Tag: ಏರ್ ಶೋ

  • ಫೆ.10 ರಿಂದ ಬೆಂಗಳೂರಿನಲ್ಲಿ `ಏರೋ ಇಂಡಿಯಾ 2025′ – ಏಷ್ಯಾದ ಅತಿದೊಡ್ಡ ಏರ್‌ ಶೋ!

    ಫೆ.10 ರಿಂದ ಬೆಂಗಳೂರಿನಲ್ಲಿ `ಏರೋ ಇಂಡಿಯಾ 2025′ – ಏಷ್ಯಾದ ಅತಿದೊಡ್ಡ ಏರ್‌ ಶೋ!

    ಬೆಂಗಳೂರು: ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ, 15ನೇ ಆವೃತ್ತಿಯ ಏರೋ ಇಂಡಿಯಾ-2025ಕ್ಕೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 10 ರಿಂದ 14ರ ವರೆಗೆ ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ನಡೆಯಲಿದೆ.

    ‘ರನ್‌ವೇ ಟು ಎ ಬಿಲಿಯನ್ ಆಪರ್ಚುನಿಟೀಸ್’- ಬಿಲಿಯನ್ ಅವಕಾಶಗಳಿಗೆ ರನ್ ವೇ ಎಂಬ ವಿಶಾಲ ಧೇಯದೊಂದಿಗೆ ನಡೆಯಲಿರುವ ಈ ಕಾರ್ಯಕ್ರಮ ವಿದೇಶಿ ಮತ್ತು ಭಾರತೀಯ ಸಂಸ್ಥೆಗಳ ನಡುವಿನ ಪಾಲುದಾರಿಕೆಯನ್ನು ರೂಪಿಸಲು ಮತ್ತು ಜಾಗತಿಕ ಮೌಲ್ಯ ಸರಣಿಯಲ್ಲಿ ದೇಶೀಕರಣ ಪ್ರಕ್ರಿಯೆಯನ್ನು ಮತ್ತಷ್ಟು ವೇಗಗೊಳಿಸಲು ಹೊಸ ಮಾರ್ಗಗಳ ಅನ್ವೇಷಣೆಗೆ ವೇದಿಕೆಯನ್ನು ಒದಗಿಸುತ್ತದೆ.

    ಕಾರ್ಯಕ್ರಮದ ಮೊದಲ ಮೂರು ದಿನಗಳು (ಫೆಬ್ರವರಿ 10, 11 ಮತ್ತು 12) ವ್ಯವಹಾರದ ದಿನಗಳಾಗಿರುತ್ತವೆ. ಆದರೆ 13 ಮತ್ತು 14ರಂದು ಸಾರ್ವಜನಿಕ ವೀಕ್ಷಣೆಗೆ ಅವಕಾಶ ನೀಡಲಾಗಿದೆ. ಈ ಕಾರ್ಯಕ್ರಮ ಏರೋಸ್ಪೇಸ್ ವಲಯದಿಂದ ದೊಡ್ಡ ಶ್ರೇಣಿಯ ಮಿಲಿಟರಿ ವೇದಿಕೆಗಳ ವಾಯು ಪ್ರದರ್ಶನ ಮತ್ತು ಸ್ಥಿರ ಪ್ರದರ್ಶನಗಳನ್ನು ಒಳಗೊಂಡಿದೆ.

    ಇದರಲ್ಲಿ ಪೂರ್ವಭಾವಿ ಕಾರ್ಯಕ್ರಮ (ಕರ್ಟನ್ ರೈಸರ್ ಈವೆಂಟ್), ಉದ್ಘಾಟನಾ ಕಾರ್ಯಕ್ರಮ, ರಕ್ಷಣಾ ಸಚಿವರ ಸಮಾವೇಶ, ಸಿಇಒಗಳ ದುಂಡು ಮೇಜಿನ ಸಭೆ, ಮಂಥನ್ ಸ್ಟಾರ್ಟ್-ಅಪ್ ಕಾರ್ಯಕ್ರಮ, ಉಸಿರು ಬಿಗಿಹಿಡಿದು ನೋಡುವ ಮೈನವಿರೇಳಿಸುವ ಏರ್ ಶೋಗಳಿವೆ, ಜತೆಗೆ ಇಂಡಿಯಾ ಪೆವಿಲಿಯನ್ ಅನ್ನು ಒಳಗೊಂಡಿರುವ ದೊಡ್ಡ ಪ್ರದರ್ಶನ ಪ್ರದೇಶ ಮತ್ತು ಏರೋಸ್ಪೇಸ್ ಕಂಪನಿಗಳ ವ್ಯಾಪಾರ ಮೇಳವನ್ನು ಒಳಗೊಂಡಿದೆ.

    ಮಿತ್ರ ರಾಷ್ಟ್ರಗಳೊಂದಿಗೆ ಕಾರ್ಯತಂತ್ರದ ಸಹಭಾಗಿತ್ವದೆಡೆಗೆ ಮಾತುಕತೆಯನ್ನು ಸುಲಭಗೊಳಿಸಲು, ಭಾರತವು ‘ಬ್ರಿಡ್ಜ್-ಅಂತಾರಾಷ್ಟ್ರೀಯ ರಕ್ಷಣೆ ಮತ್ತು ಜಾಗತಿಕ ಪಾಲುದಾರಿಕೆ ಮೂಲಕ ಸ್ಥಿತಿಸ್ಥಾಪಕತ್ವವನ್ನು ನಿರ್ಮಿಸುವುದು’ ಎಂಬ ವಿಷಯದ ಮೇಲೆ ರಕ್ಷಣಾ ಸಚಿವರ ಸಮಾವೇಶವನ್ನು ಆಯೋಜಿಸುತ್ತದೆ. ಇದು ಭೌಗೋಳಿಕ ರಾಜಕೀಯ ಪರಿಸ್ಥಿತಿಗಳನ್ನು ಸಕ್ರಿಯಗೊಳಿಸಲಿದೆ ಮತ್ತು ಪರಸ್ಪರ ಸಮೃದ್ಧಿಯ ಹಾದಿಗೆ ಅನುವು ಮಾಡಿಕೊಡಲಿದೆ. ಅಲ್ಲದೆ, ಇದು ಭದ್ರತೆ ಮತ್ತು ಅಭಿವೃದ್ಧಿಯ ಹಂಚಿಕೆಯ ದೂರದೃಷ್ಟಿಗಳೊಂದಿಗೆ ರಾಷ್ಟ್ರಗಳ ನಡುವಿನ ಸಹಕಾರಕ್ಕೆ ಸೇತುವೆಯಾಗಿ ಕಾರ್ಯನಿರ್ವಹಿಸಲಿದೆ.

    ಏರ್ ಶೋ ನೇಪಥ್ಯದಲ್ಲಿ ರಕ್ಷಣಾ ಸಚಿವರು, ರಕ್ಷಣಾ ಖಾತೆ ರಾಜ್ಯ ಸಚಿವರು, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಮತ್ತು ಕಾರ್ಯದರ್ಶಿಗಳ ಮಟ್ಟದಲ್ಲಿ ಹಲವಾರು ದ್ವಿಪಕ್ಷೀಯ ಸಭೆಗಳನ್ನು ಆಯೋಜಿಸಲಾಗಿದೆ. ಪಾಲುದಾರಿಕೆಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಹೊಸ ಮಾರ್ಗಗಳನ್ನು ಅನ್ವೇಷಿಸುವ ಮೂಲಕ ಸ್ನೇಹಪರ ದೇಶಗಳೊಂದಿಗೆ ರಕ್ಷಣಾ ಮತ್ತು ವೈಮಾನಿಕ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವತ್ತ ಗಮನಹರಿಸಲಾಗುವುದು.

    ಸಿಇಒ ಗಳ ದುಂಡುಮೇಜಿನ ಸಭೆ, ವಿದೇಶಿ ಮೂಲ ಸಲಕರಣೆ ತಯಾರಕರಿಗೆ (ಒಇಎಂ ಗಳು) ಭಾರತದಲ್ಲಿ ಉತ್ಪಾದನೆಗೆ ಅನುಕೂಲಕರ ವೇದಿಕೆಯನ್ನು ಒದಗಿಸುವ ನಿರೀಕ್ಷೆಯಿದೆ. ಜಾಗತಿಕ ಸಿಇಒಗಳು, ದೇಶೀಯ ಪಿಎಸ್‌ಯುಗಳ ಸಿಎಂಡಿಗಳು ಮತ್ತು ಭಾರತದ ಪ್ರಧಾನ ಖಾಸಗಿ ರಕ್ಷಣಾ ಮತ್ತು ವೈಮಾನಿಕ ಉತ್ಪಾದನಾ ಕಂಪನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿವೆ.

    ಇಂಡಿಯಾ ಪೆವಿಲಿಯನ್ ತನ್ನ ಮೇಕ್-ಇನ್-ಇಂಡಿಯಾ ಉಪಕ್ರಮಕ್ಕೆ ಸ್ಥಳೀಯ ರಕ್ಷಣಾ ಉತ್ಪಾದನಾ ಸಾಮರ್ಥ್ಯಗಳ ವೃದ್ಧಿ ಮತ್ತು ಭವಿಷ್ಯದ ಸಂಭನೀಯಗಳು ಸೇರಿದಂತೆ ಜಾಗತಿಕ ಹಂತಕ್ಕೆ ಸಿದ್ಧವಾಗಿರುವ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಪ್ರದರ್ಶಿಸುವ ಮೂಲಕ ಭಾರತದ ಬದ್ಧತೆಯನ್ನು ಬಿಂಬಿಸುತ್ತದೆ. ಭಾರತೀಯ ನವೋದ್ಯಮಗಳ ಪ್ರಚಾರಕ್ಕಾಗಿ ಏರೋ ಇಂಡಿಯಾ 2025ರಲ್ಲಿ ಪೋಕಸ್ ಏರಿಯಾ (ಕೇಂದ್ರೀಕೃತ ಪ್ರದೇಶ)ವನ್ನು ಹೊಂದಿರಲಿದೆ ಮತ್ತು ನವೋದ್ಯಮಗಳನ್ನು ಅಭಿವೃದ್ಧಿಪಡಿಸಿರುವ ಅತ್ಯಾಧುನಿಕ ತಂತ್ರಜ್ಞಾನಗಳು/ಉತ್ಪನ್ನಗಳ ವ್ಯಾಪಕ ಶ್ರೇಣಿಯನ್ನು ವಿಶೇಷ ಐಡೆಕ್ಸ್ ಪೆವಿಲಿಯನ್‌ನಲ್ಲಿ ಪ್ರದರ್ಶಿಸಲಾಗುವುದು.

    ಇದಲ್ಲದೆ, ಡೈನಾಮಿಕ್ ಏರೋಬ್ಯಾಟಿಕ್ ಪ್ರದರ್ಶನಗಳು ಮತ್ತು ಲೈವ್ ತಂತ್ರಜ್ಞಾನ ಪ್ರದರ್ಶನಗಳು ವಿಶಿಷ್ಟ ಅನುಭವವನ್ನು ಒದಗಿಸುತ್ತವೆ, ಆಧುನಿಕ ಏರೋಸ್ಪೇಸ್ ಪ್ಲಾಟ್‌ಫಾರ್ಮ್‌ಗಳು ಮತ್ತು ತಂತ್ರಜ್ಞಾನಗಳ ಸಾಮರ್ಥ್ಯವನ್ನು ಪ್ರದರ್ಶಿಸುತ್ತವೆ. ಕಾರ್ಯಕ್ರಮದ ಭಾಗವಾಗಿ ವಿವಿಧ ಪ್ರಮುಖ ವಿಷಯಗಳ ಕುರಿತು ಹಲವು ವಿಚಾರಸಂಕಿರಣಗಳನ್ನೂ ಸಹ ಆಯೋಜಿಸಲಾಗಿದೆ.

  • ಚೀನಾದಲ್ಲಿ ಕಾರು ಚಾಲಕನ ಹುಚ್ಚಾಟಕ್ಕೆ 35 ಬಲಿ, 43 ಮಂದಿಗೆ ಗಾಯ

    ಚೀನಾದಲ್ಲಿ ಕಾರು ಚಾಲಕನ ಹುಚ್ಚಾಟಕ್ಕೆ 35 ಬಲಿ, 43 ಮಂದಿಗೆ ಗಾಯ

    – ಸಾಮಾಜಿಕ ಜಾಲತಾಣದಲ್ಲಿ ಹುಡುಕಾಟಕ್ಕೆ ಸೆನ್ಸಾರ್

    ಬೀಜಿಂಗ್‌: ವ್ಯಾಯಾಮ ಮಾಡುತ್ತಿರುವವರ ಮೇಲೆ ಕಾರು ನುಗ್ಗಿದ ಪರಿಣಾಮ 35 ಮಂದಿ ಬಲಿಯಾಗಿ 43 ಜನರು ಗಾಯಗೊಂಡ ಘಟನೆ ಚೀನಾದಲ್ಲಿ (China) ನಡೆದಿದೆ.

    ಸೋಮವಾರ ದಕ್ಷಿಣ ಚೀನಾದ ಝುಹೈ ನಗರದ ಕ್ರೀಡಾ ಕೇಂದ್ರದಲ್ಲಿ (Outside Sports Centre) ವ್ಯಾಯಾಮ ಮಾಡುತ್ತಿದ್ದ ಜನರ ಮೇಲೆ 62 ವರ್ಷದ ಚಾಲಕ ಕಾರು ನುಗ್ಗಿಸಿದ್ದಾನೆ.

    ಪೊಲೀಸರು ಕಾರು ಚಾಲಕನನ್ನು ಬಂಧಿಸಿದ್ದಾರೆ. ಕೃತ್ಯದ ಬಳಿಕ ಚಾಲಕ ಚಾಕು ಬಳಸಿ ತನ್ನ ಹತ್ಯೆಗೆ ಮುಂದಾಗಿದ್ದ ಎಂದು ವರದಿಯಾಗಿದೆ. ಇದನ್ನೂ ಓದಿ: ಏರ್ ಇಂಡಿಯಾದೊಂದಿಗೆ ವಿಸ್ತಾರ ವಿಲೀನ – ದೋಹಾದಿಂದ ಮುಂಬೈಗೆ ಮೊದಲ ವಿಮಾನ ಹಾರಾಟ 

    ಚೈನೀಸ್ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಆಯೋಜಿಸಿದ್ದ ಝುಹೈ ಏರ್‌ಶೋ ಒಂದು ದಿನ ಮೊದಲು ಈ ಘಟನೆ ನಡೆದಿದೆ. ಇದು ಅಪಘಾತವೇ ಅಥವಾ ಪೂರ್ವ ನಿಯೋಜಿತ ಉಗ್ರರ ಕೃತ್ಯವೇ ಎಂಬ ನಿಟ್ಟಿನಲ್ಲಿ ಈಗ ತನಿಖೆ ಆರಂಭವಾಗಿದೆ.

    ಮಂಗಳವಾರ ಬೆಳಗ್ಗೆ ಚೀನೀ ಸಾಮಾಜಿಕ ಮಾಧ್ಯಮದಲ್ಲಿ ಘಟನೆಯ ಹುಡುಕಾಟಗಳ ಬಗ್ಗೆ ಚೀನಾ ಸೆನ್ಸಾರ್‌ ಮಾಡಿದೆ. ಸಾಮಾಜಿಕ ಜಾಲತಾಣ Weibo ನಲ್ಲಿ ಈ ಘಟನೆಯ ಬಗ್ಗೆ ಸರ್ಚ್‌ ಮಾಡಿದರೆ ಕೇವಲ ಒಂದೆರಡು ಚಿತ್ರಗಳು ಮಾತ್ರ ಕಾಣುತ್ತಿದೆ.

    ಸೋಮವಾರ ರಾತ್ರಿಯಿಂದಲೇ ಈ ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಎಲ್ಲಾ ಪೋಸ್ಟ್‌ಗಳನ್ನು ತೆಗೆದು ಹಾಕಲಾಗಿದೆ ಎಂದು ವರದಿಯಾಗಿದೆ. ಈ ಘಟನೆಯ ನಂತರ ಮುಂದಿನ ಸೂಚನೆ ಬರುವವರೆಗೆ ವ್ಯಾಯಾಮ ಕೇಂದ್ರವನ್ನು ಬಂದ್‌ ಮಾಡಲಾಗಿದೆ.

     

  • ಚೆನ್ನೈ ಏರ್ ಶೋ ವೇಳೆ ದುರಂತ – ಬಿಸಿಲಿನ ತಾಪಕ್ಕೆ ಐವರು ಸಾವು, 230ಕ್ಕೂ ಹೆಚ್ಚು ಮಂದಿ ಅಸ್ವಸ್ಥ

    ಚೆನ್ನೈ ಏರ್ ಶೋ ವೇಳೆ ದುರಂತ – ಬಿಸಿಲಿನ ತಾಪಕ್ಕೆ ಐವರು ಸಾವು, 230ಕ್ಕೂ ಹೆಚ್ಚು ಮಂದಿ ಅಸ್ವಸ್ಥ

    ಚೆನ್ನೈ: ಭಾರತೀಯ ವಾಯುಪಡೆಯ (Indian Air Force) 92 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ಹಿನ್ನೆಲೆ ಚೆನ್ನೈನ (Chennai) ಮರೀನಾ ಬೀಚ್‌ನಲ್ಲಿ ನಡೆದ ಏರ್ ಶೋ (ವೈಮಾನಿಕ ಪ್ರದರ್ಶನ) ವೇಳೆ ಬಿಸಿಲಿನತಾಪಕ್ಕೆ 5 ಮಂದಿ ಸಾವಾಗಿದ್ದು, 230ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.

    ವಾಯುಪಡೆ ಸಂಸ್ಥಾಪನಾ ದಿನ ನಿಮಿತ್ತ ದಕ್ಷಿಣ ಭಾರತದಲ್ಲಿ ನಡೆದ ಮೊದಲ ಏರ್ ಶೋ ಇದಾಗಿತ್ತು. ಚೆನ್ನೈನ ಮರೀನಾ ಬೀಚ್‌ನಲ್ಲಿ (Marina Beach) ಏರ್ ಶೋ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ 72 ವಿಮಾನಗಳು ವಿವಿಧ ಸಾಹಸಗಳನ್ನು ಪ್ರದರ್ಶಿಸಿದ್ದವು. 15 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಣೆಗೆ ಆಗಮಿಸಿದ್ದರು. ಇದನ್ನೂ ಓದಿ: ಉಡುಪಿಯಲ್ಲಿ ಮೇಘಸ್ಪೋಟ – ನಾಪತ್ತೆಯಾದ ವೃದ್ಧೆ ಶವವಾಗಿ ಪತ್ತೆ

     

    ಏರ್ ಶೋ ವೀಕ್ಷಿಸಿ ವಾಪಾಸ್ ತೆರಳುವಾಗ ಬಿಸಿಲಿನ ತಾಪಕ್ಕೆ ಜನರ ನಡುವೆ ನೂಕು ನುಗ್ಗಲು ಸಂಭವಿಸಿದೆ. ಈ ವೇಳೆ ಉಸಿರಾಡಲಾಗದೇ 230ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. 100 ಕ್ಕೂ ಹೆಚ್ಚು ಜನರಿಗೆ ಉಸಿರಾಟದ ಸಮಸ್ಯೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಖ್ಯ ರಸ್ತೆಯಲ್ಲಿ ವಾಹನ ಸಂದಣಿ ಹಾಗೂ ಜನಸಂದಣಿ ಏರ್ಪಟ್ಟಿತ್ತು. ಅಸ್ವಸ್ಥರಾದವರನ್ನ ಆಂಬ್ಯಲೆನ್ಸ್ಗೆ ಸಾಗಿಸಿವುದಕ್ಕೆ ಪರದಾಡಬೇಕಾಯಿತು. ಇದನ್ನೂ ಓದಿ: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 91 ಹೊಸ ಡೆಂಗ್ಯೂ ಪ್ರಕರಣ ದಾಖಲು

    ಮೃತರನ್ನು ಜಾನ್ (60), ತಿರುವೊಟ್ಟಿಯೂರು ಮೂಲದ ಕಾರ್ತಿಕೇಯನ್, ದಿನೇಶ್ ಕುಮಾರ್ (37), ಪೆರುಂಗಲತ್ತೂರಿನ ಶ್ರೀನಿವಾಸನ್, ಎಂದು ಗುರುತಿಸಲಾಗಿದೆ.

    ಏರ್ ಶೋನಲ್ಲಿ 72 ವಿಮಾನಗಳು ಭಾಗಿ:
    ವಾಯುಸೇನೆಯ ಈ ಪ್ರತಿಷ್ಠಿತ ಏರ್ ಶೋನಲ್ಲಿ ರಫೇಲ್ ಸೇರಿದಂತೆ 72 ವಿಮಾನಗಳು ಪಾಲ್ಗೊಂಡಿದ್ದವು. ಸ್ವದೇಶಿ ನಿರ್ಮಿತ ಅತ್ಯಾಧುನಿಕ ಲಘು ಯುದ್ಧ ವಿಮಾನ ತೇಜಸ್, ಲಘು ಯುದ್ಧ ಹೆಲಿಕಾಪ್ಟರ್ ಪ್ರಚಂಡ್ ಮತ್ತು ಹೆರಿಟೇಜ್ ವಿಮಾನ ಡಕೋಟಾ ಕೂಡ ಏರ್ ಶೋನಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶನ ಮಾಡಿದವು. ಈ ಏರ್ ಶೋ ವಿಶೇಷ ಗರುಡ ಫೋರ್ಸ್ ಕಮಾಂಡೋಗಳ ಸಿಮ್ಯುಲೇಟೆಡ್ ರಕ್ಷಣಾ ಕಾರ್ಯಾಚರಣೆಯಲ್ಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ಪ್ರದರ್ಶನವನ್ನು ಒಳಗೊಂಡಿತ್ತು. ಇದನ್ನೂ ಓದಿ: ಮೊಯಿದ್ದೀನ್ ಬಾವ ಸಹೋದರನ ಶವ ಫಲ್ಗುಣಿ ನದಿಯಲ್ಲಿ ಪತ್ತೆ

  • ವಿಶ್ವ ಮಹಾಸಮರಕ್ಕೆ ಕ್ಷಣಗಣನೆ – ಅಡಾಲಾಜ್ ಸ್ಟೆಪ್‌ವೆಲ್‌ನಲ್ಲಿ ನಾಯಕರ ಪ್ರೀ ಫೋಟೋಶೂಟ್

    ವಿಶ್ವ ಮಹಾಸಮರಕ್ಕೆ ಕ್ಷಣಗಣನೆ – ಅಡಾಲಾಜ್ ಸ್ಟೆಪ್‌ವೆಲ್‌ನಲ್ಲಿ ನಾಯಕರ ಪ್ರೀ ಫೋಟೋಶೂಟ್

    ಅಹ್ಮದಾಬಾದ್: ದೇಶವೇ ಎದುರು ನೋಡುತ್ತಿರುವ ವಿಶ್ವಕಪ್ ಮಹಾಸಮರಕ್ಕೆ (World Cup Final) ಕ್ಷಣಗಣನೆ ಬಾಕಿಯಿದೆ. ಟೀಂ ಇಂಡಿಯಾ (Team India) ವಿಶ್ವ ಸಾಮ್ರಾಟನಾಗಿ ಮೆರೆದಾಡುವುದನ್ನು ಕಣ್ತುಂಬಿಕೊಳ್ಳಲು 140 ಕೋಟಿ ಭಾರತೀಯರು ಕಾದು ಕುಳಿತಿದ್ದಾರೆ.

    ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ಭಾನುವಾರ ಮಧ್ಯಾಹ್ನ 2 ಗಂಟೆಗೆ ಪಂದ್ಯ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಶನಿವಾರ (ನ.18) ಗುಜರಾತ್‌ನ ಗಾಂಧಿನಗರಕ್ಕೆ ಸಮೀಪವಿರುವ ಅಡಾಲಾಜ್ ಸ್ಟೆಪ್‌ವೆಲ್‌ (Adalaj Stepwell) ಪ್ರವಾಸಿ ತಾಣದಲ್ಲಿ ಸಾಂಪ್ರದಾಯಿಕವಾಗಿ ವಿಶ್ವಕಪ್‌ನೊಂದಿಗೆ ಪ್ರೀ ಫೋಟೋಶೂಟ್‌ ನಡೆಸಲಾಗಿದೆ. ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಮತ್ತು ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್‌ ಕಮ್ಮಿನ್ಸ್‌ ಅವರನ್ನು ವಿಶ್ವಕಪ್‌ನೊಂದಿಗೆ ಫೋಟೋಶೂಟ್‌ ಮಾಡಿಸಲಾಗಿದೆ. ಈ ಫೋಟೋಗಳು ಜಾಲತಾಣದಲ್ಲಿ ಸಖತ್‌ ಸದ್ದು ಮಾಡುತ್ತಿದ್ದು, ಅಭಿಮಾನಿಗಳು ಟೀಂ ಇಂಡಿಯಾ ಗೆಲುವಿಗೆ ಶುಭ ಹಾರೈಸಿದ್ದಾರೆ. ಇದನ್ನೂ ಓದಿ: ಇಂಡೋ-ಆಸೀಸ್‌ ರೋಚಕ ಫೈನಲ್‌ ವೀಕ್ಷಿಸಲಿದ್ದಾರೆ ಮೋದಿ – ಸೂಪರ್‌ ಸಂಡೇ ಏನೆಲ್ಲಾ ಸ್ಪೆಷಲ್‌ ಇದೆ ಗೊತ್ತಾ..?

    ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ಆರಂಭಕ್ಕೂ ಮುನ್ನವೇ 2 ಗಂಟೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಹಲವು ನೃತ್ಯಪಟುಗಳು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಬೀಡುಬಿಟ್ಟಿದ್ದು, ಸ್ಫೂರ್ತಿ ಗೀತೆಗಳಿಗೆ ನೃತ್ಯ ಅಭ್ಯಾಸ ನಡೆಸುತ್ತಿದ್ದಾರೆ. ಅದಕ್ಕಾಗಿ ʻಜೀತೇಗ ಇಂಡಿಯಾ ಜೀತೇಗ’ ವಿಶೇಷ ಗೀತೆಯನ್ನೂ ಸಿದ್ಧಪಡಿಸಲಾಗಿದೆ. ಅಲ್ಲದೇ ಬಾಲಿವುಡ್ ತಾರೆಯರಿಂದ ನೃತ್ಯ ಪ್ರದರ್ಶನ ಕಾರ್ಯಕ್ರಮಗಳೂ ನಡೆಯಲಿವೆ. ಇದಕ್ಕೂ ಮುನ್ನ ಇತಿಹಾಸದಲ್ಲೇ ಮೊದಲ ಬಾರಿಗೆ ವಿಶ್ವಕಪ್ ಟೂರ್ನಿಯ ಫೈನಲ್ ಸಮಾರಂಭದಲ್ಲಿ ಭಾರತೀಯ ವಾಯುಪಡೆಯಿಂದ ವಿಶೇಷ ಏರ್‌ಶೋ ಪ್ರದರ್ಶನ ನಡೆಸಿಕೊಡಲಿದೆ. ಇದು ಕ್ರಿಕೆಟ್ ಅಭಿಮಾನಿಗಳ ಕಣ್ಣಿಗೆ ಹಬ್ಬವನ್ನುಂಟುಮಾಡಲಿದೆ.

    ಮೋದಿಯೇ ಮುಖ್ಯ ಆಕರ್ಷಣೆ: ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹಸಚಿವ ಅಮಿತ್‌ ಶಾ ಹಾಜರಾಗಲಿದ್ದಾರೆ. ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಕ್ಕೆ ಪ್ರಧಾನಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ. ನರೇಂದ್ರ ಮೋದಿ ಕ್ರೀಡಾಂಗಣವು ವಿಶ್ವದ ಅತಿದೊಡ್ಡ ಕ್ರಿಕೆಟ್ ಮೈದಾನವಾಗಿದ್ದು, ರೋಚಕ ಪಂದ್ಯ ವೀಕ್ಷಿಸಲು 1.30 ಲಕ್ಷಕ್ಕೂ ಹೆಚ್ಚು ಜನರು ಆಗಮಿಸಲಿದ್ದಾರೆ. ಈ ವೇಳೆ ಹಲವಾರು ಗಣ್ಯರು ಮೈದಾನದಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಗಣ್ಯರೊಂದಿಗೆ ಫೈನಲ್ ಪಂದ್ಯ ವೀಕ್ಷಿಸಲಿದ್ದಾರೆ. ಇದನ್ನೂ ಓದಿ: ಸರಣಿ ಶ್ರೇಷ್ಠ ಪ್ರಶಸ್ತಿಗೆ 9 ಮಂದಿಯ ನಾಮನಿರ್ದೇಶನ – ಟೀಂ ಇಂಡಿಯಾದ ನಾಲ್ವರು ಆಯ್ಕೆ

    ಏನೇನು ವಿಶೇಷ..?
    ನವೆಂಬರ್ 19ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ಭಾರತೀಯ ವಾಯುಪಡೆಯು ವಿಶೇಷ ಏರ್ ಶೋ ಪ್ರದರ್ಶನ ನಡೆಸಿಕೊಡಲಿದೆ. ಇದರೊಂದಿಗೆ ಖ್ಯಾತ ಬಾಲಿವುಡ್ ತಾರೆಯರು ಮೋದಿ ಕ್ರೀಡಾಂಗಣಕ್ಕೆ ಮತ್ತಷ್ಟು ರಂಗು ತರಲಿದ್ದಾರೆ. ನೃತ್ಯ, ಸಂಗೀತ, ವಿಶೇಷ ಲೈಟಿಂಗ್ ಶೋ ಕಾರ್ಯಕ್ರಮಗಳು ನಡೆಯಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಜೀತೇಗ ಇಂಡಿಯಾ ಜೀತೇಗ – ವಿಶ್ವ ಮಹಾಸಮರಕ್ಕೆ ಮೋದಿ ಅಂಗಳ ಸಜ್ಜು, ಕೋಟ್ಯಂತರ ಅಭಿಮಾನಿಗಳ ಕಾತರ!

  • ಜೀತೇಗ ಇಂಡಿಯಾ ಜೀತೇಗ – ವಿಶ್ವ ಮಹಾಸಮರಕ್ಕೆ ಮೋದಿ ಅಂಗಳ ಸಜ್ಜು, ಕೋಟ್ಯಂತರ ಅಭಿಮಾನಿಗಳ ಕಾತರ!

    ಜೀತೇಗ ಇಂಡಿಯಾ ಜೀತೇಗ – ವಿಶ್ವ ಮಹಾಸಮರಕ್ಕೆ ಮೋದಿ ಅಂಗಳ ಸಜ್ಜು, ಕೋಟ್ಯಂತರ ಅಭಿಮಾನಿಗಳ ಕಾತರ!

    ಅಹ್ಮದಾಬಾದ್: ದೇಶವೇ ಎದುರು ನೋಡುತ್ತಿರುವ ವಿಶ್ವಕಪ್‌ ಮಹಾಸಮರಕ್ಕೆ ಇನ್ನೊಂದು ದಿನ ಬಾಕಿಯಿದೆ. ಕೋಟ್ಯಂತರ ಅಭಿಮಾನಿಗಳು ಫೈನಲ್‌ (World Cup Final) ಪಂದ್ಯ ವೀಕ್ಷಣೆ ಮಾಡಲು ಕಾದು ಕುಳಿತಿದ್ದಾರೆ. ಲೀಗ್‌ ಸುತ್ತಿನಿಂದಲೂ ಒಂದೇ ಒಂದು ಪಂದ್ಯ ಸೋಲದ ಭಾರತ ಸರಿಸಾಟಿಯೇ ಇಲ್ಲದಂತೆ ಮುನ್ನುಗ್ಗುತ್ತಿದೆ.

    ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ಭಾನುವಾರ ಭಾರತ ಮತ್ತು ಆಸ್ಟ್ರೇಲಿಯಾ (Ind vs Aus) ತಂಡಗಳ ನಡುವೆ ಹೈವೋಲ್ಟೇಜ್‌ ಪಂದ್ಯ ನಡೆಯಲಿದೆ. ನವೆಂಬರ್‌ 19 ರಂದು ಮಧ್ಯಾಹ್ನ 2 ಗಂಟೆ ವೇಳೆಗೆ ಪಂದ್ಯ ಆರಂಭವಾಗಲಿದ್ದು, 20 ವರ್ಷಗಳ ಬಳಿಕ ಭಾರತ ಕಾಂಗರೂ ಪಡೆ ವಿರುದ್ಧ ಸೇಡು ತೀರಿಸಿಕೊಳ್ಳಲು ತುದಿಗಾಲಿನಲ್ಲಿ ನಿಂತಿದೆ. ಆದ್ರೆ ಪಂದ್ಯ ಆರಂಭಕ್ಕೂ ಮುನ್ನವೇ ಭಾರತ ತಂಡಕ್ಕೆ (Team India) ಸ್ಫೂರ್ತಿ ತುಂಬಲು ಹಲವು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಹಲವು ನೃತ್ಯಪಟುಗಳು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಬೀಡುಬಿಟ್ಟಿದ್ದು, ನೃತ್ಯ ಅಭ್ಯಾಸ ನಡೆಸುತ್ತಿದ್ದಾರೆ.

    ಟೀಂ ಇಂಡಿಯಾವನ್ನು ಮತ್ತಷ್ಟು ಹುರಿದುಂಬಿಸಲು ʻಜೀತೇಗ ಇಂಡಿಯಾ ಜೀತೇಗʼ (Jeetega, India Jeetega) ವಿಶೇಷ ಗೀತೆಯೊಂದಿಗೆ ನೃತ್ಯ ಪ್ರದರ್ಶನವನ್ನೂ ಏರ್ಪಡಿಸಲಾಗಿದೆ. ಅಲ್ಲದೇ ಬಾಲಿವುಡ್‌ ತಾರೆಯರಿಂದ ನೃತ್ಯ ಪ್ರದರ್ಶನ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ. ಇದಕ್ಕೂ ಮುನ್ನ ಇತಿಹಾಸದಲ್ಲೇ ಮೊದಲ ಬಾರಿಗೆ ವಿಶ್ವಕಪ್‌ ಟೂರ್ನಿಯ ಫೈನಲ್‌ ಸಮಾರಂಭದಲ್ಲಿ ಭಾರತೀಯ ವಾಯುಪಡೆಯಿಂದ ವಿಶೇಷ ಏರ್‌ಶೋ ಪ್ರದರ್ಶನ ನಡೆಯಲಿದೆ. ಇದು ಕ್ರಿಕೆಟ್‌ ಅಭಿಮಾನಿಗಳ ಕಣ್ಣಿಗೆ ಹಬ್ಬವನ್ನುಂಟುಮಾಡಲಿದೆ. ಇಂದು ಮೊದಲ ಹಂತದ ರಿಹರ್ಸಲ್‌ ಕೂಡ ನಡೆದಿದೆ. ಇದನ್ನೂ ಓದಿ: ಟೀಂ ಇಂಡಿಯಾ ಹೀನಾಯವಾಗಿ ಸೋಲುತ್ತೆ, ಆಸ್ಟ್ರೇಲಿಯಾ ಟ್ರೋಫಿ ಎತ್ತಿ ಹಿಡಿಯುತ್ತೆ – ಮಿಚೆಲ್‌ ಮಾರ್ಷ್‌ ಭವಿಷ್ಯವಾಣಿ ವೈರಲ್‌

    ಮೋದಿ ಮುಖ್ಯ ಆಕರ್ಷಣೆ: ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಜರಾಗಲಿದ್ದಾರೆ. ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಕ್ಕೆ ಪ್ರಧಾನಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ. ನರೇಂದ್ರ ಮೋದಿ ಕ್ರೀಡಾಂಗಣವು ವಿಶ್ವದ ಅತಿದೊಡ್ಡ ಕ್ರಿಕೆಟ್ ಮೈದಾನವಾಗಿದ್ದು, ರೋಚಕ ಪಂದ್ಯ ವೀಕ್ಷಿಸಲು 1.30 ಲಕ್ಷಕ್ಕೂ ಹೆಚ್ಚು ಜನರು ಆಗಮಿಸಲಿದ್ದಾರೆ. ಈ ವೇಳೆ ಹಲವಾರು ಗಣ್ಯರು ಮೈದಾನದಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಗಣ್ಯರೊಂದಿಗೆ ಫೈನಲ್ ಪಂದ್ಯ ವೀಕ್ಷಿಸಲಿದ್ದಾರೆ.

    ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಜಯ ಸಾಧಿಸಿದ ನಂತ್ರ ಆಸ್ಟ್ರೇಲಿಯಾ 8ನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಭಾರತ ಮತ್ತು ಆಸ್ಟ್ರೇಲಿಯಾ ರೋಚಕ ಕದನ ವೀಕ್ಷಿಸಲು ಕೋಟ್ಯಂತರ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಇದನ್ನೂ ಓದಿ: 2023 World Cup Final – 20 ವರ್ಷದ ಹಿಂದಿನ ಸೇಡನ್ನು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?

    ಏನೇನು ವಿಶೇಷ..?
    ನವೆಂಬರ್ 19ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ಭಾರತೀಯ ವಾಯುಪಡೆಯು ವಿಶೇಷ ಏರ್ ಶೋ ಪ್ರದರ್ಶನ ನಡೆಸಿಕೊಡಲಿದೆ. ಇದರೊಂದಿಗೆ ಖ್ಯಾತ ಬಾಲಿವುಡ್ ತಾರೆಯರು ಮೋದಿ ಕ್ರೀಡಾಂಗಣಕ್ಕೆ ಮತ್ತಷ್ಟು ರಂಗು ತರಲಿದ್ದಾರೆ. ನೃತ್ಯ, ಸಂಗೀತ, ವಿಶೇಷ ಲೈಟಿಂಗ್ ಶೋ ಕಾರ್ಯಕ್ರಮಗಳು ನಡೆಯಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

  • ಇಂಡೋ-ಆಸೀಸ್‌ ರೋಚಕ ಫೈನಲ್‌ ವೀಕ್ಷಿಸಲಿದ್ದಾರೆ ಮೋದಿ – ಸೂಪರ್‌ ಸಂಡೇ ಏನೆಲ್ಲಾ ಸ್ಪೆಷಲ್‌ ಇದೆ ಗೊತ್ತಾ..?

    ಇಂಡೋ-ಆಸೀಸ್‌ ರೋಚಕ ಫೈನಲ್‌ ವೀಕ್ಷಿಸಲಿದ್ದಾರೆ ಮೋದಿ – ಸೂಪರ್‌ ಸಂಡೇ ಏನೆಲ್ಲಾ ಸ್ಪೆಷಲ್‌ ಇದೆ ಗೊತ್ತಾ..?

    ಅಹ್ಮದಾಬಾದ್: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ನವೆಂಬರ್ 19ರಂದು ನಡೆಯಲಿರುವ ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಜರಾಗುವ ನಿರೀಕ್ಷೆಯಿದೆ.

    ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಕ್ಕೆ ಪ್ರಧಾನಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ನರೇಂದ್ರ ಮೋದಿ ಕ್ರೀಡಾಂಗಣವು ವಿಶ್ವದ ಅತಿದೊಡ್ಡ ಕ್ರಿಕೆಟ್ ಮೈದಾನವಾಗಿದ್ದು, ರೋಚಕ ಪಂದ್ಯ ವೀಕ್ಷಿಸಲು 1.30 ಲಕ್ಷಕ್ಕೂ ಹೆಚ್ಚು ಜನರು ಆಗಮಿಸಲಿದ್ದಾರೆ. ಈ ವೇಳೆ ಹಲವಾರು ಗಣ್ಯರು ಮೈದಾನಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಗಣ್ಯರೊಂದಿಗೆ ಫೈನಲ್‌ ಪಂದ್ಯ ವೀಕ್ಷಿಸಲಿದ್ದಾರೆ ಎಂದು ಹೇಳಲಾಗಿದೆ. ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಪಂದ್ಯಕ್ಕೂ ಮುನ್ನ ನಡೆದ ಬಾರ್ಡರ್‌ ಗವಾಸ್ಕರ್‌ ಸರಣಿಯ 4ನೇ ಟೆಸ್ಟ್‌ ಪಂದ್ಯವನ್ನು ಪ್ರಧಾನಿ ಮೋದಿ ವೀಕ್ಷಿಸಿದ್ದರು.

    ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಜಯ ಸಾಧಿಸಿದ ಆಸ್ಟ್ರೇಲಿಯಾ (Australia) 8ನೇ ಬಾರಿಗೆ ಫೈನಲ್‌ ಪ್ರವೇಶಿಸಿದೆ. ಭಾರತ ಮತ್ತು ಆಸ್ಟ್ರೇಲಿಯಾ ರೋಚಕ ಕದನ ವೀಕ್ಷಿಸಲು ಕೋಟ್ಯಂತರ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಅಂದು ವಿಶ್ವಕಪ್‌ಗೆ (ICC World Cup) ಮತ್ತಷ್ಟು ರಂಗು ತರಲು ಹಲವು ವಿಶೇಷ ಕಾರ್ಯಕ್ರಮಗಳನ್ನ ಹಮ್ಮಿಕೊಂಡಿದೆ.

    ಏನೇನು ವಿಶೇಷ..?
    ನವೆಂಬರ್‌ 19ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ವಿಶ್ವಕಪ್‌ ಫೈನಲ್‌ (World Cup Final) ಪಂದ್ಯಕ್ಕೂ ಮುನ್ನ ಭಾರತೀಯ ವಾಯುಪಡೆಯು ವಿಶೇಷ ಏರ್‌ ಶೋ ಪ್ರದರ್ಶನ ನಡೆಸಿಕೊಡಲಿದೆ. ಇದರೊಂದಿಗೆ ಖ್ಯಾತ ಬಾಲಿವುಡ್‌ ತಾರೆಯರು ಮೋದಿ ಕ್ರೀಡಾಂಗಣಕ್ಕೆ ಮತ್ತಷ್ಟು ರಂಗು ತರಲಿದ್ದಾರೆ. ನೃತ್ಯ, ಸಂಗೀತ, ವಿಶೇಷ ಲೈಟಿಂಗ್‌ ಶೋ ಕಾರ್ಯಕ್ರಮಗಳು ನಡೆಯಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

  • ಮೈಸೂರಿನಲ್ಲಿಂದು ದಸರಾ ಏರ್‌ಶೋ ರಿಹರ್ಸಲ್‌ – ಸಾರ್ವಜನಿಕರಿಗೆ ಇಂದು ಉಚಿತ, ನಾಳೆ ಪಾಸ್‌ ಖಚಿತ

    ಮೈಸೂರಿನಲ್ಲಿಂದು ದಸರಾ ಏರ್‌ಶೋ ರಿಹರ್ಸಲ್‌ – ಸಾರ್ವಜನಿಕರಿಗೆ ಇಂದು ಉಚಿತ, ನಾಳೆ ಪಾಸ್‌ ಖಚಿತ

    ಮೈಸೂರು: ಪ್ರತಿಷ್ಠಿತ ಮೈಸೂರು ದಸರಾ (Mysuru Dasara) ಮಹೋತ್ಸವದ ಪ್ರಯುಕ್ತ ವೈಮಾನಿಕ ಪ್ರದರ್ಶನ ಅಕ್ಟೋಬರ್‌ 23 ರಂದು ನಡೆಯಲಿದೆ. ಏರ್‌ ಶೋನಲ್ಲಿ (Dasara Air Show) ಲೋಹದ ಹಕ್ಕಿಗಳ ಹಾರಾಟದೊಂದಿಗೆ ಸೈನಿಕರ ನಾನಾ ಸಾಹಸಗಳನ್ನು ಜನರು ಕಣ್ತುಂಬಿಕೊಳ್ಳಬಹುದಾಗಿದೆ. ಅ.23ರಂದು ನಡೆಯುವ ಏರ್‌ ಶೋನ ರಿಹರ್ಸಲ್‌ 22ರಂದು (ಭಾನುವಾರ) ಸಂಜೆ 4 ಗಂಟೆಗೆ ನಡೆಯಲಿದೆ.

    5 ವರ್ಷಗಳ ಬಳಿಕ ಮೈಸೂರು ದಸರಾದಲ್ಲಿ ಲೋಕದ ಹಕ್ಕಿಗಳ ಆರ್ಭಟ ಶುರುವಾಗುತ್ತಿದ್ದು, ಬಾನಂಗಳದಲ್ಲಿ ಭಾರತೀಯ ವಾಯುಸೇನೆ ಶಕ್ತಿ ಪ್ರದರ್ಶನ ತೋರಲಿದೆ. ಅ.23 ರಂದು (ಸೋಮವಾರ) ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಏರ್‌ ಶೋ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಇದನ್ನೂ ಓದಿ: ಅಕ್ರಮ ಮರಳು ದಂಧೆ ಪ್ರಶ್ನಿಸಿದ್ದಕ್ಕೆ ಮಾರಣಾಂತಿಕ ಹಲ್ಲೆ – ನದಿಗೆ ಎಸೆಯಲು ಪ್ಲಾನ್

    ಏರ್‌ ಶೋನಲ್ಲಿ ವಾಯು ಸೇನೆಯ ನಾನಾ ಯುದ್ಧ ವಿಮಾನಗಳು (Fighter Jets), ಲಘು ವಿಮಾನಗಳು ಭಾಗವಹಿಲಿಸಲಿದ್ದು, ನಾನಾ ಸಾಹಸಗಳನ್ನ ಪ್ರದರ್ಶಿಸಲಿದ್ದಾರೆ. ಜೊತೆಗೆ ವಾಯುಸೇನೆಯ ಯೋಧರು ಪ್ಯಾರಾಚೂಟ್‌ ಮೂಲಕ ವಿಮಾನದಿಂದ ಜಿಗಿದು ಅಮೋಘ ಸಾಹಸ ಪ್ರದರ್ಶಿಸಲಿದ್ದಾರೆ. ಸೂರ್ಯಕಿರಣ್ ಏರೋಬ್ಯಾಟಿಕ್ ತಂಡದಿಂದಲೂ ವಿಶೇಷ ಸಾಹಸ ಪ್ರದರ್ಶನ ಇರಲಿದೆ. ಇದನ್ನೂ ಓದಿ: ಹಮಾಸ್ ಉಗ್ರರ ಕಾರ್ಯತಂತ್ರವನ್ನೇ ಅನುಸರಿಸಿದ ಇಸ್ರೇಲ್ – ಇಂದು ಇಬ್ಬರು ಒತ್ತೆಯಾಳುಗಳ ರಿಲೀಸ್‌ಗೆ ಸಿದ್ಧತೆ

    ಅ.23ರಂದು ನಡೆಯುವ ಏರ್‌ ಶೋನ ರಿಹರ್ಸಲ್‌ 22ರಂದು (ಭಾನುವಾರ) ಸಂಜೆ 4 ಗಂಟೆಗೆ ನಡೆಯಲಿದೆ. ರಿಹರ್ಸಲ್‌ ವೀಕ್ಷಣೆಗೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಮೂರುಗಂಟೆ ಒಳಗೆ ವೀಕ್ಷಣೆಗೆ ಬಂದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ. ಸುಮಾರು 1 ಗಂಟೆಗಳ ಕಾಲ ಸಾಹಸ ಪ್ರದರ್ಶನ ನಡೆಯಲಿದೆ. ಅ.23 ರಂದು ಅದೇ ಪಂಜಿನ ಕವಾಯತು ಮೈದಾನದಲ್ಲಿ ಅಂತಿಮ ಹಂತದ ಏರ್‌ಶೋ ನಡೆಯಲಿದ್ದು, ಪಾಸ್ ಇದ್ದವರಿಗಷ್ಟೇ ವೀಕ್ಷಣೆಗೆ ಅವಕಾಶ ಇರಲಿದೆ. ಇದನ್ನೂ ಓದಿ: ಪಕ್ಷದ ಬಗ್ಗೆ ಬಹಿರಂಗ ಹೇಳಿಕೆ ನೀಡುವಂತಿಲ್ಲ: ನಾಯಕರಿಗೆ ಡಿಕೆಶಿ ಸೂಚನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶುಕ್ರವಾರ ಐತಿಹಾಸಿಕ ಬೀದರ್ ಕೋಟೆ ಮೇಲೆ ಸೂರ್ಯಕಿರಣ ಏರ್ ಶೋ ಕಲರವ

    ಶುಕ್ರವಾರ ಐತಿಹಾಸಿಕ ಬೀದರ್ ಕೋಟೆ ಮೇಲೆ ಸೂರ್ಯಕಿರಣ ಏರ್ ಶೋ ಕಲರವ

    ಬೀದರ್: ಬೀದರ್ (Bidar) ಜಿಲ್ಲಾಡಳಿತ ಹಾಗೂ ಸ್ಥಳೀಯ ಏರ್‌ಫೋರ್ಸ್ ಸ್ಟೇಷನ್‌ದಿಂದ ಶುಕ್ರವಾರ ಮತ್ತು ಶನಿವಾರ ಬಹಮನಿ ಸುಲ್ತಾನರ ಐತಿಹಾಸಿಕ ಕೋಟೆ ಮೇಲೆ ಏರ್ ಶೋ (Air Show) ಹಮ್ಮಿಕೊಳ್ಳಲಾಗಿದೆ.

    ಎರಡು ದಿನಗಳ ಕಾಲ ಏರ್ ಶೋ ಕಾರ್ಯಕ್ರಮ ನಡೆಯಲಿದ್ದು, ಮೊದಲ ದಿನ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಎರಡನೇ ದಿನದಂದು ಸಾರ್ವಜನಿಕ ವೀಕ್ಷಣೆಗೆ ಏರ್ ಶೋ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: Aditya L1: ತೆಗೆದ ಭೂಮಿ, ಚಂದ್ರನ ಚಿತ್ರವನ್ನು ಹಂಚಿಕೊಂಡ ಇಸ್ರೋ

    ಸೂರ್ಯಕಿರಣ ಏರೋಬ್ಯಾಟಿಕ್ ಟೀಮ್ (Surya Kirana Aerobatic Team) ಆಕರ್ಷಕ ವೈಮಾನಿಕ ಪ್ರದರ್ಶನವನ್ನು ನಡೆಸಿಕೊಡಲಿದ್ದಾರೆ. ಕಳೆದ ವರ್ಷ 20,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಹೀಗಾಗಿ ಈ ಬಾರಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಬಹುದೆಂದು ಹೆಚ್ಚಿನ ರೀತಿಯಲ್ಲಿ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗುತ್ತಿದೆ. ಇದನ್ನೂ ಓದಿ: ವಜ್ರಕವಚ ಅಲಂಕಾರದಲ್ಲಿ ಭಕ್ತರಿಗೆ ದರ್ಶನ ಕೊಟ್ಟ ಉಡುಪಿ ಕೃಷ್ಣ

    ಬೀದರ್ ಜಿಲ್ಲೆಯಲ್ಲೇ ಏರ್ ಫೋರ್ಸ್ (Air Force) ಇರುವುದರಿಂದ ಏರ್ ಶೋ ಹಮ್ಮಿಕೊಳ್ಳಲಾಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮ ವೀಕ್ಷಿಸಿ ಆನಂದ ಪಡಲಿದ್ದಾರೆ. ಆಗಸದಲ್ಲಿನ ವೈಮಾನಿಕ ಪ್ರದರ್ಶನ ನೋಡುಗರಿಗೆ ರೋಮಾಂಚನ ಹಾಗೂ ಮೈನವಿರೇಳಿಸುವಂತೆ ಆಕರ್ಷಿಸಲಿದೆ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ಹಿಂದೂ ಧರ್ಮಕ್ಕೆ ಅಪಮಾನ ಮಾಡಿಲ್ಲ, ಧರ್ಮದ ಬಗ್ಗೆ ಗೌರವವಿದೆ: ಪರಮೇಶ್ವರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೈಸೂರು ದಸರಾದಲ್ಲಿ ವಿಶೇಷ ಏರ್ ಶೋ ನಡೆಸಲು ಸಿಎಂ ಮನವಿ

    ಮೈಸೂರು ದಸರಾದಲ್ಲಿ ವಿಶೇಷ ಏರ್ ಶೋ ನಡೆಸಲು ಸಿಎಂ ಮನವಿ

    ನವದೆಹಲಿ: ಮೈಸೂರು ದಸರಾ (Mysuru Dasara) ಕಾರ್ಯಕ್ರಮದಲ್ಲಿ ವಿಶೇಷ ಏರ್ ಶೋ (Air Show) ನಡೆಸುವಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ಗೆ (Rajnath Singh) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮನವಿ ಮಾಡಿದ್ದಾರೆ. ದೆಹಲಿಯ ಸಂಸತ್ ಭವನದಲ್ಲಿರುವ ರಾಜನಾಥ್ ಸಿಂಗ್ ಕಚೇರಿಯಲ್ಲಿ ಭೇಟಿಯಾಗಿ ಈ ಸಂಬಂಧ ಮಾತುಕತೆ ನಡೆಸಿದರು.

    ಮೈಸೂರು ದಸರಾ ರಾಜ್ಯದ ಗತವೈಭವ ಮತ್ತು ಇತಿಹಾಸವನ್ನು ಸಾರುವ ಹಬ್ಬವಾಗಿದೆ. ಇದನ್ನು ನೋಡಲು ಲಕ್ಷಾಂತರ ಪ್ರವಾಸಿಗರು ರಾಜ್ಯಕ್ಕೆ ಆಗಮಿಸುತ್ತಾರೆ. ಈ ವರ್ಷವೂ ಅಕ್ಟೋಬರ್ 15-24 ರವರೆಗೂ ಅಚರಿಸಲು ನಿರ್ಧರಿಸಿದೆ. ಇದನ್ನೂ ಓದಿ:ಇದನ್ನೂ ಓದಿ: ಪ್ರಧಾನಿ ಮೋದಿಗೆ ಮೈಸೂರು ಪೇಟಾ ತೊಡಿಸಿ, ಗಂಧದ ಮರದ ಕೆತ್ತನೆಯ ದಸರಾ ಅಂಬಾರಿ ಗಿಫ್ಟ್‌ ಕೊಟ್ಟ ಸಿದ್ದರಾಮಯ್ಯ

    2017 ಮತ್ತು 2019 ರಲ್ಲಿ ಟಾರ್ಚ್ ಲೈಟ್ ಪರೇಡ್ ಮೈದಾನದಲ್ಲಿ ವಾಯುಪಡೆ ವಿಶೇಷ ಏರ್ ಶೋ ನಡೆಸಿತ್ತು. ಬಹಳಷ್ಟು ಜನರು ಇದನ್ನು ನೋಡಿ ಇಷ್ಟಪಟ್ಟಿದ್ದರು. ಈ ವರ್ಷವೂ ವಾಯುಪಡೆಗಳಿಂದ ವಿಶೇಷ ಏರ್ ಶೋ ನಡೆಸಲು ನಿರ್ದೇಶಿಸಬೇಕು ಎಂದು ಮನವಿ ಮಾಡಿದರು. ಮನವಿ ಸ್ವೀಕರಿಸಿದ ರಾಮನಾಥ್ ಸಿಂಗ್ ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಹೇಳಿದರು. ಇದನ್ನೂ ಓದಿ: ಕೇರಳದ ಕೊಚ್ಚಿಯಲ್ಲಿ ಕರ್ನಾಟಕ ಪೊಲೀಸರ ಅರೆಸ್ಟ್‌ – ಲಂಚಕ್ಕೆ ಬೇಡಿಕೆಯಿಟ್ಟು ಲಾಕ್‌ ಆದ ಬೆಂಗಳೂರು ಪೊಲೀಸರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Aero India 2023: ಇಂದು ಕೊನೆಯ ದಿನದ ಏರ್‌ಶೋ ಕಣ್ತುಂಬಿಕೊಳ್ಳಿ

    Aero India 2023: ಇಂದು ಕೊನೆಯ ದಿನದ ಏರ್‌ಶೋ ಕಣ್ತುಂಬಿಕೊಳ್ಳಿ

    ಬೆಂಗಳೂರು: ಏರ್ ಶೋ (Air Show) ಅಂದ್ರೆ ಅದರ ಮಜಾನೇ ಬೇರೆ. ಮುಗಿಲೆತ್ತರಕ್ಕೆ ಹಾರಿ ಬಗೆ ಬಗೆಯ ಸ್ಟಂಟ್ ಮಾಡೋ ಜೆಟ್‌ಗಳ (Jets) ಹಾರಾಟ ನೋಡೋದೆ ಒಂಥರಾ ಖುಷಿ. ಇಷ್ಟು ದಿನ ಬರೀ ಗೆಸ್ಟ್‌ಗಳಿಗೆ ಸೀಮಿತವಾಗಿದ್ದ ಏರ್ ಶೋನಲ್ಲಿ ನಾಲ್ಕನೇ ದಿನವಾದ ಗುರುವಾರ ಸಾಮಾನ್ಯ ಜನರು ಸಹ ಸಖತ್ ಎಂಜಾಯ್ ಮಾಡಿದ್ದಾರೆ.

    ಏರೋ ಇಂಡಿಯಾ 2023 (Aero India 2023) ಶುಕ್ರವಾರ ಅಂತಿಮ ದಿನಕ್ಕೆ ಕಾಲಿಟ್ಟಿದ್ದು, ಜನಸಾಮಾನ್ಯರಿಗೆ ಕಣ್ತುಂಬಿಕೊಳ್ಳಲು ಕೊನೆಯ ದಿನವಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಜನರು ಧಾವಿಸುವ ನಿರೀಕ್ಷೆಯಿದೆ. ಏರೋ ಇಂಡಿಯಾ ಪ್ರದರ್ಶನ ವೀಕ್ಷಿಸಲು ತುದಿಗಾಲಲ್ಲಿ ನಿಂತಿದ್ದ ಲಕ್ಷಾಂತರ ಜನರು ಶುಕ್ರವಾರ (ಫೆ.17) ಬೆಳ್ಳಂಬೆಳಗ್ಗೆ ಯಲಹಂಕ ವಾಯುನೆಲೆಯತ್ತ ಬರಲು ಶುರು ಮಾಡಿದ್ದಾರೆ. ಇದನ್ನೂ ಓದಿ: ಯುದ್ಧ ವಿಮಾನದ ಹಿಂದಿದ್ದ ಹನುಮಂತನ ಚಿತ್ರ ತೆಗೆದ ಹೆಚ್‌ಎಎಲ್

    ಜನಸಾಮಾನ್ಯರು ಹಾಗೂ ಪಾಸ್ ಹೋಲ್ಡರ್‌ಗಳಿಗಾಗಿಯೇ 2 ವೈಮಾನಿಕ ಪ್ರದರ್ಶನಗಳ ಆಯೋಜನೆ ಮಾಡಲಾಗಿದೆ. ಬೆಳಗ್ಗೆ 9.30ರಿಂದ 11ರ ವರೆಗೆ ಒಂದು ಪ್ರದರ್ಶನ, ಮಧ್ಯಾಹ್ನ 2 ರಿಂದ 3.30ರ ವರೆಗೆ ಮತ್ತೊಂದು ವೈಮಾನಿಕ ಪ್ರದರ್ಶನ ಆಯೋಜನೆ ಮಾಡಲಾಗಿದೆ. ಇದನ್ನೂ ಓದಿ: Aero India-2023 ಏರ್‌ಶೋಗೆ ಪ್ರಧಾನಿ ಮೋದಿ ಅದ್ಧೂರಿ ಚಾಲನೆ

    ಸಾರಂಗ್, ಸೂರ್ಯಕಿರಣ್ ಚಮತ್ಕಾರ: ಗುರುವಾರ ಏರ್ ಶೋಗೆ ಬಂದ ಜನರು ಯುದ್ಧ ವಿಮಾನಗಳ ಹಾರಾಟ ಕಂಡು ಖುಷ್ ಆಗಿದ್ರು. ಜೆಟ್‌ಗಳ ಮುಂದೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಜನರು, ಆಗಸದಲ್ಲಿ ಲೋಹದ ಹಕ್ಕಿಗಳ ನೋಡಿ ಖುಷಿ ಪಟ್ರು. ಸೂರ್ಯ ಕಿರಣ್, ಸಾರಂಗ್, ರಫೆಲ್‌ಗಳ ಸ್ಟಂಟ್ ಜನರನ್ನ ಮಂತ್ರಮುಗ್ಧವಾಗಿಸಿತ್ತು.

    ಏರ್ ಶೋನಲ್ಲಿರೋ ಸ್ಟಾಲ್‌ಗಳಿಗೂ ಜನರು ಭೇಟಿ ನೀಡಿ ಅಲ್ಲಿನ ಸಾಧನಗಳನ್ನ ಕಣ್ತುಂಬಿಕೊಂಡರು. ಏರ್ ಶೋ ನಡೆಯುವ ಯಲಹಂಕ ವಾಯುನೆಲೆಯಲ್ಲಿ ಎತ್ತ ನೋಡಿದ್ರೂ ಜನಸಾಗರವೇ ತುಂಬಿ ತುಳುಕುತ್ತಿತ್ತು. ಕೊನೆಯ ದಿನವಾದ ಶುಕ್ರವಾರವೂ ಎರಡು ಏರ್ ಶೋಗಳನ್ನ ಆಯೋಜನೆ ಮಾಡಲಾಗಿದೆ. ಸಾರ್ವಜನಿಕರ ವೀಕ್ಷಣೆಗೆ ಹಾಗೂ ಪಾರ್ಕಿಂಗ್ ವ್ಯವಸ್ಥೆಗೂ ವ್ಯವಸ್ಥೆ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k