Tag: ಎಸ್ ಪಿ

  • ಸಿಬ್ಬಂದಿಯ ಸಮಸ್ಯೆ ತಿಳಿಯಲು ರಸ್ತೆಗಿಳಿದ ಹಾಸನ ಎಸ್‍ಪಿ ಶ್ರೀನಿವಾಸ್‍ ಗೌಡ

    ಸಿಬ್ಬಂದಿಯ ಸಮಸ್ಯೆ ತಿಳಿಯಲು ರಸ್ತೆಗಿಳಿದ ಹಾಸನ ಎಸ್‍ಪಿ ಶ್ರೀನಿವಾಸ್‍ ಗೌಡ

    -ಚನ್ನರಾಯಪಟ್ಟಣ ಸಂಚಾರ

    ಹಾಸನ: ಇತ್ತೀಚಿನ ದಿನಗಳಲ್ಲಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಚಾಕು ಇರಿತದಂತ ಪ್ರಕರಣಗಳು ಹೆಚ್ಚಾಗಿವೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಲು ಆಗುತ್ತಿರುವ ಸಮಸ್ಯೆಯನ್ನು ಸ್ವತಃ ಪರೀಕ್ಷಿಸಲು ಎಸ್‍ಪಿ ಶ್ರೀನಿವಾಸ್‍ಗೌಡ ಏಕಾಏಕಿ ರಸ್ತೆಗಿಳಿದು ಕಾರ್ಯಾಚರಣೆ ನಡೆಸಿದ್ದಾರೆ.

    ಕೆಲವು ದಿನಗಳ ಹಿಂದೆ ಚನ್ನರಾಯಪಟ್ಟಣ ಟೌನ್ ಠಾಣೆಯ ಪಿಎಸ್‍ಐ ಕಿರಣ್‍ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ರು. ಅವರು ಆತ್ಮಹತ್ಯೆಗೆ ಶರಣಾಗಲು ಚನ್ನರಾಯಪಟ್ಟಣ ವ್ಯಾಪ್ತಿಯಲ್ಲಿ ನಡೆದ ಎರಡು ಕೊಲೆಗಳು, ಕೆಲಸದ ಒತ್ತಡ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಚನ್ನರಾಯಪಟ್ಟಣದಲ್ಲಿ ತಮ್ಮ ಸಿಬ್ಬಂದಿ ಕೆಲಸ ನಿರ್ವಹಿಸಲು ಆಗುತ್ತಿರುವ ಸಮಸ್ಯೆಯನ್ನು ಸ್ವತಃ ಪರಿಶೀಲಿಸಲು ನಿನ್ನೆ ಸಂಜೆ ಎಸ್‍ಪಿ ಶ್ರೀನಿವಾಸ್‍ಗೌಡ ಏಕಾಏಕಿ ರಸ್ತೆಗಿಳಿದು ಪಟ್ಟಣ ಸಂಚಾರ ಮಾಡಿದ್ದಾರೆ.

    ಈ ವೇಳೆ ನಿಯಮ ಮೀರಿ ಮಧ್ಯ, ಸಿಗರೇಟ್ ಮಾಡುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಸಿಬ್ಬಂದಿಗೆ ಸೂಚಿಸಿದ್ದಾರೆ. ಅಷ್ಟೇ ಅಲ್ಲದೆ ಟ್ರಾಫಿಕ್ ನಿಯಮ ಉಲ್ಲಂಘಿಸುತ್ತಿರುವವರಿಗೆ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಎಸ್‍ಪಿ ಶ್ರೀನಿವಾಸ್ ಗೌಡ, ಇತ್ತೀಚೆಗೆ ಚನ್ನರಾಯಪಟ್ಟಣದಲ್ಲಿ ಕ್ರೈಂ ಹೆಚ್ಚಾಗುತ್ತಿತ್ತು. ನಾವು ನಮ್ಮ ಸಿಬ್ಬಂದಿಗೆ ಪ್ರೆಷರ್ ಹಾಕುವ ಬದಲು ಅವರಿಗೆ ಫೀಲ್ಡಲ್ಲಿ ಇರುವ ಕಷ್ಟ ನೇರವಾಗಿ ವೀಕ್ಷಿಸಲು ಸ್ವಯಂ ಆಗಿ ಬಂದೆ. ಇಲ್ಲಿ ಪಾರ್ಕಿಂಗ್ ಸಮಸ್ಯೆ ಇದೆ, ತುಂಬಾ ಜನ ಹೆಲ್ಮೆಟ್ ಹಾಕಲ್ಲ. ಕುಡಿಯೋದು ತುಂಬಾ ಕಂಪ್ಲೇಂಟ್ ಬರ್ತಿದೆ. ಲೈಸೆನ್ಸ್ ಇದೆ ಮಾರುತ್ತಿದ್ದೇವೆ ಅಂತಾರೆ. ಹೀಗಾಗಿ ಫ್ಯಾಕ್ಟ್ ಚೆಕ್‍ಗಾಗಿ ಫೀಲ್ಡಿಗಿಳಿಯಬೇಕಾಯ್ತು. ಕೆಲವೊಬ್ಬರು ಲೈಸೆನ್ಸ್ ನಿಯಮ ಮೀರಿದ್ದಾರೆ. ಎಲ್ಲೆಂದರಲ್ಲಿ ಸಿಗರೇಟ್ ಸೇದಿ ಹೆಣ್ಣುಮಕ್ಕಳಿಗೆ ತೊಂದರೆಯಾಗುತ್ತಿತ್ತು. ಈ ಬಗ್ಗೆಯೂ ಕಾನೂನು ಕ್ರಮ ಜರುಗಿಸಿದ್ದೇವೆ. ಯಾರ ಒತ್ತಡಕ್ಕೂ ಮಣಿಯದೆ ಕೆಲಸ ಮಾಡಲು ನಮ್ಮ ಪೊಲೀಸರಿಗೆ ಸೂಚಿಸಿದ್ದು ಅವರ ಜೊತೆ ನಾವು ಇರಲಿದ್ದೇವೆ ಎಂದು ಎಸ್‍ಪಿ ತಿಳಿಸಿದ್ದಾರೆ.

  • ರಿಲ್ಯಾಕ್ಸ್ ಮೂಡ್‍ನಲ್ಲಿದ್ದ ರೌಡಿಗಳ ಚಳಿ ಬಿಡಿಸಿದ ಕೋಟೆನಾಡಿನ ಲೇಡಿ ಸಿಂಗಂ

    ರಿಲ್ಯಾಕ್ಸ್ ಮೂಡ್‍ನಲ್ಲಿದ್ದ ರೌಡಿಗಳ ಚಳಿ ಬಿಡಿಸಿದ ಕೋಟೆನಾಡಿನ ಲೇಡಿ ಸಿಂಗಂ

    – ಅಡ್ಡದಾರಿ ಬಿಟ್ಟು ಕಷ್ಟಪಟ್ಟು ದುಡಿದು ಜೀವನ ಕಟ್ಟಿಕೊಳ್ಳಿ

    ಚಿತ್ರದುರ್ಗ: ಕೋಟೆನಾಡಿನಲ್ಲಿ ನಡೆಯುತಿದ್ದ ಮರಳು ದಂಧೆ, ಓಸಿ, ಮಟ್ಕಾ ಹಾಗೂ ಜೂಜುಕೋರರ ಸಿಂಹ ಸ್ವಪ್ನ ಎನಿಸಿದ್ದ ಎಸ್‍ಪಿ ಡಾ. ಅರುಣ್ ವರ್ಗಾವಣೆಯಾಗುತ್ತಿದ್ದಂತೆ ದಂಧೆಕೋರರು ಹಾಗೂ ರೌಡಿಶೀಟರ್‌ಗಳು ಫುಲ್ ರಿಲಾಕ್ಸ್ ಮೂಡ್‍ನಲ್ಲಿದ್ದರು. ಇದೀಗ ಕೋಟೆನಾಡಿನ ಲೇಡಿ ಸಿಂಗಂ ರಾಧಿಕಾ ಅವರ ಚಳಿ ಬಿಡಿಸಿದ್ದಾರೆ.

    ಕಳೆದ ಒಂದು ವಾರದ ಹಿಂದೆಯಷ್ಟೇ ಡ್ಯೂಟಿ ರಿಪೋರ್ಟ್ ಮಾಡಿಕೊಂಡಿರುವ ಚಿತ್ರದುರ್ಗದ ನೂತನ ಎಸ್‍ಪಿ ರಾಧಿಕಾ ಅವರು ಇಂದು ರೌಡಿಶೀಟರ್‌ಗಳ ಪರೇಡ್ ನಡೆಸಿದರು. ಈ ವೇಳೆ ರೌಡಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನೀವು ಸರಿ ದಾರಿಯಲ್ಲಿ ನಡೆದರೆ ಸರಿ, ಇಲ್ಲಾಂದ್ರೆ ನಾನು ಮಾತ್ರ ನಿಮ್ಮನ್ನು ಸುಮ್ಮನೆ ಬಿಡಲ್ಲ ಎಂದು ಖಡಕ್ ವಾರ್ನ್ ಕೊಟ್ಟಿದ್ದಾರೆ.

    ನಗರದ ಡಿ.ಆರ್.ಗ್ರೌಂಡ್‍ನಲ್ಲಿ ಹಮ್ಮಿಕೊಂಡಿದ್ದ ರೌಡಿಗಳ ಪರೇಡ್‍ನಲ್ಲಿ ಭಾಗವಹಿಸಿ ರೌಡಿಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ಒಳ್ಳೆತನದಿಂದ ಇದ್ದು ಸರಿ ದಾರಿಯಲ್ಲಿ ನಡೆಯುತ್ತೀನಿ ಅಂದರೆ ನಮ್ಮ ಸಪೋರ್ಟ್ ಇರುತ್ತೆ. ಮತ್ತೆ ಏನಾದರು ಬಾಲ ಬಿಚ್ಚಿ ತಮ್ಮ ಹಳೆ ಕಸುಬನ್ನು ಮುಂದವರಿಸಿದರೆ, ನಾನು ಮಾತ್ರ ನಿಮ್ಮನ್ನು ಸುಮ್ಮನೆ ಬಿಡಲ್ಲ. ಹಾಗೆಯೇ ಅಡ್ಡದಾರಿಗಳನ್ನೆಲ್ಲಾ ಬಿಟ್ಟು ಕಷ್ಟಪಟ್ಟು ದುಡಿದು ತಮ್ಮ ಜೀವನವನ್ನು ಕಟ್ಟಿಕೊಳ್ಳಿ ಎಂದು ಸೂಚಿಸಿದ್ದಾರೆ.

  • ಪೊಲೀಸರೇನು ಹುಚ್ಚರಾ? ಪ್ರತಿಭಟನಾಕಾರರ ಮೇಲೆ ಯಾದಗಿರಿ ಎಸ್.ಪಿ ಗರಂ

    ಪೊಲೀಸರೇನು ಹುಚ್ಚರಾ? ಪ್ರತಿಭಟನಾಕಾರರ ಮೇಲೆ ಯಾದಗಿರಿ ಎಸ್.ಪಿ ಗರಂ

    ಯಾದಗಿರಿ: ಪೊಲೀಸರೇನು ಹುಚ್ಚರಾ ಎಂದು ಪ್ರತಿಭಟನಾ ನಿರತರರಿಗೆ ಸಿನಿಮಾ ಸ್ಟೈಲ್‍ನಲ್ಲಿ ಯಾದಗಿರಿ ಎಸ್.ಪಿ ಋಷಿಕೇಶ್ ಭಗವಾನ್ ಗರಂ ಆಗಿದ್ದಾರೆ.

    ಇಂದು ಜಿಲ್ಲೆಯ ವಡಗೇರ ಪಟ್ಟಣದಲ್ಲಿ ಅಂಬೇಡ್ಕರ್ ಭಾವಚಿತ್ರ ಸಹಿತ ನಾಮಫಲಕ ಹಾಕುವ ವಿಚಾರದಲ್ಲಿ ಎರಡು ಸಮುದಾಯಗಳ ನಡುವೆ ಸಂರ್ಘಷ ಏರ್ಪಟಿತ್ತು. ಹೀಗಾಗಿ ಸ್ಥಳಕ್ಕೆ ಎಸ್.ಪಿ ಋಷಿಕೇಶ್ ಭಗವಾನ್ ಭೇಟಿ ನೀಡಿದ್ದರು.

    ಈ ಸಂದರ್ಭದಲ್ಲಿ ಪ್ರತಿಭಟನೆ ಮಾಡುತ್ತಿದ್ದವರು ಪೊಲೀಸರ ವಿರುದ್ಧ ಘೋಷಣೆ ಕೂಗಲು ಮುಂದಾದರು. ಇದರಿಂದ ಸಿಡಿಮಿಡಿಗೊಂಡ ಎಸ್.ಪಿ ಋಷಿಕೇಶ್ ಪೊಲೀಸರು ನಿಮಗೆ ಹಚ್ಚಾರ ತರ ಕಾಣುತ್ತೇವಾ? ನಾವು ಏನ್ ಮಾಡಿದ್ದೀವಿ ನಿಮಗೆ ಎಂದು ಪ್ರತಿಭಟನಾಕಾರರ ವಿರುದ್ಧ ಗರಂ ಆದರು.

    ಇದೇ ತಿಂಗಳ 8ರಂದು ವಡಗೇರಾ ಪಟ್ಟಣದ ಹಳೆ ಪೊಲೀಸ್ ಠಾಣೆ ಮುಂದೆ ದಲಿತ ಸಮುದಾಯದಿಂದ ಅಂಬೇಡ್ಕರ್ ನಾಮಫಲಕ ಅಳವಡಿಕೆ ಮಾಡಲಾಗಿತ್ತು. ಆದರೆ ನಾಮ ಫಲಕ ಅಳವಡಿಕೆಗೆ ಅನುಮತಿ ಇಲ್ಲವೆಂದು ಪೊಲೀಸರು ಅದನ್ನು ತೆರವುಗೊಳಿಸಿದ್ದರು. ನಾಮ ಫಲಕವನ್ನು ಅನಧಿಕೃತವಾಗಿ ಅಳವಡಿಸಲಾಗಿದೆ ಎಂಬ ಆರೋಪದ ಮೇಲೆ 8 ಜನರ ಮೇಲೆ ವಡಗೇರಾ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದರು.

    ಈ ವಿಚಾರದಲ್ಲಿ ಪೊಲೀಸರಿಗೆ ಕುರುಬ ಸಮುದಾಯದ ಕುಮ್ಮಕ್ಕಿದೆ. ಅದ್ದರಿಂದ ನಾಮಫಲಕ ತೆರವುಗೊಳಿಸಿದ್ದಾರೆಂದು ದಲಿತ ಸಂಘಟನೆಗಳು ಆರೋಪಿಸಿ, ತೆರವುಗೊಳಿಸಿದ ಜಾಗದಲ್ಲಿಯೇ ನಾಮಫಲಕ ಹಾಕಬೇಕೆಂದು ಹಳೆ ಠಾಣೆ ಹಿಂಭಾಗದ ರಸ್ತೆ ತಡೆದು ದಲಿತ ಸಂಘಟನೆಗಳು ಪ್ರತಿಭಟನೆ ಮಾಡುತ್ತಿದ್ದಾರೆ.

  • ಅಪರಾಧ ಮಾಡಲು ಜನರು ಹೆದರುತ್ತಿದ್ದಾರೆ, ಕ್ರಿಮಿನಲ್ ಗಳು ತರಕಾರಿ ಮಾರುತ್ತಿದ್ದಾರೆ : ಯೋಗಿ ಆದಿತ್ಯನಾಥ್

    ಅಪರಾಧ ಮಾಡಲು ಜನರು ಹೆದರುತ್ತಿದ್ದಾರೆ, ಕ್ರಿಮಿನಲ್ ಗಳು ತರಕಾರಿ ಮಾರುತ್ತಿದ್ದಾರೆ : ಯೋಗಿ ಆದಿತ್ಯನಾಥ್

    ಲಕ್ನೊ: ಬಿಜೆಪಿ ಸರ್ಕಾರ ಆಡಳಿತ ವಹಿಸಿಕೊಂಡ ಬಳಿಕ ಜನರು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವುದು ಕಡಿಮೆಯಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

    ಅಪರಾಧ ಕೃತ್ಯಗಳಲ್ಲಿ ತೊಡಗುವುದನ್ನು ಬಿಟ್ಟು ಕ್ರಿಮಿನಲ್ ಗಳು ತರಕಾರಿಯನ್ನು ಮಾರಾಟ ಮಾಡುತ್ತಿದ್ದಾರೆ. ಹಿಂದಿನ ಸಮಾಜವಾದಿ ಮತ್ತು ಬಹುಜನ ಸಮಾಜವಾದಿ ಪಕ್ಷಗಳು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡಿದ್ದವು ಎಂದು ದೂರಿದರು.

    ಇದೇ ವೇಳೆ ಯುವಕರಿಗೆ ಉದ್ಯೋಗವನ್ನು ಸೃಷ್ಟಿಸುವ ಭರವಸೆಯನ್ನು ನೀಡಿದರು. 1.62 ಲಕ್ಷ ಪೊಲೀಸ್ ಕಾನ್ಸ್ ಟೇಬಲ್ ಗಳನ್ನು ಮತ್ತು 1.37 ಲಕ್ಷ ಶಿಕ್ಷಕರನ್ನು ಸರ್ಕಾರ ನೇಮಕ ಮಾಡಿಕೊಳ್ಳುತ್ತದೆ. ಗುತ್ತಿಗೆ ಆಧಾರದ ಶಿಕ್ಷಕರಿಗೆ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನವನ್ನು ಹೆಚ್ಚಿಸಲಾಗುವುದು ಎಂದು ತಿಳಿಸಿದರು.

    2013ರಲ್ಲಿ ಮುಜಾಫರ್ ನಗರದಲ್ಲಿ ನಡೆದ ಹಿಂದು ಮುಸ್ಲಿಂ ಗಲಭೆಯಲ್ಲಿ ಹಲವಾರು ಮುಸಲ್ಮಾನ ಕುಟುಂಬಗಳು ಸ್ಥಳಾಂತರಗೊಂಡವು. 2016 ರಲ್ಲಿ ಶಾಮ್ಲಿ ಜಿಲ್ಲೆಯ ಕೈರಾನ ಬ್ಲಾಕ್ ನಲ್ಲಿ ಹಿಂದೂಗಳಿಗೆ ಅಪಾಯ ಇದೆ ಎಂದು ಹಲವಾರು ಹಿಂದು ಕುಟುಂಬಗಳು ಸ್ಥಳಾಂತರಗೊಂಡವು ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಹಿಂದಿನ ಎಸ್ ಪಿ ಸರ್ಕಾರದಲ್ಲಿ ಎಲ್ಲಾ ಸಮುದಾಯದ ಯುವಕರಿಗೆ ಉದ್ಯೋಗ ಸಿಗಲಿಲ್ಲ. ಕೇವಲ ನಿರ್ಧಿಷ್ಟ ಸಮುದಾಯದವರಿಗೆ ಉದ್ಯೋಗಗಳು ದೊರೆತಿದೆ. ನಮ್ಮ ಸರ್ಕಾರದಲ್ಲಿ ಎಲ್ಲಾ ವರ್ಗದವರಿಗೂ ಉದ್ಯೋಗ ಸಿಗುವಂತೆ ನಿಯಮಗಳನ್ನು ರೂಪಿಸಿದ್ದೇವೆ ಎಂದು ತಿಳಿಸಿದರು.

  • ಮಂಡ್ಯ ಎಸ್‍ಪಿಗೆ ಸಿಎಂ ಜೋರು ಮಾಡಿದ್ದು ಸರಿ: ಪರಮೇಶ್ವರ್ ಸಮರ್ಥನೆ

    ಮಂಡ್ಯ ಎಸ್‍ಪಿಗೆ ಸಿಎಂ ಜೋರು ಮಾಡಿದ್ದು ಸರಿ: ಪರಮೇಶ್ವರ್ ಸಮರ್ಥನೆ

    ಚಿಕ್ಕಮಗಳೂರು: ಮಂಡ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ತೋರಿಸಿದ ಹಿನ್ನೆಲೆಯಲ್ಲಿ ಸಿಎಂ ಎಸ್‍ಪಿ ಸುಧೀರ್‍ಕುಮಾರ್ ರೆಡ್ಡಿ ಅವರಿಗೆ ಜೋರು ಮಾಡಿದ್ದು ಸರಿ ಇದೆ ಅಂತಾ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವೇಳೆ ಕಪ್ಪು ಬಾವುಟ ತೋರಿಸುವ ಬದಲು ಕಲ್ಲು ಎಸೆದಿದ್ದರೆ ಏನಾಗ್ತಿತ್ತು? ಹೀಗಾಗಿ ಸಿಎಂ ಎಸ್‍ಪಿಗೆ ಜೋರು ಮಾಡಿದ್ದು ಸರಿ. ಈ ವಿಚಾರದ ಬಗ್ಗೆ ಈಗಾಗಲೇ ಮಂಡ್ಯ ಎಸ್‍ಪಿ ಬಳಿ ಮಾತನಾಡಿದ್ದೇನೆ. ಅಲ್ಲದೇ ಘಟನೆ ನಡೆದ ಸಂದರ್ಭ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಅಂತಾ ಹೇಳಿದ್ರು.

    ಇದನ್ನೂ ಓದಿ: ನಿನಗ್ಯಾರು ಐಪಿಎಸ್ ಕೊಟ್ಟಿದ್ದು?- ಮಂಡ್ಯ ಎಸ್‍ಪಿಗೆ ಸಿಎಂ ಸಾರ್ವಜನಿಕ ಬೈಗುಳ

    ಶೆಟ್ಟರ್ ಹೇಳಿಕೆಗೆ ತಿರುಗೇಟು: ಉಪಚುನಾವಣೆಯಲ್ಲಿ ಗೆದ್ದು ಐಸಿಯುನಲ್ಲಿದ್ದ ಕಾಂಗ್ರೆಸ್ ಸರ್ಕಾರ ಚೇತರಿಸಿಕೊಂಡಿದೆ ಎಂಬ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆಗೆ ತಿರುಗೇಟು ನೀಡಿದ ಪರಂ, ಜಗದೀಶ್ ಶೆಟ್ಟರ್ ಬಾಯಿಗೆ ಬಂದಂತೆ ಮಾತನಾಡಬಾರದು. 2013ರಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿತ್ತು. 20 ಉಪಚುನಾವಣೆಗಳು ನಡೆದವು. ಅವರು ಸಹ ಹಣ ಹಾಗೂ ಹೆಂಡದ ಹೊಳೆ ಹರಿಸಿದ್ದಾರೆ ಅಂತ ನಾವು ಹೇಳಬೇಕಾಗುತ್ತದೆ. ಇದು ಮತದಾರರು ನೀಡಿರುವ ತೀರ್ಪು. ಸರ್ಕಾರ ಹಾಗೂ ಸಿಎಂ ಅಭಿವೃದ್ಧಿ ಕಾರ್ಯಗಳೇ ನಮ್ಮ ಗೆಲುವಿಗೆ ಕಾರಣ ಅಂದ್ರು.

    ಉಪಚುನಾವಣೆ ಫಲಿತಾಂಶ 2018ರ ಸೆಮಿಫೈನಲ್ ಎಂದು ಯಡಿಯೂರಪ್ಪ ಹೇಳಿದ್ರು. ಆದರೇ ಅವರು ಸೆಮಿಫೈನಲ್‍ನಲ್ಲಿ ಸೋತಿದಾರೆ. ಸೆಮಿಫೈನಲ್‍ನಲ್ಲಿ ಸೋತವರು ಎಲ್ಲಿಗೆ ಹೋಗುತ್ತಾರೆ? ಆದರೂ 150 ಸೀಟ್ ಗೆಲ್ಲುತ್ತಾರೆ ಅಂತ ಹೇಳ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಅಂತಾ ಪರಂ ವಿಶ್ವಾಸ ವ್ಯಕ್ತಪಡಿಸಿದ್ರು.

    https://www.youtube.com/watch?v=EPh2F90UOc8