Tag: ಎಸ್ ಟಿ ಸೋಮಶೇಖರ್

  • ಸ್ಪೇನ್‍ನಲ್ಲಿ ನಡೆಯುವ ಅಂತಾರಾಷ್ಟ್ರೀಯ ಕೃಷಿ ವಸ್ತುಪ್ರದರ್ಶನ ಮೇಳಕ್ಕೆ ಎಸ್.ಟಿ.ಸೋಮಶೇಖರ್ ಪ್ರವಾಸ

    ಸ್ಪೇನ್‍ನಲ್ಲಿ ನಡೆಯುವ ಅಂತಾರಾಷ್ಟ್ರೀಯ ಕೃಷಿ ವಸ್ತುಪ್ರದರ್ಶನ ಮೇಳಕ್ಕೆ ಎಸ್.ಟಿ.ಸೋಮಶೇಖರ್ ಪ್ರವಾಸ

    ಬೆಂಗಳೂರು: ಸ್ಪೇನ್‍ನ ಫೆರಿಯಾ ಡೆ ಝರಗೋಜದಲ್ಲಿ ನಡೆಯುವ 42ನೇ ದ್ವೈ ವಾರ್ಷಿಕ “ಫಿಮಾ ಅಗ್ರಿಕೋಲ-2022” ಕೃಷಿ ವಸ್ತು ಪ್ರದರ್ಶನ ಮೇಳಕ್ಕೆ ಕರ್ನಾಟಕ ಸರ್ಕಾರದ ಪ್ರತಿನಿಧಿಯಾಗಿ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಅವರು ಸೋಮವಾರ ಸಂಜೆ ಪ್ರಯಾಣ ಬೆಳೆಸಿದರು.

    ಕೃಷಿ ಉತ್ಪನ್ನ ಹಾಗೂ ಕೃಷಿ ಯಂತ್ರೋಪಕರಣಗಳ ಈ ವಸ್ತು ಪ್ರದರ್ಶನ 2022ರ ಏಪ್ರಿಲ್ 26 ರಿಂದ 30ರ ವರೆಗೆ ನಡೆಯಲಿದೆ. ಸುಮಾರು 80 ದೇಶಗಳಿಂದ 1600 ಕ್ಕೂ ಹೆಚ್ಚು ಪ್ರದರ್ಶಕರು, 2.30 ಲಕ್ಷಕ್ಕೂ ಹೆಚ್ಚು ವೀಕ್ಷಕರು ಭಾಗವಹಿಸುತ್ತಾರೆ ಎಂದು ಸಂಘಟಕರು ತಿಳಿಸಿದ್ದಾರೆ.

    ಕೃಷಿ ಪವರ್ ಯೂನಿಟ್‍ಗಳು, ಬಿತ್ತನೆ ಯಂತ್ರೋಪಕರಣಗಳು, ನಾಟಿ-ಕಟಾವು ತಂತ್ರಜ್ಞಾನ, ನೀರಾವರಿ ವ್ಯವಸ್ಥೆ, ಹಸಿರುಮನೆ, ಗಾರ್ಡನ್ ಉಪಕರಣಗಳು, ಲಾಜಿಸ್ಟಿಕ್ ಸರ್ವೀಸ್ ಇನ್ನೂ ಅನೇಕ ಕೃಷಿ ಸಂಬಂಧಿತ ವಿಷಯಗಳು ಈ ವಸ್ತು ಪ್ರದರ್ಶನದಲ್ಲಿ ಇವೆ.

    ಕೃಷಿ ಉತ್ಪನ್ನ ಹೆಚ್ಚಳ ಹಾಗೂ ಪರಿಸರ ಸಂರಕ್ಷಣೆಗೆ ವಿನೂತನ ಪರಿಹಾರಗಳನ್ನೂ ಈ ಪ್ರದರ್ಶನದಲ್ಲಿ ಪ್ರಸ್ತುತ ಪಡಿಸಲಾಗುತ್ತದೆ. ಇದನ್ನೂ ಓದಿ: ಮುಗಿಯದ ವಿಚಾರಣೆ – BBMP ಚುನಾವಣೆ ಮತ್ತಷ್ಟು ವಿಳಂಬ

  • ಯಶವಂತಪುರ ಕ್ಷೇತ್ರದ ಮಹಿಳೆಯರಿಂದ ಚಾಮುಂಡಿ ಬೆಟ್ಟದಲ್ಲಿ ದೇವಿ ಪಾರಾಯಣ

    ಯಶವಂತಪುರ ಕ್ಷೇತ್ರದ ಮಹಿಳೆಯರಿಂದ ಚಾಮುಂಡಿ ಬೆಟ್ಟದಲ್ಲಿ ದೇವಿ ಪಾರಾಯಣ

    ಮೈಸೂರು: ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಅವರ ಉಪಸ್ಥಿತಿಯಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರದ ಶ್ರೀ ಚಾಮುಂಡೇಶ್ವರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಟ್ರಸ್ಟ್‌ನ ಶ್ರೀದೇವಿ ಬಳಗದ ಮಹಿಳೆಯರು ಮೈಸೂರಿನ ಶ್ರೀಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಶ್ರೀದೇವಿ ಪಾರಾಯಣ ಮಾಡಿದರು.

    ಕಳೆದ ಮೂರು ತಿಂಗಳಿಂದ ನಮ್ಮ ತಂಡ ಸೌಂದರ್ಯ ಲಹರಿ ಸಂಗೀತಾಭ್ಯಾಸ ಮಾಡಿದೆ. ಅಂತಿಮವಾಗಿ ತಾಯಿ ಶ್ರೀಚಾಮುಂಡೇಶ್ವರಿ ಸನ್ನಿಧಿಯಲ್ಲಿ ಪಾರಾಯಣ ಮಾಡಲು ನಮ್ಮ ಶಾಸಕರು ಹಾಗೂ ಸಹಕಾರ ಸಚಿವರು ಅವಕಾಶ ಮಾಡಿಸಿಕೊಟ್ಟರು ಎಂದು ಮಹಿಳೆಯರು ಖುಷಿಪಟ್ಟರು. ಇದನ್ನೂ ಓದಿ: ಮಾವಿನಹಣ್ಣಿನ ಮಾರ್ಕೆಟ್ ನಮ್ಮದಾಗಬೇಕು – ಹಾಸನದಲ್ಲಿ ಹೊಸ ಅಭಿಯಾನ

    ಮುಡಾ ಅಧ್ಯಕ್ಷರಾದ ಹೆಚ್.ವಿ.ರಾಜೀವ್, ದೇವಸ್ಥಾನದ ಪ್ರಧಾನ ಅರ್ಚಕರಾದ ಡಾ. ಶಶಿಶೇಖರ್ ದೀಕ್ಷಿತ್, ಶ್ರೀಚಾಮುಂಡೇಶ್ವರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಟ್ರಸ್ಟ್‌ನ ಯಶಸ್ವಿನಿ ಮತ್ತು ತಂಡದವರು ಉಪಸ್ಥಿತರಿದ್ದರು.  ಇದನ್ನೂ ಓದಿ: ಮಂಡ್ಯ ವಿದ್ಯಾರ್ಥಿನಿಗೆ ನಗದು ಬಹುಮಾನ – ಹಲಾಲ್ ವಿರುದ್ಧ ಅಭಿಯಾನ: ಎರಡಕ್ಕೂ ನಂಟೇನು?

  • ದಿ ಕಾಶ್ಮೀರ್ ಫೈಲ್ಸ್ : ಪರಿಷತ್ ನಲ್ಲಿ ಗದ್ದಲ

    ದಿ ಕಾಶ್ಮೀರ್ ಫೈಲ್ಸ್ : ಪರಿಷತ್ ನಲ್ಲಿ ಗದ್ದಲ

    ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ವೀಕ್ಷಣೆಗೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಕಟಣೆ ಹೊರಡಿಸುತ್ತಿದ್ದಂತೆಯೇ ಕಾಂಗ್ರೆಸ್ ಸದಸ್ಯರು ಗದ್ದಲ ಮಾಡಿದ ಪ್ರಸಂಗ ಇಂದು ಪರಿಷತ್ ನಲ್ಲಿ ನಡೆಯಿತು. ಸೋಮವಾರ ವಿಧಾನಸಭೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು ಚಿತ್ರ ವೀಕ್ಷಿಸಲು ಸಚಿವರಿಗೆ ಮತ್ತು ಶಾಸಕರಿಗೆ ವ್ಯವಸ್ಥೆ ಮಾಡಿದ್ದೇವೆ. ಎಲ್ಲರೂ ಮಂತ್ರಿ ಮಾಲ್ ಥಿಯೇಟರ್ ಗೆ ಸಿನಿಮಾ ವೀಕ್ಷಿಸಲು ಬರಬೇಕೆಂದು ಆಹ್ವಾನ ನೀಡಿದ್ದರು. ಇದರ ಬೆನ್ನಲ್ಲೇ ಇಂದು ವಿಧಾನ ಪರಿಷತ್ ನಲ್ಲಿ ಬಸವರಾಜ ಹೊರಟ್ಟಿ ಕೂಡ ಪ್ರಕಟಣೆ ಹೊರಡಿಸಿದರು. ಅದಕ್ಕೆ ಪ್ರತಿಪಕ್ಷಗಳಿಂದ ವಿರೋಧ ವ್ಯಕ್ತವಾಯಿತು. ಸಿನಿಮಾ ವೀಕ್ಷಣೆಯ ವಿಚಾರವನ್ನು ಕೂಡಲೇ ಹಿಂಪಡೆಯಬೇಕೆಂದು ಕಾಂಗ್ರಸ್ ಪಟ್ಟು ಹಿಡಿಯಿತು.

    ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಮಾತನಾಡಿ, “ದಿ ಕಾಶ್ಮೀರ್ ಫೈಲ್ಸ್ ಒಂದೇ ಸಿನಿಮಾ ಏಕೆ, ಫರ್ಜಾನಾ ಮತ್ತು ವಾಟರ್ ಸಿನಿಮಾವನ್ನು ತೋರಿಸಿ’ ಎಂದರು. ಮಾತನ್ನು ಮುಂದುವರೆಸಿದ ಹರಿಪ್ರಸಾದ್ “ಕೆಲವರು ಸದನದಲ್ಲಿ ಅಶ್ಲೀಲ ಚಿತ್ರ ನೋಡಿದ್ದಾರೆ. ನಾವು ಯಾವ ಸಿನಿಮಾ ನೋಡಬೇಕು ಅಂತ ಸದನದಲ್ಲಿ ಹೇಳುವ ಹಾಗಿಲ್ಲ. ಸರಕಾರ ಇರುವುದು ಸಿನಿಮಾ ತೋರಿಸುವುದಕ್ಕೆ ಅಲ್ಲ’ ಎಂದು ನುಡಿದರು. ಇದನ್ನೂ ಓದಿ: ಕಾಶ್ಮೀರದಲ್ಲಿದ್ದ ನನ್ನ ಪೂರ್ವಜರು ನೋವು ತಿಂದೆ ಕಾಶ್ಮೀರ ಬಿಟ್ಟರು : ಅನಂತ್ ನಾಗ್ ಬಿಚ್ಚಿಟ್ಟ ಕಾಶ್ಮೀರಿ ಕ್ರೌರ್ಯ

    ಇನ್ನೋರ್ವ ಸದಸ್ಯರಾದ ಸಲೀಂ ಅಹಮದ್ ಕೂಡ ಮಾತನಾಡಿ ‘ಬಜೆಟ್ ಚರ್ಚೆ ಬಿಟ್ಟು ಸಿನಿಮಾ ಯಾಕೆ ನೋಡಬೇಕು’ ಎಂದು ಪ್ರಶ್ನಿಸಿದರು. ಕೊನೆಗೆ ಸಚಿವ ಸೋಮಶೇಖರ್ ಮಾತನಾಡಿ, ‘ಯಾರಿಗೂ ಕಡ್ಡಾಯ ಇಲ್ಲ, ಇಷ್ಟ ಇದ್ರೆ ನೋಡಿ’ ಎಂದು ಪ್ರತಿಭಟಿಸಿದ ಸದಸ್ಯರಿಗೆ ಉತ್ತರ ನೀಡಿದರು. ಈ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಸಿನಿಮಾ ವಿಚಾರಕ್ಕೆ ಗದ್ದಲ ಶುರುವಾಯಿತು. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ : ಅಂಥದ್ದೇನಿದೆ ಸಿನಿಮಾದಲ್ಲಿ? ದಳ್ಳುರಿಯಲ್ಲಿ ದಹನದ ಕಥನ!

    ಈ ಸಮಯದಲ್ಲಿ ಪರಿಷತ್ ನ ಕೆಲವು ಸದಸ್ಯರು ‘ಬಾಬೂ ಭಜರಂಗಿ’, ‘ಗುಜರಾತ್ ಫೈಲೂ’ ಮತ್ತಿತರ ಸಿನಿಮಾ ತೋರಿಸಿ ಎಂದು ಮತ್ತಷ್ಟು ಗದ್ದಲ ಹೆಚ್ಚಿಸಿದರು.

  • ಕೊರೊನಾದಿಂದ ಮೃತಪಟ್ಟ ರೈತರ ಸಾಲಮನ್ನಾ ಅಸಾಧ್ಯ: ಎಸ್.ಟಿ. ಸೋಮಶೇಖರ್

    ಕೊರೊನಾದಿಂದ ಮೃತಪಟ್ಟ ರೈತರ ಸಾಲಮನ್ನಾ ಅಸಾಧ್ಯ: ಎಸ್.ಟಿ. ಸೋಮಶೇಖರ್

    ಬೆಂಗಳೂರು: ಕೊರೊನಾದಿಂದ ಮೃತರಾದ ರೈತರ ಸಾಲಮನ್ನಾ ಮಾಡಲು ಆದೇಶ ಹೊರಡಿಸಲು ಸಾಧ್ಯವಿಲ್ಲ ಎಂದು ಸಹಕಾರ ಸಚಿವ ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಮುನಿರಾಜುಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಸಾಲಮನ್ನಾ ಸಾಧ್ಯವಿಲ್ಲ ಎಂದಿದ್ದಾರೆ.

    ಕೋವಿಡ್‍ನಿಂದ ಮೃತರಾದ ರೈತರ ಸಾಲಮನ್ನಾ ಮಾಡಬೇಕು. ಈಗಾಗಲೇ ರೈತರ ಮನೆಯಲ್ಲಿ ದೀಪ ಹಾರಿ ಹೋಗಿದೆ. ಹೀಗಾಗಿ ಸರ್ಕಾರ ಕೊರೊನಾದಿಂದ ಮೃತರಾದ ರೈತರ ಸಾಲಮನ್ನಾ ಮಾಡಬೇಕು ಅಂತ ಒತ್ತಾಯ ಬಿಜೆಪಿ ಸದಸ್ಯ ಮುನಿರಾಜುಗೌಡ ಒತ್ತಾಯ ಮಾಡಿದರು. ಇದಕ್ಕೆ ಉತ್ತರ ನೀಡಿದ ಸಚಿವ ಸೋಮಶೇಖರ್, ರಾಜ್ಯದಲ್ಲಿ 1-2 ಕೊರೊನಾ ಅಲೆಯಲ್ಲಿ ಮೃತಪಟ್ಟ ರೈತರ ಪೈಕಿ 10,437 ರೈತರಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮತ್ತು ಗ್ರಾಮೀಣಾಭಿವೃದ್ಧಿ ಗಳಲ್ಲಿ ಸಾಲ ಪಡೆದಿರುತ್ತಾರೆ. ಮೃತರಾದ ರೈತರ ಸಾಲದ ಮೊತ್ತ 91.97 ಕೋಟಿ ಇದೆ ಅಂತ ಮಾಹಿತಿ ನೀಡಿದರು. ಇದನ್ನೂ ಓದಿ: ನಾನು ಅಡಗಿಕೊಂಡಿಲ್ಲ, ಯಾರಿಗೂ ಹೆದರುವುದಿಲ್ಲ, ನಮ್ಮ ದೇಶಭಕ್ತಿ ಗೆಲ್ಲುತ್ತೆ: ಝೆಲೆನ್ಸ್ಕಿ

    ಕೊರೊನಾದಿಂದ ಮೃತರಾದ ರೈತರು ಸಹಕಾರ ಸಂಘಗಳಲ್ಲಿ ಪಡೆದಿದ್ದ ಸಾಲಮನ್ನಾ ಮಾಡುವ ಆದೇಶ ಇಲಾಖೆ ಹೊರಡಿಸಿಲ್ಲ. ಕೊರೊನಾದಿಂದ ಮೃತಪಟ್ಟ ರೈತರು ಸೇರಿದಂತೆ ಎಲ್ಲಾ ಕುಟುಂಬಕ್ಕೆ 1.5 ಲಕ್ಷ ಆರ್ಥಿಕ ಸಹಾಯ ಸರ್ಕಾರದಿಂದ ಮಾಡಲಾಗಿದೆ. ರೈತರು ಸಾಲ ಮರುಪಾವತಿ ಮಾಡಲು ಕಂತು ಅವಧಿ ವಿಸ್ತರಣೆ ಮಾಡಲಾಗಿದೆ. ಬಡ್ಡಿ ಸಹಾಯಧನವನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ. ಈ ಯೋಜನೆಯು ಕೊರೊನಾದಿಂದ ಮೃತಪಟ್ಟ ರೈತರ ವಾರಸುದಾರರಿಗೂ ಅನ್ವಯ ಆಗುತ್ತದೆ ಎಂದು ತಿಳಿಸಿದರು. ಇದಲ್ಲದೇ ಲಾಭದಲ್ಲಿರುವ ಡಿಸಿಸಿ ಬ್ಯಾಂಕ್‍ಗಳು ತಮ್ಮಲ್ಲಿರುವ ಹಣವನ್ನು ಮೃತ ರೈತ ಸಾಲಮನ್ನಾಗೆ ಬಳಕೆ ಮಾಡಲು ಓರಲ್ ಆಗಿ ಅನುಮತಿ ನೀಡಲಾಗಿದೆ ಎಂದರು. ಇದನ್ನೂ ಓದಿ: ವಸತಿ ಕಟ್ಟಡಗಳ ಮೇಲೆ ಎಕ್ಸ್ ಗುರುತಿನ ಚಿಹ್ನೆ- ಕಟ್ಟಡ ತೊರೆಯುವಂತೆ ಅಧಿಕಾರಿಗಳ ಸೂಚನೆ

  • ಮೃತ ಸಮನ್ವಿ ಮನೆಗೆ ಎಸ್.ಟಿ ಸೋಮಶೇಖರ್ ಭೇಟಿ, ಸಾಂತ್ವನ

    ಮೃತ ಸಮನ್ವಿ ಮನೆಗೆ ಎಸ್.ಟಿ ಸೋಮಶೇಖರ್ ಭೇಟಿ, ಸಾಂತ್ವನ

    ಬೆಂಗಳೂರು: ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾದ ನನ್ನಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋ ಖ್ಯಾತಿಯ ಸಮನ್ವಿ ಮನೆಗೆ ಇಂದು ಸಚಿವ ಎಸ್.ಟಿ ಸೋಮಶೇಖರ್ ಭೇಟಿ ನೀಡಿದ್ದಾರೆ.

    ಗುಬ್ಬಲಾಳದಲ್ಲಿರುವ ಸಮನ್ವಿ ನಿವಾಸಕ್ಕೆ ಭೇಟಿ ನೀಡಿದ ಸಚಿವರು ಕುಟುಂಬದವರಿಗೆ ಧೈರ್ಯ ತುಂಬಿದ್ದಾರೆ. ಸಮನ್ವಿ ತಂದೆ ರೂಪೇಶ್ ಹಾಗೂ ತಾಯಿ ಅಮೃತ ನಾಯ್ಡು ಅವರಿಗೆ ಸಾಂತ್ವನ ಹೇಳಿದ್ದಾರೆ. ಇದನ್ನೂ ಓದಿ: ಸಮನ್ವಿ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಡಿಕೆಶಿ

    ಸಮನ್ವಿ ಬಾಲ ಕಲಾವಿದೆಯಾಗಿ ಜನರ ಮನಗೆದ್ದಿದ್ದಳು. ರಿಯಾಲಿಟಿ ಶೋ ಮೂಲಕ ಮನೆಮಾತಾಗಿದ್ದ ಸಮನ್ವಿ ಚಿಕ್ಕ ವಯಸ್ಸಿನಲ್ಲೇ ಅಪಾರ ಅಭಿಮಾನಿಗಳನ್ನು ಹೊಂದಿದ್ದಳು. ಆಕೆಯ ಸಾವು ನಿಜಕ್ಕೂ ದುರದೃಷ್ಟಕರ. ಅವರ ಕುಟುಂಬವರ್ಗದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಭೇಟಿ ಬಳಿಕ ಎಸ್‍ಟಿಎಸ್ ತಿಳಿಸಿದ್ದಾರೆ. ಇದನ್ನೂ ಓದಿ: ಕಣ್ಣೀರು ತರಿಸುವಂತಿದೆ ಸಮನ್ವಿ ತಾಯಿ ಅಮೃತಾ ನಾಯ್ಡು ಮನವಿ

    ಈ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕೂಡ ಸಮನ್ವಿ ಮನೆಗೆ ಭೇಟಿ ನೀಡಿ ಆಕೆಯ ಪೋಷಕರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದರು. ಕಳೆದ ಗುರುವಾರ ಅಮೃತಾ ನಾಯ್ಡು ಅವರು ರಾಜಾಜಿನಗರದಲ್ಲಿರುವ ತಮ್ಮ ತವರುನ ಮನೆಗೆ ಸ್ಕೂಟಿಯಲ್ಲಿ ಹೊರಟಿದ್ದರು. ಮೆಟ್ರೋ ಸ್ಟೇಷನ್ ವರೆಗೆ ಗಾಡಿಯಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸಮನ್ವಿ ಸ್ಥಳದಲ್ಲಿಯೇ ಮೃತಪಟ್ಟಿದ್ದರೆ 4 ತಿಂಗಳ ಗರ್ಭಿಣಿ ಅಮೃತಾ ಅವರು ಭಾರೀ ಅವಘಡದಿಂದ ಬಚಾವ್ ಆಗಿದ್ದರು. ಇದನ್ನೂ ಓದಿ: ಮುದ್ದಿನ ಮಗಳು ಸಮನ್ವಿಯ ಲಾಸ್ಟ್ ಕಿಸ್ ಹಂಚಿಕೊಂಡ ನಟಿ ಅಮೃತಾ

  • ಜ್ವರ, ಕೆಮ್ಮಿನಿಂದ ಬಳಲುತ್ತಿದ್ದಾರೆ ಎಸ್.ಟಿ. ಸೋಮಶೇಖರ್

    ಜ್ವರ, ಕೆಮ್ಮಿನಿಂದ ಬಳಲುತ್ತಿದ್ದಾರೆ ಎಸ್.ಟಿ. ಸೋಮಶೇಖರ್

    ಬೆಂಗಳೂರು: ಬಿಜೆಪಿ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಅವರು ಜ್ವರ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದಾರೆ.

    ಕಳೆದ ಮೂರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಎಸ್.ಟಿ. ಸೋಮಶೇಖರ್ ಅವರು ಸದಾಶಿವನಗರದಲ್ಲಿರುವ ತಮ್ಮ ಸರ್ಕಾರಿ ನಿವಾಸ, ಬಿಟಿಎಂ ಲೇಔಟ್‍ನಲ್ಲಿರುವ ಸ್ವಂತ ನಿವಾಸಗಳಿಗೆ ಬರದೇ ಅಜ್ಞಾತ ಸ್ಥಳದಲ್ಲಿದ್ದಾರೆ. ಪುತ್ರ ನಿಶಾಂತ್ ಬ್ಲಾಕ್ ಮೇಲ್ ಪ್ರಕರಣ ಬಯಲಾದಾಗಿನಿಂದಲೂ ಸೋಮಶೇಖರ್ ಅವರು ಹೊರಗೆ ಬಂದಿಲ್ಲ. ಅಲ್ಲದೇ ತಮ್ಮನ್ನು ಭೇಟಿಯಾಗಲು ಬರುವವರಿಗೆ ಭೇಟಿ ಮಾಡಲ್ಲ ಎಂದು ಹೇಳುತ್ತಿದ್ದಾರೆ ಹಾಗೂ ಎಲ್ಲರ ಜೊತೆಯೂ ಮೊಬೈಲ್ ಫೋನಿನಲ್ಲಿಯೇ ಸಂಪರ್ಕದಲ್ಲಿರುವ ಸೋಮಶೇಖರ್ ಅವರು ಇನ್ನೂ ಒಂದೆರಡು ದಿನ ಯಾರನ್ನೂ ಭೇಟಿ ಮಾಡದಿರಲು ನಿರ್ಧಾರಿಸಿದ್ದಾರೆ. ಇದನ್ನೂ ಓದಿ: ಸಿಎಂ ಬಸವರಾಜ ಬೊಮ್ಮಾಯಿ ಪುತ್ರನಿಗೂ ಕೋವಿಡ್

    ಸೋಮವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ಬೆನ್ನೆಲೆ ಇಂದು ಅವರ ಪುತ್ರ ಭರತ್ ಬೊಮ್ಮಾಯಿ ಅವರಿಗೂ ಕೋವಿಡ್-19 ದೃಢಪಟ್ಟಿದೆ. ಸದ್ಯ ಈ ಕುರಿತಂತೆ ಭರತ್ ಟ್ವೀಟ್ ಮಾಡಿದ್ದು, ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕೇವಲ ಸೂಕ್ಷ್ಮ ಲಕ್ಷಣಗಳನ್ನು ಹೊಂದಿದ್ದೇನೆ. ಇದೀಗ ಮನೆಯಲ್ಲಿಯೇ ಐಸೋಲೇಷನಲ್ಲಿದ್ದೇನೆ. ನನ್ನೊಂದಿಗೆ ಸಂಪರ್ಕದಲ್ಲಿದ್ದವರು ದಯವಿಟ್ಟು ಕೊರೊನಾ ಪರೀಕ್ಷೆಗೆ ಒಳಗಾಗಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಚಿವರ ಪುತ್ರನಿಗೆ ಬ್ಲ್ಯಾಕ್ ಮೇಲ್ ಮಾಡಿದ್ದ ಆರೋಪಿ ಅಂದರ್

    ಇತ್ತೀಚೆಗಷ್ಟೇ ಎಸ್.ಟಿ.ಸೋಮಶೇಖರ್ ಪುತ್ರ ನಿಶಾಂತ್ ಅವರಿಗೆ ನಕಲಿ ಅಶ್ಲೀಲ ವೀಡಿಯೋ ಕಳುಹಿಸಿ ಕಿಡಿಗೇಡಿಗಳು ಬ್ಲಾಕ್ ಮೇಲ್ ಮಾಡುತ್ತಿದ್ದರು. ಈ ಕುರಿತಂತೆ ನಿಶಾಂತ್ ಅವರು ಪೊಲೀಸ್ ಠಾಣಾ ಮೆಟ್ಟಿಲೇರಿದ್ದರು. ಸದ್ಯ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಉಳಿದವರ ವಿಚಾರಣೆ ನಡೆಸುತ್ತಿದ್ದಾರೆ.

  • ಎಸ್‍ಟಿಎಸ್ ಪುತ್ರನಿಗೆ ಬ್ಲ್ಯಾಕ್ ಮೇಲ್ – ಮಗಳ ಪಾತ್ರ ಇಲ್ಲ ಎಂದ ಶಾಸಕ ಯಶವಂತರಾಯಗೌಡ ಪಾಟೀಲ್

    ಎಸ್‍ಟಿಎಸ್ ಪುತ್ರನಿಗೆ ಬ್ಲ್ಯಾಕ್ ಮೇಲ್ – ಮಗಳ ಪಾತ್ರ ಇಲ್ಲ ಎಂದ ಶಾಸಕ ಯಶವಂತರಾಯಗೌಡ ಪಾಟೀಲ್

    ಬೆಂಗಳೂರು: ಸಹಕಾರ ಸಚಿವ ಎಸ್‍.ಟಿ.ಸೋಮಶೇಖರ್ ಪುತ್ರನಿಗೆ ಬ್ಲ್ಯಾಕ್‍ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಮಗಳ ಪಾತ್ರ ಏನು ಇಲ್ಲ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಹೇಳಿದ್ದಾರೆ.

    ಸೋಮಶೇಖರ್ ಪುತ್ರ ನಿಶಾಂತ್‍ಗೆ ನಕಲಿ ವೀಡಿಯೋ ಸೃಷ್ಟಿಸಿ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದ ಪ್ರಕರಣ ಕುರಿತಂತೆ ಯಶವಂತರಾಯಗೌಡ ಪಾಟೀಲ್ ಅವರು ಇಂದು ಬೆಳಗ್ಗೆ ಶಾಸಕರ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದರು. ಈ ವೇಳೆ ರಾಜಕಾರಣ ಮಾಡುವವರು ನೇರವಾಗಿ ನನ್ನ ವಿರುದ್ಧ ರಾಜಕಾರಣ ಮಾಡಲಿ. ಮನೆಯವರು, ಮಕ್ಕಳನ್ನು ಇದರಲ್ಲಿ ಯಾಕೆ ತರುತ್ತಾರೆ ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಬೆಂಗಳೂರಲ್ಲಿ ಸೋಂಕಿಗೆ ತುತ್ತಾದವರಲ್ಲಿ ಯುವಕರದ್ದೇ ಸಿಂಹ ಪಾಲು!

    ಸುದ್ದಿಗೋಷ್ಠಿಯಲ್ಲಿ ಹೇಳಿದ್ದು ಏನು?
    ನನ್ನ ಸುಪುತ್ರಿ ಮೇಲೆ ಆಪಾದನೆಯೊಂದು ಬಂದಿದೆ. ನನ್ನ ಮಗಳು ಇಂಗ್ಲೆಂಡ್‍ಗೆ ಎಂಎಸ್ ಕಲಿಯಲು ಹೋಗಿದ್ದಾರೆ. ಡಿಸೆಂಬರ್ 25ಕ್ಕೆ ಆಕೆ ತನ್ನ ಸ್ನೇಹಿತ ರಾಕೇಶ್ ಅಣ್ಣಪ್ಪಗೆ ಒಂದು ಬಿಸಿನೆಸ್ ಕಾಂಟ್ಯಾಕ್ಟ್‍ಗೆ ಒಂದು ಒಟಿಪಿ ಕೊಟ್ಟಿದಾಳೆ. ಈ ಪ್ರಕರಣ ಕುರಿತಂತೆ ಸಿಸಿಬಿ ಅವರು ರಾಕೇಶ್ ವಿಚಾರಣೆ ನಡೆಸಿದಾಗ, ರಾಕೇಶ್ ಬೆಂಗಳೂರಿನಲ್ಲಿರುವ ರಾಹುಲ್ ಭಟ್‍ಗೆ ಸಿಮ್ ಒಟಿಪಿ ಕೊಟ್ಟಿರುವುದಾಗಿ ತಿಳಿಸಿದ್ದಾನೆ. ಇದನ್ನೂ ಓದಿ: S.T. ಸೋಮಶೇಖರ್ ಪುತ್ರನಿಗೆ ನಕಲಿ ಅಶ್ಲೀಲ ವೀಡಿಯೋ ಬ್ಲ್ಯಾಕ್‍ಮೇಲ್

    ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ನಾನೂ ಉತ್ತಮ ಸ್ನೇಹಿತರು. ನಾವಿಬ್ಬರೂ ಸಿಎಂರನ್ನು ಭೇಟಿ ಮಾಡಿ ಸೂಕ್ತ ತನಿಖೆ ನಡೆಸುವಂತೆ ಮನವಿ ಮಾಡಿದ್ದೇವೆ. ಏನೋ ತಪ್ಪಾಗಿ ಹೀಗೆಲ್ಲಾ ಆಗಿದೆ. ಪ್ರಕರಣದ ಹಿಂದೆ ಇರುವವರನ್ನು ಬಯಲಿಗೆಳೆಯಲಿ. ನನ್ನ ಮಗಳ ಹೆಸರು ಯಾಕೆ ತಂದಿದ್ದಾರೆ ಅಂತ ಗೊತ್ತಿಲ್ಲ. ನನ್ನ ಮಗಳು ಸಹ ಇದೇ 7 ರಂದು ಬಂದಿದ್ದಾಳೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು.

    ರಾಜಕಾರಣ ಮಾಡುವವರು ನೇರವಾಗಿ ನನ್ನ ವಿರುದ್ಧ ರಾಜಕಾರಣ ಮಾಡಲಿ. ಮನೆಯವರು, ಮಕ್ಕಳನ್ನು ಇದರಲ್ಲಿ ಯಾಕೆ ತರುತ್ತಾರೆ? ನಿಶಾಂತ್ ಮತ್ತು ನನ್ನ ಮಗಳು ಕ್ಲಾಸ್ ಮೇಟ್ಸ್ ಅಲ್ಲ. ಇಬ್ಬರಿಗೂ ಕನೆಕ್ಷನ್ ಇಲ್ಲ. ರಾಕೇಶ್ ಅಪ್ಪಣ್ಣನವರ್ ನನ್ನ ಮಗಳಿಗೆ ಪರಿಚಯ. ಆತನಿಗೆ ಸಿಮ್ ಕೊಟ್ಟಿದ್ದೇ ಇಷ್ಟೆಲ್ಲಾ ರಾದ್ಧಾಂತಕ್ಕೆ ಕಾರಣವಾಗಿದೆ. ಸಿಮ್ ದುರ್ಬಳಕೆ ಆಗುತ್ತದೆ ಅಂತ ಗೊತ್ತಿರಲಿಲ್ಲ. ಇದನ್ನೂ ಓದಿ: ಸಚಿವರ ಪುತ್ರನಿಗೆ ಬ್ಲ್ಯಾಕ್ ಮೇಲ್ ಮಾಡಿದ್ದ ಆರೋಪಿ ಅಂದರ್

    ಸಿಮ್ ನನ್ನ ಮಗಳ ಬಳಿಯೇ ಇದೆ. ಒಟಿಪಿ ಮಾತ್ರ ರಾಕೇಶ್‍ಗೆ ನನ್ನ ಮಗಳು ಕೊಟ್ಟಿದಾಳೆ. ಒಟಿಪಿಯನ್ನು ವಾಟ್ಸಪ್‍ಗೆ ಬಳಸಿದ್ದಾರೋ ಇಲ್ಲವೋ ಅಂತ ಗೊತ್ತಿಲ್ಲ. ನನ್ನ ಮಗಳು ಸಣ್ಣವಳು, ಒಟಿಪಿ ಶೇರ್ ಬಗ್ಗೆ ಏನ್ ಗೊತ್ತಾಗುತ್ತದೆ. ನನ್ನ ಮಗಳ ಜೊತೆ ಈಗಾಗಲೇ ಪೊಲೀಸರು ಫೋನಿನಲ್ಲಿ ಮಾತನಾಡಿದ್ದಾರೆ. ಈಗ ಆಕೆಯೇ ಯುಕೆಯಿಂದ ಬಂದಿದ್ದಾಳೆ. ಪೊಲೀಸರು ಆಕೆಯನ್ನೂ ಸಹ ವಿಚಾರಣೆ ನಡೆಸಲಿ. ಇದರಲ್ಲಿ ನನ್ನ ಮಗಳ ಪಾತ್ರ ಏನು ಇಲ್ಲ. ಸದ್ಯ ಪ್ರಕರಣ ಕುರಿತಂತೆ ತನಿಖೆ ನಡೆಯುತ್ತಿದೆ. ನನಗೆ ಯಾರ ಮೇಲೂ ಅನುಮಾನ ಇಲ್ಲ. ಆದರೆ ತನಿಖೆಯ ನಂತರ ಸತ್ಯ ಹೊರಬೀಳಲಿದೆ.

  • ಸಚಿವರ ಪುತ್ರನಿಗೆ ಬ್ಲ್ಯಾಕ್ ಮೇಲ್ ಮಾಡಿದ್ದ ಆರೋಪಿ ಅಂದರ್

    ಸಚಿವರ ಪುತ್ರನಿಗೆ ಬ್ಲ್ಯಾಕ್ ಮೇಲ್ ಮಾಡಿದ್ದ ಆರೋಪಿ ಅಂದರ್

    ಬೆಂಗಳೂರು: ಸಚಿವ ಎಸ್.ಟಿ ಸೋಮಶೇಖರ್ ಪುತ್ರ ನಿಶಾಂತ್ ಅವರಿಗೆ ನಕಲಿ ಅಶ್ಲೀಲ ವೀಡಿಯೋ ಬಿಡುಗಡೆಗೊಳಿಸುವುದಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಎಸ್.ಟಿ. ಸೋಮಶೇಖರ್ ಪುತ್ರ ನಿಶಾಂತ್ ಅವರಿಗೆ ಮಹಿಳೆಯೊಂದಿಗಿರುವ ವೀಡಿಯೋವನ್ನು ಸೋಶಿಯಲ್ ಮೀಡಿಯದಲ್ಲಿ ಹರಿಬಿಡುವುದಾಗಿ ಬೆದರಿಕೆಯೊಡ್ಡಿದ್ದ ಪ್ರಕರಣದಲ್ಲಿ ಖ್ಯಾತ ಜ್ಯೋತಿಷಿಯ ಪುತ್ರ ರಾಹುಲ್ ಭಟ್ (22) ನನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಅಲ್ಲದೆ ಕೋರ್ಟ್ ಮುಂದೆ ಹಾಜರುಪಡಿಸಿ, ಇದೀಗ ಹೆಚ್ಚಿನ ತನಿಖೆಗಾಗಿ 5 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ.

    ಈ ಪ್ರಕರಣ ಹಿಂದೆ ಕಾಂಗ್ರೆಸ್ ಶಾಸಕರ ಪುತ್ರಿಯ ಹೆಸರು ಪ್ರಸ್ತಾಪವಾಗುತ್ತಿದ್ದು, ಇನ್ನೂ ನಾಲ್ಕು ಮಂದಿ ಇದ್ದಾರೆ ಎಂದು ಹೇಳಲಾಗುತ್ತಿದೆ. ಶಾಸಕರ ಪುತ್ರಿ ವಿದ್ಯಾಭ್ಯಾಸಕ್ಕಾಗಿ ಲಂಡನ್‍ಗೆ ಹೋಗಿದ್ದು, ಯುಕೆ ಮೂಲದ ಇಂಟರ್ನೆಟ್ ನಂಬರ್ ಬಳಸಿ ವೀಡಿಯೋ ಕಳುಹಿಸಲಾಗಿದೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಮತ್ತು ಈ ಪ್ರಕರಣ ಸಂಬಂಧ ಮತ್ತು ಆರ್‍ಟಿ ನಗರದಲ್ಲಿ ನೆಲೆಸಿರುವ ಮತ್ತೋರ್ವ ಅಸ್ಟ್ರಾಲಜಿಸ್ಟ್ ಪುತ್ರನನ್ನು ಸಹ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಆರೋಪಿಗಳಿಗೂ ನಿಶಾಂತ್‍ಗೂ ಈ ಹಿಂದೆಯೇ ಪರಿಚಯವಿದ್ದು, ಸಾಕಷ್ಟು ವರ್ಷಗಳಿಂದ ರಾಹುಲ್ ಭಟ್, ಶಾಸಕರ ಪುತ್ರಿ ಮತ್ತು ನಿಶಾಂತ್ ಜೊತೆಯಲ್ಲಿಯೇ ಇದ್ದರು. ಶಾಸಕರ ಮಗಳಿಗೂ ನಿಶಾಂತ್ ಇಬ್ಬರು ಆಪ್ತ ಸ್ನೇಹಿತರಾಗಿದ್ದು, ಈ ಮಧ್ಯೆ ನಿಶಾಂತ್ ಬೇರೊಬ್ಬರ ಜೊತೆ ಓಡಾಟ ಶುರು ಮಾಡಿದ್ದರು. ಇದನ್ನು ಸಹಿಸಲಾಗದೇ ಎಸ್.ಟಿ ಸೋಮಶೇಖರ್ ಅವರ ಮಾಜಿ ಗನ್ ಮ್ಯಾನ್ ಬಳಸಿಕೊಂಡು ಈ ಕೃತ್ಯವೆಸಲಾಗಿದೆ ಎನ್ನಲಾಗುತ್ತಿದೆ.

    ಸದ್ಯ ಈ ಪ್ರಕರಣ ಸಂಬಂಧ ಶಾಸಕರ ಪುತ್ರಿಯ ವಿಚಾರಣೆ ನಡೆಸಲು ಪೊಲೀಸರು ಹುಡುಕಾಟ ನಡೆಸುತ್ತಿದ್ದು, ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.

  • S.T. ಸೋಮಶೇಖರ್ ಪುತ್ರನಿಗೆ ನಕಲಿ ಅಶ್ಲೀಲ ವೀಡಿಯೋ ಬ್ಲ್ಯಾಕ್‍ಮೇಲ್

    S.T. ಸೋಮಶೇಖರ್ ಪುತ್ರನಿಗೆ ನಕಲಿ ಅಶ್ಲೀಲ ವೀಡಿಯೋ ಬ್ಲ್ಯಾಕ್‍ಮೇಲ್

    ಬೆಂಗಳೂರು: ಬಿಜೆಪಿ ಸಚಿವ ಎಸ್.ಟಿ.ಸೋಮಶೇಖರ್ ಪುತ್ರನಿಗೆ ನಕಲಿ ಅಶ್ಲೀಲ ವೀಡಿಯೋ ಕಳುಹಿಸಿ ಅಪರಿಚಿತರು ಬ್ಲಾಕ್ ಮೇಲ್ ಮಾಡಿದ್ದಾರೆ.

    ಎಸ್.ಟಿ.ಸೋಮಶೇಖರ್ ಪುತ್ರ ನಿಶಾಂತ್‍ಗೆ ನಕಲಿ ವೀಡಿಯೋ ಸೃಷ್ಟಿಸಿ ಹಣಕ್ಕೆ ಅಪರಿಚಿತರು ಬ್ಲಾಕ್ ಮೇಲ್ ಮಾಡುತ್ತಿದ್ದರು. ಈ ಹಿನ್ನೆಲೆ ಆಡುಗೋಡಿಯಲ್ಲಿರುವ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ನಿಶಾಂತ್ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ವಾಮಾಚಾರ ನಡೆಸಿ ಮನೆಯ ಬೆಡ್ ರೂಂನ ಮಣ್ಣಿನಡಿಯಲ್ಲಿ ನಿಧಿಗಾಗಿ ಶೋಧ – ಇಬ್ಬರ ಬಂಧ

    ನಾನು ರಾಜಕೀಯವಾಗಿ ಬಿಜೆಪಿ ಪಕ್ಷದಿಂದ ಗುರುತಿಸಿಕೊಂಡಿದ್ದೇನೆ. ನನ್ನ ಮತ್ತು ನನ್ನ ತಂದೆ ರಾಜಕೀಯ ಬೆಳವಣಿಗೆ ಸಹಿಸದ ಕೆಲವು ದುಷ್ಕರ್ಮಿಗಳು ರಾಜಕೀಯವಾಗಿ ನಮ್ಮನ್ನು ಮುಗಿಸಬೇಕೆಂಬ ದುರುದ್ದೇಶದಿಂದ ಈ ಕೃತ್ಯವೆಸಗಿದ್ದಾರೆ. ಯಾರೋ ಮಹಿಳೆಯ ಜೊತೆಯಲ್ಲಿರುವಂತೆ ಆಶ್ಲೀಲವಾದ ನಕಲಿ ವೀಡಿಯೋ ಸೃಷ್ಟಿಸಿ ನನ್ನನ್ನು ನೇರವಾಗಿ ಟಾರ್ಗೆಟ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.  ಇದನ್ನೂ ಓದಿ: ಬಿಜೆಪಿ, ಕಾಂಗ್ರೆಸ್, ಹೆಣ್ಣು-ಗಂಡೆಂಬ ಭೇದ ಕೊರೊನಾಗೆ ಇಲ್ಲ: ಆನಂದ್ ಸಿಂಗ್

    ವೀಡಿಯೋ ಮತ್ತು ಫೋಟೋಸ್‍ಗಳನ್ನು ನನ್ನ ತಂದೆಯ ಪಿಎ ಶೀನಿವಾಸಗೌಡ ಮತ್ತು ಭಾನುಪ್ರಕಾಶ್ ಅವರಿಗೆ ಕಳುಹಿಸಿದ್ದಾರೆ. ವಾಟ್ಸಾಪ್ ಮೂಲಕ ಪದೇ, ಪದೇ ಮೇಸೆಜ್‍ಗಳನ್ನು ಕಳುಹಿಸಿ ತಾವು ಕೇಳಿದಷ್ಟು ಹಣವನ್ನು ಕೊಡಬೇಕೆಂದು ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಹಣವನ್ನು ನೀಡದಿದ್ದಲ್ಲಿ ಅಶ್ಲೀಲ ವೀಡಿಯೋ ಹಾಗೂ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿದುಬಿಡುವುದಾಗಿ ಬೆದರಿಕೆಯೊಡ್ಡಿದ್ದಾರೆ.

    ನನ್ನ ಹಾಗೂ ನಮ್ಮ ತಂದೆಯ ರಾಜಕೀಯ ಭವಿಷ್ಯವನ್ನು ಮುಗಿಸುವುದಾಗಿಯೂ ಸಹ ಬೆದರಿಕೆ ಹಾಕಿದ್ದು, ಈ ಸಂಚಿನ ಹಿಂದೆ ತುಂಬಾ ಪ್ರಭಾವಶಾಲಿ ವ್ಯಕ್ತಿಗಳು ಭಾಗಿಯಾಗಿರುವ ಸಾಧ್ಯತೆ ಇದೆ. ಕೆಲ ದುಷ್ಕರ್ಮಿಗಳು, ನಮಗೆ ತೊಂದರೆ ನೀಡಬೇಕೆಂಬ ದುರುದ್ದೇಶದಿಂದ ಈ ರೀತಿ ಸಂಚು ರೂಪಿಸಿದ್ದಾರೆ. ಆ ಆಸಾಮಿಗಳ ಪತ್ತೆ ಮಾಡಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕೆಂದು ಮನವಿಮಾಡಿದ್ದಾರೆ.

  • ಕಾಂಗ್ರೆಸ್‍ನವರೇ ಮೇಕೆದಾಟು ಯೋಜನೆಯ ಪಾದಯಾತ್ರೆಯನ್ನು ಕೈಬಿಡಿ: ಎಸ್.ಟಿ ಸೋಮಶೇಖರ್

    ಕಾಂಗ್ರೆಸ್‍ನವರೇ ಮೇಕೆದಾಟು ಯೋಜನೆಯ ಪಾದಯಾತ್ರೆಯನ್ನು ಕೈಬಿಡಿ: ಎಸ್.ಟಿ ಸೋಮಶೇಖರ್

    ಮೈಸೂರು: ಕಾಂಗ್ರೆಸ್‍ನವರು ಮೇಕೆದಾಟು ಯೋಜನೆಯ ಪಾದಯಾತ್ರೆಯನ್ನು ಕೈಬಿಡಬೇಕು ಎಂದು ಸಹಕಾರ ರಾಜ್ಯ ಸಚಿವ ಎಸ್.ಟಿ ಸೋಮಶೇಖರ್ ಮನವಿ ಮಾಡಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನರ ಆರೋಗ್ಯದ ಹಿತ ದೃಷ್ಟಿಯಿಂದ ಕಾಂಗ್ರೆಸ್‍ನವರು ಪಾದಯಾತ್ರೆ ಕೈ ಬಿಡಬೇಕು. ಕೊರೊನಾ, ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿವೆ. ಬೇರೆ ರಾಜ್ಯಗಳಲ್ಲಿ ವಿದೇಶಗಳಲ್ಲಿ ಪ್ರಕರಣ ಹೆಚ್ಚಾಗುತ್ತಿದೆ. ಎರಡನೇ ಅಲೆಯಲ್ಲಿ ಸಾಕಷ್ಟು ಅನಾಹುತವಾಗಿದೆ. ಅದು ಮೂರನೇ ಅಲೆಯಲ್ಲಿ ಆಗಬಾರದು. ಕಾಂಗ್ರೆಸ್ ನಾಯಕರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

    ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‍ಗೆ ಮಾಡಲು ಬೇರೆ ಏನು ಕೆಲಸ ಇಲ್ಲ. ಪಾದಯಾತ್ರೆ ಒಂದು ಚುನಾವಣಾ ಗಿಮಿಕ್ ಅಷ್ಟೇ. ಇಷ್ಟು ವರ್ಷ ಅವರು ಏನೂ ಮಾಡಲಿಲ್ಲ. ಸಮ್ಮಿಶ್ರ ಸರ್ಕಾರ ಇದ್ದಾಗಲೂ ಅವರು ಈ ಯೋಜನೆ ಬಗ್ಗೆ ಏನೂ ಮಾತನಾಡಲಿಲ್ಲ. ಈಗ ರಾಜಕೀಯ ಕಾರಣಕ್ಕೆ ಪಾದಯಾತ್ರೆ ಗಿಮಿಕ್ ಮಾಡುತ್ತಿದ್ದಾರೆ. ಇದು ಜನರಿಗೆ ಅರ್ಥವಾಗುತ್ತದೆ ಎಂದು ವ್ಯಂಗ್ಯವಾಡಿದರು.

    ರಾಜ್ಯದಲ್ಲಿ ಲಾಕ್‍ಡೌನ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಹಾಗೂ ತಜ್ಞರ ಸಲಹೆ ಮೇರೆಗೆ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಅವರು ಕಠಿಣ ಕ್ರಮ ಸೇರಿ ಏನೇ ಸಲಹೆ ಕೊಟ್ಟರೂ ಪಾಲಿಸುತ್ತೇವೆ. ಸದ್ಯಕ್ಕೆ ಬೇರೆ ರಾಜ್ಯದಷ್ಟು ನಮ್ಮಲ್ಲಿ ಸಮಸ್ಯೆಯಾಗಿಲ್ಲ. ಜನರು ಈ ಬಗ್ಗೆ ಸಹಕಾರ ನೀಡುತ್ತಿದ್ದಾರೆ. ಎರಡು ದಿನಕ್ಕೊಮ್ಮೆ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ತಜ್ಞರ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಎರಡನೇ ಅಲೆಯಿಂದ ಆದ ಅನಾಹುತದಿಂದ ಜನರು ಎಚ್ಚೆತ್ತುಕೊಂಡಿದ್ದಾರೆ ಎಂದರು.