Tag: ಎನ್ ಚಂದ್ರಶೇಖರನ್

  • ಏರ್‌ ಇಂಡಿಯಾ ಅಧ್ಯಕ್ಷರಾಗಿ ಟಾಟಾ ಸನ್ಸ್‌ ಮುಖ್ಯಸ್ಥ ಎನ್.ಚಂದ್ರಶೇಖರನ್‌ ನೇಮಕ

    ಏರ್‌ ಇಂಡಿಯಾ ಅಧ್ಯಕ್ಷರಾಗಿ ಟಾಟಾ ಸನ್ಸ್‌ ಮುಖ್ಯಸ್ಥ ಎನ್.ಚಂದ್ರಶೇಖರನ್‌ ನೇಮಕ

    ನವದೆಹಲಿ: ಏರ್‌ ಇಂಡಿಯಾ (Air India) ಅಧ್ಯಕ್ಷರಾಗಿ ಟಾಟಾ ಸನ್ಸ್‌ ಗ್ರೂಪ್‌ನ (Tata Group) ಮುಖ್ಯಸ್ಥ ನಟರಾಜನ್‌ ಚಂದ್ರಶೇಖರನ್‌ ಅವರನ್ನು ಆಯ್ಕೆ ಮಾಡಲಾಗಿದೆ.

    ಟಾಟಾ ಗ್ರೂಪ್, ಟರ್ಕಿಯ ಇಲ್ಕರ್ ಐಸಿ ಅವರನ್ನು ಏರ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಎಂದು ತಿಂಗಳ ಆರಂಭದಲ್ಲಿ ಘೋಷಿಸಿತ್ತು. ಆದರೆ ಆ ನೇಮಕಾತಿಯು ಭಾರತದಲ್ಲಿ ಸಾಕಷ್ಟು ವಿರೋಧವನ್ನು ಎದುರಿಸಿತು. ಬಳಿಕ ಟರ್ಕಿಯ ಇಲ್ಕರ್ ಐಸಿ ಅವರು ಟಾಟಾದ ಏರ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕರಾಗಲು ನಿರಾಕರಿಸಿದ್ದರು. ಇದನ್ನೂ ಓದಿ: ಟಾಟಾ ಸಂಸ್ಥೆಗೆ ಏರ್‌ ಇಂಡಿಯಾ ಅಧಿಕೃತ ಹಸ್ತಾಂತರ

    ಚಂದ್ರಶೇಖರನ್ ಅವರು ಟಾಟಾ ಸನ್ಸ್‌ನ ಮುಖ್ಯಸ್ಥರಾಗಿದ್ದಾರೆ. ಹಿಡುವಳಿ ಕಂಪನಿ ಮತ್ತು 100 ಕ್ಕೂ ಹೆಚ್ಚು ಟಾಟಾ ಆಪರೇಟಿಂಗ್ ಕಂಪನಿಗಳ ಪ್ರವರ್ತಕರಾಗಿದ್ದಾರೆ. ಅವರು ಅಕ್ಟೋಬರ್ 2016 ರಲ್ಲಿ ಟಾಟಾ ಸನ್ಸ್ ಮಂಡಳಿಗೆ ಸೇರಿದರು. ಜನವರಿ 2017 ರಲ್ಲಿ ಮುಖ್ಯಸ್ಥರಾಗಿ ನೇಮಕಗೊಂಡರು.

    ಚಂದ್ರಶೇಖರನ್‌ ಅವರು ಟಾಟಾ ಸ್ಟೀಲ್, ಟಾಟಾ ಮೋಟಾರ್ಸ್, ಟಾಟಾ ಪವರ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಸೇರಿದಂತೆ ಹಲವಾರು ಗ್ರೂಪ್ ಆಪರೇಟಿಂಗ್ ಕಂಪನಿಗಳ ಮಂಡಳಿಗಳಿಗೆ ಅಧ್ಯಕ್ಷರಾಗಿದ್ದಾರೆ. ಅವರು 2009-17 ರಿಂದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದರು. ಇದನ್ನೂ ಓದಿ: ಮತ್ತೆ ʼಮಹಾರಾಜʼನಾದ ಟಾಟಾ – Welcome Back ಏರ್‌ ಇಂಡಿಯಾ ಎಂದ ರತನ್‌ ಟಾಟಾ

    ಚಂದ್ರಶೇಖರನ್ ಅವರು ಟಾಟಾ ಗ್ರೂಪ್‌ನ ಮುಖ್ಯಸ್ಥರಾದ ಮೊದಲ ಪಾರ್ಸಿಯೇತರ ಮತ್ತು ವೃತ್ತಿಪರ ಕಾರ್ಯನಿರ್ವಾಹಕರಾಗಿದ್ದರು.

  • ಏರ್ ಇಂಡಿಯಾವನ್ನು ವಿಶ್ವ ದರ್ಜೆಯ ವಿಮಾನಯಾನ ಕಂಪನಿಯನ್ನಾಗಿ ನಿರ್ಮಿಸಿ – ಉದ್ಯೋಗಿಗಳ ಜೊತೆ ಚಂದ್ರಶೇಖರ್ ಮಾತು

    ಏರ್ ಇಂಡಿಯಾವನ್ನು ವಿಶ್ವ ದರ್ಜೆಯ ವಿಮಾನಯಾನ ಕಂಪನಿಯನ್ನಾಗಿ ನಿರ್ಮಿಸಿ – ಉದ್ಯೋಗಿಗಳ ಜೊತೆ ಚಂದ್ರಶೇಖರ್ ಮಾತು

    ನವದೆಹಲಿ: ಏರ್ ಇಂಡಿಯಾವನ್ನು ವಿಶ್ವ ದರ್ಜೆಯ ವಿಮಾನಯಾನ ಕಂಪನಿಯನ್ನಾಗಿ ನಿರ್ಮಿಸಬೇಕು. ನಾವು ಯಶಸ್ವಿಯಾಗಬೇಕೆಂದು ಇಡೀ ರಾಷ್ಟ್ರ ಬಯಸುತ್ತಿದೆ ಎಂದು ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಖರನ್ ಬುಧವಾರ ಏರ್ ಇಂಡಿಯಾ ಉದ್ಯೋಗಿಗಳನ್ನುದ್ದೇಶಿಸಿ ಮಾತನಾಡಿದರು.

    ಸರ್ಕಾರಿ ಸ್ವಾಮ್ಯದಲ್ಲಿದ್ದ ಏರ್ ಇಂಡಿಯಾವನ್ನು ಬಿಡ್ ಮೂಲಕ ಗೆದ್ದು ಸ್ವಾಧೀನಪಡಿಸಿಕೊಂಡಿರುವ ಟಾಟಾ ಗ್ರೂಪ್ಸ್ ಇದೀಗ ತಂತ್ರಜ್ಞಾನ ಹಾಗೂ ಸೇವೆಯಲ್ಲಿ ಅತ್ಯುತ್ತಮವಾಗಿಸುವ ಬಗ್ಗೆ ಭವಿಷ್ಯದ ನೀಲನಕ್ಷೆ ಸಿದ್ಧಪಡಿಸುತ್ತಿದೆ. ಇದನ್ನೂ ಓದಿ: ಏರ್ ಇಂಡಿಯಾ ವಿಶ್ವದಲ್ಲೇ ಅತ್ಯುತ್ತಮವಾಗಿಸುವುದು ನಮ್ಮ ಗುರಿ: ಎನ್ ಚಂದ್ರಶೇಖರನ್

    ಏರ್ ಇಂಡಿಯಾ 12 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿದೆ. ಒಪ್ಪಂದದ ಪ್ರಕಾರ ಕಂಪನಿ ಅವರನ್ನು 1 ವರ್ಷದ ವರೆಗೆ ಉಳಿಸಿಕೊಳ್ಳಬೇಕಾಗಿದೆ. ಏರ್ ಇಂಡಿಯಾ ಟಾಟಾ ಗ್ರೂಪ್‌ಗೆ ಸೇರ್ಪಡೆಗೊಳ್ಳುವುದರೊಂದಿಗೆ 130 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿನಿಧಿಸುವ ಬ್ರಾಂಡ್ ಆಗಲು ನಮಗೆ ಈಗ ಅವಕಾಶವಿದೆ ಎಂದು ಹೇಳಿದರು.

    ಏರ್ ಇಂಡಿಯಾ ಆನ್-ಟೈಮ್ ಕಾರ್ಯಕ್ಷಮತೆಯಲ್ಲಿ ಬುಕ್ಕಿಂಗ್, ಬೋರ್ಡಿಂಗ್, ಲಾಂಜ್, ಗ್ರಾಹಕರ ಕುಂದು ಕೊರತೆ ನಿರ್ವಹಣೆಗೆ ತಡೆ ರಹಿತ ಅನುಭವ ನೀಡುತ್ತದೆ. ಪ್ರಯಾಣಿಕರು, ಸಿಬ್ಬಂದಿ, ಗ್ರೌಂಡ್ ಹ್ಯಾಂಡ್ಲಿಂಗ್ ಸಿಬ್ಬಂದಿ ಸೇರಿದಂತೆ ಎಲ್ಲರ ಸುರಕ್ಷತೆ ಅತಿ ಮುಖ್ಯವಾಗಿರುತ್ತದೆ ಎಂದು ಚಂದ್ರಶೇಖರನ್ ತಿಳಿಸಿದರು. ಇದನ್ನೂ ಓದಿ: ಫೇಸ್‌ಬುಕ್ ಉದ್ಯೋಗಿಗಳು ಇನ್ನು ಮುಂದೆ ಮೆಟಾಮೇಟ್ಸ್: ಜುಕರ್‌ಬರ್ಗ್

    ನಾವು ಆರ್ಥಿಕವಾಗಿ ಸದೃಢರಾಗಿರುವಾಗ ಮಾತ್ರ ಯಶಸ್ವಿಯಾಗಲು ಸಾಧ್ಯ. ಏರ್ ಇಂಡಿಯಾವನ್ನು ವಿಶ್ವ ದರ್ಜೆಯ ವಿಮಾನಯಾನ ಮಾಡುವ ಕಾರ್ಯ ಬಹಳ ದೊಡ್ಡದಾಗಿದೆ. ಇದು ಅತ್ಯಂತ ರೋಮಾಂಚನಕಾರಿ ಪ್ರಯಾಣವಾಗಲಿದೆ. ಈ ಯಶಸ್ಸನ್ನು ಇಡೀ ರಾಷ್ಟ್ರ ಬಯಸುತ್ತಿದೆ ಎಂದು ಹೇಳಿದರು.

  • ಏರ್ ಇಂಡಿಯಾ ವಿಶ್ವದಲ್ಲೇ ಅತ್ಯುತ್ತಮವಾಗಿಸುವುದು ನಮ್ಮ ಗುರಿ: ಎನ್ ಚಂದ್ರಶೇಖರನ್

    ಏರ್ ಇಂಡಿಯಾ ವಿಶ್ವದಲ್ಲೇ ಅತ್ಯುತ್ತಮವಾಗಿಸುವುದು ನಮ್ಮ ಗುರಿ: ಎನ್ ಚಂದ್ರಶೇಖರನ್

    ನವದೆಹಲಿ: ಗ್ರಾಹಕರ ಸೇವೆಯಲ್ಲಿ ಏರ್ ಇಂಡಿಯಾ ಅತ್ಯುತ್ತಮವಾಗಬೇಕೆಂದು ನಾವು ಬಯಸುತ್ತೇವೆ. ಏರ್ ಇಂಡಿಯಾ ವಿಶ್ವದಲ್ಲೇ ತಾಂತ್ರಿಕವಾಗಿ ಮುಂದುವರಿದ ಸಂಸ್ಥೆಯಾಗಬೇಕೆಂದು ನಾವು ಬಯಸುತ್ತೇವೆ ಎಂದು ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಕರನ್ ತಿಳಿಸಿದ್ದಾರೆ.

    ಚಂದ್ರಶೇಖರನ್ ಇತ್ತೀಚೆಗೆ ಸಂದೇಶವನ್ನು ನೀಡಿದ್ದು, ಏರ್ ಇಂಡಿಯಾವನ್ನು ವಿಶ್ವ ದರ್ಜೆಗೆ ತರಲು ಟಾಟಾ ಗ್ರೂಪ್ ಬದ್ಧವಾಗಿದೆ. ಗ್ರಾಹಕರ ಸೇವೆಯಲ್ಲಿ ಏರ್ ಇಂಡಿಯಾವನ್ನು ಅತ್ಯುತ್ತಮವಾಗಿಸಲು ಕಂಪನಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚೀನೀ ಟೆಲಿಕಾಂ ಕಂಪನಿ ಹುವಾವೇ ಮೇಲೆ ಐಟಿ ರೇಡ್

    ಏರ್ ಇಂಡಿಯಾವನ್ನು ಜನವರಿ 27ರಂದು ಟಾಟಾ ಗ್ರೂಪ್‌ಗೆ ಹಸ್ತಾಂತರಿಸಲಾಯಿತು. ಬಿಡ್ಡಿಂಗ್ ಪ್ರಕ್ರಿಯೆ ಮೂಲಕ ಟಾಟಾ ಕಂಪನಿ 69 ವರ್ಷಗಳ ಬಳಿಕ ಏರ್ ಇಂಡಿಯಾವನ್ನು 18,000 ಕೋಟಿ ರೂ.ಗೆ ಕೊಂಡುಕೊಂಡಿತು. ಇದನ್ನೂ ಓದಿ: ಇಸ್ರೋ ಭೂ ವೀಕ್ಷಣಾ ಉಪಗ್ರಹ ಯಶಸ್ವಿ ಉಡಾವಣೆ

    ಇದಕ್ಕೂ ಮೊದಲು ಟಾಟಾ ಗ್ರೂಪ್ ಅಧ್ಯಕ್ಷ ರತನ್ ಟಾಟಾ, ಟಾಟಾ ಗ್ರೂಪ್ ಏರ್ ಇಂಡಿಯಾದ ಹೊಸ ಗ್ರಾಹಕರನ್ನು ಸ್ವಾಗತಿಸುತ್ತದೆ. ಪ್ರಯಾಣಿಕರ ಸೌಕರ್ಯ ಹಾಗೂ ಸೇವೆಯ ವಿಷಯದಲ್ಲಿ ಏರ್ ಇಂಡಿಯಾವನ್ನು ಆಯ್ಕೆಯ ಏರ್‌ಲೈನ್ ಮಾಡಲು ಒಟ್ಟಾಗಿ ಕೆಲಸ ಮಾಡಲು ಉತ್ಸುಕರಾಗಿದ್ದೇವೆ ಎಂದಿದ್ದರು.

  • ಟಾಟಾ ಸನ್ಸ್ ಗ್ರೂಪ್‌ಗೆ ಎನ್ ಚಂದ್ರಶೇಖರನ್ ಅಧ್ಯಕ್ಷರಾಗಿ ಮರು ನೇಮಕ

    ಟಾಟಾ ಸನ್ಸ್ ಗ್ರೂಪ್‌ಗೆ ಎನ್ ಚಂದ್ರಶೇಖರನ್ ಅಧ್ಯಕ್ಷರಾಗಿ ಮರು ನೇಮಕ

    ನವದೆಹಲಿ: ಟಾಟಾ ಸನ್ಸ್ ಮಂಡಳಿಯಲ್ಲಿ ಮುಂದಿನ 5 ವರ್ಷಗಳ ವರೆಗೆ ನಟರಾಜನ್ ಚಂದ್ರಶೇಖರನ್ ಅವರು ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.

    ಎನ್ ಚಂದ್ರಶೇಖರನ್ 2017ರಲ್ಲಿ ಟಾಟಾ ಸನ್ಸ್ ಮಂಡಳಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಅವರ 5 ವರ್ಷಗಳ ಅಧಿಕಾರ ಅವಧಿ ಮುಗಿದಿದ್ದು, ಮತ್ತೆ 5 ವರ್ಷಗಳ ಅಧ್ಯಕ್ಷೀಯ ಅವಧಿಯನ್ನು ನವೀಕರಿಸಲಾಗಿದೆ.

    ಚಂದ್ರಶೇಖರನ್ 2016ರ ಅಕ್ಟೋಬರ್‌ನಲ್ಲಿ ಟಾಟಾ ಸನ್ಸ್ ಮಂಡಳಿಗೆ ಸೇರಿದ್ದರು. ಜನವರಿ 2017ರಲ್ಲಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಇವರು 100ಕ್ಕೂ ಅಧಿಕ ಟಾಟಾ ಆಪರೇಟಿಂಗ್ ಕಂಪನಿಗಳ ಪ್ರವರ್ತಕರಾಗಿದ್ದು, 100 ಶತಕೋಟಿ ಡಾಲರ್‌ಗೂ ಹೆಚ್ಚಿನ ಆದಾಯ ಹೊಂದಿದ್ದಾರೆ. ಇದನ್ನೂ ಓದಿ: IPL 2022 Auction: ಲಿವಿಂಗ್‍ಸ್ಟೋನ್ ದುಬಾರಿ ವಿದೇಶಿ ಆಟಗಾರ – ಫಿಂಚ್, ಮಾರ್ಗನ್ ಅನ್‍ಸೋಲ್ಡ್

     

    ಟಾಟಾ ಸ್ಟೀಲ್, ಟಾಟಾ ಮೋಟಾರ್ಸ್, ಟಾಟಾ ಪವರ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಸೇರಿದಂತೆ ಹಲವಾರು ಗ್ರೂಪ್ ಆಪರೇಟಿಂಗ್ ಕಂಪನಿಗಳ ಮಂಡಳಿಗೆ ಅಧ್ಯಕ್ಷರಾಗಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ 15ರ ಸೆಟ್‌ಗೆ ಬೆಂಕಿ!

    ಚಂದ್ರಶೇಖರನ್ ತಮ್ಮ ಅಧಿಕಾರಾವಧಿಯಲ್ಲಿ ಏರ್ ಇಂಡಿಯಾವನ್ನು ಮರಳಿ ಪಡೆದಿದ್ದಾರೆ. ಟಾಟಾ ಗ್ರೂಪ್‌ಗೆ ಏರ್ ಇಂಡಿಯಾವನ್ನು ಮರಳಿ ಪಡೆಯಲು ನಾವು ಉತ್ಸುಕರಾಗಿದ್ದೇವೆ. ಇದನ್ನು ವಿಶ್ವದರ್ಜೆಯ ವಿಮಾನಯಾನ ಮಾಡಲು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದರು.