Tag: ಎನ್‍ಐಎ

  • NIAಯಿಂದ ಸಾಕ್ಷಿ ಕೊರತೆ: ಭಟ್ಕಳ ಮೂಲದ ಉಗ್ರಗಾಮಿ ವಾಯಿದ್‌ಗೆ ಬಿಗ್ ರಿಲೀಫ್‌ ನೀಡಿದ ಕೋರ್ಟ್‌

    NIAಯಿಂದ ಸಾಕ್ಷಿ ಕೊರತೆ: ಭಟ್ಕಳ ಮೂಲದ ಉಗ್ರಗಾಮಿ ವಾಯಿದ್‌ಗೆ ಬಿಗ್ ರಿಲೀಫ್‌ ನೀಡಿದ ಕೋರ್ಟ್‌

    ಕಾರವಾರ: ಮುಂಬೈ ಅಟ್ಯಾಕ್, ಚಿನ್ನಸ್ವಾಮಿ ಕ್ರೀಡಾಂಗಣ ಬ್ಲಾಸ್ಟ್‌ನಲ್ಲಿ ಆರೋಪಿಯಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದ ಉಗ್ರಗಾಮಿ ಅಬ್ದುಲ್ ವಾಯಿದ್ ಸಿದ್ದಿಬಪ್ಪಗೆ (Abdul Wahid Siddibappa) ದೆಹಲಿ ಪಟಿಯಾಲ ಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಭಯೋತ್ಪಾದಕ ಚಟುವಟಿಕೆಗೆ ಹವಾಲಾ ಹಣ ವರ್ಗಾವಣೆ ಆರೋಪ ಸಾಬೀತಾಗದ ಹಿನ್ನಲೆಯಲ್ಲಿ ಪ್ರಕರಣ ರದ್ದು ಮಾಡಿ ಕೋರ್ಟ್‌ ಆದೇಶ ಹೊರಡಿಸಿದೆ.

    ದುಬೈನಲ್ಲಿ ಕುಳಿತು ಭಯೋತ್ಪಾದನೆ ಚಟುವಟಿಕೆ ನಡೆಸುತ್ತಿದ್ದ ಆರೋಪದಡಿ ಅಲ್ಲಿನ ಸರ್ಕಾರ ಈತನನ್ನು ಗಡಿಪಾರು ಮಾಡಿತ್ತು. ನಂತರ 2016ರ ಮೇ 20 ರಲ್ಲಿ NIA ದೆಹಲಿಯಲ್ಲಿ ಬಂಧಿಸಿತ್ತು. ಇದನ್ನೂ ಓದಿ: ಸ್ವಂತ ಮನೆಯಿಲ್ಲ ಎಂದಿದ್ದ ರಾಹುಲ್‌ ಗಾಂಧಿಗೆ 4 ಅಂತಸ್ತಿನ ಮನೆ ನೀಡಿದ ಕಾಂಗ್ರೆಸ್‌ ʻರಾಜಕುಮಾರಿʼ

    ಈತನ ವಿರುದ್ಧ ಇಂಡಿಯನ್ ಮುಜಾಹಿದ್ದಿನ್ (ಸಿಮಿ) ಸಂಘಟನೆಗೆ ಅಕ್ರಮ ಹಣಕಾಸು ವ್ಯವಹಾರ, ಹವಾಲಾ ದಂಧೆ, ಮುಂಬೈ ಅಟ್ಯಾಕ್, ಚಿನ್ನಸ್ವಾಮಿ ಕ್ರೀಡಾಂಗಣ ಬ್ಲಾಸ್ಟ್‌ನಲ್ಲಿ ಸಹ ಈತನ ಕೈವಾಡ ಇರುವ ಕುರಿತು NIA ಪ್ರಕರಣ ದಾಖಲಿಸಿತ್ತು.

    ಭಟ್ಕಳ ಮೂಲದ ಅಬ್ದುಲ್ ವಾಯಿದ್ ಸಿದ್ದಿಬಪ್ಪ ವಿರುದ್ಧ NIA ದಾಖಲಿಸಿದ್ದ, ಭಯೋತ್ಪಾದನೆ ಸಂಘಟನೆಗೆ ಹಣ ಒದಗಿಸಿದ ಕುರಿತು ಇರುವ ದೂರಿನಲ್ಲಿ ಸಾಕ್ಷಿ ಕೊರತೆ ಹಿನ್ನಲೆಯಲ್ಲಿ ಪ್ರಕರಣವನ್ನು ದೆಹಲಿ ಪಟಿಯಾಲ ಕೋರ್ಟ್‌ ಶನಿವಾರ ರದ್ದುಪಡಿಸಿತು. ಅಲ್ಲದೇ ವಾಯಿದ್‌ ಬಿಡುಗಡೆ ಮಾಡುವಂತೆ ಸೋಮವಾರ ಆದೇಶ ಮಾಡಿದೆ. ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದ್ರೆ ಗಲಭೆಕೋರರನ್ನ ತಲೆಕೆಳಗಾಗಿ ನೇತು ಹಾಕ್ತೀವಿ – ಅಮಿತ್ ಶಾ ಗುಡುಗು

  • ಕದ್ರಿ ದೇಗುಲ ಬ್ಲಾಸ್ಟ್ ಮಾಡೋದೇ ಉದ್ದೇಶ- NIA ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖ

    ಕದ್ರಿ ದೇಗುಲ ಬ್ಲಾಸ್ಟ್ ಮಾಡೋದೇ ಉದ್ದೇಶ- NIA ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖ

    ಬೆಂಗಳೂರು: ಶಿವಮೊಗ್ಗ ಟ್ರಯಲ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ. ಬೆಂಗಳೂರಿನ ರಾಷ್ಟ್ರೀಯ ತನಿಖಾ ದಳ(NIA) ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದ್ದು, ಕದ್ರಿ ದೇವಸ್ಥಾನ ಬ್ಲಾಸ್ಟ್ ಮಾಡಲು ಪ್ಲಾನ್ ಮಾಡಿದ್ರು ಎಂದು ಎನ್‍ಐಎ ಅಧಿಕೃತವಾಗಿ ದೋಷಾರೋಪ ಪಟ್ಟಿಯಲ್ಲಿ ಹೇಳಿಕೊಂಡಿದೆ.

    ಶಾರೀಖ್ (Shariq) ಮುಖಾಂತರ ಬ್ಲಾಸ್ಟ್ ಮಾಡಲು ಯತ್ನಿಸಿರೋದು ಬೆಳಕಿಗೆ ಬಂದಿದೆ. ಮಾಝ್, ಯಾಸಿನ್ ಮತ್ತು ಶಾರೀಖ್ ಸೇರಿದಂತೆ ಮೂವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಮೂವರು ಸೇರಿ ಆಗುಂಬೆ ಮತ್ತು ವರಾಹಿ ನದಿ ಬಳಿ ಟ್ರಯಲ್ ಬ್ಲಾಸ್ಟ್ ಮಾಡಿದ್ರು, ಟ್ರಯಲ್ ಬ್ಲಾಸ್ಟ್ ಮಾಡಿ ಜನ ಸಾಮಾನ್ಯರ ಸಾವು ನೋವಿನ ಬಗ್ಗೆ ಲೆಕ್ಕಾಚಾರ ಹಾಕಿದ್ರು, ಅಲ್ಲದೇ 25ಕ್ಕೂ ಹೆಚ್ಚು ಪ್ರಯತ್ನಗಳನ್ನು ಮಾಡಿದ್ರು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮಗಳನ್ನ ಏರ್‌ಪೋರ್ಟ್‌ಗೆ ಬಿಟ್ಟು ಬರುವಾಗ ಕಾರು ಪಲ್ಟಿ- ಇಬ್ಬರು ಸಾವು

    ಭಾರತವನ್ನು ಇಸ್ಲಾಮಿಕ್ ದೇಶವನ್ನಾಗಿ ಮಾಡೋದು ಉದ್ದೇಶ ಆಗಿತ್ತು, ಮೂವರು ಕೂಡ ಕ್ರಿಪ್ಟೋ ಕರೆನ್ಸಿ ಮೂಲಕ ವ್ಯವಹಾರ ನಡೆಸಿದ್ದಾರೆ, ಭಾರತದಲ್ಲಿ ವಿದ್ವಂಸಕ ಕೃತ್ಯ ನಡೆಸಲು ವಿದೇಶದಿಂದ ಹಣ ರವಾನೆ ಮಾಡುತ್ತಾ ಇದ್ದದ್ದು, ಅಲ್ಲದೇ ಆರೋಪಿ ಮಾಝ್ ಅಕೌಂಟ್‍ಗೆ 1 ಲಕ್ಷ 20 ಸಾವಿರ ಹಣ ಸಂದಾಯ ಮಾಡಲಾಗಿದೆ ಮತ್ತೋರ್ವ ಆರೋಪಿ ಸೈಯದ್ ಯಾಸಿನ್ ಅಕೌಂಟ್ 62 ಸಾವಿರ ಹಣ ಸಂದಾಯ ಮಾಡಲಾಗಿದೆ. ಸದ್ಯ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರೋ ಎನ್ ಐ ಎ ದೋಷಾರೋಪ ಪಟ್ಟಿಯಲ್ಲಿ ಎಲ್ಲಾ ಮಾಹಿತಿ ಉಲ್ಲೇಖ ಮಾಡಲಾಗಿದೆ.

  • ಕುಕ್ಕರ್ ಬಾಂಬ್ ಸ್ಫೋಟ ಕೇಸ್ – ಕದ್ರಿ ದೇವಸ್ಥಾನದ ಚಪ್ಪಲಿ ಸ್ಟ್ಯಾಂಡ್ ಶಾರೀಕ್ ಟಾರ್ಗೆಟ್!

    ಕುಕ್ಕರ್ ಬಾಂಬ್ ಸ್ಫೋಟ ಕೇಸ್ – ಕದ್ರಿ ದೇವಸ್ಥಾನದ ಚಪ್ಪಲಿ ಸ್ಟ್ಯಾಂಡ್ ಶಾರೀಕ್ ಟಾರ್ಗೆಟ್!

    ಬೆಂಗಳೂರು: ಕದ್ರಿ ದೇವಸ್ಥಾನವೇ (Kadri Temple) ಮಂಗಳೂರು (Mangaluru) ಕುಕ್ಕರ್ ಸ್ಫೋಟ (Cooker Bomb Blast) ಪ್ರಕರಣದ ಆರೋಪಿ ಶಾರೀಕ್‍ನ ಟಾರ್ಗೆಟ್ ಆಗಿತ್ತು ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ.

    ಹೌದು. ಮಂಗಳೂರಿನ ಪಂಪ್‍ವೆಲ್, ರೈಲ್ವೇ ನಿಲ್ದಾಣ, ಆರ್‌ಎಸ್‌ಎಸ್ ಕಚೇರಿ ಶಾರೀಕ್‍ನ (Shariq) ಟಾರ್ಗೆಟ್ ಆಗಿರಬಹುದು ಎಂದು ಈ ಮೊದಲು ಅಂದಾಜಿಸಲಾಗಿತ್ತು. ಆದರೆ ಈಗ ಕದ್ರಿ ದೇವಸ್ಥಾನವೇ ಆತನ ಟಾರ್ಗೆಟ್ ಆಗಿತ್ತು ಎಂಬ ವಿಚಾರ ರಾಷ್ಟ್ರೀಯ ತನಿಖಾ ದಳದ (NIA) ಮೂಲಗಳಿಂದ ತಿಳಿದು ಬಂದಿದೆ. ಇದನ್ನೂ ಓದಿ: ಜಿಲ್ಲಾಧಿಕಾರಿ ಕಚೇರಿಯಲ್ಲೇ ಮಕ್ಕಳ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

    ಎರಡೂವರೆ ತಿಂಗಳ ಚಿಕಿತ್ಸೆಯ ಬಳಿಕ ಶಾರೀಕ್ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಿಂದ ಮಾರ್ಚ್ 6 ರಂದು ಬಿಡುಗಡೆಯಾಗಿದ್ದ. ಸದ್ಯ ಎನ್‍ಐಎ ಕಸ್ಟಡಿಯಲ್ಲಿರುವ ಶಾರೀಕ್‍ನನ್ನು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಕದ್ರಿ ದೇವಸ್ಥಾನದ ಚಪ್ಪಲಿ ಸ್ಟ್ಯಾಂಡ್‍ನಲ್ಲಿ ಬಾಂಬ್ ಇಡಲು ಪ್ಲಾನ್ ಮಾಡಿದ್ದೆ ಎಂಬ ವಿಚಾರವನ್ನು ಶಾರೀಕ್ ತಿಳಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

    ಈಗ ಎನ್‍ಐಎ (NIA) ಅಧಿಕಾರಿಗಳು ಆರೋಪಿಯನ್ನು ಕರೆದೊಯ್ದು ಸ್ಥಳ ಮಹಜರು ಮಾಡಲು ಸಿದ್ದತೆ ನಡೆಸಿದ್ದಾರೆ. ಅದರ ಜೊತೆಯಲ್ಲಿ ಜೈಲಿನಲ್ಲಿರೋ ಮತ್ತಿಬ್ಬರು ಶಂಕಿತ ಉಗ್ರ ಮಾಜ್ ಹಾಗೂ ಯಾಸಿರ್‍ನನ್ನು ಕಸ್ಟಡಿಗೆ ಪಡೆಯುವ ನಿರ್ಧಾರ ಮಾಡಿದ್ದಾರೆ.

    ಮಂಗಳೂರು ಪ್ರಕರಣದ ವಿಚಾರಣೆಯ ಬಳಿಕ ಶಾರೀಖ್‍ನನ್ನು ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಸಂಬಂಧ ವಿಚಾರಣೆ ನಡೆಸಲಿದೆ. ಟ್ರಯಲ್ ಬ್ಲಾಸ್ಟ್ ಪ್ರಕರಣದಲ್ಲಿ ಇದುವರೆಗೂ ಎಂಟು ಜನರನ್ನು ಬಂಧಿಸಿರೋ ಎನ್‍ಐಎ ತಂಡ ವಿಚಾರಣೆ ಪೂರ್ಣಗೊಳಿಸಿ ಚಾರ್ಜ್ ಶೀಟ್ ಸಲ್ಲಿಸಲು ಸಿದ್ದತೆ ನಡೆಸಿದೆ. ವಿಚಾರಣೆ ವೇಳೆ ಬಂಧಿತ ಆರೋಪಿಗಳು ಶಾರೀಖ್ ಕೈವಾಡದ ಬಗ್ಗೆಯೂ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶಾರೀಖ್‍ಗೂ ಹಾಗೂ ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಸಂಬಂಧ ವಿಚಾರಣೆ ನಡೆಯಲಿದೆ. ನಂತರ ಮಾಜ್ ಹಾಗೂ ಯಾಸಿರ್‍ನನ್ನು ಭೇಟಿ ಮಾಡಿಸಲು ನಿರ್ಧರಿಸಿದೆ.

    ತನಿಖೆಯಲ್ಲಿ ಬೇರೆ ಬೇರೆ ಸ್ನೇಹಿತರ ಹೆಸರು, ವಿಳಾಸ ಬಳಸಿ ಅಮೆಜಾನ್ ಮೂಲಕ ಸ್ಪೋಟಕ ಕಚ್ಚ ವಸ್ತು ಖರೀದಿಸಿದ್ದಾಗಿ ತಿಳಿದು ಬಂದಿದೆ. ಆರೋಪಿ ಬಳಿ ಸಿಕ್ಕ ಪ್ರೇಮ್ ರಾಜ್ ಹೆಸರಿನ ನಕಲಿ ಆಧಾರ್ ಕಾರ್ಡ್ ವಿಳಾಸ ಸಹ ಸ್ಪೋಟಕ ಸಾಮಗ್ರಿ ಖರೀದಿಗೆ ಬಳಕೆ ಮಾಡಿದ್ದ ಎಂದು ಮೂಲಗಳು ತಿಳಿಸಿವೆ.

    ಅಮೇಜಾನ್ (Amazon) ಡೆಲಿವರಿ ಕೊಟ್ಟ ಬಳಿಕ ಸ್ಪೋಟಕ ವಸ್ತುಗಳು ನಾಲ್ಕೈದು ಕೈ ಬದಲಾಯಿಸಿ ಕೊನೆಗೆ ಶಾರೀಖ್‍ನನ್ನು ತಲುಪುತ್ತಿದ್ದ ವಿಚಾರವೂ ಈಗ ತನಿಖೆಯಿಂದ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮಠಕ್ಕೆ ಜಾಗ ನೀಡಿದ್ದು ಮುಸ್ಲಿಂ ರಾಜನಲ್ಲ, ದೊರೆ ರಾಮಭೋಜ ನೀಡಿದ್ದು- ಪೇಜಾವರ ಶ್ರೀ ಸ್ಪಷ್ಟನೆ

  • ಮಂಗಳೂರು ಕುಕ್ಕರ್‌ ಸ್ಫೋಟ ಕೇಸ್‌ – ಎರಡೂವರೆ ತಿಂಗಳ ಬಳಿಕ ಶಾರೀಕ್ ಡಿಸ್ಚಾರ್ಜ್‌

    ಮಂಗಳೂರು ಕುಕ್ಕರ್‌ ಸ್ಫೋಟ ಕೇಸ್‌ – ಎರಡೂವರೆ ತಿಂಗಳ ಬಳಿಕ ಶಾರೀಕ್ ಡಿಸ್ಚಾರ್ಜ್‌

    ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ (Mangaluru Cooker Bomb Blast) ಪ್ರಕರಣದ ಪ್ರಮುಖ ಆರೋಪಿ ಉಗ್ರ ಶಾರೀಕ್ (Mohammed Shariq) ಎರಡೂವರೆ ತಿಂಗಳ ಸತತ ಚಿಕಿತ್ಸೆ ನಂತರ  ಸೋಮವಾರ ಬಿಡುಗಡೆಯಾಗಿದ್ದಾನೆ.

    ಗಂಭೀರವಾಗಿ ಗಾಯಗೊಂಡಿದ್ದ ಉಗ್ರ ಶಾರೀಕ್ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ. ಆದರೆ ಸ್ಫೋಟದ ವೇಳೆ ಸುಟ್ಟಗಾಯಗಳಿಂದ ಗಂಭೀರವಾಗಿ ಗಾಯಗೊಂಡಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ಮಂಗಳೂರು, ಕೊಯಮತ್ತೂರಲ್ಲಿ ಸ್ಫೋಟ ಮಾಡಿದ್ದು ನಾವೇ- ಹೊಣೆ ಹೊತ್ತ ಐಎಸ್‍ಕೆಪಿ

    ಸತತ ಎರಡೂವರೆ ತಿಂಗಳು ಚಿಕಿತ್ಸೆ ಪಡೆದ ಶಾರೀಕ್, ಇಂದು ಆಸ್ಪತ್ರೆಯಿಂದ ಸಂಪೂರ್ಣ ಗುಣಮುಖವಾಗಿ ಡಿಸಾರ್ಜ್‌ ಆಗಿದ್ದಾನೆ. ಆಸ್ಪತ್ರೆಯಿಂದ ನೇರವಾಗಿ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಎನ್‌ಐಎ ವಿಶೇಷ ಕೋರ್ಟ್‌ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಹತ್ತು ದಿನಗಳ ಕಾಲ ಎನ್‌ಐಎ ಕಸ್ಟಡಿಗೆ ನೀಡಿದ್ದಾರೆ.

    ಮಂಗಳವಾರದಿಂದ ಅಧಿಕೃತವಾಗಿ ಸ್ಫೋಟದ ಬಗ್ಗೆ ಎನ್‌ಐಎ ಅಧಿಕಾರಿಗಳು ವಿಚಾರಣೆ ಶುರು ಮಾಡಲಿದ್ದಾರೆ. ವಿಚಾರಣೆ ನಂತರ ಮಂಗಳೂರು ಸೇರಿದಂತೆ ವಿವಿಧ ಜಾಗಗಳಲ್ಲಿ ಸ್ಥಳ ಮಹಜರು ಮಾಡಿ ಮತ್ತಷ್ಟು ತನಿಖೆ ಚುರುಕುಗೊಳಿಸಲು ಸಿದ್ಧತೆ ನಡೆದಿದೆ.

  • ಪ್ರವೀಣ್‌ ನೆಟ್ಟಾರು ಕೇಸ್‌- ಮೋಸ್ಟ್‌ ವಾಂಟೆಡ್‌ ಪಿಎಫ್‌ಐ ಸದಸ್ಯ ಅರೆಸ್ಟ್‌

    ಪ್ರವೀಣ್‌ ನೆಟ್ಟಾರು ಕೇಸ್‌- ಮೋಸ್ಟ್‌ ವಾಂಟೆಡ್‌ ಪಿಎಫ್‌ಐ ಸದಸ್ಯ ಅರೆಸ್ಟ್‌

    ಬೆಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ (Praveen Nettaru Murder case) ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಪರಾರಿಯಾಗಿದ್ದ ಮೋಸ್ಟ್‌ ವಾಂಟೆಡ್ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

    ಪಿಎಫ್‌ಐ (PFI) ಸದಸ್ಯ ಮಡಿಕೇರಿ ಮೂಲದ ತೌಫಿಲ್‌ನನ್ನು (Thufall) ಶನಿವಾರ ರಾತ್ರಿ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಬಂಧಿಸಲಾಗಿದೆ.

    ತೌಫಿಲ್‌ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಎನ್‌ಐಎ ಘೋಷಣೆ ಮಾಡಿತ್ತು. ಇದನ್ನೂ ಓದಿ: ನಮ್ಮ ಕಲ್ಲಿದ್ದಲಿನಿಂದ ಭಾರತದ ಮಂದಿಗೆ ವಿದ್ಯುತ್: ಅದಾನಿ ಪರ ಆಸ್ಟ್ರೇಲಿಯಾದ ಮಾಜಿ ಪ್ರಧಾನಿ ಬ್ಯಾಟಿಂಗ್

    ಏನಿದು ಪ್ರಕರಣ?
    ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ಅವರು ಜುಲೈ 26 ರಂದು ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು.

    ತಕ್ಷಣ ಪುತ್ತೂರು ಆಸ್ಪತ್ರೆಗೆ ಪ್ರವೀಣ್‌ ಅವರನ್ನು ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದ ಕಾರಣ ಚಿಕಿತ್ಸೆ ಫಲಕರಿಯಾಗದೇ ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಈವರೆಗೆ ಹಲವಾರು ಮಂದಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.