Tag: ಏರ್ಬಸ್

  • ದೇಶದಲ್ಲೇ ನಿರ್ಮಾಣವಾಗಲಿದೆ ಸರಕು ಸಾಗಣೆ ವಿಮಾನ – ಟಾಟಾ ಏರ್‌ಕ್ರಾಫ್ಟ್ ಕಾಂಪ್ಲೆಕ್ಸ್‌ ಲೋಕಾರ್ಪಣೆ

    ದೇಶದಲ್ಲೇ ನಿರ್ಮಾಣವಾಗಲಿದೆ ಸರಕು ಸಾಗಣೆ ವಿಮಾನ – ಟಾಟಾ ಏರ್‌ಕ್ರಾಫ್ಟ್ ಕಾಂಪ್ಲೆಕ್ಸ್‌ ಲೋಕಾರ್ಪಣೆ

    – ಸ್ಪೇನ್‌ ಪ್ರಧಾನಿ ಜೊತೆ ವಡೋದರದಲ್ಲಿ ಮೋದಿಯಿಂದ ಉದ್ಘಾಟನೆ
    – 2012 ರಲ್ಲಿ ವಿಮಾನ ನಿರ್ಮಾಣದ ಕನಸು ಕಂಡಿದ್ದ ರತನ್‌ ಟಾಟಾ

    ವಡೋದರ: ಇನ್ನು ಮುಂದೆ ಸೇನಾ ಸರಕು ಸಾಗಣೆಗೆ ನೆರವಾಗುವ ಸ್ಪೇನ್‌ನ ಸಿ-295 (C-295) ಅತ್ಯಾಧುನಿಕ ವಿಮಾನಗಳು ಮೇಕ್‌ ಇನ್‌ ಇಂಡಿಯಾ (Make In India) ಅಡಿ ದೇಶದಲ್ಲೇ ತಯಾರಾಗಲಿದೆ.

    ಸೋಮವಾರ ಗುಜರಾತ್‌ನ ವಡೋದರಾದಲ್ಲಿ (Gujarat’s Vadodara) ಸಿ-295 ಅತ್ಯಾಧುನಿಕ ವಿಮಾನಗಳನ್ನು ತಯಾರಿಸಲಿರುವ ಟಾಟಾ ಏರ್‌ಕ್ರಾಫ್ಟ್ ಕಾಂಪ್ಲೆಕ್ಸ್‌ (Tata-Airbus C295 Complex) ಅನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಸ್ಪೇನ್‌ ಪ್ರಧಾನಿ ಪೆಡ್ರೊ ಸ್ಯಾಂಚೆಜ್ (Pedro Sanchez) ಜಂಟಿಯಾಗಿ ಲೋಕಾರ್ಪಣೆ ಮಾಡಿದ್ದಾರೆ.

    ಈ ವೇಳೆ ಮಾತನಾಡಿದ ಮೋದಿ, ಟಾಟಾ-ಏರ್‌ಬಸ್ ಉತ್ಪಾದನಾ ಸೌಲಭ್ಯವು ಭಾರತ-ಸ್ಪೇನ್ ಸಂಬಂಧಗಳನ್ನು ಮತ್ತು ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದಿ ವರ್ಲ್ಡ್ ವಿಷನ್ ಅನ್ನು ಬಲಪಡಿಸುತ್ತದೆ. ವಡೋದರಾ ಸೌಲಭ್ಯದಲ್ಲಿ ತಯಾರಾದ ವಿಮಾನಗಳನ್ನು ಭವಿಷ್ಯದಲ್ಲಿ ರಫ್ತು ಮಾಡಲಾಗುವುದು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ರತನ್‌ ಟಾಟಾ ಅವರನ್ನು ಸ್ಮರಿಸಿದ ಮೋದಿ, ನಾನು ಟಾಟಾ ಮತ್ತು ಏರ್‌ಬಸ್ ತಂಡಗಳನ್ನು ಅಭಿನಂದಿಸುತ್ತೇನೆ. ಕೆಲ ದಿನಗಳ ಹಿಂದೆ ನಮ್ಮ ದೇಶ ರತನ್‌ ಟಾಟಾ ಅವರನ್ನು ಕಳೆದುಕೊಂಡಿದೆ. ಇಂದು ಟಾಟಾ ನಮ್ಮೊಂದಿಗೆ ಇದ್ದಿದ್ದರೆ ಅವರು ತುಂಬಾ ಸಂತೋಷವಾಗಿರುತ್ತಿದ್ದರು. ಎಲ್ಲಿಯೇ ಇದ್ದರೂ ಅವರ ಆತ್ಮ ಸಂತೋಷವಾಗಿರುತ್ತದೆ. ಈ ಕಾರ್ಖಾನೆಯು ನವ ಭಾರತದ ಕೆಲಸದ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.

    ಲೋಕಾರ್ಪಣೆ ಕಾರ್ಯಕ್ರಮ ನಡೆಯುವ ಮೊದಲು ಪೆಡ್ರೊ ಸ್ಯಾಂಚೆಜ್ ಜೊತೆ ಮೋದಿ ವಡೋದರದಲ್ಲಿ ರೋಡ್‌ ಶೋ ನಡೆಸಿದರು. 18 ವರ್ಷದ ನಂತರ ಸ್ಪೇನ್‌ ಪ್ರಧಾನಿ ಭಾರತಕ್ಕೆ ಬಂದಿರುವುದು ವಿಶೇಷ.

    ವಿಮಾನ ಪ್ರೇಮಿ ಆಗಿದ್ದ ರತನ್‌ ಟಾಟಾ ಅವರು ಈ ಯೋಜನೆ ಕನಸು ಕಂಡಿದ್ದರು. 2012ರಲ್ಲೇ ಟಾಟಾ ಅವರು ಏರ್‌ಬಸ್‌ ಜೊತೆ ಸಂಬಂಧ ಬೆಳೆಸಲು ಮುಂದಾಗಿದ್ದರು. 12 ವರ್ಷದ ಬಳಿಕ ರತನ್‌ ಟಾಟಾ ಅವರ ಕನಸು ಈಗ ನನಸಾಗಿದೆ. ಅಕ್ಟೋಬರ್ 2022 ರಲ್ಲಿ ಈ ಕಾಂಪ್ಲೆಕ್ಸ್‌ ನಿರ್ಮಾಣಕ್ಕೆ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದರು. ಇದನ್ನೂ ಓದಿ: ಸರ್ಕಾರದ ಮುಖ್ಯಸ್ಥರ ಭೇಟಿಯಾದ್ರೆ ಡೀಲ್ ಎಂದರ್ಥವಲ್ಲ: ಮೋದಿ ಭೇಟಿ ಬಗ್ಗೆ ಮೌನ ಮುರಿದ ಸಿಜೆಐ

     

    ಏನಿದು ಒಪ್ಪಂದ?
    2021 ರಲ್ಲಿ ರಕ್ಷಣಾ ಸಚಿವಾಲಯವು C-295 56 ವಿಮಾನಗಳ ಪೂರೈಕೆಗಾಗಿ ಸ್ಪೇನ್‌ನ ಏರ್‌ಬಸ್ ಡಿಫೆನ್ಸ್ ಮತ್ತು ಸ್ಪೇಸ್ ಎಸ್‌ಎ ಜೊತೆ 21,935 ಕೋಟಿ ರೂ. ಒಪ್ಪಂದಕ್ಕೆ ಸಹಿ ಹಾಕಿತ್ತು. ಇದರಲ್ಲಿ 16 ವಿಮಾನಗಳು ಸ್ಪೇನ್‌ನಿಂದ ಬರಲಿದ್ದು, ಉಳಿದ 40 ಭಾರತದಲ್ಲಿ ಉತ್ಪಾದನೆಯಾಗಬೇಕು ಎಂದು ಒಪ್ಪಂದದಲ್ಲಿ ಷರತ್ತು ವಿಧಿಸಲಾಗಿತ್ತು.

    ಮೊದಲ ವಿಮಾನ 2026ರ ಸೆಪ್ಟೆಂಬರ್‌ನಲ್ಲಿ ನಿರ್ಮಾಣ ಆಗಿ ವಾಯುಪಡೆ ಸೇರ್ಪಡೆಯಾಗಲಿದ್ದು ಉಳಿದ 39 ವಿಮಾನಗಳು 2031ರೊಳಗೆ ನಿರ್ಮಾಣ ಆಗಲಿವೆ. ಈಗಾಗಲೇ ಬರಬೇಕಾಗಿದ್ದ 16 ವಿಮಾನಗಳ ಪೈಕಿ 6 ವಿಮಾನಗಳು ಸ್ಪೇನ್‌ನಿಂದ ಬಂದಿವೆ. 2025ರ ಆಗಸ್ಟ್ ಒಳಗೆ ಉಳಿದ 10 ವಿಮಾನ ಭಾರತಕ್ಕೆ ಆಗಮಿಸಲಿವೆ.

    ಹಲವು ವರ್ಷಗಳಿಂದ ಸೇವೆಯಲ್ಲಿರುವ ಹಾಲಿ Avro-748 ವಿಮಾನಗಳ ಬದಲು ಮುಂದಿನ ದಿನಗಳಲ್ಲಿ C-295 ವಿಮಾನಗಳನ್ನು ಬಳಸಲಾಗುತ್ತದೆ. ಸಮಕಾಲೀನ ತಂತ್ರಜ್ಞಾನದೊಂದಿಗೆ ಪ್ರಸ್ತುತ ಭಾರವಾದ ವಿಮಾನಗಳು ತೆರಳಲು ಸಾಧ್ಯವಾಗದ ಸ್ಥಳಗಳಿಗೆ ಲಾಜಿಸ್ಟಿಕ್ ಕಾರ್ಯಾಚರಣೆಗಳಿಗೆ ಈ ವಿಮಾನವನ್ನು ಬಳಸಬಹುದಾಗಿದೆ.

     

    ವಿಮಾನ ನಿರಂತರ 11 ಗಂಟೆಗಳವರೆಗೆ ಹಾರಾಡುವ ಸಾಮರ್ಥ್ಯ ಹೊಂದಿದ್ದು ಎಲ್ಲಾ ಹವಾಮಾನ ಪರಿಸ್ಥಿತಿಗಳಲ್ಲಿ ಬಹು-ಪಾತ್ರ ಕಾರ್ಯಾಚರಣೆಗಳನ್ನು ಕೈಗೊಳ್ಳಬಹುದು.

    ಒಪ್ಪಂದದ ಅಡಿಯಲ್ಲಿ ಎಲ್ಲಾ 56 ವಿಮಾನಗಳಿಗೆ ಭಾರತೀಯ ಸಾರ್ವಜನಿಕ ವಲಯದ ರಕ್ಷಣಾ ಉದ್ಯಮಗಳಾದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ಭಾರತ್ ಡೈನಾಮಿಕ್ಸ್ ಲಿಮಿಟೆಡ್‌ನಿಂದ ತಯಾರಿಸಲ್ಪಟ್ಟ ಸ್ಥಳೀಯ ಎಲೆಕ್ಟ್ರಾನಿಕ್ ವಾರ್‌ಫೇರ್ ಸೂಟ್‌ ಅನ್ನು ಸಹ ಅಳವಡಿಸಲಾಗಿದೆ.

     

  • ಏರ್‌ಬಸ್‌ ಜೊತೆ ಬರೋಬ್ಬರಿ 500 ವಿಮಾನ ಖರೀದಿಗೆ ಡೀಲ್‌ – ವಿಶ್ವದಾಖಲೆ ಬರೆದ ಇಂಡಿಗೋ

    ಏರ್‌ಬಸ್‌ ಜೊತೆ ಬರೋಬ್ಬರಿ 500 ವಿಮಾನ ಖರೀದಿಗೆ ಡೀಲ್‌ – ವಿಶ್ವದಾಖಲೆ ಬರೆದ ಇಂಡಿಗೋ

    ಪ್ಯಾರಿಸ್‌: ಭಾರತದ ಕಂಪನಿ ನಿರ್ಮಿಸಿದ ವಿಶ್ವದಾಖಲೆಯನ್ನು ಭಾರತದ (India) ಕಂಪನಿ ಮುರಿಯವುದು ಬಹಳ ಅಪರೂಪ. ಈಗ ಇಂಡಿಗೋ ಕಂಪನಿ ಏರ್‌ ಇಂಡಿಯಾ (Air India) ನಿರ್ಮಿಸಿದ ದಾಖಲೆಯನ್ನು ಮುರಿಯುವ ಮೂಲಕ ಇತಿಹಾಸ ಸೃಷ್ಟಿಸಿದೆ.

    ಹೌದು. ಬಜೆಟ್‌ ಕ್ಯಾರಿಯರ್‌ ವಿಮಾನ ಕಂಪನಿ ಇಂಡಿಗೋ ಫ್ರಾನ್ಸಿನ ಏರ್‌ಬಸ್‌ (Airbus) ಕಂಪನಿಯ ಜೊತೆ 500 A320 ಮಾದರಿಯ ವಿಮಾನ ಖರೀದಿಗೆ ಒಪ್ಪಂದ ಮಾಡಿಕೊಂಡಿದೆ. ಈ ಮೂಲಕ ಅತಿ ಹೆಚ್ಚು ವಿಮಾನ ಖರೀದಿ ಒಪ್ಪಂದ ಮತ್ತು ಒಂದೇ ಕಂಪನಿಯ ಜೊತೆ ಅತಿ ಹೆಚ್ಚು ವಿಮಾನ ಖರೀದಿ ನಡೆಸುತ್ತಿರುವ ವಿಶ್ವದ ಮೊದಲ ಕಂಪನಿ ಎಂಬ ಹೆಗ್ಗಳಿಕೆಗೆ ಇಂಡಿಗೋ ಪಾತ್ರವಾಗಿದೆ.

    ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಏರ್‌ಶೋದ (Paris Air Show) ಮೊದಲ ದಿನವೇ ಏರ್‌ಬಸ್‌ ಕಂಪನಿ ಇಂಡಿಗೋ ಜೊತೆಗಿನ ವ್ಯವಹಾರದ ಡೀಲ್‌ ಘೋಷಣೆ ಮಾಡಿದೆ. ಇದನ್ನೂ ಓದಿ: ಅಲ್-ಹಕೀಮ್ ಮಸೀದಿಗೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ

    ಹಲವು ಸುತ್ತಿನ ಮಾತುಕತೆಯ ಬಳಿಕ ಎರಡೂ ಕಂಪನಿಗಳು ಒಪ್ಪಂದಕ್ಕೆ ಸಹಿ ಹಾಕಿವೆ. ಖರೀದಿ ಒಪ್ಪಂದದ ಮೊತ್ತ ಎಷ್ಟು ಎನ್ನುವುದು ಅಧಿಕೃತವಾಗಿ ತಿಳಿಸದೇ ಇದ್ದರೂ 55 ಶತಕೋಟಿ ಡಾಲರ್‌ ಡೀಲ್‌ ಎಂದು ವರದಿಯಾಗಿದೆ.

    ಈ ಐತಿಹಾಸಿಕ ಒಪ್ಪಂದಕ್ಕೆ ಇಂಡಿಗೋ ವ್ಯವಸ್ಥಾಪಕ ನಿರ್ದೇಶಕ ರಾಹುಲ್‌ ಭಾಟೀಯಾ ಮತ್ತು ಏರ್‌ಬಸ್‌ ಸಿಇಒ ಗುಯಿಲೌಮ್ ಫೌರಿ ಸಹಿ ಹಾಕಿದರು. ಇದನ್ನೂ ಓದಿ: ಏರ್‌ಬಸ್‌-ಬೋಯಿಂಗ್‌ ಜೊತೆ ಮೆಗಾ ಡೀಲ್‌: ವಿಶ್ವದಾಖಲೆ ನಿರ್ಮಿಸಿದ ಏರ್‌ ಇಂಡಿಯಾ

    2030 ಮತ್ತು 2035ರ ಸಮಯದಲ್ಲಿ ವಿಮಾನವನ್ನು ಏರ್‌ಬಸ್‌ ಕಂಪನಿ ಇಂಡಿಗೋಗೆ ವಿತರಣೆ ಮಾಡಲಿದೆ. ಇದು ಕೇವಲ ಪ್ರಾರಂಭ ಅಷ್ಟೇ. ಭಾರತ ಬೆಳವಣಿಗೆ ಮತ್ತು ಭಾರತೀಯ ವಾಯುಯಾನ ಮಾರುಕಟ್ಟೆಯ ಬೆಳವಣಿಗೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶವನ್ನು ನಮಗೆ ನೀಡಲು ಇದು ಸರಿಯಾದ ಸಮಯ ಎಂದು ಏರ್‌ಬಸ್‌ ತಿಳಿಸಿದೆ.

    2006 ರಿಂದ ಇಲ್ಲಿಯವರೆಗೆ ಏರ್‌ಬಸ್‌ ಕಂಪನಿ ಜೊತೆ ಒಟ್ಟು 1,330 ವಿಮಾನ ಖರೀದಿಗೆ ಇಂಡಿಗೋ ಆರ್ಡರ್‌ ನೀಡಿದೆ. ಈ ದಶಕದ ಅಂತ್ಯಕ್ಕೆ ವಿಮಾನಗಳು ವಿತರಣೆಯಾಗುವ ಸಾಧ್ಯತೆಯಿದೆ.

    ಈ ಫೆಬ್ರವರಿಯಲ್ಲಿ ಟಾಟಾ ಸನ್ಸ್ (Tata Sons) ಒಡೆತನದ ಏರ್ ಇಂಡಿಯಾ 470 ವಿಮಾನಗಳನ್ನು ಆರ್ಡರ್ ಮಾಡುವ ಮೂಲಕ ವಾಯುಯಾನ ಕ್ಷೇತ್ರದಲ್ಲಿ ದಾಖಲೆ ಬರೆದಿತ್ತು. ಇದು ಆಧುನಿಕ ವಿಮಾನಯಾನ ಕ್ಷೇತ್ರದಲ್ಲಿ ಏರ್‌ಲೈನ್ಸ್ ಕಂಪನಿಯೊಂದು ಮಾಡಿದ ಅತಿದೊಡ್ಡ ಆರ್ಡರ್‌ಗಳಲ್ಲಿ ಒಂದು ಎಂದು ಬಣ್ಣಿಸಲಾಗಿತ್ತು.

    ಫ್ರಾನ್ಸಿನ ಏರ್‌ಬಸ್‌ನಿಂದ 250 ಮತ್ತು ಅಮೆರಿಕದ ಬೋಯಿಂಗ್‌ನಿಂದ (Boeing) 220 ವಿಮಾನಗಳನ್ನು ಏರ್‌ ಇಂಡಿಯಾದಿಂದ ಖರೀದಿಸಲಿದೆ. ಒಟ್ಟು 420 ಸಣ್ಣ, ಮಧ್ಯಮ ಗಾತ್ರ ಮತ್ತು 40 ದೊಡ್ಡ ಗಾತ್ರದ ವಿಮಾನಗಳನ್ನು ಖರೀದಿಸಲು ಏರ್‌ ಇಂಡಿಯಾ (Air India) ಮುಂದಾಗಿದ್ದು, ಮುಂದಿನ ಏಳರಿಂದ ಎಂಟು ವರ್ಷಗಳಲ್ಲಿ ವಿಮಾನಗಳು ಏರ್‌ ಇಂಡಿಯಾವನ್ನು ಸೇರಲಿದೆ.

  • 500 ವಿಮಾನ ಖರೀದಿಗೆ ಆರ್ಡರ್‌ – ವಿಶ್ವ ದಾಖಲೆ ಬರೆದ ಏರ್‌ ಇಂಡಿಯಾ

    500 ವಿಮಾನ ಖರೀದಿಗೆ ಆರ್ಡರ್‌ – ವಿಶ್ವ ದಾಖಲೆ ಬರೆದ ಏರ್‌ ಇಂಡಿಯಾ

    ಮುಂಬೈ: ಟಾಟಾ ಸನ್ಸ್ (Tata Sons) ಒಡೆತನದ ಏರ್ ಇಂಡಿಯಾ 500 ವಿಮಾನಗಳನ್ನು ಆರ್ಡರ್ ಮಾಡುವ ಮೂಲಕ ವಾಯುಯಾನ ಕ್ಷೇತ್ರದಲ್ಲಿ ದಾಖಲೆ ಬರೆದಿದೆ. ಇದು ಆಧುನಿಕ ವಿಮಾನಯಾನ ಕ್ಷೇತ್ರದಲ್ಲಿ ಏರ್‌ಲೈನ್ಸ್ ಕಂಪನಿಯೊಂದು ಮಾಡಿದ ಅತಿದೊಡ್ಡ ಆರ್ಡರ್‌ಗಳಲ್ಲಿ ಒಂದಾಗಿದೆ.

    430 ಸಣ್ಣ ಮತ್ತು 30 ದೊಡ್ಡ ಗಾತ್ರದ ವಿಮಾನಗಳನ್ನು ಖರೀದಿಸಲು ಏರ್‌ ಇಂಡಿಯಾ (Air India) ಮುಂದಾಗಿದ್ದು, ಮುಂದಿನ ಏಳರಿಂದ ಎಂಟು ವರ್ಷಗಳಲ್ಲಿ ವಿಮಾನಗಳು ಏರ್‌ ಇಂಡಿಯಾವನ್ನು ಸೇರಲಿದೆ.

    ಈ ಹಿಂದೆ ಅಮೆರಿಕನ್ ಏರ್‌ಲೈನ್ಸ್‌ (American Airlines) 460 ವಿಮಾನಗಳನ್ನು ಆರ್ಡರ್‌ ಮಾಡುವ ಮೂಲಕ ದಾಖಲೆ ಮಾಡಿತ್ತು. 2019 ರಲ್ಲಿ ಇಂಡಿಗೋ (Indigo) 300 ವಿಮಾನ ಖರೀದಿಗೆ ಆರ್ಡರ್‌ ಮಾಡಿತ್ತು.

    ಯಾವ ವಿಮಾನಗಳು?
    ಯುರೋಪ್‌ ಮೂಲದ ಏರ್‌ಬಸ್ (Airbus) ಕಂಪನಿ ಜೊತೆ A320 ನಿಯೋ 240 ವಿಮಾನಗಳು ಮತ್ತು A350 40 ವಿಮಾನ ಖರೀದಿಗೆ ಆರ್ಡರ್‌ ನೀಡಿದೆ. ಅಮೆರಿಕದ ಬೋಯಿಂಗ್ (Boeing) ಬಳಿ 737 ಮ್ಯಾಕ್ಸ್ 190 ವಿಮಾನಗಳು, 787 ಡ್ರೀಮ್‌ಲೈನರ್‌ 20 ಮತ್ತು 777x 10 ವಿಮಾನಗಳನ್ನು ಖರೀದಿ ಮಾಡಲಿದೆ. ಇದನ್ನೂ ಓದಿ: ಏರ್‌ಬಸ್‌ ಜೊತೆಗೂಡಿ ವಾಯುಸೇನೆಗೆ ವಿಮಾನ ತಯಾರಿಸಲಿದೆ ಟಾಟಾ ಸಮೂಹ

    ಮುಂದಿನ ವಾರ ಅಧಿಕೃತ ಪ್ರಕಟಣೆ ಘೋಷಣೆಯಾಗುವ ಸಾಧ್ಯತೆ ಇದೆ. 150 ಶತಕೋಟಿ ಡಾಲರ್‌ ಮೌಲ್ಯದ ಖರೀದಿ ಒಪ್ಪಂದ ನಡೆದಿದ್ದರೂ ಏರ್‌ ಇಂಡಿಯಾ ಹಲವು ರಿಯಾಯಿತಿಗಳನ್ನು ಪಡೆಯಲಿದೆ ಎಂದು ವರದಿಯಾಗಿದೆ.

    ಇಂದು ಏರ್‌ಬಸ್ ಮತ್ತು ಏರ್ ಇಂಡಿಯಾ ಅಧಿಕಾರಿಗಳ ನಡುವೆ ನಡೆದ ಸಭೆಯಲ್ಲಿ ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಖರನ್ ಮತ್ತು ಏರ್‌ಬಸ್ ಮುಖ್ಯ ವಾಣಿಜ್ಯ ಅಧಿಕಾರಿ ಕ್ರಿಶ್ಚಿಯನ್ ಸ್ಕೆರೆರ್ ಭಾಗಿಯಾಗಿ ಆರ್ಡರ್‌ ಅಂತಿಮಗೊಳಿಸಿದ್ದಾರೆ. ಜನವರಿ 29 ರಂದು ಟಾಟಾ ಸನ್ಸ್‌ನ ಪ್ರಧಾನ ಕಛೇರಿಯಾದ ಬಾಂಬೆ ಹೌಸ್‌ನಲ್ಲಿ ಬೋಯಿಂಗ್‌ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು.

    ಕೋವಿಡ್‌ ಬಳಿಕ ವಿಮಾನಯಾನ ಕ್ಷೇತ್ರ ನಿರೀಕ್ಷೆಗಿಂತಲೂ ವೇಗವಾಗಿ ಬೆಳೆಯುತ್ತಿದೆ. ಈ ಕಾರಣಕ್ಕೆ ಏರ್‌ ಇಂಡಿಯಾ ಮೊದಲೇ ಆರ್ಡರ್‌ ಬುಕ್ಕಿಂಗ್‌ ಮಾಡಿದೆ. ಮುಂದಿನ ಐದು ವರ್ಷಗಳಲ್ಲಿ ದೇಶೀಯ ಮತ್ತು ಅಂತರರಾಷ್ಟ್ರೀಯ ಮಾರ್ಗಗಳಲ್ಲಿ ತನ್ನ ಮಾರುಕಟ್ಟೆ ಪಾಲನ್ನು 30% ಗೆ ಹೆಚ್ಚಿಸುವ ಗುರಿಯನ್ನು ಏರ್‌ ಇಂಡಿಯಾ ಹಾಕಿಕೊಂಡಿದೆ. 2024ರ ಅಂತ್ಯದ ವೇಳೆಗೆ ಏರ್ ಇಂಡಿಯಾಗೆ 50 ಹೊಸ ವಿಮಾನಗಳು ಸೇರ್ಪಡೆಯಾಗುವ ಸಾಧ್ಯತೆಯಿದೆ.

    ಇಂಡಿಗೋಗೆ ಸ್ಪರ್ಧೆ ನೀಡಲು 5-6 ಗಂಟೆಯ ಒಳಗಡೆ ದೇಶದ ವಿವಿಧ ಸ್ಥಳಗಳನ್ನು ತಲುಪಲು ಸಣ್ಣ ವಿಮಾನಗಳನ್ನು ಖರೀದಿಸಲು ಏರ್‌ ಇಂಡಿಯಾ ಮುಂದಾಗಿದೆ. ಅಮೆರಿಕ, ಯುರೋಪ್ ದೇಶಗಳಿಗೆ ಸೇವೆ ನೀಡಲು ದೊಡ್ಡ ಗಾತ್ರ ವಿಮಾನಗಳನ್ನು ಖರೀದಿಸುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಏರ್‌ಬಸ್‌ ಜೊತೆಗೂಡಿ ವಾಯುಸೇನೆಗೆ ವಿಮಾನ ತಯಾರಿಸಲಿದೆ ಟಾಟಾ ಸಮೂಹ

    ಏರ್‌ಬಸ್‌ ಜೊತೆಗೂಡಿ ವಾಯುಸೇನೆಗೆ ವಿಮಾನ ತಯಾರಿಸಲಿದೆ ಟಾಟಾ ಸಮೂಹ

    – ವಡೋದರಾದಲ್ಲಿ ನಿರ್ಮಾಣ, ಅ.30ಕ್ಕೆ ಮೋದಿ ಶಂಕುಸ್ಥಾಪನೆ
    – ಯುರೋಪ್‌ ಹೊರಗಡೆ ತೆರೆಯುತ್ತಿರುವ ಮೊದಲ ಏರ್‌ಬಸ್‌ ಘಟಕ

    ನವದೆಹಲಿ: ಏರ್‌ ಇಂಡಿಯಾ ಖರೀದಿಸಿದ್ದ ಟಾಟಾ ಸಮೂಹ(Tata Group) ಈಗ  ವಿಮಾನ ತಯಾರಿಸಲು ಮುಂದಾಗಿದೆ.

    ಹೌದು. ಜಗತ್ತಿನ ದೊಡ್ಡ ವಿಮಾನ ತಯಾರಿಕಾ ಕಂಪನಿಗಳ ಪೈಕಿ ಒಂದಾಗಿರುವ ಯುರೋಪ್‌ ಮೂಲದ ಏರ್‌ಬಸ್‌(Airbus) ಜೊತೆಗೂಡಿ ಮೇಕ್‌ ಇನ್‌ ಇಂಡಿಯಾ(Make In India) ಅಡಿ ಟಾಟಾ ಸಮೂಹ ವಾಯುಸೇನೆಗೆ C-295MW ವಿಮಾನವನ್ನು ನಿರ್ಮಾಣ ಮಾಡಲಿದೆ.

    ಗುಜರಾತಿನ ವಡೋದರಾದಲ್ಲಿ(Vadodara) ನಿರ್ಮಾಣ ಘಟಕ ಆರಂಭವಾಗಲಿದ್ದು ಪ್ರಧಾನಿ ನರೇಂದ್ರ ಮೋದಿ(Narenndra Modi) ಅ.30 ರಂದು ಶಂಕುಸ್ಥಾಪನೆ ನಡೆಸಲಿದ್ದಾರೆ. ಯೋಜನೆಯ ಒಟ್ಟು ವೆಚ್ಚ 21,935 ಕೋಟಿ ರೂ. ಆಗಿದ್ದು ವಿಮಾನವನ್ನು ನಾಗರಿಕ ಉದ್ದೇಶಗಳಿಗಾಗಿಯೂ ಬಳಸಬಹುದಾಗಿದೆ.

    ಯುರೋಪ್‌ ಹೊರಗಡೆ ಏರ್‌ಬಸ್‌ ಕಂಪನಿ ತನ್ನ ತಯಾರಿಕಾ ಘಟಕ ತೆರೆಯುತ್ತಿರುವುದು ಇದೇ ಮೊದಲಾಗಿರುವ ಕಾರಣ ಈ ಯೋಜನೆ ಭಾರೀ ಮಹತ್ವ ಪಡೆದಿದೆ. ಇದನ್ನೂ ಓದಿ: ಸೆಮಿಕಂಡಕ್ಟರ್‌ ಘಟಕ ಸ್ಥಾಪನೆಗೆ ಕರ್ನಾಟಕವನ್ನು ಬಿಟ್ಟು ಗುಜರಾತ್‌ ಆಯ್ಕೆ ಮಾಡಿದ್ದು ಯಾಕೆ – ಪ್ರಶ್ನೆಗೆ ಉತ್ತರ ಕೊಟ್ಟ ವೇದಾಂತ ಕಂಪನಿ

    ಏನಿದು ಯೋಜನೆ?
    ರಕ್ಷಣೆಯಲ್ಲಿ ಸ್ವಾವಲಂಬಿಯಾಗಲು ಭಾರತ ಮುಂದಾಗುತ್ತಿದ್ದು ಈ ನಿಟ್ಟಿನಲ್ಲಿ ಮೇಕ್‌ ಇನ್‌ ಇಂಡಿಯಾದ ಅಡಿ ಹಲವು ಯೋಜನೆಗಳನ್ನು ಕೈಗೆತ್ತಿಕೊಂಡಿದೆ. 2021ರ ಸೆಪ್ಟೆಂಬರ್‌ನಲ್ಲಿ ರಕ್ಷಣೆಗೆ ಸಂಬಂಧಿಸಿದ ಉಪಸಮಿತಿ ಏರ್‌ಬಸ್‌ ಕಂಪನಿಯ ಜೊತೆ 56 C-295MW ಸರಕು ವಿಮಾನ ಖರೀದಿ ಸಂಬಂಧ ಒಪ್ಪಂದ ನಡೆಸಿತ್ತು. ಏರ್‌ಬಸ್‌ ಕಂಪನಿ ಮೊದಲು ಹಾರಾಟಕ್ಕೆ ಯೋಗ್ಯವಾಗಿರುವ 16 ವಿಮಾನಗಳನ್ನು ನೀಡಬೇಕು. ಬಳಿಕ 40 ವಿಮಾನಗಳನ್ನು ಭಾರತದಲ್ಲೇ ತಯಾರಿಸಿ ವಾಯುಸೇನೆಗೆ ಹಸ್ತಾಂತರಿಸಬೇಕು ಎಂದು ಒಪ್ಪಂದದಲ್ಲಿ ತಿಳಿಸಲಾಗಿತ್ತು.

    ವಾಯುಸೇನೆಗೆ 56 ವಿಮಾನಗಳ ವಿತರಣೆಯನ್ನು ಪೂರ್ಣಗೊಳಿಸಿದ ನಂತರ, ಏರ್‌ಬಸ್ ಡಿಫೆನ್ಸ್ ಭಾರತದಲ್ಲಿ ತಯಾರಿಸಿದ ವಿಮಾನಗಳನ್ನು ಸಿವಿಲ್ ಆಪರೇಟರ್‌ಗಳಿಗೆ ಮಾರಾಟ ಮಾಡಬಹುದು. ಅಷ್ಟೇ ಅಲ್ಲದೇ ಭಾರತ ಸರ್ಕಾರ ಅನುಮತಿ ನೀಡಿದ ದೇಶಗಳಿಗೆ ರಫ್ತು ಮಾಡಬಹುದಾಗಿದೆ

    C-295MW ಸಮಕಾಲೀನ ತಂತ್ರಜ್ಞಾನದೊಂದಿಗೆ 5-10 ಟನ್ ಸಾಮರ್ಥ್ಯದ ಸಾರಿಗೆ ವಿಮಾನವಾಗಿದ್ದು ಅದು ವಾಯುಸೇನೆಯ ಹಳೆಯ ಅವ್ರೋ ವಿಮಾನವನ್ನು ಬದಲಾಯಿಸುತ್ತದೆ. ಎಲ್ಲಾ 56 ವಿಮಾನಗಳಿಗೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ಭಾರತ್ ಡೈನಾಮಿಕ್ಸ್ ಲಿಮಿಟೆಡ್‌ ಅಭಿವೃದ್ಧಿ ಪಡಿಸಿರುವ ಸ್ಥಳೀಯ ಎಲೆಕ್ಟ್ರಾನಿಕ್ ವಾರ್‌ಫೇರ್ ಸೂಟ್‌ಗಳನ್ನು ಅಳವಡಿಸಲಾಗುತ್ತದೆ.

    ಮುಂದಿನ ದಿನಗಳಲ್ಲಿ ಭಾರತದಲ್ಲಿ ವಾಯು ಸಾರಿಗೆ ದೊಡ್ಡ ಉದ್ಯಮವಾಗಿ ಬೆಳೆಯುವುದರಿಂದ ಆಮದು ಅವಲಂಬನೆಯನ್ನು ಕಡಿಮೆ ಮಾಡಲಿದೆ. ಹೆಚಿನ ರಫ್ತು ಮಾಡುವುದರ ಜೊತೆಗೆ ದೇಶೀಯ ವಿಮಾನಯಾನ ತಯಾರಿಕೆಯನ್ನು ವೃದ್ಧಿಸಲಿದೆ.

    ಭಾರತದಲ್ಲಿ ಮಿಲಿಟರಿ ವಿಮಾನಗಳನ್ನು ಎಚ್‌ಎಎಲ್‌ ಕಂಪನಿ ತಯಾರಿಸುತ್ತಿದೆ. ಆದರೆ ವಿದೇಶಿ ಕಂಪನಿ ಮಿಲಿಟರಿ ವಿಮಾನಗಳನ್ನು ದೇಶದಲ್ಲಿ ತಯಾರಿಸಲು ಮುಂದಾಗುತ್ತಿರುವುದು ಇದೇ ಮೊದಲು.

    Live Tv
    [brid partner=56869869 player=32851 video=960834 autoplay=true]

  • 100 ಕೋಟಿಯ ಹೆಲಿಕಾಪ್ಟರ್ ಖರೀದಿಸಿದ ಮೊದಲ ಭಾರತೀಯ: ವಿಶೇಷತೆ ಏನು?

    100 ಕೋಟಿಯ ಹೆಲಿಕಾಪ್ಟರ್ ಖರೀದಿಸಿದ ಮೊದಲ ಭಾರತೀಯ: ವಿಶೇಷತೆ ಏನು?

    ತಿರುವನಂತಪುರಂ: ಇಲ್ಲಿನ ಆರ್ ಪಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಬಿ.ರವಿ ಪಿಳೈ ಅವರು 100 ಕೋಟಿ ರೂ. ಮೌಲ್ಯದ ಏರ್ ಬಸ್ಸ್ ಹೆಲಿಕಾಪ್ಟರ್‌ನ ಹೆಮ್ಮೆಯ ಮಾಲೀಕರಾಗಿದ್ದಾರೆ. ಈ ಮೂಲಕ ದೇಶದಲ್ಲೇ ಅತ್ಯಂತ ಐಷಾರಾಮಿ ಚಾಪರ್ ಅನ್ನು ಹೊಂದಿದ ಮೊದಲ ಭಾರತೀಯ ಎಂಬ ಹೆಗ್ಗಳಿಗೆ ಪಾತ್ರರಾಗಿದ್ದಾರೆ.

    ಪ್ರಸ್ತುತ 1,500 ಎಚ್145 ಹೆಲಿಕಾಪ್ಟರ್ ಪ್ರಪಂಚದಾದ್ಯಂತ ಹಾರುತ್ತಿವೆ. ಇದೀಗ ಈ ಹೆಲಿಕಾಪ್ಟರ್‌ನ ಸೇರ್ಪಡೆಯು ಪ್ರವಾಸೋದ್ಯಮ ಚಟುವಟಿಕೆಗಳಿಗೆ ಉತ್ತೇಜನ ನೀಡಲಿದೆ ಎನ್ನಲಾಗಿದೆ. ಇದನ್ನೂ ಓದಿ: ಡಿಎಂಕೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ತಮಿಳುನಾಡಿಗೆ ಪಾದಯತ್ರೆ ಯಾವಾಗ: ಡಿಕೆಶಿಗೆ ಬಿಜೆಪಿ ಪ್ರಶ್ನೆ

    Helicopter

     

    68 ವರ್ಷದ ಬಿಲಿಯನೇರ್ ಪ್ರಸ್ತುತ 2.5 ಶತಕೋಟಿ ಡಾಲರ್ (19,10,18,750.00 ರೂ.) ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಇವರ ವಿವಿಧ ಕಂಪನಿಗಳಲ್ಲಿ ಸುಮಾರು 70 ಸಾವಿರ ಉದ್ಯೋಗಿಗಳು ಕೆಲಸ ನಿರ್ವಹಿಸುತ್ತಿದ್ದಾರೆ. ಅಲ್ಲದೆ, ಅವರು ರಾಜ್ಯದಾದ್ಯಂತ ಐಷಾರಾಮಿ ಹೋಟೆಲ್‍ಗಳನ್ನು ಹೊಂದಿದ್ದು, ತಮ್ಮ ಅಥಿತಿಗಳನ್ನು ಕರೆದೊಯ್ಯಲು ಈ ಹೆಲಿಕಾಪ್ಟರ್ ಬಳಸುವುದರಿಂದ ಇದು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿದಂತಾಗುತ್ತದೆ ಎಂದು ಆರ್ ಪಿ ಗ್ರೂಪ್‍ನ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಏನಿದರ ವಿಶೇಷತೆ?
    * ಎಲ್ಲ ರೀತಿಯ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರುವ ಅತ್ಯಾಧುನಿಕ ಹೆಲಿಕಾಪ್ಟರ್‌ನಲ್ಲಿ ಒಬ್ಬ ಪೈಲಟ್ ಸೇರಿ 7 ಪ್ರಯಾಣಿಕರು ಪ್ರಯಾಣಿಸಬಹುದು.
    * ಹೆಲಿಕಾಪ್ಟರ್ ಸಮುದ್ರ ಮಟ್ಟದಿಂದ 20,000 ಅಡಿ ಎತ್ತರದಿಂದ ಲ್ಯಾಂಡಿಂಗ್ ಮತ್ತು ಟೇಕ್ ಆಫ್ ಮಾಡುವ ಸಾಮಥ್ರ್ಯವನ್ನು ಹೊಂದಿದೆ.
    * ಈ ಚಾಪರ್ ಅಪಘಾತ ಸಂದರ್ಭಗಳಲ್ಲಿ ಪ್ರಯಾಣಿಕರಿಗೆ ಅತ್ಯುನ್ನತ ಸುರಕ್ಷತೆಯನ್ನು ನೀಡುತ್ತದೆ.
    * ಅಲ್ಲದೆ ಎಚ್145 ಸುಧಾರಿತ ವೈರ್‍ಲೆಸ್ ಸಂವಹನ ವ್ಯವಸ್ಥೆಯನ್ನೂ ಹೊಂದಿದೆ. ಇದನ್ನೂ ಓದಿ: ಚುನಾವಣೆವರಗೆ ಸುಮ್ಮನಿದ್ದು, ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಏರಿಕೆ ಮಾಡಿದ್ದಾರೆ: ಡಿಕೆಶಿ

  • ಇತಿಹಾಸದಲ್ಲಿಯೇ ಮೊದಲಬಾರಿಗೆ ಅಂಟಾರ್ಟಿಕಾದಲ್ಲಿ ಏರ್ಬಸ್ ವಿಮಾನ

    ಇತಿಹಾಸದಲ್ಲಿಯೇ ಮೊದಲಬಾರಿಗೆ ಅಂಟಾರ್ಟಿಕಾದಲ್ಲಿ ಏರ್ಬಸ್ ವಿಮಾನ

    ಅಂಟಾರ್ಟಿಕಾ: ಇತಿಹಾಸದಲ್ಲಿಯೇ ಮೊದಲಬಾರಿಗೆ ಏರ್ಬಸ್ ಎ340 ಹಿಮಾವೃತಗೊಂಡ ಅಂಟಾರ್ಟಿಕಾದಲ್ಲಿ ಲ್ಯಾಂಡ್ ಆಗಿದೆ.

    ನಾವು ವಿಮಾನವನ್ನು ಎಲ್ಲ ಕಡೆ ಹಾರಾಡುವುದನ್ನು ನೋಡಿದ್ದೇವೆ. ಎಂದೂ ವಿಮಾನ ಹಿಮಾವೃತಗೊಂಡ ಪ್ರದೇಶದಲ್ಲಿ ಲ್ಯಾಂಡ್ ಆಗಿರುವುದನ್ನು ನೋಡಿರಲಿಲ್ಲ. ಆದರೆ ಈಗ ಇತಂಹ ಅದ್ಭುತ ಸಾಹಸವನ್ನು ಹಾಯ್ ಫ್ಲೈ ಮಾಡಿದೆ. ಹಾಯ್ ಫ್ಲೈ ನ ಉಪಾಧ್ಯಕ್ಷ ಕ್ಯಾಪ್ಟನ್ ಕಾರ್ಲೋಸ್ ಮಿರ್ಪುರಿ ಅವರ ತಂಡ ಏರ್ಬಸ್ ಎ340 ನೊಂದಿಗೆ ನವೆಂಬರ್ 2 ರಂದು ದಕ್ಷಿಣ ಆಫ್ರಿಕಾದ ಕೇಪ್ ಟೌನ್‍ನಿಂದ ಹೊರಟು ಅಂಟಾರ್ಟಿಕಾದ ವುಲ್ಫ್ಸ್ ಫಾಂಗ್ ರನ್ ವೇ ಎಂದು ಕರೆಯಲ್ಪಡುವ ನೀಲಿ ಗ್ಲೇಶಿಯಲ್ ಲ್ಯಾಂಡಿಂಗ್ ಸ್ಟ್ರಿಪ್‍ನಲ್ಲಿ ಲ್ಯಾಂಡ್ ಆಗಿದೆ. ಇದನ್ನೂ ಓದಿ: ವಿದೇಶಗನ ಜೊತೆ ಸಖತ್ ಸ್ಟೆಪ್ ಹಾಕಿದ ಅಜ್ಜ – ವೀಡಿಯೋ ವೈರಲ್

    ಇಲ್ಲಿರುವ ವಿಶೇಷ ಸಂಗತಿ ಎಂದರೆ, ಅಂಟಾರ್ಟಿಕಾದಲ್ಲಿನ ಸಾಹಸ ಶಿಬಿರವಾದ ವುಲ್ಫ್ಸ್ ಫಾಂಗ್ ಈ ಐತಿಹಾಸಿಕ ಕಾರ್ಯಾಚರಣೆಯನ್ನು ನಿರ್ವಹಿಸಲು ಹೈ ಫ್ಲೈ ಅನ್ನು ನೇಮಿಸಿಕೊಂಡಿದೆ. ಈ ಎ340 ಏರ್ಬಸ್ ಒಟ್ಟು 4630 ಕಿಲೋಮೀಟರ್ ಪ್ರಯಾಣಿಸಿತು. ತಾಂತ್ರಿಕವಾಗಿ ವಿಮಾನ ನಿಲ್ದಾಣವಾಗದಿದ್ದರೂ, ಸಿ-ಲೆವೆಲ್ ವಿಮಾನ ನಿಲ್ದಾಣವಾಗಿ ಗೊತ್ತುಪಡಿಸಲಾದ ವುಲ್ಫ್ಸ್ ಫಾಂಗ್ ಆಸ್ತಿಯಲ್ಲಿನ ನೀಲಿ-ಐಸ್ ರನ್‍ವೇಯಲ್ಲಿ ಏರ್ಬಸ್ ಅನ್ನು ಇಳಿಸಲಾಯಿತು.

    ಪೈಲಟ್ ಕಾರ್ಲೋಸ್ ಮಿರ್ಪುರಿ ಈ ಕುರಿತು, ವಿಮಾನವು ಸುಗಮವಾಗಿ ಸಾಗಿತ್ತು. ಆದರೆ ಲ್ಯಾಂಡ್ ಮಾಡಬೇಕಾದ ವೇಳೆ ರನ್‍ವೇಯನ್ನು ಗುರುತಿಸುವುದು ಸುಲಭವಾಗಿರಲಿಲ್ಲ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಥಿಯೇಟರ್‌ಗಳಲ್ಲಿ ನಾವು ರಾಜೀಯಾಗುವುದಿಲ್ಲ: ಅಮೀರ್‌ಗೆ ರಾಕಿಬಾಯಿ ಯಶ್ ಉತ್ತರ

    ಈ ಐತಿಹಾಸಿಕ ವಿಮಾನವು ಅಂಟಾರ್ಟಿಕಾಕ್ಕೆ ವಿಮಾನದಲ್ಲಿ ಪ್ರಯಾಣ ಬೆಳೆಸಬೇಕು ಎಂದು ಇಷ್ಟಪಡುವ ಪ್ರಯಾಣಿಕರ ಆಸೆಯನ್ನು ನೆರವೇರಿಸುತ್ತೆ. ಆದರೆ ಅಂಟಾರ್ಟಿಕಾದಲ್ಲಿ ಯಾವುದೇ ಅಧಿಕೃತ ವಿಮಾನ ನಿಲ್ದಾಣವಿಲ್ಲದಿದ್ದರೂ 50 ಲ್ಯಾಂಡಿಂಗ್ ಸ್ಟ್ರಿಪ್‍ಗಳು ಮತ್ತು ರನ್‍ವೇಗಳಿವೆ.