Tag: ಎಸ್ಸಿ-ಎಸ್ಟಿ

  • ಗುತ್ತಿಗೆಯಲ್ಲಿ ಮೀಸಲಾತಿ ಕೊಡಿ – ಅಧಿಕಾರಿಗಳಿಗೆ ನರೇಂದ್ರಸ್ವಾಮಿ ಸೂಚನೆ

    ಗುತ್ತಿಗೆಯಲ್ಲಿ ಮೀಸಲಾತಿ ಕೊಡಿ – ಅಧಿಕಾರಿಗಳಿಗೆ ನರೇಂದ್ರಸ್ವಾಮಿ ಸೂಚನೆ

    – ವಿಧಾನಮಂಡಲದ ಎಸ್ಸಿ-ಎಸ್ಟಿ ಕಲ್ಯಾಣ ಸಮಿತಿಯಿಂದ ಪ್ರಗತಿ ಪರಿಶೀಲನೆ
    – ಶುಲ್ಕ ನೆಪವೊಡ್ಡಿ ಎಸ್ಸಿ-ಎಸ್ಟಿ ಮಕ್ಕಳಿಗೆ ಪ್ರವೇಶಾತಿ ನಿರಾಕರಿಸುವಂತಿಲ್ಲ ಎಂದು ಸೂಚನೆ

    ಕಲಬುರಗಿ: ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಕ್ಕಳಿಗೆ ಶುಲ್ಕ ನೆಪವೊಡ್ಡಿ ಪ್ರವೇಶ ನಿರಾಕರಿಸುವಂತಿಲ್ಲ. ಪ್ರವೇಶ ನಿರಾಕರಿಸಿದಲ್ಲಿ ಅಂತಹ ಸಂಸ್ಥೆ-ಶಾಲೆಗಳ ವಿರುದ್ಧ ಅಟ್ರಾಸಿಟಿ ಪ್ರಕರಣಗಳು ದಾಖಲಿಸಬೇಕು ಎಂದು ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷ ಪಿ.ಎಂ ನರೇಂದ್ರಸ್ವಾಮಿ (P M Narendraswamy) ಹೇಳಿದರು.

    ಬುಧವಾರ ಇಲ್ಲಿನ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಕಲಬುರಗಿ ವಿಭಾಗದ ಕಲಬುರಗಿ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರ ಅಭಿವೃದ್ಧಿ, ಕಲ್ಯಾಣ, ಏಳಿಗೆಗೆ ವಿವಿಧ ಇಲಾಖೆಗಳು ಹಮ್ಮಿಕೊಂಡಿರುವ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.ಇದನ್ನೂ ಓದಿ: ನಮ್ರತಾ ಗೌಡ ಜೊತೆ ಕಿಶನ್ `ನವಿಲೇ’ ಡ್ಯಾನ್ಸ್

    ಸರ್ಕಾರಿ ಶಾಲೆ-ಕಾಲೇಜಿಗೆ ಬರುವವರು ಎಸ್.ಸಿ-ಎಸ್.ಟಿ (SC-ST) ಹಾಗೂ ಬಡ ಮಕ್ಕಳೇ ಜಾಸ್ತಿ. ಹೀಗಾಗಿ ಇಂತಹ ಮಕ್ಕಳಿಗೆ ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ಎಸ್.ಡಿ.ಎಂ.ಸಿ ಸಮಿತಿಯನ್ನು ವಿಶ್ವಾಸಕ್ಕೆ ಪಡೆದು, ಸರ್ಕಾರದ ಅನುದಾನ ಹೊರತಾಗಿ ಸ್ಥಳೀಯವಾಗಿ ಅನುದಾನ ಸಂಗ್ರಹಿಸಿ ಗುಣಮಟ್ಟದ ಶಿಕ್ಷಣ ನೀಡುವತ್ತ ಹೆಚ್ಚು ಮುತುವರ್ಜಿ ವಹಿಸಬೇಕು ಎಂದರು.

    ಸರ್ಕಾರಿ ಶಾಲೆಯಲ್ಲಿ ನೀಡಲಾಗುವ ಸೌಲಭ್ಯದಿಂದ ಖಾಸಗಿ ಶಾಲೆಗಳ ಮಕ್ಕಳೊಂದಿಗೆ ಎಸ್.ಸಿ-ಎಸ್.ಟಿ ಮಕ್ಕಳು ಸ್ಪರ್ಧೆ ಮಾಡುವುದು ತುಂಬಾ ಕಠಿಣವಾಗಿದೆ. ಇಂತಹ ಮಕ್ಕಳಿಗೆ ಮೂಲಸೌಕರ್ಯ ಕೊರತೆ, ಶಿಕ್ಷಕರನ್ನು ಅತಿಥಿ ಶಿಕ್ಷಕರ ರೂಪದಲ್ಲಿ ಒದಗಿಸುವ ಮೂಲಕ ಬೋಧನೆಯ ಕೊರತೆ ನೀಗಿಸಬೇಕಿದೆ. ಶಿಕ್ಷಣದ ಮುಕ್ತ ಅವಕಾಶ ತಳ ಸಮುದಾಯದ ಮಕ್ಕಳಿಗೆ ದೊರೆಯದಿದ್ದಲ್ಲಿ ಮುಂದೆ ಅದು ದೊಡ್ಡ ಸಾಮಾಜಿಕ ಪಿಡುಗಾಗಿ ಪರಿಣಮಿಸಬಹುದು. ನಿರುದ್ಯೋಗದಂತಹ ಸಮಸ್ಯೆ ತಲೆದೋರಬಹುದು. ಹೀಗಾಗಿ ಸರ್ಕಾರಿ-ಖಾಸಗಿ ಮಕ್ಕಳ ನಡುವೆ ಇರುವ ಅಂತರ ನಿವಾರಿಸಬೇಕೆಂದ ಅವರು, ಜಿಲ್ಲೆಯಲ್ಲಿ ಶಿಕ್ಷಣ, ಆರೋಗ್ಯ ಕ್ಷೇತ್ರದ ಸುಧಾರಣೆಗೆ ಸಿ.ಎಸ್.ಆರ್, ಡಿ.ಎಂ.ಎಫ್ ಅನುದಾನ ಬಳಸಬೇಕು ಎಂದು ಡಿ.ಸಿ.ಗೆ ನಿರ್ದೇಶನ ನೀಡಿದರು.

    ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ ಜನಸಂಖ್ಯೆ ಅನುಗುಣವಾಗಿ ಕಾರ್ಯಕ್ರಮ ರೂಪಿಸಬೇಕು. ಎಸ್.ಸಿ-ಎಸ್.ಟಿ ಕಾಲೋನಿ ಪ್ರದೇಶದಲ್ಲಿ ನರೇಗಾ ಕಾಮಗಾರಿ ತೆಗೆದುಕೊಳ್ಳಲಾಗಿದಿಯೇ ಎಂದು ಪ್ರಶ್ನಿಸಿದ ಸಮಿತಿ ಅಧ್ಯಕ್ಷರು, ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಈ ಸಮುದಾಯದ ಒಳಿತಿಗೆ 36 ಸಾವಿರ ಕೋಟಿ ರೂ. ಹಣ ಮೀಸಲಿಡಲಾಗಿದೆ. ಇದನ್ನು ಸಮರ್ಪಕವಾಗಿ ಬಳಸಿ ಸಮುದಾಯದ ಜನರ ಬದುಕಿಗೆ ಬೆಳಕಾಗಬೇಕು ಎಂದ ಅವರು, ಪ್ರತಿ ಹಳ್ಳಿಯ ಪರಿಶಿಷ್ಟ ಕಾಲೋನಿಗಳ ಪ್ರತಿ ಮನೆಗೆ ನಲ್ಲಿ ಸಂಪರ್ಕ ಕಲ್ಪಿಸಬೇಕು ಎಂದರು.ಇದನ್ನೂ ಓದಿ: ಮಹಾಲಕ್ಷ್ಮಿ ಪ್ರಕರಣದಲ್ಲಿ ಟ್ವಿಸ್ಟ್‌ – ಶಂಕಿತ ಕೊಲೆ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

    ದೇವದಾಸಿ ಪದ್ಧತಿ ನಿರ್ಮೂಲನೆಗೆ ಜಾಗೃತಿ ಕಾರ್ಯಕ್ರಮಗಳು ತೀವ್ರಗೊಳಿಸಬೇಕು. ವಸತಿ ರಹಿತರಿಗೆ ವಸತಿ ಯೋಜನೆಯಡಿ ಮನೆ ನೀಡಬೇಕು. ನಿವೇಶನ ಇಲ್ಲದಿದ್ದಲ್ಲಿ ಸರ್ಕಾರವೇ ಖರೀದಿಸಿ ಮಾಜಿ ದೇವದಾಸಿಯರಿಗೆ ನೀಡಬೇಕು. ಮಾಜಿ ದೇವದಾಸಿಯರ ಕುರಿತು ಸಮಾಜ ಬೇರೆ ದೃಷ್ಟಿಯಿಂದಲೇ ನೋಡುತ್ತದೆ. ಹೀಗಾಗಿ ಇವರ ನೆರವಿಗೆ ಬರಬೇಕಾಗಿರುವುದು ಸರ್ಕಾರ. ಹೀಗಾಗಿ ಅಧಿಕಾರಿಗಳು ಸಾಮಾಜಿಕ ನ್ಯಾಯ ದೊರಕಿಸುವ ಕೆಲಸ ಮಾಡಬೇಕು ಎಂದರು.

    ಜಾತಿ ನಿಂದನೆ ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ ವೇಳೆಯಲ್ಲಿ ಆರೋಪಿತನಿಗೆ ಶಿಕ್ಷೆಯಾಗುವ ರೀತಿಯಲ್ಲಿ ಸರಿಯಾದ ಸೆಕ್ಷನ್ ಹಾಕದ ಕಾರಣ ರಾಜ್ಯದಲ್ಲಿ ಶಿಕ್ಷೆ ಪ್ರಮಾಣ ಡಬಲ್ ಡಿಜಿಟ್ ದಾಟುತ್ತಿಲ್ಲ. ಇದೇ ವಿಷಯದಲ್ಲಿ ಯು.ಪಿ, ಬಿಹಾರನಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಿದೆ. ಪೊಲೀಸ್ ಅಧಿಕಾರಿಗಳು ಚಾರ್ಜ್‌ಶೀಟ್‌ ಹಾಕುವಾಗ ನೊಂದ ಸಂತ್ರಸ್ತರಿಗೆ ನ್ಯಾಯ ನೀಡುವ ನಿಟ್ಟಿನಲ್ಲಿ ಸೆಕ್ಷನ್ ಹಾಕಬೇಕು ಎಂದು ಎಸ್.ಪಿ. ಅಡ್ಡೂರು ಶ್ರೀನಿವಾಸಲು ಮತ್ತು ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ ಅವರಿಗೆ ಸೂಚನೆ ನೀಡಿದರು.

    ಎಸ್.ಸಿ-ಎಸ್.ಟಿ ಕಾಲೋನಿಗಳಲ್ಲಿ ವಿದ್ಯುತ್ ಪೂರೈಕೆ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಸಮಾಜ ಕಲ್ಯಾಣ ಇಲಾಖೆಯ ತಾಲೂಕಾ ಹಂತದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಕೂಡದೆ ಎಲ್ಲಾ ಇಲಾಖೆಗಳಲ್ಲಿ ಎಸ್.ಸಿ.ಪಿ-ಟಿ.ಎಸ್.ಪಿ ಕಾರ್ಯಕ್ರಮಗಳ ಮೇಲ್ವಿಚಾರಣೆ ಮಾಡುವುದಲ್ಲದೆ ಸಮಗ್ರ ಮಾಹಿತಿ ಸಂಗ್ರಹಿಸಿಕೊಂಡಿರಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎಂ.ಅಲ್ಲಾಭಕ್ಷ ಅವರಿಗೆ ಖಡಕ್ ಸೂಚನೆ ನೀಡಿದರು.

    ಗುತ್ತಿಗೆಯಲ್ಲಿ ಮೀಸಲಾತಿ ಕೊಡಿ:
    ಲೋಕೋಪಯೋಗಿ, ನೀರಾವರಿ, ಜೆಸ್ಕಾಂ, ಪಿ.ಆರ್.ಇ.ಡಿ, ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ಕೈಗೊಳ್ಳುವ ಸಿವಿಲ್, ಮೂಲಸೌಕರ್ಯ ಕಾಮಗಾರಿಗಳ ಪೈಕಿ 1 ಕೋಟಿ ರೂ. ವರೆಗಿನ ಕಾಮಗಾರಿಗಳಿಗೆ ಎಸ್.ಸಿ. ಗುತ್ತಿಗೆದಾರರಿಗೆ ಶೇ.17.5 ಮತ್ತು ಎಸ್.ಟಿ. ವರ್ಗದ ಗುತ್ತಿಗೆದಾರರಿಗೆ ಶೇ.7.5 ರಂತೆ ಮೀಸಲಾತಿ ಅನ್ವಯ ಗುತ್ತಿಗೆ ನೀಡಲು ಸರ್ಕಾರದ ಸ್ಪಷ್ಟ ನಿರ್ದೇಶನವಿದ್ದರು. ವಿವಿಧ ಕಾಮಗಾರಿಗಳನ್ನು ಕ್ಲಬ್ ಮಾಡಿ ಪ್ಯಾಕೇಜ್ ಆಧಾರದ ಮೇಲೆ ಟೆಂಡರ್ ಕರೆಯುತ್ತಿರುವುದಿರಂದ ಈ ವರ್ಗದ ಗುತ್ತಿಗೆದಾರರಿಗೆ ಮೀಸಲಾತಿಯಿಂದ ವಂಚಿಸಲಾಗುತ್ತಿದೆ. ಕೂಡಲೆ ಇದನ್ನು ಸರಿಪಡಿಸಿ ಸಮಪರ್ಕವಾಗಿ ಅನುಷ್ಠಾನಗೊಳಿಸಬೇಕು ಎಂದು ಎಲ್ಲಾ ಅನುಷ್ಟಾನಾಧಿಕಾರಿಗಳಿಗೆ ಸೂಚನೆ ನೀಡಿದರು.

    ಸಭೆಯಲ್ಲಿ ಸಮಿತಿ ಸದಸ್ಯರಾದ ಬಸನಗೌಡ ದದ್ದಲ, ಬಸವರಾಜ್ ಮತ್ತಿಮೂಡ್, ಕೃಷ್ಣ ನಾಯಕ, ಶಾಂತರಾಮ್ ಬುಡ್ನ ಸಿದ್ದಿ, ಜಗದೇವ್ ಗುತ್ತೇದಾರ್, ಸಮಿತಿ ಕಾರ್ಯದರ್ಶಿ ಶ್ರೀನಿವಾಸ್, ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್ ಸೇರಿದಂತೆ ಜಿಲ್ಲೆಯ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿದ್ದರು.ಇದನ್ನೂ ಓದಿ: ಪುಣೆ ನಗರದಲ್ಲಿ ವರುಣಾರ್ಭಟ, ರಸ್ತೆಗಳು ಜಲಾವೃತ – ಜನಜೀವನ ಅಸ್ತವ್ಯಸ್ತ

  • ಎಸ್ಸಿ-ಎಸ್ಟಿ: ಕೆನೆಪದರ ಮೀಸಲಾತಿಗೆ ನೂರಾರು ಸಂಸದರ ವಿರೋಧ

    ಎಸ್ಸಿ-ಎಸ್ಟಿ: ಕೆನೆಪದರ ಮೀಸಲಾತಿಗೆ ನೂರಾರು ಸಂಸದರ ವಿರೋಧ

    ನವದೆಹಲಿ: ಎಸ್‌ಸಿ-ಎಸ್‌ಟಿ (SC-ST) ಒಳಮೀಸಲಾತಿ ಮತ್ತು ಕೆನೆಪದರ (Creamy Layer) ಮೀಸಲಾತಿ ಜಾರಿ ಸಂಬಂಧ ಇತ್ತೀಚಿಗೆ ಸುಪ್ರೀಂ ಕೋರ್ಟ್ (Supreme Court) ತೀರ್ಪಿನ ವಿಚಾರವಾಗಿ ನೂರಕ್ಕೂ ಹೆಚ್ಚು ಸಂಸದರು, ಪ್ರಧಾನಿಯನ್ನು ಭೇಟಿ ಮಾಡಿ ಕಳವಳ ವ್ಯಕ್ತಪಡಿಸಿದ್ದಾರೆ.

    ಯಾವುದೇ ಕಾರಣಕ್ಕೂ ಕೆನೆಪದರ ಮೀಸಲಾತಿಯನ್ನು ಜಾರಿ ಮಾಡಬಾರದು. ಇದರಿಂದ ಅನ್ಯಾಯ ಆಗುತ್ತೆ ಎಂದು ಪ್ರಧಾನಿ ಮೋದಿ ಅವರಲ್ಲಿ ಮನವಿ ಮಾಡಿದ್ದಾರೆ. ಇದಕ್ಕೆ ಪ್ರಧಾನಿ ಮೋದಿ ಸಕಾರಾತ್ಮಕವಾಗಿಯೇ ಸ್ಪಂದಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: 530 ದಿನಗಳ ಬಳಿಕ ಜೈಲಿನಿಂದ ಹೊರಬಂದ AAP ನಾಯಕ ಮನೀಶ್‌ ಸಿಸೋಡಿಯಾ

    ಪ್ರಧಾನಿ ಮೋದಿ ಭೇಟಿ ಬಳಿಕ ಮಾತನಾಡಿದ ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ಯಾವುದೇ ಕಾರಣಕ್ಕೂ ಕೆನೆಪದರ ಮಿಸಲಾತಿ ಜಾರಿ ಮಾಡಲ್ಲ. ಅನುಷ್ಠಾನಕ್ಕೆ ತರಲ್ಲ ಎಂದು ಪ್ರಧಾನಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

    ಕೆನೆಪದರ ಮೀಸಲಾತಿ ಜಾರಿ ಮಾಡಬಾರದು. ಅದರಿಂದ ಅನ್ಯಾಯ ಆಗುತ್ತೆ ಎಂದಿದ್ದೇನೆ. ಯಾವುದೇ ಕಾರಣಕ್ಕೂ ಕೆನೆಪದರ ಮೀಸಲಾತಿ ಜಾರಿ ಮಾಡಲ್ಲ. ಅನುಷ್ಠಾನಕ್ಕೆ ತರಲ್ಲ ಎಂದು ಮೋದಿ ಹೇಳಿದ್ದಾರೆ. ಇಂದು ಕೂಡ ಮನೆ ಬಾಡಿಗೆ ಕೊಡುವಾಗದ ಜಾತಿ ಕೇಳುತ್ತಾರೆ. ಕೆನೆಪದರ ಮೀಸಲಾತಿ ಪರವಾಗಿ ನಾವು ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ವಯನಾಡು ಭೂಕುಸಿತ ಪ್ರದೇಶಕ್ಕೆ ನಾಳೆ ಮೋದಿ ಭೇಟಿ

  • SC-ST ಸಮುದಾಯದ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡಬೇಡಿ: JDS ಆಗ್ರಹ

    SC-ST ಸಮುದಾಯದ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡಬೇಡಿ: JDS ಆಗ್ರಹ

    ಬೆಂಗಳೂರು: ಎಸ್‌ಸಿಪಿ-ಟಿಎಸ್‌ಪಿ (SCP-TSP) ಹಣವನ್ನು ಯಾವುದೇ ಕಾರಣಕ್ಕೂ ಗ್ಯಾರಂಟಿ (Guarantee) ಯೋಜನೆಗೆ ಬಳಸಬಾರದು ಎಂದು ಸರ್ಕಾರವನ್ನು ಜೆಡಿಎಸ್ (JDS) ಪಕ್ಷ ಒತ್ತಾಯ ಮಾಡಿದೆ. ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಜೆಡಿಎಸ್ ಪಕ್ಷದ ಎಸ್‌ಸಿ-ಎಸ್‌ಟಿ (SC-ST) ಸಮುದಾಯದ ನಾಯಕರು ಸರ್ಕಾರದ ಕ್ರಮವನ್ನು ಖಂಡಿಸಿದರು.

    ಮಾಜಿ ಶಾಸಕ ಹೆಚ್‌ಕೆ ಕುಮಾರಸ್ವಾಮಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಎಸ್‌ಸಿಪಿ-ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಳ್ಳುತ್ತಿದೆ. ಎಸ್‌ಸಿ-ಎಸ್‌ಟಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗೆ ವರ್ಗಾವಣೆ ಮಾಡಿದ್ದು ಎಷ್ಟು ಸರಿ? ಇದು ಎಸ್‌ಸಿ-ಎಸ್‌ಟಿ ಸಮುದಾಯಕ್ಕೆ ಮಾಡಿದ ಅನ್ಯಾಯ. ಇದನ್ನು ಜೆಡಿಎಸ್ ಪಕ್ಷ ಖಂಡಿಸುತ್ತದೆ ಎಂದು ವಾಗ್ದಾಳಿ ನಡೆಸಿದರು.

    ಕಾಯ್ದೆಯಲ್ಲಿ 7ಡಿ ಯನ್ನು ಡಿಲೀಟ್ ಮಾಡಬೇಕು ಎಂಬ ಹೋರಾಟ ಆಗುತ್ತಿತ್ತು. ಕಾಂಗ್ರೆಸ್ ಸರ್ಕಾರ 7ಡಿ ಯನ್ನ ಕೈ ಬಿಟ್ಟಿತ್ತು. ಈಗ ಇದೇ ಸರ್ಕಾರ ಹಣ ಬಳಕೆ ಮಾಡುತ್ತಿದೆ. ನಿಮ್ಮ ಗ್ಯಾರಂಟಿ ಯೋಜನೆಗೆ ಹಣ ಬೇರೆ ಕಡೆ ಸೃಷ್ಟಿ ಮಾಡಿಕೊಳ್ಳಿ. ಅದು ಬಿಟ್ಟು ಎಸ್‌ಸಿ-ಎಸ್‌ಟಿಗೆ ಇರೋ ಅನುದಾನದಲ್ಲಿ ಯಾಕೆ ಬಳಕೆ ಮಾಡ್ತೀರಾ? ಬಜೆಟ್ ಹೆಚ್ಚಳ ಆಗಿರೋದಕ್ಕೆ ಎಸ್‌ಸಿ-ಎಸ್‌ಟಿ ಅನುದಾನ ಹೆಚ್ಚಳ ಆಗಿದೆ. ಈಗ 11 ಸಾವಿರ ಕೋಟಿ ರೂ. ಹಣವನ್ನು ಗ್ಯಾರಂಟಿಗೆ ಬಳಸೋದು ಸರಿಯಲ್ಲ ಎಂದರು.

    ಗ್ಯಾರಂಟಿ ಯೋಜನೆಗೆ ಹಣ ಬಳಕೆ ಮಾಡ್ತೀನಿ ಅಂತಿದ್ದೀರಾ. ಶಕ್ತಿ ಯೋಜನೆಯಲ್ಲಿ ಹೇಗೆ ಜನರನ್ನು ಜಾತಿ ಕೇಳ್ತೀರಾ? ಜಾತಿ ಕೇಳಿ ಫ್ರೀ ಟಿಕೆಟ್ ಕೊಡ್ತೀರಾ? ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಗ್ಯಾರಂಟಿ ಯೋಜನೆ ಲಂಚ ಅಂತ ಹೇಳಿದ್ದಾರೆ. ಯಾವುದೇ ಕಾರಣಕ್ಕೂ 11 ಸಾವಿರ ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗೆ ಕೊಡಬಾರದು. ಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿ ಯೋಜನೆಗೆ ಬಳಕೆ ಮಾಡಬಾರದು. ಈ ಹಣ ದುರುಪಯೋಗ ಮಾಡಿಕೊಳ್ಳೋದಕ್ಕೆ ಸರ್ಕಾರ ಪ್ರಯತ್ನ ಮಾಡ್ತಿದೆ. ಸರ್ಕಾರ ಕೂಡಲೇ ನಿರ್ಧಾರ ವಾಪಸ್ ಪಡೆಯಬೇಕು. ಇಲ್ಲದೆ ಹೋದರೆ ರಾಜ್ಯಾದ್ಯಂತ, ಪ್ರತಿ ಜಿಲ್ಲೆ ಕೇಂದ್ರಗಳಲ್ಲಿ ಜೆಡಿಎಸ್ ಪ್ರತಿಭಟನೆ ಮಾಡಲಿದೆ ಎಂದು ಎಚ್ಚರಿಕೆ ಕೊಟ್ಟರು. ಇದನ್ನೂ ಓದಿ: ಸರ್ಕಾರವನ್ನ ಟೀಕಿಸಿದ್ದ ಹೆಚ್‍ಡಿಕೆ ವಿರುದ್ಧ ಚಲುವರಾಯಸ್ವಾಮಿ ವಾಗ್ದಾಳಿ

    ಮಾಜಿ ಶಾಸಕ ಅಲ್ಕೋಡ್ ಹನುಮಂತಪ್ಪ ಮಾತನಾಡಿ, ಬಿಜೆಪಿ ಅವರು ಎಸ್‌ಸಿ-ಎಸ್‌ಟಿಗೆ ಅನ್ಯಾಯ ಮಾಡಿದರು ಅಂತ ಜನ ಕಾಂಗ್ರೆಸ್‌ಗೆ ಮತ ಹಾಕಿದರು. ಕಾಂಗ್ರೆಸ್ ಅವರ ಗ್ಯಾರಂಟಿಗೆ ಎಸ್‌ಸಿ-ಎಸ್‌ಟಿ ಜನ ವೋಟ್ ಹಾಕಿಲ್ಲ. ಎಸ್‌ಸಿಪಿ-ಟಿಎಸ್‌ಪಿ ಹಣವನ್ನು ಗ್ಯಾರಂಟಿಗೆ ಬಳಕೆ ಮಾಡ್ತಿದ್ದಾರೆ. ಬಿಜೆಪಿಯ ಅವಧಿಯಲ್ಲಿ ಎಸ್‌ಸಿಪಿ-ಟಿಎಸ್‌ಪಿ ಹಣ ಬೇರೆಯದಕ್ಕೆ ಬಳಕೆ ಮಾಡಿದಾಗ ಕಾಂಗ್ರೆಸ್ ಅವರು ದೊಡ್ಡ ವಿರೋಧ ಮಾಡಿದರು. ಆದರೆ ಇವತ್ತು ಕಾಂಗ್ರೆಸ್ ಅವರೇ ದೊಡ್ಡ ಅನ್ಯಾಯ ಮಾಡುತ್ತಿದ್ದಾರೆ. ಸಮುದಾಯದ ಹಣವನ್ನು ಬೇರೆಯದಕ್ಕೆ ಬಳಕೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಎಸ್‌ಸಿ-ಎಸ್‌ಟಿ ಸಮುದಾಯಕ್ಕೆ ಮೋಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಮೇಲೆ ಇಟ್ಟ ಪ್ರೀತಿ ವಿಶ್ವಾಸ ಇವತ್ತು ಕಳೆದುಕೊಂಡಿದ್ದಾರೆ ಎಂದು ಕಿಡಿಕಾರಿದರು.

    ಸರ್ಕಾರ ಗ್ಯಾರಂಟಿಗೆ ಹಣ ಬಳಕೆ ಮಾಡೋ ನಿರ್ಧಾರ ವಾಪಸ್ ಪಡೆಯಬೇಕು. ಇಲ್ಲದೆ ಹೋದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. ಅದಕ್ಕೂ ಬಗ್ಗದೆ ಹೋದರೆ ಜಿಲ್ಲೆಗಳಲ್ಲಿ ಸಚಿವರು ಬಂದರೆ ಘೇರಾವ್ ಹಾಕೋ ಕೆಲಸ ಮಾಡುತ್ತೇವೆ ಎಂದು ಎಚ್ಚರಿಕೆ ಕೊಟ್ಟರು. ಇದನ್ನೂ ಓದಿ: ನಾನು ಯಾರಿಗೂ ಪ್ರಮಾಣ ಮಾಡ್ಬೇಕಾದ ಅವಶ್ಯಕತೆ ಇಲ್ಲ, ಕೆಲಸ ಮಾಡಿದ್ರೆ ಹಣ ಬಿಡುಗಡೆ ಆಗುತ್ತೆ, ಇಲ್ಲ ಅಂದ್ರೆ ಹಣ ಇಲ್ಲ: ಡಿಕೆಶಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ – ಎಸ್ಟಿ ಅನುದಾನ ಬಳಕೆ; ಸಂಸತ್‌ನಲ್ಲಿ ಬಿಜೆಪಿ ದಲಿತ ಸಂಸದರ ಪ್ರತಿಭಟನೆ

    ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ – ಎಸ್ಟಿ ಅನುದಾನ ಬಳಕೆ; ಸಂಸತ್‌ನಲ್ಲಿ ಬಿಜೆಪಿ ದಲಿತ ಸಂಸದರ ಪ್ರತಿಭಟನೆ

    ನವದೆಹಲಿ: ಕಾಂಗ್ರೆಸ್ (Congress) ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ (Congress Guarantee) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ (SC-ST) ಅಭಿವೃದ್ಧಿಗೆ ಮೀಸಲಿಟ್ಟ ಹಣ ಬಳಿಕೆ‌ ಖಂಡಿಸಿ ಬಿಜೆಪಿ ಸಂಸದರು ಪ್ರತಿಭಟನೆ ನಡೆಸಿದರು. ಸಂಸತ್‌ನಲ್ಲಿರುವ ಗಾಂಧಿ ಪ್ರತಿಮೆ ಬಳಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ದಲಿತ ಸಂಸದರು ಪ್ರತಿಭಟನೆ ನಡೆಸಿದರು.

    ಪ್ರತಿಭಟನೆಯಲ್ಲಿ ರಾಜ್ಯ ಸಂಸದರಾದ ಮುನಿಸ್ವಾಮಿ, ಉಮೇಶ್ ಜಾಧವ್, ದೇವೇಂದ್ರಪ್ಪ, ಅಮರೇಶ ನಾಯಕ್ ಭಾಗಿಯಾಗಿದ್ದರು. ಇದೇ ವೇಳೆ ಹಲವು ರಾಜ್ಯಗಳ ಎಸ್ಸಿ-ಎಸ್ಟಿ ಸಮುದಾಯದ ಸಂಸದರು ಭಾಗಿಯಾಗಿ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು. ಇದನ್ನೂ ಓದಿ: ಸಿದ್ದರಾಮಯ್ಯರಿಂದ ದಲಿತರಿಗೆ ಮಹಾ ಮೋಸ- ಕಾಂಗ್ರೆಸ್ ಪಕ್ಷ ವಂಚಕರ ಸಂತೆ: ಛಲವಾದಿ ನಾರಾಯಣಸ್ವಾಮಿ

     

    ಪ್ರತಿಭಟನೆ ಬಳಿಕ ಮಾತನಾಡಿದ ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್, ಅಹಿಂದ ಹೆಸರಿನಲ್ಲಿ ದಲಿತರ ಉದ್ಧಾರ ಮಾಡುವುದಾಗಿ ಹೇಳಿದ ಸಿದ್ದರಾಮಯ್ಯ ಅವರು ಎಸ್ಸಿ ಎಸ್ಟಿಗಳಿಗೆ ಅನ್ಯಾಯ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಅನುದಾನ ಹೊಂದಿಸಲು ವಿಫಲವಾಗಿ ದಲಿತ ಅಭಿವೃದ್ಧಿಗೆ ಇಟ್ಟ ಹಣವನ್ನು ಬಳಕೆಗೆ ನಿರ್ಧರಿಸಿದೆ. ಇದರ ಪರಿಣಾಮವಾಗಿ ಎಸ್ಸಿ ಎಸ್ಟಿಗೆ ಅಭಿವೃದ್ಧಿ ಕೊರತೆಯಾಗಲಿದೆ. ಈ ಹಣ ವಾಪಸ್ ಪಡೆಯಬಾರದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

    ಸಂಸದ ಮುನಿಸ್ವಾಮಿ ಮಾತನಾಡಿ, ದಲಿತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಟೀಂ ದಲಿತರಿಗೆ ಮೀಸಲಿಟ್ಟ ಹಣ ಬಳಕೆ ‌ಮಾಡುತ್ತಿದೆ.‌ ಗ್ಯಾರಂಟಿಗೆ ಬಳಕೆ ಮಾಡುತ್ತಿದೆ. ಈ ಮೂಲಕ ದಲಿತರಿಗೆ ಅವಮಾನ ಮಾಡುತ್ತಿದೆ. ಸರ್ಕಾರದ ನಿರ್ಧಾರದಿಂದ ದಲಿತರ ಕೇರಿಗಳ ಅಭಿವೃದ್ಧಿ ಕುಂಠಿತಗೊಳ್ಳಲಿದೆ. ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ಕೊಡಬೇಕು. ಮತ್ತೆ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಅಣ್ಣ ಹೇಳಿದ್ದಾರೆ ತಮ್ಮ ಕೇಳುತ್ತಿರಬೇಕು: ಹೆಚ್‌ಡಿಕೆಗೆ ಡಿಕೆಶಿ ಟಾಂಗ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • SC-ST ಗ್ರಾಹಕರಿಗೆ ಉಚಿತ ವಿದ್ಯುತ್‌ ಅನುಷ್ಠಾನಕ್ಕೆ ಹೊಸ ಆ್ಯಪ್‌

    SC-ST ಗ್ರಾಹಕರಿಗೆ ಉಚಿತ ವಿದ್ಯುತ್‌ ಅನುಷ್ಠಾನಕ್ಕೆ ಹೊಸ ಆ್ಯಪ್‌

    ಬೆಂಗಳೂರು: ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ಮಾಸಿಕ 75 ಯುನಿಟ್‌ ಗೃಹ ಬಳಕೆಯ ʼಅಮೃತ ಜ್ಯೋತಿʼ ಉಚಿತ ವಿದ್ಯುತ್‌ ಯೋಜನೆಯನ್ನು ರದ್ದುಪಡಿಸಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.

    ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಗಸ್ಟ್‌ 24, 2022 ರಂದು ಹೊರಡಿಸಿದ್ದ ಮಾರ್ಗಸೂಚಿ ಸುತ್ತೋಲೆಯನ್ನು ಇ-ಆಡಳಿತ ಇಲಾಖೆಯು ಭಾಗಶ: ಪರಿಷ್ಕರಿಸಿದ್ದರಿಂದ ಸುತ್ತೋಲೆಯನ್ನು ಸೆಪ್ಟೆಂಬರ್‌ 3, 2022 ರಂದು ಹಿಂಪಡೆಯಲಾಗಿದೆಯೇ ಹೊರತು, ಯೋಜನೆಯನ್ನು ರದ್ದುಪಡಿಸಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ರಮ್ಯಾ ಹೇಳಿದ್ದು ನಿಜ: ಶಾಸಕ ಅರವಿಂದ ಲಿಂಬಾವಳಿ

    ಬಿಪಿಎಲ್‌ ಕುಟುಂಬದ ಎಸ್ಸಿ-ಎಸ್ಟಿ ಗ್ರಾಹಕರಿಗೆ 75 ಯುನಿಟ್‌ವರೆಗೆ ಉಚಿತ ವಿದ್ಯುತ್‌ ನೀಡುವ ಅಮೃತ ಜ್ಯೋತಿ ವಿದ್ಯುತ್‌ ಯೋಜನೆಯನ್ನು ರಾಜ್ಯ ಸರ್ಕಾರ ಮೇ 18, 2022 ರಂದು ರಾಜ್ಯಾದ್ಯಂತ ಜಾರಿಗೆ ತಂದಿತ್ತು. ಈ ಯೋಜನೆಯ ಪ್ರಯೋಜನವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಿಪಿಎಲ್‌ ಕುಟುಂಬಗಳಿಗೆ ಸುಲಭ ಮತ್ತು ಸುಲಲಿತವಾಗಿ ಅನುಷ್ಠಾನಗೊಳಿಸಲು ಇ-ಆಡಳಿತ ಇಲಾಖೆಯು ಹೊಸ ಆ್ಯಪ್‌ ಒಂದನ್ನು ಅಭಿವೃದ್ಧಿಪಡಿಸುತ್ತಿದೆ.

    ಈ ಯೋಜನೆಯನ್ನು ರದ್ದುಗೊಳಿಸಲಾಗಿದೆ ಎಂಬ ತಪ್ಪು ಮಾಹಿತಿಯು ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿದೆ. ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಬೆಸ್ಕಾಂ ತಿಳಿಸಿದೆ. ಇದನ್ನೂ ಓದಿ: ಮೈಸೂರು ಮೇಯರ್, ಉಪ ಮೇಯರ್ ಎಲೆಕ್ಷನ್: ಬಿಜೆಪಿ ಬಾಯಿಗೆ ಬಿತ್ತು ಡಬಲ್ ಲಡ್ಡು!

    ಈ ಯೋಜನೆಯ ಪ್ರಯೋಜನ ಸುಮಾರು 39 ಲಕ್ಷ ಬಿಪಿಎಲ್‌ ಕುಟುಂಬಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಗ್ರಾಹಕರಿಗೆ ಸಿಗಲಿದ್ದು, ಈಗಾಗಲೇ 4 ಲಕ್ಷ ಫಲಾನುಭವಿಗಳನ್ನು ಗುರುತಿಸಲಾಗಿದೆ. ಮೇ ಮತ್ತು ಜೂನ್‌ ತಿಂಗಳ ವಿದ್ಯುತ್‌ ಬಿಲ್‌ ಮೊತ್ತವನ್ನು ಸುಮಾರು 15,000 ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮೂಲಕ ಮರುಪಾವತಿಸಲಾಗಿದೆ ಎಂದು ಬೆಸ್ಕಾಂ ತಿಳಿಸಿದೆ. ಈ ಯೋಜನೆಯನ್ನು ಇ-ಆಡಳಿತ ಇಲಾಖೆಯ ಸಹಯೋಗದೊಂದಿಗೆ ಡಿಬಿಟಿ ವ್ಯವಸ್ಥೆಯಡಿ ಜಾರಿಗೊಳಿಸಲಾಗಿದೆ. ಫಲಾನುಭವಿ ಗ್ರಾಹಕರಿಗೆ ತಾವು ಪಾವತಿಸಿದ ಒಟ್ಟು ವಿದ್ಯುತ್‌ ಬಿಲ್ಲಿನ ಮೊತ್ತದಲ್ಲಿ 75 ಯುನಿಟ್‌ಗಳವರೆಗಿನ ವಿದ್ಯುತ್‌ ಶುಲ್ಕದ ಮೊತ್ತವನ್ನು ಅವರ ಬ್ಯಾಂಕ್‌ ಖಾತೆಗೆ ನೇರ ವರ್ಗಾವಣೆ ಮಾಡಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • BPL ಕಾರ್ಡ್‌ ಹೊಂದಿರುವ ಎಸ್‌ಸಿ, ಎಸ್‌ಟಿಗಳಿಗೆ ಗೃಹ ಬಳಕೆಗೆ 75 ಯುನಿಟ್‌ ಉಚಿತ ವಿದ್ಯುತ್ – ಆದೇಶ ಹಿಂಪಡೆದ ಸರ್ಕಾರ

    BPL ಕಾರ್ಡ್‌ ಹೊಂದಿರುವ ಎಸ್‌ಸಿ, ಎಸ್‌ಟಿಗಳಿಗೆ ಗೃಹ ಬಳಕೆಗೆ 75 ಯುನಿಟ್‌ ಉಚಿತ ವಿದ್ಯುತ್ – ಆದೇಶ ಹಿಂಪಡೆದ ಸರ್ಕಾರ

    ಬೆಂಗಳೂರು: ಬಿಪಿಎಲ್‌ ಕಾರ್ಡ್‌ ಹೊಂದಿರುವ ಎಸ್‌ಸಿ, ಎಸ್‌ಟಿ ಕುಟುಂಬಗಳ ಗೃಹ ಬಳಕೆಗೆ ಮಾಸಿಕ 75 ಯುನಿಟ್‌ ಉಚಿತ ವಿದ್ಯುತ್‌ ನೀಡುವ ಸಂಬಂಧ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.

    ಹೊರಡಿಸಿದ್ದ ಆದೇಶವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಹಿಂಪಡೆದಿದೆ. ಆದರೆ ಯಾವ ಕಾರಣಕ್ಕೆ ಆದೇಶ ವಾಪಸ್‌ ಪಡೆಯಲಾಗಿದೆ ಎಂಬ ಬಗ್ಗೆ ಸ್ಪಷ್ಟ ಕಾರಣ ನೀಡಿಲ್ಲ. ಇದನ್ನೂ ಓದಿ: 2A ಮೀಸಲಾತಿ ಹೋರಾಟಕ್ಕೆ ಬೆಂಬಲ – ಲಿಂಗಾಯತ ಶಾಸಕರು ಸಿಎಂ ಮೇಲೆ ಒತ್ತಡ ತರ್ತೀವಿ ಎಂದ ಕತ್ತಿ

    ಗೃಹ ಬಳಕೆಗೆ 75 ಯುನಿಟ್‌ ಉಚಿತ ವಿದ್ಯುತ್‌ ನೀಡುವ ಬಗ್ಗೆ ಆಗಸ್ಟ್ 28 ರಂದು ಇಂಧನ ಇಲಾಖೆ ಆದೇಶ ಹೊರಡಿಸಿತ್ತು. SC, ST ಕುಟುಂಬಗಳಿಗೆ ಮೊದಲ 75 ಯುನಿಟ್ ವಿದ್ಯುತ್ ಉಚಿತ ಒದಗಿಸಲಾಗುವುದು ಎಂದು ಘೋಷಣೆಯಲ್ಲಿ ತಿಳಿಸಿತ್ತು.

    ಆದರೆ ಆದೇಶ ಹೊರಡಿಸಿ 10 ದಿನಗಳಲ್ಲಿ ಸರ್ಕಾರ ಆದೇಶವನ್ನು ವಾಪಸ್‌ ಪಡೆದುಕೊಂಡಿದೆ. ಇದನ್ನೂ ಓದಿ: ಡಿಸಿಪಿ ಕಾರಿನ ಮೇಲೆ ಬಿತ್ತು ಬೃಹತ್‌ ಕೊಂಬೆ

    Live Tv
    [brid partner=56869869 player=32851 video=960834 autoplay=true]

  • SC/ST ಬಡ್ತಿ ಮೀಸಲಾತಿ: ಮಾನದಂಡ ರೂಪಿಸಲು ಸುಪ್ರೀಂ ನಿರಾಕರಣೆ

    SC/ST ಬಡ್ತಿ ಮೀಸಲಾತಿ: ಮಾನದಂಡ ರೂಪಿಸಲು ಸುಪ್ರೀಂ ನಿರಾಕರಣೆ

    ನವದೆಹಲಿ: ಸರ್ಕಾರಿ ಉದ್ಯೋಗಗಳಲ್ಲಿ ಬಡ್ತಿ ನೀಡುವಾಗ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ನೌಕರರಿಗೆ ಮೀಸಲಾತಿ ನಿರ್ಧರಿಸಲು ಯಾವುದೇ ಮಾನದಂಡವನ್ನು ರೂಪಿಸಲು ನ್ಯಾಯಾಲಯಕ್ಕೆ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ.

    ನ್ಯಾಯಮೂರ್ತಿಗಳಾದ ಎಲ್‌.ನಾಗೇಶ್ವರರಾವ್‌, ಸಂಜೀವ್‌ ಖನ್ನಾ ಹಾಗೂ ಬಿ.ಆರ್‌.ಗವಾಯಿ ಅವರಿರುವ ನ್ಯಾಯಪೀಠವು ಎಸ್‌ಸಿ/ಎಸ್‌ಟಿ ಬಡ್ತಿ ಮೀಸಲಾತಿ ಕುರಿತು ಇಂದು ತೀರ್ಪು ಪ್ರಕಟಿಸಿತು. ಬಡ್ತಿಯಲ್ಲಿ ಮೀಸಲಾತಿ ಜಾರಿಗೊಳಿಸುವಾಗ ಎಸ್‌ಸಿ/ಎಸ್‌ಟಿ ಜನರ ಪ್ರಾತಿನಿಧ್ಯವನ್ನು ನಿರ್ಧರಿಸುವ ಕೇಂದ್ರ ಮತ್ತು ರಾಜ್ಯಗಳಿಂದ ಪ್ರಮಾಣೀಕರಿಸಬಹುದಾದ ದತ್ತಾಂಶವನ್ನು ಸಂಗ್ರಹಿಸುವ ಅಗತ್ಯವನ್ನು ತೆಗೆದುಹಾಕುವ ಕೇಂದ್ರದ ಮನವಿಯನ್ನು ಸುಪ್ರೀಂ ತಿರಸ್ಕರಿಸಿದೆ. ಇದನ್ನೂ ಓದಿ: ಸಮಾಜವಾದಿ ಪಕ್ಷದವರು ಜಿನ್ನಾನ ಆರಾಧಕರು: ಯೋಗಿ ಆದಿತ್ಯನಾಥ್‌ ಟೀಕೆ

    ಪ್ರಾತಿನಿಧ್ಯದ ಅಸಮರ್ಪಕತೆಯನ್ನು ನಿರ್ಧರಿಸಲು ನಾವು ಯಾವುದೇ ಅಳತೆಗೋಲನ್ನು ರೂಪಿಸಲು ಸಾಧ್ಯವಿಲ್ಲ. ಎಸ್‌ಸಿ/ಎಸ್‌ಟಿ ಪ್ರಾತಿನಿಧ್ಯಕ್ಕೆ ಸಂಬಂಧಿಸಿದಂತೆ ಪ್ರಮಾಣೀಕರಿಸಬಹುದಾದ ಡೇಟಾವನ್ನು ಸಂಗ್ರಹಿಸುವುದು ಸಂಬಂಧಪಟ್ಟ ರಾಜ್ಯಗಳ ಹೊಣೆಗಾರಿಕೆ. ಎಸ್‌ಸಿ/ಎಸ್‌ಟಿ ಪ್ರಾತಿನಿಧ್ಯದ ಅಸಮರ್ಪಕತೆಯನ್ನು ನಿರ್ಧರಿಸುವುದಕ್ಕಾಗಿ ಮಾನದಂಡ ನಿರ್ಣಯಿಸಲು ಆಯಾ ರಾಜ್ಯಗಳ ವಿವೇಚನೆಗೆ ಬಿಟ್ಟಿದ್ದೇವೆ ಎಂದು ನ್ಯಾಯಾಲಯ ತಿಳಿಸಿದೆ.

    ಎಂ.ನಾಗರಾಜ್‌ ವರ್ಸಸ್‌ ಭಾರತ ಸರ್ಕಾರ ಪ್ರಕರಣಕ್ಕೆ ಸಂಬಂಧಿಸಿದ 2006ರ ತೀರ್ಪಿನ ಅನ್ವಯ ಎಸ್‌ಸಿ/ಎಸ್‌ಟಿ ಪ್ರಾತಿನಿಧ್ಯದ ಕುರಿತು ನಿರ್ಧರಣಾತ್ಮಕ ದತ್ತಾಂಶ ಸಂಗ್ರಹಿಸುವುದು ಸಂಬಂಧಪಟ್ಟ ರಾಜ್ಯ ಸರ್ಕಾರಗಳ ಹೊಣೆಗಾರಿಕೆ ಎಂದು ಪೀಠ ಒತ್ತಿ ಹೇಳಿದೆ.

    ಎಸ್‌ಸಿ-ಎಸ್‌ಟಿ ಅಭ್ಯರ್ಥಿಗಳ ಬಡ್ತಿ ಮೀಸಲಾತಿ ಷರತ್ತುಗಳನ್ನು ದುರ್ಬಲಗೊಳಿಸಬೇಡಿ. ಮೀಸಲಾತಿ ನೀಡುವ ಮುನ್ನ ರಾಜ್ಯವು ಪರಿಮಾಣಾತ್ಮಕ ಡೇಟಾ ಸಂಗ್ರಹಿಸಬೇಕು. ಪ್ರಾತಿನಿಧ್ಯದ ಅಸಮರ್ಪಕತೆಯ ಮೌಲ್ಯಮಾಪನದ ಜೊತೆಗೆ ಪರಿಮಾಣಾತ್ಮಕ ದತ್ತಾಂಶ ಸಂಗ್ರಹವೂ ಅತ್ಯಗತ್ಯ. ಮೀಸಲಾತಿ ನೀಡುವ ಮುನ್ನ ಉನ್ನತ ಹುದ್ದೆಗಳ ಪ್ರಾತಿನಿಧ್ಯದ ಮಾಹಿತಿ ಸಂಗ್ರಹ ಅಗತ್ಯ. ಪ್ರಾತಿನಿಧ್ಯವನ್ನು ನಿಗದಿತ ಅವಧಿಯಲ್ಲಿ ಮೌಲ್ಯಮಾಪನ ಮಾಡಬೇಕು. ಅವಧಿ ಎಷ್ಟು ಎಂಬುದನ್ನು ಕೇಂದ್ರ ಸರ್ಕಾರವೇ ನಿರ್ಧರಿಸಬೇಕು ಎಂದು ಸುಪ್ರೀಂ ಕೋರ್ಟ್‌ ತಿಳಿಸಿದೆ. ಇದನ್ನೂ ಓದಿ: ಅಮಾನತು ಆದೇಶ ರದ್ದು – ಮಹಾರಾಷ್ಟ್ರದ 12 ಬಿಜೆಪಿ ಶಾಸಕರಿಗೆ ಗೆಲುವು

    ಬಡ್ತಿ ಮೀಸಲಾತಿ ಕುರಿತು ಹಳೆಯ ಪ್ರಕರಣ ಪರಿಶೀಲಿಸುವುದಿಲ್ಲ. ಬಡ್ತಿ ಮೀಸಲಾತಿ ಜಾರಿ ಬಗ್ಗೆ ರಾಜ್ಯಗಳು ನಿರ್ಧರಿಸಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿತ್ತು.

    2021ರ ಅಕ್ಟೋಬರ್ 26ರಂದು ಕಾಯ್ದಿರಿಸಿದ್ದ ತೀರ್ಪು ಇಂದು ಪ್ರಕಟವಾಗಿದೆ. ಗ್ರೂಪ್‌ ʻಎʼ ನಂತಹ ಉನ್ನತ ಹುದ್ದೆಗೇರುವುದು ಎಸ್‌ಸಿ ಹಾಗೂ ಎಸ್‌ಟಿ ನೌಕರರಿಗೆ ಬಹಳ ಕಷ್ಟ. ಇಂತಹ ಉನ್ನತ ಹುದ್ದೆಗಳಿಗೆ ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ನೌಕರರನ್ನು ಭರ್ತಿ ಮಾಡುವುದಕ್ಕೆ ಅನುಕೂಲ ಕಲ್ಪಿಸುವಂತಹ ವಾಸ್ತವದಿಂದ ಕೂಡಿದ ಆಧಾರವನ್ನು ಸುಪ್ರೀಂ ಕೋರ್ಟ್‌ ಒದಗಿಸಬೇಕು ಎಂದು ಅಕ್ಟೋಬರ್‌ ವಿಚಾರಣೆ ವೇಳೆ ಅಟಾರ್ನಿ ಜನರಲ್‌ ಕೆ.ಕೆ.ವೇಣುಗೋಪಾಲ್‌ ಅವರು ನ್ಯಾಯಪೀಠಕ್ಕೆ ಮನವಿ ಮಾಡಿದ್ದರು. ಇದನ್ನೂ ಓದಿ: ಸ್ಟೂಡೆಂಟ್ ಪೊಲೀಸ್ ಕೆಡೆಟ್‌ನಲ್ಲಿ ಹಿಜಬ್‌ ಧರಿಸಲು ಅವಕಾಶವಿಲ್ಲ: ಕೇರಳ ಸರ್ಕಾರ

  • 5 ವರ್ಷದಿಂದ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡದ್ದಕ್ಕೆ ಪ್ರತಿಭಟನೆ

    5 ವರ್ಷದಿಂದ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡದ್ದಕ್ಕೆ ಪ್ರತಿಭಟನೆ

    ಕೋಲಾರ: ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ನೀಡಬೇಕಾಗಿದ್ದ ವಿದ್ಯಾರ್ಥಿ ವೇತನವನ್ನು ನೀಡದ್ದಕ್ಕೆ ಆಕ್ರೋಶಗೊಂಡ ದಲಿತ ಸಂಘಟನಾ ಸಮಿತಿ ಕಾರ್ಯಕರ್ತರು ಇಂದು ನಗರದ ಜಿಲ್ಲಾ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದ್ದಾರೆ.

    ದಲಿತಾ ಸಂಘಟನಾ ಸಮಿತಿ ಕಾರ್ಯಕರ್ತರು ಇಂದು ಕೋಲಾರ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಎದುರು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ವಿದ್ಯಾರ್ಥಿ ವೇತನ ನುಂಗಿ ಹಾಕಿದರ ವಿರುದ್ಧ ಪ್ರತಿಭಟನೆ ನಡೆಸಿದರು.

    ಜಿಲ್ಲೆಯಲ್ಲಿ ಕಳೆದ 5 ವರ್ಷಗಳಿಂದ ಯಾವುದೇ ಎಸ್‍ಎಸ್‍ಎಲ್‍ಸಿ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಮಂಜೂರು ಮಾಡಿಲ್ಲ. ಸರ್ಕಾರ ಮಂಜೂರು ಮಾಡಿದ ವಿದ್ಯಾರ್ಥಿ ವೇತನವನ್ನು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೇರಿ ನುಂಗಿ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಅಧಿಕಾರಿಗಳು ಬಡ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಜೊತೆ ಆಟವಾಡುತ್ತಿದ್ದು, ವಿದ್ಯಾಭ್ಯಾಸಕ್ಕೆ ತೊಂದರೆ ಮಾಡುತ್ತಿದ್ದಾರೆ. ವಿದ್ಯಾರ್ಥಿ ವೇತನ ನುಂಗಿಹಾಕಿದ ಅಧಿಕಾರಿಗಳ ವಿರುದ್ಧ ತನಿಖೆ ಕೈಗೊಂಡು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.