Tag: ಏರ್ ಅಂಬುಲೆನ್ಸ್

  • ಕೇದಾರನಾಥದಲ್ಲಿ ಲ್ಯಾಂಡಿಂಗ್‌ ವೇಳೆ ಹೆಲಿಕಾಪ್ಟರ್ ಪತನ – ತಪ್ಪಿದ ಭಾರೀ ಅನಾಹುತ

    ಕೇದಾರನಾಥದಲ್ಲಿ ಲ್ಯಾಂಡಿಂಗ್‌ ವೇಳೆ ಹೆಲಿಕಾಪ್ಟರ್ ಪತನ – ತಪ್ಪಿದ ಭಾರೀ ಅನಾಹುತ

    ಡೆಹ್ರಾಡೂನ್‌: ಋಷಿಕೇಶ ಏಮ್ಸ್ ನಿಂದ ಕೇದಾರನಾಥಕ್ಕೆ (Kedarnath) ಬಂದಿದ್ದ ಏರ್‌ ಅಂಬುಲೆನ್ಸ್‌ ಹೆಲಿಕಾಪ್ಟರ್‌ (Helicopter) ಲ್ಯಾಂಡಿಂಗ್‌ ವೇಳೆ ಪತನಗೊಂಡಿದೆ.

    ಋಷಿಕೇಶ ಏಮ್ಸ್‌ನಿಂದ ತುರ್ತು ವೈದ್ಯಕೀಯ ಸೇವೆಯ ಅಡಿ ರೋಗಿಯನ್ನು ಕರೆದೊಯ್ಯಲು ಕೇದಾರನಾಥಕ್ಕೆ ಹೆಲಿಕಾಪ್ಟರ್‌ ಬಂದಿತ್ತು. ಹೆಲಿಪ್ಯಾಡ್‌ನಲ್ಲಿ ಲ್ಯಾಂಡಿಂಗ್‌ಗೆ ಇಳಿಸಲಾಗುತ್ತಿತ್ತು, ಆದ್ರೆ ಹೆಲಿಪ್ಯಾಡ್‌ಗೆ (Helipad) ಇನ್ನೂ 20 ಮೀಟರ್‌ ದೂರದಲ್ಲಿರುವಾಗಲೇ ಹಿಂಭಾಗ ಮುರಿದು ಹೆಲಿಕಾಪ್ಟರ್‌ ಪತನಗೊಂಡಿದೆ. ಇದನ್ನೂ ಓದಿ: ಆಪರೇಷನ್‌ ಸಿಂಧೂರದ ಬಗ್ಗೆ ಪಾಕ್‌ಗೆ ಮಾಹಿತಿ ನೀಡುತ್ತಿದ್ದ ಹರಿಯಾಣದ ಯುವಕ ಅರೆಸ್ಟ್

    ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸಿಲ್ಲ. ಏರ್‌ ಆಂಬುಲೆನ್ಸ್‌ನಲ್ಲಿದ್ದ ಇಬ್ಬರು ವೈದ್ಯರು ನತ್ತು ಪೈಲಟ್‌ ಸುರಕ್ಷಿತವಾಗಿದ್ದಾರೆ. ಮೇಲ್ನೋಟಕ್ಕೆ ತಾಂತ್ರಿಕ ದೋಷದಿಂದ ಘಟನೆ ಸಂಭವಿಸಿರುವುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ತಾಂತ್ರಿಕ ತಂಡಕ್ಕೆ ಮಾಹಿತಿ ನೀಡಲಾಗಿದ್ದು, ಇನ್ನಷ್ಟೇ ಪರಿಶೀಲನೆ ನಡೆಯಬೇಕಿದೆ. ಇದನ್ನೂ ಓದಿ: ಪಾಕ್‌ ಪ್ರಧಾನಿ ನಿದ್ದೆಗೆಡಿಸಿದ ʻಆಪರೇಷನ್‌ ಸಿಂಧೂರʼ – ಶೆಹಬಾಜ್‌ಗೆ ಮಧ್ಯರಾತ್ರಿ ಕರೆ ಮಾಡಿದ್ಯಾರು?

    ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಿ…

  • ಕುರುಬೂರು ಶಾಂತಕುಮಾರ್ ಮಣಿಪಾಲ ಆಸ್ಪತ್ರೆಗೆ ಶಿಫ್ಟ್

    ಕುರುಬೂರು ಶಾಂತಕುಮಾರ್ ಮಣಿಪಾಲ ಆಸ್ಪತ್ರೆಗೆ ಶಿಫ್ಟ್

    ಬೆಂಗಳೂರು: ಪಂಜಾಬಿನ (Punjab) ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ (Kuruburu Shanthakumar) ಅವರನ್ನು ಇಂದು ಏರ್ ಅಂಬುಲೆನ್ಸ್ ಮೂಲಕ ಬೆಂಗಳೂರಿಗೆ (Bengaluru) ಕರೆತರಲಾಗಿದೆ.

    ಚಿಕಿತ್ಸೆಗಾಗಿ ಶಾಂತಕುಮಾರ್ ಅವರನ್ನು ಇದೀಗ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಾಂತಕುಮಾರ್ ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾರೈಸಿದ್ದಾರೆ. ಇದನ್ನೂ ಓದಿ: ದರ ಏರಿಕೆ ಎಫೆಕ್ಟ್ – ವೀಕೆಂಡ್‌ನಲ್ಲಿಯೂ ನಮ್ಮ ಮೆಟ್ರೋ ಖಾಲಿ ಖಾಲಿ

    ಮೂರು ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಶಾಂತಕುಮಾರ್ ಅವರು ಗಾಯಗೊಂಡು ಪಟಿಯಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿಷಯ ತಿಳಿದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರ್ ಅಂಬುಲೆನ್ಸ್ ಮೂಲಕ ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದನ್ನೂ ಓದಿ: 2 ಜೀವಗಳನ್ನ ಬಲಿ ಪಡೆದಿದ್ದ, ಇಡೀ ಗ್ರಾಮದ ಜನರನ್ನೇ ಕಾಡಿದ್ದ ಸಲಗ ಕೊನೆಗೂ ಸೆರೆ

    ಈ ಮಧ್ಯೆ ದೆಹಲಿ ನಿವಾಸಿ ಆಯುಕ್ತರಾದ ಇಂಕೊಂಗ್ಲ ಜಮೀರ್ ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪಟಿಯಾಲದ ಆಸ್ಪತ್ರೆ ವೈದ್ಯರ ಜೊತೆ ಸತತ ಸಂಪರ್ಕದಲ್ಲಿದ್ದರು. ಇದನ್ನೂ ಓದಿ: ಎಲಾನ್‌ ಮಸ್ಕ್‌ ಅವರ 13ನೇ ಮಗುವಿಗೆ ಜನ್ಮ ನೀಡಿದ್ದೇನೆ: ಆಶ್ಲೇ ಹೇಳಿಕೆಗೆ ಮೌನ ಮುರಿದ ಮಸ್ಕ್‌

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಅಧಿಕಾರಿಗಳು ಶನಿವಾರ ಏರ್ ಅಂಬುಲೆನ್ಸ್ ಸಜ್ಜುಗೊಳಿಸಿದ್ದರು. ಇಬ್ಬರು ಸಹಾಯಕರು ಹಾಗೂ ವೈದ್ಯರ ತಂಡದೊಂದಿಗೆ ಇಂದು ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ. ಇದನ್ನೂ ಓದಿ: ಅಯೋಧ್ಯೆಗೆ ತೆರಳಿದ್ದ ಕಾರಿನ ಗ್ಲಾಸ್ ಒಡೆದು ಕಳ್ಳತನ – 10 ಮೊಬೈಲ್, 20,000 ರೂ. ದೋಚಿದ ಖದೀಮರು

  • ಕ್ಯಾನ್ಸರ್ ವಿರುದ್ಧ ಡಿಂಕೊ ಸಿಂಗ್ ಹೋರಾಟ- ಬಾಕ್ಸರ್ ಬೆಂಬಲಕ್ಕೆ ನಿಂತ ಸ್ಪೈಸ್ ಜೆಟ್

    ಕ್ಯಾನ್ಸರ್ ವಿರುದ್ಧ ಡಿಂಕೊ ಸಿಂಗ್ ಹೋರಾಟ- ಬಾಕ್ಸರ್ ಬೆಂಬಲಕ್ಕೆ ನಿಂತ ಸ್ಪೈಸ್ ಜೆಟ್

    – ಏರ್ ಅಂಬುಲೆನ್ಸ್ ಮೂಲಕ ದೆಹಲಿಗೆ ಶಿಫ್ಟ್‌

    ಇಂಫಾಲ್: ಪಿತ್ತಜನಕಾಂಗದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಭಾರತೀಯ ಬಾಕ್ಸರ್ ಡಿಂಕೊ ಸಿಂಗ್ ಅವರನ್ನು ಸ್ಪೈಸ್‍ ಜೆಟ್ ಏರ್ ಅಂಬುಲೆಂನ್ಸ್ ಮೂಲಕ ದೆಹಲಿಯ ಆಸ್ಪತ್ರೆಗೆ ಶಿಫ್ಟ್ ಮಾಡಲು ಸಿದ್ಧತೆ ನಡೆದಿದೆ.

    ಡಿಂಕೊ ಸಿಂಗ್ ಭಾರತದ ಪರ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಮಣಿಪುರದ ರಾಜಧಾನಿ ಇಂಫಾಲ್‍ನಲ್ಲಿ ವಾಸಿಸುತ್ತಿರುವ 41 ವರ್ಷದ ಡಿಂಕೊ ಅವರಿಗೆ ಲಾಕ್‍ಡೌನ್‍ನಿಂದಾಗಿ ವಿಕಿರಣ ಚಿಕಿತ್ಸೆ ಸಿಗುತ್ತಿಲ್ಲ. ಚಿಕಿತ್ಸೆಗಾಗಿ ಅವರನ್ನು ಸ್ಪೈಸ್ ಜೆಟ್‍ನ ಏರ್ ಅಂಬುಲೆನ್ಸ್ ಮೂಲಕ ಇಂಫಾಲ್‍ನಿಂದ ದೆಹಲಿಗೆ ಕರೆತರಲು ಸಿದ್ಧತೆ ನಡೆದಿದೆ.

    ಬಾಕ್ಸರ್ ಡಿಂಕೊ ಸಿಂಗ್ ಅವರಿಗೆ ಸ್ಪೈಸ್ ಜೆಟ್ ಸಂಸ್ಥೆಯು ಉಚಿತವಾಗಿ ಏರ್ ಅಂಬುಲೆನ್ಸ್ ಸೇವೆ ನೀಡಲು ಮುಂದೆ ಬಂದಿದೆ. ಈ ನಿರ್ಧಾರವನ್ನು ಸ್ಪೈಸ್‍ಜೆಟ್‍ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಜಯ್ ಸಿಂಗ್ ಪ್ರಕಟಿಸಿದ್ದಾರೆ. ಅಜಯ್ ಸಿಂಗ್ ಅವರು ಬಾಕ್ಸಿಂಗ್ ಫೆಡರೇಶನ್ ಆಫ್ ಇಂಡಿಯಾದ (ಬಿಎಫ್‍ಐ) ಅಧ್ಯಕ್ಷರೂ ಆಗಿದ್ದಾರೆ.

    ಹಿರಿಯ ಬಾಕ್ಸರ್ ಗಳಾದ ವಿಜೇಂದರ್ ಸಿಂಗ್ ಮತ್ತು ಭಾರತದ ಮನೋಜ್ ಕುಮಾರ್ ಕೂಡ ಅರ್ಜುನ್ ಮತ್ತು ಪದ್ಮಾ ಪ್ರಶಸ್ತಿ ಪುರಸ್ಕೃತ ಡಿಂಕೊ ಸಿಂಗ್ ಅವರಿಗೆ ಸಹಾಯ ಮಾಡಲು ಹಣವನ್ನು ಸಂಗ್ರಹಿಸುತ್ತಿದ್ದಾರೆ. ”ನಾವು ವಾಟ್ಸಾಪ್ ಗ್ರೂಪ್ ‘ಹಮ್ ಮೇನ್ ಹೈ ದಮ್’ ಮೂಲಕ ಹಣವನ್ನು ಸಂಗ್ರಹಿಸುತ್ತಿದ್ದೇವೆ. ಈಗಾಗಲೇ ಒಂದು ಲಕ್ಷಕ್ಕೂ ಹೆಚ್ಚು ರೂಪಾಯಿ ಸಂಗ್ರಹಿಸಿದ್ದೇವೆ. ಅದು ನೇರವಾಗಿ ಡಿಂಕೊ ಅವರ ಖಾತೆಗೆ ಹೋಗುತ್ತದೆ” ಎಂದು ವಿಜೇಂದರ್ ಹೇಳಿದ್ದಾರೆ.

    ಡಿಂಕೊ ಸಿಂಗ್ ಅವರನ್ನು ಏಪ್ರಿಲ್ 25ರಂದು ದೆಹಲಿಗೆ ಕರೆತರಲಾಗುವುದು. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಅಜಯ್ ಸಿಂಗ್, ”ಲಾಕ್‍ಡೌನ್‍ನಿಂದಾಗಿ ಡಿಂಕೊ ಸಿಂಗ್ ಅವರ ಚಿಕಿತ್ಸೆ ಮಧ್ಯದಲ್ಲಿ ನಿಂತುಹೋಯಿತು. ಇದು ನಿಜವಾಗಿಯೂ ದುರದೃಷ್ಟಕರ. ನಮ್ಮ ದೇಶದ ವೀರನಿಗೆ ಏರ್ ಅಂಬುಲೆನ್ಸ್ ಸೇವೆಯನ್ನು ಒದಗಿಸುವುದು ಮತ್ತು ಅವರನ್ನು ದೆಹಲಿಗೆ ಕರೆತರುವುದು ಸ್ಪೈಸ್‍ಜೆಟ್‍ಗೆ ಒಂದು ಭಾಗ್ಯವಾಗಿದೆ. ಭಾರತೀಯ ಬಾಕ್ಸರ್ ಡಿಂಕೊ ಅನೇಕ ದೊಡ್ಡಮಟ್ಟದ ಪಂದ್ಯಗಳನ್ನು ಗೆದ್ದಿದ್ದಾರೆ. ಈ ಯುದ್ಧದಲ್ಲಿಯೂ ಅವರು ಗೆಲ್ಲಬೇಕು ಎಂಬುದು ನಮ್ಮ ಪ್ರಾರ್ಥನೆ” ಎಂದು ತಿಳಿಸಿದ್ದಾರೆ.

    ಈ ಹಿಂದೆ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಮಣಿಪುರ ಸರ್ಕಾರದೊಂದಿಗೆ ಮಾತನಾಡಿ ಡಿಂಕೊ ಸಿಂಗ್ ಅವರ ಚಿಕಿತ್ಸೆಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಿದ್ದರು. 1998ರಲ್ಲಿ ಬ್ಯಾಂಕಾಕ್‍ನಲ್ಲಿ ನಡೆದ ಏಷ್ಯನ್ ಕ್ರೀಡಾಕೂಟದಲ್ಲಿ ಬಾಂಟಮ್‍ವೈಟ್ ಬಾಕ್ಸರ್ ಡಿಂಕೊ ಸಿಂಗ್ ಚಿನ್ನದ ಪದಕ ಗೆದ್ದರು.

  • ಎಚ್.ವೈ ಮೇಟಿ ಅಸ್ವಸ್ಥ – ಏರ್ ಅಂಬುಲೆನ್ಸ್ ಮೂಲಕ ಬೆಂಗ್ಳೂರಿಗೆ ರವಾನೆ

    ಎಚ್.ವೈ ಮೇಟಿ ಅಸ್ವಸ್ಥ – ಏರ್ ಅಂಬುಲೆನ್ಸ್ ಮೂಲಕ ಬೆಂಗ್ಳೂರಿಗೆ ರವಾನೆ

    ಬಾಗಲಕೋಟೆ: ಮಾಜಿ ಸಚಿವ ಎಚ್.ವೈ. ಮೇಟಿ ಅವರನ್ನು ಏರ್ ಅಂಬುಲೆನ್ಸ್ ಮೂಲಕ ಬೆಂಗಳೂರಿಗೆ ರವಾನಿಸಲಾಗಿದೆ.

    ಬಾಗಲಕೋಟೆಯ ನವನಗರದ ಹೆಲಿಪ್ಯಾಡ್ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನವೆಂಬರ್ 25ರಂದು ಎಚ್.ವೈ ಮೇಟಿ ಅವರು ಕಿಡ್ನಿ ಸ್ಟೋನ್ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಕೆಲವು ದಿನಗಳಿಂದ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಸ್ಟೋನ್ ಗಾತ್ರ 60 ಎಂಎಂ ಇದ್ದಿದ್ದರಿಂದ ನೋವು ತಾಳಲಾರದೇ ಮೇಟಿ ತೀವ್ರ ಅಸ್ವಸ್ಥಗೊಂಡಿದ್ದಾರೆ.

    ಆರೋಗ್ಯದಲ್ಲಾದ ಏರುಪೇರಿನಿಂದ ವಿಪರೀತ ಕಫ ಆಗಿದ್ದು, ಮೇಟಿಯವರಿಗೆ ವಾಂತಿ, ಬೇದಿಯೂ ಶುರುವಾಗಿತ್ತು. ಹೀಗಾಗಿ ಮೇಟಿಯವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸುವಂತೆ ಬಾಗಲಕೋಟೆ ವೈದ್ಯರು ಕುಟುಂಬಸ್ಥರಿಗೆ ಸಲಹೆ ನೀಡಿದ್ದರು.

    ವೈದ್ಯರ ಸಲಹೆ ಬೆನ್ನಲ್ಲೇ ಕುಟುಂಬಸ್ಥರು ಏರ್ ಅಂಬುಲೆನ್ಸ್ ಮೂಲಕ ಮೇಟಿ ಅವರನ್ನು ಬೆಂಗಳೂರಿಗೆ ರವಾನಿಸಿದ್ದಾರೆ. ಕಿಡ್ನಿ ಸ್ಟೋನ್‍ನಿಂದ ಮಾಜಿ ಸಚಿವರು ಬಳಲುತ್ತಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

  • ಚೆನ್ನೈಗೆ ಬಂದಿಳಿದ ಸಿದ್ದಗಂಗಾ ಶ್ರೀ – ನಿತ್ಯ ಪೂಜೆಗೆ ಆಸ್ಪತ್ರೆಯಲ್ಲೇ ವಿಶೇಷ ವ್ಯವಸ್ಥೆ

    ಚೆನ್ನೈಗೆ ಬಂದಿಳಿದ ಸಿದ್ದಗಂಗಾ ಶ್ರೀ – ನಿತ್ಯ ಪೂಜೆಗೆ ಆಸ್ಪತ್ರೆಯಲ್ಲೇ ವಿಶೇಷ ವ್ಯವಸ್ಥೆ

    ಚೆನ್ನೈ: ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಶತಾಯುಷಿ ಶ್ರೀ ಸಿದ್ದಗಂಗಾ ಶ್ರೀ ಏರ್ ಅಂಬುಲೆನ್ಸ್ ಮೂಲಕ ಚೆನ್ನೈಗೆ ಬಂದಿಳಿದಿದ್ದಾರೆ.

    ತುಮಕೂರಿನ ಸಿದ್ದಗಂಗಾ ಮಠದಿಂದ ಬೆನ್ಜ್ ಕಾರಲ್ಲಿ ಹೆಚ್‍ಎಎಲ್ ಏರ್ ಪೋರ್ಟ್ ತಲುಪಿದ್ದ ಶ್ರೀಗಳನ್ನು ಅಲ್ಲಿಂದ ಏರ್ ಅಂಬುಲೆನ್ಸ್ ಮೂಲಕ ಚೆನ್ನೈನಲ್ಲಿರುವ ಪ್ರತಿಷ್ಠಿತ ರೆಲಾ ವೈದ್ಯಕೀಯ ಸಂಸ್ಥೆಗೆ ಕರೆದುಕೊಂಡು ಬರಲಾಗಿದೆ. ಚೆನ್ನೈ ಏರ್ ಪೋರ್ಟ್ ನಿಂದ ರೇಲಾ ಆಸ್ಪತ್ರೆಗೆ ಸೇರಿದ ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.

    ಸಿದ್ದಗಂಗಾ ಶ್ರೀಗಳಿಗೆ ಇಂದು ರಾತ್ರಿ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ. ನಾಳೆ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ. ಮೂರ್ನಾಲ್ಕು ದಿನ ಆಸ್ಪತ್ರೆಯಲ್ಲಿ ಉಳಿಯಲಿದ್ದಾರೆ. ಶ್ರೀಗಳ ನಿತ್ಯದ ಪೂಜೆಗಾಗಿ ಆಸ್ಪತ್ರೆಯಲ್ಲೇ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಶ್ರೀಗಳ ಶಿಷ್ಯ ವೃಂದದವರು ಪೂಜಾ ಸಾಮಾಗ್ರಿ ಸೇರಿದಂತೆ ಅಗತ್ಯ ವಸ್ತುಗಳೊಂದಿಗೆ ಈಗಾಗಲೇ ಚೆನ್ನೈನ ಆಸ್ಪತ್ರೆಗೆ ಬಂದಿದ್ದಾರೆ. ಸ್ವಾಮೀಜಿಗೆ ಈಗಾಗಲೇ 5 ಸ್ಟಂಟ್ ಅಳವಡಿಸಲಾಗಿದ್ದು, ಮತ್ತೆ ಸ್ಟಂಟ್ ಅಳವಡಿಸಲು ಸಾಧ್ಯವಿಲ್ಲ. ಹೀಗಾಗಿ ಶಾಶ್ವತ ಪರಿಹಾರಕ್ಕಾಗಿ ಚೆನ್ನೈನಲ್ಲಿ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತದೆ. ಇದನ್ನೂ ಓದಿ: ಗಿನ್ನೆಸ್ ದಾಖಲೆ ಮಾಡಿದ ವೈದ್ಯರಿಂದ ಇಂದು ಶ್ರೀಗಳಿಗೆ ಚಿಕಿತ್ಸೆ

    ಐಸಿಎಟಿ (ಇಂಟರ್ ನ್ಯಾಷನಲ್ ಕ್ರಿಟಿಕಲ್ ಕೇರ್ ಏರ್ ಟ್ರಾನ್ಸ್ ಫರ್ ಟೀಮ್) ಸಂಸ್ಥೆಗೆ ಸೇರಿದ ಏರ್ ಅಂಬುಲೆನ್ಸ್ ನಲ್ಲಿ ಸಿದ್ದಗಂಗಾ ಶ್ರೀಗಳನ್ನು ಚೆನ್ನೈಗೆ ಕರೆದುಕೊಂಡು ಹೋಗಲಾಗಿದೆ. ವೈದ್ಯರು ಸೇರಿದಂತೆ ಒಟ್ಟು 7 ಮಂದಿ ಪ್ರಯಾಣಿಸಬಹುದಾದ ಈ ಏರ್ ಅಂಬುಲೆನ್ಸ್ ನಲ್ಲಿ ಐಸಿಯು ಯುನಿಟ್ ಇರುತ್ತದೆ. ಡಾಕ್ಟರ್ ಶಾಲಿನಿ ನಲ್ವಾಡ್ ಮತ್ತು ರಾಹುಲ್ ಸಿಂಗ್ ನೇತೃತ್ವದ ಐಸಿಎಟಿಯನ್ನ ಏರ್ ಅಂಬುಲೆನ್ಸ್ ಸೇವೆಗಾಗಿ ಗುರುವಾರ ಸಂಪರ್ಕಿಸಲಾಗಿತ್ತು.

    https://www.youtube.com/watch?v=aO1mVgHf5ww

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv