Tag: ಎನ್‍ಐಎ

  • ಐಸಿಸ್ ಉಗ್ರರೊಂದಿಗೆ ನಂಟು- ವಿದ್ಯಾರ್ಥಿ ಅರೆಸ್ಟ್

    ಐಸಿಸ್ ಉಗ್ರರೊಂದಿಗೆ ನಂಟು- ವಿದ್ಯಾರ್ಥಿ ಅರೆಸ್ಟ್

    ನವದೆಹಲಿ: ನಿಷೇಧಿತ ಭಯೋತ್ಪಾದಕ ಐಎಸ್‍ಐಎಸ್‍ನೊಂದಿಗೆ (ISIS) ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಉತ್ತರ ಪ್ರದೇಶದ (Uttar Pradesh) ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ (Aligarh Muslim University) ವಿದ್ಯಾರ್ಥಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿದೆ.

    ಬಂಧಿತನನ್ನು ಫೈಜಾನ್ ಅನ್ಸಾರಿ ಅಲಿಯಾಸ್ ಫೈಜ್ (19) ಎಂದು ಗುರುತಿಸಲಾಗಿದೆ. ಈತನ ಮನೆಯನ್ನು ಶೋಧಿಸಿ ಸರಿಯಾದ ಪುರಾವೆಗಳು ಸಿಕ್ಕಿದ ನಂತರ ಬಂಧಿಸಲಾಗಿದೆ. ಫೈಜ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ಸಂಬಂಧಿತ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಜೈಲಲ್ಲಿದ್ದುಕೊಂಡೇ ಹಿಂದೂಗಳ ಮತಾಂತರ- ನಜೀರ್ ವಿಚಾರಣೆ ವೇಳೆ ಸ್ಫೋಟಕ ಸತ್ಯ ಬಹಿರಂಗ

    ಎರಡು ದಿನಗಳಿಂದ ಜಾಖರ್ಂಡ್‍ನ (Jharkhand) ಲೋಹರ್ಡಗಾ ಜಿಲ್ಲೆಯ ಫೈಜ್ ಮನೆ ಮತ್ತು ಉತ್ತರ ಪ್ರದೇಶದ ಅಲಿಗಢದಲ್ಲಿ ಬಾಡಿಗೆ ಕೊಠಡಿಯಲ್ಲಿ ಶೋಧ ನಡೆಸಲಾಗಿತ್ತು. ಈ ವೇಳೆ ಹಲವಾರು ಎಲೆಕ್ಟ್ರಾನಿಕ್ ಉಪಕರಣಗಳು, ಅನುಮಾನಾಸ್ಪದ ವಸ್ತುಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಭಾರತದಲ್ಲಿ ಐಸಿಸ್ ಚಟುವಟಿಕೆಗಳನ್ನು ಬೆಂಬಲಿಸಲು ಆರೋಪಿ ಸಾಮಾಜಿಕ ಜಾಲತಾಣಗಳಲ್ಲಿ ಗ್ರೂಪ್ ರಚಿಸಿ ಮಾಹಿತಿ ಹಂಚುತ್ತಿದ್ದ. ಅಲ್ಲದೇ ದೇಶದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಯೋಜಿಸಿದ್ದ. ತನಿಖೆ ವೇಳೆ ಆತನ ಜೊತೆ ಹಲವು ಸಹಚರರು ಐಸಿಸ್ ಜೊತೆ ಕೈ ಜೊಡಿಸಿರುವುದು ಬೆಳಕಿಗೆ ಬಂದಿದೆ.

    ಫೈಜ್ ವಿದೇಶಿ ಮೂಲದ ಐಸಿಸ್ ಉಗ್ರರ ಸಂಪರ್ಕದಲ್ಲಿದ್ದಾನೆ. ಉಗ್ರರ ಸೂಚನೆಯಂತೆ ಸಂಘಟನೆಗೆ ಯುವಕರನ್ನು ಸೆಳೆಯವ ಕಾರ್ಯದಲ್ಲಿ ಆರೋಪಿಯ ಪಾತ್ರವಿದೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಇದನ್ನೂ ಓದಿ: ಶಂಕಿತ ಉಗ್ರರು ಬೆಂಗ್ಳೂರಲ್ಲೇ ಅಡಗಿಸಿಟ್ಟಿದ್ದ ಗ್ರೆನೇಡ್‌ಗಳು ಪತ್ತೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೇರಳ ಪ್ರೊಫೆಸರ್‌ ಕೈ ಕತ್ತರಿಸಿದ ಪ್ರಕರಣ – ಐವರು ಪಿಎಫ್‌ಐ ಕಾರ್ಯಕರ್ತರು ದೋಷಿಗಳು

    ಕೇರಳ ಪ್ರೊಫೆಸರ್‌ ಕೈ ಕತ್ತರಿಸಿದ ಪ್ರಕರಣ – ಐವರು ಪಿಎಫ್‌ಐ ಕಾರ್ಯಕರ್ತರು ದೋಷಿಗಳು

    ತಿರುವನಂತಪುರಂ: ಕೇರಳದ ಪ್ರೊಫೆಸರ್‌ ಅವರ ಕೈಯನ್ನು ಕತ್ತರಿಸಿದ ಪ್ರಕರಣಕ್ಕೆ (Kerala Professor’s Hand-Chopping Case) ಸಂಬಂಧಿಸಿದಂತೆ ಐವರ ವಿರುದ್ಧದ ಆರೋಪ ಸಾಬೀತಾಗಿದೆ.

    ಕೊಚ್ಚಿಯಲ್ಲಿರುವ ರಾಷ್ಟ್ರೀಯ ತನಿಖಾ ದಳ (NIA) ಕೋರ್ಟ್‌ ಐವರನ್ನು ದೋಷಿಗಳೆಂದು ತೀರ್ಪು ನೀಡಿದೆ. ಉಳಿದ ಐವರು ಆರೋಪಿಗಳನ್ನು ಪ್ರಕರಣದಿಂದ ಕೈಬಿಟ್ಟ ಕೋರ್ಟ್‌ ಮುಂದೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸುವುದಾಗಿ ತಿಳಿಸಿತು.

    ಈ ಮೊದಲು ಮೊದಲ ಹಂತದ ವಿಚಾರಣೆ ನಡೆಸಿದಾಗ 13 ಮಂದಿ ಮೇಲಿದ್ದ ಆರೋಪ ಸಾಬೀತಾಗಿತ್ತು. 18 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿತು. ತೀರ್ಪಿನ ನಂತರ 11 ಮಂದಿಯ ವಿರುದ್ಧ ಹೆಚ್ಚುವರಿ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿತ್ತು. ಆರೋಪಿಗಳೆಲ್ಲರೂ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾದ (PFI) ಸದಸ್ಯರಾಗಿದ್ದರು.

    ಈ ಕೃತ್ಯದ ಪ್ರಧಾನ ಸೂತ್ರಧಾರ ಸವಾದ್‌ ಈಗಲೂ ತಲೆಮರೆಸಿಕೊಂಡಿದ್ದಾನೆ. ಕೋವಿಡ್‌ ಹಿನ್ನೆಲೆಯಲ್ಲಿ ತಡವಾಗಿ ಕೋರ್ಟ್‌ ವಿಚಾರಣೆ ಆರಂಭಗೊಂಡಿತ್ತು.  ಇದನ್ನೂ ಓದಿ: ಡಬಲ್‌ ಮರ್ಡರ್‌ ಬಳಿಕ ಪಬ್ಲಿಕ್‌ ಟಿವಿ ಸುದ್ದಿಯ ಸ್ಟೇಟಸ್ – ವೃತ್ತಿ ವೈಷಮ್ಯವೇ ಕೊಲೆಗೆ ಕಾರಣ?

    ಏನಿದು ಪ್ರಕರಣ?
    ಕಾಲೇಜಿನಲ್ಲಿ ನಡೆದ ಆಂತರಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಪ್ರವಾದಿಯನ್ನು ಅವಮಾನಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ 2010ರ ಜುಲೈ 4 ರಂದು ತೊಡುಪುಳದ ನ್ಯೂಮನ್ ಕಾಲೇಜಿನ ಪ್ರೊಫೆಸರ್‌ ಟಿಜೆ ಜೋಸೆಫ್‌ ( T J Joseph ) ಅವರ ಮೇಲೆ ದಾಳಿ ನಡೆದಿತ್ತು. ಶಸ್ತ್ರ ಸಜ್ಜಿತರಾಗಿಯೇ ಆಯುಧ ಮತ್ತು ಸ್ಫೋಟಕ ಸಾಮಗ್ರಿಗಳೊಂದಿಗೆ ಕಾರಿನಲ್ಲಿ ಬಂದಿದ್ದ ಪಿಎಫ್‌ಐ ಕಾರ್ಯಕರ್ತರು ಜೋಸೆಫ್‌ ಅವರ ಕಾರನ್ನು ತಡೆದು ನಿಲ್ಲಿಸಿದ್ದರು. ಬಳಿಕ ಕಾರಿನಿಂದ ಜೋಸೆಫ್‌ ಅವರನ್ನು ಹೊರಗಡೆ ಎಳೆದು ಕೊಡಲಿಯಿಂದ ಬಲಗೈಯನ್ನು ಕತ್ತರಿಸಿ ಹತ್ಯೆಗೆ ಯತ್ನಿಸಿ ಎಡಗೈಯನ್ನು ಕತ್ತರಿಸಿದ್ದರು.

    ಈ ಸಂದರ್ಭದಲ್ಲಿ ಜೋಸೆಫ್‌ ಅವರ ಸಹೋದರಿ ಕೃತ್ಯವನ್ನು ತಡೆಯಲು ಮುಂದಾದಾಗ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕಾರನ್ನು ಜಖಂಗೊಳಿಸಿ ಪರಾರಿಯಾಗಿದ್ದರು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಿವಮೊಗ್ಗ ಬ್ಲಾಸ್ಟ್ ಕೇಸ್‌ – ರೊಬೊಟ್‌ ಬಳಸಿ‌ ಭಾರತದಲ್ಲಿ ದಾಳಿಗೆ ಮುಂದಾಗಿದ್ದ ಐಸಿಸ್

    ಶಿವಮೊಗ್ಗ ಬ್ಲಾಸ್ಟ್ ಕೇಸ್‌ – ರೊಬೊಟ್‌ ಬಳಸಿ‌ ಭಾರತದಲ್ಲಿ ದಾಳಿಗೆ ಮುಂದಾಗಿದ್ದ ಐಸಿಸ್

    ನವದೆಹಲಿ: ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಐಸಿಸ್ (ISIS) ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) 9 ಜನರ ವಿರುದ್ಧ ಶುಕ್ರವಾರ ಮೊದಲ ಪೂರಕ ಚಾರ್ಜ್‌ಶೀಟ್ (Supplymentary ChargeSheet) ಸಲ್ಲಿಸಿದೆ.

    ಆರೋಪಿಗಳು ಭವಿಷ್ಯದಲ್ಲಿ ಭಾರತದಲ್ಲಿಯೇ ಭಯೋತ್ಪಾದಕ ದಾಳಿಯನ್ನು ನಡೆಸುವ ಸಲುವಾಗಿ ರೋಬೊಟಿಕ್ಸ್ (Robotics) ಕೋರ್ಸ್‌ಗಳನ್ನು  ಕಲಿಯಲು ಮುಂದಾಗಿದ್ದಾರೆ ಎಂದು ಎನ್‌ಐಎ ತಾನು ಸಲ್ಲಿಸಿರುವ ಪೂರಕ ಚಾರ್ಜ್‌ಶೀಟ್‌ನಲ್ಲಿ  ಹೇಳಿದೆ. ಎನ್‌ಐಎ ಪ್ರಕಾರ, ಆರೋಪಿಗಳು ಐಸಿಸ್ ಜೊತೆಗೂಡಿ ಶಿವಮೊಗ್ಗದಲ್ಲಿ (Shivamogga) ಐಇಡಿ ಟ್ರಯಲ್ ಬ್ಲಾಸ್ಟ್ (Trial Blast) ಮಾಡಿದ್ದರು. ಅಲ್ಲದೇ ಜನರಲ್ಲಿ ಭಯ ಮೂಡಿಸುವ ಸಲುವಾಗಿ ವಾಹನಗಳಿಗೆ ಬೆಂಕಿ ಹಚ್ಚಿದ್ದರು. ಇದನ್ನೂ ಓದಿ: ಚಲಿಸುತ್ತಿದ್ದ ಬಸ್ಸಿನಲ್ಲೇ ಮಹಿಳೆ ಜೊತೆ ಕಂಡಕ್ಟರ್ ಸೆಕ್ಸ್- ವೀಡಿಯೋ ವೈರಲ್

    ಆರೋಪಿಗಳನ್ನು ಮೊಹಮ್ಮದ್ ಶಾರಿಖ್ (25), ಮಾಜ್ ಮುನೀರ್ ಅಹಮದ್ (23), ಸೈಯದ್ ಯಾಸಿನ್ (22), ರೀಶಾನ್ ತಾಜುದ್ದೀನ್ ಶೇಖ್ (22), ಹುಜೈರ್ ಫರ್ಹಾನ್ ಬೇಗ್ (22), ಮಜಿನ್ ಅಬ್ದುಲ್ ರಹಮಾನ್ (22), ನದೀಮ್ ಅಹಮದ್ ಕೆಎ (22), ಜಬೀವುಲ್ಲಾ (32) ಮತ್ತು ನದೀಮ್ ಫೈಝಲ್ ಎನ್ (27) ಎಂದು ಗುರುತಿಸಲಾಗಿದ್ದು, ಎಲ್ಲರೂ ಕರ್ನಾಟಕಕ್ಕೆ ಸೇರಿದವರಾಗಿದ್ದಾರೆ. ಇದನ್ನೂ ಓದಿ: ಆನ್‍ಲೈನ್ ಶಾಪಿಂಗ್‍ನಲ್ಲಿ ಬೆಂಗಳೂರಿಗರೇ ಮುಂದು – ಸರಾಸರಿ ಖರೀದಿಯಲ್ಲಿ ಮುಂಬೈ ಫಸ್ಟ್

    ಆರೋಪಿಗಳ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ಕಾಯ್ದೆ, ಭಾರತೀಯ ದಂಡ ಸಂಹಿತೆ ಮತ್ತು ವಿನಾಶ ಮತ್ತು ಆಸ್ತಿ ನಷ್ಟ ತಡೆ 1981ರ‌ ಕಾಯ್ದೆಯ ಅಡಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ ಎಂದು ಎನ್‌ಐಎ ತಿಳಿಸಿದೆ. ಆರೋಪಿಗಳ ಪೈಕಿ ಮಾಜ್ ಮುನೀರ್ ಅಹಮದ್ ಮತ್ತು ಸೈಯದ್ ಯಾಸಿನ್ ವಿರುದ್ಧ ಈ ವರ್ಷ ಮಾರ್ಚ್‌ನಲ್ಲಿ ಆರೋಪ ಪಟ್ಟಿ ಸಲ್ಲಿಸಿದ್ದು, ಈಗ ಇತರ ಆರೋಪಿಗಳ ಕುರಿತು ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಇದನ್ನೂ ಓದಿ: ಒಡಿಶಾ ರೈಲು ದುರಂತ – ಸಿಗ್ನಲಿಂಗ್, ಟ್ರಾಫಿಕ್ ಕಂಟ್ರೋಲ್ ವಿಭಾಗಗಳೇ ಹೊಣೆ

    9 ಆರೋಪಿಗಳ ಪೈಕಿ ಮಾಜ್ ಮುನೀರ್ ಅಹಮದ್, ಸೈಯದ್ ಯಾಸಿನ್, ರೀಶಾನ್ ತಾಜುದ್ದೀನ್ ಶೇಖ್, ಮಜಿನ್ ಅಬ್ದುಲ್ ರಹಮಾನ್ ಮತ್ತು ನದೀಮ್ ಅಹಮದ್ ಕೆಎ ಮೆಕ್ಯಾನಿಕಲ್ (Mechanical) ಮತ್ತು ಎಲೆಕ್ಟ್ರಿಕಲ್ (Electrical) ಎಂಜಿನಿಯರಿಂಗ್ ಅಧ್ಯಯನ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಭೀಕರ ಬಸ್‌ ದುರಂತ – 25 ಮಂದಿ ಸಜೀವ ದಹನ

    ಆರೋಪಿಗಳು ರೋಬೊಟಿಕ್ಸ್ ಕಲಿತು ಭವಿಷ್ಯದಲ್ಲಿ ಭಾರತದಲ್ಲಿ ಐಸಿಸ್ ಅಜೆಂಡಾವನ್ನು ಮುಂದುವರಿಸುವ ಸಲುವಾಗಿ ಭಯೋತ್ಪಾದಕ ದಾಳಿಗಳನ್ನು ಮತ್ತು ಅದರ ಕೌಶಲ್ಯವನ್ನು ಕಲಿಯುವಂತೆ ವಿದೇಶಿ ಮೂಲದ ಐಸಿಸ್ ಹ್ಯಾಂಡ್ಲರ್‌ನಿಂದ ಟಾಸ್ಕ್ ನೀಡಲಾಗಿತ್ತು. ಅಲ್ಲದೇ ಮೊಹಮ್ಮದ್ ಶಾರಿಖ್, ಮಾಜ್ ಮುನೀರ್ ಅಹಮದ್ ಮತ್ತು ಸೈಯದ್ ಯಾಸಿನ್ ಭಯೋತ್ಪಾದಕ ಸಂಘಟನೆಯಾದ ಐಎಸ್ ನಿರ್ದೇಶನದ ಮೇರೆಗೆ ಭಯೋತ್ಪಾದನೆ ಮತ್ತು ಹಿಂಸಾಚಾರವನ್ನು ಉತ್ತೇಜಿಸಲು ವಿದೇಶದಲ್ಲಿರುವ ಐಎಸ್ ಕಾರ್ಯಕರ್ತರೊಂದಿಗೆ ಶಾಮೀಲಾಗಿ ಕ್ರಿಮಿನಲ್ ಸಂಚುಗಳನ್ನು ರೂಪಿಸಿದ್ದರು ಎಂದು ಎನ್‌ಐಎ ತನಿಖೆಯಿಂದ ತಿಳಿದು ಬಂದಿದೆ. ಇದನ್ನೂ ಓದಿ: ಮಣಿಪುರ ಸಿಎಂ ಬಿರೇನ್ ಸಿಂಗ್ ರಾಜೀನಾಮೆ ಪತ್ರವನ್ನು ಹರಿದು ಹಾಕಿದ ಮಹಿಳೆ

    ರಾಷ್ಟ್ರೀಯ ಭದ್ರತೆ, ಏಕತೆ ಮತ್ತು ದೇಶದ ಸಾರ್ವಭೌಮತೆಗೆ ಧಕ್ಕೆ ತರುವ ಉದ್ದೇಶದಿಂದ ಮೂವರು ಆರೋಪಿಗಳು ಇತರೆ ಆರೋಪಿಗಳನ್ನು ನೇಮಕ ಮಾಡಿಕೊಂಡಿದ್ದರು. ಅವರ ಆನ್‌ಲೈನ್ ಹ್ಯಾಂಡ್ಲರ್ ಆರೋಪಿಗಳಿಗೆ ಕ್ರಿಪ್ಟೋ ಕರೆನ್ಸಿಗಳ (Crypto Currency) ಮೂಲಕ ಹಣವನ್ನು ನೀಡಲಾಗುತ್ತಿತ್ತು. ಈ ಟ್ರಯಲ್ ಬ್ಲಾಸ್ಟ್ ಕುರಿತು ಸೆಪ್ಟೆಂಬರ್ 19 2023ರಲ್ಲಿ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ನವೆಂಬರ್ 15ರಂದು ಈ ಪ್ರಕರಣವನ್ನು ಎನ್‌ಐಎ ತೆಗೆದುಕೊಂಡು ಕೇಸ್ ಅನ್ನು ಮರುದಾಖಲಿಸಿತ್ತು. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎನ್‌ಐಎ ಮಾಹಿತಿ ನೀಡಿದೆ. ಇದನ್ನೂ ಓದಿ: ಗ್ಯಾಂಗ್‌ಸ್ಟರ್ ಅತೀಕ್ ಜಮೀನಿನಲ್ಲಿ ಮನೆಗಳನ್ನು ನಿರ್ಮಿಸಿ ಬಡವರಿಗೆ ಹಂಚಿದ ಯೋಗಿ ಆದಿತ್ಯನಾಥ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರವೀಣ್ ನೆಟ್ಟಾರ್ ಹತ್ಯೆ ಆರೋಪಿಗಳು ಶರಣಾಗದಿದ್ದರೆ ಮನೆ ಜಪ್ತಿ

    ಪ್ರವೀಣ್ ನೆಟ್ಟಾರ್ ಹತ್ಯೆ ಆರೋಪಿಗಳು ಶರಣಾಗದಿದ್ದರೆ ಮನೆ ಜಪ್ತಿ

    ಮಂಗಳೂರು: ಪ್ರವೀಣ್ ನೆಟ್ಟಾರ್ (Praveen Nettar) ಹತ್ಯೆ ಆರೋಪಿಗಳಿಗೆ ಶರಣಾಗಲು ಎನ್‌ಐಎ (NIA) ಕೊನೆಯ ವಾರ್ನಿಂಗ್ ನೀಡಿದ್ದು, ಆರೋಪಿಗಳು ಜೂನ್ 30ರ ಒಳಗೆ ಎನ್‌ಐಎ ನ್ಯಾಯಾಲಯಕ್ಕೆ ಶರಣಾಗಬೇಕು. ಇಲ್ಲವಾದಲ್ಲಿ ಆರೋಪಿಗಳ ಮನೆಯನ್ನು ಜಪ್ತಿ ಮಾಡಲಾಗುವುದು ಎಂದು ಖಡಕ್ ಆದೇಶ ಹೊರಡಿಸಿದೆ.

    ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ (Bellare) ವಾಸವಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಪೆರುವಾಜೆ ಕ್ರಾಸ್ ಬಳಿ ಕೋಳಿ ಮಾಂಸದ ಅಂಗಡಿ ನಡೆಸುತ್ತಿದ್ದರು. 2022ರ ಜುಲೈ 26ರಂದು ಅಂಗಡಿ ಮುಗಿಸಿ ಮನಗೆ ಹೊರಟ ವೇಳೆ ಬೈಕಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ತಲ್ವಾರ್‌ನಿಂದ ಏಕಾಏಕಿ ಅವರ ಮೇಲೆ ದಾಳಿ ನಡೆಸಿದ್ದರು. ಇದನ್ನೂ ಓದಿ: ಅಕ್ಕಿ ಬದಲು ಹಣ ನೀಡುವ ಸರ್ಕಾರದ ನಿರ್ಧಾರಕ್ಕೆ ಕಟೀಲ್ ಖಂಡನೆ

    ಇದರಿಂದ ತೀವ್ರ ಗಾಯಗೊಂಡಿದ್ದ ಪ್ರವೀಣ್ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತಾದರೂ ಕುತ್ತಿಗೆಯ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಈ ಪ್ರಕರಣದ ತನಿಖೆಯನ್ನು ಅಂದಿನ ಬಿಜೆಪಿ ಸರ್ಕಾರ ಎನ್‌ಐಎಗೆ ಒಪ್ಪಿಸಿತ್ತು. ಈ ಹಿನ್ನೆಲೆ ತನಿಖೆ ಕೈಗೊಂಡಿರುವ ಎನ್‌ಐಎ ಹಲವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದೆ. ಇದನ್ನೂ ಓದಿ: ಜುಲೈ 1 ರಿಂದ ಎಕ್ಸ್‌ಪ್ರೆಸ್‌ ವೇ 2ನೇ ಟೋಲ್ ಆರಂಭ, ಯಾವ ವಾಹನಗಳಿಗೆ ಎಷ್ಟು ಶುಲ್ಕ ?

    ತನಿಖೆಯನ್ನು ಚುರುಕುಗೊಳಿಸಿರುವ ಎನ್‌ಐಎ ಸುಳ್ಯದಲ್ಲಿ ಮೈಕ್ ಘೋಷಣೆಯ ಮೂಲಕ ಆರೋಪಿಗಳಿಗೆ ಜೂನ್ 30ರ ಒಳಗೆ ಶರಣಾಗಲು ಡೆಡ್‌ಲೈನ್ ನೀಡಿದೆ. ಆರೋಪಿಗಳು ಶರಣಾಗದಿದ್ದರೆ ಅವರ ಮನೆಯನ್ನು ಜಪ್ತಿ (Seize) ಪಡಿಸುವುದಾಗಿ ಆದೇಶ ಹೊರಡಿಸಿದೆ. ಅಲ್ಲದೇ ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನ ಕೊಡುವುದಾಗಿ ಘೋಷಿಸಿದೆ. ಇದನ್ನೂ ಓದಿ: 5 ಕೆ.ಜಿ ಅಕ್ಕಿ, ಉಳಿದ 5 ಕೆ.ಜಿ ಅಕ್ಕಿಯ ಹಣ ಕೊಡಲು ಸರ್ಕಾರ ನಿರ್ಧಾರ

    ಇನ್ನು ಸುಳ್ಯದ ಕಲ್ಲುಮುಟ್ಟುವಿನಲ್ಲಿ ವಾಸವಿದ್ದ ಆರೋಪಿಗಳಾದ ಉಮ್ಮರ್ ಫಾರೂಕ್ ಮತ್ತು ಮುಸ್ತಫಾ ಮನೆಗೆ ಭೇಟಿ ನೀಡಿದ ಎನ್‌ಐಎ ಅಧಿಕಾರಿಗಳು ಅವರ ಮನೆಗೆ ಎನ್‌ಐಎ ನ್ಯಾಯಾಲಯದ ಆದೇಶ ಪ್ರತಿಯನ್ನು ಅಂಟಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ಆರೋಪಿಗಳು ಶರಣಾಗುವಂತೆ ಎನ್‌ಐಎ ಸೂಚಿಸಿದ್ದು, ಇಲ್ಲವಾದಲ್ಲಿ ಅವರಿಗೆ ಸೇರಿದ ಸಕಲ ಆಸ್ತಿಗಳನ್ನು ಜಪ್ತಿ ಮಾಡುವುದಾಗಿ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಬಿಜೆಪಿ ಅವಧಿಯ ಅಕ್ರಮಗಳನ್ನು ವಿವಿಧ ತನಿಖಾ ಸಂಸ್ಥೆಗಳ ಮೂಲಕ ತನಿಖೆ: ಪ್ರಿಯಾಂಕ್ ಖರ್ಗೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರವೀಣ್ ನೆಟ್ಟಾರ್ ಹತ್ಯೆಯ ಆರೋಪಿಗಳ ಬೆನ್ನಬಿದ್ದ ಎನ್‍ಐಎ..!

    ಪ್ರವೀಣ್ ನೆಟ್ಟಾರ್ ಹತ್ಯೆಯ ಆರೋಪಿಗಳ ಬೆನ್ನಬಿದ್ದ ಎನ್‍ಐಎ..!

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಪ್ರವೀಣ್‌ ನೆಟ್ಟಾರು ಕೇಸ್‌ – ದಕ್ಷಿಣ ಕನ್ನಡ, ಕೊಡಗಿನಲ್ಲಿ PFI ಕಾರ್ಯಕರ್ತರ ಮನೆ ಮೇಲೆ NIA ದಾಳಿ

    ಪ್ರವೀಣ್‌ ನೆಟ್ಟಾರು ಕೇಸ್‌ – ದಕ್ಷಿಣ ಕನ್ನಡ, ಕೊಡಗಿನಲ್ಲಿ PFI ಕಾರ್ಯಕರ್ತರ ಮನೆ ಮೇಲೆ NIA ದಾಳಿ

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

    ಮಂಗಳೂರು/ ಮಡಿಕೇರಿ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿರುವ ನಿಷೇಧಿತ ಪಿಎಫ್​ಐ (PFI) ಸಂಘಟನೆ ಕಾರ್ಯಕರ್ತರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ (NIA) ಇಂದು ದಾಳಿ ನಡೆಸಿದೆ.

    ಇಂದು ಬೆಳಗ್ಗೆ ಏಕಕಾಲಕ್ಕೆ 6 ಕಡೆಗಳಲ್ಲಿ ದಾಳಿ ನಡೆಸಿರುವ ಎನ್​ಐಎ ಅಧಿಕಾರಿಗಳು, ಎಲೆಕ್ಟ್ರಾನಿಕ್ ಡಿವೈಸ್​​ಗಳು ಸೇರಿದಂತೆ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.

    ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕನ್ವೆಂಟ್ ಬಾಣೆ ಹಾಗೂ ಕಲ್ಕಂದೂರು ಗ್ರಾಮಕ್ಕೆ ಆಗಮಿಸಿ ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಬಾಣೆಯ ಅಬ್ದುಲ್ ನಾಸೀರ್ ಕಲ್ಕಂದೂರು ನಿವಾಸಿ ಅಬ್ದುಲ್ ರೆಹಮಾನ್ ಮನೆಗೆ ಅಧಿಕಾರಿಗಳು ಆಗಮಿಸಿದ್ದಾರೆ. ಈ ವೇಳೆ ಅಬ್ದುಲ್ ನಜೀರ್, ಅಬ್ದುಲ್ ರೆಹಮಾನ್ ಇಬ್ಬರು ದುಬೈನಲ್ಲಿರುವ ಬಗ್ಗೆ ಎನ್‌ಐಎ ಅಧಿಕಾರಿಗಳಿಗೆ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ‌Expressway- ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ರೆ ಡಿಎಲ್ ರದ್ದು: ಅಲೋಕ್ ಕುಮಾರ್

     

    ಮುಸ್ತಫಾ ಪೈಚಾರ್, ಅಬುಬಕ್ಕರ್ ಸಿದ್ದಿಕ್, ಉಮ್ಮರ್ ಫಾರುಕ್, ತುಫೇಲ್, ಮಸೂದ್ ಅಗ್ನಾಡಿ ಸೇರಿದಂತೆ ಇನ್ನಿತರ ಪ್ರಮುಖ ಆರೋಪಿಗಳಿಗಾಗಿ ಎನ್‌ಐಎ ತಲಾಶ್ ಮಾಡುತ್ತಿದೆ.

    ಏನಿದು ಪ್ರಕರಣ?
    ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ಅವರು ಜುಲೈ 26 ರಂದು ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು.

     

    ತಕ್ಷಣ ಪುತ್ತೂರು ಆಸ್ಪತ್ರೆಗೆ ಪ್ರವೀಣ್‌ ಅವರನ್ನು ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದ ಕಾರಣ ಚಿಕಿತ್ಸೆ ಫಲಕರಿಯಾಗದೇ ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಈವರೆಗೆ ಹಲವಾರು ಮಂದಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಅಂದಿನ ಬಿಜೆಪಿ ಸರ್ಕಾರ ಎನ್ಐಎಗೆ ವಹಿಸಿತ್ತು.

  • ಯುವಕರ ಮೈಂಡ್‍ವಾಶ್ ಮಾಡಿ ಭಯೋತ್ಪಾದನೆಗೆ ನೂಕುತಿದ್ದ ಪಿಎಫ್‍ಐ ಮುಖಂಡ ಬಳ್ಳಾರಿಯಲ್ಲಿ ಅರೆಸ್ಟ್

    ಯುವಕರ ಮೈಂಡ್‍ವಾಶ್ ಮಾಡಿ ಭಯೋತ್ಪಾದನೆಗೆ ನೂಕುತಿದ್ದ ಪಿಎಫ್‍ಐ ಮುಖಂಡ ಬಳ್ಳಾರಿಯಲ್ಲಿ ಅರೆಸ್ಟ್

    ಬಳ್ಳಾರಿ: ಯುವಕರನ್ನು ಮೈಂಡ್‍ವಾಶ್ ಮಾಡಿ ಭಯೋತ್ಪಾದನೆಗೆ ನೂಕುತ್ತಿದ್ದ ಪಿಎಫ್‍ಐ (PFI) ಮುಖಂಡನನ್ನು ಎನ್‍ಐಎ (NIA) ಬಳ್ಳಾರಿಯ (Ballari) ಕೌಲ್ ಬಜಾರ್‌ನಲ್ಲಿ ಬುಧವಾರ ಬಂಧಿಸಿದೆ.

    ಬಂಧಿತ ಆರೋಪಿಯನ್ನು ಆಂಧ್ರ ಮೂಲದ ನಾಸ್ಸಮ್ ಮೊಹಮ್ಮದ್ ಯೂನಸ್ (33) ಎಂದು ತಿಳಿದು ಬಂದಿದೆ. ಈತ 4 ತಿಂಗಳಿಂದ ಪ್ಲಂಬರ್ ಆಗಿ ಕೆಲಸ ಮಾಡಿಕೊಂಡು ಬಳ್ಳಾರಿಯಲ್ಲಿ ತಲೆ ಮರೆಸಿಕೊಂಡಿದ್ದ. ನಿಜಾಮಾಬಾದ್ ಭಯೋತ್ಪಾದಕ ದಾಳಿ ಸಂಚು ಪ್ರಕರಣದಲ್ಲಿ ಆರೋಪಿ ಶಾಮೀಲಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಏಕರೂಪ ನಾಗರಿಕ ಸಂಹಿತೆ ಬಗ್ಗೆ ಅಭಿಪ್ರಾಯ ತಿಳಿಸಿ: ಸಾರ್ವಜನಿಕರಿಗೆ ಕೇಂದ್ರ ಕಾನೂನು ಆಯೋಗ ಮನವಿ

    ಈತ ನಿಷೇಧಿತ ಸಂಘಟನೆ ಪಿಎಫ್‍ಐಯ ಪ್ರಮುಖ ಶಸ್ತ್ರಾಸ್ತ್ರ ತರಬೇತುದಾರನಾಗಿದ್ದ. ಆಂಧ್ರಪ್ರದೇಶದ ನಂದ್ಯಾಲ್‍ನವನಾದ ಯೂನುಸ್ ಸಹೋದರನ ಜೊತೆ ಇನ್‍ವರ್ಟರ್ ವ್ಯಾಪಾರದಲ್ಲಿ ತೊಡಗಿಕೊಂಡಿದ್ದನು. ಆದರೆ 2022ರ ಸೆಪ್ಟೆಂಬರ್‍ನಲ್ಲಿ ತನಿಖಾ ಸಂಸ್ಥೆ ಈತನ ಮನೆಯನ್ನು ಶೋಧಿಸಿದ ಬಳಿಕ ತಲೆಮರೆಸಿಕೊಂಡಿದ್ದ. ಬಳಿಕ ಈತ ಗುರುತನ್ನು ಮರೆಸಿಕೊಂಡು ಬಶೀರ್ ಎಂಬ ಹೆಸರಿನಲ್ಲಿ ಬಳ್ಳಾರಿಯ ಕೌಲ್ ಬಜಾರ್‌ನಲ್ಲಿ ಪತ್ನಿ ಮತ್ತು ಇಬ್ಬರು ಮಕ್ಕಳ ಜೊತೆ ವಾಸಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ತೆಲಂಗಾಣದಲ್ಲಿ ಪಿಎಫ್‍ಐ ಮುಖಂಡರು ಮತ್ತು ಕಾರ್ಯಕರ್ತ ಯುವಕರನ್ನು ಸಂಘಟನೆಗೆ ಸೇರಿಸಿಕೊಂಡು ಭಯೋತ್ಪಾದನಾ ಕೃತ್ಯಗಳನ್ನೆಸಗಲು ತರಬೇತಿ ನೀಡುತ್ತಿದ್ದ. ಅಲ್ಲದೇ ಆಂಧ್ರಪ್ರದೇಶ ಮತ್ತು ತೆಲಂಗಾಣ ಪ್ರದೇಶದಲ್ಲಿ ಶಸ್ತ್ರಾಸ್ತ್ರ ತರಬೇತಿ ಯೋಜನೆ ರೂಪಿಸಿದ್ದ. ಈತ ಎರಡು ರಾಜ್ಯಗಳಿಗೆ ಪಿಎಫ್‍ಐಯ ದೈಹಿಕ ತರಬೇತಿಯ ರಾಜ್ಯ ಸಂಯೋಜಕನಾಗಿದ್ದ ಎಂದು ಎನ್‍ಐಎ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಹೆಚ್.ಡಿ.ದೇವೇಗೌಡರ ಭೇಟಿಯಾದ ತೇಜಸ್ವಿ ಸೂರ್ಯ

  • ಮುಂಬೈ ದಾಳಿ ರೂವಾರಿ ರಾಣಾ ಹಸ್ತಾಂತರಕ್ಕೆ ರಿಟ್ ಸವಾಲು

    ಮುಂಬೈ ದಾಳಿ ರೂವಾರಿ ರಾಣಾ ಹಸ್ತಾಂತರಕ್ಕೆ ರಿಟ್ ಸವಾಲು

    ವಾಷಿಂಗ್ಟನ್: 2008ರ ಮುಂಬೈ ದಾಳಿ (Mumbai Attack) ಪ್ರಕರಣದ ಪ್ರಮುಖ ಆರೋಪಿ ತಹವ್ವುರ್ ರಾಣಾನನ್ನು ಭಾರತಕ್ಕೆ (India) ಹಸ್ತಾಂತರಿಸುವ ಆದೇಶದ ವಿರುದ್ಧ ಹೇಬಿಯಸ್ ಕಾರ್ಪಸ್ ರಿಟ್ ಅರ್ಜಿ ಸಲ್ಲಿಕೆಯಾಗಿದೆ.

    ಇತ್ತೀಚೆಗೆ ಅಮೆರಿಕ (America) ನ್ಯಾಯಾಲಯ ಭಾರತಕ್ಕೆ ಹಸ್ತಾಂತರಿಸಲು ಅನುಮೋದನೆ ನೀಡಿತ್ತು. ಅದರೆ ಈಗ ನ್ಯಾಯಾಲಯದ ನಿರ್ಧಾರದ ವಿರುದ್ಧ ರಾಣ ರಿಟ್ ಮೊರೆ ಹೋಗಿರುವುದು ಭಾರತಕ್ಕೆ ಹಸ್ತಾಂತರ ನಿರ್ಧಾರಕ್ಕೆ ಸವಾಲಾಗಿ ಪರಿಣಮಿಸಿದೆ. ರಾಣಾ ಪರ ವಕೀಲ, ಹಸ್ತಾಂತರವು ಅಮೆರಿಕ-ಭಾರತದ ಹಸ್ತಾಂತರ ಒಪ್ಪಂದವನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದ್ದಾರೆ. ಅಲ್ಲದೆ ಭಾರತ ಆರೋಪಿಸಿರುವ ಆರೋಪಗಳನ್ನು ಸಾಭೀತು ಪಡಿಸಲು ಸಾಧ್ಯವಾಗಿಲ್ಲ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: 10 ಜನ ದಲಿತರ ಹತ್ಯೆಗೈದಿದ್ದ ಅಪರಾಧಿಗೆ 42 ವರ್ಷಗಳ ಬಳಿಕ ಶಿಕ್ಷೆ ಕೊಟ್ಟ ಕೋರ್ಟ್

    ಒಪ್ಪಂದದ ಆರ್ಟಿಕಲ್ 6(1) ರ ಅಡಿಯಲ್ಲಿ ಹಸ್ತಾಂತರವನ್ನು ನಿರ್ಬಂಧಿಸಲಾಗಿದೆ. (ಇ) ಅಪರಾಧದಿಂದ ಖುಲಾಸೆಗೊಳಿಸಿದಾಗ ಹಸ್ತಾಂತರಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದು ಘೋಷಿಸುತ್ತದೆ ಎಂದು ರಾಣಾ ಪರ ವಕೀಲ ವಾದಿಸಿದ್ದಾರೆ.

    ಕಳೆದ ತಿಂಗಳು ಕ್ಯಾಲಿಫೋರ್ನಿಯಾದ ಜಿಲ್ಲಾ ಕೇಂದ್ರ ಕೋರ್ಟ್ 26/11 ದಾಳಿಯ ಆರೋಪಿ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅನುಮೋದನೆ ನೀಡಿತ್ತು. ಈಗ ಸಲ್ಲಿಕೆಯಾದ ಹೇಬಿಯಸ್ ಕಾರ್ಪಸ್ ರಿಟ್ ಪ್ರಾಥಮಿಕವಾಗಿ ವಿಚಾರಣೆಯ ಅರ್ಜಿಯಾಗಿ ಕಾರ್ಯನಿರ್ವಹಿಸುತ್ತದೆ. ಬಂಧನಕ್ಕೆ ಕಾರಣಗಳು ಅಥವಾ ಆಧಾರಗಳನ್ನು ಕೂಲಂಕಷವಾಗಿ ಪರೀಕ್ಷಿಸಲು ಸೂಚಿಸುತ್ತದೆ.

    2020ರ ಜೂನ್ 10 ರಂದು ಹಸ್ತಾಂತರದ ದೃಷ್ಟಿಯಿಂದ ರಾಣಾನನ್ನು ತಾತ್ಕಾಲಿಕವಾಗಿ ಬಂಧಿಸುವಂತೆ ಭಾರತವು ದೂರು ಸಲ್ಲಿಸಿತ್ತು. ಬೈಡನ್ ಸರ್ಕಾರ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವುದಕ್ಕೆ ಒಪ್ಪಿಕೊಂಡಿತ್ತು. ಈ ಬಗ್ಗೆ ಸಭೆ ನಡೆಸಿ ದಾಳಿಯ ಯೋಜನೆಗಳ ಬಗ್ಗೆ ರಾಣಾಗೆ ತಿಳಿದಿತ್ತು. ರಾಣಾ ಅವರು ಪಿತೂರಿಯ ಭಾಗವಾಗಿದ್ದ ಎಂದು ಅಮೆರಿಕಾ ಸರ್ಕಾರ ಪ್ರತಿಪಾದಿಸಿತ್ತು.

    ರಾಣಾನನ್ನು ಪ್ರಸ್ತುತ ಲಾಸ್ ಏಂಜಲೀಸ್‍ನ ಮೆಟ್ರೋಪಾಲಿಟನ್ ಡಿಟೆನ್ಶನ್ ಸೆಂಟರ್‌ನಲ್ಲಿ ಬಂಧಿಸಲಾಗಿದೆ. ಅಲ್ಲದೆ ಆತನನ್ನು ಭಾರತಕ್ಕೆ ಕರೆತರುವ ಪ್ರಯತ್ನಗಳು ನಡೆಸಲಾಗುತ್ತಿದೆ ಎಂದು ಎನ್‍ಐಎ ಮೂಲಗಳು ತಿಳಿಸಿವೆ.

    2008ರ ಮುಂಬೈ ತಾಜ್ ಹೋಟೆಲ್ (Taj Mahal Palace hotel) ಮೇಲೆ 10 ಪಾಕಿಸ್ತಾನಿ (Pakistan) ಭಯೋತ್ಪಾದಕರು 60 ಗಂಟೆಗಳ ದಾಳಿ ನಡೆಸಿದ್ದರು. ದಾಳಿಯಲ್ಲಿ 6 ಅಮೆರಿಕನ್ನರು ಸೇರಿದಂತೆ ಒಟ್ಟು 166 ಜನರು ಸಾವನ್ನಪ್ಪಿದರು. ಇದನ್ನೂ ಓದಿ: 4 ವರ್ಷದ ಮಗು ಜೊತೆ ಪೊಲೀಸರ ವಿರುದ್ಧ ಏಕಾಂಗಿಯಾಗಿ ಹೋರಾಡಿ ಎಫ್‍ಐಆರ್ ಮಾಡಿಸಿದ ಮಹಿಳೆ!

  • ಪಿಎಫ್‌ಐ ನಿಷೇಧಕ್ಕೆ ಪ್ರತೀಕಾರ – ವಿಧ್ವಂಸಕ ಕೃತ್ಯಕ್ಕೆ ದಕ್ಷಿಣ ಕನ್ನಡ, ಶಿವಮೊಗ್ಗದಲ್ಲಿ ಪ್ಲ್ಯಾನ್‌

    ಪಿಎಫ್‌ಐ ನಿಷೇಧಕ್ಕೆ ಪ್ರತೀಕಾರ – ವಿಧ್ವಂಸಕ ಕೃತ್ಯಕ್ಕೆ ದಕ್ಷಿಣ ಕನ್ನಡ, ಶಿವಮೊಗ್ಗದಲ್ಲಿ ಪ್ಲ್ಯಾನ್‌

    ಬೆಂಗಳೂರು: ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಸಂಘಟನೆಯ ನಿಷೇಧಕ್ಕೆ ಸೇಡು ತೀರಿಸಿಕೊಳ್ಳಲು ಮತ್ತಷ್ಟು ಟೀಂಗಳು ತಯಾರಾಗುತ್ತಿರುವ ವಿಚಾರ ರಾಷ್ಟ್ರೀಯ ತನಿಖಾ ದಳದ (NIA) ತನಿಖೆಯಿಂದ ಬೆಳಕಿಗೆ ಬಂದಿದೆ.

    ಸಾಮಾಜಿಕ ಜಾಲತಾಣದಲ್ಲಿ (Social Media) ಬೇರೆ ಬೇರೆ ಗುಂಪುಗಳನ್ನು ತೆರೆದು ಪಿಎಫ್‌ಐ ಕಾರ್ಯಕರ್ತರು ಸಕ್ರೀಯವಾಗಿರುವ ವಿಚಾರ ಈಗ ಗೊತ್ತಾಗಿದೆ. ಇದನ್ನೂ ಓದಿ: ಗುರುತಿನ ಪುರಾವೆಗಳಿಲ್ಲದೇ 2,000 ರೂ. ನೋಟುಗಳ ವಿನಿಮಯ – ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂ

    ಪಿಎಫ್‌ಐ ನಿಷೇಧಕ್ಕೆ ಪ್ರತೀಕಾರವನ್ನು ತೀರಿಸಿಕೊಳ್ಳಲು ಪ್ಲ್ಯಾನಿಂಗ್ ಮಾಡಲಾಗಿತ್ತು. ಭಾರತದ ಹಲವು ಭಾಗಗಳಲ್ಲಿ ವಿಧ್ವಂಸಕ ಕೃತ್ಯ ನಡೆಸಲು ತಯಾರಿ ನಡೆಸುತ್ತಿದ್ದ ವಿಚಾರ ತನಿಖೆಯ ವೇಳೆ ಪತ್ತೆಯಾಗಿದೆ.

    ವಿಧ್ವಂಸಕ ಕೃತ್ಯಕ್ಕೆ ಶಿವಮೊಗ್ಗ ಮತ್ತು ದಕ್ಷಿಣ ಕನ್ನಡದಲ್ಲೇ ಪ್ರಮುಖವಾಗಿ ತಯಾರಿ ನಡೆದಿತ್ತು. ಎನ್‌ಐಎ ದಾಳಿ ವೇಳೆ ವ್ಯಕ್ತಿಗಳ ಖಾತೆಗಳಿಗೆ ವಿದೇಶದಿಂದ ಹಣ ಜಮೆ ಆಗಿದ್ದಕ್ಕೆ ಮಹತ್ವದ ಸಾಕ್ಷ್ಯಗಳು ಲಭ್ಯವಾಗಿದೆ.

  • ಕರ್ನಾಟಕ ಸೇರಿದಂತೆ 3 ರಾಜ್ಯಗಳ 25 ಕಡೆ ಎನ್‌ಐ ದಾಳಿ – 17.50 ಲಕ್ಷ ಜಪ್ತಿ

    ಕರ್ನಾಟಕ ಸೇರಿದಂತೆ 3 ರಾಜ್ಯಗಳ 25 ಕಡೆ ಎನ್‌ಐ ದಾಳಿ – 17.50 ಲಕ್ಷ ಜಪ್ತಿ

    ನವದೆಹಲಿ: ಭಯೋತ್ಪಾದನೆ ಮತ್ತು ಹಿಂಸಾಚಾರದ ಕೃತ್ಯಕ್ಕೆ ಸಂಚು ರೂಪಿಸಿದ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ (NIA) ಬುಧವಾರ ಮೂರು ರಾಜ್ಯಗಳ 25 ಸ್ಥಳಗಳಲ್ಲಿ ದಾಳಿ ನಡೆಸಿದೆ.

    ನಿಷೇಧಿತ ಮೂಲಭೂತವಾದಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ತನ್ನ ಕಾರ್ಯಕರ್ತರು ಮತ್ತು ಸದಸ್ಯರಿಗೆ ಮೂಲಭೂತವಾದ ಮತ್ತು ತರಬೇತಿ ನೀಡಿ ಪಿತೂರಿಗೆ ಯತ್ನಿಸಿದ ಆರೋಪದ  ಮೇರೆಗೆ ಈ ದಾಳಿ ನಡೆಸಲಾಗಿದೆ ಎನ್‌ಐಎ ತಿಳಿಸಿದೆ. ಇದನ್ನೂ ಓದಿ: ಜ್ಞಾನವಾಪಿ ಕೇಸ್‌ – ಮುಸ್ಲಿಂ ಸಮಿತಿ ಸಲ್ಲಿಸಿದ್ದ ಅರ್ಜಿ ವಜಾ, ಐವರು ಹಿಂದೂ ಮಹಿಳೆಯರಿಗೆ ಗೆಲುವು

     

    ಬಿಹಾರದ (Bihar) ಕತಿಹಾರ್ ಜಿಲ್ಲೆ, ಕರ್ನಾಟಕದ (Karnataka) ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆ, ಕೇರಳದ (Kerala) ಕಾಸರಗೋಡು, ಮಲಪ್ಪುರಂ, ಕೋಯಿಕ್ಕೋಡ್ ಮತ್ತು ತಿರುವನಂತಪುರ ಜಿಲ್ಲೆಗಳಲ್ಲಿ ಈ ದಾಳಿ ನಡೆದಿದೆ.

    ಮೊಬೈಲ್ ಫೋನ್‌ಗಳು, ಹಾರ್ಡ್ ಡಿಸ್ಕ್, ಸಿಮ್ ಕಾರ್ಡ್‌ಗಳು, ಪೆನ್-ಡ್ರೈವ್‌ಗಳು, ಡೇಟಾ ಕಾರ್ಡ್‌ಗಳು, ಇತ್ಯಾದಿ ಸೇರಿದಂತೆ ಹಲವಾರು ಡಿಜಿಟಲ್ ಸಾಧನಗಳು, ನಿಷೇಧಿತ ಸಂಸ್ಥೆಗೆ ಸಂಬಂಧಿಸಿದ ದಾಖಲೆಗಳು ಮತ್ತು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ವೇಳೆ ಒಟ್ಟು 17.50 ಲಕ್ಷ ರೂ. ಹಣವನ್ನು ಜಪ್ತಿ ಮಾಡಲಾಗಿದೆ. ಇದನ್ನೂ ಓದಿ: India GDP – ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಹೊರಹೊಮ್ಮಿದ ಭಾರತ

    ಮಂಗಳೂರು ವರದಿ
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಎನ್‍ಐಎ ರೇಡ್ ಮಾಡಿತ್ತು. ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ವೇಣೂರು, ಉಪ್ಪಿನಂಗಡಿ, ಕುಂಬ್ರ, ತಾರಿಪಾಡ್ಪು ಸೇರಿ ಹಲವೆಡೆ ನಿಷೇಧಿತ ಪಿಎಫ್‍ಐ ಸಂಘಟನೆಯ ಸದಸ್ಯರ ಮನೆ, ಕಚೇರಿ, ಆಸ್ಪತ್ರೆಗಳಲ್ಲಿ ಶೋಧಕಾರ್ಯ ನಡೆಸಿದೆ. ಗಲ್ಫ್ ದೇಶಗಳಿಂದ ಹರಿದುಬರುವ ಹಣದಿಂದ ಪಿಎಫ್‍ಐ ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆ ನಡೆಸುತ್ತಿತ್ತು ಎಂಬ ಆರೋಪವಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದಲ್ಲಿ ಪಿಎಫ್‍ಐ ಹವಾಲಾ ನೆಟ್‍ವರ್ಕ್ ಬ್ರೇಕ್ ಮಾಡಲು ಈ ದಾಳಿಗಳು ಅನುಕೂಲವಾಗಬಹುದು ಎಂದು ಎನ್‍ಐಎ ಭಾವಿಸಿದೆ.

    ಏನಿದು ಪ್ರಕರಣ?
    ಬಿಹಾರದ ಪಾಟ್ನಾದಲ್ಲಿ 2022ರ ಜುಲೈ ತಿಂಗಳಿನಲ್ಲಿ ಅಥರ್‌ ಪರ್ವೇಜ್‌ ಮನೆ ಮೇಲೆ ದಾಳಿ ನಡೆಸಲಾಗಿತ್ತು. ಪ್ರಕರಣ ಪತ್ತೆಯಾದ ಬಳಿಕ ಎನ್‌ಐಎ ಇಲ್ಲಿಯವರೆಗೆ 85 ಸ್ಥಳಗಳ ಮೇಲೆ ದಾಳಿ ನಡೆಸಿದೆ. ಈತ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದು, ದೇಶದಲ್ಲಿ ಕೋಮು ಗಲಭೆ ಸೃಷ್ಟಿಸಲು ಯತ್ನಿಸಿದ್ದಾನೆ ಎಂದು ಆರೋಪಿಸಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದೆ. ಪಿಎಫ್‌ಐ 2047ರ ಹೊತ್ತಿಗೆ ಭಾರತವನ್ನು ಇಸ್ಲಾಮಿಕ್‌ ರಾಷ್ಟ್ರವನ್ನಾಗಿಸಲು ಪಣತೊಟ್ಟಿದ್ದ ಅಂಶ ತನಿಖೆಯ ವೇಳೆ ಬೆಳಕಿಗೆ ಬಂದಿತ್ತು.