Tag: ಎಲೆಚುಕ್ಕಿ

  • ಲೋಕಸಭೆಯಲ್ಲಿ ಅಡಿಕೆ ಬೆಳೆಗಾರರ ಪರ ಧ್ವನಿ ಎತ್ತಿದ ಬಿ.ವೈ ರಾಘವೇಂದ್ರ

    ಲೋಕಸಭೆಯಲ್ಲಿ ಅಡಿಕೆ ಬೆಳೆಗಾರರ ಪರ ಧ್ವನಿ ಎತ್ತಿದ ಬಿ.ವೈ ರಾಘವೇಂದ್ರ

    ನವದೆಹಲಿ: ಕರಾವಳಿ (Karavali) ಹಾಗೂ ಮಲೆನಾಡು ಭಾಗಗಳಲ್ಲಿ ಹೆಚ್ಚಾಗಿ ಬೆಳೆಯುವ ಅಡಿಕೆ (Arecanut) ಬೆಳೆಗಾರರ ಸಮಸ್ಯೆಗಳನ್ನು ಲೋಕಸಭೆಯಲ್ಲಿ (Lok Sabha) ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ (B.Y Raghavendra) ಪ್ರಾಸ್ತಾಪಿಸಿ, ಕೆಲ ಪರಿಹಾರ ಸೂಚಕಗಳನ್ನು ಅಳವಡಿಕೆ ಮಾಡಿಕೊಳ್ಳಲು ಸರ್ಕಾರ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿಕೊಂಡರು.

    ಪ್ರತಿಬಾರಿ ಅಡಿಕೆಗೆ ಎಲೆಚುಕ್ಕಿ ರೋಗ ಯತೇಚ್ಛವಾಗಿ ಕಾಡುತ್ತದೆ. ಈ ಬಾರಿ ಕೂಡ ಅಡಿಕೆ ಬೆಳೆಗಾರರು ಎಲೆಚುಕ್ಕಿ ರೋಗದಿಂದಾಗಿ ಇಳುವರಿ ಕಳೆದುಕೊಂಡಿದ್ದಾರೆ. ಇದರೊಂದಿಗೆ ಬೆಲೆ ಕೂಡ ಕುಸಿತ ಕಂಡಿದೆ. ಜೊತೆಗೆ ಆಮದು ಅಡಿಕೆಯಿಂದಾಗಿ ಇಲ್ಲೇ ಬೆಳೆಯುವ ಅಡಿಕೆ ಬೆಳೆಗಾರರಿಗೆ ಹೆಚ್ಚು ಹೊಡೆತ ಬೀಳುತ್ತಿದೆ. ಅಡಿಕೆ ಆಮದು ನಿಲ್ಲಿಸಬೇಕೆಂಬ ರೈತರ (Farmers) ಹಲವು ವರ್ಷಗಳ ಕೂಗು ಹಾಗೆ ಮುಂದುವರಿದೆ. ಹಾಗಾಗಿ ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂಬ ಅಭಿಪ್ರಾಯವನ್ನು ವಿಜಯೇಂದ್ರ ಲೋಕಸಭಾ ಅಧಿವೇಶನದ ಶೂನ್ಯ ವೇಳೆಯಲ್ಲಿ ಮಂಡಿಸಿದರು. ಇದನ್ನೂ ಓದಿ: ತನ್ನ ಚುನಾವಣೆಯ ಗೆಲುವಿನ ರಹಸ್ಯ ರಿವೀಲ್ ಮಾಡಿದ ಮೋದಿ

    ಕರ್ನಾಟಕದಲ್ಲಿ ಶಿವಮೊಗ್ಗ ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಅಡಿಕೆ ಬೆಳೆಯಲಾಗುತ್ತಿದೆ. ಅದರಲ್ಲೂ ಮಳೆನಾಡು ಮತ್ತು ಕರಾವಳಿಯಲ್ಲಿ ಹೆಚ್ಚಾಗಿ ಅಡಿಕೆ ಬೆಳೆ ಬೆಳೆಯುತ್ತಿದ್ದಾರೆ. ಹತ್ತು ಲಕ್ಷಕ್ಕೂ ಹೆಚ್ಚು ಕುಟುಂಬಗಳು ಅಡಿಕೆ ಬೆಳೆಯನ್ನು ತಮ್ಮ ಮುಖ್ಯ ಬೆಳೆಯನ್ನಾಗಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಶೇ.69 ರಷ್ಟು ಅಡಿಕೆ ಉತ್ಪಾದನೆಯಾಗುತ್ತಿದೆ. ಒಟ್ಟಾರೆ 16,50,000 ಮೆಟ್ರಿಕ್ ಟನ್ ಅಡಿಕೆ ಉತ್ಪಾದನೆಯಾಗುತ್ತಿದ್ದು, ಇದರಿಂದಾಗಿ ಜಿಎಸ್‍ಟಿ ಹಾಗೂ ಇನ್ನಿತರ ತೆರಿಗೆಗಳ ಮೂಲಕ ಸರ್ಕಾರಕ್ಕೆ 24,750 ಕೋಟಿ ರೂ. ಆದಾಯ ಬರುತ್ತಿದೆ. ಈಗ ಅಡಿಕೆ ಬೆಳೆಗಾರರು ಅಡಿಕೆಗೆ ಕೆಲ ರೋಗಗಳಿಂದ ಇಳುವರಿ ಕಳೆದುಕೊಂಡಿದ್ದಾರೆ. ಇರುವರಿಯು ಈಗಾಗಲೇ ಶೇ. 40 ರಿಂದ 50 ರಷ್ಟು ಕಡಿಮೆಯಾಗಿದೆ. ಇನ್ನೊಂದೆಡೆ ಅಡಿಕೆಯ ಬೆಲೆಯು ಕುಸಿಯುತ್ತಿದ್ದು, ಕಳೆದ ಸೆಪ್ಟೆಂಬರ್‌ನಲ್ಲಿ ಕ್ವಿಂಟಾಲ್‍ಗೆ 58 ಸಾವಿರ ರೂ. ಇದ್ದ ಅಡಿಕೆ ಧಾರಣೆ ಈಗ 30 ಸಾವಿರ ರೂ.ಗೆ ಇಳಿದಿದೆ ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಮಾಹಿತಿ ಹಂಚಿಕೊಂಡು ಗಮನಸೆಳೆದರು. ಇದನ್ನೂ ಓದಿ: ತನಿಖೆ ಮಾಡದೇ ಉಗ್ರ ಅಂತ ಹೇಗೆ ಘೋಷಣೆ ಮಾಡಿದ್ರಿ: ಡಿಕೆಶಿ ಪ್ರಶ್ನೆ

    ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರವೆಂಬಂತೆ ಮಾರುಕಟ್ಟೆಯಲ್ಲಿ ಸ್ಥಿರತೆ ಮೂಡಿಸಲು ಆಮದು ಅಡಿಕೆಯ ಮೇಲೆ ಹೆಚ್ಚಿನ ಸುಂಕ ವಿಧಿಸಬೇಕು. ಅಡಿಕೆಯನ್ನು ಕಾಡುವ ಎಲ್ಲ ರೋಗಗಳಿಗೆ ವೈಜ್ಞಾನಿಕವಾಗಿ ಔಷಧಿಯನ್ನು ಅಭಿವೃದ್ಧಿ ಪಡಿಸಿಕೊಡಬೇಕು. ಕಾನೂನು ಬಾಹಿರವಾಗಿ ಅಡಿಕೆ ವ್ಯಾಪಾರ ನಡೆಯುವುದನ್ನು ತಡೆದು ಸರ್ಕಾರಿ ಸೌಮ್ಯದ ಮಾರುಕಟ್ಟೆಯಲ್ಲಿ ಸರಿಯಾದ ಬೆಲೆಗೆ ವ್ಯಾಪಾರ ನಡೆಸುವಂತಾಗಬೇಕೆಂದು ಆಶಯ ವ್ಯಕ್ತಪಡಿಸಿದರು. ಲೋಕಸಭೆಯಲ್ಲಿ ಒಂದು ನಿಮಿಷ ಕಾಲಾವಕಾಶ ನೀಡಲಾಗಿದ್ದರೂ ಸಂಸದರು 1.34 ನಿಮಿಷ ಮಾತನಾಡಿ, ರಾಜ್ಯದ ಅಡಿಕೆ ಬೆಳೆಗಾರರ ಸಮಸ್ಯೆಯನ್ನು ಪ್ರಸ್ತಾಪಿಸಿ ಪರಿಹಾರಕ್ಕಾಗಿ ಆಗ್ರಹಿಸಿದರು.

    Live Tv
    [brid partner=56869869 player=32851 video=960834 autoplay=true]

  • ಮುಂದಿನ ವಾರ ಅಡಿಕೆ ರೋಗ ಅಧ್ಯಯನಕ್ಕೆ ಕೇಂದ್ರ ಸಮಿತಿ ರಾಜ್ಯಕ್ಕೆ ಆಗಮನ: ಆರಗ ಜ್ಞಾನೇಂದ್ರ

    ಮುಂದಿನ ವಾರ ಅಡಿಕೆ ರೋಗ ಅಧ್ಯಯನಕ್ಕೆ ಕೇಂದ್ರ ಸಮಿತಿ ರಾಜ್ಯಕ್ಕೆ ಆಗಮನ: ಆರಗ ಜ್ಞಾನೇಂದ್ರ

    ಶಿವಮೊಗ್ಗ: ರಾಜ್ಯದ ಅಡಿಕೆ ತೋಟಗಳಲ್ಲಿ(Areca Plantations) ಹಬ್ಬಿರುವ ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರದ ಏಳು ಮಂದಿ ತಜ್ಞರನ್ನು ಒಳಗೊಂಡ ಸಮಿತಿ(Central Team) ಮುಂದಿನ ವಾರ ರಾಜ್ಯಕ್ಕೆ ಆಗಮಿಸಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ತಿಳಿಸಿದ್ದಾರೆ.

    ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮಲೆನಾಡು ಹಾಗೂ ಕರಾವಳಿ ಭಾಗದ(Malnad and Coastal Region) ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಕೇಂದ್ರ ತಕ್ಷಣ ಸ್ಪಂದಿಸಿದ್ದು, ಅಡಿಕೆ ಬೆಳೆಗೆ ಎದುರಾಗಿರುವ ರೋಗ ನಿವಾರಣೆಗೆ ಸಮಿತಿ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಲಿದೆ ಎಂದರು.

    ಇತ್ತೀಚೆಗೆ ರಾಜ್ಯ ಅಡಿಕೆ ಬೆಳೆಗಾರರ ಆತಂಕಕ್ಕೆ ಕಾರಣವಾದ ಎಲೆ ಚುಕ್ಕೆ ರೋಗಕ್ಕೆ ಪರಿಹಾರ ಬಯಸಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕೇಂದ್ರ ಕೃಷಿ ಸಚಿವ ನರೆಂದ್ರ ಸಿಂಗ್ ತೋಮರ್ ಅವರಿಗೆ ನವದೆಹಲಿಯಲ್ಲಿ ನಿಯೋಗ ಭೇಟಿಯಾಗಿ ಮನವಿ ಸಲ್ಲಿಸಿತ್ತು. ಕೇಂದ್ರ ಸರ್ಕಾರ ಸಮಸ್ಯೆಯ ಪರಿಹಾರಕ್ಕೆ ಪೂರಕವಾಗಿ ಸ್ಪಂದಿಸಿ ಸಮಿತಿ ರಚಿಸಿದೆ ಎಂದರು. ಇದನ್ನೂ ಓದಿ: ಮುಂದೆ ನಮ್ಮದೇ ಸರ್ಕಾರ ಬರುತ್ತೆ: ಹೆಚ್‍ಡಿಕೆ

    ರಾಜ್ಯದಲ್ಲಿ ಸುಮಾರು 20 ಸಾವಿರ ಹೆಕ್ಟೇರ್ ಪ್ರದೇಶದ ಅಡಿಕೆ ತೋಟಗಳು ಎಲೆ ಚುಕ್ಕೆ ರೋಗಕ್ಕೆ ಬಲಿಯಾಗಿದ್ದು, ಕಾಳ್ಗಿಚ್ಚಿನಂತೆ ರೋಗ ಇತರೆಡೆ ಹರಡುತ್ತಿದೆ. ಹೀಗಾಗಿ ಇದೇ ತಿಂಗಳ 22 ರಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿಗೆ ಆಗಮಿಸುವ ಸಂಶೋಧನಾ ತಜ್ಞರನ್ನು ಭೇಟಿಯಾಗಿ ಪರಿಸ್ಥಿತಿಯ ಮನವರಿಕೆ ಮಾಡಿಕೊಡುವೆ ಎಂದರು.

    ಸುಮಾರು 50 ಲಕ್ಷ ಜನರಿಗೆ, ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಜೀವನೋಪಾಯ ಕಲ್ಪಿಸಿಕೊಟ್ಟಿರುವ ಅಡಿಕೆ ಬೆಳೆ ನಮ್ಮ ಭಾಗದ ರೈತರ ಆರ್ಥಿಕ ಜೀವನಾಡಿಯಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕರಾವಳಿ ಭಾಗದಲ್ಲಿ ರೈತ ಸಮುದಾಯದ ಜೀವನಾಡಿಯದ ಅಡಿಕೆ ಬೆಳೆ ಎಲೆ ಚುಕ್ಕೆ ರೋಗದಿಂದ ನಲುಗಿದ್ದು, ನಿಯಂತ್ರಣ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯುವ ಜೊತೆಗೆ ಪರಿಹಾರ ಕಲ್ಪಿಸುವ ಬಗ್ಗೆ ಕೇಂದ್ರದ ಗಮನಕ್ಕೆ ತರುತ್ತೇವೆ ಎಂದರು.

    Live Tv
    [brid partner=56869869 player=32851 video=960834 autoplay=true]