Tag: ಏಮ್ಸ್ ಆಸ್ಪತ್ರೆ

  • ಸಿಪಿಎಂ ನಾಯಕ ಸೀತಾರಾಮ್ ಯೆಚೂರಿ ಆರೋಗ್ಯ ಸ್ಥಿತಿ ತೀವ್ರ ಗಂಭೀರ

    ನವದೆಹಲಿ : ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ (Sitharam Yechury) ಆರೋಗ್ಯ ಪರಿಸ್ಥಿತಿ ತೀವ್ರ ಗಂಭೀರವಾಗಿದ್ದು, ಏಮ್ಸ್ (AIMS) ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ದಾಖಲಿಸಲಾಗಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಅವರನ್ನು ಕಳೆದ ತಿಂಗಳು ಆಸ್ಪತ್ರೆಗೆ ದಾಖಲಿಸಿತ್ತು.

    ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಅವರನ್ನು ಕಳೆದ ತಿಂಗಳು ಏಮ್ಸ್ ಆಸ್ಪತ್ರೆಗೆ ದಾಖಲಿಸಿತ್ತು. ಆರೋಗ್ಯ ಪರಿಸ್ಥಿತಿ ತೀವ್ರ ಗಂಭೀರ ಹಿನ್ನೆಲೆ ಇದೀಗ ತುರ್ತು ನಿಗಾ ಘಟಕದಲ್ಲಿ ದಾಖಲಿಸಲಾಗಿದೆ.ಇದನ್ನೂ ಓದಿ: ಡಿವೋರ್ಸ್ ಬಳಿಕ ನಿವಿ ಫುಲ್ ಆ್ಯಕ್ಟೀವ್- ಕೆಟ್ಟ ಕಾಮೆಂಟ್ಸ್ ಬಗ್ಗೆ ತಲೆಕೆಡಿಸಿಕೊಳ್ಳದೆ ರೀಲ್ಸ್ ಮಾಡಿದ ನಟಿ

    ವೈದ್ಯರ ಬಹು-ಶಿಸ್ತಿನ ತಂಡವು ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಈ ಸಮಯದಲ್ಲಿ ಅವರ ಸ್ಥಿತಿ ಗಂಭೀರವಾಗಿದೆ ಎಂದು ಪಕ್ಷವು ಎಕ್ಸ್ ಪೋಸ್ಟ್ ಮೂಲಕ ತಿಳಿಸಿದೆ.ತೀವ್ರ ಜ್ವರದಿಂದ ಬಳಲುತ್ತಿದ್ದ ಯೆಚೂರಿ ಅವರನ್ನು ಆಗಸ್ಟ್ 19 ರಂದು ಏಮ್ಸ್ನ ತುರ್ತು ವಿಭಾಗಕ್ಕೆ ದಾಖಲಿಸಲಾಗಿತ್ತು. ನ್ಯುಮೋನಿಯಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಯಚೂರಿ ಅವರು ಇತ್ತೀಚೆಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.ಇದನ್ನೂ ಓದಿ: ಡಿವೋರ್ಸ್ ಬಳಿಕ ನಿವಿ ಫುಲ್ ಆ್ಯಕ್ಟೀವ್- ಕೆಟ್ಟ ಕಾಮೆಂಟ್ಸ್ ಬಗ್ಗೆ

  • ಆಸ್ಪತ್ರೆಗೆ ದಾಖಲಾಗಿರುವ ಅಡ್ವಾಣಿ ಆರೋಗ್ಯ ಸ್ಥಿರ

    ಆಸ್ಪತ್ರೆಗೆ ದಾಖಲಾಗಿರುವ ಅಡ್ವಾಣಿ ಆರೋಗ್ಯ ಸ್ಥಿರ

    ನವದೆಹಲಿ: ಆಸ್ಪತ್ರೆಗೆ ದಾಖಲಾಗಿರುವ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್‌.ಕೆ ಅಡ್ವಾಣಿ (LK Advani) ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯು ತನ್ನ ಹೇಳಿಕೆಯಲ್ಲಿ ದೃಢಪಡಿಸಿದೆ.

    ಏಕಾಏಕಿ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ 96 ವರ್ಷ ವಯಸ್ಸಿನ ಅಡ್ವಾಣಿಯವರನ್ನು ಬುಧವಾರ ತಡರಾತ್ರಿ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (AIIMS)‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಸ್ತುತ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ.

    ಅಡ್ವಾಣಿಯವರು ವೃದ್ಧಾಪ್ಯ ವಿಭಾಗದ ತಜ್ಞರ ಅಡಿಯಲ್ಲಿ ವಯೋಸಹಜ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಕುಡಿತದ ಮತ್ತಿನಲ್ಲಿದ್ದ ವ್ಯಕ್ತಿಯನ್ನ ಎತ್ತಿ ಎಸೆದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆ

    2024ರ ಮಾರ್ಚ್ 30 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು  ಅವರು ನವದೆಹಲಿಯಲ್ಲಿರುವ ಅಡ್ವಾಣಿ ಅವರ ನಿವಾಸಕ್ಕೆ ತೆರಳಿ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದರು.

  • ಪ್ರಾಣಪ್ರತಿಷ್ಠೆಗಾಗಿ ಅರ್ಧದಿನ ರಜೆ ಘೋಷಿಸಿದ್ದ AIIMS – ಒಂದು ದಿನದ ನಂತ್ರ ಆದೇಶ ವಾಪಸ್‌!

    ಪ್ರಾಣಪ್ರತಿಷ್ಠೆಗಾಗಿ ಅರ್ಧದಿನ ರಜೆ ಘೋಷಿಸಿದ್ದ AIIMS – ಒಂದು ದಿನದ ನಂತ್ರ ಆದೇಶ ವಾಪಸ್‌!

    ನವದೆಹಲಿ: ಭಾರೀ ಗದ್ದಲದ ನಡುವೆ ದೆಹಲಿಯ ಏಮ್ಸ್‌ ಆಸ್ಪತ್ರೆ (AIIMS Hospital) ಪ್ರಾಣಪ್ರತಿಷ್ಠೆ ಹಿನ್ನೆಯೆಲ್ಲಿ ಸಿಬ್ಬಂದಿಗೆ ಘೋಷಿಸಿದ್ದ ಅರ್ಧದಿನ ರಜೆಯ ಆದೇಶವನ್ನು ಕೆಲವೇ ಗಂಟೆಗಳಲ್ಲಿ ಹಿಂಪಡೆದಿದೆ.

    ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಮಧ್ಯಾಹ್ನ 2:30ರ ವರೆಗೆ ಆಸ್ಪತ್ರೆಗೆ ರಜೆ ಘೋಷಿಸಿ ಸುತ್ತೋಲೆ ಹೊರಡಿಸಿತ್ತು. ಆದ್ರೆ ಸಾರ್ವಜನಿಕರಿಂದ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಆಡಳಿತ ಮಂಡಳಿ ರಜೆಯ ಆದೇಶವನ್ನು ವಾಪಸ್‌ ಪಡೆದುಕೊಂಡಿದೆ. ಅಲ್ಲದೇ ಹೊರ ರೋಗಿಗಳಿಗೆ ಅನಾನುಕೂಲವಾಗದಂತೆ ನೋಡಿಕೊಳ್ಳಲು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಅಯೋಧ್ಯೆಗೂ ಮುನ್ನ ರಾಮಸೇತು ನಿರ್ಮಿಸಿದ ಸ್ಥಳಕ್ಕೆ ಮೋದಿ ಭೇಟಿ – ವಿಶೇಷ ಪ್ರಾರ್ಥನೆ

    ಕಣ್ಮನ ಸೆಳೆಯುತ್ತಿದೆ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಗೆ ಸಜ್ಜಾದ ಅಯೋಧ್ಯೆಯ ರಾಮಮಂದಿರ

    ಏಮ್ಸ್‌ ಹೇಳಿದ್ದೇನು?
    ಕೇಂದ್ರ ಸರ್ಕಾರ ನೌಕರರಿಗೆ ಅರ್ಧದಿನ ರಜೆ ಘೋಷಿಸಿದ್ದನ್ನು ಉಲ್ಲೇಖಿಸಿ ದೆಹಲಿಯ ಏಮ್ಸ್ ಆಸ್ಪತ್ರೆ ಅರ್ಧದಿನ ರಜೆ ಘೋಷಿಸಿತ್ತು. ಜನವರಿ 22ರಂದು ಮಧ್ಯಾಹ್ನ 2.30ರಿಂದ ದೆಹಲಿ ಏಮ್ಸ್ ಆಸ್ಪತ್ರೆ ಎಂದಿನಂತೆ ಕಾರ್ಯನಿರ್ವಹಿಸಲಿದೆ. ಆದರೆ ಸೋಮವಾರ 2.30ರ ವರಗೆ ತುರ್ತು ಸೇವೆಗಳು ಮಾತ್ರ ಲಭ್ಯವಿರಲಿದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿತ್ತು. ಇದನ್ನೂ ಓದಿ: ರಾಮಮಂದಿರ ವಿಚಾರದಲ್ಲಿ ಕಾಂಗ್ರೆಸ್ ನಿಲುವಿನಿಂದ ಅಸಮಾಧಾನ; ಗುಜರಾತ್‌ನ ‘ಕೈ’ ಶಾಸಕ ರಾಜೀನಾಮೆ

    ಅಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆ ಕಣ್ತುಂಬಿಕೊಳ್ಳಲು ಭಕ್ತರು ಸಜ್ಜಾಗಿದ್ದಾರೆ. ಆಸ್ಪತ್ರೆ ಸಿಬ್ಬಂದಿಗಳೂ ಪವಿತ್ರ ಕಾರ್ಯಕ್ರಮವನ್ನ ವೀಕ್ಷಿಸಲು ಹಾಗೂ ಪೂಜೆ, ಭಜನೆಯಲ್ಲಿ ತೊಡಗಿಸಿಕೊಳ್ಳಲು ಅರ್ಧ ದಿನ ರಜೆ ಘೋಷಿಸಲಾಗಿದೆ. ರೋಗಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ಸಿಬ್ಬಂದಿಗೆ ರಜೆ ನೀಡಲಾಗಿದೆ. ಒಪಿಡಿ ವಿಭಾಗ ಸೇರಿದಂತೆ ತುರ್ತು ಸೇವೆಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ ಎಂದು ಏಮ್ಸ್ ಆಡಳಿತ ಮಂಡಳಿ ತಿಳಿಸಿತ್ತು. ಇದನ್ನೂ ಓದಿ: ರಾಮಲಲ್ಲಾ ಪ್ರಾಣಪ್ರತಿಷ್ಠೆ – ಜ.22ರಂದು ಅರ್ಧದಿನ ರಜೆ ಘೋಷಿಸಿದ AIIMS ಆಸ್ಪತ್ರೆ

    ಈ ಬೆನ್ನಲ್ಲೇ ಸಾರ್ವಜನಿಕರು ಹಾಗೂ ಪ್ರತಿಪಕ್ಷಗಳಿಂದ ಭಾರೀ ಟೀಕೆ ಕೇಳಿಬಂದಿತ್ತು. ಶಿವಸೇನಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಸಹ, ಏಮ್ಸ್‌ ಮರ್ಯಾದಾ ಪುರುಷೋತ್ತಮ ರಾಮನನ್ನು ಸ್ವಾಗತಿಸಲು ರಜೆ ತೆಗೆದುಕೊಳ್ಳುತ್ತಿದೆ. ಆದ್ರೆ ಆರೋಗ್ಯ ಸೇವೆಗಳಿಗೆ ಅಡ್ಡಿಯಾಗುವುದನ್ನು ಶ್ರೀರಾಮ ಒಪ್ಪುತ್ತಾನಾ? ಎಂದು ಪ್ರಶ್ನಿಸಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದರು. ಇದನ್ನೂ ಓದಿ: ರಾಮಲಲ್ಲಾ ವಿಗ್ರಹದ ಫೋಟೋ ವೈರಲ್‌ ಮಾಡಿದವ್ರ ವಿರುದ್ಧ ಕಠಿಣ ಕ್ರಮಕ್ಕೆ ಪ್ರಧಾನ ಅರ್ಚಕ ಒತ್ತಾಯ 

  • ರಾಮಲಲ್ಲಾ ಪ್ರಾಣಪ್ರತಿಷ್ಠೆ – ಜ.22ರಂದು ಅರ್ಧದಿನ ರಜೆ ಘೋಷಿಸಿದ AIIMS ಆಸ್ಪತ್ರೆ

    ರಾಮಲಲ್ಲಾ ಪ್ರಾಣಪ್ರತಿಷ್ಠೆ – ಜ.22ರಂದು ಅರ್ಧದಿನ ರಜೆ ಘೋಷಿಸಿದ AIIMS ಆಸ್ಪತ್ರೆ

    ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ (Rama lalla Pran Pratishtha) ನೆರವೇರಲು ಕೌಂಟ್‌ಡೌನ್‌ ಶುರುವಾಗಿದೆ. ಅಯೋಧ್ಯೆಯ ಬೀದಿ ಬೀದಿಗಳು ತಳಿರು ತೋರಣಗಳಿಂದ ಕಂಗೊಳಿಸುತ್ತಿವೆ. ಇಡೀ ವಿಶ್ವದಾದ್ಯಂತ ಶ್ರೀರಾಮನ ಭಕ್ತರು ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ. ಇದಕ್ಕಾಗಿ ಕೇಂದ್ರ ಸರ್ಕಾರ ಅರ್ಧ ದಿನ ರಜೆ ಘೋಷಿಸಿದ್ದರೆ, ಹಲವು ರಾಜ್ಯಗಳೂ ಶಾಲಾ-ಕಾಲೇಜುಗಳು ಸೇರಿದಂತೆ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಿವೆ.

    ಈ ಬೆನ್ನಲ್ಲೇ ದೆಹಲಿಯ ಏಮ್ಸ್ ಆಸ್ಪತ್ರೆ (AIIMS Hospital) ಅರ್ಧ ದಿನ ರಜೆ ಘೋಷಿಸಿದೆ. ಜನವರಿ 22ರಂದು ಮಧ್ಯಾಹ್ನ 2.30ರಿಂದ ದೆಹಲಿ ಏಮ್ಸ್ ಆಸ್ಪತ್ರೆ ಎಂದಿನಂತೆ ಕಾರ್ಯನಿರ್ವಹಿಸಲಿದೆ. ಆದರೆ ಸೋಮವಾರ 2.30ರ ವರಗೆ ತುರ್ತು ಸೇವೆಗಳು ಮಾತ್ರ ಲಭ್ಯವಿರಲಿದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಎಲ್ಲೆಲ್ಲೂ ರಾಮಜಪ, ಜೈಶ್ರೀರಾಮ್ ಉದ್ಘೋಷ – ಇಟ್ಟಿಗೆಯಲ್ಲೇ ಸಾಕ್ಷಾತ್ ಶ್ರೀರಾಮನ ಕಂಡ ಕುಟುಂಬ!

    ಆಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆ ಕಣ್ತುಂಬಿಕೊಳ್ಳಲು ಭಕ್ತರು ಸಜ್ಜಾಗಿದ್ದಾರೆ. ಆಸ್ಪತ್ರೆ ಸಿಬ್ಬಂದಿಗಳೂ ಪವಿತ್ರ ಕಾರ್ಯಕ್ರಮವನ್ನ ವೀಕ್ಷಿಸಲು ಹಾಗೂ ಪೂಜೆ, ಭಜನೆಯಲ್ಲಿ ತೊಡಗಿಸಿಕೊಳ್ಳಲು ಅರ್ಧ ದಿನ ರಜೆ ಘೋಷಿಸಲಾಗಿದೆ. ರೋಗಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ಸಿಬ್ಬಂದಿಗೆ ರಜೆ ನೀಡಲಾಗಿದೆ. ಒಪಿಡಿ ವಿಭಾಗ ಸೇರಿದಂತೆ ತುರ್ತು ಸೇವೆಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ ಎಂದು ಏಮ್ಸ್ ಆಡಳಿತ ಮಂಡಳಿ ತಿಳಿಸಿದೆ.

    ಉತ್ತರ ಪ್ರದೇಶ ಸರ್ಕಾರ ಆರಂಭದಲ್ಲಿ ಶಾಲಾ ಕಾಲೇಜುಗಳಿಗೆ ಮಾತ್ರ ರಜೆ ಘೋಷಿಸಿತ್ತು. ನಂತರ ಪ್ರಾಣಪ್ರತಿಷ್ಠೆ ದಿನ ಸಾರ್ವಜನಿಕ ರಜೆ ಘೋಷಿಸಿದೆ. ಸರ್ಕಾರಿ ಕಚೇರಿ, ಬ್ಯಾಂಕ್, ಶಾಲಾ ಕಾಲೇಜು, ಖಾಸಗಿ ಸಂಸ್ಥೆ, ಕೇಚರಿಗಳಿಗೂ ರಜೆ ನೀಡಲಾಗಿದೆ. ಇದನ್ನೂ ಓದಿ: ಪ್ರಾಣಪ್ರತಿಷ್ಠೆಗೆ ಕೌಂಟ್‌ಡೌನ್ – ಬೆಂಗ್ಳೂರಿನಿಂದ ಅಯೋಧ್ಯೆಗೆ ಹೆಚ್ಚುವರಿ ರೈಲು ಸೇವೆ, ಇಲ್ಲಿದೆ ಡಿಟೇಲ್ಸ್‌ 

  • 41 ಕಾರ್ಮಿಕರ ಆರೋಗ್ಯ ಸ್ಥಿರವಾಗಿದ್ದು, ಮನೆಗೆ ತೆರಳಬಹುದು: ಏಮ್ಸ್

    41 ಕಾರ್ಮಿಕರ ಆರೋಗ್ಯ ಸ್ಥಿರವಾಗಿದ್ದು, ಮನೆಗೆ ತೆರಳಬಹುದು: ಏಮ್ಸ್

    ನವದೆಹಲಿ: ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿ ಹೊರಬಂದಿರುವ 41 ಕಾರ್ಮಿಕರ ಆರೋಗ್ಯವು (41 Workers Health) ಉತ್ತಮವಾಗಿದ್ದು, ಅವರಿನ್ನು ಮನೆಗೆ ಹೋಗಬಹುದು ಎಂದು ಏಮ್ಸ್ ಆಸ್ಪತ್ರೆಯ (AIIMS Hospital) ವೈದ್ಯರು ತಿಳಿಸಿದ್ದಾರೆ.

    40 ಮಂದಿ ಕಾರ್ಮಿಕರು ಈಗಾಗಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೋರ್ವನಿಗೆ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರು ಕೂಡ ಆದಷ್ಟು ಬೇಗ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹೆಜ್ಜೆ ಹೆಜ್ಜೆಗೂ ಅಡೆತಡೆ – ಉತ್ತರಕಾಶಿ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ರಕ್ಷಿಸಿದ್ದು ಹೇಗೆ? ಇಲ್ಲಿದೆ ಪೂರ್ಣ ವಿವರ

    ಈ ಸಂಬಂಧ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ಏಮ್ ಆಸ್ಪತ್ರೆ, ಸಿಲ್ಕ್ಯಾರಾ ಸುರಂಗದಿಂದ (Silkyara-Barkot Tunnel) ಸುರಕ್ಷಿತವಾಗಿ ರಕ್ಷಣೆಗೊಂಡ ಬಳಿಕ ಎಲ್ಲಾ 41 ಮಂದಿ ಕಾರ್ಮಿಕರು ಏಮ್ಸ್-ರಿಷಿಕೇಶ್ ಆಸ್ಪತ್ರೆಗೆ ಬುಧವಾರ ಮಧ್ಯಾಹ್ನ ದಾಖಲಾಗಿದ್ದಾರೆ. ಪ್ರಾಥಮಿಕ ತಪಾಸಣೆಯ ವೇಳೆ ಈ ಕಾರ್ಮಿಕರ ಮೈಮೇಲೆ ಯಾವುದೇ ಗಾಯಗಳು ಕಂಡುಬಂದಿಲ್ಲ. ನಂತರ ಅವರನ್ನು ತೀವ್ರ ಆರೋಗ್ಯ ತಪಾಸಣೆಗೆ ಒಳಪಡಿಸಲಾಯಿತು. ಅವರ ರಕ್ತ ಪರೀಕ್ಷೆಗಳು, ಮೂತ್ರಪಿಂಡ, ಇಸಿಜಿ ವರದಿಗಳು, ಯಕೃತ್ತಿನ ಕಾರ್ಯ ಪರೀಕ್ಷೆ ಮತ್ತು ಎಕ್ಸ್ ರೇನಲ್ಲಿ ಎಲ್ಲರೂ ದೈಹಿಕವಾಗಿ ಸ್ಥಿರರಾಗಿದ್ದಾರೆ ಎಂದು ತಿಳಿಸಿದರು.

    40 ಕಾರ್ಮಿಕರಲ್ಲಿ ಒಬ್ಬರು ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ಅವರನ್ನು ಹೆಚ್ಚಿನ ತಪಾಸಣೆಗಾಗಿ ಡಿಸಾಸ್ಟರ್ ವಾರ್ಡ್‍ನಿಂದ ಹೃದ್ರೋಗ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಆದರೆ ಇದು ಸುರಂಗ ಕುಸಿತ ಪ್ರಕರಣಕ್ಕೆ ಸಂಬಂಧಿಸಿದ್ದಲ್ಲ ಎಂದು ವೈದ್ಯರೊಬ್ಬರು ತಿಳಿಸಿದ್ದಾರೆ.

    ಒಟ್ಟಿನಲ್ಲಿ ಎಲ್ಲಾ ಕಾರ್ಮಿಕರ ಆರೋಗ್ಯದ ಬಗ್ಗೆ ಆಸ್ಪತ್ರೆಯು ಕ್ಲಿಯರೆನ್ಸ್ ನೀಡಿದ್ದು, ಎಲ್ಲರೂ ತಮ್ಮ ತಮ್ಮ ಮನೆಗಳಿಗೆ ತೆರಳಬಹುದು ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ 41 ಜನರ ಪೈಕಿ 15 ಮಂದಿ ಏಮ್ಸ್ ನಿಂದ ತಮ್ಮ ಊರಾದ ಜಾರ್ಖಂಡ್‍ಗೆ ಹೊರಟಿದ್ದಾರೆ. ಈ 15 ಕಾರ್ವಿಕರನ್ನು ಅವರ ಕುಟುಂಬಸ್ಥರ ಸಮೇತ ಉತ್ತರಾಖಂಡದ ಡೆಹ್ರಾಡೂನ್‍ನಿಂದ ದೆಹಲಿಗೆ ಏರ್ ಲಿಫ್ಟ್ ಮಾಡಲಾಗಿದ್ದು, ಅಲ್ಲಿಂದ ಅವರನ್ನು ವಿಮಾನದಲ್ಲಿ ರಾಂಚಿಗೆ ಕಳುಹಿಸಿಕೊಡಲಾಗುತ್ತದೆ.

  • ದೆಹಲಿ ಏಮ್ಸ್‌ಗೆ ಕನ್ನ ಹಾಕಿದ್ದು ಚೀನಾ – ಡೇಟಾ ಈಗ ಸುರಕ್ಷಿತ

    ದೆಹಲಿ ಏಮ್ಸ್‌ಗೆ ಕನ್ನ ಹಾಕಿದ್ದು ಚೀನಾ – ಡೇಟಾ ಈಗ ಸುರಕ್ಷಿತ

    ನವದೆಹಲಿ: ನಗರದ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ನ (AIIMS) ಕಂಪ್ಯೂಟರ್ ಸಿಸ್ಟಮ್ ಮೇಲೆ ಇತ್ತೀಚೆಗೆ ಸೈಬರ್ ದಾಳಿ (Cyber Attack) ನಡೆದಿದ್ದು, ಈ ದಾಳಿಯ ಮೂಲ ಚೀನಾವಾಗಿದೆ (China) ಎಂದು ಸರ್ಕಾರಿ ಮೂಲಗಳು ಬುಧವಾರ ತಿಳಿಸಿದೆ.

    ವರದಿಗಳ ಪ್ರಕಾರ 100 ಸರ್ವರ್‌ಗಳಲ್ಲಿ (40 ಭೌತಿಕ ಹಾಗೂ 60 ವರ್ಚುವಲ್) 5 ಭೌತಿಕ ಸರ್ವರ್‌ಗಳನ್ನು ಹ್ಯಾಕ್ ಮಾಡುವಲ್ಲಿ ಅಪರಾಧಿಗಳು ಯಶಸ್ವಿಯಾಗಿದ್ದಾರೆ. ಆದರೆ ಈ ಬಗ್ಗೆ ತಕ್ಷಣವೇ ಕ್ರಮ ಕೈಗೊಂಡಿರುವುದರಿಂದ ದೊಡ್ಡ ಹಾನಿಯನ್ನು ತಪ್ಪಿಸಲಾಗಿದೆ. ಇದೀಗ ಲಕ್ಷಗಟ್ಟಲೆ ರೋಗಿಗಳ ವಿವರಗಳು ಸುರಕ್ಷಿತವಾಗಿದೆ ಎಂದು ವರದಿಯಾಗಿದೆ.

    ನವೆಂಬರ್ 23 ರಂದು ಮೊದಲ ಬಾರಿ ಏಮ್ಸ್ ಆಸ್ಪತ್ರೆಯ ಸರ್ವರ್ 9 ಗಂಟೆಗಳ ಕಾಲ ಸ್ಥಗಿತಗೊಂಡಿತ್ತು. ಇದು ಹ್ಯಾಕರ್‌ಗಳ (Hacker) ದಾಳಿಯಿಂದಾಗಿರುವುದಾಗಿ ಏಮ್ಸ್ ತಿಳಿಸಿತ್ತು. ಸುಮಾರು 3-4 ಕೋಟಿ ರೋಗಿಗಳ ವಿವರ ಸೋರಿಕೆಯಾಗಿರುವ ಭೀತಿ ಉಂಟಾಗಿದ್ದು, ಬಳಿಕ ಹ್ಯಾಕರ್‌ಗಳು ಏಮ್ಸ್ನಿಂದ ಸುಮಾರು 200 ಕೋಟಿ ರೂ. ಮೌಲ್ಯದ ಕ್ರಿಪ್ಟೋಕರೆನ್ಸಿ ನೀಡುವಂತೆ ಬೇಡಿಕೆಯಿಟ್ಟಿದ್ದರು. ಇದನ್ನೂ ಓದಿ: ಜಿ7 ದೇಶಗಳು ನಿಗದಿ ಮಾಡಿದ ದರಕ್ಕಿಂತಲೂ ಕಡಿಮೆ ದರದಲ್ಲಿ ರಷ್ಯಾದಿಂದ ಭಾರತ ತೈಲ ಖರೀದಿ

    ಬಳಿಕ ಡಿಸೆಂಬರ್ 2 ರಂದು ಆಸ್ಪತ್ರೆಯ 5 ಮುಖ್ಯ ಸರ್ವರ್‌ಗಳು ಸೈಬರ್ ದಾಳಿಗೆ ಒಳಗಾಗಿತ್ತು. ಇದರಿಂದ ಲಕ್ಷಾಂತರ ರೋಗಿಗಳ ವೈಯಕ್ತಿಕ ಡೇಟಾಗಳಿಗೆ ಹಾನಿಯಾಗಿತ್ತು. ಈ ಸೈಬರ್ ದಾಳಿಯನ್ನು ಚೀನಾದ ಹ್ಯಾಕರ್‌ಗಳು ನಡೆಸಿರುವ ಶಂಕೆಯಿದೆ ಎಂದು ಮೂಲಗಳು ತಿಳಿಸಿದ್ದವು.

    ಡಿಸೆಂಬರ್ 4 ರಂದು ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿಯೂ ಸೈಬರ್ ದಾಳಿಯಾಗಿರುವುದಾಗಿ ವರದಿಯಾಗಿದೆ. ಆದರೆ ಏಮ್ಸ್ನಲ್ಲಿ ನಡೆದಿರುವಷ್ಟು ದಾಳಿ ತೀವ್ರವಾಗಿಲ್ಲ ಎನ್ನಲಾಗಿದೆ. ಇದನ್ನೂ ಓದಿ: ವೈದ್ಯನಿಂದ ಪತ್ನಿಯ ಬರ್ಬರ ಹತ್ಯೆ – ಸೂಟ್‍ಕೇಸ್‍ನಲ್ಲಿ ತುಂಬಿ 400 ಕಿ.ಮೀ ದೂರದಲ್ಲಿ ಸುಟ್ಟು ಹಾಕಿದ

    Live Tv
    [brid partner=56869869 player=32851 video=960834 autoplay=true]

  • ದೆಹಲಿ ಏಮ್ಸ್ ನಿರ್ದೇಶಕರಾಗಿ ಕನ್ನಡಿಗ ಶ್ರೀನಿವಾಸ್ ನೇಮಕ

    ದೆಹಲಿ ಏಮ್ಸ್ ನಿರ್ದೇಶಕರಾಗಿ ಕನ್ನಡಿಗ ಶ್ರೀನಿವಾಸ್ ನೇಮಕ

    ಬೆಂಗಳೂರು: ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಏಮ್ಸ್‌ಗೆ (All Indian Institute of Medical Sciences ) ಮುಂದಿನ ನಿರ್ದೇಶಕರಾಗಿ ಡಾ.ಎಂ.ಶ್ರೀನಿವಾಸ್ (Dr M Srinivas) ಹೆಸರನ್ನು ಸಂಪುಟದ ನೇಮಕಾತಿ ಸಮಿತಿ ಅನುಮೋದಿಸಿದೆ.

     

    ಡಾ. ಎಂ.ಶ್ರೀನಿವಾಸ್ ಕನ್ನಡಿಗರಾಗಿದ್ದು ಯಾದಗಿರಿ ಮೂಲದವರಾಗಿದ್ದಾರೆ. ಬಳ್ಳಾರಿಯ ಏಮ್ಸ್‌ನಲ್ಲಿ 1984ರ ಬ್ಯಾಚ್‍ನ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದರು. ಸದ್ಯ ಹೈದರಾಬಾದ್‍ನ ಸನತ್‍ನಗರದ (Hydrabad Sanatnagar) ಇಎಸ್‍ಐಸಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಆಗಿದ್ದು, ಇದಕ್ಕೂ ಮೊದಲು ಅವರು ದೆಹಲಿಯ ಏಮ್ಸ್‌ನಲ್ಲಿಯೇ (AIIMS) ಪೀಡಿಯಾಟ್ರಿಕ್ ಸರ್ಜರಿ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಕಾರ್ಯನಿರ್ವಹಿಸಿದ್ದರು. ಇದೀಗ ಹುದ್ದೆಯನ್ನು ವಹಿಸಿಕೊಳ್ಳುವ ದಿನಾಂಕದಿಂದ ಐದು ವರ್ಷಗಳ ಅವಧಿಗೆ ಅಥವಾ 65 ವರ್ಷ ವಯಸ್ಸಿನವರೆಗೆ ಅವರು ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಇದನ್ನೂ ಓದಿ: CET ಬಿಕ್ಕಟ್ಟು ಶಮನ – ಸರ್ಕಾರದ ಸಮನ್ವಯ ಸೂತ್ರಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್

    ಈ ಹಿಂದೆ ನಿರ್ದೇಶಕರಾಗಿದ್ದ ಡಾ. ರಣದೀಪ್ ಗುಲೇರಿಯಾ (Dr Randeep Guleria) ಅವರನ್ನು 2017 ಮಾರ್ಚ್ 28ರಂದು ಏಮ್ಸ್ ನಿರ್ದೇಶಕರಾಗಿ ಐದು ವರ್ಷಗಳ ಅವಧಿಗೆ ನೇಮಕ ಮಾಡಲಾಗಿತ್ತು. ಅಧಿಕಾರ ಅವಧಿ ಮುಗಿದ ನಂತರ ಎರಡು ಬಾರಿ ತಲಾ ಮೂರು ತಿಂಗಳಂತೆ ಅವಧಿ ವಿಸ್ತರಿಸಲಾಗಿತ್ತು. ಇವರ ಅಧಿಕಾರಿ ಶುಕ್ರವಾರ ಅಂತ್ಯವಾಗಲಿದ್ದು, ಡಾ.ಶ್ರೀನಿವಾಸ್ ಮುಂದಿನ ಐದು ವರ್ಷ ಕಾರ್ಯನಿರ್ವಹಿಸಲಿದ್ದಾರೆ. ಇದನ್ನೂ ಓದಿ: ಮಂಗಳೂರು ದಸರಾ-2022: ತಾಲೂಕಿನಾದ್ಯಂತ 4 ದಿನ ಹೆಚ್ಚುವರಿ ರಜೆ

    Live Tv
    [brid partner=56869869 player=32851 video=960834 autoplay=true]

  • ಭಯ ಬೇಡ, ಲಾಲೂ ಪ್ರಸಾದ್ ಚೇತರಿಸಿಕೊಳ್ಳುತ್ತಿದ್ದಾರೆ: ಪುತ್ರಿ ಮಿಸಾ ಭಾರ್ತಿ

    ಭಯ ಬೇಡ, ಲಾಲೂ ಪ್ರಸಾದ್ ಚೇತರಿಸಿಕೊಳ್ಳುತ್ತಿದ್ದಾರೆ: ಪುತ್ರಿ ಮಿಸಾ ಭಾರ್ತಿ

    ನವದೆಹಲಿ: ಆರ್‌ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಸುಧಾರಿಸುತ್ತಿದೆ. ಶೀಘ್ರದಲ್ಲೇ ಅವರನ್ನು ಐಸಿಯುನಿಂದ ಖಾಸಗಿ ವಾರ್ಡ್‌ಗೆ ಸ್ಥಳಾಂತರಿಸಲಾಗುವುದು ಎಂದು ಪುತ್ರಿ ಮಿಸಾ ಭಾರ್ತಿ ಮಾಹಿತಿ ನೀಡಿದ್ದಾರೆ.

    ಮಿಸಾ ಭಾರ್ತಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಲಾಲೂ ಪ್ರಸಾದ್ ಅವರ ಚೇತರಿಕೆಯ ಸುದ್ದಿಯನ್ನು ತಿಳಿಸಿದ್ದು, ಆಸ್ಪತ್ರೆಯಲ್ಲಿರುವ ಲಾಲೂ ಅವರ ಕೆಲವು ಭಾವನಾತ್ಮಕ ಫೊಟೋಗಳನ್ನೂ ಹಂಚಿಕೊಂಡಿದ್ದಾರೆ.

    ನಿಮ್ಮೆಲ್ಲರ ಪ್ರಾರ್ಥನೆಯಿಂದ ಹಾಗೂ ದೆಹಲಿಯ ಏಮ್ಸ್ ಆಸ್ಪತ್ರೆಯ ಉತ್ತಮ ವೈದ್ಯಕೀಯ ಆರೈಕೆಯಿಂದ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಸಾಕಷ್ಟು ಸುಧಾರಿಸಿದೆ. ಈಗ ಅವರು ಹಾಸಿಗೆಯಿಂದ ಎದ್ದು ಕುಳಿತುಕೊಳ್ಳಲು ಸಾಧ್ಯವಾಗುತ್ತಿದೆ. ಇತರರ ಸಹಾಯದಿಂದ ಎದ್ದು ನಿಲ್ಲಲು ಅವರು ಸಮರ್ಥರಾಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಬೆಯೊಂದಿಗಿನ ಹಳೆ ಕ್ಷಣ ನೆನೆದ ಮೋದಿ – ಜುಲೈ 9ರಂದು ರಾಷ್ಟ್ರೀಯ ಶೋಕಾಚರಣೆ ಘೋಷಣೆ

    ಪ್ರತಿಯೊಂದು ಸಮಸ್ಯೆಯ ವಿರುದ್ಧ ಹೋರಾಡುವ ಕಲೆ ಲಾಲೂ ಪ್ರಸಾದ್ ಯಾದವ್ ಅವರಿಗಿಂತ ಚೆನ್ನಾಗಿ ಯಾರಿಗೆ ತಿಳಿದಿದೆ? ನಿಮ್ಮೆಲ್ಲರ ಸ್ಥೈರ್ಯ ಹಾಗೂ ಪ್ರಾರ್ಥನೆಗೆ ಧನ್ಯವಾದಗಳು. ಲಾಲೂ ಅವರ ಸ್ಥಿತಿ ಈಗ ಉತ್ತಮವಾಗಿದೆ. ದಯವಿಟ್ಟು ವದಂತಿಗಳಿಗೆ ಗಮನ ಕೊಡಬೇಡಿ. ನಿಮ್ಮೆಲ್ಲರ ಪ್ರಾರ್ಥನೆಯಿಂದ ಲಾಲೂ ಅವರನ್ನು ನೆನೆಸಿಕೊಳ್ಳಿ ಎಂದು ಹೇಳಿದ್ದಾರೆ.

    ಲಾಲೂ ಯಾದವ್ ಅವರ ಆರೋಗ್ಯದ ಬಗ್ಗೆ ತಿಳಿಸಿದ ಏಮ್ಸ್‌ನ ವೈದ್ಯರು, ಲಾಲೂ ಯಾದವ್ ಅವರ ಭುಜ ಹಾಗೂ ತೊಡೆಯಲ್ಲಿ ಸಣ್ಣ ಮೂಳೆ ಮುರಿತವಾಗಿದೆ. ಆದ್ದರಿಂದ ಅವರಿಗೆ ಯಾವುದೇ ರೀತಿಯ ಶಸ್ತ್ರಚಿಕಿತ್ಸೆಯ ಅಗತ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಡಿ.ಕೆ ಶಿವಕುಮಾರ್ ಭಿಕ್ಷೆ ಬೇಡಿದ್ದ ಹಣ ಎಲ್ಲಿ ಹೋಯ್ತು?- ಬೊಮ್ಮಾಯಿ ತಿರುಗೇಟು

    ವಾಸ್ತವವಾಗಿ ಹಲವು ಕಾಯಿಲೆಗಳಿಂದ ಬಳಲುತ್ತಿರುವ ಲಾಲೂ ಯಾದವ್ ಜುಲೈ 3 ರಂದು ತಮ್ಮ ನಿವಾಸದ ಮೆಟ್ಟಿಲುಗಳಿಂದ ಜಾರಿ ಬಿದ್ದಿದ್ದರು. ಇದರಿಂದ ಅವರ ಭುಜ ಹಾಗೂ ತೊಡೆಗಳಲ್ಲಿ ಮೂಳೆ ಮುರಿತವಾಗಿತ್ತು. ಮೊದಲಿಗೆ ಅವರನ್ನು ಪಾಟ್ನಾದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಉತ್ತಮ ಚಿಕಿತ್ಸೆಗಾಗಿ ಅವರನ್ನು ಬುಧವಾರ ಏರ್ ಆಂಬುಲೆನ್ಸ್ ಮುಖಾಂತರ ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿತ್ತು. ಅಲ್ಲಿ ಅವರ ಸ್ಥಿತಿ ಗಣನೀಯವಾಗಿ ಚೇತರಿಕೆ ಕಂಡಿದೆ.

    Live Tv
    [brid partner=56869869 player=32851 video=960834 autoplay=true]

  • ದೆಹಲಿಯಲ್ಲಿ ಪ್ರತಿದಿನ ದಾಖಲಾಗ್ತಿದೆ 20ಕ್ಕೂ ಹೆಚ್ಚು ಬ್ಯ್ಲಾಕ್ ಫಂಗಸ್ ಪ್ರಕರಣಗಳು

    ದೆಹಲಿಯಲ್ಲಿ ಪ್ರತಿದಿನ ದಾಖಲಾಗ್ತಿದೆ 20ಕ್ಕೂ ಹೆಚ್ಚು ಬ್ಯ್ಲಾಕ್ ಫಂಗಸ್ ಪ್ರಕರಣಗಳು

    ನವದೆಹಲಿ: ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಪ್ರತಿದಿನ 20ಕ್ಕೂ ಹೆಚ್ಚು ಬ್ಲ್ಯಾಕ್ ಫಂಗಸ್ ಪ್ರಕರಣಗಳ ದಾಖಲಾಗುತ್ತಿದೆ ಎಂದು ನರವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಎಂ.ವಿ. ಪದ್ಮ ಶ್ರೀವಾಸ್ತವರವರು ತಿಳಿಸಿದ್ದಾರೆ.

    ಇಂದು ಗಂಭೀರ ಸ್ಥಿತಿಯಲ್ಲಿ 20ಕ್ಕೂ ಹೆಚ್ಚು ಬ್ಲ್ಯಾಕ್ ಫಂಗಸ್ ಪ್ರಕರಣಗಳು ದಾಖಲಾಗಿದ್ದು, ಇಮ್ಯುನೊಕಾಂಪ್ರೊಮೈಸ್ಡ್, ಡಯಾಬಿಟಿಸ್, ಹೈ ಸ್ಟೀರಾಯ್ಡ್ ಡೋಸ್ ಇರುವವರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಆದರೆ ಈ ಮುನ್ನ ಇಷ್ಟು ಸಂಖ್ಯೆಯಲ್ಲಿ ಎಂದಿಗೂ ಇರಲಿಲ್ಲ. ಕೇವಲ ಬೆರಳೆಣಿಕೆಯಷ್ಟಿತ್ತು. ಆದರೆ ಈಗ ಬ್ಲ್ಯಾಕ್ ಫಂಗಸ್ ರೋಗದ ಮಿತಿ ಮೀರುತ್ತಿದ್ದು, ಪ್ರತಿನಿತ್ಯ 20ಕ್ಕೂ ಹೆಚ್ಚು ಸೋಂಕಿನ ಪ್ರಕರಣಗಳು ದಾಖಲಾಗುತ್ತಿದೆ. ಈ ಕಾಯಿಲೆಗೆ ನಾವು ಏಮ್ಸ್ ಟ್ರಾಮಾ ಸೆಂಟರ್ ಮತ್ತು ಏಮ್ಸ್ ಜಾಜ್ಜರ್ ಎಂದು ಪ್ರತ್ಯೇಕ ವಾರ್ಡ್‍ಗಳನ್ನು ನಿರ್ಮಿಸಿದ್ದೇವೆ ಎಂದಿದ್ದಾರೆ.

    ದೇಶಾದ್ಯಂತ ಮ್ಯಾಕ್ಸ್ ಆಸ್ಪತ್ರೆಯಲ್ಲಿ 50ಕ್ಕೂ ಹೆಚ್ಚು ಬ್ಯ್ಲಾಕ್ ಫಂಗಸ್ ಪ್ರಕರಣಗಳು ದಾಖಲಾಗಿದ್ದು, ದೆಹಲಿಯಲ್ಲಿ 25 ಮಂದಿಗೆ ಬ್ಯ್ಲಾಕ್ ಫಂಗಸ್ ಕಾಣಿಸಿಕೊಂಡಿದೆ. ಕೋವಿಡ್-19-ಗೆ ಆಯಾಸ ಕೂಡ ಕಾರಣವಾಗಬಹುದು ಮತ್ತು ಈ ರೋಗವನ್ನು ಹೆಚ್ಚು ಅರ್ಥಮಾಡಿಕೊಳ್ಳಲು ನಾವು ಜಿನೋಮ್ ಸೀಕ್ವನ್ಸಿಂಗ್ ಮಾಡಿಸಬೇಕಾಗುತ್ತದೆ ಎಂದು ಡಾ. ಎಂ.ವಿ. ಪದ್ಮ ಶ್ರೀವಾಸ್ತವರವರು ಹೇಳಿದ್ದಾರೆ.

  • ಪದ್ಮಶ್ರೀ, ಮಾಜಿ ಐಎಂಎ ಅಧ್ಯಕ್ಷ ಡಾ. ಕೆ.ಕೆ ಅಗರ್ವಾಲ್ ಕೊರೊನಾಗೆ ಬಲಿ

    ಪದ್ಮಶ್ರೀ, ಮಾಜಿ ಐಎಂಎ ಅಧ್ಯಕ್ಷ ಡಾ. ಕೆ.ಕೆ ಅಗರ್ವಾಲ್ ಕೊರೊನಾಗೆ ಬಲಿ

    ನವದೆಹಲಿ: ಪದ್ಮ ಶ್ರೀ ಪ್ರಶಸ್ತಿ ಪುರಸ್ಕೃತ ಮತ್ತು ಭಾರತೀಯ ವೈದ್ಯಕೀಯ ಸಂಘದ(ಐಎಂಎ) ಮಾಜಿ ರಾಷ್ಟ್ರೀಯ ಅಧ್ಯಕ್ಷ ಡಾ. ಕೆ.ಕೆ ಅಗರ್ವಾಲ್ ಅವರು ಕೊರೊನಾಗೆ ಬಲಿಯಾಗಿದ್ದಾರೆ.

    ನವದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್(ಏಮ್ಸ್)ನಲ್ಲಿ ಸೋಮವಾರ ರಾತ್ರಿ 11.30ಕ್ಕೆ ಡಾ.ಕೆ.ಕೆ ಅಗರ್ವಾಲ್ ಕೊನೆಯುಸಿರೆಳೆದಿದ್ದಾರೆ.

    ಡಾ.ಕೆ.ಕೆ ಅಗರ್ವಾಲ್‍ರವರು(62) ಕಳೆದ ಕೆಲವು ದಿನಗಳಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದು, ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದರು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಸೋಮವಾರ ರಾತ್ರಿ ನಿಧನರಾಗಿದ್ದಾರೆ.

    ಡಾ.ಕೆ.ಕೆ ಅಗರ್ವಾಲ್‍ರವರು ವೈದ್ಯರಾಗಿದ್ದಾಗಿನಿಂದಲೂ ತಮ್ಮ ಜೀವನವನ್ನು ಸಾರ್ವಜನಿಕರ ಹಿತಕ್ಕಾಗಿ ಮೀಸಲಿಟ್ಟಿದ್ದರು ಮತ್ತು ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. ಕೊರೊನಾ ಸಂದರ್ಭದಲ್ಲಿ ಕೂಡ ಜನ ಸಾಮಾನ್ಯರಿಗೆ ಶಿಕ್ಷಣ ನೀಡುವ ನಿರಂತರ ಪ್ರಯತ್ನಗಳನ್ನು ಮಾಡಿದರು ಮತ್ತು ಹಲವಾರು ವೀಡಿಯೋ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳ ಮೂಲಕ 100 ಮಿಲಿಯನ್ ಜನರನ್ನು ತಲುಪುವ ಮೂಲಕ ಸಂದೇಶವನ್ನು ಸಾರಿದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.