Tag: ಏರ್‌ ಪಿಸ್ತೂಲ್‌

  • ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮನು ಭಾಕರ್‌ಗೆ ಮೋದಿ ಕರೆ – ಗಣ್ಯರಿಂದ ಅಭಿನಂದನೆಗಳ ಮಹಾಪೂರ

    ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮನು ಭಾಕರ್‌ಗೆ ಮೋದಿ ಕರೆ – ಗಣ್ಯರಿಂದ ಅಭಿನಂದನೆಗಳ ಮಹಾಪೂರ

    – ಭಗವದ್ಗೀತೆ ಓದಿದ್ದು, ಪದಕ ಗೆಲ್ಲಲು ನೆರವಾಯ್ತು: ಮನು
    – ಮೊದಲ ಪದಕದ ಗೆಲುವನ್ನು ದೇಶಕ್ಕೆ ಅರ್ಪಿಸಿದ ಶೂಟರ್‌

    ಪ್ಯಾರಿಸ್‌: 2024ರ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಭಾರತಕ್ಕಾಗಿ ಮೊದಲ ಪದಕ ತಂದುಕೊಟ್ಟ ಮಹಿಳಾ ಶೂಟರ್‌ ಮನು ಭಾಕರ್‌ಗೆ (Manu Bhaker) ಪ್ರಧಾನಿ ಮೋದಿ (Narendra Modi) ಅವರು ಖುದ್ದು ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೇ ಇದು, ಐತಿಹಾಸಿಕ ಪದಕವಾಗಿದೆ. 2024ರ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ (Paris Olympics 2024) ಮೊದಲ, ಕಂಚಿನ ಪದಕ ಗೆದ್ದಿದ್ದಕ್ಕಾಗಿ ಅಭಿನಂದನೆಗಳು. ಇದು ನಂಬಲಸಾಧ್ಯವಾದ ಸಾಧನೆ ಎಂದೂ ಎಕ್ಸ್‌ ಖಾತೆಯಲ್ಲಿ ಶ್ಲಾಘಿಸಿದ್ದಾರೆ.

    ಅಷ್ಟೇ ಅಲ್ಲದೇ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ, ಕೇಂದ್ರ ಸಚಿವರಾದ ಅಮಿತ್‌ ಶಾ, ಕಿರಣ್‌ ರಿಜಿಜು, ಟೀಂ ಇಂಡಿಯಾ ಮುಖ್ಯಕೋಚ್‌ ಗೌತಮ್‌ ಗಂಭೀರ್‌, ಮಾಜಿ ಕ್ರಿಕೆಟಿಗರಾದ ಸಚಿನ್‌ ತೆಂಡೂಲ್ಕರ್‌, ಮಿತಾಲಿ ರಾಜ್‌, ವೀರೇಂದ್ರ ಸೆಹ್ವಾಗ್‌, ಪಂಜಾಬ್‌ ಸಿಎಂ ಭಗವಂತ್‌ ಮಾನ್‌, ಉದ್ಯಮಿ ಆನಂದ್‌ ಮಹಿಂದ್ರಾ, ಬಾಲಿವುಡ್‌ ನಟ ಸುನೀಲ್‌ ಶೆಟ್ಟಿ ಸೇರಿದಂತೆ ಅನೇಕ ಗಣ್ಯಾತಿಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

    ಈ ಹಿಂದೆ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಮನು ಭಾಕರ್‌ ಅವರಿಗೆ ಸ್ಪರ್ಧೆಯ ವೇಳೆ ಪಿಸ್ತೂಲ್ ಕೈಕೊಟ್ಟಿದ್ದ ಪರಿಣಾಮ 12ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು. ಪ್ರಸಕ್ತ ಟೂರ್ನಿಯಲ್ಲಿ ಫೈನಲ್‌ ತಲುಪುವ ಮೂಲಕ ವಿಶೇಷ ಸಾಧನೆ ಮಾಡಿದ್ದ ಮನು ಭಾಕರ್‌ ಭಾನುವಾರ ಪದಕ ಗೆದ್ದುಕೊಂಡಿದ್ದಾರೆ.

    ಭಾನುವಾರ ನಡೆದ ಮಹಿಳೆಯರ ಏರ್‌ಪಿಸ್ತೂಲ್‌ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ದಕ್ಷಿಣ ಕೊರಿಯಾದ ಓಹ್ ಯೇ ಜಿನ್ 243.2, ಕಿಮ್‌ ಯೇಜಿ 241.3 ಅಂಕ ಪಡೆದರೆ, 22 ಶಾಟ್‌ ಗಳ ಬಳಿಕ ಮನು ಭಾಕರ್‌ 221.7 ಅಂಕ ಪಡೆದು ಮೂರನೇ ಸ್ಥಾನ ಪಡೆದರು. ಇದರೊಂದಿಗೆ ಶೂಟಿಂಗ್‌ ವಿಭಾಗದಲ್ಲಿ 12 ವರ್ಷಗಳ ಒಲಿಂಪಿಕ್ಸ್‌ ಪದಕದ ಬರವನ್ನು ನೀಗಿಸಿದರು. ಸದ್ಯ ಒಂದು ಕಂಚಿನ ಪದಕದೊಂದಿಗೆ ಪದಕ ಪಟ್ಟಿಯಲ್ಲಿ ಭಾರತ 17ನೇ ಸ್ಥಾನದಲ್ಲಿದೆ.

    ಮನು ಭಾಕರ್‌ ಫಸ್ಟ್‌ ರಿಯಾಕ್ಷನ್‌ ಏನು?
    ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಜಯಿಸಿದ ಬಳಿಕ ಮಾತನಾಡಿದ ಮನು ಭಾಕರ್, ನಾನು ಭಗವದ್ಗೀತೆ ಓದಿದ್ದು, ಪದಕ ಗೆಲ್ಲಲು ನೆರವಾಯಿತು ಎಂದು ಹೇಳಿದ್ದಾರೆ. ನಾನು ಸಾಕಷ್ಟು ಬಾರಿ ಭಗವದ್ಗೀತೆ ಓದಿದ್ದೇನೆ. ಅದರಲ್ಲಿ ಭಗವಂತ ಶ್ರೀಕೃಷ್ಣನು, ನಿನ್ನ ಕೆಲಸವನ್ನು ನೀನು ಮಾಡು, ಅದರಿಂದ ಬರುವ ಫಲಿತಾಂಶದ ಬಗ್ಗೆ ಆಲೋಚಿಸಬೇಡʼ ಎನ್ನುವ ಮಾತು ನನಗೆ ಸ್ಫೂರ್ತಿಯಾಯಿತು ಎಂದು ಭಾಕರ್‌ ಹೇಳಿದ್ದಾರೆ.

    ಅಲ್ಲದೇ ಈ ಪದಕದ ಗೆಲುವು ನನಗಷ್ಟೇ ಅಲ್ಲ ನನ್ನನ್ನು ಬೆಂಬಲಿಸಿದ ಪ್ರತಿಯೊಬ್ಬರ ಕನಸು ನನಸಾಗಿದೆ. ಎನ್‌ಆರ್‌ಎಐ, ಎಸ್‌ಎಐ, ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ, ತರಬೇತುದಾರ ಜಸ್ಪಾಲ್ ರಾಣಾ ಸರ್, ಹರಿಯಾಣ ಸರ್ಕಾರ ಎಲ್ಲರಿಗೂ ನಾನು ತುಂಬಾ ಕೃತಜ್ಞಳಾಗಿದ್ದೇನೆ. ಅವರ ಅಸಾಧಾರಣ ಬೆಂಬಲ ಮತ್ತು ಪ್ರೀತಿಗಾಗಿ ನನಗಿಂದು ಗೆಲುವು ಸಿಕ್ಕಿದೆ. ಈ ವಿಜಯವನ್ನು ನನ್ನ ದೇಶಕ್ಕೆ ಅರ್ಪಿಸುತ್ತೇನೆ ಎಂದು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

  • Paris Olympics 2024: ಭಾರತಕ್ಕೆ ಮೊದಲ ಪದಕ – ಐತಿಹಾಸಿಕ ಗೆಲುವಿನೊಂದಿಗೆ ಕಂಚು ಗೆದ್ದ ಮನು ಭಾಕರ್‌

    Paris Olympics 2024: ಭಾರತಕ್ಕೆ ಮೊದಲ ಪದಕ – ಐತಿಹಾಸಿಕ ಗೆಲುವಿನೊಂದಿಗೆ ಕಂಚು ಗೆದ್ದ ಮನು ಭಾಕರ್‌

    ಪ್ಯಾರಿಸ್‌: 2024ರ ಪ್ಯಾರಿಸ್‌ ಒಲಿಂಪಿಕ್ಸ್‌ (Paris Olympics 2024) ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಆರಂಭವಾಗಿದೆ. 10 ಮೀಟರ್‌ ಏರ್‌ ಪಿಸ್ತೂಲ್‌ (Women’s Air Rifle final) ಮಹಿಳೆಯರ ಸಿಂಗಲ್ಸ್‌ ವಿಭಾಗದಲ್ಲಿ ಭಾರತದ ಮನು ಭಾಕರ್‌ (Manu Bhaker) ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಇದನ್ನೂ ಓದಿ: Paris Olympics 2024 | ಕ್ರೀಡೆಗಳ ಮಹಾಸಂಗಮ; ಒಲಿಂಪಿಯಾ ಬೆಟ್ಟದಲ್ಲಿ ಹುಟ್ಟಿದ ಕ್ರೀಡೆ ವಿಶ್ವವಿಖ್ಯಾತಿಯಾಗಿದ್ದು ಹೇಗೆ?

    ಶನಿವಾರ ಫೈನಲ್‌ ಪ್ರವೇಶಿಸಿದ್ದ 22 ವರ್ಷ ವಯಸ್ಸಿನ ಮನು ಭಾಕರ್‌ ಮೂರನೇ ದಿನವಾದ ಭಾನುವಾರ (ಜು.28) ಅಂತಿಮ ಸುತ್ತಿನಲ್ಲಿ 3ನೇ ಸ್ಥಾನ ಪಡೆದುಕೊಂಡರು. ಈ ಮೂಲಕ ಶೂಟಿಂಗ್‌ನಲ್ಲಿ ಭಾರತದ ಪರ ಪದಕ ಗೆದ್ದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೂ ಪಾತ್ರರಾದರು. 2004ರಲ್ಲಿ ಅಥೆನ್ಸ್‌ನಲ್ಲಿ ನಡೆದ 10 ಮೀಟರ್‌ ಏರ್‌ ಪಿಸ್ತೂಲ್‌ ಸ್ಪರ್ಧೆಯಲ್ಲಿ ಸುಮಾ ಶಿರೂರ್‌ ಕೊನೆಯ ಬಾರಿಗೆ ಫೈನಲ್‌ ತಲುಪಿದ್ದರು. ಇದು ಈವರೆಗಿನ ಸಾಧನೆಯಾಗಿತ್ತು. ಇದನ್ನೂ ಓದಿ: Paris Olympics 2024: ಚಿನ್ನಕ್ಕೆ ಗುರಿಯಿಟ್ಟ ಶೂಟರ್‌ – ಚೀನಾಗೆ ಮೊದಲ ಚಿನ್ನದ ಪದಕ

    ಫೈನಲ್‌ನಲ್ಲಿ ದಕ್ಷಿಣ ಕೊರಿಯಾದ ಓಹ್ ಯೇ ಜಿನ್ 243.2, ಕಿಮ್‌ ಯೇಜಿ 241.3 ಅಂಕ ಪಡೆದರೆ, 22 ಶಾಟ್‌ ಗಳ ಬಳಿಕ ಮನು ಭಾಕರ್‌ 221.7 ಅಂಕ ಪಡೆದು ಮೂರನೇ ಸ್ಥಾನ ಪಡೆದರು. ಇದರೊಂದಿಗೆ ಶೂಟಿಂಗ್‌ ವಿಭಾಗದಲ್ಲಿ 12 ವರ್ಷಗಳ ಒಲಿಂಪಿಕ್ಸ್‌ ಪದಕದ ಬರವನ್ನು ನೀಗಿಸಿದರು. ಸದ್ಯ ಒಂದು ಕಂಚಿನ ಪದಕದೊಂದಿಗೆ ಪದಕ ಪಟ್ಟಿಯಲ್ಲಿ ಭಾರತ 17ನೇ ಸ್ಥಾನದಲ್ಲಿದೆ. ಇದನ್ನೂ ಓದಿ: ಸೂರ್ಯನ ಆರ್ಭಟಕ್ಕೆ ಲಂಕಾ ದಹನ – ಭಾರತಕ್ಕೆ 43 ರನ್‌ಗಳ ಭರ್ಜರಿ ಗೆಲುವು; 1-0ರಲ್ಲಿ ಸರಣಿ ಮುನ್ನಡೆ 

  • Asian Games 2023 – 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಭಾರತ

    Asian Games 2023 – 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಭಾರತ

    ಹ್ಯಾಂಗ್‌ಝೌ: ಚೀನಾದಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಗೇಮ್ಸ್‌ನಲ್ಲಿ (Asian Games) ಪುರುಷರ 10 ಮೀಟರ್ ಏರ್ ಪಿಸ್ತೂಲ್ (Men’s 10m Air Pistol Team) ಸ್ಪರ್ಧೆಯಲ್ಲಿ ಭಾರತ (India) ತಂಡ ಚಿನ್ನದ ಪದಕ (Gold Medal) ಗೆದ್ದಿದೆ.

    ಸರಬ್ಜೋತ್ ಸಿಂಗ್, ಅರ್ಜುನ್ ಸಿಂಗ್ ಚೀಮಾ ಮತ್ತು ಶಿವ ನರ್ವಾಲ್ ತಂಡ 1734 ಅಂಕಗಳಿಸಿ ಮೊದಲ ಸ್ಥಾನ ಪಡೆಯಿತು.  ಚೀನಾದ 1733 ಅಂಕ ಪಡೆದರೆ ವಿಯೆಟ್ನಾಂನ 1730 ಅಂಕಗಳಿಸಿತು.

    ಮಹಿಳೆಯರ 60 ಕೆಜಿ ವಿಭಾಗದ ವುಶು ಸ್ಪರ್ಧೆಯಲ್ಲಿ ರೋಶಿಬಿನಾ ದೇವಿ ಬೆಳ್ಳಿ ಪದಕ (Silver Medal) ಗೆದ್ದಿದ್ದಾರೆ. ಇದನ್ನೂ ಓದಿ: ಏಕದಿನ ವಿಶ್ವಕಪ್ 2023: ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಪಾಕ್ ನಾಯಕ

    ಭಾರತ 6 ಚಿನ್ನ, 8 ಬೆಳ್ಳಿ, 10 ಕಂಚಿನ ಪದಕವನ್ನು ಗೆಲ್ಲುವುದರೊಂದಿಗೆ ಒಟ್ಟು 24 ಪದಕವನ್ನು ಪಡೆಯುವುದರ ಮೂಲಕ ಪದಕ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. 80 ಚಿನ್ನದ ಪದಕ ಸೇರಿ ಒಟ್ಟು145 ಪದಕ ಗೆದ್ದಿರುವ ಚೀನಾ ಮೊದಲ ಸ್ಥಾನದಲ್ಲಿದ್ದರೆ 19 ಚಿನ್ನ ಸೇರಿ ಒಟ್ಟು 70 ಪದಕ ಗೆದ್ದಿರುವ ದಕ್ಷಿಣ ಕೊರಿಯಾ ಎರಡನೇ ಸ್ಥಾನದಲ್ಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]