ಚಿಕ್ಕಮಗಳೂರು: ಶರಣಾದ 6 ನಕ್ಸಲರ (Naxalite) ವಿರುದ್ಧ ಎನ್‍ಐಎ (NIA) ತನಿಖೆ ನಡೆಸಬೇಕು ಎಂದು ಬಿಜೆಪಿ (BJP) ಆಗ್ರಹಿಸಿದೆ.
ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಲಾಗಿದೆ. ನಕ್ಸಲರಿಗೆ ಶಸ್ತ್ರಾಸ್ತ್ರ ಪೂರೈಕೆ ಯಾರು ಮಾಡ್ತಿದ್ರು? ಈ ಹಿಂದೆ 6 ಮಂದಿ ಪತ್ತೆಗಾಗಿ ಬಹುಮಾನ ಘೋಷಿಸಲಾಗಿತ್ತು. ಅವರನ್ನು ಉನ್ನತ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಲಾಗಿದೆ.
ನಕ್ಸಲರನ್ನು ಶರಣಾಗತಿ ಕಮಿಟಿಯವರು ಈಗ ಹೇಗೆ ಭೇಟಿ ಮಾಡಿದ್ರು? ಪೊಲೀಸ್ ಇಲಾಖೆಗೆ ಈಗ ಬೆಲೆಯೇ ಇಲ್ವಾ? ಹಾಗಾದ್ರೆ, ಈ ಹಿಂದೆ ಎಲ್ಲಿದ್ದಾರೆ ಎಂಬ ಮಾಹಿತಿ ಗೊತ್ತಿರಲಿಲ್ವಾ? ಅಂದು ಏಕೆ ಪೊಲೀಸರಿಗೆ ಮಾಹಿತಿ ನೀಡಲಿಲ್ಲ ಎಂದು ಬಿಜೆಪಿ ನಾಯಕರು ಪ್ರಶ್ನಿಸಿದ್ದಾರೆ.
ಶರಣಾಗತಿ ಬಳಿಕ ನಕ್ಸಲರು ಬಂದೂಕುಗಳನ್ನು ಹಸ್ತಾಂತರ ಮಾಡಿಲ್ಲ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.
ನವದೆಹಲಿ: ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಗುರುವಾರ ಕರ್ನಾಟಕದ 16 ಸ್ಥಳಗಳಲ್ಲಿ ದಾಳಿ ನಡೆಸಿದೆ.
ಕೊಡಗಿನ 4 ಕಡೆ ದಾಳಿ:
ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಗುರುವಾರ ಕರ್ನಾಟಕದ 16 ಸ್ಥಳಗಳಲ್ಲಿ ದಾಳಿ ನಡೆಸಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ಮಡಿಕೇರಿ ಹಾಗೂ ಸುಂಟಿಕೊಪ್ಪದಲ್ಲಿ ಪರಿಶೀಲನೆ ನಡೆಸಿದೆ. ಇಂದು ಬೆಳಿಗ್ಗೆ ನಸುಕಿನ ಸಮಯದಲ್ಲಿ ಮಡಿಕೇರಿಯ ಮುಸ್ತಾಫಾ, ಹೊಸತೋಟದ ನಿವಾಸಿ ಜುನೈದ್ ಸೋಮವಾರಪೇಟೆ ತಾಲ್ಲೂಕಿನ ಚೌಡ್ಲು ಗ್ರಾಮದ ತೌಶಿಕ್, ಸುಂಟಿಕೊಪ್ಪದ ಹನೀಫ್ ಎಂಬುವರ ಮನೆ ಮೇಲೆ ಏಕಾಕಾಲದಲ್ಲಿ ದಾಳಿ ನಡೆಸಿದ ಎನ್‌ಐಎ ಅಧಿಕಾರಿಗಳ ತಂಡ ದಾಖಲಾತಿಗಳನ್ನು ಪರಿಶೀಲನೆ ನಡೆಸಿ, ಮನೆಯವರ ವಿಚಾರಣೆ ನಡೆಸಿ ತೆರಳಿದೆ. ಸದ್ಯಕ್ಕೆ ಯಾವುದೇ ವ್ಯಕ್ತಿಯನ್ನೂ ಬಂಧಿಸಿಲ್ಲ ಎಂದು ಮೂಲಗಳು ತಿಳಿಸಿವೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು 2022ರ ಜುಲೈನಲ್ಲಿ ದ್ವಿಚಕ್ರವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕೊಂದಿದ್ದರು. ಆರೋಪಿಗಳು ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಾರ್ಯಕರ್ತರು ಎನ್ನಲಾಗಿದೆ.
ಆ.4 ರಂದು ತನಿಖೆಯನ್ನು ಕೈಗೆತ್ತಿಕೊಂಡ ಎನ್ಐಎ ಇದುವರೆಗೆ 19 ಜನರನ್ನು ಬಂಧಿಸಿದೆ. 21 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದೆ. ಪರಾರಿಯಾಗಿರುವ ಇತರರನ್ನು ಪತ್ತೆಹಚ್ಚಲು ಸಂಸ್ಥೆ ತನ್ನ ಶೋಧವನ್ನು ಮುಂದುವರೆಸಿದೆ. ಇದನ್ನೂ ಓದಿ: ದೆಹಲಿಯಲ್ಲಿ ಅಪ್ಪ-ಅಮ್ಮ, ಸಹೋದರಿ ಹತ್ಯೆ ಪ್ರಕರಣ – ಮಗನಿಂದಲೇ ಕೃತ್ಯ
ಕೊಡಗು ಜಿಲ್ಲೆಯ ನಿವಾಸಿಯಾದ ತುಫೈಲ್, ಪಿಎಫ್‌ಐ ‘ಸೇವಾ ತಂಡ’ಗಳ ಉಸ್ತುವಾರಿ ಮತ್ತು ನಿಷೇಧಿತ ಸಂಘಟನೆಯ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ ಸೇರಿದಂತೆ ಸುಧಾರಿತ ತರಬೇತಿಯನ್ನು ನಿಯಮಿತವಾಗಿ ನೀಡುವ ‘ಪಿಎಫ್‌ಐ ಮಾಸ್ಟರ್ ಟ್ರೈನರ್’ ಎಂದು ಎನ್‌ಐಎ ತನಿಖೆಯಿಂದ ತಿಳಿದುಬಂದಿದೆ. ಈತ ಕರ್ನಾಟಕದ ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಮತ್ತು ತಮಿಳುನಾಡಿನ ಈರೋಡ್ ಜಿಲ್ಲೆಯಲ್ಲಿ ನೆಟ್ಟಾರುವಿನ ಮೂವರು ದಾಳಿಕೋರರಿಗೆ ಆಶ್ರಯ ನೀಡಿದ್ದ ಎಂದು ಎನ್‌ಐಎ ತಿಳಿಸಿದೆ.
– ರುವಾಂಡದ ರಾಜಧಾನಿ ಕಿಗಾಲಿಯಲ್ಲಿ ಸಲ್ಮಾನ್ ಬಂಧನ – ಈ ವರ್ಷದ ಜನವರಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದ್ದ ಎನ್‌ಐಎ
ನವದೆಹಲಿ: ಬೆಂಗಳೂರು ಜೈಲಿನಲ್ಲಿ (Bengaluru Jail) ಉಗ್ರ ಕೃತ್ಯ ಎಸಗಿ ರುವಾಂಡಕ್ಕೆ (Rwanda) ಪರಾರಿಯಾಗಿದ್ದ ಲಷ್ಕರ್ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ (NIA) ಬಂಧಿಸಿದೆ.
ಸಲ್ಮಾನ್ ಖಾನ್ ಬಂಧಿತ ಉಗ್ರ. ರುವಾಂಡಾ ತನಿಖಾ ಬ್ಯೂರೋ (RIB), ಇಂಟರ್‌ಪೋಲ್ ಮತ್ತು ರಾಷ್ಟ್ರೀಯ ಕೇಂದ್ರ ಬ್ಯೂರೋಗಳ (NCBs) ಸಹಯೋಗದೊಂದಿಗೆ ಬುಧವಾರ ರುವಾಂಡಾದ ರಾಜಧಾನಿ ಕಿಗಾಲಿಯಲ್ಲಿ ಬಂಧನ ಮಾಡಲಾಗಿದೆ. ಇಂದು ರುವಾಂಡ ಉಗ್ರನನ್ನು ಭಾರತಕ್ಕೆ ಹಸ್ತಾಂತರಿಸಿದೆ.
ಬೆಂಗಳೂರು ಜೈಲಿನಲ್ಲಿದ್ದುಕೊಂಡೇ ಸಹ ಕೈದಿಗಳನ್ನು ಸೆಳೆದು ಉಗ್ರ ಚಟುವಟಿಕೆಗೆ ಬಳಕೆ ಮಾಡಿದ ಪ್ರಕರಣದಲ್ಲಿ ಸಲ್ಮಾನ್ ಆರೋಪಿಯಾಗಿದ್ದಾನೆ. ಈತ ಉಗ್ರರಿಗೆ ಸ್ಫೋಟಕಗಳನ್ನು ಪೂರೈಸುವ ಮೂಲಕ ದುಷ್ಕೃತ್ಯಗಳಿಗೆ ಸಹಕಾರ ನೀಡುತ್ತಿದ್ದ.
JUST IN
Rwanda has extradited Salman Khan to India, where he will face prosecution for terrorism and related crimes. The transfer occurred this morning at Kigali International Airport.#RBANewspic.twitter.com/Gp6iQgfAZs
ಪೋಸ್ಕೋ ಕೃತ್ಯ ಎಸಗಿ ಸಲ್ಮಾನ್ ಬೆಂಗಳೂರು ಜೈಲು ಸೇರಿದ್ದ. 2018 ಮತ್ತು 2022 ರ ಜೈಲುವಾಸದ ಅವಧಿಯಲ್ಲಿ ಜಿವಾವಾಧಿ ಶಿಕ್ಷೆಗೆ ಒಳಗಾಗಿದ್ದ ಉಗ್ರ ನಾಸೀರ್ (Naseer) ಸಂಪರ್ಕಕ್ಕೆ ಈತ ಬಂದಿದ್ದ. ಈತನ ಮಾತಿಗೆ ಮರುಳಾಗಿ ಮೂಲಭೂತವಾದ ಕಡೆಗೆ ಆಕರ್ಷಿತನಾಗಿದ್ದ. ಅಷ್ಟೇ ಅಲ್ಲದೇ ಸಹ ಕೈದಿಗಳನ್ನು ಸೆಳೆದು ಅವರನ್ನು ಉಗ್ರರನ್ನಾಗಿ ರೂಪಿಸುತ್ತಿದ್ದ.
1. Salman Khan, was arrested on 09-09-24, by the Rwandan security and intelligence services.
Today, 27th Nov 2024, Rwanda has extradited Mr. Salman KHAN alias Salma of 30 years wanted by the Government of India for his association with a Terrorist group operating. pic.twitter.com/HknUO8MvS3
ಜೈಲಿನಿಂದ ಬಿಡುಗಡೆಯಾದ ಬಳಿಕ ಆತ ಉಗ್ರರ ಸಂಪರ್ಕ ಸಾಧಿಸಿ ಅವರಿಗೆ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳ ಸಂಗ್ರಹಣೆ ಮತ್ತು ವಿತರಣೆ ಮಾಡುವ ಮೂಲಕ ಸಹಕಾರ ನೀಡುತ್ತಿದ್ದ. ಭಯೋತ್ಪಾದನಾ ಕೃತ್ಯದಲ್ಲಿ ತನ್ನ ಹೆಸರು ಬೆಳಕಿಗೆ ಬರುತ್ತಿದ್ದಂತೆ ಸಲ್ಮಾನ್ ಭಾರತದಿಂದ ಪರಾರಿಯಾಗಿದ್ದ.
ಕಳೆದ ವರ್ಷದ ಅಕ್ಟೋಬರ್ 25 ರಂದು ಬೆಂಗಳೂರು ಜೈಲಿನಲ್ಲಿದ್ದುಕೊಂಡೇ ಸಹ ಕೈದಿಗಳನ್ನು ಸೆಳೆದು ಉಗ್ರ ಚಟುವಟಿಕೆಗೆ ಬಳಕೆ ಮಾಡಿದ ಪ್ರಕರಣದ ತನಿಖೆಯನ್ನು ಸಿಸಿಬಿಯಿಂದ ಎನ್‌ಐಎ ವಹಿಸಿಕೊಂಡಿತ್ತು. ಸಲ್ಮಾನ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಶಸ್ತ್ರಾಸ್ತ್ರ ಕಾಯ್ದೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯಡಿ ಆರೋಪ ಹೊರಿಸಿ ಪ್ರಕರಣ ದಾಖಲಿಸಲಾಗಿತ್ತು.
ಈ ವರ್ಷ ಆಗಸ್ಟ್ 2 ರಂದು ಎನ್ಐಎ ಕೋರಿಕೆಯ ಮೇರೆಗೆ ಇಂಟರ್‌ಪೋಲ್ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿತ್ತು. ಈ ನೋಟಿಸ್ ಹಿನ್ನೆಲೆಯಲ್ಲಿ ರುವಾಂಡಾದ ಅಧಿಕಾರಿಗಳು ಸಲ್ಮಾನ್‌ನನ್ನು ಬಂಧಿಸಿ ಭಾರತೀಯ ತನಿಖಾ ಸಂಸ್ಥೆಗೆ ಹಸ್ತಾಂತರಿಸಿದ್ದಾರೆ.
2024 ರಲ್ಲಿ ಇಂಟರ್‌ಪೋಲ್ ಒಳಗೊಂಡಂತೆ ಸಂಘಟಿತ ಪ್ರಯತ್ನದ ಮೂಲಕ ದೇಶ ಬಿಟ್ಟು ಪರಾರಿಯಾಗಿದ್ದ 26 ಮಂದಿಯನ್ನು ಭಾರತಕ್ಕೆ ತನಿಖಾ ಸಂಸ್ಥೆಗಳು ಕರೆತಂದಿವೆ.
ಏನಿದು ಪ್ರಕರಣ?
2023ರ ಜುಲೈನಲ್ಲಿ ಆರ್‌ಟಿ ನಗರದ ಮನೆ ಮೇಲೆ ದಾಳಿ ಮಾಡಿದ ಬೆಂಗಳೂರು ಸಿಸಿಬಿ ಪೊಲೀಸರು (CCB Police) ಐವರು ಆರೋಪಿಗಳನ್ನು ಬಂಧಿಸಿದ್ದರು. ಈ ವೇಳೆ ಜೀವಂತ ಗ್ರೆನೇಡ್ ಪತ್ತೆಯಾಗಿತ್ತು. ಈ ಪ್ರಕರಣದ ಆರೋಪಿಗಳ ಜೊತೆ ಜೈಲಿನಲ್ಲಿದ್ದ ಉಗ್ರ ಟಿ.ನಾಸೀರ್ (T Naseer) ಸಂಪರ್ಕ ಬೆಳೆಸಿದ್ದ ವಿಚಾರ ತನಿಖೆಯಿಂದ ಬಯಲಾಗಿತ್ತು. ನಂತರ ಈ ಪ್ರಕರಣ ಎನ್‌ಐಎಗೆ ವರ್ಗಾವಣೆಯಾಗಿತ್ತು
ಬೆಂಗಳೂರು ದಾಳಿಯ ವೇಳೆ ಉಗ್ರರ ಮನೆಯಲ್ಲಿ ಪತ್ತೆಯಾಗಿದ್ದ ಗ್ರೆನೇಡ್‌ಗಳು
ಈ ವರ್ಷದ ಜನವರಿ 12 ರಂದು ಎನ್‌ಐಎ ಈ ಪ್ರಕರಣದ ಸಂಬಂಧ 8 ಮಂದಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿತ್ತು. ಚಾರ್ಜ್‌ಶೀಟ್ ಮಾಡಿರುವ ಆರೋಪಿಗಳಲ್ಲಿ ಕೇರಳದ ಕಣ್ಣೂರು ಜಿಲ್ಲೆಯ ಟಿ ನಾಸೀರ್ 2013 ರಿಂದ ಬೆಂಗಳೂರಿನ ಸೆಂಟ್ರಲ್ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾನೆ. ಉಳಿದ ಇಬ್ಬರು ಆರೋಪಿಗಳಾದ ಜುನೈದ್ ಅಹ್ಮದ್ ಅಲಿಯಾಸ್ ಜೆಡಿ ಮತ್ತು ಸಲ್ಮಾನ್ ಖಾನ್ ವಿದೇಶಕ್ಕೆ ಪರಾರಿಯಾಗಿದ್ದ ವಿಚಾರವನ್ನು ಎನ್‌ಐಎ ಉಲ್ಲೇಖಿಸಿತ್ತು.
ಚಾರ್ಜ್‌ಶೀಟ್‌ನಲ್ಲಿ ಏನಿತ್ತು?
ಆರ್‌ಟಿ ನಗರ ಮನೆಯಲ್ಲಿ ಶೋಧ ಕಾರ್ಯದ ವೇಳೆ ಆರೋಪಿಗಳ ಬಳಿ 7 ನಾಡ ಪಿಸ್ತೂಲ್, 45 ಜೀವಂತ ಗುಂಡು, ಗ್ರೆನೇಡ್ ಹಾಗೂ ವಾಕಿಟಾಕಿಗಳು ಸಿಕ್ಕಿದ್ದವು. ವಿಚಾರಣೆ ಸಂದರ್ಭದಲ್ಲಿ ಆರೋಪಿಗಳು ಬೆಂಗಳೂರಿನಲ್ಲಿ ಸರಣಿ ಬಾಂಬ್ ಸ್ಫೋಟ ನಡೆಸಲು ಮುಂದಾಗಿದ್ದರು ಎಂಬ ವಿಚಾರ ತನಿಖೆಯಿಂದ ಬಯಲಾಗಿತ್ತು.
ಬೆಂಗಳೂರು ದಾಳಿಯ ವೇಳೆ ಉಗ್ರರ ಮನೆಯಲ್ಲಿ ಪತ್ತೆಯಾಗಿದ್ದ ಗ್ರೆನೇಡ್‌ಗಳು ಪೌಡರ್ ರೂಪದ ಕೆಮಿಕಲ್ ಬಳಸಿ ಪೆಟ್ಟಿಗೆಯೊಂದರಲ್ಲಿ ಆರೋಪಿಗಳು ಅಡಗಿಸಿಟ್ಟಿದ್ದರು. ಈ ಬಗ್ಗೆ ಮಾಹಿತಿ ಪಡೆದ ನಂತರ ತನಿಖಾಧಿಕಾರಿಗಳು ಬಾಂಬ್ ನಿಷ್ಟ್ರೀಯ ದಳ (BDDS) ಮತ್ತು FSL ಅಧಿಕಾರಿಗಳ ಜೊತೆಯಲ್ಲಿ ಕಾರ್ಯಾಚರಣೆ ನಡೆಸಿ ಸಜೀವ ಗ್ರೇನೆಡ್‌ಗಳನ್ನ ಪತ್ತೆಮಾಡಿ ವಶಪಡಿಸಿಕೊಳ್ಳಲಾಗಿತ್ತು. ಗ್ರೆನೇಡ್ (Grenade) ಮೇಲಿದ್ದ ಮೇಡ್ ಇನ್ ವಿವರವನ್ನೇ ಆರೋಪಿಗಳು ಅಳಿಸಿ ಹಾಕಿದ್ದರು.
ಸೆರೆ ಸಿಕ್ಕ ಶಂಕಿತರ ಉಗ್ರರ ಹಿಂದೆ ಬ್ಯಾಕ್ ಬೋನ್ ಆಗಿದ್ದ ಮಾಸ್ಟರ್ ಮೈಂಡ್ ಜುನೈದ್ ವಿದೇಶದಲ್ಲಿದ್ದುಕೊಂಡೇ ಬೆಂಗಳೂರಿನಲ್ಲಿ ಬಂಧನಕ್ಕೆ ಒಳಗಾದವರನ್ನು ಸಾಕುತ್ತಿದ್ದ, ಬೆಂಗಳೂರಿನಲ್ಲಿದ್ದವರಿಗೆ ಲಕ್ಷ ಲಕ್ಷ ರೂ. ಫಂಡಿಂಗ್ ಮಾಡ್ತಿದ್ದ. ಜೊತೆಗೆ ಏನೇನು ಮಾಡಬೇಕು ಅಂತಾ ಟ್ರೈನಿಂಗ್ ಕೊಡ್ತಿದ್ದ. ಅದಕ್ಕಾಗಿ ಬೆಂಗಳೂರಿನಲ್ಲಿ ಎಲ್ಲೆಲ್ಲಿ ಕೃತ್ಯ ಎಸಬೇಕು ಅನ್ನೋದರ ನೀಲನಕ್ಷೆಯನ್ನೂ (ಬ್ಲೂ ಪ್ರಿಂಟ್) ಸಿದ್ಧ ಮಾಡಿಕೊಂಡಿದ್ದ.
ಜುನೈದ್ ಕೊಡುವ ಮಾರ್ಗದರ್ಶನದಂತೆ ಸಿಲಿಕಾನ್ ಸಿಟಿಯಲ್ಲಿ ಶಂಕಿತರು ಸ್ಫೋಟಕ್ಕೆ ಸಂಚು ರೂಪಿಸುತ್ತಿದ್ದರು. ನಗರದಲ್ಲಿ 10ಕ್ಕೂ ಹೆಚ್ಚು ಸ್ಥಳಗಳನ್ನು ಗುರುತಿಸಿಕೊಂಡಿದ್ದರು ವಿಚಾರ ಅಂಶ ಚಾರ್ಜ್‌ಶೀಟ್‌ನಲ್ಲಿತ್ತು.
ಬೆಂಗಳೂರು: ಇಡೀ ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Rameshwaram Cafe Bomb Blast Case) ಪ್ರಕರಣವನ್ನು ಈಗಾಗಲೇ ಎನ್‌ಐಎ ತನಿಖೆ (NIA Investigation) ನಡೆಸುತ್ತಿದೆ. ಈ ನಡುವೆ ಸ್ಫೋಟಕ ವಿಚಾರವೊಂದು ಬೆಳಿಕಿಗೆ ಬಂದಿದೆ.
ಶಂಕಿತ ಉಗ್ರ ಮಾಡಿದ್ದೇನು?
ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟ ಬಳಿಕ ಆರೋಪಿ ಮುಸಾವೀರ್ ಮಸೀದಿಗೆ ಹೋಗಿ ಪ್ರಾರ್ಥನೆ ಮಾಡಿದ್ದ. ನಂತರ ಅಲ್ಲಿಂದ ಕೋಲ್ಕತ್ತಾದಲ್ಲಿ ತಲೆ ಮರೆಸಿಕೊಂಡಿದ್ದ, ಅದಕ್ಕಾಗಿ ಹಿಂದೂ ಹೆಸರು ಬಳಕೆ ಮಾಡಿದ್ದ. ಕ್ರಿಪ್ಟೋ ಕರೆನ್ಸಿಯನ್ನ ರೂಪಾಯಿ ಮಾಡಲು ಪ್ರಯತ್ನ ಸಹ ಮಾಡಿದ್ದ ಅನ್ನೋ ಮಾಹಿತಿ ಉನ್ನತ ಮೂಲಗಳಿಂದ ಲಭ್ಯವಾಗಿದೆ.
ನವದೆಹಲಿ: ರೋಹಿಣಿಯ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿನ ಸಿಆರ್‌ಪಿಎಫ್ ಶಾಲೆಯ (CRPF) ಬಳಿ ನಡೆದ ಸ್ಫೋಟಕ್ಕೆ (Blast) ಖಲಿಸ್ತಾನಿ ನಂಟಿದ್ಯಾ ಎಂಬ ಶಂಕೆ ಈಗ ಎದ್ದಿದೆ.
ಭಾರತೀಯ ಏಜೆಂಟರು ಖಲಿಸ್ತಾನ್ (Khalistani) ಪರ ಪ್ರತ್ಯೇಕತಾವಾದಿಗಳನ್ನು ಗುರಿಯಾಗಿಸಿಕೊಂಡಿದ್ದಕ್ಕೆ ಪ್ರತೀಕಾರವಾಗಿ ಸ್ಫೋಟ ನಡೆಸಿದ್ದೇವೆ ಎಂದು ಪಾಕಿಸ್ತಾನದ ಟೆಲಿಗ್ರಾಂ ಚಾನೆಲ್‌ನಲ್ಲಿ ಖಲಿಸ್ತಾನಿ ಗುಂಪು ಹೇಳಿಕೊಂಡಿದೆ.
ಭಾನುವಾರ ನಡೆದ ಸ್ಫೋಟದ (Blast) ತೀವ್ರತೆಗೆ ಹತ್ತಿರದಲ್ಲಿದ್ದ ಕಟ್ಟಡಗಳು ಅದುರಿವೆ. ಸ್ಫೋಟದ ಶಬ್ಧ ಸುಮಾರು 2 ಕಿ.ಮೀ ದೂರದವರೆಗೆ ಕೇಳಿದೆ. ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ನಡೆಸುತ್ತಿದೆ.
ಪೋಸ್ಟ್‌ನಲ್ಲಿ ಏನಿದೆ?
ಭಾರತೀಯ ಹೇಡಿ ಸಂಸ್ಥೆ ಮತ್ತು ಮಾಸ್ತರ್ ನಮ್ಮ ಸದಸ್ಯರನ್ನು ಗುರಿಯಾಗಿಸಿ ಗುಂಡಾಗಳನ್ನು ನೇಮಿಸಿ ನಮ್ಮ ಧ್ವನಿಯನ್ನು ಹತ್ತಿಕ್ಕುತ್ತಿದ್ದಾರೆ ಎಂದರೆ ಅದು ಮುರ್ಖತನವಾದಿತು. ನಾವು ಎಷ್ಟು ಹತ್ತಿರದಲ್ಲಿದ್ದೇವೆ ಮತ್ತು ನಾವು ಯಾವಾಗ ಬೇಕಾದರೂ ದಾಳಿ ನಡೆಸಲು ಸಮರ್ಥರಿದ್ದೇವೆ ಎಂದು ಜಸ್ಟೀಸ್ ಲೀಗ್ ಇಂಡಿಯಾ ಹೇಳಿಕೊಂಡಿದೆ. ಈ ಪೋಸ್ಟ್‌ನೊಂದಿಗೆ ಸ್ಫೋಟಗೊಳ್ಳುತ್ತಿರುವ ದೃಶ್ಯದ ವಿಡಿಯೋವನ್ನು ಅಪ್ಲೋಡ್ ಮಾಡಿ ಖಲಿಸ್ತಾನ ಜಿಂದಾಬಾದ್ ಎಂದು ಹೇಳಿದೆ.
ಸ್ಫೋಟದ ನಂತರ, ರಾಷ್ಟ್ರೀಯ ತನಿಖಾ ದಳ, ರಾಷ್ಟ್ರೀಯ ಭದ್ರತಾ ಪಡೆ (ಎನ್‌ಎಸ್‌ಜಿ), ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ದೆಹಲಿ ಪೊಲೀಸರ ತಂಡಗಳು ಪ್ರದೇಶವನ್ನು ಸುತ್ತುವರೆದಿವೆ. ವಿಧಿವಿಜ್ಞಾನ ತಜ್ಞರು ಸ್ಥಳದಿಂದ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಫೋಟ ಸೆರೆಯಾಗಿದೆ. ಸ್ಫೋಟದ ತೀವ್ರತೆಗೆ ಹತ್ತಿರದ ಅಂಗಡಿಗಳ ಕಿಟಕಿ ಗಾಜುಗಳನ್ನು ನಾಶಪಡಿಸಿದೆ ಮತ್ತು ಹತ್ತಿರದಲ್ಲಿ ನಿಲ್ಲಿಸಿದ್ದ ಕೆಲವು ಕಾರುಗಳನ್ನು ಹಾನಿಗೊಯಾಗಿದೆ.
ಭಾನುವಾರ ಬೆಳಗ್ಗೆ 7:35ರಿಂದ 7:40ರ ನಡುವೆ ಬಾಂಬ್ ಸ್ಫೋಟಗೊಂಡಿದೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದರಿಂದ ತಡರಾತ್ರಿ ಬಾಂಬ್ ಇರಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ನವದೆಹಲಿ: ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ದಾಸ್ತಾನು ಮಾಡಿದ ಪ್ರಕರಣದಲ್ಲಿ ಕುಟುಂಬವೊಂದನ್ನು ರಕ್ಷಿಸಲು ವ್ಯಕ್ತಿಯೊಬ್ಬರಿಂದ 2.5 ಕೋಟಿ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಆರೋಪದ ಮೇಲೆ ಎನ್‌ಐಎ ಅಧಿಕಾರಿಯೊಬ್ಬರನ್ನು (NIA Officer) ಕೇಂದ್ರೀಯ ತನಿಖಾ ದಳ (CBI) ಬಂಧಿಸಿದೆ.
ಭಯೋತ್ಪಾದನೆ ಪ್ರಕರಣದಲ್ಲಿ ತಮ್ಮ ಕುಟುಂಬವನ್ನು ಸಿಲುಕಿಸುವುದಾಗಿ ಬೆದರಿಸಿ, 2.5 ಕೋಟಿ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆಂದು ಆರೋಪಿಸಿ ಪಾಟ್ನಾ ಎನ್‌ಐಎ ಘಟಕದ ಉಪ ಎಸ್ಪಿ ಅಜಯ್ ಪ್ರತಾಪ್ ಸಿಂಗ್ ವಿರುದ್ಧ ರಾಮಯ್ಯ ಕನ್‌ಸ್ಟ್ರಕ್ಷನ್ ಮಾಲೀಕ ರಾಕಿ ಯಾದವ್ ಸಿಬಿಐಗೆ ದೂರು ಸಲ್ಲಿಸಿದ್ದರು. ದೂರಿನ ಆಧಾರದ ಮೇಲೆ ಎನ್‌ಐಎ ಅಧಿಕಾರಿಯನ್ನ ಸಿಬಿಐ ಬಂಧಿಸಿದೆ. ಇದನ್ನೂ ಓದಿ: ದರ್ಶನ್‌ಗೆ ಇವತ್ತೂ ಸಿಗಲಿಲ್ಲ ಬೇಲ್ – ಜಾಮೀನು ಅರ್ಜಿ ವಿಚಾರಣೆ ಶನಿವಾರಕ್ಕೆ ಮುಂದೂಡಿಕೆ
ಏನಿದು ಪ್ರಕರಣ?
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕಳೆದ ಸೆಪ್ಟೆಂಬರ್ 19 ರಂದು ರಾಕಿ ಯಾದವ್‌ಗೆ ಸಂಬಂಧಿಸಿದ ಸ್ಥಳದಲ್ಲಿ ಶೋಧ ನಡೆಸಿತ್ತು. ಬಳಿಕ ಪ್ರಕರಣದ ತನಿಖಾಧಿಕಾರಿಯಾಗಿದ್ದ ಪ್ರತಾಪ್ ಸಿಂಹ್ ಸೆ.26ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದರು. ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ದಾಸ್ತಾನು ಮಾಡಿದ ಪ್ರಕರಣದಲ್ಲಿ ತಮ್ಮ ಕುಟುಂಬವನ್ನು ರಕ್ಷಿಸಬೇಕಾದ್ರೆ 2.5 ಕೋಟಿ ಲಂಚ ನೀಡುವಂತೆ ಬೇಡಿಕೆಯಿಟ್ಟಿದ್ದರು. ಕುಟುಂಬದ ಸಲುವಾಗಿ ಒಪ್ಪಿಕೊಂಡಿದ್ದೆ ಎಂಬುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಆರೋಪಿ ಪ್ರತಾಪ್ ಸಿಂಗ್ ಸೆಪ್ಟೆಂಬರ್ 26 ರಂದು 25 ಲಕ್ಷ ರೂ. ಮುಂಗಡ ಹಣ ಪಾವತಿಸಲು ಯಾದವ್‌ಗೆ ಹೇಳಿದ್ದರು. ಮಧ್ಯವರ್ತಿಯೊಬ್ಬರ ಮೊಬೈಲ್ ಸಂಖ್ಯೆ ಹೊಂದಿರುವ ಕೈಬರಹದ ಟಿಪ್ಪಣಿಯನ್ನು ಅವರಿಗೆ ನೀಡಿದರು. ನಂತರ ಬಿಹಾರದ ಔರಂಗಾಬಾದ್‌ಗೆ ತಲುಪಿ ಮಧ್ಯವರ್ತಿ ಮೂಲಕ ಹಣ ತಲುಪಿಸಿದ್ದರು. ಇದಾದ ಮೇಲೆ ಅಕ್ಟೋಬರ್ 1 ರಂದು ಸಿಂಗ್ ಮತ್ತೆ ಯಾದವ್ ಅವರನ್ನು ಕರೆಸಿ, 70 ಲಕ್ಷ ರೂ.ಗೆ ಬೇಡಿಕೆ ಇಡಲಾಗಿತ್ತು ಎಂದು ಸಿಬಿಐಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: Chhattisgarh | ಭದ್ರತಾ ಪಡೆಗಳಿಂದ ಎನ್‌ಕೌಂಟರ್ – 7 ನಕ್ಸಲರು ಬಲಿ
ದೂರುದಾರ ಯಾದವ್‌ರಿಂದ ಅಕ್ರಮವಾಗಿ 20 ಲಕ್ಷ ರೂ. ವಸೂಲಿ ಮಾಡುತ್ತಿದ್ದಾಗ ಆರೋಪಿ ತನಿಖಾ ಅಧಿಕಾರಿ ಹಾಗೂ ಅವರ ಇಬ್ಬರು ಏಜೆಂಟರು ಸಿಬಿಐ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಇಬ್ಬರು ಮಧ್ಯವರ್ತಿ ಆರೋಪಿ ಹಿಮಾಂಶು ಮತ್ತು ರಿತಿಕ್ ಕುಮಾರ್ ಸಿಂಗ್ ಬಂಧಿತರು. ಇದಾದ ಬಳಿಕ ಗಯಾ, ಪಾಟ್ನಾ ಮತ್ತು ವಾರಣಾಸಿಯ ಹಲವು ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, 20 ಲಕ್ಷ ರೂ. ಲಂಚದ ಹಣ ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ಹೇಳಿದೆ. ಇದನ್ನೂ ಓದಿ: ಮೂರು ಜಿಲ್ಲೆಗಳ ಕಾಡಾನೆ ಹಾವಳಿ ತಡೆಗೆ ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪನೆ: ಈಶ್ವರ್ ಖಂಡ್ರೆ
– ದಾವಣಗೆರೆ ಮೂಲದ ವ್ಯಕ್ತಿಯಿಂದಲೇ ಪಾಕ್ ಮೂಲದವರಿಗೆ ಆಶ್ರಯ
ದಾವಣಗೆರೆ: ಬಾಂಗ್ಲಾದೇಶ ಹಾಗೂ ಪಾಕಿಸ್ತಾನದಿಂದ ಬಂದು, ಹಿಂದೂಗಳ (Hindu) ಹೆಸರಿಟ್ಟುಕೊಂಡು ಅಕ್ರಮವಾಗಿ ನೆಲೆಸಿದ್ದ ಪಾಕ್ ಮೂಲದ ಮಹಿಳೆ ಹಾಗೂ ದಾವಣಗೆರೆ (Davanagere) ಮೂಲದ ವ್ಯಕ್ತಿ ಚೆನ್ನೈನಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.
ಮಂಗಳವಾರ ಬೆಂಗಳೂರಿನ ಆನೇಕಲ್ ತಾಲೂಕಿನ ಜಿಗಣಿ ಠಾಣೆಯ ಪೊಲೀಸರು ನಾಲ್ವರನ್ನ ಬಂಧಿಸಿದ್ದರು. ಇವರು ಜಿಗಣಿ ಪೊಲೀಸ್ ಠಾಣೆಯ ವ್ಯಾಪ್ತಿಯ ರಾಜಾಪೂರ ಗ್ರಾಮದಲ್ಲಿ ವಾಸವಿದ್ದರು. ಈ ಪ್ರಕರಣ ಹೊರ ಬಿದ್ದ ಬೆನ್ನಲ್ಲೇ ನಕಲಿ ದಾಖಲೆ ಸೃಷ್ಠಿಸಿ ನೆಲೆಸಿದ್ದ ದಾವಣಗೆರೆ ಮೂಲದ ಅಲ್ತಾಫ್ ಹಾಗೂ ಆತನ ಹೆಂಡತಿ ಪಾಕ್ ಮೂಲದ ಫಾತಿಮಾ ಚೆನ್ನೈನಲ್ಲಿ ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: ಹಿಂದೆ ಹೋಗು ಎಂದಿದ್ದಕ್ಕೆ ಬಿಎಂಟಿಸಿ ಕಂಡಕ್ಟರ್ ಹೊಟ್ಟೆಗೆ ಚಾಕು ಇರಿದ ಯುವಕ
ಅಲ್ತಾಫ್ ತಂದೆ ಖಲಂದರಸಾಬ್ ಆರೋಗ್ಯ ಇಲಾಖೆಯಲ್ಲಿ ಆರೋಗ್ಯ ನಿರೀಕ್ಷಕರಾಗಿದ್ದರು. ದಾವಣಗೆರೆ ನಗರದ ಶಿವಕುಮಾರ ಬಡಾವಣೆಯಲ್ಲಿ ಜೆಕೆ ಮಂಜಿಲ್ ಎಂಬಲ್ಲಿ ಸ್ವಂತ ಮನೆ ಹೊಂದಿದ್ದಾರೆ. ಖಲಂದರ ಸಾಬ್ ಬೆಂಗಳೂರಿಗೆ ವರ್ಗಾವಣೆ ಆದ ಬಳಿಕ ಕುಟುಂಬ ಬೆಂಗಳೂರಿನಲ್ಲಿದೆ. ಅವರ ಮೂರು ಜನ ಮಕ್ಕಳಲ್ಲಿ ಈಗ ಚೆನ್ನೈನಲ್ಲಿ ಬಂಧನಕ್ಕೊಳಗಾದ ಅಲ್ತಾಫ್ ಕೂಡ ಒಬ್ಬ ಎಂಬುದು ಆಘಾತಕಾರಿ ವಿಚಾರ. ಇತ್ತ ಫಾತಿಮಾ ಎಂಬ ಪಾಕ್ ಮೂಲಕ ಯುವತಿಯನ್ನ ಮದ್ವೆ ಆಗಿದ್ದಾನೆ. ಬಾಂಗ್ಲಾ ದೇಶಕ್ಕೆ ಹೋಗಿ ವಾಪಸ್ ಬರುವಾಗ ಈತ ಚೆನ್ನೈ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಇವರಿಬ್ಬರು ಇಸ್ಲಾಂ ಧರ್ಮದ ಬಗ್ಗೆ ಪ್ರಚಾರ ಮಾಡುವ ಮೆಹೆದಿ ಫೌಂಡೇಷನ್ ಇಂಟರ್ ನ್ಯಾಷನಲ್ ಸಂಸ್ಥೆಗಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಫಾತಿಮಾಳನ್ನು ಮದುವೆಯಾದ ಬಳಿಕ ಅವಳ ತಂದೆ, ತಾಯಿ, ಅಣ್ಣ ಅತ್ತಿಗೆಯನ್ನ ಪಾಕ್ ಮತ್ತು ಬಾಂಗ್ಲಾದಿಂದ ಮೊದಲು ದೆಹಲಿ ನಂತರ ಬೆಂಗಳೂರಿಗೆ ಕರೆಸಿಕೊಂಡಿದ್ದರು. ಅಲ್ಲದೇ ಪಾಕ್ ಮೂಲದ ಮಹಿಳೆಗೆ ದಾವಣಗೆರೆಯ ನಿವಾಸದ ವಿಳಾಸದಲ್ಲೇ ಪಾಸ್‌ಪೋರ್ಟ್ ದಾಖಲೆಗಳನ್ನು ಮಾಡಿಸಿಕೊಟ್ಟಿದ್ದರು ಎಂಬ ರಹಸ್ಯವೂ ತನಿಖೆಯಲ್ಲಿ ಬಯಲಾಗಿದೆ.
ಪಾಕ್ ಮೂಲದ ಪ್ರಜೆಗಳು 2018ರಲ್ಲಿ ಬೆಂಗಳೂರಿಗೆ ಬಂದಿದ್ದಾರೆ. ದೆಹಲಿಯಲ್ಲಿ ನಕಲಿ ಆಧಾರ್ ಕಾರ್ಡ್ ಮಾಡಿಸಿಕೊಂಡಿದ್ದಾರೆ. ಯಾರಿಗೂ ಸಂಶಯ ಬಾರದಿರಲಿ ಎಂದು ಹಿಂದೂಗಳ ಹೆಸರಿಟ್ಟುಕೊಂಡು ಜೀವನ ನಡೆಸುತ್ತಿದ್ದರು. ರಶೀದ್ ಅಲಿ ಸಿದ್ದೀಕಿ ಅಲಿಯಾಸ್ ಶಂಕರ್ ಶರ್ಮಾ, ಪಾಕಿಸ್ತಾನದ ಕರಾಚಿ ಮೂಲದವರು. ಆಯೆಷಾ ಅಲಿಯಾಸ್ ಆಶಾರಾಣಿ, ಹನೀಫ್ ಮೊಹಮ್ಮದ್ ಅಲಿಯಾಸ್ ರಾಮ್ ಬಾಬು ಶರ್ಮಾ, ರುಬೀನಾ ಅಲಿಯಾಸ್ ರಾಣಿ ಶರ್ಮಾ ಲಾಹೋರ್ ಮೂಲದವರು. ಈ ನಾಲ್ವರನ್ನ ಜಿಗಣಿ ಪೊಲೀಸರು ಬಂಧಿಸಿದ್ದರು.
ಅಲ್ತಾಫ್ ಮತ್ತು ಫಾತಿಮಾ ದಂಪತಿ ಇಲ್ಲಿನ ಮುಸ್ಲಿಂ ಸಮಾಜದವರಿಗೆ ಮುಸ್ಲಿಂ ಪ್ರಚಾರ ಕಾರ್ಯಕ್ರಮಗಳನ್ನು ನೋಡುವಂತೆ ಪ್ರೇರೇಪಿಸುತ್ತಿದ್ದರು. ಈ ಕೆಲಸಕ್ಕಾಗಿ ಇವರಿಗೆ ಫಂಡಿಂಗ್ ಕೂಡ ಬರುತ್ತಿತ್ತು. ಸದ್ಯ ಇಬ್ಬರನ್ನು ಬಂಧಿಸಿರುವ ತನಿಖಾ ಸಂಸ್ಥೆಗಳು ಅಲ್ತಾಫ್ ಮನೆಯಲ್ಲಿ ಪರಿಶೀಲನೆ ನಡೆಸಿವೆ. ದಾವಣಗೆರೆ ಪೊಲೀಸರು ಕೂಡ ಅಲರ್ಟ್ ಆಗಿದ್ದು, ನಕಲಿ ಪಾಸ್‌ಪೋರ್ಟ್‌ಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ.
ಬೆಂಗಳೂರು: ಅಸ್ಸಾಂ ಎನ್‌ಐಎ ಅಧಿಕಾರಿಗಳಿಂದ ಬೆಂಗಳೂರು ಗ್ರಾಮಾಂತರದ ಜಿಗಣಿಯಲ್ಲಿ ಬಂಧಿತನಾಗಿದ್ದ ಉಲ್ಫಾ ಉಗ್ರನಿಂದ ಸ್ಫೋಟಕ ರಹಸ್ಯವೊಂದು ಬಯಲಾಗಿದೆ. ಶಂಕಿತ ಉಗ್ರನ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿರುವ ಎನ್‌ಐಎ (NIA) ಅಧಿಕಾರಿಗಳು ಮಂಗಳವಾರ ಅಸ್ಸಾಂನ (Assam) ಉತ್ತರ ಲಖೀಂಪುರದಲ್ಲಿ ಜೀವಂತ ಐಇಡಿಗಳನ್ನ (ಸುಧಾರಿತ ಸ್ಫೋಟಕ ಸಾಧನ) ವಶಕ್ಕೆ ಪಡೆದಿದ್ದಾರೆ.
ಎನ್‌ಐಎ ಅಧಿಕಾರಿಗಳ ವಿಚಾರಣೆ ವೇಳೆ ಶಂಕಿತ (Suspected Terrorist) ಉಗ್ರ ಗಿರಿಸ್ ಬೋರಾ ಅಲಿಯಾಸ್ ಗೌತಮ್, ಅಸ್ಸಾಂನಲ್ಲಿ ಐಇಡಿ ಇಟ್ಟ ಸ್ಫೋಟಕ ವಿಚಾರ ಬಾಯ್ಬಿಟ್ಟಿದ್ದಾನೆ. ಅಲ್ಲದೇ ಉಲ್ಫಾ(I) ಸಂಘಟನೆಯ ನಾಯಕರು ಹೇಳಿದಂತೆ ಐಇಡಿಗಳನ್ನ ಇಟ್ಟಿದ್ದೆ. ಆಗಸ್ಟ್ 15ರಂದು ಸ್ಫೋಟಿಸಲು ಸಂಜು ರೂಪಿಸಲಾಗಿತ್ತು ಎಂದೂ ಸಹ ಒಪ್ಪಿಕೊಂಡಿದ್ದಾನೆ. ಶಂಕಿತ ಉಗ್ರನ ಮಾಹಿತಿ ಮೇರೆಗೆ ತನಿಖೆ ನಡೆಸಿದ ಎನ್‌ಐಎ ಅಧಿಕಾರಿಗಳು ಲಖೀಂಪುರ ಜಿಲ್ಲೆಯಲ್ಲಿ ಇಟ್ಟಿದ್ದ ಕೆಲವು ಜೀವಂತ ಐಇಡಿಗಳನ್ನ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ತನಿಖೆಯನ್ನೂ ಮುಂದುವರಿಸಿದ್ದಾರೆ. ಇದನ್ನೂ ಓದಿ: ರಸ್ತೆ, ರೈಲು ಹಳಿಗಳನ್ನು ಅತಿಕ್ರಮಿಸುವ ಯಾವುದೇ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಬೇಕು: ಸುಪ್ರೀಂ
ನಾಲ್ವರು ಪಾಕ್ ಪ್ರಜೆಗಳು ಅರೆಸ್ಟ್; ತನಿಖೆ ತೀವ್ರ
ಪಾಕಿಸ್ತಾನಿ ನ್ಯಾಷನಲಾಟಿ ಗುಮಾನಿ ಮೇಲೆ ನಾಲ್ವರು ಪಾಕ್ ಪ್ರಜೆಗಳು ಅರೆಸ್ಟ್ ಪ್ರಕರಣದ ತನಿಖೆ ದಿನ ಕಳೆದಂತೆ ತೀವ್ರಗೊಳ್ಳುತ್ತಿದೆ. IB, NIA ಮತ್ತು ಆನೇಕಲ್ ಉಪವಿಭಾಗದ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆರ್ ಹಿತೇಂದ್ರ ಭೇಟಿ ನೀಡಿ ತನಿಖೆ ಬಗ್ಗೆ ಚರ್ಚೆ ನಡೆಸಿದ್ದು, ಒಂದಷ್ಟು ಸಲಹೆ ಸೂಚನೆ ನೀಡಿದೆ. ಇದನ್ನೂ ಓದಿ: ಪ್ರವಾದಿ ಮೊಹಮ್ಮದ್‌ರ ವಿರುದ್ಧ ಅವಹೇಳನಕಾರಿ ಹೇಳಿಕೆ – ಧಾರ್ಮಿಕ ಮುಖಂಡ ಮಹಂತ್ ರಾಮಗಿರಿ ಮಹಾರಾಜ್ ವಿರುದ್ಧ 67 FIR
ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಜಿಗಣಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ರಶೀದ್ ಆಲಿ ಸಿದ್ಧಕಿ ಕುಟುಂಬದ ತನಿಖೆ ಮುಂದುವರಿದಿದೆ. IB, NIA ಮತ್ತು ಆನೇಕಲ್ ಉಪವಿಭಾಗದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳ ಹಿನ್ನೆಲೆ ಭಾರತಕ್ಕೆ ಅಕ್ರಮವಾಗಿ ಎಂಟ್ರಿ ಕೊಟ್ಟ ಉದ್ದೇಶ ಮತ್ತು ಭಾಗ ದಾಖಲೆಗಳ ಸೃಷ್ಟಿ ಬಗ್ಗೆ ತನಿಖೆಯನ್ನು ಕೇಂದ್ರಿಕರಿಸಲಾಗಿದೆ. ಆರೋಪಿಗಳು ಮೆಹದಿ ಫೌಂಡೇಷನ್ ನ ಪರ್ವೇಜ್ ಭಾರತಕ್ಕೆ ಬರುವಂತೆ ಹೇಳಿ ದಾಖಲೆಗಳು ಸೇರಿದಂತೆ ಅಗತ್ಯ ಸೌಲಭ್ಯ ವ್ಯವಸ್ಥೆ ಕಲ್ಲಿಸಿದನು. ಯೂನಸ್ ಅಲ್ಗೋರ್ ಧರ್ಮ ಗುರುಗಳ ಪ್ರವಚನ ಪ್ರಚಾರಕ್ಕೆ ಹಣ ನೀಡುತ್ತಿದ್ದರು. ಜೀವನಕ್ಕಾಗಿ ಬಿರಿಯಾನಿ ಹೊಟೇಲ್ ವ್ಯವಹಾರ ಮಾಡುತ್ತಿದ್ದೆವು ಎನ್ನುತ್ತಿದ್ದಾರೆ. ಆದ್ರೆ ಆರೋಪಿಗಳ ಹೇಳಿಕೆ ನಂಬಲು ಸಾಧ್ಯವಿಲ್ಲ ಎಂಬ ವಿಚಾರಗಳು ಪ್ರಾಥಮಿಕ ತನಿಖೆಯಲ್ಲಿ ಲಭ್ಯವಾಗಿದೆ. ಇದನ್ನೂ ಓದಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬಳಕೆದಾರರಿಗೆ ದರ ಏರಿಕೆ ಬಿಸಿ – ಇಂದಿನಿಂದಲೇ ಹೊಸ ದರ ಅನ್ವಯ
ಬಂಧಿತ ಪಾಕ್ ಪ್ರಜೆಗಳಾದ ರಶೀದ್ ಅಲಿ ಸಿದ್ಧಕಿ ಮತ್ತು ಆತನ ಪತ್ನಿ ಆಯೇಷಾ ಹನೀಫ್‌ಳನ್ನು IB ಮತ್ತು NIA ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಬಾಂಗ್ಲಾದೇಶ ದೇಶದ ಗಲಭೆಯಲ್ಲಿ ಜೈಲಿನಿಂದ ಪರಾರಿಯಾದ ಖೈದಿಗಳ ಸಂಪರ್ಕ. ಪಾಕಿಸ್ತಾನಿ ಉಗ್ರ ಸಂಘಟನೆಗಳ ಲಿಂಕ್ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಸದ್ಯ ಆರೋಪಿಗಳ ವಾಸವಿದ್ದ ಮನೆಯಲ್ಲಿ ಮೊಬೈಲ್, ಲ್ಯಾಪ್‌ಟಾಪ್, ಕೆಲ ಎಲೆಕ್ಟ್ರಾನಿಕ್ ವಸ್ತುಗಳು ದೊರೆತ್ತಿದ್ದು, ಅವುಗಳನ್ನು FSLಗೆ ರವಾನಿಸಲಾಗಿದೆ. ಧರ್ಮ ಪ್ರಚಾರದ ಜೊತೆ ದೇಶದಲ್ಲಿ ವಿಧ್ವಂಸಕ ಕೃತ್ಯ ಎಸಗುವ ಉದ್ದೇಶದ ಬಗ್ಗೆ ಯಾವುದೇ ಪುರಾವೆ ಇಲ್ಲಿಯವರೆಗೆ ಸಿಕ್ಕಿಲ್ಲ. ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ. ಬಂಧಿತ ಮೊಹಮ್ಮದ್ ಹನೀಫ್ ಮಗಳಾದ ಫಾತಿಮಾ ಪತಿ ಅಲ್ತಾಫ್ ದಾವಣಗೆರೆ ಮೂಲದವನಾಗಿದ್ದು, ಚೆನ್ನೈನಲ್ಲಿ ಬಂಧಿಸಲಾಗಿದೆ. ಚೆನ್ನೈ NIA ಅಧಿಕಾರಿಗಳ ಜೊತೆಯು ಸಂಪರ್ಕದಲ್ಲಿದ್ದು, ತನಿಖೆ ಇನ್ನೂ ಪ್ರಗತಿಯಲ್ಲಿದೆ ಎಂದು ಎಡಿಜಿಪಿ ಅರ್. ಹಿತೇಂದ್ರ ತಿಳಿಸಿದ್ದಾರೆ.
ಪಾಕ್ ಪ್ರಜೆಗಳ ಬಂಧನದ ಪ್ರಕರಣದ ಜಾಡು ಮುಂಬೈ ಮತ್ತು ದೆಹಲಿವರೆಗೆ ವ್ಯಾಪಿಸಿದ್ದು, ಬಂಧಿತರ ಜೊತೆ ನೂರಕ್ಕೂ ಅಧಿಕ ಮಂದಿ ನಿರಂತರ ಸಂಪರ್ಕದಲ್ಲಿರುವುದು ತನಿಖೆ ವೇಳೆ ಪತ್ತೆಯಾಗಿದ್ದು, ಅವರೆಲ್ಲರೂ ಪಾಕಿಸ್ತಾನ ಮೂಲದವರ ಎಂಬುದು ಪೊಲೀಸರ ತನಿಖೆಯಿಂದ ದೃಢವಾಗಬೇಕಿದೆ.
ಉಲ್ಫಾ (United Liberation Front of Asom -ULFA) ಸಂಘಟನೆಗೆ ಸೇರಿದ್ದ ಗಿರಿಸ್ ಬೋರಾ ಅಸ್ಸಾಂ ಗುವಾಹಟಿಯಲ್ಲಿ ಐಇಡಿ ಇಟ್ಟು ಬೆಂಗಳೂರಿಗೆ ಕುಟುಂಬ ಸಮೇತ ಬಂದಿದ್ದ. ಖಾಸಗಿ ಕಂಪನಿಯಲ್ಲಿ ಗೌತಮ್ ಹೆಸರಿನಲ್ಲಿ ಸೆಕ್ಯೂರಿಟಿಯಾಗಿ ಕೆಲಸಕ್ಕೆ ಸೇರಿದ್ದ.
ಈತನ ಬಗ್ಗೆ ಖಚಿತ ಮಾಹಿತಿಯನ್ನು ಸಂಗ್ರಹಿಸಿದ್ದ ಎನ್‌ಐಎ ಇಂದು ಬಂಧಿಸಿದೆ.
ಮಂಡ್ಯ: ಕಳೆದ ಬುಧವಾರ ನಾಗಮಂಗಲದಲ್ಲಿ (Nagamangala) ನಡೆದ ಗಲಭೆಯಲ್ಲಿ ಬಾಂಗ್ಲಾದೇಶ ಲಿಂಕ್ ಇದೆ ಎಂದು ಅನುಮಾನ ವ್ಯಕ್ತಪಡಿಸಿ ಜೆಡಿಎಸ್‌ನ ಮಾಜಿ ಶಾಸಕ ಸುರೇಶ್‌ಗೌಡ (Suresh Gowda) ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಕಳೆದ ಬುಧವಾರ ನಾಗಮಂಗಲದಲ್ಲಿ ನಡೆದ ಗಲಭೆಯಲ್ಲಿ ಕೇರಳ ಹಾಗೂ ನಿಷೇಧಿತ ಪಿಎಫ್‌ಐ ಸಂಘಟನೆ ಲಿಂಕ್ ಇದೆ ಎಂಬ ಅನುಮಾನಗಳು ವ್ಯಕ್ತವಾಗಿದೆ. ಜೊತೆಗೆ ಈ ಕೃತ್ಯದಲ್ಲಿ ಬಾಂಗ್ಲಾದೇಶ (Bangladesh) ಲಿಂಕ್ ಸಹ ಇದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕೇಸ್- ಇಂದು ಸುಪ್ರೀಂನಲ್ಲಿ ವಿಚಾರಣೆ
ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ದುಷ್ಕರ್ಮಿಗಳು ಎಸಗಿರುವ ಕೃತ್ಯದಿಂದ ಇಡೀ ಪಟ್ಟಣದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಗಲಭೆ ನಡೆದ ಬಳಿಕ ಇದಕ್ಕೆ ಯಾರು ಕಾರಣ ಎಂದು ಪೊಲೀಸ್ ಇಲಾಖೆ ತನಿಖೆ ನಡೆಸಿತ್ತು. ಈ ಸಂಬಂಧ ಈಗಾಗಲೇ 55 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಪೈಕಿ ಕೇರಳದ ಮಲ್ಲಪುರಂ ಮೂಲದ ಯೂಸುಫ್ ಹಾಗೂ ನಾಸೀರ್ ಎಂಬುವವರು ಇದ್ದು, ಇವರು ನಿಷೇಧಿತ ಸಂಘಟನೆಯಾದ ಪಿಎಫ್‌ಐನಲ್ಲಿ ಗುರುತಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಇದೀಗ ಗಲಭೆಯಲ್ಲಿ ಕೇವಲ ಕೇರಳ ಮೂಲದ ಪಿಎಫ್‌ಐ (PFI) ಸಂಘಟನೆಯವರು ಮಾತ್ರವಲ್ಲ. ಬಾಂಗ್ಲಾದೇಶದಿಂದ ಆಕ್ರಮವಾಗಿ ಬಂದು ನಾಗಮಂಗಲ ತಾಲೂಕಿನಲ್ಲಿ ನೆಲಸಿರುವವರು ಸಹ ಭಾಗಿಯಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಕೇವಲ ಕೇರಳ ಮೂಲದವರ ಕೈವಾಡವಿಲ್ಲ. ಅಕ್ರಮವಾಗಿ ನಾಗಮಂಗಲದಲ್ಲಿ ನೆಲೆಸಿರುವ ಬಾಂಗ್ಲಾದೇಶದ ಪ್ರಜೆಗಳ ಕೈವಾಡ ಸಹ ಇದೆ ಎಂಬಂತೆ ಕಾಣುತ್ತಿದೆ. ನಾಗಮಂಗಲ ತಾಲೂಕಿನ ಹಲವೆಡೆ ತೋಟದ ಮನೆಗಳಲ್ಲಿ ಅಕ್ರಮವಾಗಿ ಬಾಂಗ್ಲಾದೇಶದ ಹಲವರು ನೆಲೆಸಿದ್ದಾರೆ. ನಾನು ಶಾಸಕನಾಗಿದ್ದ ವೇಳೆ ಪೊಲೀಸ್ ಇಲಾಖೆಗೆ ಹಾಗೂ ಆಗಿನ ಗೃಹ ಸಚಿವರಿಗೂ ಮಾಹಿತಿ ನೀಡಿದ್ದೇನೆ. ಆದರೆ ಅವರನ್ನು ಪತ್ತೆ ಹಚ್ಚುವ ಕೆಲಸ ಮಾಡಿಲ್ಲ. ಈ ತನಿಖೆಯನ್ನು ಎನ್‌ಐಎಗೆ ನೀಡಿದರೆ ಎಲ್ಲಾ ಸತ್ಯಗಳು ಹೊರಗೆ ಬರುತ್ತವೆ. ಹೀಗಾಗಿ ನಾಗಮಂಗಲ ಗಲಭೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಎನ್‌ಐಎಗೆ (NIA) ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.ಇದನ್ನೂ ಓದಿ: ರಾತ್ರೋರಾತ್ರಿ ಸ್ಮಶಾನ ಒಡೆದು ಇಂದಿರಾ ಕ್ಯಾಂಟೀನ್ ನಿರ್ಮಾಣ – ಸ್ಥಳೀಯರಿಂದ ಆಕ್ರೋಶ
ನಾಗಮಂಗಲದ ಗಲಭೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಬಾಂಗ್ಲಾದೇಶದವರ ಕೈವಾಡದ ಬಗ್ಗೆ ಗಂಭೀರ ಆರೋಪಗಳು ಕೇಳಿ ಬರುತ್ತಿದೆ. ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡು ತನಿಖೆಯ ಜವಾಬ್ದಾರಿಯನ್ನು ಎನ್‌ಐಎಗೆ ಒಪ್ಪಿಸುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ ಎಂದಿದ್ದಾರೆ.