Tag: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ

  • ತಂದೆಯ ಸಾವಿನ ನೋವಿನಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಅಣ್ಣ-ತಂಗಿ

    ತಂದೆಯ ಸಾವಿನ ನೋವಿನಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಅಣ್ಣ-ತಂಗಿ

    ಹಾವೇರಿ: ತಂದೆಯ ಸಾವಿನ ನೋವಿನಲ್ಲೂ ಅಣ್ಣ ತಂಗಿ ಎಸ್‌ಎಸ್‌ಎಲ್‌ಸಿ(SSLC) ಪರೀಕ್ಷೆ ಬರೆದ ಘಟನೆ ಹಾವೇರಿ(Haveri) ಜಿಲ್ಲೆ ರಾಣೇಬೆನ್ನೂರಿನಲ್ಲಿ ನಡೆದಿದೆ.

    ಪದ್ಮಾವತಿಪುರ ತಾಂಡಾ ನಿವಾಸಿಗಳಾಗಿರುವ ರಕ್ಷಿತಾ ಹನುಮಂತಪ್ಪ ಲಮಾಣಿ ಮತ್ತು ಧನರಾಜ ಹನುಮಂತಪ್ಪ ಲಮಾಣಿ ರಾಣೇಬೆನ್ನೂರು ನಗರದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದಾರೆ. ಇದನ್ನೂ ಓದಿ: 25ನೇ ವೆಡ್ಡಿಂಗ್‌ ಆನಿವರ್ಸರಿಯಲ್ಲಿ ಡ್ಯಾನ್ಸ್ ಮಾಡುತ್ತಿದ್ದಾಗ ಕುಸಿದು ಬಿದ್ದು ಹೃದಯಾಘಾತದಿಂದ ಸಾವು

    ಇಂದು ಎಸ್‌ಎಸ್‌ಎಲ್‌ಸಿಯ ಕೊನೆಯ ಪರೀಕ್ಷೆ ಇತ್ತು. ಬೆಳಗ್ಗೆ ತಂದೆ ಹನುಮಂತಪ್ಪ ಅವರು ಹೃದಯಾಘಾತದಿಂದ ಮೃತಪಟ್ಟಿದ್ದರು. ಮನೆಯಲ್ಲಿ ತಂದೆ ಮೃತಪಟ್ಟಿದ್ದರೂ ಸಹ ನಗರದ ಪರೀಕ್ಷೆ ಕೇಂದ್ರಕ್ಕೆ ತೆರಳಿ ಕೊನೆಯ ಹಿಂದಿ ಪರೀಕ್ಷೆ ಬರೆದಿದ್ದಾರೆ. ಇದನ್ನೂ ಓದಿ: ಆಸ್ಪತ್ರೆಗೆ ಜಾಗ ಕೊಟ್ಟ ರೈತರಿಗೆ 60 ವರ್ಷದಿಂದ ಸಿಗದ ಪರಿಹಾರ – ಡಿಹೆಚ್‍ಓ ಕಾರು ಜಪ್ತಿ

    ಎಲ್ಲಾ ಪರೀಕ್ಷೆಗಳಿಗೆ ತಂದೆಯೇ ಪರೀಕ್ಷಾ ಕೇಂದ್ರದವರೆಗೆ ಹೋಗಿ ಮಕ್ಕಳನ್ನ ಬಿಟ್ಟುಬರುತ್ತಿದ್ದರು. ಆದರೆ ಏಕಾಏಕಿ ಹೃದಯಾಘಾತದಿಂದ ಇಂದು ಬೆಳಗ್ಗೆ ಹನುಮಂತಪ್ಪ ಸಾವನ್ನಪ್ಪಿದ್ದಾರೆ. ವಿದ್ಯಾ ಕುಟುಂಬ ಸದಸ್ಯರು, ಶಿಕ್ಷಣ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

  • ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶುಭಕೋರಿದ ಯು.ಟಿ ಖಾದರ್

    ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶುಭಕೋರಿದ ಯು.ಟಿ ಖಾದರ್

    – ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ಬಸ್ ಸೌಲಭ್ಯ

    ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಗಳು ಪ್ರಾರಂಭವಾಗಿದ್ದು, 15,881 ಪರೀಕ್ಷಾ ಕೇಂದ್ರಗಳಲ್ಲಿ 8,96,447 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಈ ಸಂದರ್ಭದಲ್ಲಿ ಪೋಷಕರು ವಿದ್ಯಾರ್ಥಿಗಳಿಗೆ ಭಾವನಾತ್ಮಕ ಬೆಂಬಲ ನೀಡುವುದು ಮುಖ್ಯ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ (U T Khader Fareed) ಹೇಳಿದರು.

    ವಿಧಾನಸಭೆಯಲ್ಲಿಂದು ವಿದ್ಯಾರ್ಥಿಗಳಿಗೆ ಶುಭಕೋರಿ ಮಾತನಾಡಿದ ಅವರು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮೊದಲನೇ ಹಂತ, ಅದು ಅಂತ್ಯವಲ್ಲ ಆರಂಭ. ರಾತ್ರಿ ಹಗಲೆನ್ನದೇ ಪರಿಶ್ರಮ ಪಟ್ಟು ಪರೀಕ್ಷೆಗೆ ಸಿದ್ಧರಾಗಿರುವ ಎಲ್ಲಾ ವಿದ್ಯಾರ್ಥಿಗಳು ಮನೋ ಸ್ಥೈರ್ಯದಿಂದ ಪರೀಕ್ಷೆ ಎದುರಿಸಬೇಕು ಎಂದರು. ಇದನ್ನೂ ಓದಿ: ಹನಿಟ್ರ್ಯಾಪ್ ಪ್ರಕರಣ ಜಡ್ಜ್‌ ಅಥವಾ ಸಿಬಿಐ ತನಿಖೆಗೆ ಕೊಡಬೇಕು: ವಿಜಯೇಂದ್ರ ಆಗ್ರಹ

    ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಫ್ರೀ ಬಸ್
    ರಾಜ್ಯದಲ್ಲಿ 8,96,447 ವಿದ್ಯಾರ್ಥಿಗಳು ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದರು. ಇದನ್ನೂ ಓದಿ: ಹಾಟ್ ಅವತಾರ ತಾಳಿದ ಜಾಕ್ವೆಲಿನ್- ನಟಿಯ ಲುಕ್‌ಗೆ ಪಡ್ಡೆಹುಡುಗರು ಫಿದಾ

    ಈ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಯಾವುದೇ ಗ್ರೇಸ್ ಮಾರ್ಕ್ಸ್ ಇಲ್ಲದೇ ಪರೀಕ್ಷೆಗಳನ್ನು ಬರೆಯುತ್ತಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಉತ್ತಮವಾಗಿ ಪರೀಕ್ಷೆ ಬರೆದು ತೇರ್ಗಡೆ ಹೊಂದಲಿ ಎಂದು ಶುಭ ಹಾರೈಸಿದರು. ಇದನ್ನೂ ಓದಿ: ವಿದ್ಯುತ್‌ ಸಬ್‌ಸ್ಟೇಷನ್‌ನಲ್ಲಿ ಅಗ್ನಿ ಅನಾಹುತ – ಲಂಡನ್‌ ಹೀಥ್ರೂ ವಿಮಾನ ನಿಲ್ದಾಣ ದಿನಪೂರ್ತಿ ಬಂದ್‌

    ಇದೇ ಸಂದರ್ಭದಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ಅವರು ವಿದ್ಯಾರ್ಥಿಗಳಿಗೆ ಶುಭ ಕೋರಿದರು.

  • ಟೀಚರ್ ಹೊಡೆದ್ರು ಅಂತಾ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ – ಶಾಲಾ ಬಿಲ್ಡಿಂಗ್‌ನ 3ನೇ ಫ್ಲೋರ್‌ನಿಂದ ಏಕಾಏಕಿ ಜಿಗಿದ ವಿದ್ಯಾರ್ಥಿನಿ!

    ಟೀಚರ್ ಹೊಡೆದ್ರು ಅಂತಾ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ – ಶಾಲಾ ಬಿಲ್ಡಿಂಗ್‌ನ 3ನೇ ಫ್ಲೋರ್‌ನಿಂದ ಏಕಾಏಕಿ ಜಿಗಿದ ವಿದ್ಯಾರ್ಥಿನಿ!

    ಬೆಂಗಳೂರು: ಇಂದಿನ ಮಕ್ಕಳಿಗೆ ಪೋಷಕರಾಗಲಿ, ಶಿಕ್ಷಣ ಕಲಿಸಿಕೊಡುವ ಗುರುಗಳಾಗಲಿ ಏನು ಅನ್ನುವಂತೆಯೇ ಇಲ್ಲ. ಸಣ್ಣ ಪುಟ್ಟದ್ದಕ್ಕೆಲ್ಲಾ ಜೀವ ಕಳೆದುಕೊಳ್ಳುವ ಮಟ್ಟಿಗೆ ಯೋಚಿಸಿಬಿಟ್ಟಿರ್ತಾರೆ. ಟೀಚರ್ ಹೊಡೆದ್ರು ಅಂತಾ ಪ್ರತಿಭಾನ್ವಿನ ವಿದ್ಯಾರ್ಥಿನಿಯೊಬ್ಬಳು (SSLC Student) ಶಾಲೆಯ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರೊ ಘಟನೆ ಬೆಂಗಳೂರಿನಲ್ಲಿ ನಡೆದಿದೆ ನೋಡಿ..

    ಆಕೆ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿನಿ. ಈ ಬಾರಿ SSLC ಯಲ್ಲಿ ಓದುತ್ತಿದ್ದಳು. ಇವತ್ತು ಏನೊ ತಪ್ಪು ಮಾಡಿದ್ಲು ಅಂತಾ ಟೀಚರ್ ಒಂದೆರಡು ಏಟು ಹೊಡೆದಿದ್ದಾರೆ. ಅಷ್ಟಕ್ಕೇ ಶಾಲೆಯ 3ನೇ ಫ್ಲೋರ್‌ನ ಕಟ್ಟಡದಿಂದ ಜಿಗಿದು ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಬ್ಯಾಟರಾಯನಪುರ ಪೊಲೀಸ್ ಠಾಣಾ (Byatarayanapura Police Station) ವ್ಯಾಪ್ತಿಯ ಬಾಪೂಜಿನಗರದಲ್ಲಿಂದು ಮಧ್ಯಾಹ್ನ 1 ಗಂಟೆಗೆ ನಡೆದಿದೆ. ಹೀಗೆ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿಹ ಹೆಸ್ರು ಫರಿಯಾ ಖಾನಂ. ಇದನ್ನೂ ಓದಿ: ಸಿದ್ದರಾಮಯ್ಯ ಸಂಡೇ ಲಾಯರ್, ರಾಹುಲ್ ಗಾಂಧಿ ಮೌನ ಏಕೆ?: ಛಲವಾದಿ ನಾರಾಯಣಸ್ವಾಮಿ ಕಿಡಿ

    ಶಾಮಣ್ಣ ಗಾರ್ಡನ್‌ ನಿವಾಸಿಯಾಗಿರುವ ಫರಿಯಾ, ಅಲ್‌ ಫಹದ್ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದಳು. ಇಂದು (ಶುಕ್ರವಾರ) ಮಧ್ಯಾಹ್ನ 1.30ರ ಸುಮಾರಿಗೆ ಶಾಲಾ ಕಟ್ಟಡದ ಮೂರನೇ‌ ಮಹಡಿಯಿಂದ ವಿದ್ಯಾರ್ಥಿನಿ ಜಿಗಿದಿದ್ದಾಳೆ. ಬಳಿಕ ಗಂಭೀರ ಗಾಯಗೊಂಡ ಪರಿಣಾಮ ಸ್ಥಳೀಯರು ಪೋಷಕರಿಗೆ ಮಾಹಿತಿ ನೀಡಿದ್ದಾರೆ.‌ ಇದನ್ನೂ ಓದಿ: ಉಕ್ರೇನ್‌ಗೆ ಮೋದಿ ಭೇಟಿ – ಝೆಲೆನ್ಸ್ಕಿ ಜೊತೆ ಮಾತುಕತೆ; ಯುದ್ಧದಲ್ಲಿ ಮಡಿದ ಮಕ್ಕಳ ಸ್ಮಾರಕ ವೀಕ್ಷಿಸಿದ ಪ್ರಧಾನಿ!

    ಸ್ಥಳಕ್ಕೆ ಬಂದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೂರನೇ ಮಹಡಿಯಿಂದ ಕೆಳಗೆ ಬಿದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಾಂಶುಪಾಲರು ಬೈದ್ದಿದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ‌.‌ ಪೋಷಕರು ದೂರು ನೀಡಿದ ಬಳಿಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಿರುದ್ಧ ಮೊದಲ ಚಾರ್ಜ್‌ಶೀಟ್‌ ಸಲ್ಲಿಕೆ – 2,144 ಪುಟಗಳ ದೋಷಾರೋಪ ಪಟ್ಟಿಯಲ್ಲೇನಿದೆ?

  • ನನ್ನ ಮಗಳು ಪ್ರತಿಭಾನ್ವಿತಳು ಪರೀಕ್ಷೆಗೆ ಹೆದರುವವಳಲ್ಲ: ಅನುಶ್ರೀ ಹೆತ್ತವರ ಆಕ್ರಂದನ

    ನನ್ನ ಮಗಳು ಪ್ರತಿಭಾನ್ವಿತಳು ಪರೀಕ್ಷೆಗೆ ಹೆದರುವವಳಲ್ಲ: ಅನುಶ್ರೀ ಹೆತ್ತವರ ಆಕ್ರಂದನ

    ಮೈಸೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದಲ್ಲಿ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿನಿ ಅನುಶ್ರೀ ಮನೆಯಲ್ಲಿ ಸೂತಕದ ಛಾಯೆ ದಟ್ಟವಾಗಿ ಮೂಡಿದೆ. ಆಕೆ ಪ್ರತಿಭಾನ್ವಿತಳು, ಪರೀಕ್ಷೆಗೆ ಹೆದರುವವಳಲ್ಲ. ಪರೀಕ್ಷಾ ಕೇಂದ್ರ ಬದಲಾಗಿದ್ದಕ್ಕೆ ಆಕೆ ಆಘಾತಕ್ಕೆ ಒಳಗಾಗಿದ್ದಾಳೆ ಎಂದು ಆಕೆಯ ಹೆತ್ತವರು ಕಣ್ಣೀರು ಹಾಕುತ್ತಿದ್ದಾರೆ.

    ಟಿ. ನರಸೀಪುರದಿಂದ 12 ಕಿ.ಮಿ ದೂರದ ಅಕ್ಕೂರು ಗ್ರಾಮದ ಕೆಂಪರಾಜು ಮಗಳು ಅನುಶ್ರೀ. ಗಾರೆ ಕೆಲಸ ಮಾಡುವ ಕೆಂಪರಾಜು ಬಹಳ ಕಷ್ಟಪಟ್ಟು ಮಗಳನ್ನು ಓದಿಸುತ್ತಿದ್ದರು. ಈಗ ಮಗಳು ಈ ರೀತಿ ಸಾವನ್ನಪ್ಪಿರುವುದು ಸಹಜವಾಗಿಯೆ ಅವರನ್ನು ಆಘಾತಕ್ಕೆ ತಳ್ಳಿದೆ.

    ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿ ದುಃಖ ತೋಡಿಕೊಂಡ ಅನುಶ್ರೀ ಪೋಷಕರು, ಆಕೆಗೆ ಯಾವುದೇ ಆರೋಗ್ಯದ ಸಮಸ್ಯೆ ಇರಲಿಲ್ಲ. ಪರೀಕ್ಷೆಗೆ ಹೋದ ಸಂದರ್ಭದಲ್ಲೂ ಚೆನ್ನಾಗಿಯೇ ಇದ್ದಳು. ಪರೀಕ್ಷೆ ಬರೆದು ಬರುತ್ತೇನೆ ಎಂದು ಬೆಳಗ್ಗೆ ಹೇಳಿ ಹೋದ ಮಗು ಹಿಂತಿರುಗಿ ಬರಲೇ ಇಲ್ಲ ಎಂದು ಗದ್ಗದಿತರಾದರು.

    ನಾನು ಕೆಲಸ ಮಾಡುತ್ತಿದ್ದಾಗ ನನ್ನ ತಮ್ಮನ ಕರೆ ಬಂತು. ಮಗಳಿಗೆ ಹುಷಾರಿಲ್ಲ, ಬೇಗ ಅವಳನ್ನು ನೋಡಿಕೊಂಡು ಬಾ ಎಂದ. ಬಳಿಕ ನಾನು ಆಸ್ಪತ್ರೆಗೆ ಧಾವಿಸಿದೆ. ಆದರೆ ಅನುಶ್ರೀ ಜೀವಂತವಾಗಿಯೇ ಇರಲಿಲ್ಲ ಎಂದು ಅಳಲು ತೋಡಿಕೊಂಡರು. ಇದನ್ನೂ ಓದಿ: ಮುಸ್ಲಿಂ ಶಿಲ್ಪಿಗಳನ್ನು ಯಾವಾಗ ಬಹಿಷ್ಕರಿಸುತ್ತೀರಿ: ಹೆಚ್‌ಡಿಕೆ ಪ್ರಶ್ನೆ

    ಪ್ರತೀ ದಿನ ಆಕೆ ಕಷ್ಟಪಟ್ಟು ಚೆನ್ನಾಗಿಯೇ ಓದುತ್ತಿದ್ದಳು. ಆಕೆಯನ್ನು ಡಾಕ್ಟರ್ ಇಲ್ಲವೇ ಎಂಜಿನಿಯರ್ ಓದಿಸಬೇಕೆಂಬ ಕನಸಿತ್ತು. ಆದರೆ ಈಗ ಅವಳೇ ಇಲ್ಲ. ಪರೀಕ್ಷೆ ದಿನ ಅವಳನ್ನು ನಾನೇ ಬೆಳಗ್ಗೆ ಆಟೋ ಹತ್ತಿಸಿದ್ದೆ. ಆದರೆ ಬರುವಾಗ ಆಕೆ ಹೆಣವಾಗಿ ಬಂದಳು ಎಂದು ಅನುಶ್ರೀ ತಾಯಿ ಆಕ್ರಂದಿಸಿದರು.

    ಶಿಕ್ಷಕರ ನಿರ್ಲಕ್ಷವೇ ಕಾರಣ:
    ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿ ಅನುಶ್ರೀ ಹೃದಯಾಘಾತದಿಂದ ಮೃತಪಟ್ಟ ಪ್ರಕರಣದಲ್ಲಿ ಶಿಕ್ಷಕರ ನಿರ್ಲಕ್ಷ್ಯವಿದೆ ಎಂದು ಹೇಳಲಾಗುತ್ತಿದೆ. ಅನುಶ್ರೀ ತನಗೆ ನಿಗದಿ ಪಡಿಸಿದ ಪರೀಕ್ಷಾ ಕೇಂದ್ರ ಬಿಟ್ಟು ಪಕ್ಕದ ಕಟ್ಟಡದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದಾಳೆ.

    ಪರೀಕ್ಷೆ ಆರಂಭವಾದ ಮುಕ್ಕಾಲು ಗಂಟೆ ಬಳಿಕ ಪರೀಕ್ಷಾ ಮೇಲ್ವಿಚಾರಕರು ಇದು ನಿನ್ನ ಪರೀಕ್ಷಾ ಕೇಂದ್ರವಲ್ಲ. ಪಕ್ಕದ ಕೇಂದ್ರ ನಿನ್ನದು ಎಂದು ಹೇಳಿ ಉತ್ತರ ಪತ್ರಿಕೆ ಹಿಂದಕ್ಕೆ ಪಡೆದು ಬೇರೆ ಕೇಂದ್ರಕ್ಕೆ ಕಳುಹಿಸಿದ್ದಾರೆ. ಪರೀಕ್ಷೆ ಪ್ರಾರಂಭವಾಗಿ ಮುಕ್ಕಾಲು ಗಂಟೆ ಬಳಿಕ ಪರೀಕ್ಷಾ ಮೇಲ್ವಿಚಾರಕರು ಎಚ್ಚೆತ್ತುಕೊಂಡಿದ್ದಾರೆ. ಅವರ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ ಎಂಬ ಆರೋಪ ಕೇಳಿ ಬರುತ್ತಿದೆ. ಇದನ್ನೂ ಓದಿ: 40% ಕಮಿಷನ್ – ಈಶ್ವರಪ್ಪ ವಿರುದ್ಧ ಮೋದಿಗೆ ಪತ್ರ ಬರೆದ ಗುತ್ತಿಗೆದಾರ

    ಘಟನೆಯಲ್ಲಿ ನಡೆದಿದ್ದೇನು?
    ಅನುಶ್ರೀ ಪರೀಕ್ಷೆ ಬರೆಯಬೇಕಿದ್ದ ಕೇಂದ್ರ ವಿದ್ಯೋದಯ ಹೈಸ್ಕೂಲ್‌ನಲ್ಲಿ. ಆದರೆ ಅನುಶ್ರೀ ಇದೇ ಶಾಲೆಯ ಕಟ್ಟಡಕ್ಕೆ ಹೊಂದಿಕೊಂಡಿರುವ ವಿದ್ಯೋದಯ ಹಿರಿಯ ಪ್ರಾಥಮಿಕ ಶಾಲೆಗೆ ಹೋಗಿ ಪರೀಕ್ಷೆ ಬರೆದಿದ್ದಾಳೆ. ಅಲ್ಲಿ ಆಕೆಯ ನೋಂದಣಿ ಸಂಖ್ಯೆ ಹೋಲುವ ನಂಬರ್ ಇದ್ದ ಕಾರಣ ಅಲ್ಲೇ ಕುಳಿತು ಪರೀಕ್ಷೆ ಬರೆದಿದ್ದಾಳೆ. ಪರೀಕ್ಷೆ ಪ್ರಾರಂಭವಾಗಿ ಮುಕ್ಕಾಲು ಗಂಟೆಯ ಬಳಿಕ ಪರೀಕ್ಷಾ ಮೇಲ್ವಿಚಾರಕರು ಆಕೆಯನ್ನು ಪರೀಕ್ಷೆಯಿಂದ ಎಬ್ಬಿಸಿ, ಇನ್ನೊಂದೆಡೆಗೆ ಕಳುಹಿಸಿದ್ದಾರೆ. ಈ ಗೊಂದಲಗಳಿಂದ ಅನುಶ್ರೀ ಒತ್ತಡಕ್ಕೊಳಗಾಗಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.