ಕೋಲಾರ: ಯತ್ನಾಳ್ (Basangouda Patil Yatnal) ಒಳ್ಳೆಯ ನಾಯಕ ಅಂತ ನಾವೆಲ್ಲ ತಿಳಿದಿದ್ದೆವು. ಅವರೊಬ್ಬರೇ ಹಿಂದುತ್ವದ ನಾಯಕರಲ್ಲ, ಸಾವಿರಾರು ವರ್ಷಗಳಿಂದ ಹಿಂದುತ್ವದ ನಾಯಕರಿದ್ದಾರೆ ಎಂದು ಕೋಲಾರ ಮಾಜಿ ಸಂಸದ ಎಸ್ ಮುನಿಸ್ವಾಮಿ (S Muniswamy), ಯತ್ನಾಳ್‌ಗೆ ಟಾಂಗ್ ಕೊಟ್ಟಿದ್ದಾರೆ.
ಕೋಲಾರದ (Kolar) ಪತ್ರಕರ್ತರ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಹಿಂದೂ ಹುಲಿ ಎಂದು ಅವರು ಹೇಳಿಕೊಳ್ಳುತ್ತಿದ್ದರು. ಪಕ್ಷದಲ್ಲಿ ಲಿಮಿಟ್ ಮೀರಿದ್ದಾರೆ ಎಂದು ಅವರನ್ನು ಅಮಾನತು ಮಾಡಲಾಗಿದೆ. ವಯಸ್ಸಿಗೆ ಬೆಲೆ ಇದೆ, ಅದನ್ನು ಯತ್ನಾಳ್ ಉಳಿಸಿಕೊಳ್ಳಲಿ. ನೂತನ ಪಕ್ಷ ಕಟ್ಟಿರೋರನ್ನು ರಾಜ್ಯದಲ್ಲಿ ಸುಮಾರು ಜನರನ್ನು ನೋಡಿದ್ದೇವೆ. ಯತ್ನಾಳ್‌ಗೆ ಗೌರವ ಕೊಡುತ್ತೇವೆ. ಎಲ್ಲದಕ್ಕೂ ಒಂದು ತಾಳ್ಮೆ ಇದೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ʻಕೈʼ ಶಾಸಕ ತುರವಿಹಾಳ ಪುತ್ರ, ಸಹೋದರನಿಂದ ಮೊಲ ಬೇಟೆ, ಮಾರಕಾಸ್ರ್ತಹಿಡಿದು ಮೆರವಣಿಗೆ
ನಾವೇನು ಪಾಕಿಸ್ತಾನದಿಂದ ಬಂದಿರುವ ನಾಯಕರಾ? ಯತ್ನಾಳ್ ಮಾತನಾಡುವಾಗ ಇತಿಮಿತಿ ಇರಲಿ. ರಾಜ್ಯದ ಬಹುಸಂಖ್ಯಾತ ಜನರು ಬಿಜೆಪಿ ಜೊತೆ ಇದ್ದಾರೆ. ಕಾಂಗ್ರೆಸ್‌ನವರಿಗೆ ದಿನಕ್ಕೊಂದು ಅಸ್ತ್ರ ಕೊಡುತ್ತಿದ್ದಾರೆ ಎಂದು ಯತ್ನಾಳ್ ವಿರುದ್ಧ ಜನರು ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಯತ್ನಾಳ್ ಮಾತಾಡಲಿ ಆಗ ಮೆಚ್ಚುತ್ತೇವೆ. ಯತ್ನಾಳ್ ಒಬ್ಬರೇ ಅಲ್ಲ ಹಿಂದುತ್ವದ ನಾಯಕ, ಜನರು ನಮ್ಮನ್ನೂ ಹಿಂದೂ ಫೈರ್ ಬ್ರ್ಯಾಂಡ್ ಎಂದು ಕರೆಯುತ್ತಾರೆ ಎಂದರು. ಇದನ್ನೂ ಓದಿ: ಚಿತ್ರದುರ್ಗ| ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರು ಸಾವು, ಮೂವರಿಗೆ ಗಾಯ
ಕೋಲಾರ: ಮುಡಾದಲ್ಲಿ (Muda Case) ಸಿದ್ದರಾಮಯ್ಯ (Siddaramaiah) ಭ್ರಷ್ಟಾಚಾರ ಮಾಡಿಲ್ಲವೆಂದರೆ ನಿವೇಶನಗಳನ್ನು ಏಕೆ ವಾಪಸ್ ಕೊಟ್ಟರು, ಮುಡಾದಲ್ಲಿ 5,000 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂದು ಮಾಜಿ ಸಂಸದ ಎಸ್ ಮುನಿಸ್ವಾಮಿ (S Muniswamy) ಟಾಂಗ್ ಕೊಟ್ಟಿದ್ದಾರೆ.
ಇ.ಡಿಯನ್ನು ಕೇಂದ್ರ ಸರ್ಕಾರ ದರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಕೋಲಾರದ (Kolar) ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ 14 ನಿವೇಶನಗಳಿಗೆ ತಮಗೆ ಸಂಬಂಧವಿಲ್ಲವೆಂದು ಹೇಳಿದವರು, ನಂತರ 65 ಕೋಟಿ ಕೊಟ್ಟರೆ ಬಿಟ್ಟು ಕೊಡುವುದಾಗಿ ಹೇಳಿದರು. ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಅವರು ಮುಡಾ ಡಿನೋಟಿಫಿಕೇಷನ್ ಆಗುವಂತಹ ಸಂದರ್ಭದಲ್ಲಿ ಎಸ್‌ಸಿ ಭೂಮಿಯನ್ನು ಕಾನೂನು ಬಾಹಿರವಾಗಿ ಪ್ರಭಾವ ಬೀರಿ ತಮ್ಮ ಬಾಮೈದುನ ಹೆಸರಿಗೆ ಮಾಡಿದ್ದಾರೆ. ನಂತರ ದೇವರಾಜ್ ಅವರ ಮುಖಾಂತರ ಸಿದ್ದರಾಮಯ್ಯ ಅವರ ಪತ್ನಿ ಹೆಸರಿಗೆ ಮಾಡಿಸಿಕೊಂಡರು. ಇದರಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರವಿಲ್ಲವಾ? ಮುಡಾ ದಾಖಲೆಗಳಲ್ಲಿ ವೈಟ್ ಲೆಡ್ ಹಾಕಿ ದಾಖಲೆ ತಿರುಚಿದವರು ಯಾರು ಎಂದು ಪ್ರಶ್ನಿಸಿದರು. ಇದನ್ನೂ ಓದಿ: 2028ರ ವರೆಗೆ ಈ ಸರ್ಕಾರ ನಡೆಯಲ್ಲ, ಮತ್ತೆ ನಾನೇ ಸಿಎಂ: ಹೆಚ್‌ಡಿಕೆ
ಮುಡಾ ಹಗರಣದಲ್ಲಿ ಭ್ರಷ್ಟಾಚಾರ ಆಗಿರುವ ಕಾರಣ ಅದರ ಅಧ್ಯಕ್ಷ ಮರೀಗೌಡ ರಾಜೀನಾಮೆ ಕೊಟ್ಟಿದ್ದಾರೆ. ಭ್ರಷ್ಟಚಾರ ನಡೆದಿಲ್ಲವೆಂದರೆ ಅವರು ಏಕೆ ರಾಜೀನಾಮೆ ಕೊಟ್ಟರು? ಆದರೆ ಈಗ ಇ.ಡಿ ತನಿಖೆ ಮಾಡುವುದರಲ್ಲಿ ತಪ್ಪೇನಿದೆ? ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ನಡೆದಿರುವುದು ಒಪ್ಪಿಕೊಂಡು ಸಚಿವ ನಾಗೇಂದ್ರ ರಾಜೀನಾಮೆ ನೀಡಿಲ್ಲವಾ? ನಕಲಿ ಕೋ ಆಪರೇಟಿವ್ ಸೊಸೈಟಿಗಳನ್ನು ಓಪನ್ ಮಾಡಿ ಹಣ ವರ್ಗಾವಣೆ ಮಾಡಿದರು. ಇಷ್ಟೆಲ್ಲಾ ನಡೆದರೂ ರಾಜೀನಾಮೆ ನೀಡದ ಮೊಂಡು ಆಟವಾಡುತ್ತಿರುವ ಸಿದ್ದರಾಮಯ್ಯ ಅವರೇ ನಿಮಗೆ ನಾಚಿಕೆಯಾಗುವುದಿಲ್ಲವೇ ಎಂದು ಹರಿಹಾಯ್ದರು. ಇದನ್ನೂ ಓದಿ: ಮಠದಲ್ಲಿ ಹುಕ್ಕೇರಿ ಕೆಡಿಪಿ ಸಭೆ ನಡೆಸಿದ ಸಚಿವ ಸತೀಶ್ ಜಾರಕಿಹೊಳಿ
ಕೋಲಾರ: ಸಿಎಂ ಸಿದ್ದರಾಮಯ್ಯ (Siddaramaiah) ಅವರು ಅಂಬೇಡ್ಕರ್ ಅವರ ಹೆಸರಿನಲ್ಲಿ ದಲಿತರನ್ನ ಯಾಮಾರಿಸುತ್ತಿದ್ದು ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಸಂಸದ ಎಸ್.ಮುನಿಸ್ವಾಮಿ (S. Muniswamy) ಒತ್ತಾಯಿಸಿದ್ದಾರೆ.
ಕೋಲಾರದಲ್ಲಿ (Kolar) ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ದಲಿತರಿಗೆ ಮೀಸಲಾಗಿದ್ದ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸಿಕೊಂಡು ಸಂವಿಧಾನ ಐಕ್ಯತಾ ಸಮಾವೇಶ ಮಾಡಿ ದಲಿತರನ್ನು ಯಾಮಾರಿಸುತ್ತಿದ್ದಾರೆ. ದಲಿತರ ಹಣದಲ್ಲಿ ಕೋಟಿ ಕೋಟಿ ರೂ. ವೆಚ್ಚ ಮಾಡಿ ಸಂವಿಧಾನ ಐಕ್ಯತಾ ಸಮಾವೇಶವನ್ನ ಮಾಡಿದ್ದಾರೆ. ಅಲ್ಲದೇ ಸಿದ್ದರಾಮಯ್ಯ ಅವರಿಗೆ ಮೊದಲಿನಿಂದಲೂ ದಲಿತರ ಮೇಲೆ ಕಾಳಜಿ ಇಲ್ಲ. ಮತ ಬ್ಯಾಂಕ್‍ಗಾಗಿ ಚುನಾವಣಾ ಸಮಯದಲ್ಲಿ ದಲಿತರ ಹೆಸರು ಹೇಳುತ್ತಾರೆ. ಇನ್ನೂ ದಲಿತ ಸಮಾಜದ ಪರವಾಗಿ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗುತ್ತೇನೆ. ಈ ಸಮಾವೇಶದಲ್ಲಿಯೇ ಸಿದ್ದರಾಮಯ್ಯ ಅವರು ಬಹಿರಂಗ ಕ್ಷಮೆ ಕೇಳಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಆದ ಅನ್ಯಾಯ ಕೇಳಿದ್ರೆ ಗುಂಡಿಕ್ಕಿ ಅಂತಾರೆ, ನಾಡಿಗೋಸ್ಕರ ನನ್ನ ದೇಹ ಕೊಡಲು ಸಿದ್ಧ: ಡಿ.ಕೆ.ಸುರೇಶ್
ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನ ನಡೆಯುತ್ತದೆ ಎನ್ನುವ ಆತಂಕ ಬಿಜೆಪಿಗೆ (BJP) ಇದೆಯೇ ಎಂಬ ಪ್ರಶ್ನೆಗೆ, ನಮ್ಮ ಪಕ್ಷದಲ್ಲಿ ಆ ರೀತಿ ಯಾವುದೇ ಘಟನೆ ನಡೆಯುವುದಿಲ್ಲ. ಕಾಂಗ್ರೆಸ್ (Congress) ಪಕ್ಷದಲ್ಲಿ ಅನುದಾನ ಸಿಗದೆ ಶಾಸಕರು ಅಸಮಧಾನದಲ್ಲಿ ಇದ್ದಾರೆ. ಹೀಗಾಗಿ ಅವರಲ್ಲೇ ಯಾರಾದರೂ ಅಡ್ಡಮತದಾನ ಮಾಡಬಹುದು. ಇನ್ನೂ ಈ ಕುರಿತು ಆತಂಕ ಇರಬೇಕಾಗಿರುವುದು ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರಿಗೆ. ಕಾಂಗ್ರೆಸ್‍ನಲ್ಲಿ ಇದ್ದು ಕಾಂಗ್ರೆಸ್ ಬಗ್ಗೆಯೇ ಮಾತನಾಡುವವರನ್ನ ನಾವು ನೋಡಿದ್ದೇವೆ ಎಂದಿದ್ದಾರೆ.
ಇನ್ನೂ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರು ದೇಶಾದ್ಯಂತ ಕೇಂದ್ರದ 554 ವಿವಿಧ ಯೋಜನೆಗಳ ಶಂಕುಸ್ಥಾಪನೆಯನ್ನು ವರ್ಚವಲ್ ಮೂಲಕ ಉದ್ಘಾಟಿಸಲಿದ್ದಾರೆ. ಇದರ ಭಾಗವಾಗಿ ಕೋಲಾರ ಜಿಲ್ಲೆಯ ಮಾಲೂರು ಹಾಗೂ ಬಂಗಾರಪೇಟೆ ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸುವ ಯೋಜನೆಗಳಿಗೆ ಆಯಾ ನಿಲ್ದಾಣಗಳಲ್ಲಿ ವರ್ಚವಲ್ ಮೂಲಕ ಉದ್ಘಾಟನೆ ಮಾಡಲಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಈಗ ನಡೆಯುವುದು ಗ್ಯಾರಂಟಿ ಬೇಕಾ? ಬೇಡವಾ? ಎನ್ನುವ ಚುನಾವಣೆ: ಹೆಚ್.ಸಿ.ಬಾಲಕೃಷ್ಣ
ಕೋಲಾರ : ಈ ದೇಶಕ್ಕೆ 60 ವರ್ಷಗಳಿಂದ ಕಾಂಗ್ರೆಸ್ ನವರು (Congress) ಅನ್ಯಾಯ ಮಾಡಿದ್ದಾರೆ. ಈಗ ನ್ಯಾಯ ಕೇಳಲು ಯಾತ್ರೆ ಮಾಡುತ್ತಿದ್ದಾರೆ ಎಂದು ಸಂಸದ ಎಸ್.ಮುನಿಸ್ವಾಮಿ (MP Muniswamy) ಕಾಂಗ್ರೆಸ್ ನ್ಯಾಯ ಯಾತ್ರೆ ಕುರಿತು ವ್ಯಂಗ್ಯವಾಡಿದ್ದಾರೆ.
ಈ ಸಂಬಂಧ ಕೋಲಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶಕ್ಕೆ ಅನ್ಯಾಯ ಮಾಡಿಕೊಂಡಿದ್ದ ಇವರು ಜನರ ಬಳಿ ಹೋದಷ್ಟು ಇವರು ಮಾಡಿರುವ ಅನ್ಯಾಯವನ್ನ ಜನರೇ ಬಿಚ್ಚಿ ಹೇಳುತ್ತಾರೆ. ಅಲ್ಲದೆ ಇವರಿಗೆ ನ್ಯಾಯ ಎಂದು ಹೇಳುವುದಕ್ಕೆ ಅರ್ಹತೆ ಇಲ್ಲ. ಹೀಗಿರುವಾಗ ಇವರ ನ್ಯಾಯ ಏನು ಎಂದು ಪ್ರಶ್ನೆ ಮಾಡಿದ್ರು.
ಜಮ್ಮು-ಕಾಶ್ಮೀರ, ಚೀನಾ ಸೇರಿದಂತೆ ಎಮೆರ್ಜೆನ್ಸಿ ಸಮಯದಲ್ಲಿ ಏನು ಮಾಡಿದ್ದೀರಿ ಎಂದು ಜನರಿಗೆ ತಿಳಿದಿದೆ. ಜೊತೆಗೆ ಅಯೋಧ್ಯೆ ರಾಮಮಂದಿರ (Ayodhya Ram Mandir) ಕಟ್ಟುವ ವಿಚಾರದಲ್ಲಿ ಡಿ.ಸಿ ಅವರನ್ನ ಹೇಗೆ ನಡೆಸಿಕೊಂಡು ಎತ್ತಂಗಡಿ ಮಾಡಿದ್ರು ಎಂದು ಮರುಪ್ರಶ್ನೆ ಹಾಕಿದರು.
ಲಾಲ್ ಬಹದ್ದೂರ್ ಶಾಸ್ತ್ರಿ, ಸುಭಾಷ್ ಚಂದ್ರ ಬೋಸ್, ಶ್ಯಾಮ್ ಪ್ರಸಾದ್ ಮುಖರ್ಜಿ ಇವರ ಹತ್ಯೆ ಯಾರು ಮಾಡಿದ್ದಾರೆಂದು ಗೊತ್ತಿದೆ. ಇದೆಲ್ಲವನ್ನ ನೋಡಿದಾಗ ಈ ದೇಶಕ್ಕೆ ಕಾಂಗ್ರೆಸ್ ನವರು ಎಷ್ಟು ಅನ್ಯಾಯ ಮಾಡಿದ್ದಾರೆಂದು ತಿಳಿಯುತ್ತದೆ. ನೀವು ಎಷ್ಟೇ ಪಾದ ಯಾತ್ರೆಗಳನ್ನ ಮಾಡಿದ್ರು ನಿಮ್ಮ ಪಾಪದ ಕೊಡ ತುಂಬಿರುವ ಪರಿಣಾಮ ಏನೇ ಮಾಡಿದ್ರೂ ಕಳೆದ ಪಂಚ ರಾಜ್ಯ ಚುನಾವಣೆಗಿಂತಲೂ ಇನ್ನೂ ನೆಲ ಕಚ್ಚುತ್ತೀರಿ ಎಂದು ವಾಗ್ದಾಳಿ ನಡೆಸಿದ್ರು.
ಭಾರತ ದೇಶದಲ್ಲಿ ಎಲ್ಲಾ ಜಾತಿಯ ಜನರು ಕಾಂಗ್ರೆಸ್‌ನ ತಿರಸ್ಕಾರ ಮಾಡಿದ್ದಾರೆ. ಕರ್ನಾಟದಲ್ಲಿ ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಮೂರೇ ತಿಂಗಳಲ್ಲಿ ಜನ ವಿರೋಧಿ ಸರ್ಕಾರ ಎನಿಸಿಕೊಂಡಿದೆ. ಎಲ್ಲೇ ಹೋದರೂ ಕಾಂಗ್ರೆಸ್ ಪಕ್ಷಕ್ಕೆ ಜನರು ಛೀ.. ಥೂ ಎಂದು ಚೀಮಾರಿ ಹಾಕುತ್ತಿದ್ದಾರೆ ಎಂದು ಹೇಳಿದ್ರು.
ಕೋಲಾರ: ಇತ್ತೀಚೆಗೆ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಶಾಸಕ ನಾರಾಯಣಸ್ವಾಮಿ (Narayanaswamy) ಹಾಗೂ ಸಂಸದ ಮುನಿಸ್ವಾಮಿ (S Muniswamy) ಮಧ್ಯೆ ನಡೆದ ಜಟಾಪಟಿ ಸಂಬಂಧ ಇಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದೆ.
ಕೋಲಾರ (Kolar) ಸಂಸದ ಮುನಿಸ್ವಾಮಿ ವಿರುದ್ಧ ಬಂಗಾರಪೇಟೆ ಶಾಸಕರ ದೂರಿನ ಅನ್ವಯ FIR ದಾಖಲಾಗಿದೆ. ಮತ್ತೊಂದೆಡೆ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಬಾಲಾಜಿ ನೀಡಿದ ದೂರಿನ ಅನ್ವಯ ಶಾಸಕ ನಾರಾಯಣಸ್ವಾಮಿ ವಿರುದ್ಧ ಕೇಸ್ ದಾಖಲಾಗಿದೆ.
ಸೆಪ್ಟೆಂಬರ್ 25ರಂದು ನಡೆದ ಜನತಾದರ್ಶನ ಕಾರ್ಯಕ್ರಮದಲ್ಲಿ (Janata Darshan Programme) ಸಂಸದ ಮುನಿಸ್ವಾಮಿ ಸಚಿವ ಭೈರತಿ ಸುರೇಶ್ ಪಕ್ಕದಲ್ಲಿ ಕುಳಿತಿದ್ದರು. ಈ ವೇಳೆ ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಅವರನ್ನ ನೋಡಿಕೊಂಡು ಎಲ್ಲಾ ಭೂಗಳ್ಳರನ್ನು ಅಕ್ಕಪಕ್ಕ ಕೂರಿಸಿಕೊಂಡು ಜನತಾ ದರ್ಶನ ಮಾಡ್ತಾ ಇದ್ದಾರೆ ಎಂದರು. ಈ ವೇಳೆ ಕ್ಷಣಾರ್ಧದಲ್ಲಿ ಆಕ್ರೋಶಗೊಂಡ ನಾರಾಯಣಸ್ವಾಮಿ ಸಂಸದರಿಗೆ ಏಕವಚನದಲ್ಲೇ ಬೈಯಲು ಶುರು ಮಾಡಿಕೊಂಡರು.
ಕೊನೆಗೆ ಇಬ್ಬರ ನಡುವಿನ ಜಟಾಪಟಿ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ಈ ವೇಳೆ ಸಂಸದ ಮುನಿಸ್ವಾಮಿಯನ್ನು ತಬ್ಬಿಕೊಂಡ ಕೋಲಾರ ಎಸ್ಪಿ ನಾರಾಯಣ ಸಂಸದರನ್ನ ಹಿಡಿದುಕೊಂಡು ವೇದಿಕೆಯಿಂದ ಹೊರಗೆ ಕರೆದುಕೊಂಡು ಹೋದರು. ಈ ಸಂದರ್ಭ ಸಾಕಷ್ಟು ತಳ್ಳಾಟ ನೂಕಾಟದ ಜೊತೆಗೆ ಕಾರ್ಯಕ್ರಮದ ವೇದಿಕೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಘಟನೆ ನಂತರ ಸಂಸದ ಮುನಿಸ್ವಾಮಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ಶಾಸಕ ನಾರಾಯಣಸ್ವಾಮಿ ಗಲ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಅರಣ್ಯ ಇಲಾಖೆ ತೆರವು ಕಾರ್ಯಾಚರಣೆ ವಿಚಾರದಲ್ಲಿ ಮುನಿಸ್ವಾಮಿ ವಿರುದ್ಧ FIR ದಾಖಲಾಗಿತ್ತು. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ A1 ಆರೋಪಿಯಾಗಿ FIR ದಾಖಲಾಗಿತ್ತು. ಇದೀಗ ಮತ್ತೆ ಗಲ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಂಸದ ಮುನಿಸ್ವಾಮಿ ವಿರುದ್ಧ 2ನೇ FIR ದಾಖಲಾಗಿದೆ. ಈ ನಡುವೆ ಸಂಸದ ಮುನಿಸ್ವಾಮಿ ಸೆಪ್ಟೆಂಬರ್ 27 ರಂದು ಎಸ್.ಎನ್ ನಾರಾಯಣಸ್ವಾಮಿ ಹಾಗೂ ಎಸ್ಪಿ ನಾರಾಯಣ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಕೋಲಾರ : ದಲಿತರ ಬಗ್ಗೆ ಮಾತನಾಡಿದ್ರೆ ಮುಂದಿನ ಚುನಾವಣೆಯಲ್ಲಿ ಬುದ್ದಿ ಕಲಿಸಬೇಕಾಗುತ್ತೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೋಲಾರ ಸಂಸದ ಎಸ್. ಮುನಿಸ್ವಾಮಿ ಟಾಂಗ್ ಕೊಟ್ಟಿದ್ದಾರೆ.
ಕೋಲಾರದ ಕೆಜಿಎಫ್ ತಾಲ್ಲೂಕಿನ ಕೋಟಿಲಿಂಗ ಕ್ಷೇತ್ರದಲ್ಲಿ ಮೋದಿ ಅವರ ಕೇದರನಾಥ್ ದೇವಾಲಯ ಉದ್ಘಾಟನೆ ಕಾರ್ಯಕ್ರಮ ನೇರಪ್ರಸಾರ ವೀಕ್ಷಣೆ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ಅಹಿಂದ ಕಟ್ಟಿದ್ದಾಗ ನಾವು ಸಹ ದಲಿತರು ನಿಮ್ಮ ಹಿಂದೆ ಇದ್ದೇವು, ನಿಮ್ಮ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಾಥ್ ನೀಡಿದ್ದೇವೆ. ಜೆಡಿಎಸ್‍ನಲ್ಲಿ ಕುಮಾರಸ್ವಾಮಿಯಿಂದ ಅಧಿಕಾರ ಸಿಗಲ್ಲ ಅನ್ನೋ ಕಾರಣಕ್ಕೆ ಕಾಂಗ್ರೇಸ್‍ಗೆ ಬಂದ್ರಿ, ಪುನರ್ಜನ್ಮ ಕೊಟ್ಟ ಕಾಂಗ್ರೇಸ್‍ನಲ್ಲಿ ಹಿರಿಯ ದಲಿತ ಮುಖಂಡರನ್ನ ತುಳಿದು ಸಿಎಂ ಅಗಿದ್ದು ನೀವು ಎಂದು ಕಿಡಿಕಾರಿದ್ದಾರೆ.
ಪರಮೇಶ್ವರ ಅವರನ್ನ ಸೋಲಿಸಿ ನೀವು ಸಿಎಂ ಅಗಿದ್ದು, ದಲಿತರು ಸಿಎಂ ಆಗೋದನ್ನ ತಪ್ಪಿಸಿದ್ದೇ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ರು. ಅಲ್ಲದೆ ಹಿರಿಯ ಮುಖಂಡರಾಗಿ ದಲಿತರ ಬಗ್ಗೆ ಮಾತನಾಡುವಾಗ ಹಗುರವಾಗಿ ಮಾತನಾಡಬೇಡಿ, ಮುಂದಿನ ಚುನಾವಣೆಯಲ್ಲಿ ನಾವೇನೆಂದು ತೋರಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಿಂದ ಬೊಕ್ಕಸಕ್ಕೆ 2,100 ಕೋಟಿ ಆದಾಯ ನಷ್ಟ: ಸಿಎಂ
ಜೆಡಿಎಸ್ ತೊರೆದು ಕಾಂಗ್ರೆಸ್‍ಗೆ ಬಂದಿದ್ದು, ಹೊಟ್ಟೆ ಪಾಡಿಗಾ ಅಥವಾ ಅಧಿಕಾರ ದಾಹಕ್ಕ? ದಲಿತರು ಬಿಜೆಪಿಗೆ ಹೋಗಿರುವುದು ಹೊಟ್ಟೆ ಪಾಡಿಗಾಗಿ ವಿಚಾರಕ್ಕೆ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟ ಎಸ್. ಮುನಿಸ್ವಾಮಿ, ದಲಿತರನ್ನ ಮೆಟ್ಟಿಲುಗಳಂತೆ ಉಪಯೋಗಿಸಿಕೊಂಡು ಸಿಎಂ ಆದವರು ನೀವು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೇರ ಟಾಂಗ್ ನೀಡಿದ್ದಾರೆ.
ಕೋಲಾರ: ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ಹಾಗೂ ಸಾಗಾಣಿಕೆಗೆ ಕಡಿಮೆ ವೆಚ್ಚದಲ್ಲಿ ಸಾರಿಗೆ ವ್ಯವಸ್ಥೆ ಮಾಡುವ ಮೂಲಕ ರೈತರಿಗೆ ಅನುಕೂಲವಾಗುವಂತೆ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ತೋಟಗಾರಿಕೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿರತ್ನ ಅವರು ತಿಳಿಸಿದರು.
ಕೋಲಾರದ ಶ್ರೀನಿವಾಸಪುರದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಕೊಡುಗೆ ನೀಡಿದೆ. ಸಂಸದರಾದ ಎಸ್.ಮುನಿಸ್ವಾಮಿ pic.twitter.com/R8D4va72R1
ಇಂದು ಶ್ರೀನಿವಾಸಪುರ ನಗರದ ಪುರಸಭಾ ಕಾರ್ಯಾಲಯ ಉದ್ಘಾಟನೆ ನೆರೆವೇರಿಸಿ ಅವರು ಮಾತನಾಡಿದ ಅವರು, ಕೋಲಾರ ಬೆಂಗಳೂರಿಗೆ ಸಮೀಪದ ಜಿಲ್ಲೆಯಾಗಿರುವುದರಿಂದ ಹೆಚ್ಚಿನ ಒತ್ತು ನೀಡಿ ಅಭಿವೃದ್ಧಿ ಪಡಿಸಲಾಗುವುದು ಹಾಗೂ ಮುಂದಿನ ದಿನಗಳಲ್ಲಿ ಜಿಲ್ಲೆಗೆ ಹೆಚ್ಚಿನ ಕೊಡುಗೆಗಳನ್ನು ನೀಡಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಅತಿ ಹೆಚ್ಚು ವಿದ್ಯಾವಂತರು ಇದ್ದಾರೆ. ವಿದ್ಯಾಭ್ಯಾಸಕ್ಕೆ ಜಿಲ್ಲೆಯಲ್ಲಿ ಹೆಚ್ಚಿನ ಮಹತ್ವವಿದೆ. ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಇಬ್ಬರು ವಿದ್ಯಾರ್ಥಿನಿಯರಾದ ಪೂರ್ವಿ.ಕೆ ಬೈರೇಶ್ವರ ವಿದ್ಯಾನಿಕೇತನ ಶಾಲೆ ಮತ್ತು ವರ್ಷಿಣಿ. ಸೆಂಟ್ ತೇರಿಸಾ ಶಾಲೆ ರಾಬರ್ಟ್‍ಸನ್ ಪೇಟೆ ಅವರಿಗೆ ಸಚಿವರು ಲ್ಯಾಬ್ ಟ್ಯಾಪ್‍ಗಳನ್ನು ನೀಡಿದರು. ಇದನ್ನೂ ಓದಿ: ಗೃಹ ಸಚಿವರ ಮೇಲೆ ರೇಪ್ ಮಾಡಿರುವವರನ್ನು 376 ಸೆಕ್ಷನ್ ಕೇಸ್ ಹಾಕಿ ಬಂಧಿಸಲಿ: ಡಿ.ಕೆ ಶಿವಕುಮಾರ್
ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಸ್.ಮುನಿಸ್ವಾಮಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ 3ನೇ ಅಲೆಯನ್ನು ಎದುರಿಸಲು ಆಸ್ಪತ್ರೆಗಳಿಗೆ ವೈದ್ಯಕೀಯ ಸಲಕರಣೆಗಳು ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರ ಮೂಲಕ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಮ್ಲಜನಕದ ಕೊರತೆಯನ್ನು ನೀಗಿಸಲು ನಗರ ಪ್ರದೇಶದಲ್ಲಿ ಹೆಚ್ಚಿನ ಮರಗಳನ್ನು ಬೆಳಸಬೇಕು. ಕನಿಷ್ಠ ಮನೆಗೆ 2 ಮರ ಬೆಳಸಬೇಕು. ರಸ್ತೆ, ಚರಂಡಿಗಳನ್ನು ನಿರ್ಮಾಣವಾಗಬೇಕು ಎಂದು ಅವರು ಹೇಳಿದರು.
ಶ್ರೀನಿವಾಸಪುರ ತಾಲೂಕು ಮಾವಿನ ಹಣ್ಣಿಗೆ ವಿಶ್ವ ಪ್ರಸಿದ್ಧಿಯಾಗಿದೆ. ರೈತರಿಗೆ ಅನುಕೂಲವಾಗಲಿ ಎಂದು ಸರ್ಕಾರ 10 ಸಾವಿರ ಎಫ್.ಇ.ಓ ಸ್ಥಾಪಿಸುವ ಉದ್ದೇಶ ಹೊಂದಿದೆ. ರೈತರು ಬೆಳೆದ ಟೊಮೊಟೊ ಮತ್ತು ಮಾವಿನ ಹಣ್ಣುಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್ಸಿನವರು ನನ್ನ ರೇಪ್ ಮಾಡಲು ಯತ್ನಿಸುತ್ತಿದ್ದಾರೆ: ಅರಗ ಜ್ಞಾನೇಂದ್ರ
ಕೋಲಾರದ ಶ್ರೀನಿವಾಸಪುರ ಪುರಸಭೆಯ ನೂತನ ಕಾರ್ಯಾಲಯವನ್ನು ಇಂದು ಉದ್ಘಾಟಿಸಿದೆ. ಸಂಸದರಾದ ಎಸ್.ಮುನಿಸ್ವಾಮಿ, ಶಾಸಕ ಕೆ.ಆರ್.ರಮೇಶ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು. pic.twitter.com/PXE38Vuqq8
ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಆರ್.ರಮೇಶ್ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಮುಂದಾಲೋಚನೆಯಿಂದ ನಗರದಲ್ಲಿ ಆಸ್ಪತ್ರೆ. ಶಾಲೆ, ಕಾಲೇಜು, ಬಸ್ ನಿಲ್ದಾಣ, ಮಾರುಕಟ್ಟೆ, ಒಳಚರಂಡಿ ವ್ಯವಸ್ಥೆ, ಕಟ್ಟಡಗಳು ಸುಸಜ್ಜಿತವಾಗಿ ನಿರ್ಮಿಸಲಾಗಿದೆ. ಕ್ರೀಡಾಂಗಣದಲ್ಲಿ ಈಜುಕೊಳ, ಅಥ್ಲೆಟಿಕ್ ಹಾಗೂ ವಿವಿಧ ಕ್ರೀಡೆಗೆ ಅನುಕೂಲವಾಗುವಂತೆ ನಿರ್ಮಿಸಲಾಗುತ್ತಿದೆ ಎಂದರು.
ಮಾಂಸದ ಮಾರುಕಟ್ಟೆ ವಿದೇಶದ ಮಾದರಿಯಲ್ಲಿ ಏರ್ ಕಂಡೀಷನ್ ಮಾರುಕಟ್ಟೆ ನಿರ್ಮಿಸಲಾಗುತ್ತದೆ. ದೇವಸ್ಥಾನ, ಸ್ಮಶಾನ, ಪ್ರಾರ್ಥನಾ ಮಂದಿರಗಳು ಹಾಗೂ ಬಡವರಿಗೆ ಮನೆಗಳನ್ನು ನಿರ್ಮಿಸಲಾಗಿದೆ. ಇಂದಿರಾ ನಗರದ ಲೇಔಟ್‍ನಲ್ಲಿ ಒಂದು ಸಾವಿರ ಮನೆಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ನನ್ನ ಮಾತನ್ನು ವಾಪಸ್ ಪಡೆಯುತ್ತೇನೆ – ಕ್ಷಮೆಯಾಚಿಸಿದ ಗೃಹ ಸಚಿವ
ನಗರ ಪ್ರದೇಶದಲ್ಲಿ ಉನ್ನತ ಮಟ್ಟದ ರಸ್ತೆಗಳನ್ನು ನಿರ್ಮಿಸಲು ಅನುದಾನ ನೀಡುವಂತೆ ಸಚಿವರಲ್ಲಿ ಶಾಸಕರು ಮನವಿ ಮಾಡಿದರು. ಪೌರಕಾರ್ಮಿಕರಿಗೆ ಹಾಗೂ ನಿವೃತ್ತಿ ಹೊಂದಿದ ಪೌರಕಾರ್ಮಿಕರಿಗೆ ಮನೆಗಳನ್ನು ನಿರ್ಮಿಸಿ ಕೊಡಲಾಗುವುದು ಎಂದು ತಿಳಿಸಿದರು.
ಕೋಲಾರ: ಬಿಜೆಪಿ ಸಂಸದ ಎಸ್ ಮುನಿಸ್ವಾಮಿ ವಿರುದ್ಧ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಲಾಗಿದೆ.
ತಮ್ಮ ಜಮೀನಿಗೆ ಸಂಸದರು ಅಕ್ರಮವಾಗಿ ಪ್ರವೇಶಿಸಿ ರಸ್ತೆ ನಿರ್ಮಿಸಿದ ಆರೋಪದ ಮೇಲೆ ಮಾಲೂರು ತಾಲೂಕಿನ ಲಕ್ಕೂರು ಗ್ರಾಮದ ರೈತ ರಾಜಗೋಪಾಲ ಗೌಡರು ದೂರು ನೀಡಿದ್ದಾರೆ.
ಜಗದೇನಹಳ್ಳಿಯ ಜಮೀನಿಗೆ ಅಕ್ಟೋಬರ್ 24 ರಂದು ಸಂಸದರು ಮತ್ತು ಅಧಿಕಾರಿಗಳು ಅಕ್ರಮವಾಗಿ ಪ್ರವೇಶಿಸಿದ್ದಾರೆ ಎಂದು ಮಾಲೂರು ತಹಶೀಲ್ದಾರ್, ಸರ್ಕಲ್ ಇನ್ಸ್ ಪೆಕ್ಟರ್ ಸೇರಿದಂತೆ 27 ಮಂದಿ ವಿರುದ್ಧ ರೈತ ದೂರು ನೀಡಿದ್ದಾರೆ.
ನಲ್ಲಿ ಕೃಷಿ ಜಮೀನಿನಲ್ಲಿ ದಬ್ಬಾಳಿಕೆಯಿಂದ ರಸ್ತೆ ನಿರ್ಮಿಸಿ, ಮರಗಳನ್ನು ನಾಶಗೊಳಿಸಿರುವ ಆರೋಪ ಮಾಡಿದ್ದಾರೆ. ಅಲ್ಲದೆ ಪ್ರಾಣ ಬೆದರಿಕೆ ಒಡ್ಡಿರುವ ಸಂಸದ, ಅಧಿಕಾರಿ ಹಾಗೂ ಬೆಂಬಲಿಗರ ವಿರುದ್ಧ ಕ್ರಮಕ್ಕೆ ಎಸ್ಪಿಗೆ ಮನವಿ ಮಾಡಿದ್ದಾರೆ.
ಕೋಲಾರ: ಐಟಿ-ಇಡಿ ಕೊಲೆ ಮಾಡುವ ಉದ್ದೇಶ ಇಟ್ಟುಕೊಂಡು ದಾಳಿ ಮಾಡಿರಲ್ಲ. ಅವರು ನೂರಕ್ಕೆ ನೂರು ಸರಿಯಾಗಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವ ಅಗತ್ಯ ಇಲ್ಲ ಎಂದು ಕೋಲಾರ ಸಂಸದ ಎಸ್.ಮುನಿಸ್ವಾಮಿ ಅವರು ಪರಮೇಶ್ವರ್ ಆಪ್ತ ಸಹಾಯಕನ ಸಾವಿಗೆ ಐಟಿಯೇ ಕಾರಣ ಎಂಬ ಕಾಂಗ್ರೆಸ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಕೋಲಾರದಲ್ಲಿ ಹಮ್ಮಿಕೊಳ್ಳಲಾಗಿದ್ದ ವಾಲ್ಮೀಕಿ ಜಯಂತಿಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ರೀತಿಯಲ್ಲಿ ಎದುರಿಸಬೇಕಿತ್ತು ಅದು ಬಿಟ್ಟು ಹೀಗೆ ಮಾಡಿಕೊಳ್ಳುವುದು ತಪ್ಪು. ಅವರ ಪತ್ನಿ ಕೂಡ ಆತ್ಮಹತ್ಯೆ ಅಲ್ಲ ಕೊಲೆ ಎಂದಿದ್ದಾರೆ. ಐಟಿ ಉದ್ದೇಶ ಕೊಲೆ ಮಾಡುವುದಲ್ಲ ಎಂದು ಹೇಳಿದರು.
ದೇಶದಲ್ಲಿ ಎಲ್ಲಾ ಕಡೆ ಐಟಿ ಇಡಿ ದಾಳಿ ನಡೆಯುತ್ತಿದೆ. ಲೆಕ್ಕ ಕೊಟ್ಟು ಸಾಧಿಸಬೇಕು. ಎಲ್ಲವೂ ಸರಿಯಾಗಿದ್ದರೆ ಭಯ ಪಡುವ ಅಗತ್ಯವಿಲ್ಲ. ಆತ್ಮಹತ್ಯೆ ಒಂದೇ ದಾರಿಯಲ್ಲ ಎಂದು ಸಲಹೆ ನೀಡಿದರು. ಇದೇ ವೇಳೆ ಕಾಂಗ್ರೆಸ್ ಮುಖಂಡ ಕೆ.ಎಚ್ ಮುನಿಯಪ್ಪ ಅವರ ದಲಿತರನ್ನ ಉದ್ದೇಶ ಪೂರ್ವಕವಾಗಿ ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ದೇಶದಲ್ಲಿ ಕೆ.ಎಚ್ ಮುನಿಯಪ್ಪ ಒಬ್ಬರೇ ದಲಿತರಲ್ಲ, ದಲಿತರನ್ನೇ ಟಾರ್ಗೆಟ್ ಮಾಡುವ ಅಗತ್ಯ ಐಟಿಗಿಲ್ಲ ಎಂದರು.
ಐಟಿ ಅವರು ಸ್ವತಂತ್ರವಾಗಿ ಕೆಲಸ ಮಾಡುತ್ತಿದ್ದಾರೆ. ಅವರೇನಾದರೂ ಅಕ್ರಮ ಹಣ ಸಂಪಾದಿಸಿ ತಪ್ಪಿಸಿಕೊಳ್ಳಲು ಹೀಗೆ ಮಾತನಾಡುತ್ತಿದ್ದಾರಾ ಗೊತ್ತಿಲ್ಲ ಎಂದು ಮುನಿಯಪ್ಪ ಅವರಿಗೆ ಟಾಂಗ್ ನೀಡಿದರು. ಕಾನೂನಿಗೆ ಎಲ್ಲರೂ ತಲೆ ಬಾಗಬೇಕು. ಬಿಜೆಪಿ ಟಾರ್ಗೆಟ್ ಮಾಡಿ ಐಟಿ ದಾಳಿ ಮಾಡಿಸುತ್ತಿಲ್ಲ. ಐಟಿ ಅವರೇ ದಾಳಿ ಮಾಡುತ್ತಿರುವುದು ಎಂದು ತಿಳಿಸಿದರು.
ಕೋಲಾರ: ಮಾಜಿ ಸಿಎಂ ಕುಮಾರಸ್ವಾಮಿ ದೂರವಾಣಿ ಕದ್ದಾಲಿಕೆ ಮಾಡುವಂತಹ ವ್ಯಕ್ತಿ ಅಲ್ಲ, ಆ ಮಟ್ಟಕ್ಕೆ ಹೋಗುವವರು ಅವರಲ್ಲ ಎಂದು ಕೋಲಾರದಲ್ಲಿ ಜೆಡಿಎಸ್ ಶಾಸಕ ಶ್ರೀನಿವಾಸಗೌಡ ಹೆಚ್‍ಡಿಕೆ ಪರ ಬ್ಯಾಟಿಂಗ್ ಮಾಡಿದ್ದಾರೆ.
ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೂರವಾಣಿ ಕದ್ದಾಲಿಕೆ ಮಾಡಿದರೆ ತಪ್ಪಾಗುತ್ತೆ. ಆದರೆ ಅದರ ಬಗ್ಗೆ ಸರಿಯಾಗಿ ನನಗೆ ಮಾಹಿತಿ ಗೊತ್ತಿಲ್ಲ. ಓದಿ ತಿಳಿದುಕೊಂಡು ಅದರ ಕುರಿತಾಗಿ ಮಾತನಾಡುವೆ. ಆದರೆ ಕುಮಾರಸ್ವಾಮಿ ಹೀಗೆ ಮಾಡಿರಲ್ಲ ಬಿಡಿ, ಅತೃಪ್ತ ಶಾಸಕರು ಪಕ್ಷ ಬಿಟ್ಟು ಹೋಗಿರುವ ಹಿನ್ನೆಲೆ ಹೀಗೆ ಅರೋಪ ಮಾಡುತ್ತಿದ್ದಾರೆ ಎಂದು ದೂರಿದರು.
ಇದೇ ವೇಳೆ ಮಾತನಾಡಿದ ಕೋಲಾರ ಸಂಸದ ಎಸ್. ಮುನಿಸ್ವಾಮಿ, ರಾಜ್ಯದಲ್ಲಿ ನೆರೆ ಇದೆ ಈ ರೀತಿಯ ಸಂದರ್ಭದಲ್ಲಿ ಹೀಗೆ ಮಾಡಲು ಅವರಿಗೆ ನಾಚಿಕೆಯಾಗಬೇಕು. ಈಗಾಗಲೇ ಜನ ಅವರನ್ನು ತಿರಸ್ಕಾರ ಮಾಡಿದ್ದಾರೆ ಹಾಗಾಗಿಯೇ ಮನೆಗೆ ಹೋಗಿದ್ದಾರೆ. ಮನೆಯಲ್ಲಿ ಸುಮ್ಮನಿರುವುದು ಬಿಟ್ಟು ಹೀಗೆ ಕದ್ದಾಲಿಕೆ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ದೂರವಾಣಿ ಕದ್ದಾಲಿಕೆ ಸಮ್ಮಿಶ್ರ ಸರ್ಕಾರವಿದ್ದಾಗಾಗಿರುವುದು ಎಂಬ ಅರಿವೆ ಅವರಿಗಿಲ್ಲ ಎಂಬುದನ್ನು ತೋರಿಸಿದರು.
ನೆರೆ ಬಂದು ಸಂಕಷ್ಟದಲ್ಲಿರುವಾಗ ಸಚಿವ ಸಂಪುಟ ವಿಸ್ತರಣೆ ಸರಿಯಲ್ಲ ಹಾಗಾಗಿ ಸಂಪುಟ ವಿಸ್ತರಣೆಯಾಗಿಲ್ಲ. ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಗೃಹ ಸಚಿವ ಅಮಿತ್ ಶಾ ನೆರೆ ವೀಕ್ಷಣೆ ಮಾಡಿದ್ದಾರೆ. ತಡವಾದರೂ ಶೇ.100 ರಷ್ಟು ಕೇಂದ್ರದಿಂದ ಬರ ಪರಿಹಾರ ಸಿಗುತ್ತೆ ಎಂದು ಭರವಸೆ ನೀಡಿದರು.