Tag: ಏರ್ ಇಂಡಿಯಾ

  • ಬೆಂಗಳೂರು-ಅಯೋಧ್ಯೆ ಏರ್ ಇಂಡಿಯಾ ವಿಮಾನದಲ್ಲಿ ರಾಮಜಪ, ಭಜನೆ

    ಬೆಂಗಳೂರು-ಅಯೋಧ್ಯೆ ಏರ್ ಇಂಡಿಯಾ ವಿಮಾನದಲ್ಲಿ ರಾಮಜಪ, ಭಜನೆ

    – ಬೋರ್ಡಿಂಗ್ ಗೇಟಲ್ಲಿ ಜೈಶ್ರೀರಾಮ್ ಘೋಷಣೆ

    ಬೆಂಗಳೂರು: ದೇಶದೆಲ್ಲೆಡೆ ಅಯೋಧ್ಯೆ ರಾಮಮಂದಿರದಲ್ಲಿನ (Ayodhya Ram Mandir) ಪ್ರಾಣ ಪ್ರತಿಷ್ಠೆ ಸಮಾರಂಭದ ಸಂಭ್ರಮ ಮನೆ ಮಾಡಿದೆ. ಎಲ್ಲೆಲ್ಲೂ ಶ್ರೀರಾಮ ಜಪ, ಭಜನೆ (Ram Bhajan) ಮೊಳಗುತ್ತಿದೆ. ದೇಶದ ಕೋಟ್ಯಂತರ ಭಾರತೀಯ ಶ್ರೀರಾಮನ ಸ್ಮರಿಸುತ್ತಿದ್ದಾರೆ.

    ಇದಕ್ಕೆ ಸಾಕ್ಷಿ ಎಂಬಂತೆ, ಬೆಂಗಳೂರಿನಿಂದ ಅಯೋಧ್ಯೆಗೆ (Bengaluru-Ayodhya Flight) ಹೊರಟಿದ್ದ ಭಕ್ತರ ತಂಡವೊಂದು ವಿಮಾನದಲ್ಲಿ ರಾಮಜಪ ಮಾಡಿ ಗಮನ ಸೆಳೆಯಿತು. ಬೆಂಗಳೂರು-ಅಯೋಧ್ಯೆ ಏರ್ ಇಂಡಿಯಾ ವಿಮಾನದಲ್ಲಿ ರಾಮಜಪ, ಭಜನೆ ಕೇಳಿಬಂತು. ಇದನ್ನೂ ಓದಿ: Ayodhya Ram Mandir: ಗರ್ಭಗುಡಿ ಪ್ರವೇಶಿಸಿದ ರಾಮಲಲ್ಲಾ ವಿಗ್ರಹ – ಇಂದು ಮೂರ್ತಿ ಪ್ರತಿಷ್ಠಾಪನೆ

    ವಿಮಾನ ನಿಲ್ದಾಣದ ಬೋರ್ಡಿಂಗ್‌ ಗೇಟಲ್ಲಿ ಭಕ್ತರು ‘ಜೈ ಶ್ರೀರಾಮ್‌’ ಎಂದು ಘೋಷಣೆ ಕೂಗಿದ್ದಾರೆ. ಅಲ್ಲದೇ ರಾಮಭಜನೆ ಮಾಡುತ್ತಾ ವಿಮಾನ ಏರಿದ ದೃಶ್ಯಗಳ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.

    ಢಕ್ಕೆ ಭಾರಿಸುತ್ತ, ಕಂಸಾಳೆ ಸದ್ದು ಮಾಡುತ್ತ, ‘ಶ್ರೀರಾಮ.. ಜಯ ರಾಮ.. ಜಯ ಜಯ ರಾಮ’ ಎಂದು ಭಜಿಸುತ್ತಾ ಭಕ್ತರು ವಿಮಾನ ಏರಿದ್ದಾರೆ. ಮತ್ತೆ ಒಂದು ಕಡೆ ನಿಂತು ‘ಭೋಲೊ ಭಾರತ್‌ ಮಾತಾಕಿ’, ‘ರಾಮಚಂದ್ರ ಮಹಾರಾಜ್‌ಕೀ’, ‘ಅಯೋಧ್ಯಾ ವಾಸಿಕೀ’ ಜೈ ಎಂದು ಘೋಷಣೆ ಕೂಗಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯ ಬಾಲರಾಮನಿಗೆ ಬೆಂಗ್ಳೂರಿನಿಂದ ತುಳಸಿಮಾಲೆಯ ಸೇವೆ!

    ತಂಡದಲ್ಲಿ ಕೆಲವರು ಸಾಂಪ್ರದಾಯಿಕ ಉಡುಪಿನಲ್ಲೇ ಬೆಂಗಳೂರಿನಿಂದ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ. ತಲೆಗೆ ಕೇಸರಿ ಬಣ್ಣದ ಪೇಟ ಧರಿಸಿದ್ದಾರೆ. ಕೆಲವರು ಕೇಸರಿ ಪಂಚೆ ಉಟ್ಟು ವಿಮಾನ ಏರಿದ್ದಾರೆ.

    ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಬೆಂಗಳೂರು, ಕೋಲ್ಕತ್ತಾ ಮತ್ತು ಅಯೋಧ್ಯೆ ನಡುವೆ ಪ್ರಯಾಣಕ್ಕೆ ಮೊದಲ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಬುಧವಾರ ಹಸಿರು ನಿಶಾನೆ ತೋರಿದ್ದರು. ಇದನ್ನೂ ಓದಿ: ರಾಮಮಂದಿರ ಪ್ರವೇಶಿಸಿದ ರಾಮಲಲ್ಲಾ ಮೂರ್ತಿ

    ಇದೇ ಜನವರಿ 22 ರಂದು ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಸಮಾರಂಭ ಜರುಗಲಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಪ್ರಾಣ ಪ್ರತಿಷ್ಠಾಪನೆ ಆಗಲಿದೆ. ಈ ಸುಸಂದರ್ಭಕ್ಕೆ ಸಾಕ್ಷಿಯಾಗಲು ರಾಮಭಕ್ತರು ಕಾತರರಾಗಿದ್ದಾರೆ.

  • ಏರ್ ಇಂಡಿಯಾ ವಿಮಾನದೊಳಗೆ ತೊಟ್ಟಿಕ್ಕಿದ ನೀರು

    ಏರ್ ಇಂಡಿಯಾ ವಿಮಾನದೊಳಗೆ ತೊಟ್ಟಿಕ್ಕಿದ ನೀರು

    ನವದೆಹಲಿ: ಲಂಡನ್‌ನಿಂದ ಅಮೃತಸರಕ್ಕೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನದ (Air India Flight) ಒಳಗಡೆ ನೀರು ಸೋರಿಕೆಯಾಗಿರುವ (Water Leaking) ಪ್ರಸಂಗ ನಡೆದಿದೆ. ಈ ಅನಿರೀಕ್ಷಿತ ಘಟನೆಯಿಂದ ಪ್ರಯಾಣಿಕರಿಗೆ ಅನಾನುಕೂಲವಾಗಿದ್ದು, ಇದಕ್ಕೆ ಏರ್ ಇಂಡಿಯಾ ವಿಷಾದ ವ್ಯಕ್ತಪಡಿಸಿದೆ.

    ಘಟನೆಗೆ ಸಂಬಂಧಿಸಿದಂತೆ ಎಕ್ಸ್‌ನಲ್ಲಿ ವ್ಯಕ್ತಿಯೊಬ್ಬರು ವೀಡಿಯೋವನ್ನು ಹಂಚಿಕೊಂಡಿದ್ದಾರೆ. ವಿಮಾನದಲ್ಲಿ ಪ್ರಯಾಣಿಕರು ಕುಳಿತುಕೊಳ್ಳುವ ಆಸನಗಳ ಮೇಲಿರುವ ಹ್ಯಾಂಡ್ ಬ್ಯಾಗೇಜ್ ಸಂಗ್ರಹದಿಂದ ನೀರು ಹೇಗೆ ಸೋರಿಕೆಯಾಗುತ್ತಿತ್ತು ಎಂಬುದು ವೀಡಿಯೋದಲ್ಲಿ ಕಂಡುಬಂದಿದೆ.

    ಈ ಬಗ್ಗೆ ಬರೆದಿರುವ ಪ್ರಯಾಣಿಕ, ಏರ್ ಇಂಡಿಯಾ.. ನಮ್ಮೊಂದಿಗೆ ಪ್ರಯಾಣಿಸಿ. ಇದು ಪ್ರಯಾಣವಲ್ಲ, ನಮ್ಮನ್ನು ತಲ್ಲೀನಗೊಳಿಸುವ ಅನುಭವ ಎಂದು ತಮಗಾದ ಅನಾನುಕೂಲತೆಯನ್ನು ತಿಳಿಸಿದ್ದಾರೆ. ಇದನ್ನೂ ಓದಿ: ಗುಜರಾತ್‌ನಲ್ಲಿ ಕಲುಷಿತ ಆಯುರ್ವೇದಿಕ್ ಸಿರಪ್ ಸೇವಿಸಿ 5 ಮಂದಿ ಸಾವು

    ಸರ್ಕಾರದ ನಿಯಂತ್ರಣದಲ್ಲಿದ್ದ ಏರ್ ಇಂಡಿಯಾವನ್ನು 2021ರ ಅಕ್ಟೋಬರ್‌ನಲ್ಲಿ ಟಾಟಾ ಸನ್ಸ್ 70 ವರ್ಷಗಳ ಬಳಿಕ ಖರೀದಿಸಿದೆ. ಈ ಮೂಲಕ ಪ್ರಯಾಣಿಕರಿಗೆ ಉತ್ತಮ ಸೇವೆಯನ್ನು ಒದಗಿಸುವ ಭರವಸೆಯನ್ನು ನೀಡಿದೆ. ಆದರೆ ನವೆಂಬರ್ 24ರಂದು ಗ್ಯಾಟ್ವಿಕ್‌ನಿಂದ ಅಮೃತಸರಕ್ಕೆ ಪ್ರಯಾಣಿಸಿದ ಎಐ169 ವಿಮಾನದಲ್ಲಾದ ಈ ಅವ್ಯವಸ್ಥೆ ಅದರ ಸೇವೆಯ ಗುಣಮಟ್ಟವನ್ನು ಪ್ರಶ್ನಿಸುವಂತಾಗಿದೆ.

    ಇದೀಗ ನಡೆದ ಅನಾನುಕೂಲತೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಏರ್ ಇಂಡಿಯಾ, ಅನಿರೀಕ್ಷಿತ ದೋಷವನ್ನು ಸರಿಪಡಿಸಲಾಗಿದೆ. ನೀರು ಸೋರಿಕೆ ವೇಳೆ ತೊಂದರೆಗೊಳಗಾಗಿದ್ದ ಪ್ರಯಾಣಿಕರನ್ನು ತಮ್ಮ ಆಸನಗಳಿಂದ ಇತರ ಖಾಲಿ ಆಸನಗಳಿಗೆ ಸ್ಥಳಾಂತರಿಸಿದ್ದೇವೆ. ಸನ್ನಿವೇಶವನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣಿಕರನ್ನು ಆರಾಮದಾಯಕವಾಗಿರಿಸಲು ನಮ್ಮ ಸಿಬ್ಬಂದಿ ಎಲ್ಲಾ ಪ್ರಯತ್ನವನ್ನು ಮಾಡಿದ್ದಾರೆ. ವಿಮಾನದಲ್ಲಿ ಪ್ರಯಾಣಿಸುವವರ ಸುರಕ್ಷತೆ ಮತ್ತು ಸೇವೆಗಳಿಗೆ ಏರ್ ಇಂಡಿಯಾ ಬದ್ಧವಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಬದುಕೋ ಸಾಧ್ಯತೆ ಮೊದಲೇ ತೀರಾ ಕಡಿಮೆಯಿತ್ತು – ಹಾಸನ ಮಗು ಸಾವಿನ ಪ್ರಕರಣಕ್ಕೆ ನಿಮ್ಹಾನ್ಸ್ ಸ್ಪಷ್ಟನೆ

  • ನ.19ಕ್ಕೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಡಿ – ಖಲಿಸ್ತಾನಿ ಭಯೋತ್ಪಾದಕನ ಬೆದರಿಕೆ ವೀಡಿಯೋ

    ನ.19ಕ್ಕೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಡಿ – ಖಲಿಸ್ತಾನಿ ಭಯೋತ್ಪಾದಕನ ಬೆದರಿಕೆ ವೀಡಿಯೋ

    ನವದೆಹಲಿ: ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಿಂದಾಗಿ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹದಗೆಟ್ಟಿದೆ. ಇದೀಗ ಖಲಿಸ್ತಾನಿ ಭಯೋತ್ಪಾದಕ (Khalistani Terrorist) ಗುರುಪತ್ವಂತ್ ಸಿಂಗ್ ಪನ್ನುನ್ (Gurpatwant Singh Pannun) ಬೆದರಿಕೆ ವೀಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ನವೆಂಬರ್ 19 ರಂದು ಏರ್ ಇಂಡಿಯಾ ವಿಮಾನಗಳಲ್ಲಿ (Air India Flight) ಸಿಖ್ಖರು ಪ್ರಯಾಣಿಸದಂತೆ ಎಚ್ಚರಿಕೆ ನೀಡಿದ್ದಾನೆ.

    ಗುರುಪತ್ವಂತ್ ಪನ್ನುನ್‌ನ ಹೊಸ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ನವೆಂಬರ್ 19 ರಂದು ನಿಮ್ಮ ಜೀವಕ್ಕೆ ಅಪಾಯವಿದೆ. ಏರ್ ಇಂಡಿಯಾ ವಿಮಾನಗಳಲ್ಲಿ ಸಿಖ್ ಸಮುದಾಯದ ಜನರು ಪ್ರಯಾಣಿಸಬೇಡಿ ಎಂದು ಎಚ್ಚರಿಕೆ ನೀಡಿದ್ದು, ಇದು ಏರ್ ಇಂಡಿಯಾ ವಿಮಾನಗಳ ಮೇಲೆ ದಾಳಿಯನ್ನು ಸೂಚಿಸುತ್ತದೆ.

    ವೈರಲ್ ಆಗಿರುವ ವೀಡಿಯೋದಲ್ಲಿ, ನಾವು ಸಿಖ್ ಜನರನ್ನು ನವೆಂಬರ್ 19 ರಂದು ಏರ್ ಇಂಡಿಯಾ ವಿಮಾನದ ಮೂಲಕ ಪ್ರಯಾಣಿಸಬೇಡಿ ಎಂದು ಕೇಳಿಕೊಳ್ಳುತ್ತೇವೆ. ಅಂದು ಜಾಗತಿಕ ದಿಗ್ಬಂಧನ ಇರುತ್ತದೆ. ನವೆಂಬರ್ 19 ರಂದು ಏರ್ ಇಂಡಿಯಾದಲ್ಲಿ ಪ್ರಯಾಣಿಸಬೇಡಿ, ಇಲ್ಲದಿದ್ದರೆ ನಿಮ್ಮ ಜೀವಕ್ಕೆ ಅಪಾಯವಿದೆ ಎಂದು ಖಲಿಸ್ತಾನಿ ಭಯೋತ್ಪಾದಕ ಹೇಳಿದ್ದಾನೆ. ಇದನ್ನೂ ಓದಿ: ಅರಣ್ಯ ಸಿಬ್ಬಂದಿ, ಬೇಟೆಗಾರರ ನಡುವೆ ಗುಂಡಿನ ಚಕಮಕಿ – ಓರ್ವ ಗುಂಡೇಟಿಗೆ ಬಲಿ

    ದೇಶವಿರೋಧಿ ಚಟುವಟಿಕೆಗಳಿಗಾಗಿ ಭಾರತದಲ್ಲಿ ಬೇಕಾಗಿರುವ ಗುರುಪತ್ವಂತ್ ಪನ್ನುನ್ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣವನ್ನು ನವೆಂಬರ್ 19 ರಂದು ಮುಚ್ಚಿ, ಅದರ ಹೆಸರನ್ನು ಬದಲಾಯಿಸುವುದಾಗಿ ಹೇಳಿದ್ದಾನೆ. ಐಸಿಸಿ ವಿಶ್ವಕಪ್ 2023 ರ ಅಂತಿಮ ಪಂದ್ಯವೂ ಕೂಡಾ ಅದೇ ದಿನ ನಡೆಯಲಿದೆ. ಅಂದೇ ದಾಳಿಯ ಕುರಿತು ಪನ್ನುನ್ ವೀಡಿಯೋದಲ್ಲಿ ಸೂಚಿಸಿ ಎಚ್ಚರಿಕೆ ನೀಡಿದ್ದಾನೆ.

    ತನ್ನ ವಿರುದ್ಧ ಎಲ್ಲಾ ಬಂಧನ ವಾರಂಟ್‌ಗಳ ಹೊರತಾಗಿಯೂ ಪನ್ನುನ್ ಖಲಿಸ್ತಾನಿ ಅಜೆಂಡಾವನ್ನು ಮುಂದುವರಿಸುತ್ತೇನೆ ಎಂದು ಹೇಳಿದ್ದಾನೆ. ನಾವು ಭಾರತದ ಆರ್ಥಿಕ ವ್ಯವಸ್ಥೆಯ ಬೆನ್ನೆಲುಬನ್ನು ಮುರಿಯಲಿದ್ದೇವೆ ಎಂದಿದ್ದು ಮಾತ್ರವಲ್ಲದೇ ವಿಶ್ವಕಪ್ 2023 ಅನ್ನು ‘ವಿಶ್ವ ಭಯೋತ್ಪಾದಕ ಕಪ್’ ಎಂದು ಕರೆದಿದ್ದಾನೆ. ಇದನ್ನೂ ಓದಿ: ದೇಶದಲ್ಲಿ ಫಸ್ಟ್‌ – ಶಂಕಿತ ಉಗ್ರರ ಕಾಲಿಗೆ ಜಿಪಿಎಸ್‌ ಬಳೆ

    ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ದಾಳಿ ನಡೆಸುವುದಾಗಿ ಭಯೋತ್ಪಾದಕ ಬೆದರಿಕೆ ಹಾಕಿದ್ದು, ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧದ ರೀತಿಯ ಪರಿಸ್ಥಿತಿ ಭಾರತದಲ್ಲೂ ಉಂಟಾಗಬಹುದು ಎಂದು ಹೇಳಿದ್ದ.

  • ಇಸ್ರೇಲ್‌ನಲ್ಲಿ ಹಮಾಸ್ ಉಗ್ರರ ದಾಳಿ – ಅ.14 ರವರೆಗೆ ಏರ್ ಇಂಡಿಯಾ ವಿಮಾನ ರದ್ದು

    ಇಸ್ರೇಲ್‌ನಲ್ಲಿ ಹಮಾಸ್ ಉಗ್ರರ ದಾಳಿ – ಅ.14 ರವರೆಗೆ ಏರ್ ಇಂಡಿಯಾ ವಿಮಾನ ರದ್ದು

    ಟೆಲ್ ಅವಿವ್: ಇಸ್ರೇಲ್‌ನಲ್ಲಿ (Israel) ಹಮಾಸ್ ಉಗ್ರರು (Hamas Militants) ದಾಳಿ ನಡೆಸಿರುವ ಹಿನ್ನೆಲೆ ಅಕ್ಟೋಬರ್ 14 ರವರೆಗೆ ಟೆಲ್ ಅವಿವ್‌ಗೆ (Tel Aviv) ಮತ್ತು ಅಲ್ಲಿಂದ ಹೊರಡುವ ವಿಮಾನವನ್ನು ರದ್ದುಗೊಳಿಸಿರುವುದಾಗಿ ಏರ್ ಇಂಡಿಯಾ (Air India) ಭಾನುವಾರ ತಿಳಿಸಿದೆ.

    ಶನಿವಾರ ಇಸ್ರೇಲ್‌ನಲ್ಲಿ ಹಮಾಸ್ ಉಗ್ರರು ದಾಳಿ ನಡೆಸಿದ್ದು, ಅನೇಕ ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆ ವಿಮಾನಯಾನವನ್ನು ರದ್ದುಗೊಳಿಸಲಾಗಿದೆ. ನಮ್ಮ ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಗಾಗಿ 2023ರ ಅಕ್ಟೋಬರ್ 14 ರವರೆಗೆ ಟೆಲ್ ಅವಿವ್‌ಗೆ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಏರ್‌ಲೈನ್ ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನನ್ನು ಸಾಯಿಸ್ಬೇಡಿ- ಬೇಡಿಕೊಂಡ್ರೂ ಬಿಡದೆ ಯುವತಿ ಅಪಹರಿಸಿದ ಹಮಾಸ್ ಉಗ್ರರು

    ಅಲ್ಲದೇ ಈ ಅವಧಿಯಲ್ಲಿ ಯಾವುದೇ ವಿಮಾನದಲ್ಲಿ ಬುಕ್ಕಿಂಗ್ ದೃಢಪಡಿಸಿದ ಪ್ರಯಾಣಿಕರಿಗೆ ಸಾಧ್ಯವಿರುವ ಎಲ್ಲಾ ಬೆಂಬಲವನ್ನು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹಮಾಸ್ ಉಗ್ರರಿಂದ ಮಗಳ ಬೆತ್ತಲೆ ಮೆರವಣಿಗೆ- ಸಾರ್ವಜನಿಕರಲ್ಲಿ ತಾಯಿ ಮನವಿ

    ಏರ್ ಇಂಡಿಯಾ ರಾಷ್ಟ್ರೀಯ ರಾಜಧಾನಿಯಿಂದ ಟೆಲ್ ಅವಿವ್‌ಗೆ ಸೋಮವಾರ, ಮಂಗಳವಾರ, ಗುರುವಾರ, ಶನಿವಾರ ಮತ್ತು ಭಾನುವಾರ ಸೇವೆಯನ್ನು ಒದಗಿಸುತ್ತದೆ. ಇದನ್ನೂ ಓದಿ: ತೆರೆದ ಟ್ರಕ್‌ನಲ್ಲಿ ಮಹಿಳೆಯ ಬೆತ್ತಲೆ ದೇಹ ಮೆರವಣಿಗೆ ಮಾಡಿದ ಹಮಾಸ್ ಉಗ್ರರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕತ್ತು ಸೀಳಿ ಗಗನಸಖಿ ಹತ್ಯೆಗೈದಿದ್ದ ಆರೋಪಿ – ಲಾಕಪ್‌ನಲ್ಲೇ ಪ್ಯಾಂಟ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಕತ್ತು ಸೀಳಿ ಗಗನಸಖಿ ಹತ್ಯೆಗೈದಿದ್ದ ಆರೋಪಿ – ಲಾಕಪ್‌ನಲ್ಲೇ ಪ್ಯಾಂಟ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಮುಂಬೈ: ತರಬೇತಿ ನಿರತ ಏರ್ ಇಂಡಿಯಾ ಗಗನಸಖಿ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ (Mumbai Murder Accused) ಅಂಧೇರಿ ಠಾಣೆಯ (Andheri Police Station) ಲಾಕಪ್‌ನಲ್ಲೇ ಪ್ಯಾಂಟ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮುಂಬೈನ ಮರೋಲ್ ಪ್ರದೇಶದಲ್ಲಿರುವ ಫ್ಲಾಟ್‌ನಲ್ಲಿ 23 ವರ್ಷದ ಗಗನಸಖಿಯ (Air Hostess) ಕತ್ತು ಸೀಳಿ ಕೊಂದಿದ್ದ ಆರೋಪಿ ವಿಕ್ರಮ್ ಅತ್ವಾಲ್ (40) ನನ್ನ ಬಂಧಿಸಲಾಗಿತ್ತು. ಇದನ್ನೂ ಓದಿ: G20 ಸಭೆ ದೆಹಲಿಯಲ್ಲಿ ಹೈ ಅಲರ್ಟ್ – ಆನ್‌ಲೈನ್ ಫುಡ್, ಅಮೆಜಾನ್, ಪ್ಲಿಪ್‌ಕಾರ್ಟ್ ಹೋಂ ಡೆಲಿವರಿ ಬಂದ್

    ಛತ್ತೀಸ್‌ಗಢ ಮೂಲದ ರೂಪಲ್ ಓಗ್ರೆ (Rupal Ogrey), ಏರ್ ಇಂಡಿಯಾದಲ್ಲಿ ತರಬೇತಿಗೆ ಆಯ್ಕೆಯಾಗಿದ್ದರು. ಈ ವರ್ಷದ ಏಪ್ರಿಲ್‌ನಲ್ಲಿ ಮುಂಬೈಗೆ ಸ್ಥಳಾಂತರಗೊಂಡಿದ್ದರು. ಕೆಲವು ದಿನಗಳ ಹಿಂದೆ ತವರು ಮನೆಗೆ ಹೋಗಿದ್ದ ತನ್ನ ಸಹೋದರಿ ಮತ್ತು ತನ್ನ ಗೆಳೆಯನೊಂದಿಗೆ ಅಂಧೇರಿಯ ಪ್ಲಶ್ ಹೌಸಿಂಗ್ ಸೊಸೈಟಿಯಲ್ಲಿ ತನ್ನ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದರು. ಗಗನಸಖಿ ಸಾವಿಗೆ ಸಂಬಂಧಿಸಿದಂತೆ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದ ವಿಕ್ರಮ್ ಅತ್ವಾಲ್‌ನನ್ನ ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದರು. ಇದನ್ನೂ ಓದಿ: Chandrayaan-3: ಚಂದ್ರನ ಮೇಲೆ ಮತ್ತೊಮ್ಮೆ ಸಾಫ್ಟ್ ಲ್ಯಾಂಡಿಂಗ್ ಮಾಡಿದ ವಿಕ್ರಮ್ – ಇಸ್ರೋದಿಂದ ವೀಡಿಯೋ ರಿಲೀಸ್‌

    ಮುಂಬೈನಲ್ಲಿರುವ ತನ್ನ ಫ್ಲಾಟ್‌ನಲ್ಲಿ ಗಗನಸಖಿ ಭಾನುವಾರ ರಾತ್ರಿ ಶವವಾಗಿ ಪತ್ತೆಯಾಗಿದ್ದಳು. ಕುಟುಂಬ ಸದಸ್ಯರ ಫೋನ್ ಕರೆಯನ್ನ ಆಕೆ ಸ್ವೀಕರಿಸದಿದ್ದಾಗ ಮುಂಬೈನಲ್ಲಿರುವ ಆಕೆಯ ಸ್ನೇಹಿತರಿಗೆ ಫೋನ್ ಮಾಡಿದ್ದಾರೆ. ಅವರು ಫ್ಲಾಟ್ ಗೆ ಬಂದು ನೋಡಿದಾಗ ಒಳಗಿನಿಂದ ಬೀಗ ಹಾಕಿರುವುದು ಕಂಡುಬಂದಿದೆ. ನಂತರ, ಅವರು ಪೊವೈ ಪೊಲೀಸರನ್ನ  (Powai Police) ಸಂಪರ್ಕಿಸಿದ್ದು, ಅವರ ಸಹಾಯದಿಂದ ನಕಲಿ ಕೀ ಬಳಸಿ ಫ್ಲಾಟ್ ಬಾಗಿಲು ತೆರೆದಾಗ ಮಹಿಳೆ ಕುತ್ತಿಗೆ ಸೀಳಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಆಕೆಯನ್ನು ರಾಜವಾಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದ್ರೆ ಅಲ್ಲಿ ದಾಖಲಿಸುವ ಮುನ್ನವೇ ಆಕೆ ಮೃತಪಟ್ಟಿದ್ದಳು ಎಂದು ಅವರು ತಿಳಿಸಿದ್ದಾರೆ.

    ಈ ಸಂಬಂಧ ಪೋವಾಯಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಒಬ್ಬ ವ್ಯಕ್ತಿಯನ್ನ ಬಂಧಿಸಿ ತನಿಖೆ ನಡೆಸುತ್ತಿದ್ದರು. ಪ್ರಕರಣದ ಆರೋಪಿ ವಿಕ್ರಮ್ ಅತ್ವಾಲ್‌ನ ಪತ್ನಿಯನ್ನೂ ವಿಚಾರಣೆ ನಡೆಸಲಾಗುತ್ತಿತ್ತು. ತನಿಖೆಯ ಸಮಯದಲ್ಲಿ ಮಹಿಳೆ ತನ್ನ ಸಹೋದರಿ, ತದನಂತರ ಗೆಳೆಯನೊಂದಿಗೆ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದದ್ದು ತಿಳಿದುಬಂದಿದೆ. ಆದರೆ ಇಬ್ಬರೂ ಎಂಟು ದಿನಗಳ ಹಿಂದೆ ತಮ್ಮ ಸ್ವಂತ ಸ್ಥಳಕ್ಕೆ ತೆರಳಿದ್ದರು. ಆದರೆ, ಇದೀಗ ಈ ಘಟನೆ ನಡೆದಿರುವುದಾಗಿ ಪೊಲೀಸರು ಹೇಳಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟೇಕಾಫ್ ಬಳಿಕ ರನ್ ವೇನಲ್ಲಿ ಟಯರ್ ಭಾಗಗಳು ಪತ್ತೆ – ದೆಹಲಿಗೆ ವಿಮಾನ ವಾಪಸ್

    ಟೇಕಾಫ್ ಬಳಿಕ ರನ್ ವೇನಲ್ಲಿ ಟಯರ್ ಭಾಗಗಳು ಪತ್ತೆ – ದೆಹಲಿಗೆ ವಿಮಾನ ವಾಪಸ್

    ನವದೆಹಲಿ: ವಿಮಾನ ಟೇಕಾಫ್ ಆದ ಬಳಿಕ ಅದರ ಟಯರ್‌ನ ಭಾಗಗಳು ರನ್‍ವೇಯಲ್ಲಿ ಪತ್ತೆಯಾದ ಘಟನೆ ದೆಹಲಿಯಲ್ಲಿ ನಡೆದಿದೆ. ಇದನ್ನೂ ಗಮನಿಸಿದ ವಿಮಾನ ನಿಲ್ದಾಣದ ಸಿಬ್ಬಂದಿ ಕೂಡಲೇ ಎಟಿಸಿಗೆ ಮಾಹಿತಿ ನೀಡಿದ್ದಾರೆ. ಬಳಿಕ ವಿಮಾನವನ್ನು ವಾಪಸ್ ಮರಳುವಂತೆ ಸೂಚನೆ

    ಏರ್ ಇಂಡಿಯಾ (Air India) ವಿಮಾನ (Flight) ದೆಹಲಿಯಿಂದ (Delhi) ಪ್ಯಾರಿಸ್‍ಗೆ (Paris) ತೆರಳುತ್ತಿತ್ತು. ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಟೈರ್‌ನ ಭಾಗಗಳು ರನ್ ವೇಯಲ್ಲಿ ಕಾಣಿಸಿದೆ. ಬಳಿಕ ದೆಹಲಿ ಏರ್ ಟ್ರಾಫಿಕ್ ಕಂಟ್ರೋಲ್ (ATC) ನೀಡಿದ ಮಾಹಿಯ ಆಧಾರದ ಮೇಲೆ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ. ಇದನ್ನೂ ಓದಿ: ಸಾಲ ಮಾಡಿ ಲಾಟರಿ ಟಿಕೆಟ್ ಖರೀದಿಸಿದ ಪೌರಕಾರ್ಮಿಕ ಮಹಿಳೆಯರಿಗೆ 10 ಕೋಟಿ ರೂ. ಬಂಪರ್

    ಪ್ರಯಾಣಿಕರಿಗೆ ಆದ ಅನಾನುಕೂಲತೆಗಾಗಿ ಏರ್ ಇಂಡಿಯಾ ವಿಷಾದ ವ್ಯಕ್ತಪಡಿಸಿದೆ. ಪ್ರಯಾಣಿಕರ ಸುರಕ್ಷತೆಗೆ ಏರ್ ಇಂಡಿಯಾ ಮೊದಲ ಆದ್ಯತೆ ನೀಡುತ್ತದೆ. ಇದಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಯಿತು ಎಂದು ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.

    ಈ ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುತ್ತದೆ. ಪ್ರಯಾಣಿಕರಿಗೆ ಯಾವುದೇ ಹಾನಿಯಾದ ವರದಿ ಆಗಿಲ್ಲ. ಪ್ರಯಾಣಿಕರನ್ನು ಪ್ಯಾರಿಸ್‍ಗೆ ಕಳುಹಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಪಘಾತವಾದ ಕಾರಿಗೆ ವಿದ್ಯುತ್ ಶಾಕ್ – ಸಹಾಯಕ್ಕೆ ಬಂದ ಇಬ್ಬರು ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಮಾನದಲ್ಲಿ ಮೂತ್ರ ವಿಸರ್ಜಿಸಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯ ಬಂಧನ

    ವಿಮಾನದಲ್ಲಿ ಮೂತ್ರ ವಿಸರ್ಜಿಸಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯ ಬಂಧನ

    ನವದೆಹಲಿ: ಇತ್ತೀಚೆಗೆ ವಿಮಾನದಲ್ಲಿ ಮೂತ್ರವಿಸರ್ಜನೆ ಮಾಡಿದ ಹಲವು ಪ್ರಕರಣಗಳು ನಡೆಯುತ್ತಿದ್ದು, ಇದೀಗ ವ್ಯಕ್ತಿಯೊಬ್ಬ ಇದೇ ರೀತಿ ದುವರ್ತನೆ ತೋರಿದ್ದಾನೆ.

    ಈ ಘಟನೆ ಮುಂಬೈ-ದೆಹಲಿ ನಡುವಿನ ಏರ್ ಇಂಡಿಯಾ (Air India Flight) ವಿಮಾನದಲ್ಲಿ ಜೂನ್ 24 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್‍ಸಿಂಗ್ (Ramsingh) ಎಂಬ ಪ್ರಯಾಣಿಕ ವಿಮಾನದಲ್ಲಿ ಈ ಕೃತ್ಯ ಎಸಗಿದ್ದಾನೆ. ಇದನ್ನೂ ಓದಿಗಡಿ ನುಸುಳಲು ಉಗ್ರರ ಸಂಚು – ಸೇನೆಯಿಂದ ಓರ್ವನ ಎನ್‍ಕೌಂಟರ್

    ಈತ ವಿಮಾನದೊಳಗೆ ಸೀಟ್ ಬಳಿಯೇ ಮೂತ್ರ (Urine) ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದಾನೆ. ಅಲ್ಲದೆ ಕ್ಯಾಬಿನ್ ಸಿಬ್ಬಂದಿಯ ಎಚ್ಚರಿಕೆ ನಡುವೆಯೂ ಉಗುಳಿ ಅಸಭ್ಯವಾಗಿ ವರ್ತಿಸಿದ್ದಾನೆ. ಸದ್ಯ ರಾಮ್‍ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಬಂಧಿಸಲಾಗಿದೆ. ಈ ಹಿಂದೆಯೂ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರು ಮೂತ್ರ ಮಾಡಿದ್ದ ಘಟನೆಗಳು ವರದಿಯಾಗಿದ್ದವು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಏರ್‌ಬಸ್‌ ಜೊತೆ ಬರೋಬ್ಬರಿ 500 ವಿಮಾನ ಖರೀದಿಗೆ ಡೀಲ್‌ – ವಿಶ್ವದಾಖಲೆ ಬರೆದ ಇಂಡಿಗೋ

    ಏರ್‌ಬಸ್‌ ಜೊತೆ ಬರೋಬ್ಬರಿ 500 ವಿಮಾನ ಖರೀದಿಗೆ ಡೀಲ್‌ – ವಿಶ್ವದಾಖಲೆ ಬರೆದ ಇಂಡಿಗೋ

    ಪ್ಯಾರಿಸ್‌: ಭಾರತದ ಕಂಪನಿ ನಿರ್ಮಿಸಿದ ವಿಶ್ವದಾಖಲೆಯನ್ನು ಭಾರತದ (India) ಕಂಪನಿ ಮುರಿಯವುದು ಬಹಳ ಅಪರೂಪ. ಈಗ ಇಂಡಿಗೋ ಕಂಪನಿ ಏರ್‌ ಇಂಡಿಯಾ (Air India) ನಿರ್ಮಿಸಿದ ದಾಖಲೆಯನ್ನು ಮುರಿಯುವ ಮೂಲಕ ಇತಿಹಾಸ ಸೃಷ್ಟಿಸಿದೆ.

    ಹೌದು. ಬಜೆಟ್‌ ಕ್ಯಾರಿಯರ್‌ ವಿಮಾನ ಕಂಪನಿ ಇಂಡಿಗೋ ಫ್ರಾನ್ಸಿನ ಏರ್‌ಬಸ್‌ (Airbus) ಕಂಪನಿಯ ಜೊತೆ 500 A320 ಮಾದರಿಯ ವಿಮಾನ ಖರೀದಿಗೆ ಒಪ್ಪಂದ ಮಾಡಿಕೊಂಡಿದೆ. ಈ ಮೂಲಕ ಅತಿ ಹೆಚ್ಚು ವಿಮಾನ ಖರೀದಿ ಒಪ್ಪಂದ ಮತ್ತು ಒಂದೇ ಕಂಪನಿಯ ಜೊತೆ ಅತಿ ಹೆಚ್ಚು ವಿಮಾನ ಖರೀದಿ ನಡೆಸುತ್ತಿರುವ ವಿಶ್ವದ ಮೊದಲ ಕಂಪನಿ ಎಂಬ ಹೆಗ್ಗಳಿಕೆಗೆ ಇಂಡಿಗೋ ಪಾತ್ರವಾಗಿದೆ.

    ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಏರ್‌ಶೋದ (Paris Air Show) ಮೊದಲ ದಿನವೇ ಏರ್‌ಬಸ್‌ ಕಂಪನಿ ಇಂಡಿಗೋ ಜೊತೆಗಿನ ವ್ಯವಹಾರದ ಡೀಲ್‌ ಘೋಷಣೆ ಮಾಡಿದೆ. ಇದನ್ನೂ ಓದಿ: ಅಲ್-ಹಕೀಮ್ ಮಸೀದಿಗೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ

    ಹಲವು ಸುತ್ತಿನ ಮಾತುಕತೆಯ ಬಳಿಕ ಎರಡೂ ಕಂಪನಿಗಳು ಒಪ್ಪಂದಕ್ಕೆ ಸಹಿ ಹಾಕಿವೆ. ಖರೀದಿ ಒಪ್ಪಂದದ ಮೊತ್ತ ಎಷ್ಟು ಎನ್ನುವುದು ಅಧಿಕೃತವಾಗಿ ತಿಳಿಸದೇ ಇದ್ದರೂ 55 ಶತಕೋಟಿ ಡಾಲರ್‌ ಡೀಲ್‌ ಎಂದು ವರದಿಯಾಗಿದೆ.

    ಈ ಐತಿಹಾಸಿಕ ಒಪ್ಪಂದಕ್ಕೆ ಇಂಡಿಗೋ ವ್ಯವಸ್ಥಾಪಕ ನಿರ್ದೇಶಕ ರಾಹುಲ್‌ ಭಾಟೀಯಾ ಮತ್ತು ಏರ್‌ಬಸ್‌ ಸಿಇಒ ಗುಯಿಲೌಮ್ ಫೌರಿ ಸಹಿ ಹಾಕಿದರು. ಇದನ್ನೂ ಓದಿ: ಏರ್‌ಬಸ್‌-ಬೋಯಿಂಗ್‌ ಜೊತೆ ಮೆಗಾ ಡೀಲ್‌: ವಿಶ್ವದಾಖಲೆ ನಿರ್ಮಿಸಿದ ಏರ್‌ ಇಂಡಿಯಾ

    2030 ಮತ್ತು 2035ರ ಸಮಯದಲ್ಲಿ ವಿಮಾನವನ್ನು ಏರ್‌ಬಸ್‌ ಕಂಪನಿ ಇಂಡಿಗೋಗೆ ವಿತರಣೆ ಮಾಡಲಿದೆ. ಇದು ಕೇವಲ ಪ್ರಾರಂಭ ಅಷ್ಟೇ. ಭಾರತ ಬೆಳವಣಿಗೆ ಮತ್ತು ಭಾರತೀಯ ವಾಯುಯಾನ ಮಾರುಕಟ್ಟೆಯ ಬೆಳವಣಿಗೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶವನ್ನು ನಮಗೆ ನೀಡಲು ಇದು ಸರಿಯಾದ ಸಮಯ ಎಂದು ಏರ್‌ಬಸ್‌ ತಿಳಿಸಿದೆ.

    2006 ರಿಂದ ಇಲ್ಲಿಯವರೆಗೆ ಏರ್‌ಬಸ್‌ ಕಂಪನಿ ಜೊತೆ ಒಟ್ಟು 1,330 ವಿಮಾನ ಖರೀದಿಗೆ ಇಂಡಿಗೋ ಆರ್ಡರ್‌ ನೀಡಿದೆ. ಈ ದಶಕದ ಅಂತ್ಯಕ್ಕೆ ವಿಮಾನಗಳು ವಿತರಣೆಯಾಗುವ ಸಾಧ್ಯತೆಯಿದೆ.

    ಈ ಫೆಬ್ರವರಿಯಲ್ಲಿ ಟಾಟಾ ಸನ್ಸ್ (Tata Sons) ಒಡೆತನದ ಏರ್ ಇಂಡಿಯಾ 470 ವಿಮಾನಗಳನ್ನು ಆರ್ಡರ್ ಮಾಡುವ ಮೂಲಕ ವಾಯುಯಾನ ಕ್ಷೇತ್ರದಲ್ಲಿ ದಾಖಲೆ ಬರೆದಿತ್ತು. ಇದು ಆಧುನಿಕ ವಿಮಾನಯಾನ ಕ್ಷೇತ್ರದಲ್ಲಿ ಏರ್‌ಲೈನ್ಸ್ ಕಂಪನಿಯೊಂದು ಮಾಡಿದ ಅತಿದೊಡ್ಡ ಆರ್ಡರ್‌ಗಳಲ್ಲಿ ಒಂದು ಎಂದು ಬಣ್ಣಿಸಲಾಗಿತ್ತು.

    ಫ್ರಾನ್ಸಿನ ಏರ್‌ಬಸ್‌ನಿಂದ 250 ಮತ್ತು ಅಮೆರಿಕದ ಬೋಯಿಂಗ್‌ನಿಂದ (Boeing) 220 ವಿಮಾನಗಳನ್ನು ಏರ್‌ ಇಂಡಿಯಾದಿಂದ ಖರೀದಿಸಲಿದೆ. ಒಟ್ಟು 420 ಸಣ್ಣ, ಮಧ್ಯಮ ಗಾತ್ರ ಮತ್ತು 40 ದೊಡ್ಡ ಗಾತ್ರದ ವಿಮಾನಗಳನ್ನು ಖರೀದಿಸಲು ಏರ್‌ ಇಂಡಿಯಾ (Air India) ಮುಂದಾಗಿದ್ದು, ಮುಂದಿನ ಏಳರಿಂದ ಎಂಟು ವರ್ಷಗಳಲ್ಲಿ ವಿಮಾನಗಳು ಏರ್‌ ಇಂಡಿಯಾವನ್ನು ಸೇರಲಿದೆ.

  • ದಿಲ್ಲಿಯಿಂದ ಸ್ಯಾನ್‌ ಫ್ರಾನ್ಸಿಸ್ಕೋಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರಷ್ಯಾದಲ್ಲಿ ತುರ್ತು ಭೂಸ್ಪರ್ಶ

    ದಿಲ್ಲಿಯಿಂದ ಸ್ಯಾನ್‌ ಫ್ರಾನ್ಸಿಸ್ಕೋಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರಷ್ಯಾದಲ್ಲಿ ತುರ್ತು ಭೂಸ್ಪರ್ಶ

    ಮಾಸ್ಕೋ: ದೆಹಲಿಯಿಂದ (New Delhi) ಸ್ಯಾನ್ ಫ್ರಾನ್ಸಿಸ್ಕೋಗೆ (San Francisco) ಹೊರಟಿದ್ದ ಏರ್ ಇಂಡಿಯಾ (Air India) ವಿಮಾನದ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ರಷ್ಯಾದ (Russia) ಮಗದನ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

    ಇಂಜಿನ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ 216 ಪ್ರಯಾಣಿಕರು ಮತ್ತು 16 ಸಿಬ್ಬಂದಿಯಿದ್ದ ವಿಮಾನವನ್ನು ರಷ್ಯಾದ ಮಗದನ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು ಎಂದು ಟಾಟಾ ಗ್ರೂಪ್ ಒಡೆತನದ ಖಾಸಗಿ ವಾಹಕ ಹೇಳಿಕೆಯಲ್ಲಿ ತಿಳಿಸಿದೆ. ಏರ್ ಇಂಡಿಯಾ ಪ್ರಯಾಣಿಕರನ್ನು ಸ್ಯಾನ್ ಫ್ರಾನ್ಸಿಸ್ಕೋಗೆ ಕರೆದೊಯ್ಯಲು ಮತ್ತೊಂದು ವಿಮಾನವು ಮುಂಬೈನಿಂದ ಮಧ್ಯಾಹ್ನ 1 ಗಂಟೆಗೆ ರಷ್ಯಾದ ಮಗದನ್‌ಗೆ ಹೊರಡಲಿದೆ ಎಂದು ಹೇಳಿದೆ. ಇದನ್ನೂ ಓದಿ: ಉಕ್ರೇನ್‌ನಲ್ಲಿ ಜಲಾಶಯ ಸ್ಫೋಟ – ಸಾವಿರಾರು ಮಂದಿ ಸ್ಥಳಾಂತರ

    ವಿಮಾನವನ್ನು ತಪಾಸಣೆಗೆ ಒಳಪಡಿಸಲಾಗಿದೆ. ಪ್ರಯಾಣಿಕರಿಗೆ ಅಗತ್ಯ ಸೌಲಭ್ಯ ಒದಗಿಸಲಾಗಿದೆ. ರಷ್ಯಾದ ಮಗದನ್ ವಿಮಾನ ನಿಲ್ದಾಣದಿಂದ ತನ್ನ ಪ್ರಯಾಣಿಕರನ್ನು ಕರೆದೊಯ್ಯಲು ಪರ್ಯಾಯ ವಿಮಾನ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲಿಯವರೆಗೆ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಮಗದನ್‌ನ ಸ್ಥಳೀಯ ಹೋಟೆಲ್‌ಗಳಲ್ಲಿ ವಸತಿ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದೆ.

    ಘಟನೆ ಕುರಿತು ಪ್ರತಿಕ್ರಿಯಿಸಿರುವ ಅಮೆರಿಕ, ಯುನೈಟೆಡ್ ಸ್ಟೇಟ್ಸ್ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಸ್ಟೇಟ್ ಡಿಪಾರ್ಟ್‌ಮೆಂಟ್ ಉಪ ವಕ್ತಾರ ವೇದಾಂತ್ ಪಟೇಲ್, ಯುಎಸ್‌ಗೆ ತೆರಳುವ ವಿಮಾನವು ರಷ್ಯಾದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಆ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    ಮಗದನ್‌ನಲ್ಲಿ ಸಿಲುಕಿರುವ ಪ್ರಯಾಣಿಕರ ಕುರಿತು ಅಸೋಸಿಯೇಟೆಡ್‌ ಪ್ರೆಸ್‌ ವರದಿ ಮಾಡಿದೆ. 16 ವರ್ಷದ ಗಿರ್ವಾನ್ ಕಾಹ್ಮಾ ತನ್ನ ಚಿಕ್ಕಪ್ಪ ಮತ್ತು ಸಹೋದರನೊಂದಿಗೆ ಈ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು. ಅವರು ಈಗ ಮಗದನ್‌ನಲ್ಲಿ ತಂಗಿರುವ ಹಾಸ್ಟೆಲ್‌ನಿಂದ ಹೊರಹೋಗುವುದನ್ನು ನಿರ್ಬಂಧಿಸಲಾಗಿದೆ. ಉಕ್ರೇನ್‌ ಮೇಲೆ ಯುದ್ಧ ನಡೆಸುತ್ತಿರುವ ರಷ್ಯಾಗೆ ನಿರ್ಬಂಧ ವಿಧಿಸಿರುವುದರಿಂದ ಅವರು ವಸ್ತುಗಳನ್ನು ಕೊಳ್ಳಲು ಕ್ರೆಡಿಟ್‌ ಕಾರ್ಡ್‌ ಬಳಸದಂತಾಗಿದೆ ಎಂದು ತಿಳಿಸಿದೆ.

  • ಕಾಕ್‍ಪಿಟ್‍ಗೆ ಸ್ನೇಹಿತೆ ಕರೆದೊಯ್ದ ಪೈಲೆಟ್ – ಏರ್ ಇಂಡಿಯಾ ಸಿಇಒಗೆ ಶೋಕಾಸ್ ನೋಟಿಸ್

    ಕಾಕ್‍ಪಿಟ್‍ಗೆ ಸ್ನೇಹಿತೆ ಕರೆದೊಯ್ದ ಪೈಲೆಟ್ – ಏರ್ ಇಂಡಿಯಾ ಸಿಇಒಗೆ ಶೋಕಾಸ್ ನೋಟಿಸ್

    ನವದೆಹಲಿ: ವಿಮಾನದ ಕಾಕ್‍ಪಿಟ್ (Cockpit) ಪ್ರವೇಶಿಸಲು ಸ್ನೇಹಿತೆಗೆ ಅನುಮತಿ ನೀಡಿದ್ದ ಪೈಲೆಟ್ ಲೋಪಕ್ಕಾಗಿ ಏರ್ ಇಂಡಿಯಾ (Air India) ಸಿಇಒ ಕ್ಯಾಂಪ್‍ಬೆಲ್ ವಿಲ್ಸನ್ ಹಾಗೂ ಭದ್ರತಾ ಮುಖ್ಯಸ್ಥ ಹೆನ್ರಿ ಡೊನೊಹೋ ಅವರಿಗೆ ಡಿಜಿಸಿಎ (DGCA) ಶೋಕಾಸ್ ನೋಟಿಸ್ ಜಾರಿ ಮಾಡಿದೆ.

    ಘಟನೆಯ ಕುರಿತು ಡಿಜಿಸಿಎಗೆ ಸಮಯೋಚಿತ ವರದಿ ಮಾಡದಿದ್ದಕ್ಕಾಗಿ ಏರ್ ಇಂಡಿಯಾ ಸಿಇಒ ಮತ್ತು ವಿಮಾನ ಸುರಕ್ಷತಾ ಮುಖ್ಯಸ್ಥರಿಗೆ ಏ.21 ರಂದು ಶೋಕಾಸ್ ನೋಟಿಸ್ ನೀಡಲಾಗಿತ್ತು. ಆದರೂ ಇಲ್ಲಿಯವರೆಗೂ ಏರ್ ಇಂಡಿಯಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಏರ್ ಇಂಡಿಯಾ ಸುರಕ್ಷತಾ ಸೂಚನೆಗಳನ್ನು ಉಲ್ಲಂಘಿಸಿದೆ ಎಂದು ಡಿಜಿಸಿಎಯ ಹಿರಿಯ ಅಧಿಕಾರಿ ಭಾನುವಾರ ತಿಳಿಸಿದ್ದಾರೆ. ಇದನ್ನೂ ಓದಿ: ಅಲ್‍ಖೈದಾ ಜೊತೆ ನಂಟು ಶಂಕೆ – ಶಂಕಿತ ಭಯೋತ್ಪಾದಕನ ಸೆರೆ

    ಘಟನೆಯ ತನಿಖೆಯಲ್ಲಿ ವಿಳಂಬವಾಗಿದೆ. ಶೋಕಾಸ್ ನೋಟಿಸ್‍ಗೆ ಉತ್ತರಿಸಲು ಇಬ್ಬರೂ ಕಾರ್ಯನಿರ್ವಾಹಕರಿಗೆ 15 ದಿನಗಳ ಕಾಲಾವಕಾಶ ನೀಡಲಾಗಿದೆ. ತನಿಖೆ ಪೂರ್ಣಗೊಳ್ಳುವವರೆಗೆ ದುಬೈ (Dubai), ದೆಹಲಿ (Delhi) ವಿಮಾನದ ಸಂಪೂರ್ಣ ಸಿಬ್ಬಂದಿಯನ್ನು ಡಿ ರೋಸ್ಟರ್ ಮಾಡುವಂತೆ ಡಿಜಿಸಿಎ ಏರ್ ಇಂಡಿಯಾಗೆ ನಿರ್ದೇಶನ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಫೆ.27 ರಂದು ದುಬೈ ಹಾಗೂ ದೆಹಲಿ ನಡವೆ ಸಂಚರಿಸುವ ವಿಮಾನದಲ್ಲಿ ಪೈಲಟ್ ಸ್ನೇಹಿತೆಗೆ ಕಾಕ್‍ಪಿಟ್ ಪ್ರವೇಶಕ್ಕೆ ಅನುಮತಿ ನೀಡಿ, ಒಳಗೆ ಬಿಟ್ಟಿದ್ದರು. ಈ ಬಗ್ಗೆ ವಿಮಾನದ ಕ್ಯಾಬಿನ್ ಸಿಬ್ಬಂದಿಯೊಬ್ಬರು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯಕ್ಕೆ (Directorate General of Civil Aviation) ದೂರು ಸಲ್ಲಿಸಿದ್ದರು. ಇದನ್ನೂ ಓದಿ: ದಾಂತೇವಾಡ ಸ್ಫೋಟ ಪ್ರಕರಣ- ಮಾಸ್ಟರ್‌ಮೈಂಡ್‌ ಫೋಟೋ ರಿಲೀಸ್