Tag: ಎದೆ ನೋವು

  • ಮುರುಘಾ ಶ್ರೀಗಳಿಗೆ ಎದೆ ನೋವು – ಆಸ್ಪತ್ರೆಗೆ ದಾಖಲು

    ಮುರುಘಾ ಶ್ರೀಗಳಿಗೆ ಎದೆ ನೋವು – ಆಸ್ಪತ್ರೆಗೆ ದಾಖಲು

    ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಪ್ರಕರಣದಡಿ ಬಧನಕ್ಕೊಳಗಾಗಿರುವ ಮುರುಘಾ ಶ್ರೀಗಳಿಗೆ ಎದೆ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆ ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಮುರುಘಾ ಶ್ರೀಗಳಿಗೆ ಬಿಪಿ ಹಾಗೂ ಸ್ಯಾಚುರೇಷನ್ ವ್ಯತ್ಯಾಸವಾಗಿರುವುದಾಗಿ ವರದಿಯಾಗಿದ್ದು, ವೈದ್ಯರು ಮೇಲಿಂದ ಮೇಲೆ ಇಸಿಜಿ ಹಾಗೂ ಎಕೋ ಪರೀಕ್ಷೆ ನಡೆಸುತ್ತಿದ್ದಾರೆ. ಅವರಿಗೆ ಎದೆ ನೋವು ಕಂಡುಬಂದಿರುವ ಹಿನ್ನೆಲೆ ಜಿಲ್ಲಾಆಸ್ಪತ್ರೆಯತ್ತ ಜನರ ದಂಡು ಹರಿದಿದೆ. ತಂಡೋಪತಂಡವಾಗಿ ಹರಿದು ಬರುತ್ತಿರುವ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಆಸ್ಪತ್ರೆಯೆಡೆಗೆ ಭಕ್ತಾದಿಗಳ ದಂಡು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಮುರುಘಾ ಶರಣರ ಬಂಧನ- ಬಿಕೋ ಎನ್ನುತ್ತಿದೆ ಮಠದ ಆವರಣ

    ವೈದ್ಯರು ಈ ಮೊದಲೇ ಮುರುಘಾ ಶ್ರೀಗಳಿಗೆ ಎದೆನೋವು ಬಂದರೆ ತಕ್ಷಣ ಆಸ್ಪತ್ರೆಗೆ ದಾಖಲಿಸಲು ಸೂಚನೆ ನೀಡಿದ್ದರು. ಇಂದು ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಪೊಲೀಸರು ಮುರುಘಾ ಶ್ರೀ ಅವರನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದನ್ನೂ ಓದಿ: ಪೋಕ್ಸೊ ಪ್ರಕರಣ – ಮುರುಘಾ ಶ್ರೀಗೆ 14 ದಿನ ನ್ಯಾಯಾಂಗ ಬಂಧನ

    ಶ್ರೀಗಳಿಗೆ ಎಮ್‌ಆರ್‌ಐ ಸ್ಕ್ಯಾನ್ ಪರೀಕ್ಷೆ ಪೂರ್ಣಗೊಂಡಿದ್ದು, ಇದೀಗ ವೈದ್ಯರ ತಂಡ  ಅವರನ್ನು ವ್ಹೀಲ್ ಚೇರ್ ನಲ್ಲಿ ಸಿಟಿ ಸ್ಕ್ಯಾನ್ ಗೆ ಕರೆದೊಯದದಿರುವುದಾಗಿ ವರದಿಯಾಗಿದೆ. ಮುರುಘಾ ಶ್ರೀ ಗಳಿಗೆ ಉಸಿರಾಟದ ತೊಂದರೆಯೂ ಕಂಡುಬಂದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸುವ ಸಾಧ್ಯತೆಗಳಿವೆ.

    Live Tv
    [brid partner=56869869 player=32851 video=960834 autoplay=true]

  • ಸೌರವ್‌ ಗಂಗೂಲಿಗೆ ಎದೆನೋವು- ಮತ್ತೆ ಆಸ್ಪತ್ರೆಗೆ ದಾಖಲು

    ಸೌರವ್‌ ಗಂಗೂಲಿಗೆ ಎದೆನೋವು- ಮತ್ತೆ ಆಸ್ಪತ್ರೆಗೆ ದಾಖಲು

    ಕೋಲ್ಕತ್ತಾ: ಟೀಂ ಇಂಡಿಯಾದ ಮಾಜಿ ನಾಯಕ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧ್ಯಕ್ಷ ಸೌರವ್‌ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಇಂದು ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗಂಗೂಲಿ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಜನವರಿ ಮೊದಲ ವಾರದಲ್ಲಿ ಜಿಮ್‌ನಲ್ಲಿ ಅಭ್ಯಾಸ ಮಾಡುತ್ತಿದ್ದಾಗ ಗಂಗೂಲಿಗೆ ಹೃದಯ ನೋವು ಕಾಣಿಸಿಕೊಂಡು ಲಘು ಹೃದಯಾಘಾತವಾಗಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಖ್ಯಾತ ಹೃದಯ ಸರ್ಜನ್​ ಡಾ. ದೇವಿ ಶೆಟ್ಟಿ ಅವರು ಆಸ್ಪತ್ರೆಯಲ್ಲಿದ್ದ ಗಂಗೂಲಿ ಅವರರನ್ನು ಭೇಟಿ ಮಾಡಿ ಸಲಹೆಗಳನ್ನು ನೀಡಿದ್ದರು. ಬಳಿಕ ಗಂಗೂಲಿ ಡಿಸ್ಚಾರ್ಜ್‌ ಆಗಿದ್ದರು.

  • ರಾತ್ರಿ ನಾಪತ್ತೆಯಾಗಿ ಬೆಳಗ್ಗೆ ಆಸ್ಪತ್ರೆ ಸೇರಿದ ಶ್ರೀಮಂತ ಪಾಟೀಲ್

    ರಾತ್ರಿ ನಾಪತ್ತೆಯಾಗಿ ಬೆಳಗ್ಗೆ ಆಸ್ಪತ್ರೆ ಸೇರಿದ ಶ್ರೀಮಂತ ಪಾಟೀಲ್

    ಬೆಂಗಳೂರು: ರಾತ್ರೋ ರಾತ್ರಿ ಕಾಂಗ್ರೆಸ್ ಶಾಸಕರು ತಂಗಿದ್ದ ದೇವನಹಳ್ಳಿ ಪ್ರಕೃತಿ ರೆಸಾರ್ಟಿನಿಂದ ನಾಪತ್ತೆಯಾಗಿದ್ದ ಕಾಗವಾಡದ ಶಾಸಕ ಶ್ರೀಮಂತ ಪಾಟೀಲ್ ಅನಾರೋಗ್ಯದ ಸಮಸ್ಯೆಯಿಂದ ಮುಂಬೈ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ರಾತ್ರೋ ರಾತ್ರಿ ಬೆಂಗಳೂರು ಬಿಟ್ಟು ಮುಂಬೈ ಸೇರಿದ್ದ ಶ್ರೀಮಂತ ಪಾಟೀಲ್ ಹೃದಯ ಬಡಿತ, ಬ್ಲಡ್ ಪ್ರೆಶರ್ ಹೆಚ್ಚಾದ ಹಿನ್ನೆಲೆಯಲ್ಲಿ ಇಂದು ಮುಂಬೈನಲ್ಲಿರುವ ಸೆಂಟ್ ಜಾರ್ಜ್ ಆಸ್ಪತ್ರೆಗೆ ದಾಖಲಾಗಿದ್ದು, ಎದೆ ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಇಂದು ವಿಶ್ವಾಸಮತದ ಹಿನ್ನೆಲೆಯಲ್ಲಿ ಹೈಡ್ರಾಮಾ ನಡೆದಿದ್ದು, ಇಷ್ಟು ದಿನ ಸೈಲೆಂಟಾಗಿದ್ದ ರಮೇಶ್ ಜಾರಕಿಹೊಳಿ ಆಪ್ತ, ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಕಳೆದ ರಾತ್ರಿ ದಿಢೀರ್ ಕಾಂಗ್ರೆಸ್ ಶಾಸಕರು ತಂಗಿರುವ ದೇವನಹಳ್ಳಿಯ ಪ್ರಕೃತಿ ರೆಸಾರ್ಟಿನಿಂದ ನಾಪತ್ತೆಯಾಗಿದ್ದರು.

    ಸ್ಪೀಕರ್‍ ಗೆ ಪತ್ರ
    ಕಾಗವಾಡ ವಿಧಾನಸಭಾ ಸದಸ್ಯನಾದ ಶ್ರೀಮಂತ ಪಾಟೀಲ್ ಆದ ನಾನು ಅನಾರೋಗ್ಯದ ಕಾರಣದಿಂದ ವಿಧಾನ ಸಭೆ ಕಲಾಪಕ್ಕೆ ಬರುಲು ಆಗುತ್ತಿಲ್ಲ. ಹೃದಯ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ನಾನು ವೈದ್ಯರ ಅಣತಿಯಂತೆ ಸೆಂಟ್ ಜಾರ್ಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಅದ್ದರಿಂದ ಕರ್ನಾಟಕದ 15ನೇ ವಿಧಾನಸಭೆಯ 4ನೇ ಅಧಿವೇಶನಕ್ಕೆ ಗೈರು ಹಾಜರಾಗುತ್ತೇನೆಂದು ಈ ಮೂಲಕ ತಿಳಿಸುತ್ತೇನೆ ಎಂದು ಪತ್ರ ಬರೆದಿದ್ದಾರೆ.