Tag: ಎನ್‍ಐಎ

  • ಧರ್ಮಸ್ಥಳ ಷಡ್ಯಂತ್ರ ಕೇಸನ್ನ ರಾಜ್ಯ ಸರ್ಕಾರವೇ NIA ಗೆ ಕೊಡಬೇಕು: ಆರ್‌.ಅಶೋಕ್‌ ಆಗ್ರಹ

    ಧರ್ಮಸ್ಥಳ ಷಡ್ಯಂತ್ರ ಕೇಸನ್ನ ರಾಜ್ಯ ಸರ್ಕಾರವೇ NIA ಗೆ ಕೊಡಬೇಕು: ಆರ್‌.ಅಶೋಕ್‌ ಆಗ್ರಹ

    – ಇದು ಮತಾಂತರ ಷಡ್ಯಂತ್ರ, ಇಲ್ಲ ಅಂದ್ರೆ ಸಾಬಿ ಸಮೀರ್ ಯಾಕೆ ಬರ್ತಾನೆ?: ವಿಪಕ್ಷ ನಾಯಕ ಪ್ರಶ್ನೆ

    ಬೆಂಗಳೂರು: ಧರ್ಮಸ್ಥಳ ಷಡ್ಯಂತ್ರ ಕೇಸನ್ನ ರಾಜ್ಯ ಸರ್ಕಾರವೇ NIA ಗೆ ಕೊಡಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಸರ್ಕಾರವನ್ನ ಆಗ್ರಹಿಸಿದರು.

    ಮಾಸ್ಕ್ ಮ್ಯಾನ್ ಬಂಧನ, ಸುಜಾತ ಭಟ್ ಹೇಳಿಕೆ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ಕೇಸ್ ಮೊದಲಿನಿಂದ ಷಡ್ಯಂತ್ರ ಅಂತ ನಾವು ಹೇಳಿದ್ವಿ. ಸರ್ಕಾರ ಅತುರದ ನಿರ್ಧಾರ ಮಾಡಿತು. ದೂರು ಕೊಟ್ಟವನ ಪೂರ್ವ ಪರಿತೆ ನೋಡದೆ, ಯೋಚನೆ ಮಾಡದೇ ಸಿಎಂ ಜೊತೆ ಇರುವ ಪ್ರಗತಿಪರರ ಮಾತು ಕೇಳಿ SIT ಮಾಡಿದ್ರು. SIT ತನಿಖೆಯಿಂದ ಬುರುಡೆ ಬಂತು ಅಷ್ಟೆ. ಸಿಎಂ ಕಾಮನ್‌ಸೆನ್ಸ್ ಉಪಯೋಗ ಮಾಡಬೇಕಿತ್ತು. ಧರ್ಮಸ್ಥಳದ ಭಕ್ತರ ಭಾವನೆಗೆ ನೋವು ಆಗಿದೆ. ಇದನ್ನ ಸಿದ್ದರಾಮಯ್ಯ ವಾಪಸ್ ಕೋಡೊಕೆ ಆಗುತ್ತಾ? ಈ ಸರ್ಕಾರದ್ದು ತಪ್ಪು ಅಂತ ಆಯ್ತು. ಮಾಸ್ಕ್ ಮ್ಯಾನ್ ಬಗ್ಗೆ ಮೊದಲೇ ತನಿಖೆ ಮಾಡಿದ್ರೆ ಮುಗಿದು ಹೋಗ್ತಿತ್ತು ಎಂದು ಸರ್ಕಾರದ ನಡೆ ಖಂಡಿಸಿದರು. ಇದನ್ನೂ ಓದಿ: ಇದು ಅಣ್ಣಪ್ಪ ಸ್ವಾಮಿಯ ಸತ್ಯ ದರ್ಶನ – ಹೆಗ್ಗಡೆ ಮಾತು ಮತ್ತೆ ವೈರಲ್

    ಅನನ್ಯ ಭಟ್ ಕೇಸ್ ಕೂಡಾ ಸುಳ್ಳು ಅಂತ ಗೊತ್ತಾಗಿದೆ. ಎಲ್ಲರೂ ದುಡ್ಡು ತಗೊಂಡು ಮಾಡಿದ್ದಾರೆ. ಮಾಸ್ಕ್ ಮ್ಯಾನ್ ಹಿಂದೆ ಇರೋನು ಸಮೀರ್. ಸಮೀರ್ ಸೂತ್ರಧಾರ. ಎಲ್ಲರನ್ನೂ ಜೊತೆಗಾರ ಮಾಡಿಕೊಳ್ತಾನೆ. ಪ್ರಗತಿಪರರ ಟೀಂ ಸೆಟಪ್ ಮಾಡಿಕೊಳ್ತಾನೆ. ಡ್ರಾಮಾ ಮಾಡೋಕೆ ಮಾಸ್ಕ್ ಮ್ಯಾನ್, ಅನನ್ಯ ಭಟ್ ಹುಡುಕುತ್ತಾರೆ. ತನಿಖೆ ಹೇಗೆ ಮಾಡಬೇಕು ಅಂತ ಅದನ್ನು ಇವರೇ ನಿರ್ಧಾರ ಮಾಡ್ತಾರೆ. ಭದ್ರತೆ ಕೊಡಬೇಕು ಅಂತ ಹೇಳ್ತಾರೆ. 25 ದಿನ ಸಿಎಂಗೂ ಇಷ್ಟು ಸೆಕ್ಯುರಿಟಿ ಇರಲಿಲ್ಲ. ಮಾಸ್ಕ್ ಮ್ಯಾನ್‌ಗೆ ಇತ್ತು. ಸಿಎಂಗಿಂತ ಹೈ ಸೆಕ್ಯುರಿಟಿ ಕೊಟ್ರು. ಯಾಕೆ ಕೊಟ್ರು? ಮಂಜುನಾಥನನ್ನ ಅವಹೇಳನ ಮಾಡಬೇಕು ಅನ್ನೋದು ಇವರ ಷಡ್ಯಂತ್ರ. ಇದು ಮತಾಂತರ ಷಡ್ಯಂತ್ರ. ಇಲ್ಲ ಅಂದರೆ ಸಾಬಿ ಸಮೀರ್ ಯಾಕೆ ಬರ್ತಾನೆ? ಧರ್ಮಸ್ಥಳದ ಬಗ್ಗೆ ಕೇಳೋಕೆ ಇವರು ಯಾರು ಅಂತ ಕಿಡಿಕಾರಿದರು.

    ಅನೇಕ ಕಡೆ ಮಸೀದಿ ಮೇಲೆ ದೂರು ಬಂದಿದೆ. ಯಾವುದಾದ್ರು ಮಸೀದಿ ಅಗೆದ್ರಾ? ಹಿಂದೂಗಳು ಟಾರ್ಗೆಟ್ ಮಾಡಬೇಕು. ಇದು ಸಿಎಂ, ಸಿಎಂ ಸಂಪುಟದ ಕೆಲಸ. ಡಿಕೆ ವೋಟ್‌ಬ್ಯಾಂಕ್‌ಗೆ ಮಾತಾಡ್ತಿದ್ದಾರೆ ಅಷ್ಟೆ. ಇಷ್ಟೆಲ್ಲಾ ಕೇಸ್ ಆಗೋಕೆ ಸಿಎಂ ಕಾರಣ. ಪೊಲೀಸರ ಕೆಲಸ ಬಿಟ್ಟು ಬುರುಡೆ ಹುಡುಕೋಕೆ ಬಿಟ್ರಿ. ತನಿಖೆಗೆ ಕೋಟ್ಯಂತರ ರೂಪಾಯಿ ಖರ್ಚು ಆಗಿದೆ. ಯಾರ್ ಕೊಡ್ತಾರೆ. ಬೆಟ್ಟ ಅಗೆದು ಇಲಿಯೂ ಸಿಗಲಿಲ್ಲ. ಕರ್ನಾಟಕದ ಇತಿಹಾಸದಲ್ಲಿ ಇಂತಹ ಪ್ರಹಸನ ಅಗಿರಲಿಲ್ಲ. ಕಾಂಗ್ರೆಸ್ ಪಕ್ಷ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಮುಸುಕುಧಾರಿ ಮುಖ್ಯ ಅಲ್ಲ, ಇದರ ಹಿಂದೆ ಇರೋರು ಯಾರು ಅಂತ ತನಿಖೆ ಆಗ್ಬೇಕು: ಅಶೋಕ್

    ಬಿಜೆಪಿ ಅವರು ಮೊದಲು ಮಾತಾಡಿಲ್ಲ ಅಂದರು‌‌. ನಾನೇ ಮಾತಾಡಿದ್ದೆ ಮೈಸೂರಿನಲ್ಲಿ. ತನಿಖೆ ಮಾಡಿ ಇದು ಷಡ್ಯಂತ್ರ ಅಂತ ಹೇಳಿದ್ದೆ. ಬಿಜೆಪಿ ಹೋರಾಟ ಮಾಡಿರಲಿಲ್ಲ ಅಂದರೆ ಬುರುಡೆ ತಂದು ಇದೇ ನಿಜ ಅಂತ ಮಾಡೋರು. ನಾವು ಹೋರಾಟ ಮಾಡಿದ್ದಕ್ಕೆ ಇದು ಇಲ್ಲಿಗೆ ಬಂದು ನಿಂತಿದೆ. ಧರ್ಮಸ್ಥಳಕ್ಕೆ ಕಾಂಗ್ರೆಸ್ ಪಕ್ಷ ಮೋಸ ಮಾಡಿದೆ. ಮಾಸ್ಕ್ ಮ್ಯಾನ್ ಬಗ್ಗೆ ಅಸೆಂಬ್ಲಿಯಲ್ಲಿ ನಾನು ಹೇಳಿದ್ದೆ. ಅವನಿಗೆ ಅಮಿಷ ಒಡ್ಡಿದ್ದಾರೆ ಅಂತ. ಈಗ ಬಂಧನ ಆಗಿದೆ. ಮಾಸ್ಕ್ ಮ್ಯಾನ್ ‌ನೋಡಿದ್ರೆ ಪಾಪ ಅನ್ನಿಸುತ್ತೆ. ಮುಸುಕುಧಾರಿ ಮುಖ್ಯ ಅಲ್ಲ. ಇದರ ಹಿಂದೆ ಇರೋರು ಯಾರು ಅಂತ ತನಿಖೆ ಆಗಬೇಕು. ಇವರ ಹಿಂದೆ ಯಾರು ಇದ್ದಾರೆ ಅಂತ ತಿಳಿಯೋಕೆ SIT ಮಾಡಿ. ಕಾಂಗ್ರೆಸ್, ಸಿದ್ದರಾಮಯ್ಯ, ಡಿಕೆಶಿಗೆ ಸತ್ಯ ಹೊರ ಬರೋ ಮನಸು ಇದ್ದರೆ SIT ತನಿಖೆ ಮಾಡಿ. NIA ತನಿಖೆಗೆ ಕೊಡಿ ಎಂದು ಒತ್ತಾಯಿಸಿದರು.

    ಇವರು NIA ಗೆ ಕೊಡಲಿಲ್ಲ ಅಂದರೆ ಕಾಂಗ್ರೆಸ್ ಪಾತ್ರ ಇದೆ ಅಂತ ಗೊತ್ತಾಗುತ್ತದೆ. ಅನನ್ಯ ಭಟ್ ಕಳೆದು ಹೋಗಿದ್ದಾಳೆ ಅಂತ ತನಿಖೆ ಮಾಡಿದ್ರೆ ಗೊತ್ತಾಗೋದು. ಪೊಲೀಸರು ತನಿಖೆ ಮಾಡಿಲ್ಲ. ಈ ಸರ್ಕಾರ ಪೊಲೀಸರ ಕೈ ಕಟ್ಟಿ ಹಾಕಿದ್ರು. ಕೇವಲ ಬುರುಡೆ ಹುಡುಕಿ ಅಂತ ಬಿಟ್ಟಿದ್ರು. ಬಂಧನ ಮಾಡಿದ್ರೆ ಸಾಲದು, ಇದರ ಹಿಂದೆ ಇರೋರ ಬಯಲಿಗೆ ಎಳೆಯಬೇಕು. ಈ ದೇಶದಲ್ಲಿ ಇರೋನು ಮಾಡಿರೋದಾ? ಬೇರೆ ದೇಶದಲ್ಲಿ ಇರೋನು ಮಾಡಿರೋದಾ? ತನಿಖೆ ಆಗಲಿ. ಇದು ಲವ್ ಜಿಹಾದ್ ತರಹ ಮತಾಂತರ ಜಿಹಾದ್. SIT ಆಗಲಿ ಇಲ್ಲ. NIA ತನಿಖೆಗೆ ಕೊಡಿ. ರಾಜ್ಯ ಸರ್ಕಾರವೇ NIA ಗೆ ಕೊಟ್ಟು ಬಿಡಲಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ತಮಿಳುನಾಡಿನಲ್ಲಿ ಹಣದ ಆಮಿಷವೊಡ್ಡಿ ಧರ್ಮಸ್ಥಳಕ್ಕೆ ಕರೆಸಿದ್ದರು: ಸತ್ಯ ಕಕ್ಕಿದ ಚಿನ್ನಯ್ಯ

  • ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶದಿಂದ ಫಂಡಿಂಗ್‌ – ಭರತ್ ಶೆಟ್ಟಿ ಬಾಂಬ್‌

    ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶದಿಂದ ಫಂಡಿಂಗ್‌ – ಭರತ್ ಶೆಟ್ಟಿ ಬಾಂಬ್‌

    – ಸೌಜನ್ಯ ಪ್ರಕರಣ ಮರು ತನಿಖೆಯಾಗಲಿ ಎಂದ ಬಿಜೆಪಿ ಶಾಸಕ

    ಬೆಂಗಳೂರು: ಧರ್ಮಸ್ಥಳ (Dharmasthala) ವಿರುದ್ಧ ಷಡ್ಯಂತ್ರಕ್ಕೆ ವಿದೇಶಿ ಹಣ ಬಳಕೆ ಆಗಿದೆ ಅನ್ನೋದು ನಮ್ಮ ಗುಮಾನಿ ಎಂದು ಶಾಸಕ ಡಾ.ಭರತ್ ಶೆಟ್ಟಿ (Bharath Shetty) ಹೇಳಿದ್ದಾರೆ.

    ವಿಧಾನಸೌಧ ಆವರಣದಲ್ಲಿ ʻಪಬ್ಲಿಕ್‌ ಟಿವಿʼ (Public TV- ಜೊತೆಗೆ ಮಾತನಾಡಿದ ಅವರು, ಇಡಿ ಅಥವಾ ಎನ್‌ಐಎ ತನಿಖೆಗೆ ಸಾಕಷ್ಟು ಒತ್ತಾಯ ಕೇಳಿಬರ್ತಿದೆ. ನಮ್ಮ ಕೋಟಾ ಶ್ರೀನಿವಾಸ ಪೂಜಾರಿ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶಿ ಹಣ (Foreign Fund) ಬಳಕೆ ಆಗಿದೆ ಅನ್ನೋದು ನಮ್ಮ ಗುಮಾನಿ. ಕೆಲವು ನಂಬಲರ್ಹ ಮೂಲಗಳಿಂದ ಫಾರಿನ್ ಫಂಡ್ ಬಂದಿದೆ ಅಂತ ನಮಗೆ ಮಾಹಿತಿ ಬಂದಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ – ʻಕೈʼ ಸಂಸದ ಸಸಿಕಾಂತ್ ಸೆಂಥಿಲ್ ಫಸ್ಟ್‌ ರಿಯಾಕ್ಷನ್‌

    ಎನ್ಐಎ (NIA) ಅಥವಾ ಇಡಿ ತನಿಖೆಯಾದ್ರೆ ಯಾರೆಲ್ಲರ ಬ್ಯಾಂಕ್ ಖಾತೆಗಳಿಗೆ ಎಷ್ಟೆಲ್ಲ ಹಣ ಎಲ್ಲೆಲ್ಲಿಂದ ಬಂದಿದೆ ಅನ್ನೋದು ಗೊತ್ತಾಗುತ್ತೆ. ಈಗಾಗಲೇ ಷಡ್ಯಂತ್ರ ಇದೆ ಅಂತ ನಾವೂ ಹೇಳ್ತಿದೀವಿ, ಕಾಂಗ್ರೆಸ್‌ನವ್ರೂ ಹೇಳ್ತಿದ್ದಾರೆ. ಆದ್ದರಿಂದ ಇಡಿ ಅಥವಾ ಎನ್‌ಐಎ ತನಿಖೆಗೆ ಕೊಡಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಎಂಟಿಸಿ ಬಸ್ಸು ಹತ್ತುವ ವೇಳೆ ಬಾಗಿಲು ಬಂದ್‌- ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಸಾವು

    ಇನ್ನೂ ಸೌಜನ್ಯ ಪ್ರಕರಣದಲ್ಲೂ ನ್ಯಾಯ ಸಿಗಬೇಕು. ಕೆಲವರು ಸೌಜನ್ಯ ಹತ್ಯೆ ಬಗ್ಗೆ ದಾಖಲೆ ಇದೆ, ಅಂತಾರಲ್ಲ ಅವರು ಎಸ್ಐಟಿಗೆ ಅದನ್ನು ಕೊಡಲಿ. ಎಸ್ಐಟಿ ಅವರಿಗೆ ಸೌಜನ್ಯ ಕೇಸ್ ತನಿಖೆ ಮಾಡಲು ಅವಕಾಶ ಇದ್ರೆ ತನಿಖೆ ಮಾಡಲಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅನಾಮಿಕ ವ್ಯಕ್ತಿಯ ಮಂಪರು ಪರೀಕ್ಷೆ ಆಗದೇ ತಿಮರೋಡಿ ಬಂಧನವಾಗದೇ ತನಿಖೆ ನಡೆಯಬಾರದು: ಮಾಜಿ ಸಚಿವ ಅಭಯಚಂದ್ರ ಜೈನ್

    ನ್ನೂ ಧರ್ಮಸ್ಥಳ ಪ್ರಕರಣದಲ್ಲಿ ಸಂಸದ ಸಸಿಕಾಂತ್ ಸೆಂಥಿಲ್ ಹೆಸರೂ ಇದರಲ್ಲಿ ಕೇಳಿಬರ್ತಿದೆ. ಸೆಂಥಿಲ್, ಸ್ಟಾಲಿನ್ ಅವರಿಗೆ ಮೆಸೇಂಜರ್ ಆಗಿದ್ದಾರೆ. ಅವರು ಹಿಂದೂ ಧರ್ಮದ ವಿರುದ್ಧ ಹಲವು ಕಡೆ ಭಾಷಣ ಮಾಡಿದ್ದಾರೆ. ಧರ್ಮಸ್ಥಳ ವಿಚಾರದಲ್ಲೂ ಅವರ ಪಾತ್ರ ಇರುವ ಅನುಮಾನ ಇದೆ. ಎನ್ಐಎ ತನಿಖೆ ನಡೆದರೆ ಈ ವಿಚಾರವನ್ನೂ ತನಿಖೆ ಮಾಡಲಿ ಎಂದು ಆಗ್ರಹಿಸಿದ್ದಾರೆ.   

  • ಗವಿಸಿದ್ದಪ್ಪ ಕೊಲೆ ಪ್ರಕರಣ ಎನ್‌ಐಎಗೆ ವಹಿಸಿ – ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು

    ಗವಿಸಿದ್ದಪ್ಪ ಕೊಲೆ ಪ್ರಕರಣ ಎನ್‌ಐಎಗೆ ವಹಿಸಿ – ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು

    ಬೆಂಗಳೂರು: ಕೊಪ್ಪಳದಲ್ಲಿ (Koppal) ಎಸ್‌ಟಿ ಸಮುದಾಯದ ಯುವಕ ಗವಿಸಿದ್ದಪ್ಪ ಮರ್ಡರ್ ಕೇಸ್ (Gavisiddappa Murder Case) ತನಿಖೆಯ ಜವಾಬ್ದಾರಿಯನ್ನು ಎನ್‌ಐಎಗೆ (NIA) ವಹಿಸುವಂತೆ ಆಗ್ರಹಿಸಿ ಬಿಜೆಪಿ (BJP) ನಿಯೋಗ ರಾಜ್ಯಪಾಲರಲ್ಲಿ ಮನವಿ ಮಾಡಿದೆ.

    ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಆರ್ ಅಶೋಕ್, ಸಿ.ಟಿ ರವಿ ಹಾಗೂ ಕೊಲೆಯಾದ ಗವಿ ಸಿದ್ದಪ್ಪ ಪೋಷಕರು, ಮಗನ ಕೊಲೆಗೆ ನ್ಯಾಯ ಕೊಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಮಗನ ಸಾವಿಗೆ ಸರ್ಕಾರ ನ್ಯಾಯ ಕೊಡಿಸುತ್ತೆ ಅನ್ನೋ ನಂಬಿಕೆ ಇಲ್ಲ. ಹಾಗಾಗಿ ಪ್ರಕರಣದ ತನಿಖೆಯ ಜವಾಬ್ದಾರಿ ಎನ್‌ಐಎಗೆ ಕೊಟ್ಟು ನ್ಯಾಯಕೊಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಸುಪ್ರೀಂ ಕೋರ್ಟ್ ಆವರಣದಲ್ಲೇ ಶ್ವಾನ ಪ್ರಿಯನ ಕೆನ್ನೆಗೆ ಬಾರಿಸಿದ ಲಾಯರ್‌

    ಬಳಿಕ ಮಾತನಾಡಿದ ವಿಜಯೇಂದ್ರ, ಕೊಲೆಯಾದ ಯುವಕನ ಕುಟುಂಬಕ್ಕೆ 50 ಲಕ್ಷ ಪರಿಹಾರ, ಎರಡು ಎಕರೆ ಜಮೀನು, ಮನೆಯಲ್ಲಿ ಒಬ್ಬರಿಗೆ ಸರ್ಕಾರಿ ಕೆಲಸ ಕೊಡಿಸುವ ಕೆಲಸ ಸರ್ಕಾರ ಮಾಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು. ಇದನ್ನೂ ಓದಿ: ಈಚೆಗಷ್ಟೇ ಆರಂಭವಾದ ಯೆಲ್ಲೋ ಲೈನ್‌ ಮೆಟ್ರೋ – ರೈಲು ಮಿಸ್‌ ಮಾಡಿಕೊಂಡ ಪ್ರಯಾಣಿಕನಿಗೆ ಬಿತ್ತು ದಂಡ!

    ಆರ್ ಅಶೋಕ್ ಮಾತನಾಡಿ, ಗವಿಸಿದ್ದಪ್ಪ ನಾಯಕ್ ಕೊಲೆ ಕೇಸ್ ಎನ್‌ಐಎಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ ಬಂದ ದಿನದಿಂದ ಹಿಂದೂ ಕಾರ್ಯಕರ್ತರ ಕೊಲೆಗಳು ನಡೆಯುತ್ತಿವೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆಟೋ ಚಾಲಕನ ಕೊಲೆಗೈದು ಮೂಟೆ ಕಟ್ಟಿ ಎಸೆದ ಪ್ರಕರಣ – ಆರೋಪಿ ಪತ್ನಿ, ಪುತ್ರ, ಪ್ರಿಯಕರ ಅರೆಸ್ಟ್

  • ಸುಹಾಸ್ ಶೆಟ್ಟಿ ಹತ್ಯೆ ಕೇಸ್ – ಬಜಪೆ, ಸುರತ್ಕಲ್‌ನ 14 ಕಡೆ ಎನ್‌ಐಎ ದಾಳಿ

    ಸುಹಾಸ್ ಶೆಟ್ಟಿ ಹತ್ಯೆ ಕೇಸ್ – ಬಜಪೆ, ಸುರತ್ಕಲ್‌ನ 14 ಕಡೆ ಎನ್‌ಐಎ ದಾಳಿ

    ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ (Suhas Shetty  Murder Case) ಸಂಬಂಧಿಸಿದಂತೆ ಮಂಗಳೂರಿನ (Mangaluru) ಬಜಪೆ ಹಾಗೂ ಸುರತ್ಕಲ್‌ನ 14 ಕಡೆ ಎನ್‌ಐಎ (NIA) ದಾಳಿ ನಡೆಸಿದೆ.

    ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ 10 ಕಡೆ, ಸುರತ್ಕಲ್ (Surathkal) ಪೊಲೀಸ್ ಠಾಣಾ ವ್ಯಾಪ್ತಿಯ 4 ಕಡೆ ಎನ್‌ಐಎ ದಾಳಿ ಮಾಡಿದೆ. ಕೊಲೆ ಆರೋಪಿಗಳು ಹಾಗೂ ಎಸ್‌ಡಿಪಿಐ ಮುಖಂಡರ ಮನೆಗೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: ಇಡೀ ರಾಷ್ಟ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ: ಬಿ.ಕೆ ಹರಿಪ್ರಸಾದ್‌ ಬಾಂಬ್‌

    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಿಷೇಧಿತ ಸಂಘಟನೆ ಪಿಎಫ್‌ಐ ಕಾರ್ಯಕರ್ತರು ಶಾಮೀಲಾಗಿರುವ ಆರೋಪ ಕೇಳಿಬಂದಿದೆ. ಇದರಿಂದಾಗಿ ಈ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಇಲಾಖೆ ಎನ್‌ಐಎ ತನಿಖೆಗೆ ವಹಿಸಿತ್ತು. ಇದನ್ನೂ ಓದಿ: ಹಿಮಾಚಲ ಪ್ರದೇಶ | ಭಾರೀ ಮಳೆಯಿಂದ ನೀರಿನ ಮಟ್ಟ ದಿಢೀರ್‌ ಏರಿಕೆ – ಡ್ಯಾಂ ಕುಸಿತ

    ಮೇ 1 ರಂದು ಫಾಜಿಲ್ ಹತ್ಯೆಯ ಆರೋಪಿ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆಗೆ ದೇಶ, ವಿದೇಶಗಳಿಂದ ಫಂಡಿಂಗ್ ಆಗಿದೆ. ರಾಜ್ಯದ ಪೊಲೀಸ್ ಇಲಾಖೆಯಿಂದ ನಿಸ್ಪಕ್ಷಪಾತವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಎನ್‌ಐಎಗೆ ಒಪ್ಪಿಸಬೇಕೆಂದು ಆಗ್ರಹಿಸಿ ಬಿಜೆಪಿ, ಸೇರಿದಂತೆ ಹಿಂದೂಪರ ಕಾರ್ಯರ್ತರು ಆಗ್ರಹಿಸಿದ್ದರು. ಸುಹಾಸ್ ಶೆಟ್ಟಿ ಹತ್ಯೆ ಕೇಸ್‌ನಲ್ಲಿ ಈಗಾಗಲೇ ಪೊಲೀಸರು 11 ಮಂದಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕ ಬಾವಿಯಲ್ಲಿ ಶವವಾಗಿ ಪತ್ತೆ

  • ಕೆಜಿ ಹಳ್ಳಿಯಲ್ಲಿ ಬೆಂಕಿ ಇಟ್ಟ ಮೂವರಿಗೆ 7 ವರ್ಷ ಜೈಲು ಶಿಕ್ಷೆ

    ಕೆಜಿ ಹಳ್ಳಿಯಲ್ಲಿ ಬೆಂಕಿ ಇಟ್ಟ ಮೂವರಿಗೆ 7 ವರ್ಷ ಜೈಲು ಶಿಕ್ಷೆ

    ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ (DJ Halli, KG Halli) ಪೊಲೀಸ್ ಠಾಣೆಗೆ ಬೆಂಕಿ ಇಟ್ಟ ಪ್ರಕರಣ ಸಂಬಂಧ ಮೂವರು ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಎನ್‌ಐಎ (NIA) ವಿಶೇಷ ನ್ಯಾಯಾಲಯ ಆದೇಶ ನೀಡಿದೆ.‌

    ಪಿ.ಪ್ರಸನ್ನ ಕುಮಾರ್

    2020 ಆಗಸ್ಟ್ 12ರಂದು ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದಿದ್ದ ಗಲಭೆ ಸಂಬಂಧ 187 ಆರೋಪಿಗಳನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದರು. ಪ್ರತ್ಯೇಕ ಪ್ರಕರಣ ವಿಚಾರಣೆಯಲ್ಲಿ ಮೂವರು ಅಪರಾಧಿಗಳು ದೋಷಿಗಳೆಂದು ಎನ್‌ಐಎ ಕೋರ್ಟ್ ತೀರ್ಪು ನೀಡಿದೆ. ಸೈದ್ ಇಕ್ರಾಮುದ್ದೀನ್, ಸೈಯದ್ ಆಸೀಫ್, ಮಹಮ್ಮದ್ ಆಸೀಫ್‌ಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಇದನ್ನೂ ಓದಿ: Gujarat | ಅಲ್-ಖೈದಾ ಸಂಘಟನೆಯೊಂದಿಗೆ ನಂಟು ಹೊಂದಿದ್ದ ನಾಲ್ವರು ಉಗ್ರರ ಬಂಧನ

    ಇನ್ನು ಅಪರಾಧಿಗಳು ನಿಷೇಧಿತ ಪಿಎಫ್‌ಐ ಸಂಘಟನೆಯಲ್ಲಿ ಸಕ್ರಿಯ ಕಾರ್ಯಕರ್ತರಾಗಿದ್ದರೆಂದು ಎನ್‌ಐಎ ತಮ್ಮ ವಾದದಲ್ಲಿ ಮಂಡನೆ ಮಾಡಿತ್ತು. ವಾದವನ್ನು ಒಪ್ಪಿದ ನ್ಯಾಯಾಲಯ ಆಪಾದಿತರಿಗೆ ಪಿಎಫ್‌ಐ ನಂಟಿದೆ ಎಂಬುದನ್ನು ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಎನ್‌ಐಎ ಪರವಾಗಿ ಹಿರಿಯ ವಕೀಲ ಪಿ. ಪ್ರಸನ್ನಕುಮಾರ್ ವಾದ ಮಂಡನೆ ಮಾಡಿದ್ದರು. ಇದನ್ನೂ ಓದಿ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 2020 ರಿಂದ ಇಲ್ಲಿಯವರೆಗೆ 343 ಬಾರಿ ಪಕ್ಷಿಗಳು ಡಿಕ್ಕಿ

  • ಉಗ್ರರಿಗೆ ನೆರವು ನೀಡಿದ್ದ ಕೇಸ್‌ – ಎಎಸ್‌ಐ ಚಾಂದ್ ಪಾಷಾ ವಿರುದ್ಧ ಇಲಾಖೆ ಹಂತದ ತನಿಖೆಗೆ ಆದೇಶ

    ಉಗ್ರರಿಗೆ ನೆರವು ನೀಡಿದ್ದ ಕೇಸ್‌ – ಎಎಸ್‌ಐ ಚಾಂದ್ ಪಾಷಾ ವಿರುದ್ಧ ಇಲಾಖೆ ಹಂತದ ತನಿಖೆಗೆ ಆದೇಶ

    – ವಿದೇಶದಿಂದಲೇ ಸ್ಕೇಚ್ ರೆಡಿ ಮಾಡಿದ್ದ ಶಂಕಿತ ಝನೈದ್
    – ಪ್ಲಾನ್-ಬಿ ಟೀಂ ಬೆನ್ನುಬಿದ್ದ ಎನ್‌ಐಎ ಅಧಿಕಾರಿಗಳು

    ಬೆಂಗಳೂರು: ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ಮೂವರು ಶಂಕಿತರನ್ನು ಬಂಧನ ಮಾಡಿದ ಬೆನ್ನಲ್ಲೇ ಹಲವು ವಿಚಾರಗಳು ಒಂದೊಂದೇ ಹೊರಗೆ ಬರ್ತಿವೆ.

    ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿರುವ ಉಗ್ರ (Terrorist) ನಾಸೀರ್‌ನನ್ನ ಜೈಲಿನಿಂದ ಎಸ್ಕೇಪ್ ಮಾಡಿಸಲು ಪ್ಲ್ಯಾನ್‌ ಮಾಡಿದ್ದ ಟೀಂ, ಕಳೆದ ಎರಡು ವರ್ಷಗಳ ಹಿಂದೆ ಸಿಸಿಬಿ ಕೈಗೆ ಸಿಕ್ಕಿಬಿದ್ದಿದ್ರು. ಈ ವೇಳೆ ಕೃತ್ಯಕ್ಕೆ ಬಳಸಲು ರೆಡಿ ಮಾಡಿದ್ದ ಹಲವು ಸ್ಟೋಟಕಗಳನ್ನ ಬಯಲಿಗೆಳೆದಿದ್ದರು. ಇದರಿಂದ ಶಾಕ್‌ಗೆ ಒಳಗಾದ ಝನೈದ್, ನಾಸೀರ್ ನನ್ನು ಏನಾದ್ರು ಮಾಡಿ ಹೊರಗೆ ತರಲೇಬೇಕು ಅಂತ ವಿದೇಶದಿಂದಲೇ ಪ್ಲಾನ್-ಬಿ ತಯಾರು ಮಾಡಿದ್ನಂತೆ.

    ಎಎಸ್‌ಐ ಚಾಂದ್ ಪಾಷ, ಸೇರಿದಂತೆ ಹಲವರನ್ನ ಬಳಸಿಕೊಂಡು ಆಸಕ್ತ ಮುಸ್ಲಿಂ ಯುವಕರ ಟೀಂ ಕಟ್ಟುವಂತೆ ಸೂಚಿಸಿದ್ದ. ಅಷ್ಟೇ ಅಲ್ದೇ ಅದಕ್ಕೆ ಬೇಕಾದ ಹಣಕಾಸಿನ ನೆರವು ಕೂಡ ಅಲ್ಲಿಂದಲೇ ಮಾಡ್ತಿದ್ದ ಅನ್ನೋದು ಗೊತ್ತಾಗಿದೆ. ಅಷ್ಟರಲ್ಲಿ ಎನ್‌ಐಎ ಅಧಿಕಾರಿಗಳ ಕೈಗೆ ಮೂವರು ಸಿಕ್ಕಿಬಿದ್ದಿದ್ದಾರೆ, ಕೆಲವರು ಮಾತ್ರ ಎಸ್ಕೇಪ್‌ ಆಗಿದ್ದಾರೆ. ಝನೈದ್‌ನ ಹುಡುಗರೆಲ್ಲಾ ಬಹುತೇಕ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇರೋದರಿಂದ ಹೊಸದಾಗಿ ಆಸಕ್ತ ಯುವಕರನ್ನು ಒಟ್ಟುಗೂಡಿಸಿರೋ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿದೆ. ಹಾಗಾಗಿ ಇವರ ಪ್ಲ್ಯಾನ್‌-ಬಿ ಏನಾಗಿತ್ತು? ಇದರಲ್ಲಿ ಯರ‍್ಯಾರು ಇದ್ರು, ಯಾರ ಪಾತ್ರ ಏನಾಗಿತ್ತು? ಅನ್ನೋದರ ತೀವ್ರ ತನಿಖೆಗೆ ಇಳಿದಿದ್ದಾರೆ ಎನ್‌ಐಎ ಅಧಿಕಾರಿಗಳು..

    ಎಎಸ್‌ಐ ಚಾಂದ್ ಪಾಷಾ ವಿರುದ್ಧ ತನಿಖೆಗೆ ಆದೇಶ:
    ಇನ್ನೂ ಉಗ್ರರಿಗೆ ನೆರವು ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಆರ್ ಎಎಸ್‌ಐ ಚಾಂದ್ ಪಾಷಾ (ASI Chand Pasha) ವಿರುದ್ಧ ತನಿಖೆಗೆ ಪೊಲೀಸ್‌ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ. ಇಲಾಖಾ ಹಂತದಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದಾರೆ.

    ಎನ್‌ಐಎ ಈಗಾಗಲೇ ತನಿಖೆ ನಡೆಸುತ್ತಿದೆ, ಮುಂದೆ ನಾವು ಕೂಡ ತನಿಖೆ ಮಾಡಿ ರಿಪೋರ್ಟ್‌ ಪಡೆಯುತ್ತೇವೆ. ಬಳಿಕ ಪೊಲೀಸ್ ಇಲಾಖೆಯಲ್ಲಿ ಏನ್ ಕ್ರಮ ಇದೆ ಅದನ್ನ ಕೈಗೊಳ್ತೀವಿ ಎಂದು ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

  • ಫಿಲ್ಮ್‌ ಸ್ಟೈಲ್‌ ಬಾಂಬ್‌ ಸ್ಫೋಟಿಸಿ ಜೈಲಿನಲ್ಲಿರುವ ಉಗ್ರ ನಾಸೀರ್‌ ಬಿಡುಗಡೆ ಪ್ಲ್ಯಾನ್‌ – ಶಾಕಿಂಗ್‌ ಸಂಚು ಬಯಲು

    ಫಿಲ್ಮ್‌ ಸ್ಟೈಲ್‌ ಬಾಂಬ್‌ ಸ್ಫೋಟಿಸಿ ಜೈಲಿನಲ್ಲಿರುವ ಉಗ್ರ ನಾಸೀರ್‌ ಬಿಡುಗಡೆ ಪ್ಲ್ಯಾನ್‌ – ಶಾಕಿಂಗ್‌ ಸಂಚು ಬಯಲು

    – ಬಂಧಿತರನ್ನು ತೀವ್ರ ವಿಚಾರಣೆ ನಡೆಸುತ್ತಿರುವ ಎನ್‌ಐಎ
    – ದಾಳಿ ನಡೆಸಿ ಉಗ್ರರ ಯೋಜನೆ ವಿಫಲಗೊಳಿಸಿದ್ದ ಸಿಸಿಬಿ

    ಬೆಂಗಳೂರು: ಬಾಂಬ್‌ ಸ್ಫೋಟಿಸಿ (Bomb Blast) ಸಿನಿಮಾ ಸ್ಟೈಲ್‌ನಲ್ಲಿ ಪರಪ್ಪನ ಅಗ್ರಹಾರದಿಂದ (Parappana Agrahara) ಪರಾರಿಯಾಗಲು ಟಿ ನಾಸೀರ್‌ (T Nasir) ಮುಂದಾಗಿದ್ದ ಸ್ಫೋಟಕ ವಿಚಾರ ರಾಷ್ಟ್ರೀಯ ತನಿಖಾ ದಳದ (NIA) ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.

    ಹೌದು. 2008ರ ಬೆಂಗಳೂರು ಸ್ಫೋಟದಲ್ಲಿ (Bengaluru Blast) ಜೈಲುಪಾಲಾಗಿರುವ ಲಷ್ಕರ್‌ ಸಂಘಟನೆಯ ಉಗ್ರ ನಾಸೀರ್‌ ಮುಸ್ಲಿಂ ಯುವಕರ ತಂಡ ಬಳಸಿ ಹೊರ ಬರಲು ಖತರ್ನಾಕ್‌ ಪ್ಲ್ಯಾನ್‌ ಮಾಡಿದ್ದ ವಿಚಾರ ಎನ್‌ಐಎ ಮೂಲಗಳಿಂದ ತಿಳಿದು ಬಂದಿದೆ.

    ಏನಿದು ಯೋಜನೆ?
    ಸದ್ಯದ ಪರಿಸ್ಥಿತಿಯಲ್ಲಿ ಹೊರ ಬರಲು ಸಾಧ್ಯವಿಲ್ಲ ಎಂಬುದನ್ನು ಅರಿತಿದ್ದ ನಾಸೀರ್‌ ಜೈಲಿನಲ್ಲೇ ಪ್ಲ್ಯಾನ್‌ ಮಾಡಿದ್ದ. ಪ್ರಕರಣ ಸಂಬಂಧ ನಾಸೀರ್‌ನನ್ನು ಜೈಲಿನಿಂದ ಹಲವು ಬಾರಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗಲಾಗುತ್ತಿತ್ತು. ಈ ಜೈಲಿನಿಂದ ನ್ಯಾಯಾಲಯಕ್ಕೆ ಹೋಗುವಾಗ ಬಾಂಬ್‌ ಸ್ಫೋಟಿಸಲು ಸಂಚು ರೂಪಿಸಿದ್ದ. ಬಾಂಬ್‌ ಸ್ಫೋಟಗೊಂಡಾಗ ಪೊಲೀಸರ ಗಮನ ಬೇರೆಡೆ ಹೋಗುತ್ತದೆ. ಈ ವೇಳೆ ಪರಾರಿಯಾಗಬಹುದು ಎಂಬ ಲೆಕ್ಕಾಚಾರವನ್ನು ನಾಸೀರ್‌ ಹಾಕಿಕೊಂಡಿದ್ದ. ಇದನ್ನೂ ಓದಿ: ಜೈಲಲ್ಲಿರೊ ಉಗ್ರ ನಾಸೀರ್‌ಗೆ ಮನೋವೈದ್ಯನಿಂದ ಮೊಬೈಲ್ ಸಪ್ಲೈ ಶಂಕಿತ ಉಗ್ರರು 6 ದಿನ ಎನ್ಐಎ ಕಸ್ಟಡಿಗೆ

    ಈ ಸಂಚು ರೂಪಿಸಲು ಎಎಸ್‌ಐ ಚಾಂದ್‌ ಪಾಷಾ ನೆರವು ನೀಡುವುದಾಗಿ ಹೇಳಿದ್ದ. ಸಿಎಆರ್ ಉತ್ತರ ವಿಭಾಗದಲ್ಲಿರುವ ಚಾಂದ್‌ ಪಾಷಾ ನಾಸೀರ್‌ನನ್ನು ಬೆಂಗಳೂರು, ಕೇರಳ ಹಾಗೂ ಇತರೇ ರಾಜ್ಯಗಳ ಕೋರ್ಟ್‌ಗೆ ಕರೆದೊಯ್ಯುವ ಮಾಹಿತಿಯನ್ನು ಸಂಘಟನೆಯ ಕೆಲವು ವ್ಯಕ್ತಿಗಳು ಹಾಗೂ ಮುಂಗಡವಾಗಿ ಟಿ.ನಾಸೀರ್‌ಗೂ ನೀಡುತ್ತಿದ್ದ. ಇದಕ್ಕಾಗಿ ಚಾಂದ್‌ ಪಾಷಾಗೆ ನಾಸೀರ್‌ ಕಡೆಯಿಂದ ಹಣ ಸಂದಾಯವಾಗುತ್ತಿತ್ತು.

    ನಾಸೀರ್‌ ಬಂದೋಬಸ್ತ್‌ಗೆ ನಿಯೋಜನೆಗೊಂಡಿದ್ದರಿಂದ ಚಾನ್ ಪಾಷಾಗೆ ವಾಹನದ ರೂಟ್‌ ಮ್ಯಾಪ್‌ ಎಲ್ಲವೂ ಚೆನ್ನಾಗಿ ಗೊತ್ತಿತ್ತು. ನಾಸೀರ್‌ ಜೀಪ್ ಹತ್ತಿಸಿ ವಾಹನ ಬರುತ್ತಿದ್ದಂತೆ ಬಾಂಬ್‌ ಸ್ಫೋಟಿಸಬೇಕು. ಪ್ರತಿ ಮಾಹಿತಿ ನಾನು ನೀಡುತ್ತೇನೆ ಎಂದು ಜುನೈದ್‌ ಅಹಮದ್‌ ಟೀಂಗೆ ಚಾನ್ ಪಾಷಾ ಹೇಳಿದ್ದ. ಈ ಪ್ಲ್ಯಾನ್‌ನಂತೆ ಜುನೈದ್‌ ತಂಡ ಬಾಂಬ್‌ ಸ್ಫೋಟಿಸಲು ಸಂಚು ಮಾಡುತ್ತಿತ್ತು. ಆದರೆ 2023 ರಲ್ಲಿ ಖಚಿತ ಮಾಹಿತಿ ಮೇರೆಗೆ ಜುನೈದ್‌ ತಂಡದ ಚಟುವಟಿಕೆ ತಿಳಿದು ಈ ಯೋಜನೆಯನ್ನು ಸಿಸಿಬಿ ಪೊಲೀಸರು ವಿಫಲಗೊಳಿಸಿದ್ದರು.

    ಈ ಬಾರಿಯೂ ಅದೇ ರೀತಿ ಸಂಚು ಹೂಡಿದ್ದ ಶಂಕೆ ವ್ಯಕ್ತವಾಗಿದ್ದು ಬಂಧಿತ ಮೂವರನ್ನು ಎನ್‌ಐಎ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಜನನಿಬಿಡ ಸ್ಥಳದಲ್ಲಿ ಸ್ಫೋಟಕ್ಕೆ ಸಂಚುಸಿಸಿಬಿಯಿಂದ ಐವರು ಅರೆಸ್ಟ್

    ಸಿಸಿಬಿ ದಾಳಿಯಲ್ಲಿ ಪತ್ತೆಯಾದ ವಸ್ತುಗಳು
    ಸಿಸಿಬಿ ದಾಳಿಯಲ್ಲಿ ಪತ್ತೆಯಾದ ವಸ್ತುಗಳು

    ಎಲ್ಲಿದ್ದಾನೆ ಜುನೈದ್‌?
    ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಿ, ಭಾರಿ ಅನಾಹುತ ಎಸಗಲು ಸಂಚು ರೂಪಿಸಿದ್ದ ಖಚಿತ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು  ಜುಲೈ 23, 2023  ರಲ್ಲಿ  ಸುಲ್ತಾನ್‌ಪಾಳ್ಯ, ಡಿ.ಜೆ.ಹಳ್ಳಿ, ಆರ್‌.ಟಿ.ನಗರ, ಕೊಡಿಗೇಹಳ್ಳಿಯಲ್ಲಿ ಕಾರ್ಯಾಚರಣೆ ನಡೆಸಿ ಸೈಯದ್ ಸುಹೇಲ್‌ ಖಾನ್‌, ಜಾಹೀದ್‌ ತಬ್ರೇಸ್‌, ಸೈಯದ್‌ ಮುದಾಸೀರ್‌ ಪಾಷಾ, ಮಹಮದ್‌ ಫೈಸಲ್‌, ಮಹಮದ್‌ ಉಮರ್‌ನನ್ನು ಬಂಧಿಸಿದ್ದರು.

    ಜೈಲಿನಲ್ಲಿದ್ದ ಐವರಿಗೆ ಟಿ. ನಾಸೀರ್‌ ಉಗ್ರ ಚಟುವಟಿಕೆಗಳ ಬಗ್ಗೆ ತರಬೇತಿ ನೀಡುತ್ತಿದ್ದ. 7 ನಾಡ ಬಂದೂಕು, 45 ಗುಂಡುಗಳು, ಸ್ಯಾಟ್‌ಲೈಟ್‌ ಫೋನ್ ಮಾದರಿಯ ವಾಕಿಟಾಕಿಗಳು, 12 ಮೊಬೈಲ್‌, ಡ್ರಾಗರ್‌ ಸೇರಿದಂತೆ ವಿವಿಧ ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿತ್ತು. ಪ್ರಕರಣದ ಪ್ರಮುಖ ಸೂತ್ರಧಾರ ಜುನೈದ್‌ ಅಹಮದ್‌ ದುಬೈಗೆ ಪರಾರಿಯಾಗಿದ್ದಾನೆ. ಶಂಕಿತ ಉಗ್ರ ಜುನೈದ್‌ ಅಹಮದ್‌ನ ತಾಯಿ ಅನೀಸ್‌ ಫಾತಿಮಾಳನ್ನು ಎನ್‌ಐಎ ಈಗ ಬಂಧಿಸಿದೆ.

  • ಜೈಲಲ್ಲಿರೊ ಉಗ್ರ ನಾಸೀರ್‌ಗೆ ಮನೋವೈದ್ಯನಿಂದ ಮೊಬೈಲ್ ಸಪ್ಲೈ – ಶಂಕಿತ ಉಗ್ರರು 6 ದಿನ ಎನ್ಐಎ ಕಸ್ಟಡಿಗೆ

    ಜೈಲಲ್ಲಿರೊ ಉಗ್ರ ನಾಸೀರ್‌ಗೆ ಮನೋವೈದ್ಯನಿಂದ ಮೊಬೈಲ್ ಸಪ್ಲೈ – ಶಂಕಿತ ಉಗ್ರರು 6 ದಿನ ಎನ್ಐಎ ಕಸ್ಟಡಿಗೆ

    ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಲ್ಲಿರುವ ಎಲ್‌ಇಟಿ ಯ (LeT) ನಟೋರಿಯಸ್ ಉಗ್ರನಿಗೆ ನೆರವು ನೀಡಿದ ಜೈಲಿನ ಮನೋವೈದ್ಯ ಸೇರಿ ಮೂವರನ್ನು 6 ದಿನಗಳ ಕಾಲ ಎನ್‌ಐಎ ಕಸ್ಟಡಿಗೆ ವಹಿಸಲಾಗಿದೆ.

    ಜೀವಾವಧಿ ಶಿಕ್ಷೆಗೆ ಒಳಗಾಗಿ ಪರಪ್ಪನ ಅಗ್ರಹಾರ ಜೈಲಲ್ಲಿರುವ ಲಷ್ಕರ್ ತೊಯ್ಬಾ ಉಗ್ರ ಸಂಘಟನೆಯ ಟಿ‌.‌ನಾಸೀರ್‌ಗೆ ಜೈಲಿನಲ್ಲಿ ನೆರವು ನೀಡಿದ ಆರೋಪದ ಮೇಲೆ ಎನ್ಐಎ (NIA) ಅಧಿಕಾರಿಗಳು ಮೂವರನ್ನ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ಜೈಲಿನ ಮನೋವೈದ್ಯ ನಾಗರಾಜ್, ಸಿಎಆರ್‌ ಸಬ್‌ ಇನ್‌ಸ್ಪೆಕ್ಟರ್ ಚಾಂದ್ ಪಾಷಾ ಹಾಗೂ ಗ್ರೆನೇಡ್ ದಾಳಿಯ ಸಂಚುಕೋರರಲ್ಲಿ ಒಬ್ಬನಾದ ಜುನೈದ್‌ನ ತಾಯಿ ಅನೀಸ್ ಫಾತಿಮಾ ಆಗಿದ್ದಾರೆ. ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲು ಎಎಸ್‌ಐ, ಮನೋವೈದ್ಯ ಸೇರಿ ಮೂವರು ಶಂಕಿತ ಉಗ್ರರ ಬಂಧನ

    ಈ ಮೂವರು ಶಂಕಿತರು ಕೇರಳ ಮೂಲದ ಎಲ್ಇಟಿ ಉಗ್ರ ಟಿ.ನಾಸೀರ್ ಜೊತೆ ನೇರ ಸಂಪರ್ಕ ಹೊಂದಿದ್ದು, ಜೈಲಿನಲ್ಲಿ ಮೊಬೈಲ್ ಪೋನ್, ಹಣಕಾಸು ಸೇರಿ ಇತರ ವಿಚಾರಗಳ ಬಗ್ಗೆ ನೆರವು ನೀಡಿದ್ದರು. ನಿನ್ನೆ ಈ ಬಗ್ಗೆ ಬೆಂಗಳೂರಿನ ಮೂರು ಹಾಗೂ ಕೋಲಾರದ ಐದು ಕಡೆ ದಾಳಿ ನಡೆಸಿದ ಎನ್ಐಎ ಅಧಿಕಾರಿಗಳು ಮೂವರನ್ನ ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಬಳಿಕ ಇಂದು ಮೂವರು ಆರೋಪಿಗಳನ್ನ ಎನ್ಐಎ ಸ್ಪೆಷಲ್ ಕೋರ್ಟ್‌ಗೆ ಹಾಜರುಪಡಿಸಿದ ಅಧಿಕಾರಿಗಳು ಹೆಚ್ಚಿನ ವಿಚಾರಣೆಗೆ ಕಸ್ಟಡಿ ನೀಡುವಂತೆ ಮನವಿ ಮಾಡಿದರು. ಎನ್ಐಎ ಅಧಿಕಾರಿಗಳ ಮನವಿ ಪುರಸ್ಕರಿಸಿದ ಕೋರ್ಟ್ ಆರು ದಿನಗಳ ಕಸ್ಟಡಿಗೆ ನೀಡಿ ಆದೇಶಿಸಿದೆ.

    ಬಂಧಿತ ಮೂವರು ಆರೋಪಿಗಳಲ್ಲಿ ಡಾ.ನಾಗರಾಜ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮನೋವೈದ್ಯನಾಗಿ ಕೆಲಸ ಮಾಡುತ್ತಿದ್ದ. ಪ್ರತಿದಿನ ಈತ ಜೈಲಿನಲ್ಲಿ ಎಲ್ಲಾ ಖೈದಿಗಳನ್ನ ಭೇಟಿಯಾಗ್ತಿದ್ದ. ಹೀಗೆ 2022 -2023 ರ ಅವಧಿಯಲ್ಲಿ ಉಗ್ರ ನಾಸೀರ್ ಬ್ಯಾರಕ್‌ಗೆ ತೆರಳಿ ಕೌನ್ಸೆಲಿಂಗ್ ಮಾಡಿದ್ದನಂತೆ. ಈ ವೇಳೆ ನಾಸೀರ್‌ಗೆ ಮೊಬೈಲ್ ಫೋನ್ ಕೊಟ್ಟು ಸಹಕಾರ ನೀಡಿದ್ದನಂತೆ. ಬಳಿಕ ಉಗ್ರ ನಾಸೀರ್, ನಾಗರಾಜ್ ಬ್ರೈನ್ ವಾಶ್ ಮಾಡಿದ್ದನಂತೆ. ಮತ್ತೊಬ್ಬ ಆರೋಪಿ ಅನೀಸ್ ಫಾತೀಮಾ ಶಂಕಿತ ಉಗ್ರ ಜುನೈದ್ ತಾಯಿ. 2023ರಲ್ಲಿ ಜುನೈದ್ ಮೇಲೆ ಕೇಸ್ ಆಗ್ತಿದ್ದಂತೆ ಆಸಾಮಿ ನಾಪತ್ತೆಯಾಗಿದ್ದ. ಟಿ.ನಾಸೀರ್ ಮತ್ತು ಜುನೈದ್ ನಡುವಿನ ಹಣದ ವ್ಯವಹಾರಕ್ಕೆ ಸಹಾಯ ಮಾಡ್ತಿದ್ದಳು ಅಂತಾ ಗೊತ್ತಾಗಿದೆ. ಜೊತೆ ಜೈಲಿನಲ್ಲಿ ಭೇಟಿಯ ವಿಚಾರಗಳನ್ನ ತನ್ನ ಮಗನಿಗೆ ಫಾತೀಮಾ ತಲುಪಿಸುತ್ತಿದ್ದಳು ಅಂತಾ ಗೊತ್ತಾಗಿದೆ. ಮೂರನೇ ಆರೋಪಿಯಾದ ಎಎಸ್ಐ ಚಾಂದ್ ಪಾಷಾ ನಗರದ ಸಿಎಆರ್‌ನಲ್ಲಿ ಕೆಲಸ ಮಾಡುತ್ತಿದ್ದ. ಜೈಲಿನಿಂದ ಖೈದಿಗಳನ್ನು ಬೇರೆ ಜೈಲಿಗೆ ಮತ್ತು ನ್ಯಾಯಾಲಯಕ್ಕೆ ಕರೆತರುವ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗ್ತಿತ್ತು. ಈ ವೇಳೆ ಉಗ್ರ ನಾಸೀರ್ ಪರಿಚಯ ಮಾಡಿಕೊಂಡಿದ್ದ ಚಾಂದ್ ಪಾಷಾ, ಬೇರೆ ಬೇರೆ ಕಡೆ ಪ್ರಯಾಣ ಮಾಡುವಾಗ ಸಹಾಯ ಮಾಡುವುದು, ನಾಸೀರ್‌ಗೆ ಬೇಕಿದ್ದ ಮಾಹಿತಿಗಳನ್ನು ವಿನಿಮಯ ಮಾಡ್ತಿದ್ದನಂತೆ. ಹೀಗೆ ಮೂರು‌ ಜನ ಆರೋಪಿಗಳು ನೇರವಾಗಿ ನಾಸೀರ್‌ಗೆ ಲಿಂಕ್ ಇರೋದು ಎನ್‌ಐಎ ತನಿಖೆಯಲ್ಲಿ ಪತ್ತೆಯಾಗಿದೆ. ಇದನ್ನೂ ಓದಿ: ಮೂವರು ಶಂಕಿತ ಉಗ್ರರ ಬಂಧನ ಕೇಸ್‌ – ಬೆಂಗ್ಳೂರಲ್ಲಿ ವಿಧ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ ಮಾಡಿದ್ದ ಉಗ್ರ ನಾಸೀರ್

    ಎನ್ಐಎ ಅಧಿಕಾರಿಗಳ ವಿಚಾರಣೆಯಲ್ಲಿ ಹಲವು ಸ್ಫೋಟಕ ವಿಚಾರಗಳು ಬೆಳಕಿಗೆ ಬಂದಿವೆ. ಬಂಧಿತ ಮೂವರು ಆರೋಪಿಗಳ ಮೊಬೈಲ್ ಫೋನ್ ವಶಕ್ಕೆ ಪಡೆದು ಅವರ ಸಂಪರ್ಕ ಜಾಲವನ್ನ ತನಿಖೆ ನಡೆಸಿದ್ದಾರೆ. ಈ ವೇಳೆ ಕೆಲವು ಮಹತ್ವದ ಆಡಿಯೋ ಕ್ಲಿಪ್‌ಗಳು ಪತ್ತೆಯಾಗಿದ್ದು, ಅದರಲ್ಲಿ ಉಗ್ರ ನಾಸೀರ್ ಜೊತೆಗಿನ ಸಂಚು ಮತ್ತು ಸಂಪರ್ಕದ ವಿಚಾರ ಕಂಡುಬಂದಿದೆ. ಹೀಗಾಗಿ, ಬಂಧಿತರ ಆಡಿಯೋ ಸ್ಯಾಂಪಲ್ ಸಂಗ್ರಹಿಸಲು ಎನ್ಐಎ ಮುಂದಾಗಿದ್ದು, ನಾಳೆ ಕೋರ್ಟ್‌ಗೆ ಅರ್ಜಿ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದಾರೆ. ಅಲ್ಲದೇ, ಈಗ ಪತ್ತೆಯಾದ ಆಡಿಯೋ ಕ್ಲಿಪ್‌ಗಳನ್ನು ಕೋರ್ಟ್ ಅನುಮತಿ ಪಡೆದು ಎಫ್ಎಸ್ಎಲ್‌ಗೆ ರವಾನೆ ಮಾಡಿ ಪರೀಕ್ಷೆಗೆ ಒಳಪಡಿಸಲು ಮುಂದಾಗಿದ್ದಾರೆ.

    ಜೈಲಿನಲ್ಲಿ ಮನೋವೈದ್ಯ ನಾಗರಾಜ್ ಉಗ್ರ ನಾಸಿರ್ ಅಲ್ಲದೇ ಇತರ ಖೈದಿಗಳಿಗೂ ಮೊಬೈಲ್ ಕೊಟ್ಟಿರುವ ವರದಿಯಾಗಿದೆ. ಮೂರ್ನಾಲ್ಕು ಸಾವಿರದ ಮೊಬೈಲ್‌ಗಳನ್ನ 50,000 ಮಾರಾಟ ಮಾಡಿದ್ದಾನಂತೆ. ಇದಕ್ಕಾಗಿ ತನ್ನ ಆಪ್ತೆ ಪವಿತ್ರಾಳನ್ನ ಬಳಸಿಕೊಂಡು ನೂರಾರು ಮೊಬೈಲ್, ಸಿಮ್‌ಗಳನ್ನ ಖರೀದಿ ಮಾಡಿ ಜೈಲಲ್ಲಿ ಮಾರಾಟ ಮಾಡಿರೋದು ಬೆಳಕಿದೆ ಬಂದಿದೆ. ಇನ್ನು ಸಿಮ್ ಪಡೆಯಲು ಕೋಲಾರದ ಸತೀಶ್ ಗೌಡನ ಐಡಿ ಪ್ರೂಫ್ ಬಳಕೆಯಾಗಿದ್ದು, ಸತೀಶ್ ಗೌಡ ಅಬ್ ಸ್ಕ್ಯಾಂಡ್ ಆಗಿದ್ದಾನೆ. ಸತೀಶ್ ಪತ್ನಿ ಮತ್ತೆ ಅತ್ತೆ ಇವತ್ತು ಎನ್‌ಐಎ ವಿಚಾರಣೆಗೆ ಹಾಜರಾಗಿದ್ದಾರೆ.

  • ಎನ್‌ಐಎ ನೊಟೀಸ್ ನೀಡಿರುವುದು ನಿಜ, ವಿಚಾರಣೆಗೆ ಹಾಜರಾಗುತ್ತೇವೆ: ಸತೀಶ್ ಗೌಡ ಪತ್ನಿ

    ಎನ್‌ಐಎ ನೊಟೀಸ್ ನೀಡಿರುವುದು ನಿಜ, ವಿಚಾರಣೆಗೆ ಹಾಜರಾಗುತ್ತೇವೆ: ಸತೀಶ್ ಗೌಡ ಪತ್ನಿ

    ಕೋಲಾರ: ಎನ್‌ಐಎ (NIA) ನೊಟೀಸ್ ನೀಡಿರುವುದು ನಿಜ. ವಿಚಾರಣೆಗೆ ಹಾಜರಾಗುತ್ತೇವೆ ಎಂದು ಸತೀಶ್ ಗೌಡ ಅವರ ಪತ್ನಿ ಹೇಮಲತಾ ತಿಳಿಸಿದ್ದಾರೆ.

    ಕೋಲಾರದಲ್ಲಿ (Kolar) ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು. ಎನ್‌ಐಎಯಿಂದ ನೊಟೀಸ್ ಬಂದಿರುವುದು ನಿಜ. ಮೂರು ವರ್ಷದ ಹಿಂದೆ ನನ್ನ ಪತಿ ಏರ್‌ಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಆಗ ಸಿಮ್ ಕಾರ್ಡ್ ನೀಡಿರುವ ಕಾರಣ ವಿಚಾರಣೆಗೆ ಕರೆದಿದ್ದಾರೆ. ಈ ಹಿಂದೆ 2023ರಲ್ಲಿ ವಿಚಾರಣೆಗೆ ಕರೆದಿದ್ದರು. ಆಗ ಆಂಟಿಸಿಪೇಟರಿ ಬೇಲ್ ಪಡೆಯಲಾಗಿತ್ತು. ಈಗ ಮತ್ತೆ ವಿಚಾರಣೆಗೆ ಕರೆದಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಎಂ, ಡಿಸಿಎಂ ಹೆಸ್ರಲ್ಲಿ ಕೋಟಿ ಕೋಟಿ ವಂಚನೆ – 20ಕ್ಕೂ ಹೆಚ್ಚು ಮಂದಿಗೆ ಪಂಗನಾಮ ಹಾಕಿದ್ದ ಮಹಿಳೆ ಅರೆಸ್ಟ್‌

    10.30ಕ್ಕೆ ಬೆಂಗಳೂರಿನ ಕಚೇರಿಗೆ ವಿಚಾರಣೆಗೆ ಕರೆದಿದ್ದಾರೆ. ನಾನು, ನನ್ನ ಪತಿ ವಿಚಾರಣೆಗೆ ತೆರಳುತ್ತೇವೆ. ಅವರು ಕಳೆದ ಮೂರು ವರ್ಷಗಳಿಂದ ಕೆಲಸ ಇಲ್ಲದೆ ಮನೆಯಲ್ಲೇ ಇದ್ದಾರೆ. ಮಂಗಳವಾರ ಎನ್‌ಐಎ ಅಧಿಕಾರಿಗಳು, ಪೊಲೀಸರು ಮನೆಗೆ ಬಂದು ನೊಟೀಸ್ ನೀಡಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಹಳಸಿದ ದಾಲ್ ಬಡಿಸಿದ್ದಕ್ಕೆ ಕ್ಯಾಂಟೀನ್ ಮಾಲೀಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಶಾಸಕ

    ಪೊಲೀಸರ ಭೇಟಿ ಹಿನ್ನೆಲೆ ಮಂಗಳವಾರದಿಂದ ನಾಪತ್ತೆಯಾಗಿರುವ ಸತೀಶ್ ಗೌಡ ಬದಲಿಗೆ ಪತ್ನಿಗೆ ನೊಟೀಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿ ಎನ್‌ಐಎ ಅಧಿಕಾರಿಗಳು ತೆರಳಿದ್ದಾರೆ. ಇದೀಗ ಸತೀಶ್ ಗೌಡ ಅವರ ಪತ್ನಿ ಹೇಮಾವತಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ. ಇದನ್ನೂ ಓದಿ: ಮೂವರು ಶಂಕಿತ ಉಗ್ರರ ಬಂಧನ ಕೇಸ್‌ – ಬೆಂಗ್ಳೂರಲ್ಲಿ ವಿಧ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ ಮಾಡಿದ್ದ ಉಗ್ರ ನಾಸೀರ್

    ಸತೀಶ್ ಗೌಡ ಅವರು ಮೂಲತಃ ಕೋಲಾರ ತಾಲೂಕಿನ ವಾನರಾಶಿ ಮೂಲದವರು. ಕಳೆದ ಹಲವು ವರ್ಷಗಳಿಂದ ಅಂದರೆ ಮದುವೆಗೂ ಮುನ್ನ ಬೆಂಗಳೂರಿನಲ್ಲೇ ವಾಸವಿದ್ದರು. ಮದುವೆ ಬಳಿಕ ಅತ್ತೆ ಮನೆ ಭಟ್ರಹಳ್ಳಿಯಲ್ಲಿ ವಾಸವಿದ್ದಾರೆ.

  • ಮೂವರು ಶಂಕಿತ ಉಗ್ರರ ಬಂಧನ ಕೇಸ್‌ – ಬೆಂಗ್ಳೂರಲ್ಲಿ ವಿಧ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ ಮಾಡಿದ್ದ ಉಗ್ರ ನಾಸೀರ್

    ಮೂವರು ಶಂಕಿತ ಉಗ್ರರ ಬಂಧನ ಕೇಸ್‌ – ಬೆಂಗ್ಳೂರಲ್ಲಿ ವಿಧ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ ಮಾಡಿದ್ದ ಉಗ್ರ ನಾಸೀರ್

    – ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದಲ್ಲೂ ನಾಸೀರ್‌ ಕೈವಾಡ
    – ಶಂಕಿತರಿಗೆ ಸಿಮ್‌ ಕಾರ್ಡ್‌ ನೀಡಿದ್ದ ಆರೋಪ; ಏರ್‌ಟೆಲ್‌ ಮಾಜಿ ಉದ್ಯೋಗಿಗೆ ನೋಟಿಸ್‌

    ಬೆಂಗಳೂರು: ಜೈಲಿನಿಂದಲೇ ಕರ್ನಾಟಕ ಸೇರಿ ದೇಶದ ವಿವಿಧೆಡೆ ಉಗ್ರ ಕೃತ್ಯಕ್ಕೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು (Bengaluru) ಮತ್ತು ಕೋಲಾರದ (Kolara) 5 ಕಡೆ ದಾಳಿ ನಡೆಸಿದ್ದ ರಾಷ್ಟ್ರೀಯ ತನಿಖಾ ದಳ (NIA) ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ, ಸಿಎಆರ್‌ ಪೊಲೀಸ್‌ ಅಧಿಕಾರಿ ಸೇರಿ ಮೂವರು ಶಂಕಿತ ಉಗ್ರರರನ್ನ ಬಂಧಿಸಿದೆ.

    ಶಂಕಿತ ಉಗ್ರರನ್ನು ಇಂದು ಕೋರ್ಟ್‌ಗೆ ಹಾಜರುಪಡಿಸಿರುವ ಎನ್‌ಐಎ ಅಧಿಕಾರಿಗಳ ತಂಡ, 14 ದಿನಗಳ ಕಾಲ ಕಸ್ಟಡಿಗೆ ಪಡೆಯಲು ಮುಂದಾಗಿದೆ. ಈ ಮಧ್ಯೆ ಉಗ್ರ ಟಿ.ನಾಸೀರ್ ಕುರಿತು ಹಲವು ಸ್ಫೋಟಕ ವಿಚಾರಗಳನ್ನು ಬಯಲಿಗೆಳೆದಿದೆ. ಇದನ್ನೂ ಓದಿ: ಪತ್ನಿಯೊಂದಿಗೆ ಅನೈತಿಕ ಸಂಬಂಧ- ಬೆಂಗಳೂರಿನಿಂದ ಕಲಬುರಗಿಗೆ ಕರೆತಂದು ಪ್ರಾಣಸ್ನೇಹಿತನ ಹತ್ಯೆ

    ಜೈಲಿನಲ್ಲಿದ್ದುಕೊಂಡೇ ಉಗ್ರ ಕೃತ್ಯಕ್ಕೆ ಸಂಚು
    2023ರಲ್ಲಿ ಹೆಬ್ಬಾಳದ ಮನೆಯಲ್ಲಿ ಜೀವಂತ ಗ್ರೆನೇಡ್‌ಗಳು ಪತ್ತೆಯಾಗಿದ್ದವು. ಜೀವಂತ ಗ್ರೆನೇಡನ್ನು ತರಲು ಟಿ.ನಾಸೀರ್ ಸೂಚಿಸಿದ್ದ. ಜುನೈದ್ ಮೂಲಕ ಇದನ್ನು ತರಿಸಿದ್ದ. ಬಳಿಕ ನಾಸೀರ್‌ನನ್ನು ವಶಕ್ಕೆ ಪಡೆದು ಎನ್‌ಐಎ ವಿಚಾರಣೆ ನಡೆಸಿತ್ತು. ಈಗಾಗಲೇ ಬೆಂಗಳೂರು ಸ್ಫೋಟ ಪ್ರಕರಣದಲ್ಲಿ ನಾಸೀರ್‌ ಜೈಲಿನಲ್ಲಿದ್ದಾನೆ. ಭಯೋತ್ಪಾದನೆ ಬಗ್ಗೆ ಯುವಜನರ ಮೈಂಡ್‌ ವಾಶ್‌ ಮಾಡೋದ್ರಲ್ಲಿ ನಿಸ್ಸೀಮನಾಗಿದ್ದ ನಾಸೀರ್‌, ಹಲವು ಯುವಜನರನ್ನ ಉಗ್ರ ಚಟುವಟಿಕೆಗಳಿಗೆ ಬಳಸಿಕೊಂಡಿದ್ದಾನೆ ಎಂದೂ ಸಹ ಎನ್‌ಐಎ ತನಿಖೆ ವೇಳೆ ತಿಳಿದುಬಂದಿದೆ. ಇದನ್ನೂ ಓದಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಗೆ ಆ್ಯಸಿಡ್ ಎರಚಿ ತಾನೂ ಬೆಂಕಿ ಹಚ್ಚಿಕೊಂಡ ಸೋದರ ಮಾವ

    ಅಲ್ಲದೇ ಜೈಲಿನಲ್ಲಿದ್ದುಕೊಂಡೇ ಉಗ್ರ ಚಟುವಟಿಕೆಗಳ ಬಗ್ಗೆ ಪ್ಲ್ಯಾನ್‌ ಮಾಡಿದ್ದ. 2008ರ ಸರಣಿ ಬಾಂಬ್ ಸ್ಫೋಟ, ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ, ಶಿವಮೊಗ್ಗದಲ್ಲಿ ಉಗ್ರ ಚಟುವಟಿಕೆ, ರಾಮೇಶ್ವರಂ ಕೆಫೆ ಬ್ಲಾಸ್ಟ್ ಸೇರಿ ಹಲವು ಪ್ರಕರಣಗಳಲ್ಲಿ ನಾಸೀರ್‌ ಕೈವಾಡ ಇದೆ. ಅಷ್ಟೇ ಅಲ್ಲ ಬೆಂಗಳೂರಿನಲ್ಲಿ ದೊಡ್ಡಮಟ್ಟದ ವಿಧ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ ಮಾಡಿದ್ದ ಅನ್ನೋದು ಎನ್‌ಐಎ ತನಿಖೆಯಲ್ಲಿ ಬಯಲಾಗಿದೆ.

    ಇನ್ನೂ ಉಗ್ರ ಕೃತ್ಯಕ್ಕೆ ನಾಸೀರ್‌ ಜುನೈದ್, ಮೊಹಮ್ಮದ್ ಹರ್ಷದ್ ಖಾನ್, ಸುಹೈಲ್, ಫೈಜಲ್, ಜಾಹಿದ್ ತಬ್ರೇಜ್, ಮುದಾಸಿರ್ ಎಂಬ ಯುವಕರ ತಂಡವನ್ನೂ ರೆಡಿ ಮಾಡಿದ್ದ. ಆದ್ರೆ ಜೀವಂತ ಗ್ರೆನೇಡ್‌ಗಳು, ಪಿಸ್ತೂಲ್‌ಗಳು, ಸ್ಫೋಟಕ ವಸ್ತುಗಳ ಸಮೇತ ತಂಡ ಸಿಕ್ಕಿಬಿದ್ದಿತ್ತು. ಈ ಐವರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದರು. ಬಳಿಕ ಎನ್‌ಐಎ ಈ ಪ್ರಕರಣದ ಹೊಣೆ ವಹಿಸಿಕೊಂಡಿತು. ಸದ್ಯ ಮೂವರನ್ನು ಬಂಧಿಸಿರುವ ಎನ್‌ಐಎ, ಬಂಧಿತರಿಂದ ಒಂದಷ್ಟು ಹಣ, ಸಂವಹನಕ್ಕೆ ಬಳಸುತ್ತಿದ್ದ ವಾಕಿಟಾಕಿ ಸೇರಿ ಹಲವು ವಸ್ತುಗಳು ವಶಕ್ಕೆ ಪಡೆದುಕೊಂಡಿದೆ. ಪ್ರಕರಣದ ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಆರ್‌ಸಿಬಿ ಆಟಗಾರ ಯಶ್ ದಯಾಳ್ ವಿರುದ್ಧ FIR – ಸಂತ್ರಸ್ತೆ ಹೇಳಿಕೆ ದಾಖಲಿಸಿಕೊಂಡ ಬಳಿಕ ಪೊಲೀಸರ ಕ್ರಮ

    ಏರ್‌ಟೆಲ್‌ ಮಾಜಿ ಉದ್ಯೋಗಿಗೆ ನೋಟಿಸ್‌
    ಇನ್ನೂ ಮೂವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ತಾಲ್ಲೂಕು ಭಟ್ರಹಳ್ಳಿ ಗ್ರಾಮದ ಸತೀಶ್ ಗೌಡ ಎಂಬಾತನಿಗೆ ಎನ್‌ಐಎ ನೋಟಿಸ್‌ ನೀಡಿದೆ. ಶಂಕಿತರಿಗೆ ಸಿಮ್‌ ಕಾರ್ಡ್‌ ನೀಡಿದ ಆರೋಪದ ಮೇಲೆ ಸತೀಶ್‌ ಗೌಡಗೆ ನೋಟಿಸ್‌ ನೀಡಲಾಗಿದೆ. ಸತೀಶ್‌ ಮನೆಯಲ್ಲಿ ಇಲ್ಲದ ಕಾರಣ ಕಾರಣ ಕುಟುಂಬಸ್ಥರಿಗೆ ನೋಟೀಸ್ ನೀಡಿದ್ದು, ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಅಧಿಕಾರಿಗಳು. ಮೂರು ವರ್ಷಗಳ ಹಿಂದೆ ಸತೀಶ್‌ಗೌಡ ಏರ್‌ಟೆಲ್‌ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಈ ಕೆಲಸ ಮಾಡಿರುವುದಾಗಿ ಸಂಶಯ ವ್ಯಕ್ತವಾಗಿದೆ.