Tag: ಎಸ್‍ಎಸ್‍ಎಲ್‍ಸಿ ಪರೀಕ್ಷೆ

  • Karnataka | ಈ ವರ್ಷದಿಂದ 33% ಅಂಕ ಪಡೆದರೆ SSLC ಪಾಸ್

    Karnataka | ಈ ವರ್ಷದಿಂದ 33% ಅಂಕ ಪಡೆದರೆ SSLC ಪಾಸ್

    ಬೆಂಗಳೂರು: ಇನ್ಮುಂದೆ ಎಸ್‌ಎಸ್‌ಎಲ್‌ಸಿಯಲ್ಲಿ (SSLC) 33% ಅಂಕ ಪಡೆದರೆ ಉತ್ತೀರ್ಣ (Pass) ಎಂದು ಘೋಷಿಸಲಾಗುವುದು. ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

    ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಸಕ್ತ ವರ್ಷದಿಂದ 33% ಅಂಕ ಪಡೆದರೆ ಎಸ್‌ಎಸ್‌ಎಲ್‌ಸಿ ಪಾಸ್‌ ಎಂದು ಘೋಷಿಸಲಾಗುವುದು. ಅಲ್ಲಿಗೆ 625ಕ್ಕೆ 206 ಅಂಕ ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣ ಆಗಲಿದ್ದಾರೆ. ಆಂತರಿಕ ಅಂಕ, ಬಾಹ್ಯ ಅಂಕ ಎರಡು ಸೇರಿ 33% ಪಡೆಯಬೇಕಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು. ಇದನ್ನೂ ಓದಿ: ಬೆಂಗಳೂರು ನಿವಾಸಿಗಳಿಗೆ ದೀಪಾವಳಿಗೂ ಮೊದಲೇ ಗಿಫ್ಟ್‌; ಬಿ-ಖಾತಾ ಪರಿವರ್ತನೆಗೆ ಹೊಸ ಪೋರ್ಟಲ್‌

    ಸಾಂದರ್ಭಿಕ ಚಿತ್ರ

    ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ 3 ಪರೀಕ್ಷೆ ವ್ಯವಸ್ಥೆ ಜಾರಿ ಮಾಡಿದ್ದೇವೆ. ಪಾರದರ್ಶಕವಾಗಿ ಇರಲಿ ಅಂತ ವೆಬ್ ಕ್ಯಾಸ್ಟ್ ಮಾಡಿದ್ವಿ. ಪರೀಕ್ಷೆಗಳು ಉತ್ತಮವಾಗಿ ನಡೆದವು. ವೆಬ್ ಕ್ಯಾಸ್ಟಿಂಗ್ ನಿಂದ ಕಡಿಮೆ ಅಂಕ ಬಂದಾಗ ಶಿಕ್ಷಕರು ಜವಾಬ್ದಾರಿ ತಗೊಂಡು ಕೆಲಸ ಮಾಡಿದ್ರು. ವಿಶೇಷ ತರಗತಿ ಪಡೆದು ವಿದ್ಯಾರ್ಥಿಗಳನ್ನ ತಯಾರು ಮಾಡಿದ್ರು. ಆದ್ದರಿಂದ ಉತ್ತಮ ಫಲಿತಾಂಶ ಬಂದಿದೆ ಎಂದು ವಿವರಿಸಿದ್ರು. ಇದನ್ನೂ ಓದಿ: ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅನುಮತಿ

    ಇದೀಗ ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರಲು 33% ಪಾಸಿಂಗ್‌ ಅಂಕ ನಿಗದಿ ಮಾಡಲಾಗಿದೆ. 625ಕ್ಕೆ 206 ಅಂಕ ಪಡೆದರೆ ಅಥವಾ ಆಯಾ ವಿಷಯದ ಒಟ್ಟು ಅಂಕಗಳಲ್ಲಿ 30 ಅಂಕ ಪಡೆದಿರಬೇಕು. ಆಂತರಿಕ ಮತ್ತು ಬಾಹ್ಯ ಅಂಕ ಸೇರಿ ಒಟ್ಟು 33% ಅಂಕ ಪಡೆದ ವಿದ್ಯಾರ್ಥಿಯನ್ನ ಉತ್ತೀರ್ಣ ಎಂದು ಘೋಷಿಸಲಾಗುತ್ತದೆ ತಿಳಿಸಿದರು.

    2025-26ನೇ ಸಾಲಿನಿಂದ ಈ ನಿಯಮ ಜಾರಿಗೆ ಬರಲಿದೆ. ಈ ವರ್ಷ ಹಾಜರಾಗೋ ಎಲ್ಲಾ ವಿದ್ಯಾರ್ಥಿಗಳು, ರಿಪೀಟರ್ಸ್, ಖಾಸಗಿ ಅಭ್ಯರ್ಥಿಗಳಿಗೂ ಈ ನಿಯಮ ಜಾರಿಯಾಗಲಿದೆ. ಇದನ್ನೂ ಓದಿ: ಅಮೆರಿಕದ ರಹಸ್ಯ ದಾಖಲೆಗಳ ಸಂಗ್ರಹ ಆರೋಪ – ಭಾರತ ಮೂಲದ ವಿದೇಶಾಂಗ ನೀತಿ ತಜ್ಞ ಆಶ್ಲೇ ಟೆಲ್ಲಿಸ್ ಅರೆಸ್ಟ್‌

  • ವಿದ್ಯಾರ್ಥಿಗಳಿಗೆ ಶಾಕ್‌ ಕೊಟ್ಟ ರಾಜ್ಯ ಸರ್ಕಾರ – ಪರೀಕ್ಷಾ ಶುಲ್ಕ 710 ರೂ.ವರೆಗೆ ಹೆಚ್ಚಳ

    ವಿದ್ಯಾರ್ಥಿಗಳಿಗೆ ಶಾಕ್‌ ಕೊಟ್ಟ ರಾಜ್ಯ ಸರ್ಕಾರ – ಪರೀಕ್ಷಾ ಶುಲ್ಕ 710 ರೂ.ವರೆಗೆ ಹೆಚ್ಚಳ

    – ಪರಿಷ್ಕೃತ ಪರೀಕ್ಷಾ ಶುಲ್ಕ ಎಷ್ಟಿದೆ?

    ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ (SSLC Exam Fee) ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಶಾಕ್‌ ಕೊಟ್ಟಿದೆ.

    2025-26ನೇ ಸಾಲಿನ ಪರೀಕ್ಷಾ ಶುಲ್ಕವನ್ನು 5% ಏರಿಕೆ ಮಾಡಿ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಆದೇಶ ಹೊರಡಿಸಿದೆ. ಅದರನ್ವಯ 2025-26ನೇ ಸಾಲಿನಲ್ಲಿ ನಡೆಯಲಿರುವ ಎಲ್ಲಾ ಪರೀಕ್ಷೆಗಳಿಗೆ ಪ್ರಸ್ತುತ ಇರುವ ದರಕ್ಕೆ ಶೇ.5 ರಷ್ಟು ಸೇರಿಸಿ ಶುಲ್ಕ ವಿಧಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

    2025-26ನೇ ಸಾಲಿನ SSLC ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಪರಿಷ್ಕೃತ ಪರೀಕ್ಷಾ ಶುಲ್ಕ ಹೀಗಿದೆ…
    – ಪ್ರಥಮ ಬಾರಿ ಹಾಜರಾಗುವ SSLC ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ – 676 ರೂ. ನಿಂದ 710 ರೂ.ಗೆ ಹೆಚ್ಚಳ.

    ಖಾಸಗಿ ಅಭ್ಯರ್ಥಿಗಳ ನೋಂದಣಿ ಶುಲ್ಕ
    – ಹೊಸದಾಗಿ ನೋಂದಣಿಯಾಗುವ ಖಾಸಗಿ ಅಭ್ಯರ್ಥಿಗಳ ನೋಂದಣಿ ಶುಲ್ಕ ಹಾಗೂ ಅರ್ಜಿ ಶುಲ್ಕ – 236 ರೂ. ನಿಂದ 248 ರೂ.ಗೆ ಹೆಚ್ಚಳ.
    – ಈಗಾಗಲೇ ಖಾಸಗಿ ಅಭ್ಯರ್ಥಿಯಾಗಿ ನೋಂದಣಿಯಾಗಿ ಪರೀಕ್ಷಾ ಶುಲ್ಕ ಪಾವತಿಸಿದ ಅಭ್ಯರ್ಥಿಗಳ ನೋಂದಣಿ ನವೀಕರಣ ಶುಲ್ಕ – 69 ರೂ. ನಿಂದ 72 ರೂ.ಗೆ ಹೆಚ್ಚಳ.

    ಪುನರಾವರ್ತಿತ ಶಾಲಾ/ ಖಾಸಗಿ ಅಭ್ಯರ್ಥಿಗಳ ಪರೀಕ್ಷಾ ಶುಲ್ಕ
    * ಒಂದು ವಿಷಯಕ್ಕೆ- 427 ರೂ ನಿಂದ 448 ಗೆ ಹೆಚ್ಚಳ
    * ಎರಡು ವಿಷಯಕ್ಕೆ -532 ರೂನಿಂದ 559 ರೂಗೆ ಹೆಚ್ಚಳ.
    * ಮೂರು ಮತ್ತು ಮೂರಕ್ಕಿಂತ ಜಾಸ್ತಿ ವಿಷಯಗಳು – 716 ರೂ. ನಿಂದ 752 ರೂ.ಗೆ ಹೆಚ್ಚಳ.

  • ತಂದೆಯ ಸಾವಿನ ನೋವಿನಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಅಣ್ಣ-ತಂಗಿ

    ತಂದೆಯ ಸಾವಿನ ನೋವಿನಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಅಣ್ಣ-ತಂಗಿ

    ಹಾವೇರಿ: ತಂದೆಯ ಸಾವಿನ ನೋವಿನಲ್ಲೂ ಅಣ್ಣ ತಂಗಿ ಎಸ್‌ಎಸ್‌ಎಲ್‌ಸಿ(SSLC) ಪರೀಕ್ಷೆ ಬರೆದ ಘಟನೆ ಹಾವೇರಿ(Haveri) ಜಿಲ್ಲೆ ರಾಣೇಬೆನ್ನೂರಿನಲ್ಲಿ ನಡೆದಿದೆ.

    ಪದ್ಮಾವತಿಪುರ ತಾಂಡಾ ನಿವಾಸಿಗಳಾಗಿರುವ ರಕ್ಷಿತಾ ಹನುಮಂತಪ್ಪ ಲಮಾಣಿ ಮತ್ತು ಧನರಾಜ ಹನುಮಂತಪ್ಪ ಲಮಾಣಿ ರಾಣೇಬೆನ್ನೂರು ನಗರದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದಾರೆ. ಇದನ್ನೂ ಓದಿ: 25ನೇ ವೆಡ್ಡಿಂಗ್‌ ಆನಿವರ್ಸರಿಯಲ್ಲಿ ಡ್ಯಾನ್ಸ್ ಮಾಡುತ್ತಿದ್ದಾಗ ಕುಸಿದು ಬಿದ್ದು ಹೃದಯಾಘಾತದಿಂದ ಸಾವು

    ಇಂದು ಎಸ್‌ಎಸ್‌ಎಲ್‌ಸಿಯ ಕೊನೆಯ ಪರೀಕ್ಷೆ ಇತ್ತು. ಬೆಳಗ್ಗೆ ತಂದೆ ಹನುಮಂತಪ್ಪ ಅವರು ಹೃದಯಾಘಾತದಿಂದ ಮೃತಪಟ್ಟಿದ್ದರು. ಮನೆಯಲ್ಲಿ ತಂದೆ ಮೃತಪಟ್ಟಿದ್ದರೂ ಸಹ ನಗರದ ಪರೀಕ್ಷೆ ಕೇಂದ್ರಕ್ಕೆ ತೆರಳಿ ಕೊನೆಯ ಹಿಂದಿ ಪರೀಕ್ಷೆ ಬರೆದಿದ್ದಾರೆ. ಇದನ್ನೂ ಓದಿ: ಆಸ್ಪತ್ರೆಗೆ ಜಾಗ ಕೊಟ್ಟ ರೈತರಿಗೆ 60 ವರ್ಷದಿಂದ ಸಿಗದ ಪರಿಹಾರ – ಡಿಹೆಚ್‍ಓ ಕಾರು ಜಪ್ತಿ

    ಎಲ್ಲಾ ಪರೀಕ್ಷೆಗಳಿಗೆ ತಂದೆಯೇ ಪರೀಕ್ಷಾ ಕೇಂದ್ರದವರೆಗೆ ಹೋಗಿ ಮಕ್ಕಳನ್ನ ಬಿಟ್ಟುಬರುತ್ತಿದ್ದರು. ಆದರೆ ಏಕಾಏಕಿ ಹೃದಯಾಘಾತದಿಂದ ಇಂದು ಬೆಳಗ್ಗೆ ಹನುಮಂತಪ್ಪ ಸಾವನ್ನಪ್ಪಿದ್ದಾರೆ. ವಿದ್ಯಾ ಕುಟುಂಬ ಸದಸ್ಯರು, ಶಿಕ್ಷಣ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

  • ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಮಕ್ಕಳನ್ನು ಕರೆದುಕೊಂಡು ಹೋಗುವಾಗ ಲಾರಿ ಡಿಕ್ಕಿ – ತಂದೆ ಸ್ಥಳದಲ್ಲೇ ಸಾವು

    ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಮಕ್ಕಳನ್ನು ಕರೆದುಕೊಂಡು ಹೋಗುವಾಗ ಲಾರಿ ಡಿಕ್ಕಿ – ತಂದೆ ಸ್ಥಳದಲ್ಲೇ ಸಾವು

    ವಿಜಯಪುರ: ಎಸ್‌ಎಸ್‌ಎಲ್‌ಸಿ (SSLC Exam) ಪರೀಕ್ಷೆಗೆ ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಹೋಗುವಾಗ ಲಾರಿ ಡಿಕ್ಕಿಯಾದ ಪರಿಣಾಮ ತಂದೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಕಗ್ಗೋಡ (Kaggod) ಗ್ರಾಮದ ಬಳಿಯ 52ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

    ಮೃತ ಬೈಕ್ ಸವಾರನನ್ನು ವೆಂಕು ಚವ್ಹಾಣ (43) ಎಂದು ಗುರುತಿಸಲಾಗಿದ್ದು, ಪುತ್ರಿಯರಾದ ಐಶ್ವರ್ಯಾ, ಪ್ರೀತಿ ಹಾಗೂ ಪಕ್ಕದ ಮನೆ ನಿವಾಸಿ ಶ್ವೇತಾ ರಾಠೋಡ್ ಗಂಭೀರವಾಗಿ ಗಾಯಗೊಂಡಿದ್ದಾರೆ.ಇದನ್ನೂ ಓದಿ: ನೇಹಾ ಗೌಡ ಮಗಳ ಅದ್ಧೂರಿ ನಾಮಕರಣ- ಪುತ್ರಿಗೆ ಮುದ್ದಾದ ಹೆಸರಿಟ್ಟ ನಟಿ

    ಕುಮಟಗಿ ತಾಂಡಾದಿಂದ ತಮ್ಮ ಇಬ್ಬರು ಮಕ್ಕಳು ಹಾಗೂ ಪಕ್ಕದ ಮನೆ ನಿವಾಸಿಯನ್ನು ಕಗ್ಗೋಡದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ತೆಲಂಗಾಣ (Telangana)ಮೂಲದ TS15UA8055 ನಂಬರ್ ಲಾರಿ ಹಾಗೂ KA28HL5603 ನಂಬರಿನ ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ. ಸದ್ಯ ಗಾಯಾಳುಗಳನ್ನು ವಿಜಯಪುರ (Vijayapura) ನಗರದ ಬಿಎಲ್‌ಡಿಇ ಆಸ್ಪತ್ರೆಗೆ ರವಾನೆ ಮಾಡಲಾಗಿದೆ,

    ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: ರಾಜಸ್ಥಾನದಲ್ಲೂ ಕರ್ನಾಟಕ ಮಾದರಿ ಪಿಎಸ್‌ಐ ಹಗರಣ – ತಪ್ಪು ರಜಾ ಚೀಟಿ ಬರೆದು ಸಿಕ್ಕಿಬಿದ್ದ ಟಾಪರ್!

  • ಹೆತ್ತಮ್ಮನ ಅಗಲಿಕೆ ನೋವಲ್ಲೂ SSLC ಪರೀಕ್ಷೆ ಬರೆದ ವಿದ್ಯಾರ್ಥಿ – ಬಳಿಕ ಅಂತ್ಯಕ್ರಿಯೆಯಲ್ಲಿ ಭಾಗಿ

    ಹೆತ್ತಮ್ಮನ ಅಗಲಿಕೆ ನೋವಲ್ಲೂ SSLC ಪರೀಕ್ಷೆ ಬರೆದ ವಿದ್ಯಾರ್ಥಿ – ಬಳಿಕ ಅಂತ್ಯಕ್ರಿಯೆಯಲ್ಲಿ ಭಾಗಿ

    ಕೊಪ್ಪಳ: ಇಲ್ಲಿನ ಗಂಗಾವತಿ ತಾಲೂಕಿನ ಕೇಸರಹಟ್ಟಿ ಗ್ರಾಮದ ಸ್ವಾಮಿ ವಿವೇಕಾನಂದ ಶಾಲೆಯ ವಿದ್ಯಾರ್ಥಿಯೊಬ್ಬ ತಾಯಿಯ ಅಗಲಿಕೆ ನೋವಿನಲ್ಲೂ ಎಸ್ಸೆಸ್ಸೆಲ್ಸಿ ಪರೀಕ್ಷೆ (SSLC Exam) ಬಂದಿದ್ದಾನೆ.

    ಗ್ರಾಮದ ಸ್ವಾಮಿ ವಿವೇಕಾನಂದ ಇಂಗ್ಲಿಷ್​ ಮೀಡಿಯಂ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಅಡಿವೆಯ್ಯ ಸ್ವಾಮಿ ಎಂಬ 10ನೇ ತರಗತಿಯ ವಿದ್ಯಾರ್ಥಿಯ ತಾಯಿ ವಿಜಯಲಕ್ಷ್ಮಿ ಸಿದ್ದಯ್ಯಸ್ವಾಮಿ (38) ಇಂದು ಬೆಳಗಿನ ಸಮಯದಲ್ಲಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತಾಯಿಯ ಅಗಲಿಕೆಯ ಸುದ್ದಿಯ ಮಧ್ಯೆಯೂ ಧೃತಿಗೆಡದ ವಿದ್ಯಾರ್ಥಿ ತನ್ನ ಕುಟುಂಬದವರ ಮನವೊಲಿಸಿ ಪರೀಕ್ಷೆ ಬರೆಯುವುದಾಗಿ ತಿಳಿಸಿದ್ದಾನೆ.

    ಮಾನವೀಯತೆ ಮೆರೆದ ಶಿಕ್ಷಕರು
    ನೋವಿನಲ್ಲಿದ್ದ ವಿದ್ಯಾರ್ಥಿ ಅಡಿವೆಯ್ಯ ಸ್ವಾಮಿ ಮನೆಗೆ ಬಂದ ಶಿಕ್ಷಕರು ಸಾಂತ್ವಾನ ಹೇಳಿದರು. ಬಳಿಕ ಪರೀಕ್ಷಾ ಕೇಂದ್ರದವರೆಗೆ ಕರೆದೊಯ್ಯಲು ನೆರವಾದರು. ಪರೀಕ್ಷೆಯ ಬಳಿಕ ವಿದ್ಯಾರ್ಥಿ ತನ್ನ ತಾಯಿಯ ಅಂತಿಮ ಸಂಸ್ಕಾರದಲ್ಲಿ ಭಾಗಿಯಾದನು.

    ವಿದ್ಯಾರ್ಥಿ ತಾಯಿ ವಿಜಯಲಕ್ಷ್ಮಿ ಕಳೆದ ಕೆಲ ದಿನಗಳ ಹಿಂದೆ ಸ್ನಾನದ ಕೋಣೆಯಲ್ಲಿ ಬಿದ್ದು ತಲೆಗೆ ಗಾಯ ಮಾಡಿಕೊಂಡಿದ್ದರು. ಪರಿಣಾಮ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಹೀಗಾಗಿ, ಚಿಕಿತ್ಸೆಗಾಗಿ ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ರಾತ್ರಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆದರೆ, ಶುಕ್ರವಾರ ಬೆಳಗ್ಗೆ ವಿಜಯಲಕ್ಷ್ಮಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

  • ಪರೀಕ್ಷಾ ದಿನವೇ SSLC ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಪರೀಕ್ಷಾ ದಿನವೇ SSLC ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಶಿವಮೊಗ್ಗ: ಪರೀಕ್ಷಾ ದಿನವೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ (SSLC Student) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆ ಸಾಗರ ತಾಲೂಕಿನ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಪರಶುರಾಮ್ ಬಾಬು (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಆನಂದಪುರದ KPSC ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ, ಚೆನ್ನಾಗಿಯೇ ಓದುತ್ತಿದ್ದ. ಪರೀಕ್ಷೆಗೆ ಎಲ್ಲಾ ಸಿದ್ಧತೆಯನ್ನೂ ಮಾಡಿಕೊಂಡಿದ್ದ. ಆದ್ರೆ ಕೊನೇ ಕ್ಷಣದಲ್ಲಿ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಈ ಸಂಬಂಧ ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಇಂದಿನಿಂದ ಪರೀಕ್ಷೆ ಆರಂಭ:
    ರಾಜ್ಯಾದ್ಯಂತ ಇಂದಿನ (ಮಾ.25) ಎಸ್‌ಎಸ್‌ಎಲ್‌ಸಿ ಪಬ್ಲಿಕ್ ಪರೀಕ್ಷೆ (SSLC Public Exams) ಪ್ರಾರಂಭವಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಜೊತೆ ಬಾಕಿ ಉಳಿದಿರೋ 5,8,9 ತರಗತಿಗಳಿಗೂ ಪಬ್ಲಿಕ್ ಪರೀಕ್ಷೆ ಶುರುವಾಗಿದೆ.

    ಒಟ್ಟು 8,69,968 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ 4,41,910 ಬಾಲಕರು, 4,28,058 ಬಾಲಕಿಯರು ಇದ್ದಾರೆ. 2,750 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆಯೋಜನೆ ಮಾಡಲಾಗಿದೆ. ಪ್ರತಿ ಕೇಂದ್ರದಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್ ನಿಷೇಧಿಸಲಾಗಿದೆ. ಜೊತೆಗೆ ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದೆ.

    ನಿರ್ದೇಶಕರು ಮತ್ತು ಸಹ ನಿರ್ದೇಶಕರ ವೃಂದದ ಅಧಿಕಾರಿಗಳನ್ನು ಜಿಲ್ಲಾ ಮೇಲುಸ್ತುವಾರಿ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ಡಯಟ್ ಪ್ರಾಂಶುಪಾಲರನ್ನು ಆಯಾ ಜಿಲ್ಲೆಗೆ ಜಿಲ್ಲಾ ವೀಕ್ಷಕರಾಗಿ ನೇಮಿಸಲಾಗಿದೆ. ಡಯಟ್ ಉಪನ್ಯಾಸಕರನ್ನು ಪರೀಕ್ಷಾ ಕೇಂದ್ರಗಳಿಗೆ ವಿಚಕ್ಷಣ ಜಾಗೃತ ದಳದ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.

    ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ವೇಳಾಪಟ್ಟಿ
    ಮಾರ್ಚ್ 25- ಪ್ರಥಮ ಭಾಷೆ.
    ಮಾರ್ಚ್ 27- ಸಮಾಜ ವಿಜ್ಞಾನ
    ಮಾರ್ಚ್ 30- ವಿಜ್ಞಾನ
    ಏಪ್ರಿಲ್ 2- ಗಣಿತ
    ಏಪ್ರಿಲ್ 4- ತೃತೀಯ ಭಾಷೆ
    ಏಪ್ರಿಲ್ 6- ದ್ವೀತಿಯ ಭಾಷೆ

    5ನೇ ತರಗತಿ ವೇಳಾಪಟ್ಟಿ
    ಮಾರ್ಚ್ 25- ಪರಿಸರ ಅಧ್ಯಯನ.
    ಮಾರ್ಚ್ 26- ಗಣಿತ

    8ನೇ ತರಗತಿ ವೇಳಾಪಟ್ಟಿ
    ಮಾರ್ಚ್ 25- ತೃತೀಯ ಭಾಷೆ.
    ಮಾರ್ಚ್ 26- ಗಣಿತ
    ಮಾರ್ಚ್ 27- ವಿಜ್ಞಾನ
    ಮಾರ್ಚ್ 28- ಸಮಾಜ ವಿಜ್ಞಾನ

    9ನೇ ತರಗತಿ ವೇಳಾಪಟ್ಟಿ
    ಮಾರ್ಚ್ 25- ತೃತೀಯ ಭಾಷೆ
    ಮಾರ್ಚ್ 26- ಗಣಿತ
    ಮಾರ್ಚ್ 27- ವಿಜ್ಞಾನ
    ಮಾರ್ಚ್ 28- ಸಮಾಜ ವಿಜ್ಞಾನ.

  • ಪಾಸ್ ಮಾಡಿ, ಇಲ್ದಿದ್ರೆ ನನ್ನ ತಂದೆ ಮದುವೆ ಮಾಡ್ತಾರೆ – ಉತ್ತರ ಪತ್ರಿಕೆಯಲ್ಲಿ ವಿದ್ಯಾರ್ಥಿನಿಯ ಮನವಿ

    ಪಾಟ್ನಾ: ಬಿಹಾರದ (Bihar) 10ನೇ ತರಗತಿಯ ಉತ್ತರ ಪತ್ರಿಕೆಯಲ್ಲಿ (BSEB 10th Board Exam) ವಿದ್ಯಾರ್ಥಿನಿಯೊಬ್ಬಳು ತನ್ನನ್ನು ಪಾಸ್ ಮಾಡಿ ಇಲ್ಲದಿದ್ದರೆ, ನನ್ನ ತಂದೆ ಮದುವೆ ಮಾಡ್ತಾರೆ ಎಂದು ಬರೆದಿದ್ದಾಳೆ. ಇದೀಗ ವಿದ್ಯಾರ್ಥಿನಿಯ ಉತ್ತರ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ವಿದ್ಯಾರ್ಥಿನಿ (Student) ಉತ್ತರ ಪತ್ರಿಕೆಯಲ್ಲಿ, ನಾನು ಬಡ ಕುಟುಂಬದಿಂದ ಬಂದಿದ್ದು, ತನ್ನನ್ನು ಪಾಸ್ ಮಾಡುವಂತೆ ಮನವಿ ಮಾಡಿದ್ದಾಳೆ. ಅಲ್ಲದೇ ಪಾಸ್ ಮಾಡದಿದ್ದರೆ ತನ್ನನ್ನು ಮದುವೆ ಮಾಡುತ್ತಾರೆ. ಈಗ ಮದುವೆಯಾಗಲು ಇಷ್ಟವಿಲ್ಲ ಎಂದು ಆಕೆ ಬರೆದುಕೊಂಡಿದ್ದಾಳೆ. ಇದನ್ನೂ ಓದಿ: ಕಾಂಗ್ರೆಸ್ ಮುಖಂಡನ ಅಟ್ಟಾಡಿಸಿ ಹೊಡೆದು, ನೇಣು ಬಿಗಿದು ಹತ್ಯೆ

    ಇನ್ನೂ ಕೆಲವರು ಉತ್ತರ ಪತ್ರಿಕೆಯಲ್ಲಿ ಸಿನಿಮಾ ಹಾಡುಗಳು ಹಾಗೂ ದೇವರ ನಾಮಗಳನ್ನು ಬರೆದಿದ್ದಾರೆ. ವಿದ್ಯಾರ್ಥಿಯೊಬ್ಬ ಸಲ್ಮಾನ್ ಖಾನ್ ನಟನೆಯ ಸಾಜನ್ ಚಿತ್ರದ ಹಾಡನ್ನು ಉತ್ತರ ಪತ್ರಕಿಯಲ್ಲಿ ಬರೆದಿದ್ದಾನೆ. ಇದೀಗ ಈ ಎಲ್ಲಾ ಉತ್ತರ ಪತ್ರಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

    ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಶಿಕ್ಷಕರೊಬ್ಬರು, ಉತ್ತರ ಸರಿಯಾಗಿದ್ದರೆ ಅಂಕಗಳನ್ನು ನೀಡುತ್ತೇವೆ. ಇಂತಹ ಅನಗತ್ಯ ಬರವಣಿಗೆಗೆ ಅಂಕ ನೀಡಲಾಗುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಹೆಗಡೆ ಮುಂದೆ ಅಸಮಾಧಾನ ಹೊರಹಾಕಿದ ಶಾಸಕಿ ರೂಪಾಲಿ ನಾಯ್ಕ!