Tag: ಎಸ್‌ಪಿಪಿ

  • ದರ್ಶನ್ ಕೇಸ್‌ನಲ್ಲಿ ಎಸ್‌ಪಿಪಿ ಬದಲಾವಣೆ ಪ್ರಸ್ತಾವನೆ ನನ್ನ ಮುಂದೆ ಬಂದಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

    ದರ್ಶನ್ ಕೇಸ್‌ನಲ್ಲಿ ಎಸ್‌ಪಿಪಿ ಬದಲಾವಣೆ ಪ್ರಸ್ತಾವನೆ ನನ್ನ ಮುಂದೆ ಬಂದಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

    ಬೆಂಗಳೂರು: ನಟ ದರ್ಶನ್ (Actor Darshan) ಕೊಲೆ ಕೇಸ್‌ನಲ್ಲಿ ಎಸ್‌ಪಿಪಿ (SPP) ಬದಲಾವಣೆ ಪ್ರಸ್ತಾಪ ನನ್ನ ಮುಂದೆ ಬಂದಿಲ್ಲ. ನನ್ನ ಮೇಲೆ ಯಾರೂ ಒತ್ತಡ ಹಾಕಿಲ್ಲ. ಒತ್ತಡ ಹಾಕಿದರೂ ಕೇಳಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಷ್ಟಪಡಿಸಿದ್ದಾರೆ.

    ದರ್ಶನ್ ಕೊಲೆ ಕೇಸ್‌ನಲ್ಲಿ ಎಸ್‌ಪಿಪಿ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಎಸ್‌ಪಿಪಿ ಬದಲಾವಣೆ ಆಗೋ ವಿಷಯ ನನಗೆ ಗೊತ್ತಿಲ್ಲ. ಆದರೆ ಮಾಧ್ಯಮಗಳಲ್ಲಿ ಸಿಎಂ ಮೇಲೆ ಒತ್ತಡ ಹಾಕಿದ್ದಾರೆ ಎಂದು ಬರುತ್ತಿದೆ. ನನ್ನ ಮೇಲೆ ಒತ್ತಡ ಹಾಕಿದ್ದಾರೆ ಎಂಬುದು ಸುಳ್ಳು. ನನ್ನ ಮೇಲೆ ಯಾರೂ ಒತ್ತಡ ಹಾಕಿಲ್ಲ. ಯಾವ ಮಂತ್ರಿಯೂ ಒತ್ತಡ ಹಾಕಿಲ್ಲ. ಯಾವ ಶಾಸಕರೂ ಒತ್ತಡ ಹಾಕಿಲ್ಲ. ಇವೆಲ್ಲಾ ಸತ್ಯಕ್ಕೆ ದೂರವಾದದ್ದು. ಎಸ್‌ಪಿಪಿ ಬದಲಾವಣೆ ಬಗ್ಗೆ ನನಗೇನು ಗೊತ್ತಿಲ್ಲ ಎಂದರು. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆಗೆ ಮೈಸೂರಿನ ಹೋಟೆಲ್‌ನಲ್ಲಿ ನಡೆದಿತ್ತಾ ಸ್ಕೆಚ್‌? – ಇಡೀ ಪ್ಲಾನ್ ಮಾಸ್ಟರ್ ಮೈಂಡ್‌ ಯಾರು?

    ಸಿದ್ದರಾಮಯ್ಯ ಮೇಲೆ ಒತ್ತಡ ಹೆಚ್ಚಾಗಿದೆ. ಹೀಗಾಗಿ ಎಸ್‌ಪಿಪಿ ಬದಲಾವಣೆ ಮಾಡುತ್ತಿದ್ದಾರೆ ಎಂಬ ವಿಪಕ್ಷಗಳ ಆರೋಪಕ್ಕೆ ತಿರುಗೇಟು ಕೊಟ್ಟ ಅವರು, ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ ಅನ್ನೋದು ಸುಳ್ಳು. ವಿಪಕ್ಷಗಳು ಹೇಳೋದೆಲ್ಲಾ ಸತ್ಯನಾ? ಯಾವ ಮಿನಿಸ್ಟರ್‌ಗಳು ಕೂಡಾ ದರ್ಶನ್ ವಿಷಯಕ್ಕೆ ನನ್ನನ್ನು ಭೇಟಿಯಾಗಿಲ್ಲ. ನನ್ನ ಮೇಲೆ ಯಾರೂ ಒತ್ತಡ ಹಾಕಿಲ್ಲ. ಒತ್ತಡ ಹಾಕಿದರೂ ನಾನು ಕೇಳಲ್ಲ. ಕಾನೂನು ಏನು ಇರುತ್ತದೆಯೋ ಅದೇ ನಾನು ಮಾಡೋದು ಹೇಳಿದರು. ಇದನ್ನೂ ಓದಿ: ಹತ್ಯೆಯಾದ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್‌ಗೆ ಕೆನಡಾ ಸಂಸತ್ತು ಮೌನಾಚರಿಸಿ ಗೌರವ – ಭಾರತ ಕೆಂಡಾಮಂಡಲ!

    ದರ್ಶನ್ ಕೇಸ್‌ನಲ್ಲಿ ಪೊಲೀಸರಿಗೆ ಎಲ್ಲಾ ಸ್ವಾತಂತ್ರ‍್ಯ ಕೊಟ್ಟಿದ್ದೇವೆ. ಅವರಿಗೆ ಕಾನೂನು ಪ್ರಕಾರ ಮಾಡಿ ಅಂತ ಹೇಳಿದ್ದೇವೆ. ಎಸ್‌ಪಿಪಿ ಬದಲಾವಣೆ ಮಾಡೋ ಪ್ರಸ್ತಾವನೆ ನನ್ನ ಮುಂದೆ ಇಲ್ಲ ಎಂದರು. ಇದನ್ನೂ ಓದಿ: ಐ ವಾಂಟ್ ಟು ಡೆವೆಲಪ್ ಚನ್ನಪಟ್ಟಣ: ಕ್ಷೇತ್ರದಿಂದ ಸ್ಪರ್ಧೆ ಬಗ್ಗೆ ಡಿಕೆಶಿ ಪರೋಕ್ಷ ಸುಳಿವು

  • ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎಸ್‌ಪಿಪಿ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಪರಮೇಶ್ವರ್

    ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎಸ್‌ಪಿಪಿ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಪರಮೇಶ್ವರ್

    ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಎಸ್‌ಪಿಪಿ (SPP) ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ. ಬದಲಾವಣೆ ಮಾಡೋದಾದ್ರೆ ಸರ್ಕಾರ ಮತ್ತು ಅಡ್ವೊಕೇಟ್ ಜನರಲ್, ಕಾನೂನು ತಜ್ಞರ ಸಲಹೆ ಪಡೆದು ಮುಂದುವರೆಯುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ಸ್ಪಷ್ಟಪಡಿಸಿದ್ದಾರೆ.

    ಈ ಕುರಿತು ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಈ ಪ್ರಕರಣದಲ್ಲಿ ಎಸ್‌ಪಿಪಿ ಬದಲಾವಣೆಗೆ ಒತ್ತಡ ಬರುತ್ತಿರುವ ವಿಚಾರ ನನಗೆ ಗೊತ್ತಿಲ್ಲ. ಯಾರೇ ಎಸ್‌ಪಿಪಿ ಆಗಿ ನೇಮಕಗೊಂಡರೂ ಸ್ಟ್ರಿಕ್ಟ್ ಆಗಿಯೇ ಇರಬೇಕು. ಕಾನೂನು ಪ್ರಕಾರವೇ ಕೆಲಸ ಮಾಡಬೇಕು. ಯಾರನ್ನೇ ನೇಮಕ ಮಾಡಿದರೂ ಎಲ್ಲರಿಗೂ ಒಂದೇ ಕಾನೂನು ಎಂದರು. ಇದನ್ನೂ ಓದಿ:‌ ಕೆಂಡದಂತ ಬಿಸಿಲು, ಬಿಸಿಗಾಳಿ ಹೊಡೆತಕ್ಕೆ ದೆಹಲಿಯಲ್ಲಿ 15 ಮಂದಿ ಸಾವು

    ಈ ಪ್ರಕರಣದಲ್ಲಿ ಎಸ್‌ಪಿಪಿ ಬದಲಾವಣೆ ಆಗುತ್ತಾರೆ ಎಂಬ ವಿಚಾರ ನನಗೆ ಗೊತ್ತಿಲ್ಲ. ಒಂದು ವೇಳೆ ಎಸ್‌ಪಿಪಿ ಬದಲಾವಣೆ ಮಾಡಿದರೂ ಕೂಡಾ ಅದರಲ್ಲಿ ತಪ್ಪೇನಿಲ್ಲ. ಆ ರೀತಿ ತೀರ್ಮಾನ ತೆಗೆದುಕೊಂಡರೆ ಏನಾದರೂ ಕಾರಣ ಇದ್ದೇ ಇರುತ್ತದೆ. ಆದರೆ ಈ ಕೇಸ್ ಸಡಿಲ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ. ಯಾವ ಮುಲಾಜೂ, ಒತ್ತಡ ಇಲ್ಲದೇ ಪ್ರಕರಣದ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದರು.  ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ದರ ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ: ಪರಮೇಶ್ವರ್‌

  • ಎಸ್‌ಪಿಪಿ ವಾದದಲ್ಲಿ ಸ್ಪಷ್ಟತೆಯಿರಲಿಲ್ಲ, ಎಲ್ಲ ಆರೋಪ ದರ್ಶನ್‌ ಮೇಲೆ ಹೊರಿಸಲು ಸಾಧ್ಯವಿಲ್ಲ: ದರ್ಶನ್‌ ಪರ ವಕೀಲ

    ಎಸ್‌ಪಿಪಿ ವಾದದಲ್ಲಿ ಸ್ಪಷ್ಟತೆಯಿರಲಿಲ್ಲ, ಎಲ್ಲ ಆರೋಪ ದರ್ಶನ್‌ ಮೇಲೆ ಹೊರಿಸಲು ಸಾಧ್ಯವಿಲ್ಲ: ದರ್ಶನ್‌ ಪರ ವಕೀಲ

    ಬೆಂಗಳೂರು: ಸರ್ಕಾರದ ವಿಶೇಷ ಅಭಿಯೋಜಕರ (SPP) ರಿಮ್ಯಾಂಡ್‌ ಅರ್ಜಿಯಲ್ಲಿ ಸ್ಪಷ್ಟತೆಯಿರಲಿಲ್ಲ. ಅಲ್ಲದೇ ಅಭಿಯೋಜಕರು ಮಂಡಿಸಿದ ವಾದದಲ್ಲಿ ಯಾವುದೂ ಎ2 ಆರೋಪಿಗೆ ಸಂಬಂಧಿಸಿದ್ದಲ್ಲ. ಹಾಗಾಗಿ ಎಲ್ಲ ಆರೋಪಗಳನ್ನು ದರ್ಶನ್‌ (Darshan) ಮೇಲೆ ಹೊರಿಸಲು ಸಾಧ್ಯವಿಲ್ಲ ಎಂದು ದರ್ಶನ್‌ ಪರ ವಕೀಲ ಅನಿಲ್‌ ಬಾಬು ತಿಳಿಸಿದರು.

    ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಎ2 ಆರೋಪಿ ದರ್ಶನ್‌ (Accused Darshan) ಪರ ವಕೀಲರು ʻಪಬ್ಲಿಕ್‌ ಟಿವಿʼ ಜೊತೆಗೆ ಮಾತನಾಡಿದರು. ಸರ್ಕಾರದ ವಿಶೇಷ ಅಭಿಯೋಜಕರ ರಿಮ್ಯಾಂಡ್‌ ಅರ್ಜಿಯಲ್ಲಿ ಸ್ಪಷ್ಟತೆಯಿರಲಿಲ್ಲ. ಅಲ್ಲದೇ ಅಭಿಯೋಜಕರು ಮಂಡಿಸಿದ ವಾದದಲ್ಲಿ ಯಾವುದೂ ಎ2 ಆರೋಪಿಗೆ ಸಂಬಂಧಿಸಿದ್ದಲ್ಲ. ಆದ ಕಾರಣ ಎಲ್ಲ ಆರೋಪಗಳನ್ನು ದರ್ಶನ್‌ ಅವರ ಮೇಲೆ ಹೊರಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ತಲಕಾವೇರಿ, ಭಾಗಮಂಡಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಂಸದ ಯದುವೀರ್

    ಆರೋಪಿಗಳ ಮೊಬೈಲ್‌ ಡೇಟಾಗಳನ್ನ ರಿಟ್ರೀವ್‌ (Mobile Data Retrieve) ಮಾಡಬೇಕು. ಮೃತದೇಹ ಪತ್ತೆಯಾದ ಸ್ಥಳದಲ್ಲಿದ್ದ ಆರೋಪಿಗಳ ಬಟ್ಟೆ, ಇತರ ವಸ್ತುಗಳನ್ನು ವಶಪಡಿಸಿಕೊಳ್ಳಬೇಕು. ಜೊತೆಗೆ ರೇಣುಕಾಸ್ವಾಮಿ ಹತ್ಯೆಗೆ ಎಲೆಕ್ಟ್ರಿಕ್‌ ಶಾಕಿಂಗ್‌ ಮಿಷಿನ್‌ ಬಳಸಿದ್ದಾರೆ. ಅದನ್ನು ವಶಪಡಿಸಿಕೊಳ್ಳಬೇಕು. ಜೊತೆಗೆ ಆರೋಪಿಗಳ ವಾಟ್ಸಪ್‌ ಚಾಟ್‌ ಡಿಟೇಲ್ಸ್‌ ರಿಟ್ರೀವ್‌ ಮಾಡಬೇಕು. ಅದಕ್ಕಾಗಿ ಆರೋಪಿಗಳು ಪಾಸ್‌ವರ್ಡ್‌ ನೀಡಬೇಕು ಎಂಬುದು ಅಭಿಯೋಜಕರ ಮುಖ್ಯವಾದವಾಗಿತ್ತು. ಅದಕ್ಕಾಗಿ 9 ದಿನಗಳ ಕಾಲ ವಿಚಾರಣೆಗೆ ಅವಕಾಶ ಮಾಡಿಕೊಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು ಎಂದು ವಿವರಿಸಿದರು. ಇದನ್ನೂ ಓದಿ: ನಟ ದರ್ಶನ್‌, ಪವಿತ್ರಾ ಗೌಡ ಸೇರಿ 12 ಆರೋಪಿಗಳು ಮತ್ತೆ 5 ದಿನ ಪೊಲೀಸ್‌ ಕಸ್ಟಡಿಗೆ

    ಅಲ್ಲದೇ ವಿಶೇಷ ಅಭಿಯೋಜಕರ ರಿಮ್ಯಾಂಡ್‌ ಅರ್ಜಿಯಲ್ಲಿ ಸ್ಪಷ್ಟತೆ ಇರಲಿಲ್ಲ. ಯಾವ ಆರೋಪಿಗಳಿಂದ ಏನು ವಸ್ತು? ವಾಟ್ಸಪ್‌ ಚಾಟ್‌? ಬಟ್ಟೆ ವಶಪಡಿಸಿಕೊಳ್ಳಬೇಕು? ಎಲೆಕ್ಟ್ರಿಕ್‌ ಮಿಷನ್‌ ಯಾರಿಂದ ವಶಕ್ಕೆ ಪಡೆಯಬೇಕು ಎನ್ನುವ ಬಗ್ಗೆ ಸ್ಪಷ್ಟತೆ ಇರಲಿಲ್ಲ. ಆದ್ದರಿಂದ ಅಭಿಯೋಜಕರ ವಾದಕ್ಕೆ ನಮ್ಮ ತಕರಾರು ಇತ್ತು. ಯಾವುದೇ ಆರೋಪಿಗಳಿಂದ ಬಲವಂತವಾಗಿ ಮೊಬೈಲ್‌ ಪಾಸ್‌ವರ್ಡ್‌ಗಳನ್ನು ಪಡೆದು ಡೇಟಾ ರಿಟ್ರೀವ್‌ ಮಾಡೋದಕ್ಕೆ ಅವಕಾಶ ಇಲ್ಲ. ಅದಕ್ಕೆ ಸಂಬಂಧಿಸಿದಂತೆ ಈ ಹಿಂದೆ ಕೋರ್ಟ್‌ ನೀಡಿದ್ದ ಆದೇಶಗಳನ್ನು ಉಲ್ಲೇಖಿಸಿ ತಕರಾರು ಮಂಡಿಸಿದೆವು. ನಮ್ಮ ವಾದವನ್ನು ನ್ಯಾಯಾಲಯ ಮಾನ್ಯಮಾಡಿತು. ಹಾಗಾಗಿ 9 ದಿನಗಳ ಬದಲಿಗೆ 5 ದಿನ ಮಾತ್ರ ವಿಚಾರಣೆಗೆ ಅವಕಾಶ ಮಾಡಿಕೊಟ್ಟಿತು ಎಂದು ತಿಳಿಸಿದರು.

    ಇನ್ನೂ ಎ6 ಆರೋಪಿ ಜಗ್ಗ, ಎ7 ಆರೋಪಿ ಅನುಕುಮಾರ್‌ ಪರ ವಕೀಲ ಹೆಚ್‌.ಬಿ ಶಿವರಾಜು ಮಾತನಾಡಿ, ಆರೋಪಿಯ ತಂದೆ ಅಂತ್ಯಕ್ರಿಯೆಗೆ ಕೋರ್ಟ್‌ ಅನುಮತಿ ನೀಡಿದೆ. ಈ ಪ್ರಕರಣದಲ್ಲಿ ಆರೋಪಿಗಳ ಪಾತ್ರ ಏನೂ ಇಲ್ಲ ಅನ್ನೋದು ಮೇಲ್ನೋಟಕ್ಕೆ ಕಂಡುಬಂದಿದೆ. ಅಲ್ಲದೇ ಕಸ್ಟಡಿಯಲ್ಲಿರುವಾಗ ಅವರ ಭೇಟಿಗೆ ಕೋರ್ಟ್‌ ಅವಕಾಶ ಮಾಡಿಕೊಟ್ಟಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಬಿಜೆಪಿಗೆ ಮತ ಹಾಕಿದ್ದಕ್ಕೆ‌ ಕಾಂಗ್ರೆಸ್‌ ಸರ್ಕಾರ ಸೇಡು ತೀರಿಸಿಕೊಳ್ತಿದೆ – ಅಶೋಕ್‌

  • ದರ್ಶನ್‌ ಗ್ಯಾಂಗ್‌ನಿಂದ ಹತ್ಯೆ ಕೇಸ್;‌ ಸರ್ಕಾರದ ಎಸ್‌ಪಿಪಿಯಾಗಿ ಪ್ರಸನ್ನಕುಮಾರ್‌ ನೇಮಕ

    ದರ್ಶನ್‌ ಗ್ಯಾಂಗ್‌ನಿಂದ ಹತ್ಯೆ ಕೇಸ್;‌ ಸರ್ಕಾರದ ಎಸ್‌ಪಿಪಿಯಾಗಿ ಪ್ರಸನ್ನಕುಮಾರ್‌ ನೇಮಕ

    ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದರ್ಶನ್‌ (Actor Darshan) ಗ್ಯಾಂಗ್‌ನಿಂದ ಹತ್ಯೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy) ಪ್ರಕರಣವನ್ನು ನಡೆಸಲು ಸರ್ಕಾರದ ವಿಶೇಷ ಅಭಿಯೋಜಕರಾಗಿ (SPP) ಹಿರಿಯ ವಕೀಲ ಪ್ರಸನ್ನಕುಮಾರ್‌ ಅವರನ್ನು ನೇಮಿಸಲಾಗಿದೆ.

    ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ಪ್ರಕರಣದಲ್ಲಿ ಸಂಬಂಧಪಟ್ಟ ವಿಚಾರಣಾ ಮತ್ತು ಜಿಲ್ಲಾ ಸತ್ರ ನ್ಯಾಯಾಲಯಗಳಲ್ಲಿ ಹಾಜರಾಗಲು ಹಾಗೂ ಪ್ರಕರಣವನ್ನು ನಡೆಸಲು ವಿಶೇಷ ಸರ್ಕಾರಿ ಅಭಿಯೋಜಕರಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದನ್ನೂ ಓದಿ: ದರ್ಶನ್‌ಗೆ ಹೆಣ್ಣು-ಹೆಂಡದ ನಶೆ ಹೆಚ್ಚಾಗಿತ್ತು, ಸಂಸ್ಕಾರ ಇರಲಿಲ್ಲ: ಮೊದಲ ಗುರು ಅಡ್ಡಂಡ ಕಾರ್ಯಪ್ಪ

    ಜೂ.9 ರಂದು ರೇಣುಕಾಸ್ವಾಮಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಹಾಗೂ ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳನ್ನು ಬಂಧಿಸಲಾಗಿದೆ. ಎಲ್ಲರನ್ನೂ ಇಂದು ಕೋರ್ಟ್‌ಗೆ ಹಾಜರುಪಡಿಸಲಾಗುತ್ತಿದೆ.

    ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಎಂದು ರೇಣುಕಾಸ್ವಾಮಿಯನ್ನು ಶೆಡ್‌ವೊಂದಕ್ಕೆ ಕರೆತಂದು ಹಲ್ಲೆ ನಡೆಸಲಾಗಿತ್ತು. ಗಂಭೀರ ಹಲ್ಲೆಯಿಂದ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದ. ಪ್ರಕರಣ ಮುಚ್ಚಿಹಾಕಲು ಪ್ರಯತ್ನ ನಡೆದಿತ್ತು. ಮೃತದೇಹ ವಿಲೇವಾರಿ ಮಾಡಲು ಮತ್ತು ದರ್ಶನ್‌ ಹೆಸರು ಬಾಯಿಬಿಡದಿರಲು ಕೆಲವರಿಗೆ 30 ಲಕ್ಷ ರೂ. ಹಣ ನೀಡಲಾಗಿತ್ತು. ಪ್ರಕರಣ ಭೇದಿಸಿದ ಪೊಲೀಸರು ದರ್ಶನ್‌ ಸೇರಿದಂತೆ 17 ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ರೀಲ್ ಗಜನ ಪಳಗಿಸಿದ ರಿಯಲ್ ಸಲಗ | ಆಪರೇಷನ್‌ ’36’ ಸೂಪರ್ ಕಾಪ್ಸ್ – ಸೂಪರ್ ಸ್ಟೋರಿ ಓದಿ