Tag: ಎಸ್ ನಾರಾಯಣ್ ಅರೆಸ್ಟ್

  • ನಟ, ನಿರ್ದೇಶಕ ಎಸ್ ನಾರಾಯಣ್ ಅರೆಸ್ಟ್, ಬಿಡುಗಡೆ

    ನಟ, ನಿರ್ದೇಶಕ ಎಸ್ ನಾರಾಯಣ್ ಅರೆಸ್ಟ್, ಬಿಡುಗಡೆ

    ಬೆಂಗಳೂರು: ನಟ, ನಿರ್ದೇಶಕ ಎಸ್ ನಾರಾಯಣ್ ಅವರು ಬಂಧನಕ್ಕೆ ಒಳಗಾಗಿ ಬಿಡುಗಡೆಯಾಗಿದ್ದಾರೆ.

    ಐಡಿಬಿಐ ಬ್ಯಾಂಕ್ ನಲ್ಲಿ ಎಸ್ ನಾರಾಯಣ್ ಮೂರು ಕೋಟಿ ರೂ. ಹಣವನ್ನು ಸಾಲ ಪಡೆದಿದ್ದರು. ಸಾಲ ತೀರಿಸುವ ಗಡುವು ಮುಗಿದಿದ್ದರೂ ಎಸ್ ನಾರಾಯಣ್ ಸಾಲವನ್ನು ಮರು ಪಾವತಿಸಿರಲಿಲ್ಲ.

    ಸಾಲ ಮರುಪಾವತಿ ಮಾಡದ ಹಿನ್ನೆಲೆಯನ್ನು ಬ್ಯಾಂಕ್ ದೂರು ನೀಡಿದ ಹಿನ್ನೆಲೆಯಲ್ಲಿ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಎಸ್.ನಾರಾಯಣ್ ಅವರನ್ನು ಪೊಲೀಸರು ಬಂಧಿಸಿದ್ದರು. ಬಂಧನದ ಬಳಿಕ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ.