Tag: ಎ ರಾಜಾ

  • ಮತ್ತೊಂದು ವಿವಾದ – ಸನಾತನ ಧರ್ಮವನ್ನ HIV, ಕುಷ್ಠರೋಗಕ್ಕೆ ಹೋಲಿಸಿದ ಸಂಸದ ಎ. ರಾಜಾ

    ಮತ್ತೊಂದು ವಿವಾದ – ಸನಾತನ ಧರ್ಮವನ್ನ HIV, ಕುಷ್ಠರೋಗಕ್ಕೆ ಹೋಲಿಸಿದ ಸಂಸದ ಎ. ರಾಜಾ

    ಚೆನ್ನೈ: ಸನಾತನ ಧರ್ಮವು (Sanatana dharma) ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂದು ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್‌ ಹೇಳಿಕೆ ಬೆನ್ನಲ್ಲೇ ಡಿಎಂಕೆ ಪಕ್ಷದ ಸಂಸದ ಎ.ರಾಜಾ (R Raja) ಹೆಚ್‌ಐವಿ (HIV), ಕುಷ್ಠರೋಗಕ್ಕೆ ಸನಾತನ ಧರ್ಮವನ್ನ ಹೋಲಿಸಿ ವಿವಾದವನ್ನ ಮೈಮೇಲೆ ಎಳೆದುಕೊಂಡಿದ್ದಾರೆ.

    ಸಾರ್ವಜನಿಕ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ಸನಾತನ ಧರ್ಮವನ್ನ ಹೆಚ್‌ಐವಿ ಮತ್ತು ಕುಷ್ಠರೋಗದಂತಹ (leprosy) ಸಾಮಾಜಿಕ ಕಳಂಕ ಹೊಂದಿರುವ ರೋಗಗಳಿಗೆ ಹೋಲಿಸಬೇಕು. ಸನಾತನ ಧರ್ಮ ಹಾಗೂ ವಿಶ್ವಕರ್ಮ ಯೋಜನೆಗಳು ಬೇರೆ-ಬೇರೆ ಇಲ್ಲ, ಅವೆರಡೂ ಒಂದೇ. ಉದಯನಿಧಿ ಸ್ಟಾಲಿನ್‌ (Udhayanidhi Stalin) ಅವರು ಸ್ವಲ್ಪ ಮೃದು ಧೋರಣೆಯಿಂದ ಮಾತನಾಡಿದ್ದಾರೆ ಎಂದು ಹೇಳಿದ್ದಾರೆ.

    ಡೆಂಗ್ಯೂ ಹಾಗೂ ಮಲೇರಿಯಾ ರೋಗಗಳು ಸಮಾಜಿಕ ಕಳಂಕ ಹೊಂದಿಲ್ಲ. ಆದ್ರೆ ಕುಷ್ಠ ಮತ್ತು ಹೆಚ್‌ಐವಿ ರೋಗಗಳು ಸಮಾಜದಿಂದ ಕಳಂಕಿತವಾಗಿವೆ. ಹಾಗಾಗಿ ಸನಾತನ ಧರ್ಮವನ್ನ ಹೆಚ್‌ಐವಿ ಮತ್ತು ಕುಷ್ಠರೋಗದಂತ ಕಾಯಿಲೆಯಾಗಿ ನೋಡಬೇಕಾಗಿದೆ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಉದಯನಿಧಿ ಸ್ಟಾಲಿನ್‌ ತಲೆ ತಂದವರಿಗೆ 10 ಕೋಟಿ ಬಹುಮಾನ; ಅಯೋಧ್ಯೆಯ ಹಿಂದೂ ಧರ್ಮದರ್ಶಿ ಘೋಷಣೆ

    ಯಾರು ಯಾರನ್ನಾದರೂ ಕರೆದುಕೊಂಡು ಬರಲಿ, ಸನಾತನ ಧರ್ಮದ ಬಗ್ಗೆ ಚರ್ಚೆ ಮಾಡೋಕೆ ನಾನು ಸಿದ್ಧ. ಅವರು ಯಾವುದೇ ಆಯುಧಗಳನ್ನ ಬೇಕಾದ್ರೆ ತೆಗೆದುಕೊಂಡು ಬರಲಿ. ಪ್ರಧಾನಿ ಮೋದಿ ಕ್ಯಾಬಿನೆಟ್‌ನಲ್ಲಿ ಸಭೆ ಕರೆದು ನನಗೆ ಅನುಮತಿ ಕೊಟ್ಟರೆ, ಅಲ್ಲಿಯೂ ಸನಾತನ ಧರ್ಮದ ಬಗ್ಗೆ ಉತ್ತರ ಕೊಡಲು ನಾನು ಸಿದ್ಧ ಎಂದು ಸವಾಲ್‌ ಹಾಕಿದ್ದಾರೆ.

    ಏನಿದು ವಿವಾದ?
    ಲೇಖಕರ ಸಮಾವೇಶವೊಂದರಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು. ಈ ಪರಿಕಲ್ಪನೆಯು ಅಂತರ್ಗತವಾಗಿ ಹಿಂದುಳಿದಿದೆ. ಇದು ಜಾತಿ ಮತ್ತು ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ. ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ಹೇಳಿದ್ದರು. ಈ ಹೇಳಿಕೆ ನಂತರ ವಿವಾದ ಭುಗಿಲೆದ್ದಿದೆ.

    ಈ ನಡುವೆ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಕುರಿತಾಗಿ ದ್ವೇಷಪೂರಿತ ಭಾಷಣ ಮಾಡಿದ್ದಕ್ಕಾಗಿ ಕಾನೂನು ಹಕ್ಕುಗಳ ವೀಕ್ಷಣಾಲಯ ಸ್ವಯಂ ಪ್ರೇರಿತ ಎಫ್‌ಐಆರ್ ದಾಖಲಿಸಿಕೊಳ್ಳುವಂತೆ ಸೋಮವಾರ ಚೆನ್ನೈನ ಪೊಲೀಸ್ ಕಮಿಷನರ್‌ಗೆ ಲೀಗಲ್ ನೋಟಿಸ್ ಕಳುಹಿಸಿದೆ. ಸೆಪ್ಟೆಂಬರ್‌ 7 ರಂದು ಹುಬ್ಬಳ್ಳಿಯಲ್ಲೂ ಉದಯನಿಧಿ ಸ್ಟಾಲಿನ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇದನ್ನೂ ಓದಿ: ಬದಲಾಗುತ್ತಾ ದೇಶದ ಹೆಸರು – ‘ಇಂಡಿಯಾ’ ಬದಲಿಗೆ ‘ರಿಪಬ್ಲಿಕ್‌ ಆಫ್‌ ಭಾರತ್‌’ ಅಂತ ಮರುನಾಮಕರಣ?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಮಿಳುನಾಡಿಗೆ ಸಂಪೂರ್ಣ ಸ್ವಾಯತ್ತತೆ ನೀಡಿ – CM ನೇತೃತ್ವದಲ್ಲೇ ಕೇಂದ್ರಕ್ಕೆ ಸಂಸದ ಎ.ರಾಜಾ ಒತ್ತಾಯ

    ತಮಿಳುನಾಡಿಗೆ ಸಂಪೂರ್ಣ ಸ್ವಾಯತ್ತತೆ ನೀಡಿ – CM ನೇತೃತ್ವದಲ್ಲೇ ಕೇಂದ್ರಕ್ಕೆ ಸಂಸದ ಎ.ರಾಜಾ ಒತ್ತಾಯ

    ಚೆನ್ನೈ: ಪ್ರತ್ಯೇಕ ತಮಿಳುನಾಡು ರಾಜ್ಯಕ್ಕೆ ಸ್ವಾಯತ್ತತೆ ನೀಡುವಂತೆ ಡಿಎಂಕೆ ಸಂಸದ ಎ.ರಾಜಾ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

    DMK ಸಂಸದ ಎ.ರಾಜಾ ಅವರು ಇಲ್ಲಿನ ನಾಮಕ್ಕಲ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಉಪಸ್ಥಿತಿಯಲ್ಲೇ ಈ ಬೇಡಿಕೆ ಇಟ್ಟಿದ್ದಾರೆ. ಇದನ್ನೂ ಓದಿ: ಶಿಂಧೆ ಸರ್ಕಾರ 6 ತಿಂಗಳಲ್ಲಿ ಪತನವಾಗುತ್ತೆ: ಶರದ್ ಪವಾರ್ ಭವಿಷ್ಯ

    ಸಂಸದ ಎ.ರಾಜಾ ಅವರು `ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳಿಗೆ ಸ್ವಾಯತ್ತತೆ’ ವಿಷಯ ಕುರಿತು ಮಾತನಾಡಿದ ಅವರು, ನಮಗೆ ಪ್ರತ್ಯೇಕ ರಾಜ್ಯ ಸ್ವಾಯತ್ತತೆ ಸಿಗುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಸದ್ಯ ಎ.ರಾಜಾ ಅವರ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪರ ವಿರೋಧದ ಚರ್ಚೆ ಆರಂಭವಾಗಿದೆ. ಇದನ್ನೂ ಓದಿ: ಬಾಲಿವುಡ್ ನಿರ್ದೇಶಕರಲ್ಲಿ ಸ್ವಂತ ಯೋಚನೆ ಇಲ್ಲ: ನೀಲ್ ನಿತಿನ್ ಮುಖೇಶ್ 

    MK Stalin (1)

    ನಾವು ಪೆರಿಯಾರ್ ಅವರ ಮಾರ್ಗವನ್ನು ಅನುಸರಿಸುತ್ತಿದ್ದು, ರಾಷ್ಟ್ರೀಯ ಸಮಗ್ರತೆ ಹಾಗೂ ಪ್ರಜಾಪ್ರಭುತ್ವಕ್ಕಾಗಿ ಪ್ರತ್ಯೇಕ ತಮಿಳುನಾಡು ಕೂಗನ್ನು ಬದಿಗಿಟ್ಟಿದೆವು. ಆದರೆ ತಮಿಳುನಾಡಿನಲ್ಲಿ ಅಸ್ತಿತ್ವಕ್ಕೆ ಡಿಎಂಕೆ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ನಡುವಿನ ತಿಕ್ಕಾಟವೇ ಪ್ರತ್ಯೇಕ ರಾಜ್ಯದ ಕೂಗಿಗೆ ಕಾರಣವಾಗಿದೆ. ಹಾಗಾಗಿ ನಮ್ಮ ಬೇಡಿಕೆಯನ್ನು ಪರಿಗಣಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಬೊಗಳಿದ್ದಕ್ಕೆ ನಾಯಿಗೆ ಕಬ್ಬಿಣದ ರಾಡ್‍ನಿಂದ ಹೊಡೆದ – ಬಿಡಿಸಿಕೊಳ್ಳೋಕೆ ಬಂದವರ ಮೇಲೂ ಹಲ್ಲೆ

    ಕೇಂದ್ರವು ಹೆಚ್ಚಿನ ಅಧಿಕಾರ ಅನುಭವಿಸುವುದನ್ನು ಮುಂದುವರಿಸಿದೆ. ತಮಿಳುನಾಡಿನ ಶೇ.6.5ರಷ್ಟು ಜಿಎಸ್‌ಟಿ ಪಾಲಿನಲ್ಲಿ ಕೇವಲ ಶೇ.2.2 ರಷ್ಟನ್ನು ಪಡೆಯುತ್ತಿದೆ. ಸಣ್ಣ-ಸಣ್ಣ ಸಮಸ್ಯೆಗಳಿಗೂ ರಾಜ್ಯಗಳು ಕೇಂದ್ರವನ್ನು ಅವಲಂಬಿಸಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    2013 ರಲ್ಲೂ ಪ್ರತ್ಯೇಕತೆಯ ಕೂಗು ಕೇಳಿಬಂದಿತ್ತು. 2021 ಮೇ ತಿಂಗಳಿನಲ್ಲಿ ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ತಮಿಳು ನಾಡಿನಲ್ಲಿ ಅಧಿಕಾರವನ್ನು ಹಿಡಿಯುತ್ತಿದ್ದಂತೆ ಈ ಪ್ರತ್ಯೇಕತೆಯ ಕೂಗು ತೀವ್ರಗೊಂಡಿತ್ತು. ಸ್ಟಾಲಿನ್ ಕೇಂದ್ರ ಸರ್ಕಾರವನ್ನು ಒಕ್ಕೂಟ ಸರ್ಕಾರ ಎಂದು ಕರೆಯುವ ನಿರ್ಣಯ ಕೈಗೊಂಡಿದ್ದು, ಸ್ಟಾಲಿನ್ ತಂತ್ರಕ್ಕೆ ಬಿಜೆಪಿ ಪ್ರತಿ ತಂತ್ರವಾಗಿ ಪ್ರತ್ಯೇಕ ಕೊಂಗುನಾಡು ಬೇಡಿಕೆಯನ್ನು ಹುಟ್ಟುಹಾಕಿತ್ತು ಎಂದು ವರದಿಯಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • ನಾಥೂರಾಮ್ ಗೋಡ್ಸೆ ದೇಶಭಕ್ತ ಎಂದ ಸಾಧ್ವಿ ಪ್ರಜ್ಞಾಸಿಂಗ್

    ನಾಥೂರಾಮ್ ಗೋಡ್ಸೆ ದೇಶಭಕ್ತ ಎಂದ ಸಾಧ್ವಿ ಪ್ರಜ್ಞಾಸಿಂಗ್

    ನವದೆಹಲಿ: ನಾಥೂರಾಮ್ ಗೂಡ್ಸೆಯನ್ನು ದೇಶ ಭಕ್ತ ಎಂದು ಹೇಳುವ ಮೂಲಕ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ತೀವ್ರ ಚರ್ಚೆಗೆ ಗುರಿಯಾಗಿದ್ದಾರೆ.

    ಲೋಕಸಭೆಯ ಅಧಿವೇಶನದಲ್ಲಿ ಸಾಧ್ವಿ ಈ ಹೇಳಿಕೆ ನೀಡಿದ್ದು, ಹೀಗೆ ಹೇಳುತ್ತಿದ್ದಂತೆ ವಿರೋಧ ಪಕ್ಷದ ನಾಯಕರು ಪ್ರತಿಭಟನೆಗೆ ಮುಂದಾಗಿದ್ದಾರೆ.

    ಡಿಎಂಕೆ ಸಂಸದ ಎ.ರಾಜಾ ಅವರು ವಿಶೇಷ ಭದ್ರತಾ ಪಡೆ (ಎಸ್‍ಪಿಜಿ) ತಿದ್ದುಪಡಿ ಮಸೂದೆಯ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ ಗೋಡ್ಸೆ ಮಹಾತ್ಮಾ ಗಾಂಧಿಯವರನ್ನು ಏಕೆ ಕೊಲೆ ಮಾಡಿದರು ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಸಾಧ್ವಿ ಪ್ರಜ್ಞಾ ಸಿಂಗ್ ಮಧ್ಯೆ ಪ್ರವೇಶಿಸಿ, ದೇಶಭಕ್ತನ ಉದಾಹರಣೆಯನ್ನು ನೀವು ಈ ಸಂದರ್ಭದಲ್ಲಿ ಕೊಡಬೇಡಿ ಎಂದು ಕಿಡಿಕಾರಿದ್ದಾರೆ.

    ಇದನ್ನು ಸ್ವತಃ ಗೋಡ್ಸೆ ಒಪ್ಪಿಕೊಂಡಿದ್ದಾರೆ. 32 ವರ್ಷಗಳಿಂದ ಗಾಂಧಿ ಮೇಲೆ ದ್ವೇಷ ಇತ್ತು ಹೀಗಾಗಿ ಹತ್ಯೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಮಹಾತ್ಮಾ ಗಾಂಧಿಯವರ ವಿಚಾರಧಾರೆಗಳು ಪ್ರತ್ಯೇಕವಾಗಿದ್ದರಿಂದ ಗೋಡ್ಸೆ ಅವರನ್ನು ಹತ್ಯೆ ಮಾಡಿದ ಎಂದು ರಾಜಾ ಅವರು ಲೋಕಸಭೆಯ ಕಲಾಪದಲ್ಲಿ ತಿಳಿಸಿದ್ದಾರೆ.

    ರಾಜಾ ಅವರು ಮಾತನಾಡುತ್ತಿದ್ದ ವೇಳೆ ಸಾಧ್ವಿ ಪ್ರಜ್ಞಾ ಸಿಂಗ್ ಮಧ್ಯ ಪ್ರವೇಶಿಸಿದ್ದಕ್ಕೆ ವಿರೋಧ ಪಕ್ಷಗಳ ಸಂಸದರು ಪ್ರತಿಭಟನೆ ನಡೆಸಲು ಪ್ರಾರಂಭಿಸಿದರು. ಆಗ ಬಿಜೆಪಿ ಸಂಸದರು ಸಾಧ್ವಿಯವರಿಗೆ ಕುಳಿತುಕೊಳ್ಳುವಂತೆ ಸೂಚಿಸಿದರು.

    ಬೆದರಿಕೆಯನ್ನಾಧಿರಿಸಿ ಭದ್ರತೆ ಇರಬೇಕೆ ಹೊರತು, ರಾಜಕೀಯ ಕಾರಣಗಳಿಂದಲ್ಲ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದರು. ಇದಕ್ಕೆ ಸಂಸದ ರಾಜಾ ಪ್ರತಿಕ್ರಿಯಿಸಿ ಎಸ್‍ಪಿಜಿ ತಿದ್ದುಪಡಿ ಮಸೂದೆಯನ್ನು ಮರುಪರಿಶೀಲಿಸಬೇಕು ಎಂದು ಗೃಹ ಸಚಿವರಿಗೆ ಮನವಿ ಮಾಡಿದರು. ಈ ವೇಳೆ ಸದನದಲ್ಲಿ ಕೆಲ ಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು.

  • 2ಜಿ ಸ್ಪೆಕ್ಟ್ರಮ್ ಹಗರಣ- ಎ. ರಾಜಾ, ಕನಿಮೋಳಿ ಸೇರಿದಂತೆ ಎಲ್ಲಾ 17 ಆರೋಪಿಗಳು ಖುಲಾಸೆ

    2ಜಿ ಸ್ಪೆಕ್ಟ್ರಮ್ ಹಗರಣ- ಎ. ರಾಜಾ, ಕನಿಮೋಳಿ ಸೇರಿದಂತೆ ಎಲ್ಲಾ 17 ಆರೋಪಿಗಳು ಖುಲಾಸೆ

    ನವದೆಹಲಿ: ದೇಶದ ಅತೀ ದೊಡ್ಡ, ಬಹು ಕೋಟಿ 2ಜಿ ತರಂಗಾಂತರ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪನ್ನು ಪ್ರಕಟಿಸಿದೆ.

    ದೂರಸಂಪರ್ಕ ಇಲಾಖೆಯ ಮಾಜಿ ಸಚಿವ ಎ. ರಾಜಾ, ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ಮಗಳು ಕನಿಮೋಳಿ ಸೇರಿದಂತೆ 17 ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ.

    ಪ್ರಕರಣದ ಅಂತಿಮ ಹಂತದ ವಿಚಾರಣೆ ಸಿಬಿಐ ವಿಶೇಷ ನ್ಯಾಯಾಲಯ ದಲ್ಲಿ ನವೆಂಬರ್‍ನಲ್ಲಿ ಆರಂಭಗೊಂಡಿತ್ತು. ಹಗರಣಕ್ಕೆ ಸಂಬಂಧಿಸಿದ ಒಟ್ಟು ಮೂರು ಪ್ರಕರಣಗಳ ಬಗ್ಗೆ ನ್ಯಾಯಾಲಯ ವಿಚಾರಣೆ ನಡೆಸಿದೆ. ಈ ಪೈಕಿ ಒಂದು ಪ್ರಕರಣದ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸಿ ವರದಿ ಸಲ್ಲಿಸಿತ್ತು. ಮತ್ತೆರಡು ಪ್ರಕರಣಗಳ ಬಗ್ಗೆ ಸಿಬಿಐ ತನಿಖೆ ನಡೆಸಿತ್ತು.

    ಎ. ರಾಜಾ ಅವರು ಸೆಲ್‍ಫೋನ್ ನೆಟ್‍ವರ್ಕ್‍ಗಳಿಂದ ಕಿಕ್‍ಬ್ಯಾಕ್ ಪಡೆದು ಏರ್‍ವೇವ್ಸ್ ಹಾಗೂ ಲೈಸೆನ್ಸ್ ನೀಡಿದ್ದು, ಇದರಿಂದ ರಾಜ್ಯದ ಬೊಕ್ಕಸಕ್ಕೆ ಅಂದಾಜು 1.76 ಲಕ್ಷ ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಆರೋಪಿಸಲಾಗಿತ್ತು. ಆದರೆ ಸಾಕ್ಷಾಧಾರಗಳ ಕೊರತೆಯಿಂದಾಗಿ ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದಾರೆ. ಈ ಹಿಂದೆ ಸುಪ್ರೀಂ ಕೋರ್ಟ್, ಎ. ರಾಜಾ ವಿತರಿಸಿದ್ದ ಎಲ್ಲಾ ಲೈಸೆನ್ಸ್ ಗಳನ್ನ ರದ್ದು ಮಾಡಿತ್ತು.

    ತೀರ್ಪಿನ ಹಿನ್ನೆಲೆಯಲ್ಲಿ ನ್ಯಾಯಾಲಯದ ಹೊರಭಾಗದಲ್ಲಿ ಜಮಾಯಿಸಿದ್ದ 500ಕ್ಕೂ ಹೆಚ್ಚು ಡಿಎಂಕೆ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಈ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್, ಇದು ನಮ್ಮ ನೈತಿಕ ವಿಜಯ ಎಂದು ಬಣ್ಣಿಸಿದೆ.