Tag: ಎನ್‍ಐಎ

  • ಬಿಹಾರದಲ್ಲಿ ಮೋದಿ ದಾಳಿಗೆ ಸಂಚು ಪ್ರಕರಣ – ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್‌ಐಎ ದಾಳಿ

    ಬಿಹಾರದಲ್ಲಿ ಮೋದಿ ದಾಳಿಗೆ ಸಂಚು ಪ್ರಕರಣ – ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್‌ಐಎ ದಾಳಿ

    ಮಂಗಳೂರು: ಬಿಹಾರದಲ್ಲಿ (Bihar) ಪ್ರಧಾನಿ ಮೋದಿ (Narendra Modi) ದಾಳಿಗೆ ಸಂಚು ಪ್ರಕರಣದಲ್ಲಿ ಎನ್‌ಐಎ (NIA) ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ 16 ಕಡೆ ದಾಳಿ ನಡೆಸಿದ್ದಾರೆ.

    ಭಯೋತ್ಪಾದಕ ಕೃತ್ಯಕ್ಕೆ ಗಲ್ಫ್ ರಾಷ್ಟ್ರಗಳಿಂದ ಹವಾಲ ಹಣ ಬಳಕೆ ಆರೋಪದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಸಾಕಷ್ಟು ಮನೆ, ಕಚೇರಿ ಮತ್ತು ಒಂದು ಆಸ್ಪತ್ರೆಯನ್ನು ಪರಿಶೀಲಿಸಿದ್ದಾರೆ. ದಕ್ಷಿಣ ಭಾರತದ ಪಿಎಫ್‌ಐ (PFI) ಹವಾಲ ಹಣದ ಜಾಲವನ್ನು ಎನ್‌ಐಎ ಭೇದಿಸುತ್ತಿದೆ. ಅಲ್ಲದೇ ಭಾರತದಲ್ಲಿ ಭಯೋತ್ಪಾದನೆಗೆ ಫಂಡಿಂಗ್ ಮಾಡುತ್ತಿದ್ದ ನೆಟ್ವರ್ಕ್ ಪತ್ತೆಯಾಗಿದೆ. ಈ ಬಗ್ಗೆ ಪತ್ತೆಹಚ್ಚುವ ಸಲುವಾಗಿ ಸ್ಥಳೀಯ ಪೊಲೀಸ್ ಅಧಿಕಾರಿಗಳ ನೆರವು ಪಡೆದು ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ 16 ಕಡೆ ದಾಳಿ ನಡೆಸಲಾಗಿದೆ. ಇದನ್ನೂ ಓದಿ: ಮಹಿಳೆಯರಿಗೆ ಉಚಿತ ಬಸ್ ಸಂಚಾರ ಭಾಗ್ಯ ಫಿಕ್ಸ್ – ಸಾರಿಗೆ ಇಲಾಖೆ ಲೆಕ್ಕಾಚಾರ ಏನು?

    ಬಿಹಾರದ ಪಾಟ್ನಾದಲ್ಲಿ 2022ರ ಜುಲೈ ತಿಂಗಳಿನಲ್ಲಿ ಪುಲ್ವಾರಿ ಶರೀಫ್ ಪ್ರಕರಣ ಪತ್ತೆಯಾಗಿತ್ತು. ಈತ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದು, ದೇಶದಲ್ಲಿ ಕೋಮು ಗಲಭೆ ಸೃಷ್ಟಿಸಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಪ್ರಕರಣದ ತನಿಖೆಯ ಜಾಡು ಹಿಡಿದು ಎನ್‌ಐಎ ಅಧಿಕಾರಿಗಳ ತಂಡವು ದಕ್ಷಿಣ ಕನ್ನಡದ ಪುತ್ತೂರು ಮತ್ತು ಬಂಟ್ವಾಳದಲ್ಲಿ ದಾಳಿ ನಡೆಸಿತ್ತು. ಇದನ್ನೂ ಓದಿ: ಕೆಜಿಎಫ್‌ನಲ್ಲಿ ಕೈಗಾರಿಕಾ ಕಾರಿಡಾರ್: ಉನ್ನತ ಪ್ರಾಧಿಕಾರಕ್ಕೆ ಸಚಿವ ಎಂ.ಬಿ ಪಾಟೀಲ್ ಕೋರಿಕೆ

    ದಾಳಿ ನಡೆಸಿದ ಸಂದರ್ಭ ಬಂಟ್ವಾಳ ನಿವಾಸಿ ಮಹಮ್ಮದ್ ಸಿನಾನ್, ಸಜಿಪ ಮೂಡದ ಸರ್ಫ್ರಾಜ್ ನವಾಜ್, ಇಕ್ಬಾಲ್, ಪುತ್ತೂರಿನ ಅಬ್ದುಲ್ ರಫೀಕ್ ಎಂಬವರನ್ನು ಬಂಧಿಸಲಾಗಿತ್ತು. ಅಲ್ಲದೇ ಕೇರಳದ ಕಾಸರಗೋಡಿನ ಕುಂಜತ್ತೂರು ನಿವಾಸಿ ಅಬೀದ್ ಕೆ.ಎಂ. ಎಂಬಾತನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದರು. ದಾಳಿ ಸಂದರ್ಭದಲ್ಲಿ ಹಲವು ಡಿಜಿಟಲ್ ಸಾಕ್ಷ್ಯಗಳು ಮತ್ತು ಕೋಟ್ಯಂತರ ರೂಪಾಯಿ ವಹಿವಾಟು ನಡೆಸಿದ್ದ ಬಗ್ಗೆ ಎನ್‌ಐಎ ತಂಡವು ದಾಖಲೆ ಪತ್ತೆಹಚ್ಚಿತ್ತು. ಇದನ್ನೂ ಓದಿ:  ಕೂದಲು ಹಿಡಿದು ತಲಾಖ್‌ ಕೊಟ್ಟ, ಹೋಗಿ ಸಾಯಿ ಎಂದ: ಕಣ್ಣೀರಿಟ್ಟ ಮಂಗಳೂರಿನ ಮಹಿಳೆ

  • ಎನ್‍ಐಎಯಿಂದ ಮರಣದಂಡನೆಗೆ ಮನವಿ- ಯಾಸಿನ್ ಮಲಿಕ್‍ಗೆ ಹೈಕೋರ್ಟ್ ನೋಟಿಸ್

    ಎನ್‍ಐಎಯಿಂದ ಮರಣದಂಡನೆಗೆ ಮನವಿ- ಯಾಸಿನ್ ಮಲಿಕ್‍ಗೆ ಹೈಕೋರ್ಟ್ ನೋಟಿಸ್

    ನವದೆಹಲಿ: ಭಯೋತ್ಪಾದನೆಗೆ ಹಣಕಾಸು ನೆರವು (Terror Funding Case) ನೀಡಿದ್ದ ಪ್ರಕರಣದಲ್ಲಿ ಮರಣದಂಡನೆ (Death Penalty) ವಿಧಿಸುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (National Investigation Agency) ಮಾಡಿದ ಮನವಿಯ ಮೇರೆಗೆ ದೆಹಲಿ ಹೈಕೋರ್ಟ್ (Delhi High Court) ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್‍ಗೆ (Yasin Malik) ಸೋಮವಾರ ನೋಟಿಸ್ ಜಾರಿ ಮಾಡಿದೆ.

    ನ್ಯಾಯಮೂರ್ತಿ ಸಿದ್ಧಾರ್ಥ್ ಮೃದುಲ್ ಮತ್ತು ತಲ್ವಂತ್ ಸಿಂಗ್ ಅವರ ಪೀಠವು ಪ್ರಸ್ತುತ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಲಿಕ್‍ನನ್ನು ಆಗಸ್ಟ್ 9ರ ಒಳಗಾಗಿ ಕೋರ್ಟ್‍ಗೆ ಹಾಜರುಪಡಿಸುವಂತೆ ಆದೇಶದಲ್ಲಿ ತಿಳಿಸಿದೆ. ಎನ್‍ಐಎ (NIA) ಪರವಾಗಿ ವಾದಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಆರೋಪಿಯು ಭಯೋತ್ಪಾದಕ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾನೆ. ಅಲ್ಲದೆ ಈ ಪ್ರಕರಣವನ್ನು ವಿಶೇಷವಾಗಿ ಪರಿಗಣಿಸಿ ಅಪರಾಧಿಗೆ ಮರಣದಂಡನೆ ನೀಡಬೇಕು ಎಂದು ವಾದಿಸಿದರು. ಇದನ್ನೂ ಓದಿ: ಹುಟ್ಟಿನಿಂದ ಸ್ತ್ರೀ, ಬಳಿಕ ಪುರುಷ- ದಾಖಲೆಯಲ್ಲಿ ಲಿಂಗ ಬದಲಾವಣೆ ಅರ್ಜಿಗೆ ಕೋರ್ಟ್ ಹೇಳಿದ್ದೇನು?

    ಯಾಸಿನ್ ಮಲಿಕ್ ಅಪರಾಧ ಒಪ್ಪಿಕೊಂಡ ಕಾರಣಕ್ಕೆ ಐಪಿಸಿ ಸೆಕ್ಷನ್ 121ರ ಅಡಿಯಲ್ಲಿ (121 IPC) ಮರಣ ದಂಡನೆಯ ಬದಲಾಗಿ ಜೀವಾವಧಿ ಶಿಕ್ಷೆಗೆ ಮಾರ್ಪಡಿಸಲಾಗಿದೆ ಎಂದು ಕೋರ್ಟ್ ಉಲ್ಲೇಖಿಸಿದೆ. 2022ರ ಮೇ 24 ರಂದು ನ್ಯಾಯಾಲಯವು ಮಲಿಕ್‍ಗೆ ದೇಶದ್ರೋಹ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ತೀರ್ಪು ನೀಡಿತ್ತು.

    ಮರಣದಂಡನೆ ನೀಡುವಂತೆ ಎನ್‍ಐಎ ಹೈಕೋರ್ಟ್‍ಗೆ ಸಲ್ಲಿಸಿದ ಮನವಿಯಲ್ಲಿ, ಉಗ್ರರಿಗೆ ತಪ್ಪೊಪ್ಪಿಕೊಂಡ ಕಾರಣಕ್ಕೆ ಮರಣದಂಡನೆಯನ್ನು ನೀಡದಿದ್ದರೆ ಅದರಿಂದ ತಪ್ಪಿಸಿಕೊಳ್ಳಲು ದಾರಿಯಾಗುತ್ತದೆ ಎಂದು ಉಲ್ಲೇಖಿಸಿತ್ತು. ಇದನ್ನೂ ಓದಿ: ಐಡಿ ಪ್ರೂಫ್ ಇಲ್ಲದೆ 2,000 ರೂ. ನೋಟು ವಿನಿಮಯ ವಿರುದ್ಧ ಮನವಿ- ದೆಹಲಿ ಹೈಕೋರ್ಟ್‌ನಿಂದ ಅರ್ಜಿ ವಜಾ

  • ಗಡ್ಕರಿಗೆ ಕೊಲೆ ಬೆದರಿಕೆ ಕೇಸ್- ಎನ್‌ಐಎಯಿಂದ ಎಫ್‌ಐಆರ್ ದಾಖಲು

    ಗಡ್ಕರಿಗೆ ಕೊಲೆ ಬೆದರಿಕೆ ಕೇಸ್- ಎನ್‌ಐಎಯಿಂದ ಎಫ್‌ಐಆರ್ ದಾಖಲು

    ಬೆಳಗಾವಿ: ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಕೊಲೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ (NIA) ಅಧಿಕಾರಿಗಳು ಆರೋಪಿ ವಿರುದ್ಧ ಎಫ್‌ಐಆರ್ (FIR) ದಾಖಲಿಸಿದ್ದಾರೆ.

    ಜಯೇಶ್ ಪೂಜಾರಿ ಎಂಬ ಆರೋಪಿ ಕೊಲೆ ಪ್ರಕರಣವೊಂದರಲ್ಲಿ ಬೆಳಗಾವಿಯ (Belagavi) ಹಿಂಡಲಗಾ (Hindalga) ಜೈಲು ಸೇರಿದ್ದ. ಈತ ಮಾ.21ರಂದು ಮಹಾರಾಷ್ಟ್ರದ (Maharashtra) ನಾಗ್ಪುರದಲ್ಲಿರುವ ಸಚಿವರ ಕಚೇರಿಗೆ ಕರೆ ಮಾಡಿ ನಿತಿನ್ ಗಡ್ಕರಿಯವರಿಗೆ ಜೀವ ಬೆದರಿಕೆ ಒಡ್ಡಿದ್ದಾನೆ. ಅಲ್ಲದೇ ಈ ಹಿಂದೆ ಜ.14ರಂದು ಸಚಿವರ ಕಚೇರಿಗೆ ಕರೆ ಮಾಡಿ ಜೀವ ಬೆದರಿಕೆ ಒಡ್ಡುವುದರ ಜೊತೆಗೆ 10 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ. ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಿದಾಗ ಬೆಳಗಾವಿ ಜೈಲಿನ ಮಾಹಿತಿ ಬಹಿರಂಗ ಆಗಿತ್ತು. ಇದನ್ನೂ ಓದಿ: ತಿಹಾರ್ ಜೈಲಿನ ಶೌಚಾಲಯದಲ್ಲಿ ಕುಸಿದು ಬಿದ್ದ ಸತ್ಯೇಂದ್ರ ಜೈನ್ – 3 ದಿನದ ಬಳಿಕ ಮತ್ತೆ ಆಸ್ಪತ್ರೆ ದಾಖಲು

    ಆರೋಪಿ ತಾನು ದಾವೂದ್ ಇಬ್ರಾಹಿಂ ಗ್ಯಾಂಗ್‌ನ ಸದಸ್ಯ ಎಂದು ನಿತಿನ್ ಗಡ್ಕರಿಯವರಿಗೆ ಕೊಲೆ ಬೆದರಿಕೆ ಹಾಕಿದ್ದ. ಈ ಹಿನ್ನೆಲೆಯಲ್ಲಿ ಎನ್‌ಐಎ ಅಧಿಕಾರಿಗಳು ಈತನ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ. ಅಲ್ಲದೇ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಎಫ್‌ಐಆರ್ ಮಾಹಿತಿ ರವಾನಿಸಿದ್ದಾರೆ. ಇದನ್ನೂ ಓದಿ: ಮಂಗಳೂರಿನಲ್ಲಿ ಟೇಕಾಫ್‍ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ – ಸಮಯಪ್ರಜ್ಞೆ ಮೆರೆದ ಪೈಲೆಟ್

  • ಆರ್‌ಎಸ್‌ಎಸ್ ಮುಖಂಡನ ಹತ್ಯೆ ಪ್ರಕರಣ – ಪಿಎಫ್‍ಐ ಸದಸ್ಯ ಅರೆಸ್ಟ್

    ಆರ್‌ಎಸ್‌ಎಸ್ ಮುಖಂಡನ ಹತ್ಯೆ ಪ್ರಕರಣ – ಪಿಎಫ್‍ಐ ಸದಸ್ಯ ಅರೆಸ್ಟ್

    ತಿರುವನಂತನಪುರಂ: 2022ರ ಏಪ್ರಿಲ್‍ನಲ್ಲಿ ಕೇರಳದ (Kerala) ಪಾಲಕ್ಕಾಡ್ (Palakkad) ಜಿಲ್ಲೆಯಲ್ಲಿ ನಡೆದಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖಂಡ ಶ್ರೀನಿವಾಸನ್ ಅವರ ಹತ್ಯೆ ಪ್ರಕರಣದಲ್ಲಿ ಬೇಕಾಗಿದ್ದ ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸದಸ್ಯನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬುಧವಾರ ಬಂಧಿಸಿದೆ.

    ಆರೋಪಿ ಸಹೀರ್ ಕೆವಿ ಕೃತ್ಯದ ನಂತರ ತಲೆಮರೆಸಿಕೊಂಡಿದ್ದ. ಅಲ್ಲದೆ ಹತ್ಯೆಯಲ್ಲಿ ಪಾಲ್ಗೊಂಡಿದ್ದ ಆರೋಪಿಗಳಿಗೆ ಆಶ್ರಯ ನೀಡಿದ್ದ. ಆತನ ಸುಳಿವು ನಿಡಿದವರಿಗೆ 4 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್‍ಐಎ ಘೋಷಣೆ ಮಾಡಿತ್ತು. ಪಾಲಕ್ಕಾಡ್ ಸಂಬಂಧಿಕರ ಮನೆಯಲ್ಲಿ ಆತ ಅಡಗಿರುವುದನ್ನು ಪತ್ತೆಹಚ್ಚಿದ್ದ ಎನ್‍ಐಎ ಬಂಧಿಸಿದೆ. ಇದನ್ನೂ ಓದಿ: ಮಾಡೆಲ್ ಹೇರ್‌ಸ್ಟೈಲ್‌ ಹಾಳು ಮಾಡಿದ್ದಕ್ಕೆ 2 ಕೋಟಿ ಪರಿಹಾರ – ಆದೇಶಕ್ಕೆ ಸುಪ್ರೀಂ ತಡೆ

    ಪಿಎಫ್‍ಐನ ಪಟ್ಟಾಂಬಿ ಏರಿಯಾ ಅಧ್ಯಕ್ಷನಾಗಿದ್ದ ಆರೋಪಿಯು ಸಮುದಾಯದ ಸದಸ್ಯರಲ್ಲಿ ಭಯೋತ್ಪಾದನೆಯ ವಿಚಾರಗಳನ್ನು ಬಿತ್ತುತ್ತಿದ್ದ. 2047ರ ಹೊತ್ತಿಗೆ ಇಸ್ಲಾಮಿಕ್ ಆಳ್ವಿಕೆಯನ್ನು ಸ್ಥಾಪಿಸುವ ಉದ್ದೇಶದಿಂದ ಸಂಘಟನೆಯ ಸದಸ್ಯರನ್ನು ತಯಾರಿ ಮಾಡುತ್ತಿದ್ದ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಮಾ. 17ರಂದು ಪಿಎಫ್‍ಐ ಸದಸ್ಯರು ಸೇರಿದಂತೆ 59 ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿತ್ತು. ಆರೋಪಿಗಳಲ್ಲಿ ಒಬ್ಬನಾದ ಅಬ್ದುಲ್ ನಾಸರ್ ಜ.2 ರಂದು ಸಾವನ್ನಪ್ಪಿದ್ದ. ತಲೆಮರೆಸಿಕೊಂಡಿರುವ ಉಳಿದ 11 ಆರೋಪಿಗಳನ್ನು ಪತ್ತೆಹಚ್ಚಲು ಎನ್‍ಐಎ ಬಲೆ ಬೀಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕಿಂಗ್ ಮೇಕರ್ ಆಗುತ್ತೇನೆ ಎಂಬ ಅಹಂನಲ್ಲಿ ವಿದೇಶಕ್ಕೆ ಹಾರಿದ್ದ ಹೆಚ್‍ಡಿಕೆ : ಸಿಪಿ ಯೋಗೇಶ್ವರ್ ವ್ಯಂಗ್ಯ

  • ಪಂಜಾಬ್ ಸ್ಫೋಟ ಪ್ರಕರಣ – ಐವರು ಆರೋಪಿಗಳ ಬಂಧನ

    ಪಂಜಾಬ್ ಸ್ಫೋಟ ಪ್ರಕರಣ – ಐವರು ಆರೋಪಿಗಳ ಬಂಧನ

    ಚಂಡೀಗಢ: ಗೋಲ್ಡನ್ ಟೆಂಪಲ್ (Golden Temple) ಬಳಿ ಬುಧವಾರ ತಡರಾತ್ರಿ ಸಂಭವಿಸಿದ್ದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ (Punjab) ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

    ಕಳೆದ ರಾತ್ರಿ 1 ಗಂಟೆ ಸುಮಾರಿಗೆ ಅಮೃತಸರದ (Amritsar) ಹೆರಿಟೇಜ್ ಸ್ಟ್ರೀಟ್ ಬಳಿ ಈ ಸ್ಫೋಟ ಸಂಭವಿಸಿತ್ತು. ಗೋಲ್ಡನ್ ಟೆಂಪಲ್ ಬಳಿ ಕಳೆದ ಐದು ದಿನಗಳಲ್ಲಿ ಸಂಭವಿಸಿದ ಮೂರನೇ ಸ್ಫೋಟ ಇದಾಗಿತ್ತು. ಆರೋಪಿಗಳು ಈ ಮೂರು ಪ್ರಕರಣದಲ್ಲೂ ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮ್ಯಾಟ್ರಿಮೋನಿಯಲ್ಲಿ ಪರಿಚಯ – ಮಹಿಳೆಯ ಚಿನ್ನಾಭರಣದೊಂದಿಗೆ ಯುವಕ ಪರಾರಿ

    ರಾಷ್ಟ್ರೀಯ ತನಿಖಾ ಸಂಸ್ಥೆ (National Investigation Agency) ಮತ್ತು ಪಂಜಾಬ್ ಪೊಲೀಸರು ಘಟನೆ ನಡೆದ ಸ್ಥಳದಿಂದ ಸ್ಫೋಟಕ್ಕೆ ಬಳಸಲಾದ ವಸ್ತುಗಳನ್ನು ಸಂಗ್ರಹಿಸಿದ್ದಾರೆ. ಮೇಲ್ನೋಟಕ್ಕೆ ತೀವ್ರ ಸ್ಫೋಟಕ ಬಳಸಿದಂತೆ ಕಾಣುತ್ತಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮೊದಲ ಸ್ಫೋಟ ಮೇ 6 ರಂದು ಮತ್ತು ಎರಡನೆಯ ಸ್ಫೋಟ ಮೇ 8 ರಂದು ಸಂಭವಿಸಿತ್ತು. ಮೇ 6 ರಂದು ನಡೆದ ಸ್ಫೋಟದಲ್ಲಿ ಒಬ್ಬರು ಗಾಯಗೊಂಡಿದ್ದರು. ಘಟನೆಯಲ್ಲಿ ಅಕ್ಕಪಕ್ಕದ ಕೆಲವು ಕಟ್ಟಡಗಳ ಕಿಟಕಿ ಗಾಜುಗಳು ಒಡೆದಿದ್ದವು. ಇದನ್ನೂ ಓದಿ: ಮಂಗಳೂರಿನಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ – ಮಿಥುನ್ ರೈ ಕಾರ್ ಮೇಲೆ ಕಲ್ಲು ತೂರಾಟ

  • ಉಗ್ರರ ಜೊತೆ ಸ್ಥಳೀಯರ ಶಾಮೀಲು – ಜಮ್ಮು ಕಾಶ್ಮೀರದಲ್ಲಿ 15 ಕಡೆ ಎನ್‍ಐಎ ಶೋಧ

    ಉಗ್ರರ ಜೊತೆ ಸ್ಥಳೀಯರ ಶಾಮೀಲು – ಜಮ್ಮು ಕಾಶ್ಮೀರದಲ್ಲಿ 15 ಕಡೆ ಎನ್‍ಐಎ ಶೋಧ

    ಶ್ರೀನಗರ: ಪಾಕಿಸ್ತಾನ (Pakistan) ಬೆಂಬಲಿತ ಭಯೋತ್ಪಾದಕ ಕೃತ್ಯಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಜಮ್ಮು ಮತ್ತು ಕಾಶ್ಮೀರದ (Jammu and Kashmir) ಏಳು ಜಿಲ್ಲೆಗಳ 15 ಸ್ಥಳಗಳಲ್ಲಿ ಮಂಗಳವಾರ ದಾಳಿ ನಡೆಸಿದೆ.

    ಜಮ್ಮು ಮತ್ತು ಕಾಶ್ಮೀರದಲ್ಲಿ ವಿವಿಧ ಭಯೋತ್ಪಾದಕ ಸಂಘಟನೆಗಳು ಭೂಗತವಾಗಿ ಕಾರ್ಯನಿರ್ವಹಿಸುತ್ತಿವೆ. ಸ್ಥಳೀಯ ಯುವಕರು ಅವುಗಳೊಂದಿಗೆ ಸಕ್ರಿಯವಾಗಿದ್ದಾರೆ. ದೇಶದ ವಿರುದ್ಧ ಸಂಚು ರೂಪಿಸುವ ಕಾರ್ಯದಲ್ಲಿ ಭಯೋತ್ಪಾದಕ ಸಂಘಟನೆಗಳು ತೊಡಗಿಕೊಂಡಿವೆ ಎಂಬ ಆರೋಪ ಬಂದ ಹಿನ್ನೆಲೆಯಲ್ಲಿ ಎನ್‍ಐಎ ದಾಳಿ ಮಾಡಿದೆ. ಇದನ್ನೂ ಓದಿ: ಪಿಎಫ್‍ಐ ವಿರುದ್ಧದ ಪ್ರಕರಣ – ತಮಿಳುನಾಡಿನ ಹಲವೆಡೆ ಎನ್‍ಐಎ ದಾಳಿ

    ಅಲ್ಲದೆ ಪಾಕಿಸ್ತಾನದಿಂದ ಶಸ್ತ್ರಾಸ್ತ್ರಗಳು ಹಾಗೂ ಮಾದಕ ವಸ್ತುಗಳು ಡ್ರೋಣ್ ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ತಲುಪುತ್ತಿವೆ. ಭಯೋತ್ಪಾದಕ ಕೃತ್ಯಗಳಿಗೆ ಬೆಂಬಲ ನೀಡುತ್ತಿರುವ ಕೆಲವರು ಅವುಗಳನ್ನು ಸಂಗ್ರಹಿಸಿಡುತ್ತಿದ್ದಾರೆ ಎಂದು ಎನ್‍ಐಎ ಹೇಳಿಕೊಂಡಿದೆ.

    ಭಯೋತ್ಪಾದಕರ ಸಂಚಿನ ಕುರಿತು ಎನ್‍ಐಎ ಕಳೆದ ವರ್ಷ ಜೂನ್ 21 ರಂದು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮೀಸಲು ಪಡೆ (Central Reserve Police Force) ಹಾಗೂ ಪೊಲೀಸ್ ಸಿಬ್ಬಂದಿಯೊಂದಿಗೆ ಎನ್‍ಐಎ ಶೋಧಕಾರ್ಯ ನಡೆಸುತ್ತಿದೆ. ಕಳೆದ ವರ್ಷ ಜೂನ್ 24 ರಂದು ಜಮ್ಮು ಮತ್ತು ಕಾಶ್ಮೀರದ 14 ಸ್ಥಳಗಳಲ್ಲಿ ಎನ್‍ಐಎ ದಾಳಿ ನಡೆಸಿತ್ತು. ಈ ವೇಳೆ ಸ್ಪೋಟಕಗಳು ಹಾಗೂ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಂಡಿತ್ತು. ಇದನ್ನೂ ಓದಿ: ಸೇತುವೆಯಿಂದ ಬಸ್ ಬಿದ್ದು 22 ಮಂದಿ ಸಾವು

  • ಪಿಎಫ್‍ಐ ವಿರುದ್ಧದ ಪ್ರಕರಣ – ತಮಿಳುನಾಡಿನ ಹಲವೆಡೆ ಎನ್‍ಐಎ ದಾಳಿ

    ಪಿಎಫ್‍ಐ ವಿರುದ್ಧದ ಪ್ರಕರಣ – ತಮಿಳುನಾಡಿನ ಹಲವೆಡೆ ಎನ್‍ಐಎ ದಾಳಿ

    ಚೆನೈ: ನಿಷೇಧಿತ ಭಯೋತ್ಪಾದಕ ಸಂಘಟನೆ ಪಿಎಫ್‍ಐ (PFI) ವಿರುದ್ಧದ ತನಿಖೆಗೆ ಸಂಬಂಧಿಸಿದಂತೆ ಎನ್‍ಐಎ (NIA) ಮಂಗಳವಾರ ತಮಿಳುನಾಡಿನ (Tamil Nadu) ನಾಲ್ಕು ಜಿಲ್ಲೆಗಳಲ್ಲಿ ದಾಳಿ ನಡೆಸಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಮಧುರೈ, ಚೆನ್ನೈ, ದಿಂಡಿಗಲ್ ಮತ್ತು ಥೇಣಿ ಜಿಲ್ಲೆಗಳ ಆರು ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಕಳೆದ ಸೆ. 19 ರಂದು ಪ್ರಕರಣ ದಾಖಲಾದಾಗಿನಿಂದ ಇದುವರೆಗೂ ಪ್ರಕರಣದಲ್ಲಿ 10 ಜನರನ್ನು ಬಂಧಿಸಲಾಗಿದೆ. ಬಂಧಿತರಾಗಿದ್ದ ಆರೋಪಿಗಳು ನೆಲೆಸಿದ್ದ ಸ್ಥಳಗಳಲ್ಲಿ ಶೋಧಕಾರ್ಯ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮುಸ್ಲಿಂ ಮೀಸಲಾತಿ ರದ್ದು ವಿಚಾರ- ಸುಪ್ರೀಂನಲ್ಲಿ ಇಂದು ವಿಚಾರಣೆ

    ಬಂಧಿತರಿಂದ ಹಲವಾರು ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಅಲ್ಲದೆ ಆರೋಪಿಗಳು ಕೋಮು ಸೌಹಾರ್ದತೆಗೆ ಧಕ್ಕೆ ತರುವ ಚಟುವಟಿಕೆಯಲ್ಲಿ ತೊಡಗಿದ್ದರು. ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದರು. ಅಲ್ಲದೆ ಮಾರಕಾಸ್ತ್ರಗಳ ಬಳಕೆಗೆ ಯುವಕರ ಗುಂಪಿಗೆ ತರಬೇತಿ ನೀಡಿತ್ತಿದ್ದರು ಎಂದು ಎನ್‍ಐಎ ಆರೋಪಿಸಿತ್ತು.

    ವಿವಿಧ ರಾಜ್ಯಗಳ ಪೊಲೀಸರು ಹಾಗೂ ಎನ್‍ಐಎ ನಡೆಸಿದ ತನಿಖೆಗಳಲ್ಲಿ ಪಿಎಫ್‍ಐ ಸಂಘಟನೆ ಹಿಂಸಾತ್ಮಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿತ್ತು. ಇದಾದ ನಂತರ ಕಳೆದ ಸೆಪ್ಟೆಂಬರ್‌ನಲ್ಲಿ ಪಿಎಫ್‍ಐ ಹಾಗೂ ಅದರ ಅನೇಕ ಅಂಗಸಂಸ್ಥೆಗಳನ್ನು ಗೃಹ ಸಚಿವಾಲಯ (Ministry of Home Affairs), ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಿ ನಿಷೇಧಿಸಿತ್ತು. ಇದನ್ನೂ ಓದಿ: ಕರಿ ಜೊತೆಗೆ ಅನ್ನ ಮಾಡಿಲ್ಲ ಅಂತಾ ಪತ್ನಿಯನ್ನ ಹೊಡೆದು ಕೊಂದ ಪಾಪಿ ಗಂಡ

  • ಐವರು ಸೈನಿಕರ ದುರ್ಮರಣದ ಹಿಂದೆ ಪಾಕ್‌ ಕೈವಾಡ – ಡ್ರೋನ್‌ ಮೂಲಕ ಶಸ್ತ್ರಾಸ್ತ್ರ ಪೂರೈಕೆ

    ಐವರು ಸೈನಿಕರ ದುರ್ಮರಣದ ಹಿಂದೆ ಪಾಕ್‌ ಕೈವಾಡ – ಡ್ರೋನ್‌ ಮೂಲಕ ಶಸ್ತ್ರಾಸ್ತ್ರ ಪೂರೈಕೆ

    – ತನಿಖೆ ವೇಳೆ ಸ್ಫೋಟಕ ಮಾಹಿತಿ ಬಯಲು

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪೂಂಚ್ ಜಿಲ್ಲೆಯಲ್ಲಿ ನಡೆದ ಉಗ್ರರ ದಾಳಿ (Poonch Attack) ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ.

    ದಾಳಿಯ ಒಂದು ವಾರದ ನಂತರ ಭಯೋತ್ಪಾದಕರು ಪಾಕಿಸ್ತಾನದಿಂದ (Pakistan) ಡ್ರೋನ್‌ಗಳ ಮೂಲಕ ಶಸ್ತ್ರಾಸ್ತ್ರ (Weapons) ಪೂರೈಕೆ ಮಾಡಿಕೊಳ್ಳುತ್ತಿದ್ದಾರೆ. ಸುಮಾರು 12 ಮಂದಿ ಭಯೋತ್ಪಾದಕರು ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಸೈನಿಕರ ವಾಹನದ ಮೇಲೆ ದಾಳಿ ಪ್ರಕರಣ – 12 ಶಂಕಿತರು ವಶಕ್ಕೆ

    ಪೂಂಚ್‌ ಜಿಲ್ಲೆಯಲ್ಲಿ ಸೈನಿಕರು ಸಂಚರಿಸುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿದಾಗ ಐವರು ಸೈನಿಕರು ಸಾವನ್ನಪ್ಪಿದರು. ಮರುದಿನ 12 ಜನ ಶಂಕಿತರನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ಘಟನೆಗೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ನೇತೃತ್ವದ ತಂಡ ಕಳೆದ ಒಂದು ವಾರದಿಂದಲೂ ಭಯೋತ್ಪಾದಕರನ್ನ ಸದೆಬಡಿಯಲು ಬಿಗಿ ಕಾರ್ಯಾಚರಣೆ ನಡೆಸುತ್ತಿದ್ದು, ಇದೀಗ ಮಾಹಿತಿ ಬೆಳಕಿಗೆ ಬಂದಿದೆ. ವಶಕ್ಕೆ ಪಡೆಯಲಾದ ಶಂಕಿತರ ಪೈಕಿ ನಾಸಿರ್‌ ಅಹ್ಮದ್‌ ಭಯೋತ್ಪಾದಕರಿಗೆ ಆಶ್ರಯ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ನಾಸಿರ್‌ ಅಹ್ಮದ್‌ನನ್ನ ಮತ್ತಷ್ಟು ವಿಚಾರಣೆಗೆ ಒಳಪಡಿಸಿದಾಗ ಮತ್ತಷ್ಟು ಮಹತ್ವದ ಮಾಹಿತಿ ತಿಳಿದು ಬಂದಿದೆ. ಇದೇ ವೇಳೆ ಈ ಪ್ರದೇಶದಲ್ಲಿ ನೆಲೆಸಿರುವ ಭಯೋತ್ಪಾದಕರಿಗೆ ಪಾಕಿಸ್ತಾನದಿಂದ ಡ್ರೋನ್‌ ಮೂಲಕ ಶಸ್ತ್ರಾಸ್ತ್ರ ಪೂರೈಕೆಯಾಗುತ್ತಿದೆ ಅನ್ನೋದು ಗೊತ್ತಾಗಿದೆ. ಆದ್ರೆ ಅವರನ್ನು ಪತ್ತೆಹಚ್ಚಲು ಮಾಹಿತಿ ಸಹಾಯಕವಾಗಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: `ಮೋದಿ ವಿಷ ಸರ್ಪ, ಸೋನಿಯಾ ವಿಷಕನ್ಯೆ’ ಹೇಳಿಕೆ – ಖರ್ಗೆ, ಯತ್ನಾಳ್ ವಿರುದ್ಧ ದೂರು

    ಈಗಾಗಲೇ 12 ಜನ ಶಂಕಿತರನ್ನ ವಶಕ್ಕೆ ಪಡೆದಿದ್ದು, 200ಕ್ಕೂ ಹೆಚ್ಚು ಜನರನ್ನ ವಿಚಾರಣೆಗೆ ಕರೆಸಲಾಗಿದೆ. ದಾಳಿಕೋರರನ್ನ ಪತ್ತೆಹಚ್ಚಲು ಸತತ ಕಾರ್ಯಾಚರಣೆ ಮುಂದುವರಿದಿದೆ ಎಂದು ಮಾಹಿತಿ ನೀಡಿದ್ದಾರೆ.

    ಏನಿದು ಘಟನೆ?
    ಸೈನಿಕರು ಸಂಚರಿಸುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿ ಐವರು ಸೈನಿಕರ ಸಾವನ್ನಪ್ಪಿದ್ದರು. ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಹಾಗೂ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಅವರು ತನಿಖೆಯ ಮೇಲ್ವಿಚಾರಣೆಗಾಗಿ ನೆರೆಯ ರಜೌರಿ ಜಿಲ್ಲೆಯಲ್ಲಿ ಮೊಕ್ಕಾಂ ಹೂಡಿದ್ದರು. ಇಬ್ಬರು ಅಧಿಕಾರಿಗಳು ಸಹ ಸ್ಥಳಕ್ಕೆ ಭೇಟಿ ನೀಡಿದ್ದರು. ಡೆಪ್ಯುಟಿ ಇನ್ಸ್‍ಪೆಕ್ಟರ್ ಜನರಲ್ ಶ್ರೇಣಿಯ ಅಧಿಕಾರಿಯ ನೇತೃತ್ವದ ರಾಷ್ಟ್ರೀಯ ತನಿಖಾ ಸಂಸ್ಥೆಯ ತಂಡ ಸ್ಥಳದಲ್ಲಿ ಪರಿಶೀಲನೆ ನಡೆಸಿತ್ತು.

    ಪ್ರಾಥಮಿಕ ವರದಿಯಲ್ಲಿ ಸುಮಾರು ಐವರು ಭಯೋತ್ಪಾದಕರು ದಾಳಿಯಲ್ಲಿ ಭಾಗವಹಿಸಿದ ಬಗ್ಗೆ ಮಾಹಿತಿ ಇತ್ತು. ಸೇನಾ ಟ್ರಕ್ ಮೇಲೆ ಮೂರು ಕಡೆಗಳಿಂದ ದಾಳಿ ನಡೆದಿತ್ತು. ದಾಳಿಯ ನಂತರ, ಭಯೋತ್ಪಾದಕರು ಗ್ರೆನೇಡ್‍ಗಳು ಮತ್ತು ಬಾಂಬ್‍ಗಳನ್ನು ಬಳಸಿ ವಾಹನವನ್ನು ಸುಟ್ಟು ಹಾಕಿದ್ದರು. ದಾಳಿ ನಡೆಸಿದವರು ಒಂದು ವರ್ಷಕ್ಕೂ ಹೆಚ್ಚು ಕಾಲ ರಜೌರಿ ಮತ್ತು ಪೂಂಚ್‍ನಲ್ಲಿ ವಾಸವಾಗಿದ್ದರು. ಇಂತಹ ಕಠಿಣವಾದ ಭೂಪ್ರದೇಶದ ಬಗ್ಗೆ ಸಾಕಷ್ಟು ಜ್ಞಾನವನ್ನು ಹೊಂದಿದ್ದರು. ಪ್ರಸ್ತುತ ಈ ಪ್ರದೇಶದಲ್ಲಿ 3 ರಿಂದ 4 ಭಯೋತ್ಪಾದಕ ಗುಂಪುಗಳು ಸಕ್ರಿಯವಾಗಿವೆ ಎಂದು ತೀಳಿದು ಬಂದಿತ್ತು. ಜೈಶ್-ಎ-ಮೊಹಮ್ಮದ್‍ನ ಪೀಪಲ್ಸ್ ಆಂಟಿ-ಫ್ಯಾಸಿಸ್ಟ್ ಫ್ರಂಟ್ ನಿಷೇಧಿತ ಭಯೋತ್ಪಾದಕ ಗುಂಪು ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು. ಇದು ನಿಷೇಧಿತ ಲಷ್ಕರ್-ಎ-ತೊಯ್ಬಾ ಗುಂಪಿನ ಕೈವಾಡ ಎನ್ನಲಾದ ಮಾಹಿತಿ ಇದೆ ಎಂದೂ ತಿಳಿದುಬಂದಿತ್ತು.

  • ಸೈನಿಕರ ವಾಹನದ ಮೇಲೆ ದಾಳಿ ಪ್ರಕರಣ – 12 ಶಂಕಿತರು ವಶಕ್ಕೆ

    ಸೈನಿಕರ ವಾಹನದ ಮೇಲೆ ದಾಳಿ ಪ್ರಕರಣ – 12 ಶಂಕಿತರು ವಶಕ್ಕೆ

    ಶ್ರೀನಗರ: ಸೈನಿಕರು ಸಂಚರಿಸುತ್ತಿದ್ದ ವಾಹನದ (Army Truck) ಮೇಲೆ ಗುರುವಾರ ದಾಳಿ ನಡೆಸಿ ಐವರು ಸೈನಿಕರ ಸಾವಿಗೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶುಕ್ರವಾರ 12 ಜನ ಶಂಕಿತರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಭಯೋತ್ಪಾದಕ ಸಂಘಟನೆಗಳ ಜೊತೆಗಿನ ನಂಟನ್ನು ಖಚಿತಪಡಿಸಿಕೊಳ್ಳಲು ಬಂಧನಕ್ಕೊಳಗಾದವರನ್ನು ವಿವಿಧ ಹಂತಗಳಲ್ಲಿ ಪ್ರಶ್ನಿಸಲಾಗುತ್ತಿದೆ. ಹಾಗೂ ಪೂಂಚ್ ಸೆಕ್ಟರ್‌ನಲ್ಲಿ ಒಂದು ವರ್ಷಕ್ಕೂ ಹೆಚ್ಚು ಕಾಲ ಭಯೋತ್ಪಾದಕ ಚಟುವಟಿಕೆಗಳು ಸಕ್ರಿಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಯೋಧರ ವಾಹನದ ಮೇಲೆ ಉಗ್ರರಿಂದ ಗುಂಡಿನ ದಾಳಿ – ಗ್ರೆನೇಡ್ ಬಳಕೆ ಸಾಧ್ಯತೆ

    ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರ (Jammu and Kashmir) ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಹಾಗೂ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಅವರು ತನಿಖೆಯ ಮೇಲ್ವಿಚಾರಣೆಗಾಗಿ ನೆರೆಯ ರಜೌರಿ ಜಿಲ್ಲೆಯಲ್ಲಿ ಮೊಕ್ಕಾಂ ಹೂಡಿದ್ದರು. ಇಬ್ಬರು ಅಧಿಕಾರಿಗಳು ಸಹ ಸ್ಥಳಕ್ಕೆ ಭೇಟಿ ನೀಡಿದ್ದರು ಎಂದು ಮೂಲಗಳು ತಿಳಿಸಿವೆ.

    ಡೆಪ್ಯುಟಿ ಇನ್ಸ್‍ಪೆಕ್ಟರ್ ಜನರಲ್ ಶ್ರೇಣಿಯ (Deputy Inspector General rank officer) ಅಧಿಕಾರಿಯ ನೇತೃತ್ವದ ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) ತಂಡ ಸ್ಥಳದಲ್ಲಿ ಪರಿಶೀಲನೆ ನಡೆಸಿದೆ.

    ಪ್ರಾಥಮಿಕ ವರದಿಯಲ್ಲಿ ಸುಮಾರು ಐವರು ಭಯೋತ್ಪಾದಕರು ದಾಳಿಯಲ್ಲಿ ಭಾಗವಹಿಸಿದ ಬಗ್ಗೆ ಮಾಹಿತಿ ಇದೆ. ಸೇನಾ ಟ್ರಕ್ ಮೇಲೆ ಮೂರು ಕಡೆಗಳಿಂದ ದಾಳಿ ನಡೆದಿದೆ ಎನ್ನಲಾಗಿದೆ. ದಾಳಿಯ ನಂತರ, ಭಯೋತ್ಪಾದಕರು ಗ್ರೆನೇಡ್‍ಗಳು ಮತ್ತು ಬಾಂಬ್‍ಗಳನ್ನು ಬಳಸಿ ವಾಹನವನ್ನು ಸುಟ್ಟು ಹಾಕಿರುವ ಸಾಧ್ಯತೆಯಿದೆ ಎನ್ನಲಾಗಿದೆ.

    ಭದ್ರತಾ ದೃಷ್ಟಿಯಿಂದ ಭಿಂಬರ್ ಗಲಿ ಮತ್ತು ಜರ್ರಾನ್ ವಾಲಿ ಗಲಿ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸತತ ಎರಡನೇ ದಿನವೂ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ದಾಳಿ ನಡೆಸಿದವರು ಒಂದು ವರ್ಷಕ್ಕೂ ಹೆಚ್ಚು ಕಾಲ ರಜೌರಿ ಮತ್ತು ಪೂಂಚ್‍ನಲ್ಲಿ ವಾಸವಾಗಿದ್ದರು. ಇಂತಹ ಕಠಿಣವಾದ ಭೂಪ್ರದೇಶದ ಬಗ್ಗೆ ಸಾಕಷ್ಟು ಜ್ಞಾನವನ್ನು ಹೊಂದಿದ್ದರು. ಪ್ರಸ್ತುತ ಈ ಪ್ರದೇಶದಲ್ಲಿ ಮೂರರಿಂದ ನಾಲ್ಕು ಭಯೋತ್ಪಾದಕ ಗುಂಪುಗಳು ಸಕ್ರಿಯವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಜೈಶ್-ಎ-ಮೊಹಮ್ಮದ್‍ನ ಪೀಪಲ್ಸ್ ಆಂಟಿ-ಫ್ಯಾಸಿಸ್ಟ್ ಫ್ರಂಟ್ ನಿಷೇಧಿತ ಭಯೋತ್ಪಾದಕ ಗುಂಪು ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಇದು ನಿಷೇಧಿತ ಲಷ್ಕರ್-ಎ-ತೊಯ್ಬಾ ಗುಂಪಿನ ಕೈವಾಡ ಎನ್ನಲಾದ ಮಾಹಿತಿ ಇದೆ ಎಂದು ಮೂಲಗಳು ತಿಳಿಸಿವೆ.

    ಭಯೋತ್ಪಾದಕರನ್ನು ಪತ್ತೆ ಹಚ್ಚಲು ಡ್ರೋನ್‍ಗಳು ಮತ್ತು ಸ್ನಿಫರ್ ಡಾಗ್‍ಗಳನ್ನು (Sniffer Dogs) ಬಳಸಲಾಗುತ್ತಿದೆ. ಸೇನೆ ಎಂಐ- ಚಾಪರ್‌ನೊಂದಿಗೆ ( MI-chopper) ಪ್ರದೇಶದ ಪರಿಶೀಲನೆಯನ್ನು ಸಹ ನಡೆಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

    ದಾಳಿಯ ನಂತರ ಅವರ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದ್ದರಿಂದ ಗುರುವಾರ ಐವರು ಸೇನಾ ಸಿಬ್ಬಂದಿ ಸಾವನ್ನಪ್ಪಿದರು ಮತ್ತು ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಾಳಿಗೊಳಗಾದವರು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗೆ ನಿಯೋಜಿಸಲಾದ ರಾಷ್ಟ್ರೀಯ ರೈಫಲ್ಸ್ ಘಟಕದ ಯೋಧರಾಗಿದ್ದು ಅವರ ಮೃತದೇಹಗಳನ್ನು ಅವರವರ ಊರಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಕಟ್ಟೆಚ್ಚರ ಹೆಚ್ಚಿರುವ ಹಿನ್ನೆಲೆಯಲ್ಲಿ ಅವಳಿ ಗಡಿ ಜಿಲ್ಲೆಗಳಾದ ರಾಜೌರಿ ಮತ್ತು ಪೂಂಚ್‍ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಗಜ್ನವಿ ಫೋರ್ಸ್‌ನ  ಕಮಾಂಡರ್ ರಫೀಕ್ ಅಹ್ಮದ್ ಅಲಿಯಾಸ್ ರಫೀಕ್ ನಯಿ ಅವರು ಇದೇ ಪ್ರದೇಶದ ನಿವಾಸಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ದಾಳಿಯ ವಿರುದ್ಧ ಬಿಜೆಪಿ (BJP), ವಿಎಚ್‍ಪಿ (VHP), ಬಜರಂಗದಳ (Bajrang Dal), ಶಿವಸೇನೆ (Shiv Sena), ಡೋಗ್ರಾ ಫ್ರಂಟ್ ಮತ್ತು ಜಮ್ಮು ರಾಜ್ಯತ್ವ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಸೇನಾ ವಾಹನಕ್ಕೆ ಬೆಂಕಿ ತಗುಲಿ 4 ಯೋಧರು ಸಜೀವದಹನ

  • ಕೇರಳದಲ್ಲಿ ರೈಲಿಗೆ ಬೆಂಕಿ ಹಚ್ಚಿ ಮೂವರ ಹತ್ಯೆ ಪ್ರಕರಣ – ಪರಾರಿಯಾಗಿದ್ದ ಆರೋಪಿ ಅರೆಸ್ಟ್

    ಕೇರಳದಲ್ಲಿ ರೈಲಿಗೆ ಬೆಂಕಿ ಹಚ್ಚಿ ಮೂವರ ಹತ್ಯೆ ಪ್ರಕರಣ – ಪರಾರಿಯಾಗಿದ್ದ ಆರೋಪಿ ಅರೆಸ್ಟ್

    ಮುಂಬೈ: ಕೇರಳದಲ್ಲಿ ಭಾನುವಾರ ರಾತ್ರಿ ಸಹ ಪ್ರಯಾಣಿಕನೊಂದಿಗೆ ಜಗಳವಾಡಿ ರೈಲಿಗೆ ಬೆಂಕಿ ಹಚ್ಚಿ ಮೂವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗುಪ್ತಚರ (Central Intelligence) ಮತ್ತು ಭಯೋತ್ಪಾದನಾ ನಿಗ್ರಹ (Anti Terrorism) ಅಧಿಕಾರಿಗಳ ಜಂಟಿ ತಂಡ ಬುಧವಾರ ಶಂಕಿತ ಆರೋಪಿಯನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಶಾರುಖ್ ರೈಲಿಗೆ ಬೆಂಕಿ ಹಚ್ಚಿದ ಶಂಕಿತ ಆರೋಪಿಯಾಗಿದ್ದು, ಮಹಾರಾಷ್ಟ್ರದ (Maharashtra) ರತ್ನಗಿರಿ (Ratnagiri) ಜಿಲ್ಲೆಯಲ್ಲಿ ಆತನನ್ನು ಬಂಧಿಸಲಾಗಿದೆ. ಕೇರಳ ಪೊಲೀಸರ ತಂಡವೂ ರತ್ನಗಿರಿ ತಲುಪಿದ್ದು, ಶಂಕಿತ ಆರೋಪಿಯನ್ನು ಶೀಘ್ರದಲ್ಲೇ ಅವರಿಗೆ ಹಸ್ತಾಂತರಿಸಲಾಗುವುದು ಎಂದು  ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ರೈಲಿನಲ್ಲಿ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ವ್ಯಕ್ತಿ – ಮೂವರು ಸಾವು 

    ಪ್ರಕರಣದ ಹಿಂದಿನ ಉದ್ದೇಶವು ಇನ್ನೂ ಸ್ಪಷ್ಟವಾಗಿಲ್ಲ. ಕೋಝಿಕ್ಕೋಡ್ (Kozhikode) ಜಿಲ್ಲೆಯ ಎಲತ್ತೂರ್ ಬಳಿ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲಿನಲ್ಲಿ ನಡೆದ ವಾದದ ನಂತರ ಸಹ ಪ್ರಯಾಣಿಕರಿಗೆ ಬೆಂಕಿ ಹಚ್ಚಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮಂಗಳವಾರ ಕಣ್ಣೂರು ನಿಲ್ದಾಣದಲ್ಲಿ ರೈಲಿನ ಕೋಚ್‌ಗಳನ್ನು ಪರೀಕ್ಷಿಸಿ ವಿಧಿವಿಜ್ಞಾನ ಸಾಕ್ಷಿಗಳನ್ನು ಸಂಗ್ರಹಿಸಿದೆ. ಘಟನೆಯ ವೇಳೆ ಅಲ್ಲಿದ್ದ ಕೆಲವು ಪ್ರಯಾಣಿಕರು ಮತ್ತು ರೈಲ್ವೆ ಸಿಬ್ಬಂದಿಯನ್ನೂ ಎನ್‌ಐಎ ವಿಚಾರಣೆಗೊಳಪಡಿಸಿದೆ. ಇದನ್ನೂ ಓದಿ: ವರನ ಕೊಲೆಗೆ ಸ್ಕೆಚ್‌ ಹಾಕಿ ಸ್ಫೋಟಕ ತುಂಬಿ ಗಿಫ್ಟ್‌ ಕೊಟ್ಟ ವಧುವಿನ ಮಾಜಿ ಲವ್ವರ್!  

    ಪ್ರಕರಣದ ತನಿಖೆಗಾಗಿ ಕೇರಳ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದರು. ಅಲ್ಲದೇ ಶಂಕಿತ ಆರೋಪಿಯ ಕುರಿತು ಮಾಹಿತಿ ನೀಡಿದವರಿಗೆ 2 ಲಕ್ಷ ರೂ. ಬಹುಮಾನ ಘೋಷಿಸಿದ್ದರು. ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದ ರಜಾಕ್ ನೀಡಿದ ಸಾಕ್ಷಿ ವಿವರಣೆಯ ಆಧಾರದ ಮೇಲೆ ಪೊಲೀಸರು ಶಂಕಿತ ಆರೋಪಿಯ ರೇಖಾಚಿತ್ರವನ್ನೂ (Sketch) ಬಿಡುಗಡೆ ಮಾಡಿದ್ದರು.

    ರೇಖಾಚಿತ್ರವು ಗಡ್ಡ ಮತ್ತು ಕ್ಯಾಪ್ ಹೊಂದಿರುವ ವ್ಯಕ್ತಿಯನ್ನು ಒಳಗೊಂಡಿದ್ದು, ಗಾಢ ಬಣ್ಣದ ಶರ್ಟ್ ಮತ್ತು ಪ್ಯಾಂಟ್ ಧರಿಸಿದ್ದ. ಆತನ ಬಗ್ಗೆ ಯಾವುದೇ ಮಾಹಿತಿ ದೊರೆತರೂ ತಕ್ಷಣವೇ ತಿಳಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದರು. ಇದನ್ನೂ ಓದಿ: ಯುವತಿ ಮೇಲೆ ಅತ್ಯಾಚಾರವೆಸಗಿ ಚಿನ್ನಾಭರಣ ಕದ್ದು ಪರಾರಿ – ಮಹಿಳೆ ಸೇರಿ ಐವರ ವಿರುದ್ಧ ಕೇಸ್ 

    ಅಲಪ್ಪುಳ- ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲು ಕೋಝಿಕ್ಕೋಡ್ ನಗರವನ್ನು ದಾಟಿ ಕೇರಳದ (Kerala) ಕೊರಾಪುಳ ರೈಲ್ವೆ ಸೇತುವೆಯನ್ನು ತಲುಪಿತ್ತು. ಈ ವೇಳೆ ಅನಾಮಿಕನೊಬ್ಬ ಸಹ ಪ್ರಯಾಣಿಕನೊಂದಿಗೆ ಜಗಳವಾಡಿ, ನಂತರ ಆತನಿಗೆ ಬೆಂಕಿ (Fire) ಹಚ್ಚಿದ ಪರಿಣಾಮ 9 ಮಂದಿ ಗಾಯಗೊಂಡಿದ್ದಾರೆ. ಘಟನೆ ನಡೆದ ಕೂಡಲೇ ವ್ಯಕ್ತಿ ಪರಾರಿಯಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಕಚ್ಚಾ ತೈಲ ಮೇಲಿನ ವಿಂಡ್‌ಫಾಲ್‌ ತೆರಿಗೆ ಕಡಿತಗೊಳಿಸಿದ ಭಾರತ

    ಘಟನೆಯಲ್ಲಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದರು. ಅದರಲ್ಲೂ 5 ಮಂದಿ ಗಂಭೀರ ಗಾಯಗೊಂಡಿದ್ದು, ಅವರನ್ನು ಕೋಝಿಕ್ಕೋಡ್‌ನ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಮೂವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ವರದಿಗಳು ತಿಳಿಸಿವೆ. ಇದನ್ನೂ ಓದಿ: ಸಿಕ್ಕಿಂನಲ್ಲಿ ಭಾರೀ ಹಿಮಪಾತ – 6 ಸಾವು, ಹಲವರು ನಾಪತ್ತೆ