Tag: ಎಸ್. ಜೈಶಂಕರ್

  • ಹಿಂದಿಯನ್ನು ವಿಶ್ವಸಂಸ್ಥೆಯ ಅಧಿಕೃತ ಭಾಷೆಯನ್ನಾಗಿಸಲು ಪ್ರಯತ್ನಿಸಲಾಗುತ್ತಿದೆ: ಎಸ್. ಜೈಶಂಕರ್

    ಹಿಂದಿಯನ್ನು ವಿಶ್ವಸಂಸ್ಥೆಯ ಅಧಿಕೃತ ಭಾಷೆಯನ್ನಾಗಿಸಲು ಪ್ರಯತ್ನಿಸಲಾಗುತ್ತಿದೆ: ಎಸ್. ಜೈಶಂಕರ್

    ನವದೆಹಲಿ: ಹಿಂದಿಯನ್ನು ಅಧಿಕೃತ ಭಾಷೆಯನ್ನಾಗಿ ಗುರುತಿಸಲು ವಿಶ್ವಸಂಸ್ಥೆಯಲ್ಲಿ (United Nations) ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಮತ್ತು ಈ ನಿಟ್ಟಿನಲ್ಲಿ ಪ್ರಗತಿ ಸಾಧಿಸಲಾಗುತ್ತಿದೆ. ಆದರೆ ಇದಕ್ಕಾಗಿ ಕೊಂಚ ಸಮಯ ಬೇಕಾಗುತ್ತದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ (S. Jaishankar) ಗುರುವಾರ ಹೇಳಿದ್ದಾರೆ.

    ದೆಹಲಿಯಲ್ಲಿ (Delhi) ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಎಸ್. ಜೈಶಂಕರ್ ಅವರು, ಮುಂದಿನ ವರ್ಷ ಫೆಬ್ರವರಿ 15-17 ರವರೆಗೆ ಫಿಜಿಯ ನಾಡಿನಲ್ಲಿ 12ನೇ ವಿಶ್ವ ಹಿಂದಿ ಸಮ್ಮೇಳನವನ್ನು (World Hindi Conference) ಆಯೋಜಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಮೆರಿಕದಲ್ಲಿ ಭೀಕರ ರಸ್ತೆ ಅಪಘಾತ – ಮೂವರು ಭಾರತೀಯರು ಸೇರಿದಂತೆ 20 ಮಂದಿ ಸಾವು

    ಯುನೈಟೆಡ್ ನೆಷನ್‍ನ ಅಧಿಕೃತ ಭಾಷೆಗಳಲ್ಲಿ ಹಿಂದಿಯನ್ನು ಸೇರಿಸುವ ಪ್ರಯತ್ನಗಳು ನಡೆಯುತ್ತಿದೆ. ಹಿಂದಿಯನ್ನು ಯುನೆಸ್ಕೋದಲ್ಲಿ ಈಗಾಗಲೇ ಬಳಸಲಾಗುತ್ತಿದೆ ಎಂಬ ವಿಚಾರ ಎಲ್ಲರಿಗೂ ತಿಳಿದಿದೆ. ಯುನೆಸ್ಕೋ ಪ್ರಧಾನ ಕಛೇರಿಯಲ್ಲಿ ಹಿಂದಿ ಭಾಷೆ ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ (ಎಂಒಯು) ಒಪ್ಪಂದ ಮಾಡಿಕೊಂಡಿದ್ದೇವೆ. ಸೋಶಿಯಲ್ ಮೀಡಿಯಾದ ಮತ್ತು ಸುದ್ದಿಪತ್ರಗಳಲ್ಲಿ ಹಿಂದಿಯನ್ನು ಈಗಾಗಲೇ ಬಳಸಲಾಗುತ್ತಿದೆ. ಇದನ್ನು ವಿಸ್ತರಿಸಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಯುನೈಟೆಡ್ ನೆಷನ್‍ನ ಪ್ರಕ್ರಿಯೆಯಲ್ಲಿ ಭಾಷೆಯನ್ನು ಪರಿಚಯಿಸುವುದು ಅಷ್ಟು ಸುಲಭವಲ್ಲ ಎಂದಿದ್ದಾರೆ.

    ಇಂಗ್ಲಿಷ್, ರಷ್ಯನ್, ಸ್ಪ್ಯಾನಿಷ್, ಚೈನೀಸ್, ಅರೇಬಿಕ್ ಮತ್ತು ಫ್ರೆಂಚ್ ಎಂಬ ಆರು ಅಧಿಕೃತ ಭಾಷೆಗಳನ್ನು ಯುಎನ್ ಹೊಂದಿದೆ. ಇದನ್ನೂ ಓದಿ: ‘ಹೆಂಡ್ತಿ ಮಕ್ಳನ್ನು ಬಿಟ್ ಬಂದಿದ್ದೀನಿ, ಸೇಫ್ ಆಗಿ ಮನೆಗೆ ಹೋಗ್ತೀನಾ?’: ಗಂಧದ ಗುಡಿಯಲ್ಲಿ ಕಣ್ಣೀರು ತರಿಸುತ್ತೆ ಅಪ್ಪು ಡೈಲಾಗ್

    Live Tv
    [brid partner=56869869 player=32851 video=960834 autoplay=true]

  • ಗ್ಯಾಂಬಿಯಾ ಮಕ್ಕಳ ಸಾವು ಪ್ರಕರಣ – ಕೆಮ್ಮಿನ ಸಿರಪ್‌ಗಳ ತನಿಖೆಗೆ ಜೈಶಂಕರ್ ಭರವಸೆ

    ಗ್ಯಾಂಬಿಯಾ ಮಕ್ಕಳ ಸಾವು ಪ್ರಕರಣ – ಕೆಮ್ಮಿನ ಸಿರಪ್‌ಗಳ ತನಿಖೆಗೆ ಜೈಶಂಕರ್ ಭರವಸೆ

    ನವದೆಹಲಿ: ಭಾರತದ (India) ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್ ಜೈಶಂಕರ್ (Jaishankar) ಅವರು ಗ್ಯಾಂಬಿಯಾದ (Gambia) ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಮಮಾಡೌ ತಂಗರಾ (Dr. Mamadou Tangara) ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಭಾರತದಲ್ಲಿ ತಯಾರಿಸಲಾದ 4 ಕೆಮ್ಮಿನ ಸಿರಪ್‌ಗಳಿಂದಾಗಿ (Cough Syrup) ಗ್ಯಾಂಬಿಯಾದ 66 ಮಕ್ಕಳು ಸಾವನ್ನಪ್ಪಿರುವ ಬಗ್ಗೆ ಜೈಶಂಕರ್ ಸಂತಾಪ ವ್ಯಕ್ತಪಡಿಸಿದ್ದಾರೆ.

    ಭಾರತದಲ್ಲಿ ತಯಾರಿಸಲಾದ ಕೆಮ್ಮು ಮತ್ತು ಶೀತದ ಸಿರಪ್‌ಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯ ಎಚ್ಚರಿಕೆಯನ್ನು ನೀಡಿ, ಇದನ್ನು ಸೇವಿಸಿದವರಲ್ಲಿ ಮೂತ್ರಪಿಂಡಗಳಲ್ಲಿ ಗಾಯಗಳು ಕಂಡುಬಂದಿದೆ. ಮಾತ್ರವಲ್ಲದೇ ಗ್ಯಾಂಬಿಯಾದ 66 ಮಕ್ಕಳ ಸಾವಿಗೆ ಕಾರಣವಾಗಿದೆ ಎಂದು ತಿಳಿಸಿತ್ತು. ಈ ಬಗ್ಗೆ ಸತ್ಯವನ್ನು ಕಂಡುಹಿಡಿಯಲು ಸಂಬಂಧಿತ ಭಾರತೀಯ ಅಧಿಕಾರಿಗಳಿಂದ ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ ಎಂದು ಜೈಶಂಕರ್ ಅವರು ತಂಗರಾ ಅವರಿಗೆ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಸ್ವಂತ ಉದ್ಯಮದ ಕನಸು ನನಸು – B ಟೆಕ್ ವಿದ್ಯಾರ್ಥಿನಿ ಈಗ `ಚಾಯ್‌ವಾಲಿ’

    ಈ ಬಗ್ಗೆ ಟ್ವೀಟ್‌ನಲ್ಲಿ ತಿಳಿಸಿರುವ ಜೈಶಂಕರ್, ನಾವು ಗ್ಯಾಂಬಿಯಾದ ಎಫ್‌ಎಂ ಡಾ. ಮಮಡೌ ತಂಗರಾ ಅವರೊಂದಿಗೆ ಮಾತನಾಡಿದ್ದೇವೆ. ಈ ವೇಳೆ ಇತ್ತೀಚೆಗೆ ಚಿಕ್ಕ ಮಕ್ಕಳ ಸಾವಿನ ಬಗ್ಗೆ ನಮ್ಮ ಆಳವಾದ ಸಂತಾಪವನ್ನು ತಿಳಿಸಿದ್ದೇವೆ. ಸೂಕ್ತ ಅಧಿಕಾರಿಗಳಿಂದ ವಿಷಯವನ್ನು ಗಂಭೀರವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಒತ್ತಿ ಹೇಳಿದ್ದೇವೆ. ನಾವು ಸಂಪರ್ಕದಲ್ಲಿರಲು ಒಪ್ಪಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಓಲಾ, ಊಬರ್‌ಗೆ ಬಿಗ್‌ ರಿಲೀಫ್‌ – ಸಾರಿಗೆ ಇಲಾಖೆ ಆದೇಶಕ್ಕೆ ಕೋರ್ಟ್‌ ಮಧ್ಯಂತರ ತಡೆ

    Live Tv
    [brid partner=56869869 player=32851 video=960834 autoplay=true]

  • ರಷ್ಯಾ-ಉಕ್ರೇನ್ ಯುದ್ಧ: ತಕ್ಷಣವೇ ಅಂತ್ಯಗೊಳಿಸಲು ವಿಶ್ವಸಂಸ್ಥೆಯಲ್ಲಿ ಭಾರತ ಕರೆ

    ರಷ್ಯಾ-ಉಕ್ರೇನ್ ಯುದ್ಧ: ತಕ್ಷಣವೇ ಅಂತ್ಯಗೊಳಿಸಲು ವಿಶ್ವಸಂಸ್ಥೆಯಲ್ಲಿ ಭಾರತ ಕರೆ

    ವಿಶ್ವಸಂಸ್ಥೆ: ರಷ್ಯಾ (Russia) ಉಕ್ರೇನ್ (Ukraine) ಮೇಲೆ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ತಕ್ಷಣವೇ ಕೊನೆಗೊಳಿಸಿ ಶಾಂತಿಯುತ ಮಾತುಕತೆಗೆ ಮರಳುವುದು ಇದೀಗ ಅಗತ್ಯವಾಗಿದೆ ಎಂದು ಭಾರತ ವಿಶ್ವಸಂಸ್ಥೆಯಲ್ಲಿ (UN)  ತಿಳಿಸಿದೆ.

    ರಷ್ಯಾ ಉಕ್ರೇನ್ ಮೇಲೆ ಪರಮಾಣು ಶಸ್ತ್ರಾಸ್ತ್ರವನ್ನು ಬಳಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಭಾರತ, ಈಗಾಗಲೇ ನರೇಂದ್ರ ಮೋದಿಯವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಇದು ಯುದ್ಧದ ಸಮಯವಲ್ಲ ಎಂದು ಹೇಳಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ (S Jaishankar) ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ ದೇಶದ ಹೊರಗೆ ಎಷ್ಟು ಆಸ್ತಿ ಮಾಡಿದ್ದಾರೆ?: ಪಾಕ್ ಮಾಜಿ ಪ್ರಧಾನಿ

    ರಷ್ಯಾ ಉಕ್ರೇನ್‌ನ ಸಂಘರ್ಷ ಇಡೀ ವಿಶ್ವಕ್ಕೆ ಆಳವಾದ ಕಾಳಜಿಯ ವಿಷಯವಾಗಿದೆ. ಮುಖ್ಯವಾಗಿ ಪರಮಾಣು ದಾಳಿಯ ಸಾಧ್ಯತೆ ಭವಿಷ್ಯದ ದೃಷ್ಟಿಕೋನಕ್ಕೆ ಇನ್ನಷ್ಟು ಭೀತಿಯ ಸಂಗತಿಯಾಗಿದೆ. ಆದರೆ ಭಾರತ ಇದನ್ನು ಖಂಡಿಸಿಲ್ಲ. ಇದನ್ನು ಈ ಕೂಡಲೇ ರಾಜತಾಂತ್ರಿಕತೆ ಹಾಗೂ ಮಾತುಕತೆಯ ಮೂಲಕ ಪರಿಹರಿಸಬೇಕು ಎಂಬುದೇ ಭಾರತದ ಉದ್ದೇಶ ಎಂದು ತಿಳಿಸಿದರು. ಇದನ್ನೂ ಓದಿ: 18-65 ವಯಸ್ಸಿನ ಪುರುಷರಿಗೆ ಟಿಕೆಟ್ ಮಾರಾಟ ನಿಲ್ಲಿಸಲು ರಷ್ಯಾದ ಏರ್‌ಲೈನ್ಸ್ ಆದೇಶ

    Live Tv
    [brid partner=56869869 player=32851 video=960834 autoplay=true]

  • ಲಂಕಾ ಆರ್ಥಿಕ ಬಿಕ್ಕಟ್ಟಿನ ಕುರಿತು ಚರ್ಚಿಸಲು ಜು.19 ರಂದು ಸರ್ವಪಕ್ಷಗಳ ಸಭೆ – ಪ್ರಹ್ಲಾದ್ ಜೋಶಿ

    ಲಂಕಾ ಆರ್ಥಿಕ ಬಿಕ್ಕಟ್ಟಿನ ಕುರಿತು ಚರ್ಚಿಸಲು ಜು.19 ರಂದು ಸರ್ವಪಕ್ಷಗಳ ಸಭೆ – ಪ್ರಹ್ಲಾದ್ ಜೋಶಿ

    ನವದೆಹಲಿ: ಇಂದಿಗೆ 100 ದಿನಗಳನ್ನು ಪೂರೈಸಿರುವ ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿನ ಕುರಿತು ಚರ್ಚಿಸಲು ಮಂಗಳವಾರ (ಜುಲೈ 21ರಂದು) ಸರ್ವಪಕ್ಷಗಳ ಸಭೆ ಕರೆಯಲಾಗಿದ್ದು, ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ನೇತೃತ್ವದಲ್ಲಿ ಸಭೆ ನಡೆಯಲಿದೆ.

    ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ವಿವಿಧ ಪಕ್ಷಗಳ ನಾಯಕರು ಭಾಗವಹಿಸಿದ್ದ ಸರ್ವಪಕ್ಷ ಸಭೆಯ ನಂತರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಸಂಸತ್ತಿನ ನಿಯಮಗಳು ಮತ್ತು ಕಾರ್ಯವಿಧಾನಗಳ ಅಡಿಯಲ್ಲಿ ಸರ್ಕಾರವು ಎಲ್ಲಾ ವಿಷಯಗಳ ಬಗ್ಗೆ ಚರ್ಚೆಗೆ ಮುಕ್ತವಾಗಿದೆ ಎಂದು ಹೇಳಿದ್ದಾರೆ.

    ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿನ ಕುರಿತು ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಇಂದಿಗೆ 100ನೇ ದಿನ ತಲುಪಿದೆ. ಇದನ್ನೂ ಓದಿ: ವಿದ್ಯಾರ್ಥಿನಿ ಸಾವಿಗೆ ತೀವ್ರಗೊಂಡ ಪ್ರತಿಭಟನೆ – ಸ್ಕೂಲ್ ಬಸ್, ಪೊಲೀಸ್ ವಾಹನಗಳಿಗೆ ಬೆಂಕಿ

    ಆರ್ಥಿಕ ಬಿಕ್ಕಟ್ಟಿನಿಂದಾಗಿ ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಗೊಟಬಯ ರಾಜಪಕ್ಸೆ ತಮ್ಮ ಸ್ಥಾನಕ್ಕೆ ಈಚೆಗೆ ರಾಜೀನಾಮೆ ನೀಡಿದರು. ತಮ್ಮ ವಿರುದ್ಧದ ಪ್ರತಿಭಟನೆಯಿಂದ ತಪ್ಪಿಸಿಕೊಳ್ಳಲು ಶ್ರೀಲಂಕಾ ತೊರೆದು ಪಲಾಯನಗೈದಿರುವ ಹಿನ್ನೆಲೆ ಕಳೆದ ಗುರುವಾರ ಸಂಸತ್ತಿನ ಸ್ಪೀಕರ್‌ಗೆ ರಾಜೀನಾಮೆ ಪತ್ರವನ್ನು ಇ-ಮೇಲ್ ಮಾಡಿದ್ದರು.

    ಇದಕ್ಕೂ ಮುನ್ನ ಲಂಕಾದ ಆರ್ಥಿಕ ಬಿಕ್ಕಟ್ಟಿನಿಂದಾಗಿ ಅಲ್ಲಿನ ಜನರು ಬೃಹತ್ ಪ್ರತಿಭಟನೆ ನಡೆಸಿದ್ದು, ರಾಜಪಕ್ಸೆ ಹಾಗೂ ಪ್ರಧಾನಿ ವಿಕ್ರಮಸಿಂಘೆ ತಮ್ಮ ಅಧಿಕಾರದಿಂದ ಕೆಳಗಿಳಿಯುವಂತೆ ಒತ್ತಾಯಿಸಿ, ಅಧ್ಯಕ್ಷೀಯ ಭವನಕ್ಕೆ ಮುತ್ತಿಗೆ ಹಾಕಿದ್ದರು. ಇದನ್ನೂ ಓದಿ: 18 ತಿಂಗಳಲ್ಲಿ 200 ಕೋಟಿ ಡೋಸ್‌ ಕೊರೊನಾ ಲಸಿಕೆ- ದಾಖಲೆ ಸೃಷ್ಟಿಸಿದ ಭಾರತ

    ಆ ನಂತರ ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಪ್ರಮಾಣ ವಚನ ಸ್ವೀಕರಿಸಿದ್ದು, ಹೊಸ ಅಧ್ಯಕ್ಷರ ಆಯ್ಕೆಯ ಪ್ರಕ್ರಿಯೆ 7 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದರು. ಸದ್ಯ ಮುಂದಿನ ವಾರ ನಡೆಯುವ ಮತದಾನದಲ್ಲಿ ಅವರು ಶಾಶ್ವತವಾಗಿ ಉತ್ತರಾಧಿಕಾರಿಯಾಗುವ ಪ್ರಮುಖ ಅಭ್ಯರ್ಥಿಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    Live Tv
    [brid partner=56869869 player=32851 video=960834 autoplay=true]

  • ಇದು ದುರಹಂಕಾರವಲ್ಲ, ಆತ್ಮವಿಶ್ವಾಸ: ರಾಹುಲ್‌ಗೆ ವಿದೇಶಾಂಗ ಸಚಿವ ತಿರುಗೇಟು

    ಇದು ದುರಹಂಕಾರವಲ್ಲ, ಆತ್ಮವಿಶ್ವಾಸ: ರಾಹುಲ್‌ಗೆ ವಿದೇಶಾಂಗ ಸಚಿವ ತಿರುಗೇಟು

    ನವದೆಹಲಿ: ಭಾರತೀಯ ವಿದೇಶಾಗ ನೀತಿಯನ್ನು ದುರಹಂಕಾರಿ ಎಂದು ಕರೆದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ತಿರುಗೇಟು ನೀಡಿದ್ದಾರೆ. ವಿಶ್ವ ವೇದಿಕೆಯಲ್ಲಿ ಭಾರತ ಪ್ರದರ್ಶಿಸುತ್ತಿರುವುದು ದುರಹಂಕಾರವಲ್ಲ, ಆತ್ಮವಿಶ್ವಾಸ ಎಂದು ಹೇಳಿದ್ದಾರೆ.

    sಶುಕ್ರವಾರ ಲಂಡನ್‌ನ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ನಡೆದ ಇಂಡಿಯಾಸ್ ಫಾರ್ ಇಂಡಿಯಾ ಸಮ್ಮೇಳನದಲ್ಲಿ ಭಾಗವಹಿಸಿ ಮಾತಮಾಡಿದ ರಾಹುಲ್ ಗಾಂಧಿ, ವಿದೇಶಾಂಗ ನೀತಿ ಸಂಪೂರ್ಣ ಬದಲಾಗಿದೆ. ಅಲ್ಲಿನ ಅಧಿಕಾರಿಗಳು ಯಾರ ಮಾತನ್ನೂ ಕೇಳುವುದಿಲ್ಲ. ದುರಹಂಕಾರದಿಂದ ನಡೆದುಕೊಳ್ಳುತ್ತಾರೆ ಎಂದು ಕಿಡಿಕಾರಿದ್ದರು. ಇದನ್ನೂ ಓದಿ: ಭಾರತದ ವಿದೇಶಾಂಗ ನೀತಿ ಸಂಪೂರ್ಣ ಬದಲಾಗಿದೆ, ಯಾರ ಮಾತನ್ನೂ ಕೇಳಲ್ಲ: ರಾಹುಲ್ ಗಾಂಧಿ

    ಇದಕ್ಕೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿದ ಜೈಶಂಕರ್, ಹೌದು.. ಭಾರತೀಯ ವಿದೇಶಾಂಗ ಸೇವೆ ಬದಲಾಗಿದೆ. ಅವರು ಸರ್ಕಾರದ ಆದೇಶವನ್ನು ಅನುಸರಿಸುತ್ತಾರೆ. ಅವರು ಇತರರ ವಾದಗಳನ್ನೂ ಎದುರಿಸುತ್ತಾರೆ. ಆದರೆ ಅದನ್ನು ದುರಹಂಕಾರ ಎಂದು ಕರೆಯಲಾಗುವುದಿಲ್ಲ. ಅದನ್ನು ಆತ್ಮವಿಶ್ವಾಸ ಎಂದು ಕರೆಯಲಾಗುತ್ತದೆ. ರಾಷ್ಟ್ರೀಯ ಹಿತಾಸಕ್ತಿ ರಕ್ಷಿಸುವುದು ಎಂದು ಕರೆಯಲಾಗುತ್ತದೆ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಅಸ್ಸಾಂನಲ್ಲಿ ಭೀಕರ ಪ್ರವಾಹ – 14ಕ್ಕೇರಿದ ಸಾವಿನ ಸಂಖ್ಯೆ

    ಭಾರತದ ವಿದೇಶಾಂಗ ಸಚಿವ ಜೈಶಂಕರ್ ಅವರು ಜಾಗತಿಕ ಸಮಸ್ಯೆಗಳ ವಿಚಾರದಲ್ಲಿ ಭಾರತದ ಸ್ಥಾನ ಹಾಗೂ ಹಿತಾಸಕ್ತಿಗಳಿಗೆ ಮೊದಲ ಸ್ಥಾನ ನೀಡುವುದರಲ್ಲಿ ಹೆಸರುವಾಸಿಯಾಗಿದ್ದಾರೆ. ಈ ಹಿಂದೆ ರಷ್ಯಾ-ಉಕ್ರೇನ್ ಯುದ್ಧದ ನಡುವೆ ರಷ್ಯಾದಿಂದ ಅಗ್ಗದ ಬೆಲೆಗೆ ಭಾರತ ತೈಲವನ್ನು ಖರೀದಿಸಿತ್ತು. ಆ ಸಂದರ್ಭ ಇತರ ದೇಶಗಳು ಭಾರತವನ್ನು ವಿರೋಧಿಸಿದ್ದವು. ಆಗ ಜೈಶಂಕರ್ ವಿದೇಶಗಳ ವಿರುದ್ಧ ವಾಗ್ದಾಳಿ ನಡೆಸಿದ್ದರು.

  • ಪಾಕಿಸ್ತಾನದಲ್ಲಿ ಗುಂಡಿಕ್ಕಿ ಸಿಖ್ಖರ ಹತ್ಯೆ – ಭಾರತ ತೀವ್ರ ಖಂಡನೆ

    ಪಾಕಿಸ್ತಾನದಲ್ಲಿ ಗುಂಡಿಕ್ಕಿ ಸಿಖ್ಖರ ಹತ್ಯೆ – ಭಾರತ ತೀವ್ರ ಖಂಡನೆ

    ಇಸ್ಲಾಮಾಬಾದ್: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರದೇಶದ ಉಪನಗರವಾದ ಪೇಶಾವರದ ಸರ್ಬಂದ್ ಪ್ರದೇಶದಲ್ಲಿ ಸಿಖ್ ಸಮುದಾಯಕ್ಕೆ ಸೇರಿದ ಇಬ್ಬರನ್ನು ಗುಂಡಿಕ್ಕಿ ಹತ್ಯೆಗೈಯ್ಯಲಾಗಿದೆ.

    ಗುಂಡಿನ ದಾಳಿಗೆ ಬಲಿಯಾದವರನ್ನು ಸಲ್ಜೀತ್ ಸಿಂಗ್ (42) ಹಾಗೂ ರಂಜೀತ್‌ಸಿಂಗ್ (38) ಎಂದು ಗುರುತಿಸಲಾಗಿದೆ. ಈ ಇಬ್ಬರೂ ತಮ್ಮ ಅಂಗಡಿಯಲ್ಲಿ ಕುಳಿತಿದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಆರೋಪಿಗಳನ್ನು ಬಂಧಿಸಲು ಪ್ರದೇಶವನ್ನು ಸುತ್ತುವರಿದಿದ್ದಾರೆ ಎಂದು ಸ್ಥಳೀಯ ಸುದ್ದಿಸಂಸ್ಥೆ ವರದಿ ಮಾಡಿದೆ.

    ಭಾರತ ತೀವ್ರ ಖಂಡನೆ: ಸಿಖ್ ಸಮುದಾಯದ ವ್ಯಾಪಾರಿಗಳ ಹತ್ಯೆಯನ್ನು ಭಾರತ ತೀವ್ರವಾಗಿ ಖಂಡಿಸಿದ್ದು, ಪ್ರತಿಭಟನೆಯನ್ನೂ ದಾಖಲಿಸಿದೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್‌ಮಾನ್, ಮಾಜಿ ಸಿಎಂ ಅಮರಿಂದರ್ ಸಿಂಗ್ ಹಾಗೂ ಭಾರತದ ವಿದೇಶಾಂಗ ಸಚಿವಾಲಯವೂ ತೀವ್ರವಾಗಿ ಖಂಡಿಸಿದೆ. ಇದನ್ನೂ ಓದಿ: ಥಾಮಸ್ ಕಪ್ ಗೆದ್ದ ಭಾರತ ತಂಡದೊಂದಿಗೆ ಇಡೀ ದೇಶವೇ ಸಂಭ್ರಮಿಸಿದೆ: ಮೋದಿ

    ಘಟನೆ ಕುರಿತು ಮಾತನಾಡಿರುವ ವಿದೇಶಾಂಗ ಸಚಿವಾಲಯದ ವಕ್ತಾರರು, ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಸಮುದಾಯದ ಸದಸ್ಯರನ್ನು ಗುರಿಯಾಗಿಸಿಕೊಂಡು ಸರಣಿ ಹತ್ಯೆ ಮುಂದುವರಿದಿದೆ. ಈ ಹತ್ಯೆ ಬಗ್ಗೆ ಪಾಕಿಸ್ತಾನ ಸರ್ಕಾರದ ವಿರುದ್ಧ ಬಲವಾದ ಪ್ರತಿಭಟನೆ ದಾಖಲಿಸಿದ್ದೇವೆ. ಈ ವಿಷಯವನ್ನು ಪ್ರಾಮಾಣಿಕವಾಗಿ ತನಿಖೆ ಮಾಡಲು ಹಾಗೂ ಕೃತ್ಯ ಎಸಗಿದ ನೀಚರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಾವು ಕರೆ ನೀಡುತ್ತೇವೆ ಎಂದು ಹೇಳಿದ್ದಾರೆ.

    ಪಾಕಿಸ್ತಾನ ಸರ್ಕಾರವು ತನ್ನ ಜವಾಬ್ದಾರಿಗಳನ್ನು ನಿರ್ವಹಿಸುತ್ತದೆ. ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆ, ಭದ್ರತೆ ಹಾಗೂ ಯೋಗಕ್ಷೇಮವನ್ನು ನೋಡಿಕೊಳ್ಳುತ್ತದೆ ಎಂದು ನಾವು ನಿರೀಕ್ಷಿಸಿದ್ದೇವೆ ಎಂದು ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಥಾಮಸ್‌ ಕಪ್‌ ಬ್ಯಾಡ್ಮಿಂಟನ್‌ – ಭಾರತ ಚಾಂಪಿಯನ್‌, ಇತಿಹಾಸ ಸೃಷ್ಟಿ

    ಪಾಕ್ ಪ್ರಧಾನಿ ಶೆಹಬಾಜ್ ಸಹ ಇದಕ್ಕೆ ಪ್ರತಿಕ್ರಿಯಿಸಿದ್ದು, ಹತ್ಯೆಯ ಹಿಂದಿನ ಸತ್ಯಾಂಶಗಳನ್ನು ತಿಳಿಯಲು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ಹಂತಕರನ್ನು ಬಂಧಿಸಿ ತಕ್ಕ ಶಿಕ್ಷೆ ವಿಧಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

    ಸಿಖ್ಖರ ಸುರಕ್ಷತೆ ಖಚಿತಪಡಿಸಿಕೊಳ್ಳಿ: ಪಂಜಾಬ್ ಸಿಎಂ ಭಗವಂತ್ ಮಾನ್, ಪಾಕಿಸ್ತಾನದ ಪೇಶಾವರದಲ್ಲಿ ಇಬ್ಬರು ಸಿಖ್ಖರ ಭೀಕರ ಹತ್ಯೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ನಮ್ಮ ವಿದೇಶಾಂಗ ಸಚಿವರಿಗೂ ನಾನು ವಿನಂತಿಸುತ್ತೇನೆ. ಪಾಕಿಸ್ತಾನದಲ್ಲಿ ನೆಲೆಸಿರುವ ಹಿಂದೂ ಮತ್ತು ಸಿಖ್ ಅಲ್ಪಸಂಖ್ಯಾತರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಪಾಕಿಸ್ತಾನದೊಂದಿಗೆ ಮಾತನಾಡಬೇಕು ಎಂದು ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.

    ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಸಹ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಪಾಕಿಸ್ತಾನದಲ್ಲಿ ಮತ್ತೆ ಸಿಖ್ಖರ ಹತ್ಯೆಯಾಗಿದೆ. ಇದು ಅತ್ಯಂತ ಖಂಡನೀಯ. ನಾನು ಯಾವಾಗಲೂ ಹೇಳುತ್ತಿದ್ದೆ, ಪಾಕಿಸ್ತಾನ ಸರ್ಕಾರ ಸಿಖ್ಖರ ಭದ್ರತೆಯನ್ನು ಖಾತ್ರಿಪಡಿಸದೇ ಅವರಿಗೆ ಕೇವಲ ಆಶ್ವಾಸನೆ ನೀಡುತ್ತಿದೆ ಎಂಬುದನ್ನು ಪುನರುಚ್ಛರಿಸಿದ್ದಾರೆ.

  • ಚೀನಾ-ಭಾರತದ ಸಂಬಂಧ ಬಿಗಡಾಯಿಸುತ್ತಿದೆ: ಜೈಶಂಕರ್

    ನವದೆಹಲಿ: ಬೀಜಿಂಗ್ ಗಡಿ ಒಪ್ಪಂದ ಉಲ್ಲಂಘಿಸಿದ ಬಳಿಕ ಚೀನಾದೊಂದಿಗಿನ ಭಾರತದ ಸಂಬಂಧ ಹದಗೆಡುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ತಿಳಿಸಿದ್ದಾರೆ.

    ಮ್ಯೂನಿಚ್ ಸೆಕ್ಯೂರಿಟಿ ಕಾನ್ಫರೆನ್ಸ್ (ಎಂಎಸ್‌ಸಿ) 2022 ಪ್ಯಾನಲ್ ಚರ್ಚೆಯಲ್ಲಿ ಮಾತನಾಡಿದ ಜೈಶಂಕರ್, ಕಳೆದ 45 ವರ್ಷಗಳಿಂದ ಚೀನಾ-ಭಾರತದ ಗಡಿಯಲ್ಲಿ ಶಾಂತಿ ಇತ್ತು. 1975ರಿಂದ ಗಡಿಯಲ್ಲಿ ಯಾವುದೇ ಮಿಲಿಟರಿ ಸಾವು-ನೋವುಗಳು ಸಂಭವಿಸುತ್ತಿರಲಿಲ್ಲ. ಆದರೆ ಇದೀಗ ಚೀನಾದಿಂದ ಭಾರತಕ್ಕೆ ಸಮಸ್ಯೆಯಾಗುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶಕ್ಕೆ 3ನೇ ಹಂತ, ಪಂಜಾಬ್ ಮತದಾನ ಇಂದು – ಅಖಿಲೇಶ್ ಯಾದವ್ ಭವಿಷ್ಯ ನಿರ್ಧಾರ

    ಗಡಿ ಎಂಬುವುದು ಇರುವುದೇ ಮಿಲಿಟರಿ ಪಡೆ ಅಥವಾ ವಿದೇಶಿಗರ ಅಕ್ರಮ ಪ್ರವೇಶವನ್ನು ನಿಯಂತ್ರಿಸಲು. ಆದರೆ ಈ ಒಪ್ಪಂದವನ್ನು ಚೀನಾ ಉಲ್ಲಂಘಿಸಿದೆ. ಇದೀಗ ಚೀನಾದೊಂದಿಗಿನ ಸಂಬಂಧ ಬಹಳ ಕಷ್ಟಕರ ಹಂತ ತಲುಪಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಿಜಬ್ ಆಯ್ಕೆಯಲ್ಲ, ನಾವು ಪ್ರೀತಿಸುವ ದೇವರು ವಿಧಿಸಿರುವ ಶಿಷ್ಟಾಚಾರ: ಝೈರಾ ವಾಸಿಮ್

    ಜೂನ್ 2020ರ ವರೆಗೆ ಚೀನಾದೊಂದಿಗಿನ ಭಾರತದ ಸಂಬಂಧ ಉತ್ತಮವಾಗಿತ್ತು. ಯಾವಾಗ ಪಾಂಗಾಂಗ್ ಸರೋವರ ಪ್ರದೇಶದಲ್ಲಿ ಭಾರತ-ಚೀನಾ ಮಿಲಿಟರಿ ನಡುವೆ ಹಿಂಸಾತ್ಮಕ ಘರ್ಷಣೆ ನಡೆಯಿತೋ ಅಂದಿನಿಂದ ಗಡಿ ಸಂಬಂಧ ಹದಗೆಡುತ್ತ ಬಂದಿದೆ ಎಂದು ಜೈಶಂಕರ್ ಹೇಳಿದ್ದಾರೆ.

  • ವಿದೇಶಾಂಗ ಸಚಿವ ಎಸ್. ಜೈಶಂಕರ್‌ಗೆ ಕೋವಿಡ್ ದೃಢ

    ವಿದೇಶಾಂಗ ಸಚಿವ ಎಸ್. ಜೈಶಂಕರ್‌ಗೆ ಕೋವಿಡ್ ದೃಢ

    ನವದೆಹಲಿ: ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಗುರುವಾರ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದವರು ಮುನ್ನೆಚ್ಚರಿಕೆ ವಹಿಸುವಂತೆ ಜೈಶಂಕರ್ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

    ನನಗೆ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಇರುವುದು ತಿಳಿದುಬಂದಿದೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಮುನ್ನೆಚ್ಚರಿಕೆಯ ಕ್ರಮವನ್ನು ಕೈಗೊಳ್ಳಬೇಕಾಗಿ ಒತ್ತಾಯಿಸುತ್ತೇನೆ ಎಂದು ಜೈಶಂಕರ್ ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಆಸ್ಪತ್ರೆ, ಕ್ಲಿನಿಕ್‌ಗಳಲ್ಲೂ ಕೋವಿಶೀಲ್ಡ್‌, ಕೋವ್ಯಾಕ್ಸಿನ್‌ ಲಭ್ಯ

    ಇತ್ತೀಚೆಗೆ ಜೈಶಂಕರ್ ಅವರು ಫ್ರಾನ್ಸ್‍ನಲ್ಲಿ ಭಾರತಕ್ಕೆ ಇರುವ ಅವಕಾಶಗಳ ಬಗ್ಗೆ ಚರ್ಚಿಸಲು ಫ್ರೆಂಚ್ ಕೌಂಟರ್‍ಪಾರ್ಟ್ ಜೀನ್-ಯ್ವೆಸ್ ಲೆ ಡ್ರಿಯನ್ ಅವರನ್ನು ಭೇಟಿ ಮಾಡಿದ್ದರು. ಇದನ್ನೂ ಓದಿ: ಭಾರತ ಹಿಂದೂ ರಾಷ್ಟ್ರವಾಗುತ್ತಿದೆ, ಜನರಿಗೆ ಅಭದ್ರತೆ ಕಾಡುತ್ತಿದೆ: ಅನ್ಸಾರಿ

    ಸದ್ಯ ದೇಶಾದ್ಯಂತ ಅತೀ ಹೆಚ್ಚು ಕೋವಿಡ್ ಕೇಸ್‍ಗಳು ಕರ್ನಾಟಕ, ಮಹಾರಾಷ್ಟ್ರ, ಕೇರಳ ಹಾಗೂ ತಮಿಳುನಾಡಿನಲ್ಲಿ ಕಂಡುಬರುತ್ತಿದೆ. ಗುರುವಾರದ ವರದಿಯ ಪ್ರಕಾರ ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,86,384 ಹೊಸ ಪ್ರಕರಣಗಳು ದಾಖಲಾಗಿದೆ.

  • ಭಯೋತ್ಪಾದನೆ ವಿರುದ್ಧ ಜಗತ್ತು ಒಟ್ಟಾಗಿ ಹೋರಾಡಬೇಕು: ಭಾರತ

    ಭಯೋತ್ಪಾದನೆ ವಿರುದ್ಧ ಜಗತ್ತು ಒಟ್ಟಾಗಿ ಹೋರಾಡಬೇಕು: ಭಾರತ

    ನವದೆಹಲಿ: ಅಘ್ಘಾನಿಸ್ತಾನದಲ್ಲಿ ದಾಳಿ ನಡೆಸಿರುವ ಐಸಿಸ್-ಕೆ ಉಗ್ರರ ಸಂಘಟನೆ ವಿರುದ್ಧ ಭಾರತ ಕಿಡಿಕಾರಿದೆ. ಭಯೋತ್ಪಾದನೆ ವಿರುದ್ಧ ಜಗತ್ತು ಒಟ್ಟಾಗಿ ಹೋರಾಡಬೇಕು ಎಂದು ಕರೆ ನೀಡಿದೆ.

    ಅಘ್ಘಾನಿಸ್ತಾನದ ಹಮೀದ್ ಕರ್ಜೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಸಂಜೆಯಿಂದ ಮಧ್ಯರಾತ್ರಿವರೆಗೆ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಭೀಕರ ಭಯೋತ್ಪಾದಕ ದಾಳಿಗೆ ಭಾರತ ಖಂಡನೆ ಸೂಚಿಸಿದೆ. ಭಯೋತ್ಪಾದನೆ ವಿರುದ್ಧ ಜಗತ್ತು ಒಟ್ಟಾಗಿ ಹೋರಾಡಬೇಕು. ಉಗ್ರರಿಗೆ ಆಶ್ರಯ ನೀಡುತ್ತಿರುವವರ ವಿರುದ್ಧ ಕಠಿಣ ಕ್ರಮ ಆಗಬೇಕು ಎಂದು ವಿದೇಶಾಂಗ ಸಚಿವಾಲಯದಿಂದ ಪ್ರಕಟಣೆ ಹೊರಡಿಸಿದೆ. ಇದನ್ನೂ ಓದಿ: ಕಾಬೂಲ್‍ನಲ್ಲಿ 7 ಸರಣಿ ಬಾಂಬ್ ಸ್ಫೋಟ – 90ಕ್ಕೂ ಹೆಚ್ಚು ಬಲಿ, 150ಕ್ಕೂ ಹೆಚ್ಚು ಮಂದಿಗೆ ಗಾಯ

    ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್, ಸರ್ವಪಕ್ಷ ಸಭೆ ಕರೆದು ಮಾತನಾಡಿದ್ದು, ಅಘ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಸ್ಥಿತಿಗತಿಗಳನ್ನು ಭಾರತ ಗಮನಿಸುತ್ತಿದೆ. ಅಘ್ಘಾನಿಸ್ತಾನದಲ್ಲಿ ತಾಲಿಬಾನಿಗಳು ನಡೆಸುತ್ತಿರುವ ದಬ್ಬಾಳಿಕೆ ಗಮನಿಸುತ್ತಿದ್ದು, ಕಾಬೂಲ್‍ನಲ್ಲಿ ಹಲವು ಘಟನೆಗಳು ಸಂಭವಿಸುತ್ತಿದೆ. ಅಲ್ಲಿನ ಜನ ದೇಶ ಬಿಟ್ಟು ತೆರಳಲು ಕಾತರರಾಗಿದ್ದಾರೆ. ಭಾರತ, ಅಮೆರಿಕ ಸಹಿತ ಇತರ ದೇಶ ಕಾಬೂಲ್‍ನಲ್ಲಿ ಐಸಿಸ್ ಸಂಘಟನೆಯ ದಾಳಿಯನ್ನು ಖಂಡಿಸಿದೆ ಮತ್ತು ಎಚ್ಚರಿಕೆ ನೀಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಐಸಿಸ್-ಕೆ ಉಗ್ರರ ವಿರುದ್ಧ ಅಮೆರಿಕ ಅಧ್ಯಕ್ಷ ಜೋ ಬೈಡನ್ ಗುಡುಗು