Tag: ಎರಡನೇ ಪತ್ನಿ

  • ತಾನು ಎರಡನೇ ಪತ್ನಿ ಅಂತಾ ಗೊತ್ತಾಗ್ತಿದ್ದಂತೆಯೇ ಮುಂಜಾನೆ ನೇಣಿಗೆ ಶರಣಾದ ನವವಧು!

    ತಾನು ಎರಡನೇ ಪತ್ನಿ ಅಂತಾ ಗೊತ್ತಾಗ್ತಿದ್ದಂತೆಯೇ ಮುಂಜಾನೆ ನೇಣಿಗೆ ಶರಣಾದ ನವವಧು!

    ಬೆಂಗಳೂರು: ಮದುವೆ ಅನ್ನೋದು ಒಂದು ಮಧುರ ಅನುಬಂಧ. ಅಲ್ಲದೆ ಇದು ಜೀವನದ ಒಂದು ಮುಖ್ಯವಾದ ಘಟ್ಟವೂ ಹೌದು. ಆದರೆ ಇತ್ತೀಚಿನ ದಿನಗಳಲ್ಲಿ ಮದುವೆ ನೆಪದಲ್ಲಿ ಹಲವು ಚಿತ್ರ-ವಿಚಿತ್ರ ಘಟನೆಗಳು ನಡೆಯುತ್ತವೆ. ಅಂತೆಯೇ ಸಿಲಿಕಾನ್ ಸಿಟಿಯಲ್ಲಿ ಮದುವೆಯಾದ ಕೆಲವೇ ದಿನಗಳಲ್ಲಿ ಪತಿಗೆ ತಾನು ಎರಡನೇ ಪತ್ನಿ ಎಂದು ಗೊತ್ತಾಗಿ ನವವಧು ನೇಣಿಗೆ ಕೊರಳೊಡ್ಡಿದ್ದಾಳೆ.

    ಈ ಘಟನೆ ಬೆಂಗಳೂರಿನ ಮಾತರಹಳ್ಳಿಯ ಕಾವೇರಿ ಲೇಔಟ್‍ (Kaveri Layout) ನಲ್ಲಿ ನಡೆದಿದೆ. ನವಧುವನ್ನು ಗೌತಮಿ (24) ಎಂದು ಗುರುತಿಸಲಾಗಿದೆ. ಮಂಗಳವಾರ ಮುಂಜಾನೆ 4 ಗಂಟೆಯ ಒಳಗಡೆ ಗೌತಮಿ ಫ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಾಢನಿದ್ರೆಯಲ್ಲಿದ್ದ ಪತಿ ಪ್ರಸಾದ್ ರೆಡ್ಡಿ ಬೆಳಗ್ಗಿನ ಜಾವ ಕಣ್ಣು ಬಿಟ್ಟಾಗ ಗೌತಮಿ ಫ್ಯಾನಿನಲ್ಲಿ ನೇತಾಡುತ್ತಿರುವುದು ಕಂಡುಬಂದಿದೆ.

    ಘಟನೆ ಸಂಬಂಧ ಗೌತಮಿ ತಂದೆ ಬಾನು ನೀಡಿದ ದೂರಿನನ್ವಯ ಮಾರತಹಳ್ಳಿ ಪೊಲೀಸರು (Marathahalli Police Station) ಪತಿ ಪ್ರಸಾದ್ ಹಾಗೂ ಆತನ ಮೊದಲ ಪತ್ನಿ ಆಯಿಷಾ ಬಾನು ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗೌತಮಿ ಬಿಕಾಂ (Bcom) ಓದಿದ್ದು, ಆಂಧ್ರಪ್ರದೇಶ (Andhrapradesh) ದ ಪುಂಗನೂರಿನಲ್ಲಿ ಖಾಸಗಿ ಸಂಸ್ಥೆಯೊಂದರ ಉದ್ಯೋಗಿಯಾಗಿದ್ದಳು. ಈ ಸಂದರ್ಭದಲ್ಲಿ ಈಕೆಗೆ ಪ್ರಸಾದ್ ಮೇಲೆ ಲವ್ (Love) ಆಗಿದೆ. ಪರಿಣಾಮ ಆಕೆ ಅವನ ಜೊತೆ ಓಡಿ ಹೋಗಿದ್ದಾಳೆ. ಬಳಿಕ 2022ರ ಮಾರ್ಚ್ 19ರಂದು ಇಬ್ಬರೂ ದಾಂಪತ್ಯ ಜೀವನಕ್ಕೆ (Gouthami- Prasad Reddy)Marriage) ಕಾಲಿಟ್ಟಿದ್ದಾರೆ.

    ಇತ್ತ ಮಗಳು ಓಡಿ ಹೋದ ಸಂದರ್ಭದಲ್ಲಿ ಮಗಳು ನಾಪತ್ತೆಯಾಗಿರುವುದಾಗಿ ದೂರು ದಾಖಲಿಸಿದ್ದರು. ಆದರೆ ಆಕೆ ಪೊಲೀಸರ ಮುಂದೆ ಹಾಜರಾಗಿ ತಾನು ಮದುವೆಯಾಗಿರುವುದಾಗಿ ಹೇಳಿಕೆ ನೀಡಿದ್ದಳು. ನಂತರ ದಂಪತಿಗೆ ಬೆಂಗಳೂರಿಗೆ ಬಂದು ನೆಲೆಸಿದ್ದರು. ಇದನ್ನೂ ಓದಿ: ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್ ಗಿರಿ- ಹಿಂದೂ ಯುವಕನ ಜೊತೆಗಿದ್ದ ಅನ್ಯಧರ್ಮದ ಯುವತಿ ಮೇಲೆ ಹಲ್ಲೆ

    ಪ್ರಸಾದ್ ಹಾಗೂ ಬಾನುಗೆ ಈಗಾಗಲೇ ಓರ್ವ ಮಗಳಿರುವುದಾಗಿ ಗೌತಮಿಗೆ ಗೊತ್ತಾಗಿದೆ. ಮಂಗಳವಾರ ತಂದೆ ಬಾಬುಗೆ ಕರೆ ಮಾಡಿದ ಗೌತಮಿ, ಬಾನು ಮನೆಗೆ ಬಂದಿರುವುದಾಗಿ ತಿಳಿಸಿದ್ದಾಳೆ. ಅಲ್ಲದೆ ತಾನು ಬಾನು ಯಾಕೆ ಮನೆಗೆ ಬರುವುದು ಎಂದು ಪ್ರಶ್ನೆ ಮಾಡಿದೆ. ಈ ವೇಳೆ ಇಬ್ಬರೂ ಸೇರಿ ನನ್ನನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಅಲ್ಲದೆ ಕಿರುಕುಳ ನೀಡಿದ್ದಾರೆ ಎಂದು ಗೌತಮಿ ಹೇಳಿಕೊಂಡಿರುವುದಾಗಿ ಬಾಬು ಪೊಲೀಸರಿಗೆ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮುತ್ತಪ್ಪ ರೈ ಸಾವಿನ ಬೆನ್ನಲ್ಲೇ ಶುರುವಾದ ಆಸ್ತಿ ವಿವಾದ – ಕೋರ್ಟ್ ಮೆಟ್ಟಿಲೇರಿದ ಪತ್ನಿ

    ಮುತ್ತಪ್ಪ ರೈ ಸಾವಿನ ಬೆನ್ನಲ್ಲೇ ಶುರುವಾದ ಆಸ್ತಿ ವಿವಾದ – ಕೋರ್ಟ್ ಮೆಟ್ಟಿಲೇರಿದ ಪತ್ನಿ

    ಬೆಂಗಳೂರು: ಮುತ್ತಪ್ಪ ರೈ ಸಾವಿನ ನಂತರ ಅವರ ಕುಟುಂಬದಲ್ಲಿ ಆಸ್ತಿ ವಿವಾದ ಶುರುವಾಗಿದ್ದು, ರೈ ಎರಡನೇ ಪತ್ನಿ ಆಸ್ತಿಯಲ್ಲಿ ಪಾಲು ಕೇಳಿ ಕೋರ್ಟ್ ಮೆಟ್ಟಿಲೇರಿದ್ದಾರೆ.

    ಮುತ್ತಪ್ಪ ರೈ ಅವರು ಸಾಯುವ ಮುನ್ನವೇ ತನ್ನ ಆಸ್ತಿಯ ಬಗ್ಗೆ ವಿಲ್ ಬರೆದು ಇಟ್ಟಿದ್ದರು. ಇದರಲ್ಲಿ ಅವರ ಆಸ್ತಿ ಯಾರಿಗೇ ಸೇರಬೇಕು ಮತ್ತು ಎಷ್ಟು ಸೇರಬೇಕು ಎಂದು ತಿಳಿಸಿದ್ದರು. ಹೀಗಿದ್ದರೂ ಅವರ ಸಾವಿನ ಬಳಿಕ ಅವರ ಎರಡನೇ ಪತ್ನಿ ಅನುರಾಧ ಪಾಲು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ.

    ಈಗಾಗಲೇ ಅನುರಾಧ ಅವರಿಗೂ ಆಸ್ತಿಯಲ್ಲಿ ಪಾಲು ನೀಡಲಾಗಿದೆ ಎಂದು ರೈ ವಿಲ್‍ನಲ್ಲಿ ತಿಳಿಸಿದ್ದರು. ಆದರೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟಿನಲ್ಲಿ ಅನುರಾಧ ಮುತ್ತಪ್ಪ ರೈ ಅವರು ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಮುತ್ತಪ್ಪ ರೈ ಪುತ್ರರಾದ ರಾಕಿ, ರಿಕ್ಕಿ ಸೇರಿ 17 ಪ್ರತಿವಾದಿಗಳಿಗೆ ಕೋರ್ಟ್ ನೋಟಿಸ್ ನೀಡಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 4ಕ್ಕೆ ಮುಂದಿನ ವಿಚಾರಣೆ ನಡೆಸುವುದಾಗಿ ಕೋರ್ಟ್ ಸಮಯವನ್ನು ನಿಗದಿ ಮಾಡಿದೆ.

    ಎರಡನೇ ಪತ್ನಿ ಅನುರಾಧಾಗೆ ಚಿನ್ನಾಭರಣ, ಕಾರು, ಕೋಟ್ಯಂತರ ರೂಪಾಯಿ ಹಣದ ಜೊತೆ ಹೆಚ್ ಡಿ ಕೋಟೆ ಆಸ್ತಿ, ಜೊತೆಗೆ ಸಹಕಾರ ನಗರದಲ್ಲಿ ಎರಡು ಅಂತಸ್ತಿನ ಕಟ್ಟಡವನ್ನು ನಿರ್ಮಿಸಿ ಕೊಡಲಾಗಿದೆ. ಅನುರಾಧಾ ಜೊತೆಗಿದ್ದ ಸಂದರ್ಭದಲ್ಲಿ ಅವರಿಗೆ ಸೇರಬೇಕಾದ ಆಸ್ತಿಯನ್ನು ನೀಡಲಾಗಿದೆ ಎಂದು ವಿಲ್‍ನಲ್ಲಿ ಉಲ್ಲೇಖವಾಗಿದೆ.

    ಆಸ್ತಿ ಎಷ್ಟಿದೆ?
    ವಿಲ್ ಪ್ರಕಾರ ಸುಮಾರು 2 ಸಾವಿರ ಕೋಟಿಗೂ ಅಧಿಕ ಆಸ್ತಿ ರೈ ಹೆಸರಿನಲ್ಲಿದೆ. ದೇವನಹಳ್ಳಿ, ಯಲಹಂಕ, ಬಿಡದಿಯಲ್ಲಿ 150ಕ್ಕೂ ಅಧಿಕ ಎಕರೆ ಜಾಗ, ಮೈಸೂರು, ಮಂಗಳೂರು, ಬಂಟ್ವಾಳ, ಪುತ್ತೂರಿನಲ್ಲಿ ನೂರಾರು ಎಕರೆ ಜಮೀನು ಮುತ್ತಪ್ಪ ರೈ ಹೆಸರಿನಲ್ಲಿದೆ. ಸಕಲೇಶಪುರದಲ್ಲಿ 200 ಎಕರೆ ಜಮೀನಿದೆ.

    ಹಂಚಿಕೆ ಹೇಗೆ?
    ಒಟ್ಟು 600ಕ್ಕೂ ಅಧಿಕ ಎಕರೆ ಜಮೀನನ್ನು ತನ್ನಿಬ್ಬರು ಮಕ್ಕಳಾದ ರಿಕ್ಕಿ ಹಾಗೂ ರಾಖಿ ರೈಗೆ ಗಿಫ್ಟ್ ಡೀಡ್ ಮಾಡಿದ್ದಾರೆ. ಆಸ್ತಿಗಳ ಪೈಕಿ ಮೈಸೂರು, ಪುತ್ತೂರು, ಬಂಟ್ವಾಳ, ಮಂಗಳೂರು ಜಾಗವನ್ನು ರಾಖಿ ರೈಗೆ ನೀಡಿದ್ದರೆ, ಸಕಲೇಶಪುರ, ಬಿಡದಿ, ಯಲಹಂಕ ಹಾಗೂ ದೇವನಹಳ್ಳಿ ಜಾಗವನ್ನು ಚಿಕ್ಕ ಮಗ ರಿಕ್ಕಿ ರೈಗೆ ಹಂಚಿಕೆ ಮಾಡಿದ್ದಾರೆ. ಆಪ್ತರು, ಸಂಬಂಧಿಕರಿಗೆ ಶೇ.20 ರಷ್ಟು ಆಸ್ತಿ ನೀಡಬೇಕೆಂದು ಸೂಚಿಸಿದ್ದಾರೆ. ಬಿಡದಿ ಹಾಗೂ ಸದಾಶಿವನಗರದ ಎರಡೂ ಮನೆಗಳ ಜವಾಬ್ದಾರಿಯನ್ನು ಚಿಕ್ಕ ಮಗ ರಿಕ್ಕಿ ರೈಗೆ ನೀಡಿದ್ದು ಟ್ರೇಡಿಂಗ್ ವ್ಯವಹಾರ ಕಂಪನಿಯನ್ನು ದೊಡ್ಡ ಮಗ ರಾಖಿ ನೋಡಿಕೊಳ್ಳುವಂತೆ ಸೂಚಿಸಿದ್ದರು.

    ಕೆಲಸಗಾರರಿಗೆ ಸೈಟ್:
    ನಂಬಿಕೆಯಿಂದ 15 ವರ್ಷಗಳ ಕಾಲ ತನ್ನ ಬಳಿ ಕೆಲಸ ಮಾಡಿದ 25 ಕೆಲಸಗಾರರಿಗೆ ಒಂದೊಂದು ಸೈಟ್ ಹಾಗೂ ಕೈಲಾದಷ್ಟು ಹಣ ನೀಡುವಂತೆ ಕಿರಿಯ ಮಗ ರಿಕ್ಕಿ ರೈಗೆ ಸೂಚಿಸಿದ್ದರು. ತಂದೆಯ ಸೂಚನೆಯಂತೆ ರಿಕ್ಕಿ ಈಗಾಗಲೇ ತಲಾ ಒಬ್ಬೊಬ್ಬರಿಗೆ 3 ಲಕ್ಷ ರೂಪಾಯಿಗಳನ್ನು ಹಂಚಿಕೆ ಮಾಡಿದ್ದರು.

    ಸಂಘಟನೆ ಹೊಣೆ ಯಾರಿಗೆ?
    ಜಯ ಕರ್ನಾಟಕ ಸಂಘಟನೆ ಯಾವುದೇ ಕಾರಣಕ್ಕೂ ಒಡೆಯಬಾರದು ಎಂದು ಹೇಳಿರುವ ಮುತ್ತಪ್ಪ ರೈ ಈ ಸಂಘಟನೆಯ ಜವಾಬ್ದಾರಿಯನ್ನು ಚಿಕ್ಕಮಗ ರಿಕ್ಕಿ ರೈಗೆ ನೀಡಿದ್ದಾರೆ. ಜಗದೀಶ್ ಸಂಘಟನೆಯ ಅಧ್ಯಕ್ಷತೆಯನ್ನು ನೋಡಿಕೊಳ್ಳಬೇಕು. ಮುಂದೆ ಈ ಸಂಘಟನೆಯನ್ನು ಬೆಳೆಸುವಂತೆ ಕಾರ್ಯಕರ್ತರಲ್ಲಿ ರೈ ಮನವಿ ಮಾಡಿರುವ ವಿಚಾರ ವಿಲ್ ನಲ್ಲಿ ಉಲ್ಲೇಖವಾಗಿದೆ.