Tag: ಎನ್‌ಆರ್ ಪುರ

  • ನಾಯಿ ಬೊಗಳಿದ್ದಕ್ಕೆ ಮಾಲೀಕನ ಮೇಲೆ ಆಸಿಡ್ ದಾಳಿ!

    ನಾಯಿ ಬೊಗಳಿದ್ದಕ್ಕೆ ಮಾಲೀಕನ ಮೇಲೆ ಆಸಿಡ್ ದಾಳಿ!

    ಚಿಕ್ಕಮಗಳೂರು: ನಾಯಿ (Dog) ಬೊಗಳಿದ್ದಕ್ಕೆ ಮನೆ ಮಾಲೀಕನ ಮೇಲೆ ಆಸಿಡ್ ದಾಳಿ (Acid Attack) ನಡೆಸಿರುವ ಘಟನೆ ಜಿಲ್ಲೆಯ ಎನ್‌ಆರ್ ಪುರ (NR Pura) ತಾಲೂಕಿನ ಹಾಳ್ ಕರಗುಂದ ಗ್ರಾಮದಲ್ಲಿ ನಡೆದಿದೆ.

    ಜೇಮ್ಸ್ ಆಸಿಡ್ ದಾಳಿ ಮಾಡಿದ ಆರೋಪಿಯಾದರೆ, ಸುಂದರ್ ರಾಜ್ ಆಸಿಡ್ ದಾಳಿಗೊಳಗಾದ ವ್ಯಕ್ತಿ. ಜೇಮ್ಸ್ ಹಾಗೂ ಸುಂದರ್ ರಾಜ್ ಅಕ್ಕಪಕ್ಕದ ಮನೆಯವರು. ಹಲವು ದಿನಗಳಿಂದ ಇಬ್ಬರ ನಡುವೆ ಗಲಾಟೆಯಾಗಿ, ಮನಸ್ಥಾಪವಿತ್ತು.

    dog

    ನಿನ್ನೆ ಸುಂದರ್ ರಾಜ್ ಮನೆಯ ಸಾಕು ನಾಯಿ ಬೊಗಳುತ್ತಿತ್ತು. ಈ ವೇಳೆ ಮನೆ ಮಾಲೀಕ ಸುಂದರ್ ರಾಜ್ ನಾಯಿಗೆ ಬೈದಿದ್ದಾರೆ. ಆಗ ಜೇಮ್ಸ್ ನಾಯಿಗೆ ಬೈದಂತೆ ನನಗೆ ಬೈಯುತ್ತಿದ್ದಾನೆ ಎಂದು ಜಗಳವಾಡಿದ್ದಾನೆ. ಇಬ್ಬರು ಜಗಳವಾಡುವಾಗ ಜೇಮ್ಸ್ ಏಕಾಏಕಿ ಸುಂದರ್ ರಾಜ್ ಮೇಲೆ ಆಸಿಡ್ ದಾಳಿ ನಡೆಸಿದ್ದಾನೆ. ಇದನ್ನೂ ಓದಿ: ನಡೆದು ಹೋಯ್ತಾ ಮಹಾ ಪ್ರಮಾದ – ಗುರಿ ತಪ್ಪಿ ಬಿದ್ದ ಗುಂಡೇಟಿನಿಂದ ಅರ್ಜುನ ಸಾವು?

    ಆಸಿಡ್ ದಾಳಿಗೆ ಸುಂದರ್ ರಾಜ್ ಮುಖ ಬಹುತೇಕ ಸುಟ್ಟಿದ್ದು ಎಡಗಣ್ಣಿಗೆ ಗಂಭೀರ ಗಾಯವಾಗಿದೆ. ಅರ್ಧ ಮುಖ ಸಂಪೂರ್ಣ ಸುಟ್ಟುಹೋಗಿದೆ. ಕೂಡಲೇ ಅವರನ್ನು ಎನ್‌ಆರ್ ಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಶಿವಮೊಗ್ಗದಲ್ಲಿ ವೈದ್ಯರು ಸುಂದರ್ ರಾಜ್ ಅವರ ಎಡಗಣ್ಣಿನ ಪದರ ಸಂಪೂರ್ಣ ಡ್ಯಾಮೇಜ್ ಆಗಿದೆ, ಕಣ್ಣಿನ ಪದರವನ್ನು ಬದಲಾಯಿಸಬೇಕೆಂದು ತಿಳಿಸಿದ್ದಾರೆ. ಕೂಲಿ ಮಾಡಿಕೊಂಡು ಬದುಕುತ್ತಿದ್ದ ಸುಂದರ್ ರಾಜ್ ಕುಟುಂಬ ಇದೀಗ ಚಿಕಿತ್ಸೆಯ ಹಣಕ್ಕಾಗಿ ಕಂಗಾಲಾಗಿದ್ದಾರೆ. ಆಸಿಡ್ ದಾಳಿ ಬಳಿಕ ಜೇಮ್ಸ್ ದಂಪತಿ ನಾಪತ್ತೆಯಾಗಿದ್ದಾರೆ. ಎನ್‌ಆರ್ ಪುರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Rain Alert: ಮುಂದಿನ 24 ಗಂಟೆಯಲ್ಲಿ ರಾಜ್ಯದಲ್ಲೂ ಭಾರೀ ಮಳೆ ಸಾಧ್ಯತೆ

  • ಲಾಂಗ್ ಬೀಸಿದ ರೌಡಿಶೀಟರ್ ಮಂಡಿ ಸೀಳಿದ ಖಾಕಿ

    ಲಾಂಗ್ ಬೀಸಿದ ರೌಡಿಶೀಟರ್ ಮಂಡಿ ಸೀಳಿದ ಖಾಕಿ

    ಚಿಕ್ಕಮಗಳೂರು: ರೌಡಿ ಶೀಟರ್‌ನನ್ನು (Rowdy Sheeter) ಬಂಧಿಸಲು ಹೋದ ಪೊಲೀಸರ (Police) ಮೇಲೆ ಮಚ್ಚು ಬೀಸಿದ ಕಾರಣ ಸಬ್ ಇನ್ಸ್ಪೆಕ್ಟರ್ (Sub Inspector) ರೌಡಿ ಶೀಟರ್ ಮೇಲೆ ಗುಂಡು ಹಾರಿಸಿದ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಎನ್‌ಆರ್‌ಪುರ (NR Pura) ತಾಲೂಕಿನ ಬಾಳೆಹೊನ್ನೂರು ಸಮೀಪದ ಮಾಗಲು ಗ್ರಾಮದಲ್ಲಿ ನಡೆದಿದೆ.

    ಮಾಗಲು ಗ್ರಾಮದ ಪೂರ್ಣೇಶ್ ಎಂಬವನ ಮೇಲೆ 2012 ರಿಂದ 8 ಪ್ರಕರಣಗಳು ದಾಖಲಾಗಿದ್ದವು. 4 ಹಾಫ್ ಮರ್ಡರ್ ಕೇಸ್, 3 ಹಲ್ಲೆ ಪ್ರಕರಣ ಮತ್ತೊಂದು ಪೊಲೀಸರ ಮೇಲೆ ಹಲ್ಲೆ ಮಾಡಿದ್ದು, ಪ್ರಕರಣ ಸಂಬಂಧ ಕೋರ್ಟಿನಿಂದ ಸಮನ್ಸ್ ಜಾರಿಯಾಗಿದ್ದರೂ ಆತ ಕೋರ್ಟಿಗೆ ಹಾಜರಾಗಿರಲಿಲ್ಲ. ಆತ ಮನೆಗೂ ಹೋಗುತ್ತಿರಲಿಲ್ಲ. ರಾತ್ರಿ ವೇಳೆ ಕಾಡು, ಕಾಫಿ ತೋಟ, ಕಾಡಿನ ದೊಡ್ಡ-ದೊಡ್ಡ ಮರಗಳ ಮೇಲೆ ಮಲಗಿ ಪೊಲೀಸರಿಗೂ ಚಳ್ಳೆ ಹಣ್ಣು ತಿನ್ನಿಸುತ್ತಿದ್ದ. ಇದನ್ನೂ ಓದಿ: ಭತ್ತದ ಗದ್ದೆಗೆ ನೀರುಕಟ್ಟಲು ಹೋದಾಗ ಮಾರಕಾಸ್ತ್ರದಿಂದ ವ್ಯಕ್ತಿಯ ಕೊಲೆ

    ಆತ ಮಾಗಲು ಗ್ರಾಮದ ತಮ್ಮ ಮನೆಯಲ್ಲಿ ಇರುವ ಖಚಿತ ಮಾಹಿತಿ ಮೇರೆಗೆ ಬಂಧಿಸಲು ಹೋದಾಗ ತಪ್ಪಿಸಿಕೊಳ್ಳಲು ಪೊಲೀಸರ ಮೇಲೂ ಮಚ್ಚು ಬೀಸಿದ್ದಾನೆ. ಎನ್‌ಆರ್ ಪುರ ತಾಲೂಕಿನ ಬಾಳೆಹೊನ್ನೂರು ಸಬ್ ಇನ್ಸ್ಪೆಕ್ಟರ್ ದಿಲೀಪ್ ಕುಮಾರ್ ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದ್ದಾರೆ. ಆದರೆ ಪೊಲೀಸರ ಮಾತು ಕೇಳದೆ ಪೊಲೀಸ್ ಪೇದೆ ಮಂಜುನಾಥ್ ಎಂಬವರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಘಟನೆಯಿಂದ ಪೇದೆ ಮಂಜುನಾಥ್ ಎಡಗೈಗೆ ಗಂಭೀರ ಗಾಯವಾಗಿದ್ದು, ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ನೆರೆಮನೆಯಾತ ಸೀರೆ ಎಳೆದಿದ್ದಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ

    ಪೊಲೀಸರ ಮೇಲೆ ಮಚ್ಚು ಬೀಸಿದ ಕಾರಣ ಆತ್ಮರಕ್ಷಣೆಗಾಗಿ ರೌಡಿ ಶೀಟರ್ ಬಲಗಾಲಿನ ಮಂಡಿಗೆ ಗುಂಡು ಹಾರಿಸಿ ಬಂಧಿಸಿ, ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಎಸ್‌ಪಿ ವಿಕ್ರಂ ಅಮಟೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿ, ಪೇದೆ ಮಂಜುನಾಥ್ ಆರೋಗ್ಯ ವಿಚಾರಿಸಿದ್ದಾರೆ. ರೌಡಿ ಶೀಟರ್ ಪೂರ್ಣೇಶ್ ಮೇಲೆ 2012ರಿಂದ 8 ಕೇಸ್‌ಗಳು ದಾಖಲಾಗಿವೆ. ಆತನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದರಿಂದ ಆತನಿಂದ ಹಲ್ಲೆಗೊಳಗಾದವರು ಸಂತಸಪಟ್ಟಿದ್ದಾರೆ. ಈ ಕುರಿತು ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೇರಳದಲ್ಲಿ ಸ್ಫೋಟ ಪ್ರಕರಣ- ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]