Tag: ಎಸ್.ಎಲ್.ಬೈರಪ್ಪ

  • ಎಸ್.ಎಂ. ಕೃಷ್ಣ, ಎಸ್‍ಎಲ್ ಭೈರಪ್ಪ, ಸುಧಾಮೂರ್ತಿ ಸೇರಿ ರಾಜ್ಯದ 8 ಮಂದಿಗೆ ಪದ್ಮ ಪ್ರಶಸ್ತಿ

    ಎಸ್.ಎಂ. ಕೃಷ್ಣ, ಎಸ್‍ಎಲ್ ಭೈರಪ್ಪ, ಸುಧಾಮೂರ್ತಿ ಸೇರಿ ರಾಜ್ಯದ 8 ಮಂದಿಗೆ ಪದ್ಮ ಪ್ರಶಸ್ತಿ

    ಬೆಂಗಳೂರು: ಎಸ್.ಎಂ. ಕೃಷ್ಣ ಅವರಿಗೆ ಪದ್ಮವಿಭೂಷಣ, ಎಸ್‍ಎಲ್ ಭೈರಪ್ಪ (SL Bhyrappa), ಸುಧಾಮೂರ್ತಿ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಲಭಿಸಿದೆ.

    2023ನೇ ಸಾಲಿನ ಪದ್ಮಶ್ರೀ, ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಕೇಂದ್ರ ಸರ್ಕಾರ ಬುಧವಾರ ಪ್ರಕಟಿಸಿದೆ. ಈ ಬಾರಿ ರಾಜ್ಯದ 8 ಮಂದಿಗೆ ಪದ್ಮ ಪ್ರಶಸ್ತಿ ಲಭಿಸಿದೆ. ಒಬ್ಬರಿಗೆ ಪದ್ಮವಿಭೂಷಣ, ಇಬ್ಬರಿಗೆ ಪದ್ಮಭೂಷಣ, 5 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಸಿಕ್ಕಿದೆ. ಇದನ್ನೂ ಓದಿ: ರಾಷ್ಟ್ರಪತಿ ಏನು ಬೇಡ ನಾನು ನಮ್ಮ ಊರಾಗ ಆರಾಮ ರಾಣಿ ಹಂಗೆ ಇದ್ದೀನಿ: ಸುಧಾಮೂರ್ತಿ

    ಖಾದರ್ ವಲ್ಲಿ ದೂದೇಕುಲ (ವಿಜ್ಞಾನ ಮತ್ತು ಇಂಜಿನಿಯರಿಂಗ್), ರಾಣಿ ಮಾಚಯ್ಯ (ಕಲೆ), ನಾಡೋಜ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ (ಕಲೆ), ಐ ಶಾ ರಶೀದ್ ಅಹಮದ್ ಕ್ವಾದ್ರಿ (ಕಲೆ), ಸುಬ್ಬರಾಮನ್ (ಪುರಾತತ್ವ ಶಾಸ್ತ್ರ) ಅವರಿಗೆ ಪದ್ಮ ಪ್ರಶಸ್ತಿ ಲಭಿಸಿದೆ. ಇದನ್ನೂ ಓದಿ: ರಾಜ್ಯದ 20 ಪೊಲೀಸರಿಗೆ ರಾಷ್ಟ್ರಪತಿ ಪದಕ – ಯಾರಿಗೆ ಯಾವ ಪದಕ ಸಿಕ್ಕಿದೆ?

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಇಂದಿನಿಂದ ಮೈಸೂರು ದಸರಾ ವೈಭವ – ಎಸ್.ಎಲ್ ಬೈರಪ್ಪರಿಂದ ಉತ್ಸವಕ್ಕೆ ಚಾಲನೆ

    ಇಂದಿನಿಂದ ಮೈಸೂರು ದಸರಾ ವೈಭವ – ಎಸ್.ಎಲ್ ಬೈರಪ್ಪರಿಂದ ಉತ್ಸವಕ್ಕೆ ಚಾಲನೆ

    ಮೈಸೂರು: ಇಂದಿನಿಂದ ಹತ್ತು ದಿನಗಳ ಕಾಲ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ಷರಶಃ ಧಾರ್ಮಿಕ, ಪಾರಂರಿಕ, ಸಾಂಸ್ಕೃತಿಕ ಹಾಗೂ ಮನರಂಜನೆ ಪೂರಿತ ವಾತಾವರಣ ನಿರ್ಮಾಣವಾಗಲಿದೆ. ಇದಕ್ಕೆ ಕಾರಣ ಇಂದಿನಿಂದ ಆರಂಭವಾಗುವ ದಸರಾ ಮಹೋತ್ಸವ.

    ವಿಶ್ವವನ್ನೇ ತನ್ನತ್ತ ಸೆಳೆದುಕೊಂಡು ತನ್ನ ವೈವಿಧ್ಯಮಯವಾದ ಆಚರಣೆಗಳನ್ನು ಜಗತ್ತಿಗೆ ತೋರ್ಪಡಿಸುವ ಆಚರಣೆ ಅಂದರೆ ಅದೇ ಮೈಸೂರು ದಸರಾ ಮಹೋತ್ಸವ. ಇಂದಿನಿಂದ ಮೈಸೂರಿನಲ್ಲಿ ದಸರಾ ಮೆರಗು ತುಂಬಲಿದೆ. ಈ ಮೆರಗಿಗೆ ಸಾಹಿತಿ ಎಸ್.ಎಲ್.ಭೈರಪ್ಪ ಅವರು ಇಂದು ಬೆಳಗ್ಗೆ 9.39ರ ವೃಶ್ಚಿಕ ಲಗ್ನದಲ್ಲಿ ಚಾಮುಂಡೇಶ್ವರಿ ಬೆಟ್ಟದಲ್ಲಿ ನಾಡ ಅದಿ ದೇವತೆ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಸಂಪುಟದ ಸಚಿವರುಗಳು, ಸಂಸದರು, ಶಾಸಕರು ಸೇರಿಂದತೆ ಇತರ ಗಣ್ಯರು ಭಾಗವಹಿಸಲಿದ್ದಾರೆ.

    ಅರಮನೆಯಲ್ಲಿ ರಾಜಪರಂಪರೆಯ ನವರಾತ್ರಿ ಉತ್ಸವಕ್ಕೂ ಇವತ್ತು ಚಾಲನೆ ಸಿಗಲಿದೆ. ಬೆಳಗ್ಗೆ 5:10 ರಿಂದ 5:30ರ ನಡುವೆ ರತ್ನಖಚಿತ ಆಸನಕ್ಕೆ ಸಿಂಹ ಜೋಡಣೆ ಮಾಡಲಾಗುತ್ತದೆ. ಬೆಳಗ್ಗೆ 8:05 ರಿಂದ 8:55ರ ನಡುವೆ ಅರಮನೆ ಒಳ ಆವರಣದ ಚಾಮುಂಡಿ ತೊಟ್ಟಿಯಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‍ಗೆ ಕಂಕಣಧಾರಣೆ ಮಾಡಲಾಗುತ್ತದೆ. ಬೆಳಗ್ಗೆ 9:30ಕ್ಕೆ ಅರಮನೆಯ ಸವಾರಿ ತೊಟ್ಟಿಗೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು ಆಗಮಿಸಲಿದ್ದು, ಬೆಳಗ್ಗೆ 9:50 ರಿಂದ 10:35 ಕಳಸ ಪೂಜೆ ನೆರವೆರಿಸಲಾಗುತ್ತದೆ. ನಂತರ ಸಿಂಹಾಸನರೋಹಣ ಮಾಡುವ ಮೂಲಕ ಖಾಸಗಿ ದರ್ಬಾರ್ ನಡೆಯಲಿದೆ. ಬಳಿಕ ಚಾಮುಂಡಿ ತೊಟ್ಟಿಯಿಂದ ಕನ್ನಡಿ ತೊಟ್ಟಿಗೆ ಚಾಮುಂಡೇಶ್ವರಿ ತರಲಾಗುವುದು. ಈ ಮೂಲಕ ಮೊದಲ ದಿನದ ಅರಮನೆ ಕಾರ್ಯಕ್ರಮ ಮುಕ್ತಾಯವಾಗುತ್ತದೆ.

    ಇಂದಿನಿಂದ 10 ದಿನಗಳ ಕಾಲ ಮೈಸೂರು ವಿದ್ಯುತ್ ಅಲಂಕಾರದಿಂದ ಕಂಗೊಳಿಸುತ್ತಿರುತ್ತದೆ. ಅರಮನೆ ಸೇರಿದಂತೆ ಐತಿಹಾಸಿಕ ಕಟ್ಟಡಗಳು, ಸರ್ಕಾರಿ ಕಟ್ಟಡಗಳು ಹಾಗೂ ಮೈಸೂರಿನ ಬಹುಪಾಲು ರಸ್ತೆಗಳು ವಿದ್ಯುತ್ ದೀಪಗಳಿಂದ ಜಗಮಗಿಸುತ್ತಿರುತ್ತವೆ. ಜೊತೆಗೆ ಕುಸ್ತಿ, ಆಹಾರ ಮೇಳ, ಫಲಪುಷ್ಪ ಪ್ರದರ್ಶನ, ಸಾಹಸ ಕ್ರೀಡೆಗಳು, ಚಲನಚಿತ್ರೋತ್ಸವ, ವಸ್ತು ಪ್ರದರ್ಶನ, ಪುಸ್ತಕ ಮೇಳ, ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ದಸರಾಗೆ ಮತ್ತಷ್ಟು ರಂಗು ತುಂಬಲಿವೆ.