Tag: ಎಸ್.ಟಿ.ಸೋಮಶೇಕರ್

  • ಶೀಘ್ರವೇ ಶ್ರೀಗಂಧದ ವಸ್ತು ಸಂಗ್ರಹಾಲಯ ಅರಮನೆ ಮೈದಾನಕ್ಕೆ ಶಿಫ್ಟ್: ಸೋಮಶೇಖರ್

    ಶೀಘ್ರವೇ ಶ್ರೀಗಂಧದ ವಸ್ತು ಸಂಗ್ರಹಾಲಯ ಅರಮನೆ ಮೈದಾನಕ್ಕೆ ಶಿಫ್ಟ್: ಸೋಮಶೇಖರ್

    ಮೈಸೂರು: ಇಲ್ಲಿನ ಅರಣ್ಯ ಭವನದಲ್ಲಿ ಇಂದು ಉದ್ಘಾಟನೆಯಾದ ದೇಶದ ಪ್ರಥಮ ಶ್ರೀಗಂಧ ಸಂಗ್ರಹಾಲಯವನ್ನು ಅರಮನೆ ಮೈದಾನ ಇಲ್ಲವೇ ಮೈಸೂರು ಮೃಗಾಲಯದಲ್ಲಿ ತೆರೆಯುವ ಬಗ್ಗೆ ಮಾತುಕತೆಗಳು ನಡೆಯುತ್ತಿವೆ. ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ತೀರ್ಮಾನ ಕೈಗೊಳ್ಳಲಾಗುವುದು. ಒಟ್ಟಿನಲ್ಲಿ ಸುಲಭವಾಗಿ ಸಾರ್ವಜನಿಕರಿಗೆ ವೀಕ್ಷಣೆಗೆ ಲಭ್ಯವಾಗುವಂತೆ ಮಾಡಲಾಗುವುದು ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

    ಕಳೆದ ಬಾರಿ ಭೇಟಿ ವೇಳೆ ಮೈಸೂರು ಅರಮನೆಯಲ್ಲಿ ವಸ್ತುಸಂಗ್ರಹಾಲಯವನ್ನು ತೆರೆಯುವ ಉದ್ದೇಶ ಹೊಂದಿದ್ದಾಗಿ ತಿಳಿಸಿದ್ದೆ. ಆದರೆ ಅಲ್ಲಿ ಸದ್ಯ ಕಟ್ಟಡದ ಕೊರತೆ ಇದ್ದಿದ್ದರಿಂದ ಅರಮನೆ ಮೈದಾನದ ಸಮಿತಿಯವರು ಕಟ್ಟಡವನ್ನು ಕಟ್ಟಿಕೊಡುವ ಬಗ್ಗೆ ಹೇಳಿದ್ದಾರೆ. ಇದೇ ವೇಳೆ ಮೈಸೂರು ಮೃಗಾಲಯದಲ್ಲೂ ಸ್ಥಳಾವಕಾಶ ಇರುವ ಬಗ್ಗೆ ಮಾಹಿತಿ ಬಂದಿದ್ದರಿಂದ ಅಲ್ಲೂ ಸಹ ಮಾತುಕತೆ ನಡೆಸಲಾಗುತ್ತಿದೆ. ಬೆಲೆಬಾಳುವ ವಸ್ತುಗಳು ಇರುವುದರಿಂದ ಸುರಕ್ಷತೆಯನ್ನು ನೋಡಿಕೊಂಡು ಸೂಕ್ತ ಸ್ಥಳದಲ್ಲಿ ತೆರೆಯುವ ನಿರ್ಧಾರವನ್ನು ಅರಣ್ಯ ಇಲಾಖೆ ಮಾಡಲಿದೆ ಎಂದು ಸಚಿವರು ತಿಳಿಸಿದರು.

    ಶ್ರೀಗಂಧಕ್ಕೆ ಸರ್ಕಾರದಿಂದ ಪ್ರೋತ್ಸಾಹ ಕೊಡಲಾಗುತ್ತಿದೆ. ಅಲ್ಲದೆ ಖಾಸಗಿಯಾಗಿ ಬೆಳೆಸಲು ಸಹ ಉತ್ತೇಜನ ನೀಡಲಾಗುತ್ತಿದೆ. ಇದಕ್ಕೆ ಉತ್ತಮ ದರ ಇರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಬೇಕು ಎಂದು ಹೇಳಿದ ಸಚಿವರು, ಶ್ರೀಗಂಧದ ವಸ್ತುಸಂಗ್ರಹಾಲಯವನ್ನು ಯಾರು ಬೇಕಿದ್ದರೂ ವೀಕ್ಷಣೆ ಮಾಡಬಹುದಾಗಿದ್ದು, ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ ಎಂದು ತಿಳಿಸಿದರು. ಉದ್ಘಾಟನೆ ಬಳಿಕ ವಸ್ತು ಸಂಗ್ರಹಾಲಯದಲ್ಲಿರುವ ಶ್ರೀಗಂಧದ ವಿವಿಧ ತಳಿಗಳು, ಬೇರುಗಳು, ಕಾಂಡಗಳು, ಪ್ರಭೇದಗಳು, ಅವುಗಳ ಉಪಯೋಗಗಳು, ವರ್ಗೀಕರಣದ ವಿವರಗಳು ಸೆರಿದಂತೆ ಶ್ರೀಗಂಧದ ಮರದಿಂದ ಏನೆಲ್ಲ ಔಷಧೀಯ ಗುಣಗಳಿವೆ? ಹಾಗೂ ಅದರಿಂದ ಎಷ್ಟು ಲಾಭ ಮಾಡಬಹುದು? ಎಂಬ ಬಗ್ಗೆ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದರು.

    ಇದೇ ಸಂದರ್ಭದಲ್ಲಿ ಶ್ರೀಗಂಧದಿಂದ ತಯಾರಿಸಿದ ವಿವಿಧ ಉತ್ಪನ್ನಗಳನ್ನೂ ಪ್ರದರ್ಶನಕ್ಕಿಡಲಾಗಿದ್ದನ್ನೂ ಸಚಿವರು ವೀಕ್ಷಿಸಿದರು. ಮ್ಯೂಸಿಯಂನಲ್ಲಿ ಪ್ರೊಜೆಕ್ಟರ್ ಮೂಲಕ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದ ಸಚಿವರು, ಶ್ರೀಗಂಧದ ಬೆಳೆಯಿಂದ ರೈತರು ಹೇಗೆಲ್ಲ ಲಾಭಗಳಿಸಬಹುದು? ಒಂದು ಮರದಿಂದ ಎಷ್ಟು ಆದಾಯ ಲಭಿಸಲಿದೆ? ಶ್ರೀಗಂಧದ ಕೃಷಿ ಹೇಗೆ? ಎಂಬ ಅಂಶಗಳ ವಿವರಣೆಯನ್ನು ನೋಡಿ, ರೈತರಿಗೆ ನಿಜಕ್ಕೂ ಇದು ಉಪಯುಕ್ತವಾಗಿದ್ದು, ಶ್ರೀಗಂಧದ ಮೂಲಕ ಲಾಭ ಪಡೆಯಬೇಕು ಎಂದು ಅಭಿಪ್ರಾಯಪಟ್ಟರು.

  • ಪ್ರಜಾಪ್ರಭುತ್ವ ಹಾಳಾಗಿ ಹೋಯ್ತು: ಮಾಧ್ಯಮಗಳ ವಿರುದ್ಧ ಶಿವಲಿಂಗೇಗೌಡ ಗರಂ

    ಪ್ರಜಾಪ್ರಭುತ್ವ ಹಾಳಾಗಿ ಹೋಯ್ತು: ಮಾಧ್ಯಮಗಳ ವಿರುದ್ಧ ಶಿವಲಿಂಗೇಗೌಡ ಗರಂ

    ಬೆಂಗಳೂರು: ನಾನು ವಿಧಾನಸೌಧಕ್ಕೆ ಬರೋದೇ ತಪ್ಪೇ ಎಂದು ಶಾಸಕ ಶಿವಲಿಂಗೇಗೌಡ ಅವರು ಮಾಧ್ಯಮಗಳ ವಿರುದ್ಧ ಗರಂ ಆಗಿದ್ದಾರೆ.

    ರಾಜ್ಯದಲ್ಲಿ ನಡೆಯುತ್ತಿರುವ ರಾಜೀನಾಮೆ ವಿಚಾರದ ಕುರಿತು ವಿಧಾನಸೌಧದಲ್ಲಿ ಶಾಸಕರನ್ನು ಮಾಧ್ಯಮಗಳು ಪ್ರಶ್ನಿಸಿದವು. ಈ ವೇಳೆ ಕೋಪಗೊಂಡ ಶಾಸಕ ಶಿವಲಿಂಗೇಗೌಡ ಅವರು, ವಿಧಾನಸೌಧಕ್ಕೆ ಯಾರೇ ಬಂದರೂ ರಾಜೀನಾಮೆ ಕೊಡುವುದಕ್ಕೆ ಬರುತ್ತಾರಾ? ಎಲ್ಲರೂ ಸ್ಪೀಕರ್ ಅವರನ್ನು ಭೇಟಿ ಮಾಡುವುದಕ್ಕೆ ಬರುತ್ತಾರಾ? ಪ್ರಜಾಪ್ರಭುತ್ವ ಹಾಳಾಗಿ ಹೋಯಿತು ಎಂದು ಕಿಡಿಕಾರಿದರು.

    ಈ ಮಧ್ಯೆ ಸ್ಪೀಕರ್ ರಮೇಶ್ ಕುಮಾರ್ ಅವರು ಮಾಧ್ಯಮಗಳ ವಿರುದ್ಧ ಗುಡುಗಿದ ಪ್ರಸಂಗ ನಡೆಯಿತು. ಸ್ಪೀಕರ್ ರಮೇಶ್ ಕುಮಾರ್ ಅವರ ಸಂಬಂಧಿಕರೊಬ್ಬರು ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯ ವಿಚಾರಿಸಲು ಆಗಮಿಸಿದ್ದ ಸ್ಪೀಕರ್ ಮಾಧ್ಯಮಗಳ ವಿರುದ್ಧ ಗರಂ ಆದರು.

    ನೀವು ರಾಜೀನಾಮೆ ಅಂಗೀಕರಿಸುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಕೋಪದಿಂದ ಪ್ರತಿಕ್ರಿಯೆ ನೀಡಿದ ಸ್ಪೀಕರ್, ಯೂ ಆರ್ ನಾಟ್ ಹ್ಯೂಮನ್ ಬೀಯಿಂಗ್? ನಿಮಗೆ ಮಾನವೀಯತೆ ಇಲ್ಲವೇ? ಗೆಟ್ ಔಟ್ ಫ್ರಂ ಹಿಯರ್. ಇಲ್ಲಿಂದ ನಡಿರೀ. ಆಸ್ಪತ್ರೆಯಲ್ಲಿ ಜನರು ಸಾಯುತ್ತಿದ್ದಾರೆ. ನಿಮಗೆ ಬೈಟ್ ಕೊಡಬೇಕಾ ಎಂದು ಕೆಂಡಾಮಂಡಲವಾದ ಪ್ರಸಂಗವೂ ನಡೆಯಿತು.

    ಸ್ಪೀಕರ್ ರಮೇಶ್ ಕುಮಾರ್ ಅವರು ಸ್ವಲ್ಪ ಸಮಯದ ಬಳಿಕ ಸುದ್ದಿಗೋಷ್ಠಿ ನಡೆಸಿ ಕೋಪಗೊಂಡಿದ್ದ ಪ್ರಸಂಗವನ್ನು ಪ್ರಸ್ತಾಪಿಸಿ ಕ್ಷಮೆ ಕೇಳಿದರು. ಈಗಾಗಲೇ ನನ್ನ ಕಚೇರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದೇನೆ. ಒಟ್ಟು 11 ಜನ ಶಾಸಕರು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಸಂಬಂಧಿಕರ ವಿವಾಹ ಇರುವುದರಿಂದ ಮಂಗಳವಾರ ಕಚೇರಿ ಹೋಗಿ ರಾಜೀನಾಮೆ ಪತ್ರ ಪರಿಶೀಲನೆ ನಡೆಸುತ್ತೇನೆ ಎಂದು ತಿಳಿಸಿದರು.

  • ನಾನು ಕೊಡಲ್ಲ, ರಾಜೀನಾಮೆ ಕೊಟ್ಟವ್ರ ಮನವೋಲಿಕೆಗೆ ಬಂದಿದ್ದೇನೆ: ಸೋಮಶೇಖರ್

    ನಾನು ಕೊಡಲ್ಲ, ರಾಜೀನಾಮೆ ಕೊಟ್ಟವ್ರ ಮನವೋಲಿಕೆಗೆ ಬಂದಿದ್ದೇನೆ: ಸೋಮಶೇಖರ್

    ಬೆಂಗಳೂರು: ನಾನು ರಾಜೀನಾಮೆ ಕೊಡಲು ಬಂದಿಲ್ಲ. ರಾಜೀನಾಮೆ ಕೊಟ್ಟಿರುವ ಶಾಸಕರ ಮನವೋಲಿಕೆಗೆ ಬಂದಿದ್ದೇನೆ ಎಂದು ಶಾಸಕ ಎಸ್.ಟಿ.ಸೋಮಶೇಕರ್ ಹೇಳಿದ್ದಾರೆ.

    ಕಾಂಗ್ರೆಸ್-ಜೆಡಿಎಸ್‍ನಲ್ಲಿ ರಾಜೀನಾಮೆ ಪರ್ವ ಶುರುವಾಗುತ್ತಿದ್ದಂತೆ ಅನೇಕ ಶಾಸಕರು ವಿಧಾನಸೌಧಕ್ಕೆ ಆಗಮಿಸಿದರು. ಈ ವೇಳೆ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಶಾಸಕ ಎಸ್.ಟಿ.ಸೋಮಶೇಕರ್ ಅವರು, ಪಕ್ಷದ ಶಾಸಕರು ರಾಜೀನಾಮೆ ಕೊಡುತ್ತಿದ್ದಾರೆ. ಅವರ ಮನವೊಲಿಸಿ ವಾಪಸ್ ಕರೆದುಕೊಂಡು ಹೋಗುತ್ತೇನೆ ಎಂದರು.

    ಯಾರ ಮನವೊಲಿಸುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಶಾಸಕರು, ಕಾಂಗ್ರೆಸ್‍ನ ಎಲ್ಲಾ ಶಾಸಕರನ್ನೂ ಕರೆದುಕೊಂಡು ಹೋಗುತ್ತೇನೆ. ಯಾವುದೇ ಶಾಸಕರು ರಾಜೀನಾಮೆ ಕೊಡುವುದಿಲ್ಲ ಬಿಡಿ ಎಂದು ಹೇಳಿದರು.

    ಶಾಸಕರ ಜೊತೆಗೆ ರಾಜರಾಜೇಶ್ವರಿ ಶಾಸಕ ಮುನಿರತ್ನ ಕೂಡ ಇದ್ದರು. ಶಾಸಕ ರಾಮಲಿಂಗಾರೆಡ್ಡಿ ಅವರು ಕೂಡ ರಾಜೀನಾಮೆ ನೀಡುತ್ತೇನೆ ಎಂದು ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ಬೆಂಗಳೂರಿನ 5 ಜನ ಶಾಸಕರು ಕೂಡ ರಾಜೀನಾಮೆ ನೀಡಲಿದ್ದಾರೆ.

    ಈ ಮಧ್ಯೆ ಸ್ಪೀಕರ್ ರಮೇಶ್ ಕುಮಾರ್ ಅವರು ಮಾಧ್ಯಮಗಳ ವಿರುದ್ಧ ಗುಡುಗಿದ್ದಾರೆ. ನೀವು ರಾಜೀನಾಮೆ ಅಂಗೀಕರಿಸುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಕೋಪದಿಂದ ಪ್ರತಿಕ್ರಿಯೆ ನೀಡಿದ ಸ್ಪೀಕರ್, ಯೂ ಆರ್ ನಾಟ್ ಹ್ಯೂಮನ್ ಬೀಯಿಂಗ್? ನಿಮಗೆ ಮಾನವೀಯತೆ ಇಲ್ಲವೇ? ಗೆಟ್ ಔಟ್ ಫ್ರಂ ಹಿಯರ್. ಇಲ್ಲಿಂದ ನಡಿರೀ. ಆಸ್ಪತ್ರೆಯಲ್ಲಿ ಜನರು ಸಾಯುತ್ತಿದ್ದಾರೆ. ನಿಮಗೆ ಬೈಟ್ ಕೊಡಬೇಕಾ ಎಂದು ಕೆಂಡಾಮಂಡಲವಾದ ಪ್ರಸಂಗವೂ ನಡೆಯಿತು.

    ಶಾಸಕರು ರಾಜೀನಾಮೆ ನೀಡುತ್ತಿದ್ದ ಬೆನ್ನಲ್ಲೇ ಸ್ಪೀಕರ್ ರಮೇಶ್ ಕುಮಾರ್ ಗರಂ ಆಗಿದ್ದರ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡಿ