Tag: ಏರ್ ಇಂಡಿಯಾ

  • ಏರ್ ಇಂಡಿಯಾ ವಿಮಾನಕ್ಕೆ ಬಡಿದ ಪಕ್ಷಿ – ಕಣ್ಣೂರಿನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್

    ಏರ್ ಇಂಡಿಯಾ ವಿಮಾನಕ್ಕೆ ಬಡಿದ ಪಕ್ಷಿ – ಕಣ್ಣೂರಿನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್

    ತಿರುವನಂತಪುರಂ: 135 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ (Air India Flight) ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಹಕ್ಕಿಯೊಂದು (Bird) ಬಡಿದ ಹಿನ್ನೆಲೆ ತುರ್ತು ಭೂಸ್ಪರ್ಶ (Emergency Landing) ಮಾಡಿರುವ ಘಟನೆ ಕೇರಳದ (Kerala) ಕಣ್ಣೂರಿನಲ್ಲಿ (Kannur) ಸೋಮವಾರ ನಡೆದಿದೆ.

    ಕೋಝಿಕ್ಕೋಡ್‌ನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಅದಕ್ಕೆ ಹಕ್ಕಿಯೊಂದು ಬಡಿದಿದೆ. ವಿಮಾನದಲ್ಲಿ 135 ಪ್ರಯಾಣಿಕರಿದ್ದು, ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಏರ್ ಇಂಡಿಯಾದ ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಗಗನಸಖಿ ಮೇಲೆ ಒಂದು ತಿಂಗಳಿಂದ ಅತ್ಯಾಚಾರ

    ವಿಮಾನದಲ್ಲಿದ್ದ 135 ಪ್ರಯಾಣಿಕರಲ್ಲಿ 85 ಜನ ಕೋಝಿಕ್ಕೋಡ್ ಹಾಗೂ 50 ಮಂದಿ ಕಣ್ಣೂರಿನವರಾಗಿದ್ದಾರೆ. ಸದ್ಯ ಎಲ್ಲರೂ ಸುರಕ್ಷಿತರಾಗಿದ್ದಾರೆ. ವಿದೇಶಕ್ಕೆ ಹೋಗುವ ಪ್ರಯಾಣಿಕರಿಗೆ ಇತರ ವಿಮಾನಗಳಲ್ಲಿ ವ್ಯವಸ್ಥೆ ಮಾಡಲಾಗಿದ್ದು, ದೆಹಲಿಗೆ ಹೋಗುವ ಪ್ರಯಾಣಿಕರನ್ನು ಕಣ್ಣೂರಿನ ಹೋಟೆಲ್‌ಗಳಲ್ಲಿ ಇರಿಸಲಾಗಿದೆ. ಮಂಗಳವಾರ ಅವರಿಗೆ ಪ್ರತ್ಯೇಕ ವಿಮಾನದ ವ್ಯವಸ್ಥೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ದಸರಾ ವೇಳೆ RSS, BJP ನಾಯಕರ ಮೇಲೆ ದಾಳಿಗೆ PFI ಸಂಚು

    Live Tv
    [brid partner=56869869 player=32851 video=960834 autoplay=true]

  • ಏರ್ ಇಂಡಿಯಾದ 4,500 ಉದ್ಯೋಗಿಗಳು ಸ್ವಯಂ ನಿವೃತ್ತಿ – ಹೊಸ ವ್ಯವಸ್ಥೆಯೆಡೆಗೆ ಟಾಟಾ ಗ್ರೂಪ್

    ಏರ್ ಇಂಡಿಯಾದ 4,500 ಉದ್ಯೋಗಿಗಳು ಸ್ವಯಂ ನಿವೃತ್ತಿ – ಹೊಸ ವ್ಯವಸ್ಥೆಯೆಡೆಗೆ ಟಾಟಾ ಗ್ರೂಪ್

    ಮುಂಬೈ: ಟಾಟಾ ಗ್ರೂಪ್ ಏರ್ ಇಂಡಿಯಾವನ್ನು ಮರಳಿ ಸ್ವಾಧೀನಪಡಿಸುತ್ತಿದ್ದಂತೆಯೇ ತನ್ನ ಉದ್ಯೋಗಿಗಳಿಗೆ ಸ್ವಯಂ ನಿವೃತ್ತಿ ಯೋಜನೆ(ವಿಆರ್‌ಎಸ್)ಯನ್ನು ಪರಿಚಯಿಸಿದೆ. ಹೊಸ ಪ್ರತಿಭೆಗಳನ್ನು ಕಂಪನಿಗೆ ಆಹ್ವಾನಿಸುವ ಸಲುವಾಗಿ ಟಾಟಾ ಗ್ರೂಪ್ ಈ ಯೋಜನೆಯನ್ನು ಮಾಡಿದ್ದು, ಇದರ ಅಡಿಯಲ್ಲಿ 4,500 ಉದ್ಯೋಗಿಗಳು ನಿವೃತ್ತಿಯನ್ನು ಆಯ್ದುಕೊಂಡಿದ್ದಾರೆ ಎಂದು ವರದಿಯಾಗಿದೆ.

    ಕಂಪನಿ ಮೊದಲ ಬಾರಿಗೆ ಕ್ಯಾಬಿನ್ ಸಿಬ್ಬಂದಿ ಸೇರಿದಂತೆ ಕೆಲವು ಖಾಯಂ ಉದ್ಯೋಗಿಗಳಿಗೆ ಸ್ವಯಂ ನಿವೃತ್ತಿ ಯೋಜನೆಯನ್ನು ಹೊರತಂದಿದೆ. ವಿಆರ್‌ಎಸ್ ಮಾರ್ಗಸೂಚಿ ಪ್ರಕಾರ 55 ವರ್ಷ ಮೇಲ್ಪಟ್ಟ ಅಥವಾ 20 ವರ್ಷಗಳಿಂದ ಸೇವೆ ಸಲ್ಲಿಸಿದವರಿಗೆ ಮಾತ್ರವೇ ಈ ಯೋಜನೆ ಅನ್ವಯವಾಗುತ್ತದೆ. ಇದನ್ನೂ ಓದಿ: 5ಜಿ ನೆಟ್‌ ಭಾರತದಲ್ಲಿ ಬೆಲೆ ಎಷ್ಟಿರಬಹುದು?

    ಟಾಟಾ ಗ್ರೂಪ್ ಏರ್‌ಲೈನ್‌ನ ಕಾರ್ಯಾಚರಣೆಗೆ, ಸಂಸ್ಥೆಯ ಪರಿಷ್ಕರಣೆಗೆ, ಉತ್ಪಾದಕತೆಯನ್ನು ಸುಧಾರಿಸಲು ಹಾಗೂ ಹಳೆಯ ವ್ಯವಸ್ಥೆಗಳನ್ನು ತೆಗೆದು ಡಿಜಿಟಲೀಕರಣವಾಗಿ ಅಪ್‌ಡೇಟ್ ಮಾಡಲು ಹೊಸ ಉದ್ಯೋಗಿಗಳನ್ನು ನೇಮಿಸಿಕೊಳ್ಳುತ್ತಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಬಿಲ್‌ಗೇಟ್ಸ್ ಹಿಂದಿಕ್ಕಿ ವಿಶ್ವದ 4ನೇ ಶ್ರೀಮಂತ ವ್ಯಕ್ತಿಯಾದ ಗೌತಮ್ ಅದಾನಿ

    ಏರ್ ಇಂಡಿಯಾದಲ್ಲಿ 8,000 ಖಾಯಂ ಸಿಬ್ಬಂದಿ ಸೇರಿದಂತೆ ಒಟ್ಟು 12,000 ಉದ್ಯೋಗಿಗಳಿದ್ದಾರೆ. ಕಂಪನಿ ಹೊಸ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ದೇಶದ ಪ್ರಮುಖ ನಗರಗಳಲ್ಲಿ ನೇಮಕಾತಿ ಪ್ರಕಿಯೆ ನಡೆಸುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ದುಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ಏಕ್ಸ್‌ಪ್ರೆಸ್‍ನಲ್ಲಿ ಸುಟ್ಟ ವಾಸನೆ- ಮಸ್ಕತ್‍ಗೆ ಹೋದ ವಿಮಾನ

    ದುಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ಏಕ್ಸ್‌ಪ್ರೆಸ್‍ನಲ್ಲಿ ಸುಟ್ಟ ವಾಸನೆ- ಮಸ್ಕತ್‍ಗೆ ಹೋದ ವಿಮಾನ

    ನವದೆಹಲಿ: ಕ್ಯಾಲಿಕಟ್‍ನಿಂದ ದುಬೈಗೆ ಹೋಗುತ್ತಿದ್ದ ಏರ್ ಇಂಡಿಯಾ ಏಕ್ಸ್‌ಪ್ರೆಸ್ ವಿಮಾನವನ್ನು ತಾಂತ್ರಿಕ ದೋಷದಿಂದಾಗಿ ಮಸ್ಕತ್‍ಗೆ ತಿರುಗಿಸಲಾಗಿದೆ.

    ಕ್ರೂಸ್ ಸಮಯದಲ್ಲಿ ಫಾರ್ವರ್ಡ್ ಗ್ಯಾಲಿಯಲ್ಲಿ ಸುಟ್ಟಿರುವ ವಾಸನೆ ಬಂದ ಹಿನ್ನೆಲೆಯಲ್ಲಿ ವಿಮಾನವನ್ನು ಬೇರೆಡೆಗೆ ಸಾಗಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ. ಭಾರತಕ್ಕೆ ಮತ್ತು ಅಲ್ಲಿಂದ ಹೊರಡುವ ವಿಮಾನಗಳು ಎದುರಿಸುತ್ತಿರುವ ತಾಂತ್ರಿಕ ದೋಷದ ಅನೇಕ ಘಟನೆಗಳಲ್ಲಿ ಇದೂ ಒಂದಾಗಿದೆ.

    3 ವಿಮಾನಗಳು ತುರ್ತು ಭೂಸ್ಪರ್ಶ: ಕಳೆದ 24 ಗಂಟೆಗಳಲ್ಲಿ ಭಾರತದ ವಿವಿಧ ವಿಮಾನನಿಲ್ದಾಣಗಳಲ್ಲಿ ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆಗಳ 3 ವಿಮಾನಗಳು ತುರ್ತು ಭೂಸ್ಪರ್ಶ ಮಾಡಿವೆ. ಶುಕ್ರವಾರ ಮತ್ತು ಶನಿವಾರದಂದು ಕ್ಯಾಲಿಕಟ್, ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ ಈ ಲ್ಯಾಂಡಿಂಗ್‍ಗಳನ್ನು ಮಾಡಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯದ (ಡಿಜಿಸಿಎ) ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

    ವಿವಿಧ ತಾಂತ್ರಿಕ ಸಮಸ್ಯೆಗಳಿಂದಾಗಿ ಎಲ್ಲಾ ತುರ್ತು ಲ್ಯಾಂಡಿಂಗ್‍ಗಳಾಗಿವೆ. ಏರ್ ಅರೇಬಿಯಾ ವಿಮಾನವು ಶಾರ್ಜಾದಿಂದ ಕೊಚ್ಚಿನ್‍ಗೆ ಹೋಗುತ್ತಿತ್ತು. ಈ ಸಂದರ್ಭದಲ್ಲಿ ಹೈಡ್ರಾಲಿಕ್ ವೈಫಲ್ಯದಿಂದಾಗಿ ಕೊಲ್ಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು.

    ಇನ್ನೊಂದು ಘಟನೆಯಲ್ಲಿ, ನಿನ್ನೆ ಅಡಿಸ್ ಅಬಾಬಾದಿಂದ ಬ್ಯಾಂಕಾಕ್‍ಗೆ ತೆರಳುತ್ತಿದ್ದ ಇಥಿಯೋಪಿಯನ್ ಏರ್‌ ಲೈನ್ಸ್‌ನ ವಿಮಾನವು ಒತ್ತಡದ ಸಮಸ್ಯೆಯಿಂದಾಗಿ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತು. ಇದೇ ರೀತಿಯ ಮೂರನೇ ಘಟನೆಯಲ್ಲಿ, ಜುಲೈ 15ರಂದು, ಶ್ರೀಲಂಕನ್ ಏರ್‌ಲೈನ್ಸ್‌ನ ವಿಮಾನವು ಹೈಡ್ರಾಲಿಕ್ ಸಮಸ್ಯೆಯಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತು. ಇದನ್ನೂ ಓದಿ: ಹೈದರಾಬಾದ್‍ಗೆ ಬರುತ್ತಿದ್ದ ಇಂಡಿಗೋ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ

    ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಎಲ್ಲಾ ಘಟನೆಗಳ ಬಗ್ಗೆ ವಿವರವಾದ ತನಿಖೆಗೆ ಆದೇಶಿಸಿದೆ. ಇದನ್ನೂ ಓದಿ: ಸೇನಾ ಹೆಲಿಕಾಪ್ಟರ್‌ಗಳನ್ನು ಅಭಿವೃದ್ಧಿಪಡಿಸಲು ಖಾಸಗಿ ಕಂಪನಿಗಳಿಗೆ ರಕ್ಷಣಾ ಸಚಿವಾಲಯದಿಂದ ಅನುಮತಿ

    Live Tv
    [brid partner=56869869 player=32851 video=960834 autoplay=true]

  • ಇಂಡೀಗೋದ ನೂರಾರು ಸಿಬ್ಬಂದಿಗೆ ಒಂದೇ ದಿನ ಅನಾರೋಗ್ಯ – ತನಿಖೆಗೆ ಡಿಜಿಸಿಎ ಸೂಚನೆ

    ಇಂಡೀಗೋದ ನೂರಾರು ಸಿಬ್ಬಂದಿಗೆ ಒಂದೇ ದಿನ ಅನಾರೋಗ್ಯ – ತನಿಖೆಗೆ ಡಿಜಿಸಿಎ ಸೂಚನೆ

    ನವದೆಹಲಿ: ದೇಶದ ದೊಡ್ಡ ವಿಮಾನಯಾನ ಸಂಸ್ಥೆಯಲ್ಲಿ ಒಂದಾದ ಇಂಡಿಗೋದ ನೂರಾರು ಸಿಬ್ಬಂದಿಗಳ ರಜೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ಡಿಜಿಸಿಎ ಸೂಚಿಸಿದೆ.

    ಅಹಮದಾಬಾದ್‍ನ ಸರ್ದಾರ್ ವಲ್ಲಭಭಾಯಿ ಪಟೇಲ್ ಇಂಟರ್‌ನ್ಯಾಶನಲ್ (ಎಸ್‍ವಿಪಿಐ) ವಿಮಾನ ನಿಲ್ದಾಣದಿಂದ 8 ಇಂಡಿಗೋ ವಿಮಾನಗಳು ಭಾನುವಾರ ತಡವಾಗಿತ್ತು. ಈ ಬಗ್ಗೆ ಸಾಕಷ್ಟು ಸಂಖ್ಯೆಯ ಸಿಬ್ಬಂದಿಯ ಕೊರತೆಯಿಂದಾಗಿ ವಿಮಾನ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು. ಅಷ್ಟೇ ಅಲ್ಲದೇ ಕೋಲ್ಕತ್ತಾ, ನಾಗ್ಪುರ, ಚಂಡೀಗಢ, ದೆಹಲಿ ಮತ್ತು ಮುಂಬೈಗೆ ಇಂಡಿಗೋ 5 ವಿಮಾನಗಳನ್ನು ರದ್ದುಗೊಳಿಸಲಾಗಿತ್ತು.

    ಈ ಬಗ್ಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ), ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಈ ಹಿನ್ನೆಲೆಯಲ್ಲಿ ರಾಷ್ಟ್ರವ್ಯಾಪಿ ಸಂಭವಿಸಿದ ವಿಮಾನ ವಿಳಂಬಕ್ಕೆ ಸ್ಪಷ್ಟೀಕರಣವನ್ನು ಕೋರಲಾಗಿದೆ. ಹೆಚ್ಚಿನ ಇಂಡಿಗೋ ಉದ್ಯೋಗಿಗಳು ಸಾಮೂಹಿಕ ಅನಾರೋಗ್ಯ ರಜೆಯಲ್ಲಿದ್ದರು ಎಂದು ತಿಳಿದು ಬಂದಿದೆ ಎಂದು ತಿಳಿಸಿದೆ.

    ಇದರ ಪರಿಣಾಮವಾಗಿ ವಿಮಾನಯಾನವು ಕ್ಯಾಬಿನ್ ಸಿಬ್ಬಂದಿ ಸದಸ್ಯರ ಭಾರೀ ಕೊರತೆಯನ್ನು ಎದುರಿಸಿತು. ಹೀಗಾಗಿ ವಿಮಾನ ಚಲನೆಗೆ ಅಡ್ಡಿಯಾಯಿತು. ಈ ಹಿನ್ನೆಲೆಯಲ್ಲಿ ಇಂಡಿಗೋಗೆ ವಿಳಂಬದ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಆದರೆ ಈ ಬಗ್ಗೆ ಇಂಡಿಗೋ ಏರ್ ಇಂಡಿಯಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಮಹಾ ಬಿಕ್ಕಟ್ಟಿಗೆ ಇಂದು ಕ್ಲೈಮ್ಯಾಕ್ಸ್‌ – ಶಿಂಧೆಗೆ ಇಂದು ವಿಶ್ವಾಸ ಪರೀಕ್ಷೆ

    ಇಂಡಿಗೋದ ಶೇ.55ರಷ್ಟು ವಿಮಾನಗಳು ಜು. 2ರಂದು ವಿಳಂಬ ಸಂಚಾರ ಕೈಗೊಂಡಿತ್ತು. ಇದಕ್ಕೆ ಸಂಸ್ಥೆಯ ನೂರಾರು ಸಿಬ್ಬಂದಿ ದಿಢೀರನೆ ಅನಾರೋಗ್ಯ ಕಾರಣ ಹೇಳಿ ರಜೆ ತೆಗೆದುಕೊಂಡಿದ್ದರು. ಆದರೆ ಶನಿವಾರ ಮತ್ತು ಭಾನುವಾರ ಏರ್ ಇಂಡಿಯಾ ಹೊಸ ನೇಮಕಾತಿಗೆ ಪರೀಕ್ಷೆ ನಡೆದಿತ್ತು. ಅದರಲ್ಲಿ ಭಾಗಿಯಾಗುವ ಸಲುವಾಗಿ ಇಂಡಿಗೋ ಸಿಬ್ಬಂದಿಗಳೆಲ್ಲಾ ಅನಾರೋಗ್ಯದ ರಜೆ ಹಾಕಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ದ್ವೀಪರಾಷ್ಟ್ರದಲ್ಲಿ ಇಂಧನ ಬಿಕ್ಕಟ್ಟು- ಶಾಲೆಗಳಿಗೆ ರಜೆ ಘೋಷಣೆ

    Live Tv
    [brid partner=56869869 player=32851 video=960834 autoplay=true]

  • 16 ವರ್ಷದ ಬಳಿಕ 200 ಹೊಸ ವಿಮಾನ ಖರೀದಿಗೆ ಮುಂದಾದ ಏರ್ ಇಂಡಿಯಾ

    16 ವರ್ಷದ ಬಳಿಕ 200 ಹೊಸ ವಿಮಾನ ಖರೀದಿಗೆ ಮುಂದಾದ ಏರ್ ಇಂಡಿಯಾ

    ನವದೆಹಲಿ: ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ 200ಕ್ಕೂ ಹೆಚ್ಚು ಹೊಸ ವಿಮಾನಗಳನ್ನು ಖರೀದಿಸಲು ಮುಂದಾಗಿದೆ. ಅವುಗಳಲ್ಲಿ ಶೇ.70 ರಷ್ಟು ಸಣ್ಣ ದೇಹವುಳ್ಳ ವಿಮಾನಗಳನ್ನು ಖರೀದಿಸಲು ಯೋಜಿಸಿದೆ ಎಂದು ವರದಿಗಳು ತಿಳಿಸಿವೆ.

    ಏರ್‌ಬಸ್ ಎ350 ಅಗಲ ದೇಹದ ಏರ್‌ಕ್ರಾಫ್ಟ್ ಖರೀದಿಗೆ ಏರ್‌ಇಂಡಿಯಾ ಯೋಜನೆ ನಡೆಸಿದ್ದರೂ ಇಲ್ಲಿಯವರೆಗೆ ಖರೀದಿಸಲಾಗಿಲ್ಲ. ಇದೀಗ ಚಿಕ್ಕ ಗಾತ್ರದ ವಿಮಾನಗಳನ್ನು ಕೊಳ್ಳಲು ಏರ್ ಇಂಡಿಯಾ ವಿಮಾನ ತಯಾರಕರೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ತಿಳಿಸಿವೆ. ಇದನ್ನೂ ಓದಿ: ಮತದಾನಕ್ಕೆ ಅನುಮತಿ ನೀಡಿ- ಸುಪ್ರೀಂ ಮೊರೆ ಹೋದ ಮಲಿಕ್, ದೇಶಮುಖ್

    ಏರ್ ಇಂಡಿಯಾ 2006ರಲ್ಲಿ ಕೊನೆಯದಾಗಿ 111 ವಿಮಾನಗಳನ್ನು ಖರೀದಿಸಿತ್ತು. ಅಮೆರಿಕ ಮೂಲದ ಬೋಯಿಂಗ್ ಕಂಪನಿಯಿಂದ 86 ವಿಮಾನಗಳು ಹಾಗೂ ಏರ್‌ಬಸ್‌ನಿಂದ 43 ವಿಮಾನಗಳನ್ನು ಖರೀದಿಸಿತ್ತು. ಇದೀಗ 16 ವರ್ಷಗಳ ಬಳಿಕ ಮೊದಲ ಬಾರಿ ವಿಮಾನಗಳನ್ನು ಕೊಳ್ಳಲು ಮುಂದಾಗಿದೆ. ಇದನ್ನೂ ಓದಿ: ಮುಸ್ಲಿಂ ಹುಡುಗಿಯರು 16ನೇ ವಯಸ್ಸಿನಲ್ಲಿ ಮದುವೆಯಾಗಬಹುದು: ಹೈಕೋರ್ಟ್

    ಕಳೆದ ವರ್ಷ ಅಕ್ಟೋಬರ್ 8 ರಂದು ಏರ್‌ಲೈನ್ಸ್ ಬಿಡ್ ಅನ್ನು ಟಾಟಾ ಗ್ರೂಪ್ ಯಶಸ್ವಿಯಾಗಿ ಗೆದ್ದು, ಈ ವರ್ಷ ಜನವರಿ 27 ರಂದು ಏರ್ ಇಂಡಿಯಾವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿತು. ಇದೀಗ 200 ಹೊಸ ವಿಮಾನಗಳನ್ನು ಕೊಳ್ಳಲು ಮುಂದಾಗಿದ್ದು, ಅದರಲ್ಲಿ ಶೇ.70 ರಷ್ಟು ಚಿಕ್ಕ ವಿಮಾನಗಳು ಹಾಗೂ ಶೇ.30 ರಷ್ಟು ದೊಡ್ಡ ವಿಮಾನಗಳನ್ನು ಕೊಳ್ಳುವುದಾಗಿ ತಿಳಿಸಿದೆ.

    Live Tv

  • ಟಿಕೆಟ್ ಇದ್ದೂ ಪ್ರವೇಶ ನಿರಾಕರಿಸಿದ ಏರ್‌ಇಂಡಿಯಾಕ್ಕೆ 10 ಲಕ್ಷ ದಂಡ

    ಟಿಕೆಟ್ ಇದ್ದೂ ಪ್ರವೇಶ ನಿರಾಕರಿಸಿದ ಏರ್‌ಇಂಡಿಯಾಕ್ಕೆ 10 ಲಕ್ಷ ದಂಡ

    ನವದೆಹಲಿ: ಟಿಕೆಟ್ ಇದ್ದರೂ ಪ್ರಯಾಣಿಕರಿಗೆ ಬೋರ್ಡಿಂಗ್ ನಿರಾಕರಿಸಿದ್ದಕ್ಕಾಗಿ ಹಾಗೂ ಮಾರ್ಗಸೂಚಿ ಉಲ್ಲಂಘಿಸಿ ಪರಿಹಾರ ಕೊಡಲು ನಿರಾಕರಿಸಿದ್ದಕ್ಕಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯವು (DGCA) ಏರ್ ಇಂಡಿಯಾ ವಿಮಾನಯಾನ ಸಂಸ್ಥೆಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದೆ.

    ಬೆಂಗಳೂರು, ಹೈದರಾಬಾದ್ ಹಾಗೂ ದೆಹಲಿಯಲ್ಲಿ ನಮ್ಮ ಕಣ್ಗಾವಲು ಘಟಕವು ಪರಿಶೀಲನೆ ನಡೆಸಿದಾಗ, ಏರ್ ಇಂಡಿಯಾ ಸಂಸ್ಥೆ ಮಾರ್ಗಸೂಚಿ (ಪ್ರಯಾಣಿಕರಿಗೆ ಪರಿಹಾರ ನೀಡುವುದಕ್ಕೆ ಸಂಬಂಧಿಸಿದ್ದು) ಉಲ್ಲಂಘಿಸಿರುವುದು ಕಂಡುಬಂದಿದೆ. ಈ ಕುರಿತು ಶೋಕಾಸ್ ನೋಟಿಸ್ ನೀಡಿ ವಿಚಾರಣೆಯನ್ನೂ ನಡೆಸಲಾಗಿತ್ತು ಎಂದು ಡಿಜಿಸಿಎ ತಿಳಿಸಿದೆ. ಇದನ್ನೂ ಓದಿ: ಅಂದು ಜಯಾ ಜೈಲಿಗೆ, ಇಂದು ಸಂಕಷ್ಟದಲ್ಲಿ ಸೋನಿಯಾ, ರಾಹುಲ್‌ – ಇದು ಸ್ವಾಮಿ ದೂರಿನ ಕರಾಮತ್ತು

    ಈ ವಿಚಾರಕ್ಕೆ ಸಂಬಂಧಿಸಿ ಏರ್ ಇಂಡಿಯಾವು ನೀತಿ ಹೊಂದಿಲ್ಲದಿರಬಹುದು. ಹೀಗಾಗಿ ಪರಿಹಾರ ನೀಡದೇ ಇದ್ದಿರಬಹುದು. ಆದರೆ ಇದು ಗಂಭೀರ ಮತ್ತು ಸ್ವೀಕಾರಾರ್ಹವಲ್ಲದ ಪ್ರಕರಣ. ನಿರ್ದಿಷ್ಟ ಪ್ರಕರಣಗಳಲ್ಲಿ ಶೋಕಾಸ್ ನೋಟಿಸ್ ನೀಡಿ ವಿವರಣೆ ಕೋರಲಾಗಿದೆ. ಏರ್ ಇಂಡಿಯಾ ನೀಡಿರುವ ವಿವರಣೆಯನ್ನು ಪರಿಶೀಲಿಸಿದ ಬಳಿಕ 10 ಲಕ್ಷ ರೂ. ದಂಡ ವಿಧಿಸಲಾಗಿದೆ. ಅಲ್ಲದೆ, ಮುಂದಿನ ಕ್ರಮ ಕೈಗೊಳ್ಳುವುದಕ್ಕೂ ಮುನ್ನವೇ ಪ್ರಯಾಣಿಕರಿಗೆ ಪರಿಹಾರ ನೀಡುವಂತೆ ಡಿಜಿಸಿಎ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಯೋಗಿ ಆದಿತ್ಯನಾಥ್‌ ʼಸೂಪರ್‌ ಚೀಫ್‌ ಜಸ್ಟಿಸ್‌ʼನಂತೆ ವರ್ತಿಸುತ್ತಿದ್ದಾರೆ: ಓವೈಸಿ ಟೀಕೆ

    ಸಾಂದರ್ಭಿಕ ಚಿತ್ರ

    ಮೇ 7 ರಂದು ರಾಂಚಿ ವಿಮಾನ ನಿಲ್ದಾಣದಲ್ಲಿ ಅಂಗವಿಕಲ ಬಾಲಕನಿಗೆ ವಿಮಾನದಲ್ಲಿ ಪ್ರಯಾಣಿಸಲು ಅವಕಾಶ ನಿರಾಕರಿಸಿದ ಇಂಡಿಗೊ ಏರ್‌ಲೈನ್ಸ್ಗೆ ಡಿಜಿಸಿಎ 5 ಲಕ್ಷ ರೂ. ದಂಡ ವಿಧಿಸಿತ್ತು. ಈ ಘಟನೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಇದಾದ ಕೆಲ ದಿನಗಳ ನಂತರ ಏರ್‌ಇಂಡಿಯಾಗೆ 10 ಲಕ್ಷ ರೂ. ದಂಡ ವಿಧಿಸಿದೆ.

  • ರಷ್ಯಾ-ಉಕ್ರೇನ್ ಯುದ್ಧದ ಮಧ್ಯೆ ಹೆಚ್ಚಿದ ಬೆದರಿಕೆ – ಏರ್ ಇಂಡಿಯಾ ವಿಮಾನ ರದ್ದು

    ರಷ್ಯಾ-ಉಕ್ರೇನ್ ಯುದ್ಧದ ಮಧ್ಯೆ ಹೆಚ್ಚಿದ ಬೆದರಿಕೆ – ಏರ್ ಇಂಡಿಯಾ ವಿಮಾನ ರದ್ದು

    ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧದ ಮಧ್ಯೆ ಬೆದರಿಕೆಗಳು ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಭಾರತೀಯ ವಿಮಾನಯಾನ ಕಂಪನಿ ಏರ್ ಇಂಡಿಯಾ ತನ್ನ ದೆಹಲಿಯಿಂದ ಮಾಸ್ಕೋಗೆ ತೆರಳಬೇಕಿದ್ದ ವಿಮಾನವನ್ನು ರದ್ದುಗೊಳಿಸಿದೆ.

    ಉಕ್ರೇನ್-ರಷ್ಯಾ ಯುದ್ಧದ ಮಧ್ಯೆ ಭಾರತ ಬೆದರಿಕೆಗಳನ್ನು ಗ್ರಹಿಸಿದ್ದು, ದೆಹಲಿ-ಮಾಸ್ಕೋ ವಿಮಾನವನ್ನು ರದ್ದುಗೊಳಿಸಿದೆ. ಈಗಾಗಲೇ ವಿಮಾನದ ಟಿಕೇಟ್‌ಗಳನ್ನು ಖರೀದಿಸಿದ್ದ ಪ್ರಯಾಣಿಕರಿಗೆ ಏರ್ ಇಂಡಿಯಾ ಸಂಪೂರ್ಣ ಮರುಪಾವತಿ ಮಾಡುತ್ತದೆ ಎಂದು ಭರವಸೆ ನೀಡಿದೆ. ಇದನ್ನೂ ಓದಿ: ಬೆಳಗಾವಿ ಆರ್‌ಎಸ್‌ಎಸ್ ಕಚೇರಿಗೆ ಗೋವಾ ಸಿಎಂ ಭೇಟಿ – ಇನ್ನೊಮ್ಮೆ ಮೋದಿ ಪ್ರಧಾನಿ ಆಗ್ತಾರೆ ಎಂದ ಸಾವಂತ್

    ರಷ್ಯಾದ ರಾಯಭಾರ ಕಚೇರಿ ಈ ಬಗ್ಗೆ ಟೆಲಿಗ್ರಾಮ್ ಮೂಲಕ ಮಾಹಿತಿ ನೀಡಿದೆ. ಭಾರತೀಯ ವಿಮಾಮಯಾನ ಸಂಸ್ಥೆ ಏರ್ ಇಂಡಿಯಾ ದೆಹಲಿ-ಮಾಸ್ಕೋ ಮಾರ್ಗದಲ್ಲಿ ಪ್ರಯಾಣಿಸಬೇಕಿದ್ದ ವಿಮಾನವನ್ನು ಸದ್ಯ ಸ್ಥಗಿತಗೊಳಿಸಿದೆ. ಈಗಿನ ಪರಿಸ್ಥಿತಿಯಲ್ಲಿ ವಿಮಾನ ಪ್ರಯಾಣ ಪುನರಾರಂಭ ಅನಿಶ್ಚಿತವಾಗಿದೆ. ರದ್ದಾದ ವಿಮಾನ ಪ್ರಯಾಣಿಕರಿಗೆ ಏರ್ ಇಂಡಿಯಾ ಟಿಕೆಟ್‌ನ ಸಂಪೂರ್ಣ ಮರುಪಾವತಿ ಮಾಡುತ್ತದೆ ಎಂದು ತಿಳಿಸಿದೆ. ಇದನ್ನೂ ಓದಿ: ‘ಬಿಗ್ ಬ್ರದರ್’ ಎಂದು ಭಾರತ, ಮೋದಿಗೆ ಧನ್ಯವಾದ ಹೇಳಿದ ಲಂಕಾ ಕ್ರಿಕೆಟಿಗ ಜಯಸೂರ್ಯ

    ವಿಮಾನ ಹಾರಾಟ ಸ್ಥಗಿತವಾಗಿದ್ದರೂ ಸದ್ಯ ತಾಷ್ಕೆಂಟ್, ಇಸ್ತಾಂಬುಲ್, ದುಬೈ, ಅಬುಧಾಬಿ, ದೋಹಾ ಹಾಗೂ ಇತರ ಸ್ಥಳಗಳ ಮೂಲಕ ಸಾರಿಗೆ ಮಾರ್ಗಗಳನ್ನು ಬಳಸಿಕೊಂಡು ದೆಹಲಿಯಿಂದ ಮಾಸ್ಕೋಗೆ ಪ್ರಯಾಣಿಸಲು ಸಾಧ್ಯವಿದೆ ಎಂದು ರಷ್ಯಾದ ರಾಯಭಾರ ಕಚೇರಿ ತಿಳಿಸಿದೆ.

  • ಏರ್‌ ಇಂಡಿಯಾ ಅಧ್ಯಕ್ಷರಾಗಿ ಟಾಟಾ ಸನ್ಸ್‌ ಮುಖ್ಯಸ್ಥ ಎನ್.ಚಂದ್ರಶೇಖರನ್‌ ನೇಮಕ

    ಏರ್‌ ಇಂಡಿಯಾ ಅಧ್ಯಕ್ಷರಾಗಿ ಟಾಟಾ ಸನ್ಸ್‌ ಮುಖ್ಯಸ್ಥ ಎನ್.ಚಂದ್ರಶೇಖರನ್‌ ನೇಮಕ

    ನವದೆಹಲಿ: ಏರ್‌ ಇಂಡಿಯಾ (Air India) ಅಧ್ಯಕ್ಷರಾಗಿ ಟಾಟಾ ಸನ್ಸ್‌ ಗ್ರೂಪ್‌ನ (Tata Group) ಮುಖ್ಯಸ್ಥ ನಟರಾಜನ್‌ ಚಂದ್ರಶೇಖರನ್‌ ಅವರನ್ನು ಆಯ್ಕೆ ಮಾಡಲಾಗಿದೆ.

    ಟಾಟಾ ಗ್ರೂಪ್, ಟರ್ಕಿಯ ಇಲ್ಕರ್ ಐಸಿ ಅವರನ್ನು ಏರ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಎಂದು ತಿಂಗಳ ಆರಂಭದಲ್ಲಿ ಘೋಷಿಸಿತ್ತು. ಆದರೆ ಆ ನೇಮಕಾತಿಯು ಭಾರತದಲ್ಲಿ ಸಾಕಷ್ಟು ವಿರೋಧವನ್ನು ಎದುರಿಸಿತು. ಬಳಿಕ ಟರ್ಕಿಯ ಇಲ್ಕರ್ ಐಸಿ ಅವರು ಟಾಟಾದ ಏರ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕರಾಗಲು ನಿರಾಕರಿಸಿದ್ದರು. ಇದನ್ನೂ ಓದಿ: ಟಾಟಾ ಸಂಸ್ಥೆಗೆ ಏರ್‌ ಇಂಡಿಯಾ ಅಧಿಕೃತ ಹಸ್ತಾಂತರ

    ಚಂದ್ರಶೇಖರನ್ ಅವರು ಟಾಟಾ ಸನ್ಸ್‌ನ ಮುಖ್ಯಸ್ಥರಾಗಿದ್ದಾರೆ. ಹಿಡುವಳಿ ಕಂಪನಿ ಮತ್ತು 100 ಕ್ಕೂ ಹೆಚ್ಚು ಟಾಟಾ ಆಪರೇಟಿಂಗ್ ಕಂಪನಿಗಳ ಪ್ರವರ್ತಕರಾಗಿದ್ದಾರೆ. ಅವರು ಅಕ್ಟೋಬರ್ 2016 ರಲ್ಲಿ ಟಾಟಾ ಸನ್ಸ್ ಮಂಡಳಿಗೆ ಸೇರಿದರು. ಜನವರಿ 2017 ರಲ್ಲಿ ಮುಖ್ಯಸ್ಥರಾಗಿ ನೇಮಕಗೊಂಡರು.

    ಚಂದ್ರಶೇಖರನ್‌ ಅವರು ಟಾಟಾ ಸ್ಟೀಲ್, ಟಾಟಾ ಮೋಟಾರ್ಸ್, ಟಾಟಾ ಪವರ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಸೇರಿದಂತೆ ಹಲವಾರು ಗ್ರೂಪ್ ಆಪರೇಟಿಂಗ್ ಕಂಪನಿಗಳ ಮಂಡಳಿಗಳಿಗೆ ಅಧ್ಯಕ್ಷರಾಗಿದ್ದಾರೆ. ಅವರು 2009-17 ರಿಂದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದರು. ಇದನ್ನೂ ಓದಿ: ಮತ್ತೆ ʼಮಹಾರಾಜʼನಾದ ಟಾಟಾ – Welcome Back ಏರ್‌ ಇಂಡಿಯಾ ಎಂದ ರತನ್‌ ಟಾಟಾ

    ಚಂದ್ರಶೇಖರನ್ ಅವರು ಟಾಟಾ ಗ್ರೂಪ್‌ನ ಮುಖ್ಯಸ್ಥರಾದ ಮೊದಲ ಪಾರ್ಸಿಯೇತರ ಮತ್ತು ವೃತ್ತಿಪರ ಕಾರ್ಯನಿರ್ವಾಹಕರಾಗಿದ್ದರು.

  • ಏರ್ ಇಂಡಿಯಾ ಸಿಇಒ ಹುದ್ದೆ ನಿರಾಕರಿಸಿದ ಟರ್ಕಿಶ್ ಏರ್‌ಲೈನ್ಸ್‌ ಮಾಜಿ ಅಧ್ಯಕ್ಷ

    ನವದೆಹಲಿ: ಏರ್ ಇಂಡಿಯಾ ತನ್ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ(ಸಿಇಒ) ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಲು ಟರ್ಕಿಶ್ ಏರ್‍ಲೈನ್ಸ್‍ನ ಮಾಜಿ ಅಧ್ಯಕ್ಷ ಇಲ್ಕರ್ ಐಸಿ ಅವರಿಗೆ ಅವಕಾಶ ನೀಡಿತ್ತು. ಆದರೆ ಟಾಟಾ ಗ್ರೂಪ್‍ನ ಪ್ರಸ್ತಾಪವನ್ನು ಐಸಿ ನಿರಾಕರಿಸಿದ್ದಾರೆ.

    ಫೆಬ್ರವರಿ 14ರಂದು ಟಾಟಾ ಸನ್ಸ್ ಇಲ್ಕರ್ ಐಸಿ ಅವರನ್ನು ಏರ್ ಇಂಡಿಯಾದ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸುವುದಾಗಿ ಘೋಷಿಸಿತ್ತು. ಆದರೆ ಈ ಅವಕಾಶವನ್ನು ಐಸಿ ನಿರಾಕರಿಸಿದ್ದಾರೆ ಎಂದು ಏರ್ ಇಂಡಿಯಾ ಮಂಗಳವಾರ ತಿಳಿಸಿದೆ. ಇದನ್ನೂ ಓದಿ: Microsoft ಸಿಇಒ ಸತ್ಯ ನಾಡೆಲ್ಲಾ ಪುತ್ರ ನಿಧನ!

    ರಾಷ್ಟ್ರೀಯ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಏರ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ವ್ಯವಸ್ಥಾಪಕ ನಿರ್ದೇಶಕನಾಗಿ ಇಲ್ಕರ್ ಐಸಿ ಅವರನ್ನು ನೇಮಕ ಮಾಡಲು ಸರ್ಕಾರ ಅನುಮತಿ ನೀಡಬಾರದು ಎಂದು ಆರ್‍ಎಸ್‍ಎಸ್ ಅಂಗಸಂಸ್ಥೆ ಸ್ವದೇಶಿ ಜಾಗರಣಾ ವೇದಿಕೆ ಕಳೆದ ಶುಕ್ರವಾರ ಹೇಳಿತ್ತು. ಇದನ್ನೂ ಓದಿ: ಖಾರ್ಕಿವ್‍ನ ಆಡಳಿತ ಕಚೇರಿ ಮೇಲೆ ಬಾಂಬ್ ದಾಳಿ- ಕಟ್ಟಡ ಸಂಪೂರ್ಣ ಧ್ವಂಸ

    ಇದೀಗ ಟಾಟಾ ಸನ್ಸ್‍ನಿಂದ ನೇಮಕಗೊಂಡ ಕೇವಲ 2 ವಾರಗಳ ಬಳಿಕ ಐಸಿ ಏರ್ ಇಂಡಿಯಾದ ಸಿಇಒ ಹುದ್ದೆಯನ್ನು ನಿರಾಕರಿಸಿದ್ದಾರೆ.

  • ಉಕ್ರೇನ್‍ನಿಂದ ಭಾರತೀಯರನ್ನು ಕರೆತರಲು ರೊಮೇನಿಯಾಗೆ ವಿಮಾನ – ಏರ್ ಇಂಡಿಯಾ ಯೋಜನೆ

    ಉಕ್ರೇನ್‍ನಿಂದ ಭಾರತೀಯರನ್ನು ಕರೆತರಲು ರೊಮೇನಿಯಾಗೆ ವಿಮಾನ – ಏರ್ ಇಂಡಿಯಾ ಯೋಜನೆ

    ನವದೆಹಲಿ: ರಷ್ಯಾದ ಮಿಲಿಟರಿ ದಾಳಿಯಿಂದಾಗಿ ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಏರ್ ಇಂಡಿಯಾ ಶುಕ್ರವಾರ ರೋಮೇನಿಯಾ ರಾಜಧಾನಿ ಬುಕಾರೆಸ್ಟ್‍ಗೆ 2 ವಿಮಾನಗಳನ್ನು ಕಳುಹಿಸಲು ಯೋಜಿಸಿದೆ.

    ಉಕ್ರೇನ್‍ನ ವಾಯುಪ್ರದೇಶವನ್ನು ಗುರುವಾರ ಮುಚ್ಚಲಾಗಿದೆ. ಹೀಗಾಗಿ ಉಕ್ರೇನ್‍ನಲ್ಲಿ ಭಾರತಿಯ ಪ್ರಯಾಣಿಕರು ಮಾತ್ರವಲ್ಲದೇ ಇತರ ದೇಶದ ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ. ಇದನ್ನೂ ಓದಿ: ನಾವು ಮಾತುಕತೆಗೆ ಸಿದ್ಧರಿದ್ದೇವೆ ಎಂದ ರಷ್ಯಾ!

    ಪ್ರಯಾಣಿಕರು ರಸ್ತೆಯ ಮೂಲಕ ಉಕ್ರೇನ್-ರೊಮೇನಿಯಾ ಗಡಿ ತಲುಪಿದರೆ, ಅಲ್ಲಿಂದ ಭಾರತ ಸರ್ಕಾರ ಅಧಿಕಾರಿಗಳು ಅವರನ್ನು ಬುಕಾರೆಸ್ಟ್‍ಗೆ ಕರೆದೊಯ್ಯಲಿದ್ದಾರೆ. ಬಳಿಕ ವಿಮಾನದ ಮೂಲಕ ಭಾರತಕ್ಕೆ ಹಿಂದಿರುಗಿಸುವಂತೆ ಏರ್ ಇಂಡಿಯಾ ಯೋಜಿಸಿದೆ. ಶನಿವಾರ 2 ಏರ್ ಇಂಡಿಯಾ ವಿಮಾನಗಳು ಬುಕಾರೆಸ್ಟ್‍ನಿಂದ ಹೊರಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಮಾರು 20 ಸಾವಿರ ಭಾರತೀಯರು ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿಗಳು ಉಕ್ರೇನ್‍ನಲ್ಲಿ ಸಿಲುಕಿಕೊಂಡಿದ್ದಾರೆ.

    ಉಕ್ರೇನ್ ರಾಜಧಾನಿ ಕೀವ್‍ನಿಂದ ರೊಮೇನಿಯಾ ಗಡಿಗೆ ಸುಮಾರು 600 ಕಿ.ಮೀ ದೂರ ಇದೆ. ರಸ್ತೆ ಮಾರ್ಗವಾಗಿ ಕೀವ್‍ನಿಂದ ರೊಮೇನಿಯಾ ಗಡಿ ತಲುಪಲು 8 ರಿಂದ 11 ಗಂಟೆ ತಗುಲಬಹುದು. ಉಕ್ರೇನ್-ರೊಮೇನಿಯಾ ಗಡಿಯಿಂದ ಬುಕಾರೆಸ್ಟ್ 500 ಕಿ.ಮೀ ಅಂತರದಲ್ಲಿದೆ. ಇದರ ಪ್ರಯಾಣಕ್ಕೆ ಸುಮಾರು 7 ರಿಂದ 9 ಗಂಟೆ ತಗುಲಬಹುದು. ಇದನ್ನೂ ಓದಿ: Russia-Ukraine War: ಉಕ್ರೇನ್ ಯೂನಿಫಾರ್ಮ್ ಧರಿಸಿ ರಷ್ಯಾ ಸೈನಿಕರ ಎಂಟ್ರಿ – ಸಿಕ್ಕ ಸಿಕ್ಕಲ್ಲಿ ರಕ್ತಪಾತ

    ಈಗಾಗಲೇ ಉಕ್ರೇನ್‍ನಲ್ಲಿ ರಷ್ಯಾ ಬಾಂಬುಗಳ ಸುರಿಮಳೆ ಹರಿಸಿದ್ದು, ನೂರಾರು ಸೈನಿಕರು ಸಾವನ್ನಪ್ಪಿದ್ದಾರೆ. ಹಲವು ದೇಶಗಳು ರಷ್ಯಾಗೆ ಯುದ್ಧ ನಿಲ್ಲಿಸುವಂತೆ ಮನವಿ ಮಾಡಿದ್ದರೂ ದಾಳಿ ನಿಲ್ಲುವಂತೆ ಕಾಣಿಸುತ್ತಿಲ್ಲ.