Tag: ಎನ್‍ಐಎ

  • ರಾಮೇಶ್ವರಂ ಕೆಫೆ ಸ್ಫೋಟ – ಎನ್‌ಐಎಯಿಂದ ಸ್ಪಾಟ್‌ ಮಹಜರು

    ರಾಮೇಶ್ವರಂ ಕೆಫೆ ಸ್ಫೋಟ – ಎನ್‌ಐಎಯಿಂದ ಸ್ಪಾಟ್‌ ಮಹಜರು

    ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (The Rameshwaram Cafe Bomb Blast Case) ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಇಂದು ಆರೋಪಿಗಳನ್ನು ಕರೆ ತಂದು ಸ್ಪಾಟ್‌ ಮಹಜರು ನಡೆಸುತ್ತಿದೆ.

    ಮುಂಜಾನೆ 5:30ಕ್ಕೆ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಗೆ ಆರೋಪಿಗಳಾದ ಮಸ್ಸಾವೀರ್, ಅಬ್ಧುಲ್ ಮತೀನ್ ತಹಾ ಅವರನ್ನು ಕರೆದುಕೊಂಡ ಬಂದ ಎನ್‌ಐಎ ಸ್ಥಳ ಮಹಜರು ಪ್ರಕ್ರಿಯೆ ನಡೆಸುತ್ತಿದೆ. ಇದನ್ನೂ ಓದಿ: ತಮಿಳುನಾಡಿಗೂ ಕಾವೇರಿ ಹರಿದರೂ ರೈತರಿಗೆ ತಪ್ಪದ ಕಂಟಕ!

     

    ಮಾರ್ಚ್‌ 1 ರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ನಡೆದಿತ್ತು. ಹಲವು ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿದ ಬಳಿಕ ಎನ್‌ಐಎ ಕೋಲ್ಕತ್ತಾದಲ್ಲಿ ಏಪ್ರಿಲ್‌ 12 ರಂದು ಮಸ್ಸಾವೀರ್, ಅಬ್ಧುಲ್ ಮತೀನ್ ತಹಾ ಅವರನ್ನು ಬಂಧಿಸಿತ್ತು.

    ಸ್ಥಳೀಯ ಪೊಲೀಸರ ಭದ್ರತೆಯ ನಡುವೆ ಈಗ ಎನ್‌ಐಎ ಮಹಜರು ಪ್ರಕ್ರಿಯೆ ನಡೆಸುತ್ತಿದೆ.

     

  • ರಿಯಾಸಿ ಬಸ್‌ ಮೇಲೆ ದಾಳಿ – ಉಗ್ರರಿಗೆ ಸಹಕಾರ ನೀಡಿದ್ದ ಓರ್ವ ವ್ಯಕ್ತಿ ಅರೆಸ್ಟ್‌

    ರಿಯಾಸಿ ಬಸ್‌ ಮೇಲೆ ದಾಳಿ – ಉಗ್ರರಿಗೆ ಸಹಕಾರ ನೀಡಿದ್ದ ಓರ್ವ ವ್ಯಕ್ತಿ ಅರೆಸ್ಟ್‌

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ರಿಯಾಸಿ (Reasi Attack) ಜಿಲ್ಲೆಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ದಾಳಿ ನಡೆಸಿದ ಭಯೋತ್ಪಾದಕರಿಗೆ (Terrorists) ಸಹಕಾರ ನೀಡಿದ ಆರೋಪದಲ್ಲಿ ಓರ್ವ ವ್ಯಕ್ತಿಯನ್ನು ರಜೌರಿಯಲ್ಲಿ ಬಂಧಿಸಲಾಗಿದೆ.

    ಈ ಬಗ್ಗೆ ಪ್ರತಿಕ್ರಿಯಿಸಿದ ರಿಯಾಸಿಯ ಹಿರಿಯ ಪೊಲೀಸ್ ಅಧೀಕ್ಷಕ ಮೋಹಿತಾ ಶರ್ಮಾ ಅವರು, ರಿಯಾಸಿ ಭಯೋತ್ಪಾದನಾ ದಾಳಿಯಲ್ಲಿ ಓರ್ವನನ್ನು ಬಂಧಿಸಲಾಗಿದೆ. ಈತ ಕೃತ್ಯದ ಮಾಸ್ಟರ್‌ ಮೈಂಡ್‌ ವ್ಯಕ್ತಿಯಲ್ಲ. ಆದರೆ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ಹೇಳಿದ್ದಾರೆ.

    ಆರೋಪಿ ಹಕೀಮ್ ದಿನ್ ರಾಜೌರಿ ನಿವಾಸಿಯಾಗಿದ್ದು ಭಯೋತ್ಪಾದಕರಿಗೆ ದಾಳಿ ನಡೆಸಲು ಸಾಮಾಗ್ರಿಗಳನ್ನು ಒದಗಿಸಿದ ಆರೋಪ ಕೇಳಿ ಬಂದಿದೆ.

    ಮಾತಾ ವೈಷ್ಣೋದೇವಿ ದೇಗುಲಕ್ಕೆ (Mata Vaishno Devi Temple) ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಜೂನ್ 9 ರಂದು ದಾಳಿ ನಡೆದಿತ್ತು. ಈ ದಾಳಿಯಲ್ಲಿ 9 ಮಂದಿ ಸಾವನ್ನಪ್ಪಿ 41 ಮಂದಿ ಗಾಯಗೊಂಡಿದ್ದರು. ಇದನ್ನೂ ಓದಿ: ಇಬ್ಬರು ಭಯೋತ್ಪಾದಕರನ್ನು ಸದೆಬಡಿದ ಭದ್ರತಾ ಪಡೆ- ಓರ್ವ ಅಧಿಕಾರಿಗೆ ಗಾಯ

    ದಾಳಿಯ ತನಿಖೆಗೆ ಸಂಬಂಧಿಸಿದಂತೆ ಸುಮಾರು 50 ಜನರನ್ನು ವಶಕ್ಕೆ ಪಡೆಯಲಾಗಿದ್ದು ಕೇಂದ್ರ ಗೃಹ ಸಚಿವಾಲಯವು ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ವರ್ಗಾಯಿಸಿದೆ.

    ಪೊಲೀಸರು ಶಂಕಿತ ವ್ಯಕ್ತಿಗಳ ರೇಖಾಚಿತ್ರವನ್ನು ಬಿಡುಗಡೆ ಮಾಡಿದ್ದಾರೆ. ಭಾಗಿಯಾಗಿರುವವರ ಬಗ್ಗೆ ಮಾಹಿತಿ ನೀಡಿದವರಿಗೆ 20 ಲಕ್ಷ ರೂಪಾಯಿ ನಗದು ಬಹುಮಾನವನ್ನು ಘೋಷಿಸಲಾಗಿದೆ.

     

  • NIA ದಾಳಿ- ಶಿರಸಿಯ ಅಬ್ದುಲ್ ಶುಕ್ಕೂರ್ ಮೇಲಿದೆ ಶಿವಮೊಗ್ಗ ಸ್ಫೋಟದ ಸಂಚಿನ ಆರೋಪ

    NIA ದಾಳಿ- ಶಿರಸಿಯ ಅಬ್ದುಲ್ ಶುಕ್ಕೂರ್ ಮೇಲಿದೆ ಶಿವಮೊಗ್ಗ ಸ್ಫೋಟದ ಸಂಚಿನ ಆರೋಪ

    ಕಾರವಾರ: ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ NIA ತಂಡದಿಂದ ದಾಳಿ ನಡೆದಿದ್ದು, ಭಯೋತ್ಪಾದಕ ಸಂಘಟನೆ ಜೊತೆ ಸಂಪರ್ಕ ಹಿನ್ನೆಲೆಯಲ್ಲಿ ಬನವಾಸಿಯ ದಾಸನ ಕೊಪ್ಪ ಮೂಲದ ಅಬ್ದುಲ್ ಶುಕ್ಕೂರ್ (32) ನನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದೆ.

    ಇಂದು ಬೆಳಗ್ಗೆ 5 ಮಂದಿ ಅಧಿಕಾರಿಗಳಿರುವ NIA ತಂಡ ಹಾಗೂ ರಾಜ್ಯದ ಇಂಟೆಲಿಜೆನ್ಸ್ ಅಧಿಕಾರಿಗಳು ದಾಳಿ ನಡೆಸಿದ್ದು, ರಾಮೇಶ್ವರಂ ಕೆಫೆ ಬ್ಲಾಸ್ಟ್, ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿಗಳಿಗೆ ಪ್ರಚೋದನೆ ನೀಡಿದ್ದಾಗಿ ಆರೋಪ ಈತನ ಮೇಲಿದೆ. ಇದನ್ನೂ ಓದಿ: ಪ್ರತಿದಿನ ಸರಾಸರಿ 27 ಸೈಬರ್ ವಂಚನೆ ಪ್ರಕರಣ – 25,000 ಕೋಟಿ ರೂ. ಕಳೆದುಕೊಂಡ ಭಾರತೀಯರು

    ಇದಲ್ಲದೇ ಶಿವಮೊಗ್ಗದಲ್ಲಿ (Shivamogga) ಮಸೀದಿ ಹಾಗೂ ಇತರ ಪ್ರದೇಶಗಳಲ್ಲಿ ಬಾಂಬ್ ಬ್ಲಾಸ್ಟ್ ಆರೋಪಿಗಳಿಗೆ ಪ್ರಚೋದನೆ ನೀಡಿರುವ ಆರೋಪ‌ ಹೊಂದಿರುವ ಅಬ್ದುಲ್ ಶುಕ್ಕೂರ್ ದುಬೈ ನಲ್ಲಿ ಕೆಲಸ ಮಾಡುತ್ತಿದ್ದಾನೆ. ನಿಷೇಧಿತ ಪಿಎಫ್‌ಐ ಸಂಘಟನೆಯ ಸದಸ್ಯನಾಗಿದ್ದಾನೆ ಎಂಬ ಆರೋಪ ಈತನ ಮೇಲಿದೆ.

    ಕೆಲವು ದಿನದ ಹಿಂದೆ ಬಕ್ರೀದ್ ಆಚರಣೆಗಾಗಿ ಬನವಾಸಿಯ ದಾಸನ ಕೊಪ್ಪದ ನಿವಾಸಕ್ಕೆ ಆಗಮಿಸಿದ್ದ ಅಬ್ದುಲ್ ಶುಕ್ಕೂರ್ ನನ್ನು ಆನ್ ಲೈನ್ ಮೂಲಕ ಭಯೋತ್ಪಾದಕ ಸಂಘಟನೆ ಜೊತೆ ಸಂಪರ್ಕ ಹಾಗೂ ಪಾಸ್ ಪೋರ್ಟ್ ನಲ್ಲಿ ನಕಲಿ ದಾಖಲೆ ನೀಡಿದ ಆರೋಪದಡಿ NIA ತನಿಖೆ ಕೈಗೊಂಡಿದೆ.

  • ಮಣಿಪುರದ ಹಿಂಸಾಚಾರ ಪರಿಸ್ಥಿತಿ ಬಳಸಿಕೊಂಡು ಭಯೋತ್ಪಾದನೆ ಹರಡಲು ಯತ್ನ – ಆರೋಪಿ ಅರೆಸ್ಟ್

    ಮಣಿಪುರದ ಹಿಂಸಾಚಾರ ಪರಿಸ್ಥಿತಿ ಬಳಸಿಕೊಂಡು ಭಯೋತ್ಪಾದನೆ ಹರಡಲು ಯತ್ನ – ಆರೋಪಿ ಅರೆಸ್ಟ್

    ಇಂಫಾಲ್: ಮಣಿಪುರದ (Manipur) ಹಿಂಸಾಚಾರ ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಂಡು ಭಯೋತ್ಪಾದನೆಯನ್ನು ಹರಡಲು ಯತ್ನಿಸಿದ ಆರೋಪದ ಮೇಲೆ ಎನ್‍ಐಎ (NIA) ಪ್ರಮುಖ ಆರೋಪಿಯನ್ನು ಇಂಫಾಲ್ ವಿಮಾನ ನಿಲ್ದಾಣದಲ್ಲಿ (Imphal Airport) ಬಂಧಿಸಿದೆ.

    ಬಂಧಿತ ಆರೋಪಿಯನ್ನು ಕುಕಿ ನ್ಯಾಷನಲ್ ಫ್ರಂಟ್-ಮಿಲಿಟರಿ ಕೌನ್ಸಿಲ್ (ಕೆಎನ್‍ಎಫ್-ಎಂಸಿ) ಸದಸ್ಯ ಥೋಂಗ್‍ಮಿಂಥಾಂಗ್ ಹಾಕಿಪ್ ಅಲಿಯಾಸ್ ರೋಜರ್ ಎಂದು ಗುರುತಿಸಲಾಗಿದೆ. ಆರೋಪಿ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಾಗಿದೆ. ಅಲ್ಲದೇ ಆತನ ವಿರುದ್ಧ ಕಳೆದ ವರ್ಷ ಜುಲೈ 19 ರಂದು ಎನ್‍ಐಎ ಸುಮೋಟೋ ಪ್ರಕರಣ ದಾಖಲಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಉತ್ತರಾಖಂಡ ಹಿಮಪಾತ- ಬೆಂಗಳೂರಿನ ಪ್ರಸಿದ್ಧ ಬಹುರಾಷ್ಟ್ರೀಯ ಕಂಪನಿ ಉದ್ಯೋಗಿ ಸಾವು 

    ಮ್ಯಾನ್ಮಾರ್ (Myanmar) ಮೂಲದ ಭಯೋತ್ಪಾದಕ ಸಂಘಟನೆಗಳ ಬೆಂಬಲದೊಂದಿಗೆ ಕುಕಿ ಮತ್ತು ಝೋಮಿ ದಂಗೆಕೋರರನ್ನು ಸರ್ಕಾರದ ವಿರುದ್ಧ ತಿರುಗಿ ಬೀಳುವಂತೆ ಮಾಡುವ ಸಂಚು ರೂಪಿಸಿದ್ದರು. ಈ ಪ್ರದೇಶದಲ್ಲಿನ ಪ್ರಸ್ತುತ ಜನಾಂಗೀಯ ಅಶಾಂತಿಯನ್ನು ಬಳಸಿಕೊಂಡು ಈ ಕೃತ್ಯ ಎಸಗಲು ಮುಂದಾಗಿದ್ದರು. ಅಲ್ಲದೇ ಬಂಧಿತ ಆರೋಪಿ ಹಿಂಸಾಚಾರದ ಸಮಯದಲ್ಲಿ ವಿವಿಧ ಸ್ಥಳಗಳಲ್ಲಿ ಭದ್ರತಾ ಪಡೆಗಳ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮಣಿಪುರ ರಾಜ್ಯದಲ್ಲಿನ ಅಸ್ಥಿರ ಪರಿಸ್ಥಿತಿಯನ್ನು ಉಲ್ಬಣಗೊಳಿಸಲು ಮತ್ತು ಜನರ ಮನಸ್ಸಿನಲ್ಲಿ ಭಯವನ್ನು ಹುಟ್ಟುಹಾಕಲು ಆರೋಪಿ ಮ್ಯಾನ್ಮಾರ್‌ನ ಕುಕಿ ನ್ಯಾಷನಲ್ ಫ್ರಂಟ್-ಬರ್ಮಾ (ಕೆಎನ್‍ಎಫ್-ಬಿ) ದಂಗೆಕೋರ ಗುಂಪಿನೊಂದಿಗೆ ಸಂಪರ್ಕದಲ್ಲಿದ್ದ. ಹಿಂಸಾಚಾರದಲ್ಲಿ ಬಳಸಲು ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ಪೂರೈಸಲು ಆರೋಪಿಗಳು ಕೆಎನ್‍ಎಫ್-ಬಿ ನಾಯಕರನ್ನು ಭೇಟಿಯಾಗಿದ್ದ ಎಂದು ಎನ್‍ಐಎ ತನಿಖೆ ವೇಳೆ ತಿಳಿದು ಬಂದಿದೆ.

    ಆರೋಪಿ ಭದ್ರತಾ ಪಡೆಗಳ ವಿರುದ್ಧ ಹಲವಾರು ಸಶಸ್ತ್ರ ದಾಳಿಗಳಲ್ಲಿ ಭಾಗವಹಿಸಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಬರ್ತ್‍ಡೇ ಪಾರ್ಟಿಗೆ ಕರೆದು ಸ್ನೇಹಿತರಿಂದಲೇ ಯುವಕನ ಬರ್ಬರ ಹತ್ಯೆ

  • ರಾಮೇಶ್ವರಂ ಕೆಫೆ ಸ್ಫೋಟ ಕೇಸ್‌- ಹಿಂದೆ ಉಗ್ರ ಕತ್ಯದಲ್ಲಿ ದೋಷಿಯಾಗಿದ್ದ ಹುಬ್ಬಳ್ಳಿ ವ್ಯಕ್ತಿ ಮತ್ತೆ ಅರೆಸ್ಟ್‌

    ರಾಮೇಶ್ವರಂ ಕೆಫೆ ಸ್ಫೋಟ ಕೇಸ್‌- ಹಿಂದೆ ಉಗ್ರ ಕತ್ಯದಲ್ಲಿ ದೋಷಿಯಾಗಿದ್ದ ಹುಬ್ಬಳ್ಳಿ ವ್ಯಕ್ತಿ ಮತ್ತೆ ಅರೆಸ್ಟ್‌

    ನವದೆಹಲಿ: ದಿ ರಾಮೇಶ್ವರಂ ಕೆಫೆ (The Rameshwaram Cafe) ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟೀಯ ತನಿಖಾ ದಳ (NIA) ಹುಬ್ಬಳ್ಳಿಯಲ್ಲಿ (Hubballi) ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ.

    ಹುಬ್ಬಳ್ಳಿ ನಗರದ ನಿವಾಸಿ 35 ವರ್ಷದ ಶೋಯೆಬ್ ಅಹ್ಮದ್ ಮಿರ್ಜಾ ಅಲಿಯಾಸ್‌ ಛೋಟು (Shoaib Ahmed Mirza @ Chhotu) ಬಂಧಿತ ಆರೋಪಿ. ಈ ಮೂಲಕ ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಆರೋಪಿಗಳ ಸಂಖ್ಯೆ  5ಕ್ಕೆ ಏರಿಕೆಯಾಗಿದೆ.

    ಹಿಂದೆ ಬೆಂಗಳೂರಿನನಲ್ಲಿ (Bengaluru) ನಡೆದ ಲಷ್ಕರ್‌ ತೊಯ್ಬಾ ಪಿತೂರಿ ಪ್ರಕರಣದಲ್ಲಿ ಅಪರಾಧಿಯಾಗಿ ಜೈಲಿನಿಂದ ಹೊರ ಬಂದ ಬಳಿಕ ಈ ಪ್ರಕರಣದಲ್ಲಿ ಅರೆಸ್ಟ್‌ ಆಗಿದ್ದಾನೆ.

     

    ಈತನ ಪಾತ್ರ ಏನು?
    ಈತ 2018 ರಲ್ಲಿ ಆರೋಪಿ ಅಬ್ದುಲ್ ಮಥೀನ್ ತಾಹಾನ ಜೊತೆ ಸ್ನೇಹ ಬೆಳೆಸಿ ವಿದೇಶದಲ್ಲಿರುವ ಆನ್‌ಲೈನ್ ಹ್ಯಾಂಡ್ಲರ್‌ಗೆ ಪರಿಚಯಿಸಿದ್ದ. ಹ್ಯಾಂಡ್ಲರ್ ಮತ್ತು ಮತೀನ್ ತಾಹ ನಡುವೆ ಎನ್ಕ್ರಿಪ್ಟೆಡ್ ಮೇಲ್‌ ಮುಖಾಂತರ ಅಹ್ಮದ್ ಮಿರ್ಜಾ ಸಂಪರ್ಕ ಸಾಧಿಸುತ್ತಿದ್ದ. ಇದನ್ನೂ ಓದಿ: ನಿಮ್ಮ ಪುತ್ರರನ್ನ Tomorrow Land ಪಾರ್ಟಿಗೆ ನೀವೇ ಕಳಿಸಿ ಅವರ ಸಾವಿಗೆ ಕಾರಣರಾದಿರಿ ಎಂದು ಕೇಳಿದರೆ ಹೇಗೆ: ಸಿದ್ದು ವಿರುದ್ಧ ಹೆಚ್‌ಡಿಕೆ ಅಟ್ಯಾಕ್‌

    ಮಾರ್ಚ್ 1 ಎಂದು ರಂದು ನಡೆದ ನಡೆದ ರಾಮೇಶ್ವರಂ ಕೆಫೆ ಸ್ಫೋಟದ ತನಿಖೆಯ ಚುರುಕಿನಿಂದ ನಡೆಯುತ್ತಿದೆ. ಇಲ್ಲಿಯವರೆಗೆ ದೇಶಾದ್ಯಂತ 29 ಸ್ಥಳಗಳಲ್ಲಿ ದಾಳಿ ನಡೆಸಿ ಎನ್‌ಐಎ ಶೋಧ ನಡೆಸಿದೆ.

     

  • ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ- ಐವರನ್ನು ಬಂಧಿಸಿದ NIA

    ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ- ಐವರನ್ನು ಬಂಧಿಸಿದ NIA

    ಬೆಂಗಳೂರು: ವೈಟ್‍ಫೀಲ್ಡ್ ನಲ್ಲಿರುವ ರಾಮೇಶ್ವರಂ ಕೆಫೆ (Rameshwaram Cafe) ಸ್ಪೋಟ ಪ್ರಕರಣ ಸಂಬಂಧ ಇದೀಗ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಐವರನ್ನು ಬಂಧಿಸಿದ್ದಾರೆ.

    ಬೆಂಗಳೂರಿನಲ್ಲಿ ವೈದ್ಯ ಅಹಮದ್, ಹುಬ್ಬಳ್ಳಿಯಲ್ಲಿ ಶೋಯಿಬ್ ಮಿರ್ಜಾ, ಆತನ ಸಹೋದರ ಅಜೀಬ್ ಅಹಮದ್, ಆಂಧ್ರಪ್ರದೇಶದ ಅನಂತಪುರ ರಾಮದುರ್ಗದಲ್ಲಿ ಬೆಂಗಳೂರು ಮೂಲದ ಟೆಕ್ಕಿ ಸೋಹೆಲ್ ಬಂಧಿತರು. ಪ್ರಕರಣ ಸಂಬಂಧ ಈಗಾಗಲೇ ಬಂಧಿಸಲ್ಪಟ್ಟಿದ್ದ ಉಗ್ರ ಮುಸಾವೀರ್ ಹುಸೇನ್ ಶಾಜೀದ್, ಅಬ್ದುಲ್ ಮಥೀನ್ ತಾಹಾಗೆ ಈ ಐವರು ಹಣಕಾಸಿನ ನೆರವು, ಕೃತ್ಯಕ್ಕೆ ಸಹಾಯ ಮಾಡಿದ ಆರೋಪದಲ್ಲಿ ಬಂಧನ ಮಾಡಲಾಗಿದೆ.

    2012ರ ಬೆಂಗಳೂರು, ಹುಬ್ಬಳ್ಳಿ ವಿಧ್ವಂಸಕ ಸಂಚು ಪ್ರಕರಣ ಆರೋಪಿ ಸಬೀಲ್ ಅಹಮದ್, 2012 ಲಷ್ಕರ ಎ ತೋಯಾಬಾ ಸಂಘಟನೆಯೊಂದಿಗೆ ಸೇರಿ ಬೆಂಗಳೂರು, ಹುಬ್ಬಳ್ಳಿ ವಿಧ್ವಂಸಕ ಕೃತ್ಯ ಸಂಚು ನಡೆಸಿದ್ದ ಬಗ್ಗೆ ಮಾಹಿತಿ ದೊರೆತಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್‌ ಕೆಫೆ ಸ್ಫೋಟ – ಬೆಂಗಳೂರು ಟೆಕ್ಕಿಯ ಖಾತೆಗೆ ದಿಢೀರ್‌ ಭಾರೀ ಹಣ ಜಮೆ

    11 ಕಡೆ ಎನ್‌ಐಎ ದಾಳಿ: ಪ್ರಕರಣ ಸಂಬಂಧ ಮಂಗಳವಾರ ಎನ್‌ಐಎ ಅಧಿಕಾರಿಗಳು 4 ರಾಜ್ಯಗಳ 11 ಕಡೆ ದಾಳಿ ಮಾಡಿದ್ದಾರೆ. ಬೆಂಗಳೂರಿನ (Bengaluru) ಕುಮಾರಸ್ವಾಮಿ ಲೇಔಟ್, ಬನಶಂಕರಿ ಸೇರಿ ಐದಕ್ಕೂ ಹೆಚ್ಚು ಕಡೆ ದಾಳಿ ನಡೆಸಿದೆ. ಮತೀನ್, ಶಾಝೀಬ್ ನಾಲ್ಕು ವರ್ಷ ತಲೆಮರೆಸಿಕೊಂಡಿದ್ದ ಅವಧಿಯಲ್ಲಿ ನೆರವು ನೀಡಿದವರಿಗಾಗಿ ಎನ್‌ಐಎ ಈ ಕಾರ್ಯಾಚರಣೆ ಮಾಡಿದೆ.

    ತಮಿಳುನಾಡಿನ ಕೊಯಮತ್ತೂರಿನ (Tamilnadu Coimbatore) ಖಾಸಗಿ ಆಸ್ಪತ್ರೆಯೊಂದರ ಮೇಲೆ ರೇಡ್ ಮಾಡಿದ ಎನ್‌ಐಎ, ಕೆಫೆ ಸ್ಫೋಟ ಪ್ರಕರಣದಲ್ಲಿ ಭಾಗಿಯಾದ ಶಂಕೆ ಮೇರೆಗೆ ಕರ್ನಾಟಕ ಮೂಲದ ಇಬ್ಬರು ವೈದ್ಯರನ್ನು ವಶಕ್ಕೆ ಪಡೆದಿದೆ. ಈ ಇಬ್ಬರು ಪಾತಕಿಗಳಿಗೆ ಹಣಕಾಸು ನೆರವು ನೀಡಿರುವ ಶಂಕೆ ವ್ಯಕ್ತವಾಗಿತ್ತು.

  • ರಾಮೇಶ್ವರಂ ಕೆಫೆ ಬಾಂಬ್‌ ಕೆಫೆ ಸ್ಫೋಟ – ಬೆಂಗಳೂರು ಟೆಕ್ಕಿಯ ಖಾತೆಗೆ ದಿಢೀರ್‌ ಭಾರೀ ಹಣ ಜಮೆ

    ರಾಮೇಶ್ವರಂ ಕೆಫೆ ಬಾಂಬ್‌ ಕೆಫೆ ಸ್ಫೋಟ – ಬೆಂಗಳೂರು ಟೆಕ್ಕಿಯ ಖಾತೆಗೆ ದಿಢೀರ್‌ ಭಾರೀ ಹಣ ಜಮೆ

    – ಬೆಂಗಳೂರು ಸೇರಿದಂತೆ 11 ಕಡೆ ಎನ್‌ಐಎ ದಾಳಿ
    – ಕರ್ನಾಟಕದ ಇಬ್ಬರು ವೈದ್ಯರು ವಶ

    ನವದೆಹಲಿ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Rameshwaram Cafe Bomb Blast) ಪ್ರಕರಣದ ತನಿಖೆ ತೀವ್ರಗೊಳಿಸಿರುವ ರಾಷ್ಟ್ರೀಯ ತನಿಖಾ ದಳ (NIA) 4 ರಾಜ್ಯಗಳ 11 ಕಡೆ ರೇಡ್ ಮಾಡಿದೆ.

    ಬೆಂಗಳೂರಿನ (Bengaluru) ಕುಮಾರಸ್ವಾಮಿ ಲೇಔಟ್, ಬನಶಂಕರಿ ಸೇರಿ ಐದಕ್ಕೂ ಹೆಚ್ಚು ಕಡೆ ದಾಳಿ ನಡೆಸಿದೆ. ಮತೀನ್, ಶಾಝೀಬ್ ನಾಲ್ಕು ವರ್ಷ ತಲೆಮರೆಸಿಕೊಂಡಿದ್ದ ಅವಧಿಯಲ್ಲಿ ನೆರವು ನೀಡಿದವರಿಗಾಗಿ ಎನ್‌ಐಎ ಈ ಕಾರ್ಯಾಚರಣೆ ಮಾಡಿದೆ.

     

    ತಮಿಳುನಾಡಿನ ಕೊಯಮತ್ತೂರಿನ (Tamilnadu Coimbatore) ಖಾಸಗಿ ಆಸ್ಪತ್ರೆಯೊಂದರ ಮೇಲೆ ರೇಡ್ ಮಾಡಿದ ಎನ್‌ಐಎ, ಕೆಫೆ ಸ್ಫೋಟ ಪ್ರಕರಣದಲ್ಲಿ ಭಾಗಿಯಾದ ಶಂಕೆ ಮೇರೆಗೆ ಕರ್ನಾಟಕ ಮೂಲದ ಇಬ್ಬರು ವೈದ್ಯರನ್ನು ವಶಕ್ಕೆ ಪಡೆದಿದೆ. ಈ ಇಬ್ಬರು ಪಾತಕಿಗಳಿಗೆ ಹಣಕಾಸು ನೆರವು ನೀಡಿರುವ ಶಂಕೆ ವ್ಯಕ್ತವಾಗಿದೆ.

    ಮತ್ತೊಂದು ಕಡೆ ಆಂಧ್ರದ ರಾಯದುರ್ಗದಲ್ಲಿ ನಿವೃತ್ತ ಶಿಕ್ಷಕ ಅಬ್ದುಲ್ ಮನೆ ಮೇಲೆಯೂ ಎನ್‌ಐಎ ದಾಳಿ ನಡೆಸಿ, ಅವರ ಪುತ್ರ ಸೊಹೇಲ್‌ನನ್ನು ವಶಕ್ಕೆ ಪಡೆದಿದೆ. ಈತ ಬೆಂಗಳೂರಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದ. ಸೊಹೇಲ್ ಬ್ಯಾಂಕ್ ಖಾತೆಗೆ ದಿಢೀರ್ ಎಂದು ಭಾರೀ ಮೊತ್ತದ ಹಣ ಜಮೆಯಾಗಿದ್ದ ಬಗ್ಗೆ ಅವರ ಕುಟುಂಬಸ್ಥರನ್ನು ಎನ್‌ಐಎ ಪ್ರಶ್ನಿಸಿದೆ. ತೆಲಂಗಾಣದಲ್ಲಿಯೂ ಎನ್‌ಐಎ ರೇಡ್ ಮಾಡಿದೆ. ಹಲವು ಮಹತ್ವದ ದಾಖಲೆಗಳನ್ನು ಸೀಜ್ ಮಾಡಿದೆ. ಇದನ್ನೂ ಓದಿ: ಕಿಲ್ಲರ್ ಬಾಯ್‌ಗೆ ಪುಣೆ ಠಾಣೆಯಲ್ಲಿ ರಾಜಾತಿಥ್ಯ – ಪಿಜ್ಜಾ, ಬಿರಿಯಾನಿ ತಿನ್ನಿಸಿದ್ದ ಪೊಲೀಸರ ವಿರುದ್ಧ ಆಕ್ರೋಶ

     

  • ರಾಮೇಶ್ವರಂ ಕೆಫೆ ಬ್ಲಾಸ್ಟ್‌ಗೆ ಸ್ಫೋಟಕ ತಿರುವು- ವೈದ್ಯರಿಬ್ಬರು ಭಾಗಿಯಾಗಿರೋ ಶಂಕೆ

    ರಾಮೇಶ್ವರಂ ಕೆಫೆ ಬ್ಲಾಸ್ಟ್‌ಗೆ ಸ್ಫೋಟಕ ತಿರುವು- ವೈದ್ಯರಿಬ್ಬರು ಭಾಗಿಯಾಗಿರೋ ಶಂಕೆ

    ಬೆಂಗಳೂರು: ಸಿಲಿಕಾನ್ ಸಿಟಿಯ ವೈಟ್‍ಫೀಲ್ಡ್‍ನಲ್ಲಿ ನಡೆದಿದ್ದ ರಾಮೇಶ್ವರಂ ಬಾಂಬ್ ಸ್ಫೋಟಕ್ಕೆ ಇದೀಗ ಸ್ಫೋಟಕ ತಿರುವೊಂದು ಸಿಕ್ಕಿದೆ. ಪ್ರಕರಣದಲ್ಲಿ ಇಬ್ಬರು ಟ್ರೈನಿ ವೈದ್ಯರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

    ಕೊಯಮತ್ತೂರು ಖಾಸಗಿ ಆಸ್ಪತ್ರೆಯ ಮೇಲೆ ಇಂದು ಎನ್‍ಐಎ ದಾಳಿ ನಡೆಸಿದೆ. ಮತೀನ್ ಮತ್ತು ಶಾಜೀಬ್ ಗೆ ಹಣ ಸಹಾಯ ಮಾಡಿದ ಆರೋಪದ ಮೇಲೆ ದಾಳಿ ನಡೆದಿದೆ. ಕರ್ನಾಟಕ ಮೂಲದ ಇಬ್ಬರು ಡಾಕ್ಟರ್ ಗಳು ಬ್ಲಾಸ್ಟ್ ಪ್ರಕರಣದಲ್ಲಿ ಭಾಗಿಯಾಗಿರುವ ಅನುಮಾನ ಎದ್ದಿದೆ.

    ಇತ್ತ ಬಾಂಬ್ ಬ್ಲಾಸ್ಟ್ ಪ್ರಕರಣ ಇಂದು ಬೆಂಗಳೂರಿನ ಕೆ ಎಸ್ ಲೇಔಟ್ ಮತ್ತು ಬನಶಂಕರಿ ಸೇರಿ 5ಕ್ಕೂ ಹೆಚ್ಚು ಕಡೆ ಎನ್‍ಐಎ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.  ಇದನ್ನೂ ಓದಿ: ತಣ್ಣಗಾಗದ ಧ್ವಜ ದಂಗಲ್- ಹೊಸ ಧ್ವಜ ಹಾರಿಸಿದ್ರೂ ಕೆರಗೋಡು ಗ್ರಾಮಸ್ಥರ ಅಸಮಾಧಾನ

    ಮಾರ್ಚ್ 1 ರಂದು ಮಧ್ಯಾಹ್ನ 12:55 ರ ಸುಮಾರಿಗೆ ವೈಟ್‍ಫೀಲ್ಡ್‍ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಲಾಗಿತ್ತು. ಘಟನೆ ನಡೆದ ಕೆಲ ದಿನಗಳ ಬಳಿಕ ಕೃತ್ಯ ಎಸಗಿದ ಮೊಹಮ್ಮದ್ ಮತೀನ್ ಮತ್ತು ಮುಸಾವಿರ್ ಹುಸೇನ್ ಅನ್ನು ಎನ್‍ಐಎ ಅಧಿಕಾರಿಗಳು ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದರು. ಬಂಧಿತರ ವಿಚಾರಣೆ ನಡೆಸಿದ್ದು ಸಾಕಷ್ಟು ವಿಚಾರಗಳು ಬೆಳಕಿಗೆ ಬಂದಿತ್ತು.

  • ಉಳ್ಳಾಲದ ಮಾಜಿ ಶಾಸಕ ದಿ. ಇದಿನಬ್ಬರ ಮೊಮ್ಮಗನಿಗೆ ಜಾಮೀನು

    ಉಳ್ಳಾಲದ ಮಾಜಿ ಶಾಸಕ ದಿ. ಇದಿನಬ್ಬರ ಮೊಮ್ಮಗನಿಗೆ ಜಾಮೀನು

    ಮಂಗಳೂರು: ಐಸಿಸ್ (ISIS) ನಂಟು ಪ್ರಕರಣದಲ್ಲಿ ಎನ್ ಐಎಯಿಂದ ಬಂಧನಕ್ಕೊಳಗಾಗಿದ್ದ ಉಳ್ಳಾಲದ ಮಾಜಿ ಶಾಸಕ ದಿ. ಇದಿನಬ್ಬರವರ ಮೊಮ್ಮಗ ಅಮ್ಮರ್ ಅಬ್ದುಲ್ ರೆಹಮಾನ್ ಗೆ ದೆಹಲಿ ಹೈಕೋರ್ಟ್ (Delhi Highcourt) ಜಾಮೀನು ನೀಡಿದೆ.

    2021 ರ ಆಗಸ್ಟ್ 21 ರಂದು ಬಂಧನಕ್ಕೊಳಗಾಗಿದ್ದ ರೆಹಮಾನ್ ಮೊಬೈಲ್ ನಲ್ಲಿ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳಿಗೆ ಐಸಿಸ್ ಪರವಾದ  ಬಾವುಟ, ಕರಪತ್ರ ವೀಡಿಯೋಗಳು ಸಿಕ್ಕಿದ್ದವು. ಇದನ್ನು ಕೋರ್ಟ್‍ಗೂ ನೀಡಲಾಗಿತ್ತು. ಈ ನಡುವೆ ಬಂಧನ ಪ್ರಶ್ನಿಸಿ ವಿಚಾರಣಾಧೀನ ಕೋರ್ಟ್ ನಲ್ಲಿ ರೆಹಮಾನ್ ಜಾಮೀನು ಅರ್ಜಿ ಸಲ್ಲಿಸಿದ್ದು, ಕೋರ್ಟ್ ಜಾಮೀನು ನಿರಾಕರಿಸಿದ್ದ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಇದೀಗ ಸುದೀರ್ಘ ವಿಚಾರಣೆ ಬಳಿಕ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ.

    ಜಾಮೀನು ಆದೇಶದಲ್ಲಿ ಹಲವು ಅಂಶಗಳನ್ನು ದೆಹಲಿ ಹೈಕೋರ್ಟ್ ಉಲ್ಲೇಖಿಸಿದ್ದು, ಉಗ್ರ ಸಂಘಟನೆ ಜೊತೆಗಿನ ಆಕರ್ಷಣೆಯನ್ನು ಉಗ್ರ ನಂಟು ಎನ್ನಲು ಆಗಲ್ಲ. ಐಸಿಸ್ ಬಾವುಟ, ಕರಪತ್ರ ಮೊಬೈಲ್ ನಲ್ಲಿದ್ದರೆ ಉಗ್ರ ಎನ್ನಲು ಪೂರಕ ಸಾಕ್ಷ್ಯವಲ್ಲ. ಇವುಗಳೆಲ್ಲ ಇಂದಿನ ಡಿಜಿಟಲ್ ಯುಗದಲ್ಲಿ ಇಂಟರ್ ನೆಟ್ ನಲ್ಲಿ ಸಿಗುತ್ತದೆ. ಕುತೂಹಲ ಇರೋ ಯಾರು ಬೇಕಾದರೂ ಮೊಬೈಲ್, ಕಂಪ್ಯೂಟರ್ ನಲ್ಲಿ ಡೌನ್ ಲೋಡ್ ಮಾಡಬಹುದು. ಹಾಗಾಗಿ ಇದನ್ನ ಇಟ್ಟು ಕೊಂಡವರನ್ನ ಐಸಿಸ್ ನಂಟನ್ನ ಸಾಬೀತುಪಡಿಸಲು ಆಗಲ್ಲ ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇದನ್ನೂ ಓದಿ: ಕೈಬೆರಳಿನ ಶಸ್ತ್ರಚಿಕಿತ್ಸೆಗೆ ಕರೆದೊಯ್ದು ನಾಲಿಗೆಗೆ ಸರ್ಜರಿ ಮಾಡಿದ್ರು!- ತನಿಖೆಗೆ ಆದೇಶ

  • ಉಗ್ರ ಕೃತ್ಯಕ್ಕೆ ಸಹಕಾರ – ನಾಪತ್ತೆಯಾಗಿದ್ದ ಆರೋಪಿ ಮೈಸೂರಿನಲ್ಲಿ ಅರೆಸ್ಟ್‌

    ಉಗ್ರ ಕೃತ್ಯಕ್ಕೆ ಸಹಕಾರ – ನಾಪತ್ತೆಯಾಗಿದ್ದ ಆರೋಪಿ ಮೈಸೂರಿನಲ್ಲಿ ಅರೆಸ್ಟ್‌

    ಮೈಸೂರು: ಭಯೋತ್ಪಾಕ ಕೃತ್ಯಕ್ಕೆ ಸಹಕಾರ ನೀಡುತ್ತಿದ್ದ ಆರೋಪದ ಅಡಿ ಮೈಸೂರಿನಲ್ಲಿ (Mysuru) ವ್ಯಕ್ತಿಯೊಬ್ಬನನ್ನು ರಾಷ್ಟ್ರೀಯ ತನಿಖಾ ದಳ (NIA) ಬಂಧಿಸಿದೆ.

    ಮೈಸೂರಿನ‌ ರಾಜೀವ್ ನಗರದಲ್ಲಿ ನೆಲೆಸಿದ್ದ ನೂರುದ್ದೀನ್ ಅಲಿಯಾಸ್ ರಫಿ ಬಂಧಿತ ಆರೋಪಿ. ದಾಳಿ ವೇಳೆ ಮನೆಯಲ್ಲಿದ್ದ ಆತನ ಮೊಬೈಲ್ ಫೋನ್, ಪೆನ್‌ಡ್ರೈವ್ ಸೇರಿದಂತೆ ಮೊದಲಾದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

    2014ರಲ್ಲಿ ಬೆಂಗಳೂರಿನ ಇಸ್ರೇಲ್ (Israel) ಹಾಗೂ ಚೆನ್ನೈನಲ್ಲಿರುವ ಅಮೆರಿಕ ಕಾನ್ಸುಲೇಟ್ ಕಚೇರಿಗಳ ಮೇಲೆ ಸ್ಫೋಟಕ್ಕೆ ಸಂಚು ರೂಪಿಸಿದ ಆರೋಪ ಈತನ ಮೇಲಿದೆ. ಇದನ್ನೂ ಓದಿ: ಕೇಜ್ರಿವಾಲ್‌ಗೆ ʼವಿಶೇಷ ಸೌಲಭ್ಯʼನೀಡಲಾಗಿದೆ ಅಂತ ಜನ ಮಾತನಾಡ್ತಿದ್ದಾರೆ: ಜಾಮೀನು ಬಗ್ಗೆ ಅಮಿತ್‌ ಶಾ ಮಾತು

     

    ಶ್ರೀಲಂಕಾ ಪ್ರಜೆ ಮೊಹಮ್ಮದ್ ಸಕೀರ್ ಹುಸೇನ್ ಹಾಗೂ ಕೊಲಂಬೋದಲ್ಲಿರುವ ಪಾಕಿಸ್ತಾನದ ರಾಜತಾಂತ್ರಿಕ ಕಚೇರಿ ನೌಕರ ಪಾಕಿಸ್ತಾನದ ಪ್ರಜೆ ಅಮೀರ್ ಜುಬೇರ್ ಸಿದ್ದಿಕಿಯನ್ನು ಎನ್ಐಎ ಅಧಿಕಾರಿಗಳು 2014ರಲ್ಲಿ ಬಂಧಿಸಿದ್ದರು. ಇವರಿಗೆ ಭಾರತದ ನಕಲಿ ನೋಟು ಪೂರೈಸುವ ಮೂಲಕ ಭಯೋತ್ಪಾದಕ ಕೃತ್ಯಕ್ಕೆ ಸಹಕರಿಸಿದ ಆರೋಪದಲ್ಲಿ ನೂರುದ್ದೀನ್ ವಿರುದ್ಧ ಪ್ರಕರಣ ದಾಖಲಾಗಿತ್ತು.

    2023ರ ಆಗಸ್ಟ್‌ನಲ್ಲಿ ಜಾಮೀನಿನ (Bail) ಮೇಲೆ ಹೊರಬಂದಿದ್ದ ನೂರುದ್ದೀನ್ ಚೆನ್ನೈನ ಎನ್‌ಐಎ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈ ಕಾರಣಕ್ಕೆ ನೂರುದ್ದೀನ್ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು. ಅಷ್ಟೇ ಅಲ್ಲದೇ ಆತನ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್‌ಐಎ ಘೋಷಿಸಿತ್ತು. ಖಚಿತ ಮಾಹಿತಿ ಆಧಾರಿಸಿ ಬುಧವಾರ  ದಾಳಿ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಎನ್‌ಐಎ ಯಶಸ್ವಿಯಾಗಿದೆ. ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಕಣ್ಣಾಮುಚ್ಚಾಲೆ ಆಟ – ವಿಮಾನ ನಿಲ್ದಾಣದಿಂದ ಬರಿಗೈಯಲ್ಲಿ ಪೊಲೀಸರು ವಾಪಸ್‌