Tag: ಏರ್ ಮಾರ್ಷಲ್

  • ರಾವತ್ ಹೆಲಿಕಾಪ್ಟರ್ ಪತನಕ್ಕೆ ಮೋಡ ಕಾರಣ: ಭಾರತೀಯ ವಾಯುಪಡೆ

    ರಾವತ್ ಹೆಲಿಕಾಪ್ಟರ್ ಪತನಕ್ಕೆ ಮೋಡ ಕಾರಣ: ಭಾರತೀಯ ವಾಯುಪಡೆ

    ನವದೆಹಲಿ: ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್ ಪತನಕ್ಕೆ ಮೋಡ ಕಾರಣ  ಎಂದು ಭಾರತೀಯ ವಾಯುಪಡೆ ಹೇಳಿದೆ.

    ಬಿಪಿನ್ ರಾವತ್ ಮತ್ತು ಇತರ 13 ಮಂದಿ ಪ್ರಯಾಣಿಸುತ್ತಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ದುರಂತವಾಗಿತ್ತು. ಹೆಲಿಕಾಪ್ಟರ್ ದುರಂತಕ್ಕೆ ಯಾಂತ್ರಿಕ ವೈಫಲ್ಯ, ವಿಧ್ವಂಸಕ ಅಥವಾ ನಿರ್ಲಕ್ಷ್ಯ ಕಾರಣವಲ್ಲ. ಕಣಿವೆಯಲ್ಲಿನ ಹವಾಮಾನ ಪರಿಸ್ಥಿತಿಗಳಲ್ಲಿನ ಅನಿರೀಕ್ಷಿತ ಬದಲಾವಣೆಯಿಂದಾಗಿ ಹೆಲಿಕಾಪ್ಟರ್ ಮೋಡಗಳಿಗೆ ಪ್ರವೇಶಿಸಿದ ಕಾರಣ ಪತನಗೊಂಡಿದೆ ಭಾರತೀಯ ವಾಯುಪಡೆ ತಿಳಿಸಿದೆ. ಇದನ್ನೂ ಓದಿ:  190 ವರ್ಷದ ಆಮೆ- ಗಿನ್ನಿಸ್ ಪುಟಕ್ಕೆ ಸೇರ್ಪಡೆ

    ಕಳೆದ ವರ್ಷ ಡಿಸೆಂಬರ್ ರಂದು ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸೇರಿದಂತೆ 13 ಮಂದಿ ಪ್ರಯಾಣಿಸುತ್ತಿದ್ದರು. ತಮಿಳುನಾಡಿನ ಕೂನೂರ್​ ಬಳಿ ನಡೆದ ಸೇನಾ ಹೆಲಿಕಾಪ್ಟರ್​ ದುರಂತದಲ್ಲಿ ಸಿಡಿಎಸ್​ ಬಿಪಿನ್​ ರಾವತ್​, ಅವರ ಪತ್ನಿ ಮತ್ತು ಇತರ 12 ಸೇನಾ ಅಧಿಕಾರಿಗಳು ಮೃತಪಟ್ಟಿದ್ದರು. ಈ Mi-17 V5 ಹೆಲಿಕಾಪ್ಟರ್ ದುರಂತದ ಬಗ್ಗೆ ತನಿಖೆ ನಡೆಸಿದ ಮೂರು ಪಡೆಗಳನ್ನು ಒಳಗೊಂಡ ತನಿಖಾ ತಂಡ ತನ್ನ ಪ್ರಾಥಮಿಕ ತನಿಖಾ ವರದಿ ಸಲ್ಲಿಸಿದೆ ಎಂದು ಭಾರತೀಯ ವಾಯುಪಡೆ ಹೇಳಿದೆ.

    ವಿಚಾರಣೆಯ ನೇತೃತ್ವವನ್ನು ಏರ್ ಮಾರ್ಷಲ್ ಮಾನವೇಂದ್ರ ಸಿಂಗ್ ವಹಿಸಿದ್ದರು. ಈ ತಂಡವು ಹೆಲಿಕಾಪ್ಟರ್​​ನಲ್ಲಿ ಸಂಭವಿಸಿರಬಹುದಾದ ಮಾನವ ದೋಷ ಅಥವಾ ಹೆಲಿಕಾಪ್ಟರ್ ಲ್ಯಾಂಡಿಂಗ್‌ ತಯಾರಿಯಲ್ಲಿ ನಡೆದಿರಬಹುದಾದ ಸಮಸ್ಯೆಯ ಸಂಭವನೀಯ ಸನ್ನಿವೇಶಗಳನ್ನು ಪರಿಶೀಲನೆ ನಡೆಸಿ ಮೋಡ ಕಾರಣ ಎಂದು ಹೇಳಿದೆ.

  • ವಾಯು ಸೇನೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ವಿ.ಆರ್ ಚೌಧರಿ ನೇಮಕ

    ವಾಯು ಸೇನೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ವಿ.ಆರ್ ಚೌಧರಿ ನೇಮಕ

    ನವದೆಹಲಿ: ಭಾರತೀಯ ವಾಯುಸೇನೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ವಿವೇಕ್ ರಾಮ್ ಚೌಧರಿ ಅವರು ನೇಮಕಗೊಂಡಿದ್ದಾರೆ.

    ಪ್ರಸ್ತುತ ಏರ್ ಚೀಫ್ ಮಾರ್ಷಲ್ ಆಗಿರುವ ಆರ್‌ಕೆಎಸ್ ಭದೌರಿಯಾ ಅವರು ಸೆಪ್ಟೆಂಬರ್ 30 ರಂದು ನಿವೃತ್ತರಾಗಲಿದ್ದಾರೆ. ಇವರ ನಿವೃತ್ತಿ ಬಳಿಕ ಭಾರತೀಯ ವಾಯುಸೇನೆಯ ಮುಖ್ಯಸ್ಥರಾಗಿ ವಿ.ಆರ್ ಚೌಧರಿ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ರಕ್ಷಣಾ ಸಚಿವಾಲಯ ಮಾಹಿತಿ ಹೊರಹಾಕಿದೆ. ಇದನ್ನೂ ಓದಿ: ಇಂದಿನಿಂದ ಪ್ರಧಾನಿ ಮೋದಿ ನಾಲ್ಕು ದಿನ ಅಮೆರಿಕ ಪ್ರವಾಸ

    ಏರ್ ಮಾರ್ಷಲ್ ಚೌಧರಿ ಪ್ರಸ್ತುತ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದು, ಸೆಪ್ಟೆಂಬರ್ 30 ರಂದು ಆರ್‌ಕೆಎಸ್ ಭದೌರಿಯಾ ಅವರು ನಿವೃತ್ತಿ ಬಳಿಕ ವಾಯುಪಡೆಯ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಹಿಂದೆ ಏರ್ ಮಾರ್ಷಲ್ ಚೌಧರಿ ಅವರು 1982ರ ಡಿಸೆಂಬರ್ 29ರಂದು ಭಾರತೀಯ ವಾಯುಪಡೆಯ ಫೈಟರ್ ಸ್ಟ್ರೀಮ್‍ಗೆ ನಿಯೋಜನೆಗೊಂಡಿದ್ದರು. ಅದಲ್ಲದೆ ಆಪರೇಷನ್ ಮೇಘದೂತ್, ಸಫೇದ್ ಸಾಗರ್ ಸೇರಿ ಹಲವು ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದರು.

    ಚೌಧರಿಯ 2021ರ ಜುಲೈ 1ರಂದು ಏರ್ ಮಾರ್ಷಲ್ ಎಚ್‍ಎಸ್ ಅರೋರಾ ನಿವೃತ್ತಿಯ ಬಳಿಕ ವಾಯಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಚೌಧರಿಯ ಈಗಾಗಲೇ ಫೈಟರ್ ಮತ್ತು ಟ್ರೈನರ್ ವಿಮಾನಗಳಲ್ಲಿ 3,800 ಗಂಟೆಗೂ ಹೆಚ್ಚು ಹಾರಾಟ ಮಾಡಿದ ಅನುಭವವನ್ನು ಹೊಂದಿದ್ದಾರೆ. ಇದನ್ನೂ ಓದಿ: ಬೆಂಕಿ ಹೊತ್ತಿಕೊಂಡಿದ್ದು ಸಿಲಿಂಡರಿನಿಂದಲ್ಲ- ಯುಪಿಎಸ್, ಮೊಬೈಲ್ ಚಾರ್ಜರ್ ಬಗ್ಗೆ ಶಂಕೆ

  • ಕಾಡ್ಗಿಚ್ಚು ನಂದಿಸಲು ವಾಯುಸೇನೆ ಸಿದ್ಧ- ರಾಜ್ಯ ಮುಖ್ಯ ಕಾರ್ಯದರ್ಶಿಗೆ ಏರ್ ಮಾರ್ಷಲ್ ಪತ್ರ

    ಕಾಡ್ಗಿಚ್ಚು ನಂದಿಸಲು ವಾಯುಸೇನೆ ಸಿದ್ಧ- ರಾಜ್ಯ ಮುಖ್ಯ ಕಾರ್ಯದರ್ಶಿಗೆ ಏರ್ ಮಾರ್ಷಲ್ ಪತ್ರ

    ಚಾಮರಾಜನಗರ: ರಾಜ್ಯದ ಅರಣ್ಯ ಪ್ರದೇಶಗಳಿಗೆ ಬೆಂಕಿ ಬಿದ್ದರೆ ಅದನ್ನು ನಂದಿಸುವ ಕಾರ್ಯಾಚರಣೆಗೆ ಸಹಕರಿಸಲು ವಾಯುಸೇನೆ ಸಿದ್ಧವಾಗಿದೆ. ಈ ಕುರಿತು ವಾಯುಸೇನೆಯ ಸೀನಿಯರ್ ಏರ್ ಸ್ಟಾಫ್ ಆಫೀಸರ್ ಏರ್ ಮಾರ್ಷಲ್ ಟಿ.ಡಿ. ಜೋಸೆಫ್ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯಭಾಸ್ಕರ್ ಗೆ ಪತ್ರ ಬರೆದಿದ್ದಾರೆ.

    ದುರ್ಗಮ ಅರಣ್ಯ ಸೇರಿದಂತೆ ಕ್ಲಿಷ್ಟಕರ ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಬಿದ್ದರೆ ಅಲ್ಲಿಗೆ ಅರಣ್ಯ ಸಿಬ್ಬಂದಿ ತೆರಳಿ ಬೆಂಕಿ ನಂದಿಸುವುದು ಕಷ್ಟವಾಗಲಿದೆ. ಅಂತಹ ಸಂದರ್ಭದಲ್ಲಿ ವಾಯುಸೇನೆಯ ಹೆಲಿಕಾಪ್ಟರ್ ಗಳನ್ನು ಕಳುಹಿಸಿಕೊಡುವಂತೆ ಹಾಗೂ ಸದಾ ಸನ್ನದ್ಧವಾಗಿ ಇರಿಸುವಂತೆ ಕ್ರಮ ಕೈಗೊಳ್ಳಲು ಮುಖ್ಯಕಾರ್ಯದರ್ಶಿಗಳಿಗೆ ಅರಣ್ಯ ಇಲಾಖೆ ವಿನಂತಿಸಿತ್ತು.

    ಈ ಹಿನ್ನೆಲೆಯಲ್ಲಿ ಬೆಂಕಿ ನಂದಿಸುವುದಕ್ಕೆ ಸಹಕಾರ ಕೋರಿ ಮುಖ್ಯಕಾರ್ಯದರ್ಶಿಗಳು ವಾಯುಸೇನೆಗೆ ಪತ್ರ ಬರೆದಿದ್ದರು. ಇದಕ್ಕೆ ಉತ್ತರಿಸಿರುವ ವಾಯುಸೇನೆ ಅಧಿಕಾರಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಗೆ ಸದಾ ಸಿದ್ಧವಿರುವುದಾಗಿ ತಿಳಿಸಿದ್ದಾರೆ.

    ಕಳೆದ ವರ್ಷ ಬೇಸಿಗೆ ಸಂದರ್ಭದಲ್ಲಿ ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಬಂಡೀಪುರ ಹೊತ್ತಿ ಉರಿದಿತ್ತು. ನಾಲ್ಕು ಸಾವಿರ ಹೆಕ್ಟೆರ್‍ಕ್ಕೂ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿತ್ತು. ದೊಡ್ಡ ಪ್ರಾಣಿಗಳು ಬೆಂಕಿಯಿಂದ ಬಚಾವಾದರೂ ಅಪರೂಪದ ಸರಿಸೃಪಗಳು ಸುಟ್ಟು ಭಸ್ಮವಾಗಿದ್ದವು. ಬೆಂಕಿ ನಂದಿಸಲು ಅರಣ್ಯ ಸಿಬ್ಬಂದಿ ಹರಸಾಹಸ ನಡೆಸಿದ್ದರು. ಕೊನೆಗೆ ವಾಯುಪಡೆಯ ಹೆಲಿಕಾಪ್ಟರ್ ಮೂಲಕ ಬೆಂಕಿಗೆ ನಂದಿಸುವ ಕಾರ್ಯಾಚರಣೆ ನಡೆಸಲಾಗಿತ್ತು.

    ಈ ಹಿನ್ನೆಲೆಯಲ್ಲಿ ಬಂಡೀಪುರದದಲ್ಲಿ ಈ ಬಾರಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಆಕಸ್ಮಿಕ ಬೆಂಕಿ ಬಿದ್ದರೂ ಹರಡದಂತೆ ಬೆಂಕಿ ರೇಖೆ ನಿರ್ಮಾಣ, ಬೆಂಕಿ ಬೀಳದಂತೆ ರಸ್ತೆಯ ಇಕ್ಕೆಲಗಳಲ್ಲಿ ವಾಟರ್ ಸ್ಪ್ರೇ ಮಾಡಿ ಹಸಿರು ಚಿಗುರುವಂತೆ ಮಾಡುವುದು, ಬೆಂಕಿ ಬಿದ್ದ ತಕ್ಷಣ ಅಧಿಕಾರಿಗಳ ಮೊಬೈಲ್‍ಗಳಿಗೆ ಎಚ್ಚರಿಕಾ ಸಂದೇಶ ರವಾನೆ, ಅರಣ್ಯ ಸಿಬ್ಬಂದಿಯ ನಿರಂತರ ಗಸ್ತು ಹೀಗೆ ಹತ್ತು ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.