Tag: ಏಮ್ಸ್ ಆಸ್ಪತ್ರೆ

  • ಉಸಿರಾಟದ ತೊಂದರೆ – ಮತ್ತೆ ಆಸ್ಪತ್ರೆ ಸೇರಿದ ಅಮಿತ್ ಶಾ

    ಉಸಿರಾಟದ ತೊಂದರೆ – ಮತ್ತೆ ಆಸ್ಪತ್ರೆ ಸೇರಿದ ಅಮಿತ್ ಶಾ

    ನವದೆಹಲಿ: ಉಸಿರಾಟದ ತೊಂದರೆ ಕಾಣಿಸಿಕೊಂಡ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮತ್ತೆ ದೆಹಲಿ ಏಮ್ಸ್ ಆಸ್ಪತ್ರೆ ದಾಖಲಾಗಿದ್ದಾರೆ.

    ಅಮಿತ್ ಶಾ ಅವರು ಇತ್ತೀಚೆಗಷ್ಟೇ ಕೊರೊನಾದಿಂದ ಗುಣಮುಖರಾಗಿ ಬಂದಿದ್ದರು. ಆದರೆ ಮತ್ತೆ ಅವರಿಗೆ ಉಸಿರಾಟ ತೊಂದರೆ ಕಾಣಿಸಿಕೊಂಡ ಕಾರಣ ಶನಿವಾರ ರಾತ್ರಿ 11 ಗಂಟೆಗೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಕೊರೊನಾ ಬಂದ ಕಾರಣ ಅವರು ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು.

    ಅಮಿತ್ ಶಾ ಅವರಿಗೆ ಆಗಸ್ಟ್ 2ರಂದು ಕೊರೊನಾ ಪಾಸಿಟಿವ್ ಬಂದಿತ್ತು. ಇದನ್ನು ಟ್ವೀಟ್ ಮಾಡುವ ಮೂಲಕ ದೃಢಪಡಿಸಿದ್ದ ಅಮಿತ್ ಶಾ, ನನಗೆ ಕೊರೊನಾ ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದರು. ಈ ನಂತರ ಅವರಿಗೆ ಅಗಸ್ಟ್ 14ರಂದು ಕೊರೊನಾ ಬರದಿ ನೆಗೆಟಿವ್ ಬಂದಿತ್ತು. ಆದ ಕಾರಣ ಮತ್ತೆ ಟ್ವೀಟ್ ಮಾಡಿದ್ದ ಅಮಿತ್ ಶಾ ನನಗೆ ಕೊರೊನಾ ವರದಿ ನೆಗೆಟಿವ್ ಬಂದ ಕಾರಣ ಹೋಂ ಐಸೊಲೇಶನ್‍ನಲ್ಲಿ ಇರಲಿದ್ದೇನೆ ಎಂದು ಟ್ವೀಟ್ ಮಾಡಿ ತಿಳಿಸಿದ್ದರು.

    ಇದಾದ ಬಳಿಕ ಅಗಸ್ಟ್ 18ರಂದು ಮಧ್ಯ ರಾತ್ರಿ ಮತ್ತೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ಬಗ್ಗೆ ಅಂದು ಪತ್ರಿಕಾ ಪ್ರಕಟನೆ ಹೊರಡಿಸಿದ್ದ ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ, ಅಮಿತ್ ಶಾ ಅವರಿಗೆ ಕಳೆದ 3-4 ದಿನಗಳಿಂದ ಮೈ-ಕೈ ನೋವು, ಸುಸ್ತು ಕಾಣಿಸಿಕೊಂಡ ಹಿನ್ನೆಲೆ ಪೋಸ್ಟ್ ಕೋವಿಡ್ ಕೇರ್ ಗೆ ದಾಖಲಿಸಿಕೊಳ್ಳಲಾಗಿದೆ. ಅವರ ಕೊರೊನಾ ವರದಿ ನೆಗೆಟಿವ್ ಬಂದಿದ್ದು, ಏಮ್ಸ್ ಆಸ್ಪತ್ರೆಯ ಪೋಸ್ಟ್ ಕೋವಿಡ್ ಕೇರ್ ಗೆ ದಾಖಲಿಸಿಕೊಳ್ಳಲಾಗಿದೆ. ಅವರು ಆರಾಮಾಗಿದ್ದು, ಆಸ್ಪತ್ರೆಯಿಂದಲೇ ಕೆಲಸ ಮಾಡಲಿದ್ದಾರೆ ಎಂದು ತಿಳಿಸಲಾಗಿತ್ತು.

    ಆಗಸ್ಟ್ 18ರಂದು ಆಸ್ಪತ್ರೆ ಸೇರಿದ್ದ ಅಮಿತ್ ಶಾ ಅವರು 13 ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದುಕೊಂಡು ಅಗಸ್ಟ್ 31ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಇದಾದ 13 ದಿನಗಳ ಬಳಿಕ ಮತ್ತೆ ಅಮಿತ್ ಶಾ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

  • ಗೃಹ ಸಚಿವ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲು

    ಗೃಹ ಸಚಿವ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲು

    – ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು

    ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದು, ರಾತ್ರಿ 2.30ಕ್ಕೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ ಅವರು ಅಮಿತ್ ಶಾ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಈ ಕುರಿತು ಏಮ್ಸ್ ಆಸ್ಪತ್ರೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಅಮಿತ್ ಶಾ ಅವರಿಗೆ ಕಳೆದ 3-4 ದಿನಗಳಿಂದ ಮೈ-ಕೈ ನೋವು, ಸುಸ್ತು ಕಾಣಿಸಿಕೊಂಡ ಹಿನ್ನೆಲೆ ಪೋಸ್ಟ್ ಕೋವಿಡ್ ಕೇರ್‍ಗೆ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದೆ.

    ಅಮಿತ್ ಶಾ ಅವರ ಕೊರೊನಾ ವರದಿ ನೆಗೆಟಿವ್ ಬಂದಿದ್ದು, ಏಮ್ಸ್ ಆಸ್ಪತ್ರೆಯ ಪೋಸ್ಟ್ ಕೋವಿಡ್ ಕೇರ್‍ಗೆ ದಾಖಲಿಸಿಕೊಳ್ಳಲಾಗಿದೆ. ಅವರು ಆರಾಮಾಗಿದ್ದು, ಆಸ್ಪತ್ರೆಯಿಂದಲೇ ಕೆಲಸ ಮಾಡಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

    ಅಮಿತ್ ಶಾ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ನಂತರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಆಗಸ್ಟ್ 14ರಂದು ಅವರ ಕೊರೊನಾ ವರದಿ ನೆಗೆಟಿವ್ ಬಂದಿತ್ತು. ಬಳಿಕ ಕೆಲ ದಿನಗಳ ಕಾಲ ಹೋಮ್ ಐಸೋಲೇಶನ್‍ನಲ್ಲಿರುವುದಾಗಿ ಅವರು ತಿಳಿಸಿದ್ದರು. ಅದರ ಪ್ರಕಾರ ಮನೆಯಲ್ಲೇ ಐಸೋಲೇಟ್ ಆಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ್ದರು. ಆದರೆ ರಾತ್ರಿ ಇದ್ದಕ್ಕಿದ್ದಂತೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಕೊರೊನಾ ಸೋಂಕು ತಗುಲಿದ ಸಮಯದಲ್ಲಿ ಬೇಗ ಗುಣಮುಖನಾಗಲೆಂದು ನನಗೆ ಹಾಗೂ ನನ್ನ ಕುಟುಂಬಕ್ಕೆ ಹಾರೈಸಿದ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ. ವೈದ್ಯರ ಸಲಹೆಯಂತೆ ಇನ್ನೂ ಕೆಲ ದಿನಗಳ ಕಾಲ ನಾನು ಹೋಮ್ ಐಸೋಲೇಶನ್‍ನಲ್ಲಿರುತ್ತೇನೆ ಎಂದು ಟ್ವೀಟ್‍ನಲ್ಲಿ ತಿಳಿಸಿದ್ದರು.

  • ಆಸ್ಪತ್ರೆಯ ಬಾತ್‍ರೂಮ್ ಕಿಟಕಿಯಲ್ಲಿ ನೇಣುಬಿಗಿದುಕೊಂಡು ರೋಗಿ ಆತ್ಮಹತ್ಯೆ

    ಆಸ್ಪತ್ರೆಯ ಬಾತ್‍ರೂಮ್ ಕಿಟಕಿಯಲ್ಲಿ ನೇಣುಬಿಗಿದುಕೊಂಡು ರೋಗಿ ಆತ್ಮಹತ್ಯೆ

    ನವದೆಹಲಿ: ಇಲ್ಲಿನ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬ ಆತ್ಮಹತ್ಯೆಗೆ ಶರಣಾದ ದುರಂತ ಘಟನೆ ನಡೆದಿದೆ.

    ಆತ್ಮಹತ್ಯೆಗೊಳಗಾದ ರೋಗಿಯನ್ನು ರಾಜ್‍ಮನಿ ಸತ್ತರ್ ಎಂದು ಗುರುತಿಸಲಾಗಿದೆ. ಈತ ಆಸ್ಪತ್ರೆಯ ಬಾತ್ ರೂಮಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

    ಹಲವು ದಿನಗಳಿಂದ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು. ಈ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದು ಈ ನಿರ್ಧಾರ ಕೈಗೊಂಡಿರಬಹುದು ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಸ್ಥಳದಲ್ಲಿ ಯಾವುದೇ ರೀತಿಯ ಡೆತ್ ನೋಟ್ ಪತ್ತೆಯಾಗಿಲ್ಲ.

    ಸಾಂದರ್ಭಿಕ ಚಿತ್ರ

    ಆಸ್ಪತ್ರೆ ಸಿಬ್ಬಂದಿ ಗುರುವಾರ ಬೆಳ್ಳಂಬೆಳಗ್ಗೆ ವ್ಯಕ್ತಿಯೊಬ್ಬ ಬಾತ್‍ರೂಮ್ ಕಿಟಿಕಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಇರುವುದನ್ನು ಗಮನಿಸಿದ್ದಾರೆ. ಕೂಡಲೇ ಅಡಳಿತ ಮಂಡಳಿಗೆ ಮಾಹಿತಿ ನೀಡಿದ್ದಾರೆ. ವ್ಯಕ್ತಿ ಆತ್ಮಹತ್ಯೆಗೆ ತನ್ನದೇ ಬಟ್ಟೆ ಬಳಸಿದ್ದಾನೆ ಎಂದು ವರದಿಯಾಗಿದೆ.

    ಮೃದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣ ಸಂಬಂಧ ತನಿಖೆ ನಡೆಸಲಾಗುತ್ತದೆ.

    ಜುಲೈ 11ರಂದು ಕೂಡ ಇಂತದ್ದೇ ಒಂದು ಘಟನೆ ನಡದಿತ್ತು. ಏಮ್ಸ್ ಆಸ್ಪತ್ರೆಯಲ್ಲೇ ಕಾರ್ಯನಿರ್ವಹಿಸುತ್ತಿದ್ದ ಮನೋ ವೈದ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದರು. ಇವರು ಆಸ್ಪತ್ರೆಯ ಹಾಸ್ಟೆಲ್ ನಲ್ಲಿ ವಾಸವಿದ್ದು, ಅಂದು ಕಟ್ಟಡದ 10ನೇ ಮಹಡಿಯಲ್ಲಿ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತ ವೈದ್ಯರನ್ನು ಡಾ. ಅನುರಗ ಕುಮಾರ್ ಎಂದು ಗುರುತಿಸಲಾಗಿದೆ. ಇವರು ಕೂಡ ಯಾವುದೇ ಡೆತ್‍ನೋಡ್ ಬರೆದಿರಲಿಲ್ಲ. ಸಂಜೆ 5 ಗಂಟೆ ಸುಮಾರಿಗೆ ವೈದ್ಯರು ಈ ನಿರ್ಧಾರ ತೆಗೆದುಕೊಂಡಿದ್ದು, ಅವರ ಮೊಬೈಲ್ 10ನೇ ಮಹಡಿಯಲ್ಲಿ ದೊರೆತಿತ್ತು ಎಂದು ಡಿಸಿಪಿ ಅತುಲ್ ಕುಮಾರ್ ಠಾಕೂರ್ ತಿಳಿಸಿದ್ದರು.

    ಖಿನ್ನತೆಗೊಳಗಾಗಿರುವ ಕುಮಾರ್ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲದೆ ತನ್ನ ಜೀವನದ ಬಗ್ಗೆ ಕುಮಾರ್ ಬ್ಲಾಗ್ ನಲ್ಲಿ ಬರೆದುಕೊಂಡಿದ್ದರು ಎಂದು ಅವರದ್ದೇ ವಿಭಾಗ ವೈದ್ಯರು ತಿಳಿಸಿದ್ದಾರೆ.

  • ಕೊರೊನಾಗೆ ದೆಹಲಿ ಏಮ್ಸ್‌ನ ಹಿರಿಯ ವೈದ್ಯ ಬಲಿ – ಪತ್ನಿಗೂ ಸೋಂಕು

    ಕೊರೊನಾಗೆ ದೆಹಲಿ ಏಮ್ಸ್‌ನ ಹಿರಿಯ ವೈದ್ಯ ಬಲಿ – ಪತ್ನಿಗೂ ಸೋಂಕು

    ನವದೆಹಲಿ: ಕೊರೊನಾ ದೇಶದಲ್ಲಿ ರುದ್ರನರ್ತನ ಮಾಡುತ್ತಿದ್ದು, ದೆಹಲಿ ಏಮ್ಸ್ ಆಸ್ಪತ್ರೆಯ ಹಿರಿಯ ವೈದ್ಯರೊಬ್ಬರು ಸೋಂಕು ತಗಲಿ ಸಾವನ್ನಪ್ಪಿದ್ದಾರೆ.

    ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್)ನ ಹಿರಿಯ ವೈದ್ಯರರಾದ ಡಾ.ಜಿತೇಂದ್ರ ನಾಥ್ ಪಾಂಡೆ (78) ಶನಿವಾರ ಸಾವನ್ನಪ್ಪಿದ್ದಾರೆ. ಇವರು ಏಮ್ಸ್‌ನ ಶ್ವಾಸಕೋಶಶಾಸ್ತ್ರ ವಿಭಾಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ವಿಭಾಗ ಒಂದು ವಾರದಿಂದ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿತ್ತು.

    ಜಿತೇಂದ್ರ ನಾಥ್ ಪಾಂಡೆ ಮತ್ತು ಅವರ ಪತ್ನಿಗೂ ಕಳೆದ ಮಂಗಳವಾರ ಕೊರೊನಾದ ಕೆಲ ಲಕ್ಷಣಗಳು ಕಾಣಿಸಿಕೊಂಡಿದ್ದವು. ನಂತರ ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಪಾಸಿಟಿವ್ ಬಂದಿತ್ತು. ನಂತರ ಅವರನ್ನು ಮನೆಯಲ್ಲೇ ಹೋಂ ಕ್ವಾರಂಟೈನ್ ಮಾಡಲಾಗಿತ್ತು. ಇತ್ತೀಚೆಗೆ ಅವರು ರೋಗದಿಂದ ಗುಣಮುಖರಾಗುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದರು ಎಂದು ಏಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಮಾಹಿತಿ ನೀಡಿದ್ದಾರೆ.

    ಈ ವಿಚಾರವಾಗಿ ಮಾತನಾಡಿರುವ ಗುಲೇರಿಯಾ, ಕೊರೊನಾ ಸೋಂಕು ಪಾಂಡೆಯವರಿಗೆ ಪಾಸಿಟಿವ್ ಬಂದ ನಂತರ ನಾವು ಅವರ ಆರೋಗ್ಯದ ಬಗ್ಗೆ ವಿಚಾರಿಸುತ್ತಲೇ ಇದ್ದೇವು. ಇತ್ತೀಚೆಗಷ್ಟೇ ಪಾಂಡೆಯವರೇ ಸೋಂಕಿನಿಂದ ನಾನು ಗುಣಮುಖನಾಗುತ್ತಿದ್ದೇನೆ. ಬಹುಬೇಗ ಆಸ್ಪತ್ರೆಗೆ ಬರುತ್ತೇನೆ ಎಂದು ಹೇಳಿದ್ದರು. ಆದರೆ ಶನಿವಾರ ರಾತ್ರಿ ಊಟ ಮಾಡಿ ಮಲಗಿದವರು ಅಲ್ಲೇ ಸಾವನ್ನಪ್ಪಿದ್ದಾರೆ. ಅವರು ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಹೇಳಿದ್ದಾರೆ.

    ಪಾಂಡೆ ಸಾವಿಗೆ ಸಂತಾಪ ಸೂಚಿಸಿ ಟ್ವೀಟ್ ಮಾಡಿರುವ ಏಮ್ಸ್‌ನ ಹಿರಿಯ ಮಹಿಳಾ ವೈದ್ಯೆ ಡಾ.ಸಂಗೀತಾ ರೆಡ್ಡಿ, ಈ ರೋಗವು ಅತ್ಯಂತ ಪ್ರಸಿದ್ಧ ವೈದ್ಯನನ್ನು ಬಲಿ ಪಡೆದುಕೊಂಡಿದೆ. ಒಬ್ಬ ಪ್ರಖ್ಯಾತ ಶ್ವಾಸಕೋಶಶಾಸ್ತ್ರ ತಜ್ಞ ವೈದ್ಯ ಕೊರೊನಾಗೆ ಬಲಿಯಾದರು ಎಂದು ಕೇಳಿ ತುಂಬ ದುಖಃವಾಗಿದೆ. ಅವರ ಕುಟುಂಬಕ್ಕೆ ಅವರ ಸಾವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಬರೆದುಕೊಂಡಿದ್ದಾರೆ.

    ಶುಕ್ರವಾರ ಏಮ್ಸ್‌ನ ಆರ್.ಪಿ.ಸಿ ಮೆಸ್‍ನಲ್ಲಿ ಕೆಲಸ ಮಾಡುವ ನೌಕರನೋರ್ವ ಕೊರೊನಾ ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದ. ಇದಾದ ಒಂದೇ ದಿನದಲ್ಲಿ ಪಾಂಡೆಯವರು ಕೂಡ ಸಾವನ್ನಪ್ಪಿದ್ದಾರೆ. ಏಮ್ಸ್‌ನ ಕ್ಯಾಂಟೀನ್ ಅಲ್ಲಿ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಏಮ್ಸ್ ನಿರ್ದೇಶಕರು ಶುಕ್ರವಾರ ಆರ್.ಡಿ.ಎಗೆ ಪತ್ರವನ್ನು ಕೂಡ ಬರೆದಿದ್ದರು.

  • ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು

    ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು

    ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

    87 ವರ್ಷದ ಮನಮೋಹನ್ ಸಿಂಗ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ವೈದ್ಯರು ಚಿಕಿತ್ಸೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.

    ಪಂಜಾಬ್ ವಿಶ್ವವಿದ್ಯಾಲಯ, ಆಕ್ಸ್‌ಫರ್ಡ್ ಮತ್ತು ಕೇಂಬ್ರಿಡ್ಜ್ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣ ಪಡೆದ ಮನಮೋಹನ್ ಸಿಂಗ್ ಪ್ರಧಾನಿಯಾಗುವ ಮೊದಲು ಅರ್ಥಶಾಸ್ತ್ರಜ್ಞರಾಗಿ ಕೆಲಸ ಮಾಡಿದ್ದರು. ಅವರು ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರ ಸರ್ಕಾರದಲ್ಲಿ ವಿತ್ತ ಸಚಿವರಾಗಿದ್ದರು. ಬಳಿಕ ಅಂದ್ರೆ 2004ರಿಂದ 2014ರವರೆಗೆ ಪ್ರಧಾನಿಯಾಗಿದ್ದರು.

  • ವರ್ಷದ ಹಿಂದೆ ಮದುವೆಯಾಗಿದ್ದ ಮಾಜಿ ಏಮ್ಸ್ ವೈದ್ಯೆ ಶವವಾಗಿ ಪತ್ತೆ

    ವರ್ಷದ ಹಿಂದೆ ಮದುವೆಯಾಗಿದ್ದ ಮಾಜಿ ಏಮ್ಸ್ ವೈದ್ಯೆ ಶವವಾಗಿ ಪತ್ತೆ

    – ಮಗಳಿಗೆ ಡ್ರಗ್ಸ್ ಸೇವಿಸುವಂತೆ ಒತ್ತಾಯ
    – ತಂದೆಯಿಂದ ವರದಕ್ಷಿಣೆ ಕಿರುಕುಳ ಆರೋಪ

    ನವದೆಹಲಿ: ಮಾಜಿ ಏಮ್ಸ್ ಆಸ್ಪತ್ರೆಯ ವೈದ್ಯೆ ಶವವಾಗಿ ಪತ್ತೆಯಾದ ಘಟನೆ ಗುರುಗ್ರಾಮದ ಅಪಾರ್ಟ್ ಮೆಂಟ್‍ನಲ್ಲಿ ನಡೆದಿದೆ.

    ಶೋನಮ್ ಮೋತಿಸ್ ಮೃತಪಟ್ಟ ವೈದ್ಯೆ. 2017ರಲ್ಲಿ ಶೋನಮ್ ಏಮ್ಸ್ ಆಸ್ಪತ್ರೆಗೆ ಸೇರಿದ್ದರು. ಶೋನಮ್‍ಗೆ ಆಕೆಯ ಪತಿ ಹಾಗೂ ಆತನ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ನೀಡಿದ್ದಾರೆ. ಅಲ್ಲದೆ ಆಕೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡಿದ್ದಾರೆ. ಪೊಲೀಸರು ಶೋನಮ್ ಹಾಗೂ ಅವರ ಕುಟುಂಬಸ್ಥರ ವಿರುದ್ಧ ದೂರು ದಾಖಲಿಸಿಕೊಂಡಿದ್ದು, ಇದುವರೆಗೂ ಯಾರನ್ನು ಬಂಧಿಸಿಲ್ಲ ಎಂದು ರಾಜಸ್ಥಾನ ಮೂಲದ ಕೋಟಾ ನಿವಾಸಿಯಾಗಿರುವ ಶೋನಮ್ ತಂದೆ ಓಂಕಾರ್ ಲಾಲ್ ಮೋತಿಸ್ ತಿಳಿಸಿದ್ದಾರೆ.

    ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಓಂಕಾರ್ ಲಾಲ್, ನನ್ನ ಅಳಿಯ ಶಿಖರ್ ಮೋರ್ ಮಾದಕ ವ್ಯಸನಿಯಾಗಿದ್ದು, ನನ್ನ ಮಗಳ ಮೇಲೆ ಹಲ್ಲೆ ಮಾಡಿ ಕಿರುಕುಳ ನೀಡುತ್ತಿದ್ದನು. ಕಳೆದ ವರ್ಷ ಮೇ 11ರಂದು ಇಬ್ಬರ ಮದುವೆ ನಡೆದಿತ್ತು. ಮದುವೆಯಾದ ಬಳಿಕ ಶಿಖರ್ ಹಾಗೂ ಆತನ ಮನೆಯವರು ನನ್ನ ಮಗಳಿಗೆ ವರದಕ್ಷಿಣೆ ನೀಡುವಂತೆ ಕಿರುಕುಳ ನೀಡಿದ್ದರು. ಅಲ್ಲದೆ ಶಿಖರ್ ನನ್ನ ಮಗಳಿಗೆ ಡ್ರಗ್ಸ್ ಸೇವಿಸುವಂತೆ ಬಲವಂತ ಮಾಡುತ್ತಿದ್ದನು ಎಂದು ಆರೋಪಿಸಿದ್ದಾರೆ.

    ಒಂದು ಸಂದರ್ಭದಲ್ಲಿ ಶಿಖರ್ ನನ್ನ ಮಗಳ ಕಾಲನ್ನು ಮುರಿದು ಹಾಕಿದ್ದ. ನಿರಂತರ ಕಿರುಕುಳದಿಂದ ನನ್ನ ಮಗಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಅಸ್ವಸ್ಥಳಾಗಿದ್ದಳು ಎಂದು ತಂದೆ ದೂರಿದ್ದಾರೆ.

    ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯ ಪವನ್ ಚೌಧರಿ ಪ್ರತಿಕ್ರಿಯಿಸಿ, ಹಲವಾರು ಮಾತ್ರೆಗಳು ಹಾಗೂ ಇಂಜೆಕ್ಷನ್‍ಗಳು ಶೋಹನ್ ದೇಹದ ಬಳಿ ಹರಡಿಕೊಂಡಿವೆ. ಆಕೆ ಹೆಚ್ಚು ಪ್ರಮಾಣದ ಅರಿವಳಿಕೆಗಳನ್ನು ತೆಗೆದುಕೊಂಡಿರಬಬಹುದು ಎಂದು ಹೇಳಿದ್ದಾರೆ.

    ಸಾವಿನ ಹಿಂದಿನ ನಿಜವಾದ ಕಾರಣ ತಿಳಿಯಲು ವೈದ್ಯರು ಸ್ಯಾಂಪಲ್‍ಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಸೋಮವಾರ ಬೆಳಗ್ಗೆ ಪೋಷಕರು ಶೋನಮ್‍ಗೆ ಕರೆ ಮಾಡಿದ್ದಾರೆ. ಆದರೆ ಆಕೆ ಕರೆ ಸ್ವೀಕರಿಸಲಿಲ್ಲ. ಹೀಗಾಗಿ ಅವರ ತಂದೆ ಭದ್ರತಾ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಈ ವೇಳೆ ಭದ್ರತಾ ಸಿಬ್ಬಂದಿ ನಿಮ್ಮ ಮಗಳು ಬೆಳಗ್ಗೆಯಿಂದ ಮನೆಯಿಂದ ಹೊರ ಬಂದಿಲ್ಲ ಎಂದು ಹೇಳಿದ್ದಾರೆ. ಇದರಿಂದ ಆತಂಕಗೊಂಡ ಪೋಷಕರು ಆಕೆಯ ಅಪಾರ್ಟ್ ಮೆಂಟ್ ಬಳಿ ಬಂದಾಗ ಮೃತದೇಹ ಪತ್ತೆಯಾಗಿದೆ.

    ಮೃತದೇಹ ಪತ್ತೆ ಆಗುತ್ತಿದ್ದಂತೆ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ವಲ್ಪ ಸಮಯದವರೆಗೆ ಶೋನಮ್ ನಮ್ಮ ಜೊತೆ ಕೋಟಾದಲ್ಲಿ ವಾಸಿಸುತ್ತಿದ್ದಳು. ನಂತರ ಆಕೆ ದೆಹಲಿಗೆ ಹೋದಾಗ ಶಿಖರ್ ಆಕೆಯನ್ನು ಸ್ವೀಕರಿಸಲಿಲ್ಲ. ಸೆಪ್ಟೆಂಬರ್ ನಲ್ಲಿ ಶೋನಮ್ ಏಮ್ಸ್ ಆಸ್ಪತ್ರೆಯಲ್ಲಿ ಬಿಟ್ಟು ಗುರುಗ್ರಾಮ ಫೋರ್ಟಿಸ್ ಆಸ್ಪತ್ರೆಯಲ್ಲಿ ಕೆಲಸಕ್ಕೆ ಸೇರಿದ್ದಳು. ಆದರೆ ಅವಳು ಒಂದು ವಾರದಲ್ಲಿಯೇ ಹುದ್ದೆಗೆ ರಾಜೀನಾಮೆ ನೀಡಿ ಗುರುಗ್ರಾಮದಲ್ಲಿಯೇ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು ಎಂದು ತಂದೆ ಓಂಕಾರ್ ಲಾಲ್ ತಿಳಿಸಿದ್ದಾರೆ.

    ಈ ಬಗ್ಗೆ ಗುರುಗ್ರಾಮದ ಪೊಲೀಸರು ಶುಶಾಂತ್ ಲೋಕ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಯಾವುದೇ ಡೆತ್‍ನೋಟ್ ಸಿಕ್ಕಿಲ್ಲ. ಸದ್ಯ ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗೆ ಕಾಯುತ್ತಿದ್ದಾರೆ.

  • ದೆಹಲಿಯ ಏಮ್ಸ್ ಆಸ್ಪತ್ರೆಯ ಕಟ್ಟಡದಲ್ಲಿ ಬೆಂಕಿ- 34 ಅಗ್ನಿಶಾಮಕ ವಾಹನಗಳಿಂದ ಕಾರ್ಯಾಚರಣೆ

    ದೆಹಲಿಯ ಏಮ್ಸ್ ಆಸ್ಪತ್ರೆಯ ಕಟ್ಟಡದಲ್ಲಿ ಬೆಂಕಿ- 34 ಅಗ್ನಿಶಾಮಕ ವಾಹನಗಳಿಂದ ಕಾರ್ಯಾಚರಣೆ

    ನವದೆಹಲಿ: ನಗರದ ಪ್ರಸಿದ್ಧ ಏಮ್ಸ್ ಆಸ್ಪತ್ರೆಯ ಕಟ್ಟಡದ ಎಮರ್ಜೆನ್ಸಿ ವಾರ್ಡ್ ಬಳಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 34 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿವೆ.

    34 ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸಿದರೂ ಸಹ ಬೆಂಕಿ ಹತೋಟಿಗೆ ಬರುತ್ತಿಲ್ಲ. ಅಗ್ನಿಯು ಕ್ರಮೇಣವಾಗಿ ಕಟ್ಟಡವನ್ನು ಆವರಿಸಿಕೊಳ್ಳುತ್ತಿದೆ. ಬೆಂಕಿಯ ವ್ಯಾಪಕತೆ ಹೆಚ್ಚಿದ್ದರೂ ಸಹ ಈವರೆಗೆ ಯಾವುದೇ ಸಾವು ನೋವು ಸಂಭವಿಸಿರುವ ಕುರಿತು ವರದಿಯಾಗಿಲ್ಲ. ಆಸ್ಪತ್ರೆಯ ತುರ್ತು ವಾರ್ಡ್ ಬಳಿಯ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿಯು ಕಟ್ಟಡದಿಂದ ಜನರನ್ನು ಸ್ಥಳಾಂತರಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಈ ಕಟ್ಟಡವು ರೋಗಿಗಳಿಲ್ಲದ ಬ್ಲಾಕ್ ಆಗಿದ್ದು, ವೈದ್ಯರ ಕೊಠಡಿ ಹಾಗೂ ಸಂಶೋಧನಾ ಪ್ರಯೋಗಾಲಯಗಳನ್ನು ಒಳಗೊಂಡಿದೆ. ಕಟ್ಟಡದ ಮೊದಲ ಮಹಡಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಹೊಗೆಯು ಎರಡನೇ ಮಹಡಿ ಸೇರಿದಂತೆ ಕಟ್ಟಡದ ತುಂಬ ಆವರಿಸಿಕೊಂಡಿದೆ. ಆಸ್ಪತ್ರೆಯ ಮೇಲ್ಭಾಗದಿಂದ ದಟ್ಟವಾದ ಹೊಗೆ ಕಂಡು ಬರುತ್ತಿದೆ ಎಂದು ಅಗ್ನಿಶಾಮಕದ ಹಿರಿಯ ಸಿಬ್ಬಂದಿ ತಿಳಿಸಿದ್ದಾರೆ.

    ಸುಮಾರು 5 ಗಂಟೆ ಹೊತ್ತಿಗೆ ಆಸ್ಪತ್ರೆಯ ಪಿಸಿ ಹಾಗೂ ಬೋಧಕ ವಿಭಾಗದ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡಿರುವ ಕುರಿತು ಕರೆ ಬಂತು. ತಕ್ಷಣವೇ ಕಾರ್ಯಪ್ರವೃತ್ತರಾಗಿ ಸ್ಥಳಕ್ಕೆ ದೌಡಾಯಿಸಿದೆವು ಎಂದು ದೆಹಲಿ ಅಗ್ನಿಶಾಮಕ ದಳದ ಅಧಿಕಾರಿಗಳು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

    ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಸಹ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಬೇರೆ ಕಟ್ಟಡದಲ್ಲಿ ದಾಖಲಾಗಿದ್ದಾರೆ. ಜೇಟ್ಲಿ ಅವರು ಆಗಸ್ಟ್ 9ರಿಂದ ಇನ್ಸೆಂಟಿವ್ ಕೇರ್ ಯುನಿಟ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ದಾಖಲಾಗಿರುವ ಕಟ್ಟಡಕ್ಕೂ ಹಾಗೂ ಬೆಂಕಿ ಹೊತ್ತಿಕೊಂಡಿರುವ ಕಟ್ಟಡಕ್ಕೂ ತುಂಬಾ ಅಂತರವಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.

  • ಅಮಿತ್ ಶಾಗೆ ಹಂದಿಜ್ವರ – ಏಮ್ಸ್ ಆಸ್ಪತ್ರೆಗೆ ದಾಖಲು

    ಅಮಿತ್ ಶಾಗೆ ಹಂದಿಜ್ವರ – ಏಮ್ಸ್ ಆಸ್ಪತ್ರೆಗೆ ದಾಖಲು

    ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಎಚ್1ಎನ್1 ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅಮಿತ್ ಶಾ, ನಾನು ಎಚ್1ಎನ್1 ಸೋಂಕಿನಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ. ದೇವರ ದಯೆ ಹಾಗೂ ನಿಮ್ಮ ಅಶೀರ್ವಾದಿಂದ ಬಹುಬೇಗ ಗುಣಮುಖನಾಗುತ್ತೇನೆ ಎಂದು ಬರೆದುಕೊಂಡಿದ್ದಾರೆ.

    ಸದ್ಯ ಅಮಿತ್ ಶಾ ಉಸಿರಾಟ ತೊಂದರೆ ಹಾಗೂ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು, ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ರಾತ್ರಿ ಸುಮಾರು 9 ಗಂಟೆ ವೇಳೆಗೆ ಅಮಿತ್ ಶಾ ಆಸ್ಪತ್ರೆಗೆ ದಾಖಲಾಗಿದ್ದು ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಇದನ್ನು ಓದಿ: ಏನಿದು ಎಚ್1ಎನ್1? ಹಂದಿ ಜ್ವರ ಬಂದ ಮೇಲೆ ಏನು ಮಾಡಬೇಕು?

    ಇವರೆಗೂ ಜೈಪುರದಲ್ಲಿ 17 ಎಚ್1ಎನ್1 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಉಳಿದಂತೆ 13 ಜನರ ರಕ್ತದ ಮಾದರಿಗಳಲ್ಲಿ ಪಾಸಿಟಿವ್ ರಿಪೋರ್ಟ್ ಬಂದಿದೆ. ಅಲ್ಲದೇ ರಾಜ್ಯದಲ್ಲಿ 935 ಶಂಕಿತ ವ್ಯಕ್ತಿಗಳ ರಕ್ತ ಪರೀಕ್ಷೆ ಮಾಡಲಾಗಿದ್ದು, ಕಳೆದ 15 ದಿನಗಳಿಂದ ಎಚ್1ಎನ್1 ಸೋಂಕಿನಿಂದ 39 ಮಂದಿ ರಾಜಸ್ಥಾನದಲ್ಲಿ ಸಾವನ್ನಪ್ಪಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗಣ್ಯಾತಿಗಣ್ಯರಿಂದ ಭಾರತ ರತ್ನ ಪುರಸ್ಕೃತ ಅಟಲ್ ಜಿಗೆ ಅಂತಿಮ ನಮನ

    ಗಣ್ಯಾತಿಗಣ್ಯರಿಂದ ಭಾರತ ರತ್ನ ಪುರಸ್ಕೃತ ಅಟಲ್ ಜಿಗೆ ಅಂತಿಮ ನಮನ

    ನವದೆಹಲಿ: ಮಾಜಿ ಪ್ರಧಾನಿ, ಅಜಾತಶತ್ರು ಮತ್ತು ಭಾರತ ರತ್ನ ಪುರಸ್ಕೃತ ಅಟಲ್ ಬಿಹಾರಿ ವಾಜಪೇಯಿ ಅವರ ಅಗಲಿಕೆಯಿಂದ ದೇಶದಾದ್ಯಂತ ಶೋಕಾಚರಣೆ ಆಚರಿಸಲಾಗುತ್ತಿದ್ದು, ಗಣ್ಯಾತಿ ಗಣ್ಯರು ಅವರ ಅಂತಿ ದರ್ಶನ ಪಡೆದು ನಮನ ಸಲ್ಲಿಸುತ್ತಿದ್ದಾರೆ.

    ದೆಹಲಿಯ 6ಎ ಕೃಷ್ಣಮೆನನ್ ಮಾರ್ಗ್ ನಲ್ಲಿರುವ ವಾಜಪೇಯಿ ನಿವಾಸದಲ್ಲಿಯೇ ಅಂತಿಮ ದರ್ಶನಕ್ಕೆ ಇಡಲಾಗಿದೆ. ಈ ವೇಳೆ ಬಂಧು ಮಿತ್ರರು ಮತ್ತು ಗಣ್ಯರಿಗೆ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು. ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಬಿಜೆಪಿ ಮುಖಂಡ ಹಾಗೂ ವಾಜಪೇಯಿ ಅವರ ಆಪ್ತ ಎಲ್ ಕೆ ಅಡ್ವಾಣಿ, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನ ಮೋಹನ್ ಸಿಂಗ್ ಸೇರಿದಂತೆ ಇತರ ರಾಜ್ಯಗಳ ಮುಖ್ಯಮಂತ್ರಿಗಳು, ರಾಜಕೀಯ ಮುಖಂಡರು ಅಂತಿಮ ದರ್ಶನ ಪಡೆದಿದ್ದಾರೆ.

    ಅಷ್ಟೇ ಅಲ್ಲದೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಬಿಜೆಪಿ ಅಧ್ಯಕ್ಷ ಅಮಿತ್ ಶಾ, ರಾಜನಾಥ್ ಸಿಂಗ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್, ಯೋಗ ಗುರು ಬಾಬಾ ರಾಮ್ ದೇವ್ ಸೇರಿದಂತೆ ಇನ್ನು ಅನೇಕ ಗಣ್ಯರು ಅಟಲ್ ಬಿಹಾರಿ ವಾಜಪೇಯಿಗೆ ಮಾಲಾರ್ಪಣೆ ಸಮರ್ಪಿಸಿ ಅಂತಿಮ ನಮನವನ್ನು ಸಲ್ಲಿಸಿದ್ದಾರೆ.

    ಯುಮುನಾ ನದಿ ದಂಡೆಯಲ್ಲಿರುವ ರಾಷ್ಟ್ರೀಯ ಸ್ಮೃತಿ ಸ್ಥಳದವರೆಗೆ ಅಂತಿಮ ಯಾತ್ರೆ ನಡೆಯಲಿದ್ದು, ಬಳಿಕ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಯಲಿದೆ. ಲಾಲ್ ಬಹದ್ದೂರ್ ಶಾಸ್ತ್ರಿಯವರ ಸ್ಮಾರಕವಿರುವ ವಿಜಯ್‍ಘಾಟ್ ಮತ್ತು ಶಾಂತಿವನದ ಪಕ್ಕದಲ್ಲೇ ಅಟಲ್ ಸ್ಮಾರಕ ನಿರ್ಮಾಣಕ್ಕೆ ನಗರಾಭಿವೃದ್ಧಿ ಇಲಾಖೆ 1.5 ಎಕರೆ ಜಮೀನು ಮೀಸಲಿರಿಸಿದೆ. ಅಜಾತ ಶತ್ರುವಿನ ನಿಧನಕ್ಕೆ ಇಡೀ ದೇಶವೇ ಕಣ್ಣೀರು ಹಾಕುತ್ತಿದೆ.

    ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ(93) ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ದೆಹಲಿಯಲ್ಲಿರುವ ಏಮ್ಸ್ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ವಿಧಿವಶರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವಾಜಪೇಯಿ ಕೆಲ ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಳ್ಳುತ್ತಿರಲಿಲ್ಲ. ಕೆಲ ತಿಂಗಳ ಹಿಂದೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಬಳಿಕ ಡಿಸ್ಚಾರ್ಜ್ ಆಗಿದ್ದರು. ಆದರೆ ನಂತರ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಒಟ್ಟಿನಲ್ಲಿ 9 ವಾರ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಅಟಲ್ ಜಿ ನಿನ್ನೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸ್ವಗೃಹದಲ್ಲಿ ಅಟಲ್‍ಜಿ ಪಾರ್ಥಿವ ಶರೀರ – ಸಂಜೆ 4 ಗಂಟೆಗೆ ಅಂತ್ಯಕ್ರಿಯೆ

    ಸ್ವಗೃಹದಲ್ಲಿ ಅಟಲ್‍ಜಿ ಪಾರ್ಥಿವ ಶರೀರ – ಸಂಜೆ 4 ಗಂಟೆಗೆ ಅಂತ್ಯಕ್ರಿಯೆ

    ನವದೆಹಲಿ: ಅಜಾತಶತ್ರು, ಮಾಜಿ ಪ್ರಧಾನಿ ವಾಜಪೇಯಿ ಅಗಲಿಕೆಯೊಂದಿಗೆ ದೇಶದಲ್ಲಿ ಒಂದು ಯುಗಾಂತ್ಯವಾಗಿದೆ. ಈ ಮಹಾನ್ ನಾಯಕನ ಅಂತಿಮ ದರ್ಶನಕ್ಕೆ ಇದೀಗ ಗಣ್ಯರ ದಂಡೇ ಹರಿದು ಬರ್ತಿದೆ.

    ಬೆಳಗ್ಗೆ 9 ಗಂಟೆವರೆಗೆ ದೆಹಲಿಯ 6ಎ ಕೃಷ್ಣಮೆನನ್ ಮಾರ್ಗ್‍ನಲ್ಲಿರುವ ವಾಜಪೇಯಿ ನಿವಾಸದಲ್ಲಿಯೇ ದರ್ಶನಕ್ಕೆ ಇಡಲಾಗುತ್ತೆ. ಈ ವೇಳೆ ಬಂಧು ಮಿತ್ರರಿಗೆ ಮತ್ತು ಗಣ್ಯರಿಗೆ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ನಂತರ 9 ಗಂಟೆಗೆ ಕೃಷ್ಣಮೆನನ್ ಮಾರ್ಗ್‍ನ ನಿವಾಸದಿಂದ ಪಾರ್ಥಿವ ಶರೀರದ ಮೆರವಣಿಗೆ ಹೊರಡಲಿದ್ದು, 5 ಕಿಲೋಮೀಟರ್ ದೂರದ ಬಿಜೆಪಿ ಮುಖ್ಯ ಕಚೇರಿಗೆ ತಲುಪಲಿದೆ.

    ಅಲ್ಲಿ 2 ಗಂಟೆವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತೆ. ಬಳಿಕ 9 ಕಿಲೋಮೀಟರ್ ದೂರದ ಯುಮುನಾ ನದಿ ದಂಡೆಯಲ್ಲಿರುವ ರಾಷ್ಟ್ರೀಯ ಸ್ಮೃತಿ ಸ್ಥಳದವರೆಗೆ ಅಂತಿಮ ಯಾತ್ರೆ ನಡೆಯಲಿದ್ದು, ಬಳಿಕ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಯಲಿದೆ.

    ಲಾಲ್ ಬಹದ್ದೂರ್ ಶಾಸ್ತ್ರಿಯವರ ಸ್ಮಾರಕವಿರುವ ವಿಜಯ್‍ಘಾಟ್ ಮತ್ತು ಶಾಂತಿವನದ ಪಕ್ಕದಲ್ಲೇ ಅಟಲ್ ಸ್ಮಾರಕ ನಿರ್ಮಾಣಕ್ಕೆ ನಗರಾಭಿವೃದ್ಧಿ ಇಲಾಖೆ 1.5 ಎಕರೆ ಜಮೀನು ಮೀಸಲಿರಿಸಿದೆ. ಅಜಾತ ಶತ್ರುವಿನ ನಿಧನಕ್ಕೆ ಇಡೀ ದೇಶವೇ ಕಣ್ಣೀರು ಹಾಕುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv