಿ ನಡೆದಿರುವ ಅಪಘಾತ ಪ್ರಕರಣಗಳ ಅಂಕಿ ಅಂಸಗಳು ಇಂತಿವೆ. ಮಾರಾಣಾಂತಿಕ ಅಪಘಾತ ಪ್ರಕರಣಗಳ ಸಂಖ್ಯೆ- 61, ಮಾರಾಣಾಂತಿಕವಲ್ಲ ಅಪಘಾತ ಪ್ರಕರಣ- 210, ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ- 64, ಅಪಘಾತದಲ್ಲಿ ಗಾಯಗೊಂಡವರ ಸಂಖ್ಯೆ- 335 ಆಗಿದೆ.
ಕಲಬುರಗಿ: ಮಹಾ ಶಿವರಾತ್ರಿ (Mahashivaratri) ಯಂದು ಕಲಬುರಗಿಯ ವಿವಾದಿತ ಲಾಡ್ಲೆ ಮಶಾಕ್ ದರ್ಗಾದಲ್ಲಿನ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಕೋರ್ಟ್ ಅನುಮತಿ ಕೊಟ್ಟ ಬೆನ್ನಲ್ಲೇ ಹಿಂದೂಗಳಲ್ಲಿ ಸಂತಸ ಮನೆ ಮಾಡಿದೆ. ಮತ್ತೊಂದೆಡೆ ಶಿವರಾತ್ರಿಯಂದೆ ಲಾಡ್ಲೆ ಮಶಾಕ್ ದರ್ಗಾದ ಉರುಸ್ ಇರುವ ಹಿನ್ನೆಲೆ ಆಳಂದ ಪಟ್ಟಣದ್ಯಾಂತ ಖಾಕಿ ಸರ್ಪಗಾವಲು ಹಾಕಿದ್ದಾರೆ. ಶಿವಲಿಂಗ (Shivalinga) ಕ್ಕೆ ಪೂಜೆ ಸಲ್ಲಿಸುವ ಕಾರ್ಯಕ್ರಮಕ್ಕೆ ಯಾವುದೇ ಅಡೆತಡೆಯಾಗದಂತೆ ನೋಡಿಕೊಳ್ಳಲು ಆಳಂದ ಪಟ್ಟಣದಲ್ಲಿ ಎಡಿಜಿಪಿ ಅಲೋಕ್ ಕುಮಾರ್ (ADGP Alok Kumar) ಖುದ್ದು ಫೀಲ್ಡಿಗಿಳಿತಿದ್ದಾರೆ.
ಕಳೆದ ವರ್ಷದ ಶಿವರಾತ್ರಿ (Shivaratri) ಹಬ್ಬದಂದು ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿನ ರಾಘವ ಚೈತನ್ಯ ಶಿವಲಿಂಗದ ಪೂಜೆ ಸಂದರ್ಭದಲ್ಲಿ ಹಿಂದೂ-ಮುಸ್ಲಿಂ ಸಮುದಾಯಗಳ ಮಧ್ಯೆ ನಡೆದ ಗಲಾಟೆ ಇನ್ನೂ ಮರೆಯಾಗಿಲ್ಲ. ಅದಾಗಲೇ ಮತ್ತೆ ಶಿವರಾತ್ರಿ ಬಂದಿದೆ. ಈ ಬಾರಿಯು ಕೂಡ ಶಿವರಾತ್ರಿಯಂದು ಲಾಡ್ಲೆ ಮಶಾಕ್ ದರ್ಗಾರದ ಉರುಸ್ ಮತ್ತು ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಎರಡು ಸಮುದಾಯಗಳಿಗೆ ನ್ಯಾಯಾಲಯ ಅನುಮತಿ ನೀಡಿ ಕೆಲವೊಂದಿಷ್ಟು ಷರತ್ತುಗಳನ್ನು ವಿಧಿಸಿದೆ. ಅದರ ಪ್ರಕಾರ ಫೆಬ್ರವರಿ 18ರಂದು ಬೆಳಗ್ಗೆ 8 ಗಂಟೆಯಿಂದ 12 ಗಂಟೆಯವರೆಗೆ ಮುಸ್ಲಿಮರು ಉರುಸ್ ಆಚರಣೆಗೆ, ಮಧ್ಯಾಹ್ನ ಎರಡು ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ ಹಿಂದೂಗಳಿಗೆ ಶಿವಲಿಂಗ ಪೂಜೆಗೆ ಅವಕಾಶ ನೀಡಿದೆ.
ಆದರೆ ಕಳೆದ ವರ್ಷದ ಘಟನೆ ಮರುಕಳಿಸಬಾರದು ಅನ್ನೋ ನಿಟ್ಟಿನಲ್ಲಿ ಆಳಂದ ಪಟ್ಟಣದ್ಯಾಂತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದ್ದು, ಖುದ್ದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಫೀಲ್ಡಿಗೆ ಇಳಿಯಲಿದ್ದಾರೆ. ಎಡಿಜಿಪಿ ಅಲೋಕ್ ಕುಮಾರ್ ಇಂದು ಬೆಳಗ್ಗೆ 10ಕ್ಕೆ ಆಳಂದ ಪಟ್ಟಣದಲ್ಲಿ ರೂಟ್ ಮಾರ್ಚ್ ನಡೆಸಿ ಬಳಿಕ ಎರಡು ಸಮುದಾಗಳ ಪ್ರತ್ಯೇಕ ಸಭೆ ನಡೆಸಲಿದ್ದಾರೆ. ಇದನ್ನೂ ಓದಿ: ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕ್ಬೇಕು: ಅಶ್ವಥ್ ನಾರಾಯಣ್
ಶಿವರಾತ್ರಿ ಹಬ್ಬದಂದು ಬೆಳಗ್ಗೆ ಲಾಡ್ಲೆ ಮಶಾಕ್ ದರ್ಗಾದ ಉರುಸ್ ನಿಮಿತ್ತ ಮುಸ್ಲಿಮ್ ಸಮುದಾಯದ 15 ಜನರು ಮಾತ್ರ ತೆರಳಿ ಪ್ರಾರ್ಥನೆ ಸಲ್ಲಿಸಬೇಕು. ಅದಾದ ಬಳಿಕ ಮಧ್ಯಾಹ್ನ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಆಂದೋಲ ಸ್ವಾಮೀಜಿ ನೇತೃತ್ವದಲ್ಲಿ 15 ಜನ ಹಿಂದೂಗಳು ರಾಘವ ಚೈತನ್ಯ ಶಿವಲಿಂಗಕ್ಕೆ ಸಂಜೆ 6 ಗಂಟೆಯ ಒಳಗೆ ಪೂಜೆ ಸಲ್ಲಿಸಬಹುದಾಗಿದೆ. ಕಳೆದ ವರ್ಷದ ಗಲಾಟೆಯ ಹಿನ್ನಲೆಯಲ್ಲಿ ಎಚ್ಚೆತ್ತ ಇಲಾಖೆ ಈ ಬಾರಿ ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಿದ್ದು, ಡ್ರೋಣ್ ಕ್ಯಾಮೆರಾ (Drone Camera) ಅಳವಡಿಸಲಾಗ್ತಿದೆ. ಅಲ್ಲದೇ ಆಳಂದ ಪಟ್ಟಣಾದ್ಯಂತ 12 ಚೆಕ್ ಪೊಸ್ಟ್ ನಿರ್ಮಿಸಿ ಸವಾರರ ಮೇಲೆ ನಿಗಾ ವಹಿಸೋದಕ್ಕೆ ಮುಂದಾಗಿದೆ. ಇದೆಲ್ಲವನ್ನು ಖುದ್ದು ಅಲೋಕ್ ಕುಮಾರ್ ವೀಕ್ಷಣೆ ಮಾಡಲಿದ್ದಾರೆ.
ಮೈಸೂರು: ಕ್ರಿಮಿನಲ್ ಆರೋಪಿ ಸ್ಯಾಂಟ್ರೋ ರವಿಯನ್ನು (Santro Ravi) ರಾಜ್ಯಕ್ಕೆ ಕರೆತಂದಿರುವ ಪೊಲೀಸರು ಶನಿವಾರ ಪ್ರಾಥಮಿಕ ವಿಚಾರಣೆ ನಡೆಸಿದ್ದಾರೆ. ಎಸಿಪಿ ಶಿವಶಂಕರ್ ವಿಜಯನಗರ ಪೊಲೀಸ್ ಠಾಣೆಯಲ್ಲಿ (VijayaNagara Police Station) ಪ್ರಾಥಮಿಕ ತನಿಖೆ ನಡೆಸಿದ್ದಾರೆ.
ಕಳೆದ ಎರಡು ದಿನಗಳಿಂದ ಮೈಸೂರಿನಲ್ಲೇ ಉಳಿದಿರುವ ಎಡಿಜಿಪಿ (ADGP) ಅಲೋಕ್ ಕುಮಾರ್ (Alok Kumar) ಶನಿವಾರ ವಿಜಯನಗರ ಪೊಲೀಸ್ ಠಾಣೆಗೆ ಆಗಮಿಸಿ ತನಿಖಾಧಿಖಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಮುಂದಾಗಿದ್ದಾರೆ.
ನಾವು ಪೊಲೀಸ್ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರನ್ನ ಕೇಳ್ತೀವಿ. ಪೊಲೀಸ್ ಕಸ್ಟಡಿಯಲ್ಲಿ ಹೆಚ್ಚಿನ ವಿಚಾರಣೆ ನಡೆಸುತ್ತೇವೆ. ಸ್ಯಾಂಟ್ರೋ ರವಿ 11 ದಿನ ಎಲ್ಲೆಲ್ಲಿ ಓಡಾಡಿದ್ದ? ಯಾರು-ಯಾರು ಸಹಾಯ ಮಾಡಿದ್ದರು? ಇದರ ಬಗ್ಗೆ ಆರಂಭಿಕ ಮಾಹಿತಿ ಪಡೆಯುತ್ತಿದ್ದೇವೆ. ಸ್ಯಾಂಟ್ರೋ ರವಿ ವಿಚಾರಣೆಗೆ ಸ್ಪಂದಿಸುತ್ತಿದ್ದಾನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಗುಜರಾತ್‌ನಲ್ಲಿ ಬಂಧನ
ಇದೇ ವೇಳೆ ಸ್ಯಾಂಟ್ರೋ ರವಿ ಕಾಯಿಲೆ ಬಗ್ಗೆ ಪ್ರತಿಕ್ರಿಯಿಸಿ, ಸ್ಯಾಂಟ್ರೋ ರವಿಗೆ ಮಧುಮೇಹ (Diabetes) ಕಾಯಿಲೆಯಿದೆ. ಗಂಟೆಗೊಮ್ಮೆ ಇನ್ಸುಲಿನ್ ಪಡೆದುಕೊಳ್ಳುತ್ತಿದ್ದಾನೆ. ಸೂಕ್ತ ಔಷಧಿ ವ್ಯವಸ್ಥೆ ಮಾಡಲು ಸೂಚಿಸಿದ್ದೇನೆ. ಅವನಿಗೆ ಡಯಾಬಿಟಿಕ್ ಬಿಟ್ಟರೆ ಅಂತಹ ಸಮಸ್ಯೆ ಇಂದಂತೆ ಕಾಣ್ತಿಲ್ಲ. ಸ್ಯಾಂಟ್ರೋ ರವಿ ಸೇರಿದಂತೆ ಇನ್ನೂ ನಾಲ್ವರ ವಿಚಾರಣೆ ನಡೆಸುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಸ್ಯಾಂಟ್ರೋ ರವಿ ಬಂಧಿಸಿದ್ದು ಹೇಗೆ?
4 ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ 11 ತಂಡಗಳಾಗಿ ಪೊಲೀಸರು ಸ್ಯಾಂಟ್ರೋಗಾಗಿ ಹುಡುಕಾಟ ನಡೆಸಿದ್ದರು. ಆತ ಪದೇ ಪದೇ ಸಿಮ್ ಕಾರ್ಡ್ಗಳನ್ನು ಬದಲಿಸುತ್ತಿದ್ದ. ಒಮ್ಮೆ ಬಳಸಿದ ಸಿಮ್ ಅನ್ನು ಆತ ಮತ್ತೊಮ್ಮೆ ಬಳಸುತ್ತಿರಲಿಲ್ಲ. ಅಷ್ಟೇ ಅಲ್ಲದೇ ಆನ್‌ಲೈನ್ ಖಾತೆಯ ಮೂಲಕ ಎಲ್ಲಿಯೂ ವ್ಯವಹಾರ ನಡೆಸಿರಲಿಲ್ಲ. ಇದರಿಂದ ಪೊಲೀಸರಿಗೆ ಆತನನ್ನು ಪತ್ತೆಹಚ್ಚುವುದು ಸವಾಲಾಗಿತ್ತು. ಗುರುವಾರ ರಾತ್ರಿ ಗುಜರಾತ್‌ನ ಪ್ರತಿಷ್ಠಿತ ಹೋಟೆಲ್ ಒಂದರಲ್ಲಿ ರವಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರ ತಂಡ ಶುಕ್ರವಾರ ಮಧ್ಯಾಹ್ನ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಬ್ಬರು ಐಪಿಎಸ್ ತಂಡಗಳ ನೇತೃತ್ವದಲ್ಲಿ ಸ್ಯಾಂಟ್ರೋ ರವಿಯನ್ನು ಪೊಲೀಸರು ಬಂಧಿಸಿ, ಮೈಸೂರಿಗೆ ಕರೆತಂದಿದ್ದಾರೆ.
Live Tv
[brid partner=56869869 player=32851 video=960834 autoplay=true]
ಮೈಸೂರು: ಪರಿಶಿಷ್ಟ ಸಮುದಾಯದ ಮಹಿಳೆಯನ್ನು ವಂಚಿಸಿ, ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ, ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಸ್ಯಾಂಟ್ರೋ ರವಿಯನ್ನು (Santro Ravi) ಪೊಲೀಸರು ಕೊನೆಗೂ ಬಂಧಿಸಿದ್ದಾರೆ.
ಪತ್ನಿಯ ಆರೋಪಗಳೇನು?
ತನಗೆ ಲೈಂಗಿಕ ಸೋಂಕು ಇದೆ ಎಂಬುದು ಗೊತ್ತಿದ್ದರೂ ಆರೋಪಿ ಪತಿ ನನಗೂ ಕೂಡ ಸೋಂಕನ್ನು ತಗುಲಿಸಿದ್ದಾನೆ. ಸೋಂಕು ಪ್ರಾಣಾಪಾಯಕಾರಿಯಾಗಿದ್ದು, ಔಷಧಿ ಇಲ್ಲ. ವರದಕ್ಷಿಣೆ ಕಿರುಕುಳ ನೀಡಿ, ಒತ್ತಾಯಪೂರ್ವಕ ಗರ್ಭಪಾತ ಮಾಡಿಸಿದ್ದಾನೆ. ಹಣದ ದುರಾಸೆಗೆ ಬಿದ್ದು ಮತ್ತೊಬ್ಬರೊಂದಿಗೆ ಲೈಂಗಿಕ ಸಂಪರ್ಕ ಮಾಡುವಂತೆ ಒತ್ತಾಯಿಸಿದ್ದಾನೆ. ಆರೋಪಿಯು ಉದ್ಯೋಗ ನೀಡುವ ನೆಪದಲ್ಲಿ ಕರೆಸಿಕೊಂಡು ಮತ್ತು ಬರುವ ಜ್ಯೂಸ್ ನೀಡಿ, ಪ್ರಜ್ಞಾವಸ್ಥೆ ಕಳೆದುಕೊಂಡ ಬಳಿಕ ಅತ್ಯಾಚಾರ ನಡೆಸಿದ್ದ. ನನ್ನ ಬೆತ್ತಲೆ ಫೋಟೋಗಳನ್ನು ತೆಗೆದು ಬೆದರಿಕೆ ಹಾಕಿದ್ದ. ನಂತರ ಮದುವೆಯಾದ. ಮದುವೆಯಾದ ಬಳಿಕವೂ ಹಿಂಸೆ ನೀಡಿದ ಎಂದು ಪತ್ನಿ ಆರೋಪಿಸಿದ್ದರು.
ಸರ್ಕಾರಿ ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲೂ ಸ್ಯಾಂಟ್ರೋ ರವಿ ಹೆಸರು ಕೇಳಿಬಂದಿತ್ತು. ಬಿಜೆಪಿ ಸಚಿವರ ಜೊತೆ ಕಾಣಿಸಿಕೊಂಡಿರುವ ಫೋಟೋಗಳು ಕೂಡ ವೈರಲ್ ಆಗಿದ್ದವು. “ಸಿಎಂ ಕೂಡ ನನ್ನನ್ನು ಸರ್ ಎನ್ನುತ್ತಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರಿಗೆ ಸ್ಯಾಂಟ್ರೋ ರವಿ ಧಮ್ಕಿ ಹಾಕಿದ್ದ ಆಡಿಯೋ ಕೂಡ ವೈರಲ್ ಆಗಿತ್ತು. ಹೀಗಾಗಿ ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ಕಿಡಿಕಾರಿದ್ದವು. ಇದನ್ನೂ ಓದಿ: ಸ್ಯಾಂಟ್ರೋ ರವಿಗಾಗಿ 4 ಜಿಲ್ಲೆಯಲ್ಲಿ ಪೊಲೀಸರಿಂದ ಶೋಧ- ಮೈಸೂರಲ್ಲೇ ಎಡಿಜಿಪಿ ಠಿಕಾಣಿ
ಮೈಸೂರಿನ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಈ ವೇಳೆ, “ಸ್ಯಾಂಟ್ರೋ ರವಿ ಬಂಧನದ ನಂತರವೇ ನಾನು ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತೇನೆ. ಸ್ಯಾಂಟ್ರೋ ರವಿ ಬಂಧನವಾಗುವರೆಗೂ ನಾನು ಮೈಸೂರಿನಲ್ಲೇ ಇರುತ್ತೇನೆ. ಶೀಘ್ರದಲ್ಲೇ ಸ್ಯಾಂಟ್ರೋ ರವಿ ಬಂಧನದ ಸಿಹಿ ಸುದ್ದಿ ಕೊಡುತ್ತೇವೆ ಅಂತಾ ಎಡಿಜಿಪಿ (ADGP) ಅಲೋಕ್ ಕುಮಾರ್ (Alok Kumar) ಹೇಳಿದ್ದರು.
Live Tv
[brid partner=56869869 player=32851 video=960834 autoplay=true]
ಮಂಗಳೂರು: ಕುಕ್ಕರ್ ಬಾಂಬ್ ಬ್ಲಾಸ್ಟ್ (Cooker Bomb Blast) ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಅನಾಹುತ ತಪ್ಪಿಸಿದ್ದಕ್ಕೆ ದೇವರಿಗೆ ಧನ್ಯವಾದವನ್ನು ಎಡಿಜಿಪಿ ಅಲೋಕ್ ಕುಮಾರ್ (Alok Kumar) ಸಲ್ಲಿಸಿದರು.
ಅಧರ್ಮದ ಹಾದಿಯಲ್ಲಿ ಬಂದವರಿಗೆ ಶಿಕ್ಷೆ ನೀಡಿದ ತುಳುನಾಡಿನ ಅವಳಿ ವೀರ ಪುರುಷರ ಪವಾಡ ಇದಾಗಿದೆ. ಗರೋಡಿ ಕ್ಷೇತ್ರ (Garodi Kshetra) ದ 200 ಮೀಟರ್ ದೂರ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿದೆ. ದೊಡ್ಡ ಅನಾಹುತ ತಪ್ಪಿಸಿದ್ದೇ ಗರೋಡಿ ಕ್ಷೇತ್ರದ ಕಾರಣಿಕ ಶಕ್ತಿಗಳು ಎಂದು ಭಕ್ತರು ಹೇಳಿದ್ದಾರೆ ಎಂದರು.
ಮಂಗಳೂರಿನ ಗರೋಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರದಲ್ಲಿ ನೆಲೆಯೂರಿರುವ ಕೋಟಿ-ಚೆನ್ನಯ್ಯ ಅವಳಿ ಮಹಾಪುರುಷ ಶಕ್ತಿಗಳು. ದೊಡ್ಡ ಮಟ್ಟದ ಅನಾಹುತ ತಪ್ಪಿಸಿದ್ದು ಈ ಶಕ್ತಿಗಳು. ಮಾನವ ಬಲವೊಂದಿದ್ದರೆ ಸಾಲದು ದೈವಬಲವೂ ಬೇಕು ಅನ್ನೋದಕ್ಕೆ ಸಾಕ್ಷಿ ಎಂದು ತಿಳಿಸಿದರು. ಇದನ್ನೂ ಓದಿ: ಪಂಪ್‌ವೆಲ್ ಫ್ಲೈ ಓವರ್ ಬಳಿ ಬಾಂಬ್ ಸ್ಟೋಟಿಸಲು ಮುಂದಾಗಿದ್ದ ಶಾರೀಕ್
ಪ್ರತಿ ದಿನ ಬ್ರಹ್ಮಬೈದರ್ಕಳ ಕ್ಷೇತ್ರಕ್ಕೆ ಬಂದು ಆಟೋ ಚಾಲಕ ಪುರುಷೋತ್ತಮ್ ಕೈ ಮುಗಿಯುತ್ತಿದ್ದರು. ಪ್ರತೀ ಆಟೋ ಚಾಲಕರು ಈ ಕ್ಷೇತ್ರದಲ್ಲಿ ಕೈಮುಗಿದು ದಿನ ಆರಂಭ ಮಾಡುತ್ತಿದ್ದರು. ಹೀಗಾಗಿ ಶಕ್ತಿಯೇ ದೊಡ್ಡ ಅನಾಹುತ ತಪ್ಪಿದೆ ಅನ್ನೋದು ಭಕ್ತರ ನಂಬಿಕೆಯಾಗಿದೆ ಎಂದರು.
ಚೇತರಿಕೆ ಕಾಣದ ಶಾರಿಕ್ ಆರೋಗ್ಯ: ಬಾಂಬರ್ ಉಗ್ರ ಶಾರಿಕ್ ಆರೋಗ್ಯ ಇನ್ನೂ ಚೇತರಿಸಿಕೊಂಡಿಲ್ಲ. ಶೇ.45 ರಷ್ಟು ಸುಟ್ಟ ಗಾಯಗಳೊಂದಿಗೆ ಮಹಮ್ಮದ್ ಶಾರಿಕ್ ಚಿಕಿತ್ಸೆ ನೀಡಲಾಗುತ್ತಿದೆ. ಒಂದು ಕಣ್ಣನ್ನು ತೆರೆಯಲು ಸಾಧ್ಯವಾಗದ ಸ್ಥಿತಿಯಲ್ಲಿದ್ದು, ಮತ್ತೊಂದು ಕಣ್ಣು ಕಾಣದೇ ಶಾರಿಕ್ ನರಳಾಡುತ್ತಿದ್ದಾನೆ. ಆದ್ದರಿಂದ ಇನ್ನು ಕೂಡ ಪೊಲೀಸರು ಶಾರಿಕ್ ವಿಚಾರಣೆ ಮಾಡಿಲ್ಲ. ಕೈಗಳು ಸುಟ್ಟಿರೊದ್ರಿಂದ ಬರವಣಿಗೆ ಅಸಾಧ್ಯ. ಹೀಗಾಗಿ ಬರವಣಿಗೆ ಮೂಲಕ ಹೇಳಿಕೆ ಪಡೆಯಲು ಕೂಡ ಸಾಧ್ಯವಾಗಿಲ್ಲ ಎಂದು ಆಸ್ಪತ್ರೆ ಮತ್ತು ಪೊಲೀಸ್ ಮೂಲಗಳ ಮಾಹಿತಿ ನೀಡಿದ್ದಾರೆ.
Live Tv
[brid partner=56869869 player=32851 video=960834 autoplay=true]
– ಕುಟುಂಬಸ್ಥರಿಂದ್ಲೇ ಗುರುತು ಪತ್ತೆ
– ಶಿವಮೊಗ್ಗದ ಪ್ರಕರಣದಲ್ಲೂ ಇದ್ದ
ಮಂಗಳೂರು: ಕುಕ್ಕರ್ ಬಾಂಬ್ ಬ್ಲಾಸ್ಟ್ (Cooker Blast) ಪ್ರಕರಣದಲ್ಲಿ ಗಾಯಗೊಂಡಿದ್ದ ವ್ಯಕ್ತಿ ತೀರ್ಥಹಳ್ಳಿಯ ಶಾರೀಕ್ (Shariq) ಜಾಗತಿಕ ನೆಟ್ ವರ್ಕ್ ಹೊಂದಿರೋ ಉಗ್ರ ಸಂಘಟನೆಯಿಂದ (Terrorist Groups) ಪ್ರಭಾವಿತನಾಗಿ ಕೃತ್ಯ ಎಸಗಿದ್ದಾನೆ ಎಂದು ಎಡಿಜಿಪಿ ಅಲೋಕ್‌ಕುಮಾರ್ (ADGP Alok Kumar) ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿವಮೊಗ್ಗದಿಂದ ಪೊಲೀಸರು (Shivamogga) ಕರೆಸಿಕೊಂಡಿದ್ದ ಮಲತಾಯಿ ಶಬನಾ, ಸೋದರಿ ಆತಿಯಾ, ಚಿಕ್ಕಮ್ಮ ಯಾಸ್ಮಿನ್ ಅವರು ಶಾರೀಕ್‌ನನ್ನು ಗುರುತು ಹಿಡಿದಿದ್ದಾರೆ. ಈ ಹಿಂದೆ ಶಿವಮೊಗ್ಗದ ಕೇಸ್‌ನಲ್ಲಿ ಇವನು ಇದ್ದ. ಪೊಲೀಸರ ದಾಳಿ ವೇಳೆ ಶಾರೀಕ್ ಉಳಿದುಕೊಂಡಿದ್ದ ಮೈಸೂರಿನ ಮನೆಯಲ್ಲಿಯೂ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗ್ರಾಮ ದೈವಗಳೇ ನಮ್ಮ ಊರನ್ನು ಕಾಪಾಡಿವೆ- ಕುಕ್ಕರ್ ಬ್ಲಾಸ್ಟ್ ಆದ ಆಟೋ ಚಾಲಕನ ಸಹೋದರನ ಮಾತು
ಕೊಯಮತ್ತೂರು, ತಮಿಳುನಾಡು (TamilNadu), ಕೇರಳ ಎಲ್ಲೆಡೆ ಸುತ್ತಾಡಿ ಮೈಸೂರಿಗೆ ಬಂದಿದ್ದ. ನಮಗೆ ಮತ್ತೆ ಅವನ ಫೋಟೋ ನೋಡಿ ಶಾರೀಕ್ ಅಂತಾ ಗೊತ್ತಾಗಿತ್ತು. ಆದರೂ ಅವರ ಮನೆಯವರನ್ನ ಕರೆಸಿ ಗುರುತು ಪತ್ತೆ ಮಾಡಿದ್ದೇವೆ. ಅವರ ಮಲತಾಯಿ ಶಬನಾ, ಸಹೋದರಿ ಆಫಿಯಾ, ತಾಯಿ ತಂಗಿ ಯಾಸ್ಮೀನ್ ಅವನ ಗುರುತು ಪತ್ತೆ ಮಾಡಿದ್ದಾರೆಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಂಗಳೂರು ಬಾಂಬ್ ಬ್ಲಾಸ್ಟ್‌ಗೆ ನಿಷೇಧಿತ PFI ಲಿಂಕ್ – ಸರ್ಕಾರದ ವಿರುದ್ಧ ಸೇಡು ತೀರಿಸಿಕೊಳ್ಳಲು ಸ್ಕೆಚ್
ನಾವು ಅರಾಫತ್ ಆಲಿ ಮತ್ತು ಮತೀನ್ ಮನೆಯಲ್ಲಿ ಶೋಧ ನಡೆಸಿದ್ದೇವೆ. ಅವರ ಕುಟುಂಬ ಸದಸ್ಯರ ವಿಚಾರಣೆಯನ್ನೂ ನಡೆಸಿದ್ದೇವೆ. ಆದರೆ ಶಾರೀಕ್‌ಗೆ ಯಾರು ಫಂಡಿಂಗ್ ಮಾಡಿದ್ದಾರೆ ಅನ್ನೋದು ಗೊತ್ತಿಲ್ಲ. 2020ರಲ್ಲಿ ಮಂಗಳೂರಿನಲ್ಲಿ ಗೋಡೆ ಬರಹ ಪ್ರಕರಣ ದಾಖಲಾಗಿತ್ತು. ಅದರಲ್ಲಿ ಅವನ ಮೇಲೆ ಯುಎಪಿಎ ಆಕ್ಟ್ ನಡಿ ಕೇಸ್ ಆಗಿದೆ. ಎ1 ಆರೋಪಿ ಶಾರೀಕ್ ಆಗಿದ್ದ, ಆಗಲೇ ಮನೆಯವರು ಬುದ್ದಿ ಹೇಳಿದ್ದರಂತೆ. ಶಿವಮೊಗ್ಗದಲ್ಲಿ ಜಬೀವುಲ್ಲ ಕೇಸ್ ವಿಚಾರಣೆ ವೇಳೆ ಇವರ ಮಾಹಿತಿ ಗೊತ್ತಾಗಿತ್ತು. ಮುನೀರ್ ಬಂಧನ ಬಳಿಕ ಶಾಕೀರ್ ಟ್ರಯಲ್ ಬ್ಲಾಸ್ಟ್ ಮಾಡಿದ್ದು ಗೊತ್ತಾಗಿದೆ. ಆದರೆ ಇದ್ಯಾವ ವಿಚಾರವೂ ಮೈಸೂರು ಮನೆ ಮಾಲೀಕನಿಗೆ ಗೊತ್ತಿಲ್ಲ. ಮೊನ್ನೆ ಮೈಸೂರಿನಿಂದ ಮಡಿಕೇರಿ ಮಾರ್ಗವಾಗಿ ಬಸ್ ನಲ್ಲಿ ಮಂಗಳೂರಿಗೆ ಒಬ್ಬನೇ ಬಂದಿದ್ದಾನೆ. ನಾವು ಕೊಯಮತ್ತೂರು ಮತ್ತು ತಮಿಳುನಾಡು ಪೊಲೀಸರ ಜೊತೆ ಸಂಪರ್ಕ ಇದ್ದೇವೆ. ಕೊಯಮತ್ತೂರು ಸ್ಪೋಟಕ್ಕೆ ಸಂಪರ್ಕ ಇದೆಯಾ ಅನ್ನೋ ಬಗ್ಗೆ ಸ್ಪಷ್ಟವಾಗಿಲ್ಲ. ಆದರೆ ಕೊಯಮತ್ತೂರು ಮತ್ತು ತಮಿಳುನಾಡಿನ ಅಧಿಕಾರಿಗಳು ಇಲ್ಲಿಗೆ ಬಂದಿದ್ದಾರೆ ಆ ಸ್ಪೋಟ ಸಂಬಂಧ ಲಿಂಕ್ ಇದ್ಯಾ ಅನ್ನೋ ಬಗ್ಗೆಯೂ ತನಿಖೆ ಆಗುತ್ತೆ ಎಂದು ಹೇಳಿದ್ದಾರೆ.
ಈಗಾಗಲೇ ಶಾರೀಕ್ ಸಹೋದರಿಯ ವಿಚಾರಣೆಯೂ ಆಗಿದೆ. ಮೈಸೂರಿನಲ್ಲಿ ಅವನ ಜೊತೆ ಸಂಪರ್ಕ ಇದ್ದ ಇಬ್ಬರನ್ನ ವಶಕ್ಕೆ ಪಡೆದಿದ್ದೇವೆ. ಈ ಕೇಸ್ ನಲ್ಲಿ ಮೈನ್ ಹ್ಯಾಂಡ್ಲರ್ ಮಾಝ್ ಮುನೀರ್ ಇದ್ದಾನ ಗೊತ್ತಿಲ್ಲ, ಏಕೆಂದರೆ ಅವನು ಜೈಲ್ ನಲ್ಲಿ ಇದ್ದಾನೆ. ಅದಕ್ಕೆ ಮೊದಲು ಟ್ರಯಲ್ ಬ್ಲಾಸ್ಟ್ ಜೊತೆಯಾಗಿ ಮಾಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಶಾರೀಕ್ ಬಾಂಬ್ ಅನ್ನ ಸರಿಯಾಗಿ ಜೋಡಿಸಿರಲಿಲ್ಲ, ಅದರಲ್ಲಿ ಅವನು ಎಕ್ಸ್ ಪರ್ಟ್ ಆಗಿರಲೂ ಇಲ್ಲ. ಅರ್ಧಂಬರ್ಧ ಬಾಂಬ್ ತಯಾರಿಸಿದ್ದ, ಸರಿಯಾಗಿ ಮಾಡಿಲ್ಲ. ಮೈಸೂರಿನಲ್ಲಿ ಮೊಬೈಲ್ ತಯಾರಿ ಸಂಸ್ಥೆಯಲ್ಲಿ ಕೆಲಸ ಮಾಡ್ತಿದ್ದ ಶಾರಿಕ್, ಪೊಟ್ಯಾಸಿಯಮ್ ನೈಟ್ರೈಟ್, ಸೋಡಿಯಂ, ಅಮೋನಿಯಂ ನಂತಹ ಸ್ಪೋಟಕ ಇತ್ತು. ಇದಕ್ಕೆ ಕೆಲವೊಂದು ಐಟಮ್ ಆನ್ ಲೈನ್‌ನಲ್ಲಿ, ಕೆಲ ಐಟಂ ನೇರವಾಗಿ ಶಾಪ್ ನಲ್ಲಿ ತೆಗೊಂಡಿದ್ದಾನೆ. ಸಿಮ್ ಕಾರ್ಡ್ ಖರೀದಿಗಾಗಿ ಕೊಯಮತ್ತೂರು ಮೂಲದ ಒಬ್ಬರ ಆಧಾರ್ ಕಾರ್ಡ್ ಬಳಕೆ ಮಾಡಿದ್ದ. ಸದ್ಯ ಕಸ್ಟಡಿಯಲ್ಲಿ ನಾಲ್ಕು ಜನ ಇದ್ದಾರೆ. ಮೂವರು ವಶದಲ್ಲಿದ್ದು, ಒಬ್ಬನನ್ನ ಊಟಿಯಿಂದ ಕರೆ ತರ್ತಾ ಇದೀವಿ. ಇದು ಕರ್ನಾಟಕ ಪೊಲೀಸರ ಸ್ವತಂತ್ರ ತನಿಖೆ, ಆದರೆ ಕೇಂದ್ರ ತನಿಖಾ ದಳದ ಜೊತೆ ಸಂಪರ್ಕದಲ್ಲಿ ಇದ್ದೇವೆ ಎಂದು ವಿವರಿಸಿದ್ದಾರೆ.
ಸದ್ಯ ದೇವರ ದಯೆಯಿಂದ ದೊಡ್ಡ ಅನಾಹುತ ತಪ್ಪಿದೆ. ಮೂರು ತಿಂಗಳಿನಿಂದ ಕರಾವಳಿಯಲ್ಲಿ ಶಾಂತಿ ಇದೆ, ಬಾಂಬ್ ಬ್ಲಾಸ್ಟ್ ಆಗಿದ್ರೆ ಮತ್ತೆ ಕರಾವಳಿಯಲ್ಲಿ ತೊಂದರೆಯಾಗುತ್ತಿತ್ತು. ದೇವರ ದಯೆಯಿಂದ ತೊಂದರೆಯಾಗಿಲ್ಲ ಎಂದು ನಿಟ್ಟುಸಿರು ಬಿಟ್ಟಿದ್ದಾರೆ.
ಶಾರೀಕ್ ಪೂರ್ತಿ ಗುಣಮುಖ ಆಗುವ ಹಾಗೆ ಚಿಕಿತ್ಸೆ ನೀಡಲಾಗುತ್ತಿದೆ. ಆ ಬಳಿಕ ಆತನ ಹೆಚ್ಚಿನ ಮಾಹಿತಿ ಸಿಗಬಹುದು. ಅಲ್ಲಿವರೆಗೆ ಆಟೋ ಚಾಲಕನಿಗೂ ಚೇತರಿಸಿಕೊಳ್ಳಲೂ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ಪರಿಹಾರ ನೀಡಲು ಜಿಲ್ಲಾಡಳಿತಕ್ಕೆ ವಿನಂತಿಸಿದ್ದೇವೆ ಎಂದು ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಇದೀಗ ಆರೋಪಿಗಳ ಆಸ್ತಿ ಸೀಜ್ ಮಾಡಲಾಗುತ್ತಿದ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು.
ಬೆಳ್ಳಾರೆಯಲ್ಲಿ ಆರು ಜಿಲ್ಲೆಯ ಎಸ್‍ಪಿ ಹಾಗೂ ಎನ್‍ಐಎ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಬೆಳ್ಳಾರೆ ಪ್ರವೀಣ್ ಕೊಲೆ ಕೇಸ್ ನಲ್ಲಿ ಮುಖ್ಯ ಆರೋಪಿಗಳ ಬಂಧನ ಆಗಬೇಕಿದೆ. ಆರೋಪಿಗಳ ದಸ್ತಗಿರಿಗೆ ಬೇರೆ ಬೇರೆ ಜಿಲ್ಲೆಯ ಅಧಿಕಾರಿಗಳ ಸಭೆ ಮಾಡುತ್ತೇವೆ. ಪ್ರಮುಖ ಆರೋಪಿಗಳ ಬಂಧನಕ್ಕೆ ಸಂಬಂಧಿಸಿದಂತೆ ಸಭೆ ಮಾಡಲಿದ್ದೇವೆ. ಮಂಗಳೂರಿನ ಕಾನೂನು ಸುವ್ಯವಸ್ಥೆ ಬಗ್ಗೆಯೂ ಸಭೆ ಮಾಡುತ್ತೇವೆ. ಮುಖ್ಯ ಆರೋಪಿಗಳಿಗೆ ಪ್ರತ್ಯಕ್ಷ- ಪರೋಕ್ಷವಾಗಿ ಸಹಕಾರ ಮಾಡಿದವರಿಗೂ ಕ್ರಮ ಆಗಲಿದೆ ಎಂದರು.
ಎನ್‍ಐಎ ಅಧಿಕಾರಿಗಳ ಜೊತೆ ಸೇರಿ ಕ್ರಮ ಜರುಗಿಸುತ್ತೇವೆ. ಕೋರ್ಟ್ ಮೂಲಕ ವಾರೆಂಟ್ ನೀಡುವ ಪ್ರಕ್ರಿಯೆ ಜಾರಿಯಲ್ಲಿದೆ. ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕುವ ಪ್ರಕ್ರಿಯೆ ನಡೆಯುತ್ತಿದೆ. ಎನ್ ಐಎ ಅಧಿಕಾರಿಗಳ ಜೊತೆ ಕರ್ನಾಟಕ ತಂಡ ಈ ಕೆಲಸ ಮಾಡಲಿದೆ ಎಂದು ಹೇಳಿದರು.
ಪ್ರವೀಣ್ ಹತ್ಯೆಯ ಪ್ರಮುಖ ಆರೋಪಿಗಳ ಸಂಪೂರ್ಣ ಮಾಹಿತಿ ಇದೆ. ಅವರ ಫೋಟೋ, ಮನೆ ವಿಳಾಸ, ತಂದೆ-ತಾಯಿ, ಹೆಂಡತಿ ಮಾಹಿತಿ ಎಲ್ಲವೂ ಲಭ್ಯವಿದೆ. ಪ್ರಮುಖ ಆರೋಪಿಗಳನ್ನು ಬಚ್ಚಿಡುವ ಕೆಲಸ ನಡೆಯುತ್ತಿದೆ. ಆವಾಗವಾಗ ಅವರ ಸ್ಥಳ ಬದಲಾವಣೆ ಮಾಡಲಾಗುತ್ತಿದೆ. ಪೊಲೀಸರ ದಾಳಿ ವೇಳೆ ಪ್ರಮುಖ ಆರೋಪಿಗಳು ಪರಾರಿಯಾಗುತ್ತಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಬಿಕಿನಿ ಧರಿಸಿದ ಫೋಟೋ ಹಾಕಿದ್ದಕ್ಕೆ ಕೆಲಸ ಕಳೆದುಕೊಂಡ ಪ್ರಾಧ್ಯಾಪಕಿ
ಆರೋಪಿಗಳಿಗೆ ಪಿಎಫ್‍ಐ ಲಿಂಕ್ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾವು ಯಾವುದೇ ದಾಖಲೆ ಇಲ್ಲದೇ ಮಾತನಾಡೋದಿಲ್ಲ. ದಾಖಲೆ ಜೊತೆಗೆ ಮಾತನಾಡುತ್ತೇವೆ,ಸುಮ್ಮನೆ ಏನನ್ನೂ ಹೇಳೋದಿಲ್ಲ. ಕೆಲವು ಆರೋಪಿಗಳಿಗೆ ಪಿಎಫ್ ಐ ಲಿಂಕ್ ಇದೆ. ಈ ಬಗ್ಗೆ ತನಿಖೆಯನ್ನು ಮಾಡುತ್ತಿದ್ದೇವೆ. ತನಿಖೆಯ ಬಳಿಕ ಯಾರಿಗೆಲ್ಲಾ ಪಿಎಫ್‍ಐ ಲಿಂಕ್ ಇದೆ ಎಂಬುವುದರ ಬಗ್ಗೆ ಹೇಳುತ್ತೇವೆ ಎಂದು ಹೇಳಿದರು.
ಈಗಾಗಲೇ ಪ್ರಕರಣ ತನಿಖೆಯ ಹಂತದಲ್ಲಿದೆ. ಈ ಸಂಧರ್ಭದಲ್ಲಿ ಪ್ರಕರಣಕ್ಕೆ ಕೇರಳ ಲಿಂಕ್ ಇರುವ ಬಗ್ಗೆ ಹೇಳಲು ಸಾಧ್ಯವಿಲ್ಲ. ಈಗ ಬಂಧನವಾಗಿರುವ ಏಳು ಮಂದಿಯೂ ಸ್ಥಳೀಯರೇ ಆಗಿದ್ದಾರೆ. ಅವರಿಗೆ ನಿರ್ದೇಶನ ಕೊಟ್ಟಿರೋದು ಯಾರು ಎಂಬುವುದರ ಬಗ್ಗೆ ಕೂಲಂಕಷವಾಗಿ ಪರಿಶೀಲನೆ ಮಾಡುತ್ತೇವೆ. ಬೆಳ್ಳಾರೆಯಲ್ಲಿ ಈ ಎಲ್ಲಾ ವಿಚಾರದ ಬಗ್ಗೆ ಸಭೆಯನ್ನು ಮಾಡುತ್ತೇವೆ. ಎನ್ ಐ ಎ ಅಧಿಕಾರಿಗಳು, ಚಾಮರಾಜನಗರ ಹಾಸನ, ಚಿಕ್ಕಮಗಳೂರು, ಉಡುಪಿ,ದಕ್ಷಿಣ ಕನ್ನಡ ಎಸ್‍ಪಿಗಳ ಜೊತೆ ಸಭೆ ಮಾಡುತ್ತೇವೆ ಎಂದು ತಿಳಿಸಿದರು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಪ್ರಚೋದನಕಾರಿ ಭಾಷಣ ಮಾಡಿರುವ ಹಿನ್ನೆಲೆಯಲ್ಲಿ ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೆಲವರು ಸಾಮಾಜಿಕ ಮಾಧ್ಯಮದಲ್ಲಿ ಕಾನೂನು ಸುವ್ಯವಸ್ಥೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್ ಮಾಡುತ್ತಿರುವುದನ್ನು ಗಮನಿಸಲಾಗಿದೆ. ನಾವು ಅಂತಹ ಪೋಸ್ಟ್‌ಗಳನ್ನು ಪರಿಶೀಲಿಸುತ್ತಿದ್ದೇವೆ. ಅಲ್ಲದೇ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳುತ್ತೇವೆ. ಪ್ರಚೋದನಕಾರಿ ಭಾಷಣ ಮಾಡಿದ ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಎಡಿಜಿಪಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಉಡುಪಿಯ ನಿರ್ಜನ ಪ್ರದೇಶದಲ್ಲಿ ಅಪರಿಚಿತ ಇಯಾನ್ ಕಾರ್ ಪತ್ತೆ
ಕಾಳಿ ಸ್ವಾಮಿಗೆ ಕಾನೂನು ಕಂಟಕ ಎದುರಾಗಿದೆ. ಹಿಂದೂಗಳ ಒಂದು ತಲೆಗೆ ಮುಸ್ಲಿಮರ 10 ತಲೆ ತೆಗೀಬೇಕು ಅಂತಾ ಟೌನ್‌ಹಾಲ್‌ನಲ್ಲಿ ಕಾಳಿ ಸ್ವಾಮಿ ಹೇಳಿಕೆ ನೀಡಿದ್ದರು. ಇದಲ್ಲದೆ ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಪ್ರಚೋದನಕಾರಿ ಹೇಳಿಕೆ, ಬರಹ ಪೋಸ್ಟ್ ಮಾಡಿದ್ದರು. ಅಂತಹವರ ಮೇಲೂ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.
ಬೆಂಗಳೂರು: ಎಸಿಬಿ ಎಡಿಜಿಪಿ ವಿರುದ್ಧ ಹೈಕೋರ್ಟ್ ನ್ಯಾಯಮೂರ್ತಿ ಸಂದೇಶ್ ಮತ್ತೆ ಗರಂ ಆಗಿದ್ದಾರೆ. ಎಸಿಬಿಗೆ ಕಳಂಕಿತ ಅಧಿಕಾರಿಗಳನ್ನು ನಿಯೋಜನೆ ಮಾಡದಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಎಸಿಬಿಗೆ ಅಧಿಕಾರಿಗಳ ನಿಯೋಜನೆ ವೇಳೆ ಯಾವುದೇ ಪ್ರಭಾವಕ್ಕೆ ಒಳಗಾಗದಂತೆಯೂ ಸೂಚನೆ ನೀಡಿದ್ದಾರೆ.
ತಮಗೆ ಬಂದ ಬೆದರಿಕೆ ವಿಚಾರವನ್ನು ಕೋರ್ಟ್ ಆದೇಶದಲ್ಲಿ ಬರೆಸಿದ್ದಾರೆ. ಜುಲೈ 1ರಂದು ತಮಗೆ ಸಹ ನ್ಯಾಯಮೂರ್ತಿಗಳು ಹೇಳಿದ್ದೇನು ಎಂಬುದನ್ನು ಆದೇಶದಲ್ಲಿ ಇಂಚಿಂಚಾಗಿ ಬರೆಸಿದ್ದಾರೆ. ಆದರೆ ತಮ್ಮ ಬಳಿ ಮಾತನಾಡಿದ ಸಹ ನ್ಯಾಯಮೂರ್ತಿಗಳ ಹೆಸರನ್ನು ನ್ಯಾಯಮೂರ್ತಿಗಳು ಬಹಿರಂಗಪಡಿಸಲಿಲ್ಲ.
ಈ ವೇಳೆ, ನ್ಯಾಯಮೂರ್ತಿಗಳ ಹೆಸರನ್ನು ಹೇಳಿ ಎಂದು ಎಡಿಜಿಪಿ ಪರ ಕೇಳಿದ್ದಕ್ಕೆ ನ್ಯಾಯಮೂರ್ತಿ ಸಂದೇಶ್ ಗರಂ ಆದರು. ನೋಡ್ರೀ ನನ್ನನ್ನ ತಪ್ಪಿಗೆ ಸಿಕ್ಕಿಸೋ ಪ್ರಯತ್ನ ಮಾಡ್ಬೇಡಿ. ನಾನು ಯಾರಿಗೆ ಅವರ ಹೆಸರನ್ನು ಹೇಳ್ಬೇಕೋ ಹೇಳಿದ್ದೇನೆ. ಓಪನ್ ಕೋರ್ಟ್ ಅಲ್ಲಿ ಹೇಳೋ ಅವಶ್ಯಕತೆ ಇಲ್ಲ. ನ್ಯಾಯಾಲಯದ ಸ್ವಾತಂತ್ರ್ಯದ ಮೇಲೆ ಬೆದರಿಕೆ ಹಾಕಿದ್ದಾರೆ. ಅದಕ್ಕೆ ನಾನು ತನಿಖೆಗೆ ಮನವಿ ಮಾಡುತ್ತೇನೆ. ಅದಕ್ಕೆ ಪ್ರಭಾವ ಬೀರಲು ನೊಡಿದವರ ಸರ್ವೀಸ್ ರೆಕಾರ್ಡ್ ಕೇಳಿದ್ದೇನೆ ಎಂದರು. ಈ ಸಂದರ್ಭದಲ್ಲಿ ಎಡಿಜಿಪಿ ಪರ ವಕೀಲ ಅಶೋಕ್ ಹಾರ್ನಳ್ಳಿಗೆ ವಾದ ಮಂಡಿಸಲು ನ್ಯಾಯಮೂರ್ತಿಗಳು ಬಿಡಲಿಲ್ಲ.
ಸೀಮಂತ್ ಕುಮಾರ್ ವಿರುದ್ಧದ ದಾಳಿಗೆ ಸಂಬಂಧಿಸಿ ಸಿಬಿಐ ವಕೀಲರು ಕೋರ್ಟ್‍ಗೆ ವರದಿ ನೀಡಿದರು. ಈ ವೇಳೆ, ಅಕ್ರಮ ಗಣಿಗಾರಿಕೆ, ಅದಿರು ಸಾಗಾಟ ವಿಚಾರಕ್ಕೆ ಏನಾದ್ರೂ ಕ್ರಮಕೈಗೊಂಡಿದ್ಯಾ? ಎಸ್‍ಪಿ ಅವರ ಮನೆಯ ಮೇಲೆ ದಾಳಿ ಆಗಿತ್ತಲ್ವಾ? ಆಗ ಕ್ರಮ ಏನಾಗಿತ್ತು? ಈಗ ಯಾವ ಹಂತದಲ್ಲಿ ಪ್ರಕರಣ ಇದೆ ಎಂದು ಪ್ರಶ್ನಿಸಿದ್ರು.
ಐಎಎಸ್ ಅಧಿಕಾರಿ ಮಂಜುನಾಥ್ ರಕ್ಷಣೆಗೆ ಯತ್ನಿಸಿದ್ದೀರಾ ಎಂದು ಎಜಿ ಮೇಲೆಯೂ ಗರಂ ಆದರು. ಕೊನೆಗೆ ಜುಲೈ 13ಕ್ಕೆ ವಿಚಾರಣೆ ಮುಂದೂಡಿದರು. ನ್ಯಾಯಮೂರ್ತಿಗಳು ಪದೇ ಪದೇ ಎಸಿಬಿ ನಿಷ್ಕ್ರಿಯತೆ ಬಗ್ಗೆ ಪ್ರಸ್ತಾಪಿಸಿದರು. ನನಗೇನು ವೈಯಕ್ತಿಕ ಜಿದ್ದು ಇಲ್ಲ ಎಂಬುದನ್ನೂ ಸ್ಪಷ್ಟಪಡಿಸಿದರು. ಇದನ್ನೂ ಓದಿ: ಪೋರ್ಚುಗಲ್‌ಗೆ ನೀಡಿದ ವಾಗ್ದಾನದಂತೆ ಅಬು ಸಲೇಂನನ್ನು ಬಿಡುಗಡೆ ಮಾಡಿ – ಕೇಂದ್ರಕ್ಕೆ ಸುಪ್ರೀಂ
ಈ ಮಧ್ಯೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಐಎಎಸ್ ಅಧಿಕಾರಿ ಮಂಜುನಾಥ್ ಜಾಮೀನು ಅರ್ಜಿ ವಜಾ ಮಾಡಿದೆ. ಎಸಿಬಿ ಎಡಿಜಿಪಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಸಿಜೆಐ, ಆ ಅಧಿಕಾರಿ ಅಷ್ಟೊಂದು ಪ್ರಭಾವಿಯಾ ಎಂದು ಪ್ರಶ್ನೆ ಮಾಡಿದ್ದಾರೆ. ಮಂಗಳವಾರ ಈ ಅರ್ಜಿ ವಿಚಾರಣೆಯನ್ನು ಸಿಜೆಐ ಪೀಠ ನಡೆಸಲಿದೆ.
ನ್ಯಾ. ಹೆಚ್‍ಪಿ ಸಂದೇಶ್ ಆದೇಶದಲ್ಲಿ ಬರೆಸಿದ್ದೇನು?
ಜುಲೈ 1ರಂದು ಸಿಜೆ ನಿವೃತ್ತಿ ಹಿನ್ನೆಲೆ, ಬೀಳ್ಕೊಡುಗೆ ಸಮಾರಂಭ ಇತ್ತು. ಡಿನ್ನರ್ ವೇಳೆ ಸಹ ನ್ಯಾಯಮೂರ್ತಿಯೊಬ್ಬರು ನನ್ನ ಪಕ್ಕ ಕುಳಿತರು. ದೆಹಲಿಯಿಂದ ನನಗೆ ಒಂದು ಕರೆ ಬಂದಿದೆ ಎಂದು ಹೇಳಿದರು . ಕರೆ ಮಾಡಿದವರು ನಿಮ್ಮ ಬಗ್ಗೆ ವಿಚಾರಿಸಿದರೆಂದು ಹೇಳಿದರು. ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿಲ್ಲವೆಂದು ಹೇಳಿದೆ. ಆದರೆ ಆ ನ್ಯಾಯಮೂರ್ತಿ ವಿಷಯ ಅಲ್ಲಿಗೇ ನಿಲ್ಲಿಸಲಿಲ್ಲ. ಎಡಿಜಿಪಿ ಉತ್ತರ ಭಾರತದವರು, ಪವರ್ ಫುಲ್ ಆಗಿದ್ದಾರೆ ಎಂದರು.
Live Tv
[brid partner=56869869 player=32851 video=960834 autoplay=true]