Tag: ಎಲ್.ಹನುಮಂತಯ್ಯ

  • ಮೋದಿ ಸರ್ಕಾರದಿಂದ ರಾಜ್ಯಗಳಿಗೆ ಆಗುತ್ತಿರುವ ಆರ್ಥಿಕ ಅನ್ಯಾಯ ನಿಲ್ಲಬೇಕು: ಎಲ್.ಹನುಮಂತಯ್ಯ

    ಮೋದಿ ಸರ್ಕಾರದಿಂದ ರಾಜ್ಯಗಳಿಗೆ ಆಗುತ್ತಿರುವ ಆರ್ಥಿಕ ಅನ್ಯಾಯ ನಿಲ್ಲಬೇಕು: ಎಲ್.ಹನುಮಂತಯ್ಯ

    – ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ಆರೋಪ; ದೆಹಲಿಯಲ್ಲಿ ಪ್ರತಿಭಟನಾ ಸಭೆ

    ನವದೆಹಲಿ: ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ (Union Government) ತೆರಿಗೆ ವಂಚನೆಯಾಗುತ್ತಿದೆ. ಇದರ ವಿರುದ್ಧ ಧ್ವನಿ ಎತ್ತುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆಗಳ ಮೂಲಕ ಪ್ರಧಾನಿ ನರೇಂದ್ರ ಮೋದಿ (Narendra Modi) ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆಸಲಾಯಿತು.

    ದೆಹಲಿಯ ಕರ್ನಾಟಕ ಸಂಘದಲ್ಲಿ ರಾಜ್ಯಸಭೆ ಮಾಜಿ ಸಂಸದ ಎಲ್‌. ಹನುಮಂತಯ್ಯ (L Hanumanthaiah) ಅವರ ನೇತೃತದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ರಾಜ್ಯದ ಪ್ರಮುಖ ಸಾಹಿತಿಗಳು, ಚಿಂತಕರು, ಕನ್ನಡಪರ ಹೋರಾಟಗಾರರು, ರೈತ ನಾಯಕರು, ಮಹಿಳಾ ಹೋರಾಟಗಾರ್ತಿಯರು ಭಾಗಿಯಾಗಿದ್ದರು. ಪ್ರತಿಭಟನಾ ಸಭೆ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು. ಇದನ್ನೂ ಓದಿ: ಎಸ್‌ಡಿಎ ರುದ್ರಣ್ಣ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಬೇಕು: ಅರವಿಂದ ಬೆಲ್ಲದ್‌

    ಸಭೆಯಲ್ಲಿ ಮಾತನಾಡಿದ ಎಲ್.ಹನುಮಂತಯ್ಯ, ಪ್ರಧಾನಿ ಮೋದಿ ಅವರ ಸರ್ಕಾರದಿಂದ ರಾಜ್ಯಗಳಿಗೆ ಆಗುತ್ತಿರುವ ಆರ್ಥಿಕ ಅನ್ಯಾಯ ನಿಲ್ಲಬೇಕು ಎಂದು ಒತ್ತಾಯಿಸಿದರು. ಪ್ರತಿಯೊಂದು ರಾಜ್ಯದ ಭಾಷೆ, ಸಂಸ್ಕೃತಿ ವೈವಿಧ್ಯತೆಯನ್ನು ಒಕ್ಕೂಟ ಸರ್ಕಾರ ಕಾಪಾಡಬೇಕು. ಅದರ ಬದಲು ಏಕಮುಖ ಸಂಸ್ಕೃತಿ ಏರಿಕೆ ಮಾಡಬಾರದು ಎಂದರು. ರಾಜ್ಯಕ್ಕೆ ಬರಬೇಕಿರುವ ನ್ಯಾಯಬದ್ಧವಾದ ತೆರಿಗೆಯನ್ನು ನೀಡಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಶಿವರಾಂ ಎಚ್ಚರಿಕೆ ನೀಡಿದರು.

    ಮೈಸೂರು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಬಿ.ಜೆ ವಿಜಯ್‌ಕುಮಾರ್ ಮಾತನಾಡಿ, ದೇಶದ ಆತಂರಿಕ ಶಾಂತಿಗಾಗಿ ದೆಹಲಿಯಲ್ಲಿ ಸಭೆ ಮಾಡುವ ಅನಿವಾರ್ಯತೆ ಬಂದಿದೆ. ಬುದ್ಧಿ ಹೇಳುವ ವ್ಯವಸ್ಥೆಯ ವಿರುದ್ಧವೇ ನಾವು ಮಾತನಾಡಬೇಕಾದ ಅನಿವಾರ್ಯತೆ ಇದೆ. ಐಟಿ, ಇಡಿ ಸಿಬಿಐ ಅನ್ನು 65 ವರ್ಷ ಕಾಂಗ್ರೆಸ್‌ ನಡೆಸಿಕೊಂಡ ರೀತಗು, ಬಿಜೆಪಿ ನಡೆಸಿಕೊಂಡ ರೀತಿಗು ಭಿನ್ನವಾಗಿದೆ ಎಂದರು. ಇದನ್ನೂ ಓದಿ: ಅನುಷ್ಕಾ ಶೆಟ್ಟಿ ಫ್ಯಾನ್ಸ್‌ಗೆ ಡಬಲ್ ಧಮಾಕ- ‘ಘಾಟಿ’ ಚಿತ್ರದ ಫಸ್ಟ್ ಲುಕ್ ಔಟ್

    ಕನ್ನಡ ಪ್ರಾಧಿಕಾರದ ಸದಸ್ಯ ಟಿ. ಗುರುರಾಜ್ ಮಾತನಾಡಿ, ಕರ್ನಾಟಕ, ಕನ್ನಡಿಗರು ವಿಷಮ ಪರಿಸ್ಥಿತಿಯಲ್ಲಿ ನರಳುತ್ತಿದ್ದಾರೆ. ತಾರತಮ್ಯ ಮಾಡದೇ ಆಡಳಿತ ಮಾಡಬೇಕಿದ್ದ ಕೇಂದ್ರ ಸರ್ಕಾರ ಉತ್ತರ ಭಾರತ, ದಕ್ಷಿಣ ಭಾರತದ ಎಂದು ಮಲತಾಯಿ ಧೋರಣೆ ಮಾಡುತ್ತಿದೆ. ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ಬರಬೇಕಿರುವ ತೆರಿಗೆ ಹಣ ನೀಡುತ್ತಿಲ್ಲ. ನರೇಂದ್ರ ಮೋದಿ ಅವರು ಸಾಮ್ರಾಟನ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಅವರು ಒಕ್ಕೂಟ ವ್ಯವಸ್ಥೆಯ ಭಾಗ ಎನ್ನುವುದು ಮರೆತಿದ್ದಾರೆ. ನಮ್ಮ ತೆರಿಗೆ ಪಾಲು ಕೊಡಿ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಪ್ರತಿಭಟನೆ ನಡೆಸಿದರು ಎನ್ನುವ ಕಾರಣಕ್ಕೆ ಅವರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆಗಳ ಬಳಕೆ ಮಾಡುತ್ತಿದೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

    ಪ್ರತಿಭಟನಾ ಸಭೆಯಲ್ಲಿ ಹಿರಿಯ ಕನ್ನಡ ಹೋರಾಟಗಾರ ಜಾಣಗೆರೆ ವೆಂಕಟರಾಮಯ್ಯ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ‌ ಮಾಜಿ ಅಧ್ಯಕ್ಷ ಪ್ರೊ. ಎಸ್‌.ಜಿ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ ಡಿ. ತಿಮ್ಮಯ್ಯ, ಖ್ಯಾತ ಸಾಹಿತಿ ಕಾಳೇಗೌಡ ನಾಗವಾರ, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಂಜಗೆರೆ ಜಯಪ್ರಕಾಶ್, ಪ್ರಗತಿಪರ ರೈತ ಆರ್‌.ಸ್ವಾಮಿ ಆನಂದ, ರೆಸ್ಪಾನ್ಸಿಬಲ್ ಸಿಟಿಝನ್ಸ್ ವಾಯ್ಸ್ ಫೋರಂ ಅಧ್ಯಕ್ಷ ಎಫ್.ಎಂ ಕಲೀಂ ಮತ್ತಿತರು ಭಾಗಿಯಾಗಿದ್ದರು‌.

  • ಮಾದಿಗ ಸಮುದಾಯಕ್ಕೆ ರಾಜಕೀಯ ಅವಕಾಶ ಕಲ್ಪಿಸಿ: ಡಾ.ಎಲ್.ಹನುಮಂತಯ್ಯ

    ಮಾದಿಗ ಸಮುದಾಯಕ್ಕೆ ರಾಜಕೀಯ ಅವಕಾಶ ಕಲ್ಪಿಸಿ: ಡಾ.ಎಲ್.ಹನುಮಂತಯ್ಯ

    ಬೆಂಗಳೂರು: ಬಿಬಿಎಂಪಿ ಸೇರಿ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಾದಿಗ ಸಮುದಾಯದ ಅಭ್ಯರ್ಥಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಅವಕಾಶ ಕಲ್ಪಿಸುವಂತೆ ಮತ್ತು ಟಿಕೆಟ್ ಪಡೆದವರಿಗೆ ಗೆಲ್ಲಿಸಲು ಎಲ್ಲರೂ ಶ್ರಮ ವಹಿಸಬೇಕು ಎಂದು ರಾಜ್ಯಸಭೆ ಸದಸ್ಯ ಎಲ್.ಹನುಮಂತಯ್ಯ ತಿಳಿಸಿದರು.

    ಜಾಂಬವ ಜಾಗೃತಿ ವೇದಿಕೆ ಆಯೋಜಿಸಿದ್ದ ‘ಮಾದಿಗ ಸಮುದಾಯದ ಮುಂದಿನ ರಾಜಕೀಯ ನಡೆ’ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಮುಂಬರುವ ಬಿಬಿಎಂಪಿ, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಸಮುದಾಯದವರು ಹೆಚ್ಚಾಗಿ ಸ್ಪರ್ಧಿಸಬೇಕು. ಅದಕ್ಕೆ ಅಗತ್ಯ ಇರುವ ಅವಕಾಶಗಳನ್ನು ಎಲ್ಲರೂ ಸೇರಿ ಕೊಡಿಸಬೇಕು. ಆಯಾ ಕ್ಷೇತ್ರದ ಶಾಸಕರು ಮತ್ತು ಎಲ್ಲಾ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ಪಡೆದು ಗೆಲ್ಲಿಸಲು ಮುಂದಾಗಬೇಕು ಎಂದು ಹೇಳಿದರು.

    ಮಾಜಿ ಸಚಿವರು, ವಿಧಾನ ಪರಿಷತ್ತಿನ ಸದಸ್ಯ ಆರ್.ಬಿ. ತಿಮ್ಮಾಪುರ, ರಾಜಕೀಯ ಅಧಿಕಾರ ಪಡೆದುಕೊಳ್ಳಲು ಎಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ ಅದಕ್ಕಾಗಿ ನಾವೆಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕು ಎಂದರು. ಇದನ್ನೂ ಓದಿ: ಡೆಲ್ಲಿ To ಲಂಡನ್ ಬಸ್ ಟೂರ್ – 70 ದಿನಗಳಲ್ಲಿ 18 ದೇಶ ಸುತ್ತುವ ಅವಕಾಶ

    ಹೆಚ್ಚು ಜನಸಂಖ್ಯೆಯಿರುವ ಸಮುದಾಯಗಳಲ್ಲಿ ಒಂದಾಗಿರುವ ಮಾದಿಗ ಸಮುದಾಯ ರಾಜಕೀಯ, ಶಿಕ್ಷಣ, ಉದ್ಯೋಗ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಅವಕಾಶ ವಂಚಿತವಾಗಿದೆ. ಅವಕಾಶ ನೀಡಿ ಸಮಾಜದ ಮುಖ್ಯವಾಹಿನಿಗೆ ತರಬೇಕಿದ್ದ ರಾಜಕೀಯ ಪಕ್ಷಗಳು ಅವಕಾಶ ನೀಡದೇ ವಂಚಿಸುತ್ತಲೇ ಬಂದಿವೆ. ಹಾಗಾಗಿ ಈ ಅನ್ಯಾಯದ ವಿರುದ್ಧ ಹೋರಾಡಲೇಬೇಕಾದ ಅನಿವಾರ್ಯ ಪರಿಸ್ಥಿತಿ ಬಂದೊದಗಿದೆ ಮುಂಬರುವ ಬಿಬಿಎಂಪಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಾದಿಗ ಸಮುದಾಯ ಅರ್ಹ ಹಾಗೂ ಸಮರ್ಥ ಅಭ್ಯರ್ಥಿಗಳಿಗೆ ರಾಜಕೀಯ ಪಕ್ಷಗಳು ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ಜಾಂಬವ ಜಾಗೃತಿ ವೇದಿಕೆಯು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

    ಇದೇ ವೇಳೆ ನೂತನ ವಿಧಾನ ಪರಿಷತ್ ಸದಸ್ಯ ಡಾ.ತಿಮ್ಮಯ್ಯ ರವರನ್ನು ಜಾಂಬವ ಜಾಗೃತಿ ವೇದಿಕೆಯ ಸದಸ್ಯರು ಸನ್ಮಾನಿಸಿ ಗೌರವಿಸಿದರು. ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತರಾಗಿರುವ ಬೆಂಗಳೂರು ಮಹಾನಗರ ವ್ಯಾಪ್ತಿಯ ಹೆಚ್ಚಿನ ಮುಖಂಡರು ಭಾಗವಹಿಸಿದ್ದರು.  ಇದನ್ನೂ ಓದಿ: 290 ಗ್ರಾಂ ತೂಕದ ಸ್ಟ್ರಾಬೆರಿ ಬೆಳೆದು ವಿಶ್ವ ದಾಖಲೆ

    ವಿಧಾನಪರಿಷತ್ತಿನ ಮಾಜಿ ಸದಸ್ಯ ಆರ್.ಧರ್ಮಸೇನಾ, ಅಸಂಘಟಿತ ಕಾರ್ಮಿಕರ ಅಧ್ಯಕ್ಷ ಜಿ.ಎಸ್. ಮಂಜುನಾಥ್, ಮಾಜಿ ಐಎಎಸ್ ಅಧಿಕಾರಿ ಬಲದೇವಕೃಷ್ಣ, ವೇದಿಕೆ ಅಧ್ಯಕ್ಷ ಎನ್.ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ಆರ್.ಅಶೋಕ್, ಕಾರ್ಯದರ್ಶಿ ರ. ನರಸಿಂಹಮೂರ್ತಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ತಂದೆ, ಚಿಕ್ಕಪ್ಪನೊಂದಿಗೆ ಅಖಿಲೇಶ್ ಯಾದವ್ ಭರ್ಜರಿ ಚುನಾವಣಾ ಪ್ರಚಾರ

  • ಕನ್ನಡ ಭಾಷೆಗೆ ಸ್ವಾಯತ್ತ ಸ್ಥಾನಮಾನ ನೀಡಬೇಕು: ರಾಜ್ಯಸಭಾ ಸಂಸದ ಡಾ.ಎಲ್ ಹನುಮಂತಯ್ಯ

    ಕನ್ನಡ ಭಾಷೆಗೆ ಸ್ವಾಯತ್ತ ಸ್ಥಾನಮಾನ ನೀಡಬೇಕು: ರಾಜ್ಯಸಭಾ ಸಂಸದ ಡಾ.ಎಲ್ ಹನುಮಂತಯ್ಯ

    ನವದೆಹಲಿ: ಶಾಸ್ತ್ರಿಯ ಸ್ಥಾನಮಾನ ಪಡೆದ ಕನ್ನಡ ಭಾಷೆಗೆ ಸ್ವಾಯತ್ತ ಸ್ಥಾನಮಾನವನ್ನು ನೀಡಬೇಕೆಂದು ರಾಜ್ಯಸಭಾ ಸದಸ್ಯರಾದ ಡಾ.ಎಲ್ ಹನುಮಂತಯ್ಯನವರು ರಾಜ್ಯಸಭೆಯಲ್ಲಿ ಇಂದು ಶೂನ್ಯ ವೇಳೆಯಲ್ಲಿ ಪ್ರಸ್ತಾಪ ಮಾಡಿದರು.

    2008 ರಲ್ಲಿಯೇ ಶಾಸ್ತ್ರೀಯ ಸ್ಥಾನಮಾನ ಪಡೆದಿರುವ ಕನ್ನಡ ಶಾಸ್ತ್ರೀಯ ಭಾಷಾ ಸಂಸ್ಥೆಗೆ ಸ್ವಾಯತ್ತ ಸ್ಥಾನಮಾನವನ್ನು ನೀಡಬೇಕೆಂದು ಕರ್ನಾಟಕ ಸರ್ಕಾರ ಸೇರಿದಂತೆ, ಕನ್ನಡ ಭಾಷಾ ಸಾಹಿತಿಗಳು ಮತ್ತು ಕನ್ನಡಪರ ಹೋರಾಟಗಾರರು ಅನೇಕ ವರ್ಷಗಳಿಂದ ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದಾರೆ.

    ಇತ್ತೀಚಿಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯವು ಮೈಸೂರಿನ ‘ಭಾರತೀಯ ಭಾಷಾ ಕೇಂದ್ರವನ್ನು’ ಹಾಗೂ “ಭಾರತೀಯ ಅನುವಾದ ಮತ್ತು ವ್ಯಾಖ್ಯಾನ ಸಂಸ್ಥೆಯನ್ನು” ಭಾರತೀಯ ಭಾಷಾ ವಿಶ್ವವಿದ್ಯಾಲಯವನ್ನಾಗಿ (ಬಿಬಿವಿ) ಪರಿವರ್ತಿಸಲು ಪ್ರಸ್ತಾಪ ನೀಡಿದೆ. ಕೇಂದ್ರ ಸರ್ಕಾರವು ಶಾಸ್ತ್ರೀಯ ಭಾಷಾ ಸ್ಥಾನಮಾನ ಪಡೆದಿರುವ ಶಾಸ್ತ್ರೀಯ ಭಾಷಾ ಸಂಸ್ಥೆಗಳನ್ನು ಭಾರತೀಯ ಭಾಷಾ ವಿಶ್ವವಿದ್ಯಾಲಯವನ್ನಾಗಿ (ಬಿಬಿವಿ) ಅಡಿಯಲ್ಲಿ ತರಲು ಎನ್ ಗೋಪಾಲಸ್ವಾಮಿ ಅವರ ಅಧ್ಯಕ್ಷೆಯಲ್ಲಿ ಸಮಿತಿ ರಚಿಸಿ ಕೆಲವು ನಿಯಮಗಳನ್ನು ನೀಡಿ ಸಲಹೆಗಳನ್ನು ಕೋರಿದೆ.

    ನಾವು ಬೇಡಿಕೆಯಿಟ್ಟಿದ್ದು ಶಾಸ್ತ್ರೀಯ ಸ್ಥಾನಮಾನ ಪಡೆದಿರುವ ಕನ್ನಡ ಶಾಸ್ತ್ರೀಯ ಭಾಷಾ ಸಂಸ್ಥೆಯು ಸ್ವಾಯತ್ತತೆ ಹಾಗೂ ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕೆಂದು. ಆದರೆ ಕೇಂದ್ರ ಸರ್ಕಾರ ಇಲ್ಲಿ ಎಲ್ಲಾ ಶಾಸ್ತ್ರೀಯ ಭಾಷಾ ಸ್ಥಾನಮಾನ ಪಡೆದ ಶಾಸ್ತ್ರೀಯ ಭಾಷಾ ಸಂಸ್ಥೆಗಳನ್ನು ಭಾರತೀಯ ಭಾಷಾ ವಿಶ್ವವಿದ್ಯಾಲಯದ ಅಧೀನದಲ್ಲಿ ತರಲು ಪ್ರಯತ್ನಿಸುತ್ತಿದೆ.

    ಇದು ಪ್ರತ್ಯೇಕ ಹಾಗು ಸ್ವಾಯತ್ತತೆ ಇಲ್ಲದ ಯಾವುದೇ ಶಾಸ್ತ್ರೀಯ ಭಾಷೆಯ ಸಂಸ್ಥೆಗಳ ಬೆಳವಣಿಗೆಗೆ ಹಾನಿಕಾರ. ನಾನು ಸೇರಿದಂತೆ ರಾಜ್ಯದ ನಿಯೋಗದೊಂದಿಗೆ ಕೇಂದ್ರ ಸರ್ಕಾರದ ಈ ಹಿಂದಿನ ಮಾನವ ಸಂಪನ್ಮೂಲ ಸಚಿವರುಗಳಾದ ಸ್ಮೃತಿ ಇರಾಣಿ, ಪ್ರಕಾಶ್ ಜಾವಡೇಕರ್ ಸೇರಿದಂತೆ ಪ್ರಸ್ತುತ ಮಾನವ ಸಂಪನ್ಮೂಲ ಸಚಿರಿಗೂ ಸಹ ಕನ್ನಡ ಭಾಷೆಗೆ ಸ್ವಾಯತ್ತ ಸ್ಥಾನಮಾನ ನೀಡುವುದರ ಬಗ್ಗೆ ಪ್ರಸ್ಥಾಪ ನೀಡಿದ್ದೇವೆ. ಮೂವರು ಸಚಿವರೂ ಕೂಡ ಈ ಪ್ರಸ್ಥಾಪನೆಯನ್ನು ಒಪ್ಪಿ ಕನ್ನಡಕ್ಕೆ ಸ್ವಾಯತ್ತತೆ ಸ್ಥಾನಮಾನವನ್ನು ಕೊಡುವುದರ ಬಗ್ಗೆ ಖಚಿತಪಡಿಸಿದ್ದರೂ. ಆದರೆ ಇಲ್ಲಿಯವರೆಗೂ ಸಹ ನೀಡಲಾಗಿಲ್ಲ.

    ಈ ಸ್ವಾಯತ್ತ ಸ್ಥಾನಮಾನ ನೀಡದ ಹೊರತಾಗಿ ಶಾಸ್ತ್ರೀಯ ಸ್ಥಾನಮಾನ ಪಡೆದಿರುವ ಭಾಷೆಗಳ ಕೆಲಸ ಪರಿಪೂರ್ಣಗೊಳ್ಳುವುದಿಲ್ಲ. ಅದಕ್ಕೆ ಉದಾಹರಣೆಯೆಂದರೆ ಕೇಂದ್ರ ಸರ್ಕಾರ ತಮಿಳು ಭಾಷೆಗೆ ಶಾಸ್ತ್ರೀಯ ಸ್ಥಾನಮಾನದ ಜೊತೆಗೆ ಸ್ಯಾಯತ್ತ ಸ್ಥಾನಮಾನವನ್ನು ಸಹ ನೀಡಿದ್ದರಿಂದ ಅಲ್ಲಿ ಅತ್ಯುತ್ತಮ ಕೆಲಸ ಮಾಡಲು ಸಾಧ್ಯವಾಗುತ್ತಿದೆ. ಆದರೆ ಉಳಿದ ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನವನ್ನು 2008 ರಲ್ಲಿಯೇ ನೀಡಿದ್ದರೂ ಸಹ ಸ್ವಾಯತ್ತತೆಯ ಸ್ಥಾನಮಾನವನ್ನು ಇನ್ನು ನೀಡಲಾಗಿಲ್ಲ. ಉಳಿದ ಭಾಷೆಗಳಿಗೆ ಇನ್ನು ಯಾಕೆ ಈ ಸ್ಥಾನಮಾನವನ್ನು ನೀಡಲಾಗುತ್ತಿಲ್ಲವೆಂದು ಸರ್ಕಾರ ಉತ್ತರಿಸಬೇಕಿದೆ ಮತ್ತು ಅದರ ಬಗ್ಗೆ ಸರ್ಕಾರ ಹೆಚ್ಚಿನ ಒಲವು ತೋರಿಸಿ ಒಂದು ನಿರ್ಧಾರಕ್ಕೆ ಬರಬೇಕೆಂದು ಕರ್ನಾಟಕದ ರಾಜ್ಯಸಭಾ ಸದಸ್ಯರಾದ ಎಲ್ ಹನುಮಂತಯ್ಯನವರು ರಾಜ್ಯಸಭಾ ಶ್ಯೂನ್ಯ ವೇಳೆಯಲ್ಲಿ ಸಭಾಪತಿಯವರಾದ ಎಂ. ವೆಂಕಯ್ಯನಾಯ್ಡು ರವರ ಬಳಿ ಮನವಿ ಮಾಡಿಕೊಂಡರು.

  • ಎತ್ತಿನಹೊಳೆ ಯೋಜನೆಯನ್ನ ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ – ಸಂಸದ ಎಲ್.ಹನುಮಂತಯ್ಯ ಮನವಿ

    ಎತ್ತಿನಹೊಳೆ ಯೋಜನೆಯನ್ನ ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ – ಸಂಸದ ಎಲ್.ಹನುಮಂತಯ್ಯ ಮನವಿ

    ನವದೆಹಲಿ: ರಾಜ್ಯದ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಪರಿಗಣಿಸಿ ಘೋಷಿಸಬೇಕು ಎಂದು ರಾಜ್ಯಸಭಾ ಸದಸ್ಯರಾದ ಡಾ.ಎಲ್.ಹನುಮಂತಯ್ಯ ರಾಜ್ಯಸಭೆಯಲ್ಲಿ ಆಗ್ರಹಿಸಿದ್ದಾರೆ.

    ಶೂನ್ಯ ವೇಳೆಯಲ್ಲಿ ವಿಷಯವನ್ನು ಪ್ರಸ್ತಾಪಿಸಿದ ಅವರು, ದೇಶದಲ್ಲಿ ಅತಿ ಹೆಚ್ಚು ಒಣ ಭೂಮಿ ಮತ್ತು ಕುಡಿಯುವ ನೀರಿಲ್ಲದೆ ಬಳಲುತ್ತಿರುವ 2ನೇ ಅತಿದೊಡ್ಡ ರಾಜ್ಯ ಕರ್ನಾಟಕವಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮೀಣ ಜಿಲ್ಲೆ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳು ಕುಡಿಯುವ ನೀರಿಲ್ಲದೆ ತೀವ್ರವಾಗಿ ಹೆಣಗಾಡುತ್ತಿದೆ. ಈ 6 ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು “ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ” ಎಂಬ ಯೋಜನೆಯನ್ನು ಕೈಗೆತ್ತಿಕೊಂಡಿದೆ.

    ಮಳೆಗಾಲದಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕು ಬಳಿ ಪಶ್ಚಿಮ ಹರಿಯುವ ತೊರೆಗಳ ಮೇಲ್ಭಾಗದಿಂದ 24 ಟಿಎಂಸಿ ನೀರನ್ನು ಬಳಸಿಕೊಳ್ಳಲು ಉದ್ದೇಶಿಸಲಾಗಿದೆ. ರಾಷ್ಟ್ರೀಯ ಜಲ ಅಭಿವೃದ್ಧಿ ಪ್ರಾಧಿಕಾರ (NWDA) ಪ್ರಸ್ತಾಪಿಸಿರುವ ನೇತ್ರಾವತಿ-ಹೇಮವತಿ ಲಿಂಕ್‍ಗಳಿಗೆ ಬದಲಾಗಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಯೋಜನೆಯನ್ನು ಪರಿಗಣಿಸಿ, ರಾಷ್ಟ್ರೀಯ ಯೋಜನೆ ಎಂದು ಕೇಂದ್ರ ಸರ್ಕಾರ ಘೋಷಿಸಬೇಕು ಎಂದರು.

    ಕುಡಿಯುವ ನೀರು ದೇಶದಲ್ಲಿ ಮೂಲಭೂತ ಹಕ್ಕಾಗಿರಬೇಕು. ಕರ್ನಾಟಕದಲ್ಲಿ ಅನೇಕ ಜಿಲ್ಲೆಗಳು ತೀವ್ರ ಬರವನ್ನು ಎದುರಿಸುತ್ತಿವೆ. 30 ಜಿಲ್ಲೆಗಳಲ್ಲಿ ಸುಮಾರು 15 ಜಿಲ್ಲೆಗಳು ಕುಡಿಯುವ ನೀರಿಗೆ ಸಂಬಂಧಿಸಿದಂತೆ ತೀವ್ರ ಬರವನ್ನು ಎದುರಿಸುತ್ತಿವೆ. ಈ 6 ಜಿಲ್ಲೆಗಳ ಸಾಮಾನ್ಯ ಜನರ ಹಿತದೃಷ್ಟಿಯಿಂದ ಭಾರತ ಸರ್ಕಾರವು ಈ ರಾಷ್ಟ್ರೀಯ ಯೋಜನೆಯನ್ನು ಶೀಘ್ರವೇ ಘೋಷಿಸಬೇಕು ಮತ್ತು ಯೋಜನೆಯನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.