ದೆಹಲಿಯ ಕೃಷಿ ಭವನದಲ್ಲಿ ಈರುಳ್ಳಿ ಚಿಲ್ಲರೆ ಮಾರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (NCCF) ಚಿಲ್ಲರೆ ಅಂಗಡಿಗಳ ಮೂಲಕ ಈರುಳ್ಳಿಯನ್ನು ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತದೆ. ಪ್ರತಿ ಕಿಲೋಗ್ರಾಂಗೆ 35 ರೂ. ಸಬ್ಸಿಡಿ ದರದಲ್ಲಿ ಈರುಳ್ಳಿಯನ್ನು ಮಾರಾಟ ಮಾಡಲಾಗುತ್ತದೆ ಎಂದು ತಿಳಿಸಿದರು.
Flagged off mobile vans of @Nccf_India & @nafedindia from Krishi Bhavan, New Delhi for retail sale of onions at ₹35/kg as a step towards bringing relief to consumers. Officials from @jagograhakjago, NCCF and NAFED were also present during the event. pic.twitter.com/mdLZn0FG8L
ಬೆಲೆ ಏರಿಕೆ ನಿಯಂತ್ರಣಕ್ಕಾಗಿ ಈ ಕಾರ್ಯಕ್ರಮವನ್ನು ನಿಯೋಜಿಸಲಾಗಿದೆ. ಈರುಳ್ಳಿ ಖರೀದಿ ಮಾಡಿ ಸಂಗ್ರಹಿಸಿ, ಅದನ್ನು ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತದೆ. ಗ್ರಾಹಕರಿಗೆ ಹೊರ ಕಡಿಮೆ ಮಾಡಲು ಕೆ.ಜಿಗೆ 35 ರೂ.ಯಂತೆ ದರ ಇಳಿಸಲಾಗಿದೆ ಎಂದು ಹೇಳಿದರು.ಇದನ್ನೂ ಓದಿ: FIRE ಮನವಿಯನ್ನು ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇನೆ : ಸಿಎಂ
ಕೃಷಿ ಭವನ, ಎನ್‌ಸಿಯುಐ ಸಂಕೀರ್ಣ, ರಾಜೀವ್ ಚೌಕ್ ಮೆಟ್ರೋ ನಿಲ್ದಾಣ, ಪಟೇಲ್ ಚೌಕ್ ಮೆಟ್ರೋ ನಿಲ್ದಾಣ, ಸಿಜಿಒ ಮತ್ತು ನೋಯ್ಡಾ ಮತ್ತು ಗಾಜಿಯಾಬಾದ್‌ನ ಕೆಲವು ಭಾಗಗಳು ಸೇರಿದಂತೆ 38 ಸ್ಥಳಗಳಲ್ಲಿ ಈರುಳ್ಳಿ ಮಾರಾಟ ವಾಹನಗಳ ಮೂಲಕ ಮಾರಾಟವನ್ನು ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.
ಬೆಂಗಳೂರು: ಕೇಂದ್ರ ಸರ್ಕಾರ ಮಾರಾಟ ಮಾಡಲು ತೀರ್ಮಾನಿಸಿರುವ ಭಾರತ್ ಬ್ರ್ಯಾಂಡ್ (Bharath Brand) ಅಕ್ಕಿ ಗ್ರಾಹಕರಿಗೆ ಆನ್‌ಲೈನ್‌ಲೂ (Online) ಸಹ ಸಿಗಲ್ಲಿದ್ದು, ನಗರದಲ್ಲಿಯೂ ಅಕ್ಕಿ ಸಿಗಲಿದೆ
ದಿನಸಿ, ಧಾನ್ಯ ಎಲ್ಲಾ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು, ಜನ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದಾರೆ. ಈ ಹಣದುಬ್ಬರಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಾನಾ ಪ್ರಯತ್ನಗಳನ್ನು ನಡೆಸುತ್ತಿದ್ದು, ಸರ್ಕಾರ ಈಗಾಗಲೇ ಭಾರತ್ ಬ್ರ್ಯಾಂಡ್ ಅಡಿಯಲ್ಲಿ ಗೋಧಿ ಮತ್ತು ಬೇಳೆ ಕಾಳುಗಳನ್ನು ಮಾರಾಟ ಮಾಡುತ್ತಿದೆ. ಈ ಹಿಂದೆ ಕೇಂದ್ರ ಸರ್ಕಾರದಿಂದ ತಂದತಹ ಭಾರತ್ ಅಟ್ಟಾ ಹಾಗೂ ಕಡಲೆ ಬೇಳೆಗೆ ಸಿಲಿಕಾನ್ ಸಿಟಿಯ ಜನರಿಂದ ಭರ್ಜರಿ ಪ್ರಿತಿಕ್ರಿಯೆ ಬಂದಿತ್ತು. ನಗರದಲ್ಲಿ 2,81,572 ಕೆ.ಜಿ ಭಾರತ್ ದಾಲ್ ಮತ್ತು 1,22,190 ಕೆ.ಜಿ ಗೋಧಿ ವ್ಯಾಪಾರವಾಗಿತ್ತು. ಇದನ್ನೂ ಓದಿ: ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಿಸೋದಿಲ್ಲ: ರಾಮಲಿಂಗಾರೆಡ್ಡಿ
ಇದೀಗ ಭಾರತ್ ಬ್ರ್ಯಾಂಡ್ ಅಡಿಯಲ್ಲಿ ಅಕ್ಕಿಯನ್ನು ಮಾರಾಟ ಮಾಡಲು ಸರ್ಕಾರ ನಿರ್ಧರಿಸಿದೆ. ಅದರಂತೆ ಬೆಂಗಳೂರಿನಲ್ಲಿ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (ಎನ್‌ಸಿಸಿಎಫ್) ಮೂಲಕ ಮಾರಾಟ ಮಾಡಲು ಪ್ಲಾನ್ ಮಾಡಿದೆ. ಈ ಅಕ್ಕಿಯ ವಿತರಣೆ ಮಂಗಳವಾರ (ಫೆ.6) ಆರಂಭವಾಗುವ ಸಾಧ್ಯತೆಯಿದೆ. ಎನ್‌ಸಿಸಿಎಫ್‌ನ ಮುಖ್ಯ ಗೋಡಾನ್ ಯಶವಂತಪುರದಲ್ಲಿದ್ದು ಬೆಂಗಳೂರಿನ 50 ಏರಿಯಾಗಳಿಗೆ ಮೊಬೈಲ್ ವ್ಯಾನ್ ಮೂಲಕ ಮನೆ ಮನೆಗೆ ತಲುಪಿಸುವ ಪ್ಲಾನ್ ಮಾಡಿಕೊಂಡಿದೆ.ಇದನ್ನೂ ಓದಿ: ನಮ್ಮ ಗ್ಯಾರಂಟಿಗಳನ್ನು ನೋಡಿಕೊಂಡು ಬಿಜೆಪಿ ಮೋದಿ ಗ್ಯಾರಂಟಿ, ಮೋದಿ ಗ್ಯಾರಂಟಿ ಅಂತಾರೆ: ಸಿದ್ದರಾಮಯ್ಯ
ನಗರದ ಯಾವ ಪ್ರಮುಖ ಪ್ರದೇಶಗಳಲ್ಲಿ ಅಕ್ಕಿ ಸಿಗಲ್ಲಿದೆ ಎಂಬುದರ ಪಟ್ಟಿ ಹೀಗಿದೆ.
ಬಸವೇಶ್ವರ ನಗರ, ದೀಪಾಂಜಲಿ ನಗರ, ಮಹಾಕ್ಷ್ಮಿ ಲೇಔಟ್, ಗಾಯತ್ರಿ ನಗರ, ನಾಗಸಂದ್ರ, ಅಬ್ಬಿಗೆರೆ, ಚಿಕ್ಕಬಣ್ಣಾವರ, ಥಣಿಸಂದ್ರ, ಹೆಸರಘಟ್ಟ, ಯಲಹಂಕ, ಮಾಗಡಿ ರೋಡ್, ಕೊಡಿಗೆಹಳ್ಳಿ, ಶೇಷಾದ್ರಿಪುರಂ, ಸಂಜಯ್ ನಗರ, ಜಕ್ಕೂರು, ಬನಶಂಕರಿ, ಕುಮಾರಸ್ವಾಮಿ ಲೇಔಟ್, ಜೆ.ಸಿ. ನಗರ, ಡೈರಿ ಸರ್ಕಲ್, ಕೊಡಿಗೆಹಳ್ಳಿ ಸೇರಿದಂತೆ ಸುಮಾರು 50 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವ್ಯಾನ್ ಮೂಲಕ ಅಕ್ಕಿ ಪೂರೈಸಿ ಮನೆ ಮನೆಗೆ ತಲುಪಿಸಲಾಗುತ್ತೆ. ಇದನ್ನೂ ಓದಿ:ಪತಿಯೊಂದಿಗೆ ಅಕ್ರಮ ಸಂಬಂಧ – ಗೆಳತಿಯ ಮನೆಗೆ ನುಗ್ಗಿ ಪತ್ನಿಯಿಂದ ದಾಂಧಲೆ
ಬೆಂಗಳೂರು: ರಾಜ್ಯ ಸರ್ಕಾರ (Government of Karnataka) ಎಲ್ಲಾ ಸಮಸ್ಯೆಗಳನ್ನು ಎದುರಿಸುವಷ್ಟು ಶಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಸ್ತುತ ಮಳೆ ಶುರುವಾಗಿದ್ದು, ಮಳೆ (Rain) ಇನ್ನಷ್ಟು ವ್ಯಾಪಕವಾಗಿ ಆಗಬೇಕಿದೆ. ಈಗಾಗಲೇ ಕೆಲವೆಡೆ ಬಿತ್ತನೆ ಪ್ರಾರಂಭವಾಗಿದ್ದು, ಮಳೆ ಬರಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಕೆಲವೆಡೆ ಕುಡಿಯುವ ನೀರಿಗೆ ಸಮಸ್ಯೆಯುಂಟಾಗಿದ್ದು, ಈಗಾಗಲೇ 2 ಬಾರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒಗಳೊಂದಿಗೆ ಸಭೆ ಕರೆದು ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಬಿತ್ತನೆಗೆ ಸಿದ್ಧ:
ಮಳೆ ಯಾವಾಗ ಬಂದರೂ ಬಿತ್ತನೆ ಮಾಡಲು ತಯಾರಾಗಿದ್ದೇವೆ. ಕೃಷಿ ಇಲಾಖೆ ಬೀಜ, ಗೊಬ್ಬರ ಹಾಗೂ ಔಷಧಿಗಳನ್ನು ಸಂಗ್ರಹಿಸಿ ಸರ್ವಸನ್ನದ್ಧವಾಗಿದೆ ಎಂದು ಹೇಳಿದರು.
ಬಜೆಟ್ ನಂತರ ಪರಿಶೀಲನೆ:
ಸಣ್ಣ ಕೈಗಾರಿಕೆಗಳು (Small Industries) ಹಾಗೂ ಕಾಸಿಯಾ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ತಮ್ಮ ಸಮಸ್ಯೆಗಳನ್ನ ತಿಳಿಸಿದ್ದಾರೆ. ಬಜೆಟ್ ಮಂಡನೆಯ ನಂತರ ಈ ಬಗ್ಗೆ ಪರಿಶೀಲಿಸುವ ಭರವಸೆ ನೀಡಲಾಗಿದೆ ಎಂದರು. ಇದನ್ನೂ ಓದಿ: ಹಸಿದವರ ಕೂಗಿಗೆ ಸಿದ್ದರಾಮಯ್ಯರ ಕಿವಿ ಯಾವಾಗಲೂ ತೆರೆದಿರುತ್ತದೆ: ನಾಡೋಜ ಹಂಪನಾ
ಕೈಗಾರಿಕೆಗಳಿಗೆ 9 ತಿಂಗಳ ವಿದ್ಯುತ್ ತೆರಿಗೆ ವಿಧಿಸಲಾಗಿದೆ. ಇದರಿಂದ ತಮಗೆ ಹೊರೆಯಾಗಿದೆ ಎಂದು ಕೈಗಾರಿಕೋದ್ಯಮಿಗಳು ತಿಳಿಸಿದ್ದಾರೆ. ದರ ಪರಿಷ್ಕರಣೆ ನಮ್ಮ ಸರ್ಕಾರದ ಅವಧಿಯಲ್ಲಿ ಆಗಿದ್ದಲ್ಲ, ಹಿಂದಿನ ಸರ್ಕಾರದ ಅವಧಿಯಲ್ಲಿ ಮಾಡಿದ್ದು. ದರ ಪರಿಷ್ಕರಣೆಯನ್ನ ಪ್ರತಿ ವರ್ಷ ಕೆಇಆರ್‌ಸಿ ಮಾಡುತ್ತದೆ. ದರ ಏರಿಕೆಗೂ ನಮ್ಮ ಸರ್ಕಾರಕ್ಕೂ ಸಂಬಂಧವಿಲ್ಲ. ನಾವು ಕೂಡ ಅವರಿಗೆ ಎಷ್ಟು ಮಾಡಬೇಕೆಂದು ಮನವಿ ಸಲ್ಲಿಸಿರುತ್ತೇವೆ. ಅದೊಂದು ಸ್ವಾಯತ್ತ ಸಂಸ್ಥೆಯಾಗಿದೆ ಎಂದು ಹೇಳಿದರು.
ಬಡವರ ಕಾರ್ಯಕ್ರಮಕ್ಕೆ ಕೇಂದ್ರದಿಂದ ತೊಂದರೆ:
ಬಡವರ ಕಾರ್ಯಕ್ರಮಗಳಿಗೆ ತೊಂದರೆ ಕೊಡಬೇಕೆಂದು ಕೇಂದ್ರ ಸರ್ಕಾರ ಅಕ್ಕಿ ಕೊಡಲು ನಿರಾಕರಿಸಿದೆ. ಅವರ ಬಳಿ ಲಕ್ಷ ಟನ್‌ಗಟ್ಟಲೆ ಅಕ್ಕಿ ಇದೆ. ಅದನ್ನ ಖಾಸಗಿಯವರಿಗೆ ಹರಾಜು ಮಾಡ್ತಿದ್ದಾರೆ ಹೊರತು ರಾಜ್ಯಗಳಿಗೆ ಕೊಡುತ್ತಿಲ್ಲ. ಪ್ರತಿ ಕೆಜಿ ಅಕ್ಕಿಗೆ 36.70 ರೂ. ಕೊಡಲು ಒಪ್ಪಿದರೂ ಅಕ್ಕಿ ಕೊಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಕ್ಕಿ ವಿಚಾರದಲ್ಲಿ ದ್ವೇಷದ ರಾಜಕೀಯ ಮಾಡೋದು ಬೇಡ – ಅಮಿತ್ ಶಾಗೆ ಸಿದ್ದರಾಮಯ್ಯ ಮನವಿ
ಅಕ್ಕಿ ಖರೀದಿಗೆ ಸರ್ಕಾರಿ ಏಜೆನ್ಸಿಗಳೊಂದಿಗೆ ಮಾತುಕತೆ
5 ಗ್ಯಾರಂಟಿ ಯೋಜನೆಗಳ ಪೈಕಿ ಈಗಾಗಲೇ ಒಂದು ಯೋಜನೆಗೆ ಚಾಲನೆ ನೀಡಲಾಗಿದೆ. ಜುಲೈ 1ರಿಂದ ಉಚಿತ ವಿದ್ಯುತ್ ಯೋಜನೆ ಜಾರಿಗೆ ಬರಲಿದೆ. ಅಕ್ಕಿಯನ್ನೂ ನೀಡಬೇಕೆಂಬ ಉದ್ದೇಶವಿದ್ದರೂ ಅಕ್ಕಿ ದೊರೆಯುತ್ತಿಲ್ಲ. ದೊರೆತರೂ ಹೆಚ್ಚಿನ ದರ ಕೇಳುತ್ತಾರೆ. 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಎಲ್ಲಿಯೂ ಸಿಗುತ್ತಿಲ್ಲ. ಎಲ್ಲ ರಾಜ್ಯದವರಿಂದಲೂ ಪೂರ್ಣಪ್ರಮಾಣದ ಅಕ್ಕಿ ದೊರೆಯುತ್ತಿಲ್ಲವಾದ್ದರಿಂದ ಬೇರೆ ಸರ್ಕಾರಿ ಏಜೆನ್ಸಿಗಳಿಂದ ಎನ್‌ಸಿಸಿಎಫ್ ನಿಂದ ಕೇಂದ್ರೀಯ ಭಂಡಾರ್, ನ್ಯಾಫೆಡ್ ಸಂಸ್ಥೆಗಳಿಂದ ದರಪಟ್ಟಿ ಕರೆಯಲಾಗಿದ್ದು, ಮಾತುಕತೆ ನಡೆದಿದೆ. ಈ ಬಗ್ಗೆ ಮಾತುಕತೆ ನಡೆಸಿ ಎಷ್ಟು ಅಕ್ಕಿ? ದರ ಎಷ್ಟು? ಎನ್ನುವ ಬಗ್ಗೆ ತೀರ್ಮಾನ ಮಾಡಲಾಗುತ್ತದೆ. ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಪಡೆಯಲು ಟೆಂಡರ್ ಕರೆಯಬೇಕು. ಜೋಳ, ರಾಗಿ ವಿತರಣೆ 6 ತಿಂಗಳಿಗಾಗುವಷ್ಟಿದೆ. 2 ಕೆಜಿಯಂತೆ ನೀಡಬಹುದು. ಇನ್ನೂ 3 ಕೆಜಿ ಅಕ್ಕಿ ನೀಡಬೇಕಿದೆ. ಇಡೀ ವರ್ಷ ನೀಡುವಷ್ಟು ರಾಗಿ, ಜೋಳವಿಲ್ಲ ಎಂದು ವಿವರಿಸಿದರು.
ಬೆಂಗಳೂರು: ನ್ಯಾಷನಲ್ ಕೋ-ಆಪರೇಟಿವ್ ಕನ್ಸ್ಯೂಮರ್ಸ್ ಫೆಡರೇಷನ್ (NCCF), ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ (NAFED) ಹಾಗೂ ಕೇಂದ್ರೀಯ ಭಂಡಾರ ಈ ಮೂರು ಸಂಸ್ಥೆಗಳು ಭಾರತ ಸರ್ಕಾರಕ್ಕೆ ಸೇರಿದ್ದು, ಅಲ್ಲಿಂದ ಅಕ್ಕಿ (Rice) ಪಡೆಯಲು ದರಪಟ್ಟಿ ಕರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.
ಅವರು ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭಾರತೀಯ ಆಹಾರ ಮಂಡಳಿಯಿಂದ (FCI) 34 ರೂ. ಅಕ್ಕಿ, 2.60 ರೂ. ಸಾಗಾಣಿಕೆ ವೆಚ್ಚ ಸೇರಿ ಒಂದು ಕೆಜಿ ಅಕ್ಕಿಗೆ ಒಟ್ಟು 36.40 ರೂ. ವೆಚ್ಚ ತಗಲುತ್ತದೆ. ಈ ಮೂರು ಸಂಸ್ಥೆಗಳು ನಮೂದಿಸುವ ದರ, ಸರಬರಾಜು ಮಾಡುವ ಪ್ರಮಾಣಗಳ ವಿವರ ಪಡೆಯಲಾಗುವುದು. ಟೆಂಡರ್ ಮೂಲಕ ಅಕ್ಕಿ ಪಡೆಯಲೂ ಕ್ರಮ ಕೈಗೊಳ್ಳಲಾಗುವುದು ಎಂದರು.
ವಾರ್ಷಿಕ 10,092 ಕೋಟಿ ರೂ.:
ಅನ್ನಭಾಗ್ಯ (Anna Bhagya Scheme) ಯೋಜನೆಯಡಿ 10 ಕೆಜಿ ಅಕ್ಕಿ ವಿತರಿಸಲು ಒಂದು ತಿಂಗಳಿಗೆ 840 ಕೋಟಿ ರೂ. ವೆಚ್ಚ ತಗುಲಲಿದೆ. ವರ್ಷಕ್ಕೆ 10,092 ಕೋಟಿ ವೆಚ್ಚವಾಗಲಿದೆ. ಸರ್ಕಾರ ಈ ವೆಚ್ಚವನ್ನು ಭರಿಸಿ ಅಕ್ಕಿಯನ್ನು ವಿತರಿಸಲು ಸಿದ್ಧವಿದೆ. ಅಕ್ಕಿಯ ದಾಸ್ತಾನು ಲಭ್ಯವಿದ್ದರೂ ಕೇಂದ್ರ ಸರ್ಕಾರದವರು ಅಕ್ಕಿ ನೀಡಲು ಒಪ್ಪುತ್ತಿಲ್ಲ. ರಾಜ್ಯ ಬಿಜೆಪಿ ಪಕ್ಷದವರು ರಾಜ್ಯದ ಬಡವರಿಗೆ ಅನುಕೂಲವಾಗಲು ಅಕ್ಕಿಯನ್ನು ವಿತರಿಸುವಂತೆ ಕೇಂದ್ರ ಸರ್ಕಾರವನ್ನು ಮನವಿ ಮಾಡಬಹುದಲ್ಲ? ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ರಾಗಿ, ಜೋಳವನ್ನು 6 ತಿಂಗಳವರೆಗೆ ತಲಾ 2 ಕೆಜಿ ಕೊಡುವಷ್ಟು ಮಾತ್ರ ದಾಸ್ತಾನು ಲಭ್ಯವಿದೆ. ಹಳೆ ಮೈಸೂರು ಭಾಗದ ಜನರಿಗೆ 2 ಕೆಜಿ ರಾಗಿ ಹಾಗೂ ಹೈದರಾಬಾದ್ ಕರ್ನಾಟಕ ಹಾಗೂ ಮುಂಬೈ ಕರ್ನಾಟಕದ ಭಾಗದ ಜನರಿಗೆ 2 ಕೆಜಿ ಜೋಳ ನೀಡಬಹುದು. ಇನ್ನುಳಿದ 3 ಕೆಜಿ ಅಕ್ಕಿಯನ್ನು ರಾಜ್ಯದ ಜನರಿಗೆ ನೀಡಬೇಕಾಗುತ್ತದೆ ಎಂದರು.
ಪಂಜಾಬ್ ಸರ್ಕಾರದೊಂದಿಗೆ ಚರ್ಚೆ:
ಪಂಜಾಬ್ ಸರ್ಕಾರ ಕರ್ನಾಟಕಕ್ಕೆ ಅಕ್ಕಿ ಸರಬರಾಜು ಮಾಡಲು ಸಿದ್ಧವಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಪಂಜಾಬ್‌ನಿಂದ ಅಕ್ಕಿ ಖರೀದಿ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಚರ್ಚಿಸಿದ್ದಾರೆ. ರಾಜ್ಯ ತಿಳಿಸುವ ದರಕ್ಕೆ ಅಕ್ಕಿ ನೀಡಲು ಪಂಜಾಬ್ ಸರ್ಕಾರದೊಂದಿಗೆ ಮತ್ತೊಮ್ಮೆ ಚರ್ಚಿಸಲಾಗುವುದು ಎಂದರು. ಇದನ್ನೂ ಓದಿ: ಮಹಿಳೆಯರ `ಶಕ್ತಿ’ಗೆ ಶೀಘ್ರವೇ ಹೊಸ ಮಾರ್ಗಸೂಚಿ – ವಾರಕ್ಕೆ ಮುಂಚೆ ಬುಕ್ಕಿಂಗ್ ಕಡ್ಡಾಯ ಸಾಧ್ಯತೆ
ಬಡವರಿಗೆ ಅಕ್ಕಿ ನೀಡುವ ಯೋಜನೆಗೆ ತಪ್ಪದೇ ಚಾಲನೆ:
ಕೇಂದ್ರ ಸರ್ಕಾರದ ಸಂಸ್ಥೆಗಳಿಂದ ಅಕ್ಕಿ ಪಡೆಯುವವರೆಗೆ ಸರ್ಕಾರದ ಬಳಿ ಸಮಯವಿದೆಯೇ ಎಂಬುದಕ್ಕೆ ಪ್ರತಿಕ್ರಿಯಿಸಿ, ಜುಲೈ 1 ರಿಂದ ರಾಜ್ಯದ ಜನರಿಗೆ ಅಕ್ಕಿಯನ್ನು ನೀಡಲು ಸರ್ಕಾರ ಪ್ರಮಾಣಿಕವಾಗಿ ಪ್ರಯತ್ನಿಸುತ್ತಿದೆ. ಕೇಂದ್ರ ಸರ್ಕಾರದಲ್ಲಿ ಅಕ್ಕಿಯ ದಾಸ್ತಾನು ಲಭ್ಯವಿದ್ದು, ಅವರು ರಾಜ್ಯಕ್ಕೆ ಅಕ್ಕಿ ನೀಡಲು ಮನಸ್ಸು ಮಾಡಬೇಕಿದೆ. ಎಂಎಸ್‌ಪಿ ಮೂಲಕ ಅಕ್ಕಿ ಖರೀದಿಸಬೇಕಾಗಿದೆ. ಬಡವರಿಗೆ ಅಕ್ಕಿ ನೀಡುವ ವಿಷಯದಲ್ಲಿ ಯಾರೇ ಎಷ್ಟೇ ರಾಜಕಾರಣ ಮಾಡಿದರೂ ನಮ್ಮ ಸರ್ಕಾರ ಅನ್ನಭಾಗ್ಯ ಯೋಜನೆಯನ್ನು ಖಂಡಿತ ಚಾಲನೆಗೊಳಿಸಲಿದೆ ಎಂದು ಭರವಸೆ ನೀಡಿದರು.
ಕೇಂದ್ರ ಸಹಕರಿಸಬೇಕು:
ಸಹಕಾರಿ ಒಕ್ಕೂಟದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಪದೇ ಪದೇ ಹೇಳುತ್ತಾರೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಕೇಂದ್ರ ಸರ್ಕಾರಕ್ಕೆ ತೆರಿಗೆ ಬರುವುದು ರಾಜ್ಯಗಳಿಂದ. ಅವರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಕರ್ನಾಟಕಕ್ಕೆ ನೀರು ಬಿಡಬಾರದೆಂದು ಮಹಾರಾಷ್ಟ್ರದ ರೈತರು ಬ್ಯಾರೇಜ್ ಬಂದ್ ಮಾಡಿದ್ದು, ರೈತರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಸುದ್ದಿಗಾರರು ಮುಖ್ಯಮಂತ್ರಿಗಳು ಗಮನಕ್ಕೆ ತಂದಾಗ, ಅಲ್ಲಿನ ರೈತರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಮಾತನಾಡಲಾಗುವುದು ಎಂದರು.
ನಮ್ಮಲ್ಲಿ ಗೊಂದಲವಿಲ್ಲ:
ಸರ್ಕಾರ 5 ವರ್ಷಗಳ ಅವಧಿ ಮುಗಿಸುತ್ತದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಅಧಿಕಾರ ಹಂಚಿಕೆಯ ಬಗ್ಗೆ ಗೊಂದಲಗಳು ನಮ್ಮಲ್ಲಿಲ್ಲ ಎಂದು ಸ್ಪಷ್ಟ ಪಡಿಸಿದರು.